Tag: HD Revanna

  • ರೇವಣ್ಣ ಸೂಚನೆ ಮೇರೆಗೆ ಸಂತ್ರಸ್ತೆ ಕಿಡ್ನ್ಯಾಪ್‌ – ರೇವಣ್ಣ, ಭವಾನಿ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ

    ರೇವಣ್ಣ ಸೂಚನೆ ಮೇರೆಗೆ ಸಂತ್ರಸ್ತೆ ಕಿಡ್ನ್ಯಾಪ್‌ – ರೇವಣ್ಣ, ಭವಾನಿ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ

    ಬೆಂಗಳೂರು: ಕೆ.ಆರ್‌ ನಗರದ ಮಹಿಳೆಯ ಅಪಹರಣ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದ ಅಧಿಕಾರಿಗಳು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಮಾಜಿ ಸಚಿವ ಹೆಚ್‌.ಡಿ ರೇವಣ್ಣ (HD Revanna) ಅವರೊಂದಿಗೆ ಪತ್ನಿ ಭವಾನಿ ರೇವಣ್ಣ (Bhavani Revanna) ಅವರನ್ನೂ ಆರೋಪಿ ಎಂದು ಆರೋಪ ಪಟ್ಟಿಯಲ್ಲಿ ಹೆಸರಿಸಲಾಗಿದೆ.

    ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಸೇರಿ 7 ಆರೋಪಿಗಳ ವಿರುದ್ಧ 42ನೇ ಎಸಿಎಂಎಂ ನ್ಯಾಯಾಲಯಕ್ಕೆ (ACMM Court) ಎಸ್‌ಐಟಿ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದೆ. ಅಲ್ಲದೇ ಭವಾನಿ ರೇವಣ್ಣರನ್ನ 8ನೇ ಆರೋಪಿಯಾಗಿ ಹೆಸರಿಸಲಾಗಿದೆ. ಇದನ್ನೂ ಓದಿ: Paris Olympics | ಭಾರತಕ್ಕೆ ಮೂರನೇ ಪದಕ- ಕಂಚು ಗೆದ್ದ ಸ್ವಪ್ನಿಲ್

    ರೇವಣ್ಣ ವಿರುದ್ಧ ಎಫ್‌ಐಆರ್‌ ರದ್ದು ಕೋರಿರುವ ಹಾಗೂ ರೇವಣ್ಣ ಜಾಮೀನು ರದ್ದಿಗೆ ಕೋರಿದ್ದ ಎರಡೂ ಅರ್ಜಿಗಳನ್ನು ಏಕಕಾಲಕಕ್ಕೆ ಹೈಕೋರ್ಟ್‌ನ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಎಸ್‌ಐಟಿ ಪರ ಪ್ರೊ.ರವಿವರ್ಮಕುಮಾರ್ ವಾದ ಮಂಡಿಸಿದರು. ಸದ್ಯ ಜಾಮೀನು ರದ್ದು ಕೋರಿರುವ ಸಂಬಂಧ ವಾದ-ಪ್ರತಿವಾದ ಮುಕ್ತಾಯಗೊಂಡಿದ್ದು, ತೀರ್ಪನ್ನು ಕಾಯ್ದಿರಿಸಿದೆ. ಎಫ್‌ಐಆರ್‌ ರದ್ದು ಕೋರಿರುವ ಅರ್ಜಿ ವಿಚಾರಣೆಯನ್ನು ಆಗಸ್ಟ್‌ 8ಕ್ಕೆ ಕೋರ್ಟ್‌ ಮುಂದೂಡಿದೆ. ಇದನ್ನೂ ಓದಿ: ಎರಡು ಭಾಗಗಳಲ್ಲಿ ಬರಲಿದೆ ‘ಹಾಯ್ ನಾನ್ನಾ’ ಡೈರೆಕ್ಟರ್‌ ಜೊತೆಗಿನ ಜ್ಯೂ.ಎನ್‌ಟಿಆರ್‌ ಹೊಸ ಸಿನಿಮಾ

    ದೋಷಾರೋಪ ಪಟ್ಟಿಯಲ್ಲಿರುವ ಅಂಶಗಳೇನು?
    ಎಸ್‌ಐಟಿ ಅಧಿಕಾರಿಗಳ ತಂಡ ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಹಲವು ಅಂಶಗಳನ್ನು ಉಲ್ಲೇಖಿಸಿದೆ. ಪ್ರಕರಣದ ಆರೋಪಿಗಳಾದ ರೇವಣ್ಣ ಮತ್ತು ಭವಾನಿ ಅಣತಿಯ ಮೇರೆಗೆ ಸಂತ್ರಸ್ತೆಯ ಅಪಹರಣ ನಡೆದಿದೆ. ರೇವಣ್ಣ ಏಪ್ರಿಲ್ 23ರಂದು ಸಂತ್ರಸ್ತೆಯನ್ನು ಹೊಳೆನರಸೀಪುರಕ್ಕೆ ಕರೆದು ಬೆದರಿಕೆ ಹಾಕಿದ್ದಾರೆ. ಯಾವುದೇ ಕಾರಣಕ್ಕೂ ಪೊಲೀಸರ ಕೈಗೆ ಸಿಗಬಾರದು ಅಂತ ಬೆದರಿಕೆ ಹಾಕಿದ್ದಾರೆ. ಅದಾದ ಬಳಿಕ ಏ.26ರಂದೇ ಸತೀಶ್ ಬಾಬು ಅವರ ಮೂಲಕ ಸಂತ್ರಸ್ತೆಯನ್ನ ಅಪಹರಣ ಮಾಡಿಸಿದ್ದಾರೆ ಎಸ್‌ಐಟಿ ಚಾರ್ಚ್‌ಶೀಟ್‌ನಲ್ಲಿ ಉಲ್ಲೇಖಿಸಿದೆ. ಇದನ್ನೂ ಓದಿ: ʻ9 ಮಕ್ಕಳು ನೀರಲ್ಲಿ ಕೊಚ್ಚಿ ಹೋದ್ರು, ಮನೆ ನೆಲಸಮ ಆಗೋಯ್ತು, ದೊಡ್ಡ ಮನಸ್ಸು ಮಾಡಿ ಸಹಾಯ ಮಾಡಿ ಸಾಹೇಬ್ರೆʼ

    ಮಹಿಳೆಯನ್ನ ಅಪಹರಿಸಿ 7ನೇ ಆರೋಪಿ ಮನೆಯಲ್ಲಿ ಇರಿಸಲಾಗಿತ್ತು. ಆಕೆಗೂ ಆರೋಪಿಗೂ ಯಾವುದೇ ಸಂಬಂಧ ಇರಲಿಲ್ಲ. ಪೊಲೀಸರು ಆ ಸ್ಥಳದಲ್ಲಿ ಮಹಜರ್‌ ನಡೆಸಿದಾಗ, ಆಕೆಯ ಕೂದಲು ದೊರೆತಿದೆ. 7ನೇ ಆರೋಪಿ ಈ ಹಿಂದೆ ರೇವಣ್ಣ ಅವರ ವಿಶೇಷ ಕರ್ತವ್ಯ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು. ಭವಾನಿ ಅವರು ಕೀರ್ತಿ ಮತ್ತು ಮನು ಜೊತೆಯಲ್ಲಿ ಮಾತನಾಡಿದ್ದರು. ಆರೋಪಿಗಳ ಜೊತೆ ಭವಾನಿ ಮಾತನಾಡಿರೋದಕ್ಕೆ 22 ಆಡಿಯೋ ಕ್ಲಿಪ್ಪಿಂಗ್‌ಗಳು ಸಿಕ್ಕಿದೆ. ಫೋನ್‌ನಲ್ಲಿಯೇ ಭವಾನಿ ಅವರು ನಿರಂತರವಾಗಿ ಬೆದರಿಕೆ ಹಾಕಿದ್ದಾರೆ ಎಂದು ದೋಷಾರೋಪ ಪಟ್ಟಿಯಲ್ಲಿ ಅಧಿಕಾರಿಗಳು ಉಲ್ಲೇಖಿಸಿದ್ದಾರೆ.

