Tag: HD Revanna

  • ನನಗೆ ಕೆಆರ್ ನಗರದ ಸಂತ್ರಸ್ತೆ ಗೊತ್ತಿಲ್ಲ, ದೂರನ್ನೂ ಕೊಡಿಸಿಲ್ಲ: ಶಾಸಕ ರವಿಶಂಕರ್

    ನನಗೆ ಕೆಆರ್ ನಗರದ ಸಂತ್ರಸ್ತೆ ಗೊತ್ತಿಲ್ಲ, ದೂರನ್ನೂ ಕೊಡಿಸಿಲ್ಲ: ಶಾಸಕ ರವಿಶಂಕರ್

    ಮೈಸೂರು: ನನಗೆ ಕೆಆರ್ ನಗರದ ಸಂತ್ರಸ್ತೆ ಗೊತ್ತಿಲ್ಲ. ಆಕೆಯ ಜೊತೆ ನಾನು ಮಾತನಾಡಿಲ್ಲ. ದೂರನ್ನೂ ಕೊಡಿಸಿಲ್ಲ ಎಂದು ಕೆಆರ್ ನಗರದ (KR Nagar) ಶಾಸಕ ರವಿಶಂಕರ್ (D Ravishankar) ಅವರು ಜೆಡಿಎಸ್ ಜಿಲ್ಲಾಧ್ಯಕ್ಷ ಲಿಂಗೇಶ್ ಆರೋಪವನ್ನು ಅಲ್ಲಗೆಳೆದಿದ್ದಾರೆ.

    ರೇವಣ್ಣ (HD Revanna) ಬಂಧನದಲ್ಲಿ ಕೆಆರ್ ನಗರ ಶಾಸಕ ರವಿಶಂಕರ್ ಕೈವಾಡವಿದೆ ಎಂಬ ಲಿಂಗೇಶ್ ಆರೋಪದ ಕುರಿತು ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ಕಂಪ್ಲೆಂಟ್ ಕೊಟ್ಟಿದ್ದು ನಾನು ಎಂಬ ಆರೋಪ ಸತ್ಯಕ್ಕೆ ದೂರವಾದ ಮಾತು. ಇದರಲ್ಲಿ ಯಾರೋ ನನ್ನ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ಸ್ಪಷ್ಟನೆ ನೀಡುವ ಸಲುವಾಗಿ ಪತ್ರಿಕಾಗೋಷ್ಠಿ ಕರೆದಿದ್ದೇನೆ. ನನ್ನ ಹೆಸರನ್ನು ತಂದಿದ್ದಕ್ಕೆ ನಾನು ಮಾನನಷ್ಟ ಮೊಕದ್ದಮೆಯನ್ನು ಹಾಕುತ್ತೇನೆ ಎಂದರು. ಇದನ್ನೂ ಓದಿ: ದೆಹಲಿ ಬಳಿಕ ಅಹಮದಾಬಾದ್ ಶಾಲೆಗಳಿಗೂ ಬಾಂಬ್ ಬೆದರಿಕೆ

    ಕೆಆರ್ ನಗರ ಠಾಣೆಯಲ್ಲಿ ದೂರು ದಾಖಲಾಗಿರುವ ಕಾರಣ ನನ್ನ ಹೆಸರನ್ನು ಎಳೆಯುತ್ತಿದ್ದಾರೆ. ಮಹಿಳೆ ಮತ್ತು ಆಕೆಯ ಮಗ ನನ್ನ ಸಂಪರ್ಕದಲ್ಲಿಲ್ಲ. ದೂರು ಕೊಡುವ ಸಂದರ್ಭದಲ್ಲಿ ನಾನು ಚಿಕ್ಕೋಡಿಯ ನಿಪ್ಪಾಣಿಯಲ್ಲಿದ್ದೆ. ಸುಮ್ಮನೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಸಾರ್ವಜನಿಕ ವಲಯದಲ್ಲಿ ನನ್ನ ಹೆಸರು ಹಾಳು ಮಾಡುವ ನಿಟ್ಟಿನಲ್ಲಿ ಈ ಆರೋಪ ಮಾಡುತ್ತಿದ್ದಾರೆ. ಇದಕ್ಕೆ ನಾನು ಕಾನೂನು ರೀತಿಯಲ್ಲಿ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಶಾಸಕ ರವಿಶಂಕರ್‌ ಷಡ್ಯಂತ್ರದಿಂದ ರೇವಣ್ಣ ಅರೆಸ್ಟ್‌: ಹಾಸನ ಜೆಡಿಎಸ್ ಜಿಲ್ಲಾಧ್ಯಕ್ಷ ಲಿಂಗೇಶ್‌

    ಲೋಕಸಭಾ ಚುನಾವಣೆ ಮುಗಿದ ನಂತರ ಕಾಂಗ್ರೆಸ್ ವತಿಯಿಂದ ನಮಗೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಜವಾಬ್ದಾರಿ ಕೊಟ್ಟಿದ್ದರು. ನಾನು ಇಲ್ಲಿ ಚುನಾವಣೆ ಮುಗಿದ ಮೇಲೆ ಅಲ್ಲಿಗೆ ಹೋಗಿದ್ದೆ. ನಾನು ಅಲ್ಲಿ ಪ್ರಚಾರ ಕಾರ್ಯಗಳಲ್ಲಿ ಭಾಗವಹಿಸಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದೆ. ಇದಕ್ಕೂ ನನಗೂ ಯಾವುದೇ ರೀತಿಯ ಸಂಬಂಧವಿಲ್ಲ. ಜೊತೆಗೆ ಆ ಹುಡುಗನ ವಿಚಾರ ಅಥವಾ ಅವರ ತಾಯಿಯ ವಿಚಾರ ಯಾವುದೂ ನನ್ನ ಗಮನಕ್ಕೆ ಬಂದಿಲ್ಲ, ನನ್ನ ಸಂಪರ್ಕದಲ್ಲೂ ಅವರಿಲ್ಲ. ನನಗೆ ಅದರ ಬಗ್ಗೆ ಅರಿವೂ ಇಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಬಿಜೆಪಿ, ಎನ್‌ಡಿಎ ನಾಯಕರಿಂದ ಹೆಣ್ಣುಮಕ್ಕಳ ರಕ್ಷಣೆ ಮಾಡುವ ಪರಿಸ್ಥಿತಿ ಬಂದಿದೆ: ಬಿ.ವಿ ಶ್ರೀನಿವಾಸ್

  • ಶಾಸಕ ರವಿಶಂಕರ್‌ ಷಡ್ಯಂತ್ರದಿಂದ ರೇವಣ್ಣ ಅರೆಸ್ಟ್‌: ಹಾಸನ ಜೆಡಿಎಸ್ ಜಿಲ್ಲಾಧ್ಯಕ್ಷ ಲಿಂಗೇಶ್‌

    ಶಾಸಕ ರವಿಶಂಕರ್‌ ಷಡ್ಯಂತ್ರದಿಂದ ರೇವಣ್ಣ ಅರೆಸ್ಟ್‌: ಹಾಸನ ಜೆಡಿಎಸ್ ಜಿಲ್ಲಾಧ್ಯಕ್ಷ ಲಿಂಗೇಶ್‌

    ಹಾಸನ: ಕೆಆರ್‌ ನಗರದ ಕಾಂಗ್ರೆಸ್‌ ಶಾಸಕ ಡಾ. ರವಿಶಂಕರ್‌ (RaviShankar) ಅವರ ಚಿತಾವಣೆಯಿಂದ ಹೆಚ್‌ಡಿ ರೇವಣ್ಣ (HD Revanna) ಮೇಲೆ ಅಪಹರಣ ಪ್ರಕರಣ (Kidnap Case) ದಾಖಲಾದ ಬಳಿಕ ಬಂಧನ ಮಾಡಲಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಲಿಂಗೇಶ್‌ ಗಂಭೀರ ಆರೋಪ ಮಾಡಿದ್ದಾರೆ.

    ಹಾಸನದಲ್ಲಿ ಇಂದು ಜೆಡಿಎಸ್ ಜಿಲ್ಲಾಧ್ಯಕ್ಷ,ಮಾಜಿ ಶಾಸಕ ಲಿಂಗೇಶ್‌ ಮತ್ತು ಶ್ರವಣಬೆಳಗೊಳ ಶಾಸಕ  ಸಿ.ಎನ್.ಬಾಲಕೃಷ್ಣ ಅವರು ರೇವಣ್ಣ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿದರು. ಇದನ್ನೂ ಓದಿ: ಬಸವನಗುಡಿಯ ರೇವಣ್ಣ ನಿವಾಸದಲ್ಲಿ ಮಹಜರು – ಸಂತ್ರಸ್ತೆಯ ಆರೋಪ ಏನು?

     

    ವಿಶೇಷ ತನಿಖಾ ತಂಡವನ್ನು (SIT) ಸರ್ಕಾರ ರಚನೆ ಮಾಡಿದ ದಿನವೇ ಒಂದು ಪ್ರಕರಣ ದಾಖಲಾಗುತ್ತದೆ. ಈ ಪ್ರಕರಣದಲ್ಲಿ ಏನು ಇಲ್ಲ. ಸುಲಭವಾಗಿ ಜಾಮೀನು (Bail) ಸಿಗುತ್ತದೆ ಎಂಬ ಕಾರಣಕ್ಕೆ ಮೇ 2 ರಂದು ಕೆ.ಆರ್‌ನಗರ ಶಾಸಕರು ಷಡ್ಯಂತ್ರ ಮಾಡಿ ರೇವಣ್ಣ ಮೇಲೆ ಅಪಹರಣ ಕೇಸ್‌ ಕೊಟ್ಟಿದ್ದಾರೆ. ಈ ಪ್ರಕರಣದ ನಂತರ ಎಸ್‌ಐಟಿ ಬಂಧಿಸಿದೆ ಎಂದು ಲಿಂಗೇಶ್‌ ದೂರಿದರು.

    ಸಿ.ಎನ್.ಬಾಲಕೃಷ್ಣ ಮಾತನಾಡಿ, ಪ್ರಜ್ವಲ್‌ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್ ಹಿಂದೆ ಯಾರಿದ್ದಾರೆ? ಆತನ ಜೊತೆ ಟೇಬಲ್‌ ಸಭೆ ಮಾಡಿದವರು ಯಾರು? ರಾಜ್ಯ ಮಟ್ಟದಲ್ಲಿ ದೊಡ್ಡ ನಾಯಕರು ಚರ್ಚೆ ಮಾಡುತ್ತಿದ್ದಾರೆ. ಇದರ ಬಗ್ಗೆ ಸಮಗ್ರವಾಗಿ ತನಿಖೆ ನಡೆದು ಸತ್ಯಾಂಶ ಆದಷ್ಟು ಬೇಗ ಹೊರಬರಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: T20 ವಿಶ್ವಕಪ್‌ ಟೂರ್ನಿ ಮೇಲೆ ಉಗ್ರರ ಕರಿನೆರಳು – ಪಾಕ್‌ನಿಂದ ಭಯೋತ್ಪಾದಕ ದಾಳಿ ಬೆದರಿಕೆ!

     

    ಪೆನ್ ಡ್ರೈವ್‌ ವಿಚಾರವನ್ನು ರಾಜಕೀಯ ದುರುದ್ದೇಶಕ್ಕೆ ಬಳಕೆ ಮಾಡಿಕೊಂಡಿದ್ದಾರೆ. ರೇವಣ್ಣ ಅವರು ಎಲ್ಲಿಯೂ ಅಡಗಿ ಕುಳಿತ್ತಿಲ್ಲ. ಕೇಸ್ ದಾಖಲಾದಾಗಿನಿಂದ ಅವರು ಕ್ಷೇತ್ರದಲ್ಲಿ ಇದ್ದಾರೆ. ರೇವಣ್ಣ ಅವರನ್ನು ಬಂಧನ ಮಾಡುವ ಅವಶ್ಯಕತೆ ಇರಲಿಲ್ಲ. ಅವರು ಹಿರಿಯ ನಾಯಕರು, ಮಾಜಿ ಸಚಿವರಾಗಿರುವ ಕಾರಣ ವಿಚಾರಣೆಗೆ ಕರೆಯಬಹುದಿತ್ತು. ಅವರು ಎಲ್ಲಾ ರೀತಿಯ ತನಿಖೆಗೆ ಸಹಕಾರ ಮಾಡುತ್ತಿದ್ದು ರೇವಣ್ಣ ಅವರನ್ನು ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದರು.

     

  • ಬಸವನಗುಡಿಯ ರೇವಣ್ಣ ನಿವಾಸದಲ್ಲಿ ಮಹಜರು – ಸಂತ್ರಸ್ತೆಯ ಆರೋಪ ಏನು?

    ಬಸವನಗುಡಿಯ ರೇವಣ್ಣ ನಿವಾಸದಲ್ಲಿ ಮಹಜರು – ಸಂತ್ರಸ್ತೆಯ ಆರೋಪ ಏನು?

    ಬೆಂಗಳೂರು: ಹೆಚ್‌ಡಿ ರೇವಣ್ಣ (HD Revanna) ಮತ್ತು ಪ್ರಜ್ವಲ್‌ ರೇವಣ್ಣ (Prajwal Revanna) ವಿರುದ್ಧ ಲೈಂಗಿಕ ದೌರ್ಜನ್ಯ ದೂರು ನೀಡಿದ್ದ ಸಂತ್ರಸ್ತೆಯನ್ನು ಇಂದು ಬಸವನಗುಡಿಯಲ್ಲಿರುವ (Basavanagudi) ರೇವಣ್ಣ ನಿವಾಸಕ್ಕೆ ಕರೆತಂದು ವಿಶೇಷ ತನಿಖಾ ದಳ(SIT) ಪೊಲೀಸರು ಸ್ಥಳ ಮಹಜರು ಮಾಡಿದ್ದಾರೆ.

    ಬೆಳಗ್ಗೆ 11 ಗಂಟೆಗೆ ರೇವಣ್ಣ ನಿವಾಸಕ್ಕೆ ನಾಲ್ವರು ಮಹಿಳಾ ಅಧಿಕಾರಿಗಳು ಸೇರಿ ಆರು ಮಂದಿ ಅಧಿಕಾರಿಗಳ ತಂಡದೊಂದಿಗೆ ಸಂತ್ರಸ್ತೆ ಆಗಮಿಸಿದರು. ಈ ವೇಳೆ ಸಂತ್ರಸ್ತೆಯ ಹೇಳಿಕೆ ಸೇರಿದಂತೆ ಎಲ್ಲಾ ಮಹಜರು ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಚಿತ್ರೀಕರಣ ಮಾಡಲಾಯಿತು.  ಇದನ್ನೂ ಓದಿ: T20 ವಿಶ್ವಕಪ್‌ ಟೂರ್ನಿ ಮೇಲೆ ಉಗ್ರರ ಕರಿನೆರಳು – ಪಾಕ್‌ನಿಂದ ಭಯೋತ್ಪಾದಕ ದಾಳಿ ಬೆದರಿಕೆ!

     

    ಮಹಜರು ನಡೆಸುವ ಮೊದಲು ಮುಂಜಾಗ್ರತಾ ಕ್ರಮವಾಗಿ ರೇವಣ್ಣ ನಿವಾಸಕ್ಕೆ ಬ್ಯಾರಿಕೇಡ್‌ ಹಾಕಲಾಗಿತ್ತು.  ಬಸವನಗುಡಿ ಪೊಲೀಸರು ಸ್ಥಳದಲ್ಲಿ ಬಿಗಿಭದ್ರತೆ ಕಲ್ಪಿಸಿದ್ದರು. ಇದನ್ನೂ ಓದಿ: ಚುನಾವಣೆ ಸಮಯದಲ್ಲೇ ಇಡಿಯಿಂದ ದೊಡ್ಡ ಬೇಟೆ – ಕಂತೆ ಕಂತೆ ನೋಟು ಪತ್ತೆ

    ಸಂತ್ರಸ್ತೆಯ ಆರೋಪ ಏನು?
    ರೇವಣ್ಣ ತಮ್ಮ ಕೊಠಡಿಗೆ ಬರುವಂತೆ ಆಹ್ವಾನಿಸಿ ಹಣ್ಣು ಕೊಡುವ ನೆಪದಲ್ಲಿ ಮೈ ಮುಟ್ಟುತ್ತಿದ್ದರು. ಮನೆಯ ಸ್ಟೋರ್ ರೂಂನಲ್ಲಿ ಕೈ ಹಿಡಿದು ಎಳೆಯುತ್ತಿದ್ದರು. ಸೀರೆಯ ಪಿನ್ ಕಿತ್ತು ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು. ಪ್ರಜ್ವಲ್ ಹಿಂದಿನಿಂದ ಬಂದು ಮೈ ಮುಟ್ಟುತ್ತಾ ಹೊಟ್ಟೆಯನ್ನು ಮುಟ್ಟುತ್ತಿದ್ದರು. ಇದೇ ರೀತಿ ಹಲವು ಬಾರಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಮಹಿಳೆ ದೂರು ನೀಡಿದ್ದರು.

     

    ತನ್ನ ಮಗಳ ಪೋನ್ ಗೆ ಹಲವು ಬಾರಿ ಪ್ರಜ್ವಲ್ ರೇವಣ್ಣ ವಿಡಿಯೋ ಕಾಲ್ ಮಾಡಿ ಅಸಭ್ಯ ಸಂಭಾಷಣೆ ಮೂಲಕ ಪ್ರಚೋದಿಸಲು ಯತ್ನಿಸಿದ್ದರು ಎಂದು ಮಹಿಳೆ ಆರೋಪಿಸಿದ್ದರು. ಈ ದೂರಿನ ಅನ್ವಯ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ಕಿರುಕುಳ ಸೆಕ್ಷನ್ ಅಡಿ ಹೊಳೆನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಕಳೆದ ಎರಡು ದಿನಗಳ ಹಿಂದೆ ಹೊಳೆನರಸೀಪುರ ನಿವಾಸದಲ್ಲಿ ಮಹಜರ್ ನಡೆಸಿದ್ದ ಎಸ್‌ಐಟಿ ಇಂದು ರೇವಣ್ಣ ಅವರ ಬಸವನಗುಡಿ ನಿವಾಸಕ್ಕೆ ಸಂತ್ರಸ್ತೆಯನ್ನು ಕರೆತಂದು ಮಹಜರು ಮಾಡಿದ್ದಾರೆ.

  • 40ಕ್ಕೂ ಹೆಚ್ಚು ಪೊಲೀಸರು ಬಂದು ಹೊಡೆದಿದ್ದಾರೆ – ಏಟಿನ ಭಯಕ್ಕೆ ಸುಳ್ಳು ಹೇಳಿದ್ದೇವೆ

    40ಕ್ಕೂ ಹೆಚ್ಚು ಪೊಲೀಸರು ಬಂದು ಹೊಡೆದಿದ್ದಾರೆ – ಏಟಿನ ಭಯಕ್ಕೆ ಸುಳ್ಳು ಹೇಳಿದ್ದೇವೆ

    – ರೇವಣ್ಣ ಕಡೆಯವರಿಂದ ಸಂತ್ರಸ್ತೆಯ ಅಪಹರಣ ಪ್ರಕರಣ
    – ಪಬ್ಲಿಕ್‌ ಟಿವಿ ಜೊತೆ ಅಳಲು ತೋಡಿಕೊಂಡ ಕಾರ್ಮಿಕರು
    – ಆ ಮಹಿಳೆಯನ್ನು ನಾವು ನೋಡೇ ಇಲ್ಲ

    ಮೈಸೂರು: ಶನಿವಾರ 40ಕ್ಕೂ ಹೆಚ್ಚು ಪೊಲೀಸರು (Police) ಬಂದು ಹೊಡೆದಿದ್ದಾರೆ. ಪೊಲೀಸರ ಏಟಿನ ಭಯದಿಂದ ನಾವು ಕೆಲ ಸುಳ್ಳು ಹೇಳಬೇಕಾಯ್ತು ಎಂದು ರಾಜ್‌ಗೋಪಾಲ್ ಅವರ ತೋಟದ ಮನೆಯ ಕಾರ್ಮಿಕರು ಅಳಲು ತೋಡಿಕೊಂಡಿದ್ದಾರೆ.

    ರಾಜ್‌ಗೋಪಾಲ್‌ ಅವರ ಹುಣಸೂರು ಪಟ್ಟಣದಿಂದ ಸುಮಾರು 14 ಕಿ.ಮೀ ದೂರದಲ್ಲಿರುವ ಕಾಳೇನಹಳ್ಳಿಯಲ್ಲಿ ತೋಟದ ಮನೆಯಲ್ಲಿ ಅಪಹರಣಕ್ಕೆ ಒಳಗಾದ ಸಂತ್ರಸ್ತೆ ಪತ್ತೆಯಾದ ಹಿನ್ನೆಲೆಯಲ್ಲಿ ಪಬ್ಲಿಕ್‌ ಟಿವಿ ಇಂದು ತೋಟದ ಮನೆಗೆ ಹೋಗಿತ್ತು. ಈ ವೇಳೆ ಅಲ್ಲಿದ್ದ ಇಬ್ಬರು ಕೆಲಸಗಾರರ ಬಳಿ  ಮಹಿಳೆಯ ಬಗ್ಗೆ ಮಾತನಾಡಿಸಿದಾಗ ಬಹಳ ಸ್ಫೋಟಕ ವಿಚಾರಗಳು ಹೊರಬಿದ್ದಿದೆ.  ಇದನ್ನೂ ಓದಿ: ಆ ಯುವತಿ ನಂಬರ್‌ಗೆ ದಿನಕ್ಕೆರಡು ಬಾರಿ ಕರೆ ಮಾಡ್ತಿದ್ದಾರಂತೆ ಪ್ರಜ್ವಲ್ – ರಹಸ್ಯ ಸ್ಫೋಟ!

    ಈ ವೇಳೆ ಒಬ್ಬ ಕಾರ್ಮಿಕ ಮಾತನಾಡಿ, ನಿನ್ನೆ 40 ಹೆಚ್ಚು ಪೊಲೀಸರು ಇಲ್ಲಿಗೆ ಆಗಮಿಸಿದ್ದರು. ನಮ್ಮ ಜೊತೆ ಮಾತನಾಡಿ ಹೊಡೆಯಲು ಆರಂಭಿಸಿದರು. ಈ ವೇಳೆ ನಾನು ಪ್ರಶ್ನೆ ಮಾಡಿ ನನಗೆ ಯಾಕೆ ಹೊಡೆಯುತ್ತೀರಿ ಎಂದು ಕೇಳಿದೆ. ಎರಡು ಪೆಟ್ಟು ಹೊಡೆದ ನಂತರ ನನಗೆ ಹೊಡೆಯುವುದನ್ನು ನಿಲ್ಲಿಸಿದರು ಎಂದು ಹೇಳಿದರು. ಇದನ್ನೂ ಓದಿ: ರೇವಣ್ಣ ಕಿಡ್ನ್ಯಾಪ್‌ ಕೇಸ್‌ – ಅಪಹರಿಸಿ ಸಂತ್ರಸ್ತೆಯನ್ನಿರಿಸಿದ್ದ ತೋಟದ ಮನೆ ಪತ್ತೆ, ಕೂಲಿ ಕೆಲಸದಾಕೆ ಅಂತ ಹೇಳಿ ನಮಗೆ ಪರಿಚಯಿಸಲಾಗಿತ್ತು ಎಂದ ಕಾರ್ಮಿಕರು

    ಯಾಕೆ ಹೊಡೆದಿದ್ದು ಎಂದು ಪಬ್ಲಿಕ್‌ ಟಿವಿ ಪ್ರಶ್ನಿಸಿದ್ದಕ್ಕೆ, ಆ ಮಹಿಳೆಯನ್ನು ಹೊರಗೆ ಬಿಟ್ಟಿದ್ದು ಯಾಕೆ ಎಂದು ನಮ್ಮನ್ನು ಪ್ರಶ್ನಿಸಿ ಹೊಡೆದರು. ನಾನು ಮನೆಯ ಮಾಲೀಕರು ಹೇಳಿದಂತೆ ಕೆಲಸ ಮಾಡುತ್ತೇನೆ. ನೀವು ಯಾವುದೇ ವಿಚಾರ ಇದ್ದರೂ ಮಾಲೀಕರನ್ನು ಕೇಳಿ. ನಮಗೆ ವಿಚಾರ ಗೊತ್ತಿಲ್ಲ. ನಮ್ಮನ್ನು ಯಾಕೆ ಹೊಡೆಯುತ್ತೀರಿ ಎಂದು ಪ್ರಶ್ನಿಸಿದೆ ಎಂದು ಕಾರ್ಮಿಕ ಉತ್ತರಿಸಿದರು.

    ಈ ವೇಳೆ ಮತ್ತೊಬ್ಬ ಕೆಲಸಗಾರನಿಗೆ ಹೊಡೆದ ವಿಚಾರವನ್ನು ತಿಳಿಸಿದ ಅವರು, ಅವನಿಗೆ ದೊಣ್ಣೆಯಲ್ಲಿ ಹೊಡೆದಿದ್ದಾರೆ. ಅವನಿಗೆ ಭಯ ಜಾಸ್ತಿ. ಯಾವಾಗ ಏಟು ಹೊಡೆದರೋ ಈಗ ಇವನು ಸುಳ್ಳು ಹೇಳುವ ಸನ್ನಿವೇಶಕ್ಕೆ ಬಂದಿದ್ದಾನೆ. ಏಟು ಹೊಡೆಯುವುದನ್ನು ನಾನೇ ಕಣ್ಣಾರೆ ಕಂಡಿದ್ದೀನಿ. ದೊಣ್ಣೆಯಿಂದ ಏಟು ತಿಂದ ಬಳಿಕ ಆತನಿಗೆ ಈಗ ಕೆಲಸ ಮಾಡಲು ಆಗುತ್ತಿಲ್ಲ. ನಿಜವಾಗಿ ಆ ಯಮ್ಮ ಯಾರು ಅಂತಾನೆ ಗೊತ್ತಿಲ್ಲ. ಇಲ್ಲಿಯವರೆಗೆ ನಾನು ಆಕೆಯನ್ನು ನೋಡಿಲ್ಲ ಎಂದು ತಿಳಿಸಿದರು.

     

    ಆರಂಭದಲ್ಲಿ ಪಬ್ಲಿಕ್‌ ಟಿವಿ ಕಾರ್ಮಿಕರೊಬ್ಬರ ಜೊತೆ ಮಾತನಾಡಿದಾಗ ಮಹಿಳೆಯ ಬಗ್ಗೆ ಹಲವು ವಿಚಾರ ತಿಳಿಸಿದ್ದರು. ಈ ವೇಳೆ  ಮತ್ತೊಬ್ಬ  ಕೆಲಸಗಾರ  ಮಧ್ಯಪ್ರವೇಶಿಸಿ ಆತನಿಗೆ ಭಯ ಜಾಸ್ತಿ. ಹೀಗಾಗಿ ಸುಳ್ಳು ಹೇಳುತ್ತಿದ್ದಾನೆ. ನಿನ್ನೆ ಪೊಲೀಸರು ಬಂದು  ನಮಗೆ ಹೊಡೆದಿದ್ದರು ಎಂಬ ವಿಚಾರ ತಿಳಿಸಿದಾಗ ಈ ಮೇಲಿನ ಮಾಹಿತಿಗಳು ಪ್ರಕಟವಾಗಿದೆ.

    ರಾಜ್‌ಗೋಪಾಲ್‌ ಯಾರು?
    ರಾಜಗೋಪಾಲ್‌ ಅವರು ಹುಣಸೂರು ತಾಲ್ಲೂಕಿನ ಹೊಸೂರು ಕೊಡಗು ಕಾಲೊನಿ ಗ್ರಾಮದ ನಿವಾಸಿಯಾಗಿದ್ದಾರೆ. ರೇವಣ್ಣ ಲೋಕೋಪಯೋಗಿ ಸಚಿವರಾಗಿದ್ದಾಗ ಅವರ ಆಪ್ತ ಸಹಾಯಕರಾಗಿ ಕೆಲಸ ಮಾಡಿದ್ದರು. ಏಳು ವರ್ಷದ ಹಿಂದೆ ತೋಟದ ಮನೆ ನಿರ್ಮಿಸಿದ್ದ ಇವರು ರೇವಣ್ಣ ಅವರಿಗೆ ಸಂಬಂಧಿಸಿದ ಪ್ರಮುಖ ಕಡತಗಳನ್ನು ನಿರ್ವಹಿಸುತ್ತಿದ್ದಾರೆ.

  • ಆ ಯುವತಿ ನಂಬರ್‌ಗೆ ದಿನಕ್ಕೆರಡು ಬಾರಿ ಕರೆ ಮಾಡ್ತಿದ್ದಾರಂತೆ ಪ್ರಜ್ವಲ್ – ರಹಸ್ಯ ಸ್ಫೋಟ!

    ಆ ಯುವತಿ ನಂಬರ್‌ಗೆ ದಿನಕ್ಕೆರಡು ಬಾರಿ ಕರೆ ಮಾಡ್ತಿದ್ದಾರಂತೆ ಪ್ರಜ್ವಲ್ – ರಹಸ್ಯ ಸ್ಫೋಟ!

    ಬೆಂಗಳೂರು: ವಿದೇಶದಲ್ಲಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಸದ್ಯದಲ್ಲೇ ವಿಶೇಷ ತನಿಖಾ ತಂಡದ ಎದುರು ಶರಣಾಗಲಿದ್ದಾರೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ. ಈ ನಡುವೆ ಸ್ಫೋಟಕ ರಹಸ್ಯವೊಂದು ಬಯಲಾಗಿದೆ.

    ಯಾರೊಂದಿಗೂ ಸಂಪರ್ಕದಲ್ಲಿಲ್ಲದ ಪ್ರಜ್ವಲ್ ರೇವಣ್ಣ ಆ ಒಂದು ನಂಬರ್‌ಗೆ (Mobile Number) ಮಾತ್ರ ದಿನಕ್ಕೆ ಎರಡು ಬಾರಿ ಕರೆ ಮಾಡುತ್ತಿದ್ದಾರೆ. ಅಷ್ಟಕ್ಕೂ ಪ್ರಜ್ವಲ್ ಕರೆ ಮಾಡುತ್ತಿರುವುದು ಬೇರೆ ಯಾರಿಗೂ ಅಲ್ಲ, ತಾನೂ ಮದುವೆ ಆಗಬೇಕು ಅಂದುಕೊಂಡಿದ್ದ ಯುವತಿಗೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಕೊಳಕು ಕೃತ್ಯಗಳನ್ನು ಸೃಷ್ಟಿಸಿದವರಿಗೆ ಕಾನೂನಿನಡಿ ಶಿಕ್ಷೆಯಾಗಬೇಕು- ಹರ್ಷಿಕಾ ಆಗ್ರಹ

    ಇದೇ ತಿಂಗಳಲ್ಲಿ ಪ್ರಜ್ವಲ್ ಆ ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡ್ಕೋಬೇಕು ಅಂದುಕೊಂಡಿದ್ದರಂತೆ, ಆ ಹುಡುಗಿಗೆ ದಿನಕ್ಕೆರಡು ಬಾರಿ ಫೋನ್ ಮಾಡಿ ಮಾತನಾಡುತ್ತಿದ್ದಾರೆ ಎಂದು ಹೇಳಲಾಗಿದೆ. ಈ ಮಾಹಿತಿ ತಿಳಿದಕೂಡಲೇ ಎಸ್‌ಐಟಿ ಆ ಯುವತಿಯ ಚಲನವಲನಗಳ ಮೇಲೆ ನಿಗಾ ವಹಿಸಿದೆ. ಆ ಮೂಲಕ ಪ್ರಜ್ವಲ್ ಎಲ್ಲಿದ್ದಾರೆ ಎಂಬ ಹುಡುಕಾಟವೂ ನಡೆಯುತ್ತಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಕೋವಿಡ್ ಲಸಿಕೆ ಪಡೆದ ಯುವಜನರು ಹೃದಯಾಘಾತದಿಂದ ಸಾಯುತ್ತಿದ್ದಾರೆ: ಪ್ರಿಯಾಂಕಾ ಆತಂಕ

    ಮಂಗಳೂರಿನಲ್ಲಿ ಶರಣಾಗ್ತಾರಾ ಪ್ರಜ್ವಲ್‌?
    ಸದ್ಯ ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ಇಂದು ಶರಣಾಗ್ತಾರಾ? ಎಂಬ ಪ್ರಶ್ನೆ ಎದ್ದಿದೆ. ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ತಂದೆ ಹೆಚ್‌ಡಿ ರೇವಣ್ಣ (HD Revanna) ಬಂಧನಕ್ಕೆ ಒಳಗಾದ ಬೆನ್ನಲ್ಲೇ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಅವರನ್ನು ಬಂಧಿಸಲು ಎಸ್‌ಐಟಿ ಸಿದ್ಧತೆ ನಡೆಸುತ್ತಿದೆ. ಇದನ್ನೂ ಓದಿ: ಮಂಗಳೂರಿನಲ್ಲಿ ಇಂದು ಪ್ರಜ್ವಲ್‌ ರೇವಣ್ಣ ಶರಣಾಗ್ತಾರಾ?

    ಇಂದು (ಮೇ 5) ಮಂಗಳೂರು ವಿಮಾನ ನಿಲ್ದಾಣಕ್ಕೆ (Mangaluru Airport) ಪ್ರಜ್ವಲ್‌ ಆಗಮಿಸುವ ಸಾಧ್ಯತೆಯಿದೆ. ಸದ್ಯ ಪ್ರಜ್ವಲ್‌ ಯುಎಇಯಲ್ಲಿ ಇದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಲುಕೌಟ್‌ ನೋಟಿಸ್‌ ಜಾರಿಯಾದ ಹಿನ್ನೆಲೆಯಲ್ಲಿ ವಿಮಾನದಿಂದ ಇಳಿದು ವಲಸೆ ಕೇಂದ್ರದ ಬಳಿಯೇ ಬಂಧನವಾಗುವ ಸಾಧ್ಯತೆಯಿದೆ. ಈಗಾಗಲೇ ಅಬುಧಾಬಿಯಿಂದ ಬೆಳಗ್ಗೆ 6:24ಕ್ಕೆ ಆಗಮಿಸಿದ ವಿಮಾನಲ್ಲಿ ಪ್ರಜ್ವಲ್‌ ಬಂದಿಲ್ಲ. ದುಬೈನಿಂದ ಆಗಮಿಸುವ 2ನೇ ವಿಮಾನ ಬೆಳಗ್ಗೆ 7:55ಕ್ಕೆ ಲ್ಯಾಂಡ್‌ ಆಗಲಿದೆ. ದುಬೈನಿಂದ ಸಂಜೆ 6:15ಕ್ಕೆ ಮತ್ತೊಂದು ವಿಮಾನ ಬರಲಿದೆ. ಕುವೈಟ್‌ನಿಂದ 6:40ಕ್ಕೆ ವಿಮಾನ ಬರಲಿದೆ. ಈ ವಿಮಾನಗಳ ಪೈಕಿ ಒಂದು ವಿಮಾನದಲ್ಲಿ ಪ್ರಜ್ವಲ್‌ ಬಂದು ಶರಣಾಗಬಹುದು ಎನ್ನಲಾಗುತ್ತಿದೆ.

  • ರೇವಣ್ಣ ಅರೆಸ್ಟ್‌ ಬೆನ್ನಲ್ಲೇ ಭವಾನಿಗೂ ಸಂಕಷ್ಟ?

    ರೇವಣ್ಣ ಅರೆಸ್ಟ್‌ ಬೆನ್ನಲ್ಲೇ ಭವಾನಿಗೂ ಸಂಕಷ್ಟ?

    ಬೆಂಗಳೂರು: ಪತಿ ರೇವಣ್ಣ (HD Revanna) ಅರೆಸ್ಟ್‌ ಆದ ಬೆನ್ನಲ್ಲೇ ಪತ್ನಿ ಭವಾನಿಗೂ (Bhavani Revanna) ಸಂಕಷ್ಟ ಎದುರಾಗುವ ಸಾಧ್ಯತೆಯಿದೆ.

    ಮಹಿಳೆಯೊಬ್ಬರ ಅಪಹರಣ (Kidnap) ಪ್ರಕರಣದಲ್ಲಿ ಹೆಚ್‌ಡಿ ರೇವಣ್ಣ ಬಂಧನಕ್ಕೆ ಒಳಗಾಗಿದ್ದಾರೆ. ಭವಾನಿ ರೇವಣ್ಣ ಕರೆಯುತ್ತಿದ್ದಾರೆ ಎಂದು ಹೇಳಿ ತನ್ನ ತಾಯಿಯನ್ನು ಸತೀಶ್‌ ಬಾಬು ಕರೆದೊಯ್ದಿದ್ದಾನೆ ಎಂದು ಆಕೆಯ ಪುತ್ರ ದೂರು ನೀಡಿದ್ದ.  ಇದನ್ನೂ ಓದಿ: ಮಂಗಳೂರಿನಲ್ಲಿ ಇಂದು ಪ್ರಜ್ವಲ್‌ ರೇವಣ್ಣ ಶರಣಾಗ್ತಾರಾ?

    ಈ ಪ್ರಕರಣದಲ್ಲಿ ಈಗಾಗಲೇ ಸತೀಶ್‌ ಬಾಬು ಮತ್ತು ಹೆಚ್‌ಡಿ ರೇವಣ್ಣ ಬಂಧನಕ್ಕೆ ಒಳಗಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಭವಾನಿ ಅವರಿಗೆ ನೋಟಿಸ್‌ ಜಾರಿ ಮಾಡಿ ವಿಶೇಷ ತನಿಖಾ ತಂಡ (SIT) ವಿಚಾರಣೆ ನಡೆಸುವ ಸಾಧ್ಯತೆಯಿದೆ. ಇದನ್ನೂ ಓದಿ: ನಾವು ಇದರಲ್ಲಿ ಮಧ್ಯಪ್ರವೇಶ ಮಾಡಲ್ಲ- ರೇವಣ್ಣ ಬಂಧನಕ್ಕೆ ಸಿಎಂ ಫಸ್ಟ್‌ ರಿಯಾಕ್ಷನ್‌

    ಸಂತ್ರಸ್ತೆಯ ಹೇಳಿಕೆ ದಾಖಲು ಮಾಡಿದ ಕೂಡಲೇ ತುರ್ತು ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಭವಾನಿಗೆ ರೇವಣ್ಣಗೆ ನೋಟಿಸ್‌ ನೀಡಲಿದೆ. ಸಂತ್ರಸ್ತೆ ವ್ಯತಿರಿಕ್ತವಾಗಿ ಹೇಳಿಕೆ ನೀಡಿದರೆ ಭವಾನಿಯೂ ಆರೋಪಿಯಾಗುವ ಸಾಧ್ಯತೆಯಿದೆ. ವಿಚಾರಣೆ ಸಂದರ್ಭದಲ್ಲಿ ಸಂತ್ರಸ್ತೆಯ ಹೇಳಿಕೆಯ ಮೇಲೆ ಭವಾನಿ ರೇವಣ್ಣ ಭವಿಷ್ಯ ನಿಂತಿದೆ.

     

  • ಮಂಗಳೂರಿನಲ್ಲಿ ಇಂದು ಪ್ರಜ್ವಲ್‌ ರೇವಣ್ಣ ಶರಣಾಗ್ತಾರಾ?

    ಮಂಗಳೂರಿನಲ್ಲಿ ಇಂದು ಪ್ರಜ್ವಲ್‌ ರೇವಣ್ಣ ಶರಣಾಗ್ತಾರಾ?

    ಬೆಂಗಳೂರು: ಸದ್ಯ ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ (Prajwal Revanna) ಇಂದು ಶರಣಾಗ್ತಾರಾ ಎಂಬ ಪ್ರಶ್ನೆ ಎದ್ದಿದೆ.

    ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ತಂದೆ ಹೆಚ್‌ಡಿ ರೇವಣ್ಣ (HD Revanna) ಬಂಧನಕ್ಕೆ ಒಳಗಾದ ಬೆನ್ನಲ್ಲೇ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಅವರನ್ನು ಬಂಧಿಸಲು ಎಸ್‌ಐಟಿ ಸಿದ್ಧತೆ ನಡೆಸುತ್ತಿದೆ.

    ಇಂದು ಮಂಗಳೂರು ವಿಮಾನ ನಿಲ್ದಾಣಕ್ಕೆ (Mangaluru Airport) ಪ್ರಜ್ವಲ್‌ ಆಗಮಿಸುವ ಸಾಧ್ಯತೆಯಿದೆ. ಸದ್ಯ ಪ್ರಜ್ವಲ್‌ ಯುಎಇಯಲ್ಲಿ ಇದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಲುಕೌಟ್‌ ನೋಟಿಸ್‌ ಜಾರಿಯಾದ ಹಿನ್ನೆಲೆಯಲ್ಲಿ ವಿಮಾನದಿಂದ ಇಳಿದು ವಲಸೆ ಕೇಂದ್ರದ ಬಳಿಯೇ ಬಂಧನವಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ನಾವು ಇದರಲ್ಲಿ ಮಧ್ಯಪ್ರವೇಶ ಮಾಡಲ್ಲ- ರೇವಣ್ಣ ಬಂಧನಕ್ಕೆ ಸಿಎಂ ಫಸ್ಟ್‌ ರಿಯಾಕ್ಷನ್‌

    ಈಗಾಗಲೇ ಅಬುಧಾಬಿಯಿಂದ ಬೆಳಗ್ಗೆ 6:24ಕ್ಕೆ ಆಗಮಿಸಿದ ವಿಮಾನಲ್ಲಿ ಪ್ರಜ್ವಲ್‌ ಬಂದಿಲ್ಲ. ದುಬೈನಿಂದ ಆಗಮಿಸುವ ಎರಡನೇ ವಿಮಾನ ಬೆಳಗ್ಗೆ 7:55ಕ್ಕೆ ಲ್ಯಾಂಡ್‌ ಆಗಲಿದೆ. ದುಬೈನಿಂದ ಸಂಜೆ 6:15ಕ್ಕೆ ಮತ್ತೊಂದು ವಿಮಾನ ಬರಲಿದೆ. ಕುವೈಟ್‌ನಿಂದ 6:40ಕ್ಕೆ ವಿಮಾನ ಬರಲಿದೆ. ಈ ವಿಮಾನಗಳ ಪೈಕಿ ಒಂದು ವಿಮಾನದಲ್ಲಿ ಪ್ರಜ್ವಲ್‌ ಬಂದು ಶರಣಾಗಬಹುದು ಎನ್ನಲಾಗುತ್ತಿದೆ.

     

  • ಇಂದು ರಾತ್ರಿ ಸಿಐಡಿಯಲ್ಲೇ ಹೆಚ್‌.ಡಿ ರೇವಣ್ಣ ವಾಸ್ತವ್ಯ

    ಇಂದು ರಾತ್ರಿ ಸಿಐಡಿಯಲ್ಲೇ ಹೆಚ್‌.ಡಿ ರೇವಣ್ಣ ವಾಸ್ತವ್ಯ

    – ಇಸಿಜಿ ರಿಪೋರ್ಟ್‌ನಲ್ಲಿ ವ್ಯತ್ಯಾಸ

    ಬೆಂಗಳೂರು: ಎಸ್‌ಐಟಿ ಅಧಿಕಾರಿಗಳಿಂದ ಬಂಧನಕ್ಕೊಳಗಾದ ಮಾಜಿ ಸಚಿವ ಹೆಚ್‌.ಡಿ ರೇವಣ್ಣ (HD Revanna) ಇಂದು ಸಿಐಡಿ ಕಚೇರಿಯಲ್ಲಿಯೇ ಉಳಿದುಕೊಳ್ಳಲಿದ್ದಾರೆ. ಹೀಗಾಗಿ ಅವರಿಗೆ ಮಲಗಲು ಈಗಾಗಲೇ 2 ಹೊಸ ಬೆಡ್‌ ಹಾಗೂ ಬೆಡ್‌ಶೀಟ್‌ಗಳನ್ನು ಸಿಬ್ಬಂದಿ ತೆಗೆದುಕೊಂಡು ಹೋಗಿದ್ದಾರೆ.

    ಇದಕ್ಕೂ ಮುನ್ನ ಮೆಡಿಕಲ್‌ ಟೆಸ್ಟ್‌ಗಾಗಿ ಮಾಜಿ ಸಚಿವರನ್ನು ಬೌರಿಂಗ್‌ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಅಲ್ಲಿ ರೇವಣ್ಣಗೆ ಇಸಿಜಿ ಮಾಡಿದ್ದಾರೆ. ನಂತರ ಸಿಸಿಆರ್ ಯು ಘಟಕದಲ್ಲಿ ತಪಾಸಣೆ ನಡೆಸಲಾಯಿತು. ಅಲ್ಲದೇ ಅಲ್ಟ್ರಾ ಸೌಂಡ್ ಸ್ಕ್ಯಾನಿಂಗ್ ಕೂಡ ಮಾಡಲಾಯಿತು. ಮೆಡಿಕಲ್‌ ಟೆಸ್ಟ್‌ ಮುಗಿದ ಬಳಿಕ ಮತ್ತೆ ಸಿಐಡಿ ಕಚೇರಿಗೆ ಕರೆದೊಯ್ಯಲಾಯಿತು. ಇದನ್ನೂ ಓದಿ: ಕೊಳಕು ಕೃತ್ಯಗಳನ್ನು ಸೃಷ್ಟಿಸಿದವರಿಗೆ ಕಾನೂನಿನಡಿ ಶಿಕ್ಷೆಯಾಗಬೇಕು- ಹರ್ಷಿಕಾ ಆಗ್ರಹ

    ಇಸಿಜಿ ರಿಪೋರ್ಟ್ ನಲ್ಲಿ ವ್ಯತ್ಯಾಸ: ಬೌರಿಂಗ್ ಆಸ್ಫತ್ರೆ ವೈದ್ಯರಿಂದ ರೇವಣ್ಣಗೆ ಇಸಿಜಿ ಮಾಡಲಾಗಿದೆ. ಈ ವೇಳೆ ಇಸಿಜಿ ರಿಪೋರ್ಟ್ ನಲ್ಲಿ ವ್ಯತ್ಯಾಸ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಭಾನುವಾರ ಎಸ್ ಐಟಿ ಅಧಿಕಾರಿಗಳು ಜಯದೇವ ಆಸ್ಫತ್ರೆಗೆ ಅಥವಾ ಬೇರೆ ಆಸ್ಫತ್ರೆಯ ಕಾರ್ಡಿಯಾಲಾಜಿಸ್ಟ್ ವೈದ್ಯರಿಂದ ತಪಾಸಣೆ ಮಾಡಿಸುವ ಸಾಧ್ಯತೆಗಳಿವೆ. ಇಸಿಜಿ ಹೊರತುಪಡಿಸಿ ಎಲ್ಲಾ ಟೆಸ್ಟ್ ನಲ್ಲೂ ನಾರ್ಮಲ್ ಇದೆ.

    ಭಾನುವಾರ ಬೆಳಗ್ಗೆ ರೇವಣ್ಣರಿಂದ ಹೇಳಿಕೆ ಪಡೆಯಲಿರುವ ಎಸ್ಐಟಿ ಅಧಿಕಾರಿಗಳು, ಸಂಜೆ ನ್ಯಾಯಾಧೀಶರ ಮುಂದೆ ಹಾಜರು ಪಡಿಸುವ ಸಾಧ್ಯತೆಗಳಿವೆ.

  • HD Revanna Arrest: ಮಹಿಳೆಯರನ್ನು ಕಾಡಿಸಿ, ಪೀಡಿಸಿ, ಅಪಹರಿಸಿದ್ದರಲ್ಲಿ ಪ್ರಮುಖ ಆರೋಪಿ ಎಂದ ಕಾಂಗ್ರೆಸ್

    HD Revanna Arrest: ಮಹಿಳೆಯರನ್ನು ಕಾಡಿಸಿ, ಪೀಡಿಸಿ, ಅಪಹರಿಸಿದ್ದರಲ್ಲಿ ಪ್ರಮುಖ ಆರೋಪಿ ಎಂದ ಕಾಂಗ್ರೆಸ್

    ಬೆಂಗಳೂರು: ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅವರನ್ನು ಬಂಧಿಸಲಾಗಿದೆ.  ಈ ಸಂಬಂಧ ಕಾಂಗ್ರೆಸ್‌, ಮಹಿಳೆಯರನ್ನು ಕಾಡಿಸಿ, ಪೀಡಿಸಿ, ಅಪಹರಿಸಿದ್ದರಲ್ಲಿ ಪ್ರಮುಖ ಆರೋಪಿ ಎಂದು ಹೇಳಿದೆ.

    ಕಾಂಗ್ರೆಸ್‌ ಎಕ್ಸ್‌ನಲ್ಲೇನಿದೆ..?: ಮೋದಿಯವರ ಪ್ರಜ್ವಲ ಗ್ಯಾರಂಟಿಯಡಿಯಲ್ಲಿ ಮೊದಲ ಬಂಧನ ಆಗಿದೆ. ಈ ಬಂಧನ ಜನುಮಜನುಮದ ಅನುಬಂಧನ..? ಮಹಿಳಾ ಪೀಡಕರು, ಮಹಿಳಾ ಅಪಹರಣಕಾರರು, ಅತ್ಯಾಚಾರಿಗಳನ್ನು ಕಂಡರೇ ಮೋದಿಗೆ ಎಲ್ಲಿಲ್ಲದ ಪ್ರೀತಿ. ಬಿಜೆಪಿ ಬೆಂಬಲಿತ ಅಭ್ಯರ್ಥಿ ಪ್ರಜ್ವಲ್ ರೆವಣ್ಣ ಜೊತೆಗೆ ಎನ್‍ಡಿಎ ಮೈತ್ರಿಕೂಟದ ಸ್ಟಾರ್ ಪ್ರಚಾರಕ ರೇವಣ್ಣ ಅವರೂ ಮಹಿಳೆಯರನ್ನು ಕಾಡಿಸಿ, ಪೀಡಿಸಿ, ಅಪಹರಿಸಿದವರಲ್ಲಿ ಪ್ರಮುಖ ಆರೋಪಿ. ಮಹಿಳಾ ಪೀಡಕ ಆರೋಪಿಯ ಕೈಯನ್ನು ಗಟ್ಟಿಯಾಗಿ ಹಿಡಿದಿರುವ ಮೋದಿಯವರು ದೇಶಕ್ಕೆ ಯಾವ ಸಂದೇಶ ಕೊಡಲು ಹೊರಟಿದ್ರು ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

    ಬಂಧನದ ಬೆನ್ನಲ್ಲೇ ಎಕ್ಸ್‌ ಮಾಡಿ, ಮಹಿಳೆಯರ ಮಾನ ಪ್ರಾಣ ಘನತೆ ಎತ್ತಿ ಹಿಡಿಯುವಲ್ಲಿ ನಮ್ಮ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ಹೆಚ್‍ಡಿ ರೇವಣ್ಣರನ್ನು ಬಂಧಿಸಿದ ಎಸ್‍ಐಟಿ ತಂಡ ಮಹಿಳಾ ಪೀಡನೆಯ ವಿಕೃತ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಲಿದೆ. ಮಹಿಳೆಯರ ರಕ್ಷಣೆಗೆ ನಮ್ಮ ಸರ್ಕಾರದ ಬದ್ಧತೆ ಅಚಲವಾಗಿರುತ್ತದೆ ಎಂದು ಕಾಂಗ್ರೆಸ್ ತಿಳಿಸಿದೆ.

    ರೇವಣ್ಣ ಬಂಧನದ ಬಗ್ಗೆ ಸಿಎಂ-ಡಿಸಿಎಂ ಕೂಡ ಮಾತಾಡಿದ್ದಾರೆ. ಇದೇ ವೇಳೆ ಜೆಡಿಎಸ್ ನಾಯಕರು ಎಚ್ಚರಿಕೆಯ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ. ಹೆಚ್‍ಡಿ ರೇವಣ್ಣ ಅರೆಸ್ಟ್ ಆಗಿದ್ದಾರೆ. ಕಾನೂನು ಪ್ರಕಾರವೇ ಅವರು ನಡೆದುಕೊಳ್ಳಲಿದ್ದಾರೆ ಎಂದು ಜಿಟಿ ದೇವೇಗೌಡ ತಿಳಿಸಿದ್ದಾರೆ. ಸದ್ಯ ಬಿಜೆಪಿ ನಾಯಕರು ಮೌನಕ್ಕೆ ಶರಣಾಗಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಕೇಂದ್ರ ಸಚಿವ ಅಮಿತ್ ಶಾ ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್‍ನಲ್ಲಿ ಉಳಿದುಕೊಂಡಿದ್ದು, ಸದ್ಯದ ಬೆಳವಣಿಗೆಗಳ ಬಗ್ಗೆ ಮಹತ್ವದ ಚರ್ಚೆ ನಡೆಸಿದ್ದಾರೆ.. ಮುಂದೇನು ಮಾಡಬೇಕು ಎಂಬ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

  • ನಾವು ಇದರಲ್ಲಿ ಮಧ್ಯಪ್ರವೇಶ ಮಾಡಲ್ಲ- ರೇವಣ್ಣ ಬಂಧನಕ್ಕೆ ಸಿಎಂ ಫಸ್ಟ್‌ ರಿಯಾಕ್ಷನ್‌

    ನಾವು ಇದರಲ್ಲಿ ಮಧ್ಯಪ್ರವೇಶ ಮಾಡಲ್ಲ- ರೇವಣ್ಣ ಬಂಧನಕ್ಕೆ ಸಿಎಂ ಫಸ್ಟ್‌ ರಿಯಾಕ್ಷನ್‌

    ಚಿಕ್ಕೋಡಿ: ಮಾಜಿ ಸಚಿವ ಹೆಚ್‌.ಡಿ ರೇವಣ್ಣ (HD Revanna) ಪ್ರಕರಣದಲ್ಲಿ ನಾವು ಮಧ್ಯಪ್ರವೇಶ ಮಾಡಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು.

    ರೇವಣ್ಣ ಬಂಧನ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಂಬಂಧ ನಾನು ಪೊಲೀಸರ ಜೊತೆ ಮಾತನಾಡುತ್ತೇನೆ. ನಾವು ಇದರಲ್ಲಿ ಮಧ್ಯಪ್ರವೇಶ ಮಾಡಲ್ಲ. ಅವರು ಅಪಹರಣ ಪ್ರಕರಣವೊಂದರ ಕುರಿತು ನಿರೀಕ್ಷಣಾ ಜಾಮೀನಿಗೆ ಅರ್ಜಿ ಹಾಕಿದ್ದರು. ಆದರೆ ಅವರಿಗೆ ಅರ್ಜಿ ವಜಾ ಆಗಿದ್ದು, ಜಾಮೀನು ಸಿಕ್ಕಿಲ್ಲ. ಹೀಗಾಗಿ ಅವರನ್ನು ಕಷ್ಟಡಿಗೆ ತೆಗೆದುಕೊಂಡಿರಬೇಕು ಅನಿಸತ್ತೆ ಎಂದರು.

    ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್‌.ಡಿ ರೇವಣ್ಣ ವಿರುದ್ಧ ಮೈಸೂರಿನಲ್ಲಿ ದೂರು ದಾಖಲಾಗಿತ್ತು. ಈ ಬೆನ್ನಲ್ಲೇ ನಿರೀಕ್ಷಣಾ ಜಾಮೀನು ಕೋರಿ ರೇವಣ್ಣ ಅವರು ಕೋರ್ಟ್‌ ಮೊರೆ ಹೋಗಿದ್ದರು. ಅಂತೆಯೇ ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆಯಿತು. ಸುಮಾರು 1 ಮುಕ್ಕಾಲು ಗಂಟೆ ಕೋರ್ಟ್‌ ನಲ್ಲಿ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ಅರ್ಜಿ ವಜಾಗೊಳಿಸಿ ಆದೇಶ ಪ್ರಕಟಿಸಿದರು.

    ಇತ್ತ ಅರ್ಜಿ ವಜಾ ಆಗುತ್ತಿದ್ದಂತೆಯೇ ಹೆಚ್.ಡಿ ದೇವೇಗೌಡರ ನಿವಾಸದಿಂದ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಬಳಿಕ ಅಲ್ಲಿಂದ ಸಿಐಡಿ ಕಚೇರಿಗೆ ಕರೆದೊಯ್ದಿದ್ದಾರೆ. ಇದನ್ನೂ ಓದಿ: ಕಿಡ್ನಾಪ್‌ ಕೇಸಲ್ಲಿ ಹೆಚ್‌.ಡಿ ರೇವಣ್ಣ ಅರೆಸ್ಟ್