Tag: Hayagreeva

  • ಮೊದಲ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿ ಧ್ರುವ ಸರ್ಜಾ ಪುತ್ರ

    ಮೊದಲ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿ ಧ್ರುವ ಸರ್ಜಾ ಪುತ್ರ

    ‘ಮಾರ್ಟಿನ್’ ನಟ ಧ್ರುವ ಸರ್ಜಾ (Dhruva Sarja) ಅವರು ಮಗ ಹಯಗ್ರೀವ ಹುಟ್ಟುಹಬ್ಬವನ್ನು (Birthday) ಅದ್ಧೂರಿಯಾಗಿ ಆಚರಿಸಿದ್ದಾರೆ. ಆಪ್ತರ ಸಮ್ಮುಖದಲ್ಲಿ ಮಗನ ಮೊದಲ ವರ್ಷದ ಬರ್ತ್‌ಡೇ ಸೆಲೆಬ್ರೆಟ್ ಮಾಡಿದ್ದಾರೆ. ಇದನ್ನೂ ಓದಿ:ಜಾನಿ ಮಾಸ್ಟರ್ ಬಂಧನ: ಠಾಣೆ ಮುಂದೆ ಪತ್ನಿ ಹೈಡ್ರಾಮಾ

    ಸಿನಿಮಾ ಕೆಲಸಗಳಿಗೆ ಬ್ರೇಕ್ ಕೊಟ್ಟು ಎರಡನೇ ಮಗ ಹಯಗ್ರೀವ (Hayagreeva) ಹುಟ್ಟುಹಬ್ಬವನ್ನು ನಿನ್ನೆ (ಸೆ.18) ಆಚರಿಸಿದ್ದಾರೆ. ಲೈಟ್ ಬಣ್ಣದ ಧಿರಿಸಿನಲ್ಲಿ ಹಯಗ್ರೀವ ಮುದ್ದಾಗಿ ಕಾಣಿಸಿಕೊಂಡಿದ್ದಾನೆ. ಈ ಕಾರ್ಯಕ್ರಮಕ್ಕೆ ನಟಿ ಮೇಘನಾ ರಾಜ್, ಅರ್ಜುನ್ ಸರ್ಜಾ ಕುಟುಂಬ ಮತ್ತು ‘ಮಜಾ ಟಾಕೀಸ್’ ಪವನ್ ಸೇರಿದಂತೆ ಅನೇಕರು ಭಾಗಿಯಾಗಿದ್ದರು.

    ಇನ್ನೂ ಸಿನಿಮಾ ವಿಚಾರಕ್ಕೆ ಬರೋದಾದ್ರೆ ‘ಕೆಡಿ’ ಮತ್ತು ‘ಮಾರ್ಟಿನ್’ ಸಿನಿಮಾ ರಿಲೀಸ್‌ಗೆ ಸಿದ್ಧವಾಗಿದೆ. ಮೊದಲ ಸಿನಿಮಾ ಅದ್ಧೂರಿ ಚಿತ್ರದಿಂದ ಬ್ಯಾಕ್ ಟು ಬ್ಯಾಕ್ ಹಿಟ್ ಕೊಟ್ಟಿರುವ ಧ್ರುವ ನಟಿಸಿರುವ ಮುಂಬರುವ ಸಿನಿಮಾಗಳ ಮೇಲೆ ಫ್ಯಾನ್ಸ್‌ಗೆ ಭಾರೀ ನಿರೀಕ್ಷೆಯಿದೆ.

  • ‘ಹಯಗ್ರೀವ’ ತಂಡ ಸೇರಿಕೊಂಡ ನಟ ಸುನೀಲ್ ರಾವ್

    ‘ಹಯಗ್ರೀವ’ ತಂಡ ಸೇರಿಕೊಂಡ ನಟ ಸುನೀಲ್ ರಾವ್

    ಸಂಜನಾ ಆನಂದ್ (Sanjana Anand) ಮತ್ತು ಧನ್ವೀರ್ (Dhanveer) ಕಾಂಬಿನೇಷನ್ ನ ಹಯಗ್ರೀವ (Hayagreeva) ಸಿನಿಮಾದಲ್ಲಿ ನಟಿಸಲಿದ್ದಾರೆ ಸುನೀಲ್ ರಾವ್ (Sunil Rao). ಈಗಾಗಲೇ ಚಿತ್ರೀಕರಣದಲ್ಲಿ ಅವರು ಭಾಗಿಯಾಗಿದ್ದಾರಂತೆ. ಅದೊಂದು ಮಹತ್ವದ ಪಾತ್ರವಾಗಿದ್ದು, ಪಾತ್ರದ ಬಗ್ಗೆ ಮುಂದಿನ ದಿನಗಳಲ್ಲಿ ಅಧಿಕೃತವಾಗಿ ಚಿತ್ರತಂಡವೇ ತಿಳಿಸಲಿದೆ.

    ಮೃದ್ಧಿ ಮಂಜುನಾಥ್ ಅವರು ತಮ್ಮ ಕೆ.ವೆ.ಸಿ ಪ್ರೊಡಕ್ಷನ್ಸ್  ಲಾಂಛನದಲ್ಲಿ ನಿರ್ಮಿಸುತ್ತಿರುವ, ರಘುಕುಮಾರ್ ಓ.ಆರ್ ನಿರ್ದೇಶನದ ಚಿತ್ರವಿದು. ಕೆಲ ದಿನಗಳ ಹಿಂದೆಯಷ್ಟೇ ಈ ಸಿನಿಮಾದ ಮುಹೂರ್ತ (Muhurta) ಸಮಾರಂಭ ನಾಡದೇವತೆ ಶ್ರೀಚಾಮುಂಡೇಶ್ವರಿ ಸನ್ನಿಧಿಯಲ್ಲಿ ನೆಡಿದಿತ್ತು.

    ಹಯಗ್ರೀವ ಕೆವಿಸಿ ಪ್ರೊಡಕ್ಷನ್ಸ್‌ ಬ್ಯಾನರ್ ನಲ್ಲಿ ನಿರ್ಮಾಣವಾಗುತ್ತಿರುವ  ಮೂರನೆಯ ಚಿತ್ರ. ಈ ಕುರಿತಂತೆ ನಿರ್ಮಾಪಕ ಸಮೃದ್ದಿ ಮಂಜುನಾಥ್ ಮಾತಮಾಡಿ, ನಾನು ಯೂಟ್ಯೂಬ್‍ನಲ್ಲಿ ‘ದಿ ಬೆಲ್‍’ ಎಂಬ ಕಿರುಚಿತ್ರ ನೋಡಿದೆ. ಆ ಕಿರುಚಿತ್ರ ಬಹಳ ಖುಷಿ ನೀಡಿತು. ಆ ಕಿರುಚಿತ್ರದ  ನಿರ್ದೇಶಕ ರಘುಕುಮಾರ್ ಅವರನ್ನು ಎಂಟು ತಿಂಗಳ ಹಿಂದೆ ಕರೆಸಿ ಮಾತನಾಡಿದೆ. ಒಂದು ಚಿತ್ರ ಮಾಡಿಕೊಡಿ ಎಂದು ಹೇಳಿದೆ. ಅವರು ತಮ್ಮ ತಂಡದೊಂದಿಗೆ ಒಂದೊಳ್ಳೆಯ ಕಥೆ ಮಾಡಿದ್ದಾರೆ. ಇದೊಂದು ಪಕ್ಕಾ ಕಮರ್ಷಿಯಲ್‍ ಚಿತ್ರ. ಕನ್ನಡದಲ್ಲಿ ಇಲ್ಲಿಯವರೆಗೂ ಈ ತರಹದ ಚಿತ್ರ ಬಂದಿಲ್ಲ ಎಂದು ಹೇಳಬಹುದು. ಧನ್ವೀರ್ ಹಾಗೂ ಸಂಜನಾ ಆನಂದ್ ನಾಯಕ-ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದಲ್ಲಿ ಮತ್ತೊಬ್ಬ ನಾಯಕ ನಟಿಸುತ್ತಿದ್ದು, ಅವರು ಯಾರು ಎಂದು ಚಿತ್ರ ಬಿಡುಗಡೆಯವರೆಗೂ ಗೌಪ್ಯವಾಗಿಡಲಾಗುವುದು. ಒಂದೊಳ್ಳೆಯ ಕಥೆಗೆ ಪೂರಕವಾಗಿ ಶೀರ್ಷಿಕೆ ಸಿಕ್ಕಿದೆ. ಈ ಚಿತ್ರವನ್ನು ಎಲ್ಲರೂ ಒಪ್ಪುತ್ತಾರೆ ಎಂಬ ನಂಬಿಕೆ ಇದೆ ಎಂದಿದ್ದರು.

    ನಿರ್ಮಾಪಕರು ಫೋನ್‍ ಮಾಡಿ ಸಿನಿಮಾ ಮಾಡಿಕೊಡಿ ಎಂದರು. ನನ್ನ ಹತ್ತಿರ ಒಂದು ಕಥೆ ಇತ್ತು. ಅದನ್ನು ಅವರಿಗೆ ಹೇಳಿದಾಗ, ಇಷ್ಟಪಟ್ಟು ಈ ಚಿತ್ರ ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಈ ಚಿತ್ರದಲ್ಲಿ ಮುಖ್ಯವಾಗಿ ಪೌರಾಣಿಕ ಅಂಶಗಳ ಜೊತೆಗೆ ಕ್ರೈಮ್‍ ಇದೆ. ಲವ್, ಸೆಂಟಿಮೆಂಟ್, ಸಸ್ಪೆನ್ಸ್ ಸೇರಿದಂತೆ ಕಮರ್ಷಿಯಲ್ ಚಿತ್ರಕ್ಕೆ ಬೇಕಾದ ಎಲ್ಲಾ ಅಂಶಗಳು ಹಯಗ್ರೀವ ಚಿತ್ರದಲ್ಲಿದೆ. ಕನ್ನಡದಲ್ಲಿ ಇದುವರೆಗೂ ಯಾರೂ ಈ ತರಹದ ಪ್ರಯತ್ನವನ್ನು ಮಾಡಿಲ್ಲ ಎಂಬುದು ನನ್ನ ಅನಿಸಿಕೆ. ಇಲ್ಲಿ ಹಯಗ್ರೀವ ಎಂಬ ಪೌರಾಣಿಕ ಪಾತ್ರದ ಸುತ್ತ ಚಿತ್ರ ಸುತ್ತುತ್ತದೆ.  ಬೆಂಗಳೂರಿನಲ್ಲಿ ಇಡೀ ಚಿತ್ರದ ಚಿತ್ರೀಕರಣ ನಡೆಯಲಿದೆ.  ರಂಗಾಯಣ ರಘು, ತಾರಾ, ಸಾಧು ಕೋಕಿಲ, ರವಿಶಂಕರ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ‍್ಳುತ್ತಿದ್ದಾರೆ. ಚಿತ್ರದಲ್ಲಿ ಮೂರು ಹಾಡುಗಳಿದ್ದು, ಜೂಡಾ ಸ್ಯಾಂಡಿ ಸಂಗೀತ ಸಂಯೋಜಿಸುತ್ತಿದ್ದಾರೆ.‌ ಕಾರ್ತಿಕ್, ಛಾಯಾಗ್ರಹಣ ಹಾಗೂ ಉಮೇಶ್ ಅವರ ಸಂಕಲನವಿರುವ ಈ ಚಿತ್ರಕ್ಕೆ ನಾನೇ ಕಥೆ, ಚಿತ್ರಕಥೆ ಬರೆದಿದ್ದೇನೆ. ಸಂಭಾಷಣೆಯನ್ನು ಶೈಲೇಶ್ ರಾಜ್ ಹಾಗೂ ಚೇತನ್ ಸಿದ್ ಬರೆದಿದ್ದಾರೆ ಎಂದು ನಿರ್ದೇಶಕ ರಘುಕುಮಾರ್ ಓ ಆರ್ ತಿಳಿಸಿದ್ದರು.

     

    ಇದು ನನ್ನ ಐದನೇ ಚಿತ್ರ ಎಂದು ಮಾತು ಆರಂಭಿಸಿದ ನಾಯಕ ಧನ್ವೀರ್, ಒಳ್ಳೆಯ ತಂಡ ಮತ್ತು ಒಳ್ಳೆಯ ಶೀರ್ಷಿಕೆ ಸಿಕ್ಕಿದೆ. ಬಹಳ ದಿನಗಳಿಂದ ಪ್ಲಾನ್‍ ಮಾಡಿ, ಒಂದೊಳ್ಳೆಯ ಕಥೆ ಮಾಡಿ ಈ ಚಿತ್ರ ಮಾಡುತ್ತಿದ್ದೇವೆ. ಅಭಿಮಾನಿಗಳಿಗೆ ಖುಷಿಯಾಗುವಂತಹ ಕಥೆ ಇದೆ. ಈ ಚಿತ್ರದಲ್ಲಿ ನೀಗ್ರೋಗಳ ಜೊತೆಗೆ ಫೈಟ್‍ ಇದೆ. ‘ಬಜಾರ್’ ನಂತರ ಸಿಕ್ಸ್ ಪ್ಯಾಕ್ ‍ಮಾಡಿಕೊಳ್ಳುತ್ತಿದ್ದೇನೆ. ಒಂದೇ ಹಂತದಲ್ಲಿ ಚಿತ್ರೀಕರಣ ನಡೆಯಲಿದೆ. ಕಥೆ ಮತ್ತು ಪಾತ್ರ ವಿಭಿನ್ನವಾಗಿದೆ ಎಂದಿದ್ದರು.