Tag: Hawala

  • ಹವಾಲಾ ಹಣದ ಮೇಲೆ ED, IT ನಿಗಾ – ಪೆಟ್ರೋಲ್ ಬಂಕ್ ಮೇಲೆ ಕಣ್ಣು

    ಹವಾಲಾ ಹಣದ ಮೇಲೆ ED, IT ನಿಗಾ – ಪೆಟ್ರೋಲ್ ಬಂಕ್ ಮೇಲೆ ಕಣ್ಣು

    ನವದೆಹಲಿ: 2,000 ರೂ. ಮುಖಬೆಲೆಯ ನೋಟುಗಳನ್ನು (Rs. 2000 Note) ಇದೀಗ ಭಾರತೀಯ ರಿಸರ್ವ್ ಬ್ಯಾಂಕ್ (RBI) ಹಿಂಪಡೆದಿದ್ದು, ಮಂಗಳವಾರದಿಂದ ಸಾರ್ವಜನಿಕರಿಗೆ ಬ್ಯಾಂಕುಗಳಿಂದ (Bank) ನೋಟ್ ವಿನಿಮಯ ಮಾಡಿಕೊಳ್ಳು ಅನುಮತಿಸಿದೆ. ಇದರ ಬೆನ್ನಲ್ಲೇ ಜಾರಿ ನಿರ್ದೇಶನಾಲಯ (ED) ಹಾಗೂ ಆದಾಯ ತೆರಿಗೆ ಇಲಾಖೆ (IT) ಹವಾಲಾ ಹಣದ (Hawala Money) ಮೇಲೆ ಕಣ್ಣಿಟ್ಟಿದೆ.

    ಸದ್ಯ ಆರ್‌ಬಿಐ 3 ತಿಂಗಳು ನೋಟು ವಿನಿಮಯಕ್ಕೆ ಅವಕಾಶ ಕೊಟ್ಟಿದೆ. ಈ ನಡುವೆ ಹವಾಲಾ ದಂಧೆಕೋರರಿಂದ ನೋಟು ವಿನಿಮಯದ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಹೀಗಾಗಿ ಇಡಿ ಹಾಗೂ ಐಟಿ ಇಲಾಖೆಗಳು ಹವಾಲಾ ದಂಧೆಕೋರರ ಮೇಲೆ ನಿಗಾ ಇರಿಸಿದ್ದು, ಈ ಕುರಿತು ಪೊಲೀಸರಿಗೆ ಸೂಚನೆ ನೀಡಲಾಗಿದೆ.

    ಹವಾಲಾ ದಂಧೆಕೋರರು ಅಪಾರ ಪ್ರಮಾಣದಲ್ಲಿ ಹಣ ಸಂಗ್ರಹಿಸಿದ್ದು, ಹೀಗಾಗಿ ನೋಟು ಹಿಂಪಡೆಯಲು ಮುಂದಾಗಿರುವ ಬಗ್ಗೆ ಮಾಹಿತಿ ದೊರಕಿದೆ. ಕಾಳಸಂತೆಯಲ್ಲಿ ಹವಾಲಾ ದಂಧೆಕೋರರ ಮೇಲೆ ನಿಗಾ ವಹಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದ್ದು, ಹೀಗಾಗಿ ನಗರ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ಪ್ರಮುಖವಾಗಿ ಪೆಟ್ರೋಲ್ ಬಂಕ್‌ಗಳ ಮೇಲೆ ಪೊಲೀಸರು ನಿಗಾ ಇಟ್ಟಿದ್ದಾರೆ. ಇದನ್ನೂ ಓದಿ: ಚಿಲ್ಲರೆ ವ್ಯಾಪಾರಿಗಳು ಗ್ರಾಹಕರ ಮೊಬೈಲ್ ನಂಬರ್ ಕೇಳುವಂತಿಲ್ಲ – ಕೇಂದ್ರ ಸರ್ಕಾರ

    ನೋಟು ವಿನಿಮಯಕ್ಕೆ ಸೆಪ್ಟೆಂಬರ್ 30ರ ವರೆಗೆ ಆರ್‌ಬಿಐ ಅವಕಾಶ ನೀಡಿದೆ. ಆದರೆ ನೋಟು ಬದಲಾವಣೆ ವೇಳೆ ಸಾರ್ವಜನಿಕರು ಯಾವುದೇ ದಾಖಲಾತಿ ನೀಡುವ ಅಗತ್ಯವಿಲ್ಲ. ಹೀಗಾಗಿ ಕಾಳಸಂತೆಯ ಹವಾಲಾ ದಂಧೆಕೋರರಿಗೆ ನೋಟುಗಳನ್ನು ಸುಲಭವಾಗಿ ಬದಲಾಯಿಸಿಕೊಳ್ಳಲು ಸುವರ್ಣ ಅವಕಾಶವಾಗಿದೆ. ಆದರೆ ಒಬ್ಬರಿಗೆ ದಿನಕ್ಕೆ 20 ಸಾವಿರ ರೂ. ಮಾತ್ರವೇ ಬದಲಾಯಿಸಿಕೊಳ್ಳಲು ಅವಕಾಶವಿದ್ದು, ಹೀಗಾಗಿ ಹವಾಲಾ ದಂಧೆಕೋರರು ಸಾರ್ವಜನಿಕರ ಮೂಲಕ ನೋಟು ಬದಲಾಯಿಸಿಕೊಳ್ಳಲು ಮುಂದಾಗಿದ್ದಾರೆ.

