Tag: health department

  • ಹೆಚ್ಚಿದ ಕೊರೊನಾ ಸೋಂಕು – ರಾಜ್ಯದಲ್ಲಿಂದು 900ಕ್ಕೂ ಹೆಚ್ಚು ಪ್ರಕರಣ ದಾಖಲು

    ಹೆಚ್ಚಿದ ಕೊರೊನಾ ಸೋಂಕು – ರಾಜ್ಯದಲ್ಲಿಂದು 900ಕ್ಕೂ ಹೆಚ್ಚು ಪ್ರಕರಣ ದಾಖಲು

    ಬೆಂಗಳೂರು: ರಾಜಧಾನಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕೊರೊನಾ ಹೆಚ್ಚು ಕಾಣಿಸಿಕೊಂಡಿದೆ. ಇಂದು 968 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, 337 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.

    ಆರೋಗ್ಯ ಇಲಾಖೆ ಪ್ರಕಾರ ಇಂದು ರಾಜ್ಯದಲ್ಲಿ 968 ಜನರಿಗೆ ಕೊರೊನಾ ವೈರಸ್ ಇರುವುದು ದೃಢವಾಗಿದೆ. 337 ಜನರು ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದನ್ನೂ ಓದಿ: ಟೈಲರ್‌ ಶಿರಚ್ಛೇದನ ಮಾಡಿದ ಮುಸ್ಲಿಂ ಯುವಕರು ಕೆಲವೇ ಗಂಟೆಗಳಲ್ಲಿ ಅರೆಸ್ಟ್‌

    ಇದುವರೆಗೆ 39,21,387 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 39,66,420ಕ್ಕೆಏರಿಕೆಯಾಗಿದೆ. ರಾಜ್ಯದಲ್ಲಿಂದು ಒಂದೇ ಒಂದು ಮರಣ ಪ್ರಕರಣ ದಾಖಲಾಗಿದೆ. ಕೋವಿಡ್ ಪಾಸಿಟಿವಿಟಿ ದರ ಶೇ.3.69 ಇದ್ದು, ಮೃತರ ಪ್ರಮಾಣ ಶೇ.0.10 ಇದೆ.

    ಒಟ್ಟು 17,784 ಸ್ಯಾಂಪಲ್(ಆರ್‌ಟಿಪಿಸಿಆರ್ 11,207 + 6,577 ರ‍್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. 39,216 ಮಂದಿಗೆ ಲಸಿಕೆ ನೀಡಲಾಗಿದೆ. ಇದನ್ನೂ ಓದಿ: ಪ್ರವಾದಿಗಾಗಿ ಒಂದು ಕೊಲೆ ಮಾಡೋಕಾಗಲ್ವೆ? – ಉದಯಪುರ ಹತ್ಯೆಯ ಮಾಸ್ಟರ್‌ಮೈಂಡ್ ವೀಡಿಯೋ ವೈರಲ್

    ಬೆಂಗಳೂರು ನಗರದಲ್ಲೇ 887 ಪ್ರಕರಣ ದಾಖಲಾಗಿದ್ದು, ಬಳ್ಳಾರಿಯಲ್ಲಿ 3, ಬೆಳಗಾವಿಯಲ್ಲಿ 2, ಬೆಂಗಳೂರು ಗ್ರಾಮಾಂತರದಲ್ಲಿ 3, ಬೀದರ್‌ನಲ್ಲಿ 2, ಚಿಕ್ಕಮಗಳೂರಿನಲ್ಲಿ 3, ದಕ್ಷಿಣ ಕನ್ನಡದಲ್ಲಿ 21, ಧಾರವಾಡದಲ್ಲಿ 10, ಹಾಸನ 2, ಹಾವೇರಿಯಲ್ಲಿ 1, ಮೈಸೂರಿನಲ್ಲಿ 14, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ತಲಾ ಒಂದೊಂದು ಪ್ರಕರಣ ಹಾಗೂ ಉಡುಪಿಯಲ್ಲಿ 13 ಪ್ರಕರಣಗಳು ದಾಖಲಾಗಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

    Live Tv

  • ರಾಜ್ಯದಲ್ಲಿಂದು ಕೊರೊನಾ ಸೋಂಕಿತರ ಸಂಖ್ಯೆ 500, ಗುಣಮುಖರು 600

    ರಾಜ್ಯದಲ್ಲಿಂದು ಕೊರೊನಾ ಸೋಂಕಿತರ ಸಂಖ್ಯೆ 500, ಗುಣಮುಖರು 600

    ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 530 ಪಾಸಿಟಿವ್ ಕೇಸ್ ವರದಿಯಾಗಿದೆ. ಇಂದು ಹೊಸ ಪ್ರಕರಣಗಳಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಜನ ಗುಣಮುಖರಾಗಿರುವುದರಿಂದ ಇಂದು ಸಕ್ರಿಯ ಪ್ರಕರಣಗಳ ಸಂಖ್ಯೆ 4,928ಕ್ಕೆ (ನಿನ್ನೆ 5,035) ಇಳಿದಿದೆ.

    ಬೆಂಗಳೂರು ನಗರದಲ್ಲೇ 494 ಕೇಸ್ ಪತ್ತೆಯಾಗುವುದರೊಂದಿಗೆ ನಗರದ ಸಕ್ರಿಯ ಪ್ರಕರಣಗಳ ಸಂಖ್ಯೆ 4,723ಕ್ಕೆ ಏರಿಕೆ ಕಂಡಿದೆ. ಆದರೆ ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ. ರಾಜ್ಯದಲ್ಲಿ ಈವರೆಗೆ ಒಟ್ಟು 40,071 ಮರಣ ಪ್ರಕರಣ ಪತ್ತೆಯಾಗಿದೆ. ಇಂದು 637 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಪಾಸಿಟಿವಿಟಿ ದರ ಶೇ.3.59 ಆಗಿದೆ.

    ಈವರೆಗೆ ರಾಜ್ಯದಲ್ಲಿ ಒಟ್ಟು 39,61,361 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,16,320 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 51,925 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ.

    ಒಟ್ಟು 14,753 ಸ್ಯಾಂಪಲ್ (ಆರ್‌ಟಿಪಿಸಿಆರ್ 11,759 + 2,994 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.

