ಬೆಂಗಳೂರು: ಅನಾರೋಗ್ಯದಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ (Manipal Hospital) ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ (HD Deve Gowda) ಅವರನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಬೆಂಗಳೂರು: ಇಂದು ನಗರದ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (BS Yediyurappa), ಪುತ್ರ ಬಿ.ವೈ ವಿಜಯೇಂದ್ರ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ (HD DeveGowda) ಅವರ ಆರೋಗ್ಯ ವಿಚಾರಿಸಿದರು. ಜೊತೆಗೆ ದೇಶದ ಮತ್ತು ರೈತರ ಹಿತಕ್ಕಾಗಿ ಸದಾ ಶ್ರಮಿಸಿದ ಈ ಮಹಾನ್ ನಾಯಕರು ಶೀಘ್ರ ಚೇತರಿಸಿಕೊಂಡು ಉತ್ತಮ ಆರೋಗ್ಯದಲ್ಲಿ ಇರಲಿ ಎಂದು ಹಾರೈಸಿದರು.
ಇಂದು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ, ನಮ್ಮ ದೇಶದ ಹಿರಿಯ ನಾಯಕರು ಹಾಗೂ ಮಾಜಿ ಪ್ರಧಾನ ಮಂತ್ರಿ ಶ್ರೀ ಎಚ್.ಡಿ. ದೇವೇಗೌಡರನ್ನು ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಲಾಯಿತು. ದೇಶ ಮತ್ತು ರೈತರ ಹಿತಕ್ಕಾಗಿ ಸದಾ ಶ್ರಮಿಸಿದ ಈ ಮಹಾನ್ ನಾಯಕರು ಶೀಘ್ರ ಚೇತರಿಸಿಕೊಂಡು ಉತ್ತಮ ಆರೋಗ್ಯದಲ್ಲಿ ಇರಲಿ ಎಂದು ಹಾರೈಸುತ್ತೇನೆ. pic.twitter.com/daFBQrz4QG
ಸದ್ಯಕ್ಕೆ ಆಸ್ಪತ್ರೆಯಲ್ಲೇ ಚಿಕಿತ್ಸೆ
ಇತ್ತೀಚೆಗೆ ಅನಾರೋಗ್ಯದಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ (Bengaluru Manipal Hospital) ದಾಖಲಾಗಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಆರೋಗ್ಯ ಸ್ಥಿರವಾಗಿರುವುದಾಗಿ ಎಂದು ಜೆಡಿಎಸ್ ಪಕ್ಷ ಒಂದು ದಿನದ ಹಿಂದೆ ತಿಳಿಸಿದೆ.
ತಾವುಗಳು ಆತಂಕಪಡುವ ಆಗತ್ಯವಿಲ್ಲ. ಮಾಜಿ ಪ್ರಧಾನಮಂತ್ರಿಗಳು ಹಾಗೂ ಜನತಾದಳ ಪಕ್ಷದ ರಾಷ್ಟ್ರೀಯ ಅಧ್ಯಕರಾದ ದೇವೇಗೌಡರು ಚೇತರಿಸಿಕೊಂಡು ಗುಣಮುಖರಾಗಿದ್ದು, ಆರೋಗ್ಯವಾಗಿದ್ದಾರೆ. ಇನ್ನು ಕೆಲ ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ನಾಡಿನ ಜನರ ಹಾರೈಕೆ, ಪ್ರೀತಿ, ಪ್ರಾರ್ಥನೆಯೇ ಅವರಿಗೆ ಶ್ರೀರಕ್ಷೆ. ವದಂತಿಗಳಿಗೆ ಕಿವಿಗೊಡಬೇಡಿ ಎಂದು ಪಕ್ಷ ಪ್ರಕಟಣೆಯಲ್ಲಿ ಮನವಿ ಮಾಡಿದೆ.
ಹೆಚ್‌ಡಿಕೆ ಹೇಳಿದ್ದೇನು?
ಇನ್ನೂ ದೊಡ್ಡಗೌಡರ ಆರೋಗ್ಯದ ಬಗ್ಗೆ ಅಪ್ಡೇಟ್ ಕೊಟ್ಟಿದ್ದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ದೇವೇಗೌಡರು ಆರೋಗ್ಯವಾಗಿದ್ದಾರೆ. ಯಾರೂ ಆತಂಕಪಡುವ ಅಗತ್ಯವಿಲ್ಲ 3-4 ದಿನದಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಾರೆ ಎಂದು 2 ದಿನಗಳ ಹಿಂದೆ ಹೇಳಿದ್ದರು.
ಬೆಂಗಳೂರು: ಕಲ್ಯಾಣ ಕರ್ನಾಟಕ (Kalyana Karnataka) ಭಾಗದಲ್ಲಿ ಪ್ರವಾಹದಿಂದ ಆಗಿರೋ ಅನಾಹುತಕ್ಕೆ ಅವಶ್ಯಕತೆ ಬಿದ್ದರೆ ನಾನೇ ದೆಹಲಿಗೆ ಹೋಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಭೇಟಿಯಾಗಿ, ಪರಿಹಾರಕ್ಕೆ ಮನವಿ ಮಾಡೋದಾಗಿ ಮಾಜಿ ಪ್ರಧಾನಿ ದೇವೇಗೌಡ (H D Deve Gowda) ತಿಳಿಸಿದ್ದಾರೆ.
ಪ್ರವಾಹ (Flood) ವಿಚಾರ ಕುರಿತು ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಎಂ ಮೊನ್ನೆ ನೆರೆ ಹಾನಿ ಪ್ರದೇಶಗಳ ವೈಮಾನಿಕ ಸರ್ವೆ ಮಾಡಿದ್ದಾರೆ. ನಾನು ಅವರು ಮಾಡಿದ ಸರ್ವೆ ನೋಡಿದೆ. ನಾನು ಸಿಎಂ ಮೇಲೆ ಆಪಾದನೆ ಮಾಡೊಲ್ಲ. ವೈಮಾನಿಕ ಸರ್ವೆ ಮಾಡಿ 3 ದಿನ ಆಗಿದೆ. 6 ಜಿಲ್ಲೆಯಲ್ಲಿ ಬೆಳೆ ನಾಶ ಆಗಿದೆ. 50ಕ್ಕೂ ಹೆಚ್ಚು ಜನರು, ಜಾನುವಾರುಗಳು ಸತ್ತು ಹೋಗಿವೆ. ರೈತರ ಬೆಳೆ ಸಂಪೂರ್ಣವಾಗಿ ನಾಶವಾಗಿದೆ. ಅವ್ರು ಎಕ್ರೆಗೆ ಇಷ್ಟು ಹಣ ಅಂತ ಘೋಷಣೆ ಮಾಡಿದ್ರು. ಆದರೆ ಫೀಲ್ಡ್ಗೆ ಹೋಗಿ ಎಷ್ಟು ಪ್ರದೇಶ ಹಾನಿಯಾಗಿದೆ ಅಂತ ನೋಡಿ ಸಂಬಂಧಪಟ್ಟವರ ನೋವಿಗೆ ಸ್ಪಂದಿಸುವ ಕೆಲಸವನ್ನು ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾ ಆಡಳಿತವೂ ಮಾಡಿಲ್ಲ. ಅವರ ನೋವಿಗೆ ಸ್ಪಂದಿಸುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: 3 ತಿಂಗಳು ನನ್ನ ಮನೆಮುಂದೆ ಮಾಧ್ಯಮಗಳು ಕಾಯೋ ಹಾಗೇ ಮಾಡಿದ್ದು ಯಾರ ಪ್ರೇರಣೆಯಿಂದ – HDD ಕಿಡಿ
48 ಗಂಟೆ ಒಳಗೆ ಡಿಸಿಗಳು, ಜಿಲ್ಲಾ ಉಸ್ತುವಾರಿಗಳು ಜಾಗಕ್ಕೆ ಹೋಗಿ ಸ್ಥಳ ಪರಿಶೀಲನೆ ಮಾಡಬೇಕು. ನೋವಿನಲ್ಲಿ ಇರೋ ರೈತರಿಗೆ ಪರಿಹಾರ ಕೊಟ್ಟಿದ್ದಾರಾ ಇಲ್ವಾ ಅಂತ ನೋಡಿ ಮಾತಾಡಬೇಕು. ಮೂರ್ನಾಲ್ಕು ದಿನ ಆದ ಮೇಲೆ ಕಲಬುರಗಿಗೆ ವಿಮಾನದಲ್ಲಿ ಬಂದಿದ್ದಾರೆ. ನಾನೇ ಪ್ರವಾಹ ಪೀಡಿತ ಪ್ರದೇಶಕ್ಕೆ ಹೋಗ್ತೀನಿ. ಸ್ಥಳ ಪರಿಶೀಲನೆ ಮಾಡಿ ಸರ್ಕಾರ ಏನು ಕ್ರಮ ಕೈಗೊಂಡಿದೆ ಎಂದು ಮಾತಾಡ್ತೀನಿ ಎಂದಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮುಂದೆ ಬರುವ ಎಲ್ಲಾ ಚುನಾವಣೆಗಳಿಗೂ ಬಿಜೆಪಿ-ಜೆಡಿಎಸ್ ಮೈತ್ರಿ: ಹೆಚ್‌ಡಿಡಿ ಘೋಷಣೆ
ಈಗಾಗಲೇ ಪರಿಹಾರ ಕೊಡಿ ಅಂತ ಪ್ರಧಾನಿ ಮೋದಿ, ಅಮಿತ್ ಶಾಗೆ ಕುಮಾರಸ್ವಾಮಿ ಪತ್ರ ಬರೆದು ಮನವಿ ಮಾಡಿದ್ದಾರೆ. ನಾನು ಅವಶ್ಯಕತೆ ಬಿದ್ದರೆ ಮೋದಿ, ಅಮಿತ್ ಶಾಗೆ ಪತ್ರ ಬರೆಯುತ್ತೇನೆ. ನಾನೇ ದೆಹಲಿಗೆ ಹೋಗಿ ಪ್ರಧಾನಿ ಅವರ ಬಳಿ ಪರಿಹಾರಕ್ಕಾಗಿ ಮನವಿ ಮಾಡ್ತೀನಿ ಎಂದು ಹೇಳಿದ್ದಾರೆ.
ಬೇರೆ ರಾಜ್ಯದ ಪ್ರವಾಹಕ್ಕೆ ಕೇಂದ್ರ ಹಣ ಕೊಟ್ಟಿದೆ. ಕರ್ನಾಟಕಕ್ಕೆ ಕೊಟ್ಟಿಲ್ಲ ಎಂಬ ಕಾಂಗ್ರೆಸ್ ನಾಯಕರ ಆರೋಪದ ಪ್ರತಿಕ್ರಿಯಿಸಿದ ಅವರು, ನಾನು ಇದರಲ್ಲಿ ರಾಜಕೀಯ ಬೆರೆಸಲು ಹೋಗಲ್ಲ. ಕಾಂಗ್ರೆಸ್‌ನ ಶಾಸಕರು ಗ್ಯಾರಂಟಿ ಕಾರ್ಯಕ್ರಮವನ್ನ ಅನುಷ್ಠಾನಕ್ಕೆ ತರಲು ಹೋಗಿ, ಇವತ್ತು ರಾಜ್ಯ ಬರಡಾಗಿದೆ. ಹಣಕಾಸಿನ ಸ್ಥಿತಿ ಹದಗೆಟ್ಟಿದೆ ಅಂತ ಹೇಳ್ತಿದ್ದಾರೆ. ಇದನ್ನ ನಾನು ಹೇಳ್ತಿಲ್ಲ. ಕಾಂಗ್ರೆಸ್ ಶಾಸಕರು ಹೇಳ್ತಿದ್ದಾರೆ. ರಾಜ್ಯದ ಬೊಕ್ಕಸದಲ್ಲಿ ದುಡ್ಡು ಇದೆಯೋ? ಇಲ್ಲವೋ ಅಂತ ಅವರಲ್ಲೇ ಗೊಂದಲವಿದೆ. ರಾಜ್ಯ ಸರ್ಕಾರ ಪ್ರವಾಹದಿಂದ ಸಮಸ್ಯೆಗೊಳಗಾದ ಜನರಿಗೆ ತನ್ನ ಸಂಪನ್ಮೂಲದಿಂದ ಶಕ್ತಿ ಮೀರಿ ಸಹಾಯ ಮಾಡಬೇಕು ಎಂದಿದ್ದಾರೆ.
– ಜೆಡಿಎಸ್‌ನಿಂದ 1 ಲಕ್ಷ ರೂ. ಪರಿಹಾರ ಘೋಷಣೆ; ವಿದ್ಯಾಭ್ಯಾಸ ಖರ್ಚು ಭರಿಸುವ ಭರವಸೆ
ಹಾಸನ: ಇಲ್ಲಿನ ಮೊಸಳೆಹೊಸಳ್ಳಿಯಲ್ಲಿ ನಡೆದ ಅಪಘಾತ ಪ್ರಕರಣ ನಿಜಕ್ಕೂ ಘನಘೋರ ದುರಂತ. ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಚಂದನ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಈ ಮೂಲಕ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಇತ್ತ ಟ್ರಕ್ ಡೈವರ್‌ಗೆ ಆಸ್ಪತ್ರೆಯಲ್ಲಿ (Hospital) ಚಿಕಿತ್ಸೆ ಮುಂದುವರೆದ್ದು, ಆತನ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.
ಈ ನಡುವೆ ನಿನ್ನೆ ಸಂಜೆ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದ ಹೆಚ್.ಡಿ ದೇವೇಗೌಡ (HD Devegowda) ಅವರು ಇಂದು ಮೃತರ ಕುಟುಂಬಕ್ಕೆ ತೆರಳಿ ಸಾಂತ್ವನ ಹೇಳಿದ್ದಾರೆ. ಜೊತೆಗೆ ಜೆಡಿಎಸ್ ಪಕ್ಷದಿಂದ ಪರಿಹಾರ ಮೊತ್ತವನ್ನೂ ಘೋಷಣೆ ಮಾಡಿದ್ದಾರೆ. ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದಿದ್ದಾರೆ. ಜೊತೆಗೆ ರಾಜ್ಯ ಸರ್ಕಾರ ಪರಿಹಾರದ ಮೊತ್ತ ಹೆಚ್ಚಿಸುವಂತೆ ಸರ್ಕಾರಕ್ಕೆ ಆಗ್ರಹ ಕೂಡ ಮಾಡಿದ್ದಾರೆ. ಇದನ್ನೂ ಓದಿ: Hassan Tragedy | ಟ್ರಕ್ ಅಪಘಾತ ನಡೆದ ಜಾಗದಲ್ಲಿ ಹಂಪ್ಸ್ ನಿರ್ಮಿಸಲು ತೀರ್ಮಾನ
ವ್ಹೀಲ್ ಚೇರ್‌ನಲ್ಲೇ ಸ್ಥಳಕ್ಕೆ ಭೇಟಿ
ಶನಿವಾರ ಸಂಜೆ ಹಾಸನಕ್ಕೆ (Hassan) ಭೇಟಿ ನೀಡಿದ ಮಾಜಿ ಪ್ರಧಾನಿ ದೇವೇಗೌಡರು. ವ್ಹೀಲ್‌ಚೇರಲ್ಲೇ ತೆರಳಿ ಹಿಮ್ಸ್‌ಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದರು. ಬಳಿಕ ಮಾತನಾಡಿದ ಹೆಚ್.ಡಿ ದೇವೇಗೌಡರು, ಜೆಡಿಎಸ್ ಪಕ್ಷದ ವತಿಯಿಂದ ಮೃತ ಕುಟುಂಬಸ್ಥರಿಗೆ 1 ಲಕ್ಷ ಪರಿಹಾರ ಘೋಷಣೆ ಮಾಡಿದರು. ಪೊಲೀಸರು ಮುಂಜಾಗ್ರತೆ ವಹಿಸಿದ್ದರೇ ಈ ಅನಾಹುತ ತಡೆಯಬಹುದಿತ್ತು ಎಂದರಲ್ಲದೇ ರಾಜ್ಯ ಸರ್ಕಾರ ಪರಿಹಾರದ ಮೊತ್ತ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.
ಅಲ್ಲದೇ ಇಂದು ಮೊಸಳೆಹೊಸಳ್ಳಿಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಬಾಲಕರ ವಿದ್ಯಾರ್ಥಿ ನಿಲಯ ಕಟ್ಟಡದ ಕಾಮಗಾರಿ ವೀಕ್ಷಿಸಿದ ಹೆಚ್‌ಡಿಡಿ ಬಳಿಕ ಟ್ರಕ್ ಹರಿದು ಮೃತಪಟ್ಟ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಈ ವೇಳೆ ಶಾಸಕರಾದ ಹೆಚ್.ಡಿ ರೇವಣ್ಣ, ಹೆಚ್.ಪಿ ಸ್ವರೂಪ್‌ಪ್ರಕಾಶ್ ಸಾಥ್ ನೀಡಿದ್ದಾರೆ. ಇದನ್ನೂ ಓದಿ: ಹಾಸನ ಟ್ರಕ್ ದುರಂತಕ್ಕೆ 10 ಬಲಿ – ಗಾಯಾಳುಗಳ ಆರೋಗ್ಯ ವಿಚಾರಿಸಲು ವ್ಹೀಲ್‌ಚೇರ್‌ನಲ್ಲೇ ಆಸ್ಪತ್ರೆಗೆ ಬಂದ ಹೆಚ್‌ಡಿಡಿ
ಡಿಜೆಗೆ ಕುಣಿಯಲು ಬಂದು ಮಸಣ ಸೇರಿದ ಯುವಕರು
ಗಣೇಶ್ ಸಂಭ್ರಮ ನೋಡಲು ಬಂದವರು ನೋಡ ನೋಡ್ತಿದ್ದಂತೆ ಹೆಣವಾಗಿದ್ದು, ನಿಜಕ್ಕೂ ಘೋರ ದುರಂತವೇ ಸರಿ. ಟ್ರಕ್ ಹರಿದ ರಭಸಕ್ಕೆ ಸ್ಥಳದಲ್ಲೇ 9 ಜನರು ಸಾವನಪ್ಪಿದ್ದರೇ. ಗಂಭೀರವಾಗಿ ಗಾಯಗೊಂಡಿದ್ದ ಹಾಸನದ ಶಿವಯ್ಯನ ಕೊಪ್ಪಲು ಗ್ರಾಮದ 28 ವರ್ಷದ ಯುವಕನ ಬ್ರೈನ್ ಡೆಡ್ ಆಗಿತ್ತು. ಹಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ಚಂದನ್ ಚಿಕಿತ್ಸೆ ಫಲಕಾರಿಯಾಗದೇ ಕೊನೆ ಉಸಿರೆಳೆದಿದ್ದಾನೆ. ಪುತ್ರನ ಸಾವಿನ ಸುದ್ದಿ ತಿಳಿದು ಆಸ್ಪತ್ರೆ ಅವರಣದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಆಟೋ ಚಾಲಕನಾಗಿದ್ದ ಚಂದನ್‌ಗೆ ಇನ್ನೂ ಮದುವೆಯಾಗಿಲ್ಲ.. ಕುಟುಂಬಕ್ಕೆ ಅಧಾರ ಸ್ತಂಭವಾಗಿದ್ದ, ತನ್ನ ಗ್ರಾಮದಿಂದ ಮೊಸಳೆಹೊಸಳ್ಳಿ ಬಾಡಿಗಿಗೆ ಬಂದಿದ್ದ ಚಂದನ ಟೀ ಕುಡಿಯಲು ಆಟೋ ನಿಲ್ಲಿಸಿ. ಕುತೂಹಲಕ್ಕೆ ಮೆರವಣಿಗೆ ನೋಡಲು ನಿಂತವನು ಮಸಣ ಸೇರಿದ್ದಾನೆ.
ಅಪಘಾತದಲ್ಲಿ ಸಾವನಪ್ಪಿದ ಹೊಳೆನರಸೀಪುರ ತಾಲೂಕು ಡನಾಯಕನಹಳ್ಳಿ ಕೊಪ್ಪಲು ನಿವಾಸಿ ಈಶ್ವರ ಬಿನ್ ರವಿಕುಮಾರ್ ಅಂತ್ಯಕ್ರಿಯೆ ಸ್ವಗ್ರಾಮದಲ್ಲಿ ನೇರವೇರಿದೆ. ಎಸ್‌ಎಸ್‌ಎಲ್‌ಸಿಯಲ್ಲಿ 95% ಅಂಕ ಪಡೆದು, ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದ ಈಶ್ವರ. ಮೆರವಣಿಗೆ ನೋಡಲು ಬಂದು ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಆಟೋ ಓಡಿಸಿಕೊಂಡು ಗ್ರಾಮದಲ್ಲಿ ಜೀವನ ಸಾಗಿಸುತ್ತಿದ್ದ ಈಶ್ವರ ಪೋಷಕರು. ಮಗನನ್ನು ಚನ್ನಾಗಿ ಓದಿಸುವ ಆಕಾಂಕ್ಷೆ ಹೊಂದಿದ್ದರು. ಇದನ್ನೂ ಓದಿ: Hassan Tragedy | ಮೃತರೆಲ್ಲ ಹಳ್ಳಿಯವ್ರು, 10 ಲಕ್ಷ ಪರಿಹಾರ ಕೊಟ್ರೆ ಒಳ್ಳೆಯದು – ಸರ್ಕಾರಕ್ಕೆ ಆರ್.ಅಶೋಕ್ ಮನವಿ
ನವದೆಹಲಿ: ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿಯಾಗಿರುವ ಸಿಪಿ ರಾಧಾಕೃಷ್ಣನ್‌ಗೆ (CP Radhakrishnan) ಮೈತ್ರಿ ಪಕ್ಷ ಜೆಡಿಎಸ್ (JDS) ಬೆಂಬಲ ಘೋಷಿಸಿದೆ. ದೆಹಲಿಯ ದೇವೇಗೌಡರ (HD Deve Gowda) ನಿವಾಸದಲ್ಲಿ ಉಪ ರಾಷ್ಟ್ರಪತಿ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ದೇವೇಗೌಡರನ್ನ ಭೇಟಿಯಾಗಿ ಚರ್ಚೆ ನಡೆಸಿದರು.
ಭೇಟಿಯ ಸಮಯದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ಕುಮಾರಸ್ವಾಮಿ, ಸಂಸದರಾದ ಮಂಜುನಾಥ್ ಉಪಸ್ಥಿತರಿದ್ದರು. ಇದೇ ವೇಳೆ ಮಾತನಾಡಿದ ದೇವೇಗೌಡರು, ನನ್ನ 10 ವರ್ಷದ ಅನುಭವದಲ್ಲಿ ಮೋದಿ ಅವರ ಮನಸ್ಸನ್ನು ಯಾರು ಪತ್ತೆ ಹಚ್ಚಲು ಸಾಧ್ಯವಿಲ್ಲ. ಕೊನೆಯ ಘಳಿಗೆಯ ತನಕ ಗುಟ್ಟು ಬಿಟ್ಟು ಕೊಡುವುದಿಲ್ಲ. ರಾಧಾಕೃಷ್ಣನ್ ಅವರು ಅಂತಿಮವಾಗಿ ಆಯ್ಕೆಯಾದರು. ಎಲ್ಲಾ ದೃಷ್ಟಿಯಿಂದಲೂ ಸಮರ್ಥರು, ಅರ್ಹರು ಆಗಿರುವ ಯೋಗ್ಯ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದಾರೆ ಎಂದರು. ಇದನ್ನೂ ಓದಿ: ಪೋಕ್ಸೊ ಪ್ರಕರಣದಲ್ಲಿ ಮಹಿಳೆಗೆ 20 ವರ್ಷ ಜೈಲು
ರಾಜ್ಯಪಾಲರಾಗಿ, ಲೆಫ್ಟಿನೆಂಟ್ ಗವರ್ನರ್ ಆಗಿ, ಲೋಕಸಭಾದ ಹಲವು ಸಮಿತಿಗಳಲ್ಲಿ ಕೆಲಸ ಮಾಡಿದ್ದಾರೆ. ವಿವಿಧ ಸಮಿತಿಗಳ ಭಾಗವಾಗಿ 24 ದೇಶಗಳಲ್ಲಿ ಪ್ರವಾಸ ಮಾಡಿದ್ದಾರೆ. ಜನಸಾಮಾನ್ಯರ ಮಧ್ಯದಿಂದ ಬೆಳದು ಬಂದ ವ್ಯಕ್ತಿ ಇವರು, ನನಗೆ ತುಂಬಾ ಸಂತೋಷ ಆಗಿದೆ. ನಾನು ಒಬ್ಬ ಸಾಮಾನ್ಯ ಸದಸ್ಯನಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ನಮ್ಮ ಪಕ್ಷದಿಂದ ಬೆಂಬಲ ಇದೆ ಎಂದು ದೇವೇಗೌಡರು ಹೇಳಿದರು. ಇದನ್ನೂ ಓದಿ: ವಯನಾಡ್ ಲೋಕಸಭಾ ಕ್ಷೇತ್ರದ ಮೆಪ್ಪಾಡಿಗೆ ಕರ್ನಾಟಕ ಸರ್ಕಾರದಿಂದ 10 ಕೋಟಿ ಹಣ
ಬೆಂಗಳೂರು: ಇಂದು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ (HD Deve Gowda) 92ನೇ ವರ್ಷದ ಹುಟ್ಟುಹಬ್ಬದ (Birthday) ಹಿನ್ನೆಲೆ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ದೇವೇಗೌಡರಿಗೆ ಶುಭಾಶಯ ಕೋರಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯಗಳು. ಸಾರ್ವಜನಿಕ ಸೇವೆಗಾಗಿ ಹೆಚ್‌ಡಿಡಿ ಎಲ್ಲೆಡೆ ಗೌರವಾನ್ವಿತರಾಗಿದ್ದಾರೆ. ಹಲವಾರು ವಿಷಯಗಳ ಕುರಿತು ಅವರ ಬುದ್ಧಿವಂತಿಕೆ ಮತ್ತು ಒಳನೋಟಗಳು ಹೆಚ್ಚಿನ ಶಕ್ತಿಯ ಮೂಲವಾಗಿದೆ. ಅವರಿಗೆ ದೀರ್ಘ ಮತ್ತು ಆರೋಗ್ಯಕರ ಜೀವನ ಕರುಣಿಸಲಿ ಎಂದು ಹಾರೈಸುತ್ತೇನೆಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಮಸೀದಿಗಳಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ – ಪರಿಶೀಲಿಸುವಂತೆ ಪೊಲೀಸ್ ಆಯುಕ್ತರಿಗೆ ಬೆಲ್ಲದ್ ಪತ್ರ
ಇನ್ನು ಸಿಎಂ ಸಿದ್ದರಾಮಯ್ಯ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಮಾಡಿದ್ದು, ನಾಡಿನ ಹಿರಿಯ ರಾಜಕಾರಣಿ, ಮಾಜಿ ಪ್ರಧಾನಿಗಳು ಆದ ಹೆಚ್‌ಡಿ ದೇವೇಗೌಡ ಅವರಿಗೆ ಜನ್ಮದಿನದ ಶುಭಾಶಯಗಳು. ಮತ್ತಷ್ಟು ಕಾಲ ತಮಗೆ ಉತ್ತಮ ಆರೋಗ್ಯ ಮತ್ತು ಆಯಸ್ಸನ್ನು ದೇವರು ಕರುಣಿಸಲೆಂದು ಹಾರೈಸುತ್ತೇನೆ ಎಂದು ಶುಭ ಹಾರೈಸಿದ್ದಾರೆ. ಇದನ್ನೂ ಓದಿ: ಎಣ್ಣೆ ಏಟಲ್ಲಿ ಮಹಿಳಾ ಸಿಬ್ಬಂದಿ ಜೊತೆ ಗೃಹರಕ್ಷಕ ದಳ ಅಧಿಕಾರಿ ಅನುಚಿತ ವರ್ತನೆ ಆರೋಪ – ದೂರು
ಹೆಚ್‌ಡಿ ಕುಮಾರಸ್ವಾಮಿ ಎಕ್ಸ್‌ನಲ್ಲಿ, ನನ್ನ ಪೂಜ್ಯ ತಂದೆಯವರು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮಾಜಿ ಪ್ರಧಾನಮಂತ್ರಿಗಳೂ ಆಗಿರುವ ಮಣ್ಣಿನಮಗ ಹೆಚ್‌ಡಿ ದೇವೇಗೌಡ ಅವರಿಗೆ ಜನ್ಮದಿನದ ಭಕ್ತಿಪೂರ್ವಕ ಶುಭಾಶಯಗಳು. ನನ್ನ ಶಕ್ತಿ, ನನ್ನ ಧೈರ್ಯ, ನನ್ನ ಸ್ಫೂರ್ತಿ ನನ್ನ ತಂದೆಯವರೇ ಆಗಿದ್ದಾರೆ. ಅವರ ಸಂಘರ್ಷದ ಹಾದಿ, ಸಾಧನೆ, ಸೇವಾ ತತ್ಪರತೆ ನನ್ನ ಮೇಲೆ ಅಗಾಧ ಪ್ರಭಾವ ಬೀರಿದೆ. ಇಡೀ ಬದುಕನ್ನು ರಾಷ್ಟ್ರ ಸೇವೆಗೆ ಸಮರ್ಪಿಸಿರುವ ಈ ಮಹಾನ್ ನಾಯಕನ ಕುಡಿಯಾಗಿ ಹುಟ್ಟಿರುವುದು ನನ್ನ ಜನ್ಮಜನ್ಮದ ಸುಕೃತ. ಆ ಭಗವಂತ ನನ್ನ ತಂದೆಯವರಿಗೆ ಇನ್ನೂ ಹೆಚ್ಚಿನ ಆಯುರಾರೋಗ್ಯ ಕರುಣಿಸಲಿ. ಸುದೀರ್ಘ ಕಾಲ ನಮಗೆಲ್ಲಾ ಮಾರ್ಗದರ್ಶನ ಮಾಡಿ, ಜನಸೇವೆ ಮಾಡುವ ಚೈತನ್ಯ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನ ಬೇಕಾ, ನರಕ ಬೇಕಾ ಅಂತ ಕೇಳಿದ್ರೆ ನಾನು ನರಕವನ್ನೇ ಆಯ್ಕೆ ಮಾಡ್ತೀನಿ: ಜಾವೇದ್ ಅಖ್ತರ್
ಬೆಂಗಳೂರು: ಹಾಸನದಲ್ಲಿ ಸಮಾವೇಶ ಮಾಡಿ ದೇವೇಗೌಡ (HD Deve Gowda) ಕುಟುಂಬದ ವಿರುದ್ಧ ಮಾತನಾಡಿದ್ದ ಕಾಂಗ್ರೆಸ್‌ಗೆ (Congress) ಕೌಂಟರ್ ಕೊಡಲು ದೇವೇಗೌಡರೇ ಅಖಾಡಕ್ಕೆ ಇಳಿದಿದ್ದಾರೆ. ಮೇ ತಿಂಗಳಲ್ಲಿ ಬೃಹತ್ ಸಮಾವೇಶ ಮಾಡಿ ವಿರೋಧಿಗಳಿಗೆ ಸಂದೇಶ ಕೊಡಲು ದೇವೇಗೌಡರು ಸಿದ್ಧತೆ ಮಾಡಿದ್ದಾರೆ.
ಜೆಪಿ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತಾನಾಡಿದ ಅವರು, ಮೇ ತಿಂಗಳಲ್ಲಿ ಜೆಡಿಎಸ್‌ನಿಂದ ದೊಡ್ಡ ಸಮಾವೇಶ ಮಾಡುತ್ತೇವೆ. ಕುಮಾರಸ್ವಾಮಿ ನೇತೃತ್ವದಲ್ಲಿ ಸಮಾವೇಶ ನಡೆಯಲಿದೆ. ಕಾಂಗ್ರೆಸ್ ಅವರು ಹಾಸನದಲ್ಲಿ ಸಮಾವೇಶ ಮಾಡಿದ್ದರು.ನಾವು ಕೂಡಾ ಸಮಾವೇಶ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ದೇವರಾಜ್ ಅರಸುರವರ ದಾಖಲೆ ಸರಿಗಟ್ಟುತ್ತಾರೆ: ಕೆಎನ್ ರಾಜಣ್ಣ
ಮೇನಲ್ಲಿ ನಡೆಯುವ ಸಮಾವೇಶಕ್ಕೆ ಮಾರ್ಚ್ 6ರಂದು ಪೂರ್ವಭಾವಿ ಸಭೆ ಮಾಡುತ್ತೇವೆ. ಪೂರ್ವಭಾವಿ ಸಭೆಯಲ್ಲಿ ಎಲ್ಲಾ ಜಿಲ್ಲಾ, ತಾಲೂಕು ಅಧ್ಯಕ್ಷರು, ಹಾಲಿ, ಮಾಜಿ, ಶಾಸಕರು, ಸಚಿವರು, ಸಂಸದಸರು ಭಾಗಿಯಾಗಲಿದ್ದಾರೆ. ಕುಮಾರಸ್ವಾಮಿ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ. ಅಂದು ಎಲ್ಲಿ ಸಮಾವೇಶ ಮಾಡಬೇಕು ಎಂದು ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆಗೆ ಅನುಮತಿ ಕೊಡಿ ಅಂತ ನಾನೇ ಕೇಂದ್ರಕ್ಕೆ ಪತ್ರ ಬರೆದಿದ್ದೇನೆ: ಹೆಚ್‌ಡಿಡಿ
ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರು (HD Deve Gowda) ಕರ್ನಾಟಕ ಸರ್ಕಾರದ (Congress) ಬಗ್ಗೆ ಮಾತಾಡೋ ಬದಲು ರಾಜ್ಯಕ್ಕೆ ಅನ್ಯಾಯ ಆಗಿರೋ ಬಗ್ಗೆ ಸಂಸತ್‌ನಲ್ಲಿ ಮಾತನಾಡಲಿ ಎಂದು ಸಚಿವ ಕೃಷ್ಣ ಬೈರೇಗೌಡ (Krishna Byre Gowda) ದೇವೇಗೌಡರಿಗೆ ತಿರುಗೇಟು ಕೊಟ್ಟಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಸಭೆಯಲ್ಲಿ ಮಾತಾಡಿದ್ದ ದೇವೇಗೌಡರ ಮಾತಿಗೆ ಪ್ರತಿಕ್ರಿಯೆ ನೀಡಿದ ಅವರು, ದೇವೇಗೌಡರು ಸಂಸತ್‌ನಲ್ಲಿ ಮಾತನಾಡಬೇಕಿರೋದು ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಮಾಡಿರೋ ಅನ್ಯಾಯದ ಬಗ್ಗೆ. ಹೆಜ್ಜೆ ಹೆಜ್ಜೆಗೂ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ. ಕೇಂದ್ರ ಸರ್ಕಾರದ ಬಜೆಟ್ (Union Budget) ಕರ್ನಾಟಕಕ್ಕೆ ಕರಾಳ ಅಧ್ಯಾಯ ಆಗಿದೆ. ತೆರಿಗೆ ಕಟ್ಟುವ, ಕಷ್ಟಪಟ್ಟು ದುಡಿಯೋ ಕರ್ನಾಟಕ ಜನರ ತೆರಿಗೆ ದುಡ್ಡು ಲೂಟಿ ಆಗುತ್ತಿದೆ. ಕರ್ನಾಟಕದ ಬಗ್ಗೆ ಇವರಿಗೆ ಬದ್ಧತೆ ಇದ್ದರೆ ಕರ್ನಾಟಕಕ್ಕೆ ಮೊದಲು ಕೇಂದ್ರದಿಂದ ನ್ಯಾಯ ಕೊಡಿಸಲಿ. ಅದನ್ನ ಬಿಟ್ಟು ಅವರು ಮಾಡೋ ಅನ್ಯಾಯವನ್ನ ಮುಚ್ಚಿಹಾಕಿ ಇವರು ಕೂಡಾ ಅನ್ಯಾಯದಲ್ಲಿ ಪಾಲಾಗೋದು ಬಿಡಲಿ ಎಂದು ಕಿಡಿಕಾರಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ದುರಂತ| ಮೂರಂತಸ್ತಿನ ಕಟ್ಟಡಕ್ಕೆ ಬೆಂಕಿ, ಇಬ್ಬರು ಬಲಿ
ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸುತ್ತೇನೆ ಎಂದು ಚುನಾವಣೆ ಸಮಯದಲ್ಲಿ ಹೇಳಿದ್ದರು. ಅದನ್ನ ಮೊದಲು ಕೊಡಿಸಲಿ. ಮೇಕೆದಾಟಿಗೆ ಕೇಂದ್ರ ಸರ್ಕಾರ ಇನ್ನೂ ಅನುಮತಿ ಕೊಟ್ಟಿಲ್ಲ. ಸುಪ್ರೀಂ ಕೋರ್ಟ್ ಕೂಡ ಮೇಕೆದಾಟಿಗೆ ವಿರೋಧ ಇಲ್ಲ ಎಂದು ಹೇಳಿದೆ. ದೇವೇಗೌಡರೇ ಆಗಲಿ ಯಾರೇ ಆಗಲಿ ಮೊದಲು ಅನುಮತಿ ಕೊಡಿಸಿ. ಚನ್ನಪಟ್ಟಣ ಎಲೆಕ್ಷನ್‌ನಲ್ಲಿ ಕೈಹಿಡಿದು ಸಹಿ ಹಾಕಿಸುತ್ತೇವೆ ಎಂದುಭಾಷಣ ಮಾಡಿದರು. ಅದಕ್ಕೆ ಮೊದಲು ಅನುಮತಿ ಕೊಡಿಸಲಿ. ನಮ್ಮ ರಾಜ್ಯಕ್ಕೆ ತೆರಿಗೆ ಪಾಲಿನಲ್ಲಿ ಅನ್ಯಾಯ ಆಗುತ್ತಿದೆ. ಅದನ್ನ ಸರಿ ಮಾಡಲಿ. ಆಮೇಲೆ ಉಳಿದಿದ್ದ ವಿಷಯ ಮಾತನಾಡಲು ಅವರಿಗೂ ನೈತಿಕತೆ ಇರುತ್ತದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ವಾಲ್ಮೀಕಿ ಹಗರಣ | ಸಿಬಿಐ ತನಿಖೆ ಚುರುಕು ಮೂವರು ಆರೋಪಿಗಳಿಗೆ ನೋಟಿಸ್
ಹಾಸನ: ನಾನು ಸಿದ್ದರಾಮಯ್ಯನವರ (Siddaramaiah) ಜೊತೆ ಬಂಡೆಯಾಗಿ ಇರ್ತೇನೆ. ಸಾಯೋವರೆಗೆ ಸಿದ್ದರಾಮಯ್ಯ ಜೊತೆಗೆ ಇರುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಹೇಳಿದರು.
ಹಾಸನದಲ್ಲಿ (Hassan) ನಡೆದ ಜನಕಲ್ಯಾಣ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಡಿಕೆಶಿ, ಇದು ಕೇವಲ ಜನಕಲ್ಯಾಣ ಸಮಾವೇಶ ಮಾತ್ರ ಅಲ್ಲ. ಇದು ಗ್ಯಾರಂಟಿಗಳ, ಗೆಲುವಿನ, ನಂಬಿಕೆಯ ಸಮಾವೇಶ. ಬಿಜೆಪಿಯ (BJP) ಕುತಂತ್ರಕ್ಕೆ ಜನರು ಈಗಾಗಲೇ ಉತ್ತರ ಕೊಟ್ಟಿದ್ದಾರೆ. ಮೂರು ಉಪ ಚುನಾವಣೆಯಲ್ಲಿ ಜನರು ಉತ್ತರ ಕೊಟ್ಟಿದ್ದಾರೆ. ನಾವು ಯಾವತ್ತೂ ಭಾವನೆ, ಧರ್ಮದ ಮೇಲೆ ರಾಜಕಾರಣ ಮಾಡಲ್ಲ. ಬದುಕಿನ ಮೇಲೆ ರಾಜಕಾರಣ ಮಾಡ್ತೀವಿ. ನಾವು ಮಾಡುತ್ತಿರುವ ಈ ಅಧಿಕಾರ ನಶ್ವರ, ಕಾಂಗ್ರೆಸ್ ಪಕ್ಷದ ಸಾಧನೆ, ನಮ್ಮ ಸಾಧನೆ ಎಂದಿಗೂ ಅಜರಾಮರ ಎಂದು ಕಾಂಗ್ರೆಸ್ ಪಕ್ಷದ ಸಾಧನೆಗಳನ್ನ ಬಣ್ಣಿಸಿದರು. ಇದನ್ನೂ ಓದಿ: ನೀವೆಲ್ಲ ನನ್ನ ಗರ್ವಭಂಗ ಮಾಡೋಕೆ ಬಿಡ್ತೀರಾ? – ಅಭಿಮಾನಿಗಳಿಗೆ ಸಿದ್ದರಾಮಯ್ಯ ಪ್ರಶ್ನೆ
ʻಕಮಲ ಕೆರೆಯಲ್ಲಿದ್ದರೆ ಚನ್ನ, ತೆನೆ ಹೊಲದಲ್ಲಿದ್ದರೆ ಚೆಂದ, ಈ ದಾನ, ಧರ್ಮ ಮಾಡುವ ʻಕೈʼ ಅಧಿಕಾರದಲ್ಲಿದ್ದರೆ ಚೆಂದ, ಕಾಂಗ್ರೆಸ್ ಅಧಿಕಾರದಲ್ಲಿ ಇರಬೇಕು. ಕಾಂಗ್ರೆಸ್‌ನಿಂದ ಮಾತ್ರ ಅಭಿವೃದ್ಧಿ ಸಾಧ್ಯ. ಏಕೆಂದರೆ ಇಂದಿರಾ ಗಾಂಧಿ ಅವರ ಕಾಲದಿಂದ ಕೊಟ್ಟ ಎಲ್ಲ ಕಾರ್ಯಕ್ರಮಗಳು ಶಾಸನಬದ್ಧವಾಗಿದೆ. ಮುಂದಿನ ಚುನಾವಣೆಯಲ್ಲಿ ಹಾಸನ ಜಿಲ್ಲೆಯ ಎಲ್ಲಾ ಕ್ಷೇತ್ರದಲ್ಲೂ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತೆ. ಕುಮಾರಸ್ವಾಮಿ, ದೇವೇಗೌಡರು ಚನ್ನಪಟ್ಟಣ ಚುನಾವಣೆ ಸಂದರ್ಭ ಕಣ್ಣೀರು ಹಾಕಿದ್ರಿ, ಈ ರಾಜ್ಯಕ್ಕೆ, ಈ ಜಿಲ್ಲೆಗೆ ನಿಮ್ಮ ಸಾಧನೆಗೆ ಸಾಕ್ಷಿ ಏನು ಹೇಳಿ ಎಂದು ಪ್ರಶ್ನೆ ಮಾಡಿದರು. ಇದನ್ನೂ ಓದಿ: ಮೇಕೆದಾಟು ಯೋಜನೆ ಅನುಷ್ಠಾನದಿಂದ ಬೆಂಗಳೂರು ನೀರಿನ ಬವಣೆಗೆ ಮುಕ್ತಿ: ಹೆಚ್.ಡಿ ದೇವೇಗೌಡ
ನಮ್ಮಲ್ಲಿದೆ ಒಗ್ಗಟ್ಟು, ಬಿಜೆಪಿ-ಜೆಡಿಎಸ್‌ನಲ್ಲಿ ಬಿಕ್ಕಟ್ಟು:
ತಾತ ಪ್ರಧಾನ ಮಂತ್ರಿ ಆಗಿದ್ರು, ತಂದೆ ಮುಖ್ಯಮಂತ್ರಿ ಆಗಿದ್ದರು, ಮಗನನ್ನ ಶಾಸಕನನ್ನಾಗಿ ಮಾಡೋಕೆ ನೋಡಿದ್ರು. ಆದ್ರೆ ನಿಮ್ಮ (ಕುಮಾರಸ್ವಾಮಿ) ಕ್ಷೇತ್ರ ಚನ್ನಪಟ್ಟಣದಲ್ಲೇ ಜನ ಒಪ್ಪಲಿಲ್ಲ. ಈ ರಾಜ್ಯದ ಜನರೂ ಒಪ್ಪಲ್ಲ. ಕುಮಾರಸ್ವಾಮಿ, ದೇವೇಗೌಡ ಈ ಸರ್ಕಾರವನ್ನ ಕಿತ್ತಾಕ್ತೀವಿ ಅಂದ್ರು. ದೇವೇಗೌಡರೇ ಇದೇನು ಹಾಸನದಲ್ಲಿ ಬೆಳೆಯುವ ಆಲೂಗಡ್ಡೆಯಲ್ಲ, ಕಡಲೇ ಕಾಯಿ ಗಿಡ ಅಲ್ಲ. 138 ಶಾಸಕರ ಜನ ಬೆಂಬಲದ ಸರ್ಕಾರ. ನಮ್ಮಲ್ಲಿದೆ ಒಗ್ಗಟ್ಟು, ಬಿಜೆಪಿ-ನಿಮ್ಮಲಿದೆ ಬಿಕ್ಕಟ್ಟು ಎಂದು ಲೇವಡಿ ಮಾಡಿದರು.
– ಬಿಜೆಪಿ ಆಡಳಿತ ರಾಜ್ಯಗಳಲ್ಲಿ 10 ಕೆಜಿ ಅಕ್ಕಿ ಕೊಡ್ತಿದ್ರೆ ರಾಜಕೀಯ ನಿವೃತ್ತಿ – ಜೆಡಿಎಸ್ ಪಕ್ಷವನ್ನು ಕಟ್ಟಿದ್ದೇ ನಾವು ಎಂದ ಸಿಎಂ
ಹಾಸನ: ಚನ್ನಪಟ್ಟಣದಲ್ಲಿ ದೇವೇಗೌಡರು (HD Devegowda) ಸಿದ್ದರಾಮಯ್ಯನ ಗರ್ವಭಂಗ ಮಾಡ್ತೀನಿ ಅಂದ್ರು. ಹಲ್ಲುಮುರಿ ಕಚ್ಚಿಕೊಂಡು ಕಾಂಗ್ರೆಸ್ ಪಕ್ಷವನ್ನ ಕಿತ್ತೊಗೆಯಿರಿ ಅಂತ ಹೇಳಿದ್ದರು. ನೀವೆಲ್ಲ ನನ್ನ ಗರ್ವಭಂಗ ಮಾಡೋಕೆ ಬಿಡ್ತೀರಾ? ಅಂತ ನೆರೆದಿದ್ದ ಸಾವಿರಾರು ಅಭಿಮಾನಿಗಳಿಗೆ ಸಿಎಂ ಸಿದ್ದರಾಮಯ್ಯ (Siddaramaiah) ಪ್ರಶ್ನೆ ಮಾಡಿದರು.
ಹಾಸನದ ಎಸ್.ಎಂ ಕೃಷ್ಣ ಬಡಾವಣೆಯ ಮೈದಾನದಲ್ಲಿ ಕಾಂಗ್ರೆಸ್ ಪಕ್ಷ (Congress Party) ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ನಡೆದ ಜನಕಲ್ಯಾಣ ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡಿದರು. ನನ್ನ ರಾಜಕೀಯ ಜೀವನದಲ್ಲಿ ಇಷ್ಟು ದೊಡ್ಡ ಸಮಾವೇಶ ಆಗಿಲ್ಲ. ಹಾಸನದಲ್ಲಿ ಇಷ್ಟೊಂದು ದೊಡ್ಡ ಸಮಾವೇಶ ನಡೆದಿರಲಿಲ್ಲ. ಇಂತಹ ಸಮಾವೇಶವನ್ನ ನಾನು ಮರೆಯಲು ಸಾಧ್ಯವಿಲ್ಲ. ಇದು ಅವಿಸ್ಮರಣೀಯ. ಹಾಸನದಲ್ಲಿ (Hassan) ಸಮಾವೇಶ ಮಾಡಲು ಈ ಭಾಗದ ಎಲ್ಲಾ ಸಚಿವರು ಸಲಹೆ ಕೊಟ್ಟರು. ಸ್ವಾಭಿಮಾನಿಗಳ ಒಕ್ಕೂಟ, ಪಕ್ಷದ ಕಾರ್ಯಕರ್ತರು ಸೇರಿ ಮಾಡುತ್ತಿರುವ ಸಮಾವೇಶ ಇದು ಎಂದರಲ್ಲದೇ ʻನಮಗೆ ಮತದಾರರೇ ದೇವರುʼ ಎಂದು ನುಡಿದರು.
ದೇವೇಗೌಡರು ಯಾವಾಗಲೂ ನಮ್ಮದು ಜಾತ್ಯಾತೀತ ಪಕ್ಷ ಅಂತಿದ್ರು. 2019ರ ಚುನಾವಣೆಯಲ್ಲಿ ಬಿಜೆಪಿ ಈ ದೇಶದಲ್ಲಿ ಮತ್ತೆ ಅಧಿಕಾರಕ್ಕೆ ಬರಲ್ಲ. ಬಿಜೆಪಿ ಅಧಿಕಾರಕ್ಕೆ ಬಂದ್ರೆ, ಮೋದಿ ಪ್ರಧಾನಿ ಆದ್ರೆ ದೇಶ ಬಿಡ್ತೀನಿ ಅಂದ್ರು. ಮಿಸ್ಟರ್ ದೇವೇಗೌಡರೇ ದೇಶ ಬಿಡಬೇಡಿ. ಪಾಪ ನನಗಿಂತ 15 ವರ್ಷ ದೊಡ್ಡವರು, ಅವರ ವಯಸ್ಸಿಗೆ ತಕ್ಕಂತೆ ಮಾತನಾಡಬೇಕು. ಚನ್ನಪಟ್ಟಣದಲ್ಲಿ ಸಿದ್ದರಾಮಯ್ಯನ ಗರ್ವಭಂಗ ಮಾಡ್ತೀನಿ ಅಂದ್ರು. ಹಲ್ಲುಮುರಿ ಕಚ್ಚಿಕೊಂಡು ಕಾಂಗ್ರೆಸ್ ಪಕ್ಷವನ್ನ ಕಿತ್ತೊಗೆಯಿರಿ ಅಂದ್ರು. ನೀವೆಲ್ಲ ನನ್ನ ಗರ್ವಭಂಗ ಮಾಡೋಕೆ ಬಿಡ್ತೀರಾ? ಅಂತ ಅಭಿಮಾನಿಗಳನ್ನ ಕೇಳಿದ್ರು.
ಚನ್ನಪಟ್ಟಣದಲ್ಲಿ ಮಹಾನಾಯಕನ ಮೊಮ್ಮಗನನ್ನ, ಸಂಡೂರಿನಲ್ಲಿ ಮಾಜಿ ಸಿಎಂ ಬೊಮ್ಮಾಯಿ ಮಗನನ್ನ ಸೋಲಿಸಿದ್ದೇವೆ. ಬಿಜೆಪಿ, ಜೆಡಿಎಸ್ ಸ್ವಂತ ಶಕ್ತಿ ಮೇಲೆ ಯಾವತ್ತೂ ಅಧಿಕಾರಕ್ಕೆ ಬಂದಿರಲಿಲ್ಲ. ನಮ್ಮಿಂದ 2 ಬಾರಿ ಕುಮಾರಸ್ವಾಮಿ ಸಿಎಂ ಆಗಿದ್ರು. ಆದ್ರೆ ಹಿಂಬಾಗಿಲ ರಾಜಕಾರಣದ ಮೂಲಕ ಬಿಜೆಪಿ ಅಧಿಕಾರಕ್ಕೆ ಏರಿತು ಎಂದು ಕಿಡಿ ಕಾರಿದರು.
ಬಿಜೆಪಿ 10 ಕೆಜಿ ಅಕ್ಕಿ ಕೊಡ್ತಿದ್ರೆ ರಾಜಕೀಯ ನಿವೃತ್ತಿ:
ಬಡವರಿಗೆ 10 ಕೆಜಿ ಅಕ್ಕಿ ಕೊಡುತ್ತಿರುವುದು ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಮಾತ್ರ. ಬಿಜೆಪಿ ಸರ್ಕಾರ ಇರುವ ರಾಜ್ಯಗಳಲ್ಲಿ 10 ಕೆಜಿ ಅಕ್ಕಿ ಕೊಡುತ್ತಿದ್ದರೆ ರಾಜಕೀಯ ನಿವೃತ್ತಿ ತಗೋತೀನಿ ಎಂದರಲ್ಲದೇ ಕುಮಾರಸ್ವಾಮಿ ಕಣ್ಣೀರಿನ ವಿಚಾರ ಕುರಿತು ವ್ಯಂಗ್ಯವಾಡಿದರು. ಕುಮಾರಸ್ವಾಮಿ ನೀವು ಕಣ್ಣೀರು ಹಾಕುತ್ತಿದ್ದೀರಲ್ಲ, ರೈತರಿಗಾಗಿ ನೀವು ಕಣ್ಣೀರು ಹಾಕಬಾರದಾ? ನಾವು ರೈತರಿಗಾಗಿ ಶೇ.4 ರಿಂದ ಶೂನ್ಯ ಬಡ್ಡಿದರಲ್ಲಿ ಸಾಲ ನೀಡುವ ಯೋಜನೆ ಕಲ್ಪಿಸಿದ್ದೇವೆ. ನಬಾರ್ಡ್‌ನಿಂದ ನಮಗೆ 800 ಕೋಟಿ ರೂ. ಅನುದಾನ ಬರಬೇಕು. ಇದಕ್ಕಾಗಿ ನಾನು ಪ್ರಧಾನಿ ಮೋದಿ ಅವರನ್ನ ಭೇಟಿಯಾಗಿ, ಮನವಿ ಮಾಡಿದೆ. ಆದ್ರೆ ದೇವೇಗೌಡರಾಗಲಿ, ಕುಮಾರಸ್ವಾಮಿ ಆಗಲಿ ಈ ಬಗ್ಗೆ ಚಕಾರ ಎತ್ತಲಿಲ್ಲವೆಂದುನುಡಿದರು.
ಒಕ್ಕಲಿಗ ನಾಯಕರನ್ನ ತುಳಿದು ಹಾಕಿದ್ರು:
ದೊಡ್ಡಗೌಡರ ವಿರುದ್ಧ ವಾಗ್ದಾಳಿ ಮುಂದುವರಿಸಿದ ಸಿದ್ದರಾಮಯ್ಯ, ನೀವು ಯಾವ ನಾಯಕರನ್ನೂ ಬೆಳೆಸಿಲ್ಲ. ಒಕ್ಕಲಿಗ ನಾಯಕರನ್ನ ತುಳಿದುಹಾಕಿದರು. ಬಚ್ಚೇಗೌಡ, ಬಿ.ಎಲ್. ಶಂಕರ್, ಕೃಷ್ಣಪ್ಪ ಸೇರಿದಂತೆ ಯಾರನ್ನೂ ಬೆಳೆಸಿಲ್ಲ. 1994ರಲ್ಲಿ ನಾನು-ಜಾಲಪ್ಪ ಇಲ್ಲದಿದ್ದರೆ ದೇವೇಗೌಡರು ಸಿಎಂ ಆಗುತ್ತಿರಲ್ಲಿಲ್ಲ. ಜಾತ್ಯಾತೀತ ಜನಾತದಳ ನಾನು ದೇವೇವೇಗೌಡರು, ಜಾಲಪ್ಪ, ಬಿ.ಆರ್ ಪಾಟೀಲ್ ಎಲ್ಲರೂ ಸೇರಿ ಕಟ್ಟಿದ ಪಕ್ಷ. ಆದ್ರೆ ಅಹಿಂದ ಸಮಾವೇಶ ಮಾಡಿದ್ದಕ್ಕೆ ನನ್ನನು ಪಕ್ಷದಿಂದ ಉಚ್ಚಾಟನೆ ಮಾಡಿದ್ರು. ನಾನು ಪಕ್ಷವನ್ನು ಬಿಡಲಿಲ್ಲ. ಜಾತ್ಯಾತೀತ ಜನತಾದಳ ಕಟ್ಟಿದ್ದು ನಾವೇ ಎಂದು ಕೂಗಿ ಕೂಗಿ ಹೇಳಿದರು.
ಮುಂದಿನ ಚುನಾವಣೆವರೆಗೂ ʻಗ್ಯಾರಂಟಿʼ:
ಕೇಂದ್ರದಿಂದ ರಾಜ್ಯಕ್ಕೆ ಬರುವ ಯೋಜನೆಗಳಲ್ಲಿ ಅನ್ಯಾಯ ಮಾಡುತ್ತಿದ್ದಾರೆ. ನಮಗೆ ಬರಬೇಕಾದ ಹಣ ಬಿಡುಗಡೆ ಮಾಡುತ್ತಿಲ್ಲ, ನಾವು ಗ್ಯಾರಂಟಿಗಾಗಿ ಹಣ ಖರ್ಚು ಮಾಡುತ್ತೇವೆಂದು ಹಣ ಬಿಡುಗಡೆ ಮಾಡುತ್ತಿಲ್ಲ. ಆದ್ರೂ ನಾವು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ. ಮುಂದಿನ ಚುನಾವಣೆವರೆಗೂ ಗ್ಯಾರಂಟಿ ಮುಂದುವರಿಸುತ್ತೇವೆ. ಮುಂದಿನ ಚುನಾವಣೆಯಲ್ಲೂ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಘೋಷಿಸಿದರು.
ದ್ವೇಷರಾಜಕಾರಣ ನಾವು ಮಾಡಲ್ಲ:
ದ್ವೇಷ ರಾಜಕಾರಣ ನಾವು ಮಾಡುವುದಿಲ್ಲ. ದೇವೇಗೌಡರು ದ್ವೇಷ ರಾಜಕಾರಣ ಮಾಡುವುದು ಬಿಡಲಿ. ಅವರು ಒಳ್ಳೆಯ ರಾಜಕಾರಣ ಮಾಡಲಿ ಎಂದು ಮನವಿ ಮಾಡಿದ ಸಿಎಂ, ಬಿಜೆಪಿ-ಜೆಡಿಎಸ್ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ನೀವು ದಾರಿ ತಪ್ಪಬೇಡಿ ಎಂದು ಜನರಿಗೆ ಮನವಿ ಮಾಡಿದರು.