Tag: haveri Public TV

  • ಸಮೀಕ್ಷೆ ಬಿಜೆಪಿ ಅಧ್ಯಕ್ಷರು ಹೇಳಿ ಮಾಡಿಸಿದ ಹಾಗಿದೆ- ಪರಮೇಶ್ವರ್

    ಸಮೀಕ್ಷೆ ಬಿಜೆಪಿ ಅಧ್ಯಕ್ಷರು ಹೇಳಿ ಮಾಡಿಸಿದ ಹಾಗಿದೆ- ಪರಮೇಶ್ವರ್

    – ಎಕ್ಸಿಟ್ ಪೋಲ್‍ನಲ್ಲಿ ವಿಶ್ವಾಸವಿಲ್ಲ

    ಬೆಂಗಳೂರು: ಚುನಾವಣೋತ್ತರ ಸಮೀಕ್ಷೆ ಬಿಜೆಪಿ ಅಧ್ಯಕ್ಷರು ಹೇಳಿ ಮಾಡಿಸಿದ ಹಾಗೆ ಇದೆ. ವಾಸ್ತವ ಸ್ಥಿತಿ ದೇಶದಲ್ಲಿ ಬೇರೆ ರೀತಿಯಲ್ಲಿ ಇದೆ. ಇಂತಹ ಸಂದರ್ಭದಲ್ಲಿ 300 ಸ್ಥಾನಗಳು ಬರುತ್ತದೆ ಎಂದು ಹೇಳಿಸಿಕೊಂಡು ಬಿಜೆಪಿ ಸಮಾಧಾನ ಪಟ್ಟುಕೊಳ್ಳುತ್ತಿದೆ. ಫಲಿತಾಂಶ ಬಂದ ಬಳಿಕ ಸ್ಪಷ್ಟವಾದ ಚಿತ್ರಣ ಗೊತ್ತಾಗುತ್ತದೆ ಎಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ತಿಳಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಯುಪಿಎ ಅಧಿಕಾರಕ್ಕೆ ಬರುವ ಎಲ್ಲಾ ಸಾಧ್ಯತೆಗಳು ಇವೆ. ಭಾನುವಾರ ದೆಹಲಿ ಸಭೆಯಲ್ಲೂ ಚರ್ಚೆ ಮಾಡಿದ್ದೇವೆ. ಅಲ್ಲಿ ಸಿಕ್ಕ ಮಾಹಿತಿ ಪ್ರಕಾರ ಯುಪಿಎ ಮತ್ತೆ ಅಧಿಕಾರಕ್ಕೆ ಬರುತ್ತದೆ. ಕರ್ನಾಟಕದಲ್ಲಿ 18 ಸೀಟು ಬಿಜೆಪಿಗೆ ಬರುತ್ತದೆ ಅಂದರೆ ನಂಬಲು ಸಾಧ್ಯವೇ ಎಂದು ಪ್ರಶ್ನಿಸಿದರು.

    ನನಗೆ ಎಕ್ಸಿಟ್ ಪೋಲ್‍ನಲ್ಲಿ ವಿಶ್ವಾಸ ಇಲ್ಲ. ಗ್ರೌಂಡ್ ರಿಯಾಲಿಟಿ ಬೇರೆ ರೀತಿಯಲ್ಲಿದೆ. ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ 20 ಕ್ಷೇತ್ರದಲ್ಲಿ ಗೆಲ್ಲಲಿದ್ದೇವೆ. ಇದು ನಮ್ಮ ಲೆಕ್ಕಾಚಾರ, ವಾತಾವರಣ ಕೂಡ ಹಾಗೆ ಇದೆ. ಚುನಾವಣಾ ಪ್ರಚಾರ ಆಧರಿಸಿ ನಾವು ಹೇಳುತ್ತಿದ್ದೇವೆ. ಇಂತಹ ಸಂದರ್ಭಗಳಲ್ಲಿ 18 ಸೀಟು ಬಿಜೆಪಿಗೆ ಬರುತ್ತದೆ ಎನ್ನುವುದರಲ್ಲಿ ಅರ್ಥ ಏನಿದೆ ಎಂದರು.

