Tag: Hassanamba Temple

  • ಶಕ್ತಿದೇವತೆ ಹಾಸನಾಂಬೆ ದರ್ಶನಕ್ಕೆ ಜನಸಾಗರ – ಬೆಂಗಳೂರು To ಹಾಸನ ಬಸ್ ಸಂಚಾರ ಸ್ಥಗಿತ

    ಶಕ್ತಿದೇವತೆ ಹಾಸನಾಂಬೆ ದರ್ಶನಕ್ಕೆ ಜನಸಾಗರ – ಬೆಂಗಳೂರು To ಹಾಸನ ಬಸ್ ಸಂಚಾರ ಸ್ಥಗಿತ

    – ಈಗಾಗಲೇ 50 ಸಾವಿರ ಟಿಕೆಟ್‌ ಬುಕ್; ಜನ ನಿಯಂತ್ರಿಸಲು ಬುಕಿಂಗ್‌ ಕೂಡ ಬಂದ್
    – ಬೆಂಗಳೂರಿಂದ ಗಂಟೆಗೆ ಕೇವಲ‌ 2 ಬಸ್‌ ‌

    ಬೆಂಗಳೂರು: ಹಾಸನಾಂಬೆ (Hasanamba) ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಧಾವಿಸುತ್ತಿದ್ದರು. ವಾರಾಂತ್ಯ ಹಾಗೂ ದೀಪಾವಳಿ ರಜೆ ಕಾರಣದಿಂದ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಬೆಂಗಳೂರು-ಹಾಸನ ಬಸ್ ಸಂಚಾರ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ. ಜನಸಂಖ್ಯೆ ನಿಯಂತ್ರಿಸಲು ಟಿಕೆಟ್‌ ಬುಕಿಂಗ್‌ (Bus Ticket Booking) ಕೂಡ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

    ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಸ್ಥಗಿತ
    ಹಾಸನಾಂಬೆ ದೇಗುಲ ಹಾಗೂ ಸುತ್ತ ಮುತ್ತ ಬಾರಿ ಜನಸ್ತೋಮ ನೆರೆದಿದೆ. ಭಕ್ತರು ಹಾಸನಾಂಬೆ ದರ್ಶನಕ್ಕೆ ಸರತಿ ಸಾಲಿನಲ್ಲಿ ಕಾಯುತ್ತಿದ್ದಾರೆ. ಇತ್ತ ಭಾರಿ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಭಕ್ತರ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಭಕ್ತರನ್ನು ನಿಯಂತ್ರಸಲು ಅಸಾಧ್ಯದ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದಂತೆ ತಾತ್ಕಾಲಿಕವಾಗಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ತಾತ್ಕಾಲಿಕವಾಗಿ ಬಸ್ ಸಂಚಾರ ಸ್ಥಗಿತಗೊಂಡಿದೆ.

    ಬುಕಿಂಗ್‌ ಕೂಡ ಸ್ಥಗಿತ
    ಇನ್ನೂ ಈಗಾಗಲೇ ಸಹಸ್ತ್ರಾರು ಭಕ್ತರು ಹಾಸನಾಂಬೆ ದರ್ಶನ ಪಡೆಯಲು 50 ಸಾವಿರ ಮುಂಗಡ ಟಿಕೆಟ್‌ ಕಾಯ್ದಿರಿಸಿದ್ದಾರೆ. ಹೀಗಾಗಿ, ತಾತ್ಕಾಲಿಕವಾಗಿ ಟಿಕೆಟ್‌ ಬುಕಿಂಗ್‌ ಕೂಡ ಸ್ಥಗಿತಗೊಳಿಸಲಾಗಿದೆ.

    ಕೀಲೋಮೀಟರ್ ಉದ್ದದ ಸಾಲು
    ಹಾಸನಾಂಬೆ ದರ್ಶನಕ್ಕೆ ಭಕ್ತರ ಸಾಗರ ಹೆಚ್ಚಾಗಿರುವ ಕಾರಣ ದರ್ಶನಕ್ಕೆ ಕಿಲೋಮೀಟರ್‌ಗಟ್ಟಲೇ ಸಾಲು ದೊಡ್ಡದಾಗಿದೆ. 1,000 ರೂ. ಹಾಗೂ 300 ರೂ. ಟಿಕೆಟ್‌ ಪಡೆದ ಭಕ್ತರು ಪ್ರತ್ಯೇಕ ಸಾಲುಗಳಲ್ಲಿ ಬಂದು ದರ್ಶನ ಪಡೆಯುತ್ತಿದ್ದಾರೆ. ಎರಡೂ ಸಾಲುಗಳು ಕಿಲೋಮೀಟರ್‌ಗೂ ಅಧಿಕವಾಗಿದೆ.