    ಈ ಹಿಂದೆ ಹವಾಲಾ ಹಣದೊಂದಿಗೆ ಸಿಕ್ಕಿರವವರ ಮೇಲೆ ಪೊಲೀಸರು ಹೆಚ್ಚಿನ ನಿಗಾ ವಹಿಸಿದ್ದು, ಬ್ಯಾಂಕ್‌ಗಳ ಬಳಿ ಮಫ್ತಿಯಲ್ಲಿದ್ದಾರೆ. ಇದನ್ನೂ ಓದಿ: ಆರ್‌ವಿ ರಸ್ತೆ, ಬೊಮ್ಮಸಂದ್ರ ಪ್ರಯಾಣಿಕರಿಗೆ ಗುಡ್ ನ್ಯೂಸ್ – ವರ್ಷಾಂತ್ಯಕ್ಕೆ ಹಳದಿ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭ

  • ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ಗಿಲ್ಲ ರಿಲೀಫ್ – ಜಾಮೀನು ಅರ್ಜಿ ವಜಾ

    ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ಗಿಲ್ಲ ರಿಲೀಫ್ – ಜಾಮೀನು ಅರ್ಜಿ ವಜಾ

    ನವದೆಹಲಿ: ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಇಡಿಯಿಂದ ಬಂಧನಕ್ಕೆ ಒಳಗಾಗಿರುವ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ಗೆ ಜಾಮೀನು ನೀಡಲು ಸಿಬಿಐ ವಿಶೇಷ ನ್ಯಾಯಾಲಯ ನಿರಾಕರಿಸಿದೆ.

    ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಗೀತಾಂಜಲಿ ಗೋಯೆಲ್ ಜಾಮೀನು ಅರ್ಜಿ ವಜಾಗೊಳಿಸಿದ್ದಾರೆ. ಇದನ್ನೂ ಓದಿ: ದಾವೂದ್ ಇಬ್ರಾಹಿಂ ಸಹೋದರನ ಕಡೆಯಿಂದ ಸಾಧ್ವಿ ಪ್ರಜ್ಞಾ ಠಾಕೂರ್‌ಗೆ ಕೊಲೆ ಬೆದರಿಕೆ 

    ಮೇ 30 ರಂದು ಇಡಿಯಿಂದ ಬಂಧನಕ್ಕೊಳಗಾಗಿದ್ದ ಸತ್ಯೇಂದ್ರ ಜೈನ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಗೀತಾಂಜಲಿ ಗೋಯೆಲ್ ಆದೇಶ ಕಾಯ್ದಿರಿಸಿದ್ದರು.

    ಭ್ರಷ್ಟಾಚಾರ ತಡೆ ಕಾಯ್ದೆಯಡಿ 2017ರ ಆಗಸ್ಟ್‌ನಲ್ಲಿ ಸಿಬಿಐ ದಾಖಲಿಸಿದ್ದ ಪ್ರಕರಣದ ಆಧಾರದ ಮೇಲೆ ಜಾರಿ ನಿರ್ದೇಶನಾಲಯವು (ED) ಇಸಿಐಆರ್ ದಾಖಲಿಸಿಕೊಂಡು, ವಿಚಾರಣೆಗೆ ಸಮನ್ಸ್ ನೀಡಿತ್ತು. ಮೇ 30 ರಂದು ಜೈನ್ ಅವರನ್ನು ವಶಕ್ಕೆ ಪಡೆದುಕೊಂಡಿತ್ತು. ಜೂನ್ 13ರ ಬಳಿಕ ಅವರು ನ್ಯಾಯಂಗ ಬಂಧನದಲ್ಲಿದ್ದಾರೆ. ಇದನ್ನೂ ಓದಿ: ಗುರುದ್ವಾರದ ಮೇಲೆ ಭಯೋತ್ಪಾದಕರಿಂದ ಗುಂಡಿನ ದಾಳಿ – ಭದ್ರತಾ ಸಿಬ್ಬಂದಿ ಸಾವು 

    ವಿಚಾರಣೆ ವೇಳೆ ಸತ್ಯೇಂದ್ರ ಜೈನ್, ಕನಿಷ್ಠ ನಾಲ್ಕು ಕಂಪನಿಗಳ ಮೂಲಕ ಹಣ ಲಪಟಾಯಿಸಿದ್ದಾರೆ. ಅಕ್ರಮ ಹಣ ವರ್ಗಾವಣೆಯಲ್ಲಿ ಸಚಿವರು ಭಾಗಿಯಾಗಿದ್ದಾರೆ. ಅವರ ಬಂಧನ ಬಳಿಕವೂ ಹಲವು ದಾಳಿ ನಡೆಸಿದ್ದು ಆಪ್ತರ ಮನೆಯಲ್ಲಿ ಹಲವು ಮಹತ್ವದ ದಾಖಲೆಗಳು ಲಭ್ಯವಾಗಿದ್ದು ಇವುಗಳ ತನಿಖೆ ಮಾಡಬೇಕಿದೆ. ಆದರೆ ಆರೋಪಿ ತನಿಖೆಗೆ ಸಹಕಾರ ನೀಡುತ್ತಿಲ್ಲ, ಪ್ರಭಾವಿಯಾಗಿರುವ ಹಿನ್ನಲೆ ಸಾಕ್ಷ್ಯ ನಾಶ ಸಾಧ್ಯತೆಗಳಿವೆ ಎಂದು ಇಡಿ ವಾದಿಸಿತ್ತು.

