Tag: Hatti Gold Mines

  • 30 ಲಕ್ಷ ಹಣ ದುರ್ಬಳಕೆ ಆರೋಪ – ದೇವದುರ್ಗ ಬಿಇಓ ಅಮಾನತು

    30 ಲಕ್ಷ ಹಣ ದುರ್ಬಳಕೆ ಆರೋಪ – ದೇವದುರ್ಗ ಬಿಇಓ ಅಮಾನತು

    ರಾಯಚೂರು: ನಿಯಮ ಬಾಹಿರವಾಗಿ ಲಕ್ಷಾಂತರ ರೂಪಾಯಿ ಹಣ ದುರ್ಬಳಕೆ ಹಾಗೂ ಕರ್ತವ್ಯ ಲೋಪ ಆರೋಪದ ಹಿನ್ನೆಲೆ ರಾಯಚೂರಿನ (Raichuru) ದೇವದುರ್ಗದ (Devadurga) ಕ್ಷೇತ್ರ ಶಿಕ್ಷಣಾಧಿಕಾರಿ ಸುಖದೇವ (Sukhadeva) ಅವರನ್ನು ಅಮಾನತು ಮಾಡಲಾಗಿದೆ.ಇದನ್ನೂ ಓದಿ: ಅನುದಾನ ಕೊಟ್ಟವರ ಕಡೆ ನಾನು: ಕಾಂಗ್ರೆಸ್‌ ಪರ ಎಸ್‌ಟಿಎಸ್‌ ಬ್ಯಾಟಿಂಗ್‌

    ದೇವದುರ್ಗದ ಊಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಾಗಿ ಜಮೀನು ಖರೀದಿ ಹಾಗೂ ಕಟ್ಟಡ ನಿರ್ಮಾಣಕ್ಕಾಗಿ ಹಟ್ಟಿ ಚಿನ್ನದ ಗಣಿ ಕಂಪನಿ ದೇಣಿಗೆ ರೂಪದಲ್ಲಿ 30 ಲಕ್ಷ ರೂ.ಯನ್ನು ನೀಡಿತ್ತು. ಆ ಹಣವನ್ನು ಸ್ವಂತ ಖಾತೆಗೆ ಜಮಾ ಮಾಡಿಕೊಂಡಿದಲ್ಲದೇ, ನಿಯಮ ಬಾಹಿರವಾಗಿ ಬಳಕೆ ಮಾಡಿದ್ದರು.

    ಸರ್ಕಾರದಿಂದ ನೀಡಲಾದ ಮೊಬೈಲ್ ಸಂಖ್ಯೆ ಸದಾ ಸ್ವಿಚ್ಡ್ ಆಫ್ ಇಡುತ್ತಿದ್ದು, ಸಹ ಶಿಕ್ಷಕರು, ಸಾರ್ವಜನಿಕರಿಗೆ ಸರಿಯಾದ ರೀತಿ ಸ್ಪಂದನೆ ನೀಡುತ್ತಿರಲಿಲ್ಲ. ಈ ಆರೋಪಗಳ ಹಿನ್ನೆಲೆ ಬಿಇಓ ಸುಖದೇವರನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧೀನ ಕಾರ್ಯದರ್ಶಿಗಳು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.ಇದನ್ನೂ ಓದಿ: ಕಂದ ನನ್ನ ಒಡಲಲ್ಲಿ, ನಾನು ಅಮ್ಮನ ಮಡಿಲಲ್ಲಿ: ತಾಯ್ತನದ ಖುಷಿಯಲ್ಲಿ ಹರಿಪ್ರಿಯಾ

  • ಹಟ್ಟಿ ಚಿನ್ನದ ಗಣಿಯಲ್ಲಿ ಕಲ್ಲು ಕುಸಿತ – ಓರ್ವ ಕಾರ್ಮಿಕ ಸಾವು

    ಹಟ್ಟಿ ಚಿನ್ನದ ಗಣಿಯಲ್ಲಿ ಕಲ್ಲು ಕುಸಿತ – ಓರ್ವ ಕಾರ್ಮಿಕ ಸಾವು

    ರಾಯಚೂರು: ಮೇಲ್ಬಾಗದಿಂದ ಕಲ್ಲು ಕುಸಿದು ಬಿದ್ದು ಕಾರ್ಮಿಕ ಸಾವನ್ನಪ್ಪಿ ಮತ್ತೋರ್ವ ಕಾರ್ಮಿಕರೊಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ನಗರದ ದೇವದುರ್ಗ ತಾಲೂಕಿನಲ್ಲಿರುವ ಊಟಿ ಚಿನ್ನದಗಣಿಯಲ್ಲಿ ನಡೆದಿದೆ.

    ಯಲ್ಲಪ್ಪ ಮೃತ ಕಾರ್ಮಿಕ. ಹನುಮಂತ ಗಾಯಗೊಂಡ ಕಾರ್ಮಿಕ. ಕಾರ್ಮಿಕರು ಹಟ್ಟಿ ಗಣಿ ವ್ಯಾಪ್ತಿಯಲ್ಲಿ ಇರುವ ಊಟಿ ಚಿನ್ನದಗಣಿಯಲ್ಲಿ ಸುಮಾರು 800 ಅಡಿ ಆಳದ ಅಂಡರ್ ಗ್ರೌಂಡ್‍ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆ ಮೇಲ್ಬಾಗದಿಂದ ಕಲ್ಲು ಕುಸಿದು ಬಿದ್ದು ವ್ಯಕ್ತಿಯು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಹಿಜಬ್ ಹೈಡ್ರಾಮಾ – ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ಆರು ಯುವಕರು ವಶ

    ಗಾಯಗೊಂಡ ಕಾರ್ಮಿಕ ಹನುಮಂತ ಅವರನ್ನು ಹಟ್ಟಿ ಚಿನ್ನದಗಣಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುತ್ತಿಗೆ ಕಾರ್ಮಿಕರು ಟೆಕ್ನೋಮೈನ್ಸ್ ಸಂಸ್ಥೆ ಅಡಿ ಕಾರ್ಯನಿರ್ವಹಿಸುತ್ತಿದ್ದರು. ಈ ಅವಘಡಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವೆಂದು ಕಾರ್ಮಿಕರು ಆರೋಪಿಸಿದ್ದಾರೆ. ಇದನ್ನೂ ಓದಿ: ನಮಗೆ ಆಜಾದಿ ಬೇಕು ಅಂತಾ ಘೋಷಣೆ ಕೂಗ್ತಿಯಾ? ನಿನ್ನನ್ನು ಅಟ್ಟಾಡಿಸಿ ಹೊಡೀತಿವಿ: ಸೀಮಾ ಇನಾಂದಾರ್‌ಗೆ ಜೀವ ಬೆದರಿಕೆ

  • ರಾಯಚೂರಿನ ಹಟ್ಟಿ ಚಿನ್ನದ ಗಣಿಯಲ್ಲಿ ಅದಿರು ಕದ್ದು ಸಿಕ್ಕಿಬಿದ್ದ ಅಧಿಕಾರಿ!

    ರಾಯಚೂರಿನ ಹಟ್ಟಿ ಚಿನ್ನದ ಗಣಿಯಲ್ಲಿ ಅದಿರು ಕದ್ದು ಸಿಕ್ಕಿಬಿದ್ದ ಅಧಿಕಾರಿ!

    ರಾಯಚೂರು: ದೇಶದ ಏಕೈಕ ಬಂಗಾರ ಉತ್ಪಾದಿಸುವ ಚಿನ್ನದಗಣಿ ಕಂಪನಿ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿಯಲ್ಲಿ ಅಧಿಕಾರಿಯೇ ಅದಿರು ಕದ್ದು ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

    ಭೂತಜ್ಞ ಗಣೇಶ್ ಒಂದು ಕೆ.ಜಿ. 900 ಗ್ರಾಂ ಚಿನ್ನದ ಅದಿರನ್ನ ಹೊರಗಡೆ ಸಾಗಿಸುತ್ತಿದ್ದಾಗ ಸೆಕ್ಯೂರಿಟಿ ಗಾರ್ಡ್‍ಗೆ ಸಿಕ್ಕಿಬಿದ್ದಿದ್ದಾನೆ. ಗಣಿಗಾರಿಕೆಯಲ್ಲಿ ತೆಗೆದ ಅದಿರನ್ನ ಪ್ರಯೋಗಾಲಯಕ್ಕೆ ಅಥವಾ ಮಿಲ್‍ಗೆ ಕಳುಹಿಸಿದೆ ಸ್ವತಃ ತಾನೇ ತೆಗೆದುಕೊಂಡು ಹೊರ ಹೋಗುತ್ತಿದ್ದಾಗ ಬಂಧಿಸಿ ಪೊಲೀಸರಿಗೆ ಒಪ್ಪಿಸಲಾಗಿದೆ.

    ಹಟ್ಟಿ ಚಿನ್ನದಗಣಿ ಪ್ರಧಾನ ವ್ಯವಸ್ಥಾಪಕ ಪ್ರಭಾಕರ್ ಸಂಗೂರಮಠ್ ಅವರು ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಆರೋಪಿ ಗಣೇಶ್‍ನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

     

     

  • ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಹಟ್ಟಿ ಚಿನ್ನದ ಗಣಿ ಕಾರ್ಮಿಕರು

    ರಾಯಚೂರು: ದೇಶದ ಏಕೈಕ ಚಿನ್ನ ಉತ್ಪಾದನಾ ಗಣಿ ಸಂಸ್ಥೆಯಾದ ರಾಯಚೂರಿನ ಹಟ್ಟಿ ಚಿನ್ನದ ಗಣಿ ಕಂಪೆನಿಯ ಕಾರ್ಮಿಕರು ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ.

    ಕಂಪೆನಿಯು ವಿಭಾಗೀಯ ಸ್ಟೋರ್ ಪ್ರಾರಂಭಿಸಲು ಸಹಕಾರ ಸಂಘದ ವ್ಯವಹಾರಗಳನ್ನ ನಿಲ್ಲಿಸಿದ್ದು ಸುಮಾರು ವರ್ಷಗಳಿಂದ ದುಡಿದ ಕಾರ್ಮಿಕರನ್ನ ಕೈಬಿಟ್ಟಿದೆ. ಹೀಗಾಗಿ ಹಟ್ಟಿ ಚಿನ್ನದ ಗಣಿ ಸಹಕಾರ ಸಂಘದ 37 ಜನ ಕಾರ್ಮಿಕರಿಗೆ 22 ತಿಂಗಳಿನಿಂದ ಕೆಲಸವೂ ಇಲ್ಲ ಸಂಬಳವೂ ಇಲ್ಲ. 750 ದಿನಗಳಿಂದ ಶಾಂತಿಯುತ ಹೋರಾಟ ನಡೆಸಿದರೂ ಕಾರ್ಮಿಕರ ಸಮಸ್ಯೆಗೆ ಗಣಿ ಆಡಳಿತ ಮಂಡಳಿ ಸ್ಪಂದನೆ ನೀಡಿಲ್ಲ. ಹೀಗಾಗಿ ಕಾರ್ಮಿಕರು ಗಣಿಯ ಪ್ರಧಾನ ವ್ಯವಸ್ಥಾಪಕರ ಮೂಲಕ ಉದ್ಯೋಗ ಕೊಡಿ ಇಲ್ಲವೇ 37 ಜನ ಕಾರ್ಮಿಕರ ಕುಟುಂಬಳಿಗೆ ದಯಾಮರಣಕ್ಕೆ ಅವಕಾಶ ಕೊಡಿ ಅಂತ ರಾಷ್ಟ್ರಪತಿಗೆ ಮನವಿ ಮಾಡಿದ್ದಾರೆ.

    ಫೆಬ್ರವರಿ 14 ರಿಂದ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲು ಕಾರ್ಮಿಕರು ನಿರ್ಧರಿಸಿದ್ದಾರೆ. ಹೋರಾಟದಲ್ಲಿ ಯಾರಿಗೆ ಏನೇ ಆದ್ರೂ ಹಟ್ಟಿ ಚಿನ್ನದ ಗಣಿ ಆಡಳಿತ ಮಂಡಳಿಯೇ ಕಾರಣ ಅಂತ ಕಾರ್ಮಿಕರು ಎಚ್ಚರಿಸಿದ್ದಾರೆ.

    ಈಗಾಗಲೇ ಸಹಕಾರ ಸಂಘವನ್ನ ಸಮಾಪನಗೊಳಿಸಿ ಕಂಪೆನಿಯೇ ಸ್ಟೋರ್ ಪ್ರಾರಂಭಿಸಿದೆ. ಆದ್ರೆ ಕೆಲಸಗಾರರನ್ನ ಕಂಪೆನಿಯಲ್ಲಿ ಸೇರಿಸಿಕೊಳ್ಳದೇ ಸಂಬಳವನ್ನೂ ನೀಡದೆ ವೇತನ ಒಡಂಬಡಿಕೆಯ ನಿಯಮವನ್ನ ಉಲ್ಲಂಘನೆ ಮಾಡಿದೆ. ಕಾರ್ಮಿಕ ನೀತಿಯನ್ನ ಬದಿಗೊತ್ತಿ ತೆಗೆದುಕೊಂಡಿರುವ ನಿರ್ಧಾರದಿಂದ 37 ಜನ ಕಾರ್ಮಿಕ ಕುಟುಂಬಗಳು ಬೀದಿಗೆ ಬಂದಿವೆ ಎಂದು ದಿ ಕೋ-ಆಪರೇಟಿವ್ ಸ್ಟೋರ್ ಎಂಪ್ಲಾಯಿಸ್ ಅಸೋಸಿಯೇಷನ್ ಅಧ್ಯಕ್ಷ ಇಮಾಮ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.