Tag: HC Balakrishna

  • ಸರ್ಕಾರದ ಹಣ ತಿಂದಿಲ್ಲವೆಂದು ಹೆಚ್‍ಡಿಕೆ ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡ್ಲಿ: ಬಾಲಕೃಷ್ಣ

    ಸರ್ಕಾರದ ಹಣ ತಿಂದಿಲ್ಲವೆಂದು ಹೆಚ್‍ಡಿಕೆ ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡ್ಲಿ: ಬಾಲಕೃಷ್ಣ

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು  (H D Kumaraswamy) ನಾನು ಸರ್ಕಾರದ ಹಣ ತಿಂದಿಲ್ಲ ಎಂದು ಹೇಳಿ ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ ಎಂದು ಮಾಗಡಿ ಶಾಸಕ ಹೆಚ್.ಸಿ ಬಾಲಕೃಷ್ಣ (MLA H C Balakrishna) ಸವಾಲೆಸೆದಿದ್ದಾರೆ.

    ನಗರದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಡಿಕೆಶಿ ಖಜಾನೆ ವೃದ್ಧಿಗೆ ಇದನ್ನ ಮಾಡ್ತಿದ್ದಾರೆ ಎಂಬ ಕುಮಾರಸ್ವಾಮಿ ಆರೋಪಗಳಿಗೆ ನಾವು ಉತ್ತರ ಕೊಡೋದು ಸೂಕ್ತವಲ್ಲ. ಕುಮಾರಸ್ವಾಮಿ ಇತ್ತೀಚಿನ ದಿನಗಳಲ್ಲಿ ಬಾಲಿಶವಾದ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಕುಮಾರಸ್ವಾಮಿ ಹೇಳಿಕೆಯಲ್ಲಿ ಹತಾಶೆ ಮನೋಭಾವ ಕಾಣುತ್ತಿದೆ. ಅವರಿಗೆ ಡಿಕೆ ಶಿವಕುಮಾರ್ ಡಿಸಿಎಂ ಆಗಿರೋದು, ನಾವು ಒಕ್ಕಲಿಗರು ಶಾಸಕರಾಗಿರೋದನ್ನು ಅರಗಿಸಿಕೊಳ್ಳಲು ಆಗ್ತಿಲ್ಲ. ಹೀಗಾಗಿ ಬೇರೆ ಬೇರೆ ರೀತಿ ವಾಖ್ಯಾನ ಮಾಡ್ತಾರೆ ಎಂದರು.

    ಕುಮಾರಸ್ವಾಮಿ ಏನೇನೋ ಅರ್ಥವಿಲ್ಲದಂತೆ ಮಾತಾಡ್ತಾರೆ. ಯಾರ ಜಮೀನು ಮೌಲ್ಯ ವೃದ್ಧಿ ಮಾಡಿಕೊಳ್ತಾರೆ.? ಕುಮಾರಸ್ವಾಮಿ ಜಮೀನು ಇಲ್ಲವಾ..? ಕುಮಾರಸ್ವಾಮಿ ಕುಟುಂಬ ಏನು ಸತ್ಯ ಹರಿಶ್ಚಂದ್ರ ಕುಟುಂಬನಾ?. ಸರ್ಕಾರದ ಒಂದು ರೂಪಾಯಿ ದುಡ್ಡನ್ನ ನಾನು ಮತ್ತು ನನ್ನ ಕುಟುಂಬ ಬಳಸಿಕೊಂಡಿಲ್ಲ ಅಂತ ಕುಮಾರಸ್ವಾಮಿ ಧರ್ಮಸ್ಥಳದ ಮುಂದೆ ಬಂದು ಪ್ರಮಾಣ ಮಾಡಲಿ ಎಂದು ಹೇಳಿದರು. ಇದನ್ನೂ ಓದಿ: ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆಯನ್ನಾಗಿ ಮಾಡ್ತೇವೆ: ಬಾಲಕೃಷ್ಣ

    ಪೊಲೀಸರ ವರ್ಗಾವಣೆಯನ್ನು ಬಿಟ್ಟಿಲ್ಲ. ಪೊಲೀಸರ ವರ್ಗಾವಣೆಯಲ್ಲೂ ಅವರ ಕುಟುಂಬ ದುಡ್ಡು ತೆಗೆದುಕೊಂಡಿದೆ. ಎಲ್ಲರೂ ಗಾಜಿನ ಮನೆಯಲ್ಲಿ ಇರೋದು. ಯಾರು ಕೂಡ ಸತ್ಯ ಹರಿಶ್ಚಂದ್ರರು ಇಲ್ಲ. ಅವಕಾಶ ಸಿಗದೇ ಇರೋನು ಸತ್ಯ ಹರಿಶ್ಚಂದ್ರ ಅಷ್ಟೆ. ಅವಕಾಶ ಸಿಕ್ಕಾಗ ಎಲ್ಲರೂ ಮಾಡಿದ್ದಾರೆ. ಕುಮಾರಸ್ವಾಮಿ ಯಾಕೆ ತಾಜ್ ನಲ್ಲಿ ಇದ್ದರು. ಕುಮಾರಸ್ವಾಮಿ ತಾಜ್ ವೆಸ್ಟ್ ಅಂಡ್ ನಲ್ಲಿ ಇದ್ದಿದ್ದು ಡೀಲ್ ಮಾಡಿಕೊಳ್ಳೋಕೆ. ಸಿದ್ದರಾಮಯ್ಯ ಇದ್ದರು ಅದಕ್ಕೆ ನಾನು ತಾಜ್‍ನಲ್ಲಿ ಇದ್ದೆ ಅಂತಾರೆ. ಕಾವೇರಿಗೆ ಯಾಕೆ ಕಾಯಬೇಕು. ಬೇರೆ ಬಂಗಲೆ ಇರಲಿಲ್ಲವಾ ಎಂದು ಪ್ರಶ್ನಿಸುವ ಮೂಲಕ ಹೆಚ್‍ಡಿಕೆ ವಿರುದ್ಧ ಕಿಡಿಕಾರಿದರು.

    ಡಿಕೆ ಶಿವಕುಮಾರ್ (DK Shivakumar) ಅವರಿಗೆ ಅವರದ್ದೇ ಆದ ಬ್ಯುಸಿನೆಸ್ ಇದೆ. ವ್ಯವಹಾರ, ವಹಿವಾಟು ಇದೆ. ಡಿಕೆ ಶಿವಕುಮಾರ್ ಇಲಾಖೆಗಳನ್ನು ಮ್ಯಾನೇಜ್ ಮಾಡಿದ್ದಾರೆ. ಡಿಕೆ ಶಿವಕುಮಾರ್ ಇದ್ದ ಯಾವ ಇಲಾಖೆಯಲ್ಲಿ ಕೆಟ್ಟ ಹೆಸರು ಬಂದಿದೆ. ಇಂಧನ ಇಲಾಖೆಯನ್ನ ಯಶಸ್ವಿಯಾಗಿ ನಿಭಾಯಿಸಿದ್ದಕ್ಕೆ ಮೋದಿ ಕರೆದು ಅವರಿಗೆ ಸನ್ಮಾನ ಮಾಡಿದ್ದಾರೆ. ಕುಮಾರಸ್ವಾಮಿ ಇಂತಹ ಚಿಲ್ಲರೆ ಹೇಳಿಕೆಗಳನ್ನ ಬಿಡಬೇಕು. ಇದನ್ನ ಮುಂದುವರಿಸುತ್ತೇನೆ ಅಂದರೆ ಕುಮಾರಸ್ವಾಮಿ ಮುಂದುವರಿಸಲಿ ಅವರ ಹಣೆಬರಹ ಎಂದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆಯನ್ನಾಗಿ ಮಾಡ್ತೇವೆ: ಬಾಲಕೃಷ್ಣ

    ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆಯನ್ನಾಗಿ ಮಾಡ್ತೇವೆ: ಬಾಲಕೃಷ್ಣ

    ಬೆಂಗಳೂರು: ರಾಮನಗರ (Ramanagar) ಜಿಲ್ಲೆಯನ್ನ ಬೆಂಗಳೂರು ದಕ್ಷಿಣ ಜಿಲ್ಲೆ ಅಂತ ನಾಮಕರಣ ಮಾಡೋ ಚರ್ಚೆ ಆಗುತ್ತಿದೆ. ಡಿಕೆ ಶಿವಕುಮಾರ್ (D.K Shivakumar) ಅವರು ಇದನ್ನೇ ಹೇಳಿದ್ದಾರೆ. ಕನಕಪುರವನ್ನ (Kanakapura) ಬೆಂಗಳೂರಿಗೆ ಸೇರಿಸಲ್ಲ. ಬೆಂಗಳೂರು ದಕ್ಷಿಣ ಜಿಲ್ಲೆ ಅಂತ ಮಾಡೋ ಪ್ಲ್ಯಾನ್ ಇದೆ ಎಂದು ಶಾಸಕ ಎಚ್.ಸಿ ಬಾಲಕೃಷ್ಣ (MLA HC Balakrishna) ತಿಳಿಸಿದ್ದಾರೆ.

    ನಗರದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಡಿಕೆಶಿ ಹೇಳಿಕೆಯನ್ನು ತಪ್ಪಾಗಿ ಅರ್ಥೈಸುತ್ತಿದ್ದಾರೆ. ಕನಕಪುರವನ್ನ ಬೆಂಗಳೂರಿಗೆ ಸೇರಿಸುತ್ತೇವೆ ಅನ್ನೋದು ಅಲ್ಲ. ಕೆಂಪೇಗೌಡ ಕಟ್ಟಿದ ಬೆಂಗಳೂರಿಗೆ ಅಂತಾರಾಷ್ಟ್ರೀಯ ಬ್ರ್ಯಾಂಡ್ ನೇಮ್ ಇದೆ. ಮೊದಲು ನಮ್ಮದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಂತ ಇತ್ತು. ಅದೇ ಬೆಂಗಳೂರು ಅನ್ನೋ ಹೆಸರನ್ನ ಇಟ್ಟುಕೊಂಡ್ರೆ ನಮ್ಮನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುತ್ತಾರೆ. ಹೀಗಾಗಿ ಅದನ್ನ ಬದಲಾವಣೆ ಮಾಡಬೇಕು ಅಂತ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕನಕಪುರವನ್ನ ಬೆಂಗಳೂರಿಗೆ ಸೇರಿಸೋಕೆ ಸಾಧ್ಯವಿಲ್ಲ ಎಂದು ಹೇಳಿದರು. ಇದನ್ನೂ ಓದಿ: ರಾಮನಗರ ಇಬ್ಭಾಗ, ಬೆಂಗಳೂರಿಗೆ ಕನಕಪುರ – ಏನಿದು ಡಿಕೆಶಿ ಲೆಕ್ಕಾಚಾರ?

    ಕುಮಾರಸ್ವಾಮಿ ಹೇಳಿಕೆಗೆ ಬೆಲೆ ಕೊಡೋ ಅವಶ್ಯಕತೆ ಇಲ್ಲ. ಅವರು ಹತಾಶೆಯಿಂದ ಮಾತಾಡ್ತಿದ್ದಾರೆ. ನಾವು ಶಾಸಕರಾಗಿರೋದು ಕುಮಾರಸ್ವಾಮಿಗೆ ಇಷ್ಟ ಇಲ್ಲ. ಹೀಗಾಗಿ ಕುಮಾರಸ್ವಾಮಿ ಮಾತಿಗೆ ಬೆಲೆ ಕೊಡಬೇಕಿಲ್ಲ. ಕನಕಪುರದಲ್ಲಿ ಕುಮಾರಸ್ವಾಮಿ ಆಸ್ತಿ ಇಲ್ಲ. ಕುಮಾರಸ್ವಾಮಿ ಸತ್ಯ ಹರಿಶ್ಚಂದ್ರ ಅಲ್ಲ ಎಂದು ಹೆಚ್‍ಡಿಕೆ ವಿರುದ್ಧ ಶಾಸಕರು ಕಿಡಿಕಾರಿದ್ದಾರೆ.

    ರಾಮನಗರ ಜಿಲ್ಲೆಯನ್ನೇ ಬೆಂಗಳೂರು ದಕ್ಷಿಣ ಜಿಲ್ಲೆ ಅಂತ ನಾಮಕರಣ ಮಾಡ್ತೀವಿ. ಈಗ ಸಾರ್ವಜನಿಕ ಚರ್ಚೆಗೆ ಬಿಟ್ಟಿದ್ದಾರೆ. ಸಾರ್ವಜನಿಕರು ಹೇಳಿದಂತೆ ಮುಂದೆ ಮಾಡ್ತೀವಿ. ಕುಮಾರಸ್ವಾಮಿಗೆ ನಮ್ಮನ್ನು ಕಂಡ್ರೆ ಆಗಲ್ಲ. ನಾವು ಕರಿ ಕಾಗೆ ಅಂದ್ರೆ ಅವರು ಬಿಳಿ ಕಾಗೆ ಅಂತಾರೆ. ಅವರು ನಾವು ಏನೇ ಮಾತಾಡಿದ್ರು ವಿರೋಧ ಮಾಡ್ತಾರೆ. ಇದಕ್ಕೆ ನಾವು ಬೆಲೆ ಕೊಡೊ ಅವಶ್ಯಕತೆ ಇಲ್ಲ. ಬೆಂಗಳೂರು ದಕ್ಷಿಣ ಜಿಲ್ಲೆ ಅಂತ ಮಾಡೋಕೆ ನಾವೇ ಒತ್ತಡ ಮಾಡಿದ್ವಿ. ಮಾಗಡಿ, ರಾಮನಗರ, ಕನಕಪುರ, ಚನ್ನಪಟ್ಟಣ ಬೆಂಗಳೂರು ದಕ್ಷಿಣ ಜಿಲ್ಲೆ ಮಾಡೋಕೆ ನಮ್ಮ ಒಪ್ಪಿಗೆ ಇದೆ ಎಂದರು.

    ಒಟ್ಟಿನಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆ ಮಾಡಬೇಕು ಅನ್ನೋದು ಈಗ ಚರ್ಚೆಗೆ ಬಿಟ್ಟಿದ್ದಾರೆ. ಚರ್ಚೆ ಆಗಲಿ, ಸಾರ್ವಜನಿಕರು ಏನ್ ಅಭಿಪ್ರಾಯ ಕೊಡ್ತಾರೋ ಅದರ ಮೇಲೆ ಮುಂದಿನ ತೀರ್ಮಾನ ಆಗುತ್ತವೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೆಲಸ ಮಾಡ್ಬೇಕು ಅಂದ್ರೆ ವೋಟ್ ಹಾಕ್ಬೇಕು ಅನ್ನೋದರಲ್ಲಿ ತಪ್ಪೇನಿದೆ?: ಬಾಲಕೃಷ್ಣ ಸಮರ್ಥನೆ

    ಕೆಲಸ ಮಾಡ್ಬೇಕು ಅಂದ್ರೆ ವೋಟ್ ಹಾಕ್ಬೇಕು ಅನ್ನೋದರಲ್ಲಿ ತಪ್ಪೇನಿದೆ?: ಬಾಲಕೃಷ್ಣ ಸಮರ್ಥನೆ

    ರಾಮನಗರ: ಜನ ವೋಟ್ ಹಾಕೋದು ನಮ್ಮ ಕೆಲಸ ಮಾಡಲಿ ಅಂತ. ಕೆಲಸ ಮಾಡಬೇಕು ಅಂದ್ರೆ ವೋಟ್ ಹಾಕಬೇಕು ಅಂತಾ ಹೇಳುವುದರಲ್ಲಿ ತಪ್ಪೇನಿದೆ ಎಂದು ಮಾಗಡಿ ಶಾಸಕ ಎಚ್.ಸಿ ಬಾಲಕೃಷ್ಣ (H C Balakrishna) ಸಮರ್ಥಿಸಿಕೊಂಡಿದ್ದಾರೆ.

    ನಾನು ಕೆಲಸ ಮಾಡಲ್ಲ ಅಂತ ಹೇಳಿದ್ದೀನಾ..?, ನಾನು ವೋಟ್ ಹಾಕದೇ ಇರೋರಿಗೆ ಕೆಲಸ ಮಾಡಲ್ಲ ಅಂತ ನಾನು ಹೇಳಿಲ್ಲ. ಆಲೋಚನೆ ಮಾಡ್ತೇನೆ ಅಂತ ಹೇಳಿದ್ದೀನಿ. ಹೆಚ್ಚು ಲೀಡ್ ಕೊಡೊ ಬೂತ್‍ಗೆ ಹೆಚ್ಚು ಆಸಕ್ತಿ ವಹಿಸುತ್ತೇವೆ. ಕಡಿಮೆ ಲೀಡ್ ಕೊಡೋ ಬೂತ್‍ಗೆ ಕಡಿಮೆ ಆಸಕ್ತಿ ವಹಿಸುತ್ತೇವೆ. ಇದರಲ್ಲಿ ದ್ವೇಷ ರಾಜಕಾರಣ ಏನಿದೆ.? ನಾನೇನು ಜಗಳ ಮಾಡೋಕೆ ಹೋಗಿದ್ದೀನಾ ಎಂದರು. ಇದನ್ನೂ ಓದಿ: ಕಾಂಗ್ರೆಸ್‍ಗೆ ಮತ ಹಾಕದಿದ್ರೆ ಅಭಿವೃದ್ಧಿ ಮಾಡಲ್ಲ- ಬಾಲಕೃಷ್ಣ ಪರೋಕ್ಷ ಹೇಳಿಕೆಗೆ ಭಾರೀ ಆಕ್ರೋಶ

    ಶಾಸಕರು ಹೇಳಿದ್ದೇನು..?: ಬಿಜೆಪಿ-ಜೆಡಿಎಸ್ (BJP- JDS) ಮೈತ್ರಿಯಿಂದ ಕಾಂಗ್ರೆಸ್‍ಗೆ ಅನುಕೂಲವಾಗಲಿದೆ. ಕಾಂಗ್ರೆಸ್ (Congress) ಮತಗಳು ವಿಭಜನೆ ಆಗಲ್ಲ. ರಾಜ್ಯದಲ್ಲಿ ಮುಂದಿನ ಐದು ವರ್ಷ ನಮ್ಮ ಸರ್ಕಾರ ಇರುತ್ತೆ. ಬೂತ್ ಲೆಕ್ಕಾಚಾರದ ಮೇಲೆ ಎಲೆಕ್ಷನ್ ಆಗುತ್ತೆ. ಯಾವ್ ಬೂತ್ ನಲ್ಲಿ ಹೆಚ್ಚು ನಮಗೆ ವೋಟ್ ಬರುತ್ತೋ ಅಲ್ಲಿ ಕೆಲಸ ಮಾಡ್ತೀವಿ. ವೋಟ್ ಹಾಕದಿದ್ರೆ ಅಂತಹ ಬೂತ್ ಗಳ ಬಗ್ಗೆ ಆಲೋಚನೆ ಮಾಡ್ತೀವಿ. ಹಾಗಾಗಿ ಇದನ್ನ ಜನ ಯೋಚನೆ ಮಾಡಬೇಕು ಎಂದು ಶಾಸಕರು ಹೇಳಿದ್ದರು. ಶಾಸಕರ ಈ ಬೇಜಾವಾಬ್ದಾರಿ ಹೇಳಿಕೆಗೆ ಭಾರೀ ಖಂಡನೆ ವ್ಯಕ್ತವಾಗಿತ್ತು. ಅಲ್ಲದೆ ದ್ವೇಷದ ರಾಜಕಾರಣಕ್ಕೆ ಶಾಸಕರು ಮುಂದಾದ್ರಾ ಎಂಬ ಪ್ರಶ್ನೆಯೂ ಎದ್ದಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಾಲಕೃಷ್ಣ ಮೊದಲು ತಮ್ಮ ಅನುದಾನ ಪಡೆಯಲಿ: ಬೊಮ್ಮಾಯಿ

    ಬಾಲಕೃಷ್ಣ ಮೊದಲು ತಮ್ಮ ಅನುದಾನ ಪಡೆಯಲಿ: ಬೊಮ್ಮಾಯಿ

    – ಇದು ಝೀರೊ ಅನುದಾನ ಸರ್ಕಾರ

    ಚಿಕ್ಕಬಳ್ಳಾಪುರ: ಇದು ಝೀರೊ ಅನುದಾನ ಸರ್ಕಾರವಾಗಿದ್ದು, ಯಾರಿಗೂ ಅನುದಾನ ಬಿಡುಗಡೆ ಮಾಡುತ್ತಿಲ್ಲ. ನಾವು ಅನುದಾನ (Grant) ಹಂಚಿಕೆಯಲ್ಲಿ ಯಾರಿಗೂ ತಾರತಮ್ಯ ಮಾಡಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.

    ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ವಿರೋಧ ಪಕ್ಷದ ಶಾಸಕರಿಗೆ ಅನುದಾನ ನೀಡಿದ್ದೇವೆ. ಎಲ್ಲರಿಗೂ ಸಮಾನವಾಗಿ ನೀಡಿದ್ದೆವು ಎಂದರು.

    ಮಾಗಡಿ ಶಾಸಕ ಹೆಚ್‌ಸಿ ಬಾಲಕೃಷ್ಣ (HC Balakrishna) ಅವರು ಆಡಳಿತ ಪಕ್ಷದ ಶಾಸಕರಿಗೆ ಮಾತ್ರ ಅನುದಾನ ನೀಡುವುದಾಗಿ ಹೇಳಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬಾಲಕೃಷ್ಣ ಅವರು ಸರ್ಕಾರ ಅಲ್ಲ. ಅವರು ಮೊದಲು ತಮ್ಮ ಅನುದಾನ ಪಡೆಯಲಿ. ಮಾಗಡಿಯಲ್ಲಿ ಹಿಂದೆ ನಮ್ಮ ಶಾಸಕರು ಇರಲಿಲ್ಲ ಆದರೂ ನಾವು ಅನುದಾನ ನೀಡಿದ್ದೆವು. ಬಾಲಕೃಷ್ಣ ಅವರು ಮೊದಲು ತಮಗೆ ಅನುದಾನ ಪಡೆಯಲಿ. ನಾವು ನಮ್ಮ ಅನುದಾನ ಪಡೆದುಕೊಳ್ಳುತ್ತೇವೆ. ಈ ಸರ್ಕಾರದಲ್ಲಿ ಯಾರಿಗೂ ಅನುದಾನ ಇಲ್ಲ. ಇದು ಝೀರೊ ಅನುದಾನ ಸರ್ಕಾರ. ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡುತ್ತಿಲ್ಲ ಎಂದು ಆರೋಪಿಸಿದರು. ಇದನ್ನೂ ಓದಿ: ಕಾಂಗ್ರೆಸ್‍ಗೆ ಮತ ಹಾಕದಿದ್ರೆ ಅಭಿವೃದ್ಧಿ ಮಾಡಲ್ಲ- ಬಾಲಕೃಷ್ಣ ಪರೋಕ್ಷ ಹೇಳಿಕೆಗೆ ಭಾರೀ ಆಕ್ರೋಶ

    ಇನ್ನು ಇದೊಂದು ರೈತ ವಿರೋಧಿ ಸರ್ಕಾರವಾಗಿದ್ದು, ನಮ್ಮ ರೈತರ ಪಂಪ್‌ಸೆಟ್‌ಗಳಿಗೆ ವಿದ್ಯುತ್ ನೀಡದೆ ಬಂದ್ ಆಗಿವೆ. ಕಿಸಾನ್ ಸಮ್ಮಾನ್ ಹಣ ನೀಡಿಲ್ಲ. ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡಿಲ್ಲ. ವಿದ್ಯಾನಿಧಿ, ರೈತ ಶಕ್ತಿ ಯೋಜನೆ ನೀಡಿದ್ದೇವೆ. ಅವೆಲ್ಲವನ್ನೂ ನಿಲ್ಲಿಸಿದ್ದಾರೆ ಎಂದರು. ಇದನ್ನೂ ಓದಿ: ಯಡಿಯೂರಪ್ಪ ಮನವೊಲಿಕೆ – ಉಪವಾಸ ಸತ್ಯಾಗ್ರಹ ವಾಪಸ್‌ ಪಡೆದ ಶಾಸಕ ಮುನಿರತ್ನ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾಂಗ್ರೆಸ್‍ಗೆ ಮತ ಹಾಕದಿದ್ರೆ ಅಭಿವೃದ್ಧಿ ಮಾಡಲ್ಲ- ಬಾಲಕೃಷ್ಣ ಪರೋಕ್ಷ ಹೇಳಿಕೆಗೆ ಭಾರೀ ಆಕ್ರೋಶ

    ಕಾಂಗ್ರೆಸ್‍ಗೆ ಮತ ಹಾಕದಿದ್ರೆ ಅಭಿವೃದ್ಧಿ ಮಾಡಲ್ಲ- ಬಾಲಕೃಷ್ಣ ಪರೋಕ್ಷ ಹೇಳಿಕೆಗೆ ಭಾರೀ ಆಕ್ರೋಶ

    ರಾಮನಗರ: ಮಾಗಡಿ ಶಾಸಕ ಹೆಚ್.ಸಿ ಬಾಲಕೃಷ್ಣ (H C Balakrishna) ಅವರು ಇದೀಗ ಹೇಳಿಕೆಯೊಂದನ್ನು ನೀಡಿ ಭಾರೀ ಚರ್ಚೆಗೆ ಗ್ರಾಸವಾಗುವ ಮೂಲಕ ವಿವಾದಕ್ಕೀಡಾಗಿದ್ದಾರೆ.

    ಕಾಂಗ್ರೆಸ್‍ಗೆ (Congres) ವೋಟು ಹಾಕುವ ಊರುಗಳಿಗೆ ಮಾತ್ರ ಕೆಲಸ ಮಾಡುತ್ತೇವೆ. ವೋಟ್ ಹಾಕದೇ ಇರೋರ ಬಗ್ಗೆ ಆಲೋಚನೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಶಾಸಕರ ಈ ಬೇಜಾವಾಬ್ದಾರಿ ಹೇಳಿಕೆಗೆ ಭಾರೀ ಖಂಡನೆ ವ್ಯಕ್ತವಾಗುತ್ತಿದೆ. ಅಲ್ಲದೆ ದ್ವೇಷದ ರಾಜಕಾರಣಕ್ಕೆ ಶಾಸಕರು ಮುಂದಾದ್ರಾ ಎಂಬ ಪ್ರಶ್ನೆಯೂ ಎದ್ದಿದೆ.

    ಬಿಜೆಪಿ-ಜೆಡಿಎಸ್ (BJP_ JDS) ಮೈತ್ರಿಯಿಂದ ಕಾಂಗ್ರೆಸ್‍ಗೆ ಅನುಕೂಲವಾಗಲಿದೆ. ಕಾಂಗ್ರೆಸ್ ಮತಗಳು ವಿಭಜನೆ ಆಗಲ್ಲ. ರಾಜ್ಯದಲ್ಲಿ ಮುಂದಿನ ಐದು ವರ್ಷ ನಮ್ಮ ಸರ್ಕಾರ ಇರುತ್ತೆ. ಬೂತ್ ಲೆಕ್ಕಾಚಾರದ ಮೇಲೆ ಎಲೆಕ್ಷನ್ ಆಗುತ್ತೆ. ಯಾವ್ ಬೂತ್ ನಲ್ಲಿ ಹೆಚ್ಚು ನಮಗೆ ವೋಟ್ ಬರುತ್ತೋ ಅಲ್ಲಿ ಕೆಲಸ ಮಾಡ್ತೀವಿ. ವೋಟ್ ಹಾಕದಿದ್ರೆ ಅಂತಹ ಬೂತ್ ಗಳ ಬಗ್ಗೆ ಆಲೋಚನೆ ಮಾಡ್ತೀವಿ. ಹಾಗಾಗಿ ಇದನ್ನ ಜನ ಯೋಚನೆ ಮಾಡಬೇಕು ಎಂದು ಶಾಸಕರು ಹೇಳಿದ್ದಾರೆ. ಇದನ್ನೂ ಓದಿ: ಇಸ್ರೇಲ್‌ಗೆ ಬಂದಿಳಿದ ಅಮೆರಿಕದ ಶಸ್ತ್ರಾಸ್ತ್ರ ಹೊತ್ತ ಮೊದಲ ವಿಮಾನ – ಇಸ್ರೇಲ್‌ಗೆ ನೂರಾನೆ ಬಲ

    ತಮ್ಮ ಹೇಳಿಕೆಯ ಮೂಲಕ ಶಾಸಕರು ಪರೋಕ್ಷವಾಗಿ ಕಾಂಗ್ರೆಸ್‍ಗೆ ಮತಹಾಕದಿದ್ರೆ ಅಭಿವೃದ್ಧಿ ಮಾಡಲ್ಲ ಎಂದಿದ್ದಾರೆ. ಸದ್ಯ ಬಾಲಕೃಷ್ಣ ಹೇಳಿಕೆಗೆ ಸಾರ್ವಜನಿಕರು ಆಕ್ರೋಶ ಹೊರಹಾಕುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಾಲಕೃಷ್ಣ ಕಾರಿನ ಮೇಲೆ ಕಲ್ಲು ತೂರಾಟ – ಅಶ್ವಥ್ ನಾರಾಯಣ ಸಂಬಂಧಿ ಕಾರಣ ಎಂದ ಮಾಜಿ ಶಾಸಕ

    ಬಾಲಕೃಷ್ಣ ಕಾರಿನ ಮೇಲೆ ಕಲ್ಲು ತೂರಾಟ – ಅಶ್ವಥ್ ನಾರಾಯಣ ಸಂಬಂಧಿ ಕಾರಣ ಎಂದ ಮಾಜಿ ಶಾಸಕ

    ರಾಮನಗರ: ಚುನಾವಣೆ (Elections) ಹತ್ತಿರವಾಗ್ತಿದ್ದಂತೆ ರಾಮನಗರದಲ್ಲಿ ರಾಜಕೀಯ ಪಕ್ಷಗಳ (Political Party) ನಡುವೆ ಕಿತ್ತಾಟ ಜೋರಾಗಿದೆ. ಈ ಮಧ್ಯೆ ಬುಧವಾರ ಕಾಂಗ್ರೆಸ್-ಜೆಡಿಎಸ್ (Congress – JDS) ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿದ್ದು, ಮಾಜಿ ಶಾಸಕ ಹೆಚ್.ಸಿ ಬಾಲಕೃಷ್ಣ (HC Balakrishna) ಕಾರಿನ ಮೇಲೆ ಕಲ್ಲು ತೂರಾಟ ನಡೆದಿದೆ. ಆದರೆ ಬಾಲಕೃಷ್ಣ ಅವರು ಈ ಗಲಾಟೆಗೆ ಸಚಿವ ಅಶ್ವಥ್ ನಾರಾಯಣ (Ashwath Narayan) ಸಂಬಂಧಿ ಶ್ರೀಧರ್ ಕಾರಣ ಎಂದು ದೂರಿದ್ದಾರೆ.

    ಈ ಹಿಂದೆ ಅನುದಾನದ ವಿಚಾರವಾಗಿ ಜೆಡಿಎಸ್ (JDS) ಹಾಗೂ ಬಿಜೆಪಿ (BJP) ಕಾರ್ಯಕರ್ತರ ನಡುವೆ ಗಲಾಟೆ ನಡೆದು ವಿಧಾನ ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ (CP Yogeshwar) ಕಾರಿನ ಮೇಲೆ ಜೆಡಿಎಸ್ (JDS) ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದರು. ಇದೀಗ ಮತ್ತೆ ಮಾಗಡಿ ತಾಲೂಕಿನ ಕಾಮಸಾಗರ ಗ್ರಾಮದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿದೆ. ಇದನ್ನೂ ಓದಿ: ವಿಶ್ವ ನಾಯಕರ ಪಟ್ಟಿಯಲ್ಲಿ ಭಾರತೀಯರ ಪಾರುಪತ್ಯ – ರಿಷಿ ಸುನಾಕ್ ನೂತನ ಎಂಟ್ರಿ

    ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ಉದ್ಘಾಟನೆ ವಿಚಾರವಾಗಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮುಖಂಡರ ನಡುವೆ ಗಲಾಟೆ ನಡೆದಿದೆ. ಕಾರ್ಯಕ್ರಮದ ಬ್ಯಾನರ್‌ನಲ್ಲಿ ಶಾಸಕ ಮಂಜುನಾಥ್ ಹೆಸರನ್ನು ಕೊನೆಯಲ್ಲಿ ಹಾಕಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿ ಜೆಡಿಎಸ್ ಕಾರ್ಯಕರ್ತರು ಗಲಾಟೆ ಮಾಡಿದ್ದಾರೆ. ಇದರ ಮಧ್ಯೆ ಬಾಲಕೃಷ್ಣ ಕಟ್ಟಡ ಉದ್ಘಾಟಿಸಿ ಕಾರಿನಲ್ಲಿ ವಾಪಸ್ ಆಗುತ್ತಿರುವಾಗ ಕೆಲವರು ಕಲ್ಲು ತೂರಾಟ ನಡೆಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಕುದೂರು ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಇದನ್ನೂ ಓದಿ: UK ಪ್ರಧಾನಿಯಾದ ರಿಷಿ ಸುನಾಕ್ – ಸಾಮಾಜಿಕ ಜಾಲತಾಣದಲ್ಲಿ ಆಶಿಶ್ ನೆಹ್ರಾ ಫೋಟೋ ಟ್ರೆಂಡ್

    ಈ ಬಗ್ಗೆ ಮಾತನಾಡಿರುವ ಮಾಜಿ ಶಾಸಕ ಹೆಚ್.ಸಿ.ಬಾಲಕೃಷ್ಣ (HC Balakrishna), ಶಿಷ್ಟಾಚಾರದ ಪ್ರಕಾರವೇ ಕಾರ್ಯಕ್ರಮ ಉದ್ಘಾಟನೆಯಾಗಿದೆ. ಗಲಾಟೆಗೆ ಸಚಿವ ಅಶ್ವಥ್ ನಾರಾಯಣ ಸಂಬಂಧಿ ಶ್ರೀಧರ್ ಕಾರಣ. ಶ್ರೀಧರ್ ತನ್ನ ಪಟಾಲಂ ಕಟ್ಟಿಕೊಂಡು ಬಂದು ಗಲಾಟೆ ಮಾಡಿದ್ದಾನೆ. ಗಲಾಟೆ ಮಾಡಿದವರು ಕಾಂಗ್ರೆಸ್, ಜೆಡಿಎಸ್‌ನವರು ಅಲ್ಲ. ಅವರೆಲ್ಲ ಬಿಜೆಪಿ ಮುಖಂಡರು ಎಂದು ದೂರಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕುಮಾರಸ್ವಾಮಿಯವರು ಯಡಿಯೂರಪ್ಪನವರ ಬಳಿ ಹೋಗಿದ್ದರು: ಹೆಚ್.ಸಿ ಬಾಲಕೃಷ್ಣ

    ಕುಮಾರಸ್ವಾಮಿಯವರು ಯಡಿಯೂರಪ್ಪನವರ ಬಳಿ ಹೋಗಿದ್ದರು: ಹೆಚ್.ಸಿ ಬಾಲಕೃಷ್ಣ

    ರಾಮನಗರ: ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿಯವರು ಬಿಜೆಪಿಯ ಹಿರಿಯ ನಾಯಕ ಬಿ.ಎಸ್ ಯಡಿಯೂರಪ್ಪನವರ ಬಳಿ ಹೋಗಿದ್ದರು ಎಂದು ಮಾಗಡಿ ಮಾಜಿ ಶಾಸಕ ಹೆಚ್.ಸಿ.ಬಾಲಕೃಷ್ಣ ಹೇಳಿದರು.

    ಬಿಡದಿ ಪುರಸಭೆ ಚುನಾವಣೆ ಫಲಿತಾಂಶ ಜೆಡಿಎಸ್ ಪಾಲಾದ ಹಿನ್ನೆಲೆ ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಯಡಿಯೂರಪ್ಪನವರ ಬಳಿ ಹೋಗಿದ್ದರು. ಶಾಸಕ ಎ. ಮಂಜು ಜೊತೆಗೆ ಹೋಗಿ ಬೇಕಾದ ಕ್ಯಾಟಗರಿ ಮಾಡಿಸಿಕೊಂಡರು. 18 ವಾರ್ಡ್ ಗಳಲ್ಲಿ ಅವರು ಮೊದಲೇ ತಯಾರಿ ನಡೆಸಿದ್ದರು. ಹಾಗಾಗಿ ಜೆಡಿಎಸ್ ಅಭ್ಯರ್ಥಿಗಳು ಹೆಚ್ಚಿನ ಸ್ಥಾನಗಳಲ್ಲಿ ಗೆದ್ದರು. ಜೊತೆಗೆ ಕುಮಾರಸ್ವಾಮಿಯವರು ಎರಡು ದಿನ ಪ್ರಚಾರ ಕೂಡಾ ನಡೆಸಿದ್ದರು ಎಂದರು. ಇದನ್ನೂ ಓದಿ: ಸರ್ಕಾರಿ ನಿಯಂತ್ರಣದಿಂದ ದೇಗುಲಗಳಿಗೆ ಸ್ವಾತಂತ್ರ್ಯ: ಸಿಎಂ ನಿಲುವು ಸ್ವಾಗತಿಸಿದ ಮಂತ್ರಾಲಯ ಶ್ರೀ

    ಲೋಕಲ್ ಎಲೆಕ್ಷನ್ ಪ್ರಚಾರಕ್ಕಾಗಿ ನಾನು ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಅವರಿಗೆ ಕರೆದಿದ್ದೆ. ಆದರೆ ನಮ್ಮ ನಾಯಕರು ಪ್ರಚಾರಕ್ಕೆ ಬರುವುದಿಲ್ಲ ಎಂದಿದ್ದರು. ಈ ಹಿನ್ನೆಲೆ ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಗೆದ್ದಿದ್ದು, ಆಡಳಿತವನ್ನು ಚೆನ್ನಾಗಿಯೇ ಬಳಸಿಕೊಂಡಿದ್ದಾರೆ ಎಂದು ನುಡಿದರು.

    ರಾಮನಗರ ಜಿಲ್ಲೆಯಲ್ಲಿ ಬಿಜೆಪಿ ಇಲ್ಲ. ಚನ್ನಪಟ್ಟಣದಲ್ಲಿ ಯೋಗೇಶ್ವರ್ ಇದ್ದಾರೆ ಅಷ್ಟೇ. ಆದರೆ ಈ ಪುರಸಭೆ ಚುನಾವಣೆಯಲ್ಲಿ ಫೇಲ್ ಆಗಿದ್ದಾರೆ. ಸರ್ಕಾರ ಇದ್ದಾಗ ಒಂದೆರಡು ಸ್ಥಾನವನ್ನಾದರೂ ಗೆಲ್ಲಬೇಕಿತ್ತು. ಆದರೆ ಅವರು ಯಾವ ಸ್ಥಾನಗಳನ್ನೂ ಗೆದ್ದಿಲ್ಲ. ಇನ್ನು ಯೋಗೇಶ್ವರ್ ನ ನಾವು ಕಾಂಗ್ರೆಸ್‍ಗೆ ಕರೆಯಲ್ಲ. ನಾನು ಅಷ್ಟು ದೊಡ್ಡ ನಾಯಕ ಅಲ್ಲ, ಕೆಪಿಸಿಸಿ ಅಧ್ಯಕ್ಷ ಅಲ್ಲ. ಅವರು ಸಹ ನಮ್ಮನ್ನ ಕೇಳಿ ನಿರ್ಧಾರ ತೆಗೆದುಕೊಳ್ಳಲ್ಲ ಎಂದು ಹೇಳಿದರು. ಇದನ್ನೂ ಓದಿ:  ನೆಲಮಂಗಲದಲ್ಲಿ ಬೆಳ್ಳಂಬೆಳಗ್ಗೆ ಸರಣಿ ಅಪಘಾತ

    ಅವರದ್ದೇ ಆದ ತೀರ್ಮಾನ ತೆಗೆದುಕೊಳ್ಳುತ್ತಾರೆ. ಕುಮಾರಸ್ವಾಮಿಯವರನ್ನು ಸಿಎಂ ಮಾಡಿದ್ದು ಯಾರೆಂದು ಅವರೇ ಹೇಳಿದ್ದಾರೆ. ವಿಧಾನಸಭೆಯಲ್ಲೇ ಅವರು ಹೇಳಿದ್ದಾರೆ. ಚೆಲುವನಾರಾಯಣಸ್ವಾಮಿ, ಮಾಗಡಿ ಬಾಲಕೃಷ್ಣ, ಜಮೀರ್ ನನ್ನನ್ನ ಸಿಎಂ ಮಾಡಿದ್ದು ಎಂದಿದ್ದಾರೆ. ಆದರೆ ಅವರು ಅದನ್ನ ಉಳಿಸಿಕೊಳ್ಳಲಿಲ್ಲ. ಉಳಿಸಿಕೊಂಡಿದ್ದರೆ ಅವರ ಮತ್ತು ರಾಜ್ಯದ ಪರಿಸ್ಥಿತಿ ಬೇರೆ ಇರುತ್ತಿತ್ತು ಎಂದರು.

  • 50 ಕೋಟಿ ಕೊಟ್ಟರೆ ನಾನು ಇವತ್ತೇ ಜೈಲಿಗೆ ಹೋಗ್ತೀನಿ: ಎ.ಮಂಜು ತಿರುಗೇಟು

    50 ಕೋಟಿ ಕೊಟ್ಟರೆ ನಾನು ಇವತ್ತೇ ಜೈಲಿಗೆ ಹೋಗ್ತೀನಿ: ಎ.ಮಂಜು ತಿರುಗೇಟು

    – ನಾನು ಕುಮಾರಣ್ಣನಿಗೆ ಚಾಕಲೇಟ್ ಕೊಟ್ಟರೆ ಜನ ನನಗೆ ಬತಾಸ್ ಕೊಡ್ತಾರೆ

    ಬಿಡದಿ: 50 ಕೋಟಿ ಕೊಟ್ಟರೆ ನಾನು ಇವತ್ತೇ ಜೈಲಿಗೆ ಹೋಗ್ತೀನಿ ಎಂದು ಮಾಜಿ ಶಾಸಕ ಹೆಚ್.ಸಿ.ಬಾಲಕೃಷ್ಣ ಆರೋಪಕ್ಕೆ ಮಾಗಡಿ ಹಾಲಿ ಜೆಡಿಎಸ್ ಶಾಸಕ ಎ.ಮಂಜು ತಿರುಗೇಟು ನೀಡಿದ್ದಾರೆ.

    ಬಾಲಕೃಷ್ಣ ಅವರ ಆರೋಪಕ್ಕೆ ಮಾಧ್ಯಮಗಳೊಂದಿಗೆ ಮಾತನಾಡಿದ ಮಂಜು ಅವರು, ನಾನು ಮಾತನಾಡಿದರೆ ಅವರ ಪೂರ್ವಜರಷ್ಟು ಮಾತನಾಡ್ತೇನೆ. ಇವರ ರೀತಿ ಹಲ್ಕಟ್ ರಾಜಕೀಯ ನಾನು ಮಾಡಲ್ಲ. 10 ಕೋಟಿ ಹಣ ಪಡೆದು ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಿ ದೇವೇಗೌಡರ ಬೆನ್ನಿಗೆ ಚೂರಿ ಹಾಕಿ ಹೋಗಿದ್ದಾರೆ. ಇವತ್ತು ನನ್ನ ಬಗ್ಗೆ ಇಲ್ಲಸಲ್ಲದನ್ನು ಮಾತನಾಡ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ:  ಮಕ್ಕಳಿಗೆ ಐಸ್ ಕ್ರೀಂ ನೀಡದ್ದಕ್ಕೆ ಅಂಗಡಿ ಮೇಲೆ ದಾಳಿ ಮಾಡಿದ ತಂದೆ

    ಡಿ.ಕೆ.ಶಿವಕುಮಾರ್ ಅವರಿಗೆ, ಡಿ.ಕೆ.ಸುರೇಶ್ ಅವರಿಗೆ ನನ್ನಿಂದ ಸಹಾಯ ಆಗಿದೆ. ಆದರೆ ಅವರಿಂದ ನನಗೇನು ಸಹಾಯ ಆಗಿಲ್ಲ. ತೆಗೆದುಕೊಂಡಿದ್ದ ಹಣಕ್ಕೆ ಬಡ್ಡಿ ಸಮೇತ ವಾಪಸ್ ನೀಡಿದ್ದೇನೆ. ಅವರು ನನ್ನ ಪರವಾಗಿ ಇದ್ದಿದ್ದನ್ನ ಸಾಬೀತು ಮಾಡಲಿ. ನಾನು ರಾಜಕೀಯದಿಂದ ನಿವೃತ್ತಿಯಾಗುತ್ತೇನೆ. ಇವರು ಕುಮಾರಸ್ವಾಮಿ ಅವರಿಗೆ ಚಾಕಲೇಟ್ ಕೊಟ್ಟು ಐಸ್‍ಕ್ರೀಂ ನೆಕ್ಕಿ ಹೋದರು. ನಾನು ಕುಮಾರಣ್ಣನಿಗೆ ಚಾಕಲೇಟ್ ಕೊಟ್ಟರೆ ಜನ ನನಗೆ ಬತಾಸ್ ಕೊಡ್ತಾರೆ. ಅದು ನನಗೆ ಗೊತ್ತಿದೆ. ಹಾಗಾಗಿ ನಾನು ಕುಮಾರಣ್ಣನ ಜೊತೆಗೆ ಇರುತ್ತೇನೆ ಎಂದರು.

  • ಮಾಜಿ ಶಾಸಕ ಹೆಚ್.ಸಿ.ಬಾಲಕೃಷ್ಣ ಪುತ್ರಿಗೆ ಕೊರೊನಾ ಸೋಂಕು

    ಮಾಜಿ ಶಾಸಕ ಹೆಚ್.ಸಿ.ಬಾಲಕೃಷ್ಣ ಪುತ್ರಿಗೆ ಕೊರೊನಾ ಸೋಂಕು

    ಬೆಂಗಳೂರು: ಮಾಜಿ ಶಾಸಕ ಹೆಚ್.ಸಿ.ಬಾಲಕೃಷ್ಣ ಪುತ್ರಿಗೆ ಕೊರೊನಾ ಸೋಂಕು ತಗುಲಿದೆ. ಈ ಕುರಿತು ಬಾಲಕೃಷ್ಣ ಅವರೇ ಟ್ವಿಟ್ಟರ್ ಮೂಲಕ ಮಾಹಿತಿ ನೀಡಿದ್ದಾರೆ.

    ನನ್ನ ಮಗಳು ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯೆ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಕೊರೊನಾ ಪರೀಕ್ಷೆ ಮಾಡಿಸಿದಾಗ ವರದಿಯಲ್ಲಿ ಸೋಂಕು ತಗುಲಿರೋದು ದೃಢಪಟ್ಟಿದೆ. ಈ ವಿಷಯವನ್ನು ನಿಮ್ಮೆಲ್ಲರ ಗಮನಕ್ಕೆ ಒಬ್ಬ ಜವಾಬ್ದಾರಿಯುತ ಜನಪ್ರತಿನಿಧಿಯಾಗಿ ಈ ಪ್ರಮುಖ ವಿಚಾರವನ್ನು ತಿಳಿಸಲು ಇಚ್ಛೆ ಪಡುತ್ತೇನೆ. ಎಲ್ಲಾ ನನ್ನ ಆತ್ಮೀಯರಲ್ಲಿ ನನ್ನ ಮನವಿ, ಯಾವುದೇ ಆತಂಕ ಬೇಡ, ದಯವಿಟ್ಟು ಯಾರೂ ಕರೆ ಮಾಡಬೇಡಿ, ಕರೆಗಳನ್ನು ಸ್ವೀಕರಿಸಲು ಆಗುತ್ತಿಲ್ಲ ಎಂದು ವಿನಂತಿಸುತ್ತೇನೆ ಎಂದು ಟ್ವಿಟ್ಟರ್ ನಲ್ಲಿ ಹೆಚ್.ಸಿ.ಬಾಲಕೃಷ್ಣ ಬರೆದುಕೊಂಡಿದ್ದಾರೆ.

    ಇಂದು ಸಚಿವ ಸುಧಾಕರ್ ಅವರ ತಂದೆ ಮತ್ತು ಮನೆಗೆಲಸದವನಿಗೂ ಕೊರೊನಾ ಸೋಂಕು ತಗುಲಿದೆ. ಇಂದು ರಾಜ್ಯದಲ್ಲಿ ಒಟ್ಟು 249 ಮಂದಿಗೆ ಸೋಂಕು ತಗುಲಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 9399ಕ್ಕೆ ಏರಿಕೆಯಾಗಿದೆ.

  • ಅಳುವ ಗಂಡಸನ್ನು ನಗುವ ಹೆಂಗಸನ್ನು ನಂಬಬಾರದು: ಕಾಂಗ್ರೆಸ್ ಅಭ್ಯರ್ಥಿ ಬಾಲಕೃಷ್ಣ ವ್ಯಂಗ್ಯ

    ಅಳುವ ಗಂಡಸನ್ನು ನಗುವ ಹೆಂಗಸನ್ನು ನಂಬಬಾರದು: ಕಾಂಗ್ರೆಸ್ ಅಭ್ಯರ್ಥಿ ಬಾಲಕೃಷ್ಣ ವ್ಯಂಗ್ಯ

    ರಾಮನಗರ: ಅಳುವ ಗಂಡಸನ್ನ, ನಗುವ ಹೆಂಗಸನ್ನ ನಂಬಬಾರದು ಕಣ್ರೀ. ಗಂಡಸಾದವನು ಎಂತಹ ಸಂದರ್ಭದಲ್ಲೂ ಧೈರ್ಯ, ಶಕ್ತಿ ತುಂಬಿ ಆತ್ಮಸ್ಥೈರ್ಯ ಹೆಚ್ಚಿಸುವ ಕೆಲಸ ಮಾಡಬೇಕು ಎಂದು ಪರೋಕ್ಷವಾಗಿ ಎಚ್.ಡಿ ಕುಮಾರಸ್ವಾಮಿ ಹಾಗೂ ಎಚ್.ಡಿ ದೇವೇಗೌಡ ವಿರುದ್ಧ ಎಚ್.ಸಿ ಬಾಲಕೃಷ್ಣ ವಾಗ್ದಾಳಿ ನಡೆಸಿದ್ದಾರೆ.

    ರಾಮನಗರ ತಾಲೂಕಿನ ಬಿಡದಿಯಲ್ಲಿ ಪ್ರಚಾರದ ವೇಳೆ ಮಾತನಾಡಿದ ಅವರು, ನಾನು ಕಾಂಗ್ರೆಸ್ ಸೇರ್ಪಡೆಯಾದ ಬಳಿಕ, ಒಳ್ಳೆಯ ಎಂಎಲ್‍ಎ ನನ್ನು ಕರ್ಕೊಂಡ್ ಹೋಗ್ಬಿಟ್ರಿ ಅಂತಾ ಜೆಡಿಎಸ್‍ನವರು ಹೇಳಿದ್ರೆ, ಅಲ್ಲಿನ ಕೆಲವರು ಹಲ್ಲು ಹಲ್ಲು ಕಡಿದುಕೊಂಡು ಕೂತವರೇ ಎಂದು ತಿಳಿಸಿದ್ರು.

    ಜೆಡಿಎಸ್‍ನಲ್ಲಿ ಟಿಕೆಟ್ ಗೊಂದಲದ ಬಗ್ಗೆ ಮಾತನಾಡಿದ ಅವರು, ಇದು ರಾಜಕಾರಣ ಏನ್ರೀ? ಇಂತಹ ರಾಜಕಾರಣದ ಅವಶ್ಯಕತೆ ಇದೆಯೇನ್ರೀ. ಶಿಡ್ಲಘಟ್ಟದಲ್ಲಿ ಟಿಕೆಟ್ ತಗೊಂಡು ನಿಂತಿರುವವರ ಮನೆ ಹಾಳಾಗೋದಿಲ್ವೆನ್ರೀ. ದೇವನಹಳ್ಳಿಯಲ್ಲಿ ಒಬ್ಬನಿಗೆ ಬಿ ಫಾರಂ ಕೊಡ್ತಾರೆ, ಇನ್ನೊಬ್ಬನಿಗೆ ಸಿ ಫಾರಂ ಕೊಡ್ತಾರೆ. ಅವರ ಕುಟುಂಬದವರು ಸೂಸೈಡ್ ಮಾಡ್ಕೊಬೇಕೇನ್ರೀ? ಇವರನ್ನ ನಂಬಿಕೊಂಡು ಸಾಯಂಕಾಲ ಬರ್ತಾರೆ ನಿಮ್ಮ ಮುಂದೆ ಕಣ್ಣೀರು ಹಾಕ್ತಾರೆ ನೋಡಿ ಎಂದು ವ್ಯಂಗ್ಯವಾಡಿದ್ರು.