Tag: Haryana Police

  • ಮನೆಯಲ್ಲಿ ಗುಂಡು ಹಾರಿಸಿಕೊಂಡು ಎಡಿಜಿಪಿ ಆತ್ಮಹತ್ಯೆ – ಜಪಾನ್‌ ಪ್ರವಾಸದಲ್ಲಿರೋ ಪತ್ನಿ ಐಎಎಸ್‌ ಅಧಿಕಾರಿ

    ಮನೆಯಲ್ಲಿ ಗುಂಡು ಹಾರಿಸಿಕೊಂಡು ಎಡಿಜಿಪಿ ಆತ್ಮಹತ್ಯೆ – ಜಪಾನ್‌ ಪ್ರವಾಸದಲ್ಲಿರೋ ಪತ್ನಿ ಐಎಎಸ್‌ ಅಧಿಕಾರಿ

    ಚಂಡೀಗಢ: ಹಿರಿಯ ಐಪಿಎಸ್ ಅಧಿಕಾರಿ ವೈ. ಪೂರ್ಣ್ ಕುಮಾರ್ (Y. Poorn Kumar) ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಚಂಡೀಗಢದ ಸೆಕ್ಟರ್ -11 ರಲ್ಲಿರುವ ತಮ್ಮ ಸರ್ಕಾರಿ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಚಂಡೀಗಢ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಕುಮಾರ್‌ ಅವರು ಏಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಇದನ್ನೂ ಓದಿ: ಬಿಹಾರ ವಿಧಾನಸಭೆ ಚುನಾವಣೆ; ಎನ್‌ಡಿಎ-ಇಂಡಿಯಾ ಒಕ್ಕೂಟದ ನಡುವೆ ಸೀಟು ಹಂಚಿಕೆ ಲೆಕ್ಕಾಚಾರ

    ವೈ. ಪೂರ್ಣ್ ಕುಮಾರ್ ಎಡಿಜಿಪಿ ಶ್ರೇಣಿಯ ಅಧಿಕಾರಿಯಾಗಿದ್ದರು. ಅವರನ್ನು ಸೆ.29 ರಂದು ರೋಹ್ಟಕ್‌ನ ಸುನಾರಿಯಾ ಜೈಲಿಗೆ ವರ್ಗಾಯಿಸಲಾಗಿತ್ತು. ಸಾಧ್ವಿಗಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ರಾಮ್ ರಹೀಮ್ ಶಿಕ್ಷೆ ಅನುಭವಿಸುತ್ತಿರುವುದು ಇದೇ ಜೈಲಿನಲ್ಲಿ.

    ವೈ. ಪೂರ್ಣ್ ಕುಮಾರ್ ಅವರ ಪತ್ನಿ ಅಮನ್ ಪಿ. ಕುಮಾರ್ ಕೂಡ ಐಪಿಎಸ್ ಅಧಿಕಾರಿ. ಅ.5 ರಂದು ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಮತ್ತು ಇತರ ಅಧಿಕಾರಿಗಳೊಂದಿಗೆ ಜಪಾನ್ ಪ್ರವಾಸಕ್ಕೆ ಹೋಗಿದ್ದರು. ಅವರು ನಾಳೆ ಸಂಜೆ ಭಾರತಕ್ಕೆ ಮರಳಲಿದ್ದಾರೆ. ಇದನ್ನೂ ಓದಿ: ಕೆಮ್ಮಿನ ಸಿರಪ್‌ ಸೇವಿಸಿ ಮಕ್ಕಳ ಸಾವು ಪ್ರಕರಣ – ಸುಪ್ರೀಂಕೋರ್ಟ್‌ಗೆ ಪಿಐಎಲ್

    ಕಳೆದ ವರ್ಷ ವೈ. ಪೂರ್ಣ್ ಕುಮಾರ್ ಅವರು ಕೆಲವು ಐಪಿಎಸ್ ಅಧಿಕಾರಿಗಳ ಬಡ್ತಿ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದರು. ಈ ಅಧಿಕಾರಿಗಳು 1991, 1996, 1997 ಮತ್ತು 2005 ರ ಬ್ಯಾಚ್‌ಗಳಿಗೆ ಸೇರಿದವರಾಗಿದ್ದರು. ಈ ಬಡ್ತಿಗಳನ್ನು ಅನುಚಿತವಾಗಿ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿಗೆ ಪತ್ರ ಬರೆದಿದ್ದರು. ಹಣಕಾಸು ಇಲಾಖೆಯು ಗೃಹ ಸಚಿವಾಲಯದ ನಿಯಮಗಳನ್ನು ನಿರ್ಲಕ್ಷಿಸಿ ಬಡ್ತಿಗಳನ್ನು ಸ್ವಂತವಾಗಿ ಅನುಮೋದಿಸಿದೆ ಎಂದು ಆಪಾದಿಸಿದ್ದರು.

  • 7 ವರ್ಷದ ಬಾಲಕನ ಮೇಲೆ ಶಿಕ್ಷಕಿಯಿಂದ ಇದೆಂಥಾ ಕ್ರೌರ್ಯ – ಹೋಂ ವರ್ಕ್‌ ಮಾಡದಿದ್ದಕ್ಕೆ ತಲೆ ಕೆಳಗಾಗಿ ನೇತುಹಾಕಿ ಹಿಂಸೆ

    7 ವರ್ಷದ ಬಾಲಕನ ಮೇಲೆ ಶಿಕ್ಷಕಿಯಿಂದ ಇದೆಂಥಾ ಕ್ರೌರ್ಯ – ಹೋಂ ವರ್ಕ್‌ ಮಾಡದಿದ್ದಕ್ಕೆ ತಲೆ ಕೆಳಗಾಗಿ ನೇತುಹಾಕಿ ಹಿಂಸೆ

    ಚಂಡೀಗಢ: ಯಾವುದೇ ಒಬ್ಬ ವಿದ್ಯಾರ್ಥಿ ತನ್ನ ಗುರಿ ತಲುಪಬೇಕಾದ್ರೆ ಹಿಂದೆ ಶಿಕ್ಷಕರೊಬ್ಬರು ಇರಲೇಬೇಕು. ವಿದ್ಯಾರ್ಥಿಗಳ ತಪ್ಪುಗಳನ್ನು ತಿದ್ದುತ್ತಾ, ಜೀವನಕ್ಕೆ ದಾರಿ ದೀಪವಾಗಬೇಕಿರುವುದು ಶಿಕ್ಷಕರು (Teachers). ಆದ್ರೆ ಇಲ್ಲೊಬ್ಬಳು ಶಿಕ್ಷಕಿ ಅದಕ್ಕೆ ವ್ಯತಿರಿಕ್ತವಾಗಿದ್ದಾಳೆ. ವಿದ್ಯಾರ್ಥಿ ಹೋಂ ವರ್ಕ್‌ ಮಾಡಿಲ್ಲ ಅನ್ನೋ ಕಾರಣಕ್ಕೆ ಆತನ ಕೈಕಾಲು ಕಟ್ಟಿ, ತಲೆಕೆಳಗಾಗಿ ನೇತು ಹಾಕಿ ಹಿಂಸೆ ನೀಡಿ ಕ್ರೌರ್ಯ ಮೆರೆದಿದ್ದಾಳೆ.

