Tag: health bulletin

  • ಆಸ್ಪತ್ರೆಯಿಂದ ಡಿಸ್ಚಾರ್ಜ್ – ಆರೋಗ್ಯವಾಗಿದ್ದೇನೆ ಎಂದ ಬರಗೂರು ರಾಮಚಂದ್ರಪ್ಪ

    ಆಸ್ಪತ್ರೆಯಿಂದ ಡಿಸ್ಚಾರ್ಜ್ – ಆರೋಗ್ಯವಾಗಿದ್ದೇನೆ ಎಂದ ಬರಗೂರು ರಾಮಚಂದ್ರಪ್ಪ

    ದಾವಣಗೆರೆ: ಸಾಹಿತಿ ಬರಗೂರು ರಾಮಚಂದ್ರಪ್ಪ (Baraguru Ramachandrappa) ಅವರು ಭಾನುವಾರ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ದಾವಣಗೆರೆಯ (Davanagere) ಹರಿಹರದಲ್ಲಿ ನಡೆದಿತ್ತು. ಇದೀಗ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ (Discharged) ಆಗಿರುವ ಲೇಖಕರು ಆರೋಗ್ಯವಾಗಿರುವುದಾಗಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

    ಡಿಸ್ಚಾರ್ಜ್ ಬಳಿಕ ನಗರದಲ್ಲಿ ಮಾತನಾಡಿದ ಅವರು, ಕವಿಗೋಷ್ಠಿ ಉದ್ಘಾಟನೆ ನಂತರ ಸಭಾಂಗಣದ ಹೊರಗೆ ಪೋಸ್ಟರ್ ಬಿಡುಗಡೆ ಮಾಡಲು ಹೋಗಿದ್ದೆ. ಎಸ್‌ಸಿ, ಎಸ್‌ಟಿ ಸ್ಪರ್ಧಾ ಪರೀಕ್ಷೆಗೆ ಪೋಸ್ಟರ್ ಬಿಡುಗಡೆ ಮಾಡಿದ್ದೆವು. ಆಗ ತಲೆ ಸುತ್ತು ಬಂದಂತಾಯಿತು. ತಕ್ಷಣ ಹೋಗಿ ಕಾರಿನಲ್ಲಿ ಕುಳಿತುಕೊಂಡೆ. ಬಳಿಕ ಸ್ನೇಹಿತರು ಆಸ್ಪತ್ರೆಗೆ ಕರೆದೊಯ್ದರು. ನನಗೆ ಕೆಲ ನಿಮಿಷಗಳ ಕಾಲ ಪ್ರಜ್ಞೆ ಇರಲಿಲ್ಲ ಎಂದು ಘಟನೆ ಬಗ್ಗೆ ವಿವರಿಸಿದರು.

    BaraguruRamachandrappa

    ನನಗೆ ಬಿಪಿ, ಶುಗರ್ ಇಲ್ಲ. ಆದರೆ ಇದೆಲ್ಲಾ ಆಗಿರುವ ಹಿನ್ನೆಲೆ ವೈದ್ಯರು ಇಸಿಜಿ ಬಿಪಿ ಶುಗರ್ ಟೆಸ್ಟ್ ಮಾಡಿದ್ದಾರೆ. ಹೆಚ್ಚು ಒತ್ತಡದಿಂದ ಈ ರೀತಿಯಾಗುತ್ತದೆ ಎಂದು ಹೇಳಿದ್ದಾರೆ. ವೈದ್ಯರು ಡ್ರಿಪ್ಸ್ ಹಾಕಿದ್ರು, ನಾನು ವಿಶ್ರಾಂತಿ ಪಡೆದು ಈಗ ಡಿಸ್ಚಾರ್ಚ್ ಆಗಿದ್ದೇನೆ. ಡಿಸ್ಚಾರ್ಜ್ ಆಗುವ ಮುನ್ನವೂ ವೈದ್ಯರು ಮತ್ತೊಮ್ಮೆ ತಪಾಸಣೆ ನಡೆಸಿದ್ದಾರೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: IAF Jets Crashː ವಾಯುಸೇನಾ ವಿಮಾನಗಳು ಪತನ – ಬ್ಲ್ಯಾಕ್‌ ಬಾಕ್ಸ್‌ ಪತ್ತೆ

    ನಾನು ಕುಸಿದಿದ್ದ ಕ್ಷಣ ಸ್ನೇಹಿತರಲ್ಲಿ ಆತಂಕ ಹುಟ್ಟಿದ್ದು ನಿಜ. ನನ್ನ ಕಾಳಜಿ ವಹಿಸಿದ ಸ್ನೇಹಿತರಿಗೂ, ಮಾಧ್ಯಮ ಮಿತ್ರರಿಗೂ ಧನ್ಯವಾದಗಳು. ವೈದ್ಯರು ಯಾವುದೇ ತೊಂದರೆ ಇಲ್ಲ ಎಂದು ಹೇಳಿದ್ದಾರೆ. ನಾನು ಬೆಂಗಳೂರಿಗೆ ಹೋದ ಮೇಲೆ ಮತ್ತೊಮ್ಮೆ ಆರೋಗ್ಯ ತಪಾಸಣೆ ಮಾಡಿಸುತ್ತೇನೆ. ವೈದ್ಯರು ವಿಶ್ರಾಂತಿ ಬೇಕು ಎಂದಿದ್ದಾರೆ, ಅದರಂತೆ ಪಾಲಿಸುತ್ತೇನೆ ಎಂದರು. ಇದನ್ನೂ ಓದಿ: ದೇವರಿಗೆ ನಾಲಿಗೆಯನ್ನೇ ಕತ್ತರಿಸಿ ದಾನ ಕೊಟ್ಟ ಭೂಪ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಟ ನಂದಮೂರಿ ತಾರಕರತ್ನ ಸ್ಥಿತಿ ಗಂಭೀರ : ಹೆಲ್ತ್ ಬುಲೆಟಿನ್ ರಿಲೀಸ್

    ನಟ ನಂದಮೂರಿ ತಾರಕರತ್ನ ಸ್ಥಿತಿ ಗಂಭೀರ : ಹೆಲ್ತ್ ಬುಲೆಟಿನ್ ರಿಲೀಸ್

    ತೆಲುಗಿನ ಖ್ಯಾತ ಚಿತ್ರನಟ ಮತ್ತು ರಾಜಕಾರಣಿ ನಂದಮೂರಿ ತಾರಕರತ್ನ (Nandamuri Tarakaratna) ಆರೋಗ್ಯ (health) ಸ್ಥಿತಿ ಗಂಭೀರವಾಗಿದೆ (serious) ಎಂದು ನಾರಾಯಣ ಹೃದಯಾಲಯ ತಜ್ಞರು ತಿಳಿಸಿದ್ದಾರೆ. ಅವರ ಆರೋಗ್ಯದ ಕುರಿತು ಹೆಲ್ತ್ ಬುಲೆಟಿನ್ (health bulletin) ರಿಲೀಸ್ ಮಾಡಿದ್ದು, ಆರೋಗ್ಯ ತೀರಾ ಹದಗೆಟ್ಟಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರೆಸಿರುವುದಾಗಿ ತಿಳಿಸಿದೆ. ಹೃದಯದ ರಕ್ತನಾಳುಗಳು ಬ್ಲಾಕ್ ಆಗಿರುವುದರಿಂದ ಅವುಗಳನ್ನು ಸರಿಪಡಿಸಲು ವೈದ್ಯರು ಸತತ ಪ್ರಯತ್ನ ನಡೆಸಿರುವುದಾಗಿ ತಿಳಿಸಿದೆ.

