Tag: Health Camp

  • ʻಪಬ್ಲಿಕ್‌ ಟಿವಿʼ ಸಿಬ್ಬಂದಿಗೆ ಸಮಗ್ರ ಆರೋಗ್ಯ ತಪಾಸಣೆ

    ʻಪಬ್ಲಿಕ್‌ ಟಿವಿʼ ಸಿಬ್ಬಂದಿಗೆ ಸಮಗ್ರ ಆರೋಗ್ಯ ತಪಾಸಣೆ

    – 2 ದಿನಗಳ ಕಾಲ ಆರೋಗ್ಯ ತಪಾಸಣಾ ಶಿಬಿರ

    ಬೆಂಗಳೂರು: ʻಪಬ್ಲಿಕ್‌ ಟಿವಿʼ (Public TV) ವತಿಯಿಂದ ಮಲ್ಲೇಶ್ವರಂನ ಮಣಿಪಾಲ್‌ ಆಸ್ಪತ್ರೆ (Manipal Hospital) ಸಹಯೋಗದಲ್ಲಿ ಸಿಬ್ಬಂದಿ‌ ವರ್ಗದವರಿಗೆ ಎರಡು ದಿನಗಳ ಕಾಲ ಸಮಗ್ರ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

    ಆರೋಗ್ಯ ತಪಾಸಣಾ ಶಿಬಿರಕ್ಕೆ (Health Checkup Camp) ಶುಕ್ರವಾರ ಚಾಲನೆ ನೀಡಲಾಯಿತು. ಪ್ರಾಥಮಿಕ, ರಕ್ತ ಪರೀಕ್ಷೆ ಹಾಗೂ ಹೃದಯ ಸಂಬಂಧಿ ಪರೀಕ್ಷೆಗಳನ್ನು ನಡೆಸಲಾಯಿತು. ಸಂಸ್ಥೆಯ ಎಲ್ಲ ಉದ್ಯೋಗಿಗಳು ಹಾಗೂ ಅವರ ಕುಟುಂಬ ಸದಸ್ಯರಿಗೆ ಆರೋಗ್ಯ ತಪಾಸಣೆ ನಡೆಯಿತು. ಇದನ್ನೂ ಓದಿ: 2ನೇ ಆಷಾಢ ಶುಕ್ರವಾರ – ಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ಚಾಮುಂಡಿ ತಾಯಿ

    ಎರಡು ದಿನಗಳ ಕಾಲ ನಡೆಯುತ್ತಿರುವ ಈ ಆರೋಗ್ಯ ತಪಾಸಣಾ ಶಿಬಿರವು ಬೆಳಗ್ಗೆ 9ರಿಂದ ಸಂಜೆ 5 ಗಂಟೆ ವರೆಗೂ ನಡೆಯಲಿದೆ. ರಕ್ತದೊತ್ತಡ, ರಕ್ತ ಪರೀಕ್ಷೆ (Blood Test), ಎತ್ತರ, ತೂಕ, ಇಸಿಜಿ (ECG) ಸೇರಿ ವಿವಿಧ ರೀತಿಯ ತಪಾಸಣೆ ಮಾಡಲಾಯಿತು. ಇದನ್ನೂ ಓದಿ: ಚಿಪ್ಸ್ ಖರೀದಿಸಲು ಅಂಗಡಿಗೆ ತೆರಳಿದ್ದ 7ರ ಬಾಲಕಿ ಮೇಲೆ ಕಾಮುಕನ ಅಟ್ಟಹಾಸ

    ‘ಪಬ್ಲಿಕ್‌ ಟಿವಿ’ಯ ವಿವಿಧ ವಿಭಾಗದ ಮುಖ್ಯಸ್ಥರು, ಸಿಬ್ಬಂದಿ ವರ್ಗದವರು ಆರೋಗ್ಯ ತಪಾಸಣೆಗೆ ಒಳಗಾದರು. ಮಣಿಪಾಲ್‌ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿ ವರ್ಗದವರು ಆರೋಗ್ಯ ತಪಾಸಣೆಯನ್ನು ಯಶಸ್ವಿಯಾಗಿ ನಡೆಸಿದರು. ಶನಿವಾರವೂ ಸಹ ತಪಾಸಣಾ ಶಿಬಿರ ಇರಲಿದೆ. ಇದನ್ನೂ ಓದಿ: ಮದ್ವೆಯಾದ ಹತ್ತೇ ದಿನಕ್ಕೆ ಪತ್ನಿಯ ತಾಳಿ, ಅಮ್ಮನ ಒಡವೆ ಅಡವಿಟ್ಟು 20 ಲಕ್ಷ ಲಂಚ – APMC ವಿರುದ್ಧ ಭ್ರಷ್ಟಾಚಾರದ ಆರೋಪ

  • 1987ರ ಆಗಸ್ಟ್ 27 ರಂದು ಸಿಗರೇಟ್ ಬಿಟ್ಟೆ: ಸಿದ್ದರಾಮಯ್ಯ

    1987ರ ಆಗಸ್ಟ್ 27 ರಂದು ಸಿಗರೇಟ್ ಬಿಟ್ಟೆ: ಸಿದ್ದರಾಮಯ್ಯ

    ಬೆಂಗಳೂರು: 1987ರ ಆಗಸ್ಟ್‌ 27 ರಂದು ನಾನು ಸಿಗರೇಟ್‌ ಸೇದುವುದನ್ನು ಬಿಟ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

    ಸಚಿವಾಲಯದ ಅಧಿಕಾರಿ ಮತ್ತು ಸಿಬ್ಬಂದಿಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಸಹವಾಸ ದೋಷದಿಂದಲೂ ಅನಾರೋಗ್ಯ ತರುವ ಚಟಗಳು ಅಂಟಿಕೊಳ್ಳುತ್ತವೆ. ಆದರೆ ಸದಾ ಎಚ್ಚರದಿಂದ ನಮ್ಮನ್ನು ನಾವು ಕಾಪಾಡಿಕೊಳ್ಳಬೇಕು ಎಂದರು.

    ನಾನೂ ಮೊದಲು ಸಿಗರೇಟ್ ಸೇದುತ್ತಿದ್ದೆ. ಒಮ್ಮೆ ವಿದೇಶಕ್ಕೆ ಹೋದಾಗ ಸ್ನೇಹಿತರು ಸಿಗರೇಟ್ ಪ್ಯಾಕ್ (Cigarette Pack) ತಂದು ಕೊಟ್ಟಿದ್ದರು. ನಾನು ಕಡಿಮೆ ಅವಧಿಯಲ್ಲಿ ಹೆಚ್ಚು ಸಿಗರೇಟ್ ಸೇದಿಬಿಟ್ಟೆ. ಅವತ್ತೇ ನನಗೆ ಮನವರಿಕೆ ಆಯ್ತು. ಮನವರಿಕೆ ಆಗಿದ್ದು ಆಗಸ್ಟ್ 27 ನೇ ತಾರೀಕಿನಂದು. ಅದೇ ದಿನ ಸಿಗರೇಟ್ ಸೇದುವುದನ್ನು ಸಂಪೂರ್ಣ ನಿಲ್ಲಿಸಿದೆ ಎಂದು ನೆನಪಿಸಿಕೊಂಡರು.

    ಆರೋಗ್ಯ ಸಮಸ್ಯೆಗಳು ಬಾರದಂತೆ ಪ್ರಯತ್ನಿಸಿ: ದೈಹಿಕವಾಗಿ ಚಟುವಟಿಕೆ ಇಲ್ಲದೆ ಕುಳಿತವರಿಗೆ ಅನಾರೋಗ್ಯ ಹೆಚ್ಚು. ಆದ್ದರಿಂದ ದೈಹಿಕ ಮತ್ತು ಮಾನಸಿಕ ಚಟುವಟಿಕೆ ಅಗತ್ಯ. ಜೀವನಶೈಲಿ ಮತ್ತು ಆಹಾರ ಪದ್ಧತಿ ಮನುಷ್ಯನ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ರಾಜ್ಯ ಸರ್ಕಾರ ಎಲ್ಲಾ ಜನ ವರ್ಗಕ್ಕೆ ಆರೋಗ್ಯ ಮತ್ತು ಅಗತ್ಯ ಚಿಕಿತ್ಸೆಗೆ ಒದಗಿಸಲು ಕಾರ್ಯಕ್ರಮಗಳನ್ನು ನಿರಂತರವಾಗಿ ರೂಪಿಸಿ, ಜಾರಿ ಮಾಡುತ್ತಿದೆ ಎಂದರು.

    ಕ್ಯಾನ್ಸರ್ ನಂತಹ ಮಾರಕ ರೋಗವನ್ನೂ ಗುಣಪಡಿಸುವುದು ಸಾಧ್ಯವಿದೆ. ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುತ್ತಿದ್ದರೆ ದೀರ್ಘಕಾಲ ಆರೋಗ್ಯ ಕಾಪಾಡಿಕೊಳ್ಳುವುದು ಸಾಧ್ಯವಿದೆ. ಹಿಂದಿನವರ ಆರೋಗ್ಯ ಪದ್ಧತಿ ಮತ್ತು ಶ್ರಮಾಧಾರಿತ ಜೀವನ ಶೈಲಿ ಅವರನ್ನು ಗಟ್ಟಿಮುಟ್ಟಾಗಿ ಸದೃಢವಾಗಿ ಇಟ್ಟಿತ್ತು ಎಂದರು. ಅಲ್ಲದೇ ಇದೇ ವೇಳೆ ತುಂಬಾ ವಯಸ್ಸಾದ ಮೇಲೆ ಬರುವ ಆರೋಗ್ಯ ಸಮಸ್ಯೆಗಳು ಬರದಂತೆ ವಯಸ್ಸಿದ್ದಾಗಲೇ ಪ್ರಯತ್ನಿಸಿ ಎಂದು ಕರೆ ನೀಡಿದರು. ಇದನ್ನೂ ಓದಿ: ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್‌ ಪತನ – ನಾಗೇಂದ್ರ ರಾಜೀನಾಮೆ ನೀಡ್ತಾರೆ ಎಂದ ಡಿಕೆಶಿ

    ಇಂತಹ ಆರೋಗ್ಯ ತಪಾಸಣಾ ಶಿಬಿರಗಳು ಮೇಲಿಂದ ಮೇಲೆ ಆಗಬೇಕು. ರಾಜ್ಯದ ಮೂಲೆ ಮೂಲೆಗಳಲ್ಲೂ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎಚ್.ಎಂ.ರೇವಣ್ಣ, ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್, ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಉಪಸ್ಥಿತರಿದ್ದರು.

  • ಪಬ್ಲಿಕ್‌ ಟಿವಿ ಕಚೇರಿಯಲ್ಲಿ ಪೀಪಲ್‌ ಟ್ರೀ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    ಪಬ್ಲಿಕ್‌ ಟಿವಿ ಕಚೇರಿಯಲ್ಲಿ ಪೀಪಲ್‌ ಟ್ರೀ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    ಬೆಂಗಳೂರು: ನಗರದ ಪೀಪಲ್‌ ಟ್ರೀ ಆಸ್ಪತ್ರೆ ವತಿಯಿಂದ ಪಬ್ಲಿಕ್‌ ಟಿವಿ ಕಚೇರಿಯಲ್ಲಿ ಸಿಬ್ಬಂದಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಸಲಾಯಿತು.

    ಗುರುವಾರ ಮತ್ತು ಶುಕ್ರವಾರ ಈ ತಪಾಸಣೆ ಶಿಬಿರ ನಡೆಯಲಿದ್ದು, ECG, Echo, BP, RBS ಪರೀಕ್ಷೆ ನಡೆಸಿ ತಪಾಸಣೆ ನಡೆಯಿತು. ಇದನ್ನೂ ಓದಿ: ಹುಮ್ನಾಬಾದ್‍ನಲ್ಲಿ ವ್ಯಾಪಾರಸ್ಥರು ವ್ಯಾಪಾರ ಮಾಡಬೇಕಾದ್ರೆ ಎರಡು ಡೋಸ್ ಲಸಿಕೆ ಕಡ್ಡಾಯ

    ಸಿಇಒ ಡಾ. ಜ್ಯೋತಿ ನೀರಜ, ಡಾ.ದಿವಾಕರ್‌ ಮತ್ತು ಡಾ.ಕಾರ್ತಿಕ್‌ ನೇತೃತ್ವದಲ್ಲಿ ಪೀಪಲ್‌ ಟ್ರೀ ಆಸ್ಪತ್ರೆಯ ಸಿಬ್ಬಂದಿ ಆರೋಗ್ಯ ತಪಾಸಣೆ ಶಿಬಿರವನ್ನು ನಡೆಸಿಕೊಟ್ಟರು. ಇದನ್ನೂ ಓದಿ: ಮುಂದಿನ ವರ್ಷ ಕೆಲ ಶಾಲೆಗಳಲ್ಲಿ NEP ಜಾರಿ: ಬಿ.ಸಿ.ನಾಗೇಶ್

     

  • ನಕ್ಸಲ್ ಪೀಡಿತ ಪ್ರದೇಶದಲ್ಲಿ ಎಎನ್‍ಎಫ್ ಅಧಿಕಾರಿಗಳಿಂದ ಹೆಲ್ತ್ ಕ್ಯಾಂಪ್

    ನಕ್ಸಲ್ ಪೀಡಿತ ಪ್ರದೇಶದಲ್ಲಿ ಎಎನ್‍ಎಫ್ ಅಧಿಕಾರಿಗಳಿಂದ ಹೆಲ್ತ್ ಕ್ಯಾಂಪ್

    ಉಡುಪಿ: ನಕ್ಸಲ್ ಪೀಡಿತ ಪ್ರದೇಶದಲ್ಲಿ ಬಂದೂಕು ಹಿಡಿದು ಸದಾ ಗಸ್ತು ತಿರುಗೋದು ಎಎನ್‍ಎಫ್ ಕರ್ತವ್ಯ. ಆ್ಯಂಟಿ ನಕ್ಸಲ್ ಫೋರ್ಸ್ ಸಿಬ್ಬಂದಿ ಕರ್ತವ್ಯಕ್ಕೆ ಹೊರತಾಗಿ ಸಾರ್ವಜನಿಕರು ಮೆಚ್ಚುವ ಕಾರ್ಯ ಮಾಡಿದ್ದಾರೆ.

    ಉಡುಪಿ ಜಿಲ್ಲೆ ಹೆಬ್ರಿ ತಾಲೂಕು ನಕ್ಸಲ್ ಪೀಡಿತ ಪ್ರದೇಶದ ಜನರ ಆರೋಗ್ಯದ ಬಗ್ಗೆ ಕಾಳಜಿ ತೋರಿದ್ದಾರೆ. ನಕ್ಸಲ್ ಪೀಡಿತ ಪ್ರದೇಶ ಕಬ್ಬಿನಾಲೆಯಲ್ಲಿ ಹೆಲ್ತ್ ಕ್ಯಾಂಪ್ ಮಾಡಿ, ಹೆಬ್ರಿ ತಾಲೂಕಿಗೆ ಒಳಪಡುವ ನಕ್ಸಲ್ ಪೀಡಿತ ಎಲ್ಲಾ ಗ್ರಾಮಗಳ ಜನರನ್ನು ಕರೆಸಿ ಆರೋಗ್ಯ ತಪಾಸಣೆ ಮಾಡಿಸಿದ್ದಾರೆ.

    ತೀರಾ ಗ್ರಾಮೀಣ ಪ್ರದೇಶದ ಜನರನ್ನು ಎಎನ್‍ಎಫ್ ಅಧಿಕಾರಿಗಳು ತಮ್ಮದೇ ಜೀಪಿನಲ್ಲಿ ಕರೆದುಕೊಂಡು ಬಂದು ತಪಾಸಣೆಗೆ ಒಳಪಡಿಸಿದ್ದಾರೆ. ಸಣ್ಣಪುಟ್ಟ ಅನಾರೋಗ್ಯ ಸಮಸ್ಯೆಗಳಿಗೆ ಅಲ್ಲೇ ಔಷಧಿ ಕೊಡಿಸಿದ್ದಾರೆ. ಮುಂಗಾರು ಮಳೆ ಆರಂಭದಲ್ಲಿ ಜ್ವರ, ಚರ್ಮರೋಗ ಗ್ರಾಮಸ್ಥರಿಗೆ ಆವರಿಸುವುದರಿಂದ ಈ ಹೆಲ್ತ್ ಕ್ಯಾಂಪ್ ಬಹಳ ಮಹತ್ವ ಪಡೆದಿದೆ. ಜನಕ್ಕೂ ಈ ಹೆಲ್ತ್ ಕ್ಯಾಂಪ್ ಬಹಳ ಉಪಯೋಗವಾಗಿದೆ.