    ಬೆಂಗಳೂರು ನಗರ ಒಂದರಲ್ಲೇ 494 ಪ್ರಕರಣಗಳು ಪತ್ತೆಯಾಗಿದ್ದು, ಬಳ್ಳಾರಿ, ಬೆಳಗಾವಿ, ಉತ್ತರ ಕನ್ನಡ, ರಾಮನಗರ ಜಿಲ್ಲೆಗಳಲ್ಲಿ ತಲಾ 3 ಪ್ರಕರಣಗಳು ಪತ್ತೆಯಾಗಿವೆ. ದಕ್ಷಿಣ ಕನ್ನಡ, ಕಲಬುರಗಿ ಜಿಲ್ಲೆಗಳಲ್ಲಿ ತಲಾ 5 ಪ್ರಕರಣಗಳು, ಮೈಸೂರಿನಲ್ಲಿ 6, ಉಡುಪಿಯಲ್ಲಿ 2 ಹಾಗೂ ವಿಜಯಪುರ, ತುಮಕೂರು, ಶಿವಮೊಗ್ಗ, ಗದಗ, ಧಾರವಾಡ, ಬಾಗಲಕೋಟೆ ಜಿಲ್ಲೆಗಳಲ್ಲಿ ತಲಾ ಒಂದೊಂದು ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

    Live Tv

  • ಸತತ 2ನೇ ದಿನ ಪಾಸಿಟಿವಿಟಿ ದರ ಏರಿಕೆ – ರಾಜ್ಯದಲ್ಲಿಂದು 463 ಮಂದಿಗೆ ಕೊರೊನಾ

    ಸತತ 2ನೇ ದಿನ ಪಾಸಿಟಿವಿಟಿ ದರ ಏರಿಕೆ – ರಾಜ್ಯದಲ್ಲಿಂದು 463 ಮಂದಿಗೆ ಕೊರೊನಾ

    ಬೆಂಗಳೂರು: ರಾಜ್ಯದಲ್ಲಿ ಸತತ 2ನೇ ದಿನ ಪಾಸಿಟಿವಿಟಿ ದರ ಏರಿಕೆಯಾಗಿದೆ. ನಿನ್ನೆ ಶೇ.2.07 ರಷ್ಟಿದ್ದ ಪಾಸಿಟಿವಿಟಿ ದರ ಇಂದು ಶೇ.2.15ಕ್ಕೆ ಏರಿಕೆಯಾಗಿದೆ. 463 ಹೊಸ ಸೋಂಕಿನ ಪ್ರಕರಣಗಳು ಕಂಡುಬಂದಿದ್ದು, ಬೆಂಗಳೂರು ನಗರದಲ್ಲೇ 429 ಪ್ರಕರಣಗಳು ವರದಿಯಾಗಿದೆ.

    ಇಂದು ಬೆಂಗಳೂರು ನಗರದಲ್ಲಿ 429 ಪ್ರಕರಣ ದಾಖಲಾಗಿದ್ದು, ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 3,651ಕ್ಕೆ ಏರಿಕೆ ಕಂಡಿದೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 2.15ಕ್ಕೆ ಏರಿಕೆ ಕಂಡಿದೆ. ಆದರೆ ಇಂದು ಸಹ ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ. ಇದನ್ನೂ ಓದಿ: ದೈನಂದಿನ ಜೀವನದ ಭಾಗವಾಗಲಿ ಯೋಗ – ಪ್ರಧಾನಿ ಮೋದಿ ಕರೆ

    ಇಂದು 199 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಒಟ್ಟು 40,066 ಮರಣ ಪ್ರಕರಣ ಪತ್ತೆಯಾಗಿದೆ. ಇದನ್ನೂ ಓದಿ: ಮೇಕ್ ಇನ್ ಇಂಡಿಯಾಗೆ ಉತ್ತೇಜನ – 96 ಸುಧಾರಿತ ಯುದ್ಧ ವಿಮಾನ ತಯಾರಿಸಲು ಐಎಎಫ್ ಯೋಜನೆ

    ಈವರೆಗೆ ರಾಜ್ಯದಲ್ಲಿ ಒಟ್ಟು 39,56,334 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,12,575 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 9,028 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 21,519 ಸ್ಯಾಂಪಲ್ (ಆರ್‌ಟಿಪಿಸಿಆರ್ 16,406 + 5,113 ರ‍್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.

    ಬೆಂಗಳೂರು ನಗರದಲ್ಲಿ 429 ಪ್ರಕರಣ ಹೊರತುಪಡಿಸಿ, ದಕ್ಷಿಣ ಕನ್ನಡದಲ್ಲಿ 14, ದಾವಣಗೆರೆಯಲ್ಲಿ 2, ಧಾರವಾಡದಲ್ಲಿ 4, ಉಡುಪಿಯಲ್ಲಿ 3, ಉತ್ತರ ಕನ್ನಡದಲ್ಲಿ 6 ಹಾಗೂ ಬಳ್ಳಾರಿ, ಚಿತ್ರದುರ್ಗ, ಗದಗ, ಹಾಸನ, ರಾಯಚೂರು ಜಿಲ್ಲೆಗಳಲ್ಲಿ ತಲಾ ಒಂದೊಂದು ಪ್ರಕರಣಗಳು ಕಂಡುಬಂದಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

  • ರಾಜ್ಯದಲ್ಲಿಂದು 178 ಮಂದಿಗೆ ಕೊರೊನಾ – ಶೂನ್ಯ ಮರಣ

    ರಾಜ್ಯದಲ್ಲಿಂದು 178 ಮಂದಿಗೆ ಕೊರೊನಾ – ಶೂನ್ಯ ಮರಣ

    ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 178 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಶೂನ್ಯ ಮರಣ ಪ್ರಮಾಣ ದಾಖಲಾಗಿದೆ.

    158 ಪಾಸಿಟಿವ್ ಪ್ರಕರಣಗಳು ಬೆಂಗಳೂರು ನಗರದಲ್ಲಿ ವರದಿಯಾಗಿದ್ದು, ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,001ಕ್ಕೆ ತಲುಪಿದೆ. ಇಂದು 206 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ.1.04 ದಾಖಲಾಗಿದ್ದು, ರಾಜ್ಯದಲ್ಲಿ ಈವರೆಗೆ ಒಟ್ಟು 40,065 ಮರಣ ಪ್ರಕರಣ ಕಂಡುಬಂದಿವೆ. ಇದನ್ನೂ ಓದಿ: ರಾಜ್ಯಸಭೆ ಚುನಾವಣೆ: ಕೈ, ದಳದಲ್ಲಿ ಗೊಂದಲ – ಇಬ್ಬರ ಜಗಳದ ಲಾಭ ಪಡೆಯುವ ನಿರೀಕ್ಷೆಯಲ್ಲಿ BJP

    ಈವರೆಗೆ ರಾಜ್ಯದಲ್ಲಿ ಒಟ್ಟು 39,52,280 ಕೊರೊನಾ ಪ್ರಕರಣಗಳು ಕಂಡುಬಂದಿದ್ದು, ಅವರಲ್ಲಿ 39,10,172 ಮಂದಿ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿಂದು ಒಟ್ಟು 50,344 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 19,846 ಸ್ಯಾಂಪಲ್ (ಆರ್‌ಟಿ ಪಿಸಿಆರ್ 14,381 + 5,465 ರ‍್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ನಮಗೆ ಬೆಂಬಲ ನೀಡಿ – ಸಿದ್ದು ಬಳಿ JDS ನಾಯಕರ ಮನವಿ

    ಬೆಂಗಳೂರು ನಗರದಲ್ಲೇ ಇಂದು 158 ಪ್ರಕರಣಗಳು ವರದಿಯಾಗಿದ್ದು, ದಕ್ಷಿಣ ಕನ್ನಡದಲ್ಲಿ 6, ಮೈಸೂರಿನಲ್ಲಿ 4, ಉಡುಪಿಯಲ್ಲಿ 2, ರಾಮನಗರ, ಚಿತ್ರದುರ್ಗ, ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಧಾರವಾಡ, ಹಾಸನ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ತಲಾ ಒಂದೊಂದು ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

  • ಉಡುಪಿಯಲ್ಲಿ ಟೊಮೆಟೊ ಜ್ವರ ಕಾಣಿಸಿಕೊಂಡಿಲ್ಲ – ಆರೋಗ್ಯ ಇಲಾಖೆ ಸ್ಪಷ್ಟನೆ

    ಉಡುಪಿಯಲ್ಲಿ ಟೊಮೆಟೊ ಜ್ವರ ಕಾಣಿಸಿಕೊಂಡಿಲ್ಲ – ಆರೋಗ್ಯ ಇಲಾಖೆ ಸ್ಪಷ್ಟನೆ

    ಉಡುಪಿ: ಜಿಲ್ಲೆಯ 4 ವರ್ಷದ ಮಗುವಿನಲ್ಲಿ ಟೊಮೆಟೊ ಜ್ವರ ಕಾಣಿಸಿಕೊಂಡಿದೆ ಎಂಬ ಶಂಕೆ ವ್ಯಕ್ತವಾದ ಬೆನ್ನಲ್ಲೇ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದ್ದು, ಜ್ವರದ ಲಕ್ಷಣಗಳು ಕಂಡುಬಂದಿಲ್ಲ ಎಂದು ಹೇಳಿದೆ.

    TOMATO

    ಉಡುಪಿ ಜಿಲ್ಲೆಯಲ್ಲಿ ಟೊಮೆಟೊ ಜ್ವರದ ಲಕ್ಷಣಗಳು ಕಂಡುಬಂದಿಲ್ಲ. ಈವರೆಗೆ ಯಾವುದೇ ಪ್ರಕರಣ ಜಿಲ್ಲೆಯಲ್ಲಿ ಕಾಣಿಸಿಕೊಂಡಿಲ್ಲ. ಆರೋಗ್ಯ ಇಲಾಖೆಯ ಸೂಚನೆಯಂತೆಯೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಗಡಿ ಜಿಲ್ಲೆ ದಕ್ಷಿಣ ಕನ್ನಡದಲ್ಲೂ ಸಂಪೂರ್ಣ ತಪಾಸಣೆ ನಡೆಯುತ್ತದೆ. ಕೇರಳ ರಾಜ್ಯದ ಪ್ರವಾಸಿಗರ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಲಾಗಿದೆ ಎಂದು ಜಿಲ್ಲಾ ಆರೊಗ್ಯಾಧಿಕಾರಿ ಡಾ.ನಾಗಭೂಷಣ ಉಡುಪ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಉಡುಪಿಯ 4 ವರ್ಷದ ಮಗುವಿನಲ್ಲಿ ಟೊಮೆಟೊ ಜ್ವರ?

    Tomato

    ಏನಿದು ಘಟನೆ? – ಉಡುಪಿ ಜಿಲ್ಲೆಯ 4 ವರ್ಷದ ಮಗುವಿನಲ್ಲಿ ಟೊಮೆಟೊ ಜ್ವರ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿತ್ತು. ಜ್ವರ ಕಾಣಿಸಿಕೊಂಡಿದ್ದ ಮಗುವನ್ನು ಐಸಿಯು (ನಿಗಾ ಘಟಕ) ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೇರಳದಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿತ್ತು.

  • ಉಡುಪಿಯ 4 ವರ್ಷದ ಮಗುವಿನಲ್ಲಿ ಟೊಮೆಟೊ ಜ್ವರ?

    ಉಡುಪಿಯ 4 ವರ್ಷದ ಮಗುವಿನಲ್ಲಿ ಟೊಮೆಟೊ ಜ್ವರ?

    ಬೆಂಗಳೂರು: ಕೊರೊನಾ 4ನೇ ಅಲೆಯ ಭೀತಿಯಲ್ಲಿರುವ ಕರ್ನಾಟಕದ ಜನತೆಗೆ ಇದೀಗ ಮತ್ತೊಂದು ಆತಂಕ ಶುರುವಾಗಿದೆ.

    ಇಂದಿನಿಂದ ಶಾಲೆಗಳು ಪುನರಾರಂಭಗೊಳ್ಳುತ್ತಿದ್ದು, ಈ ಹೊತ್ತಿನಲ್ಲೇ ಟೊಮೆಟೊ ಜ್ವರ ಕಾಣಿಸಿಕೊಂಡಿದೆ. ಕೇರಳದಲ್ಲಿ ಈಚೆಗಷ್ಟೇ ಕಾಣಿಸಿಕೊಂಡ ಟೊಮೆಟೋ ಜ್ವರ ಉಡುಪಿ ಜಿಲ್ಲೆಯಲ್ಲಿ 4 ವರ್ಷದ ಮಗುವಿನಲ್ಲಿ ಕಾಣಿಸಿಕೊಂಡ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಭೂಮಿಯಿಂದ ಭೀಕರ ಶಬ್ಧ – ಬೆಚ್ಚಿಬಿದ್ದ ಚಿಕ್ಕಬಳ್ಳಾಪುರ ಜನ

    tomoto 2

    ಸದ್ಯ ರಾಜ್ಯದಲ್ಲಿ ಈ ಜ್ವರ ಕಾಣಿಸಿಕೊಂಡಿರುವ ಬಗ್ಗೆ ಆರೋಗ್ಯ ಇಲಾಖೆ ಯಾವುದೇ ಅಧಿಕೃತ ಪ್ರಕಟಣೆ ಬಿಡುಗಡೆಯಾಗಿಲ್ಲ. ಸೋಂಕಿತ ಮಗುವನ್ನು ಐಸಿಯು (ನಿಗಾ ಘಟಕ) ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಂಕಿತ ಪ್ರಕರಣ ಪತ್ತೆಯ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ 126 ಕೇಸ್ – 103 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್

    ಮಂಗಳೂರು, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿಯೂ ಆರೋಗ್ಯ ಇಲಾಖೆ ಅಧಿಕಾರಿಗಳು ಹದ್ದಿನ ಕಣ್ಣು ಇರಿಸಿದ್ದಾರೆ. ಜೊತೆಗೆ ಸಾಂಕ್ರಾಮಿಕ ರೋಗ ತಜ್ಞರು ಇದು ತಾನೇ ಕಡಿಮೆಯಾಗುವ ಸೋಂಕು, ಇದಕ್ಕೆ ನಿರ್ದಿಷ್ಟ ಔಷಧಿಯಿಲ್ಲ ಎಂದು ಹೇಳಿದ್ದಾರೆ.

    Tomato

    ಆರೋಗ್ಯ ಇಲಾಖೆಗೆ ತಲೆನೋವು: ಟೊಮೆಟೊ ಫ್ಲೂ ಆರೋಗ್ಯಾಧಿಕಾರಿಗಳಿಗೆ ತಲೆನೋವು ತರಿಸಿದೆ. ಅದಕ್ಕಾಗಿ ಜ್ವರ ಬಂದವರನ್ನು ಹೇಗೆ ಗುರುತಿಸಬೇಕು? ಹೇಗೆ ಪರೀಕ್ಷೆ ಮಾಡಿಸಬೇಕು? ಎನ್ನುವ ಬಗ್ಗೆ ಇನ್ನೂ ಪ್ರಚಾರ ಕೈಗೊಳ್ಳಬೇಕಿದೆ. ಈ ಬಗ್ಗೆ ಇನ್ನೂ ಆರೋಗ್ಯಾಧಿಕಾರಿಗಳಲ್ಲಿಯೇ ಗೊಂದಲ ಇವೆ. ಕೇರಳದಲ್ಲಿ ಈವರೆಗೆ 50 ಪ್ರಕರಣ ಕಾಣಿಸಿಕೊಂಡಿದೆ.

    ಜ್ವರ ಲಕ್ಷಣಗಳೇನು? ವಿಪರೀತ ಜ್ವರ, ನಿರ್ಜಲೀಕರಣ, ಚರ್ಮದ ತುರಿಕೆ, ಕೈ ಮತ್ತು ಕಾಲುಗಳ ಚರ್ಮದ ಬಣ್ಣವೂ ಬದಲು, ಗುಳ್ಳೆಗಳು, ಕಿಬ್ಬೊಟ್ಟೆಯ ಸೆಳತ ವಾಕರಿಕೆ, ವಾಂತಿ – ಅತಿಸಾರ, ಸ್ರವಿಸುವ ಮೂಗು, ಕೆಮ್ಮು, ಸೀನು ಆಯಾಸ, ದೇಹದಲ್ಲಿ ನೋವು.

  • ಆರೋಗ್ಯ ಇಲಾಖೆಯಲ್ಲಿ ಕೆಲಸ ಕದಿಯುವವರಿಗೆ ವೇತನ ಕಡಿತ ಶಿಕ್ಷೆ: ಸುಧಾಕರ್

    ಆರೋಗ್ಯ ಇಲಾಖೆಯಲ್ಲಿ ಕೆಲಸ ಕದಿಯುವವರಿಗೆ ವೇತನ ಕಡಿತ ಶಿಕ್ಷೆ: ಸುಧಾಕರ್

    ಬೆಂಗಳೂರು: ನಿಜವಾದ ಕಾರಣಗಳಿಲ್ಲದೆ ಕೆಲಸ ಕದಿಯುವುದನ್ನು ಸಹಿಸಲು ಆಗುವುದಿಲ್ಲ. ಇಲಾಖೆಯಲ್ಲಿ ಗುಣಾತ್ಮಕ ಬದಲಾವಣೆ ತರುವ ನಿಟ್ಟಿನಲ್ಲಿ ಎಲ್ಲ ಹಂತದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಆಧರಿಸಿ ವೇತನ ಪಾವತಿಸುವ ವ್ಯವಸ್ಥೆ ಕಡ್ಡಾಯಗೊಳಿಸಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

    ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆ, ಇಲಾಖೆ ಕಚೇರಿ ಮತ್ತು ಸಂಸ್ಥೆಗಳಲ್ಲಿ ವೈದ್ಯರು, ಅಧಿಕಾರಿಗಳು ಮತ್ತು ಸಿಬ್ಬಂದಿ ಕರ್ತವ್ಯದ ವೇಳೆಯಲ್ಲಿ ಹಾಜರಿಲ್ಲದಿರುವ ಬಗ್ಗೆ ಸಾರ್ವಜನಿಕರು ಹಾಗೂ ಚುನಾಯಿತ ಪ್ರತಿನಿಧಿಗಳಿಂದ ದೂರುಗಳು ಬಂದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: ಪೂಜೆ ವೇಳೆ ಶಬ್ದ ಮಾಲಿನ್ಯ ಆರೋಪ- ವೇಣುಗೋಪಾಲ ದೇಗುಲಕ್ಕೆ ನೊಟೀಸ್