    ಸಮೀಕ್ಷೆಯಂತೆ ಫಲಿತಾಂಶ ಬಂದರೆ ದೋಸ್ತಿಗಳ ಮೇಲೆ ಪರಿಣಾಮ ಬೀರಲ್ಲ. ಫಲಿತಾಂಶ ಹಾಗೆ ಆಗೋದಕ್ಕೆ ಸಾಧ್ಯವಿಲ್ಲ ಅಂದ ಮೇಲೆ ನಾನು ಯಾವುದೇ ಊಹೆ ಮಾಡುವುದಕ್ಕೆ ಹೋಗುವುದಿಲ್ಲ. ರಾಜಕಾರಣ ಹೇಗಿರುತ್ತದೆ ಅಂದರೆ ಪರಿಸ್ಥಿತಿ ಫಲಿತಾಂಶ ಬಂದರೆ ಯಾವ್ಯಾವ ಲೆಕ್ಕಾಚಾರ ಯಾರು ಹಾಕಿದ್ದಾರೆ ನೋಡಬೇಕು. ಆದರೆ ಸರ್ಕಾರವಂತೂ ಸುಭದ್ರವಾಗಿರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಇವಿಎಂ ಹ್ಯಾಕ್ ಬಗ್ಗೆ ಇಡೀ ದೇಶದಲ್ಲಿ ಮಾತುಗಳಿವೆ. ಕಳೆದ ಬಾರಿ ಕೂಡ ಅದನ್ನು ಮಾತನಾಡಿದ್ದೆವು. ಕಾಂಗ್ರೆಸ್ ನೇತೃತ್ವದಲ್ಲಿ ಅನೇಕ ಪಕ್ಷಗಳು ರಾಷ್ಟ್ರಪತಿ ಹಾಗೂ ಎಲೆಕ್ಷನ್ ಕಮೀಷನ್ ಭೇಟಿ ಮಾಡಿದೆವು. ಬ್ಯಾಲೆಟ್ ಪೇಪರ್ ಬೇಕು ಎಂದು ಹೇಳಿದ್ವಿ. ಅದನ್ನು ಕೂಡ ಅವರು ತಳ್ಳಿ ಹಾಕಿದ್ದಾರೆ. ಬಹಳಷ್ಟು ಜನ ಇವಿಎಂ ಹ್ಯಾಕ್ ಆಗೋದನ್ನು ತೋರಿಸಿಕೊಟ್ಟಿದ್ದಾರೆ. ನಮಗೂ ಕೂಡ ಅದೇ ರೀತಿಯ ಅನುಮಾನಗಳಿವೆ. ಈ ಹಿನ್ನೆಲೆಯಲ್ಲಿ ಸಮೀಕ್ಷೆ ನೋಡಿದರೆ ಯಾವ ರೀತಿ ಆಗುತ್ತದೆ ಎಂದು ಹೇಳಳು ಸಾಧ್ಯವಿಲ್ಲ ಎಂದು ಅವರು ತಿಳಿಸಿದರು.

  • ಭಾರತೀಯರಿಗೆ ಅಭಿನಂದನ್ ತಂದೆ ಧನ್ಯವಾದ

    ಭಾರತೀಯರಿಗೆ ಅಭಿನಂದನ್ ತಂದೆ ಧನ್ಯವಾದ

    ಮುಂಬೈ: ಪಾಕಿಸ್ತಾನದ ವಶದಲ್ಲಿರುವ ಭಾರತೀಯ ವಿಂಗ್ ಕಮಾಂಡರ್ ಅಭಿನಂದನ್ ವರ್ಥಮಾನ್ ಅವರ ತಂದೆ ಭಾರತೀಯರಿಗೆ ಧನ್ಯವಾದ ತಿಳಿಸಿದ್ದಾರೆ.

