Tag: Head Bus

  • ಹೆಡ್ ಬುಷ್ ವಿವಾದಕ್ಕೆ ನಟ ಚೇತನ್ ಎಂಟ್ರಿ: ಖಡಕ್ ಪ್ರತಿಕ್ರಿಯೆ

    ಹೆಡ್ ಬುಷ್ ವಿವಾದಕ್ಕೆ ನಟ ಚೇತನ್ ಎಂಟ್ರಿ: ಖಡಕ್ ಪ್ರತಿಕ್ರಿಯೆ

    ಡಾಲಿ ಧನಂಜಯ್ ನಟನೆಯ ಹೆಡ್ ಬುಷ್  (Head Bus)ವಿವಾದ ನಾನಾ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಅದರಲ್ಲೂ ಧನಂಜಯ್ ಅವರಿಗೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಬೆಂಬಲ ವ್ಯಕ್ತವಾಗುತ್ತಿದ್ದು, ‘ನಿಮ್ಮೊಂದಿಗೆ ನಾವಿದ್ದೇವೆ’ ಎನ್ನುವ ಹ್ಯಾಷ್ ಟ್ಯಾಗ್ ಕೂಡ ಟ್ರೆಂಡ್ ಆಗಿದೆ. ಕೇವಲ ಅಭಿಮಾನಿಗಳು ಮಾತ್ರವಲ್ಲ, ಸಿನಿಮಾ ರಂಗದ ಅನೇಕರು ಧನಂಜಯ್ ಪರ ಧ್ವನಿ ಎತ್ತಿದ್ದಾರೆ.

    ಈ ವಿವಾದದ (Controversy) ಕುರಿತಂತೆ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಅನಿಸಿಕೆಗಳನ್ನು ವ್ಯಕ್ತ ಪಡಿಸಿರುವ ನಟ ಚೇತನ್ (Chetan), ‘ನಾನು ಸಿನಿಮಾ ಅನ್ನು ವೀಕ್ಷಿಸಿದೆ. ಕೆಲವು ವಿಭಾಗಗಳಿಗೆ ಆಕ್ಷೇಪಾರ್ಹ ಎಂದು ಕರೆಯಬಹುದಾದ ಚಲನಚಿತ್ರದ ದೃಶ್ಯಗಳನ್ನು ಕತ್ತರಿಸುವಂತೆ ಒತ್ತಾಯಿಸಲಾಗಿದೆ. ಪ್ರಸ್ತುತ ಬೇಡಿಕೆಗಳು ಸೃಜನಶೀಲ ಸ್ವಾತಂತ್ರ್ಯಗಳಿಗೆ ವಿರುದ್ಧವಾಗಿವೆ. ಸೆನ್ಸಾರ್ ಮಂಡಳಿಯ ಅನುಮತಿ ಪಡೆದ ನಂತರ ಚಿತ್ರ ಮತ್ತು ಚಿತ್ರಣಕ್ಕೆ ಸ್ವಾತಂತ್ರ್ಯ ನೀಡಬೇಕು. ಭಿನ್ನಾಭಿಪ್ರಾಯವು ಪ್ರಜಾಸತ್ತಾತ್ಮಕವಾಗಿದೆ, ಹೊರತು ಬೆದರಿಕೆಗಳಲ್ಲ’ ಎಂದು ಬರೆದುಕೊಂಡಿದ್ದಾರೆ.  ಇದನ್ನೂ ಓದಿ:ದೇಶ-ವಿದೇಶದಲ್ಲಿ ಮಾರ್ದನಿಸ್ತಿರೋ ಗಗ್ಗರ ಶಬ್ಧ- ಅಮೆರಿಕಾದಲ್ಲಿ ಎಂಟೂವರೆ ಕೋಟಿ ಬಾಚಿದ ಕಾಂತಾರ

