Tag: Head Bush

  • ಡಾಲಿಗೆ ಜೋಡಿಯಾದ ಆರ್‌ಎಕ್ಸ್ 100 ಚೆಲುವೆ

    ಡಾಲಿಗೆ ಜೋಡಿಯಾದ ಆರ್‌ಎಕ್ಸ್ 100 ಚೆಲುವೆ

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ಡಾಲಿ ಧನಂಜಯ್‍ರ ಹೊಸ ಸಿನಿಮಾಕ್ಕೆ ಟಾಲಿವುಡ್ ನಟಿ ಪಾಯಲ್ ರಜಪೂತ್ ಜೋಡಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

    70-80ರ ಕಾಲದಲ್ಲಿ ಅಂಡರ್‌ವರ್ಡ್ ಡಾನ್ ಆಗಿದ್ದ, ಜಯರಾಜ್ ಜೀವನ ಕಥೆ ಆಧರಿಸಿ ಸ್ಯಾಂಡಲ್‍ವುಡ್‍ನಲ್ಲಿ ಸಿನಿಮಾವೊಂದು ತಯಾರಾಗುತ್ತಿದ್ದು, ಈ ಸಿನಿಮಾಕ್ಕೆ ‘ಹೆಡ್ ಬುಷ್’ ಎಂಬ ಟೈಟಲ್ ಇಡಲಾಗಿದೆ. ಈ ಸಿನಿಮಾದಲ್ಲಿ ಡಾಲಿ ಧನಂಜಯ್ ನಾಯಕ ನಟನಾಗಿ ಕಾಣಿಸಿಕೊಳ್ಳುತ್ತಿದ್ದು, ಡಾಲಿಗೆ ಜೋಡಿಯಾಗಿ ಟಾಲಿವುಡ್ ನಟಿ ಪಾಯಲ್ ರಜಪೂತ್ ಅಭಿನಯಿಸಲಿದ್ದಾರೆ. ಇದೇ ಮೊದಲ ಬಾರಿಗೆ ಪಾಯಲ್ ರಾಜ್‍ಪೂತ್ ಕನ್ನಡದಲ್ಲಿ ಅಭಿನಯಿಸುತ್ತಿದ್ದು ಬಹಳ ಎಕ್ಸ್‌ಸೈಟ್ ಆಗಿದ್ದಾರೆ. ಅಲ್ಲದೇ ಡಾನ್ ಜಯರಾಜ್ ಪ್ರೇಯಸಿ ಇಂದಿಗೂ ಪಂಜಾಬ್‍ನಲ್ಲಿ ಇಬ್ಬರು ಮಕ್ಕಳೊಂದಿಗೆ ಜೀವನ ನಡೆಸುತ್ತಿದ್ದು, ಅವರನ್ನು ಭೇಟಿ ಮಾಡಲು ಪಾಯಲ್ ಕಾತುರದಿಂದ ಕಾಯುತ್ತಿದ್ದಾರೆ.

    2017ರಲ್ಲಿ ಪಂಜಾಬಿ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಪಾಯಲ್ ರಜಪೂತ್ ಟಾಲಿವುಡ್‍ನ ಆರ್‌ಎಕ್ಸ್ 100 ಸಿನಿಮಾದಲ್ಲಿ ಬೋಲ್ಡ್ ಆಗಿ ಅಭಿನಯಿಸುವ ಮೂಲಕ ಪಡ್ಡೆಹುಡುಗರ ಮೈ ಚಳಿಬಿಡಿಸಿದ್ದರು. ಅಲ್ಲದೇ ಈ ಸಿನಿಮಾ ಟಾಲಿವುಡ್‍ನಲ್ಲಿ ಬಹುದೊಡ್ಡ ಸಕ್ಸಸ್ ಕೂಡ ಕಂಡಿತ್ತು. ನಂತರ ಆರ್​ಡಿಎಕ್ಸ್​ ಲವ್​  ಸಿನಿಮಾ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ಅಭಿನಯಿಸಿದ್ದ ಪಾಯಲ್ ಇದೇ ಮೊದಲ ಬಾರಿಗೆ ಕನ್ನಡ ಸಿನಿಮಾಕ್ಕೆ ಬಣ್ಣಹಚ್ಚಲಿದ್ದಾರೆ.

    ‘ಡೈರೆಕ್ಟರ್ ಸ್ಪೆಶಲ್’ ಸಿನಿಮಾದ ಮೂಲಕ ಸ್ಯಾಂಡಲ್‍ವುಡ್‍ಗೆ ಪಾದಾರ್ಪಣೆ ಮಾಡಿದ ಧನಂಜಯ್ ಸಾಕಷ್ಟು ಸಿನಿಮಾಗಳಲ್ಲಿ ನಾಯಕರಾಗಿ ಕಾಣಿಸಿಕೊಂಡಿದ್ದು, ಟಗರು ಸಿನಿಮಾದಲ್ಲಿ ಮೊದಲ ಬಾರಿಗೆ ನೆಗೆಟಿವ್ ಶೇಡ್‍ನಲ್ಲಿ ಕಾಣಿಸಿಕೊಳ್ಳುವ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದರು. ಇದೀಗ ಸಾಕಷ್ಟು ಸಿನಿಮಾಗಳಲ್ಲಿ ಧನಂಜಯ್ ನೆಗೆಟಿವ್ ಶೇಡ್‍ನಲ್ಲಿಯೇ ಹೆಚ್ಚಾಗಿ ಮಿಂಚುತ್ತಿದ್ದಾರೆ.

    ಸದ್ಯ ಡಾಲಿ ಧನಂಜಯ್ ಹಾಗೂ ಪಾಯಲ್ ಹೆಡ್ ಬುಷ್ ಸಿನಿಮಾದಲ್ಲಿ ಸ್ಕ್ರೀನ್ ಶೇರ್ ಮಾಡುತ್ತಿದ್ದು, ಈ ಜೋಡಿ ಪ್ರೇಕ್ಷಕರನ್ನು ಹೇಗೆ ಮೋಡಿ ಮಾಡಲಿದ್ದಾರೆ ಎಂದು ಕಾದು ನೋಡಬೇಕಾಗಿದೆ. ಇದನ್ನೂ ಓದಿ:ಡೆವಿಲ್ ಈಸ್ ಬ್ಯಾಕ್, ಶಸ್ತ್ರ ಚಿಕಿತ್ಸೆ ಯಶಸ್ವಿ: ಪ್ರಕಾಶ್ ರಾಜ್