  • ಹಾಸನಾಂಬ ಉತ್ಸವಕ್ಕೆ ಕ್ಷಣಗಣನೆ – ಜಿಲ್ಲಾ ಖಜಾನೆಯಿಂದ ದೇವಾಲಯಕ್ಕೆ ಒಡವೆಗಳ ರವಾನೆ

    ಹಾಸನಾಂಬ ಉತ್ಸವಕ್ಕೆ ಕ್ಷಣಗಣನೆ – ಜಿಲ್ಲಾ ಖಜಾನೆಯಿಂದ ದೇವಾಲಯಕ್ಕೆ ಒಡವೆಗಳ ರವಾನೆ

    ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ಭಾಗ್ಯ ಕರುಣಿಸುವ ಹಾಸನದ (Hassan) ಅಧಿದೇವತೆ ಹಾಸನಾಂಬೆಯ (Hassanamba) ಜಾತ್ರಾ ಮಹೋತ್ಸವ ಇದೇ ಅ.24- ನ.3ರ ವರೆಗೆ ನಡೆಯಲಿದೆ.

    ಜಾತ್ರೆಯ ಪೂರ್ವ ಸಿದ್ಧತಾ ಕಾರ್ಯ ಬಹುತೇಕ ಮುಗಿದಿವೆ. ಒಂದು ವರ್ಷದಿಂದ ಜಿಲ್ಲಾ ಖಜಾನೆಯಲ್ಲಿ ಭದ್ರಪಡಿಸಿದ್ದ ಒಡವೆಗಳನ್ನು ಇಂದು ಬಿಗಿ ಪೊಲೀಸ್ ಭದ್ರತೆಯ ನಡುವೆ ದೇವಾಲಯಕ್ಕೆ (Hassanamba Temple) ತರಲಾಯಿತು. ದೇವಿಯ ಗರ್ಭಗುಡಿ ಬಾಗಿಲು ತೆರೆದ ಮಾರನೇ ದಿನ ಹಾಸನಾಂಬೆಗೆ ಆಭರಣ ಧಾರಣೆ ಮಾಡಲಾಗುತ್ತದೆ.

    ಒಡವೆಗಳನ್ನು ತರುವ ಮುನ್ನ ಖಜಾನೆ ಮುಂದೆ ಅರ್ಚಕರು ಪೂಜೆ ಸಲ್ಲಿಸಿದರು. ಬಳಿಕ ಒಡವೆಗಳನ್ನು ಪಲ್ಲಕ್ಕಿ ಮೇಲಿರಿಸಿ ಬೆಳ್ಳಿ ರಥದ ಮೂಲಕ ಮೆರವಣಿಗೆ ಮಾಡಿಕೊಂಡು ದೇವಾಲಯಕ್ಕೆ ತರಲಾಯಿತು. ಮೆರವಣಿಗೆಗೂ ಮುನ್ನ ಹಾಸನಾಂಬ ದೇವಾಲಯದ ಪ್ರಧಾನ ಅರ್ಚಕ ನಾಗರಾಜ್ ಹಾಗೂ ಉಪವಿಭಾಗಾಧಿಕಾರಿಗಳು, ತಹಸೀಲ್ದಾರ್ ಸಮ್ಮುಖದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

    ಮೆರವಣಿಗೆ ವೇಳೆ ಪೊಲೀಸ್ ಇಲಾಖೆ ವತಿಯಿಂದ ಸೂಕ್ತ ಭದ್ರತೆ ಒದಗಿಸಲಾಗಿತ್ತು. ಸಾಲಗಾಮೆ ರಸ್ತೆಯಲ್ಲಿರುವ ಜಿಲ್ಲಾ ಖಜಾನೆಯಿಂದ ಸಾಗಿದ ಒಡವೆಗಳ ದರ್ಶನ ಮಾಡಿದರು.

  • ಹೆಚ್.ಡಿ ರೇವಣ್ಣ ಕುಟುಂಬಸ್ಥರು ಜನರ ಪ್ರಾಣ ಹಿಂಡ್ತಿದ್ದಾರೆ – ಹಾಸನಾಂಬೆಗೆ ಪತ್ರ

    ಹೆಚ್.ಡಿ ರೇವಣ್ಣ ಕುಟುಂಬಸ್ಥರು ಜನರ ಪ್ರಾಣ ಹಿಂಡ್ತಿದ್ದಾರೆ – ಹಾಸನಾಂಬೆಗೆ ಪತ್ರ

    ಹಾಸನ: ಹೆಚ್.ಡಿ ರೇವಣ್ಣ ಕುಟುಂಬದವರು ಜನರ ಪ್ರಾಣ ಹಿಂಡುತ್ತಿದ್ದಾರೆ. ಅವರನ್ನು ಸೋಲಿಸಿಬಿಡು ಎಂದು ಹಾಸನಂಬೆ ದೇವಿಗೆ ಭಕ್ತರೊಬ್ಬರು ಪತ್ರ ಬರೆಯುವ ಮೂಲಕ ಕೋರಿಕೊಂಡಿದ್ದಾರೆ.

    Revanna

    ವರ್ಷಕ್ಕೊಮ್ಮೆ ತೆರೆಯುವ ಹಾಸನಾಂಬೆ ದೇವಾಲಯಕ್ಕೆ ರಾಜ್ಯದ ಮೂಲೆ ಮೂಲಗಳಿಂದ ಜನರು ಆಗಮಿಸಿ ದೇವಿಯ ದರ್ಶನ ಪಡೆದು, ಪತ್ರ ಬರೆಯುವ ಮೂಲಕ ತಮ್ಮ ಕೋರಿಕೆಗಳನ್ನು ನೆರವೇರಿಸುವಂತೆ ಬೇಡಿಕೊಳ್ಳುತ್ತಾರೆ. ಇದನ್ನೂ ಓದಿ: ಪದ್ಮಶ್ರೀ ಅಲ್ಲ, ಪುನೀತ್ ಅಮರಶ್ರೀ: ಶಿವರಾಜ್‍ಕುಮಾರ್

    ಪ್ರತಿವರ್ಷದಂತೆ ಈ ವರ್ಷವು ಭಕ್ತರು ಅನೇಕ ಪತ್ರಗಳನ್ನು ದೇವರಿಗೆ ಬರೆದು ಪ್ರಾರ್ಥಿಸಿದ್ದಾರೆ. ಹಲವಾರು ಪತ್ರಗಳ ಮಧ್ಯೆ ಭಕ್ತರೊಬ್ಬರು, ತಾಯಿ ಹಾಸನಾಂಬೆ, ನಿನ್ನ ಕೃಪೆಯಿಂದ ಹೊಳೆನರಸಿಪುರದ ಎಂಎಲ್‍ಎ ಬದಲಾಗಬೇಕು. ಜನರನ್ನು ಕಷ್ಟದಿಂದ ಪಾರುಮಾಡಬೇಕು. ಹೆಚ್. ಡಿ ರೇವಣ್ಣ ಕುಟುಂಬದ ಸದಸ್ಯರು ಜನರ ಪ್ರಾಣ ಹಿಂಡುತ್ತಿದ್ದಾರೆ. ಅವರ ಕುಟುಂಬದವರೆಲ್ಲರನ್ನು ಸೋಲಿಸಿ ಬಿಡು ತಾಯಿ. ಅವರು ಮುಂದೆ ಯಾರನ್ನು ಬರಲು ಬಿಡುತ್ತಿಲ್ಲ. ಒಳ್ಳೆಯದು ಮಾಡು ತಾಯಿ ಎಂದು ಹೆಚ್.ಎನ್ ಪುರ ಜನತೆ ಪರವಾಗಿ ಬರೆದಿದ್ದಾರೆ. ಇದನ್ನೂ ಓದಿ: ಹೊಸ ಸಿನಿಮಾ ಅನೌನ್ಸ್ ಮಾಡಿದ ಬಾಹುಬಲಿ ಬೆಡಗಿ ಅನುಷ್ಕಾ ಶೆಟ್ಟಿ

    ಮತ್ತೋರ್ವ ಭಕ್ತ, ಅಮ್ಮ ಆ ಧರ್ಮಾತ್ಮ ಪುನೀತ್ ರಾಜ್‍ಕುಮಾರ್ ಸಾಯುವುದರ ಬದಲು, ಈ ರಾಜಕೀಯದಲ್ಲಿ ನಾಟಕವಾಡಿ ಅವರು ತಿಂದು, ಅವರ ಮರಿಮೊಮ್ಮಕ್ಕಳು ತಿಂದು ತೇಗಿದರು ಕರಗದ ಆಸ್ತಿ ಮಾಡಿದ್ದಾರಲ್ಲ ಅವರು ಸಾಯಬೇಕಿತ್ತು. ಸಭೆಗಳಲ್ಲಿ ನಾಟಕವಾಡುತ್ತಾರಲ್ಲಾ ಅಂಥಾ ಬೇ.. ರಾಜಕಾರಣಿಗಳನ್ನು ಸಾಯಿಸು. ಆಗ ನಮ್ಮ ಕರ್ನಾಟಕ ರಾಜ್ಯ ಮುಂದುವರಿಯುತ್ತದೆ.  ಇದನ್ನೂ ಓದಿ:  ಭ್ರಷ್ಟ ರಾಜಕಾರಣಿಗಳು ಸಾಯಬೇಕಿತ್ತು – ಹಾಸನಾಂಬೆಗೆ ಪತ್ರ ಬರೆದ ಅಪ್ಪು ಅಭಿಮಾನಿ

    ಬಡವರು ಕರ್ನಾಟಕದಲ್ಲಿ ಸುಖವಾಗಿರುತ್ತಾರೆ. ನಿನ್ನೆ, ಮೊನ್ನೆ ಬಂದ ಈ ಕೆಲ ರಾಜಕಾರಣಿಗಳು ಕೋಟಿ ಕೋಟಿ ಆಸ್ತಿ ಮಾಡಿಕೊಂಡು ಬೀಗುತ್ತಾರಲ್ಲ ಅವರಿಗೆ ಕರ್ಮದ ಸಾವು ಬರಲಿ. ಪಾಪ ಪುನೀತ್ ಇದ್ದಿದ್ದರೆ ನಾಲ್ಕು ಜನ ನೆಮ್ಮದಿಯಿಂದ ಇರುತ್ತಿದ್ದರು ತಾಯಿ ಎಂದು ಭಕ್ತ ಪತ್ರದಲ್ಲಿ ಬರೆದಿದ್ದಾನೆ.