Tag: Head Teacher

  • ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ – ಮುಖ್ಯ ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

    ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ – ಮುಖ್ಯ ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

    ಮಡಿಕೇರಿ: ಇಬ್ಬರು ಶಾಲಾ ವಿದ್ಯಾರ್ಥಿನಿಯರ (Student) ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಹಿನ್ನೆಲೆಯಲ್ಲಿ ಶಾಲಾ ಮುಖ್ಯ ಶಿಕ್ಷಕನ (Head Teacher) ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

    ಕೊಡಗು (Kodagu) ಜಿಲ್ಲೆಯ ಮಡಿಕೇರಿ (Madikeri) ತಾಲೂಕು ವ್ಯಾಪ್ತಿಯ ಪ್ರೌಢಶಾಲೆಯೊಂದರಲ್ಲಿ ಈ ಘಟನೆ ನಡೆದಿದೆ. ಅಲ್ಲಿನ ಮುಖ್ಯ ಶಿಕ್ಷಕ ಮನೋಹರ್‌ ನಾಯಕ್ 10ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವುದಾಗಿ ಆರೋಪ ಕೇಳಿಬಂದಿದೆ. ಈ ಬಗ್ಗೆ ಆ ಇಬ್ಬರು ವಿದ್ಯಾರ್ಥಿನಿಯರ ಪೈಕಿ ಓರ್ವ ವಿದ್ಯಾರ್ಥಿನಿಯ ಪೋಷಕರು ಪೊಲೀಸ್ ದೂರು ನೀಡಿದ್ದಾರೆ. ಇದನ್ನೂ ಓದಿ: NEP ನೇಮಕಾತಿ ಮಾನದಂಡ – ಸರ್ಕಾರದ ವಿರುದ್ಧ ಸಿಡಿದ್ದೆದ್ದ ಅಂಗನವಾಡಿ ಕಾರ್ಯಕರ್ತೆಯರು

    RAPE

    ದೂರು ಬಂದ ಹಿನ್ನೆಲೆಯಲ್ಲಿ ಮನೋಹರ ನಾಯಕ್‌ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಶಾಲಾ ಆಡಳಿತ ಮಂಡಳಿ ಮನೋಹರ್ ನಾಯಕನನ್ನು ಅಮಾನತುಗೊಳಿಸಿದೆ. ಮನೋಹರ್‌ ನಾಯಕ್‌ ಜಿಲ್ಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಕೊಡಗು ಮಹಿಳಾ ಠಾಣಾ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ. ಇದನ್ನೂ ಓದಿ: ನಾಯಿ ಬೊಗಳುವ ವಿಚಾರಕ್ಕೆ ಜಗಳ- ಮಹಿಳೆ ಸಾವು, ಐವರಿಗೆ ಗಾಯ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮುಖ್ಯ ಶಿಕ್ಷಕನಿಂದ ಬಾಲಕಿ ಮೇಲೆ ಅತ್ಯಾಚಾರ, ಮನೆಗೆಲಸ ಮಾಡದ್ದಕ್ಕೆ ಥಳಿತ

    ಮುಖ್ಯ ಶಿಕ್ಷಕನಿಂದ ಬಾಲಕಿ ಮೇಲೆ ಅತ್ಯಾಚಾರ, ಮನೆಗೆಲಸ ಮಾಡದ್ದಕ್ಕೆ ಥಳಿತ

    ಹೈದರಾಬಾದ್: ಶಾಲೆಯ ಮುಖ್ಯ ಶಿಕ್ಷಕನೊಬ್ಬ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿ, ಮನೆಗೆಲಸ ಮಾಡಲು ಒತ್ತಾಯಿಸಿರುವ ಘಟನೆ ಹೈದರಾಬಾದಿನಲ್ಲಿ ನಡೆದಿದೆ.

    ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಬಟಸಿಂಗರಂನ ಜಾನೆಟ್ ಜಾರ್ಜ್ ಸ್ಮಾರಕ ವಸತಿ ಶಾಲೆಯ ಮುಖ್ಯ ಶಿಕ್ಷಕ ಕೆ.ಪ್ರಸಾದ್ ರಾವ್(51) ಹಾಗೂ ಇದೇ ಶಾಲೆಯಲ್ಲಿ ಶಿಕ್ಷಕಿಯಾಗಿರುವ ಈತನ ಪತ್ನಿ ಕೆ.ಶರಧಿ ಅವರನ್ನು ಹೈದರಾಬಾದ್‍ನ ಎಸ್‍ಇಇ ತಂಡದೊಂದಿಗೆ ಪೊಲೀಸರು ಬಂಧಿಸಿದ್ದಾರೆ.

    ಮಕ್ಕಳ ಸಹಾಯವಾಣಿ ಮೂಲಕ ಸಂತ್ರಸ್ತೆ ದೂರು ದಾಖಲಿಸಲಾಗಿದ್ದು, 15 ವರ್ಷದ ಬಾಲಕಿ 2015ರಲ್ಲಿ ಶಾಲೆಗೆ ದಾಖಲಾಗಿದ್ದಳು. ನಂತರ ಶಾಲೆಯ ವಸತಿ ನಿಲಯದಲ್ಲೇ ವಾಸವಿದ್ದಳು. ಬಾಲಕಿ ಮಲಗಿದ್ದಾಗ, ಹಾಸ್ಟೆಲ್ ವಾರ್ಡನ್ ಪ್ರಸಾದ್ ಬಾಲಕಿಯ ಕೋಣೆಗೆ ಆಗಮಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ವಿವರಿಸಿದ್ದಾಳೆ.

