Tag: head master

  • Chitradurga | ಪೋಷಕರಿಗೆ ಕರೆ ಮಾಡಿ ಮಾತನಾಡಿದ ವಿದ್ಯಾರ್ಥಿಗೆ ಮುಖ್ಯ ಶಿಕ್ಷಕನಿಂದ ಹಲ್ಲೆ – ವೀಡಿಯೋ ವೈರಲ್

    Chitradurga | ಪೋಷಕರಿಗೆ ಕರೆ ಮಾಡಿ ಮಾತನಾಡಿದ ವಿದ್ಯಾರ್ಥಿಗೆ ಮುಖ್ಯ ಶಿಕ್ಷಕನಿಂದ ಹಲ್ಲೆ – ವೀಡಿಯೋ ವೈರಲ್

    ಚಿತ್ರದುರ್ಗ: ತಮ್ಮ ಮಕ್ಕಳು ಸುಸಂಸ್ಕೃತರಾಗಲಿ ಅಂತ ಪೋಷಕರು, ಸಂಸ್ಕೃತ ಹಾಗೂ ವೇದಾಧ್ಯಯನ ಮಾಡಿಸುತ್ತಾರೆ. ಆದರೆ ವಿದ್ಯಾರ್ಥಿಯೊಬ್ಬ ದೂರದ ಊರಿನಲ್ಲಿರುವ ಅವರ ಪೋಷಕರಿಗೆ ಬೇರೊಬ್ಬರ ಮೊಬೈಲ್‌ನಿಂದ ಕರೆ (Phone Call) ಮಾಡಿದಕ್ಕೆ ಆಕ್ರೋಶಗೊಂಡ ಮುಖ್ಯ ಶಿಕ್ಷಕ (Head Master) ಮನಸೋಇಚ್ಛೆ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿ ಕ್ರೌರ್ಯ ಮೆರೆದಿರುವ ಪ್ರಕರಣ ಚಿತ್ರದುರ್ಗ (Chitradurga) ಜಿಲ್ಲೆ ಚಳ್ಳಕೆರೆ (Challakere) ತಾಲೂಕಿನ ನಾಯಕನಹಟ್ಟಿ ಗ್ರಾಮದಲ್ಲಿ ನಡೆದಿದೆ.

    ಈ ಗ್ರಾಮದಲ್ಲಿರುವ ಗುರು ತಿಪ್ಪೇರುದ್ರಸ್ವಾಮಿ ದೇಗುಲಕ್ಕೆ ಸೇರಿದ ವೇದಾಧ್ಯಯನ ಶಾಲೆಯಲ್ಲಿ ವಿವಿದೆಡೆಯ ಹಲವು ವಿದ್ಯಾರ್ಥಿಗಳು ವೇದಾಧ್ಯಯನ ಮಾಡುತ್ತಿದ್ದಾರೆ. ಅವರಲ್ಲಿ ಉತ್ತರ ಕರ್ನಾಟಕ ಮೂಲದ ಓರ್ವ ವಿದ್ಯಾರ್ಥಿ ಮೇಲೆ ವೀರೇಶ್ ಹಿರೇಮಠ್ ಎಂಬ ಮುಖ್ಯ ಶಿಕ್ಷಕ ಮನಸೋಇಚ್ಛೆ ಹಲ್ಲೆ ನಡೆಸಿ ಕ್ರೌರ್ಯ ಮೆರೆದಿದ್ದಾನೆ. ಇದನ್ನೂ ಓದಿ: ಪತಿಯಿಂದಲೇ ವೈದ್ಯೆ ಹತ್ಯೆ ಕೇಸ್‌ – ಯುವತಿಯರ ಜೊತೆ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಕೊಲೆ!

    ಆ ವಿದ್ಯಾರ್ಥಿಗೆ ಕಾಲಲ್ಲಿ ಒದ್ದು ವಿಕೃತಿ ಮೆರೆದಿದ್ದು, ಆ ಶಿಕ್ಷಕನ ಕ್ರೌರ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ. ಆಕ್ರೋಶದಿಂದ ಪುಟ್ಟ ವಿದ್ಯಾರ್ಥಿ ಮೇಲೆ ಈ ರೀತಿ ಅಮಾನುಷವಾಗಿ ಶಿಕ್ಷಕ ಕ್ರೌರ್ಯ ಮೆರೆದ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಇದನ್ನೂ ಓದಿ: ಅ.25ರವರೆಗೆ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ – ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ

    ಇದರ ಬೆನ್ನಲ್ಲೇ ಶಿಕ್ಷಕ ವಿರೇಶ್ ನಾಪಾತ್ತೆಯಾಗಿದ್ದಾನೆ. ಈ ರೀತಿ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿ ಎಸ್ಕೇಪ್ ಆದ ಹಿನ್ನೆಲೆ ಸಾರ್ವಜನಿಕ ವಲಯದಿಂದ ಬಾರಿ ಆಕ್ರೋಶ ವ್ಯಕ್ತವಾಗಿದೆ. ಈ ಪ್ರಕರಣ ನಾಯಕನಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ – ಮನೆ, ಜಮೀನುಗಳಿಗೆ ನುಗ್ಗಿದ ನೀರು

  • ಮದ್ಯಪಾನ ಮಾಡಿ ಶಾಲಾ ಅಡುಗೆ ಕೋಣೆ ಮುಂದೆ ಮಲಗಿದ್ದ ಮುಖ್ಯ ಶಿಕ್ಷಕ ಅಮಾನತು

    ಮದ್ಯಪಾನ ಮಾಡಿ ಶಾಲಾ ಅಡುಗೆ ಕೋಣೆ ಮುಂದೆ ಮಲಗಿದ್ದ ಮುಖ್ಯ ಶಿಕ್ಷಕ ಅಮಾನತು

    ರಾಯಚೂರು: ಫುಲ್ ಟೈಟಾಗಿ ಶಾಲೆಗೆ ಬರುತ್ತಿದ್ದ ರಾಯಚೂರಿನ ಮಸ್ಕಿ ತಾಲೂಕಿನ ಗೋನಾಳ ಶಾಲಾ ಮುಖ್ಯೋಪಾಧ್ಯಾಯ ನಿಂಗಪ್ಪ ಕೊನೆಗೂ ಅಮಾನತಾಗಿದ್ದಾರೆ.