    ಹೆಡ್ ಬುಷ್ ಸಿನಿಮಾದ ವೀರಗಾಸೆ ವಿವಾದ ಸತತ ಎರಡು ದಿನಗಳಿಂದ ಗಾಂಧಿನಗರದಲ್ಲಿ ಸದ್ದು ಮಾಡುತ್ತಿದೆ. ವೀರಗಾಸೆ ಕಲೆ ಮತ್ತು ವೀರಭದ್ರ ದೇವರಿಗೆ ತಾವು ಅವಮಾನ ಮಾಡಿಲ್ಲ ಎಂದು ಧನಂಜಯ್ (Dolly Dhananjay) ಸೇರಿದಂತೆ ಇಡೀ ಸಿನಿಮಾ ತಂಡ ಹೇಳಿದರೂ, ಆ ದೃಶ್ಯವನ್ನು ಸಿನಿಮಾದಿಂದ ಕೈ ಬಿಡುವಂತೆ ಒತ್ತಾಯಿಸಲಾಗುತ್ತಿದೆ. ನಿನ್ನೆಯಷ್ಟೇ ಧನಂಜಯ್ ಮತ್ತು ನಿರ್ದೇಶಕ ಶೂನ್ಯ ಈ ವಿಚಾರವಾಗಿ ಕ್ಷಮೆ ಕೇಳಿದರೂ, ಪ್ರತಿಭಟನೆ ಮಾತ್ರ ನಿಂತಿಲ್ಲ.

    ವೀರಗಾಸೆಗೆ ತಾವು ಅವಮಾನ ಮಾಡಿಲ್ಲದಿದ್ದರೂ, ಕ್ಷಮೆ ಕೇಳಿದ್ದೇವೆ. ಆದರೂ, ವಿವಾದ ಕಾವು ಕಡಿಮೆ ಆಗುತ್ತಿಲ್ಲ. ಸಿನಿಮಾದಿಂದ ದೃಶ್ಯವನ್ನೇ ಕತ್ತರಿಸುವಂತೆ ಒತ್ತಡ ಏರಲಾಗುತ್ತಿದೆ. ಆದರೆ, ಯಾವುದೇ ಕಾರಣಕ್ಕೂ ಆ ದೃಶ್ಯವನ್ನು ಕೈ ಬಿಡುವ ಪ್ರಶ್ನೆಯೇ ಇಲ್ಲವೆಂದು ಸಿನಿಮಾ ಟೀಮ್ ಹೇಳಿಕೊಂಡಿದೆ. ವಿರೋಧಿಸುವವರಿಗಿಂತಲೂ ಅದನ್ನು ಮೆಚ್ಚಿಕೊಂಡವರ ಸಂಖ್ಯೆ ದೊಡ್ಡದಿದೆ ಎನ್ನುವ ಕಾರಣಕ್ಕಾಗಿ ಅದನ್ನು ಸಿನಿಮಾದಲ್ಲಿ ಮುಂದುವರೆಸುವ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಸಿನಿಮಾದಿಂದ ವೀರಗಾಸೆ ದೃಶ್ಯ ಕತ್ತರಿಸಲ್ಲ ಎಂದ ‘ಹೆಡ್ ಬುಷ್’ ಟೀಮ್

    ಸಿನಿಮಾದಿಂದ ವೀರಗಾಸೆ ದೃಶ್ಯ ಕತ್ತರಿಸಲ್ಲ ಎಂದ ‘ಹೆಡ್ ಬುಷ್’ ಟೀಮ್

    ಹೆಡ್ ಬುಷ್ (Head Bus) ಸಿನಿಮಾದ ವೀರಗಾಸೆ ವಿವಾದ ಸತತ ಎರಡು ದಿನಗಳಿಂದ ಗಾಂಧಿನಗರದಲ್ಲಿ ಸದ್ದು ಮಾಡುತ್ತಿದೆ. ವೀರಗಾಸೆ ಕಲೆ ಮತ್ತು ವೀರಭದ್ರ ದೇವರಿಗೆ ತಾವು ಅವಮಾನ ಮಾಡಿಲ್ಲ ಎಂದು ಧನಂಜಯ್ (Dolly Dhananjay) ಸೇರಿದಂತೆ ಇಡೀ ಸಿನಿಮಾ ತಂಡ ಹೇಳಿದರೂ, ಆ ದೃಶ್ಯವನ್ನು ಸಿನಿಮಾದಿಂದ ಕೈ ಬಿಡುವಂತೆ ಒತ್ತಾಯಿಸಲಾಗುತ್ತಿದೆ. ನಿನ್ನೆಯಷ್ಟೇ ಧನಂಜಯ್ ಮತ್ತು ನಿರ್ದೇಶಕ ಶೂನ್ಯ ಈ ವಿಚಾರವಾಗಿ ಕ್ಷಮೆ ಕೇಳಿದರೂ, ಪ್ರತಿಭಟನೆ ಮಾತ್ರ ನಿಂತಿಲ್ಲ.

    ವೀರಗಾಸೆಗೆ (Veeragase) ತಾವು ಅವಮಾನ ಮಾಡಿಲ್ಲದಿದ್ದರೂ, ಕ್ಷಮೆ ಕೇಳಿದ್ದೇವೆ. ಆದರೂ, ವಿವಾದ (Controversy) ಕಾವು ಕಡಿಮೆ ಆಗುತ್ತಿಲ್ಲ. ಸಿನಿಮಾದಿಂದ ದೃಶ್ಯವನ್ನೇ ಕತ್ತರಿಸುವಂತೆ ಒತ್ತಡ ಏರಲಾಗುತ್ತಿದೆ. ಆದರೆ, ಯಾವುದೇ ಕಾರಣಕ್ಕೂ ಆ ದೃಶ್ಯವನ್ನು ಕೈ ಬಿಡುವ ಪ್ರಶ್ನೆಯೇ ಇಲ್ಲವೆಂದು ಸಿನಿಮಾ ಟೀಮ್ ಹೇಳಿಕೊಂಡಿದೆ. ವಿರೋಧಿಸುವವರಿಗಿಂತಲೂ ಅದನ್ನು ಮೆಚ್ಚಿಕೊಂಡವರ ಸಂಖ್ಯೆ ದೊಡ್ಡದಿದೆ ಎನ್ನುವ ಕಾರಣಕ್ಕಾಗಿ ಅದನ್ನು ಸಿನಿಮಾದಲ್ಲಿ ಮುಂದುವರೆಸುವ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ:ಚೇತನ್ ಕಾಂಟ್ರವರ್ಸಿಗೆ ಪ್ರಗತಿ ರಿಷಬ್ ಶೆಟ್ಟಿ ಪ್ರತಿಕ್ರಿಯೆ

    ಡಾಲಿ ಧನಂಜಯ್ ನಟನೆಯ ಹೆಡ್ ಬುಷ್ ಸಿನಿಮಾದ ವಿವಾದ ಇದೀಗ ರಾಜಕೀಯ ತಿರುವು ಪಡೆದುಕೊಂಡಿದೆ. ಅದರಲ್ಲೂ ಪ್ರಾಂತ್ಯ, ಭಾಷೆಯ ವಿಚಾರವನ್ನು ಇಲ್ಲಿಗೆ ಎಳೆತರಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ  ಸಚಿವ ಸುನೀಲ್ ಕುಮಾರ್ ವೀರಗಾಸೆ ಕುರಿತಾಗಿ ಟ್ವಿಟ್ ಮಾಡುತ್ತಿದ್ದಂತೆಯೇ ಅನೇಕರು ಅವರ ಮೇಲೆ ಮುಗಿ ಬಿದ್ದಿದ್ದಾರೆ. ಕೇವಲ ಒಂದು ಸಮುದಾಯಕ್ಕೆ ಮಾತ್ರ ಮಾಸಾಶನ ಕೊಟ್ಟಿದ್ದೀರಿ. ವೀರಗಾಸೆ, ಕಂಸಾಳೆ ಹೀಗೆ ಎಲ್ಲ ಜಾನಪದ ಪ್ರಕಾರದ ಕಲಾವಿದರಿಗೂ ಕೊಡಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಮಾಡಿದ್ದಾರೆ.

