Tag: Hassan Accident

  • ಹಾಸನ ದುರಂತ | ಡ್ರೈವರ್‌ಗಳ ತಪ್ಪಿನಿಂದ ಆಕ್ಸಿಡೆಂಟ್‌ ಆದ್ರೆ, ಸರ್ಕಾರ ಹೇಗೆ ಹೊಣೆ ಆಗುತ್ತೆ? – ಸಿದ್ದರಾಮಯ್ಯ

    ಹಾಸನ ದುರಂತ | ಡ್ರೈವರ್‌ಗಳ ತಪ್ಪಿನಿಂದ ಆಕ್ಸಿಡೆಂಟ್‌ ಆದ್ರೆ, ಸರ್ಕಾರ ಹೇಗೆ ಹೊಣೆ ಆಗುತ್ತೆ? – ಸಿದ್ದರಾಮಯ್ಯ

    ಮೈಸೂರು: ಅಪಘಾತಗಳನ್ನ (Accident) ತಡೆಯಬೇಕು ಅಂತಲೇ ರಸ್ತೆ ಸುರಕ್ಷತಾ ಕಾನೂನುಗಳನ್ನ ಮಾಡಿದ್ದೇವೆ. ಆದಾಗ್ಯೂ ಡ್ರೈವರ್‌ಗಳ ತಪ್ಪುಗಳಿಂದ ಅಪಘಾತಗಳು ಸಂಭವಿಸಿದ್ರೆ ಸರ್ಕಾರ ಹೇಗೆ ಹೊಣೆಗಾರಿಗೆ ಆಗುತ್ತೆ? ಅಂತ ಸಿಎಂ ಸಿದ್ದರಾಮಯ್ಯ (Siddaramaiah) ಪ್ರಶ್ನೆ ಮಾಡಿದರು.

    ಹಾಸನ ಗಣೇಶ ವಿಸರ್ಜನೆ ಮೆರವಣಿಗೆ (Ganesh Procession) ವೇಳೆ ಟ್ರಕ್‌ ದುರಂತರದಲ್ಲಿ 9 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದರು. ಡ್ರೈವರ್‌ಗಳ ತಪ್ಪಿನಿಂದ ಆಕ್ಸಿಡೆಂಟ್‌ ಆದ್ರೆ ಸರ್ಕಾರ ಹೇಗೆ ಹೊಣೆಗಾರಿಕೆ ಆಗುತ್ತೆ? ಅಂದರು. ಇದನ್ನೂ ಓದಿ: ಹಾಸನ | ವಿಮಾನ ದುರಂತದಲ್ಲಾದ್ರೆ 1 ಕೋಟಿ ಕೊಡ್ತೀರಿ, ಬಡವರ ಜೀವಕ್ಕೆ ಬೆಲೆ ಇಲ್ವಾ? – ಸಚಿವರಿಗೆ ಜನರ ತರಾಟೆ

    ಕ್ಯಾಂಟರ್‌ ನುಗ್ಗಿ ಅಪಘಾತ ಆಗಿದೆ. ಮೃತರ ಕುಟುಂಬ ವರ್ಗಕ್ಕೆ ನಮ್ಮ ಸಂತಾಪ ಇದೆ. ‌ಘಟನೆ ತಿಳಿಯುತ್ತಿದ್ದಂತೆ ಉಸ್ತುವಾರಿ ಸಚಿವ ಕೃಷ್ಣೇಬೇರೇಗೌಡ ಅವರಿಗೆ ಸ್ಥಳಕ್ಕೆ ಭೇಟಿ ನೀಡಿ, ಕ್ರಮ ಕೈಗೊಂಡು ಪರಿಹಾರ ಘೋಷಣೆ ಮಾಡುವಂತೆ ಹೇಳಿದ್ದೆ. ಅದರಂತೆ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಹಾಸನ ಗಣೇಶ ಮೆರವಣಿಗೆ ವೇಳೆ ದುರಂತ – ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ವಿದ್ಯಾರ್ಥಿ ದುರ್ಮರಣ

    ಇದೇ ವೇಳೆ 10 ಲಕ್ಷ ರೂ. ಪರಿಹಾರ ನೀಡುವಂತೆ ಬಿಜೆಪಿ (BJP) ಆಗ್ರಹ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಎಷ್ಟು ಪರಿಹಾರ ಕೊಟ್ಟಿದ್ದರು? ಪರಿಹಾರ ಕೊಡೋದು ಮೃತರನ್ನ ವಾಪಸ್‌ ಕರೆತರ್ತೀವಿ ಅಂತಲ್ಲ. ಸರ್ಕಾರ ಮೊದಲಿನಿಂದಲೂ ಪರಿಹಾರ ಕೊಡ್ತಿದೆ. ಅಪಘಾತದಲ್ಲಿ ಮೃತಪಟ್ಟವರಿಗೆ 5 ಲಕ್ಷ ರೂ., ಆಕಸ್ಮಿಕವಾಗಿ ಮೃತಪಟ್ಟವರಿಗೆ 2 ಲಕ್ಷ ರೂ. ಕೊಡುತ್ತಿದ್ದೇವೆ. ಆರ್ಥಿಕವಾಗಿ ಹಿಂದುಳಿದವರು ಅನ್ನೋ ಕಾರಣಕ್ಕೆ ಮತ್ತು ಸಾಂತ್ವನ ಹೇಳುವ ಉದ್ದೇಶದಿಂದ ಪರಿಹಾರ ಕೊಡಲಾಗುತ್ತಿದೆ ಹೊರತು ಸಾವಿಗೆ ಸಮಾನ ಅಂತಲ್ಲ ಎಂದು ವಿವರಿಸಿದರು.

    ಮೃತದೇಹ ಹಸ್ತಾಂತರ
    ಕುಟುಂಬಗಳಿಗೆ ಮೃತದೇಹ ಹಸ್ತಾಂತರ ಈನ್ನೂ ರಾತ್ರಿಯೇ ಮರಣೋತ್ತರ ಪರೀಕ್ಷೆ ಮುಗಿಸಿ ವೈದ್ಯರ ತಂಡ ಮೃತದೇಹಗಳನ್ನು ಸಂಬಂಧಪಟ್ಟ ಕುಟುಂಬಸ್ಥರಿಗೆ ಹಸ್ತಾಂತರಿಸಿತ್ತು. ಉಳಿದ ಗಾಯಾಳುಗಳ ಚಿಕಿತ್ಸೆಗೆ ಅಗತ್ಯ ತಜ್ಞ ವೈದ್ಯರನ್ನ ನಿಯೋಜಿಸಲಾಗಿತ್ತು. ಇದನ್ನೂ ಓದಿ: ಹಾಸನ ದುರಂತ – ಮೊಸಳೆಹೊಸಳ್ಳಿ ಗ್ರಾಮದಲ್ಲಿ ಸ್ವಯಂಪ್ರೇರಿತ ಬಂದ್

  • ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಘನಘೋರ ದುರಂತ – ಸಾವಿನ ಸಂಖ್ಯೆ 9ಕ್ಕೆ ಏರಿಕೆ

    ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಘನಘೋರ ದುರಂತ – ಸಾವಿನ ಸಂಖ್ಯೆ 9ಕ್ಕೆ ಏರಿಕೆ

    – 20ಕ್ಕೂ ಹೆಚ್ಚು ಮಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ

    ಹಾಸನ: ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ ಮಾಸುವ ಮುನ್ನವೇ ಹಾಸನದಲ್ಲಿ ಗಣೇಶ ಮೆರವಣಿಗೆ (Hassan Ganesh Procession) ವೇಳೆ ಘನಘೋರ ದುರಂತವೊಂದು ಸಂಭವಿಸಿದೆ. ಗಣೇಶ ಮೆರವಣಿಗೆ ಹೋಗುತ್ತಿದ್ದವರ ಮೇಲೆ ಏಕಾಏಕಿ ಟ್ರಕ್ ಹರಿದು ಸಾವನ್ನಪ್ಪಿದವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

    ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಅಪಘಾತ ಸಂಭವಿಸಿದೆ. ಅವಘಡದಲ್ಲಿ (Accident) 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಹಾಸನ| ಗಣಪತಿ ಮೆರವಣಿಗೆ ವೇಳೆ ಭೀಕರ ದುರಂತ – ಟ್ರಕ್‌ ಹರಿದು 8 ಮಂದಿ ಸ್ಥಳದಲ್ಲೇ ಸಾವು

    ಮೃತರ ವಿವರ ಹೀಗಿದೆ…
    1. ಪ್ರವೀಣ್ ಕುಮಾರ್, ಅಂತಿಮ ಬಿಇ ವಿದ್ಯಾರ್ಥಿ, ಬಳ್ಳಾರಿ
    2. ರಾಜೇಶ ಬಿನ್ ಮೂರ್ತಿ 17 ವರ್ಷ ಕೆ.ಬಿ.ಪಾಳ್ಯ, ಹಳೆಕೋಟೆ ಹೋಬಳಿ, ಹೊಳೆನರಸೀಪುರ ತಾಲ್ಲೂಕು
    3. ಈಶ್ವರ ಬಿನ್ ರವಿಕುಮಾರ (17) ಡನಾಯಕನಹಳ್ಳಿ ಕೊಪ್ಪಲು, ಹೊಳೆನರಸೀಪುರ ತಾಲೂಕು
    4. ಗೋಕುಲ ಬಿನ್ ಸಂಪತ್ ಕುಮಾರ್ (17) ಮುತ್ತಿಗೆಹೀರಳ್ಳಿ ಗ್ರಾಮ, ಹೊಳೆನರಸೀಪುರ ತಾಲ್ಲೂಕು
    5. ಕುಮಾರ ಬಿನ್ ತಿಮ್ಮಯ್ಯ (25 ) ಕಬ್ಬಿನಹಳ್ಳಿ ಗ್ರಾಮ, ಹಳೇಕೋಟೆ ಹೋಬಳಿ, ಹೊಳೆನರಸೀಪುರ ತಾಲ್ಲೂಕು.
    6. ಪ್ರವೀಣ ಬಿನ್ ಹನುಮಯ್ಯ (25) ಕಬ್ಬಿನಹಳ್ಳಿ ಗ್ರಾಮ ಹಳೇಕೋಟೆ ಹೋಬಳಿ, ಹೊಳೆನರಸೀಪುರ ತಾಲ್ಲೂಕು.
    7. ಮಿಥುನ್ ಬಿನ್ ವಿಜಯ್ (23) ಗವಿಗಂಗಾಪುರ ಗ್ರಾಮ, ಹೊಸದುರ್ಗ ತಾಲೂಕು ಚಿತ್ರದುರ್ಗ ಜಿಲ್ಲೆ.
    8. ಸುರೇಶ ಬಿನ್ ರಮೇಶ ಬಿಇ ವಿದ್ಯಾರ್ಥಿ ಮಣೆನಹಳ್ಳಿ ಮರ್ಲೆ ಗ್ರಾಮ, ಚಿಕ್ಕಮಗಳೂರು ಜಿಲ್ಲೆ
    9. ಪ್ರಭಾಕರ್ (55) ಬಂಟರಹಳ್ಳಿ, ಹಾಸನ ತಾಲ್ಲೂಕು

    ಇನ್ನು ಮೊಸಳೆಹೊಸಳ್ಳಿ ಗ್ರಾಮಸ್ಥರು ಗ್ರಾಮದಲ್ಲಿ 25 ವರ್ಷಗಳಿಂದ ಗ್ರಾಮಸ್ತರು ಗಣಪತಿ ಕೂರಿಸುತ್ತಿದ್ದಾರೆ. ಇಂದು ಆರ್ಕೆಸ್ಟ್ರಾ ಆಯೋಜಿಸಲಾಗಿತ್ತು. ಮೆರವಣಿಗೆಯಲ್ಲಿ ಆರ್ಕೆಸ್ಟ್ರಾ ಬಳಿಗೆ ಸಾವಿರಾರು ಮಂದಿ ಬರುತ್ತಿದ್ದರು. ಈ ವೇಳೆ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಯಮಸ್ವರೂಪಿ ಟ್ರಕ್ ಹರಿದು ದುರಂತ ಸಂಭವಿಸಿದೆ. ಇದನ್ನೂ ಓದಿ: ಹಾಸನ| ಗಣೇಶ ಮೆರವಣಿಗೆ ವೇಳೆ ಭೀಕರ ಅಪಘಾತ – ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

    ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಐವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ದುರಂತ ಸಾವು ಕಂಡಿದ್ದಾರೆ. ಮೊಸಳೆಹೊಸಳ್ಳಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಈವರೆಗೆ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದ್ದು, ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. 20 ಗಾಯಾಳುಗಳಿಗೆ ಹಿಮ್ಸ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಪೈಕಿ ಮೂವರು ಐಸಿಯುನಲ್ಲಿದ್ದಾರೆ. 7 ಮಂದಿ ಗಾಯಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದನ್ನೂ ಓದಿ: ಚಾ.ನಗರ ಆಕ್ಸಿಜನ್ ದುರಂತ ಸಂತ್ರಸ್ತರಿಗೆ ಕೊನೆಗೂ ಭರವಸೆಯ ಬೆಳಕು; ಸರ್ಕಾರಿ ನೌಕರಿ ಕೊಡಲು ಸಚಿವ ಸಂಪುಟ ಅಸ್ತು

    ಏನಿದು ಘನಘೋರ ದುರಂತ?
    ಹಾಸನದಿಂದ ಹೊಳೆನರಸೀಪುರದ ಕಡೆಗೆ ಮಹಾರಾಷ್ಟ್ರಕ್ಕೆ ಸೇರಿದ ಟ್ರಕ್ ಹೋಗುತ್ತಿತ್ತು. ಬೈಕ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ಮೆರವಣಿಗೆ ಹೋಗುತ್ತಿದ್ದವರ ಮೇಲೆ ವಾಹನ ನುಗ್ಗಿದೆ. ಬೈಕ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಚಾಲಕ ಭುವನೇಶ್‌ಗೆ ಸ್ಥಳೀಯರು ಹಿಡಿದು ಥಳಿಸಿದ್ದಾರೆ. ಗಾಯಗೊಂಡ ಹೊಳೆನರಸೀಪುರ ತಾಲ್ಲೂಕಿನ ಕಟ್ಟೆಬೆಳಗುಲಿಯ ಚಾಲಕ ಭುವನೇಶ್‌ನನ್ನು ಹಾಸನದ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಡಿಸಿ ಲತಾ ಕುಮಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.

    ಪೊಲೀಸರ ವೈಫಲ್ಯದಿಂದಲೇ ದುರಂತ
    ಇದು ಪೊಲೀಸರ ವೈಫಲ್ಯದಿಂದಾಗಿರುವ ಘಟನೆ ಎಂದು ಶಾಸಕ ಎಚ್‌ಡಿ ರೇವಣ್ಣ ಆರೋಪಿಸಿದ್ದಾರೆ. ಇನ್ನು ಸಂಸದ ಶ್ರೇಯಸ್ ಪಟೇಲ್ ಪ್ರತಿಕ್ರಿಯಿಸಿ, ಇದೊಂದು ಕರಾಳ ದಿನ. ಎಲ್ಲಿಂದ ಲೋಪ ಆಗಿದೆ ಅಂತ ತಿಳಿಸಲು ಸೂಕ್ತ ತನಿಖೆಗೆ ಆಗ್ರಹಿಸುತ್ತೇನೆ ಎಂದಿದ್ದಾರೆ.

  • ಹಾಸನ| ಗಣೇಶ ಮೆರವಣಿಗೆ ವೇಳೆ ಭೀಕರ ಅಪಘಾತ – ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

    ಹಾಸನ| ಗಣೇಶ ಮೆರವಣಿಗೆ ವೇಳೆ ಭೀಕರ ಅಪಘಾತ – ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

    – ಘಟನಾ ಸ್ಥಳಕ್ಕೆ ಧಾವಿಸಿದ ಹೆಚ್‌ಡಿ ರೇವಣ್ಣ, ಸೂರಜ್‌, ನಿಖಿಲ್‌; ದುರಂತಕ್ಕೆ ಕೇಂದ್ರ ಸಚಿವ ಹೆಚ್‌ಡಿಕೆ ಸಂತಾಪ

    ಹಾಸನ: ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ಸಾಗುತ್ತಿದ್ದವರ ಮೇಲೆ ಟ್ರಕ್‌ ಹರಿದು 8 ಮಂದಿ ದಾರುಣ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ದುರಂತಕ್ಕೆ ವಿಷಾದ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ ಅವರು ಮೃತರ ಕಟುಂಬಸ್ಥರಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

    ಸಿಎಂ ಟ್ವೀಟ್‌ನಲ್ಲಿ ಏನಿದೆ?
    ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.

    ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಇದು ಅತ್ಯಂತ ನೋವಿನ ಘಳಿಗೆ. ಅಪಘಾತ ಸಂತ್ರಸ್ತ ಕುಟುಂಬಗಳ ಜೊತೆ ನಾವೆಲ್ಲರೂ ನಿಲ್ಲೋಣ ಎಂದು ಸಿಎಂ ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

    ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಐವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ದುರಂತ ಸಾವು ಕಂಡಿದ್ದಾರೆ. ಮೊಸಳೆಹೊಸಳ್ಳಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇವರು ವಿದ್ಯಾಭ್ಯಾಸ ಮಾಡುತ್ತಿದ್ದರು.

    ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪರಿಸ್ಥಿತಿ ನಿಭಾಯಿಸಲು ಪೊಲೀಸರ ಹರಸಾಹಸ ಪಡುತ್ತಿದ್ದಾರೆ. ಹಾಸನದಿಂದ ಹೊಳೆನರಸೀಪುರದ ಕಡೆಗೆ ಕಂಟೇನರ್ ವಾಹನ ಹೋಗುತ್ತಿತ್ತು. ಈ ವೇಳೆ ಬೈಕ್‌ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಮುಂದಾಗಿದ್ದಾನೆ. ಆದರೆ, ಬೈಕ್‌ಗೆ ಡಿಕ್ಕಿಯಾಗಿ ಮೆರವಣಿಗೆ ಹೋಗುತ್ತಿದ್ದವರ ಮೇಲೆ ವಾಹನ ನುಗ್ಗಿದೆ. ಬೈಕ್‌ ಸಾವರ ಕೂಡ ಮೃತಪಟ್ಟಿದ್ದಾನೆ.

    ಚಾಲಕ ಭುವನೇಶ್‌ಗೂ ಗಂಭೀರ ಗಾಯಗಳಾಗಿವೆ. ಹೊಳೆನರಸೀಪುರ ತಾಲ್ಲೂಕಿನ ಕಟ್ಟೆಬೆಳಗುಲಿಯ ಚಾಲಕ ಭುವನೇಶ್‌ನನ್ನು ಹಾಸನದ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

    ಘಟನಾ ಸ್ಥಳಕ್ಕೆ ಜೆಡಿಎಸ್‌ ನಾಯಕ ನಿಖಿಲ್‌ ಕುಮಾರಸ್ವಾಮಿ ತೆರಳಿ ಪರಿಶೀಲನೆ ನಡೆಸಿದ್ದಾರೆ. ದುರಂತಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದಾರೆ.

  • ಇಂದು ಟ್ರೈನಿಂಗ್‌ ಮುಕ್ತಾಯ.. ನಾಳೆ DySP ಆಗಿ ಚಾರ್ಜ್‌ ತೆಗೆದುಕೊಳ್ಳಬೇಕಿದ್ದ ಅಧಿಕಾರಿ ದುರಂತ ಅಂತ್ಯ

    ಇಂದು ಟ್ರೈನಿಂಗ್‌ ಮುಕ್ತಾಯ.. ನಾಳೆ DySP ಆಗಿ ಚಾರ್ಜ್‌ ತೆಗೆದುಕೊಳ್ಳಬೇಕಿದ್ದ ಅಧಿಕಾರಿ ದುರಂತ ಅಂತ್ಯ

    – ಕರ್ನಾಟಕ ಕೇಡರ್‌ನಲ್ಲಿ ರಾಜ್ಯಕ್ಕೆ ಆಯ್ಕೆಯಾಗಿದ್ದ ಹರ್ಷವರ್ಧನ್
    – ವೃತ್ತಿ ಜೀವನದ ಆರಂಭದಲ್ಲೇ ವಿಧಿಯಾಟ

    ಹಾಸನ: ಇಂದು ಟ್ರೈನಿಂಗ್‌ ಮುಗಿದಿತ್ತು. ನಾಳೆ ಡಿವೈಎಸ್‌ಪಿಯಾಗಿ ಅಧಿಕಾರ ಸ್ವೀಕರಿಸಬೇಕಿತ್ತು. ಇಂತಹ ಹೊತ್ತಿನಲ್ಲೇ ಅಧಿಕಾರಿ ಬಾಳಲ್ಲಿ ವಿಧಿಯಾಟವಾಡಿದೆ. ಡ್ಯೂಟಿ ರಿಪೋರ್ಟ್‌ಗೆ ಬಂದ ದಿನವೇ ಪ್ರೊಬೇಷನರಿ ಐಪಿಎಸ್‌ (IPS Probationer) ಅಧಿಕಾರಿ ಹರ್ಷವರ್ಧನ್, ಹಾಸನ ಬಳಿ (Hassan Accident) ಭೀಕರ ರಸ್ತೆ ಅಪಘಾತದಲ್ಲಿ ದುರಂತ ಅಂತ್ಯ ಕಂಡಿದ್ದಾರೆ.‌

    ಹರ್ಷವರ್ಧನ್‌ ಅವರು ಮೈಸೂರಿನಲ್ಲಿರುವ ಕರ್ನಾಟಕದ ಪೊಲೀಸ್ ಅಕಾಡೆಮಿಯಲ್ಲಿ ಟ್ರೈನಿಂಗ್ ಮುಗಿಸಿದ್ದರು. ಬಳಿಕ ಐಜಿಪಿ ಬೋರಲಿಂಗಯ್ಯ ರಿಪೋರ್ಟ್ ಮಾಡಿಕೊಂಡಿದ್ದರು. ನಾಳೆ ಡಿವೈಎಸ್ಪಿ ಆಗಿ ಚಾರ್ಜ್ ತೆಗೆದುಕೊಳ್ಳಬೇಕಿತ್ತು. ಅದು ಸಾಧ್ಯವಾಗಲಿಲ್ಲ. ಇದನ್ನೂ ಓದಿ: ಹಾಸನದಲ್ಲಿ ಭೀಕರ ಅಪಘಾತ – ಐಪಿಎಸ್ ಅಧಿಕಾರಿ ದುರ್ಮರಣ

    ಮೂಲತಃ ಬಿಹಾರ ಮೂಲದ ಹರ್ಷವರ್ಧನ್ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ವಾಸವಾಗಿದ್ದರು. ಮಧ್ಯಪ್ರದೇಶದ ಐಇಟಿಯಲ್ಲಿ ಡಿಎವಿಇ ಎಂಜಿನಿಯರಿಂಗ್ ಪದವಿ ಮಾಡಿದ್ದರು. 2022-23 ರ ಐಪಿಎಸ್ ಬ್ಯಾಚ್‌ನಲ್ಲಿ ತೇರ್ಗಡೆ ಹೊಂದಿ ಕರ್ನಾಟಕ ಕೇಡರ್‌ನಲ್ಲಿ ರಾಜ್ಯಕ್ಕೆ ಆಯ್ಕೆಯಾಗಿದ್ದರು.

    2022 ರ ಯುಪಿಎಸ್‌ಸಿ ಪರೀಕ್ಷೆಯಲ್ಲಿ 153 ನೇ ರ‍್ಯಾಂಕ್‌ನಲ್ಲಿ ಪಾಸ್ ಆಗಿದ್ದರು. ಪ್ರತಿಭಾವಂತ ವಿದ್ಯಾರ್ಥಿಯಾಗಿ ಮೊದಲ ಪ್ರಯತ್ನದಲ್ಲೇ ಯುಪಿಎಸ್‌ಸಿ ಪಾಸ್ ಮಾಡಿದ್ದರು. ಇದನ್ನೂ ಓದಿ: ಪಶ್ಚಿಮ ಘಟ್ಟ ಭಾಗದಲ್ಲಿ ಭೂಕಂಪ ಅನುಭವ – ಜಿಲ್ಲಾಧಿಕಾರಿಗಳ ಸ್ಪಷ್ಟನೆ ಏನು?

  • ಹಾಸನದಲ್ಲಿ ಕಾರು ಅಪಘಾತ – ಮೃತರ ಇಬ್ಬರು ಮಕ್ಕಳ ಶೈಕ್ಷಣಿಕ ಜವಾಬ್ದಾರಿ ಹೊತ್ತ ಶಾಸಕ ಪ್ರದೀಪ್ ಈಶ್ವರ್

    ಹಾಸನದಲ್ಲಿ ಕಾರು ಅಪಘಾತ – ಮೃತರ ಇಬ್ಬರು ಮಕ್ಕಳ ಶೈಕ್ಷಣಿಕ ಜವಾಬ್ದಾರಿ ಹೊತ್ತ ಶಾಸಕ ಪ್ರದೀಪ್ ಈಶ್ವರ್

    ಚಿಕ್ಕಬಳ್ಳಾಪುರ: ಹಾಸನದ (Hassan Accident) ಬಳಿ ಭಾನುವಾರ ಬೆಳಗ್ಗೆ ಸಂಭವಿಸಿದ ಕಾರು ಅಪಘಾತದಲ್ಲಿ ಆರು ಮಂದಿ ದಾರುಣವಾಗಿ ಸಾವನ್ನಪ್ಪಿದ್ದರು. ಮೃತರ ಇಬ್ಬರು ಮಕ್ಕಳ ಶೈಕ್ಷಣಿಕ ಜವಾಬ್ದಾರಿಯನ್ನು ಶಾಸಕ ಪ್ರದೀಪ್‌ ಈಶ್ವರ್‌ (Pradeep Eshwar) ಹೊತ್ತುಕೊಂಡಿದ್ದಾರೆ.

    ಮೃತರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕಾರಹಳ್ಳಿ ಗ್ರಾಮದ ನಾರಾಯಣಪ್ಪ, ಸುನಂದ ಹಾಗೂ ನೇತ್ರ (ಸುನಂದಾರ ಸಹೋದರಿ), ಆಕೆಯ ಗಂಡ ರವಿಕುಮಾರ್ ಸೇರಿದಂತೆ ಇವರ ಎರಡು ವರ್ಷದ ಮಗ ಚೇತನ್ ಹಾಗೂ ಕಾರು ಚಾಲಕ ಚಿಕ್ಕಬಳ್ಳಾಪುರ ತಾಲೂಕಿನ ಕೊಂಡೆನಹಳ್ಳಿ ಗ್ರಾಮದ ಗುಣಶೇಖರ್ ಮೃತ ದುರ್ದೈವಿಗಳಾಗಿದ್ದಾರೆ. ಇದನ್ನೂ ಓದಿ: ಹಾಸನದಲ್ಲಿ ಕಾರು, ಟ್ರಕ್ ನಡುವೆ ಭೀಕರ ಅಪಘಾತ – ಚಿಕ್ಕಬಳ್ಳಾಪುರ ಮೂಲದ 6 ಮಂದಿ ದಾರುಣ ಸಾವು

    ಮೃತ ಸುನಂದ ಹಾಗೂ ನೇತ್ರ ಇಬ್ಬರೂ ಕೂಡ ಅಕ್ಕತಂಗಿಯರಾಗಿದ್ದು, ಇವರ ತವರು ಮನೆ ಚಿಕ್ಕಬಳ್ಳಾಪುರ ತಾಲೂಕಿನ ಚಿಗಟೇನಳ್ಳಿ ಗ್ರಾಮ ಆಗಿತ್ತು. ಮೃತ ನೇತ್ರ ಹಾಗೂ ರವಿಕುಮಾರ್ ದಂಪತಿಗೆ ಮೂರು ಜನ ಮಕ್ಕಳಿದ್ದಾರೆ. ಅಪಘಾತದಲ್ಲಿ ಮಗ ಚೇತನ್, ತಂದೆ-ತಾಯಿ ಜೊತೆ ಮೃತಪಟ್ಟಿದ್ದಾನೆ. ಮಕ್ಕಳಾದ ಪಲ್ಲವಿ ಹಾಗೂ ಪೂರ್ಣಿಮಾರನ್ನ ತವರು ಮನೆ ಚಿಗಟೇನಹಳ್ಳಿಯಲ್ಲಿ ಬಿಟ್ಟು ಹೋಗಿದ್ದರು.

    ವಿಷಯ ತಿಳಿದು ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಚಿಗಟೇನಹಳ್ಳಿ ಗ್ರಾಮದ ನೇತ್ರಾರ ತವರು ಮನೆಗೆ ಭೇಟಿ ನೀಡಿ ಮಕ್ಕಳಿಬ್ಬರನ್ನು ಸಂತೈಸಿದ್ದಾರೆ. ಈ ವೇಳೆ ಮೃತರ ಇಬ್ಬರು ಮಕ್ಕಳ ಹೆಸರಿನಲ್ಲಿ ಅಂಚೆ ಕಚೇರಿಯಲ್ಲಿ ತಲಾ ಒಂದು ಲಕ್ಷ ಠೇವಣಿ ಇಡುವ ಭರವಸೆ ಹಾಗೂ ಸರ್ಕಾರದಿಂದ ಎರಡು ಲಕ್ಷ ಪರಿಹಾರ ಕೊಡಿಸುವುದಾಗಿ ಶಾಸಕ ಪ್ರದೀಪ್‌ ಈಶ್ವರ್‌ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಬೆಂಗಳೂರಿಗೂ ಒಂದು ಪರಿಷತ್ ಸ್ಥಾನ ನೀಡಬೇಕು: ರಾಮಲಿಂಗಾರೆಡ್ಡಿ

    ಇಬ್ಬರು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಶಾಸಕ ಪ್ರದೀಪ್ ಈಶ್ವರ್ ದತ್ತು ಪಡೆದಿದ್ದು, ಮಕ್ಕಳ ಶಿಕ್ಷಣದ ಸಂಪೂರ್ಣ ಜವಾಬ್ದಾರಿಯನ್ನ ಹೊತ್ತುಕೊಂಡಿದ್ದಾರೆ. ಮಕ್ಕಳು ಮದುವೆ ವಯಸ್ಸಿಗೆ ಬಂದ ನಂತರ ಅಣ್ಣನ ಸ್ಥಾನದಲ್ಲಿ ನಿಂತು ತಾನು ಇಬ್ಬರೂ ಹೆಣ್ಣುಮಕ್ಕಳ ಮದುವೆಯನ್ನು ಮಾಡಿಸುವುದಾಗಿಯೂ ಭರವಸೆ ನೀಡಿದ್ದಾರೆ.

  • ಕಾರು, ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ – ಕಾರಿನಲ್ಲಿದ್ದ ನಾಲ್ವರು ಯುವಕರು ದುರ್ಮರಣ

    ಕಾರು, ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ – ಕಾರಿನಲ್ಲಿದ್ದ ನಾಲ್ವರು ಯುವಕರು ದುರ್ಮರಣ

    ಹಾಸನ: ಆಲೂರು ತಾಲ್ಲೂಕಿನ ಈಶ್ವರಹಳ್ಳಿ ಕೂಡಿಗೆ ಬಳಿ ಶುಕ್ರವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

    ಇನ್ನೋವಾ ಕಾರಿಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಈ ದಾರುಣ ಘಟನೆ ಸಂಭವಿಸಿದೆ. ಮೃತರನ್ನು ಕುಪ್ಪಳ್ಳಿ ಗ್ರಾಮದ ಚೇತನ್ (23), ತಟ್ಟೆಕೆರೆ ಗ್ರಾಮದ ಪುರುಷೋತ್ತಮ (28), ಗುಡ್ಡೇನಹಳ್ಳಿ ಗ್ರಾಮ ಅಶೋಕ್ (35) ಹಾಗೂ ಚಿಗಳೂರು ಪಾಳ್ಯದ ದಿನೇಶ್ (30) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಸಂಚಾರ ನಿಯಮ ಉಲ್ಲಂಘಿಸಿದ ಬೈಕ್ ಸವಾರನಿಂದ ಲಂಚ ಪಡೆದ ಆರೋಪ – ಎಎಸ್‌ಐ ಅಮಾನತು

    ಮೃತದೇಹಗಳನ್ನು ಆಲೂರು ತಾಲ್ಲೂಕು ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಆಲೂರು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಮೃತರಲ್ಲಿ ಅಶೋಕ ವರ್ಕ್‌ಶಾಪ್ ನಡೆಸುತ್ತಿದ್ದ. ಎಂಟು ವರ್ಷದ ಹಿಂದೆ ಈತನ ಸಹೋದರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ. ಅವರ ಕುಟುಂಬದ ಜವಾಬ್ದಾರಿಯನ್ನು ಅಶೋಕ ನಿರ್ವಹಿಸುತ್ತಿದ್ದರು. ಇನ್ನೂ ದಿನೇಶ್ ಬೆಂಗಳೂರಿನಲ್ಲಿ ಕೋಳಿ ಅಂಗಡಿ ನಡೆಸುತ್ತಿದ್ದ ಎಂದು ತಿಳಿದು ಬಂದಿದೆ.

    ಇಂದು ಸಂಜೆ 5 ಗಂಟೆ ಸುಮಾರಿಗೆ ಇನ್ನೋವಾ ಕಾರು ಹಾಸನ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿತ್ತು. ಅದೇ ವೇಳೆಗೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರಿಗೆ ಸೇರಿದ ಟಿಪ್ಪರ್ ಲಾರಿ ಎದುರು ಕಡೆಯಿಂದ ಬರುತ್ತಿತ್ತು. ಈ ವೇಳೆ ಇನ್ನೋವಾ ಚಾಲಕ ಮುಂದಿನ ವಾಹನವನ್ನು ಓವರ್‌ಟೇಕ್ ಮಾಡಲು ಹೋಗಿ ಟಿಪ್ಪರ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ಡಿಕ್ಕಿ ರಭಸಕ್ಕೆ ಇನ್ನೋವಾ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಇದನ್ನೂ ಓದಿ: ಕುರುಡನ ಹೆಗಲ ಮೇಲೆ ಕುಂಟನ ಸವಾರಿಯಂತಿದೆ ಜೆಡಿಎಸ್‌-ಬಿಜೆಪಿ ಹೊಂದಾಣಿಕೆ: ಕಾಲೆಳೆದ ಕಾಂಗ್ರೆಸ್‌

    ಕಾರಿನೊಳಗೆ ಸಿಲುಕಿಕೊಂಡಿದ್ದ ಮೃತದೇಹಗಳನ್ನು ಹೊರ ತೆಗೆಯಲು ಸ್ಥಳೀಯರು ಪರದಾಡಬೇಕಾಯಿತು. ಕೆಲವರು ಹಾರೆ ಮೊದಲಾದ ವಸ್ತುಗಳನ್ನು ತಂದು ಡೋರ್ ಹಾಗೂ ಕಿಟಿಕಿ ಒಡೆದು ಮೃತದೇಹಗಳನ್ನು ಹೊರ ತೆಗೆದರು. ಭೀಕರ ಅಪಘಾತದಿಂದಾಗಿ ಕೆಲಹೊತ್ತು ಸಂಚಾರಕ್ಕೆ ಅಡೆತಡೆ ಉಂಟಾಗಿತ್ತು. ರಾಷ್ಟ್ರೀಯ ಹೆದ್ದಾರಿ 75 ರ ರಸ್ತೆ ಅಗಲೀಕರಣ ಕಾಮಗಾರಿ ಕಳೆದ ಆರೇಳು ವರ್ಷಗಳಿಂದ ಮಂದಗತಿಯಲ್ಲಿ ಸಾಗುತ್ತಿರುವುದೇ ಈ ರೀತಿಯ ದುರಂತಕ್ಕೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]