    ಇಂಟ್ರಾ ಅಯೋರ್ಟಿಕ್ ಪಂಪ್, ವ್ಯಾಸೋಆಕ್ಟಿವ್ ನೆರವಿನಿಂದಲೂ ಚಿಕಿತ್ಸೆ ನೀಡಲಾಗಿದ್ದು, ಆಂಜಿಯೋಪ್ಲಾಸ್ಟಿ ಮೂಲಕ ಹಾನಿಯಾದ ರಕ್ತನಾಳಗಳಿಗೆ ಸ್ಟಂಟ್ ಹಾಕಲಾಗಿದೆ ಎಂದು ಹೆಲ್ತ್ ಬುಲೆಟಿನ್ ನಲ್ಲಿ ಉಲ್ಲೇಖಿಸಲಾಗಿದೆ. ಸ್ಟಂಟ್ ಅಳವಡಿಕೆಯ ನಂತರವೂ ರಕ್ತಸ್ರಾವ ನಿಲ್ಲದೇ ಇರುವುದು ಆತಂಕಕ್ಕೆ ಕಾರಣವಾಗಿದೆ. ಆದರೂ, ನುರಿತ ವೈದ್ಯರ ತಂಡ ಚಿಕಿತ್ಸೆಯನ್ನು ಮುಂದುವರೆಸಿದೆ ಎಂದು ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಲಾಗಿದೆ.  ಇದನ್ನೂ ಓದಿ: ಬಹುಕಾಲದ ಗೆಳತಿ ಜೊತೆ ತೆಲುಗು ನಟ ಶರ್ವಾನಂದ್ ಎಂಗೇಜ್‌ಮೆಂಟ್

    ನಂದಮೂರಿ ತಾರಕರತ್ನ ಅವರಿಗೆ ಶುಕ್ರವಾರ ತೀವ್ರ ಹೃದಯಾಘಾತ (Heart Attack) ವಾಗಿತ್ತು, ಕೂಡಲೇ ಅವರನ್ನು ಆಂಧ್ರದ ಕುಪ್ಪಂನ ಪಿಇಎಸ್ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿತ್ತು. ಅಲ್ಲಿಂದ  ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಹೊಸೂರು ರಸ್ತೆಯ ನಾರಾಯಣ ಹೃದಯಾಲಯಕ್ಕೆ ಸ್ಥಳಾಂತರ ಮಾಡಲಾಗಿತ್ತು.  ತಡರಾತ್ರಿ 12 ಗಂಟೆ ಸಂದರ್ಭದಲ್ಲಿ ಆಂಧ್ರದ ಕುಪ್ಪಂನಿಂದ ಅಂಬುಲೆನ್ಸ್ ಮೂಲಕ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ಬಳಿಕ ಯಶಸ್ವಿಯಾಗಿ ಆಂಜಿಯೋಗ್ರಾಮ್ (Angiogram) ಮಾಡಿ ಸ್ಟಂಟ್ ಅಳವಡಿಕೆ ಮಾಡಲಾಗಿದ್ದು, ಸದ್ಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿರುವುದಾಗಿ ಆಸ್ಪತ್ರೆ ಮೂಲಗಳು ಬೆಳಗ್ಗೆ ಮಾಹಿತಿ ನೀಡಿದ್ದವು.

    ತಾರಕರತ್ನ ಅವರು ಟಿಡಿಪಿ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್ ಅವರ ಯುವ ಗಲಮ್ ಪಾದಯಾತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಕುಪ್ಪಂಗೆ ತೆರಳಿದ್ದರು. ಲೋಕೇಶ್ ಮಸೀದಿಯಿಂದ ಪ್ರಾರ್ಥನೆ ಸಲ್ಲಿಸಿ ಹೊರಬಂದಾಗ ಅಲ್ಲಿ ನೆರೆದಿದ್ದ ಟಿಡಿಪಿ ಕಾರ್ಯಕರ್ತರು ಏಕಾಏಕಿ ಲೋಕೇಶ್ ಕಡೆಗೆ ನುಗ್ಗಿದ್ದು, ಅಲ್ಲಿಯೇ ನಿಂತಿದ್ದ ತಾರಕರತ್ನ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ತಕ್ಷಣ ಅವರನ್ನು ಕುಪ್ಪಂನ ಸಮೀಪದ ಆಸ್ಪತ್ರೆಗೆ ದಾಖಲಿಸಿ ನಂತರ ಪಿಇಎಸ್ ವೈದ್ಯಕೀಯ ಕಾಲೇಜಿಗೆ ರವಾನಿಸಲಾಯಿತು. ಪಿಇಎಸ್ ವೈದ್ಯಕೀಯ ಕಾಲೇಜು ವೈದ್ಯರ ಸಲಹೆಯಂತೆ ಉತ್ತಮ ಚಿಕಿತ್ಸೆಗಾಗಿ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಟಾಲಿವುಡ್ ಸ್ಟಾರ್ ಮಹೇಶ್ ಬಾಬು ತಂದೆಯ ಹೆಲ್ತ್ ಬುಲೆಟಿನ್: ಸ್ಥಿತಿ ಮತ್ತಷ್ಟು ಗಂಭೀರ

    ಟಾಲಿವುಡ್ ಸ್ಟಾರ್ ಮಹೇಶ್ ಬಾಬು ತಂದೆಯ ಹೆಲ್ತ್ ಬುಲೆಟಿನ್: ಸ್ಥಿತಿ ಮತ್ತಷ್ಟು ಗಂಭೀರ

    ಟಾಲಿವುಡ್ (Tollywood) ಸ್ಟಾರ್ ನಟ ಮಹೇಶ್ ಬಾಬು (Mahesh Babu) ಅವರ ತಂದೆ, ತೆಲುಗಿನ ಸೂಪರ್ ಸ್ಟಾರ್ ಆಗಿದ್ದ ಕೃಷ್ಣ ಅವರನ್ನು ನಿನ್ನೆ ಅನಾರೋಗ್ಯದ ಕಾರಣದಿಂದಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರ ಆರೋಗ್ಯಕ್ಕೆ ಸಂಬಂಧಿಸಿದಂತೆ, ಆಸ್ಪತ್ರೆಯು ಹೆಲ್ತ್ ಬುಲೆಟಿನ್ (Health Bulletin) ಬಿಡುಗಡೆ ಮಾಡಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದೆ. ಹಾಗಾಗಿಯೇ ಅವರನ್ನು ಐಸಿಯುಗೆ ಸ್ಥಳಾಂತರಿಸಿ, ಅಲ್ಲಿಯೇ ಚಿಕಿತ್ಸೆಯನ್ನು ಮುಂದುವರೆಸಿದ್ದಾರಂತೆ.

    ಕ್ಷಣ ಕ್ಷಣಕ್ಕೂ ಅವರ ಆರೋಗ್ಯ ಕ್ಷೀಣಿಸುತ್ತಿದೆ ಎಂದು ಆಸ್ಪತ್ರೆ ತಿಳಿಸಿದ್ದು, ನುರಿತ ವೈದ್ಯರ ತಂಡ ಕೃಷ್ಣ ಅವರ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಆರೋಗ್ಯ ಸ್ಥಿತಿ ತೀರಾ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಸಹಜವಾಗಿಯೇ ಕುಟುಂಬದ ಸದಸ್ಯರಲ್ಲಿ ಆತಂಕ ಮನೆ ಮಾಡಿದೆ. ಇತ್ತೀಚೆಗಷ್ಟೇ ಕೃಷ್ಣ ಅವರು ಹೆಂಡತಿಯನ್ನು ಕಳೆದುಕೊಂಡಿದ್ದರು. ಆ ನೋವಲ್ಲೇ ಅವರು ದಿನಗಳನ್ನು ಕಳೆಯುತ್ತಿದ್ದರು. ಇದನ್ನೂ ಓದಿ:`ಬನಾರಸ್’ ಚಿತ್ರದ ಬೆನ್ನಲ್ಲೇ ಝೈದ್ ಖಾನ್‌ಗೆ ಬಂತು ಬಿಗ್ ಆಫರ್

    80 ವರ್ಷದ ಕೃಷ್ಣ (Krishna) ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ. ಸದ್ಯ ಬಂದಿರುವ ಮಾಹಿತಿ ಪ್ರಕಾರ ಅವರನ್ನು ತೀವ್ರ ನಿಗಾಘಟದಲ್ಲಿ ಸ್ಥಳಾಂತರಿಸಿದ ಚಿಕಿತ್ಸೆ ಮುಂದುವರೆಸಿದ್ದಾರೆ. ವೆಂಟಿಲೇಟರ್ ಮೂಲಕವೇ ಅವರು ಉಸಿರಾಡುತ್ತಿದ್ದಾರೆ. ನಿನ್ನೆ ಹೃದಯಾಘಾತವಾಗಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು ಎಂದೂ ಹೇಳಲಾಗುತ್ತಿದೆ. ಕೃಷ್ಣ ಅವರನ್ನು 24 ಗಂಟೆ ಆಬ್ಸರ್ವೇಷನ್ ನಲ್ಲಿ ಇಡಲಾಗಿದ್ದು, ಅವರಿಗಾಗಿ ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ದೆಹಲಿಯಲ್ಲಿ ಹೆಚ್ಚಾಗ್ತಿದೆ ಕೊರೊನಾ – 24 ಗಂಟೆಗಳಲ್ಲಿ 1,600 ಹೊಸ ಪ್ರಕರಣ

    ದೆಹಲಿಯಲ್ಲಿ ಹೆಚ್ಚಾಗ್ತಿದೆ ಕೊರೊನಾ – 24 ಗಂಟೆಗಳಲ್ಲಿ 1,600 ಹೊಸ ಪ್ರಕರಣ

    ನವದೆಹಲಿ: ದಿನೇ ದಿನೆ ದೆಹಲಿಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಒಟ್ಟು 1,607 ಕೋವಿಡ್-19 ಹೊಸ ಪ್ರಕರಣಗಳು ದಾಖಲಾಗಿವೆ ಮತ್ತು ಪಾಸಿಟಿವ್ ಪ್ರಮಾಣವು ಶೇ.5.28ಕ್ಕೆ ತಲುಪಿದೆ. ಪ್ರಸ್ತುತ ದೆಹಲಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 5,609ಕ್ಕೆ ಏರಿಕೆಯಾಗಿದೆ ಎಂದು ಶುಕ್ರವಾರ ಬಿಡುಗಡೆಯಾದ ಹೆಲ್ತ್ ಬುಲೆಟಿನ್‍ನಲ್ಲಿ ವರದಿಯಾಗಿದೆ.

    ಒಟ್ಟು 139 ಮಂದಿ ಕೊರೊನಾ ಸೋಂಕಿತರು ಆಸ್ಪತ್ರೆಗೆ ದಾಖಲಾಗಿದ್ದಾರೆ. 3,863 ಮಂದಿ ಹೋಂ ಕ್ವಾರಂಟೈನ್‍ನಲ್ಲಿದ್ದಾರೆ. ಪ್ರಸ್ತುತ ಭಾರತದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳು 18,684 ರಷ್ಟಿದೆ ಮತ್ತು ಕಳೆದ 24 ಗಂಟೆಗಳಲ್ಲಿ 3,688 ಹೊಸ ಪ್ರಕರಣಗಳು ದಾಖಲಾಗಿವೆ. ಇದನ್ನೂ ಓದಿ: ಸ್ಯಾಂಡಲ್ ವುಡ್ ಸಿಂಡ್ರೇಲಾ ರಾಧಿಕಾ ಪಂಡಿತ್ ಗೆ ಭಯಂಕರ ಬೇಡಿಕೆ ಇಟ್ಟ ಫ್ಯಾನ್ಸ್

    ದೆಹಲಿಯಲ್ಲಿ 1,607 ಪ್ರಕರಣಗಳು ದಾಖಲಾಗಿದ್ದರೆ, ಹರಿಯಾಣದಲ್ಲಿ 624 ಪ್ರಕರಣಗಳು, ಕೇರಳದಲ್ಲಿ 412 ಪ್ರಕರಣಗಳು, ಉತ್ತರ ಪ್ರದೇಶ 293 ಪ್ರಕರಣಗಳು ಮತ್ತು ಮಹಾರಾಷ್ಟ್ರದಲ್ಲಿ 148ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