    ವೀರಗಾಸೆಗೆ ಅವಮಾನ ಆಗಿದ್ದರೆ, ಅದನ್ನು ಚಿತ್ರತಂಡ ಸರಿಪಡಿಸಿ ಎಂದು ಸಚಿವರು ಟ್ವಿಟ್ ಮಾಡಿ, ತಮ್ಮ ಕಾಳಜಿ ತೋರುತ್ತಿದ್ದಂತೆಯೇ ಬರೀ ನಿಮ್ಮ ಭಾಗದ ಕಲಾವಿದರಿಗೆ ಮಾತ್ರ ಮಾಸಾಶನ ನೀಡಿ ತಾರತಮ್ಯ ತೋರುತ್ತಿದ್ದೀರಿ. ನಿಮಗೆ ವೀರಗಾಸೆಯ ಬಗ್ಗೆ ಅಷ್ಟೊಂದು ಕಾಳಜಿ ಇದ್ದರೆ, ಕೂಡಲೇ ಅವರಿಗೂ ಮಾಸಾಶನ ನೀಡಬೇಕು ಎಂದು ಹಲವರು ಆಗ್ರಹಿಸಿದ್ದಾರೆ. ಇದರಿಂದಾಗಿ ಸಚಿವರು ಇರಸುಮುರಸು ಎದುರಿಸುವಂತಾಗಿದೆ.

    ಸಾವಿರಾರು ಜನರು ಸಚಿವರಿಗೆ ಟ್ವಿಟ್ ಮಾಡಿ, ಟ್ಯಾಗ್ ಮಾಡಿದ್ದಾರೆ. ಆದರೆ, ಈ ಕುರಿತು ಸುನೀಲ್ ಕುಮಾರ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅಲ್ಲದೇ, ಭರವಸೆಯನ್ನೂ ಕೊಟ್ಟಿಲ್ಲ. ಸಚಿವರ ಈ ನಡೆ ಭಾರೀ ವಿರೋಧಕ್ಕೂ ಕಾರಣವಾಗಿದೆ. ಡಾಲಿ ಧನಂಜಯ್ ಕೂಡ ಪತ್ರಿಕಾಗೋಷ್ಠಿಯಲ್ಲಿ ಮಾಸಾಶನದ ಬಗ್ಗೆ ಮಾತನಾಡಿದ್ದಾರೆ. ಸರಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. ಹೀಗಾಗಿ ಸರಕಾರ ಇದಕ್ಕೆ ಯಾವ ರೀತಿಯಲ್ಲಿ ಪ್ರತಿಕ್ರಿಯೆ ನೀಡತ್ತೋ ಕಾದು ನೋಡಬೇಕು.

    Live Tv
    [brid partner=56869869 player=32851 video=960834 autoplay=true]

  • ‘ಹೆಡ್ ಬುಷ್’ ಚಿತ್ರದ ವಿರುದ್ಧ ಕರಗ ಸಮಿತಿಯೂ ಆಕ್ರೋಶ: ಎರಡೆರಡು ವಿವಾದಲ್ಲಿ ಡಾಲಿ

    ‘ಹೆಡ್ ಬುಷ್’ ಚಿತ್ರದ ವಿರುದ್ಧ ಕರಗ ಸಮಿತಿಯೂ ಆಕ್ರೋಶ: ಎರಡೆರಡು ವಿವಾದಲ್ಲಿ ಡಾಲಿ

    ಡಾಲಿ ಧನಂಜಯ್ (Dhananjay) ನಟನೆಯ ಹೆಡ್ ಬುಷ್ (Head Bus) ಸಿನಿಮಾ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಬೆನ್ನಲ್ಲೇ ಎರಡೆರಡು ವಿವಾದಗಳು ಚಿತ್ರತಂಡಕ್ಕೆ ಅಂಟಿಕೊಂಡಿವೆ. ಈಗಾಗಲೇ ವೀರಗಾಸೆ ಕಲಾವಿದರಿಗೆ ಚಿತ್ರದಲ್ಲಿ ಅವಮಾನ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತವಾಗಿತ್ತು, ಇದೀಗ ಚಿತ್ರದಲ್ಲಿ ಕರಗ ಆಚರಣೆ ಬಗ್ಗೆ ಮತ್ತು ಕರಗ ಹೊತ್ತವರ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಆರೋಪ ಕೇಳಿ ಬಂದಿದೆ.

    ಹೆಡ್ ಬುಷ್ ಚಿತ್ರದಲ್ಲಿ ದ್ರೌಪದಮ್ಮನ ಕರಗಕ್ಕೆ ಅವಮಾನ ಮಾಡಲಾಗಿದೆ ಎಂದು ಧರ್ಮರಾಯ ದೇವಸ್ಥಾನ ಅಧ್ಯಕ್ಷ ಸತೀಶ್ ಆರೋಪ ಮಾಡಿದ್ದಾರೆ. ಹಾಗಾಗಿ ಚಿತ್ರದಲ್ಲಿ ಕರಗದ ಬಗ್ಗೆ ತೋರಿಸಲಾದ ಸೀನ್‌ಗಳನ್ನು ತೆಗೆಯುವಂತೆ ಅವರು ಆಗ್ರಹ ಮಾಡಿದ್ದಾರೆ. ಈ ಕುರಿತು ಮಾತನಾಡಿರುವ ಸತೀಶ್, ‘ಸಿನಿಮಾದಲ್ಲಿ ತೋರಿಸಲಾಗಿದ್ದು ನಮ್ಮ ತಿಗಳರ ಪೇಟೆಯ ಕರಗ ಅಲ್ಲ. ಹೆಸರಘಟ್ಟದ ಕರಗವನ್ನು ತೋರಿಸಿ, ತಿಗಳರ ಕರಗ ಎಂದು ತೋರಿಸಲಾಗಿದೆ. ಚಿತ್ರದಲ್ಲಿ ಜುಜುಬಿ ಕರಗ ಅಂತ ಹೆಸರು ಬಳಕೆ ಮಾಡಲಾಗಿದೆ. ಇದು ಸರಿಯಲ್ಲ’ ಎಂದಿದ್ದಾರೆ.

    ಅಷ್ಟೇ ಅಲ್ಲದೇ, ಸಿನಿಮಾದಲ್ಲಿ ಅರ್ಚಕರಾದ ಶಿವಶಂಕರ್ ಎಂಬುವರ ಹೆಸರು ಕೂಡ ದುರ್ಬಳಕೆ ಮಾಡಲಾಗಿದೆ ಎಂದು ಸತೀಶ್ ಆರೋಪಿಸುತ್ತಾರೆ. ಅವರನ್ನು ಏಕವಚನದಲ್ಲಿ ಸಂಬೋಧಿಸುವುದು ಸರಿಯಲ್ಲ ಎಂದಿದ್ದಾರೆ. ಕರಗಕ್ಕೆ (Karaga) ಅನೇಕ ಸಂಪ್ರಯದಾಯಗಳು ಇವೆ. ಅದೆಲ್ಲವನ್ನು ಸಿನಿಮಾದಲ್ಲಿ ಉಲ್ಲಂಘನೆ ಮಾಡಲಾಗಿದೆ. ಇದಕ್ಕಾಗಿ ಇಂದು ನಾವೆಲ್ಲ ಚರ್ಚಿಸಿ ಮೊದಲು ಫಿಲ್ಮ್ ಚೇಂಬರ್‌ಗೆ ದೂರು ನೀಡುತ್ತೇವೆ ಎನ್ನುತ್ತಾರೆ. ಇದನ್ನೂ ಓದಿ:ದೇಶ-ವಿದೇಶದಲ್ಲಿ ಮಾರ್ದನಿಸ್ತಿರೋ ಗಗ್ಗರ ಶಬ್ಧ- ಅಮೆರಿಕಾದಲ್ಲಿ ಎಂಟೂವರೆ ಕೋಟಿ ಬಾಚಿದ ಕಾಂತಾರ

    ‘ಹೆಡ್ ಬುಷ್’ ಸಿನಿಮಾದಲ್ಲಿ ವೀರಭದ್ರ ದೇವರ ವೀರಗಾಸೆಗೆ ಅವಮಾನ ಮಾಡಲಾಗಿದೆ ಎಂದು ವೀರಗಾಸೆ ಕಲಾವಿದರು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ಸಾಹಸ ಸನ್ನಿವೇಶದಲ್ಲಿ ವೀರಗಾಸೆ ಕಲಾವಿದರಿಗೆ ಒದೆಯಲಾಗಿದೆ. ಅದು ಕಲೆ ಮತ್ತು ವೀರಭದ್ರ ದೇವರಿಗೆ ಮಾಡಿದ ಅಪಮಾನ ಎಂದು ಕಲಾವಿದರು ಆಕ್ಷೇಪಿಸಿದ್ದಾರೆ. ಇದೀಗ ವಿವಾದವಾಗಿ ಮಾರ್ಪಟ್ಟಿದೆ.

    ವೀರಗಾಸೆ (Veeragase) ಕಲೆಗೆ ಮತ್ತು ಅದಕ್ಕೆ ಸಂಬಂಧಿಸಿದ ವೀರಭದ್ರ ದೇವರಿಗೆ ಅವಮಾನ ಮಾಡಿದ ನಿರ್ದೇಶಕರು, ಕಲಾವಿದರು ಹಾಗೂ ನಿರ್ಮಾಪಕರು ಕೂಡಲೇ ಕ್ಷಮೆ ಕೇಳಬೇಕು ಹಾಗೂ ಆ ದೃಶ್ಯವನ್ನು ಸಿನಿಮಾದಿಂದ ಕೈ ಬಿಡಬೇಕು ಎಂಬ ಆಗ್ರಹ ಕೂಡ ಕೇಳಿ ಬರುತ್ತಿದೆ. ಈ ಕುರಿತು ನಟ ಧನಂಜಯ್ ಪ್ರತಿಕ್ರಿಯೆ ನೀಡಿದ್ದಾರೆ. ತಾನೂ ಕೂಡ ವೀರಭದ್ರ ದೇವರ ಆರಾಧಕ ಆಗಿರುವುದರಿಂದ ಯಾವುದೇ ಕಾರಣಕ್ಕೂ ಅವಮಾನ ಮಾಡಿಲ್ಲ ಎಂದು ಹೇಳಿದ್ದಾರೆ.

    ಧನಂಜಯ್ ಈವರೆಗೂ ಯಾವುದೇ ವಿವಾದಕ್ಕೆ ಒಳಗಾದವರು ಅಲ್ಲ. ಅದರಲ್ಲೂ ಶರಣ ಪರಂಪರೆಯನ್ನು ಓದಿಕೊಂಡು ಬೆಳೆದವರು. ಕಲೆ ಮತ್ತು ಸಂಸ್ಕೃತಿ ಬಗ್ಗೆ ಅಪಾರ ಅಭಿಮಾನ ಹೊಂದಿದವರು. ಈ ಕಾರಣದಿಂದಾಗಿಯೇ ಇಂದು ವೀರಗಾಸೆ ಕಲಾವಿದರನ್ನು ಧನಂಜಯ್ ಭೇಟಿ ಮಾಡುತ್ತಿದ್ದಾರೆ. ಅವರೊಂದಿಗೆ ಆ ದೃಶ್ಯದ ಕುರಿತು ವಿವರಣೆಯನ್ನು ಕೊಡಲಿದ್ದಾರೆ. ಆ ದೃಶ್ಯ ಹಾಗೂ ಅದನ್ನು ಸಿನಿಮಾದಲ್ಲಿ ಯಾಕೆ ಆ ರೀತಿ ಅಳವಡಿಸಲಾಗಿದೆ ಎನ್ನುವ ಕುರಿತು ಚರ್ಚಿಸಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]