  • ಇದೇ ಮೊದಲ ಬಾರಿಗೆ ಪ್ರಜ್ವಲ್‌ ನೋಡಲು ಪರಪ್ಪನ ಅಗ್ರಹಾರಕ್ಕೆ ಬಂದ ರೇವಣ್ಣ

    ಇದೇ ಮೊದಲ ಬಾರಿಗೆ ಪ್ರಜ್ವಲ್‌ ನೋಡಲು ಪರಪ್ಪನ ಅಗ್ರಹಾರಕ್ಕೆ ಬಂದ ರೇವಣ್ಣ

    ಬೆಂಗಳೂರು: ಪ್ರಜ್ವಲ್ ರೇವಣ್ಣ (Prajwal Revanna) ಅವರನ್ನು ಭೇಟಿ ಮಾಡಲು ಮಾಜಿ ಸಚಿವ ಹೆಚ್‌ಡಿ ರೇವಣ್ಣ (HD Revanna) ಇದೇ ಮೊದಲ ಬಾರಿಗೆ ಪರಪ್ಪನ ಅಗ್ರಹಾರಕ್ಕೆ (Parappana Agrahara) ಆಗಮಿಸಿದ್ದಾರೆ.

    ಪೆನ್ ಡ್ರೈವ್ ಪ್ರಕರಣದಲ್ಲಿ ಜೈಲು ಸೇರಿರುವ ಪ್ರಜ್ವಲ್ ರೇವಣ್ಣ ಈಗ ಜೈಲಿನ ಕ್ವಾರಂಟೈನ್ ಕೇಂದ್ರದಲ್ಲಿ ಇದ್ದಾರೆ. ಸೋಮವಾರ ಭವಾನಿ ರೇವಣ್ಣ (Bhavani Revanna) ಮಗನನ್ನು ನೋಡಲು ಬಂದಿದ್ದರು. ಈಗ ಮಗನನ್ನು ನೋಡಲು ಹೆಚ್‌ಡಿ ರೇವಣ್ಣ ಆಗಮಿಸಿದ್ದಾರೆ.

     

    ಮಂಗಳವಾರ ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ್ದ ರೇವಣ್ಣ, ನಾನು ಸದ್ಯಕ್ಕೆ ಪ್ರಜ್ವಲ್ (Prajwal Revanna) ಭೇಟಿಗೆ ಹೋಗಲ್ಲ. ನಾನು ಭೇಟಿಗೆ ಹೋದರೆ ರೇವಣ್ಣ ಏನೋ ಹೇಳಿಕೆ ಕೊಟ್ಟ ಅಂತಾ ಹೇಳುತ್ತಾರೆ. ಹೀಗಾಗಿ ನಾನು ಹೋಗಲ್ಲ ಎಂದಿದ್ದರು. ಇದನ್ನೂ ಓದಿ: ಇನ್ಮುಂದೆ ಹಳದಿ ಹಕ್ಕಿಯ ಚಿಲಿಪಿಲಿ ಕೇಳಲ್ಲ – ಬಾಗಿಲು ಹಾಕಿತು ಕೂ

    ನಮಗೆ ಸದ್ಯಕ್ಕೆ ದೇವರು ಬಿಟ್ಟರೆ ಇನ್ಯಾರು ಎಂದು ಮಾತು ಆರಂಭಿಸಿದ್ದ ಅವರು, ಸೋಮವಾರ ನನ್ನ ಪತ್ನಿ ಹೋಗಿದ್ದಾರೆ. ಮಗ ಅಲ್ವ ಹೀಗಾಗಿ ಹೋಗಿದ್ದಾರೆ ಅಷ್ಟೇ. ತಾಯಿ-ಮಗ ಏನು ಮಾತಾಡಿದ್ದಾರೆ ನನಗೆ ಗೊತ್ತಿಲ್ಲ, ಕೇಳಲೂ ಹೋಗಿಲ್ಲ ಎಂದು ಪ್ರತಿಕ್ರಿಯಿಸಿದ್ದರು.

    ಎಂತೆಂಥವರಿಗೋ ಕಷ್ಟ ಬರುತ್ತದೆ, ಅದ್ರಲ್ಲಿ ನಮ್ಮದು ಏನಿದೆ. ದೇವೇಗೌಡರು (HD Devegowda) ಒಂದು ತಿಂಗಳಿನಿಂದ ಸಹಜವಾಗಿ ನೋವಿನಲ್ಲೇ ಇದ್ದಾರೆ. ಎಲ್ಲದಕ್ಕೂ ಕಾಲದಲ್ಲಿ ಉತ್ತರ ಸಿಗುತ್ತದೆ. ನಾನು ಯಾವತ್ತೂ ಯಾವುದಕ್ಕೂ ಎದೆಗುಂದುವುದಿಲ್ಲ. 30 ವರ್ಷದಿಂದ ರಾಜಕಾರಣ ಮಾಡಿದ್ದೇನೆ. ಇಂಥವನೆಲ್ಲ ಬಹಳ ನೋಡಿದ್ದೇನೆ ಎಂದು ಹೇಳಿದ್ದರು.

     

  • ನಾನು ಸದ್ಯಕ್ಕೆ ಪ್ರಜ್ವಲ್ ಭೇಟಿಗೆ ಹೋಗಲ್ಲ: ಹೆಚ್.ಡಿ ರೇವಣ್ಣ

    ನಾನು ಸದ್ಯಕ್ಕೆ ಪ್ರಜ್ವಲ್ ಭೇಟಿಗೆ ಹೋಗಲ್ಲ: ಹೆಚ್.ಡಿ ರೇವಣ್ಣ

    – ಸೂರಜ್ ಮಹಾನ್ ದೈವ ಭಕ್ತ

    ಮೈಸೂರು: ನಾನು ಸದ್ಯಕ್ಕೆ ಪ್ರಜ್ವಲ್ (Prajwal Revanna) ಭೇಟಿಗೆ ಹೋಗಲ್ಲ. ನಾನು ಭೇಟಿಗೆ ಹೋದರೆ ರೇವಣ್ಣ ಏನೋ ಹೇಳಿಕೋಟ್ಟ ಅಂತಾ ಹೇಳುತ್ತಾರೆ. ಹೀಗಾಗಿ ನಾನು ಹೋಗಲ್ಲ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ (HD Revanna) ಹೇಳಿದ್ದಾರೆ.

    ಮೈಸೂರಿನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, ನಮಗೆ ಸದ್ಯಕ್ಕೆ ದೇವರು ಬಿಟ್ಟರೆ ಇನ್ಯಾರು ಎಂದು ಮಾತು ಆರಂಭಿಸಿದ ರೇವಣ್ಣ, ಸೋಮವಾರ ನನ್ನ ಪತ್ನಿ ಹೋಗಿದ್ದಾರೆ, ಮಗ ಅಲ್ವ ಹೀಗಾಗಿ ಹೋಗಿದ್ದಾರೆ ಅಷ್ಟೇ. ತಾಯಿ-ಮಗ ಏನು ಮಾತಾಡಿದ್ದಾರೆ ನನಗೆ ಗೊತ್ತಿಲ್ಲ, ಕೇಳಲೂ ಹೋಗಿಲ್ಲ ಎಂದರು.

    ಸೂರಜ್ ರೇವಣ್ಣ (Suraj Revanna) ಮಹಾನ್ ದೈವ ಭಕ್ತ. ಅವನು ಬಹಳ ಬೇಗ ಇದರಿಂದ ಹೊರಬರುತ್ತಾನೆ ಅನ್ನೋ ನಂಬಿಕೆ ಇದೆ. ಉಳಿದ ಯಾವ ವಿಚಾರಗಳ ಬಗ್ಗೆಯೂ ನಾನು ಮಾತನಾಡಲ್ಲ. ಎಲ್ಲವೂ ನ್ಯಾಯಾಲಯದ ಮುಂದೆ ಇವೆ. ಎಲ್ಲವೂ ಮುಗಿಯಲಿ, ಆಮೇಲೆ ಎಲ್ಲವನ್ನೂ ಎಳೆ ಎಳೆಯಾಗಿ ಬಿಚ್ಚಿಡುತ್ತೇನೆ ಎಂದು ರೇವಣ್ಣ ತಿಳಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯರನ್ನು ಸಿಎಂ ಮಾಡಿದ್ದು ಶಾಸಕರು: ನರೇಂದ್ರಸ್ವಾಮಿ

    ಎಂಥೆಂತವರಿಗೋ ಕಷ್ಟ ಬರುತ್ತದೆ, ಅದ್ರಲ್ಲಿ ನಮ್ಮದು ಏನಿದೆ. ದೇವೇಗೌಡರು (HD Devegowda) ಒಂದು ತಿಂಗಳಿನಿಂದ ಸಹಜವಾಗಿ ನೋವಿನಲ್ಲೇ ಇದ್ದಾರೆ. ಎಲ್ಲದಕ್ಕೂ ಕಾಲದಲ್ಲಿ ಉತ್ತರ ಸಿಗುತ್ತದೆ. ನಾನು ಯಾವತ್ತೂ ಯಾವುದಕ್ಕೂ ಎದೆಗುಂದುವುದಿಲ್ಲ. 30 ವರ್ಷದಿಂದ ರಾಜಕಾರಣ ಮಾಡಿದ್ದೇನೆ. ಇಂಥವನೆಲ್ಲ ಬಹಳ ನೋಡಿದ್ದೇನೆ ಎಂದರು.

  • ಮಂಡ್ಯದಲ್ಲಿ ಜೆಡಿಎಸ್ ಫ್ಲೆಕ್ಸ್‌ಗಳಿಂದ ಹೆಚ್.ಡಿ ರೇವಣ್ಣ ಕಿಕ್ ಔಟ್!

    ಮಂಡ್ಯದಲ್ಲಿ ಜೆಡಿಎಸ್ ಫ್ಲೆಕ್ಸ್‌ಗಳಿಂದ ಹೆಚ್.ಡಿ ರೇವಣ್ಣ ಕಿಕ್ ಔಟ್!

    ಮಂಡ್ಯ: ಜೆಡಿಎಸ್ ಫ್ಲೆಕ್ಸ್ ಗಳಿಂದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ (HD  DeveGowda)) ಹಿರಿಯ ಮಗ ಹೆಚ್.ಡಿ ರೇವಣ್ಣ ಅವರನ್ನು ಕಿಕ್ ಔಟ್ ಮಾಡಲಾಗಿದೆ.

    ಹೌದು. ಕುಮಾರಸ್ವಾಮಿ (hD Kumaraswamy) ಕೇಂದ್ರ ಸಚಿವರಾದ ಬಳಿಕ ಮಂಡ್ಯ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಜೆಡಿಎಸ್‍ನಿಂದ ಬೃಹತ್ ಫ್ಲೆಕ್ಸ್ ಗಳನ್ನು ಅಳವಡಿಸಲಾಗಿದೆ. ಆದರೆ ಈ ಫ್ಲೆಕ್ಸ್ ಗಳಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಫೋಟೋವೇ ಇಲ್ಲ. ಈ ಮೂಲಕ ಮುಜುಗರದಿಂದ ಪಾರಾಗಲು ದಳಪತಿಗಳು ಕ್ರಮ ಕೈಗೊಂಡ್ರಾ ಎಂಬ ಪ್ರಶ್ನೆ ಎದ್ದಿದೆ.

    ಫ್ಲೆಕ್ಸ್ ಗಳಲ್ಲಿ ಜೆಡಿಎಸ್ ಮುಖಂಡರ ಜೊತೆಗೆ ಯಡಿಯೂರಪ್ಪ, ವಿಜಯೇಂದ್ರ, ಆರ್.ಅಶೋಕ್ ಸೇರಿದಂತೆ ಹಲವು ಬಿಜೆಪಿ ನಾಯಕರ ಫೋಟೋಗಳನ್ನು ಬಳಸಲಾಗಿದೆ. ಜೊತೆಗೆ ಮಾಜಿ ಸಂಸದೆ ಸುಮಲತಾ, ಮಾಜಿ ಸಚಿವ ಹೆಚ್.ವಿಶ್ವನಾಥ್ ಫೋಟೋಗೂ ಪ್ಲೆಕ್ಸ್ ನಲ್ಲಿ ಸ್ಥಾನ ಕಲ್ಪಿಸಲಾಗಿದೆ. ಆದರೆ ರೇವಣ್ಣ (HD Revanna) ಫೋಟೋವನ್ನು ಮಾತ್ರ ಮಂಡ್ಯ ಜೆಡಿಎಸ್ ನಾಯಕರು ಕೈಬಿಟ್ಟಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.

    ಪಕ್ಷದಿಂದ ಉಚ್ಛಾಟನೆ ಮಾಡದಿದ್ರೂ ನಾಯಕರು ಅಂತರ ಕಾಯ್ದುಕೊಂಡಿರುವುದನ್ನು ಇಲ್ಲಿ ಗಮನಿಸಬಹುದಾಗಿದೆ. ರೇವಣ್ಣ & ಫ್ಯಾಮಿಲಿ ಸಾಲು ಸಾಲು ಆರೋಪಗಳನ್ನು ಎದುರಿಸುತ್ತಿದೆ. ಕಿಡ್ನಾಪ್ ಕೇಸ್ ನಲ್ಲಿ ರೇವಣ್ಣ ಜೈಲಿಗೆ ಹೋಗಿ ಬಂದರೆ, ಪತ್ನಿ ಭವಾನಿ ರೇವಣ್ಣ ಜಾಮೀನು ಪಡೆದಿದ್ದಾರೆ. ಇನ್ನೊಂದೆಡೆ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಜೈಲು ಸೇರಿದ್ದಾರೆ, ಮತ್ತೊಂದೆಡೆ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಡಾ. ಸೂರಜ್ ರೇವಣ್ಣ ಸಿಐಡಿ ಕಸ್ಟಡಿಯಲ್ಲಿದ್ದಾರೆ. ಇದರಿಂದ ದೇವೇಗೌಡರ ಕುಟುಂಬದ ಜೊತೆಗೆ ಪಕ್ಷಕ್ಕೂ ಡ್ಯಾಮೇಜ್ ಆಗಿದೆ.

    ಈ ಡ್ಯಾಮೆಜ್ ಕಂಟ್ರೋಲ್ ಗೆ ರೇವಣ್ಣರಿಂದ ದಳಪತಿಗಳು ಅಂತರ ಕಾಯ್ದುಕೊಂಡಿದ್ದಾರೆ. ಈ ಹಿಂದೆ ಪಕ್ಷದ ಪ್ರತೀ ಫ್ಲೆಕ್ಸ್ ಗಳಲ್ಲೂ ರೇವಣ್ಣ ಫೋಟೋ ಕಡ್ಡಾಯವಾಗಿ ಇರುತ್ತಿತ್ತು. ರೇವಣ್ಣ ಜೊತೆಗೆ ಪ್ರಜ್ವಲ್, ಸೂರಜ್ ಫೋಟೋ ಕೂಡ ಬಳಸಲಾಗುತ್ತಿತ್ತು. ಒಟ್ಟಿನಲ್ಲಿ ಮಂಡ್ಯದಲ್ಲಿ ತಮ್ಮದೇ ಪ್ರಭಾವ ಹೊಂದಿದ್ದ ರೇವಣ್ಣ ಕುಟುಂಬವನ್ನು ಇದೀಗ ದಳಪತಿಗಳು ದೂರ ಇಟ್ಟಿರುವುದು ಫ್ಲೆಕ್ಸ್ ವಿಚಾರದಲ್ಲಿ ಎದ್ದು ಕಾಣುತ್ತಿದೆ.

  • ರೇವಣ್ಣ ಕುಟುಂಬಕ್ಕೆ ಕಾನೂನು ಸಂಕಷ್ಟ – ಯಾರ ವಿರುದ್ಧ ಏನೇನು ಪ್ರಕರಣ?

    ರೇವಣ್ಣ ಕುಟುಂಬಕ್ಕೆ ಕಾನೂನು ಸಂಕಷ್ಟ – ಯಾರ ವಿರುದ್ಧ ಏನೇನು ಪ್ರಕರಣ?

    ಬೆಂಗಳೂರು: ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಇಡೀ ಕುಟುಂಬ (HD Revanna family) ಈಗ ಕಾನೂನು ಕಟ್ಟಳೆಯಲ್ಲಿ ಸಿಲುಕಿದೆ.

    ಕೆಲ ದಿನಗಳ ಹಿಂದೆಯಷ್ಟೇ ಪ್ರಜ್ವಲ್ ರೇವಣ್ಣ (Prajwal Revanna) ಅತ್ಯಾಚಾರ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ್ದಾರೆ ಎಂಬ ಪ್ರಕರಣದಲ್ಲಿ ಹೆಚ್.ಡಿ ರೇವಣ್ಣ ಬಂಧನಕ್ಕೆ ಒಳಗಾಗಿದ್ದರು. ಆ ಬಳಿಕ ಪ್ರಜ್ವಲ್ ರೇವಣ್ಣ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಹಾಗೂ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿದ್ದರು. ಈ ಬೆನ್ನಲ್ಲೇ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ (Bhavani Revanna) ಅವರಿಗೂ ಎಸ್‌ಐಟಿ ನೋಟಿಸ್ ಕೊಟ್ಟು ಬಂಧನಕ್ಕೆ ಮುಂದಾಗಿತ್ತು. ಅಷ್ಟರಲ್ಲಿ ಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಹೆಚ್.ಡಿ ರೇವಣ್ಣ ಅವರ ಹಿರಿಯ ಪುತ್ರ ಸೂರಜ್ ರೇವಣ್ಣ (Suraj Revanna) ಅವರ ಬಂಧನವಾಗಿದೆ.

    ಯಾರ ವಿರುದ್ಧ ಏನು ಪ್ರಕರಣ?
    ರೇವಣ್ಣ, ಮಾಜಿ ಸಚಿವ
    ಆರೋಪ: ಕೆ.ಆರ್.ನಗರ ಮೂಲದ ಅತ್ಯಾಚಾರ ಸಂತ್ರಸ್ತೆ ಅಪಹರಣ
    ಜೈಲು ಶಿಕ್ಷೆ ಬಳಿಕ ಜಾಮೀನು

    ಭವಾನಿ, ರೇವಣ್ಣ ಪತ್ನಿ
    ಆರೋಪ: ಕೆ.ಆರ್.ನಗರ ಮೂಲದ ಅತ್ಯಾಚಾರ ಸಂತ್ರಸ್ತೆಗೆ ಬೆದರಿಕೆ
    ಎಸ್‌ಐಟಿ ನೋಟಿಸ್ ಬಳಿಕ ನಿರೀಕ್ಷಣಾ ಜಾಮೀನು

    ಪ್ರಜ್ವಲ್, ರೇವಣ್ಣ 2ನೇ ಮಗ
    ಆರೋಪ: ಅತ್ಯಾಚಾರ, ಲೈಂಗಿಕ ದೌರ್ಜನ್ಯ
    ಜೈಲು; ಸದ್ಯಕ್ಕೆ ಎಸ್‌ಐಟಿ ವಿಚಾರಣೆ

    ಸೂರಜ್, ರೇವಣ್ಣ ಮೊದಲ ಮಗ
    ಆರೋಪ: ಅಸಹಜ ಲೈಂಗಿಕ ದೌರ್ಜನ್ಯ
    ಹಾಸನ ಸೆನ್ ಪೊಲೀಸರಿಂದ ಬಂಧನ, ಸಿಐಡಿ ತನಿಖೆಗೆ ಕೇಸ್ ವರ್ಗ

    ರೇವಣ್ಣ ಕುಟುಂಬದ ಮೇಲೆ ಕಾನೂನು ಅಸ್ತ್ರ
    ರೇವಣ್ಣ – ಅಪಹರಣ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗೆ ಇದ್ದಾರೆ, ಕೆ.ಆರ್ ನಗರ ಪ್ರವೇಶ ಮಾಡುವಂತೆ ಇಲ್ಲ
    ಭವಾನಿ – ನಿರೀಕ್ಷಣಾ ಜಾಮೀನು – ಮೈಸೂರು ಹಾಸನ ಪ್ರವೇಶ ಇಲ್ಲ
    ಪ್ರಜ್ವಲ್ – 3 ಅತ್ಯಾಚಾರ ಪ್ರಕರಣ – ಸದ್ಯ ಸೋಮವಾರದ ವರೆಗೆ ಪೊಲೀಸ್ ಕಸ್ಟಡಿ – ಬಳಿಕ ಜೈಲು ಸಾಧ್ಯತೆ
    ಸೂರಜ್ – ಜಾಮೀನು ರಹಿತ ಪ್ರಕರಣದಲ್ಲಿ ಅರೆಸ್ಟ್, ತನಿಖೆ ಪ್ರಗತಿಯಲ್ಲಿದೆ.

  • ತಪ್ಪು ಮಾಡಿದ್ದರೆ ಸೂರಜ್ ಯಾಕೆ ದೂರು ಕೊಡೋಕೆ ಹೋಗ್ತಿದ್ರು? – ಹೆಚ್‌.ಡಿ ರೇವಣ್ಣ ಪ್ರಶ್ನೆ

    ತಪ್ಪು ಮಾಡಿದ್ದರೆ ಸೂರಜ್ ಯಾಕೆ ದೂರು ಕೊಡೋಕೆ ಹೋಗ್ತಿದ್ರು? – ಹೆಚ್‌.ಡಿ ರೇವಣ್ಣ ಪ್ರಶ್ನೆ

    ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿನಾಗಿರುವ ವಿಧಾನ ಪರಿಷತ್ ಸದಸ್ಯ ಸೂರಜ್‌ ರೇವಣ್ಣ ಪರ ತಂದೆ ಹಾಗೂ ಮಾಜಿ ಸಚಿವ ಹೆಚ್‌.ಡಿ ರೇವಣ್ಣ (HD Revanna) ಬ್ಯಾಟ್‌ ಬೀಸಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ʻಪಬ್ಲಿಕ್‌ ಟಿವಿʼ ಜೊತೆಗೆ ಮಾತನಾಡಿದ ಅವರು, ನಮ್ಮ ಕುಟುಂಬದ ವಿರುದ್ಧ ರಾಜಕೀಯ ಷಡ್ಯಂತ್ರ ಮಾಡ್ತಿದ್ದಾರೆ. ಹಾಸನದಲ್ಲಿ ಮೆಡಿಕಲ್ ಟೆಸ್ಟ್‌ (Medical Test) ಮಾಡಿಸದೇ ಬೆಂಗಳೂರಿಗೆ ಯಾಕೆ ಕರೆತಂದ್ರು? ಇದೇಲ್ಲ ನಮ್ಮನ್ನ ಹೆದರಿಸೋಕೆ ಮಾಡ್ತಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಏಕದಿನ ವಿಶ್ವಕಪ್‌ ಸೋಲಿನ ಸೇಡು – ಬಲಿಷ್ಠ ಆಸೀಸ್‌ ವಿರುದ್ಧ ಅಫ್ಘಾನ್‌ಗೆ ಐತಿಹಾಸಿಕ ಗೆಲುವು!

    ಸೂರಜ್ ರೇವಣ್ಣ (Suraj Revanna) ಮೊದಲು ದೂರು ಕೊಟ್ಟಿರೋದು. ದೂರು ಕೊಟ್ಟ ಮೇಲೆ ಏನ್‌ ಮಾಡಿದ್ದಾರೆ. ತಪ್ಪು ಮಾಡಿದ್ರೇ ಸೂರಜ್ ಯಾಕೆ ದೂರು ಕೊಡೋಕೆ ಹೋಗ್ತಿದ್ರು? ಈಗ ಏನೂ ಹೇಳಲ್ಲ. ಟೈಂ ಬಂದಾಗ ಹೇಳ್ತೀನಿ. ನಾವು ತಪ್ಪು ಮಾಡಿದ್ರೇ ಓಡಿ ಹೋಗ್ತಿದ್ವಿ, ನಮ್ಮ ಕುಟುಂಬವನ್ನ ಯಾರು ಟಾರ್ಗೆಟ್ ಮಾಡ್ತಿದ್ದಾರೆ? ಅವೇಲ್ಲವನ್ನು ದೇವರಿಗೆ ಬಿಡ್ತೀನಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಇಸ್ರೋ ಹ್ಯಾಟ್ರಿಕ್‌ ಸಾಧನೆ – `ಪುಷ್ಪಕ್ʼ ಸೇಫ್‌ ಲ್ಯಾಂಡಿಂಗ್‌ ಪ್ರಯೋಗ ಯಶಸ್ವಿ!

    ಪೊಲೀಸರಿಗೆ ಸೂರಜ್‌ ಲಾಕ್‌ ಆಗಿದ್ದು ಹೇಗೆ?
    ತನ್ನ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಹೊರಿಸಿದ್ದ ಸಂತ್ರನ ವಿರುದ್ಧ ಪ್ರತಿದೂರು ನೀಡಲು ಶನಿವಾರ ಸಂಜೆ 6 ಗಂಟೆ ವೇಳೆಗೆ ಹಾಸನದ ಸೆನ್‌ ಪೊಲೀಸ್‌ ಠಾಣೆಗೆ ತೆರಳಿದ್ದರು. ಅಲ್ಲಿಯೇ ಅವರನ್ನು ವಶಕ್ಕೆ ಪಡೆದ ಪೊಲೀಸರು ರಾತ್ರಿ ಸುಮಾರು 11:30ರ ವರೆಗೂ ವಿಚಾರಣೆ ನಡೆಸಿದ್ದರು. ಬಳಿಕ ಸೂರಜ್‌ ಜೊತೆಗೆ ನಿಗೂಢ ಸ್ಥಳಕ್ಕೆ ತೆರಳಿದ್ದ ಪೊಲೀಸರು ತಡರಾತ್ರಿ 1:30ರ ವರೆಗೂ ವಿಚಾರಣೆ ಮುಂದುವರಿಸಿದ್ದರು.

    ಪ್ರಕರಣದ ತನಿಖಾಧಿಕಾರಿ ಆಗಿರುವ ಸಕಲೇಶಪುರ ಡಿವೈಎಸ್‌ಪಿ ಪ್ರಮೋದ್‌ ಕುಮಾರ್‌ ಅವರು ಸೂರಜ್‌ ರೇವಣ್ಣ ಅವರನ್ನ ತೀವ್ರ ವಿಚಾರಣೆಗೆ ಒಳಪಡಿಸಿದ್ದರು. ಬೆಳಗ್ಗಿನ ಜಾವ ಅವರನ್ನು ಬಂಧನಕ್ಕೆ ಒಳಪಡಿಸಿದ್ದಾರೆ. ಸದ್ಯ ಅವರಿಗೆ ವೈದ್ಯಕೀಯ ಪರೀಕ್ಷೆ ಮುಗಿದ ಬಳಿಕ ಸಂಜೆ 4 ಗಂಟೆ ವೇಳೆಗೆ ಜಡ್ಜ್‌ ಮುಂದೆ ಹಾಜರುಪಡಿಸುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಸೂರಜ್‌ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌ – ಸಂತ್ರಸ್ತನಿಗಿಂದು ಬೆಂಗ್ಳೂರಲ್ಲಿ ಮೆಡಿಕಲ್‌ ಟೆಸ್ಟ್‌!

  • ತವರಿನಲ್ಲಿ ರೇವಣ್ಣ ಟೆಂಪಲ್ ರನ್ – ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಕೆ

    ತವರಿನಲ್ಲಿ ರೇವಣ್ಣ ಟೆಂಪಲ್ ರನ್ – ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಕೆ

    – ದೇಶ ಉಳಿಯಬೇಕಾದರೆ ಮೋದಿ ಪ್ರಧಾನಿಯಾಗಬೇಕು: ರೇವಣ್ಣ

    ಹಾಸನ: ಮಾಜಿ ಸಚಿವ ಹೆಚ್‌ಡಿ ರೇವಣ್ಣ (HD Revanna) ಟೆಂಪಲ್ ರನ್ ಮುಂದುವರಿಸಿದ್ದಾರೆ. ಇಂದು ಹೊಳೆನರಸೀಪುರದ (Holenarsipura) ಶ್ರೀ ಲಕ್ಷ್ಮೀನರಸಿಂಹ ದೇವಾಲಯಕ್ಕೆ (Lakshmi Narasimha Temple) ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ ರೇವಣ್ಣ, ಕುಟುಂಬಕ್ಕೆ ಎದುರಾಗಿರುವ ಸಂಕಷ್ಟದಿಂದ ದೂರ ಮಾಡೆಂದು ದೇವರ ಮೊರೆ ಹೋಗಿದ್ದಾರೆ.

    ಬೆಳಗ್ಗೆ ರೇವಣ್ಣ ಮನೆದೇವರಿಗೆ ಪೂಜೆ ಸಲ್ಲಿಸಿದ್ದಾರೆ. ದೇವೇಗೌಡರ ಹುಟ್ಟೂರು ಹರದನಹಳ್ಳಿಯ ದೇವೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿರುವ ರೇವಣ್ಣ ಬಳಿಕ ಹೊಳೆನರಸೀಪುರದ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯಕ್ಕೆ ಆಗಮಿಸಿ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ನಮ್ಮ ಕಂಪನಿ ಹೆಸರಲ್ಲಿ ಅಕ್ರಮ ಖಾತೆ ತೆರೆದು ಹಣ ವರ್ಗಾವಣೆ: ಹ್ಯಾಪಿಯೆಸ್ಟ್‌ ಮೈಂಡ್ಸ್‌ ಟೆಕ್ನಾಲಜಿ ಕಂಪನಿ ಸ್ಪಷ್ಟನೆ

    ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆಯುತ್ತಿದೆ. ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿ ಪರ ಪ್ರಚಾರ ಮಾಡಿದ್ದೇವೆ. ನಾನೇ ಖುದ್ದಾಗಿ ಎಲ್ಲಾ ಕ್ಷೇತ್ರಗಳಲ್ಲಿ ಪ್ರಚಾರ ಮಾಡಿದ್ದೇನೆ. ನಮ್ಮ ಶಾಸಕರು ಪ್ರಚಾರ ಮಾಡಿದ್ದಾರೆ. ಸ್ವಾತಂತ್ರ‍್ಯ ಬಂದ 75 ವರ್ಷದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಯಾರಾದರೂ ಒತ್ತು ಕೊಟ್ಟ ಮುಖ್ಯಮಂತ್ರಿ ಇದ್ದರೆ ಅದು ಕುಮಾರಸ್ವಾಮಿ. 1,600 ಪ್ರೌಢಶಾಲೆ, 600 ಪಿಯು ಕಾಲೇಜು, 250 ಪ್ರಥಮ ದರ್ಜೆ ಕಾಲೇಜು ಕೊಟ್ಟಿದ್ದಾರೆ. ಏಳೆಂಟು ಸಾವಿರ ಕೋಟಿ ಅನುದಾನವನ್ನು ಶಾಲಾ-ಕಾಲೇಜು ಕಟ್ಟಡಗಳಿಗೂ ಕೊಟ್ಟಿದ್ದಾರೆ. 4,800 ಶಿಕ್ಷಕರು, 1,600 ಪಿಯುಸಿ ಉಪನ್ಯಾಸಕರನ್ನು ಕುಮಾರಸ್ವಾಮಿ, ಯಡಿಯೂರಪ್ಪ ಇದ್ದಾಗ ನೇಮಕ ಮಾಡಿದ್ದಾರೆ. ಈಗ ಜೆಡಿಎಸ್-ಬಿಜೆಪಿ ಸೇರಿ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಮಾಡುತ್ತಿದ್ದೇವೆ. ಎಲ್ಲಾ ಒಟ್ಟಾಗಿ ಕೆಲಸ ಮಾಡಿದ್ದೇವೆ. ನಮ್ಮ ಪಕ್ಷದ ಅಭ್ಯರ್ಥಿ ವಿವೇಕಾನಂದ ಗೆದ್ದೆ ಗೆಲ್ಲುತ್ತಾರೆ ಎಂದರು. ಇದನ್ನೂ ಓದಿ: ವಿಧಾನಸಭೆ: ಅರುಣಾಚಲ ಪ್ರದೇಶದಲ್ಲಿ ಬಿಜೆಪಿಗೆ ಬಹುಮತ – 60ರ ಪೈಕಿ 47 ಸ್ಥಾನಗಳಲ್ಲಿ ಮುನ್ನಡೆ

    ಎಕ್ಸಿಟ್ ಪೋಲ್ (Exit Poll) ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಅದರ ಬಗ್ಗೆ ನಾನು ಇವತ್ತು ಏನು ಹೇಳಲ್ಲ. ಈ ದೇಶ ಉಳಿಯಬೇಕಾದರೆ ಮೋದಿಯವರು (Narendra Modi) ಪ್ರಧಾನ ಮಂತ್ರಿ ಆಗಬೇಕು. ಲಕ್ಷ್ಮೀನರಸಿಂಹ ಇರುವವರೆಗೂ ನಮಗೇನು ತೊಂದರೆಯಿಲ್ಲ. ಮೂರು ಕ್ಷೇತ್ರ ಗೆಲ್ಲುತ್ತೇವೆ. ನೀವೆಲ್ಲಾ ಕೋಆಪರೇಟ್ ಮಾಡಿದ್ದೀರಿ ಸಂತೋಷ ಎಂದು ಹೇಳಿದರು. ಇದನ್ನೂ ಓದಿ: ಇಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ತಿಹಾರ್‌ ಜೈಲಿಗೆ ವಾಪಸ್

  • ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

    ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

    ಬೆಂಗಳೂರು: ಕೆ.ಆರ್ ನಗರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ (Bhavani Revanna) ಅವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಬುಧವಾರಕ್ಕೆ ಮುಂದೂಡಿಕೆಯಾಗಿದೆ.

    ಕಿಡ್ನಾಪ್ ಪ್ರಕರಣದಲ್ಲಿ ಹೆಚ್‍ಡಿ ರೇವಣ್ಣ ಬಳಿಕ ಭವಾನಿ ರೇವಣ್ಣಗೂ ಸಂಕಷ್ಟ ಎದುರಾಗಿದೆ. ಸಂತ್ರಸ್ತೆಯ ಮಗ ಕೊಟ್ಟ ದೂರಿನಲ್ಲಿ ಭವಾನಿ ಹೆಸರು ಉಲ್ಲೇಖವಾಗಿದ್ದು, ಎಫ್‍ಐಆರ್ ದಾಖಲಾಗಿದೆ. ಈ ಸಂಬಂಧ ಎಸ್‍ಐಟಿ ಎರಡು ಬಾರಿ ನೋಟಿಸ್ ಕೊಟ್ಟರೂ ಉತ್ತರಿಸದೇ ಚಳ್ಳೆಹಣ್ಣು ತಿನ್ನಿಸುತ್ತಿರುವ ಭವಾನಿಗೆ ಬಂಧನದ ಭೀತಿ ಎದುರಾಗಿದೆ. ಹೀಗಾಗಿ ನಿರೀಕ್ಷಣಾ ಜಾಮೀನು ಮೊರೆ ಹೋಗಿದ್ದಾರೆ. ಇಂದು ಜಾಮೀನು ಅರ್ಜಿ ವಿಚಾರಣೆ ಸೆಷನ್ಸ್ ಕೋರ್ಟ್, ನಾಳೆ (ಬುಧವಾರ) ಬೆಳಗ್ಗೆ 11 ಗಂಟೆಗೆ ಮುಂದೂಡಿದೆ.

    ಇತ್ತ ಎಸ್‍ಐಟಿ ಆಕ್ಷೇಪಣಾ ಅರ್ಜಿ ಸಲ್ಲಿಸೋಕೆ ಕಾಲಾವಕಾಶ ಕೇಳಿದೆ. ಭವಾನಿ ಅವರಿಗೆ ಮೂರು ನೋಟಿಸ್ ನೀಡಲಾಗಿದೆ. ಇದೂವರೆಗೂ ವಿಚಾರಣೆಗೆ ಹಾಜರಾಗಿಲ್ಲ ಅಂತ ಎಸ್‍ಪಿಪಿ ಜಗದೀಶ್ ವಾಡ ಮಂಡಿಸಿದ್ರು. ಭವಾನಿ ಈ ಪ್ರಕರಣದ ಆರೋಪಿ ಅಂತ ಎಫ್‍ಐಆರ್ ನಲ್ಲಿ ಇದ್ಯಾ ಅಂತ ಜಡ್ಜ್ ಪ್ರಶ್ನಿಸಿದ್ರು. ಇದೂವರೆಗೂ ಎಫ್‍ಐಆರ್ ಅಲ್ಲಿ ಇಲ್ಲ. ಇನ್ನು ದಿನದಿಂದ ದಿನಕ್ಕೆ ಆರೋಪಿಗಳ ಸಂಖ್ಯೆ ಹೆಚ್ಚಿಸ್ತಾ ಇದ್ದಾರೆ ಎಂದು ಸಂದೇಶ್ ಚೌಟ ಭವಾನಿ ಪರ ವಾದಿಸಿದ್ರು. ಎಸ್‍ಐಟಿ ಆಕ್ಷೇಪಣೆಗೆ ಕೋರಿದ ಕಾರಣ ವಿಚಾರಣೆಯನ್ನು ನಾಳೆಗೆ ಮುಂದೂಡಲಾಯ್ತು.

  • SIT ನೋಟಿಸ್‍ಗೆ ಭವಾನಿ ಡೋಂಟ್‍ಕೇರ್ ಇತ್ತ ಡ್ರೈವರ್ ಕೂಡ ನಾಪತ್ತೆ

    SIT ನೋಟಿಸ್‍ಗೆ ಭವಾನಿ ಡೋಂಟ್‍ಕೇರ್ ಇತ್ತ ಡ್ರೈವರ್ ಕೂಡ ನಾಪತ್ತೆ

    ಬೆಂಗಳೂರು: ಮಾಜಿ ಸಚಿವ ಹೆಚ್.ಡಿ ರೇವಣ್ಣ (HD Revanna) ವಿರುದ್ಧ ಮಹಿಳೆ ಅಪಹರಣ ಪ್ರಕರಣದಲ್ಲಿ ಈಗ ಎಸ್‍ಐಟಿ (SIT) ಅಧಿಕಾರಿಗಳಿಗೆ ತಲೆನೋವು ಶುರುವಾಗಿದೆ. ಒಂದೆಡೆ ಭವಾನಿ ರೇವಣ್ಣಗೆ (Bhavani Revanna) ನೋಟಿಸ್ ಕೊಟ್ಟರೂ ವಿಚಾರಣೆಗೆ ಬಂದಿಲ್ಲ. ಇನ್ನೊಂದೆಡೆ ಭವಾನಿ ಕಾರು ಚಾಲಕ ಕೂಡ ನಾಪತ್ತೆಯಾಗಿದ್ದಾರೆ.

    ನೋಟಿಸ್ ಕೊಟ್ರೂ ನೋ ಯೂಸ್: ಪ್ರಕರಣದಲ್ಲಿ ಭವಾನಿ ಅವರ ಪಾತ್ರದ ಬಗ್ಗೆ ತಿಳಿದುಕೊಳ್ಳೋದಕ್ಕಾಗಿ ಎಸ್‍ಐಟಿ ವಿಚಾರಣೆಗೆ ಕರೆದಿದೆ. ಈಗಾಗಲೇ 2 ನೋಟಿಸ್ ನೀಡಿದರು ಕೂಡ ಭವಾನಿ ರೇವಣ್ಣ ವಿಚಾರಣೆಗೆ ಬರೋದಿರಲ್ಲಿ ಎಸ್ ಐಟಿಯ ಸಂಪರ್ಕಕ್ಕೂ ಸಿಕ್ಕಿಲ್ಲ. ಅನಾರೋಗ್ಯದ ನೆಪದಿಂದ ಇದೂವರೆಗೂ ವಿಚಾರಣೆಗೆ ಹಾಜರಾಗಿಯೇ ಇಲ್ಲ. ಆದರೆ ಭವಾನಿ ಎಲ್ಲಿದ್ದಾರೆ…? ಭವಾನಿ ಯಾವಾಗ ವಿಚಾರಣೆಗೆ ಬರ್ತಾರೆ ಅಂತ ಕಾದುಕುಳಿತುಕೊಳ್ಳುವ ರೀತಿ ಆಗಿದೆ. ಇದನ್ನೂ ಓದಿ: ಪ್ರಜ್ವಲ್ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದತಿಗೆ ಸಿಎಂ 2ನೇ ಪತ್ರ- ಪ್ರಧಾನಿಗೆ ಬರೆದ ಲೆಟರ್‌ನಲ್ಲಿ ಏನಿದೆ?

    ಭವಾನಿ ಡ್ರೈವರ್ ನಾಪತ್ತೆ: ಇತ್ತ ಭವಾನಿ ರೇವಣ್ಣ ಡ್ರೈವರ್ ನಾಪತ್ತೆಯಾಗಿದ್ದಾನೆ. ಭವಾನಿ ರೇವಣ್ಣ ಡ್ರೈವರ್ ಅಜಿತ್ (Driver Ajit) ನಾಪತ್ತೆಯಾಗಿದ್ದು, ಎಸ್‍ಐಟಿ ಮೂರು ನೋಟಿಸ್ ಕೊಟ್ಟರು ಕೂಡ ವಿಚಾರಣೆಗೆ ಬಂದಿಲ್ಲ. ಇದೀಗ ಎಸ್‍ಐಟಿ ಪೊಲೀಸರು ಹೊಳೆನರಸೀಪುರ ಚಾಲಕ ಅಜಿತ್ ನಿವಾಸಕ್ಕೆ ತೆರಳಿ ಸಮನ್ಸ್ ಜಾರಿ ಮಾಡಿದ್ದಾರೆ. ಕೆ.ಆರ್ ನಗರದ ಸಂತ್ರಸ್ತ ಮಹಿಳೆಯನ್ನು ತನ್ನದೇ ಕಾರಿನಲ್ಲಿ ಕರೆದುಕೊಂಡು ಹೋಗಿದ್ದ ಅನ್ನೋ ಮಾಹಿತಿಯ ಜೊತೆಗೆ ರೇವಣ್ಣ ನಿರೀಕ್ಷಣಾ ಜಾಮೀನು ವಿಚಾರಣೆ ದಿನ ಸಂತ್ರಸ್ತ ಮಹಿಳೆಯ ವೀಡಿಯೋ ಚಿತ್ರೀಕರಣ ಮಾಡಿದ್ದು ಇದೇ ಅಜಿತ್ ಅನ್ನೋ ಮಾಹಿತಿ ಇದೆ. ಹೀಗಾಗಿಯೇ ಅಜಿತ್ ನನ್ನು ಎಸ್‍ಐಟಿಯವರು ಹುಡುಕಾಟ ನಡೆಸಿದ್ದಾರೆ.

  • ಹಾಸನ ಜಿಲ್ಲೆಯ ಜನ ನನ್ನ ಕೈ ಬಿಡಲ್ಲ: ರೇವಣ್ಣ

    ಹಾಸನ ಜಿಲ್ಲೆಯ ಜನ ನನ್ನ ಕೈ ಬಿಡಲ್ಲ: ರೇವಣ್ಣ

    ಹಾಸನ: ನಮಗೆ ಜಿಲ್ಲೆಯ ಜನ ಹಲವು ದಶಕಗಳಿಂದ ಆಶೀರ್ವಾದ ಮಾಡಿದ್ದಾರೆ. 25 ವರ್ಷ ಶಾಸಕನಾಗಿ ಕೆಲಸ ಮಾಡಿದ್ದೇನೆ. ಎಲ್ಲರೂ ನನಗೆ ಸಹಕಾರ ಕೊಟ್ಟಿದ್ದಾರೆ. ಈ ಕ್ಷೇತ್ರದ ಜನ ನನ್ನ ಕೈ ಬಿಡುವುದಿಲ್ಲ ಎಂದು ಮಾಜಿ ಸಚಿವ ಹೆಚ್‌ಡಿ ರೇವಣ್ಣ (HD Revanna) ವಿಶ್ವಾಸ ವ್ಯಕ್ತಪಡಿಸಿದರು.

    20 ದಿನಗಳ ನಂತರ ಮಂಗಳವಾರ ರಾತ್ರಿ ಸ್ವಕ್ಷೇತ್ರಕ್ಕೆ ಆಗಮಿಸಿ ಇಂದು ಹೊಳೆನರಸೀಪುರ (Holenarasipura) ತಾಲೂಕಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಅವರು ಮಾತನಾಡಿದರು. ನಮಗೆ ದಶಕಗಳಿಂದ ಜಿಲ್ಲೆಯ ಜನ ಆಶೀರ್ವಾದ ಮಾಡಿದ್ದು, ನನ್ನ ವಿರುದ್ಧದ ಕೇಸ್‌ಗಳು ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ಏನೂ ಮಾತನಾಡಲ್ಲ. ನ್ಯಾಯಾಲಯಕ್ಕೆ ಗೌರವ ಕೊಡುತ್ತೇನೆ. ಮುಂದೆ ಮಾತನಾಡುತ್ತೇನೆ. ನನಗೆ ನ್ಯಾಯಾಲಯದ ಮೇಲೆ ನಂಬಿಕೆ ಇದೆ. ನಮ್ಮ ಪ್ರಕರಣ ನ್ಯಾಯಾಲಯದಲ್ಲಿ ಇದೆ. ಆದ್ದರಿಂದ ನಾನು ಏನು ಮಾತನಾಡಲ್ಲ ಎಂದರು. ಇದನ್ನೂ ಓದಿ: ವಿಚಾರಣೆಗೆ ಬನ್ನಿ – ಹರೀಶ್‌ ಪೂಂಜಾ ಬಂಧನ ಮಾಡದೇ ತೆರಳಿದ ಪೊಲೀಸರು

    ನಾನು ಬದುಕಿರುವವರೆಗೂ ನನ್ನನ್ನ ಜನ ಕೈ ಬಿಡೋದಿಲ್ಲ ಅನ್ನೋ ವಿಶ್ವಾಸ ಇದೆ. ನಾನು, ಕುಮಾರಸ್ವಾಮಿ ದೇವೇಗೌಡರು ಎಲ್ಲರೂ ಅವರ ಜೊತೆ ಇರುತ್ತೇವೆ. ಜಿಲ್ಲೆಯ ಜನ ದೇವೇಗೌಡರಿಗೆ 60 ವರ್ಷ ರಾಜಕೀಯವಾಗಿ ಬೆಂಬಲ ನೀಡಿದ್ದಾರೆ. ಈ ಜಿಲ್ಲೆಯ ಜನರ ಋಣ ನನ್ನ ಮೇಲಿದೆ. ಇದನ್ನು ಬಿಟ್ಟು ನಾನು ಏನನ್ನೂ ಹೇಳೋದಿಲ್ಲ ಎಂದು ಹೇಳಿದರು. ಇದನ್ನೂ ಓದಿ: 2010 ರಿಂದ ಬಂಗಾಳದಲ್ಲಿ ನೀಡಲಾದ ಎಲ್ಲಾ OBC ಪ್ರಮಾಣಪತ್ರಗಳನ್ನು ರದ್ದುಗೊಳಿಸಿದ ಹೈಕೋರ್ಟ್‌

    ದಕ್ಷಿಣ ಪದವೀಧರ ಕ್ಷೇತ್ರ ಚುನಾವಣೆ ಸಂಬಂಧ ನಿನ್ನೆ ಮೈಸೂರಿನಲ್ಲಿ ಸಭೆ ಆಗಿದೆ. ಶೈಕ್ಷಣಿಕ ಶಿಕ್ಷಕರ ಕ್ಷೇತ್ರಕ್ಕೆ ಕುಮಾರಸ್ವಾಮಿ ಅವರ ಕೊಡುಗೆ ಅಪಾರ ಇದೆ. ಕುಮಾರಸ್ವಾಮಿ, ಯಡಿಯೂರಪ್ಪ ಇಬ್ಬರೂ ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ವಿವೇಕಾನಂದರಿಗೆ ನಮ್ಮ ಪಕ್ಷ ಟಿಕೆಟ್ ನೀಡಿದೆ. ಅವರ ಗೆಲುವಿಗಾಗಿ ಹೋರಾಡುತ್ತೇವೆ. ಶ್ರೀಕಂಠೇಗೌಡ ಅವರ ಅಸಮಾಧಾನದ ಬಗ್ಗೆ ಮಾತನಾಡಲ್ಲ ಎಂದ ರೇವಣ್ಣ, ಪ್ರಜ್ವಲ್ ಯಾವಾಗ ಬರುತ್ತಾರೆ ಎಂಬ ಪ್ರಶ್ನೆಗೆ, ಅದು ನನಗೆ ಗೊತ್ತಿಲ್ಲ ಎಂದಷ್ಟೇ ಹೇಳಿ ಹೊರಟರು. ಇದನ್ನೂ ಓದಿ: ಹರೀಶ್‌ ಪೂಂಜಾ ಬಂಧನಕ್ಕೆ ಮುಂದಾದ ಪೊಲೀಸರು – ಬೆಳ್ತಂಗಡಿಯಲ್ಲಿ ಹೈಡ್ರಾಮಾ