    ಈ ಹೆಡ್ ಮಾಸ್ಟರ್ ಕಂಠಪೂರ್ತಿ ಕುಡಿದು ಶಾಲಾ ಅಡುಗೆ ಕೋಣೆ ಬಾಗಿಲಲ್ಲೇ ಮಲಗಿದ್ದ. ಸುದ್ದಿ ವೈರಲ್‌ ಆಗುತ್ತಿದ್ದಂತೆ ಎಚ್ಚೆತ್ತ ಶಿಕ್ಷಣ ಇಲಾಖೆ ಪರಿಶೀಲನೆ ನಡೆಸಿ‌ ಕ್ರಮ ಕೈಗೊಂಡಿದೆ. ಮದ್ಯಪಾನ ಮಾಡಿ ಶಾಲಾ ಆವರಣದಲ್ಲಿ ಮಲಗಿದ್ದ ಹೆಡ್‌ಮಾಸ್ಟರ್ ನಿಂಗಪ್ಪನನ್ನ ಅಮಾನತು ಮಾಡಲಾಗಿದೆ.

    ‌ಕರ್ತವ್ಯ ಲೋಪ, ದುರ್ನಡತೆ ಹಾಗೂ ಬೇಜವಾಬ್ದಾರಿತನ ಹಿನ್ನೆಲೆ ಅಮಾನತುಗೊಳಿಸಿ ಸಿಂಧನೂರು ಕ್ಷೇತ್ರ ಶಿಕ್ಷಣಾಧಿಕಾರಿ ಬಸಲಿಂಗಪ್ಪ ಆದೇಶ ಹೊರಡಿಸಿದ್ದಾರೆ.

    ಗ್ರಾಮದ ಅಂಭಾದೇವಿ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹೆಡ್‌ಮಾಸ್ಟರ್ ಬಿಸಿಯೂಟ ಅಡುಗೆ ಮಾಡುವ ಮಹಿಳೆಯರೊಂದಿಗೂ ಅಸಭ್ಯ ವರ್ತನೆ ತೋರಿದ್ದ. ಈ ಹಿಂದೆ ಗ್ರಾಮಸ್ಥರು, ಪೋಷಕರು ಎಷ್ಟೇ ಬಾರಿ ಛೀಮಾರಿ ಹಾಕಿದ್ರು ಬದಲಾಗಿರಲಿಲ್ಲ. ನಿತ್ಯ ಮದ್ಯಪಾನ ಮಾಡಿ ಶಾಲೆಗೆ ಬರುತ್ತಿದ್ದ ಹೆಡ್‌ಮಾಸ್ಟರ್ ಈಗ ಅಮಾನತಾಗಿದ್ದಾನೆ.

  • ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ಮುಖ್ಯಶಿಕ್ಷಕನ ಬಂಧನ

    ಚಿಕ್ಕಬಳ್ಳಾಪುರ: ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಮೇಲೆ ಮುಖ್ಯಶಿಕ್ಷಕನೇ (Headmaster) ಹಲವು ಬಾರಿ ಅತ್ಯಾಚಾರ (Rape) ಮಾಡಿರುವ ಘಟನೆ ಸಂಬಂಧ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಗ್ರಾಮಾಂತರ ಪೊಲೀಸ್ ಠಾಣೆಯೊಂದರಲ್ಲಿ ಪ್ರಕರಣ ದಾಖಲಾಗಿದೆ.

    ಮುಖ್ಯ ಶಿಕ್ಷಕ ವೆಂಕಟೇಶ್ ಎಂಬಾತನನ್ನು ಗ್ರಾಮಾಂತರ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ತನ್ನದೇ ಶಾಲೆಯ 13 ವರ್ಷದ ವಿದ್ಯಾರ್ಥಿನಿಯನ್ನು (Student) ಶಿಕ್ಷಕ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಮುಖ್ಯಶಿಕ್ಷಕ ಆಕೆಯನ್ನು ಕಳೆದ ಒಂದು ವರ್ಷದಿಂದ ತನ್ನ ಕಾಮತೃಷೆಗೆ ಬಳಸಿಕೊಂಡಿದ್ದಾನೆ ಎಂದು ದೂರು ನೀಡಲಾಗಿದೆ. ಇದನ್ನೂ ಓದಿ: ಡ್ರಾಪ್ ಕೊಡುವ ನೆಪದಲ್ಲಿ ಅನ್ಯಕೋಮಿನ ಯುವಕನಿಂದ ಮಹಿಳೆ ಮೇಲೆ ಅತ್ಯಾಚಾರ ಯತ್ನ

    ಅಪ್ರಾಪ್ತ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಆಕೆ 3 ತಿಂಗಳ ಗರ್ಭಿಣಿ ಎಂದು ತಿಳಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣದ ನಂತರ ಬಾಲಕಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಆಪ್ತ ಸಮಾಲೋಚನೆ ಮಾಡಿದ್ದು, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಇದನ್ನೂ ಓದಿ: Viral Video: ಬಾನೆಟ್‌ ಮೇಲೆ ವ್ಯಕ್ತಿಯನ್ನ ಮಲಗಿಸಿ BMW ಕಾರು ಚಲಾಯಿಸಿದ ಅಪ್ರಾಪ್ತ!

