– ಐಸಿಯುನಲ್ಲಿದ್ದ ಮತ್ತೋರ್ವ ವಿದ್ಯಾರ್ಥಿ ಮೈಸೂರಿಗೆ ಶಿಫ್ಟ್
ಹಾಸನ: ಮೊಸಳೆಹೊಸಳ್ಳಿಯಲ್ಲಿ (Mosale Hosalli) ಟ್ರಕ್ ಹರಿದು ಸಾವನ್ನಪ್ಪಿದ (Hassan Tragedy) ಸಂತ್ರಸ್ತರ ಮನೆಗಳಿಗೆ ಕೆಂಗೇರಿಯ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಭೇಟಿ ನೀಡಿ ಸಾಂತ್ವನ ಹೇಳಿದರು.
ಕಬ್ಬಿನಹಳ್ಳಿ ಗ್ರಾಮದ ಪ್ರವೀಣ್, ಕುಮಾರ್ ಮನೆಗೆ ಶ್ರೀಗಳು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇದೇ ವೇಳೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚಿನ ಪರಿಹಾರ ನೀಡುವಂತೆ ಒತ್ತಾಯಿಸಿದರು. ಇದನ್ನೂ ಓದಿ: ಹಾಸನ ದುರಂತ – ಕಂಬನಿ ಮಿಡಿದ ಟ್ರಕ್ ಚಾಲಕನ ಗ್ರಾಮಸ್ಥರು
ವಿದ್ಯಾರ್ಥಿ ಮೈಸೂರಿಗೆ ಶಿಫ್ಟ್
ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮತ್ತೊಬ್ಬ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ನಗರದ ಹಿಮ್ಸ್ ಆಸ್ಪತ್ರೆಯಿಂದ ಮೈಸೂರಿಗೆ ಶಿಫ್ಟ್ ಮಾಡಲಾಗಿದೆ. ಆಕಾಶ್ (21) ಗಂಭೀರ ಗಾಯಗೊಂಡಿದ್ದು, ಅವರನ್ನು ಹಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಜೆಎಸ್‌ಎಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು. ಈತ ಮೊಸಳೆಹೊಸಳ್ಳಿಯ ಇಂಜಿನಿಯರಿಂಗ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದಾನೆ. ಇದನ್ನೂ ಓದಿ: Hassan Tragedy | ಹೆಚ್ಚಿನ ಪರಿಹಾರ ಕೊಡದಿದ್ರೆ ರಾಜೀನಾಮೆ ಕೊಟ್ಟು ಹೋಗಿ – ಸಿಎಂ ವಿರುದ್ಧ ಶೋಭಾ ಕರಂದ್ಲಾಜೆ ಕಿಡಿ
ಹಾಸನ: ಮೊಸಳೆಹೊಸಳ್ಳಿಯಲ್ಲಿ (Mosalehosalli) ನಡೆದ ಭೀಕರ ದುರಂತದಲ್ಲಿ ಹತ್ತು ಜನ ಸಾವನ್ನಪಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಟ್ರಕ್ ಚಾಲಕ ಭುವನೇಶ್ ಬಗ್ಗೆ ಆತನ ಗ್ರಾಮಸ್ಥರು ಮಾಹಿತಿ ಹಂಚಿಕೊಂಡಿದ್ದಾರೆ. ಇದೇ ವೇಳೆ ಆತನಿಂದ ಆದ ಈ ದುರಂತಕ್ಕೆ ಕಂಬನಿ ಮಿಡಿದಿದ್ದಾರೆ.
ಗ್ರಾಮದಲ್ಲಿ ಸ್ವಂತ ಮನೆ ಹಾಗೂ ಸ್ವಲ್ಪ ಜಮೀನು ಹೊಂದಿರುವ ಭುವನೇಶ್ ಕುಟುಂಬ, ಸೆ.12 ರಂದು ಕೆಲಸ ಮುಗಿಸಿ ಹೊಳೆನರಸೀಪುರದ ಮನೆಗೆ ಹೊರಡುವ ವೇಳೆ ಈ ದುರಂತ ಸಂಭವಿಸಿತ್ತು. ದುರಂತದಲ್ಲಿ ಹತ್ತು ಮಂದಿ ಸಾವನ್ನಪ್ಪಿದ್ದರು. ಅಪಘಾತದಲ್ಲಿ 22 ಮಂದಿ ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅದರಲ್ಲಿ ಓರ್ವನ ಸ್ಥಿತಿ ಗಂಭಿರವಾಗಿದೆ.
– ರಾಜ್ಯದಲ್ಲಿ ಗಲಾಟೆಗಳಿಗೆ ಸಿದ್ದರಾಮಯ್ಯ ಅಹಂಕಾರವೇ ಕಾರಣ ಎಂದ ಕೇಂದ್ರ ಸಚಿವೆ
ಶಿವಮೊಗ್ಗ: ಮೊಸಳೆಹೊಸಳ್ಳಿಯಲ್ಲಿ (MosaleHosalli) ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಹೆಚ್ಚಿನ ಪರಿಹಾರ ನೀಡಬೇಕು. ಹೆಚ್ಚಿನ ಪರಿಹಾರ ಕೊಡಲು ಸಾಧ್ಯವಾಗದಿದ್ದರೆ ರಾಜೀನಾಮೆ ಕೊಟ್ಟುಹೋಗಿ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ವಾಗ್ದಾಳಿ ನಡೆಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದ್ದಾರೆ. ಈ ವೇಳೆ, ರಾಜ್ಯದಲ್ಲಿ ಹಿಂದೂ ವಿರೋಧಿ ಸರ್ಕಾರ ಆಡಳಿತ ನಡೆಸುತ್ತಿದೆ. ಸರ್ಕಾರ ಒಂದು ಸಮುದಾಯದ ಓಲೈಕೆಗೆ ಮುಂದಾಗಿದೆ. ಈ ಸರ್ಕಾರಕ್ಕೆ ಅಲ್ಪಸಂಖ್ಯಾತರ ನೋವು ಕಾಣುತ್ತಿದೆ. ಬೇರೆ ಸಮುದಾಯದ ನೋವುಗಳು ಕಾಣುತ್ತಿಲ್ಲ. ಕೇರಳದ ಆನೆಯಿಂದ ಸಾವನಪ್ಪಿದವರಿಗೆ ಪರಿಹಾರ ನೀಡುತ್ತಾರೆ. ಆರ್‌ಸಿಬಿ ವಿಜಯೋತ್ಸವದಲ್ಲಿ ಸತ್ತವರಿಗೆ ಹೆಚ್ಚಿನ ಪರಿಹಾರ ನೀಡುತ್ತಾರೆ. ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಮೃತಪಟ್ಟವರಿಗೆ ಯಾಕೆ ಹೆಚ್ಚಿನ ಪರಿಹಾರ ಇಲ್ಲ ಎಂದು ಅವರು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಹಾಸನ ದುರಂತ – ಮೃತ ಎಂಜಿನಿಯರಿಂಗ್ ವಿದ್ಯಾರ್ಥಿ ಕುಟುಂಬಕ್ಕೆ ನೆರವಾದ ಹೆಚ್‌ಡಿಡಿ
– ಜೆಡಿಎಸ್‌ನಿಂದ 1 ಲಕ್ಷ ರೂ. ಪರಿಹಾರ ಘೋಷಣೆ; ವಿದ್ಯಾಭ್ಯಾಸ ಖರ್ಚು ಭರಿಸುವ ಭರವಸೆ
ಹಾಸನ: ಇಲ್ಲಿನ ಮೊಸಳೆಹೊಸಳ್ಳಿಯಲ್ಲಿ ನಡೆದ ಅಪಘಾತ ಪ್ರಕರಣ ನಿಜಕ್ಕೂ ಘನಘೋರ ದುರಂತ. ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಚಂದನ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಈ ಮೂಲಕ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಇತ್ತ ಟ್ರಕ್ ಡೈವರ್‌ಗೆ ಆಸ್ಪತ್ರೆಯಲ್ಲಿ (Hospital) ಚಿಕಿತ್ಸೆ ಮುಂದುವರೆದ್ದು, ಆತನ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.
ಈ ನಡುವೆ ನಿನ್ನೆ ಸಂಜೆ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದ ಹೆಚ್.ಡಿ ದೇವೇಗೌಡ (HD Devegowda) ಅವರು ಇಂದು ಮೃತರ ಕುಟುಂಬಕ್ಕೆ ತೆರಳಿ ಸಾಂತ್ವನ ಹೇಳಿದ್ದಾರೆ. ಜೊತೆಗೆ ಜೆಡಿಎಸ್ ಪಕ್ಷದಿಂದ ಪರಿಹಾರ ಮೊತ್ತವನ್ನೂ ಘೋಷಣೆ ಮಾಡಿದ್ದಾರೆ. ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದಿದ್ದಾರೆ. ಜೊತೆಗೆ ರಾಜ್ಯ ಸರ್ಕಾರ ಪರಿಹಾರದ ಮೊತ್ತ ಹೆಚ್ಚಿಸುವಂತೆ ಸರ್ಕಾರಕ್ಕೆ ಆಗ್ರಹ ಕೂಡ ಮಾಡಿದ್ದಾರೆ. ಇದನ್ನೂ ಓದಿ: Hassan Tragedy | ಟ್ರಕ್ ಅಪಘಾತ ನಡೆದ ಜಾಗದಲ್ಲಿ ಹಂಪ್ಸ್ ನಿರ್ಮಿಸಲು ತೀರ್ಮಾನ
ವ್ಹೀಲ್ ಚೇರ್‌ನಲ್ಲೇ ಸ್ಥಳಕ್ಕೆ ಭೇಟಿ
ಶನಿವಾರ ಸಂಜೆ ಹಾಸನಕ್ಕೆ (Hassan) ಭೇಟಿ ನೀಡಿದ ಮಾಜಿ ಪ್ರಧಾನಿ ದೇವೇಗೌಡರು. ವ್ಹೀಲ್‌ಚೇರಲ್ಲೇ ತೆರಳಿ ಹಿಮ್ಸ್‌ಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದರು. ಬಳಿಕ ಮಾತನಾಡಿದ ಹೆಚ್.ಡಿ ದೇವೇಗೌಡರು, ಜೆಡಿಎಸ್ ಪಕ್ಷದ ವತಿಯಿಂದ ಮೃತ ಕುಟುಂಬಸ್ಥರಿಗೆ 1 ಲಕ್ಷ ಪರಿಹಾರ ಘೋಷಣೆ ಮಾಡಿದರು. ಪೊಲೀಸರು ಮುಂಜಾಗ್ರತೆ ವಹಿಸಿದ್ದರೇ ಈ ಅನಾಹುತ ತಡೆಯಬಹುದಿತ್ತು ಎಂದರಲ್ಲದೇ ರಾಜ್ಯ ಸರ್ಕಾರ ಪರಿಹಾರದ ಮೊತ್ತ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.