    ನನ್ನ ಮಗ ನಿಜಕ್ಕೂ ಒಬ್ಬ ಯೋಧ. ಆತನ ಬಗ್ಗೆ ನನಗೆ ಹೆಮ್ಮೆಯಿದ್ದು, ಆತ ಸುರಕ್ಷಿತವಾಗಿ ಭಾರತಕ್ಕೆ ವಾಪಸ್ಸಾಗುವಂತೆ ಪ್ರಾರ್ಥಿಸುತ್ತಿದ್ದೇನೆ. ಅಲ್ಲದೇ ಭಾರತೀಯರು ಕೂಡ ಮಗ ವಾಪಸ್ ಬರುವಂತೆ ಪ್ರಾರ್ಥಿಸುತ್ತಿರುವುದಕ್ಕೆ ಧನ್ಯವಾದ ಅರ್ಪಿಸುತ್ತೇನೆ ಎಂದು ಎಸ್. ವರ್ಥಮಾನ್ ಅವರು ಸಂದೇಶ ರವಾನಿಸಿದ್ದಾರೆ.

    ಸಂದೇಶದಲ್ಲಿ ಏನಿದೆ?:
    ನಿಮ್ಮೆಲ್ಲರ ಪ್ರೀತಿ, ಕಾಳಜಿ ಹಾಗೂ ಪ್ರಾರ್ಥನೆಗೆ ಧನ್ಯವಾದಗಳು. ನಾನು ಈವಾಗಷ್ಟೇ ಪಾಕಿಸ್ತಾನ ಬಿಡುಗಡೆ ಮಾಡಿದೆ ವಿಡಿಯೋ ನೋಡಿದೆ. ಅಭಿನಂದನ್ ಜೀವಂತವಾಗಿದ್ದು, ಸೇನೆ ಕೇಳುತ್ತಿರುವ ಪ್ರಶ್ನೆಗಳಿಗೆಲ್ಲ ಧೈರ್ಯವಾಗಿ ಉತ್ತರಿಸುತ್ತಿದ್ದಾನೆ. ಆತ ನಿಜಕ್ಕೂ ಶುದ್ಧ ಮನಸ್ಸಿನ ಯೋಧ. ದೇವರ ಕೃಪೆ ಅಭಿ ಮೇಲಿದ್ದು, ಆತ ಯಾವುದೇ ಪ್ರಾಣಾಪಾಯವಿಲ್ಲದೇ ಭರತ ಭೂಮಿಗೆ ವಾಪಸ್ ಬರಬೇಕು ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.

    ನನಗೆ ಗೊತ್ತು ನಿಮ್ಮೆಲ್ಲರ ಆಶೀರ್ವಾದದ ಕೈಗಳು ಅಭಿನಂದನ್ ಮೇಲಿದೆ. ಆತನ ಸುರಕ್ಷಿತವಾಗಿ ಬಿಡುಗಡೆಯಾಗುವಂತೆ ನೀವೆಲ್ಲ ಪ್ರಾರ್ಥಿಸುತ್ತಿದ್ದೀರಾ. ಆತನಿಗೆ ಅಲ್ಲಿ ಯಾವುದೇ ತೊಂದರೆಯಾಗದಿರಲಿ ಹಾಗೂ ಸುರಕ್ಷಿತವಾಗಿ ಮರಳಲಿ ಎಂದು ನಾನು ಕೂಡ ಪ್ರಾರ್ಥಿಸುತ್ತೇನೆ. ಈ ಸಮಯದಲ್ಲಿ ನಮ್ಮ ಜೊತೆ ನೀವೆಲ್ಲ ಕೈ ಜೋಡಿಸಿರುವುದಕ್ಕೆ ಧನ್ಯವಾದಗಳು ಎಂದಿದ್ದಾರೆ.

    ಅಭಿನಂದನ್ ಪಾಕ್ ವಶವಾಗಿದ್ದು ಹೇಗೆ..?
    ಪಾಕಿಸ್ತಾನ ಮಂಗಳವಾರ ಭಾರತದ ಗಡಿಯೊಳಗೆ ಯುದ್ಧ ವಿಮಾನಗಳನ್ನು ನುಗ್ಗಿಸಿ ದುಸ್ಸಾಹಸ ಮಾಡಿತ್ತು. ಭಾರತದ ಗಡಿ ದಾಟಿದ 3 ವಿಮಾನಗಳ ಪೈಕಿ, ಪಾಕಿಸ್ತಾನದ ಎಫ್-16 ಒಂದು ಯುದ್ಧ ವಿಮಾನವನ್ನು ಭಾರತ ಹೊಡೆದುರುಳಿಸಿದೆ. ಇನ್ನೆರಡು ವಿಮಾನಗಳನ್ನು ಮಿಗ್-21 ವಿಮಾನವನ್ನು ಅಟ್ಟಾಡಿಸಿಕೊಂಡು ಹೋಗಿದೆ. ಪಾಕ್ ನೆಲದಲ್ಲಿ ಮಿಗ್ 22 ನೆಲಕ್ಕುರುಳಿದೆ. ಈ ವೇಳೆ ಅಭಿನಂದನ್ ಪ್ಯಾರಾಚೂಟ್‍ನಿಂದ ಜಿಗಿದು ನೆಲಕ್ಕೆ ಬಿದ್ದಿದ್ದಾರೆ. ತಮ್ಮ ನೆಲದಲ್ಲಿ ಅಭಿನಂದನ್ ಇರುವುದನ್ನು ಗಮನಿಸಿದ ಸ್ಥಳಿಯರು ಪಾಕಿಸ್ತಾನ ಸೇನೆಗೆ ಮಾಹಿತಿ ರವಾನಿಸಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಪಾಕ್ ಸೈನಿಕರು ಅಭಿನಂದನ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಅಭಿನಂದನ್ ಯಾರು..?
    45 ವರ್ಷದ ಅಭಿನಂದನ್ ಅವರು ಮೂಲತಃ ತಮಿಳುನಾಡಿನ ಸಿಂಹಕುಟ್ಟಿಯವರಾಗಿದ್ದಾರೆ. ವಿಂಗ್ ಕಮಾಂಡರ್ ಆಗಿರುವ ಅಭಿನಂದನ್ ಅವರಿಗೆ ಮಿಗ್ 21ನಲ್ಲೇ 3000 ಗಂಟೆ ಹಾರಾಟ ನಡೆಸಿರುವ ಅನುಭವವಿದೆ.

    ಇವರ ತಂದೆಯ ಹೆಸರು ಎಸ್. ವರ್ಥಮಾನ್ ಆಗಿದ್ದು, ಇವರು ನಿವೃತ್ತ ಮಾರ್ಷಲ್ ಆಗಿದ್ದಾರೆ. ಪರಮವಿಶಿಷ್ಟ ಸೇವಾ ಪದಕ ಪಡೆದಿದ್ದ ವರ್ಥಮಾನ್, ಮಣಿರತ್ನಂ ನಿರ್ದೇಶನದ ಚೆಲಿಯಾ ಚಿತ್ರಕ್ಕೆ ಸಲಹೆಗಾರರಾಗಿ ಕೆಲಸ ಮಾಡಿದ್ದಾರೆ. ಚೆಲಿಯಾ – ಕಾರ್ಗಿಲ್ ಯುದ್ಧದ ವೇಳೆ ಪಾಕ್‍ನಲ್ಲಿ ಯುದ್ಧ ಕೈದಿಯಾದ ಸೈನಿಕನ ಕಥೆಯಾಗಿರುವ ಚಿತ್ರವಾಗಿದೆ.

    https://www.youtube.com/watch?v=05fJuSBr4ZE

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದರೂ ನಿಂತು ನೋಡಿ ಮಾನವೀಯತೆ ಮರೆತ್ರು!

    ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದರೂ ನಿಂತು ನೋಡಿ ಮಾನವೀಯತೆ ಮರೆತ್ರು!

    ಹಾವೇರಿ: ಬೈಕ್ ಮತ್ತು ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಸವಾರ ಗಂಭೀರ ಗಾಯಗೊಂಡು ರಸ್ತೆಯಲ್ಲಿ ಬಿದ್ದು ನರಳುತ್ತಿದ್ದರೂ ಯಾರೊಬ್ಬರೂ ಆಸ್ಪತ್ರೆಗೆ ಸೇರಿಸದೇ ಅಮಾನವೀಯತೆ ಮೆರೆದ ಘಟನೆ ಜಿಲ್ಲೆಯಲ್ಲಿ ನಡೆದಿದೆ.

    ಹಾನಗಲ್ ತಾಲೂಕಿನ ಹಿರೇಕಾಂಶಿ ಗ್ರಾಮದ ನಿವಾಸಿ ಗದಿಗೆಯ್ಯ ಹಿರೇಮಠ (38) ಗಂಭೀರವಾಗಿ ಗಾಯಗೊಂಡಿದ್ದ ಸವಾರ. ಗದಿಗೆಯ್ಯ ಅವರು ಅಕ್ಕಿಆಲೂರು ಮಾರ್ಗವಾಗಿ ಹಾನಗಲ್‍ನಿಂದ ಸ್ವಗ್ರಾಮಕ್ಕೆ ಬೈಕ್ ಹೊರಟಿದ್ದರು. ಈ ವೇಳೆ ಅಕ್ಕಿಆಲೂರು ಬಳಿ ಟಿಪ್ಪರ್ ಬಂದು ಡಿಕ್ಕಿಹೊಡೆದಿದೆ. ಪರಿಣಾಮ ರಕ್ತಸ್ರಾವದಿಂದ ಸ್ಥಳದಲ್ಲಿಯೇ ಬಿದ್ದಿದ್ದರು. ಇದನ್ನು ನೋಡಿದ ಸ್ಥಳೀಯರು ಯಾವುದೇ ಸಹಾಯಕ್ಕೆ ನಿಲ್ಲದೇ ಪ್ರಥಮ ಚಿಕಿತ್ಸೆ ನೀಡದೇ ಅಮಾನವೀಯತೆ ಮೆರೆದಿದ್ದಾರೆ.

    ಕೆಲವರು ಮೊಬೈಲ್‍ನಲ್ಲಿ ದೃಶ್ಯವನ್ನು ಸೆರೆಹಿಡಿದಿದ್ದಾರೆ. ಸ್ಥಳೀಯರೊಬ್ಬರು ಆಂಬುಲೆನ್ಸ್ ಗೆ ಫೋನ್ ಮಾಡಿ ಮಾಹಿತಿ ನೀಡಿದ್ದಾರೆ. ಘಟನೆ ಸಂಭವಿಸಿ ಅರ್ಧ ಗಂಟೆಯ ಬಳಿಕ ಅಕ್ಕಿಆಲೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆ ಅಗತ್ಯವಾಗಿದ್ದರಿಂದ ಗದಿಗೆಯ್ಯ ಅವರನ್ನು ಹುಬ್ಬಳ್ಳಿಯ ಕಿಮ್ಸ್ ಗೆ ರವಾನೆ ಮಾಡಿ ಚಿಕಿತ್ಸೆ ಕೊಡಿಸಲಾಗಿದೆ. ಅದೃಷ್ಟವಶಾತ್ ಗದಿಗೆಯ್ಯ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಹಾನಗಲ್ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಟಿಪ್ಪರ್ ಹಾಗೂ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv