Tag: Hate Speech

  • ದ್ವೇಷ ಭಾಷಣ; ಎಸ್‌ಡಿಪಿಐ ಮುಖಂಡ ರಿಯಾಜ್ ಕಡಂಬು ಜೈಲಿಗೆ

    ದ್ವೇಷ ಭಾಷಣ; ಎಸ್‌ಡಿಪಿಐ ಮುಖಂಡ ರಿಯಾಜ್ ಕಡಂಬು ಜೈಲಿಗೆ

    ಉಡುಪಿ: ಎಸ್‌ಡಿಪಿಐ (SDPI) ಮುಖಂಡ ರಿಯಾಜ್ ಕಡಂಬುಗೆ (Riyaz Kadambu) 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹಿರಿಯಡ್ಕ ಸಬ್ ಜೈಲ್‌ಗೆ ರವಾನಿಸಲಾಗಿದ್ದು, ಸಂಘಪರಿವಾರದ ವಿರುದ್ಧ ದ್ವೇಷ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಈ ಶಿಕ್ಷೆ ವಿಧಿಸಲಾಗಿದೆ.

    ಜುಲೈನಲ್ಲಿ ಬ್ರಹ್ಮಾವರ ತಾಲೂಕಿನ ಕುಂಜಾಲು ಬಳಿ ದನದ ತಲೆ ಪತ್ತೆಯಾಗಿತ್ತು. ಇದು ವ್ಯವಸ್ಥಿತ ಷಡ್ಯಂತ್ರ ಎಂದು ರಿಯಾಜ್ ಕಡಂಬು ಹೇಳಿಕೆ ನೀಡಿದ್ದರು. ಜುಲೈ 15 ರಂದು ಉಡುಪಿ ನಗರ ಠಾಣೆಯಲ್ಲಿ ಈ ಬಗ್ಗೆ ಕೇಸ್ ದಾಖಲಾಗಿತ್ತು. ಜಾಮೀನು ನಿಯಮಗಳಿಗೆ ವಿರುದ್ಧವಾಗಿ ನಡೆದುಕೊಂಡ ಹಿನ್ನೆಲೆಯಲ್ಲಿ, ಕೋರ್ಟ್ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಉಡುಪಿ ಎಸ್‌ಪಿ ಹರಿರಾಮ್ ಶಂಕರ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ನಾವು ಮಾಡಿರೋದು ಪೊಲಿಟಿಕಲ್ ಮೀಟಿಂಗ್ ಅಲ್ಲ: ಪರಮೇಶ್ವರ್

    ಏನಿದು ಪ್ರಕರಣ?
    ಬೆಂಗಳೂರಿಗೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕುಂಜಲು ರಾಜ್ಯ ಹೆದ್ದಾರಿಯಲ್ಲಿ ಹಸುವಿನ ತಲೆ ಮತ್ತು ದೇಹದ ಭಾಗಗಳು ಪತ್ತೆಯಾಗಿತ್ತು. ಹಿಂದೂಗಳ ಭಾವನೆಗೆ ಧಕ್ಕೆ ಎಂದು ಬಿಜೆಪಿ, ಹಿಂದೂಪರ ಸಂಘಟನೆಗಳು ಈ ಬಗ್ಗೆ ಪ್ರತಿಭಟನೆ ಮಾಡಿತ್ತು. ಬ್ರಹ್ಮಾವರದಲ್ಲಿ ಹಸುವಿನ ದೇಹದ ಭಾಗಗಳನ್ನು ವಿಲೇವಾರಿ ಮಾಡಿರುವ ಬಗ್ಗೆ ಸುಳ್ಳು ಸುದ್ದಿ ಹರಡಿದ ಆರೋಪದ ಮೇಲೆ ಉಡುಪಿ ಪಟ್ಟಣ ಪೊಲೀಸರು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಉಪಾಧ್ಯಕ್ಷ ರಿಯಾಜ್ ಕಡಂಬು ವಿರುದ್ಧ ಪ್ರಕರಣ ದಾಖಲಿಸಿದ್ದರು.

    ಪತ್ರಿಕಾಗೋಷ್ಠಿಯಲ್ಲಿ, ಬ್ರಹ್ಮಾವರದ ಕುಂಜಾಲು ಎಂಬಲ್ಲಿ ಹಸುವಿನ ತಲೆ ಮತ್ತು ಇತರ ದೇಹದ ಭಾಗಗಳನ್ನು ರಸ್ತೆಗೆ ಎಸೆದ ಘಟನೆಯು ಅಭಿವೃದ್ಧಿ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಸಂಘ ಪರಿವಾರದ ಕಾರ್ಯಕರ್ತರು ನಡೆಸಿದ ಸಂಘಟಿತ ಕೃತ್ಯವಾಗಿದೆ ಎಂದು ರಿಯಾಜ್ ಕಡಂಬು ಹೇಳಿದ್ದರು. ಈ ಘಟನೆಯಲ್ಲಿ ಸಂಘ ಪರಿವಾರ ಮತ್ತು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದಾರೆ ಎಂದು ಅವರು ಆರೋಪಿಸಿದ್ದರು. ಘಟನೆಯ ಹಿಂದಿನ ವ್ಯಕ್ತಿಗಳನ್ನು ಪತ್ತೆಹಚ್ಚುವಂತೆ ಪೊಲೀಸರನ್ನು ಕೇಳಿಕೊಂಡಿದ್ದರು. ಇದನ್ನೂ ಓದಿ: ವಿಮೆ ಹಣದ ಮೇಲೆ ಕಣ್ಣು – ಅಳಿಯನನ್ನೇ ಕೊಲೆ ಮಾಡಿದ ಮಾವ & ಗ್ಯಾಂಗ್

  • ಅಮಿತ್ ಶಾ ತಲೆ ಕತ್ತರಿಸಿ ಪ್ರದರ್ಶನಕ್ಕಿಡಬೇಕು – TMC ಸಂಸದೆ ಮಹುವಾ ಮೊಯಿತ್ರಾ ಶಾಕಿಂಗ್ ಹೇಳಿಕೆ

    ಅಮಿತ್ ಶಾ ತಲೆ ಕತ್ತರಿಸಿ ಪ್ರದರ್ಶನಕ್ಕಿಡಬೇಕು – TMC ಸಂಸದೆ ಮಹುವಾ ಮೊಯಿತ್ರಾ ಶಾಕಿಂಗ್ ಹೇಳಿಕೆ

    – ಗಡಿ ಕಾಯುವಲ್ಲಿ, ನುಸುಳುವಿಕೆ ತಡೆಯುವಲ್ಲಿ ಶಾ ವಿಫಲ ಅಂತ ವಾಗ್ದಾಳಿ

    ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ (TMC) ಸಂಸದೆ ಮಹುವಾ ಮೊಯಿತ್ರಾ (Mahua Moitra) ಅವರಿಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಭಾರೀ ವಿವಾದಕ್ಕೆ ಕಾರಣರಾಗಿದ್ದಾರೆ.

    ಭಾರತಕ್ಕೆ ಬಾಂಗ್ಲಾ ಪ್ರದೇಶಗಳ ಒಳನುಸುಳುವಿಕೆ (Bangladeshi immigrants) ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಮಹುವಾ ಮೊಯಿತ್ರಾ, ಅಮಿತ್‌ ಶಾ ತಲೆಯನ್ನು ಕತ್ತರಿಸಿ, ಪ್ರದರ್ಶನಕ್ಕಾಗಿ ಟೇಬಲ್‌ ಮೇಲೆ ಇಡಬೇಕು ಎಂದು ನಾಲಿಗೆ ಹರಿಬಿಟ್ಟಿದ್ದಾರೆ. ಇದನ್ನೂ ಓದಿ: ರಾಷ್ಟ್ರಪತಿಗಳಿಗೆ ಬಂದ ರಹಸ್ಯ ಪತ್ರದಿಂದ ಭಾರತ, ಚೀನಾ ಸಂಬಂಧ ಸುಧಾರಣೆ!

    ಒಂದು ವೇಳೆ ಭಾರತದ ಗಡಿಯನ್ನ (Indian Border) ರಕ್ಷಣೆ ಮಾಡಲು ಸಾಧ್ಯವಾಗದಿದ್ರೆ, ನೂರಾರು ಸಂಖ್ಯೆಯಲ್ಲಿ ನುಸುಳುಕೋರರು ಒಳನುಸುಳುತ್ತಿದ್ದರೆ, ನಮ್ಮ ಮಹಿಳೆಯರನ್ನ ಅಗೌರವಿಸುತ್ತಿದ್ದರೆ ಅಥವಾ ನಮ್ಮ ಭೂಮಿಯನ್ನ ಅತಿಕ್ರಮಿಸಿಕೊಳ್ಳುತ್ತಿದ್ದರೆ? ಅಮಿತ್‌ ಶಾ (Amit Shah) ಅವರ ತಲೆ ಕತ್ತರಿಸಿ ಟೇಬಲ್‌ ಮೇಲೆ ಪ್ರದರ್ಶನಕ್ಕಿಡುವುದು ನಿಮ್ಮ ಕರ್ತವ್ಯ. ಏಕೆಂದರೆ ಗಡಿ ಕಾಯಲು, ನುಸುಳುವಿಕೆ ತಡೆಯಲು ಅಮಿತ್ ಶಾ ವಿಫಲರಾಗಿದ್ದಾರೆ ಎಂದು ಲೇವಡಿ ಮಾಡಿದರು.

    ಸ್ವಾತಂತ್ರ್ಯ ದಿನಾಚರಣೆ ವೇಳೆ ಪ್ರಧಾನಿ ಮೋದಿಯ ಕೆಂಪುಕೋಟೆ ಭಾಷಣ ಉಲ್ಲೇಖಿಸಿದ ಮಹುವಾ, ʻಮೋದಿ ಕೆಂಪು ಕೋಟೆಯಲ್ಲಿ ನಿಂತು ನುಸುಳುಕೋರು ಜನಸಂಖ್ಯಾ ಬದಲಾವಣೆ ಮಾಡುತ್ತಿದ್ದಾರೆ ಅಂತ ಹೇಳುತ್ತಿದ್ದರು. ಇದನ್ನ ಗಂಭೀರವಾಗಿ ಪರಿಗಣಿಸದೇ ಗೃಹಸಚಿವರು ಮುಂದಿನ ಸಾಲಿನಲ್ಲಿ ನಿಂತು ಚಪ್ಪಾಳೆ ತಟ್ಟುತ್ತಿದ್ದರು. ಗಡಿಯಲ್ಲಿ ಭದ್ರತಾ ಪಡೆಗಳಿದ್ದೂ ಒಳನುಸುಳುವಿಕೆ ಏಕೆ ಮುಂದುವರಿಯುತ್ತಿದೆ? ಅದರಲ್ಲೂ ಪಶ್ಚಿಮ ಬಂಗಾಳದ ಗಡಿಯಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಇದನ್ನ ತಡೆಯುವಲ್ಲಿ ಶಾ ವಿಫಲರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಜಿಎಸ್‌ಟಿ ಸರಳೀಕರಣದಿಂದ ರಾಜ್ಯಗಳ ಆದಾಯ 2.5 ಲಕ್ಷ ಕೋಟಿ ನಷ್ಟ ಸಾಧ್ಯತೆ: ಸಚಿವ ಕೃಷ್ಣ ಬೈರೇಗೌಡ ಕಳವಳ

    ಕೆರಳಿದ ಕೇಸರಿ ಪಡೆ
    ಇನ್ನೂ ಮಹುವಾ ಮೊಯಿತ್ರಾ ಅವರ ಹೇಳಿಕೆಯಿಂದ ಕೇಸರಿ ಪಡೆ ಕೆರಳಿ ಕೆಂಡವಾಗಿದೆ. ಮೊಯಿತ್ರಾ ಲಜ್ಜೆಗೆಟ್ಟ ಹೇಳಿಕೆ ನೀಡಿದ್ದಾರೆ. ಎಕ್ಸ್‌ನಲ್ಲಿ ಆಕ್ರೋಶ ಹೊರಹಾಕಿರುವ ಹಿರಿಯ ನಾಯಕ ಪ್ರದೀಪ್‌ ಭಂಡಾರಿ, ಇದು ರಾಜಕೀಯ ಮೀರಿದ ಅಪ್ಪಟ ದ್ವೇಷ ಭಾಷಣ, ಇದರಲ್ಲಿ ವಿಷ ತುಂಬಿದೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಅಭಿಮಾನಿಗಳ ಹೃದಯ ಗೆದ್ದ ಮೆಗಾ ಸ್ಟಾರ್ – ಚಿರಂಜೀವಿ ರಿಯಲ್ ಹೀರೋ ಎಂದ ಫ್ಯಾನ್ಸ್

  • ದ್ವೇಷ ಭಾಷಣಕ್ಕೆ ಕಡಿವಾಣ ಹಾಕಿ – ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಸೂಚನೆ

    ದ್ವೇಷ ಭಾಷಣಕ್ಕೆ ಕಡಿವಾಣ ಹಾಕಿ – ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಸೂಚನೆ

    ನವದೆಹಲಿ: ಅಭಿವ್ಯಕ್ತಿ ಸ್ವಾತಂತ್ರ‍್ಯಕ್ಕೆ ಧಕ್ಕೆಯಾಗದಂತೆ ದ್ವೇಷ ಭಾಷಣ (Hate Speech) ನಿಯಂತ್ರಿಸುವಂತೆ ಕೇಂದ್ರ ಸರ್ಕಾರ ಹಾಗೂ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ (Supreme Court) ಸೋಮವಾರ ಸೂಚಿಸಿದೆ.

    ಇನ್‌ಸ್ಟಾಗ್ರಾಮ್ (Instagram) ಇನ್‌ಫ್ಲುಯೆನ್ಸರ್ ಶರ್ಮಿಷ್ಠ ಪನೋಲಿ ವಿರುದ್ಧದ ಪ್ರಕರಣದ ದೂರುದಾರ ವಜಾಹತ್ ಖಾನ್ ಸಲ್ಲಿಸಿದ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಈ ರೀತಿಯ ಸೂಚನೆ ನೀಡಿದೆ. ದ್ವೇಷದ ಭಾಷಣವನ್ನು ʻಅಭಿವ್ಯಕ್ತಿ ಸ್ವಾತಂತ್ರ‍್ಯʼ ಎಂದು ಹೇಳುವುದಕ್ಕೆ ವಿಷಾದ ವ್ಯಕ್ತಪಡಿಸಿದ ನ್ಯಾ. ಬಿ.ವಿ ನಾಗರತ್ನ (BV Nagrathna) ಮತ್ತು ನ್ಯಾ. ಕೆವಿ ವಿಶ್ವನಾಥನ್ ಅವರನ್ನೊಳಗೊಂಡ ನ್ಯಾಯಪೀಠ ಅದನ್ನ ನಿಯಂತ್ರಿಸಲು ರಾಜ್ಯವು ಮುಂದಾಗುವುದನ್ನು ಯಾರೂ ಬಯಸುವುದಿಲ್ಲ. ಹೀಗಾಗಿ ವಾಕ್ ಸ್ವಾತಂತ್ರ‍್ಯದ ಮೌಲ್ಯದ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು ಸಲಹೆ ನೀಡಿತು.

    ದ್ವೇಷ ಮೂಡಿಸುವ ಭಾಷಣಗಳು ಅಸಮರ್ಪಕ ಅಂತ ಜನರಿಗೆ ಯಾಕೆ ಕಾಣಿಸುತ್ತಿಲ್ಲ? ಎಂದು ಪ್ರಶ್ನಿಸಿದ ನ್ಯಾಯಪೀಠ, ಇಂತಹ ಕೆಲವು ಭಾಷಣಗಳಿಗೆ ನಿಯಂತ್ರಣ ಇರಬೇಕು. ಜನರು ಅಂತಹ ದ್ವೇಷದ ಭಾಷಣ ಹಂಚಿಕೊಳ್ಳುವುದು ಮತ್ತು ಲೈಕ್ ಮಾಡುವುದನ್ನ ನಿರ್ಬಂಧಿಸಬೇಕು ಎಂದು ಹೇಳಿತು. ಇದನ್ನೂ ಓದಿ: ಡಿವೋರ್ಸ್‌ ಕೇಸ್‌| ಸಂಗಾತಿ ರೆಕಾರ್ಡ್ ಮಾಡಿದ ಕರೆಯನ್ನು ಸಾಕ್ಷಿಯಾಗಿ ಪರಿಗಣಿಸಬಹುದು – ಸುಪ್ರೀಂ

    ದ್ವೇಷ ಮತ್ತು ಕೋಮು ಸೌಹಾರ್ದತೆಯನ್ನ ಪ್ರಚೋದಿಸುವ ವಿಷಯವನ್ನ ಸೋಷಿಯಲ್‌ ಮೀಡಿಯಾದಲ್ಲಿ (Social Media) ಪೋಸ್ಟ್ ಮಾಡಿದ ಆರೋಪದ ಮೇಲೆ ವಜಾಹತ್ ಖಾನ್ ವಿರುದ್ಧ ವಿವಿಧ ರಾಜ್ಯಗಳಲ್ಲಿ ಪ್ರಕರಣ ದಾಖಲಿಸಲಾಗಿದೆ. ಅವರು ಈಗಾಗಲೇ ಒಂದು ಎಫ್‌ಐಆರ್‌ನಲ್ಲಿ (FIR) ಪೊಲೀಸ್ ಕಸ್ಟಡಿಯಲ್ಲಿದ್ದಾರೆ ಮತ್ತು ಇನ್ನೊಂದರಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ, ಇಬ್ಬರ ವಿರುದ್ಧವೂ ಪಶ್ಚಿಮ ಬಂಗಾಳದಲ್ಲಿ ಕೇಸ್ ದಾಖಲಾಗಿದೆ. ಇದನ್ನೂ ಓದಿ: ನ್ಯಾಷನಲ್ ಹೆರಾಲ್ಡ್ ಕೇಸ್‌ | ರಾಹುಲ್, ಸೋನಿಯಾ ವಿರುದ್ಧದ ಆರೋಪ ಪರಿಗಣನೆ ಕುರಿತು ತೀರ್ಪು ಕಾಯ್ದಿರಿಸಿದ ದೆಹಲಿ ಕೋರ್ಟ್‌

    ಅಭಿವ್ಯಕ್ತಿ ಸ್ವಾತಂತ್ರ‍್ಯಕ್ಕೆ ಧಕ್ಕೆಯಾಗದಂತೆ ದ್ವೇಷ ಭಾಷಣವನ್ನ ನಿಯಂತ್ರಿಸುವ ಮಾರ್ಗಗಳನ್ನ ಸೂಚಿಸುವಂತೆ ಕೇಂದ್ರ, ರಾಜ್ಯ ಸರ್ಕಾರಗಳು ಮತ್ತು ವಜಾಹತ್ ಖಾನ್ ಪರ ಹಾಜರಿದ ವಕೀಲರಿಗೆ ಸುಪ್ರೀಂ ಸೂಚಿಸಿತು. ಪಶ್ಚಿಮ ಬಂಗಾಳದ ಹೊರಗೆ ಅವರ ವಜಾಹತ್ ಖಾನ್ ವಿರುದ್ಧ ದಾಖಲಾಗಿರುವ ಎಲ್ಲಾ ಎಫ್‌ಐಆರ್‌ಗಳಲ್ಲಿ ಅವರನ್ನು ಬಂಧಿಸದಂತೆ ಸುಪ್ರೀಂ ಕೋರ್ಟ್ ತಡೆ ನೀಡಿದ ಮೂರು ವಾರಗಳ ನಂತರ ಈ ಬಗ್ಗೆ ವಿಚಾರಣೆ ನಡೆಸಿತು. ಅವರಿಗೆ ಈ ಪರಿಹಾರವನ್ನು ಮುಂದುವರೆಸಿದ ನ್ಯಾಯಾಲಯ, ಇನ್ನಷ್ಟು ಎಫ್‌ಐಆರ್‌ಗಳನ್ನು ಹಾಕಿ ವ್ಯಕ್ತಿಯನ್ನು ಜೈಲಿಗೆ ಹಾಕುವುದರಲ್ಲಿ ಏನು ಪ್ರಯೋಜನ? ಎಂದು ಪ್ರಶ್ನಿಸಿತು. ಇದಕ್ಕೆ ಉತ್ತರಿಸಿದ ಖಾನ್ ಅವರ ವಕೀಲರು, ತಮ್ಮ ಕಕ್ಷಿದಾರರು ಹಿಂದಿನ ಟ್ವೀಟ್‌ಗಳಿಗೆ ಕ್ಷಮೆಯಾಚಿಸಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಕೇರಳದ ನರ್ಸ್‌ಗೆ ಜು.16ರಂದು ಯೆಮೆನ್‌ನಲ್ಲಿ ನೇಣು; ಮರಣದಂಡನೆ ತಡೆಯಲು ಸಾಧ್ಯವಿಲ್ಲ – ಸುಪ್ರೀಂಗೆ ಕೇಂದ್ರ ಮಾಹಿತಿ

  • ದ್ವೇಷ ಭಾಷಣ ಮಾಡುವವರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಲು ಸಿಎಂ ಸೂಚನೆ

    ದ್ವೇಷ ಭಾಷಣ ಮಾಡುವವರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಲು ಸಿಎಂ ಸೂಚನೆ

    ಬೆಂಗಳೂರು: ದ್ವೇಷ ಭಾಷಣ ಮಾಡುವವರ ವಿರುದ್ಧ, ಜನರ-ರಾಜ್ಯದ ನೆಮ್ಮದಿ ಕೇಡಿಸುವವರ ವಿರುದ್ಧ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸೂಚನೆ ಕೊಟ್ಟಿದ್ದಾರೆ.

    ಪೊಲೀಸರ ವಾರ್ಷಿಕ ಸಭೆಯಲ್ಲಿ ಮಾತನಾಡಿದ ಸಿಎಂ, ಕೇಸ್‌ ದಾಖಲಿಸಬೇಕು ಅಥವಾ ಯಾರಾದ್ರು ದ್ವೇಷ ಭಾಷಣ ಮಾಡಿರುವವರ ವಿರುದ್ಧ ದೂರು ಕೊಟ್ಟರೂ ದಾಖಲಿಸಿಕೊಂಡು ಕ್ರಮ ಜರುಗಿಸಬೇಕು ಎಂದು ಪೊಲೀಸರಿಗೆ ಖಡಕ್‌ ನಿರ್ದೇಶನ ನೀಡಿದ್ದಾರೆ. ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ವಿರುದ್ಧ ಸರಿಯಾದ ಕ್ರಮ ಜರುಗಿಸದಕ್ಕೆ ಸಿಎಂ, ಪರಂ ಅಸಮಾಧಾನ

    ನೀವು ಕ್ರಮ‌ ತೆಗೆದುಕೊಳ್ಳದಿದ್ದರೆ ನಾವು ನಿಮ್ಮ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ. ನಾವು ವ್ಯವಸ್ಥೆಯನ್ನು ದೂಷಿಸಿಕೊಂಡು ಕೈ ಕಟ್ಟಿಕೊಂಡು ಕೂರೋದಲ್ಲ ಕೆಲಸ ಮಾಡಬೇಕೆಂದು ಎಂದು ಎಚ್ಚರಿಕೆ ಕೊಟ್ಟಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ 2 ವರ್ಷ 11 ತಿಂಗಳು ಸಿಎಂ ಆಗಿರ್ತಾರೆ, ಇನ್ನೂ ಸ್ಟ್ರಾಂಗ್ ಆಗ್ತಾರೆ: ಬಸವರಾಜ ರಾಯರೆಡ್ಡಿ ಬಾಂಬ್

    ತೆಲಂಗಾಣ ಮಾದರಿಯ ಟೋಪಿಗೆ ಸಿಎಂ ಅನುಮತಿ
    ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕ ಪೊಲೀಸರಿಗೆ ಹೊಸ ಮಾದರಿಯ ಟೋಪಿಗೆ ಸಮ್ಮತಿ ಸೂಚಿಸಿದ್ದಾರೆ. ಐದಾರು ರಾಜ್ಯದ ಟೋಪಿಗಳನ್ನು ಪರಿಶೀಲನೆ ಮಾಡಿದ ಸಿಎಂ ತೆಲಂಗಾಣ ರಾಜ್ಯದ ಟೋಪಿಯನ್ನು ಆಯ್ಕೆ ಮಾಡಿದ್ದಾರೆ. ತೆಲಂಗಾಣ ರಾಜ್ಯದ ಟೋಪಿಯನ್ನ ಹೆಡ್‌ಕಾನ್ಸ್ಟೇಬಲ್‌ಗೆ ಹಾಕಿಸಿ, ಪರಿಶೀಲನೆ ಮಾಡಿ ಅಂತಿಮಗೊಳಿಸಿದ್ದಾರೆ. ಇದನ್ನೂ ಓದಿ: ಜುಲೈ 1 ರಿಂದ ವಿದ್ಯುತ್ ಸಂಪರ್ಕಕ್ಕೆ ಸ್ಮಾರ್ಟ್ ಮೀಟರ್ ಅಳವಡಿಕೆ ಕಡ್ಡಾಯ – ಗ್ರಾಹಕರಿಗೆ ಏನು ಅನುಕೂಲ?

    ಕಳೆದ ಅಧಿವೇಶನದಲ್ಲಿ ಶಾಸಕ ಸಿ.ಎನ್ ಮಂಜೇಗೌಡ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವವರಿಗೆ ಒಂದೇ ರೀತಿಯ ಟೋಪಿ ನೀಡಬೇಕೆಂದು ಪ್ರಶ್ನೆ ಮಾಡಿದ್ದರು. ಇದನ್ನು ಪರಿಶೀಲನೆ ನಡೆಸಿ ವರದಿ ನೀಡುವಂತೆ ಗೃಹ ಸಚಿವ ಡಾ.ಪರಮೇಶ್ವರ್ ಅಂದಿನ ಡಿಜಿಐಜಿಪಿ ಅಲೋಕ್ ಮೋಹನ್‌ಗೆ ಸೂಚಿಸಿದ್ದರು. ಕೆಎಸ್‌ಆರ್‌ಪಿ ಉಮೇಶ್ ಕುಮಾರ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿತ್ತು. ಟೋಪಿ ಬದಲಾವಣೆ ಕುರಿತು ಸಿವಿಲ್, ಕೆಎಸ್‌ಆರ್‌ಪಿ, ಸಿಎಆರ್, ಡಿಎಆರ್, ಹಾಗೂ ಐಎಸ್‌ಡಿ ಸೇರಿ ಪೊಲೀಸ್ ಇಲಾಖೆಯ ಎಲ್ಲಾ ವಿಭಾಗಗಳ ಹೆಡ್‌ಕಾನ್ಸಟೇಬಲ್ ಹಾಗೂ ಕಾನ್ಸಟೇಬಲ್‌ಗಳಿಂದ ಸಮಿತಿ ಅಭಿಪ್ರಾಯ ಸಂಗ್ರಹಿಸಿತ್ತು, ಅಲ್ಲದೆ ಕೇರಳ, ಮಹಾರಾಷ್ಟ್ರ, ಆಂದ್ರಪ್ರದೇಶ, ತಮಿಳುನಾಡು ಸೇರಿ ಹೊರ ರಾಜ್ಯದ ಪೊಲೀಸರ ಟೋಪಿ ಕುರಿತು ಮಾಹಿತಿ ಕಲೆ ಹಾಕಲಾಗಿತ್ತು.

    ಈ ಎಲ್ಲಾ ಅಭಿಪ್ರಾಯ ಬಳಿಕ ಮೂರು ಬಾರಿ ಸಭೆ ಸೇರಿ, ಸಮಾಲೋಚನೆ ನಡೆಸಿ ಅಂತಿಮವಾಗಿ ತೆಲಂಗಾಣ ರಾಜ್ಯದ ಟೋಪಿಯನ್ನು ಸಿಎಂ ಸಿದ್ದರಾಮಯ್ಯ ಅಂತಿಮಗೊಳಿಸಿದ್ದಾರೆ.

  • ಯಾರೇ ದ್ವೇಷ ಭಾಷಣ ಮಾಡಿದ್ರು ಸರ್ಕಾರ ಸುಮ್ಮನೆ ಇರಲು ಸಾಧ್ಯವಿಲ್ಲ: ದಿನೇಶ್ ಗುಂಡೂರಾವ್

    ಯಾರೇ ದ್ವೇಷ ಭಾಷಣ ಮಾಡಿದ್ರು ಸರ್ಕಾರ ಸುಮ್ಮನೆ ಇರಲು ಸಾಧ್ಯವಿಲ್ಲ: ದಿನೇಶ್ ಗುಂಡೂರಾವ್

    ಬೆಂಗಳೂರು: ದ್ವೇಷ ಭಾಷಣ ಯಾರೇ ಮಾಡಿದ್ರು ಸರ್ಕಾರ ಸುಮ್ಮನೆ ಇರೋದಕ್ಕೆ ಆಗುವುದಿಲ್ಲ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಭಾಷಣಕ್ಕೆ ಸರ್ಕಾರ ನೊಟೀಸ್ ನೀಡಿದ ಕ್ರಮವನ್ನು ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಸಮರ್ಥನೆ ಮಾಡಿಕೊಂಡಿದ್ದಾರೆ.

    ವಿಧಾನಸೌಧದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ಚಕ್ರವರ್ತಿ ಸೂಲಿಬೆಲೆ (Chakravarthy Sulibele) ಭಾಷಣಕ್ಕೆ ಸರ್ಕಾರದಿಂದ ತಡೆ ವಿಚಾರಕ್ಕೆ ಪ್ರತಿಕ್ರಿಯಿಸಿದರು. ದ್ವೇಷ ಭಾಷಣ ಮಾಡಿದ್ರೆ ಸುಮ್ಮನೆ ಇರೋಕೆ ಆಗುತ್ತಾ? ಯಾರೇ ದ್ವೇಷ ಭಾಷಣ ಮಾಡಿದ್ರು ನೊಟೀಸ್ ಜಾರಿ ಆಗುತ್ತದೆ. ನಾನೇ ದ್ವೇಷ ಭಾಷಣ ಮಾಡಿದ್ರು ನನಗೂ ನೋಟೀಸ್ ಜಾರಿ ಆಗುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಇಡೀ ದೇಶದಲ್ಲಿ ಭ್ರಷ್ಟಾಚಾರ ಇದೆ, ಇಲ್ಲ ಅಂತ ಹೇಳಲು ಸಾಧ್ಯವೇ ಇಲ್ಲ: ದಿನೇಶ್ ಗುಂಡೂರಾವ್

    ಕಾನೂನು ಬಾಹಿರವಾಗಿ ಯಾರು ನಡೆದುಕೊಳ್ಳಬೇಕು. ಅವರ ಭಾಷಣ ಸರಿಯಿಲ್ಲ. ಅವರು ತಪ್ಪಾಗಿ ಭಾಷಣ ಮಾಡಿದ್ರೆ ನಾವೇನು ಮಾಡೋಣ. ನೆಹರು, ಇಂದಿರಾಗಾಂಧಿಯನ್ನ ನಿತ್ಯವೂ ಸೂಲಿಬೆಲೆ ಟೀಕೆ ಮಾಡ್ತಾರೆ. ದ್ವೇಷ ಭಾಷಣದ ಹೇಳಿಕೆ ಕೊಟ್ಟಾಗ ಕ್ರಮ ತೆಗೆದುಕೊಳ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಜಮೀರ್ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ – ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳುತ್ತೇವೆ: ಈಶ್ವರ್ ಖಂಡ್ರೆ

    ರಾಹುಲ್ ಗಾಂಧಿಯವರು ಯಾವುದೇ ತಪ್ಪು ಮಾಡದೇ ಹೋದ್ರು, ಕೇಸ್ ಬುಕ್ ಮಾಡಿ ಅವರ ಎಂಪಿ ಸ್ಥಾನ ಕಿತ್ತುಕೊಂಡಿದ್ದರು. ರಾಹುಲ್ ಅವರೇನು ದ್ವೇಷ ಭಾಷಣ ಮಾಡಿದ್ರಾ? ಆದರೂ ಅವರ ಮೇಲೆ ಕ್ರಮ ಮಾಡಿದ್ರಿ. ಯಾರು ದ್ವೇಷ ಭಾಷಣ ಮಾಡಬಾರದು. ಸಾಮರಸ್ಯವಾಗಿ ಇರಬೇಕು ಎಂದು ತಿರುಗೇಟು ನೀಡಿದ್ದಾರೆ.

  • ಕೋಮುದ್ವೇಷ ಭಾಷಣ ಆರೋಪ – ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್

    ಕೋಮುದ್ವೇಷ ಭಾಷಣ ಆರೋಪ – ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್

    ಮಂಗಳೂರು: ಮುಸ್ಲಿಂ ಧರ್ಮದ (Muslim Religion) ವಿರುದ್ಧ ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಭಾಷಣ ಆರೋಪದಡಿ ಬೆಳ್ತಂಗಡಿ (Belthangady) ವಿಧಾನಸಭಾ ಬಿಜೆಪಿ ಶಾಸಕ ಹರೀಶ್ ಪೂಂಜಾ (Harish Poonja) ವಿರುದ್ಧ ಎಫ್‌ಐಆರ್ ದಾಖಲಾಗಿದೆ.

    ಶನಿವಾರ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಕೋಮು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ತೆಕ್ಕಾರು ನಿವಾಸಿ ಇಬ್ರಾಹಿಂ.ಎಸ್.ಬಿ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ನೀಟ್ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಜನಿವಾರ ತೆಗೆಸಿದ ಅಧಿಕಾರಿಗಳು – ಬ್ರಾಹ್ಮಣ ಸಮಾಜದಿಂದ ಪ್ರತಿಭಟನೆ

    ಧರ್ಮ, ಧರ್ಮಗಳ ನಡುವೆ ದ್ವೇಷ ಬಿತ್ತುವ ಭಾಷಣ ಮಾಡಿದ್ದಾರೆ ಎಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ (Uppinangady Police Station) ಬಿಎನ್‌ಎಸ್ ಕಾಯ್ದೆಯಡಿ 196, 352(2) ಪ್ರಕರಣ ದಾಖಲಾಗಿದೆ.

  • ಸಿಎಂ ಯೋಗಿ ಆದಿತ್ಯನಾಥ್‌ಗೆ ಬಿಗ್‌ ರಿಲೀಫ್‌

    ಸಿಎಂ ಯೋಗಿ ಆದಿತ್ಯನಾಥ್‌ಗೆ ಬಿಗ್‌ ರಿಲೀಫ್‌

    ನವದೆಹಲಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಬಿಗ್‌ ರಿಲೀಫ್‌ ಸಿಕ್ಕಿದೆ. 2007ರಲ್ಲಿ ದ್ವೇಷ ಭಾಷಣ ಆರೋಪದ ಮೇಲೆ ಅವರ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ.

    2007ರಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ರ ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್‌ ಹೈಕೋರ್ಟ್‌ ತೀರ್ಪನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿತ್ತು. ಯೋಗಿ ಆದಿತ್ಯನಾಥ್‌ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಲಾಗಿತ್ತು. ಇಂದು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಪೀಠವು ಅರ್ಜಿ ವಜಾ ಮಾಡಿದೆ. ಇದನ್ನೂ ಓದಿ: ಬಿಬಿಎಂಪಿ ವಾರ್ಡ್‌ ವಿಂಗಡನೆ ಅರ್ಜಿ ವಿಚಾರಣೆಯ ಅಧಿಕಾರ ಹೈಕೋರ್ಟ್‌ಗಿದೆ: ಸುಪ್ರೀಂ

    SUPREME COURT

    ಸಾಕ್ಷ್ಯಾಧಾರಗಳ ಕೊರತೆಯ ಕಾರಣಕ್ಕೆ 2017ರ ಮೇನಲ್ಲಿ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಲು ರಾಜ್ಯ ಸರ್ಕಾರ ನಿರಾಕರಿಸಿತ್ತು. 2018ರಲ್ಲಿ ರಾಜ್ಯ ಸರ್ಕಾರದ ನಿರ್ಧಾರವನ್ನು ಅಲಹಾಬಾದ್‌ ಹೈಕೋರ್ಟ್‌ ಎತ್ತಿ ಹಿಡಿದಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು.

    ಎರಡು ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸಿದ ಆರೋಪದ ಮೇಲೆ ಆಗಿನ ಸಂಸದರಾಗಿದ್ದ ಯೋಗಿ ಆದಿತ್ಯನಾಥ್ ಮತ್ತು ಇತರ ಹಲವರ ವಿರುದ್ಧ ಗೋರಖ್‌ಪುರದ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಇದನ್ನೂ ಓದಿ: ಆರಗ, VVIP ವ್ಯಕ್ತಿಗಳಿಗೆ ನಿವೇಶನ – ಬಿಡಿಎ ಆಯುಕ್ತರ ವರ್ಗಾವಣೆಗೆ ಸುಪ್ರೀಂ ಸೂಚನೆ

    ಯೋಗಿ ಆದಿತ್ಯನಾಥ್ ಅವರ ದ್ವೇಷದ ಭಾಷಣದ ನಂತರ ಗೋರಖ್‌ಪುರದಲ್ಲಿ ಆ ದಿನ ಹಲವಾರು ಹಿಂಸಾಚಾರದ ಘಟನೆಗಳು ವರದಿಯಾಗಿವೆ ಎಂದು ಆರೋಪಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ದ್ವೇಷ ಭಾಷಣ ಕೇಸ್‌ – ಅಕ್ಬರುದ್ದೀನ್‌ ಓವೈಸಿ ಖುಲಾಸೆ

    ದ್ವೇಷ ಭಾಷಣ ಕೇಸ್‌ – ಅಕ್ಬರುದ್ದೀನ್‌ ಓವೈಸಿ ಖುಲಾಸೆ

    ಹೈದರಾಬಾದ್‌: ದ್ವೇಷಪೂರಿತ ಭಾಷಣ ಪ್ರಕರಣದಲ್ಲಿ ಎಐಎಂಎಂ ನಾಯಕ ಅಕ್ಬರುದ್ದೀನ್‌ ಓವೈಸಿ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿದೆ.

    ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ 2012ರ ಡಿಸೆಂಬರ್‌ನಲ್ಲಿ ನಿರ್ಮಲ್ ಮತ್ತು ನಿಜಾಮಾಬಾದ್ ಜಿಲ್ಲೆಯಲ್ಲಿ ಅಕ್ಬರುದ್ದೀನ್‌ ಓವೈಸಿ ಪ್ರಚೋದನಕಾರಿ ಭಾಷಣ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಕೇಸ್‌ ದಾಖಲಾಗಿತ್ತು. ವಾದ, ಪ್ರತಿವಾದ ಆಲಿಸಿದ್ದ ಕೋರ್ಟ್‌ ಇಂದು ತೀರ್ಪು ನೀಡುವುದಾಗಿ ಪ್ರಕಟಿಸಿತ್ತು.

    ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್-ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಕಿರಿಯ ಸಹೋದರ ಅಕ್ಬರುದ್ದೀನ್ ಓವೈಸಿ ವಿರುದ್ಧ ಒಂದು ಧರ್ಮದ ವಿರುದ್ಧ ಮಾತನಾಡಿದ್ದಕ್ಕೆ ಐಪಿಸಿಯ ವಿವಿಧ ಸೆಕ್ಷನ್‌ ಅಡಿಯಲ್ಲಿ ಪ್ರಕರಣಗಳು ದಾಖಲಾಗಿತ್ತು.

    ಕೇಸ್‌ ದಾಖಲಾದ ಬಳಿಕ ಬಂಧನಕ್ಕೆ ಒಳಗಾಗಿದ್ದ ಅಕ್ಬರುದ್ದೀನ್‌ ಓವೈಸಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಕೆಜಿಎಫ್ 2 ರಿಲೀಸ್ ಇಲ್ಲ: ಅಭಿಮಾನಿಗಳ ಪ್ರತಿಭಟನೆ, ಸಿ.ಟಿ ರವಿ ಭರವಸೆ

    ಸಿಐಡಿ ಪೊಲೀಸರು 2016ರಲ್ಲಿ ನಿಜಾಮಾಬಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್‌ಶೀಟ್‌ ಸಲ್ಲಿಸಿದ್ದರೆ ಅದೇ ವರ್ಷ ನಿರ್ಮಲ್‌ ಜಿಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಪೊಲೀಸರು ಚಾರ್ಜ್‌ಶೀಟ್‌ ಸಲ್ಲಿಸಿದ್ದರು. ನಿಜಾಮಾಬಾದ್ ಪ್ರಕರಣದಲ್ಲಿ ಒಟ್ಟು 41 ಸಾಕ್ಷಿಗಳು, ನಿರ್ಮಲ್‌ ಪ್ರಕರಣದಲ್ಲಿ 33 ಜನರನ್ನು ವಿಚಾರಣೆ ನಡೆಸಲಾಗಿತ್ತು.