Tag: hassan

  • ಯುವತಿ ವಿಚಾರಕ್ಕೆ ಗಲಾಟೆ ಶಂಕೆ – ಮಚ್ಚಿನಿಂದ ಕೊಚ್ಚಿ ಯುವಕನ ಹತ್ಯೆ

    ಯುವತಿ ವಿಚಾರಕ್ಕೆ ಗಲಾಟೆ ಶಂಕೆ – ಮಚ್ಚಿನಿಂದ ಕೊಚ್ಚಿ ಯುವಕನ ಹತ್ಯೆ

    ಹಾಸನ: ಹಾಡಹಗಲೇ ಮಚ್ಚಿನಿಂದ ಕೊಚ್ಚಿ ಯುವಕನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಹಾಸನದ (Hassan) ಬೇಲೂರು ಪಟ್ಟಣದ ಸಾರಿಗೆ ಬಸ್ ನಿಲ್ದಾಣದಲ್ಲಿ ನಡೆದಿದೆ.

    ಚನ್ನಕೇಶವಗೌಡ್ರು ಬೀದಿಯ ನಿವಾಸಿ ಗಿರೀಶ್ (28) ಕೊಲೆಯಾದ ಯುವಕ. ಸುರಪುರ ಗ್ರಾಮದ ಶ್ರೀನಿವಾಸ್ ಅಲಿಯಾಸ್ ಸೀನ ಕೊಲೆಗೈದ ಆರೋಪಿ. ಸೀನ ಕೋಳಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಇದನ್ನೂ ಓದಿ: ಶಿವಮೊಗ್ಗ | ಕಾರ್ಮಿಕ ಇಲಾಖೆಯ ಕಟ್ಟಡ ಕುಸಿದು ಓರ್ವ ಸಾವು – ಮತ್ತೋರ್ವನಿಗೆ ಗಂಭೀರ ಗಾಯ

    ಭಾನುವಾರ ರಾತ್ರಿ ಯುವತಿ ವಿಚಾರಕ್ಕೆ ಗಿರೀಶ್ ಹಾಗೂ ಸೀನನ ನಡುವೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಇದರಿಂದ ಗಿರೀಶ್ ಮೇಲೆ ಸೀನ ಕೋಪಗೊಂಡಿದ್ದ. ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ಗಿರೀಶ್ ಇಂದು ಬೆಳಿಗ್ಗೆ 11 ಗಂಟೆ ಸುಮಾರಿನಲ್ಲಿ ಸಾರಿಗೆ ಬಸ್ ನಿಲ್ದಾಣದಲ್ಲಿರುವ ಶೌಚಾಲಯಕ್ಕೆ ಹೋಗಿ ಹೊರಗೆ ಬಂದಿದ್ದ.

    ಈ ವೇಳೆ ಕಾದು ನಿಂತಿದ್ದ ಸೀನ ಮಚ್ಚು ಹಿಡಿದು ಗಿರೀಶ್ ಮೇಲೆ ಅಟ್ಯಾಕ್ ಮಾಡಿ ಮನಬಂದಂತೆ ಕೊಚ್ಚಿ ಎಸ್ಕೇಪ್ ಆಗಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಗಿರೀಶ್‌ನನ್ನು ಅಂಬ್ಯುಲೆನ್ಸ್‌ನಲ್ಲಿ ಜಿಲ್ಲಾಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ.

    ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

  • ಬಣ್ಣಬಣ್ಣದ ಮಾತಾಡಿ 3 ಕೋಟಿ ವಂಚನೆ – ಮಹಿಳೆಯನ್ನು ಅಟ್ಟಾಡಿಸಿ ಹೊಡೆದ ಜನ

    ಬಣ್ಣಬಣ್ಣದ ಮಾತಾಡಿ 3 ಕೋಟಿ ವಂಚನೆ – ಮಹಿಳೆಯನ್ನು ಅಟ್ಟಾಡಿಸಿ ಹೊಡೆದ ಜನ

    ಹಾಸನ: ಬಣ್ಣಬಣ್ಣದ ಮಾತಾಡಿ ಹಲವಾರು ಜನರಿಂದ ಲಕ್ಷ ಲಕ್ಷ ಹಣ (Money) ಪಡೆದು ವಂಚಿಸಿದ್ದ (Fraud Case) ಮಹಿಳೆಯನ್ನು ಜನ ಅಟ್ಟಾಡಿಸಿ ಹೊಡೆದ ಘಟನೆ ಹಾಸನದ (Hassan) ಅರಳೇಪೇಟೆಯಲ್ಲಿ ನಡೆದಿದೆ.

    ಟೈಲರ್ ಶಾಪ್ ನಡೆಸುತ್ತಿದ್ದ ಮಹಿಳೆ ಹೇಮಾವತಿ ಎಂಬಾಕೆ, ಹಲವರ ಬಳಿ ಚಿಟ್ಸ್‍ನಲ್ಲಿ 1 ಕೋಟಿ ರೂ. ಚೀಟಿ ಹಾಕಿದ್ದೇನೆ ಎಂದು ಸ್ಲಿಪ್ ತೋರಿಸಿ ಹಣ ಪಡೆದಿದ್ದಳು. ಅಲ್ಲದೇ ಮಗಳನ್ನು ವಿದೇಶದಲ್ಲಿ ಇಂಜಿನಿಯರಿಂಗ್ ಓದಿಸುವುದಕ್ಕೆ, ಒಂದು ಕೋಟಿ ರೂ. ಮನೆ ಖರೀದಿಸಿದ್ದೇನೆಂದು ಹೇಳಿ ಹಲವರಿಂದ ಸಾಲ ಪಡೆದಿದ್ದಳು.

    ಚಿನ್ನಾಭರಣ ಅಡವಿಟ್ಟು ಜನ ಲಕ್ಷ ಲಕ್ಷ ಸಾಲ ಕೊಟ್ಟಿದ್ದರು. ಸುಮಾರು 3 ಕೋಟಿಗೂ ಅಧಿಕ ಹಣ ಪಡೆದು ಮೋಸ ಮಾಡಿರುವ ಆರೋಪ ಮಹಿಳೆ ಮೇಲಿದೆ. ಹೆಂಡತಿ ವಂಚನೆಗೆ ಪತಿ ವಿರೂಪಾಕ್ಷಪ್ಪ ಸಾಥ್ ನೀಡಿದ್ದಾರೆ ಎಂದು ಜನ ಆರೋಪಿಸಿದ್ದಾರೆ. ಇನ್ನೂ ಓರ್ವ ಮಹಿಳೆಯಿಂದಲೇ 45 ಲಕ್ಷ ರೂ. ಹಣ ಪಡೆದು ವಂಚನೆ ಮಾಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಬೆಳಗಾವಿ | 2,000 ಹಣಕ್ಕಾಗಿ ಹರಿಯಿತು ಯುವಕನ ನೆತ್ತರು

    ವಂಚನೆಗೊಳಗಾದ ಜನ ಮಹಿಳೆಯನ್ನು ರಸ್ತೆಯಲ್ಲಿ ಅಟ್ಟಾಡಿಸಿ ಹಲ್ಲೆ ನಡೆಸಿದ್ದಾರೆ. ಹಲ್ಲೆಯ ವೀಡಿಯೋ ಮೊಬೈಲ್‍ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಈ ಸಂಬಂಧ ಹಾಸನ ನಗರ ಪೊಲೀಸ್ ಠಾಣೆ ಹಾಗೂ ಪೆನ್‍ಷನ್‍ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ದೂರು ಪ್ರತಿ ದೂರು ದಾಖಲಾಗಿದೆ. ಇದನ್ನೂ ಓದಿ: ಬೆಂಗಳೂರು | ಪತಿಯ ಚಿತ್ರಹಿಂಸೆ ತಾಳಲಾರದೇ 3ನೇ ಮಹಡಿಯಿಂದ ಜಿಗಿದ ಮಹಿಳೆ

  • ಹೋಂ ಸ್ಟೇ ಬಾತ್‌ ರೂಮ್‌ನಲ್ಲಿ ಯುವತಿ ಅನುಮಾನಾಸ್ಪದ ಸಾವು

    ಹೋಂ ಸ್ಟೇ ಬಾತ್‌ ರೂಮ್‌ನಲ್ಲಿ ಯುವತಿ ಅನುಮಾನಾಸ್ಪದ ಸಾವು

    ಚಿಕ್ಕಮಗಳೂರು: ಹೋಂ ಸ್ಟೇ (Homestay) ಬಾತ್ ರೂಂನಲ್ಲಿ ಸ್ನಾನಕ್ಕೆಂದು ತೆರಳಿದ್ದ ಯುವತಿ ಕುಸಿದು ಬಿದ್ದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೂಡಿಗೆರೆ (Mudigere) ತಾಲೂಕಿನ ಹಾಂದಿ ಗ್ರಾಮದಲ್ಲಿ ನಡೆದಿದೆ.

    ಮೃತಳನ್ನ ಹಾಸನ (Hassan) ಜಿಲ್ಲೆಯ ಬೇಲೂರು ತಾಲೂಕಿನ ದೇವಾಲಾಪುರ ಗ್ರಾಮದ ರಂಜಿತಾ (27) ಎಂದು ಗುರುತಿಸಲಾಗಿದೆ. ಮೃತ ರಂಜಿತಾ ದಾವಣಗೆರೆ ಮೂಲದ ಗೆಳತಿ ರೇಖಾ ಅವರೊಂದಿಗೆ ಶುಕ್ರವಾರ ಸಂಜೆ ಹೋಂ ಸ್ಟೇನಲ್ಲಿ ತಂಗಿದ್ದರು. ಸ್ನೇಹಿತೆಯೊಬ್ಬಳ ನಿಶ್ಚಿತಾರ್ಥಕ್ಕಾಗಿ ರಂಜಿತಾ ಮತ್ತು ರೇಖಾ ಬೆಂಗಳೂರಿನಿಂದ ಬಂದಿದ್ದರು. ಇದನ್ನೂ ಓದಿ: ಜಗಳವಾಡಿ ನಾಲ್ಕು ಮಕ್ಕಳ ತಾಯಿಯ ಹತ್ಯೆಗೈದ ಲವ್ವರ್ – ಕೆಟ್ಟು ನಿಂತಿರೋ ಆಟೋದಲ್ಲಿ ಹೆಣ ಬಿಸಾಕಿ ಎಸ್ಕೇಪ್

    ಶನಿವಾರ (ಅ.25) ಬೆಳಗ್ಗೆ ರೇಖಾ ಸ್ನಾನ ಮಾಡಿ ಬಂದ ನಂತರ ರಂಜಿತಾ ಸ್ನಾನಕ್ಕೆ ತೆರಳಿದ್ದರು. ತುಂಬಾ ಹೊತ್ತಾದರೂ ಅವರು ಹೊರ ಬಾರದಿದ್ದಾಗ ಮತ್ತು ನಲ್ಲಿಯ ನೀರು ಹರಿಯುವ ಶಬ್ದ ನಿರಂತರವಾಗಿ ಕೇಳುತ್ತಿದ್ದಾಗ ರೇಖಾ ಅವರು ಬಾಗಿಲು ಬಡಿದಿದ್ದಾರೆ. ಆದರೆ, ಯಾವುದೇ ಪ್ರತಿಕ್ರಿಯೆ ಬಾರದಿದ್ದಾಗ ಕಿಟಕಿಯಿಂದ ನೋಡಿದಾಗ ರಂಜಿತಾ ಸ್ನಾನಗೃಹದಲ್ಲಿ ಕುಸಿದು ಬಿದ್ದಿರುವುದು ಕಂಡುಬಂದಿದೆ. ತಕ್ಷಣ ಹೋಂ ಸ್ಟೇ ಸಿಬ್ಬಂದಿಗೆ ಮಾಹಿತಿ ನೀಡಿ ಬಾಗಿಲು ಒಡೆದು ನೋಡಿದಾಗ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ರಂಜಿತಾರನ್ನು ಮೂಡಿಗೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ವೈದ್ಯರು ಯುವತಿ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.

    ರಂಜಿತಾ ಅವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ನಾನಗೃಹದಲ್ಲಿ ಗ್ಯಾಸ್ ಗೀಸರ್ ಇದ್ದಿದ್ದರಿಂದ ಗ್ಯಾಸ್ ಸೋರಿಕೆಯಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಆದರೆ, ಸ್ನಾನಗೃಹದಲ್ಲಿ ಸೂಕ್ತ ವೆಂಟಿಲೇಟರ್ ವ್ಯವಸ್ಥೆ ಇದ್ದು, ಗ್ಯಾಸ್ ಸೋರಿಕೆಯ ಯಾವುದೇ ಕುರುಹುಗಳು ಪತ್ತೆಯಾಗಿಲ್ಲ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.‌ ಯುವತಿ ಹೃದಯಾಘಾತದಿಂದ ಸಾವನ್ನಪ್ಪಿರಬಹುದಾ? ಅಥವಾ ಬೇರೇನು ಕಾರಣ ಎಂಬುದು ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಗೊತ್ತಾಗಬೇಕಿದೆ. ಈ ಸಂಬಂಧ ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಪತ್ನಿ ಜೊತೆ ಜಗಳ; ಅವಳಿ ಮಕ್ಕಳ ಕತ್ತು ಸೀಳಿ ಹತ್ಯೆ ಮಾಡಿದ ಪಾಪಿ

  • ಹುಟ್ಟುಹಬ್ಬದ ದಿನವೇ ಮಗ ಸಾವು – ಕೈ ಹಿಡಿದು ಕೇಕ್‌ ಕತ್ತರಿಸಿ, ಅಂಗಾಂಗ ದಾನ ಮಾಡಿದ ಪೋಷಕರು

    ಹುಟ್ಟುಹಬ್ಬದ ದಿನವೇ ಮಗ ಸಾವು – ಕೈ ಹಿಡಿದು ಕೇಕ್‌ ಕತ್ತರಿಸಿ, ಅಂಗಾಂಗ ದಾನ ಮಾಡಿದ ಪೋಷಕರು

    ಕೊಪ್ಪಳ: ಅಪಘಾತಕ್ಕೊಳಗಾಗಿ (Accident) ಚಿಕಿತ್ಸೆ ಪಡೆಯುತ್ತಿದ್ದ ಮಗ ಹುಟ್ಟುಹಬ್ಬದ ದಿನವೇ ಸಾವನ್ನಪ್ಪಿದ್ದು, ಪೋಷಕರು ಅಂಗಾಂಗ ದಾನ (Organ Donation) ಮಾಡಿ ಸಾರ್ಥಕತೆ ಮೆರೆದಿದ್ದಾರೆ.

    ಕೊಪ್ಪಳದ (Koppal) ಕನಕಗಿರಿ ಮೂಲದ ಆರ್ಯನ್ (22) ಮೃತ ಯುವಕ. 15 ದಿನಗಳ ಹಿಂದೆ ಹಾಸನದ (Hassan) ಸಮೀಪ ಬೈಕ್ ಅಪಘಾತಕ್ಕೊಳಗಾಗಿ, ಆರ್ಯನ್‌ ಗಾಯಗೊಂಡಿದ್ದ. ಆತನನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಿಸದೇ ಹುಟ್ಟುಹಬ್ಬದ ದಿನವೇ (ಅ.24) ಯುವಕ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಬೆಂಗಳೂರು| ಉಸಿರುಗಟ್ಟಿಸಿ 7 ವರ್ಷದ ಮಗಳ ಕೊಂದ ಮಲತಂದೆ

    ಮೃತಪಟ್ಟ ಮಗನ ಕೈ ಹಿಡಿದು ಪೋಷಕರು ಕೇಕ್ ಕತ್ತರಿಸಿ ಕಣ್ಣೀರಿಟ್ಟಿದ್ದಾರೆ. ಬಳಿಕ ಮಗನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದಿದ್ದಾರೆ. ಇಂದು (ಅ.25) ಕೊಪ್ಪಳದ ಕನಕಗಿರಿಯಲ್ಲಿ ಆರ್ಯನ್ ಅಂತ್ಯಕ್ರಿಯೆ ನಡೆಯಲಿದೆ. ಇದನ್ನೂ ಓದಿ: ಲೈಫ್‌ ಸೆಟಲ್‌ ಮಾಡ್ತೀನಿ, ಮದುವೆಯಾಗೋಣ ಅಂತ ನಂಬಿಸಿ ರೇಪ್ – ಡಿಜೆ ಹಳ್ಳಿ ಇನ್ಸ್‌ಪೆಕ್ಟರ್‌ ವಿರುದ್ಧ ಎಫ್‌ಐಆರ್

  • ಹಾಸನಾಂಬ ಜಾತ್ರಾ ಮಹೋತ್ಸವ ಹೊಸ ದಾಖಲೆ; 25 ಕೋಟಿ ರೂ. ಕಾಣಿಕೆ ಸಂಗ್ರಹ

    ಹಾಸನಾಂಬ ಜಾತ್ರಾ ಮಹೋತ್ಸವ ಹೊಸ ದಾಖಲೆ; 25 ಕೋಟಿ ರೂ. ಕಾಣಿಕೆ ಸಂಗ್ರಹ

    ಹಾಸನ: ಹಾಸನಾಂಬೆ ದೇವಿ ಹುಂಡಿ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಈ ಬಾರಿಯ ಹಾಸನಾಂಬ ಜಾತ್ರಾ ಮಹೋತ್ಸವ (Hasanamba Jatra) ಹೊಸ ಇತಿಹಾಸ ಬರೆದಿದೆ.‌ ವಿಶೇಷ ದರ್ಶನದ ಟಿಕೆ‌ಟ್ ಹಾಗೂ ಲಾಡು ಮಾರಾಟದಿಂದ ದಾಖಲೆಯ ಆದಾಯ ಗಳಿಕೆಯಾಗಿದೆ.‌

    ವಿಶೇಷ ದರ್ಶನದ ಸಾವಿರ ರೂ., ಮುನ್ನೂರು ರೂ. ಟಿಕೆಟ್‌ ಮತ್ತು ಲಾಡು ಮಾರಾಟದಿಂದ 21,91,75,052 ರೂ. ಸಂಗ್ರಹವಾಗಿದೆ. ಹುಂಡಿಯಲ್ಲಿ 3,68,12,275 ರೂ. ಸೇರಿ ಒಟ್ಟು 25,59,87,327 ರೂ. ಹಣ ಕಾಣಿಕೆಯಾಗಿ ಹರಿದು ಬಂದಿದೆ.‌ ಇದನ್ನೂ ಓದಿ: ಶಕ್ತಿದೇವತೆ ಹಾಸನಾಂಬೆ ಜಾತ್ರೆಗೆ ವಿಧ್ಯುಕ್ತ ತೆರೆ – ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲು ಬಂದ್

    ಕಾಣಿಕೆ ರೂಪದಲ್ಲಿ 75 ಗ್ರಾಂ 300 ಮಿಲಿ ಚಿನ್ನ, 1 ಕೆಜಿ 58 ಗ್ರಾಂ 400 ಮಿಲಿ ಬೆಳ್ಳಿ ವಸ್ತುಗಳನ್ನು ಭಕ್ತರು ಹುಂಡಿಗೆ ‌ಹಾಕಿದ್ದು, ಹಾಸನಾಂಬೆ ದೇವಿ ಜಾತ್ರಾ ಮಹೋತ್ಸವದ ಇತಿಹಾಸದಲ್ಲೇ ಈ ಬಾರಿ ಆದಾಯದ ಮೂಲಕ ದಾಖಲೆ ನಿರ್ಮಾಣವಾಗಿದೆ.‌ ಇಂಡೋನೇಷಿಯಾ-263 ರೂ., ನೇಪಾಳ-3.13 ರೂ., ಮಲೇಷಿಯಾ-28.75 ರೂ., ಯುಎಸ್‌ಎ-526 ರೂ., ಮಾಲ್ಡೀವ್ಸ್-57.29 ರೂ., ಕೆನಡಾ-6,259 ರೂ, ಕುವೈತ್-286 ರೂ., ಯುಎಐ-239 ರೂ. ಸೇರಿ ಒಟ್ಟು 7,653 ರೂ. ವಿದೇಶ ಕರೆನ್ಸಿ ಕಾಣಿಕೆಯಾಗಿ ಬಂದಿದೆ.

    ಅಲ್ಲದೇ, 42,530 ಹಳೇ ನೋಟುಗಳನ್ನು ಹಾಕಲಾಗಿದೆ.‌ ಸಿದ್ದೇಶ್ವರಸ್ವಾಮಿ ದೇವಾಲಯ ಪ್ರತ್ಯೇಕ ಅಕೌಂಟ್ ಹೊಂದಿದ್ದು, ಅದರ ಹುಂಡಿ ಎಣಿಕೆ‌ ಕಾರ್ಯ ಕೂಡ ನಡೆಯಿತು. ಈ ಬಾರಿ 15,17,785 ರೂ. ಕಾಣಿಕೆಯನ್ನು ಭಕ್ತರು ಹುಂಡಿಗೆ ಹಾಕಿದ್ದಾರೆ ಎಂದು ಉಪವಿಭಾಗಾಧಿಕಾರಿ ಹಾಗೂ ದೇವಾಲಯದ ಆಡಳಿತಾಧಿಕಾರಿ ಮಾರುತಿ ಹೇಳಿದ್ದಾರೆ. ಇದನ್ನೂ ಓದಿ: ಇಂದು ಹಾಸನಾಂಬೆ ಗರ್ಭಗುಡಿ ಬಾಗಿಲು ಬಂದ್ – ಕಡೆಗಳಿಗೆಯಲ್ಲೂ ದೇವಿ ಕಣ್ತುಂಬಿಕೊಂಡ ಭಕ್ತಗಣ

  • ಹಾಸನ | ಭಾರೀ ಮಳೆಗೆ ಮನೆ ಗೋಡೆ ಕುಸಿತ – ವೃದ್ಧೆ ದುರ್ಮರಣ

    ಹಾಸನ | ಭಾರೀ ಮಳೆಗೆ ಮನೆ ಗೋಡೆ ಕುಸಿತ – ವೃದ್ಧೆ ದುರ್ಮರಣ

    ಹಾಸನ: ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ (Rain) ಗೋಡೆ ಕುಸಿದು ವೃದ್ಧೆಯೊಬ್ಬರು ಸಾವನ್ನಪ್ಪಿದ ಘಟನೆ ಅರಕಲಗೂಡು (Arakalagudu) ತಾಲೂಕಿನ ಮತ್ತಿಗೋಡು ಗ್ರಾಮದಲ್ಲಿ ನಡೆದಿದೆ.

    ಮೃತ ಮಹಿಳೆಯನ್ನು ಜವರಮ್ಮ (63) ಎಂದು ಗುರುತಿಸಲಾಗಿದೆ. ಮುಂಜಾನೆ 5:30ರ ಸುಮಾರಿಗೆ ಈ ಘಟನೆ ನಡೆದಿದೆ. ಇನ್ನೂ ಮನೆಯಲ್ಲಿ ಮಲಗಿದ್ದ ವೃದ್ಧೆಯ ಮಗ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಇದನ್ನೂ ಓದಿ: ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯಾ ಸುರೇಶ್‌ರಿಂದ ಹಿಟ್ & ರನ್ – ಮಹಿಳೆಗೆ ಗಂಭೀರ ಗಾಯ

    ಸ್ಥಳಕ್ಕೆ ಸ್ಥಳೀಯ ಶಾಸಕ ಎ.ಮಂಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಸೂಕ್ತ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ಕೊಣನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಿದ್ದಾರೆ. ಇದನ್ನೂ ಓದಿ: ಐಸಿಸ್‌ ಮಾಡ್ಯೂಲ್‌ ಭೇದಿಸಿದ ದೆಹಲಿ ಪೊಲೀಸ್‌ – ಇಬ್ಬರು ಶಂಕಿತ ಭಯೋತ್ಪಾದಕರು ಅರೆಸ್ಟ್‌

  • ಶಕ್ತಿದೇವತೆ ಹಾಸನಾಂಬೆ ಜಾತ್ರೆಗೆ ವಿಧ್ಯುಕ್ತ ತೆರೆ – ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲು ಬಂದ್

    ಶಕ್ತಿದೇವತೆ ಹಾಸನಾಂಬೆ ಜಾತ್ರೆಗೆ ವಿಧ್ಯುಕ್ತ ತೆರೆ – ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲು ಬಂದ್

    – 2026ರ ಅ.29ರಿಂದ ನ.11ರವರೆಗೆ ದರ್ಶನ ನೀಡಲಿರುವ ಹಾಸನಾಂಬೆ

    ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸುವ ಶಕ್ತಿದೇವತೆ, ಹಾಸನದ ಅಧಿದೇವತೆ ಹಾಸನಾಂಬೆ ದೇವಿ (Hasanamba Devi) ಗರ್ಭಗುಡಿ ಬಾಗಿಲು ಶಾಸ್ತ್ರೋಕ್ತವಾಗಿ ಬಂದ್ ಆಗಿದೆ.

    ಪ್ರಧಾನ ಅರ್ಚಕ ನಾಗರಾಜ್ ನೇತೃತ್ವದಲ್ಲಿ ಅಂತಿಮ ಪೂಜೆ ನಡೆದಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಅವರ ಸಮ್ಮುಖದಲ್ಲಿ ಗರ್ಭಗುಡಿಗೆ ಅರ್ಚಕರು ಬೀಗ ಹಾಕಿದರು. ಈ ಮೂಲಕ 15 ದಿನಗಳ ಕಾಲ ನಡೆದ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ತೆರೆ ಬಿದ್ದಿದೆ.ಇದನ್ನೂ ಓದಿ:ಶಾಸ್ತ್ರೋಕ್ತವಾಗಿ ಮುಚ್ಚಿದ ಕೇದಾರನಾಥ ಧಾಮದ ಬಾಗಿಲು

    ಅ.9ರಿಂದ ಆರಂಭವಾಗಿ ಅ.23ರವರೆಗೆ ದರ್ಶನ ಭಾಗ್ಯ ಕರುಣಿಸಿದ ಹಾಸನಾಂಬೆ ಮತ್ತೆ ಒಂದು ವರ್ಷಗಳ ಕಾಲ ಮರೆಗೆ ಸರಿದಳು. ಇಂದು ಮಧ್ಯಾಹ್ನ 1:06ಕ್ಕೆ ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲನ್ನು ಮುಚ್ಚಲಾಯಿತು. ಈ ವೇಳೆ ಪಂಜಿನ ಪೂಜೆ, ಮಂಗಳವಾದ್ಯ ಮೊಳಗಿತು.

    ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯ ಸರ್ಕಾರದ ಸಚಿವರು, ಶಾಸಕರು, ನಟ, ನಟಿಯರು ವಿವಿಧ ಕ್ಷೇತ್ರದ ಗಣ್ಯರು ದೇವಿಯ ದರ್ಶನ ಪಡೆದು ಪುನೀತರಾಗಿದ್ದಾರೆ. ಈ ಬಾರಿಯ 13 ದಿನಗಳ ಸಾರ್ವಜನಿಕ ದರ್ಶನದಲ್ಲಿ ವಿವಿಐಪಿ ಪಾಸ್‌ಗಳ ರದ್ದು ಮಾಡಿ ಗೋಲ್ಡ್ ಪಾಸ್, ಪ್ರೋಟೋಕಾಲ್‌ಗೆ ಸಮಯ ನಿಗದಿ ಮಾಡಿದ್ದರಿಂದ ಸಾರ್ವಜನಿಕರಿಗೆ ಸುಗಮವಾಗಿ ಹಾಸನಾಂಬ ದೇವಿಯ ದರ್ಶನ ಆಗಿದೆ. ನಿರೀಕ್ಷೆಗೂ ಮೀರಿದ ಸಂಖ್ಯೆಯಲ್ಲಿ ಭಕ್ತರು ಬಂದಿದ್ದರಿಂದ ದರ್ಶನ ಸಮಯ ವಿಳಂಬ ಬಿಟ್ಟರೆ ಉಳಿದಂತೆ ಜಾತ್ರಾ ಮಹೋತ್ಸವ ಯಶಸ್ವಿಯಾಗಿ ನಡೆದಿದೆ.

    ಕಳೆದ ಬಾರಿ ಜಾತ್ರೆ ವೇಳೆ ಅವ್ಯವಸ್ಥೆ ಆಗಿತ್ತು. ಇದನ್ನು ಸರಿಪಡಿಸಿ ಶಾಂತಿಯುತವಾಗಿ ದರ್ಶನ ಆಗಲು ಜಿಲ್ಲಾಡಳಿತ, ಸಚಿವರ ಜಾಣ್ಮೆ ಕಾರ್ಯವೈಖರಿಯಿಂದ ಎಲ್ಲವನ್ನೂ ಕಾಲಕಾಲಕ್ಕೆ ಸರಿಪಡಿಸಿ ಯಶಸ್ವಿಯಾದ ಜಾತ್ರೆ ನಡೆಸಿದ್ದಾರೆ. ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಪೌರಕಾರ್ಮಿಕರು, ವಿದ್ಯುತ್ ಇಲಾಖೆ, ಅಗ್ನಿಶಾಮಕದಳ, ಡಿಎಫ್‌ಓ ಸೇರಿ ಎಲ್ಲಾ ಇಲಾಖೆಯವರು ಪ್ರಮಾಣಿಕವಾಗಿ ಕೆಲಸ ಮಾಡಿದ್ದಾರೆ. ಹಗಲು ರಾತ್ರಿ ದುಡಿದಿದ್ದಾರೆ.ಇದನ್ನೂ ಓದಿ: ಖಾದ್ಯ ತೈಲ ಘಟಕ ನೋಂದಣಿ ಕಡ್ಡಾಯ: ಸಚಿವ ಪ್ರಹ್ಲಾದ್‌ ಜೋಶಿ

    ಈ ಬಾರಿಯ ಉತ್ಸವದ ವೇಳೆ ಒಂದು ವಾರಗಳ ಕಾಲ ಪ್ರತಿನಿತ್ಯ ಸುರಿಯುತ್ತಿದ್ದ ಮಳೆಯನ್ನೂ ಲೆಕ್ಕಿಸದೆ ದೇವಿ ದರ್ಶನ ಪಡೆದಿದ್ದಾರೆ. ಬುಧವಾರ ಸಂಜೆಯವರೆಗೂ 26.13 ಲಕ್ಷಕ್ಕೂ ಹೆಚ್ಚು ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ. ಶೀಘ್ರ ದರ್ಶನದ ಟಿಕೆಟ್ ಮಾರಾಟದಿಂದ 21.82 ಕೋಟಿ ರೂ. ಹಣ ಸಂಗ್ರಹವಾಗಿದೆ. ಉಳಿದಂತೆ ಹುಂಡಿ ಎಣಿಕೆ ಕಾರ್ಯ ಬಾಕಿಯಿದ್ದು, 25 ಕೋಟಿ ತಲುಪಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಕೃಷ್ಣ ಬೈರೇಗೌಡ ಹೇಳಿದ್ದಾರೆ.

    ಮುಂದಿನ ವರ್ಷದ ಹಾಸನಾಂಬೆ ಉತ್ಸವಕ್ಕೆ ದಿನಾಂಕ ನಿಗದಿ:
    ಈ ಬಾರಿಯ ಹಾಸನಾಂಬೆ ದರ್ಶನೋತ್ಸವ ಇತಿಹಾಸ ನಿರ್ಮಸಿ, ದಾಖಲೆ ಬರೆಯುವ ಜೊತೆಗೆ ಅತ್ಯಂತ ಯಶಸ್ವಿ ಮತ್ತು ಅಚ್ಚುಕಟ್ಟಾಗಿ ನಡೆಯಿತು. ಮುಂದಿನ ವರ್ಷದ ಹಾಸನಾಂಬೆ ಉತ್ಸವ ದಿನಾಂಕವನ್ನು ಪಂಚಾಂಗದ ಪ್ರಕಾರ, ನಿಗದಿ ಮಾಡಲಾಗಿದೆ. 2026ರ ಅಕ್ಟೋಬರ್ 29ರಿಂದ ನವೆಂಬರ್ 11ರವರೆಗೆ ನಡೆಯಲಿದೆ. ಒಟ್ಟು 14 ದಿನ ಗರ್ಭಗುಡಿ ತೆರೆದಿರಲಿದ್ದು, ಈ ಪೈಕಿ 12 ದಿನ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಒಟ್ಟಿನಲ್ಲಿ ಹಾಸನಾಂಬೆಯ ಈ ಬಾರಿಯ ಉತ್ಸವಕ್ಕೆ ವಿದ್ಯುಕ್ತ ತೆರೆ ಬಿದ್ದಿದೆ. 13 ದಿನಗಳ ಕಾಲ ಜನ ಜಂಗುಳಿಯಿಂದ ತುಂಬಿ ತುಳುಕುತ್ತಿದ್ದ ಹಾಸನಾಂಬೆ ದೇಗುಲ ಆವರಣ ಈಗ ಭಣಗುಡುತ್ತಿದೆ.ಇದನ್ನೂ ಓದಿ: ಚಿತ್ತಾಪುರ RSS ಪಥ ಸಂಚಲನ – ಸರ್ಕಾರದ ಆದೇಶದಂತೆ ಜಿಲ್ಲಾಡಳಿತ ತೀರ್ಮಾನ: ಪರಮೇಶ್ವರ್

  • ಇಂದು ಹಾಸನಾಂಬೆ ಗರ್ಭಗುಡಿ ಬಾಗಿಲು ಬಂದ್ – ಕಡೆಗಳಿಗೆಯಲ್ಲೂ ದೇವಿ ಕಣ್ತುಂಬಿಕೊಂಡ ಭಕ್ತಗಣ

    ಇಂದು ಹಾಸನಾಂಬೆ ಗರ್ಭಗುಡಿ ಬಾಗಿಲು ಬಂದ್ – ಕಡೆಗಳಿಗೆಯಲ್ಲೂ ದೇವಿ ಕಣ್ತುಂಬಿಕೊಂಡ ಭಕ್ತಗಣ

    ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸುವ ಶಕ್ತಿದೇವತೆ, ಹಾಸನದ ಅಧಿದೇವತೆ ಹಾಸನಾಂಬೆ ದೇವಿ (Hasanamba Temple) ಗರ್ಭಗುಡಿ ಬಾಗಿಲು ಇಂದು ಮಧ್ಯಾಹ್ನ 12 ಗಂಟೆಗೆ ಶಾಸ್ತ್ರೋಕ್ತವಾಗಿ ಮುಚ್ಚಲಿದೆ.

    ಈಗಾಗಲೇ ಹಾಸನಾಂಬ ದೇವಿ ಸಾರ್ವಜನಿಕ ದರ್ಶನ ಅಂತ್ಯಗೊಂಡಿದ್ದು, ಪೂಜೆಗಾಗಿ ಗರ್ಭಗುಡಿ ಬಾಗಿಲು ಮುಚ್ಚಲಾಗಿದೆ. ಮಧ್ಯಾಹ್ನ 12 ಗಂಟೆಗೆ ವಿಶ್ವರೂಪ ದರ್ಶನದ ಬಳಿಕ ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲು ಮುಚ್ಚಲಾಗುತ್ತದೆ. ಇಂದು ಬೆಳಗ್ಗೆವರೆಗೂ ಹಾಸನಾಂಬ ದೇವಿ ದರ್ಶನಕ್ಕೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿತ್ತು. ಕಡೆಗಳಿಗೆಯಲ್ಲೂ ಭಕ್ತಗಣ ಹಾಸನಾಂಬ ದೇವಿಯನ್ನು ಕಣ್ತುಂಬಿಕೊಂಡಿದ್ದಾರೆ. ಇದನ್ನೂ ಓದಿ: ಇವಿ ಬಿಎಂಟಿಸಿ ಬಸ್ಸು ಚಾಲಕರಿಂದ ದಿಢೀರ್‌ ಪ್ರತಿಭಟನೆ

    ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ, ಸ್ಥಳೀಯ ಶಾಸಕ ಹೆಚ್.ಪಿ.ಸ್ವರೂಪ್ ಪ್ರಕಾಶ್, ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ, ಎಸ್ಪಿ ಮಹಮದ್ ಸುಜಿತಾ, ಎಸಿ ಮಾರುತಿ ಸಮ್ಮುಖದಲ್ಲಿ ಗರ್ಭಗುಡಿ ಬಾಗಿಲು ಮುಚ್ಚಲಾಗುತ್ತದೆ. ಬಾಗಿಲು ಮುಚ್ಚುವ ಮುನ್ನ ಅರ್ಚಕರು ದೀಪ ಹಚ್ಚಿ, ದೇವಿಯ ಮುಂದೆ ಹೂವು, ನೈವೇದ್ಯ ಇಡಲಿದ್ದಾರೆ. ಅನಂತರ ಶಾಸ್ತ್ರೋಕ್ತವಾಗಿ ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ಮುಚ್ಚಲಾಗುತ್ತದೆ. ಇದನ್ನೂ ಓದಿ: ವಿರೂಪಗೊಳಿಸಿದ ಮಹಾಕಾಳಿ ಮೂರ್ತಿಯನ್ನೇ ವಶಕ್ಕೆ ಪಡೆದ ಪೊಲೀಸ್‌ – ಬಂಗಾಳದಲ್ಲಿ ರಾಜಕೀಯ ಬಿರುಗಾಳಿ

    ಅ.9ರಂದು ಹಾಸನಾಂಬೆ ದೇವಿ ಗರ್ಭಗುಡಿಯ ಬಾಗಿಲು ತೆರೆಯಲಾಗಿತ್ತು. ಇಲ್ಲಿಯವರೆಗೂ 27 ಲಕ್ಷಕ್ಕಿಂತ ಹೆಚ್ಚು ಭಕ್ತರು ದೇವಿ ದರ್ಶನ ಪಡೆದಿದ್ದಾರೆ. 1,000 ರೂ, 300 ರೂ, ಲಾಡು ಪ್ರಸಾದ ಹಾಗೂ ದೇವಿಯ ಸೀರೆ ಮಾರಾಟದಿಂದ 23 ಕೋಟಿಗೂ ಅಧಿಕ ಆದಾಯ ಬಂದಿದ್ದು, ಈ ಬಾರಿಯ ಜಾತ್ರಾ ಮಹೋತ್ಸವ ಇತಿಹಾಸ ಬರೆದಿದೆ. ರಾತ್ರಿಯಿಡೀ ಭಾರೀ ಮಳೆ ಸುರಿದ ಪರಿಣಾಮ ಸಿದ್ದೇಶ್ವರಸ್ವಾಮಿ ಕೆಂಡೋತ್ಸವ ತಡವಾಗಿದೆ. ಕೆಂಡ ಹಾಯಲು ಸಾವಿರಾರು ಮಂದಿ ಭಕ್ತರು ಕಾದು ನಿಂತಿದ್ದರು. ಇದನ್ನೂ ಓದಿ: ಹಾವೇರಿ | ರಾಘವೇಂದ್ರ ಸ್ವಾಮಿ ಮಠದ ಬೀಗ ಮುರಿದು 10 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕಳ್ಳತನ

  • ಹಾಸನ | ಭಾರೀ ಮಳೆಗೆ 5 ವರ್ಷದ ಬಳಿಕ ಕೋಡಿ ಬಿದ್ದ 900 ಎಕರೆ ವಿಸ್ತೀರ್ಣದ ಕಣಕಟ್ಟೆ ಕೆರೆ

    ಹಾಸನ | ಭಾರೀ ಮಳೆಗೆ 5 ವರ್ಷದ ಬಳಿಕ ಕೋಡಿ ಬಿದ್ದ 900 ಎಕರೆ ವಿಸ್ತೀರ್ಣದ ಕಣಕಟ್ಟೆ ಕೆರೆ

    ಹಾಸನ: ಜಿಲ್ಲೆಯ (Hassan) ವಿವಿಧೆಡೆ ಮಂಗಳವಾರ ರಾತ್ರಿ ಭಾರೀ ಮಳೆಯಾಗಿದೆ. ಧಾರಾಕಾರ ಮಳೆಗೆ (Rain) ಅರಸೀಕೆರೆ (Arasikere) ತಾಲೂಕಿನ, ಕಣಕಟ್ಟೆ ಗ್ರಾಮದ 900 ಎಕರೆ ಪ್ರದೇಶದಲ್ಲಿರುವ ಬೃಹತ್ ಕೆರೆ (Kanakatte Lake) ಕೋಡಿ ಬಿದ್ದಿದೆ.

    ಐದು ವರ್ಷದ ಹಿಂದೆ ಈ ಕೆರೆ ತುಂಬಿತ್ತು. ಅದರ ಬಳಿಕ ಮಳೆಯ ಕೊರತೆಯಿಂದ ಕೆರೆ ತುಂಬಿರಲಿಲ್ಲ. ಕೆರೆ ತುಂಬಿದ್ದರಿಂದ ಕಣಕಟ್ಟೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಸಂತಸ ಮನೆ ಮಾಡಿದೆ.

    – ಕೊಚ್ಚಿ ಹೋದ ಕಿರುಸೇತುವೆ, ಹಲವು ಗ್ರಾಮಗಳಿಗೆ ಸಂಪರ್ಕ ಕಡಿತ
    ಕಳೆದ ಒಂದು ವಾರದಿಂದ ಹಾಸನ ಜಿಲ್ಲೆಯ ವಿವಿಧೆಡೆ ರಾತ್ರಿ ವೇಳೆ ಭಾರೀ ಮಳೆಯಾಗುತ್ತಿದೆ. ಧಾರಾಕಾರ ಮಳೆಗೆ ಕಿರುಸೇತುವೆ ಕೊಚ್ಚಿ ಹೋಗಿ ಹಲವು ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿತಗೊಂಡಿರುವ ಆಲೂರಿನ ಸಿಂಗೊಂಡನಹಳ್ಳಿ ಬಳಿ ನಡೆದಿದೆ.

    ಸಿಂಗೊಂಡನಹಳ್ಳಿ-ಪಾಳ್ಯ ನಡುವೆ ಹರಿಯುವ ಚಕ್ರತೀರ್ಥ ನದಿಯ ಕಿರು ಸೇತುವೆ ಕೊಚ್ಚಿ ಹೋಗಿದ್ದು, ಪಾಳ್ಯ, ಅರಾಳುಕೊಪ್ಪಲು, ಸಿಂಗೊಂಡನಹಳ್ಳಿ, ಹಾಚಗೊಂಡಹಳ್ಳಿ, ಮಲ್ಲೇನಹಳ್ಳಿ, ಅಬ್ಬನ ಮತ್ತು ಚಿನ್ನಳ್ಳಿ ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ರಸ್ತೆ ಸಂಪರ್ಕವಿಲ್ಲದೇ ಗ್ರಾಮಸ್ಥರ ಪರದಾಡುವಂತಾಗಿದೆ.

    ಸ್ಥಳಕ್ಕೆ ಸ್ಥಳೀಯ ಶಾಸಕ ಸಿಮೆಂಟ್ ಮಂಜು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೇತುವೆ ಪುನರ್‌ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಳಿಕ ಜೆಸಿಬಿ ಮೂಲಕ ಸೇತುವೆ ಪೈಪ್‌ಗಳಲ್ಲಿದ್ದ ಮರದ ತುಂಡು ಮತ್ತು ಕಸ ತೆರವು ಮಾಡಿ‌ ನೀರು ಹರಿದು ಹೋಗುವಂತೆ ಮಾಡಲಾಯಿತು.

  • ಗೋಲ್ಡನ್ ಪಾಸ್ ಪಡೆದು, ಸರತಿ ಸಾಲಿನಲ್ಲಿ ನಿಂತು ಹಾಸನಾಂಬೆ ದರ್ಶನ ಪಡೆದ ಧ್ರುವ ಸರ್ಜಾ

    ಗೋಲ್ಡನ್ ಪಾಸ್ ಪಡೆದು, ಸರತಿ ಸಾಲಿನಲ್ಲಿ ನಿಂತು ಹಾಸನಾಂಬೆ ದರ್ಶನ ಪಡೆದ ಧ್ರುವ ಸರ್ಜಾ

    – ಹಾಸನಾಂಬೆ ಸಾರ್ವಜನಿಕ ದರ್ಶನಕ್ಕೆ ಇಂದು ತೆರೆ
    – ನಾಳೆ ಗರ್ಭಗುಡಿ ಬಾಗಿಲು ಬಂದ್

    ಹಾಸನ: ಗೋಲ್ಡನ್ ಪಾಸ್ (Golden Pass) ಪಡೆದು, ಸರತಿ ಸಾಲಿನಲ್ಲಿ ನಿಂತು ನಟ ಧ್ರುವ ಸರ್ಜಾ (Dhruva Sarja) ಹಾಸನಾಂಬೆ ದರ್ಶನ ಪಡೆದಿದ್ದಾರೆ.

    ತಂದೆ ಹಾಗೂ ಸ್ನೇಹಿತರ ಜೊತೆ ಹಾಸನಾಂಬ ದೇವಾಲಯಕ್ಕೆ (Hasanamba Temple) ಆಗಮಿಸಿದ ಧ್ರುವ ಸರ್ಜಾ, ಸರತಿ ಸಾಲಿನಲ್ಲಿ ಬಂದು ದೇವಸ್ಥಾನದ ಬಳಿ ಬರುತ್ತಿದ್ದಂತೆ ಸರತಿ ಸಾಲಿನಿಂದ ಹೊರಬಂದು ನಂತರ ಮುಖ್ಯದ್ವಾರದ ಮೂಲಕ ದೇವಸ್ಥಾನಕ್ಕೆ ಆಗಮಿಸಿ ದೇವಿಯ ದರ್ಶನ ಪಡೆದಿದ್ದಾರೆ. ಇದನ್ನೂ ಓದಿ: ರಷ್ಯಾದ ತೈಲ ಆಮದು ಕಡಿಮೆಯಾಗಲಿದೆ, ದೀಪಾವಳಿಯಂದು ಮೋದಿ ಜೊತೆ ಮಾತನಾಡಿದ್ದೇನೆ: ಟ್ರಂಪ್‌

    ಇನ್ನು ಹಾಸನಾಂಬ ದೇವಿ ಸಾರ್ವಜನಿಕ ದರ್ಶನಕ್ಕೆ ಇಂದು ಹದಿಮೂರು ಹಾಗೂ ಕಡೆಯ ದಿನವಾಗಿದ್ದು, ಹಿಂದೆಂದೂ ಕಾಣದಷ್ಟು ಭಕ್ತಗಣ ಆಗಮಿಸಿದೆ. ಬೆಳಗ್ಗೆ 6 ಗಂಟೆಯಿಂದ ದೇವಿ ದರ್ಶನ ಆರಂಭವಾಗಿದ್ದು, ಸರತಿ ಸಾಲುಗಳಲ್ಲಿ ನಿಂತು ಸಹಸ್ರಾರು ಭಕ್ತರು ದೇವಿ ದರ್ಶನ ಪಡೆಯುತ್ತಿದ್ದಾರೆ. ಧರ್ಮ ದರ್ಶನ, 1000 ರೂ., 300 ರೂ. ಹಾಗೂ ವಿಶೇಷ ದರ್ಶನದ ಸರತಿ ಸಾಲುಗಳಲ್ಲಿ ಜನಜಂಗುಳಿ ಉಂಟಾಗಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಮಳೆ – ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಇಂದು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 7 ಗಂಟೆಯವರೆಗೆ ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸಿ ನಿರಂತರವಾಗಿ ದೇವಿಯ ದರ್ಶನ ಪಡೆದಿದ್ದಾರೆ. ಇಂದು ರಾತ್ರಿ 7ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಗರ್ಭಗುಡಿಯ ಬಾಗಿಲು ಬಂದ್ ಆಗಿರಲಿದೆ. ರಾತ್ರಿ 7 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ದೇವಿ ದರ್ಶನ ಇರುವುದಿಲ್ಲ. ಮಧ್ಯರಾತ್ರಿ 12 ಗಂಟೆಯಿಂದ ನಾಳೆ ಬೆಳಗ್ಗೆ 5 ಗಂಟೆಯವರೆಗೆ ಸ್ಥಳೀಯರಿಗೆ ಹಾಗೂ ಸಾರ್ವಜನಿಕರಿಗೆ ದರ್ಶನವಿರಲಿದೆ. ನಾಳೆ ಶಾಸ್ತ್ರೋಕ್ತವಾಗಿ ಹಾಸನಾಂಬ ದೇವಿ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಇದನ್ನೂ ಓದಿ: ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾಗಿ ಅಮಾನತುಗೊಂಡಿರುವ ಪಿಡಿಒಗೆ ಮತ್ತೊಂದು ಸಂಕಷ್ಟ