    ಈ ಐದು ರಾಜ್ಯಗಳಿಂದ ಶೇ.83.61 ಪ್ರಕರಣಗಳು ವರದಿಯಾಗಿದ್ದರೆ, ದೆಹಲಿವೊಂದರಲ್ಲಿಯೇ ಶೇ. 43.57ರಷ್ಟು ಹೊಸ ಪ್ರಕರಣಗಳು ಪತ್ತೆಯಾಗಿವೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಒಟ್ಟು 50 ಮಂದಿ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 5,23,803ಕ್ಕೆ ಏರಿಕೆಯಾಗಿದೆ. ಪ್ರತಿದಿನದ ಪಾಸಿಟಿವಿಟಿ ದರವು ಶೇ. 0.74 ರಷ್ಟಿದ್ದರೆ, ವಾರದ ಪಾಸಿಟಿವಿಟಿ ದರವು ಶೇ.0.66 ರಷ್ಟಿದೆ. ಇದನ್ನೂ ಓದಿ: ಜಮೀನು ಹಣ ನೀಡಲ್ಲ ಎಂದು ತಂದೆಯ 13 ಲಕ್ಷ ರೂ. ಕದ್ದ ಮಗ

    ದೇಶದಲ್ಲಿ ಗುಣಮುಖರಾದವರ ಸಂಖ್ಯೆ ಶೇ.98.74 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 2,755 ಮಂದಿ ಚೇತರಿಕೆಯಾಗಿದ್ದು, ಭಾರತದಲ್ಲಿ ಒಟ್ಟು ಚೇತರಿಕೆಗೊಂಡವರ ಸಂಖ್ಯೆ 4,25,33,377 ಕ್ಕೆ ತಲುಪಿದೆ.

  • ಸಂಚಾರಿ ವಿಜಯ್ ಕೋಮಾದಲ್ಲಿದ್ದಾರೆ, ಪರಿಸ್ಥಿತಿ ಗಂಭೀರ- ಅಪೋಲೋ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

    ಸಂಚಾರಿ ವಿಜಯ್ ಕೋಮಾದಲ್ಲಿದ್ದಾರೆ, ಪರಿಸ್ಥಿತಿ ಗಂಭೀರ- ಅಪೋಲೋ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

    ಬೆಂಗಳೂರು: ನಟ ಸಂಚಾರಿ ವಿಜಯ್ ಅವರು ಕೋಮಾದಲ್ಲಿದ್ದು, ಪರಿಸ್ಥಿತಿ ತುಂಬಾ ಗಂಭೀರವಾಗಿದೆ. ಫುಲ್ ಲೈಫ್ ಸಪೋರ್ಟ್‍ನೊಂದಿಗೆ ನ್ಯೂರೋ ಐಸಿಯುನಲ್ಲಿದ್ದಾರೆ ಎಂದು ಅಪೋಲೋ ಆಸ್ಪತ್ರೆ ಮಾಹಿತಿ ನೀಡಿದೆ.

    ಸಂಚಾರಿ ವಿಜಯ್ ಅವರ ಕುರಿತು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿರುವ ಭನ್ನೇರುಘಟ್ಟದ ರಸ್ತೆಯ ಅಪೋಲೋ ಆಸ್ಪತ್ರೆ, ವಿಜಯ್ ಅವರಿಗೆ ರಾತ್ರಿ 11.45ರ ಸುಮಾರಿಗೆ ರಸ್ತೆ ಅಪಘಾತವಾಗಿದ್ದು, ತಕ್ಷಣವೇ ಭನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಗೆ ಕರೆತರಲಾಯಿತು. ಅವರನ್ನು ತುರ್ತು ವಿಭಾಗಕ್ಕೆ ದಾಖಲಿಸಿಕೊಂಡಾಗ ಪರಿಸ್ಥಿತಿ ತುಂಬಾ ಗಂಭೀರವಾಗಿತ್ತು ಎಂದು ಆಸ್ಪತ್ರೆ ವಿವರಿಸಿದೆ.

    ಮೆದುಳಿನ ಸಿ.ಟಿ. ಸ್ಕ್ಯಾನ್ ಮಾಡಿದಾಗ ಮೆದುಳಿಗೆ ತೀವ್ರ ಗಾಯವಾಗಿ ರಕ್ತಸ್ರಾವವಾಗುತ್ತಿತ್ತು. ಮೆದುಳಿನ ರಕ್ತಸ್ರಾವವನ್ನು ತಡೆಯಲು ತಕ್ಷಣವೇ ಬ್ರೇನ್ ಸರ್ಜರಿ ಮಾಡಲಾಯಿತು. ಪ್ರಸ್ತುತ ಅವರು ಫುಲ್ ಲೈಫ್ ಸಪೋರ್ಟ್‍ನೊಂದಿಗೆ ನ್ಯೂರೋ ಐಸಿಯುನಲ್ಲಿದ್ದು, ಕೋಮಾ ಸ್ಥತಿಯಲ್ಲೇ ಮುಂದುವರಿದಿದ್ದಾರೆ. ಅಲ್ಲದೆ ಅವರ ಪರಿಸ್ಥಿತಿ ತುಂಬಾ ಗಂಭೀರವಾಗಿದೆ. ಅವರ ಆರೋಗ್ಯದ ಸ್ಥಿತಿಗತಿ ಕುರಿತು ನಿಗಾ ವಹಿಸಿದ್ದೇವೆ. ಸಾಧ್ಯವಾದಷ್ಟು ಉತ್ತಮ ಚಿಕಿತ್ಸೆ ನೀಡುತ್ತಿದ್ದೇವೆ ಎಂದು ಆಸ್ಪತ್ರೆ ಹೆಲ್ತ್ ಬುಲೆಟಿನ್‍ನಲ್ಲಿ ವಿವರಿಸಿದೆ. ಇದನ್ನೂ ಓದಿ: ತಲೆಭಾಗಕ್ಕೆ ಬಲವಾದ ಪೆಟ್ಟು – ಸಂಚಾರಿ ವಿಜಯ್ ಬೈಕ್ ಅಪಘಾತವಾಗಿದ್ದೇಗೆ?

    ಅಪಘಾತವಾಗಿದ್ದು ಹೇಗೆ?
    ಶನಿವಾರ ರಾತ್ರಿ ಗೆಳೆಯನ ಮನೆಯಲ್ಲಿ ಊಟ ಮಾಡಿಕೊಂಡು ಬೈಕ್ ನಲ್ಲಿ ಹಿಂದಿರುಗಿತ್ತಿದ್ದರು. ಬೈಕ್ ಗೆಳೆಯ ನವೀನ್ ಓಡಿಸುತ್ತಿದ್ದರು, ವಿಜಯ್ ಹಿಂಬದಿಯಲ್ಲಿ ಕುಳಿತಿದ್ದರು. ಜೆಪಿ ನಗರದ 7ನೇ ಹಂತದಲ್ಲಿ ಬೈಕ್ ಸ್ಕಿಡ್ ಆಗಿದ್ದರಿಂದ ಅಪಘಾತ ಸಂಭವಿಸಿದೆ. ಕೂಡಲೇ ಸ್ಥಳೀಯರು ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬೈಕ್ ವೇಗವಾಗಿದ್ದರಿಂದ ಸ್ಕಿಡ್ ಆಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿರುವ ಬಗ್ಗೆ ಮಾಹಿತಿ ತಿಳಿದು ಬಂದಿದ್ದು, ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿದೆ.

    ವಿಜಯ್ ಬಲ ತೊಡೆ ಭಾಗ ಮುರಿದಿದ್ದು, ಮೆದುಳಿನ ಭಾಗದಲ್ಲಿ ತೀವ್ರ ರಕ್ತಸ್ರಾವವಾಗಿದೆ. ತಲೆಗೆ ಪೆಟ್ಟು ಬಿದ್ದ ಪರಿಣಾಮ ತೀವ್ರ ರಕ್ತಸ್ರಾವವಾಗಿದ್ದರಿಂದ ರಾತ್ರಿಯೇ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಮೆದುಳಿನ ರಕ್ತಸ್ತ್ರಾವ ತಡೆಗೆ ಸರ್ಜರಿ ನಡೆದಿದೆ. ಡಾ.ಅರುಣ್.ಎಲ್.ನಾಯ್ಕ್ ಟೀಂ ಸಂಚಾರಿ ವಿಜಯ್ ಗೆ ಚಿಕಿತ್ಸೆ ಮಾಡಿದ್ದಾರೆ. ಆರೋಗ್ಯದ ಮಾಹಿತಿ ನೀಡಲು ಆಸ್ಪತ್ರೆ 48 ಗಂಟೆ ಸಮಯ ಕೇಳಿತ್ತು. ಸದ್ಯ ಐಸಿಯುನಲ್ಲಿರುವ ವಿಜಯ್ ಅವರಿಗೆ ಚಿಕಿತ್ಸೆ ಮುಂದುವರಿದಿದೆ.

    ಅಪಘಾತದ ವಿಷಯ ತಿಳಿಯುತ್ತಿದ್ದಂತೆ ನಟ ನೀನಾಸಂ ಸತೀಶ್ ಆಸ್ಪತ್ರೆಗೆ ಆಗಮಿಸಿ, ವೈದ್ಯರ ಬಳಿ ಮಾಹಿತಿ ಪಡೆದುಕೊಂಡಿದ್ದಾರೆ. ಆಸ್ಪತ್ರೆಯಲ್ಲಿರುವ ವಿಜಯ್ ಕುಟುಂಬಸ್ಥರಿಗೆ ನೀನಾಸಂ ಸತೀಶ್ ಧೈರ್ಯ ಹೇಳುವ ಕೆಲಸ ಮಾಡುತ್ತಿದ್ದಾರೆ.

    ಮೂಲತಃ ರಂಗಭೂಮಿ ಕಲಾವಿದರಾಗಿರುವ ಸಂಚಾರಿ ವಿಜಯ್, ನಾನು ಅವನಲ್ಲ, ಅವಳು ಸಿನಿಮಾ ನಟನೆಗೆ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದರು. ಸಿನಿಮಾ ಜೊತೆಯಲ್ಲಿ `ಉಸಿರು’ ಹೆಸರಿನ ತಂಡವನ್ನು ಕಟ್ಟಿಕೊಂಡು ಲಾಕ್‍ಡೌನ್ ನಲ್ಲಿ ಸಂಕಷ್ಟ ಸಿಲುಕಿದವರಿಗೆ ಸಹಾಯ ಮಾಡುತ್ತಿದ್ದರು.

  • ಸೆ.4ರಂದೇ ಎಸ್‍ಪಿಬಿ ಕೊರೊನಾ ನೆಗೆಟಿವ್- ಅಂತಿಮ ದರ್ಶನಕ್ಕೆ ವ್ಯವಸ್ಥೆ

    ಸೆ.4ರಂದೇ ಎಸ್‍ಪಿಬಿ ಕೊರೊನಾ ನೆಗೆಟಿವ್- ಅಂತಿಮ ದರ್ಶನಕ್ಕೆ ವ್ಯವಸ್ಥೆ

    – ಕೇವಲ ಗಣ್ಯರಿಗೆ ಮಾತ್ರ ಅವಕಾಶ

    ಚೆನ್ನೈ: ಖ್ಯಾತ ಹಿನ್ನೆಲೆ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದ ಕುರಿತು ನಗರದ ಎಂಜಿಎಂ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಸೆಪ್ಟೆಂಬರ್ 4ರಂದೇ ಅವರಿಗೆ ಕೊರೊನಾ ನೆಗೆಟಿವ್ ಬಂದಿತ್ತು ಎಂದು ಸ್ಪಷ್ಟಪಡಿಸಿದೆ.

    ಎಸ್‍ಪಿಬಿ ಅವರ ಮರಣದ ಬಳಿಕ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಆಗಸ್ಟ್ 5ರಂದು ಬಾಲಸುಬ್ರಹ್ಮಣ್ಯಂ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಹಿನ್ನೆಲೆ ಆಗಸ್ಟ್ 14ರಂದು ಅವರ ಸ್ಥಿತಿ ಗಂಭೀರವಾಯಿತು. ಅವರ ಆರೋಗ್ಯವನ್ನು ನುರಿತ ತಜ್ಞ ವೈದ್ಯರು ನೋಡಿಕೊಳ್ಳುತ್ತಿದ್ದರು. ಅಲ್ಲದೆ ತರ್ತು ನಿರ್ವಹಣಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ನಂತರ ಸೆಪ್ಟೆಂಬರ್ 4ರಂದು ಅವರಿಗೆ ಕೊರೊನಾ ನೆಗೆಟಿವ್ ಬಂದಿತ್ತು ಎಂದು ಆಸ್ಪತ್ರೆ ತಿಳಿಸಿದೆ.

    ಇಂದು ಬೆಳಗ್ಗೆ ಸಹ ತಜ್ಞ ವೈದ್ಯರು ಅವರ ಆರೋಗ್ಯದ ಬಗ್ಗೆ ನಿಗಾ ವಹಿಸಿದ್ದರು. ಅವರ ಆರೋಗ್ಯವನ್ನು ಹತೋಟಿಗೆ ತರಲು ತಜ್ಞ ವೈದ್ಯರು ಬಹಳಷ್ಟು ಪ್ರಯತ್ನಿಸಿದರು. ಆದರೆ ಕಾರ್ಡಿಯೋ ರೆಸ್ಪಿರೇಟರಿ(ಹೃದಯ ರಕ್ತನಾಳ) ಅರೆಸ್ಟ್ ನಿಂದಾಗಿ ಇಂದು(ಸೆಪ್ಟೆಂಬರ್ 25) ಮಧ್ಯಾಹ್ನ 1.04ಕ್ಕೆ ಅವರು ಸಾವನ್ನಪ್ಪಿದರು ಎಂದು ತಿಳಿಸಲು ವಿಷಾಧಿಸುತ್ತೇವೆ ಎಂದು ಹೆಲ್ತ್ ಬುಲೆಟಿನ್‍ನಲ್ಲಿ ತಿಳಿಸಲಾಗಿದೆ.

    ಅವರು ಕುಟುಂಬ, ಸ್ನೇಹಿತರು ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲೆಂದು ಪ್ರಾರ್ಥಿಸುತ್ತೇವೆ ಎಂದು ಆಸ್ಪತ್ರೆ ವಿಷಾದ ವ್ಯಕ್ತಪಡಿಸಿದೆ. ಸುದ್ದಿ ಹೊರ ಬೀಳುವುದಕ್ಕೂ ಮುನ್ನ ಚೆನ್ನೈನ ಎಂಜಿಎಂ ಆಸ್ಪತ್ರೆಗೆ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿತ್ತು. ಆಸ್ಪತ್ರೆ ಆವರಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ಜಮಾಯಿಸಿದ್ದು, ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. 11-30ಕ್ಕೆ ಖ್ಯಾತ ನಿರ್ದೇಶಕ ಭಾರತಿ ರಾಜ ಮತ್ತು ಸಂಗೀತ ನಿರ್ದೇಶಕ ಇಳಯರಾಜ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ ಎಂಬ ಮಾಹಿತಿ ಇದೆ.

    ಎಸ್‍ಪಿಬಿ ಪುತ್ರಿ ಪಲ್ಲವಿ ಹಾಗೂ ನಿರ್ದೇಶಕ ಭಾರತಿ ರಾಜ ಅವರು ಆಸ್ಪತ್ರೆಗೆ ಭೇಟಿ ಕೊಟ್ಟಿದ್ದಾರೆ. ಕೊರೊನಾ ನೆಗೆಟಿವ್ ಹಿನ್ನೆಲೆ ಇಂದು ಸಂಜೆ ಅವರ ನಿವಾಸಕ್ಕೆ ಪಾರ್ಥಿವ ಶರೀರವನ್ನು ತರಲಾಗುತ್ತದೆ. ಆದರೆ ಕೇವಲ ಗಣ್ಯರಿಗಷ್ಟೇ ದರ್ಶನ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಎಂಜಿಎಂ ಆಸ್ಪತ್ರೆ ಮುಂಭಾಗ ಭದ್ರತೆಗಾಗಿ ಬ್ಯಾರಿಕೇಡ್‍ಗಳನ್ನು ಹಾಕಲಾಗಿದೆ.

  • ಇಂದು 6,997 ಮಂದಿಗೆ ಕೊರೊನಾ- ರಾಜ್ಯದಲ್ಲಿ 94,652 ಸಕ್ರಿಯ ಪ್ರಕರಣಗಳು

    ಇಂದು 6,997 ಮಂದಿಗೆ ಕೊರೊನಾ- ರಾಜ್ಯದಲ್ಲಿ 94,652 ಸಕ್ರಿಯ ಪ್ರಕರಣಗಳು

    ಬೆಂಗಳೂರು: ರಾಜ್ಯದಲ್ಲಿಂದು 6,997 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 38 ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5,40,847ಕ್ಕೆ ಏರಿಕೆಯಾಗಿದೆ.

    ಇಂದು ಕೊರೊನಾದಿಂದ ಗುಣಮುಖರಾಗಿ 5,460 ಜನರು ಡಿಸ್ಚಾರ್ಜ್ ಆಗಿದ್ದು, 816 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಇದುವರೆಗೂ ಮಹಾಮಾರಿ 8,266 ಜನರನ್ನು ಬಲಿ ಪಡೆದುಕೊಂಡಿದೆ. ಇಂದು 56,398 ಜನರು ಕೊರೊನಾ ಪರೀಕ್ಷೆಗೆ ಒಳಗಾಗಿದ್ದಾರೆ. ಇದುವರೆಗೂ 43,94,840 ಜನರು ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದಾರೆ.

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 50, ಬಳ್ಳಾರಿ 192, ಬೆಳಗಾವಿ 191, ಬೆಂಗಳೂರು ಗ್ರಾಮಾಂತರ 128, ಬೆಂಗಳೂರು ನಗರ 3547, ಬೀದರ್ 63, ಚಾಮರಾಜನಗರ 32, ಚಿಕ್ಕಬಳ್ಳಾಪುರ 84, ಚಿಕ್ಕಮಗಳೂರು 252, ಚಿತ್ರದುರ್ಗ 89, ದಕ್ಷಿಣ ಕನ್ನಡ 186, ದಾವಣಗೆರೆ 138, ಧಾರವಾಡ 120, ಗದಗ 59, ಹಾಸನ 315, ಹಾವೇರಿ 32, ಕಲಬುರಗಿ 100, ಕೊಡಗು 33, ಕೋಲಾರ 44, ಕೊಪ್ಪಳ 88, ಮಂಡ್ಯ 203, ಮೈಸೂರು 341, ರಾಯಚೂರು 37, ರಾಮನಗರ 57, ಶಿವಮೊಗ್ಗ 187, ತುಮಕೂರು 90, ಉಡುಪಿ 102, ಉತ್ತರ ಕನ್ನಡ 115, ವಿಜಯಪುರ 82 ಮತ್ತು ಯಾದಗಿರಿಯಲ್ಲಿ 40 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

    ಒಟ್ಟು ರಾಜ್ಯದಲ್ಲಿ 816 ಜನ ಕೊರೊನಾ ಸೋಂಕಿತರು ಐಸಿಯುನಲ್ಲಿದ್ದು, ಅದರಲ್ಲಿ ಬೆಂಗಳೂರು ನಗರದಲ್ಲಿ 259, ಬಳ್ಳಾರಿಯಲ್ಲಿ 74, ಧಾರವಾಡದಲ್ಲಿ 93 ಮತ್ತು ಹಾಸನದಲ್ಲಿ 62 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೊತೆಗೆ ಇಂದು ಕೊರೊನಾ ಸೋಂಕಿನಿಂದ ಕೇಂದ್ರ ಸಚಿವ ಸುರೇಶ್ ಅಂಗಡಿ ಸಾವನ್ನಪ್ಪಿದ್ದಾರೆ.