ಅಲ್ಲದೇ ಇಂದು ಮೊಸಳೆಹೊಸಳ್ಳಿಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಬಾಲಕರ ವಿದ್ಯಾರ್ಥಿ ನಿಲಯ ಕಟ್ಟಡದ ಕಾಮಗಾರಿ ವೀಕ್ಷಿಸಿದ ಹೆಚ್‌ಡಿಡಿ ಬಳಿಕ ಟ್ರಕ್ ಹರಿದು ಮೃತಪಟ್ಟ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಈ ವೇಳೆ ಶಾಸಕರಾದ ಹೆಚ್.ಡಿ ರೇವಣ್ಣ, ಹೆಚ್.ಪಿ ಸ್ವರೂಪ್‌ಪ್ರಕಾಶ್ ಸಾಥ್ ನೀಡಿದ್ದಾರೆ. ಇದನ್ನೂ ಓದಿ: ಹಾಸನ ಟ್ರಕ್ ದುರಂತಕ್ಕೆ 10 ಬಲಿ – ಗಾಯಾಳುಗಳ ಆರೋಗ್ಯ ವಿಚಾರಿಸಲು ವ್ಹೀಲ್‌ಚೇರ್‌ನಲ್ಲೇ ಆಸ್ಪತ್ರೆಗೆ ಬಂದ ಹೆಚ್‌ಡಿಡಿ
ಡಿಜೆಗೆ ಕುಣಿಯಲು ಬಂದು ಮಸಣ ಸೇರಿದ ಯುವಕರು
ಗಣೇಶ್ ಸಂಭ್ರಮ ನೋಡಲು ಬಂದವರು ನೋಡ ನೋಡ್ತಿದ್ದಂತೆ ಹೆಣವಾಗಿದ್ದು, ನಿಜಕ್ಕೂ ಘೋರ ದುರಂತವೇ ಸರಿ. ಟ್ರಕ್ ಹರಿದ ರಭಸಕ್ಕೆ ಸ್ಥಳದಲ್ಲೇ 9 ಜನರು ಸಾವನಪ್ಪಿದ್ದರೇ. ಗಂಭೀರವಾಗಿ ಗಾಯಗೊಂಡಿದ್ದ ಹಾಸನದ ಶಿವಯ್ಯನ ಕೊಪ್ಪಲು ಗ್ರಾಮದ 28 ವರ್ಷದ ಯುವಕನ ಬ್ರೈನ್ ಡೆಡ್ ಆಗಿತ್ತು. ಹಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ಚಂದನ್ ಚಿಕಿತ್ಸೆ ಫಲಕಾರಿಯಾಗದೇ ಕೊನೆ ಉಸಿರೆಳೆದಿದ್ದಾನೆ. ಪುತ್ರನ ಸಾವಿನ ಸುದ್ದಿ ತಿಳಿದು ಆಸ್ಪತ್ರೆ ಅವರಣದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಆಟೋ ಚಾಲಕನಾಗಿದ್ದ ಚಂದನ್‌ಗೆ ಇನ್ನೂ ಮದುವೆಯಾಗಿಲ್ಲ.. ಕುಟುಂಬಕ್ಕೆ ಅಧಾರ ಸ್ತಂಭವಾಗಿದ್ದ, ತನ್ನ ಗ್ರಾಮದಿಂದ ಮೊಸಳೆಹೊಸಳ್ಳಿ ಬಾಡಿಗಿಗೆ ಬಂದಿದ್ದ ಚಂದನ ಟೀ ಕುಡಿಯಲು ಆಟೋ ನಿಲ್ಲಿಸಿ. ಕುತೂಹಲಕ್ಕೆ ಮೆರವಣಿಗೆ ನೋಡಲು ನಿಂತವನು ಮಸಣ ಸೇರಿದ್ದಾನೆ.
ಅಪಘಾತದಲ್ಲಿ ಸಾವನಪ್ಪಿದ ಹೊಳೆನರಸೀಪುರ ತಾಲೂಕು ಡನಾಯಕನಹಳ್ಳಿ ಕೊಪ್ಪಲು ನಿವಾಸಿ ಈಶ್ವರ ಬಿನ್ ರವಿಕುಮಾರ್ ಅಂತ್ಯಕ್ರಿಯೆ ಸ್ವಗ್ರಾಮದಲ್ಲಿ ನೇರವೇರಿದೆ. ಎಸ್‌ಎಸ್‌ಎಲ್‌ಸಿಯಲ್ಲಿ 95% ಅಂಕ ಪಡೆದು, ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದ ಈಶ್ವರ. ಮೆರವಣಿಗೆ ನೋಡಲು ಬಂದು ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಆಟೋ ಓಡಿಸಿಕೊಂಡು ಗ್ರಾಮದಲ್ಲಿ ಜೀವನ ಸಾಗಿಸುತ್ತಿದ್ದ ಈಶ್ವರ ಪೋಷಕರು. ಮಗನನ್ನು ಚನ್ನಾಗಿ ಓದಿಸುವ ಆಕಾಂಕ್ಷೆ ಹೊಂದಿದ್ದರು. ಇದನ್ನೂ ಓದಿ: Hassan Tragedy | ಮೃತರೆಲ್ಲ ಹಳ್ಳಿಯವ್ರು, 10 ಲಕ್ಷ ಪರಿಹಾರ ಕೊಟ್ರೆ ಒಳ್ಳೆಯದು – ಸರ್ಕಾರಕ್ಕೆ ಆರ್.ಅಶೋಕ್ ಮನವಿ
ಹಾಸನ: ಮೊಸಳೆಹೊಸಳ್ಳಿ (MosaleHosalli) ಗ್ರಾಮದಲ್ಲಿ ಗಣೇಶ ಮೆರವಣಿಗೆ ವೇಳೆ 10 ಜನರ ಸಾವಿಗೆ ಕಾರಣನಾಗಿದ್ದ ಟ್ರಕ್ ಚಾಲಕನನ್ನು ಬಿಜಿಎಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
ಟ್ರಕ್ ಚಾಲಕ ಭುವನೇಶ್‍ನನ್ನು ಶನಿವಾರ ರಾತ್ರಿಯೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ಪೊಲೀಸರು ಆತನನ್ನು ಕರೆದೊಯ್ದು, ಇಂದು (ಸೆ.14) ನ್ಯಾಯಾಧೀಶರ ಮುಂದೆ ಹಾಜರುಪಡಿಸಲು ತೀರ್ಮಾನಿಸಿದ್ದರು. ಅಪಘಾತದಲ್ಲಿ (Accident) ಚಾಲಕನಿಗೆ ಹೊಟ್ಟೆ ಹಾಗೂ ಎದೆಯ ಭಾಗಕ್ಕೆ ಪೆಟ್ಟಾಗಿತ್ತು. ಆತನನ್ನು ನಾಗಮಂಗಲದ ಬೆಳ್ಳೂರಿನ ಬಿಜಿಎಸ್ ಆಸ್ಪತ್ರೆಗೆ ಚಿಕಿತ್ಸೆ ಕೊಡಿಸಲಾಗಿತ್ತು. ಆರೋಗ್ಯದಲ್ಲಿ ಸುಧಾರಣೆಯಾದ ಹಿನ್ನೆಲೆ ಡಿಸ್ಚಾರ್ಜ್ ಮಾಡಲಾಗಿತ್ತು. ಇದನ್ನೂ ಓದಿ: Hassan Tragedy | ಟ್ರಕ್ ಅಪಘಾತ ನಡೆದ ಜಾಗದಲ್ಲಿ ಹಂಪ್ಸ್ ನಿರ್ಮಿಸಲು ತೀರ್ಮಾನ
ಪೊಲೀಸರು ಆತನನ್ನು ವಶಕ್ಕೆ ಪಡೆದ ಬಳಿಕ ಎದೆನೋವು, ಆರೋಗ್ಯದ ಸಮಸ್ಯೆ ಆಗುತ್ತಿದೆ ಎಂದು ಹೇಳಿಕೊಂಡಿದ್ದಾನೆ. ಆತನನ್ನು ಮತ್ತೆ ಪೊಲೀಸರು ಹಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
– ಹೆಚ್ಚಿನ ಪರಿಹಾರದ ಬಗ್ಗೆ ಸಿಎಂ ಜೊತೆ ಮಾತನಾಡುತ್ತೇನೆ – ಇದು ಯಾರ ವೈಫಲ್ಯ ಎಂದು ಹೇಳೊಕ್ಕಾಗಲ್ಲ
ಹಾಸನ: ಮೃತರ ಕುಟುಂಬಸ್ಥರಿಗೆ ನಷ್ಟ ಭರಿಸಲು ಆಗಲ್ಲ, ಸಹಾಯದ ರೀತಿಯಲ್ಲಿ ಸ್ವಲ್ಪ ಪರಿಹಾರ ನೀಡಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ (Krishna Byre Gowda) ಹೇಳಿದ್ದಾರೆ.
ಜಿಲ್ಲೆಯ ಮೊಸಳೆಹೊಸಳ್ಳಿ ಗ್ರಾಮದಲ್ಲಿ ನಡೆದ ದುರಂತ ಸ್ಥಳಕ್ಕೆ ಭೇಟಿ ನೀಡಿ, ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೃದಯ ವಿದ್ರಾವಕ ಘಟನೆ ನಡೆದಿದೆ. ಅವಘಡದಲ್ಲಿ ಈವರೆಗೆ 9 ಜನ ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಗಳಿಗೆ ಸರ್ಕಾರದ ಪರವಾಗಿ ಸಾಂತ್ವನ ಹೇಳಿದ್ದೇನೆ. ಆ ಕುಟುಂಬದ ನೋವು ಅರ್ಥ ಮಾಡಿಕೊಳ್ಳೋದು ಕಷ್ಟ. ಮೃತರ ಕುಟುಂಬಗಳಿಗೆ ನಷ್ಟ ಭರಿಸಲು ಆಗಲ್ಲ, ಹೀಗಾಗಿ ಸ್ವಲ್ಪ ಸಹಾಯದ ರೀತಿಯಲ್ಲಿ ಪರಿಹಾರ ನೀಡಿದ್ದೇವೆ. ತಲಾ 5 ಲಕ್ಷ ರೂ. ಪರಿಹಾರ ಕೊಡುವಂತೆ ಸಿಎಂ ಸೂಚಿಸಿದ್ದಾರೆ. ಅದರಂತೆ ನಾನು 5 ಲಕ್ಷ ರೂ. ಪರಿಹಾರ ಕೊಡುತ್ತಿದ್ದೇನೆ. ಇನ್ನೂ ಹೆಚ್ಚಿನ ಪರಿಹಾರ ಕೇಳುತ್ತಿದ್ದಾರೆ. ಅದರ ಬಗ್ಗೆ ಸಿಎಂ ಜೊತೆ ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಹಾಸನ | ವಿಮಾನ ದುರಂತದಲ್ಲಾದ್ರೆ 1 ಕೋಟಿ ಕೊಡ್ತೀರಿ, ಬಡವರ ಜೀವಕ್ಕೆ ಬೆಲೆ ಇಲ್ವಾ? – ಸಚಿವರಿಗೆ ಜನರ ತರಾಟೆ
ಇನ್ನೂ ಇದು ಯಾರ ವೈಫಲ್ಯ ಎಂದು ಹೇಳೊಕ್ಕಾಗಲ್ಲ. ಹೆಚ್ಚಿನ ಭದ್ರತೆ ನೀಡಿದರೆ ಜನರ ಭಾವನೆಗಳಿಗೆ ಧಕ್ಕೆ ಎನ್ನುತ್ತೀರಾ, ಭದ್ರತೆ ಕಡಿಮೆ ಮಾಡಿದಾಗ ಏನಾದರೂ ಆದರೆ ಸರ್ಕಾರ ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ ಎನ್ನುತ್ತೀರಾ. ಹೀಗಾಗಿ ವೈಫಲ್ಯದ ಬಗ್ಗೆ ನಾನು ಮಾತಾಡಲ್ಲ. ಈಗಾಗಲೇ ಟ್ರಕ್ ಚಾಲಕನನ್ನು ಬಂಧಿಸಿದ್ದೇವೆ. ಆತ ಇದೇ ಊರಿನವನು, ಅವನಿಗೂ ಗಾಯ ಆಗಿದೆ. ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಭೇಟಿ ನೀಡುವ ಮುನ್ನ ಅಧಿಕಾರಿಗಳ ಜೊತೆ ಸಭೆ ಮಾಡಿದ್ದೇನೆ. ಸ್ಥಳ ಪರಿಶೀಲನೆ ಕೂಡ ಮಾಡಿದ್ದೇನೆ. ಕೆಲವು ಕುಟುಂಬಗಳ ಭೇಟಿ ಮಾಡಿ ಸಾಂತ್ವನ ಹೇಳಿದ್ದೇನೆ. ಗಾಯಾಳುಗಳ ಆರೈಕೆ ಬಗ್ಗೆಯೂ ವಿಚಾರಿಸಿದ್ದೇನೆ. ಪೊಲೀಸರಿಗೆ ದುರಂತ ಹೇಗಾಯ್ತು ಹಾಗೂ ಡ್ರೈವರ್ ಬಗ್ಗೆ ತನಿಖೆ ಮಾಡುವಂತೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.
– ಗೌರಿಬಿದನೂರು ಬೈಪಾಸ್ ಗಣೇಶ ವಿಸರ್ಜನೆ; 500ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
– ಮಸೀದಿ-ಮಂದಿರ-ಚರ್ಚ್‌ಗಳ ಬಳಿ ವಿಶೇಷ ಭದ್ರತೆ
ಚಿಕ್ಕಬಳ್ಳಾಪುರ: ರಾಜ್ಯದೆಲ್ಲೆಡೆ ಗಣೇಶ ವಿಸರ್ಜನಾ ಮೆರವಣಿಗೆಗಳು (Ganesha Visarjan Procession) ಜೋರಾಗಿ ಸಾಗುತ್ತಿದ್ದರೆ, ಕೆಲ ಕಡೆಗಳಲ್ಲಿ ನಡೆದ ಅಹಿತಕರ ಘಟನೆಗಳಿಂದ ಪೊಲೀಸರು ಹೈಅಲರ್ಟ್ ಆಗಿದ್ದಾರೆ. ದೊಡ್ಡಬಳ್ಳಾಪುರದಲ್ಲಿ ಪಟಾಕಿ ಸ್ಫೋಟದಿಂದ ಇಬ್ಬರು ಬಾಲಕರ ಸಾವು, ಮದ್ದೂರಿನಲ್ಲಿ ಕಲ್ಲುತೂರಾಟ ಗಲಾಟೆ, ಹಾಸನದಲ್ಲಿ ಮೆರವಣಿಗೆಯ ವೇಳೆ ಆದ ಅಪಘಾತದ ಹಿನ್ನೆಲೆ ಚಿಕ್ಕಬಳ್ಳಾಪುರ ಜಿಲ್ಲೆ ಪೊಲೀಸರೂ (Chikkaballapura Police) ಫುಲ್ ಅಲರ್ಟ್ ಆಗಿದ್ದಾರೆ.
ಗೌರಿಬಿದನೂರು ಬೈಪಾಸ್ ಗಣೇಶನ ವಿಶೇಷ
ಪ್ರತಿಷ್ಠಿತ ಬೈಪಾಸ್ ಗಣೇಶೋತ್ಸವ 22ನೇ ವರ್ಷಕ್ಕೆ ಕಾಲಿಟ್ಟಿದ್ದು, ಈ ಬಾರಿ 22 ಅಡಿ ಎತ್ತರದ ಪ್ರಣವ ಮಹಾರುದ್ರ ಗಣೇಶ ಪ್ರತಿಷ್ಠಾಪನೆ ಮಾಡಲಾಗಿದೆ. ಪೆಂಡಾಲ್‍ನಲ್ಲಿ ದೇಶದ ಪ್ರಸಿದ್ಧ ದೇವಾಲಯಗಳ ಮಾದರಿಗಳನ್ನು ಅಲಂಕರಿಸಿರುವುದು ಭಕ್ತರ ಗಮನ ಸೆಳೆದಿದೆ. ಭಾನುವಾರ ನಡೆಯಲಿರುವ ಗಂಗಾವಿಲೀನ ಮೆರವಣಿಗೆಯಲ್ಲಿ ಸಾವಿರಾರು ಮಂದಿ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಇದನ್ನೂ ಓದಿ: ಹಾಸನ ದುರಂತ – ಮೊಸಳೆಹೊಸಳ್ಳಿ ಗ್ರಾಮದಲ್ಲಿ ಸ್ವಯಂಪ್ರೇರಿತ ಬಂದ್
ಪೊಲೀಸರ ತಯಾರಿ ಹೇಗಿದೆ?
ಸಂಭಾವ್ಯ ಅಹಿತಕರ ಘಟನೆಗಳನ್ನ ತಪ್ಪಿಸಲು ಜಿಲ್ಲೆಯ ಎಸ್ಪಿ ಕುಶಲ್ ಚೌಕ್ಸಿ ನೇತೃತ್ವದಲ್ಲಿ ಹಲವು ಶಾಂತಿ ಸಭೆಗಳನ್ನು ನಡೆಸಲಾಗಿದೆ. ಮುನ್ನೆಚ್ಚರಿಕೆಯಾಗಿ ಗೌರಿಬಿದನೂರು ಪಟ್ಟಣದಲ್ಲಿ ಭಾರೀ ಪೊಲೀಸರ ಪಥಸಂಚಲನ ನಡೆಸಲಾಗುತ್ತಿದೆ. ಬೆಳಗ್ಗೆ 11 ಗಂಟೆಗೆ ಆರಂಭವಾಗುವ ಮೆರವಣಿಗೆ ಸರಿಸುಮಾರು ಸಂಜೆ 8ರ ವರೆಗೆ ಸಾಗಲಿದ್ದು, 500ಕ್ಕೂ ಹೆಚ್ಚು ಪೊಲೀಸರನ್ನ ನಿಯೋಜನೆ ಮಾಡಲಾಗುತ್ತಿದೆ. ಮಸೀದಿ, ಮಂದಿರ, ಚರ್ಚ್ ಮುಂತಾದ ಧಾರ್ಮಿಕ ಕೇಂದ್ರಗಳ ಬಳಿ ವಿಶೇಷ ಭದ್ರತೆ ಏರ್ಪಡಿಸಲಾಗಿದೆ. ಸಿಸಿ ಟಿವಿಗಳನ್ನ ಆಳವಡಿಸಲಾಗುತ್ತಿದೆ. ಡ್ರೋನ್ ಕ್ಯಾಮೆರಾ ಬಳಸಿ ವಿಡಿಯೋ ಚಿತ್ರೀಕರಣ ಸಹ ಮಾಡಿಸಲು ತೀರ್ಮಾನ ಮಾಡಲಾಗಿದೆ. ಇದನ್ನೂ ಓದಿ: ಹಾಸನ | ವಿಮಾನ ದುರಂತದಲ್ಲಾದ್ರೆ 1 ಕೋಟಿ ಕೊಡ್ತೀರಿ, ಬಡವರ ಜೀವಕ್ಕೆ ಬೆಲೆ ಇಲ್ವಾ? – ಸಚಿವರಿಗೆ ಜನರ ತರಾಟೆ
ಪೊಲೀಸರಿಂದ ಸಾರ್ವಜನಿಕರಿಗೆ ಸಂದೇಶ
ಗಣೇಶ ವಿಸರ್ಜನಾ ಮೆರವಣಿಗೆ ಶಾಂತಿಯುತವಾಗಿ ನಡೆಯಬೇಕು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರಿಂದ ಭಾರೀ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಾರ್ವಜನಿಕರು ಸಹ ಸಹಕಾರ ನಿಡಬೇಕು ಎಂದು ಎಸ್‍ಪಿ ಕುಶಲ್ ಚೌಕ್ಸಿ ಮನವಿ ಮಾಡಿಕೊಂಡಿದ್ದಾರೆ. ಗೌರಿಬಿದನೂರಿನ ಬೈಪಾಸ್ ಗಣೇಶ ವಿಸರ್ಜನೆಗೆ ಕಟ್ಟಿನಿಟ್ಟಿನ ಭದ್ರತೆ ಒದಗಿಸಲು ಮುಂದಾಗಿರುವ ಪೊಲೀಸರು ಭಕ್ತರು ಶಾಂತಿಯುತವಾಗಿ ಉತ್ಸವದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಹಾಸನ ಗಣೇಶ ಮೆರವಣಿಗೆ ವೇಳೆ ಘನಘೋರ ದುರಂತ – ಪ್ರಧಾನಿ ಮೋದಿ ಸಂತಾಪ
ಮೈಸೂರು: ಅಪಘಾತಗಳನ್ನ (Accident) ತಡೆಯಬೇಕು ಅಂತಲೇ ರಸ್ತೆ ಸುರಕ್ಷತಾ ಕಾನೂನುಗಳನ್ನ ಮಾಡಿದ್ದೇವೆ. ಆದಾಗ್ಯೂ ಡ್ರೈವರ್‌ಗಳ ತಪ್ಪುಗಳಿಂದ ಅಪಘಾತಗಳು ಸಂಭವಿಸಿದ್ರೆ ಸರ್ಕಾರ ಹೇಗೆ ಹೊಣೆಗಾರಿಗೆ ಆಗುತ್ತೆ? ಅಂತ ಸಿಎಂ ಸಿದ್ದರಾಮಯ್ಯ (Siddaramaiah) ಪ್ರಶ್ನೆ ಮಾಡಿದರು.
ಕ್ಯಾಂಟರ್ ನುಗ್ಗಿ ಅಪಘಾತ ಆಗಿದೆ. ಮೃತರ ಕುಟುಂಬ ವರ್ಗಕ್ಕೆ ನಮ್ಮ ಸಂತಾಪ ಇದೆ. ಘಟನೆ ತಿಳಿಯುತ್ತಿದ್ದಂತೆ ಉಸ್ತುವಾರಿ ಸಚಿವ ಕೃಷ್ಣೇಬೇರೇಗೌಡ ಅವರಿಗೆ ಸ್ಥಳಕ್ಕೆ ಭೇಟಿ ನೀಡಿ, ಕ್ರಮ ಕೈಗೊಂಡು ಪರಿಹಾರ ಘೋಷಣೆ ಮಾಡುವಂತೆ ಹೇಳಿದ್ದೆ. ಅದರಂತೆ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಹಾಸನ ಗಣೇಶ ಮೆರವಣಿಗೆ ವೇಳೆ ದುರಂತ – ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ವಿದ್ಯಾರ್ಥಿ ದುರ್ಮರಣ
ಇದೇ ವೇಳೆ 10 ಲಕ್ಷ ರೂ. ಪರಿಹಾರ ನೀಡುವಂತೆ ಬಿಜೆಪಿ (BJP) ಆಗ್ರಹ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಎಷ್ಟು ಪರಿಹಾರ ಕೊಟ್ಟಿದ್ದರು? ಪರಿಹಾರ ಕೊಡೋದು ಮೃತರನ್ನ ವಾಪಸ್ ಕರೆತರ್ತೀವಿ ಅಂತಲ್ಲ. ಸರ್ಕಾರ ಮೊದಲಿನಿಂದಲೂ ಪರಿಹಾರ ಕೊಡ್ತಿದೆ. ಅಪಘಾತದಲ್ಲಿ ಮೃತಪಟ್ಟವರಿಗೆ 5 ಲಕ್ಷ ರೂ., ಆಕಸ್ಮಿಕವಾಗಿ ಮೃತಪಟ್ಟವರಿಗೆ 2 ಲಕ್ಷ ರೂ. ಕೊಡುತ್ತಿದ್ದೇವೆ. ಆರ್ಥಿಕವಾಗಿ ಹಿಂದುಳಿದವರು ಅನ್ನೋ ಕಾರಣಕ್ಕೆ ಮತ್ತು ಸಾಂತ್ವನ ಹೇಳುವ ಉದ್ದೇಶದಿಂದ ಪರಿಹಾರ ಕೊಡಲಾಗುತ್ತಿದೆ ಹೊರತು ಸಾವಿಗೆ ಸಮಾನ ಅಂತಲ್ಲ ಎಂದು ವಿವರಿಸಿದರು.
ಮೃತದೇಹ ಹಸ್ತಾಂತರ
ಕುಟುಂಬಗಳಿಗೆ ಮೃತದೇಹ ಹಸ್ತಾಂತರ ಈನ್ನೂ ರಾತ್ರಿಯೇ ಮರಣೋತ್ತರ ಪರೀಕ್ಷೆ ಮುಗಿಸಿ ವೈದ್ಯರ ತಂಡ ಮೃತದೇಹಗಳನ್ನು ಸಂಬಂಧಪಟ್ಟ ಕುಟುಂಬಸ್ಥರಿಗೆ ಹಸ್ತಾಂತರಿಸಿತ್ತು. ಉಳಿದ ಗಾಯಾಳುಗಳ ಚಿಕಿತ್ಸೆಗೆ ಅಗತ್ಯ ತಜ್ಞ ವೈದ್ಯರನ್ನ ನಿಯೋಜಿಸಲಾಗಿತ್ತು. ಇದನ್ನೂ ಓದಿ: ಹಾಸನ ದುರಂತ – ಮೊಸಳೆಹೊಸಳ್ಳಿ ಗ್ರಾಮದಲ್ಲಿ ಸ್ವಯಂಪ್ರೇರಿತ ಬಂದ್
ಹಾಸನ: ಮೊಸಳೆಹೊಸಳ್ಳಿಯಲ್ಲಿ (MosaleHosalli) ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಟ್ರಕ್ ಅಪಘಾತದ (Accident) ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ (Krishna Byre Gowda) ಭೇಟಿ ನೀಡಿದ್ದಾರೆ. ಈ ವೇಳೆ ಪರಿಹಾರದ ವಿಚಾರವಾಗಿ ಜನರು ಸಚಿವರಿಗೆ ತರಾಟೆ ತೆಗೆದುಕೊಂಡಿದ್ದಾರೆ.
ವಿಮಾನ ದುರಂತದಲ್ಲಿ ಸತ್ತರೆ 1 ಕೋಟಿ ರೂ. ಪರಿಹಾರ ಕೊಡ್ತೀರಿ. ಸ್ಟೇಡಿಯಂನಲ್ಲಿ ಸತ್ತರೆ 50 ಲಕ್ಷ ರೂ. ಕೊಡ್ತೀರಿ. ಬಡವರ ಮಕ್ಕಳು ಸತ್ತರೆ ಬೆಲೆ ಇಲ್ವಾ? ಸರ್ಕಾರ 5 ಲಕ್ಷ ರೂ. ಪರಿಹಾರ ಘೋಷಿಸಿದೆ. ಬಡವರ ಮಕ್ಕಳು ಸತ್ತಿದ್ದಾರೆ ಹೆಚ್ಚಿನ ಪರಿಹಾರ ಕೊಡಬೇಕು. 25 ಲಕ್ಷ ರೂ. ಕೊಡುವಂತೆ ಸಚಿವರಿಗೆ ಜನ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಘನಘೋರ ದುರಂತ – ಸಾವಿನ ಸಂಖ್ಯೆ 9ಕ್ಕೆ ಏರಿಕೆ
ಕೇರಳದಲ್ಲಿ ಸತ್ತರೆ ಕರ್ನಾಟಕದಿಂದ ಪರಿಹಾರ ಕೊಡ್ತೀರಿ. ನಮ್ಮ ರೈತರ ಮಕ್ಕಳು ಸತ್ರೆ ಬಿಡಿಗಾಸು ಕೊಡ್ತೀರಿ. 5 ಲಕ್ಷ ಪರಿಹಾರ ಕೊಡೋದಾದರೆ ನೀವೇ ಇಟ್ಟುಕೊಳ್ಳಿ ಎಂದು ಸ್ಥಳೀಯರು ಅಸಮಾಧಾನ ಹೊರಹಾಕಿದ್ದಾರೆ.
ಗಾಯಾಳುಗಳ ಆರೋಗ್ಯ ವಿಚಾರಿಸಲಿರೋ ದೊಡ್ಡಗೌಡ್ರು
ಹಿಮ್ಸ್ ಆಸ್ಪತ್ರೆಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು (H.D Devegowda) ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಅವರು ಹಿಮ್ಸ್‌ಗೆ ಭೇಟಿ ನೀಡಲಿದ್ದಾರೆ.