    ಈ ಕುರಿತು ಪೊಲೀಸರು ಮಾಹಿತಿ ನೀಡಿ, ಆತ ಬಾಲಕಿ ಮೇಲೆ ಪದೇ ಪದೆ ಅತ್ಯಾಚಾರ ಎಸಗುತ್ತಿದ್ದ, ಅಲ್ಲದೆ ಅವಳಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದ ಎಂದು ವರದಿಯಾಗಿದೆ.

    ಪ್ರಸಾದ್ ಪತ್ನಿ ಶರಧಿ ಕೂಡ ಬಾಲಕಿಗೆ ಕಿರುಕುಳ ನೀಡಿ ದಂಪತಿಯ ಮನೆಯಲ್ಲಿ ಮನೆ ಕೆಲಸ ಮಾಡುವಂತೆ ಒತ್ತಾಯಿಸಿದ್ದರು. ಬಾಲಕಿ ಕೆಲಸ ಮಾಡಲು ನಿರಾಕರಿಸಿದಾಗ ಆಕೆಯನ್ನು ಥಳಿಸಲಾಗಿದೆ. ಮುಖ್ಯ ಶಿಕ್ಷಕ ಈ ಬಾಲಕಿಗೆ ಮಾತ್ರವಲ್ಲ ಹಾಸ್ಟೆಲ್‍ನಲ್ಲಿರುವ ಇತರ ಹುಡುಗಿಯರನ್ನೂ ನಿಂದಿಸಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.

    ಕಿರುಕುಳ ಸಹಿಸಲಾಗದೆ, ಸಂತ್ರಸ್ತೆ ಜೂನ್ ತಿಂಗಳಲ್ಲಿ ಶಾಲೆಯನ್ನು ತೊರೆದಿದ್ದಾಳೆ. ಶುಕ್ರವಾರ ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ದೂರು ದಾಖಲಿಸಿದ್ದಾಳೆ. ನಂತರ ಪೊಲೀಸರು ಹಾಗೂ ಎಸ್‍ಇಇ ತಂಡ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

    ದಂಪತಿ ವಿರುದ್ಧ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೊಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

  • ಕಡ್ಡಾಯ ವರ್ಗಾವಣೆಗೆ ಹೆದರಿ ಕೋಮಾಗೆ ಜಾರಿದ ಮುಖ್ಯ ಶಿಕ್ಷಕ

    ಕಡ್ಡಾಯ ವರ್ಗಾವಣೆಗೆ ಹೆದರಿ ಕೋಮಾಗೆ ಜಾರಿದ ಮುಖ್ಯ ಶಿಕ್ಷಕ

    ಹುಬ್ಬಳ್ಳಿ: ರಾಜ್ಯ ಸರ್ಕಾರದ ಕಡ್ಡಾಯ ವರ್ಗಾವಣೆಗೆ ಹೆದರಿ ಹುಬ್ಬಳ್ಳಿಯ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಕೋಮಾ ಸ್ಥಿತಿಯಲ್ಲಿದ್ದಾರೆ.

    ರಾಜ್ಯದಲ್ಲಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಕಲಿಕಾ ಮಟ್ಟ ಸುಧಾರಣೆ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸದ್ಯ ಕಡ್ಡಾಯ ವರ್ಗಾವಣೆ ನೀತಿಯನ್ನ ಜಾರಿಗೆ ತಂದಿದೆ. ಆದರೆ ಹುಬ್ಬಳ್ಳಿಯ ಆನಂದ ನಗರದ ಸರ್ಕಾರಿ ಶಾಲಾ ಮುಖ್ಯ ಶಿಕ್ಷಕ ಸುಭಾಷ್ ತರ್ಲಘಟ್ಟ ಕಡ್ಡಾಯ ವರ್ಗವಣೆಗೆ ಹೆದರಿ ಕೋಮಾ ಸ್ಥಿತಿಯಲ್ಲಿದ್ದಾರೆ. ಸದ್ಯ ಕೋಮಾ ಸ್ಥಿತಿ ತಲುಪಿರುವ ಸುಭಾಷ್ ಅವರಿಗೆ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

    ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ರಾಮಗಿರಿಗೆ ಸುಭಾಷ್ ಅವರು ವರ್ಗಾವಣೆಗೊಂಡಿದ್ದರು. ಇದರಿಂದ ಮನನೊಂದು ಶಿಕ್ಷಕ ಕೋಮಾ ಸ್ಥಿತಿಗೆ ಜಾರಿದ್ದಾರೆ ಎಂದು ಅವರ ಪತ್ನಿ ಹಾಗೂ ಸಂಬಂಧಿಕರು ಹೇಳುತ್ತಿದ್ದಾರೆ. ಖಾಸಗಿ ಆಸ್ಪತ್ರೆ ಮುಂದೆ ಜಮಾಯಿಸಿರೋ ಶಿಕ್ಷಕರು ಹಾಗೂ ಸಂಬಂಧಿಕರು ಹಾಗೂ ಸುಭಾಷ್ ಪತ್ನಿ ಸರ್ಕಾರದ ನಿರ್ಧಾರಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರ ಸುಭಾಷ್ ಅವರನ್ನು ವರ್ಗಾವಣೆ ಮಾಡಿದ್ದೇ ಅವರ ಈ ಸ್ಥಿತಿಗೆ ಕಾರಣ ಎಂದು ಆರೋಪಿಸಿದ್ದಾರೆ.