  • ಎಸ್‍ಪಿಬಿ ಆರೋಗ್ಯದಲ್ಲಿ ಚೇತರಿಕೆ- ಕುಳಿತುಕೊಳ್ತಾರೆ, ಊಟ ಮಾಡ್ತಾರೆ ಗಾನ ಗಾರುಡಿಗ

    ಎಸ್‍ಪಿಬಿ ಆರೋಗ್ಯದಲ್ಲಿ ಚೇತರಿಕೆ- ಕುಳಿತುಕೊಳ್ತಾರೆ, ಊಟ ಮಾಡ್ತಾರೆ ಗಾನ ಗಾರುಡಿಗ

    – ಇನ್ನೂ ವೆಂಟಿಲೇಟರ್ ನಲ್ಲೇ ಚಿಕಿತ್ಸೆ ಮುಂದುವರಿಕೆ

    ಚೆನ್ನೈ: ಹಿರಿಯ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದ್ದು, ಸ್ವಲ್ಪ ಮಟ್ಟಿಗೆ ಕುಳಿತುಕೊಳ್ಳುವುದು ಹಾಗೂ ಸ್ವಲ್ಪ ಆಹಾರವನ್ನು ಸೇವಿಸುತ್ತಿದ್ದಾರೆ ಎಂದು ಅವರ ಪುತ್ರ ಚರಣ್ ತಿಳಿಸಿದ್ದಾರೆ.

    ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಪೋಸ್ಟ್ ಮಾಡುವ ಮೂಲಕ ಮಾಹಿತಿ ನೀಡಿದ್ದು, ಆಪ್ಪನ ಆರೋಗ್ಯ ಸ್ಥಿರವಾಗಿದ್ದು, ವೆಂಟಿಲೇಟರ್‍ನಲ್ಲೇ ಇದ್ದಾರೆ. ಉಳಿದೆಲ್ಲ ವರದಿಗಳು ನಾರ್ಮಲ್ ಆಗಿದ್ದು, ಯಾವುದೇ ಇನ್ಫೆಕ್ಷನ್ ಕಂಡು ಬಂದಿಲ್ಲ. ಆದರೆ ಶ್ವಾಸಕೋಶ ಹಾಗೂ ಉಸಿರಾಟದಲ್ಲಿ ಇನ್ನೂ ಹೆಚ್ಚಿನ ವೃದ್ಧಿಯಾಗಬೇಕಿದೆ. ಇದೀಗ ಅವರು ಕುಳಿತುಕೊಳ್ಳುತ್ತಿದ್ದು, ವೈದ್ಯರ ಸಹಾಯದ ಮೇರೆಗೆ ಪ್ರತಿ ದಿನ 20 ನಿಮಿಷಗಳ ಕಾಲ ಕುಳಿತುಕೊಳ್ಳುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

    ಇದು ಅವರಿಗೆ ಒಂದು ರೀತಿಯ ಸವಾಲಾಗಿದ್ದು, ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ನಿಮ್ಮೆಲ್ಲರ ಪ್ರೀತಿ, ಪ್ರಾರ್ಥನೆ ಅವರಿಗೆ ಶಕ್ತಿ ತುಂಬಿದೆ. ಎಂಜಿಎಂ ಆಸ್ಪತ್ರೆಯ ವೈದ್ಯರು ಹಾಗೂ ನರ್ಸ್‍ಗಳ ತಂಡ ತುಂಬಾ ಕಾಳಜಿ ವಹಿಸಿ ಚಿಕಿತ್ಸೆ ನೀಡುತ್ತಿದೆ ಹಾಗೂ ನೋಡಿಕೊಳ್ಳುತ್ತಿದೆ. ನಮ್ಮ ತಂದೆಗೆ ಹಾಗೂ ಕುಟುಂಬಕ್ಕೆ ತುಂಬಾ ಸಹಕಾರ ನೀಡುತ್ತಿದ್ದಾರೆ ಎಂದು ವಿವರಿಸಿದ್ದಾರೆ.

     

    View this post on Instagram

     

    A post shared by S. P. Charan/Producer/Director (@spbcharan) on

    ಖುಷಿಯ ವಿಚಾರವೆಂದರೆ ನಿನ್ನೆಯಿಂದ ಆಹಾರ ಸೇವಿಸುತ್ತಿದ್ದು, ಇದು ಅವರಿಗೆ ಶಕ್ತಿ ಹೆಚ್ಚಿಸಲು ಸಹಾಯ ಮಾಡುತ್ತದೆ. ನಿಮ್ಮೆಲ್ಲರ ಪ್ರೀತಿ ಹಾಗೂ ಪ್ರಾರ್ಥನೆಗೆ ಮತ್ತೊಮ್ಮೆ ಧನ್ಯವಾದ ಅರ್ಪಿಸುತ್ತೇನೆ ಎಂದು ವಿಡಿಯೋದಲ್ಲಿ ಅವರು ತಿಳಿಸಿದ್ದಾರೆ.

    ಕಳೆದ ಆಗಸ್ಟ್ 5ರಂದು ಎಸ್‍ಪಿಬಿ ಅವರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಹೀಗಾಗಿ ಅವರು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ಈ ನಡುವೆ ಅವರ ಆರೋಗ್ಯ ಗಂಭೀರವಾದ ಕಾರಣ ಅವರನ್ನು ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವೈದ್ಯರ ತಂಡಗಳು ಎಸ್‍ಬಿಪಿಗೆ ಚಿಕಿತ್ಸೆ ನೀಡಿದ್ದವು. ಕಳೆದ 19 ದಿನಗಳಿಂದ ಎಸ್‍ಪಿಬಿಯವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಎಂಟು ದಿನಗಳಿಂದ ಅವರ ಆರೋಗ್ಯ ಪರಿಸ್ಥಿತಿ ತುಂಬಾ ಹದಗೆಟ್ಟಿದ್ದು, ಅವರನ್ನು ಐಸಿಯುವಿನಲ್ಲಿಟ್ಟು ಚಿಕಿತ್ಸೆ ಕೊಡಲಾಗಿತ್ತು. ಕೊರೊನಾ ವೈರಸ್‍ನಿಂದ ಶ್ವಾಸಕೋಶಗಳು ತೀವ್ರವಾಗಿ ಹಾನಿಗೊಳಗಾಗಿರುವ ಹಿನ್ನೆಲೆಯಲ್ಲಿ ರಕ್ತಸ್ರಾವ ಹೆಚ್ಚಾಗಿದೆ. ಆದ್ದರಿಂದ ಎಕ್ಮೋ ಮೆಷಿನ್ ಅಳವಡಿಸಿ ಚಿಕಿತ್ಸೆ ಮಾಡಲಾಗುತ್ತಿದೆ ಎಂದು ವೈದ್ಯರು ಹೇಳಿದ್ದರು. ಅಲ್ಲದೆ ಆಗಸ್ಟ್ 24ರಂದು ಅವರಿಗೆ ಕೊರೊನಾ ನೆಗೆಟಿವ್ ಬಂದಿತ್ತು.

  • ಹೆಮ್ಮಾರಿಗೆ ಇಂದು 19 ಮಂದಿ ಬಲಿ- 226ಕ್ಕೇರಿದ ಸಾವಿನ ಸಂಖ್ಯೆ

    ಹೆಮ್ಮಾರಿಗೆ ಇಂದು 19 ಮಂದಿ ಬಲಿ- 226ಕ್ಕೇರಿದ ಸಾವಿನ ಸಂಖ್ಯೆ

    – ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾ ಸಾವಿನ ರಣಕೇಕೆ

    ಬೆಂಗಳೂರು: ಹೆಮ್ಮಾರಿ ಕೊರೊನಾ ರಣಕೇಕೆ ಕಂಟ್ರೋಲ್‍ಗೆ ಸಿಗುತ್ತಿಲ್ಲ. ದಿನೇ ದಿನೇ ತನ್ನ ದಾಖಲೆಯನ್ನು ತಾನೇ ಮುರಿದು ಹೊಸ ದಾಖಲೆ ಸೃಷ್ಟಿಸಿ ಮುನ್ನುಗ್ಗುತ್ತಿರುವ ಕೊರೊನಾಗೆ ಇಂದು 19 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 226ಕ್ಕೇರಿದೆ.

    ಆರೋಗ್ಯ ಇಲಾಖೆ ಬುಲೆಟಿನ್ ಅನ್ವಯ ಬೆಂಗಳೂರಿನಲ್ಲಿ 3, ಬಳ್ಳಾರಿಯಲ್ಲಿ 12, ಬಾಗಲಕೋಟೆ, ರಾಮನಗರ, ದಕ್ಷಿಣ ಕನ್ನಡ, ಹಾಸನದಲ್ಲಿ ತಲಾ 1 ಕೋವಿಡ್ 19 ಸಾವಿನ ಪ್ರಕರಣ ವರದಿಯಾಗಿದೆ. ಬೆಂಗಳುರಿನಲ್ಲಿ 178 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ರಾಜ್ಯದಲ್ಲಿ ಒಟ್ಟಾರೆ 268 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಸಾವನ್ನಪ್ಪಿದವರ ವಿವರ:
    ಬೆಂಗಳೂರಿನಲ್ಲಿ ಮೂವರು (ರೋಗಿ- 6,878, ರೋಗಿ-10,019, ರೋಗಿ-10,033) ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಬಳ್ಳಾರಿಯಲ್ಲಿ (ರೋಗಿ-10,769, ರೋಗಿ-11,305, ರೋಗಿ-12,215, ರೋಗಿ-12,228, ರೋಗಿ-12,268, ರೋಗಿ-12,271, ರೋಗಿ-13,498, ರೋಗಿ-13,500, ರೋಗಿ-13,514, ರೋಗಿ-13,515, ರೋಗಿ-13.516, ರೋಗಿ-13,557).

    ಬಾಗಲಕೋಟೆಯ 59 ವರ್ಷದ ವೃದ್ಧ (ರೋಗಿ-11,211), ರಾಮನಗರದ 40 ಪುರುಷ (ರೋಗಿ-13,267), ದಕ್ಷಿಣ ಕನ್ನಡದ 49 ಮಹಿಳೆ (ರೋಗಿ-13,284), ಹಾಸನದ 60 ವರ್ಷದ ವೃದ್ಧೆ (ರೋಗಿ-13,336) ಕೋವಿಡ್‍ಗೆ ಬಲಿಯಾಗಿದ್ದಾರೆ.

  • ದರ್ಶನ್ ಆರೋಗ್ಯ ಸ್ಥಿರ: ಹೆಲ್ತ್ ಬುಲೆಟಿನ್ ಬಿಡುಗಡೆ

    ದರ್ಶನ್ ಆರೋಗ್ಯ ಸ್ಥಿರ: ಹೆಲ್ತ್ ಬುಲೆಟಿನ್ ಬಿಡುಗಡೆ

    ಮೈಸೂರು: ಅನಾರೋಗ್ಯದ ಕಾರಣ ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಾಗಿರುವ ನಟ ದರ್ಶನ್ ಆರೋಗ್ಯ ಕುರಿತು ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.

    ಹೊಟ್ಟೆ ನೋವಿನ ಹಿನ್ನೆಲೆಯಲ್ಲಿ ದರ್ಶನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗ್ಯಾಸ್ಟ್ರೋ ಎಂಟರಾಲಜಿಸ್ಟ್ ತಜ್ಞರಾದ ಡಾ.ಅನೂಪ್ ಆಳ್ವಾ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

    ಇಂದು ಮುಂಜಾನೆ 4 ಗಂಟೆ ವೇಳೆಗೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ದರ್ಶನ್ ಅವರಿಗೆ ಕೊಲಂಬಿಯಾ ಏಷಿಯಾ ಆಸ್ಪತ್ರೆ ಸ್ಪೆಷಲ್ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಇಂದು ಗ್ರಾಸ್ಟ್ರಿಕ್ ಪರಿಣಾಮ ತೀವ್ರ ತರವಾದ ಹೊಟ್ಟೆನೋವಿನಿಂದಾಗಿ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ದರ್ಶನ್ ಅವರಿಗೆ ಒಂದು ದಿನ ಚಿಕಿತ್ಸೆ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ. ವೈದ್ಯರ ಸಲಹೆ ಮೇರೆಗೆ ಇಂದು ಆಸ್ಪತ್ರೆಯಲ್ಲೇ ಡಿ ಬಾಸ್ ಉಳಿದಿದ್ದಾರೆ. ವೈದ್ಯರ ಸಲಹೆ ಮೇರೆಗೆ ಒಂದು ದಿನ ವಿಶ್ರಾಂತಿ ಪಡೆಯುತ್ತಿದ್ದಾರೆ.