Tag: Hasan

  • ಹೇಮಾವತಿ ಎಡದಂಡೆ ನಾಲೆಗಳಿಗಿಲ್ಲ ನೀರು – ಕೆ.ಆರ್ ಪೇಟೆ, ನಾಗಮಂಗಲ ರೈತರು ಕಂಗಾಲು

    ಹೇಮಾವತಿ ಎಡದಂಡೆ ನಾಲೆಗಳಿಗಿಲ್ಲ ನೀರು – ಕೆ.ಆರ್ ಪೇಟೆ, ನಾಗಮಂಗಲ ರೈತರು ಕಂಗಾಲು

    ಮಂಡ್ಯ: ಕೆಆರ್‌ಎಸ್ (KRS) ಹಾಗೂ ಹೇಮಾವತಿ ಜಲಾಶಯಗಳಿಂದ  ಹೇಮಾವತಿ ಎಡದಂಡೆ (Hemavathi Canal) ನಾಲೆಗಳಿಗೆ ನೀರು ಹರಿಸದಿರುವುರಿಂದ ಕೆ.ಆರ್ ಪೇಟೆ (K R Pete) ಮತ್ತು ನಾಗಮಂಗಲ ರೈತರು ಕಂಗಾಲಾಗಿದ್ದಾರೆ.

    ಕೆಆರ್‌ಎಸ್ ಹಾಗೂ ಹೇಮಾವತಿ ಜಲಾಶಯಗಳು ಮಂಡ್ಯ ಜಿಲ್ಲೆಯ ರೈತರ ಜೀವನಾಡಿಯಾದ್ದು, ಲಕ್ಷಾಂತರ ರೈತರು ಇದೇ ಜಲಾಶಯವನ್ನು ನಂಬಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಇದೀಗ ನಾಲೆಯಲ್ಲಿ ನೀರು ಹರಿಯದಿರುವುದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದನ್ನೂ ಓದಿ: ಚಾಂಪಿಯನ್ಸ್‌ ಟ್ರೋಫಿ ಭದ್ರತಾ ಕಾರ್ಯ ನಿರ್ವಹಿಸಲು ನಿರಾಕರಣೆ – ಪಾಕ್‌ನ 100ಕ್ಕೂ ಹೆಚ್ಚು ಪೊಲೀಸರು ವಜಾ

    ಈ ಬಾರಿ ಹೇಮಾವತಿ ಜಲಾಶಯ ಸಂಪೂರ್ಣ ಭರ್ತಿಯಾಗಿ 20 ಟಿಎಂಸಿ ನೀರು ಸಂಗ್ರಹವಾಗಿದೆ. ಹೀಗಾಗಿ ರೈತರು ಬೇಸಿಗೆ ಬೆಳೆಗೆ ನೀರು ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಇದ್ದರು. ಆದರೆ ಫೆಬ್ರವರಿ ತಿಂಗಳು ಮುಗಿಯುತ್ತಾ ಬಂದರೂ ನಾಲೆಗಳಲ್ಲಿ ನೀರು ಹರಿದಿಲ್ಲ. ಅಲ್ಲದೆ ಕೆರೆ ಕಟ್ಟೆಗಳಲ್ಲಿ ನೀರು ತುಂಬದಿರುವುದರಿಂದ ಜಾನುವಾರುಗಳಿಗೆ ಕುಡಿಯುವ ನೀರಿಗೆ ತೊಂದರೆಯಾಗಿದೆ. ನೀರಿಲ್ಲದೆ ಜಮೀನುಗಳೂ ಬರುಡಾಗಿವೆ ಎಂದು ರೈತರು ಕಣ್ಣೀರು ಹಾಕುತ್ತಿದ್ದಾರೆ. ಇದನ್ನೂ ಓದಿ: ವಿಳಂಬ ಸಾಕು, ಕಾರಣ ಬೇಡ, ಕಟಾಕಟ್ ಗ್ಯಾರಂಟಿ ಹಣ ವರ್ಗಾಯಿಸಿ: ಸರ್ಕಾರಕ್ಕೆ ನಿಖಿಲ್ ಆಗ್ರಹ

    ಕೆಆರ್‌ಎಸ್ ಜಲಾಶಯದಿಂದ ನೀರು ಹರಿಸುವ ಸಂಬಂಧ ಮಂಡ್ಯ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ನೇತೃತ್ವದಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ಮಾಡಿ ವಿಶ್ವೇಶ್ವರಯ್ಯ ನಾಲೆಗಳಿಗೆ ನೀರು ಹರಿಸಲು ತೀರ್ಮಾನ ಮಾಡಲಾಗಿತ್ತು. ಆದರೆ ಹೇಮಾವತಿ ಜಲಾಶಯದಿಂದ ಹೇಮಾವತಿ ನಾಲೆಗಳಿಗೆ ನೀರು ಹರಿಸುವ ಸಂಬಂಧ ಹಾಸನ ಉಸ್ತುವಾರಿ ಸಚಿವ ರಾಜಣ್ಣ ನೇತೃತ್ವದಲ್ಲಿ ನೀರಾವರಿ ಸಲಹಾ ಸಮಿತಿ ಇದುವರೆಗೂ ಸಭೆ ಮಾಡಿಲ್ಲ. ಇದನ್ನೂ ಓದಿ: ಡಯಾಲಿಸಿಸ್ ಒಳಗಾಗಿರುವ ಪುರುಷರಿಗೂ ಫ್ರೀ ಬಸ್ ವ್ಯವಸ್ಥೆ?

    ಕಾವೇರಿ ನೀರಾವರಿ ನಿಗಮದ ಅಡಿಯಲ್ಲಿಯೇ ಎರಡು ಜಲಾಶಯಗಳು ಬಂದರೂ, ಸರ್ಕಾರ ಬೇರೆ ಬೇರೆ ತೀರ್ಮಾನ ತೆಗೆದುಕೊಂಡಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಕೂಡಲೇ ಸಭೆ ಮಾಡಿ ನೀರು ಬಿಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕು. ಇಲ್ಲದಿದ್ದರೇ ಉಗ್ರ ಹೋರಾಟ ಮಾಡುವುದಾಗಿ ರೈತರು ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದ್ದರು. ಜಿಲ್ಲಾಧಿಕಾರಿ ಸರ್ಕಾರದ ಜೊತೆ ಚರ್ಚೆ ಮಾಡುತ್ತೇನೆ ಎಂದು ಹೇಳಿದ್ದರು. ಇದನ್ನೂ ಓದಿ: ಡ್ರೈವಿಂಗ್ ಬಗ್ಗೆ ಚಾಲಕರಿಗೆ ಸರಿಯಾಗಿ ತರಬೇತಿ ಕೊಡಿ – ಸಾರ್ವಜನಿಕರಿಂದ ಬಿಎಂಟಿಸಿಗೆ ದೂರು

  • ಕೆರೆ ಕೋಡಿ ಕೆಲಸ ಮಾಡುವಾಗ ಮಣ್ಣು ಕುಸಿತ- ಮಣ್ಣಿನಡಿ ಸಿಲುಕಿ ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ

    ಕೆರೆ ಕೋಡಿ ಕೆಲಸ ಮಾಡುವಾಗ ಮಣ್ಣು ಕುಸಿತ- ಮಣ್ಣಿನಡಿ ಸಿಲುಕಿ ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ

    ಹಾಸನ: ಕೆರೆ ಕೋಡಿ ಕೆಲಸ ಮಾಡುವಾಗ ಮಣ್ಣು ಕುಸಿದಿದ್ದು, ಮಣ್ಣಿನಡಿ ಸಿಲುಕಿ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ (Hasan) ಜಿಲ್ಲೆ ಬೇಲೂರು (Beluru) ತಾಲ್ಲೂಕಿನ ಹನಿಕೆ ಗ್ರಾಮದ ಬಳಿ ನಡೆದಿದೆ.

    ಹೊಳೆನರಸೀಪುರದ ದರ್ಶನ್‌ಕುಮಾರ್ (29) ಮೃತ ದುರ್ದೈವಿ. ವಸಂತ್‌ಕುಮಾರ್ ಹಾಗೂ ಲೋಕಪ್ಪ ಗಾಯಾಳುಗಳು. ಇದನ್ನೂ ಓದಿ: ತಿರುಪತಿ ಲಡ್ಡು ಪ್ರಸಾದಕ್ಕೆ ಪ್ರಾಣಿಗಳ ಕೊಬ್ಬು ಬಳಕೆ ವಿವಾದ – ಇಂದಿನಿಂದ ಟಿಟಿಡಿ ದೇವಾಲಯ ಪವಿತ್ರೋತ್ಸವ

    ಹಾಸನದ ಪ್ರಕಾಶ್ ಎಂಬುವವರು ಕೆರೆ ಕೋಡಿ ದುರಸ್ತಿ ಗುತ್ತಿಗೆ ಪಡೆದಿದ್ದು, ದರ್ಶನ್‌ಕುಮಾರ್, ವಸಂತ್‌ಕುಮಾರ್ ಹಾಗೂ ಲೋಕಪ್ಪ ಹನಿಕೆ ಗ್ರಾಮದ ಕೆರೆ ಕೋಡಿ ಕೆಲಸ ಮಾಡುತ್ತಿದ್ದ ವೇಳೆ ದಿಢೀರ್ ಮಣ್ಣು ಕುಸಿದಿದೆ. ದರ್ಶನ್‌ಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಲೋಕಪ್ಪ ಹಾಗೂ ವಸಂತ್‌ಕುಮಾರ್ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಮಹಿಷ ದಸರಾದಿಂದ ಮೈಸೂರು ಹೆಸರೇ ಚೇಂಜ್ – ಮೈಸೂರು ಅಲ್ಲ, ‘ಮಹಿಷೂರು’ ಅಂತಾ ಬದಲಾವಣೆ

    ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ರಾಜ್ಯದ 2 ಕಡೆಗಳಲ್ಲಿ ತುಪ್ಪ ಸೇಫ್ ಅಲ್ಲ – ಆಹಾರ ಸುರಕ್ಷತಾ ಇಲಾಖೆ ಎಚ್ಚರಿಕೆ

  • ಕೌಟುಂಬಿಕ ಕಲಹ – ಸ್ನೇಹಿತನಿಗೆ ಸುಪಾರಿ ಕೊಟ್ಟು ಪತ್ನಿಯನ್ನೇ ಕೊಲೆ ಮಾಡಿಸಿದ ಪತಿ

    ಕೌಟುಂಬಿಕ ಕಲಹ – ಸ್ನೇಹಿತನಿಗೆ ಸುಪಾರಿ ಕೊಟ್ಟು ಪತ್ನಿಯನ್ನೇ ಕೊಲೆ ಮಾಡಿಸಿದ ಪತಿ

    ಹಾಸನ: ಕೌಟುಂಬಿಕ ಕಲಹದಿಂದಾಗಿ ಬೇಸತ್ತ ಪತಿ ತನ್ನ ಸ್ನೇಹಿತನಿಗೆ ಸುಪಾರಿ ಕೊಟ್ಟು ಪತ್ನಿಯನ್ನು ಕೊಲೆ ಮಾಡಿಸಿರುವ ಘಟನೆ ಹಾಸನ ಜಿಲ್ಲೆ (Hasan), ಬೇಲೂರು ತಾಲ್ಲೂಕಿನ, ಯಕಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಶೀಲಾ (42) ಪತಿಯ ಸ್ನೇಹಿತನಿಂದ ಹತ್ಯೆಯಾದ ಮಹಿಳೆ. ಕೌಟುಂಬಿಕ ಕಲಹದ ಹಿನ್ನೆಲೆ ಕೆಲ ವರ್ಷಗಳಿಂದ ಪರಸ್ಪರ ಗಂಡ ಹೆಂಡತಿ ದೂರ ಇದ್ದರು. ಕಳೆದ ಶನಿವಾರ ಮನೆ ಬಳಿ ಬಂದು ತನ್ನ ಸ್ನೇಹಿತ ರಾಜಶೇಖರ ಮೂಲಕ ಪತಿ ಜಗದೀಶ್ ಪತ್ನಿಯನ್ನು ಹೊರಗೆ ಕರೆದು ಜಗಳವಾಡಿದ್ದ. ಜಗದೀಶ್‌ನಿಂದ ಸುಪಾರಿ ಪಡೆದು ರಾಜಶೇಖರ ಶೀಲಾನನ್ನು ಮನೆ ಮುಂದೆ ಕುತ್ತಿಗೆ ಬಿಗಿದು ಬರ್ಬರವಾಗಿ ಹತ್ಯೆಗೈದಿದ್ದಾನೆ. ಇದನ್ನೂ ಓದಿ: ಪ್ರತಿಭಟನೆ ನಿಲ್ಲಿಸಿ, ದುರ್ಗಾಪೂಜೆಗೆ ಗಮನ ಹರಿಸಿ – ದೀದಿ ಹೇಳಿಕೆಗೆ ಮೃತ ಟ್ರೈನಿ ವೈದ್ಯೆಯ ತಾಯಿ ಆಕ್ರೋಶ

    ಕೊಲೆ ಬಳಿಕ ಮೃತದೇಹಕ್ಕೆ ಕಲ್ಲು ಕಟ್ಟಿ ಕೆರೆಗೆ ಎಸೆದು ಎಸ್ಕೇಪ್ ಆಗಿದ್ದಾರೆ. ಮಹಿಳೆಯನ್ನ ಹಾಡುಹಗಲೇ ಹತ್ಯೆಗೈಯ್ಯುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟ ಕೇಂದ್ರ ಸರ್ಕಾರದ ವೈಫಲ್ಯ: ಶಾಸಕ ರಂಗನಾಥ್

    ತಾಯಿ ಕಾಣೆಯಾದ ಬಗ್ಗೆ ಭಾನುವಾರ ಪುತ್ರಿ ದೂರು ನೀಡಿದ್ದು, ನಾಪತ್ತೆ ಪ್ರಕರಣ ದಾಖಲು ಮಾಡಿಕೊಂಡು ತನಿಖೆಗಿಳಿದಾಗ ಕೊಲೆ ರಹಸ್ಯ ಬಯಲಾಯಿತು. ಕೊಲೆ ಆರೋಪಿ ರಾಜಶೇಖರ ಹಾಗೂ ಪತಿ ಜಗದೀಶ್‌ನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: Haryana Poll | ಬಿಜೆಪಿಯಿಂದ 21 ಅಭ್ಯರ್ಥಿಗಳ 2ನೇ ಪಟ್ಟಿ ರಿಲೀಸ್‌ – ವಿನೇಶ್‌ ವಿರುದ್ಧ ಪ್ರಬಲ ಅಭ್ಯರ್ಥಿ ಅಖಾಡಕ್ಕೆ

    ಘಟನೆ ಕುರಿತು ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಸಿಎಂ ಸ್ಥಾನ ಖಾಲಿ ಇಲ್ಲ – ಖಾಲಿ ಇಲ್ಲದ ಸ್ಥಾನದ ಬಗ್ಗೆ ಚರ್ಚೆ ಅಪ್ರಸ್ತುತ: ಡಾ.ರಂಗನಾಥ್

  • ಸಿದ್ದರಾಮಯ್ಯನವರೇ ನೀವು ಕಾಂಗ್ರೆಸ್‌ನವರಾದ್ರೆ ಈಗ ಕುಳಿತುಕೊಳ್ಳಿ – ಕೈ ಮುಖಂಡ ಮನವಿ

    ಸಿದ್ದರಾಮಯ್ಯನವರೇ ನೀವು ಕಾಂಗ್ರೆಸ್‌ನವರಾದ್ರೆ ಈಗ ಕುಳಿತುಕೊಳ್ಳಿ – ಕೈ ಮುಖಂಡ ಮನವಿ

    ಹಾಸನ: ಸಿದ್ದರಾಮಯ್ಯ ಅವರೇ ಹೋಗ್ಬೇಡಿ ಕುಳಿತುಕೊಳ್ಳಿ ಎಂದು ಕಾಂಗ್ರೆಸ್‌ ಮುಖಂಡರೊಬ್ಬರು ತಮ್ಮ ಭಾಷಣ ಕೇಳುವಂತೆ ವೇದಿಕೆಯಲ್ಲೇ ನಿಂತು ಮನವಿ ಮಾಡಿಕೊಂಡಿದ್ದಾರೆ.

    ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರೊಬ್ಬರ ಕೂಗು ಇದೀಗ ಚರ್ಚೆಗೂ ಕಾರಣವಾಗಿದೆ.

    ಪ್ರಚಾರ ಸಭೆಯಲ್ಲಿ ಸಿದ್ದರಾಮಯ್ಯ ಭಾಷಣ ಮುಗಿದ ತಕ್ಷಣ ಸಭೆ ಮುಕ್ತಾಯಗೊಳ್ಳುತ್ತಿತ್ತು. ಈ ಬೆನ್ನಲ್ಲೇ ಸಿದ್ದರಾಮಯ್ಯ ಅವರೊಂದಿಗೆ ಇತರ ಮುಖಂಡರೂ ವೇದಿಕೆಯಿಂದ ನಿರ್ಗಮಿಸುತ್ತಿದ್ದರು. ಈ ವೇಳೆ ಮೈಕ್ ಹಿಡಿದು ನಿಂತ ಸ್ಥಳೀಯ ಮುಖಂಡರೊಬ್ಬರು ನೀವು ನಿಜವಾದ ಕಾಂಗ್ರೆಸ್ ನವರಾದ್ರೆ ಈಗ ಕುಳಿತುಕೊಳ್ಳಿ, ನನ್ನಭಾಷಣ ಕೇಳಿ ಎಂದು ಮೈಕ್‌ನಲ್ಲಿ ಮತ್ತೆ ಮತ್ತೆ ಮನವಿ ಮಾಡಿದರು. ಆದರೂ ಇದ್ಯಾವುದು ಕೇಳಿಸದಂತೆ ಸಿದ್ದರಾಮಯ್ಯ ವೇದಿಕೆಯಿಂದ ಕೆಳಗಿಳಿದು ಹೊರಟೇಬಿಟ್ಟರು.

    ಪಟ್ಟು ಬಿಡದೆ ಖಾಲಿ ವೇದಿಕೆಯಲ್ಲೇ ನಿಂತು ಭಾಷಣ ಮಾಡಿದ ವ್ಯಕ್ತಿ, ಸಿದ್ದರಾಮಯ್ಯ ಅವರು 5 ನಿಮಿಷ ಇಲ್ಲಿ ಕುಳಿತುಕೊಳ್ಳಬೇಕಿತ್ತು, ನಾನು ಬಿಜೆಪಿ ಹರಣಗಳನ್ನೆಲ್ಲಾ ಬಯಲು ಮಾಡುತ್ತಿದೆ ಎಂದು ಹೇಳಿದರು.

    ಕಾಂಗ್ರೆಸ್‌ನಲ್ಲಿ ವಿಧಾನ ಪರಿಷತ್‌ ಚುನಾವಣೆಗೆ ಟಿಕೆಟ್‌ ಹಂಚಿಕೆ ವಿಚಾರದಲ್ಲಿ ಈಗಾಗಲೇ ಭಿನ್ನಮತ ಸ್ಫೋಟಗೊಂಡಿದೆ. ಈ ಬೆನ್ನಲ್ಲೇ ಕಾಂಗ್ರೆಸ್‌ ಮುಖಂಡನ ಕೂಗು, ಪ್ರತಿಪಕ್ಷಗಳ ಟೀಕೆಗೆ ಅಸ್ತ್ರವಾಗಿದೆ. ಸ್ಥಳೀಯ ಮುಖಂಡರ ಮಾತನ್ನೇ ಕೇಳಿಸಿಕೊಳ್ಳುವಷ್ಟು ತಾಳ್ಮೆಯಿಲ್ಲದವರು ಸಂಘಟನೆ ಹೇಗೆ ಮಾಡುತ್ತಾರೆ? ಎಂದು ಪ್ರತಿ ಪಕ್ಷದ ಮುಖಂಡರು ಟೀಕಿಸಲು ಪ್ರಾರಂಭಿಸಿದ್ದಾರೆ.

  • ಎಮ್ಮೆಯ ಹುಚ್ಚಾಟಕ್ಕೆ ಓರ್ವ ಸಾವು, ನಾಲ್ವರು ಗಂಭೀರ!

    ಎಮ್ಮೆಯ ಹುಚ್ಚಾಟಕ್ಕೆ ಓರ್ವ ಸಾವು, ನಾಲ್ವರು ಗಂಭೀರ!

    ಹಾಸನ: ಸಾಕು ಎಮ್ಮೆಯೊಂದು ಹುಚ್ಚಾಟ ನಡೆಸಿದ್ದರ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟು ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಆಲೂರು ತಾಲೂಕಿನ ಚೆನ್ನಾಪುರದಲ್ಲಿ ನಡೆದಿದೆ.

    ಚೆನ್ನಾಪುರ ಗ್ರಾಮದ ರುದ್ರೇಗೌಡ (57) ಎಮ್ಮೆ ದಾಳಿಗೆ ಒಳಗಾಗಿ ಮೃತಪಟ್ಟ ವ್ಯಕ್ತಿ. ಮಂಗಳವಾರ ಗ್ರಾಮದಲ್ಲಿ ಸಾಕು ಎಮ್ಮೆಯೊಂದು ಹುಚ್ಚಾಟ ನಡೆಸಿ ತಿವಿದು ಹಲವು ಜನರಿಗೆ ಗಾಯಗೊಳಿಸಿದೆ. ಈ ವೇಳೆ ಎಮ್ಮೆ ದಾಳಿಗೆ ತೀವ್ರವಾಗಿ ತುತ್ತಾದ ರುದ್ರೇಗೌಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

    ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪಶುಸಂಗೋಪನ ಇಲಾಖೆಯ ಸಿಬ್ಬಂದಿ ಎಮ್ಮೆಯನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದ್ದಾರೆ. ಎಮ್ಮೆ ದಾಳಿಗೆ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದು, ಮೃತ ವ್ಯಕ್ತಿಯ ಕುಟುಂಬ ಹಾಗೂ ಗಾಯಗೊಂಡವರಿಗೆ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ.

  • ಕಾಂಗ್ರೆಸ್‍ನಲ್ಲಿ ಬಸ್ ಓಡಿಸಲು ಡ್ರೈವರಿಲ್ಲ- ಜಮೀರ್‍ಗೆ ರೇವಣ್ಣ ಟಾಂಗ್

    ಕಾಂಗ್ರೆಸ್‍ನಲ್ಲಿ ಬಸ್ ಓಡಿಸಲು ಡ್ರೈವರಿಲ್ಲ- ಜಮೀರ್‍ಗೆ ರೇವಣ್ಣ ಟಾಂಗ್

    ಹಾಸನ: ಬಂಡಾಯ ಶಾಸಕ ಜಮೀರ್ ಅಹಮ್ಮದ್ ಸೇರಿದಂತೆ ಏಳು ಮಂದಿ ಬಂಡಾಯ ಶಾಸಕರ ವಿರುದ್ಧ ಜೆಡಿಎಸ್ ಮುಖಂಡ ಹೆಚ್ ಡಿ ರೇವಣ್ಣ
    ವಾಗ್ದಾಳಿ ನಡೆಸಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಬಸ್ ಓಡಿಸಲು ಡ್ರೈವರ್ ಇಲ್ಲ ಅಂತ ಹೇಳಿದ್ರು ಅಲ್ಲಿ ವೇಕನ್ಸಿ ಇತ್ತು. ನಮಗೆ ನುರಿತ ಡ್ರೈವರ್ ಬೇಕಿತ್ತು ಆದ್ರೆ ಇಂಥ ಚಂಗ್ಲಾಟದವು ನಮಗೆ ಬೇಕಿಲ್ಲ. ಹಾಗೆಯೇ ಕಾಂಗ್ರೆಸ್ ನಲ್ಲಿ ಮಿಠಾಯಿ-ಗಿಠಾಯಿ ತಿಂದುಕೊಂಡಿರಲಿ ಅಂತ ಅಲ್ಲಿಗೆ ಕಳಿಸಿದ್ದೇವೆ ಎಂದು ಏಳು ಮಂದಿ ಜಡಿಎಸ್ ಶಾಸಕರಿಗೆ ಟಾಂಗ್ ನೀಡಿದ್ರು.

    ತಾಕತ್ತು ಹಾಗೂ ಮಾನಮರ್ಯಾದೆ ಇದ್ದರೆ ಆ ಶಾಸಕರು ನಾಳೆಯೇ ರಾಜೀನಾಮೆ ಕೊಟ್ಟು ಜನರ ಮುಂದೆ ಬರಲಿ. ಡಿಸೆಂಬರ್ ವರೆಗೂ ಏಕೆ ಕಾಯ್ತಾರೆ ಎಂದು ಹೆಚ್ ಡಿ ರೇವಣ್ಣ ಬಂಡಾಯ ಶಾಸಕರಿಗೆ ಸವಾಲ್ ಹಾಕಿದರು.

    ಇದನ್ನೂ ಓದಿ: ಚಾಮರಾಜಪೇಟೆಯಲ್ಲಿ ಜೆಡಿಎಸ್ ಗೆದ್ದರೆ ನನ್ನ ರುಂಡ ಕತ್ತರಿಸಿಡುತ್ತೇನೆ: ಜಮೀರ್ ಅಹ್ಮದ್

    ಶಾಸಕ ಜಮೀರ್ ಅಹಮದ್ ಹೇಳಿಕೆಗೆ ಪ್ರತಿಕ್ರಿಯಿಸಿದ ರೇವಣ್ಣ, ಜಮೀರ್ ರುಂಡ ತಗೋಂಡು ನಾವೇನು ಮಾಡೋಣ ಎಂದು ಪ್ರಶ್ನಿಸಿದರು. ಕುರಿ ರುಂಡವನ್ನು ಕಡಿಯದಂತೆ ಕಾಗೋಡು ತಿಮ್ಮಪ್ಪ ಕಾಯ್ದೆ ತರ್ತಾರಂತೆ. ನಮಗೆ ಅವರ ರುಂಡ ಬೇಡ ಎಂದು ವ್ಯಂಗ್ಯವಾಡಿದ್ರು. ಮಾನಮಾರ್ಯಾದೆ ಇದ್ರೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಅಂತ ಜಮೀರ್ ಹಮದ್‍ಗೆ ನೇರವಾಗಿ ಸವಾಲ್ ಹಾಕಿದ್ರು.

  • ಕ್ರೀಡಾಂಗಣದಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

    ಕ್ರೀಡಾಂಗಣದಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

    ಹಾಸನ: ವ್ಯಕ್ತಿವೊಬ್ಬ ಜಿಲ್ಲಾ ಕ್ರೀಡಾಂಗಣದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.

    ಮೃತಪಟ್ಟ ವ್ಯಕ್ತಿ ರೂಪ್ ಕುಮಾರ್ (45) ಎಂದು ಗುರುತಿಸಲಾಗಿದೆ. ಈತ ನಗರದ ಕುಂಬಾರ ಬೀದಿ ನಿವಾಸಿಯಾಗಿದ್ದು, ಆತ್ಮಹತ್ಯೆಗೆ ಖಚಿತ ಕಾರಣ ತಿಳಿದು ಬಂದಿಲ್ಲ. ಇಂದು ಬೆಳಗ್ಗೆ ಕ್ರೀಡಾಂಗಣಕ್ಕೆ ವಾಯು ವಿಹಾರಕ್ಕಾಗಿ ಬಂದ ಸಾರ್ವಜನಿಕರು ನೋಡಿದಾಗ ವಿಷಯ ಬೆಳಕಿಗೆ ಬಂದಿದೆ.

    ಸ್ಥಳಕ್ಕೆ ಕೆ.ಆರ್.ಪುರಂ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಪರಿಶೀಲನೆ ನಡೆಸಿದ್ದಾರೆ.