    ಹೌದು. ಹರಿಯಾಣದ (Haryana) ಪಾಣಿಪತ್‌ನ ಶ್ರೀಜನ್ ಪಬ್ಲಿಕ್ ಶಾಲೆಯಲ್ಲಿ (Srijan Public School) ಈ ಘಟನೆ ನಡೆದಿದೆ. ವಿದ್ಯಾರ್ಥಿ ಹೋಂ ವರ್ಕ್‌ ಮಾಡಿಲ್ಲ ಅಂತ ಶಿಕ್ಷಕಿಯೊಬ್ಬಳು ಆತನ ಕೈಕಾಲು ಕಟ್ಟಿ, ತಲೆಕೆಳಗಾಗಿಸಿ ನೇತುಹಾಕಿದ್ದಾಳೆ, ವಿದ್ಯಾರ್ಥಿಯನ್ನ ಚೆನ್ನಾಗಿ ಥಳಿಸಿದ್ದಾಳೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಹಿಟ್ ಅಂಡ್‌ ರನ್‌ಗೆ ಬಿ.ಕಾಂ ಪದವೀಧರೆ ಬಲಿ

    ಆಗಸ್ಟ್‌ 13ರಂದು ನಡೆದಿದ್ದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಶಾಲಾ ಆಡಳಿಯ ಮಂಡಳಿಗೆ ಈ ವಿಷಯ ತಿಳಿದಿದ್ದೂ ಮುಚ್ಚಿಟ್ಟಿದ್ದರು. ಆದ್ರೆ ಹಲ್ಲೆ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆದಮೇಲೆ ವಿಷಯ ಗೊತ್ತಾಗಿದೆ.

    ವಿಡಿಯೋ ಆಧರಿಸಿ ಮಾಡೆಲ್‌ ಪೊಲೀಸ್‌ ಠಾಣೆಗೆ ಪೋಷಕರು ದೂರು ನೀಡಿದ್ದಾರೆ. ದೂರು ನೀಡುತ್ತಿದ್ದಂತೆ ಶಿಕ್ಷಕಿ ಕಡೆಯವರು ಎನ್ನಲಾದ ಕೆಲವರು ಪೋಷಕರಿಗೆ ದೂರು ಹಿಂಪಡೆಯುವಂತೆ ಬೆದರಿಕೆ ಹಾಕಿದ್ದಾರೆಂದು ತಿಳಿದುಬಂದಿದೆ. ಇದನ್ನೂ ಓದಿ: TVK Vijay Rally Stampede | ಮದ್ರಾಸ್‌ ಹೈಕೋರ್ಟ್‌ನಲ್ಲಿಂದು ವಿಚಾರಣೆ – ಸಾವಿನ ಸಂಖ್ಯೆ 41ಕ್ಕೆ ಏರಿಕೆ

    ಮತ್ತೊಂದು ವಿಡಿಯೋ ವೈರಲ್‌
    ಇನ್ನೂ ಅದೇ ಶಾಲೆಯಲ್ಲಿ ಇತರ ಮಕ್ಕಳನ್ನು ಥಳಿಸುತ್ತಿರುವ ಇನ್ನೊಂದು ವಿಡಿಯೋ ಸಹ ವೈರಲ್ ಆಗಿದೆ. ಆ ವಿಡಿಯೋದಲ್ಲಿ ಒಬ್ಬ ಶಿಕ್ಷಕಿ ಮಗುವನ್ನ ಹೊಡೆಯುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಸತತ ಒಂಬತ್ತು ಬಾರಿ ಮಗುವಿಗೆ ಕಪಾಳಮೋಕ್ಷ ಮಾಡುತ್ತಿದ್ದಾಳೆ. ವಿಡಿಯೋಗಳನ್ನ ವಶಕ್ಕೆ ಪಡೆದು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಲ್ಲದೇ ಚಾಲಕನ ಕೈಯಿಂದಲೂ ಥಳಿಸಿದ್ದಳು ಎನ್ನಲಾಗಿ ಕಾಲೇಜು ಪ್ರಾಂಶುಪಾಲರು ಹಾಗೂ ಬಸ್‌ ಚಾಲಕನನ್ನ ಬಂಧಿಸಲಾಗಿದೆ.

  • ಜ್ಯೋತಿ ಮಲ್ಹೋತ್ರಾ ಮೊಬೈಲ್, ಲ್ಯಾಪ್‌ಟಾಪ್‌ನಿಂದ 12,000 ಜಿಬಿ ಡಾಟಾ ರಿಟ್ರೀವ್ – ಸ್ಫೋಟಕ ರಹಸ್ಯಗಳು ಬಯಲಿಗೆ!

    ಜ್ಯೋತಿ ಮಲ್ಹೋತ್ರಾ ಮೊಬೈಲ್, ಲ್ಯಾಪ್‌ಟಾಪ್‌ನಿಂದ 12,000 ಜಿಬಿ ಡಾಟಾ ರಿಟ್ರೀವ್ – ಸ್ಫೋಟಕ ರಹಸ್ಯಗಳು ಬಯಲಿಗೆ!

    – ತಾನು ಮಾತಾಡ್ತಿರೋದು ಐಎಸ್‌ಐ ಅಧಿಕಾರಿಗಳ ಜೊತೆ ಅಂತ ಜ್ಯೋತಿ ಗೊತ್ತಿತ್ತು

    ನವದೆಹಲಿ: ಪಾಕಿಸ್ತಾನದ ಪರ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಯೂಟ್ಯೂಬರ್‌ ಜ್ಯೋತಿ ಮಲ್ಹೋತ್ರಾ (Jyoti Malhotra) ಕುರಿತು ಒಂದಾದಮೇಲೊಂದು ಸ್ಫೋಟಕ ವಿಚಾರಗಳು ಬೆಳಕಿಗೆ ಬರುತ್ತಿವೆ. 33 ವರ್ಷದ ಯೂಟ್ಯೂಬರ್‌ನ ಡಿಜಿಟಲ್‌ ಸಾಧನಗಳನ್ನು ಪರಿಶೀಲಿಸಿದ ಹರಿಯಾಣ ಪೊಲೀಸರು (Haryana Police) ಹಲವು ರಹಸ್ಯಗಳನ್ನು ಬಯಲಿಗೆಳೆದಿದ್ದಾರೆ.

    ಪೊಲೀಸ್‌ ಮೂಲಗಳು ಹೇಳುವಂತೆ, ಜ್ಯೋತಿ‌ ನಾಲ್ವರು ಪಾಕಿಸ್ತಾನಿ ಗುಪ್ತಚರ (Pakistani Intelligence) ಏಜೆಂಟ್‌ಗಳೊಂದಿಗೆ ಸಂಪರ್ಕದಲ್ಲಿದ್ದರು ನಾಲ್ವರ ಜೊತೆಗೂ ಪ್ರತ್ಯೇಕವಾಗಿ ಮಾತನಾಡುತ್ತಿದ್ದರು. ನಾಲ್ವರ ಪೈಕಿ ದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮಿಷನ್‌ನ ಡ್ಯಾನಿಶ್, ಅಹ್ಸಾನ್ ಮತ್ತು ಶಾಹಿದ್ ಸೇರಿದ್ದಾರೆ. ಸದ್ಯ ಪಾಕಿಸ್ತಾನ ಭದ್ರತಾ ಸಂಸ್ಥೆಯೊಳಗಿನ ಈ ಏಜೆಂಟರ ಹುದ್ದೆಗಳು ಮತ್ತು ಉದ್ಯೋಗ ಶೀರ್ಷಿಕೆಗಳನ್ನು ದೃಢೀಕರಿಸಲು ತನಿಖಾಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ. ಇದನ್ನೂ ಓದಿ: 6 ಗನ್‌ಮ್ಯಾನ್‌ಗಳೊಂದಿಗೆ ಪಾಕ್ ಬೀದಿಯಲ್ಲಿ ಜ್ಯೋತಿ ಸುತ್ತಾಟ- ಸ್ಫೋಟಕ ವಿಡಿಯೋ ಔಟ್

    ಇದಕ್ಕೂ ಮುನ್ನವೇ ಜ್ಯೋತಿ ಮಲ್ಹೋತ್ರಾಳಾ ಲ್ಯಾಪ್‌ಟಾಪ್‌, ಫೋನ್‌ ಸೇರಿದಂತೆ ಹಲವು ಡಿಜಿಟಲ್‌ ಉಪಕರಣಗಳನ್ನು ವಶಪಡಿಸಿಕೊಂಡಿದ್ದರು. ಇದರಲ್ಲಿ ಅನೇಕ ಸಂದೇಶಗಳನ್ನ ಅಳಿಸಿದ ಹೊರತಾಗಿಯೂ 12 ಟಿಬಿ (12 ಸಾವಿರ ಜಿಬಿ) ಡೇಟಾವನ್ನು ರಿಟ್ರೀವ್‌ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪಾಕ್‌ ಜೊತೆಗಿನ ಇನ್ನಷ್ಟು ಸುಳಿವುಗಳನ್ನು ಪತ್ತೆಹಚ್ಚಲು ಡೇಟಾಗಳನ್ನ ಪರಿಶೀಲಿಸಲಾಗುತ್ತಿದೆ. ಇದನ್ನೂ ಓದಿ: ಪಾಕ್‌ ಪರ ಬೇಹುಗಾರಿಕೆ ನಡೆಸುತ್ತಿದ್ದ CRPF ಸಿಬ್ಬಂದಿ ಅರೆಸ್ಟ್ – ಜೂ.6ರ ವರೆಗೆ NIA ಕಸ್ಟಡಿಗೆ

    ಇನ್ನೂ ಈ ಡೇಟಾಗಳ ಪ್ರಕಾರ, ಯೂಟ್ಯೂಬರ್ ಜ್ಯೋತಿಗೆ ತಾನು ಮಾತಾಡ್ತಿರೋದು ಐಎಸ್‌ಐ ಅಧಿಕಾರಿಗಳ ಜೊತೆ ಎಂದು ಗೊತ್ತಿತ್ತು, ಆದರೂ ಭಯ ಇಲ್ಲದಂತೆ ಅವರೊಂದಿಗಿನ ಸಂಪರ್ಕವನ್ನು ಮುಂದುವರಿಸಿದ್ದಳು ಅನ್ನೋದು ತಿಳಿದುಬಂದಿದೆ. ಇದನ್ನೂ ಓದಿ: ಆಪರೇಷನ್ ಸಿಂಧೂರ ಶುರುವಾದ ಅರ್ಧ ಗಂಟೆಯ ನಂತರವೇ ಪಾಕಿಸ್ತಾನಕ್ಕೆ ಮಾಹಿತಿ ನೀಡಿದ್ದೆವು: ಜೈಶಂಕರ್

    Jyoti Malhotra was walking through Pakisan streets with 6 men armed with AK 47 rifles

    ಇನ್ನೂ ಪಾಕಿಸ್ತಾನ ಪ್ರವಾಸದ ಸಮಯದಲ್ಲಿ ಜ್ಯೋತಿ ಮಲ್ಹೋತ್ರಾಗೆ ನೀಡಿದ ವಿಐಪಿ ಸ್ವಾಗತದ ಬಗ್ಗೆ ಈಗ ಭಾರೀ ಅನುಮಾನ ಮೂಡಿದೆ. ಪಾಕ್‌ನ ಭದ್ರತಾ ಮತ್ತು ಗುಪ್ತಚರ ಅಧಿಕಾರಿಗಳು ಭಾಗವಹಿಸಿದ್ದ ಉನ್ನತ ಮಟ್ಟದ ಪಾರ್ಟಿಗಳಿಗೆ ಆಕೆಯನ್ನೂ ಆಹ್ವಾನಿಸಲಾಗಿತ್ತು ಎಂದು ವರದಿಯಾಗಿದೆ.

    ಸದ್ಯ ಹರಿಯಾಣದ ಹಿಸ್ಸಾರ್‌ ಪೊಲೀಸರ ಕಸ್ಟಡಿಯಲ್ಲಿ ಜ್ಯೋತಿ ಇದ್ದಾಳೆ.  ಇದನ್ನೂ ಓದಿ: ಆಪರೇಷನ್ ಸಿಂಧೂರವನ್ನ ಕ್ಯಾಮೆರಾ ಮುಂದೆಯೇ ಮಾಡಲಾಯ್ತು ಆದ್ದರಿಂದ ಯಾರೂ ಪುರಾವೆ ಕೇಳಲ್ಲ: ವಿಪಕ್ಷಗಳಿಗೆ ತಿವಿದ ಮೋದಿ

  • ಮನೆ ಓನರ್‌ ಹೆಂಡ್ತಿ ಜೊತೆಗೇ ಕಳ್ಳಸಂಬಂಧ – ಬಾಡಿಗೆದಾರನನ್ನ 7 ಅಡಿ ಗುಂಡಿಯಲ್ಲಿ ಜೀವಂತವಾಗಿ ಹೂತುಹಾಕಿದ ಪತಿ!

    ಮನೆ ಓನರ್‌ ಹೆಂಡ್ತಿ ಜೊತೆಗೇ ಕಳ್ಳಸಂಬಂಧ – ಬಾಡಿಗೆದಾರನನ್ನ 7 ಅಡಿ ಗುಂಡಿಯಲ್ಲಿ ಜೀವಂತವಾಗಿ ಹೂತುಹಾಕಿದ ಪತಿ!

    ಚಂಡೀಗಢ: ತನ್ನ ಪತ್ನಿಯೊಂದಿಗೆ ಕಳ್ಳ ಸಂಬಂಧ (Affair) ಹೊಂದಿದ್ದ ವ್ಯಕ್ತಿಯನ್ನ ಪತ್ತೆಹಚ್ಚಿ, ಸ್ನೇಹಿತರ ಸಹಾಯದಿಂದ ಅಪಹರಿಸಿ ಬಳಿಕ ಹೊಲದಲ್ಲಿ 7 ಅಡಿ ಆಳದ ಗುಂಡಿಯಲ್ಲಿ ಜೀವಂತವಾಗಿ ಹೂತುಹಾಕಿದ ಘಟನೆ ಹರಿಯಾಣದ ರೋಹ್ಟಕ್‌ನಲ್ಲಿ (Haryana’s Rohtak) ನಡೆದಿದೆ.

    ಹೌದು. ಚಂಡೀಗಢ ಮೂಲದ ವ್ಯಕ್ತಿ ತನ್ನ ಮನೆಯ ಬಾಡಿಗೆದಾರನು (Tenant) ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿರುವುದನ್ನು ಪತ್ತೆಹಚ್ಚಿದ ಬಳಿಕ 7 ಅಡಿ ಗುಂಡಿ ತೆಗೆದು ಆತನನ್ನ ಸಜೀವವಾಗಿ ಹೂತುಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಹತ್ಯೆ ಮಾಡಿದ ವ್ಯಕ್ತಿ ಓರ್ವ ಯೋಗ ಶಿಕ್ಷಕನಾಗಿದ್ದಾನೆ. ಇದನ್ನೂ ಓದಿ: ವಿಜಯೇಂದ್ರ, ಯತ್ನಾಳ್ ಟೀಂಗೆ ‘ಹೈ’ ಶಾಕ್ – ಐವರು ನಾಯಕರಿಗೆ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್

    ಕಳೆದ ವರ್ಷ ಡಿಸೆಂಬರ್‌ನಲ್ಲಿ ಘಟನೆ ನಡೆದಿತ್ತು. ಪೊಲೀಸರು ಸುದೀರ್ಘ ತನಿಖೆ ಬಳಿಕ ಆರೋಪಿಯನ್ನ ಬಂಧಿಸಿದ್ದು, ಇದೀಗ ಶವವನ್ನ ಹೊರ ತೆಗೆದಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿರುವುದು ದೃಢ

    ಏನಿದು ಕೇಸ್‌?
    ರೋಹ್ಟಕ್‌ನ ಬಾಬಾ ಮಸ್ತನಾಥ್ ವಿಶ್ವವಿದ್ಯಾನಿಲಯದಲ್ಲಿ ಯೋಗ ಕಲಿಸುತ್ತಿದ್ದ ಜಗದೀಪ್ ತನ್ನ ಮನೆಯ ಒಂದು ಭಾಗವನ್ನು ಹರ್ದೀಪ್ ಎಂಬಾತನಿಗೆ ಬಾಡಿಗೆ ನೀಡಿದ್ದ. ಆದ್ರೆ ಬಾಡಿಗೆ ಮನೆಯಲ್ಲಿದ್ದ ಹರ್ದೀಪ್‌ ಆತನ ಹೆಂಡತಿಯೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ. ಇದನ್ನು ಪತ್ತೆಹಚ್ಚಿದ ಜಗದೀಪ್‌, ತನ್ನ ಸ್ನೇಹಿತರ ಸಹಾಯ ಪಡೆದು ಕೊಲೆ ಮಾಡುವ ಸ್ಕೆಚ್‌ ಹಾಕಿದ್ದಾನೆ. ಚರ್ಖಿ ದಾದ್ರಿಯ ಪಂತವಾಸ್ ಗ್ರಾಮದಲ್ಲಿ 7 ಅಡಿ ಆಳದ ಗುಂಡಿ ತೆಗೆಸಿದ್ದಾನೆ. ಗುಂಡಿ ತೆಗೆಯುವವರು ಮೊದಲು ಕಾರಣ ಕೇಳಿದಾಗ ಇದು ಬೋರ್‌ವೆಲ್‌ಗೆ ಅಂದಿದ್ದಾನೆ. ಬಳಿಕ ಸ್ನೇಹಿತರ ಸಹಾಯದಿಂದ ಹರ್ದೀಪ್‌ನ ಕೈಕಾಲುಗಳನ್ನು ಕಟ್ಟಿಹಾಕಿ, ಬಾಯಿಗೆ ಟೇಪ್‌ ತುರುಕಿ ಜೀವಂತವಾಗಿ ಹೂತುಹಾಕಿದ್ದಾನೆ.

    ಕೊಲೆಯಾದ 10 ದಿನಗಳ ಬಳಿಕ ಜ.3ರಂದು ಶಿವಾಜಿ ಕಾಲೋನಿ ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಈ ಸಂಬಂದ ತನಿಖೆ ಕೈಗೊಂಡಿದ್ದ ಪೊಲೀಸರು ಜದೀಪ್‌ ದೂರವಾಣಿ ಕರೆಗಳನ್ನು ಪರಿಶೀಲಿಸಿದ ಬಳಿಕ ನಿಜಾಂಶ ಬಯಲಾಗಿದೆ. ಬಳಿಕ ಜಗದೀಪ್‌ನನ್ನ ಕೋರ್ಟ್‌ಗೆ ಹಾಜರುಪಡಿಸಿ ಕಸ್ಟಡಿಗೆ ಪಡೆದಿದ್ದಾರೆ. ಸದ್ಯ ಪ್ರಕರಣದ ತನಿಖೆ ಮುಂದುವರಿಸಿರುವ ಪೊಲೀಸರು, ಕೊಲೆಗೆ ಸಹಕಾರ ನೀಡಿದ ಉಳಿದ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ ಎಂದು ಅಪರಾಧ ತನಿಖಾ ಘಟಕದ ಉಸ್ತುವಾರಿ ಕುಲದೀಪ್ ಸಿಂಗ್ ಹೇಳಿದ್ದಾರೆ.

  • ʻಕೈʼ ಕಾರ್ಯಕರ್ತೆ ಹಿಮಾನಿ ಹತ್ಯೆ ಕೇಸ್‌ – ಮೃತದೇಹ ಸೂಟ್‌ಕೇಸ್‌ನಲ್ಲಿ ಹಾಕಿ ಆರೋಪಿ ಎಳೆದೊಯ್ಯುವ ಸಿಸಿಟಿವಿ ದೃಶ್ಯ ಪತ್ತೆ

    ʻಕೈʼ ಕಾರ್ಯಕರ್ತೆ ಹಿಮಾನಿ ಹತ್ಯೆ ಕೇಸ್‌ – ಮೃತದೇಹ ಸೂಟ್‌ಕೇಸ್‌ನಲ್ಲಿ ಹಾಕಿ ಆರೋಪಿ ಎಳೆದೊಯ್ಯುವ ಸಿಸಿಟಿವಿ ದೃಶ್ಯ ಪತ್ತೆ

    ಚಂಡೀಗಢ: ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ (Himani Narwal) ಹತ್ಯೆ ಪ್ರಕರಣದಲ್ಲಿ ಹೊಸ ಬೆಳವಣಿಗೆ ನಡೆದಿದೆ. ಆರೋಪಿ ಸಚಿನ್‌ನ್ನು ಬಂಧಿಸಿದ ಒಂದು ದಿನದ ಬಳಿಕ, ಆತ ಸೂಟ್‌ಕೇಸ್‌ನಲ್ಲಿ ಶವ ಸಾಗಿಸುತ್ತಿದ್ದ ಸಿಸಿಟಿವಿ ದೃಶ್ಯಾವಳಿ ವೈರಲ್ ಆಗಿದೆ.

    ರೋಹ್ಟಕ್ (Rohtak) ಜಿಲ್ಲೆಯ ಸಂಪ್ಲಾ ಬಸ್ ನಿಲ್ದಾಣದ ಬಳಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿ ಹಿಮಾನಿ ಶವ ಪತ್ತೆಯಾಗಿತ್ತು. ಆರೋಪಿಯು, ದುಪ್ಪಟ್ಟಾದಿಂದ ಕತ್ತು ಬಿಗಿದು ಕೊಲೆ ಮಾಡಿದ್ದಾನೆ. ಬಳಿಕ ಆಕೆಯ ಶವವನ್ನು ಸೂಟ್‌ಕೇಸ್‌ನಲ್ಲಿ ತುಂಬಿ ಬಸ್ ನಿಲ್ದಾಣದಲ್ಲಿ ಇಟ್ಟುಹೋಗಿದ್ದಾನೆ ಎಂದು ಹರಿಯಾಣ ಪೊಲೀಸರು (Haryana Police) ತಿಳಿಸಿದ್ದರು. ಇದನ್ನೂ ಓದಿ: ವಿಜಯಪುರ ಕಾನ್ಸ್‌ಟೇಬಲ್‌ ಭಾವುಕ ಪೋಸ್ಟ್‌ – ಆತನಿಂದ ರಜೆಗೆ ಯಾವ್ದೇ ಮನವಿ ಬಂದಿಲ್ಲ: ಎಸ್ಪಿ ಸ್ಪಷ್ಟನೆ

    ಇದೀಗ ಪೊಲೀಸರಿಗೆ ಲಭ್ಯವಾದ ಸಿಸಿಟಿವಿ ದೃಶ್ಯದಲ್ಲಿ ಆರೋಪಿಯು ಹಿಮಾನಿ ಮನೆ ಸಮೀಪದ ರಸ್ತೆಯಲ್ಲಿ ಸೂಟ್‌ಕೇಸ್ ಹಿಡಿದುಕೊಂಡು ಹೋಗುತ್ತಿರುವ ಸೆರೆಯಾಗಿದೆ. ಸಿಸಿಟಿವಿ ಫೂಟೇಜ್ ವಶಕ್ಕೆ ಪಡೆದಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಕೊಲೆ ಕೇಸ್‌ನಲ್ಲಿ ಆಪ್ತನ ಬಂಧನ – ಮಹಾರಾಷ್ಟ್ರ ಸಚಿವ ರಾಜೀನಾಮೆ

    ಆರೋಪಿ ಸಚಿನ್, ಮೃತ ಹಿಮಾನಿಯ ಸ್ನೇಹಿತನಾಗಿದ್ದ. ಹಣಕ್ಕಾಗಿ ವಿಚಾರಕ್ಕೆ ನಡೆದ ಜಗಳದಲ್ಲಿ ಆಕೆಯನ್ನು ಕತ್ತು ಹಿಸುಕಿ ಕೊಂದ ಆರೋಪದಡಿ ಸಚಿನ್‌ನನ್ನು ಬಂಧಿಸಲಾಗಿದೆ ಎಂದು ಹರಿಯಾಣ ಪೊಲೀಸರು ತಿಳಿಸಿದ್ದಾರೆ.

    ಏನಿದು ಕೇಸ್?
    ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ `ಭಾರತ್ ಜೋಡೋ’ ಯಾತ್ರೆಯಲ್ಲಿ ಕಾಣಿಸಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್(22) ಶವ ಹರಿಯಾಣದ ರೋಹ್ಟಕ್ ಜಿಲ್ಲೆಯ ಬಸ್ ನಿಲ್ದಾಣದ ಬಳಿ ಪತ್ತೆಯಾಗಿತ್ತು. ಇದನ್ನೂ ಓದಿ: ಅರಣ್ಯದಲ್ಲಿ ಪಾರ್ಟಿ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಇಲಾಖೆ ಸಿಬ್ಬಂದಿ, ಪೊಲೀಸರ ಮೇಲೆ ಪುಂಡರಿಂದ ಹಲ್ಲೆ

    ಸಂಪ್ಲಾ ಬಸ್ ನಿಲ್ದಾಣದ ಬಳಿ ದಾರಿಹೋಕರು ಸೂಟ್‌ಕೇಸ್ ಇರುವುದನ್ನು ಗಮನಿಸಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೂಡಲೇ ವಿಧಿವಿಜ್ಞಾನ ತಂಡದೊಂದಿಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಸೂಟ್‌ಕೇಸ್‌ನಲ್ಲಿ ಶವ ಇರುವುದನ್ನು ಪತ್ತೆಹಚ್ಚಿದ್ದರು. ಶವವನ್ನು ಹೊರತೆಗೆದಾಗ ಕುತ್ತಿಗೆ ಭಾಗಕ್ಕೆ ದುಪ್ಪಟ್ಟಾದಿಂದ ಬಿಗಿಯಲಾಗಿತ್ತು. ಹೀಗಾಗಿ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದರು. ಇದನ್ನೂ ಓದಿ: ಬಾಯಿ ಸುಡಲಿದೆ ಕಾಫಿ – ತಿಂಗಳಾಂತ್ಯಕ್ಕೆ ಕಪ್ ಕಾಫಿ ಬೆಲೆ 3 ರೂ. ಏರಿಕೆ ಸಾಧ್ಯತೆ

  • ಕಾಂಗ್ರೆಸ್‌ ಕಾರ್ಯಕರ್ತೆ ಹಿಮಾನಿ ಶವ ಸೂಟ್‌ಕೇಸ್‌ನಲ್ಲಿ ಪತ್ತೆ – ಓರ್ವ ಶಂಕಿತ ಅರೆಸ್ಟ್‌

    ಕಾಂಗ್ರೆಸ್‌ ಕಾರ್ಯಕರ್ತೆ ಹಿಮಾನಿ ಶವ ಸೂಟ್‌ಕೇಸ್‌ನಲ್ಲಿ ಪತ್ತೆ – ಓರ್ವ ಶಂಕಿತ ಅರೆಸ್ಟ್‌

    ಚಂಡೀಗಢ: ʻಭಾರತ್ ಜೋಡೋʼ ಯಾತ್ರೆಯಲ್ಲಿ ಕಾಣಿಸಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ (Himani Narwal) ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಶಂಕಿತನನ್ನ ಬಂಧಿಸಲಾಗಿದೆ ಎಂದು ಹರಿಯಾಣ ಪೊಲೀಸ್‌ (Haryana Police) ಮೂಲಗಳು ತಿಳಿಸಿವೆ.

    ಶಂಕಿತ ಆರೋಪಿಯಿಂದ ಹಿಮಾನಿ ನರ್ವಾಲ್‌ನ ಮೊಬೈಲ್‌ ಹಾಗೂ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತನನ್ನ ಬಹದ್ದೂರ್‌ಗಢ ನಿವಾಸಿಯಾಗಿದ್ದು, ಈತ ಹಿಮಾನಿಯೊಂದಿಗೆ ಸಂಪರ್ಕ ಹೊಂದಿದ್ದ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಭಾರತ್‌ ಜೋಡೋ ಯಾತ್ರೆಯಲ್ಲಿ ಕಾಣಿಸಿಕೊಂಡಿದ್ದ ʻಕೈʼ ಕಾರ್ಯಕರ್ತೆ ಸೂಟ್‌ಕೇಸ್‌ನಲ್ಲಿ ಶವವಾಗಿ ಪತ್ತೆ

    ರೋಹ್ಟಕ್ ಜಿಲ್ಲೆಯ ಬಸ್ ನಿಲ್ದಾಣದ ಬಳಿಯಿದ್ದ ಸೂಟ್‌ಕೇಸ್‌ನಲ್ಲಿ ಹಿಮಾನಿ ಶವ ಪತ್ತೆಯಾದ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದ ಹರಿಯಾಣ ಪೊಲೀಸ್‌ ಇಲಾಖೆ ತನಿಖೆಗಾಗಿ ವಿಶೇಷ ತಂಡವನ್ನ ರಚನೆ ಮಾಡಿತ್ತು. ಪ್ರಕರಣ ಬೆಳಕಿಗೆ ಬಂದ ಒಂದು ದಿನದ ನಂತರ ಓರ್ವನನ್ನ ಬಂಧಿಸಲಾಗಿದೆ. ಇದನ್ನೂ ಓದಿ: ಇಂದಿನಿಂದ ಕಲಾಪ – ಸಾಲು ಸಾಲು ಪ್ರತಿಭಟನೆಗೆ ಪ್ಲ್ಯಾನ್‌, ವಿಧಾನಸೌಧ ಸುತ್ತಮುತ್ತ ನಿಷೇಧಾಜ್ಞೆ

    ಏನಿದು ಕೇಸ್‌?
    ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ʻಭಾರತ್ ಜೋಡೋʼಯಾತ್ರೆಯಲ್ಲಿ ಕಾಣಿಸಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್‌ (22) ಶವ ಹರಿಯಾಣದ ರೋಹ್ಟಕ್ ಜಿಲ್ಲೆಯ ಬಸ್ ನಿಲ್ದಾಣದ ಬಳಿ ಪತ್ತೆಯಾಗಿತ್ತು. ಇದನ್ನೂ ಓದಿ: ಐತಿಹಾಸಿಕ ಹಂಪಿ ಉತ್ಸವಕ್ಕೆ ತೆರೆ – ಸಾಂಸ್ಕೃತಿಕ ವೈಭವಕ್ಕೆ ಮನಸೋತ ಜನ

    ಸಂಪ್ಲಾ ಬಸ್ ನಿಲ್ದಾಣದ ಬಳಿ ದಾರಿಹೋಕರು ಸೂಟ್‌ಕೇಸ್ ಇರುವುದನ್ನು ಗಮನಿಸಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೂಡಲೇ ವಿಧಿವಿಜ್ಞಾನ ತಂಡದೊಂದಿಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಸೂಟ್‌ಕೇಸ್‌ನಲ್ಲಿ ಶವ ಇರುವುದನ್ನು ಪತ್ತೆಹಚ್ಚಿದ್ದರು. ಶವವನ್ನು ಹೊರತೆಗೆದಾಗ ಕುತ್ತಿಗೆ ಭಾಗಕ್ಕೆ ದುಪ್ಪಟ್ಟಾದಿಂದ ಬಿಗಿಯಲಾಗಿತ್ತು. ಹೀಗಾಗಿ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದರು. ಆಕೆಯ ಶವವನ್ನ ಮರಣೋತ್ತರ ಪರೀಕ್ಷೆಗಾಗಿ ರೋಹ್ಟಕ್ ಪಿಜಿಐಎಂಎಸ್‌ಗೆ ರವಾನಿಸಲಾಗಿದೆ.

  • ಭಾರತ್‌ ಜೋಡೋ ಯಾತ್ರೆಯಲ್ಲಿ ಕಾಣಿಸಿಕೊಂಡಿದ್ದ ʻಕೈʼ ಕಾರ್ಯಕರ್ತೆ ಸೂಟ್‌ಕೇಸ್‌ನಲ್ಲಿ ಶವವಾಗಿ ಪತ್ತೆ

    ಭಾರತ್‌ ಜೋಡೋ ಯಾತ್ರೆಯಲ್ಲಿ ಕಾಣಿಸಿಕೊಂಡಿದ್ದ ʻಕೈʼ ಕಾರ್ಯಕರ್ತೆ ಸೂಟ್‌ಕೇಸ್‌ನಲ್ಲಿ ಶವವಾಗಿ ಪತ್ತೆ

    ಚಂಡೀಗಢ: ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರೊಂದಿಗೆ ʻಭಾರತ್‌ ಜೋಡೋʼ ಯಾತ್ರೆಯಲ್ಲಿ ಕಾಣಿಸಿಕೊಂಡಿದ್ದ ಕಾಂಗ್ರೆಸ್‌ ಕಾರ್ಯಕರ್ತೆ (Congress Worker) ಹರಿಯಾಣದ ರೋಹ್ಟಕ್‌ ಜಿಲ್ಲೆಯ ಬಸ್‌ ನಿಲ್ದಾಣದ ಬಳಿ ಶವವಾಗಿ ಪತ್ತೆಯಾಗಿದ್ದಾರೆ.

    ಬಸ್‌ ನಿಲ್ದಾಣದ ಬಳಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಮಹಿಳೆಯನ್ನು ಹಿಮಾನಿ ನರ್ವಾಲ್‌ (22) (Himani Narwal) ಎಂದು ಗುರುತಿಸಲಾಗಿದೆ. ಸಾವಿನ ಕುರಿತು ಉನ್ನತಮಟ್ಟದ ತನಿಖೆಗೆ ಕಾಂಗ್ರೆಸ್‌ ಆಗ್ರಹಿಸಿದೆ. ಇದನ್ನೂ ಓದಿ: ರಾಜಕೀಯ ಚದುರಂಗದಾಟಕ್ಕೆ ಮೂಡಿಗೆರೆ ಬಿಜೆಪಿ ಬಲಿ, ಬಹುಮತವಿದ್ರೂ ಕಾಂಗ್ರೆಸ್‌ಗೆ ಅಧಿಕಾರ!

    ಸಂಪ್ಲಾ ಬಸ್‌ ನಿಲ್ದಾಣದ ಬಳಿ ದಾರಿಹೋಕರು ಸೂಟ್‌ಕೇಸ್‌ ಇರುವುದನ್ನು ಗಮನಿಸಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ವಿಧಿವಿಜ್ಞಾನ ತಂಡದೊಂದಿಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಸೂಟ್‌ಕೇಸ್‌ನಲ್ಲಿ ಶವ ಇರುವುದನ್ನು ಪತ್ತೆಹಚ್ಚಿದ್ದಾರೆ. ಶವವನ್ನು ಹೊರತೆಗೆದಾಗ ಕುತ್ತಿಗೆ ಭಾಗಕ್ಕೆ ದುಪ್ಪಟ್ಟಾ ಬಿಗಿಯಲಾಗಿತ್ತು. ಹೀಗಾಗಿ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಸದ್ಯ ಆಕೆಯ ಶವವನ್ನ ಮರಣೋತ್ತರ ಪರೀಕ್ಷೆಗಾಗಿ ರೋಹ್ಟಕ್ ಪಿಜಿಐಎಂಎಸ್‌ಗೆ ರವಾನಿಸಲಾಗಿದೆ.

    ಹಿಮಾನಿ ನರ್ವಾಲ್‌ ಅವರು ಮಾಜಿ ಸಿಎಂ ಭೂಪಿಂದರ್ ಸಿಂಗ್ ಹೂಡಾ ಪುತ್ರ ಕಾಂಗ್ರೆಸ್ ಸಂಸದ ದೀಪೇಂದರ್ ಸಿಂಗ್ ಹೂಡಾ ಮತ್ತು ಪಕ್ಷದ ಶಾಸಕ ಬಿಬಿ ಬಾತ್ರಾ ಅವರೊಂದಿಗೆ ಕಾಣಿಸಿಕೊಂಡಿದ್ದರು. ಅವರೊಂದಿಗಿನ ಫೋಟೋಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಇದನ್ನೂ ಓದಿ: ಇಂದು ಭಾರತ Vs ಕಿವೀಸ್‌ ಹೈವೋಲ್ಟೇಜ್‌ ಕದನ – ಸ್ಪಿನ್ನರ್‌ಗಳ ಚಕ್ರವ್ಯೂಹ ಭೇದಿಸುವುದೇ ಟೀಂ ಇಂಡಿಯಾ?

    ಸದ್ಯ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕರು, ಎಸ್‌ಐಟಿ ತನಿಖೆಗೆ ಆಗ್ರಹಿಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ನೀವೆಲ್ಲ ಬಣ್ಣ ಹಾಕೊಂಡು ಸಿನಿಮಾ ಮಾಡ್ತೀರಾ, ನಾವು ಬಣ್ಣ ಹಾಕದೇ ಮಾಡ್ತೀವಿ – ಡಿಕೆಶಿ

  • ದನ ಕಳ್ಳಸಾಗಾಣಿಕೆ ಮಾಡಿದ್ದಾರೆ ಎಂದು ಪಿಯುಸಿ ವಿದ್ಯಾರ್ಥಿಯ ಹತ್ಯೆ – ಐವರು ಅರೆಸ್ಟ್

    ದನ ಕಳ್ಳಸಾಗಾಣಿಕೆ ಮಾಡಿದ್ದಾರೆ ಎಂದು ಪಿಯುಸಿ ವಿದ್ಯಾರ್ಥಿಯ ಹತ್ಯೆ – ಐವರು ಅರೆಸ್ಟ್

    ಚಂಡೀಗಢ: ಪಿಯುಸಿ ವಿದ್ಯಾರ್ಥಿಯೊಬ್ಬನನ್ನು ದನ ಕಳ್ಳಸಾಗಣೆದಾರನೆಂದು ತಪ್ಪಾಗಿ ತಿಳಿದು ಗೋರಕ್ಷಕರು ಕಾರಿನಲ್ಲಿ ಹಿಂಬಾಲಿಸಿ ಗುಂಡಿಕ್ಕಿ ಹತ್ಯೆಗೈದ ಘಟನೆ ಹರ್ಯಾಣದ (Haryana) ಫರಿದಾಬಾದ್‍ನಲ್ಲಿ ನಡೆದಿದೆ.

    ಆರ್ಯನ್ ಮಿಶ್ರಾ ದುಷ್ಕರ್ಮಿಗಳ ದಾಳಿಗೆ ಬಲಿಯಾದ ದುರ್ದೈವಿ. ಆಗಸ್ಟ್ 23 ರಂದು ಘಟನೆ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು (Haryana Police) ಬಂಧಿಸಿದ್ದಾರೆ. ಬಂಧಿತರನ್ನು ಅನಿಲ್ ಕೌಶಿಕ್, ವರುಣ್, ಕೃಷ್ಣ, ಆದೇಶ್ ಮತ್ತು ಸೌರಭ್ ಎಂದು ಗುರುತಿಸಲಾಗಿದೆ.

    ರೆನಾಲ್ಟ್ ಡಸ್ಟರ್ ಮತ್ತು ಟೊಯೊಟಾ ಫಾರ್ಚುನರ್ ಕಾರುಗಳಲ್ಲಿ ಕೆಲವರು ಜಾನುವಾರುಗಳನ್ನು ಕಳ್ಳಸಾಗಾಣಿಕೆ ಮಾಡುತ್ತಿದ್ದಾರೆ ಎಂದು ಗೋರಕ್ಷಕರಿಗೆ ಮಾಹಿತಿ ಸಿಕ್ಕಿದೆ. ಆರೋಪಿಗಳು ಈ ವೇಳೆ ಕಾರಿನಲ್ಲಿ ಹೋಗುತ್ತಿದ್ದ ಆರ್ಯನ್ ಮಿಶ್ರಾ, ಆತನ ಸ್ನೇಹಿತರಾದ ಶಾಂಕಿ ಮತ್ತು ಹರ್ಷಿತ್ ಅವರನ್ನು ಜಾನುವಾರು ಕಳ್ಳಸಾಗಣೆದಾರರು ಎಂದು ತಪ್ಪಾಗಿ ಭಾವಿಸಿದ್ದಾರೆ. ಬಳಿಕ ಆರೋಪಿಗಳು ದೆಹಲಿ-ಆಗ್ರಾ ರಾಷ್ಟ್ರೀಯ ಹೆದ್ದಾರಿಯಲ್ಲಿ (Delhi-Agra National Highway) ಸುಮಾರು 30 ಕಿಲೋಮೀಟರ್ ಅವರ ಕಾರನ್ನು ಹಿಂಬಾಲಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

    ಆರೋಪಿಗಳು ಕಾರನ್ನು ಹಿಂಬಾಲಿಸಿ ಚಾಲಕ ಹರ್ಷಿತ್ ನನ್ನು ನಿಲ್ಲಿಸುವಂತೆ ಹೇಳಿದ್ದಾರೆ. ಆದರೆ ಕಾರಿನಲ್ಲಿದ್ದ ಶಾಂಕಿ ಎಂಬಾತನಿಗೆ ಕೆಲವರ ಜೊತೆ ಗಲಾಟೆಗಳಾಗಿದ್ದು, ಅವರು ಗೂಂಡಾಗಳನ್ನು ಕಳಿಸಿ ಹತ್ಯೆಗೆ ಸ್ಕೆಚ್ ಹಾಕಿದ್ದಾರೆ ಎಂದು ಭಾವಿಸಿದ್ದರು.

    ಕಾರು ನಿಲ್ಲಿಸದೇ ಇದ್ದಾಗ ಆರೋಪಿಗಳು ಕಾರಿನತ್ತ ಗುಂಡು ಹಾರಿಸಿದರು. ಈ ವೇಳೆ ಆರ್ಯನ್ ಕುತ್ತಿಗೆಗೆ ತಗುಲಿತು. ಬಳಿಕ ಕಾರು ನಿಲ್ಲಿಸಿದಾಗ ಕಾರಿನಲ್ಲಿ ಮಹಿಳೆಯರು ಇದ್ದಿದ್ದನ್ನು ನೋಡಿ ಆರೋಪಿಗಳು ತಪ್ಪಾದ ಕಾರು ಎಂದು ಅರಿವಾಗಿ ಪರಾರಿಯಾಗಿದ್ದರು.

    ಆರೋಪಿಗಳು ಕಾರಿನಲ್ಲಿ ಇಬ್ಬರು ಮಹಿಳೆಯರನ್ನು ನೋಡಿದಾಗ, ಅವರು ತಪ್ಪಾದ ವ್ಯಕ್ತಿಗೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ ಎಂದು ಅವರು ಭಾವಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಆರ್ಯನ್‍ನನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಆತ ಒಂದು ದಿನದ ನಂತರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ.

  • ಹರಿಯಾಣ ಗಡಿಯಲ್ಲಿ ಪ್ರತಿಭಟನಾ ನಿರತ ರೈತ ಸಾವು – ಪೊಲೀಸರೊಂದಿಗೆ ಘರ್ಷಣೆ, ಎರಡು ದಿನ ಮೆರವಣಿಗೆ ಬಂದ್‌!

    ಹರಿಯಾಣ ಗಡಿಯಲ್ಲಿ ಪ್ರತಿಭಟನಾ ನಿರತ ರೈತ ಸಾವು – ಪೊಲೀಸರೊಂದಿಗೆ ಘರ್ಷಣೆ, ಎರಡು ದಿನ ಮೆರವಣಿಗೆ ಬಂದ್‌!

    ಚಂಡೀಗಢ: ಹರಿಯಾಣದ ಖಾನೌರಿ ಗಡಿಯಲ್ಲಿ (Haryana Khanauri border) ಪ್ರತಿಭಟನಾ ನಿರತ ರೈತರೊಬ್ಬರು ಸಾವನ್ನಪ್ಪಿದ್ದು, ಪೊಲೀಸರೊಂದಿಗೆ ರೈತರು (Farmers) ಘರ್ಷಣೆಗಿಳಿದಿದ್ದಾರೆ.

    23 ವರ್ಷದ ಶುಭಕರಣ್ ಸಿಂಗ್ ಮೃತ ರೈತ. ಇವರು ಬಟಿಂಡಾ ನಗರದ ನಿವಾಸಿಯಾಗಿದ್ದಾರೆ. ಪೊಲೀಸರು (Haryana Police) ರೈತರನ್ನು ಚದುರಿಸಲು ಅಶ್ರುವಾಯು ಸೇರಿದಂತೆ ವಿವಿಧ ರೀತಿಯ ಕ್ರಮಗಳನ್ನು ಅನುಸರಿಸುತ್ತಿದ್ದರು, ಈ ವೇಳೆ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ರೈತರೊಬ್ಬರು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ರೈತರ ಧರಣಿ, ಸತ್ಯಾಗ್ರಹ ಮುಂದುವರಿಯಲಿದ್ದರೂ ಎರಡು ದಿನಗಳ ಕಾಲ ದೆಹಲಿಗೆ ಬರುವ ತಮ್ಮ ಪ್ರತಿಭಟನಾ ಮೆರವಣಿಗೆಯನ್ನು ಸ್ಥಗಿತಗೊಳಿಸಿದ್ದಾರೆ.

    ಸದ್ಯ ಮೃತ ರೈತನಿಗೆ ಗುಂಡು ತಗುಲಿದೆ ಎಂದು ಪಟಿಯಾಲ ಆಸ್ಪತ್ರೆಯ (Patiyala H ವೈದ್ಯರು ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ರವಾನಿಸಿದ್ದು, ಮರಣೋತ್ತರ ಪರೀಕ್ಷಾ ವರದಿಗೆ ಕಾಯಲಾಗುತ್ತಿದೆ. ಇದನ್ನೂ ಓದಿ: 24 ಜಿಲ್ಲೆಗಳ 106 ತಾಲೂಕುಗಳಲ್ಲಿ `ಕೃಷಿ ಭಾಗ್ಯ’ ಯೋಜನೆ ಜಾರಿ: ಎನ್. ಚಲುವರಾಯಸ್ವಾಮಿ

    ಖಾನೌರಿ ಗಡಿ ಪ್ರತಿಘಟನೆಯಲ್ಲಿ ಭಾಗವಹಿಸಿದ್ದ ರೈತರ ಪೈಕಿ ಮೂವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಲ್ಲಿ ಒಬ್ಬರು ಆಸ್ಪತ್ರೆಗೆ ಕರೆತರುತ್ತಿದ್ದ ಮಾರ್ಗಮಧ್ಯದಲ್ಲೇ ಮೃತಪಟ್ಟಿದ್ದಾರೆ. ಉಳಿದ ಇಬ್ಬರ ಆರೋಗ್ಯ ಸ್ಥಿರವಾಗಿದೆ. ಹೆಚ್ಚಿನ ವಿವರಗಳನ್ನ ಮರಣೋತ್ತರ ಪರೀಕ್ಷೆಯ ಬಳಿಕವೇ ನೀಡಲಾಗುತ್ತದೆ ಎಂದು ಪಟಿಯಾಲದ ರಾಜೇಂದ್ರ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಡಾ.ರೇಖಿ ತಿಳಿಸಿದ್ದಾರೆ. ಇದನ್ನೂ ಓದಿ: ಯುಪಿ ಬಗ್ಗೆ ರಾಗಾ ವಿವಾದಾತ್ಮಕ ಮಾತು- ಮಗನಿಗೆ ಬುದ್ಧಿ ಹೇಳುವಂತೆ ಸೋನಿಯಾಗೆ ಸ್ಮೃತಿ ಸಲಹೆ