    ನಿದ್ರೆಯಲ್ಲಿ ಉಸಿರುಗಟ್ಟುವ ಕಾಯಿಲೆಯಿದೆ: ಸತ್ಯೇಂದ್ರ ಜೈನ್ ಪರ ವಾದ ಮಂಡಿಸಿದ್ದ ವಕೀಲ ಹರಿಹರನ್, ಈವರೆಗೂ ಜೈನ್ ತನಿಖೆಗೆ ಸಹಕರಿಸಿದ್ದಾರೆ, ಮುಂದೆಯೂ ಸಹಕಾರ ನೀಡಲಿದ್ದಾರೆ. ಈಗಾಗಲೇ ಎಲ್ಲ ಹೇಳಿಕೆಯನ್ನು ನೀಡಿರುವ ಹಿನ್ನೆಲೆ ಸಾಕ್ಷ್ಯದ ಮೇಲೆ ಪ್ರಭಾವ ಬೀರಲು ಸಾಧ್ಯವಿಲ್ಲ. ಜೈನ್‌ಗೆ ನಿದ್ದೆಯಲ್ಲಿ ಉಸಿರುಗಟ್ಟುವ ಸಮಸ್ಯೆ ಇದ್ದು ಆರೋಗ್ಯ ಕಾರಣಗಳಿಂದ ಜಾಮೀನು ನೀಡಬೇಕು ಒಂದು ಮನವಿ ಮಾಡಿದ್ದರು.

    Live Tv

  • ದೆಹಲಿ ಸಚಿವ ಸತ್ಯೇಂದ್ರ ಜೈನ್‌ ನಿವಾಸದ ಮೇಲೆ ಇಡಿ ದಾಳಿ

    ದೆಹಲಿ ಸಚಿವ ಸತ್ಯೇಂದ್ರ ಜೈನ್‌ ನಿವಾಸದ ಮೇಲೆ ಇಡಿ ದಾಳಿ

    ನವದೆಹಲಿ: ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ದಾಳಿ ಮಾಡಿದೆ.

    ಕೋಲ್ಕತ್ತಾ ಮೂಲದ ಕಂಪನಿಗೆ ಸಂಬಂಧಿಸಿದಂತೆ ಹವಾಲಾ ವಹಿವಾಟು ನಡೆಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ.  ಇದನ್ನೂ ಓದಿ: ಕಲುಷಿತ ನೀರಿಗೆ ಮೂರನೇ ಬಲಿ – ರಾಯಚೂರು ಬಂದ್‌ಗೆ ಕರೆ

    ಮೇ 30 ರಂದು ಸತ್ಯೇಂದ್ರ ಜೈನ್‌ ಅವರನ್ನು ಬಂಧಿಸಿದ ಇಡಿ ಜೂನ್ 9ರ ವರೆಗೆ ಕಸ್ಟಡಿಗೆ ಪಡೆದುಕೊಂಡಿದೆ. ಏಪ್ರಿಲ್ ತಿಂಗಳಲ್ಲಿ ಸತ್ಯೇಂದ್ರ ಜೈನ್ ಕುಟುಂಬದ ಒಡೆತನದಲ್ಲಿರುವ 4.81 ಕೋಟಿ ರೂ. ಮೌಲ್ಯದ 5 ಸಂಸ್ಥೆಗಳಿಗೆ ಸೇರಿದ ಸ್ಥಿರಾಸ್ತಿಯನ್ನು ಇಡಿ ಜಪ್ತಿ ಮಾಡಿತ್ತು.

    4 ವರ್ಷಗಳ ಹಿಂದೆ 2018ರಲ್ಲಿ ಇಡಿ ಸತ್ಯೇಂದ್ರ ಜೈನ್‌ರನ್ನು ವಿಚಾರಣೆಗೆ ಒಳಪಡಿಸಿತ್ತು. ಆ ಬಳಿಕ ಇದೀಗ ಐಪಿಸಿ ಸೆಕ್ಷನ್ 109 ಮತ್ತು ಸೆಕ್ಷನ್ 13(2)ರ ಅಡಿ ಸತ್ಯೇಂದ್ರ ಜೈನ್ ಮತ್ತು ಇತರರ ವಿರುದ್ಧ ಸಿಬಿಐ ದಾಖಲಿಸಿರುವ ಎಫ್‌ಐಆರ್ ಆಧಾರದ ಮೇಲೆ ಇಡಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿದೆ.