Tag: HDKumaraswami

  • ಕುಮಾರಸ್ವಾಮಿ ಎಲ್ಲಾ ಕ್ಷೇತ್ರದಲ್ಲೂ ಇಬ್ಬಿಬ್ಬರನ್ನು ಇಟ್ಟಿರ್ತಾರೆ: ಎಸ್.ಆರ್ ಶ್ರೀನಿವಾಸ್

    ಕುಮಾರಸ್ವಾಮಿ ಎಲ್ಲಾ ಕ್ಷೇತ್ರದಲ್ಲೂ ಇಬ್ಬಿಬ್ಬರನ್ನು ಇಟ್ಟಿರ್ತಾರೆ: ಎಸ್.ಆರ್ ಶ್ರೀನಿವಾಸ್

    ತುಮಕೂರು: ನಮ್ಮ ನಾಯಕರಾಗಿರುವ ಹೆಚ್.ಡಿ ಕುಮಾರಸ್ವಾಮಿಯವರು ಎಲ್ಲಾ ಕ್ಷೇತ್ರದಲ್ಲೂ ಇಬ್ಬಿಬ್ಬರು ಅಭ್ಯರ್ಥಿಗಳನ್ನ ಇಟ್ಟಿರ್ತಾರೆ. ಅದು ನಮ್ಮ ನಾಯಕರ ಗುಣ ಎಂದು ಗುಬ್ಬಿ ಶಾಸಕ ಎಸ್.ಆರ್ ಶ್ರೀನಿವಾಸ್ ಮಾಜಿ ಮುಖ್ಯಮಂತ್ರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಗುಬ್ಬಿ ತಾಲೂಕಿನ ನಿಟ್ಟೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ನಾಯಕರ ಗುಣವೇ ಅಂತದ್ದು. ಎಲ್ಲಾ ಕ್ಷೇತ್ರದಲ್ಲೂ ಇಬ್ಬರು ಅಭ್ಯರ್ಥಿಗಳನ್ನ ಇಟ್ಟಿರುತ್ತಾರೆ. ನಮ್ಮ ತಾಲೂಕಿಗೆ ಬೇರೆಯವರನ್ನೂ ಕರೆತಂದು ಪರಿಚಯಿಸುತ್ತಿದ್ದಾರೆ. ಇರೋರ ಮೇಲೆ ಇನ್ನೊಬ್ಬರನ್ನು ಎತ್ತಿಕಟ್ಟೋದು ಪಕ್ಷದಲ್ಲಿ ನಿರಂತರವಾಗಿದೆ. ಪಕ್ಷದಲ್ಲಿ ಈ ಹಿಂದೆಯಿಂದಲೂ ಈ ಪ್ರಕ್ರಿಯೆಗಳು ನಡೆದುಕೊಂಡು ಬಂದಿದ್ದು, ಒಬ್ಬರ ಮೇಲೆ ಇನ್ನೊಬ್ಬರನ್ನು ಛೂ ಬೀಡಲಾಗುತ್ತಿದೆ ಎಂದು ಪರೋಕ್ಷವಾಗಿ ಕುಮಾರಸ್ವಾಮಿ ಅವರ ವಿರುದ್ಧ ಕಿಡಿಕಾರಿದರು.ಇದನ್ನೂ ಓದಿ: ಕಾಂಗ್ರೆಸ್ ಆಪರೇಷನ್ ಬಗ್ಗೆ ಯಡಿಯೂರಪ್ಪ ವಾರ್ನಿಂಗ್

    ರಾಜ್ಯದ ಎಲ್ಲಾ ಕ್ಷೇತ್ರದಲ್ಲೂ ಇದೇ ಪ್ರವೃತ್ತಿಯನ್ನು ಮುಂದುವರಿಸುತ್ತಿದ್ದಾರೆ. ಇಷ್ಟು ದಿನ ನಮ್ಮ ಕ್ಷೇತ್ರದಲ್ಲಿ ಯಾರು ಅಭ್ಯರ್ಥಿಗಳು ಸಿಕ್ಕಿರಲಿಲ್ಲ. ಈಗ ಸಿಕ್ಕಿದ್ದಾರೆ ಅದಕ್ಕೆ ನನ್ನ ಮೇಲೆ ಎತ್ತಿಕಟ್ಟಿದ್ದಾರೆ. ನನಗೆ ಕುಮಾರಸ್ವಾಮಿಯ ಮೇಲೆ ಸಿಟ್ಟಿಲ್ಲ. ಯಾವ ಮುನಿಸು ಕೂಡ ಇಲ್ಲ. ಅವರೇ ಎಲ್ಲವನ್ನೂ ಕ್ರಿಯೇಟ್ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಆಪರೇಷನ್ ಪಾಲಿಟಿಕ್ಸ್ ಶುರು – ಬಿಜೆಪಿ, ಜೆಡಿಎಸ್ ಶಾಸಕರಿಗೆ ಡಿಕೆಶಿ ಗಾಳ..?

    ನಾನು ಪಕ್ಷದಲ್ಲೇ ಇದ್ದೇನೆ. ಪಕ್ಷ ಬಿಡುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ಮೊನ್ನೆ ತಾನೆ ಪಕ್ಷದ ಕಾರ್ಯಕ್ರಮಕ್ಕೆ ಹಾಜರಾಗಿ ದೇವೇಗೌಡರನ್ನು ಭೇಟಿ ಮಾಡಿದ್ದೇನೆ. ಇದಾದ ಮೇಲೂ ಇನ್ನೊಬ್ಬರನ್ನು ಚುನಾವಣೆಗೆ ನಿಲ್ಲಿಸಿದರೆ ಸಂತೋಷ ಎಂದರು.

     

  • ಹೆಚ್‍ಡಿಕೆಗೆ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿ-ಐಸಿಯು ನಲ್ಲಿ ಚಿಕಿತ್ಸೆ ಮುಂದುವರಿಕೆ

    ಹೆಚ್‍ಡಿಕೆಗೆ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿ-ಐಸಿಯು ನಲ್ಲಿ ಚಿಕಿತ್ಸೆ ಮುಂದುವರಿಕೆ

    ಬೆಂಗಳೂರು: ಬನ್ನೇರುಘಟ್ಟದಲ್ಲಿರೋ ಅಪೋಲೋ ಆಸ್ಪತ್ರೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರಿಗೆ ನಡೆದ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ.

    ಹತ್ತು ವರ್ಷದ ಹಿಂದೆ ಹೃದಯನಾಳಕ್ಕೆ ಆಳವಡಿಸಿದ್ದ ಟಿಶ್ಯೂ ವಾಲ್ವ್ ಬದಲಾವಣೆ ಮಾಡಲಾಗಿದೆ. 45 ನಿಮಿಷಗಳ ಕಾಲ ನಡೆದ ಆಪರೇಷನ್ ಪೂರ್ಣ ಪ್ರಮಾಣದಲ್ಲಿ ಮುಗಿದಿದ್ದು, ಕುಮಾರಸ್ವಾಮಿ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಮಧ್ಯಾಹ್ನ 12.30ರ ಮೇಲೆ ಕುಮಾರಸ್ವಾಮಿಯವರನ್ನ ವಾರ್ಡ್‍ಗೆ ಶಿಫ್ಟ್ ಮಾಡಲಿದ್ದು ಅಲ್ಲಿವರೆಗೂ ಅವರನ್ನ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗುತ್ತೆ ಎಂದು ಆಸ್ಪತ್ರೆಯ ಮೂಲಗಳಿಂದ ತಿಳಿದುಬಂದಿದೆ.

    ಕುಮಾರಸ್ವಾಮಿ ಅವರು ಬೇಗ ಗುಣಮುಖರಾಗಲಿ ಅಂತ ಜೆಡಿಎಸ್ ಕಾರ್ಯಕರ್ತರು ರಾಜ್ಯದ ಹಲವೆಡೆ ಪೂಜೆ ಪುನಸ್ಕಾರ ನಡೆಸಿದ್ರು. ವಿಜಯಪುರದಲ್ಲಿ ಜೆಡಿಎಸ್ ಮುಖಂಡ ದೇವಾನಂದ ಚವ್ಹಾಣ ಹಾಗೂ ಇನ್ನಿತರರು ಶ್ರೀ ಸಿದ್ದೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ರು.

    ಮಂಡ್ಯದ ವಿದ್ಯಾನಗರದಲ್ಲಿರುವ ವಿದ್ಯಾ ಗಣಪತಿ ದೇವಾಲಯದಲ್ಲಿ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಮೊದಲು ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದ್ರು. ಈಗ ದೇವಾಲಯದ ಆವರಣದಲ್ಲಿ ಮೃತ್ಯುಂಜಯ ಹೋಮ ಕೈಗೊಂಡಿದ್ದಾರೆ. ಹಾಗೇ ಮೈಸೂರಿನಲ್ಲಿ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ನೇತೃತ್ವದಲ್ಲಿ ಮೈಸೂರು ಅರಮನೆ ಬಳಿಯ ಕೋಟೆ ಆಂಜನೇಯಸ್ವಾಮಿ ಹಾಗೂ ವಿನಾಯಕಸ್ವಾಮಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.