Tag: hassa

  • ಮಕ್ಕಳನ್ನು ನೋಡಲು ಬಿಡದಿದ್ದಕ್ಕೆ ಮನೆಗೆ ಬೆಂಕಿ ಹಚ್ಚಿದ ಪಾಪಿ ಪತಿ!

    ಮಕ್ಕಳನ್ನು ನೋಡಲು ಬಿಡದಿದ್ದಕ್ಕೆ ಮನೆಗೆ ಬೆಂಕಿ ಹಚ್ಚಿದ ಪಾಪಿ ಪತಿ!

    – ಪತ್ನಿ, ಮಕ್ಕಳಿಗೆ ಗಂಭೀರ ಗಾಯ

    ಹಾಸನ: ಪಾಪಿ ಪತಿ ಮಹಾಶಯನೊಬ್ಬ ತನ್ನ ಮಕ್ಕಳನ್ನು ನೋಡಲು ಬಿಡದಿದ್ದಕ್ಕೆ ಮನೆಗೇ ಬೆಂಕಿಯಿಟ್ಟ ಘಟನೆ ಹಾಸನದಲ್ಲಿ ನಡೆದಿದೆ.

    ಹಾಸನ ತಾಲೂಕಿನ, ದೊಡ್ಡಬೀಕನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಘಟನೆಯಿಂದ ಮನೆಯೊಳಗಿದ್ದ ಪತ್ನಿ, ಇಬ್ಬರು ಗಂಡು ಮಕ್ಕಳು ಗಂಭೀರ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳಾದ ಗೀತಾ, ಚಿರಂತನ್ (7), ನಂದನ್ (5)ಗೆ ಹಾಸನದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

    ರಂಗಸ್ವಾಮಿ ಮನೆಗೆ ಬೆಂಕಿ (Fire) ಹಚ್ಚಿದ ಆರೋಪಿಯಾಗಿದ್ದು, ಜಮೀನು ವಿಚಾರಕ್ಕೆ ರಂಗಸ್ವಾಮಿ ಹಾಗೂ ಗೀತಾ ನಡುವೆ ಜಗಳವಾಗಿತ್ತು. ಈ ಸಂಬಂಧ ಗೊರೂರು ಪೊಲೀಸ್ ಠಾಣೆ (Geruru Police Station) ಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು. ಹೀಗಾಗಿ ನಾಲ್ಕು ತಿಂಗಳಿನಿಂದ ಪತಿ ಹಾಗೂ ಪತ್ನಿ, ಮಕ್ಕಳು ಪ್ರತ್ಯೇಕವಾಗಿದ್ದರು. ಇದನ್ನೂ ಓದಿ: ಪೀಸ್ ಪೀಸ್ ಪ್ರೇಮಿಯ ಮತ್ತಷ್ಟು ಕ್ರೂರತೆ ಬಹಿರಂಗ- ದೆಹಲಿ ಮಾತ್ರವಲ್ಲ ಡೆಹ್ರಾಡೂನ್‍ನಲ್ಲೂ ದೇಹದ ತುಂಡು ಎಸೆತ

    ಇತ್ತ ರಂಗಸ್ವಾಮಿ ಆಗಾಗ ಬಂದು ಮಕ್ಕಳನ್ನು (Children) ನೋಡಿಕೊಂಡು ಹೋಗುತ್ತಿದ್ದ. ಆದರೆ ನಿನ್ನೆ ಮಕ್ಕಳನ್ನು ನೋಡಲು ಬಂದಾಗ ಪತ್ನಿ ಗೀತಾ ಬಿಡಲಿಲ್ಲ. ಇದರಿಂದ ಕೋಪಗೊಂಡ ರಂಗಸ್ವಾಮಿ, ಪೆಟ್ರೋಲ್ ಬಂಕ್‍ನಿಂದ ಪೆಟ್ರೋಲ್ (Petrol) ತಂದು ಮಧ್ಯರಾತ್ರಿ ಮನೆಗೆ ಸುರಿದು ಬೆಂಕಿ ಹಚ್ಚಿದ್ದಾನೆ.

    ಮನೆಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆಯೇ ಸ್ಥಳೀಯರ ನೆರವಿನಿಂದ ಗೀತಾ ಹಾಗೂ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆಯಲ್ಲಿದ್ದ ವಸ್ತುಗಳೆಲ್ಲಾ ಸಂಪೂರ್ಣ ಬೆಂಕಿಗಾಹುತಿಯಾಗಿವೆ. ಆರೋಪಿ ರಂಗಸ್ವಾಮಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

    ಈ ಸಂಬಂಧ ಗೊರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಕಾವೇರಿ ನೀರು ಹಂಚಿಕೆ- ಸುಪ್ರೀಂ ತೀರ್ಪಿಗೆ ಅತೃಪ್ತಿ ವ್ಯಕ್ತಪಡಿಸಿದ ಮಾಜಿ ಪ್ರಧಾನಿ ಎಚ್‍ಡಿಡಿ

    ಕಾವೇರಿ ನೀರು ಹಂಚಿಕೆ- ಸುಪ್ರೀಂ ತೀರ್ಪಿಗೆ ಅತೃಪ್ತಿ ವ್ಯಕ್ತಪಡಿಸಿದ ಮಾಜಿ ಪ್ರಧಾನಿ ಎಚ್‍ಡಿಡಿ

    ಹಾಸನ: ಕಾವೇರಿ ನೀರು ಹಂಚಿಕೆ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿಗೆ ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡರು ಅತೃಪ್ತಿ ವ್ಯಕ್ತಪಡಿಸಿದ್ದಾರೆ.

    ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕು ಎ ಕಾಳೇನಹಳ್ಳಿಯಲ್ಲಿ ನಡೆದ ಬೈಕ್ ಹಾಗೂ ದೇವಾಲಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಮಗೆ ನ್ಯಾಯಯುತವಾಗಿ 40 ಟಿಎಂಸಿಗೂ ಅಧಿಕ ನೀರು ಸಿಗಬೇಕಿತ್ತು. ನಾವು ತಮಿಳುನಾಡಿಗೆ ಯಾವುದೇ ರೀತಿಯಲ್ಲೂ ಮೋಸ ಮಾಡಿಲ್ಲ. ಆದರೂ ಅವರು ತಕರಾರು ಮಾಡಿದ್ರೆ ನಮ್ಮಲ್ಲೂ ಅಸ್ತ್ರಗಳಿವೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಕಾವೇರಿ ನೀರು ಹಂಚಿಕೆ ಸುಪ್ರೀಂ ತೀರ್ಪಿನಲ್ಲಿ ಏನಿದೆ? ಇಲ್ಲಿದೆ 14 ಪ್ರಮುಖ ಅಂಶಗಳು

    ಕೇವಲ 10 ಟಿಎಂಸಿ ನೀರು ಹೆಚ್ಚುವರಿಯಾಗಿ ಸಿಕ್ಕಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಸಿಹಿ ಹಂಚಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಯಾವ ಪುರುಷಾರ್ಥಕ್ಕೆ ಸಿಹಿ ಹಂಚಿದ್ದಾರೆ? ಇವರಿಗೇನಾದ್ರೂ ವಿವೇಚನೆ ಇದೆಯೇ ಎಂದು ಪ್ರಶ್ನಿಸಿದರು.

    ಅಂತಿಮ ತೀರ್ಪು ನನಗೆ ತೃಪ್ತಿ ತಂದಿಲ್ಲ. ನಮ್ಮ ಜನರಿಗೆ ಆಗಿರುವ ಅನ್ಯಾಯದ ವಿರುದ್ಧ ಮುಂದಿನ ದಿನಗಳಲ್ಲೂ ಹೋರಾಟ ಮಾಡುವೆ. ಕೇವಲ 10 ಟಿಎಂಸಿ ನೀರನ್ನು ಬೆಂಗಳೂರು ಸೇರಿದಂತೆ ಎಲ್ಲಿಗೆ ಹಂಚಿಕೆ ಮಾಡುತ್ತೀರಿ ಎಂದು ಗೌಡರು ಪ್ರಶ್ನಿಸಿದರು. ಇದನ್ನೂ ಓದಿ: ಕಾವೇರಿ ತೀರ್ಪಿನ ಬಗ್ಗೆ ತಮಿಳುನಾಡು ಪರ ವಕೀಲ ಎ. ನವನೀತ್ ಕೃಷ್ಣನ್ ಪ್ರತಿಕ್ರಿಯೆ

    ಇದೇ ವೇಳೆ ವಿಧಾನಸಭೆ ಚುನಾವಣೆ ಮೇ ನಲ್ಲಿ ನಡೆಯಲಿದ್ದು, ಏಪ್ರಿಲ್ ನಲ್ಲಿ ಚುನಾವಣೆ ಘೋಷಣೆಯಾಗಬಹುದು ಎಂದರು. ಇದನ್ನೂ ಓದಿ: ಕಾವೇರಿ ತೀರ್ಪಿನಿಂದ ನಮಗೆ ಲಾಭ, ಹೋರಾಟಕ್ಕೆ ನ್ಯಾಯ ಸಿಕ್ಕಿದೆ: ತಮಿಳುನಾಡು ರೈತರು

    ಅಂತಿಮ ಐತೀರ್ಪು ಪ್ರಕಾರ ಯಾರಿಗೆ ಎಷ್ಟು ನೀರು?: ನ್ಯಾ. ಎನ್.ಪಿ.ಸಿಂಗ್, ನ್ಯಾ. ಸುಧೀರ್ ನಾರಿಯನ್, ನ್ಯಾ. ಎನ್.ಎಸ್. ರಾವ್ ಅವರನ್ನು ಒಳಗೊಂಡ ಕಾವೇರಿ ನ್ಯಾಯಾಧಿಕರಣ 2007ರ ಫೆಬ್ರವರಿ 2ರಂದು ಅಂತಿಮ ಐತೀರ್ಪು ನೀಡಿತ್ತು. ಈ ಐತೀರ್ಪಿನ ಅನ್ವಯ ಕಾವೇರಿ ಕಣಿವೆಯಲ್ಲಿ 740 ಟಿಎಂಸಿ ನೀರಿದೆ ಎಂದು ಲೆಕ್ಕಹಾಕಲಾಯಿತು. ಕರ್ನಾಟಕಕ್ಕೆ 270 ಟಿಎಂಸಿ, ತಮಿಳುನಾಡಿಗೆ 419 ಟಿಎಂಸಿ, ಕೇರಳಕ್ಕೆ 30 ಟಿಎಂಸಿ, ಪುದುಚೇರಿಗೆ 10, ಪರಿಸರ ಸಂರಕ್ಷಣೆಗೆ 10 ಟಿಎಂಸಿ, ಸಮುದ್ರ ಸೇರುವ ನೀರು 4 ಟಿಎಂಸಿ ಟಿಎಂಸಿ ನೀರನ್ನು ಹಂಚಲಾಯಿತು. ಇದರ ಜೊತೆ ಕಾವೇರಿ ನಿರ್ವಹಣಾ ಮಂಡಳಿಯನ್ನು ರಚಿಸುವಂತೆ ಆದೇಶಿಸಿತು. ಈಗ ಸುಪ್ರೀಂ ಕೋರ್ಟ್ ಕರ್ನಾಟಕ ತಮಿಳುನಾಡಿಗೆ ಪ್ರತಿವರ್ಷ 177.25 ಟಿಎಂಸಿ ನೀರನ್ನು ಹರಿಸಬೇಕು ಎಂದು ತೀರ್ಪಿನಲ್ಲಿ ತಿಳಿಸಿದೆ.

  • ಹುಡುಗಿ ವಿಷಯಕ್ಕೆ ಬಸ್ ಸ್ಟಾಪ್‍ನಲ್ಲೇ ಹೊಡೆದಾಡಿಕೊಂಡ ವಿದ್ಯಾರ್ಥಿಗಳು

    ಹುಡುಗಿ ವಿಷಯಕ್ಕೆ ಬಸ್ ಸ್ಟಾಪ್‍ನಲ್ಲೇ ಹೊಡೆದಾಡಿಕೊಂಡ ವಿದ್ಯಾರ್ಥಿಗಳು

    ಹಾಸನ: ಹುಡುಗಿ ವಿಚಾರಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಗುಂಪೊಂದು ಹೊಡೆದಾಡಿಕೊಂಡಿರುವ ಘಟನೆ ಹಾಸನದಲ್ಲಿ ನಡೆದಿದೆ.

    ಅರಕಲಗೂಡು ಪಟ್ಟಣದ ಬಸ್ ನಿಲ್ದಾಣದಲ್ಲಿ ಶುಕ್ರವಾರ ಸಂಜೆ ಈ ಘಟನೆ ನಡೆದಿದೆ. ಕಾಲೇಜು ಮುಗಿದ ಬಳಿಕ ಯುವಕರು ಪಟ್ಟಣದ ಬಸ್ ನಿಲ್ದಾಣದಲ್ಲಿ ತಗಾದೆ ತೆಗೆದುಕೊಂಡು ಬಡಿದಾಡಿಕೊಂಡಿದ್ದಾರೆ.

    ಯುವಕರು ಅಲ್ಲೇ ಪಕ್ಕದಲ್ಲಿ ಬಿದ್ದಿದ್ದ ಬಿಯರ್ ಬಾಟಲಿಯನ್ನು ತೆಗೆದುಕೊಂಡು ಪರಸ್ಪರ ಬಡಿದಾಡಿಕೊಳ್ಳಲು ಮುಂದಾಗಿದ್ದಾರೆ. ಈ ವೇಳೆ ಹೆಚ್ಚಿನ ಅನಾಹುತ ಸಂಭವಿಸಬಾರದೆಂದು ಸಾರ್ವಜನಿಕರೇ ಮಧ್ಯಪ್ರವೇಶಿಸಿ ಯುವಕರನ್ನು ಹೊಡೆದಾಡದಂತೆ ತಡೆದಿದ್ದಾರೆ.

    ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.