Tag: Hasanamba Jatra Mahotsav

  • ಎರಡೇ ದಿನದಲ್ಲಿ ಹಾಸನಾಂಬ ದೇವಾಲಯಕ್ಕೆ ಕೋಟಿ ಕೋಟಿ ಆದಾಯ

    ಎರಡೇ ದಿನದಲ್ಲಿ ಹಾಸನಾಂಬ ದೇವಾಲಯಕ್ಕೆ ಕೋಟಿ ಕೋಟಿ ಆದಾಯ

    ಹಾಸನ: ಹಾಸನಾಂಬ ಹಾಗೂ ಶ್ರೀ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಆರಂಭಗೊಂಡಿದ್ದು, ಶುರುವಾರ ಎರಡೇ ದಿನದಲ್ಲಿ ದೇವಾಲಯಕ್ಕೆ ಕೋಟಿ ಕೋಟಿ ಆದಾಯ ಹರಿದುಬಂದಿದೆ.

    ಗುರುವಾರ ಹಾಸನಾಂಬ ಹಾಗೂ ಶ್ರೀ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಆರಂಭಗೊಂಡಿದೆ. ಶುಕ್ರವಾರದಿಂದ ಸಾರ್ವಜನಿಕ ದರ್ಶನ ಪ್ರಾರಂಭವಾಗಿದೆ. ಕೇವಲ ಎರಡು ದಿನಗಳಲ್ಲಿ 2.25 ಕೋಟಿ ರೂ. ಆದಾಯ ಹರಿದು ಬಂದಿದೆ. ಭಾನುವಾರ ಬೆಳಗ್ಗೆ 8 ಗಂಟೆಯ ವರೆಗೆ 300 ರೂ. ವಿಶೇಷ ದರ್ಶನದಲ್ಲಿ ಒಟ್ಟು 27,759 ಟಿಕೆಟ್‌ಗಳು ಮಾರಾಟವಾಗಿವೆ. ಇದನ್ನೂ ಓದಿ: ಹಾಸನಾಂಬೆ ದರ್ಶನದ ವೇಳೆ ಕರ್ತವ್ಯ ಲೋಪ – ನಾಲ್ವರು ಕಂದಾಯ ಇಲಾಖೆ ಸಿಬ್ಬಂದಿ ಅಮಾನತು

    ಅದರಲ್ಲಿ ಆನ್‌ಲೈನ್‌ನಲ್ಲಿ 4,499 ಹಾಗೂ ನೇರ ಖರೀದಿಯಲ್ಲಿ 23,260 ಟಿಕೆಟ್‌ಗಳು ಮಾರಾಟವಾಗಿವೆ. ಅದೇ ರೀತಿ 1000 ರೂ. ವಿಶೇಷ ದರ್ಶನದಲ್ಲಿ ಒಟ್ಟು 12,396 ಮಾರಾಟವಾಗಿವೆ. ಇದರಲ್ಲಿ ಆನ್‌ಲೈನ್ ಬುಕಿಂಗ್‌ಗಳು 3,912 ಹಾಗೂ ನೇರ ಖರೀದಿಗಳು 8,484 ಆಗಿವೆ. ಇದೇ ವೇಳೆ, ಲಾಡು ಪ್ರಸಾದ ಮಾರಾಟದ ಸಂಖ್ಯೆ 17,337 ಆಗಿದ್ದು, ಮೂರು ದಿನಗಳಲ್ಲಿ ಭಾರಿ ಆದಾಯ ಲಭಿಸಿದೆ.

    300 ರೂ. ವಿಶೇಷ ದರ್ಶನ ಟಿಕೆಟ್‌ಗಳಿಂದ ಒಟ್ಟು 83,27,700 ರೂ. ಹಾಗೂ 1000 ರೂ. ವಿಶೇಷ ದರ್ಶನ ಟಿಕೆಟ್‌ಗಳಿಂದ 1,23,96,000 ರೂ. ಹಾಗೂ ಲಾಡು ಪ್ರಸಾದ ಮಾರಾಟದಿಂದ 17,33,700 ರೂ. ಸೇರಿ ಒಟ್ಟು 2 ಕೋಟಿ 24 ಲಕ್ಷ 57 ಸಾವಿರ 400 ರೂ. ಸಂಗ್ರಹವಾಗಿದೆ. ಇದನ್ನೂ ಓದಿ: ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ – ಒಂದೇ ದಿನಕ್ಕೆ 1 ಕೋಟಿ ಆದಾಯ