    ಸರ್ಕಾರಿ ಅಧಿಕಾರಿಗಳ ಕರ್ತವ್ಯಲೋಪದಿಂದ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಆಗುತ್ತದೆ. ಹೀಗಾಗಿ ಕರ್ತವ್ಯದ ವೇಳೆಯಲ್ಲಿ ಹಾಜರಿಲ್ಲದ ಯಾರೇ ಆಗಲಿ ಅಂತಹವರ ವೇತನ ಕಡಿತಕ್ಕೆ ಸೂಚನೆ ನೀಡಲಾಗಿದೆ. ಇಲಾಖೆ ಅಡಿಯಲ್ಲಿ ಬರುವ ಎಲ್ಲ ಸಂಸ್ಥೆಗಳು ಮತ್ತು ಆಸ್ಪತ್ರೆಗಳಲ್ಲಿ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿಗೂ ಅವರ ಆಧಾರ್ ಆಧರಿತ ಬಯೋಮೆಟ್ರಿಕ್ ಹಾಜರಾತಿ (ಎಇಬಿಎಎಸ್) ಕಡ್ಡಾಯಗೊಳಿಸಲಾಗಿದೆ. ಅದನ್ನು ಆಧರಿಸಿಯೇ ಇನ್ನು ಮುಂದೆ ವೇತನ ನೀಡುವಂತೆ ಅಧಿಕೃತ ಆದೇಶ ಹೊರಡಿಸಲಾಗಿದೆ ಎಂದು ವಿವರಿಸಿದರು.

    ಕೋವಿಡ್ ಕಾರಣಕ್ಕೆ ಸ್ಥಗಿತಗೊಂಡಿದ್ದ ಬಯೋಮೆಟ್ರಿಕ್ ಹಾಜರಾತಿ ಪದ್ಧತಿಯನ್ನು ಕಳೆದ ಎರಡು ತಿಂಗಳ ಹಿಂದಿನಿಂದಲೇ ಮತ್ತೆ ಕಡ್ಡಾಯಗೊಳಿಸಲಾಗಿದೆ. ಅನೇಕ ಸಭೆಗಗಳಲ್ಲಿ ಮತ್ತು ಸುತ್ತೋಲೆ ಮೂಲಕವೂ ಈ ಬಗ್ಗೆ ಸೂಚನೆ ನೀಡಲಾಗಿದೆ. ಆದರೂ ಕೆಲ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಹಾಜರಾತಿ ದಾಖಲಿಸದಿರುವ ಪ್ರಕರಣಗಳು ಗಮನಕ್ಕೆ ಬಂದಿವೆ. ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈಗ ಸ್ಪಷ್ಟ ಎಚ್ಚರಿಕೆ ಜೊತೆಗೆ ಅಧಿಕೃತ ಆದೇಶ ನೀಡಿದ್ದು ಅಂತಹ ಪ್ರಕರಣಗಳನ್ನು ಗೈರು ಹಾಜರಿ ಎಂದು ಪರಿಗಣಿಸಿ ವೇತನ ಕಡಿತಗೊಳಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಮೈಸೂರು ಸ್ಯಾಂಡಲ್ ಸೋಪ್ ಕಾರ್ಖಾನೆಯಲ್ಲೂ ಕಮಿಷನ್ ದಂಧೆ

    ಡಿಡಿಒ ಹೊಣೆ:
    ಇಲಾಖೆಯ ಆಸ್ಪತ್ರೆ, ಸಂಸ್ಥೆ ಮತ್ತು ಕೇಂದ್ರಗಳ ಜವಾಬ್ದಾರಿ ನಿರ್ವಹಿಸುವ ಡಿಡಿಒ (ಸ್ಯಾಲರಿ ಡ್ರಾಯಿಂಗ್ ಆಫೀಸರ್)ಗಳು ಪ್ರತೀ ತಿಂಗಳು ಎಇಬಿಎಎಸ್‍ನಲ್ಲಿ ತಮ್ಮ ವ್ಯಾಪ್ತಿಯ ಎಲ್ಲ ಸಿಬ್ಬಂದಿಗಳ ಹಾಜರಾತಿ ಪರಿಶೀಲಿಸಿ ಅದರ ಅನುಸಾರವೇ ವೇತನ ಪಾವತಿಗೆ ವರದಿ ಸಿದ್ಧಪಡಿಸಿ ಸಂಬಂಧಿಸಿದ ಅಧಿಕಾರಿಗಳ ಮೂಲಕ ಆಯಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗೆ (ಡಿಎಚ್‍ಒ) ಸಲ್ಲಿಸಬೇಕು. ಅವರು ಅದನ್ನು ಪರಿಶೀಲಿಸಿ ವೇತನ ಬಿಡುಗಡೆ ಮತ್ತು ಕಡಿತಕ್ಕೆ ಸೂಚನೆ ನೀಡಲಿದ್ದಾರೆ. ಡಿಎಚ್‍ಒ ಅವರು ಕೈಗೊಂಡ ಕ್ರಮಗಳನ್ನು ಮೇಲಿನ ಹಂತದ ಅಧಿಕಾರಿಗಳು ನಿಯಮಿತವಾಗಿ ಪರಿಶೀಲಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