  • ಚಿಕ್ಕಬಳ್ಳಾಪುರದಲ್ಲಿ ಶಾಲಾ ವಿದ್ಯಾರ್ಥಿನಿಯರಿಂದ ಟಾಯ್ಲೆಟ್ ಕ್ಲೀನಿಂಗ್ – ಮುಖ್ಯಶಿಕ್ಷಕಿ ಅಮಾನತು

    ಚಿಕ್ಕಬಳ್ಳಾಪುರದಲ್ಲಿ ಶಾಲಾ ವಿದ್ಯಾರ್ಥಿನಿಯರಿಂದ ಟಾಯ್ಲೆಟ್ ಕ್ಲೀನಿಂಗ್ – ಮುಖ್ಯಶಿಕ್ಷಕಿ ಅಮಾನತು

    – ಕೋಲಾರ, ಯಶವಂತಪುರ ಬಳಿಕ ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ಘಟನೆ

    ಚಿಕ್ಕಬಳ್ಳಾಪುರ: ಕೋಲಾರದಲ್ಲಿ ವಿದ್ಯಾರ್ಥಿಗಳನ್ನ ಮಲದ ಗುಂಡಿಗೆ ಇಳಿಸಿ ಸ್ವಚ್ಛತೆ (Toilet Cleaning) ಮಾಡಿಸಿದ ಅಮಾನವೀಯ ಘಟನೆ ಮಾಸುವ ಮುನ್ನವೇ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕು ಕುದುಪಕುಂಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.

    ಹೌದು ಶಾಲೆಯ ಆವರಣದಲ್ಲಿರುವ ಶೌಚಾಲಯವನ್ನ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ (Head Master) ರೇಣುಕಮ್ಮ ವಿದ್ಯಾರ್ಥಿನಿಯರಿಂದ ಸ್ವಚ್ಛಗೊಳಿಸಿದ್ದಾರೆ ಎನ್ನಲಾಗಿದೆ.

    ಶೌಚಾಲಯವನ್ನು (Toilet) ಮಕ್ಕಳಿಂದ ಸ್ವಚ್ಛಗೊಳಿಸಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆ ಶಾಲೆಗೆ ಶಿಡ್ಲಘಟ್ಟ ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರ ಕುಮಾರ್, ತಾಲ್ಲೂಕು ಪಂಚಾಯಿತಿ EO ಮುನಿರಾಜು, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಜಗದೀಶ್ ಹಾಗೂ ಅಧಿಕಾರಿಗಳ ತಂಡ ಭೇಟಿ ನೀಡಿ ವಿದ್ಯಾರ್ಥಿಗಳಿಂದ ಗೌಪ್ಯ ಹೇಳಿಕೆ ಪಡೆದು ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಜನವರಿ ತಿಂಗಳ ಹುಂಡಿ ಎಣಿಕೆ- ರಾಯರ ಮಠದಲ್ಲಿ 4 ಕೋಟಿ 15 ಲಕ್ಷ ರೂ. ಸಂಗ್ರಹ

    ಈ ವೇಳೆ ಮಕ್ಕಳ ಪೋಷಕರು ಶಾಲಾ ಮುಖ್ಯ ಶಿಕ್ಷಕಿ ರೇಣುಕಮ್ಮ ವಿರುದ್ಧ ಶಿಸ್ತು ಕ್ರಮಕ್ಕೆ ಒತ್ತಾಯಸಿದ್ದು, ಮುಖ್ಯ ಶಿಕ್ಷಕಿಯ ವಿರುದ್ಧ ತಿರುಗಿಬಿದ್ದಿದ್ದಾರೆ. ಪೋಷಕರ ಒತ್ತಾಯಕ್ಕೆ ಮಣಿದ ಅಧಿಕಾರಿಗಳು ಮುಖ್ಯ ಶಿಕ್ಷಕಿ ರೇಣುಕಮ್ಮ ಅವರನ್ನ ಅಮಾನತು ಮಾಡಿ ಆದೇಶಿಸಿದ್ದಾರೆ. ಇದನ್ನೂ ಓದಿ: ಪ್ರತಾಪ್ ಮತ್ತು ನನ್ನದು ಅಕ್ಕ ತಮ್ಮ ಸಂಬಂಧ: ಸಂದರ್ಶನದಲ್ಲಿ ಸಂಗೀತಾ ಮಾತು

    ಇತ್ತೀಚೆಗೆ ಬೆಂಗ್ಳೂರು ಯಶವಂತಪುರದ ಅಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲೂ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣ ನಡೆದಿತ್ತು. ಘಟನೆಗೆ ಸಂಬಂಧಿಸಿದಂತೆ ಶಾಲೆಯ ಮುಖ್ಯಶಿಕ್ಷಕಿಯನ್ನ ಪೊಲೀಸರು ಬಂಧಿಸಿದ್ದರು.

  • ಶಾಲೆಗೆ ಕುಡಿದು ಬರುತ್ತಿದ್ದ ಮುಖ್ಯ ಶಿಕ್ಷಕನ ಎತ್ತಂಗಡಿ ಮಾಡಿಸಿದ ಗ್ರಾಮಸ್ಥರು

    ಶಾಲೆಗೆ ಕುಡಿದು ಬರುತ್ತಿದ್ದ ಮುಖ್ಯ ಶಿಕ್ಷಕನ ಎತ್ತಂಗಡಿ ಮಾಡಿಸಿದ ಗ್ರಾಮಸ್ಥರು

    ಹಾವೇರಿ: ಶಾಲಾ ಮುಖ್ಯೋಪಾಧ್ಯಾಯರ ವಿರುದ್ಧ ಗ್ರಾಮಸ್ಥರು ನಡೆಸಿದ ಪ್ರತಿಭಟನೆಗೆ ಮಣಿದು ಅವರನ್ನು ಬೇರೆ ಶಾಲೆಗೆ ನಿಯೋಜನೆ ಮಾಡಿ ಎಂದು ಬಿಇಓ ಆದೇಶ ಹೊರಡಿಸಿದ್ದಾರೆ.

    ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಶ್ಯಾಡಗುಪ್ಪಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯ ಮುಖ್ಯೋಪಾಧ್ಯಾಯ ಫಕ್ಕೀರಪ್ಪ ಬಾಲಹನುಮಣ್ಣನವರ್ ವರ್ಗಾವಣೆಯಾದವರು. ಇವರು ಶಾಲೆಗೆ ಸರಿಯಾಗಿ ಬರುವುದಿಲ್ಲ, ಬಂದರೂ ಮದ್ಯಪಾನ ಮಾಡಿ ಬರುತ್ತಾರೆ. ಇದರಿಂದಾಗಿ ವಿದ್ಯಾರ್ಥಿಗಳ ಶಿಕ್ಷಣ ಹಾಗೂ ಭವಿಷ್ಯಕ್ಕೆ ಸಮಸ್ಯೆಯಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯೋಪಾಧ್ಯಾಯರ ಅಮಾನತು ಅಥವಾ ಬೇರೆ ಶಾಲೆಗೆ ವರ್ಗಾವಣೆ ಮಾಡುವಂತೆ ಒತ್ತಾಯಿಸಿ ಶಾಲಾ ಕೊಠಡಿಗೆ ಬೀಗ ಹಾಕಿ ಶುಕ್ರವಾರ ರಾತ್ರಿವರೆಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು.

    ಗ್ರಾಮಸ್ಥರ ಪ್ರತಿಭಟನೆ ಹಿನ್ನೆಲೆಯಲ್ಲಿ ಡಿಸಿಪಿಐ ಅವರ ಸೂಚನೆ ಮೇರೆಗೆ ಮುಖ್ಯೋಪಾಧ್ಯಾಯರನ್ನು ವರ್ಗಾವಣೆ ಮಾಡಲಾಗಿದೆ. ಅವರನ್ನು ಹಾನಗಲ್ ತಾಲೂಕಿನ ಹೋತನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನಿಯೋಜಿಸಿ ಬಿಇಓ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ನ್ಯೂ ಇಯರ್ ಪಾರ್ಟಿ- ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಯುವಕರು

  • ಮುಖ್ಯ ಶಿಕ್ಷಕನಿಂದ ಸರ್ಕಾರಿ ಶಾಲೆಯಲ್ಲಿ ನಿತ್ಯ ಗುಂಡು, ತುಂಡು ಪಾರ್ಟಿ

    ಮುಖ್ಯ ಶಿಕ್ಷಕನಿಂದ ಸರ್ಕಾರಿ ಶಾಲೆಯಲ್ಲಿ ನಿತ್ಯ ಗುಂಡು, ತುಂಡು ಪಾರ್ಟಿ

    – ಕಂಠ ಪೂರ್ತಿ ಕುಡಿದು ಶಾಲೆಯಲ್ಲೇ ಮಲಗುವ ಶಿಕ್ಷಕ
    – ಮುಖ್ಯ ಶಿಕ್ಷಕರ ಚೆಂಬರ್ ತುಂಬೆಲ್ಲ ಬಾಟಲಿಗಳು

    ಯಾದಗಿರಿ: ಶಾಲೆ ಎಂದರೆ ಜ್ಞಾನ ದೇಗುಲ ಎಂಬ ಭಾವನೆ. ಇಂತಹ ಶಾಲೆಯಲ್ಲಿ ಗುರುವಿನ ಸ್ಥಾನದಲ್ಲಿರುವ ಶಿಕ್ಷಕನೇ ಶಾಲೆಯಲ್ಲಿ ನೀತಿಗೆಟ್ಟ ಕೆಲಸ ಮಾಡಿದ್ದಾನೆ.

    ಜಿಲ್ಲೆಯ ವಡಗೇರಾ ತಾಲೂಕಿನ ತುಮಕೂರಿನ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ದೇವಿಂದ್ರಪ್ಪ ಶಾಲೆಯಲ್ಲಿ ಎಣ್ಣೆ ಪಾರ್ಟಿ ಮಾಡಿದ್ದಾನೆ. ಕೊರೊನಾ ಹಿನ್ನೆಲೆ ಶಾಲೆಗೆ ಶಿಕ್ಷಕರು ಮಾತ್ರ ಬರುತ್ತಿದ್ದು, ಶಾಲೆಯಲ್ಲಿ ಮುಖ್ಯ ಶಿಕ್ಷಕ ಆಡಿದ್ದೆ ಆಟ ಎನ್ನುವಂತಾಗಿದೆ. ಕಳೆದ ಹಲವು ದಿನಗಳಿಂದ, ಶಾಲೆಯೊಳಗೆ ಮುಖ್ಯ ಶಿಕ್ಷಕನ ನೇತೃತ್ವದಲ್ಲೇ ಗುಂಡು-ತುಂಡಿನ ಪಾರ್ಟಿ ಮಾಡಿ ಮೋಜು ಮಸ್ತಿ ನಡೆಯುತ್ತಿದೆ.

    ಶಾಲೆಯೊಳಗೆ ರಾಜಾರೋಷವಾಗಿ ಕಂಠಪೂರ್ತಿ ಕುಡಿಯುವ ಮುಖ್ಯ ಶಿಕ್ಷಕ ದೇವಿಂದ್ರಪ್ಪ, ಒಮ್ಮೊಮ್ಮೆ ಶಾಲೆಯಲ್ಲಿಯೆ ಮಲಗಿ ಬಿಡುತ್ತಾನೆ. ಅಲ್ಲದೆ ಇತನ ಚೇಂಬರ್ ತುಂಬೆಲ್ಲ ಮದ್ಯದ ಬಾಟಲಿಗಳು ರಾರಾಜಿಸುತ್ತಿವೆ. ಕುಡುಕ ಹೆಡ್ ಮಾಸ್ಟರ್‍ನ ಎಣ್ಣೆ ಆಟವನ್ನು ಗ್ರಾಮಸ್ಥರೊಬ್ಬರು ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದು, ಸಾಮಾಜಿಕ ತಾಣದಲ್ಲಿ ಹರಿಬಿಟ್ಟಿದ್ದಾರೆ. ಸದ್ಯ ಕುಡುಕ ಹೆಡ್ ಮಾಸ್ಟರ್ ಕಳ್ಳಾಟ ಬಯಲಾಗಿದ್ದು, ಶಿಕ್ಷಕನ ಅಮಾನತಿಗೆ ಗ್ರಾಮಸ್ಥರು ಮತ್ತು ಪೋಷಕರು ಆಗ್ರಹಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಫುಲ್ ವೈರಲ್ ಆಗಿದೆ.

  • ವಿದ್ಯಾರ್ಥಿಗಳಿಗೆ ಹುಳು ಮಿಶ್ರಿತ ಬಿಸಿಯೂಟ- ಮುಖ್ಯ ಶಿಕ್ಷಕ ಅಮಾನತು

    ವಿದ್ಯಾರ್ಥಿಗಳಿಗೆ ಹುಳು ಮಿಶ್ರಿತ ಬಿಸಿಯೂಟ- ಮುಖ್ಯ ಶಿಕ್ಷಕ ಅಮಾನತು

    ಮೈಸೂರು: ವಿದ್ಯಾರ್ಥಿಗಳಿಗೆ ಹುಳು ಮಿಶ್ರಿತ ಬಿಸಿಯೂಟ ನೀಡುವ ಮೂಲಕ ನಿರ್ಲಕ್ಷ್ಯ ತೋರಿದ್ದ ಮುಖ್ಯ ಶಿಕ್ಷಕನನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

    ಜಿಲ್ಲೆಯ ಹೆಚ್.ಡಿ ಕೋಟೆ ಪಟ್ಟಣದ ಆದರ್ಶ ಶಾಲೆಯ ಚಂದ್ರಶೇಖರ್ ಅಮಾನತುಗೊಂಡ ಮುಖ್ಯ ಶಿಕ್ಷಕ. ಹುಳು ಮಿಶ್ರಿತ ಬಿಸಿಯೂಟ ನೀಡಿದ್ದರಿಂದ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದರು. ನಂತರ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

    ಎರಡು ತಿಂಗಳ ಹಿಂದೆ ಈ ಘಟನೆ ಸಂಭವಿಸಿತ್ತು. ಇದಕ್ಕೆ ಮುಖ್ಯ ಶಿಕ್ಷಕನ ನಿರ್ಲಕ್ಷ್ಯವೇ ಕಾರಣ ಎಂದು ತನಿಖೆ ವೇಳೆ ತಿಳಿದು ಬಂದಿದ್ದು, ಘಟನೆ ಬಳಿಕ ಶಾಲೆಗೆ ಭೇಟಿ ನೀಡಿ ತನಿಖೆ ನಡೆಸಿದ್ದ ಜಿಲ್ಲಾಧಿಕಾರಿಗಳ ತಂಡ, ಹುಳು ಮಿಶ್ರಿತ ಬಿಸಿಯೂಟ ಬಡಿಸಿರುವುದು ಸಾಬೀತಾಗಿತ್ತು. ಹೀಗಾಗಿ ಮುಖ್ಯ ಶಿಕ್ಷಕನನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಆಯುಕ್ತರು ಆದೇಶ ಜಾರಿ ಮಾಡಿದ್ದಾರೆ.

  • ರೈಲಿನಲ್ಲೇ ಹೋಗದ ವಿದ್ಯಾರ್ಥಿಗಳನ್ನು ವಿಮಾನದಲ್ಲಿ ಕರ್ಕೊಂಡು ಹೋದ ಮುಖ್ಯಶಿಕ್ಷಕ

    ರೈಲಿನಲ್ಲೇ ಹೋಗದ ವಿದ್ಯಾರ್ಥಿಗಳನ್ನು ವಿಮಾನದಲ್ಲಿ ಕರ್ಕೊಂಡು ಹೋದ ಮುಖ್ಯಶಿಕ್ಷಕ

    – 60,000 ರೂ. ಸ್ವಂತ ಖರ್ಚಿನಲ್ಲಿ 19 ವಿದ್ಯಾರ್ಥಿಗಳಿಗೆ ಪ್ರವಾಸ
    – ವಿಮಾನದಲ್ಲಿ ಪ್ರವಾಸ ಮಾಡಿ ಧನ್ಯವಾದ ತಿಳಿಸಿದ ವಿದ್ಯಾರ್ಥಿಗಳು

    ಭೋಪಾಲ್: ಮಧ್ಯಪ್ರದೇಶದ ಇಂದೋರ್ ಜಿಲ್ಲೆಯ ಮುಖ್ಯ ಶಿಕ್ಷಕರೊಬ್ಬರು ತನ್ನ ಸ್ವಂತ ಖರ್ಚಿನಲ್ಲಿ 19 ವಿದ್ಯಾರ್ಥಿಗಳಿಗೆ ವಿಮಾನದಲ್ಲಿ ಪ್ರವಾಸ ಮಾಡಿಸಿದ್ದಾರೆ.

    ಮುಖ್ಯಶಿಕ್ಷಕ ಕಿಶೋರ್ ವಿದ್ಯಾರ್ಥಿಗಳಿಗಾಗಿ ತಮ್ಮ ಉಳಿತಾಯದ ಹಣದಲ್ಲಿ 60 ಸಾವಿರ ರೂ. ಖರ್ಚು ಮಾಡಿದ್ದಾರೆ. ಜಿಲ್ಲೆಯ ಬಿಜೇಪುರ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಆರನೇ, ಏಳನೇ ಹಾಗೂ ಎಂಟನೇ ತರಗತಿ ವಿದ್ಯಾರ್ಥಿಗಳು ಮೊದಲ ಬಾರಿಗೆ ಇಂದೋರ್ ವಿಮಾನ ನಿಲ್ದಾಣಕ್ಕೆ ತಲುಪಿದಾಗ ತುಂಬಾ ಸಂತೋಷಪಟ್ಟರು. ಇಂದೋರಿನಿಂದ ದೆಹಲಿಗೆ ಎರಡು ದಿನಗಳ ಕಾಲ ಪ್ರವಾಸ ಹೋಗಿದ್ದರು.

    19 ವಿದ್ಯಾರ್ಥಿಗಳಲ್ಲಿ ಕೆಲವರು ಇದುವರೆಗೂ ರೈಲಿನಲ್ಲಿಯೂ ಹೋಗಿರಲಿಲ್ಲ. ಈ ಬಗ್ಗೆ ವಿದ್ಯಾರ್ಥಿಯೊಬ್ಬ ಪ್ರತಿಕ್ರಿಯಿಸಿ, ನಾವು ಭೂಮಿ ಮೇಲೆ ಆಟವಾಡುವಾಗ ವಿಮಾನ ನೋಡಿದರೆ ಅದು ತುಂಬಾ ಚಿಕ್ಕದಾಗಿ ಕಾಣುತ್ತಿತ್ತು. ಆದರೆ ನಾವು ವಿಮಾನವನ್ನು ಹತ್ತಿರದಿಂದ ನೋಡಿದಾಗ ಅದು ತುಂಬಾನೇ ದೊಡ್ಡದಾಗಿ ಇತ್ತು ಎಂದು ಹೇಳಿದ್ದಾರೆ.

    ಇದೇ ವೇಳೆ ಮುಖ್ಯಶಿಕ್ಷಕ ಕಿಶೋರ್ ಮಾತನಾಡಿ, 19 ವಿದ್ಯಾರ್ಥಿಗಳಲ್ಲಿ ಕೆಲವರು ಇದುವರೆಗೂ ರೈಲಿನಲ್ಲಿಯೂ ಹೋಗಿರಲಿಲ್ಲ. ಇವರು ವಿಮಾನದಲ್ಲಿ ಪ್ರವಾಸ ಮಾಡಬೇಕು ಎಂದು ಇದೂವರೆಗೂ ಯೋಚನೆ ಸಹ ಮಾಡಿರಲಿಲ್ಲ. ಹಾಗಾಗಿ ನಾನು ವಿದ್ಯಾರ್ಥಿಗಳಿಗೆ ವಿಮಾನದಲ್ಲೇ ದೆಹಲಿಗೆ ಕರೆದುಕೊಂಡು ನಿರ್ಧರಿಸಿದೆ. ಟಿಕೆಟ್‍ಗಳು ಅಗ್ಗವಾಗುವುದನ್ನು ನಾನು ಗಮನಿಸುತ್ತಿದ್ದೆ. ನಂತರ ಬೆಲೆ ಕಡಿಮೆಯಾದಾಗ ಮುಂಚಿತವಾಗಿ ಟಿಕೆಟ್ ಬುಕ್ ಮಾಡಿದೆ ಎಂದರು.

    ಈ ಮೊದಲು ವಿದ್ಯಾರ್ಥಿಗಳನ್ನು ರೈಲಿನಲ್ಲಿ ಆಗ್ರಾಗೆ ಕರೆದುಕೊಂಡು ಹೋಗಿದ್ದೆ. ರೈಲಿನಲ್ಲಿ ಹಿಂತಿರುಗುವಾಗ ಉತ್ಸಾಹದಲ್ಲಿದ್ದ ವಿದ್ಯಾರ್ಥಿಗಳು ನಾವು ಮುಂದಿನ ಬಾರಿ ವಿಮಾನದಲ್ಲಿ ಹೋಗೋಣ ಎಂದರು. ಮಕ್ಕಳ ಈ ಮಾತು ಕೇಳಿ ಅವರನ್ನು ವಿಮಾನದಲ್ಲೇ ಪ್ರವಾಸಕ್ಕೆ ಕರೆದುಕೊಂಡು ಹೋಗೋಣ ಎಂದು ನಿರ್ಧರಿಸಿದೆ ಎಂದು ಕಿಶೋರ್ ತಿಳಿಸಿದ್ದಾರೆ.

    ವಿದ್ಯಾರ್ಥಿಗಳು ಎರಡು ದಿನಗಳ ಕಾಲ ದೆಹಲಿ ಪ್ರವಾಸ ಮಾಡಿದ್ದು, ಈ ವೇಳೆ ಅವರು ಕುತುಬ್ ಮಿನಾರ್, ಸಂಸತ್ ಭವನ್ ಹಾಗೂ ಕೆಂಪು ಕೋಟೆ ಸೇರಿದಂತೆ ಹಲವು ಐತಿಹಾಸಿಕ ಸ್ಥಳಗಳನ್ನು ವೀಕ್ಷಣೆ ಮಾಡಿದ್ದಾರೆ. ಫೆ. 17ರಂದು ವಿದ್ಯಾರ್ಥಿಗಳು ರೈಲಿನಲ್ಲಿ ತಮ್ಮ ಊರಿಗೆ ತಲುಪಿದರು. ವಿಮಾನದಲ್ಲಿ ಪ್ರವಾಸ ಮಾಡಿಸಿದ್ದಕ್ಕೆ ವಿದ್ಯಾರ್ಥಿಗಳು ಮುಖ್ಯ ಶಿಕ್ಷಕನಿಗೆ ಧನ್ಯವಾದ ತಿಳಿಸಿದ್ದರು. ವಿದ್ಯಾರ್ಥಿಗಳ ಜೊತೆ ಇಬ್ಬರು ಶಿಕ್ಷಕರಾದ ನಿತಿನ್ ಗುಪ್ತಾ ಹಾಗೂ ಆಶಾ ತಿಲೋದಿಯಾ ಅವರು ಕೂಡ ಮೊದಲ ಬಾರಿಗೆ ವಿಮಾನದಲ್ಲಿ ಪ್ರವಾಸ ಮಾಡಿದ್ದಾರೆ.

  • ವಿದ್ಯೆ ಕಲಿಸಿದ ಗುರುವಿಗೆ ಕಾರ್ ಗಿಫ್ಟ್ ನೀಡಿದ ಹಳೆ ವಿದ್ಯಾರ್ಥಿಗಳು

    ವಿದ್ಯೆ ಕಲಿಸಿದ ಗುರುವಿಗೆ ಕಾರ್ ಗಿಫ್ಟ್ ನೀಡಿದ ಹಳೆ ವಿದ್ಯಾರ್ಥಿಗಳು

    ಮಂಗಳೂರು: ಶಾಲೆಯ ಹಳೆ ವಿದ್ಯಾರ್ಥಿಗಳು ತಮಗೆ ಕಲಿಸಿದ ಗುರುಗಳಿಗೆ ಕಾರ್ ಗಿಫ್ಟ್ ನೀಡುವ ಮೂಲಕ ಗುರುಗಳೂ ಶಿಷ್ಯರನ್ನು ಮರೆಯಲಾಗದಂತೆ ಮಾಡಿದ್ದಾರೆ.

    ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆ ಮಂಗಳೂರಿನ ದಾರುಲ್ ಇಸ್ಲಾಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿಗಳು ತಮಗೆ ಕಲಿಸಿದ ಗುರುಗಳನ್ನು ಮರೆಯದೆ ಕಾರ್ ಗಿಫ್ಟ್ ನೀಡುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

    ತಮಗೆ ಅಕ್ಷರಾಭ್ಯಾಸ ನೀಡಿದ ಶಾಲೆಯ ಮುಖ್ಯ ಶಿಕ್ಷಕರಾಗಿದ್ದ ಬಿ.ಕೆ.ಫಕ್ರುದ್ದೀನ್ ಅವರು ನಿವೃತ್ತಗೊಂಡ ಸಂದರ್ಭದಲ್ಲಿ ಕಾರನ್ನು ಉಡುಗೊರೆ ನೀಡಿ ಬೀಳ್ಕೊಟ್ಟಿದ್ದಾರೆ. ತಮ್ಮ ನೆಚ್ಚಿನ ಶಿಕ್ಷಕರಿಗೆ ನಿವೃತ್ತಿಯಾಗುತ್ತಿದೆ ಎಂದು ತಿಳಿದ ಹಳೆ ವಿದ್ಯಾರ್ಥಿಗಳು ಏನಾದರೂ ವಿಭಿನ್ನ ಉಡುಗೊರೆ ಕೊಡಬೇಕೆಂದು ನಿರ್ಧರಿಸಿದರು. ಅದರಂತೆ ನಿವೃತ್ತ ಶಿಕ್ಷಕರಿಗೆ ಶಾಲಾ ಮಂಡಳಿ, ಹಳೆ ವಿದ್ಯಾರ್ಥಿಗಳು, ಊರ ನಾಗರಿಕರ ವತಿಯಿಂದ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಿದರು.

    ಈ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕ ಫಕ್ರುದ್ದೀನ್ ಅವರಿಗೆ ಹಳೆ ವಿದ್ಯಾರ್ಥಿಗಳು ಸೇರಿ ಖರೀದಿಸಿದ ಹೊಸ ಆಲ್ಟೋ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ.

    ಸನ್ಮಾನ ಹಾಗೂ ಕಾರನ್ನು ಉಡುಗೊರೆಯಾಗಿ ಸ್ವೀಕರಿಸಿದ ಫಕ್ರುದ್ದೀನ್ ಅವರು ಮಾತನಾಡಿ, ಹಳೆ ವಿದ್ಯಾರ್ಥಿಗಳು ಇನ್ನೂ ನನ್ನನ್ನು ನೆನಪು ಇಟ್ಟುಕೊಂಡಿರೋದೇ ನನಗೆ ದೊಡ್ಡ ಉಡುಗೊರೆ. ಅಲ್ಲದೆ ಈ ಶಾಲೆಯಲ್ಲಿ ಕಲಿತ ಹಾಗೂ ತನ್ನಿಂದ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಇಂದು ದೊಡ್ಡ ಹುದ್ದೆಗಳಲ್ಲಿರುವುದು ನನಗೆ ದೊಡ್ಡ ಉಡುಗೊರೆ. ಇಂತಹ ಅಪರೂಪದ ಕಾರ್ಯಕ್ರಮ ಎಲ್ಲರಿಗೂ ಮಾದರಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

  • ಗ್ರಾಮಸ್ಥರು, ದಾನಿಗಳನ್ನು ಒಗ್ಗೂಡಿಸಿ ಶಾಲೆ ನಿರ್ಮಿಸಿದ್ರು ರಾಯಚೂರಿನ ಸೋಮಶೇಖರ್

    ಗ್ರಾಮಸ್ಥರು, ದಾನಿಗಳನ್ನು ಒಗ್ಗೂಡಿಸಿ ಶಾಲೆ ನಿರ್ಮಿಸಿದ್ರು ರಾಯಚೂರಿನ ಸೋಮಶೇಖರ್

    ರಾಯಚೂರು: ಮನಸ್ಸಿದ್ದರೆ ಮಾರ್ಗ ಅಂಥ ಸಾಧನೆ ಮಾಡಿರೋ ಹಲವರ ಬಗ್ಗೆ ನಾವು ತೋರಿಸಿದ್ದೇವೆ. ಈ ಪಟ್ಟಿಗೆ ಲಿಂಗಸುಗೂರಿನ ಬೇಡರಕಾಲರಕುಂಟಿ ಗ್ರಾಮದ ಮೇಷ್ಟ್ರು ಹಾಗೂ ಊರಿನ ಜನ ಸೇರಿದ್ದಾರೆ.

    ಹೌದು. ರಾಯಚೂರಿನ ಲಿಂಗಸುಗೂರು ತಾಲೂಕಿನ ಬೇಡರಕಾಲರಕುಂಟಿ ಗ್ರಾಮದ ಆಂಜನೇಯ ದೇವಾಲಯದ ಬಳಿ 2 ಕೋಣೆಯಲ್ಲಿ ನಡೆಯುತ್ತಿದ್ದ ಶಾಲೆಯು ಮುಖ್ಯೋಪಧ್ಯಾಯ ಸೋಮಶೇಖರ್ ಅವರಿಂದಾಗಿ ಈಗ ಭವ್ಯವಾಗಿ ತಲೆ ಎತ್ತಿದೆ.

    ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ದಾನಿಗಳು ಜಾಗ ಕೊಟ್ಟಿದ್ದರು. ಆದರೆ, ಆ ಪ್ರದೇಶ ತಗ್ಗು-ಗುಂಡಿಯಿಂದ ತುಂಬಿದ್ದ ಕಾರಣ ಸರ್ಕಾರ ಅನುದಾನ ಕೊಡಲು ಮೀನಾಮೇಷ ಎಣಿಸಿತ್ತು. ಆದರೆ, ಗ್ರಾಮಸ್ಥರನ್ನೆಲ್ಲಾ ಒಗ್ಗೂಡಿಸಿದ ಹೆಡ್ ಮಾಸ್ಟರ್ ಸೋಮಶೇಖರ್ ಅವರು ಸಮತಟ್ಟು ಮಾಡಿ, ಸುಂದರ ಶಾಲೆ-ಉದ್ಯಾನವನ ನಿರ್ಮಿಸಿದ್ದಾರೆ. ಈಗ 1 ರಿಂದ 5ನೇ ತರಗತಿವರೆಗೆ 93 ವಿದ್ಯಾರ್ಥಿಗಳು, ನಾಲ್ವರು ಶಿಕ್ಷಕರಿದ್ದಾರೆ ಅಂತ ಗ್ರಾಮದ ಮುಖಂಡ ಸಿದ್ದಯ್ಯ ಸ್ವಾಮಿ ತಿಳಿಸಿದ್ದಾರೆ.

    ಶಾಲೆ ಆವರಣದಲ್ಲಿ ಹಾಳಾಗಿದ್ದ ಬಾವಿಯನ್ನ ದುರಸ್ತಿ ಮಾಡಿ, 250 ಗಿಡ ನೆಟ್ಟು ಅದಕ್ಕೆ ನೀರುಣಿಸ್ತಿದ್ದಾರೆ. ಬಿಸಿಯೂಟಕ್ಕೆ ಇಲ್ಲಿನ ತರಕಾರಿಗಳನ್ನೇ ಬಳಸಲಾಗುತ್ತದೆ. ತಾಜ್ಯದಿಂದ ಸಾವಯವ ಗೊಬ್ಬರ ತಯಾರಿಸಿ ಬಳಸುತ್ತಿದ್ದಾರೆ. ಔಡಲ ಬೀಜಗಳನ್ನ ಮಾರಾಟ ಮಾಡಿ ಶಾಲಾ ಖರ್ಚಿಗೆ ಬಳಸ್ತಿದ್ದಾರೆ. ಜೊತೆಗೆ, ಗ್ರಾಮಸ್ಥರು ಹಾಗೂ ಇತರೆ ದಾನಿಗಳಿಂದ ಶಾಲೆಗೆ ಕಾಂಪೌಂಡ್, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ಊಟಕ್ಕಾಗಿ ಬೆಂಚ್ ವ್ಯವಸ್ಥೆ ಮಾಡಲಾಗಿದೆ ಎಂದು ಮುಖ್ಯೋಪಾಧ್ಯಾಯ ಸೋಮಶೇಖರ್ ಹೇಳುತ್ತಾರೆ.

    ಇಷ್ಟೇ ಅಲ್ಲ, ಮಕ್ಕಳಿಗೆ ಹೆಚ್ಚುವರಿ ತರಗತಿಗಳನ್ನ ತೆಗೆದುಕೊಂಡು ನವೋದಯ, ಮೊರಾರ್ಜಿ ದೇಸಾಯಿ ವಸತಿ ಶಾಲೆ ಸೇರಿ ಇತರೆ ಪರೀಕ್ಷೆಗಳಿಗಾಗಿ ಕೋಚಿಂಗ್ ನೀಡ್ತಿದ್ದಾರೆ.

    https://www.youtube.com/watch?v=n0dbOUTqjto

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv