Tag: hasanambe temple

  • ಶಕ್ತಿದೇವತೆ ಹಾಸನಾಂಬೆ ಜಾತ್ರೆಗೆ ವಿಧ್ಯುಕ್ತ ತೆರೆ – ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲು ಬಂದ್

    ಶಕ್ತಿದೇವತೆ ಹಾಸನಾಂಬೆ ಜಾತ್ರೆಗೆ ವಿಧ್ಯುಕ್ತ ತೆರೆ – ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲು ಬಂದ್

    – 2026ರ ಅ.29ರಿಂದ ನ.11ರವರೆಗೆ ದರ್ಶನ ನೀಡಲಿರುವ ಹಾಸನಾಂಬೆ

    ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸುವ ಶಕ್ತಿದೇವತೆ, ಹಾಸನದ ಅಧಿದೇವತೆ ಹಾಸನಾಂಬೆ ದೇವಿ (Hasanamba Devi) ಗರ್ಭಗುಡಿ ಬಾಗಿಲು ಶಾಸ್ತ್ರೋಕ್ತವಾಗಿ ಬಂದ್ ಆಗಿದೆ.

    ಪ್ರಧಾನ ಅರ್ಚಕ ನಾಗರಾಜ್ ನೇತೃತ್ವದಲ್ಲಿ ಅಂತಿಮ ಪೂಜೆ ನಡೆದಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಅವರ ಸಮ್ಮುಖದಲ್ಲಿ ಗರ್ಭಗುಡಿಗೆ ಅರ್ಚಕರು ಬೀಗ ಹಾಕಿದರು. ಈ ಮೂಲಕ 15 ದಿನಗಳ ಕಾಲ ನಡೆದ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ತೆರೆ ಬಿದ್ದಿದೆ.ಇದನ್ನೂ ಓದಿ:ಶಾಸ್ತ್ರೋಕ್ತವಾಗಿ ಮುಚ್ಚಿದ ಕೇದಾರನಾಥ ಧಾಮದ ಬಾಗಿಲು

    ಅ.9ರಿಂದ ಆರಂಭವಾಗಿ ಅ.23ರವರೆಗೆ ದರ್ಶನ ಭಾಗ್ಯ ಕರುಣಿಸಿದ ಹಾಸನಾಂಬೆ ಮತ್ತೆ ಒಂದು ವರ್ಷಗಳ ಕಾಲ ಮರೆಗೆ ಸರಿದಳು. ಇಂದು ಮಧ್ಯಾಹ್ನ 1:06ಕ್ಕೆ ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲನ್ನು ಮುಚ್ಚಲಾಯಿತು. ಈ ವೇಳೆ ಪಂಜಿನ ಪೂಜೆ, ಮಂಗಳವಾದ್ಯ ಮೊಳಗಿತು.

    ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯ ಸರ್ಕಾರದ ಸಚಿವರು, ಶಾಸಕರು, ನಟ, ನಟಿಯರು ವಿವಿಧ ಕ್ಷೇತ್ರದ ಗಣ್ಯರು ದೇವಿಯ ದರ್ಶನ ಪಡೆದು ಪುನೀತರಾಗಿದ್ದಾರೆ. ಈ ಬಾರಿಯ 13 ದಿನಗಳ ಸಾರ್ವಜನಿಕ ದರ್ಶನದಲ್ಲಿ ವಿವಿಐಪಿ ಪಾಸ್‌ಗಳ ರದ್ದು ಮಾಡಿ ಗೋಲ್ಡ್ ಪಾಸ್, ಪ್ರೋಟೋಕಾಲ್‌ಗೆ ಸಮಯ ನಿಗದಿ ಮಾಡಿದ್ದರಿಂದ ಸಾರ್ವಜನಿಕರಿಗೆ ಸುಗಮವಾಗಿ ಹಾಸನಾಂಬ ದೇವಿಯ ದರ್ಶನ ಆಗಿದೆ. ನಿರೀಕ್ಷೆಗೂ ಮೀರಿದ ಸಂಖ್ಯೆಯಲ್ಲಿ ಭಕ್ತರು ಬಂದಿದ್ದರಿಂದ ದರ್ಶನ ಸಮಯ ವಿಳಂಬ ಬಿಟ್ಟರೆ ಉಳಿದಂತೆ ಜಾತ್ರಾ ಮಹೋತ್ಸವ ಯಶಸ್ವಿಯಾಗಿ ನಡೆದಿದೆ.

    ಕಳೆದ ಬಾರಿ ಜಾತ್ರೆ ವೇಳೆ ಅವ್ಯವಸ್ಥೆ ಆಗಿತ್ತು. ಇದನ್ನು ಸರಿಪಡಿಸಿ ಶಾಂತಿಯುತವಾಗಿ ದರ್ಶನ ಆಗಲು ಜಿಲ್ಲಾಡಳಿತ, ಸಚಿವರ ಜಾಣ್ಮೆ ಕಾರ್ಯವೈಖರಿಯಿಂದ ಎಲ್ಲವನ್ನೂ ಕಾಲಕಾಲಕ್ಕೆ ಸರಿಪಡಿಸಿ ಯಶಸ್ವಿಯಾದ ಜಾತ್ರೆ ನಡೆಸಿದ್ದಾರೆ. ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಪೌರಕಾರ್ಮಿಕರು, ವಿದ್ಯುತ್ ಇಲಾಖೆ, ಅಗ್ನಿಶಾಮಕದಳ, ಡಿಎಫ್‌ಓ ಸೇರಿ ಎಲ್ಲಾ ಇಲಾಖೆಯವರು ಪ್ರಮಾಣಿಕವಾಗಿ ಕೆಲಸ ಮಾಡಿದ್ದಾರೆ. ಹಗಲು ರಾತ್ರಿ ದುಡಿದಿದ್ದಾರೆ.ಇದನ್ನೂ ಓದಿ: ಖಾದ್ಯ ತೈಲ ಘಟಕ ನೋಂದಣಿ ಕಡ್ಡಾಯ: ಸಚಿವ ಪ್ರಹ್ಲಾದ್‌ ಜೋಶಿ

    ಈ ಬಾರಿಯ ಉತ್ಸವದ ವೇಳೆ ಒಂದು ವಾರಗಳ ಕಾಲ ಪ್ರತಿನಿತ್ಯ ಸುರಿಯುತ್ತಿದ್ದ ಮಳೆಯನ್ನೂ ಲೆಕ್ಕಿಸದೆ ದೇವಿ ದರ್ಶನ ಪಡೆದಿದ್ದಾರೆ. ಬುಧವಾರ ಸಂಜೆಯವರೆಗೂ 26.13 ಲಕ್ಷಕ್ಕೂ ಹೆಚ್ಚು ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ. ಶೀಘ್ರ ದರ್ಶನದ ಟಿಕೆಟ್ ಮಾರಾಟದಿಂದ 21.82 ಕೋಟಿ ರೂ. ಹಣ ಸಂಗ್ರಹವಾಗಿದೆ. ಉಳಿದಂತೆ ಹುಂಡಿ ಎಣಿಕೆ ಕಾರ್ಯ ಬಾಕಿಯಿದ್ದು, 25 ಕೋಟಿ ತಲುಪಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಕೃಷ್ಣ ಬೈರೇಗೌಡ ಹೇಳಿದ್ದಾರೆ.

    ಮುಂದಿನ ವರ್ಷದ ಹಾಸನಾಂಬೆ ಉತ್ಸವಕ್ಕೆ ದಿನಾಂಕ ನಿಗದಿ:
    ಈ ಬಾರಿಯ ಹಾಸನಾಂಬೆ ದರ್ಶನೋತ್ಸವ ಇತಿಹಾಸ ನಿರ್ಮಸಿ, ದಾಖಲೆ ಬರೆಯುವ ಜೊತೆಗೆ ಅತ್ಯಂತ ಯಶಸ್ವಿ ಮತ್ತು ಅಚ್ಚುಕಟ್ಟಾಗಿ ನಡೆಯಿತು. ಮುಂದಿನ ವರ್ಷದ ಹಾಸನಾಂಬೆ ಉತ್ಸವ ದಿನಾಂಕವನ್ನು ಪಂಚಾಂಗದ ಪ್ರಕಾರ, ನಿಗದಿ ಮಾಡಲಾಗಿದೆ. 2026ರ ಅಕ್ಟೋಬರ್ 29ರಿಂದ ನವೆಂಬರ್ 11ರವರೆಗೆ ನಡೆಯಲಿದೆ. ಒಟ್ಟು 14 ದಿನ ಗರ್ಭಗುಡಿ ತೆರೆದಿರಲಿದ್ದು, ಈ ಪೈಕಿ 12 ದಿನ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಒಟ್ಟಿನಲ್ಲಿ ಹಾಸನಾಂಬೆಯ ಈ ಬಾರಿಯ ಉತ್ಸವಕ್ಕೆ ವಿದ್ಯುಕ್ತ ತೆರೆ ಬಿದ್ದಿದೆ. 13 ದಿನಗಳ ಕಾಲ ಜನ ಜಂಗುಳಿಯಿಂದ ತುಂಬಿ ತುಳುಕುತ್ತಿದ್ದ ಹಾಸನಾಂಬೆ ದೇಗುಲ ಆವರಣ ಈಗ ಭಣಗುಡುತ್ತಿದೆ.ಇದನ್ನೂ ಓದಿ: ಚಿತ್ತಾಪುರ RSS ಪಥ ಸಂಚಲನ – ಸರ್ಕಾರದ ಆದೇಶದಂತೆ ಜಿಲ್ಲಾಡಳಿತ ತೀರ್ಮಾನ: ಪರಮೇಶ್ವರ್

  • ಹಾಸನಾಂಬೆ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

    ಹಾಸನಾಂಬೆ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

    ಹಾಸನ: ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಂದು ಹಾಸನದ (Hassan) ಅಧಿದೇವತೆ ಹಾಸನಾಂಬೆ ದೇವಿ ದರ್ಶನ ಪಡೆದರು.

    ಮಂಗಳವಾರ (ಅ.14) ಡಿಸಿಎಂ ಡಿಕೆ ಶಿವಕುಮಾರ್ ದರ್ಶನ ಪಡೆದ ಬೆನ್ನಲ್ಲೇ ಬುಧವಾರ (ಅ.15) ಬೆಳಗ್ಗೆ 12ರ ಸುಮಾರಿಗೆ ಸಿಎಂ ಸಿದ್ದರಾಮಯ್ಯ ಹಾಸನಾಂಬೆ ದೇವಿ ದರ್ಶನ ಪಡೆದರು.ಇದನ್ನೂ ಓದಿ: ಡಿಕೆಶಿಗೆ ಹಾಸನಾಂಬೆ ಮಹಾಪ್ರಸಾದ – ಪೂಜೆ ವೇಳೆ ಬಲಗಡೆ ಹೂವು ವರ ನೀಡಿದ ದೇವಿ

    ಜಿಲ್ಲಾಡಳಿತ ವ್ಯವಸ್ಥೆ ಮಾಡಿದ ಶಿಷ್ಟಾಚಾರದ ವಾಹನದಲ್ಲೇ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಸ್ವಾಗತಿಸಿದರು. ಸಿಎಂ ಬರುತ್ತಿದ್ದಂತೆ ಜಾನಪದ ಕಲಾತಂಡಗಳು ಜಗ್ಗಲಿಗೆ ಬಾರಿಸಿ, ಕೊಂಬು ಕಂಸಾಳೆ ಊದಿ ಸ್ವಾಗತ ಮಾಡಿಕೊಂಡರು. ಸಿದ್ದರಾಮಯ್ಯ ಅವರ ಜೊತೆ ಸಾರಿಗೆ ಹಾಗೂ ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ಆಗಮಿಸಿದ್ದರು. ಬಳಿಕ ಜಿಲ್ಲಾಡಳಿತ ಸಿಎಂ ಅವರನ್ನು ಮಂಗಳವಾದ್ಯಗಳೊಂದಿಗೆ ದೇವಿ ದರ್ಶನಕ್ಕೆ ಕರೆದೊಯ್ಯಿತು.

    ಕಳೆದ ಎರಡು ವರ್ಷಗಳಿಂದ ಸಿಎಂ ಸಿದ್ದರಾಮಯ್ಯ ದೇವಿ ದರ್ಶನ ಪಡೆಯುತ್ತಿದ್ದು, ಈ ಮೂಲಕ ಮೂರನೇ ಬಾರೀ ದೇವಿ ದರ್ಶನ ಪಡೆದುಕೊಂಡಿದ್ದಾರೆ. ದೇವಿ ದರ್ಶನ ಪಡೆದು ದರ್ಬಾರ್ ಗಣಪತಿ ಹಾಗೂ ಸಿದ್ದೇಶ್ವರಸ್ವಾಮಿ ದೇವರ ದರ್ಶನ ಪಡೆದರು.

    ಇದೇ ವೇಳೆ ಶಾಸಕ ಹಾಗೂ ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ, ಸಂಸದ ಶ್ರೇಯಸ್ ಪಟೇಲ್, ಡಿಸಿ ಕೆ.ಎಸ್.ಲತಾಕುಮಾರಿ, ದಕ್ಷಿಣ ವಯಲ ಐಜಿಪಿ, ಬೋರಲಿಂಗಯ್ಯ ಎಸ್ಪಿ ಮಹಮದ್ ಸುಜೀತಾ ಉಪಸ್ಥಿತರಿದ್ದರು. ಸಿಎಂ ಆಗಮನದ ಹಿನ್ನೆಲೆ ದೇವಾಲಯದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿತ್ತು.ಇದನ್ನೂ ಓದಿ: ಹಂಪಿಗೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್‌ – ದೇಶದ ಹೆಸರಲ್ಲಿ ಪೂಜೆ

  • ಅ.9 ರಿಂದ 23ರವರೆಗೆ ಹಾಸನಾಂಬೆ ಜಾತ್ರೆ – ಈ ಬಾರಿ ವಿಐಪಿ, ವಿವಿಐಪಿ ಪಾಸ್ ಇರಲ್ಲ

    ಅ.9 ರಿಂದ 23ರವರೆಗೆ ಹಾಸನಾಂಬೆ ಜಾತ್ರೆ – ಈ ಬಾರಿ ವಿಐಪಿ, ವಿವಿಐಪಿ ಪಾಸ್ ಇರಲ್ಲ

    – ಹೊಸದಾಗಿ ಗೋಲ್ಡ್ ಪಾಸ್ ವಿತರಣೆ
    – ಕೊನೆಯ ಐದು ದಿನ ಎಲ್ಲಾ ಶಿಷ್ಟಾಚಾರ ರದ್ದು

    ಹಾಸನ: ಈ ಬಾರಿಯ ಹಾಸನಾಂಬೆ ಜಾತ್ರೆ (Hasanambe Jatra) ಅ.9 ರಿಂದ 23ರವರೆಗೆ ನಡೆಯಲಿದೆ. ಜಾತ್ರಾ ಮಹೋತ್ಸವದ ಹಿನ್ನೆಲೆ ಮಂಗಳವಾರ (ಆ.26) ಹಾಸನ ಜಿ.ಪಂ ಹೊಯ್ಸಳ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯಿತು. ಈ ವೇಳೆ ದರ್ಶನದ ಪಾಸ್ ಸೇರಿದಂತೆ ಹಲವು ನಿಯಮಗಳಲ್ಲಿ ಬದಲಾವಣೆ ತರಲಾಗಿದೆ.

    ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ (Krishna Byregowda) ಅವರ ನೇತೃತ್ವದಲ್ಲಿ ಶ್ರೀ ಹಾಸನಾಂಬೆ ದೇವಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ನಡೆದಿದ್ದು, ಶಾಸಕರುಗಳಾದ ಕೆ.ಎಂ.ಶಿವಲಿಂಗೇಗೌಡ, ಎಚ್.ಪಿ.ಸ್ವರೂಪ್ ಪ್ರಕಾಶ್, ಸಿಮೆಂಟ್ ಮಂಜು, ಡಿಸಿ ಕೆ.ಎಸ್.ಲತಾಕುಮಾರಿ, ಎಸ್ಪಿ ಮಹಮದ್ ಸುಜೇತಾ, ಮೇಯರ್ ಹೇಮಲತಾ ಹಾಗೂ ಇತರೆ ಅಧಿಕಾರಿಗಳು ಭಾಗಿಯಾಗಿದ್ದರು.ಇದನ್ನೂ ಓದಿ: ಆಪ್ ನಾಯಕ ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ

    2025ರ ಹಾಸನಾಂಬೆ ಜಾತ್ರಾ ಮಹೋತ್ಸವ ಅ.9 ರಿಂದ ಅ.23ರವರೆಗೆ ನಡೆಯಲಿದ್ದು, ಅ.9ರಂದು ಹಾಸನಾಂಬ ದೇವಿ ಗರ್ಭಗುಡಿ ಬಾಗಿಲು ತೆರೆಯಲಿದೆ. ಬಳಿಕ ಅ.23ರಂದು ಗರ್ಭಗುಡಿ ಬಾಗಿಲು ಮುಚ್ಚಲಿದೆ. ಅ.10ರಿಂದ ಅ.22ರವರೆಗೆ ಮಾತ್ರ ದೇವಿ ದರ್ಶನಕ್ಕೆ ಅವಕಾಶವಿರುತ್ತದೆ. ಈ ಬಾರಿ ವಿಐಪಿ, ವಿವಿಐಪಿ ಪಾಸ್‌ಗಳು ಸಂಪೂರ್ಣ ರದ್ದುಗೊಳಿಸಿ, ಹೊಸದಾಗಿ ಗೋಲ್ಡ್ ಪಾಸ್ ವಿತರಣೆ ಮಾಡಲಾಗುವುದು. ಈ ಗೋಲ್ಡ್ ಪಾಸ್ ಪಡೆದರೆ ಮುಂಜಾನೆ 5 ರಿಂದ 11 ಗಂಟೆಯವರೆಗೆ ದರ್ಶನ ಪಡೆಯಬಹುದಾಗಿದೆ. ಒಂದು ಗೋಲ್ಡ್ ಪಾಸ್‌ಗೆ ಒಬ್ಬರಿಗೆ ಮಾತ್ರ ಅವಕಾಶವಿರುತ್ತದೆ ಎಂದು ಉಪವಿಭಾಗಾಧಿಕಾರಿ ಹಾಗೂ ದೇವಾಲಯದ ಆಡಳಿತಾಧಿಕಾರಿ ಮಾರುತಿ ಅವರು ಹೇಳಿದ್ದಾರೆ.

    ಇನ್ನೂ ಕೊನೆಯ ಐದು ದಿನ ಎಲ್ಲಾ ಶಿಷ್ಟಾಚಾರ ರದ್ದುಗೊಳಿಸಲಾಗುವುದು, ಸಿಎಂ, ಡಿಸಿಎಂ, ಸಿಜೆ ಮಾತ್ರ ಶಿಷ್ಟಾಚಾರದ ವಾಹನ ಬಳಸಬಹುದು. ಉಳಿದವರು ಪ್ರವಾಸಿ ಮಂದಿರದಲ್ಲಿ ವಾಹನ ನಿಲ್ಲಿಸಿ, ಜಿಲ್ಲಾಡಳಿತ ಆಯೋಜಿಸಿರುವ ವಾಹನದಲ್ಲಿ ಬಂದು ದೇವಿ ದರ್ಶನ ಪಡೆಯಲು ಅವಕಾಶವಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ.

    ಈ ವೇಳೆ ಸಚಿವ ಕೃಷ್ಣಭೈರೇಗೌಡ ಮಾತನಾಡಿ, ರಾಜ್ಯದ ಎಲ್ಲೆಲ್ಲಿಂದಲೊ ಜನರು ಹಾಸನಾಂಬೆ ದರ್ಶನಕ್ಕೆ ಬರುತ್ತಾರೆ. ಆದರೆ ವಿವಿಐಪಿ, ವಿಐಪಿ ಭಕ್ತರ ಕಾರಣದಿಂದ ಜನರಿಗೆ ದರ್ಶನಕ್ಕೆ ಸಮಸ್ಯೆ ಆಗುತ್ತದೆ. ಹಾಗಾಗಿ ಅವರನ್ನು ಗಂಟೆಗಟ್ಟಲೆ ನಿಲ್ಲಿಸಿ ಜನರಿಗೆ ತೊಂದರೆ ಕೊಡೋದು ಸರಿಯಲ್ಲ. ಹಾಗಾಗಿ ಈ ಗಣ್ಯ ಸಂಸ್ಕೃತಿ ತಡೆಯಲು ಸಹಕರಿಸಿ ಎಂದು ಮನವಿ ಮಾಡಿಕೊಳ್ಳುತ್ತೇನೆ. ನಾನು ಈ ವಿಐಪಿ ಹಾಗೂ ಶಿಷ್ಟಾಚಾರ ಭಕ್ತರಿಗೆ ಸಮಯ ನಿಗದಿ ಮಾಡಿ ಎಂದು ಹೇಳಿದ್ದೇನೆ. ಗೋಲ್ಡ್ ಕಾರ್ಡ್ಗೆ ಎರಡು ಗಂಟೆ, ಶಿಷ್ಟಾಚಾರಕ್ಕೆ ಎರಡು ಗಂಟೆ ಮಾತ್ರ ಸಮಯ ನಿಗದಿ ಮಾಡಿ ಎಂದು ಸಲಹೆ ನೀಡಿದ್ದೇನೆ. ಇದೆಲ್ಲ ಮಾಡಿದರೆ ಜನರಿಗೆ ಅನುಕೂಲ ಆಗುತ್ತದೆ ಎನ್ನುವುದಾದರೆ ಈ ಎಲ್ಲಾ ರೀತಿಯ ಬದಲಾವಣೆ ಮಾಡೋಣ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಭಾರತೀಯ ನೌಕಾಪಡೆಗೆ ಬಲ; 2 ನೀಲಗಿರಿ ವರ್ಗದ ಯುದ್ಧನೌಕೆಗಳ ನಿಯೋಜನೆ

  • ಹಾಸನಾಂಬೆ ದರ್ಶನ ಪಡೆದ 19 ಲಕ್ಷ ಜನ, ಇದು ಸರ್ಕಾರದ ‘ಶಕ್ತಿ ಯೋಜನೆ’ಯ ಸಾಧನೆ: ಡಿ.ಕೆ.ಶಿವಕುಮಾರ್

    ಹಾಸನಾಂಬೆ ದರ್ಶನ ಪಡೆದ 19 ಲಕ್ಷ ಜನ, ಇದು ಸರ್ಕಾರದ ‘ಶಕ್ತಿ ಯೋಜನೆ’ಯ ಸಾಧನೆ: ಡಿ.ಕೆ.ಶಿವಕುಮಾರ್

    – ಪ್ರಸಾದ, ವಿಶೇಷ ದರ್ಶನದ ಟಿಕೆಟ್‌ನಿಂದ 9 ಕೋಟಿ ರೂ. ಸಂಗ್ರಹ

    ಬೆಂಗಳೂರು: ಶಕ್ತಿ ದೇವತೆ ಹಾಸನಾಂಬೆ ಜಾತ್ರೆ ಈ ಬಾರಿ ಅಭೂತಪೂರ್ವ ದಾಖಲೆಯನ್ನು ಬರೆದಿದೆ. 9 ದಿನಗಳ ಉತ್ಸವದಲ್ಲಿ 19 ಲಕ್ಷ ಭಕ್ತಾದಿಗಳು ದರ್ಶನ ಪಡೆದಿದ್ದಾರೆ. 9 ಕೋಟಿ ರೂಪಾಯಿ ಲಾಡು ಪ್ರಸಾದ ಮತ್ತು ಟಿಕೆಟ್‌ನಿಂದ ಸಂಗ್ರಹವಾಗಿದೆ. ಇಷ್ಟೊಂದು ಪ್ರಮಾಣದಲ್ಲಿ ಭಕ್ತರು ಹರಿದುಬಂದಿರುವುದು ‘ಶಕ್ತಿ ಯೋಜನೆ’ಯ ಪರಿಣಾಮ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

    ಪತ್ರಿಕಾ ಹೇಳಿಕೆ ನೀಡಿರುವ ಅವರು, 24 ಗಂಟೆ ದೇವಿಯ ದರ್ಶನದ ವ್ಯವಸ್ಥೆ ಅದ್ಬುತವಾಗಿತ್ತು. ಬೀದರ್‌ನಿಂದ ಚಾಮರಾಜನಗರದ ವರೆಗೆ ಬಳ್ಳಾರಿಯಿಂದ ಕೋಲಾರದ ವರೆಗೆ ಮಾತ್ರವಲ್ಲ ವಿವಿಧ ರಾಜ್ಯಗಳ ಭಕ್ತರು, ಬೇರೆ ದೇಶಗಳ ಭಕ್ತರೂ ಆನ್‌ಲೈನ್‌ನಲ್ಲಿ ಟಿಕೆಟ್ ಬುಕ್ ಮಾಡಿಕೊಂಡು ಬಂದಿದ್ದರು. ಉಚಿತ ಬಸ್ ಪ್ರಯಾಣ ಇರುವುದರಿಂದ ಇಷ್ಟು ಭಕ್ತರು ಬರಲು ಸಾಧ್ಯವಾಗಿದೆ. ಇದನ್ನು ನೋಡಿ ಸರ್ಕಾರಕ್ಕೆ ಹೆಮ್ಮೆಯಾಗುತ್ತಿದೆ. ಸಾರ್ಥಕ ಭಾವ ಮೂಡುತ್ತಿದೆ ಎಂದು ತಿಳಿಸಿದರು.

    ಶಕ್ತಿ ಯೋಜನೆ ಮಹಿಳೆಯರ ಶಕ್ತಿ ವೃದ್ಧಿ ಮಾಡಿರುವುದರ ಜತೆಗೆ ನಮ್ಮ ಧಾರ್ಮಿಕ ಶಕ್ತಿಯನ್ನೂ ಹೆಚ್ಚಿಸಿದೆ ಎಂಬುದು ಸಾಕ್ಷಿ. ಜೊತೆಗೆ ಹಾಸನಾಂಬೆ ದರ್ಶನಕ್ಕೆ ಜಿಲ್ಲಾಡಳಿತ ಅಷ್ಟು ಸಮರ್ಪಕ ವ್ಯವಸ್ಥೆ ಮಾಡಿದೆ. 9 ದಿನಗಳಲ್ಲಿ 19 ರಿಂದ 20 ಲಕ್ಷ ಜನ ದೇವಿಯ ದರ್ಶನ ಪಡೆದಿದ್ದಾರೆ ಎಂಬುದು ಸಣ್ಣ ವಿಚಾರವಲ್ಲ ಎಂದರು.

    ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿ, ಬಹುತೇಕ ಉತ್ಸವ ಯಶಸ್ವಿಯಾಗಿದೆ‌. ಅದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಡಳಿತ ಹಾಗೂ ಶ್ರಮಿಸಿದ ಪೌರ ಕಾರ್ಮಿಕರು,‌ ಪೊಲೀಸರು, ಕಂದಾಯ ಅಧಿಕಾರಿಗಳು ಹಾಗೂ ಇತರ ಇಲಾಖೆ ಸಿಬ್ಬಂದಿ, ಸ್ವಯಂ ಸೇವಕರು, ಹಾಸನದ ನಾಗರಿಕರು, ಎಲ್ಲ ಭಕ್ತರಿಗೂ ಕೃತಜ್ಞರಾಗಿದ್ದೇವೆ ಎಂದು ತಿಳಿಸಿದರು.

    ಇಷ್ಟು ದೊಡ್ಡ ಸಂಖ್ಯೆಯ ಭಕ್ತರ ಭೇಟಿ ಐತಿಹಾಸಿಕ ದಾಖಲೆ. ಎಲ್ಲರಿಗೂ ನಾವು ವೈಯಕ್ತಿಕವಾಗಿ, ಸರ್ಕಾರದ ಪರವಾಗಿ ಅಭಿನಂದನೆ ಸಲ್ಲಿಸುತ್ತೇವೆ. ಮುಂದಿನ ದಿನಗಳಲ್ಲಿ ಸಣ್ಣಪುಟ್ಟ ಅಹಿತಕರ ಘಟನೆಗಳೂ ನಡೆಯದಂತೆ ಸರ್ಕಾರ ಸೂಕ್ತ ಮುನ್ನೆಚ್ಚರಿಕ ಕೈಗೊಳ್ಳಲಿದ್ದೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

  • ಧರ್ಮಸ್ಥಳ, ಹಾಸನಾಂಬೆ ದರ್ಶನ ಮುಗಿಸಿ ವಾಪಸಾಗುತ್ತಿದ್ದಾಗ ಭೀಕರ ಅಪಘಾತ – ಮಕ್ಕಳು ಸೇರಿ 9 ಮಂದಿ ದುರ್ಮರಣ

    ಧರ್ಮಸ್ಥಳ, ಹಾಸನಾಂಬೆ ದರ್ಶನ ಮುಗಿಸಿ ವಾಪಸಾಗುತ್ತಿದ್ದಾಗ ಭೀಕರ ಅಪಘಾತ – ಮಕ್ಕಳು ಸೇರಿ 9 ಮಂದಿ ದುರ್ಮರಣ

    ಹಾಸನ: ಟೆಂಪೋ ಟ್ರಾವೆಲರ್, ಹಾಲಿನ ಲಾರಿ ಹಾಗೂ ಸಾರಿಗೆ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂಭತ್ತು ಮಂದಿ ಸಾವನ್ನಪ್ಪಿದ್ದು, ಹನ್ನೆರಡು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಗಾಂಧಿನಗರದಲ್ಲಿ ನಡೆದಿದೆ.‌

    ಹಳ್ಳಿಕೆರೆ ಗ್ರಾಮದ ಹದಿನಾಲ್ಕು ಮಂದಿ ಟಿಟಿ ವಾಹನದಲ್ಲಿ ಧರ್ಮಸ್ಥಳಕ್ಕೆ ತೆರಳಿ, ಅಲ್ಲಿಂದ ಹಾಸನಕ್ಕೆ ಆಗಮಿಸಿ ಹಾಸನಾಂಬೆ ದೇವಿ ದರ್ಶನ ಪಡೆದು ಗ್ರಾಮಕ್ಕೆ ತೆರಳುತ್ತಿದ್ದರು. ಊರಿಗೆ ತಲುಪಲು ಎರಡರಿಂದ ಮೂರು ನಿಮಿಷವಿರುವಾಗಲೇ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಹಿಂದೂಗಳು ಜಾಸ್ತಿ ಇರುವ ಜಾಗದಲ್ಲಿ ಬಾಂಬ್ ಹಾಕಬೇಕು: ಆಡಿಯೋ ವೈರಲ್

    ಅರಸೀಕೆರೆ ತಾಲ್ಲೂಕಿನ, ಹಳ್ಳಿಕೆರೆ ಗ್ರಾಮದ ಹದಿನಾಲ್ಕು ಮಂದಿ ಟೆಂಪೋ ಟ್ರಾವೆಲ‌ರ್ ವಾಹನದಲ್ಲಿ ನಿನ್ನೆ ಧರ್ಮಸ್ಥಳಕ್ಕೆ ತೆರಳಿದ್ದರು. ಮಕ್ಕಳು ಸೇರಿದಂತೆ ಪುರುಷರು ಮುಡಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ಪೂಜೆ ಸಲ್ಲಿಸಿ, ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನದ ಅಧಿದೇವತೆ ಹಾಸನಾಂಬೆ ದೇವಾಲಯಕ್ಕೆ ಆಗಮಿಸಿ ದೇವಿ ದರ್ಶನ ಪಡೆದು ಎಲ್ಲರೂ ಹಳ್ಳಿಕೆರೆ ಗ್ರಾಮಕ್ಕೆ ತೆರಳುತ್ತಿದ್ದರು. ಸ್ವಗ್ರಾಮ ತಲುಪಲು ಎರಡು ಕಿಲೋಮೀಟರ್ ಇದ್ದು, ಐದು ನಿಮಿಷದಲ್ಲಿ ಮನೆ ಸೇರಿಕೊಳ್ಳತ್ತಿದ್ದರು.

    ಅರಸೀಕೆರೆ-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 206 ರ ಕಾಮಗಾರಿ ನಡೆಯುತ್ತಿದ್ದು, ಟಿಟಿ ವಾಹನದ ಹಿಂದೆ ಸಾರಿಗೆ ಬಸ್ ಬರುತ್ತಿತ್ತು. ಶಿವಮೊಗ್ಗ ಕಡೆಯಿಂದ ಅರಸೀಕೆರೆ ಕಡೆಗೆ ಬರುತ್ತಿದ್ದ ಯಮಸ್ವರೂಪಿ ಹಾಲಿನ ಲಾರಿ ಚಾಲಕನಿಗೆ ತಿರುವು ಗೊತ್ತಾಗದೆ ಎರಡು ವಾಹನಗಳು ಬರುತ್ತಿದ್ದ ಕಡೆಗೆ ಏಕಮುಖವಾಗಿ ಬಂದಿದೆ. ಈ ವೇಳೆ ವೇಗವಾಗಿದ್ದ ಟಿಟಿ ವಾಹನ ಹಾಲಿನ ಲಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಇದೇ ವಾಹನದ ಹಿಂಬದಿಯಿದ್ದ ಸಾರಿಗೆ ಬಸ್ ಪಲ್ಟಿಯಾಗಿದ್ದ ಟಿಟಿ ವಾಹನಕ್ಕೆ ಡಿಕ್ಕಿ ಹೊಡೆದಿದೆ.‌ ಇದನ್ನೂ ಓದಿ: RSS ಬಗ್ಗೆ ಹೊಟ್ಟೆ ಕಿಚ್ಚಿದ್ದವರಿಗೆ ಮದ್ದಿಲ್ಲ: ಪ್ರಮೋದ್ ಮಧ್ವರಾಜ್

    ಟಿಟಿ ವಾಹನದಲ್ಲಿದ್ದ ಲೀಲಾವತಿ (50), ಚೈತ್ರಾ (33), ಸಮರ್ಥ (10), ಡಿಂಪಿ (12), ತನ್ಮಯ್ (10), ದ್ರುವ (2), ವಂದನಾ (20), ದೊಡ್ಡಯ್ಯ (60), ಭಾರತಿ (50) ಸೇರಿ ಒಂಭತ್ತು ಮಂದಿ ಸ್ಥಳದಲ್ಲೇ ಧಾರುಣವಾಗಿ ಸಾವನ್ನಪ್ಪಿದ್ದು, 12 ಮಂದಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಹತ್ತು ಮಂದಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇಬ್ಬರು ಅರಸೀಕೆರೆ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಡಿಕ್ಕಿ ರಭಸಕ್ಕೆ ಟಿಟಿ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಕ್ರೇನ್ ಮೂಲಕ ಟಿಟಿ ವಾಹನವನ್ನು ತೆರುವುಗೊಳಿಸಲಾಯಿತು.‌

    ಒಂದೇ ಗ್ರಾಮದ ನಾಲ್ವರು ಮಕ್ಕಳು, ಮೂವರು ಮಹಿಳೆಯರು, ಓರ್ವ ಪುರುಷ ಸಾವನ್ನಪ್ಪಿದ್ದು, ಮೃತದೇಹಗಳನ್ನು ಅರಸೀಕೆರೆ ತಾಲ್ಲೂಕು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.‌ ಸ್ಥಳಕ್ಕೆ ಅರಸೀಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಲಾರಿ ಚಾಲಕ ಪರಾರಿಯಾಗಿದ್ದಾನೆ.

    Live Tv
    [brid partner=56869869 player=32851 video=960834 autoplay=true]