    ಯಾರೇ ಆಗಲಿ ಶೇ.80ರಷ್ಟು ಹಾಜರಾತಿಗಿಂತ ಕಡಿಮೆ ಇದ್ದಲ್ಲಿ ಅವರ ವೇತನ ತಡೆ ಹಿಡಿಯಲಾಗುತ್ತದೆ. ನಂತರ ಮಾರ್ಗಸೂಚಿ ಅನ್ವಯ ಮುಂದಿನ ಕ್ರಮ ವಹಿಸಲಾಗುವುದು. ಒಂದು ವೇಳೆ ಶೇ.80ರಷ್ಟು ಹಾಜರಾತಿ ಇದ್ದಲ್ಲಿ ವೇತನ ಬಿಡುಗಡೆ ಮಾಡಿ ಉಳಿದ ಶೇ.20 ಹಾಜರಾತಿ ದಾಖಲು ಮಾಡದಿರುವುದಕ್ಕೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಲಾಗುತ್ತದೆ. ಸಿಬ್ಬಂದಿ ನೀಡುವ ಕಾರಣ ನಿಜವಾಗಿದ್ದಲ್ಲಿ ಪ್ರಕರಣ ಮುಕ್ತಾಯಗೊಳಿಸಲಾಗುವುದು. ಒಂದು ವೇಳೆ ಸಬೂಬು ನೀಡಿದರೆ ಅಥವಾ ನೀಡಿರುವ ಮಾಹಿತಿ ಸುಳ್ಳು ಆಗಿದ್ದಲ್ಲಿ ಮುಂದಿನ ತಿಂಗಳ ವೇತನದಲ್ಲಿ ನಿರ್ದಿಷ್ಟಪಡಿಸಿರುವ ಮೊತ್ತವನ್ನು ಕಡಿತಗೊಳಿಸಲಾಗುವುದು. ಒಂದು ವೇಳೆ ಎಇಬಿಎಎಸ್ ಅನುಷ್ಟಾನಗೊಳಿಸದೆ, ಹಾಜರಾತಿ ಪರಿಶೀಲಿಸದೆ ವೇತನ ಪಾವತಿಸಿದರೆ ಆಯಾ ಡಿಡಿಒಗಳನ್ನೇ ಹೊಣೆ ಮಾಡಿ ಕ್ರಮ ಕೈಗೊಳ್ಳಲಾಗುವುದು. ಇದನ್ನು ಸರಿಯಾಗಿ ಉಸ್ತುವಾರಿ ಮಾಡದಿದ್ದಲ್ಲಿ ಡಿಎಚ್‍ಒಗಳ ವಿರುದ್ಧವೂ ಕ್ರಮ ಕೈಗೊಳ್ಳಲು ವರದಿ ನೀಡುವಂತೆ ಜಿಲ್ಲೆಗಳ ಉಸ್ತುವಾರಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

    ಪ್ರತಿ ವಾರ ಪರಿಶೀಲನೆ:
    ಪ್ರತಿ ವಾರ ಇಲಾಖೆ ಪ್ರಗತಿ ಪರಿಶೀಲನೆಯಲ್ಲಿ ಉಳಿದ ಅಂಶಗಳ ಜೊತೆಗೆ ಹಾಜರಾತಿ ಕಡ್ಡಾಯ ಮತ್ತು ವೇತನಕ್ಕೆ ಸಂಯೋಜನೆಗೊಳಿಸಿರುವ ವ್ಯವಸ್ಥೆಯನ್ನು ಪರಾಮರ್ಶೆ ಮಾಡಲಾಗುತ್ತಿದೆ. ಅನುಷ್ಟಾನದಲ್ಲಿ ಲೋಪ ಕಂಡರೆ ನಿರ್ದಾಕ್ಷಿಣ್ಯ ಕ್ರಮ ನಿಶ್ಚಿತ. ಆರೋಗ್ಯಸೌಧ ಸೇರಿದಂತೆ ಇಲಾಖೆ ವ್ಯಾಪ್ತಿಯ ಎಲ್ಲಾ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರು, ಸೇವಾ ಸಿಬ್ಬಂದಿ ಮತ್ತು ಕಚೇರಿ ಸಿಬ್ಬಂದಿಗಳು ಎಇಬಿಎಎಸ್‍ನಲ್ಲಿ ದಿನಕ್ಕೆ ಮೂರು ಬಾರಿ ತಮ್ಮ ಹಾಜರಾತಿ ದಾಖಲಿಸಲು ಸೂಚಿಸಲಾಗಿದೆ. ಕಚೇರಿ, ಆಸ್ಪತ್ರೆಗಳಲ್ಲಿ ಪ್ರತ್ಯೇಕ ಸಮಯ ನಿಗದಿ ಮಾಡಲಾಗಿದೆ. ಇಲಾಖೆಯ ಹೊಣೆ ಹೊತ್ತಿರುವ ಆಯುಕ್ತ ರಂದೀಪ್ ಅವರೇ ಬಯೋಮೆಟ್ರಿಕ್ ಹಾಜರಾತಿ ನೋಂದಯಿಸಿ ಅನುಸರಿಸುವ ಮೂಲಕ ಉಳಿದ ಹಂತದ ಅಧಿಕಾರಿ ಮತ್ತು ಸಿಬ್ಬಂದಿಗೆ ಮಾದರಿಯಾಗಿದ್ದಾರೆ ಎಂದೂ ಸಚಿವ ಸುಧಾಕರ್ ಮೆಚ್ಚುಗೆ ವ್ಯಕ್ತಪಡಿಸಿದರು.

  • ಆರೋಗ್ಯ ಇಲಾಖೆಯಿಂದ ಸತ್ತ ವ್ಯಕ್ತಿಗೆ ಕೋವಿಡ್ ಲಸಿಕೆ ಸರ್ಟಿಫಿಕೆಟ್!

    ಆರೋಗ್ಯ ಇಲಾಖೆಯಿಂದ ಸತ್ತ ವ್ಯಕ್ತಿಗೆ ಕೋವಿಡ್ ಲಸಿಕೆ ಸರ್ಟಿಫಿಕೆಟ್!

    ತುಮಕೂರು: 6 ತಿಂಗಳ ಹಿಂದೆ ಮರಣ ಹೊಂದಿದ್ದ ವ್ಯಕ್ತಿಗೆ ಎರಡನೇ ಡೋಸ್ ಕೋವಿಡ್ ಲಸಿಕೆ ಪಡೆದಿದ್ದ ಸರ್ಟಿಫಿಕೆಟ್ ನೀಡಿ ಆರೋಗ್ಯ ಮಹಾ ಎಡವಟ್ಟು ಮಾಡಿದೆ.

    ತುಮಕೂರು ನಗರದ ಮೆಳೆಕೋಟೆ ನಿವಾಸಿ ಬಸಪ್ಪ(80) 2021ರ ಏಪ್ರಿಲ್ 9ರಂದು ಮೊದಲ ಡೋಸ್ ತೆಗೆದುಕೊಂಡಿದ್ದರು. ಈ ನಡುವೆ ಜು.16 ರಂದು ಅವರು ಮೃತಪಟ್ಟಿದ್ದಾರೆ. ಆದರೆ ನಿನ್ನೆ 29ರಂದು ಎರಡನೇ ಡೋಸ್ ತೆಗೆದುಕೊಂಡಿರುವ ಬಗ್ಗೆ ಮೆಸೆಜ್ ಬಂದಿದೆ. ಸಂಬಂಧಿಕರು ಸೈಟ್ ಓಪನ್ ಮಾಡಿದಾಗ ಸರ್ಟಿಫಿಕೆಟ್ ಅಪ್‍ಡೇಟ್ ಆಗಿತ್ತು.

    ವ್ಯಕ್ತಿ ಮರಣ ಹೊಂದಿ 6 ತಿಂಗಳಾದರೂ ಸತ್ತ ವ್ಯಕ್ತಿಗೆ ಹೇಗೆ ಲಸಿಕೆ ಕೊಟ್ರು ಎಂದು ಮೃತ ಬಸವಪ್ಪನ ಕುಟುಂಬ ಆಶ್ಚರ್ಯ ವ್ಯಕ್ತಪಡಿಸಿದೆ. ಜೊತೆಗೆ ಆರೋಗ್ಯ ಇಲಾಖೆಯ ಈ ನಿರ್ಲಕ್ಷ್ಯಕ್ಕೆ ಹಿಡಿಶಾಪ ಹಾಕಿದ್ದಾರೆ. ಇದನ್ನೂ ಓದಿ: ಮತಾಂತರ ತಡೆಗೆ ಕಾನೂನು ಅಗತ್ಯ, ಅದು ದುರುಪಯೋಗವಾಗ್ಬಾರ್ದು: ಕೇಜ್ರಿವಾಲ್

  • ಓಮಿಕ್ರಾನ್‌ ಚಿಕಿತ್ಸೆಗೆ ಆರೋಗ್ಯ ಇಲಾಖೆಯಿಂದ ಸಿದ್ಧತೆ

    ಓಮಿಕ್ರಾನ್‌ ಚಿಕಿತ್ಸೆಗೆ ಆರೋಗ್ಯ ಇಲಾಖೆಯಿಂದ ಸಿದ್ಧತೆ

    ಮಡಿಕೇರಿ: ಕರ್ನಾಟಕಕ್ಕೆ ಓಮಿಕ್ರಾನ್‌ ಸೋಂಕು ಕಾಲಿಟ್ಟಿದ್ದು, ಕೋವಿಡ್ ಮೂರನೇ ಅಲೆ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಇದೀಗಾ ಕೊಡಗು ಜಿಲ್ಲಾಸ್ಪತ್ರೆ ಮತ್ತು ಮೆಡಿಕಲ್ ಕಾಲೇಜಿನಲ್ಲಿ ಬೆಡ್‌ಗಳ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

    ಕೊಡಗು ಜಿಲ್ಲೆಯ ಆರೋಗ್ಯ ಇಲಾಖೆಯಿಂದ ಬೆಡ್‌ಗಳ ಸಿದ್ಧತೆ ನಡೆಯುತ್ತಿದೆ. ಮಡಿಕೇರಿ ನಗರದ ಮೆಡಿಕಲ್ ಕಾಲೇಜಿನಲ್ಲಿ 200 ಬೆಡ್‌ಗಳ ವ್ಯವಸ್ಥೆಯನ್ನು ವೈದ್ಯಕೀಯ ಸಿಬ್ಬಂದಿ ಮಾಡಿಕೊಂಡಿದ್ದಾರೆ. ಮೆಡಿಕಲ್ ಕಾಲೇಜಿಗೆ ಡಿಎಚ್‍ಓ ವೆಂಕಟೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದನ್ನೂ ಓದಿ: ಲಸಿಕೆ ಪ್ರಮಾಣ ಪತ್ರ ಎಡವಟ್ಟು – ವ್ಯಾಕ್ಸಿನ್ ಪಡೆಯಲು ಬಂದಾತನಿಗೆ ಶಾಕ್

    ಆಕ್ಸಿಜನ್ ಉತ್ಪಾದನಾ ಘಟಕಗಳ ಪರಿಶೀಲನೆ ನಡೆಸಿದ ನಂತರ ಮಾತನಾಡಿದ ಅವರು‌, ಜಿಲ್ಲಾಸ್ಪತ್ರೆ, ಮೆಡಿಕಲ್ ಕಾಲೇಜು ಮತ್ತು ಪ್ರತೀ ತಾಲೂಕು ಆಸ್ಪತ್ರೆಯಲ್ಲಿ ಆಕ್ಸಿಜನ್ ಘಟಕ ಸಿದ್ಧವಾಗಿದ್ದು, ಸರ್ಕಾರದ ಸೂಚನೆಯಂತೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಈಗಾಗಲೇ 560 ಬೆಡ್‌ಗಳನ್ನು ರೆಡಿ ಮಾಡಲಾಗುತ್ತಿದೆ. ಎಲ್ಲಾ ಪ್ರಾಥಮಿಕ ಅರೋಗ್ಯ ಕೇಂದ್ರಗಳಲ್ಲಿ ಆಕ್ಸಿಜನ್ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಸದ್ಯಕ್ಕೆ ಜಿಲ್ಲೆಯಲ್ಲಿ ಯಾವುದೇ ಸಮಸ್ಯೆ ಅಗಿಲ್ಲ. ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಓಮಿಕ್ರಾನ್ ಬಗ್ಗೆ ಆತಂಕ ಬೇಡ- ಸೋಂಕಿತನ ಅಭಯ

    ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿಲ್ಲ. ಆದರೂ ಈಗಾಗಲೇ ಅಗತ್ಯ ಔಷಧ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಸಾಕಷ್ಟು ಸಿದ್ಧತೆ ಮಾಡಿಕೊಂಡಿದೆ. ಜನರು ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಕೋವಿಡ್‌ ಲಸಿಕೆಯ ಎರಡನೇ ಡೋಸ್‌ ಪಡೆದುಕೊಳ್ಳುವಂತೆ ಡಿಎಚ್‌ಒ ಸಲಹೆ ನೀಡಿದರು.

  • ಕೊಡಗಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಇಲಿಜ್ವರ – 39 ಪ್ರಕರಣಗಳು ಪತ್ತೆ

    ಕೊಡಗಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಇಲಿಜ್ವರ – 39 ಪ್ರಕರಣಗಳು ಪತ್ತೆ

    – ವೈದ್ಯರ ಸಲಹೆಯೇನು..?

    ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕೋವಿಡ್ ಪಾಸಿಟಿವ್ ಪ್ರಮಾಣ ನಿಯಂತ್ರಣಕ್ಕೆ ಬಂದಿದೆ. ಇದೀಗ ಕೋವಿಡ್ ನಿಯಂತ್ರಣಕ್ಕೆ ಬಂದಿರುವಾಗಲೇ ಸದಿಲ್ಲದೆ ಇಲಿ ಜ್ವರದ ಆತಂಕ ಜಿಲ್ಲೆಯಲ್ಲಿ ಎದುರಾಗಿದೆ.

    ಹೌದು. ಕಳೆದ ಒಂದೂವರೆ ತಿಂಗಳಲ್ಲಿ ಬರೋಬ್ಬರಿ 39 ಇಲಿ ಜ್ವರದ ಪ್ರಕರಣಗಳು ಪತ್ತೆಯಾಗಿದೆ. ಮಹಿಳೆಯೊಬ್ಬರು ಇಲಿಜ್ವರದಿಂದ ಮೃತಪಟ್ಟಿದ್ದರು. ಜಿಲ್ಲಾಡಳಿತ ಆರೋಗ್ಯ ಇಲಾಖೆಯು ಈ ಬಗ್ಗೆ ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ಹೊರ ಹಾಕುತ್ತಿದ್ದಾರೆ.

    ಕೊಡಗು ಜಿಲ್ಲೆ ಪ್ರಾಕೃತಿಕ ವಿಕೋಪದಿಂದ ಹಿಡಿದು ಕೊರೊನಾ ವೈರಸ್‍ವರೆಗೂ ಜಿಲ್ಲೆಯ ಜನರು ಒಂದಲ್ಲ ಒಂದು ಸಮಸ್ಯೆಗೆ ತುತ್ತಾಗುತ್ತಿದ್ದಾರೆ. ಈ ನಡುವೆ ಇದೀಗ ಕೊಡಗಿನಲ್ಲಿ ಇಲಿ ಜ್ವರದ ಸಮಸ್ಯೆ ಹೆಚ್ಚು ಕಾಡುತ್ತಿದೆ. ಅದರಲ್ಲೂ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನಲ್ಲೇ ಹೆಚ್ಚು ಪ್ರಕರಣಗಳು ಪತ್ತೆಯಾಗಿರುವುದು ಆತಂಕದ ವಿಷಯವಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಜೊತೆ ಜಗಳಕ್ಕೆ ಹೋಗಲು ನನಗೆ ಬೇರೆ ಕೆಲಸ ಇಲ್ಲವೇ?: ಹೆಚ್‍ಡಿಕೆ

    ಮಡಿಕೇರಿಯಲ್ಲಿ 21, ವಿರಾಜ ಪೇಟೆಯಲ್ಲಿ 9, ಸೋಮವಾರ ಪೇಟೆಯಲ್ಲಿ 9 ಪ್ರಕರಣಗಳು ಪತ್ತೆಯಾಗಿವೆ. ಮಡಿಕೇರಿ ತಾಲೂಕಿನ ಕರ್ಣಂಗೇರಿಯ ಚಂದ್ರಿಕಾ ಎನ್ನುವ 40 ವರ್ಷದ ಮಹಿಳೆ ಇಲಿಜ್ವರಕ್ಕೆ ಪ್ರಾಣ ಬಿಟ್ಟಿದ್ದಾರೆ. ಇದರಿಂದ ಜಿಲ್ಲೆಯ ಜನರು ಆತಂಕಕ್ಕೆ ಒಳಗಾಗುತ್ತಿದ್ದಾರೆ. ಅಷ್ಟೇ ಅಲ್ಲದೇ ಇಲಿಜ್ವರಕ್ಕೆ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾದ ಚಿಕಿತ್ಸೆ ನೀಡದೆ ಇರುವುದರಿಂದ ರೋಗಿಗಳು ಮಂಗಳೂರು, ಸುಳ್ಯ ಮೈಸೂರು ಜಿಲ್ಲೆಯ ಅಸ್ಪತ್ರೆಗಳಿಗೆ ಹೋಗಿ ಚಿಕಿತ್ಸೆ ಪಡೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.

    ಈ ಬಗ್ಗೆ ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಅವನ್ನು ಕೇಳಿದ್ರೆ, ಇಲಿಜ್ವರದ ಮಾಹಿತಿ ಇದುವರೆಗೂ ಇಲ್ಲ. ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಮಡಿಕೇರಿಯಲ್ಲೇ ಚಿಕಿತ್ಸೆ ಕೊಡಿಸುವ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ಇನ್ನೂ ಜಿಲ್ಲೆಯಲ್ಲಿ ಈಗಾಗಲೇ 39 ಇಲಿಜ್ವರದ ಪ್ರಕರಣಗಳು ಪತ್ತೆಯಾಗಿದೆ. ಆರೋಗ್ಯ ಇಲಾಖೆ ಹಾಗೂ ಆಶಾ ಕಾರ್ಯಕರ್ತೆಯರು ಗ್ರಾಮೀಣ ಪ್ರದೇಶಗಳಲ್ಲಿ ಜಾಗೃತಿ ಕಾರ್ಯ ಆರಂಭ ಮಾಡಿದ್ದಾರೆ.

    ಇಲಿ ಜ್ವರ ಹೇಗೆ ಬರುತ್ತೆ?

    ಅಷ್ಟಕ್ಕೂ ಇಲಿನಜ್ವರ ಬರೋದಾದ್ರು ಹೇಗೆ ಎಂದು ನೋಡಿದ್ರೆ ಮಳೆ ಸುರಿಯುತ್ತಿರುವುದರಿಂದ ಇಲಿಗಳು ಬಿಲದೊಳೊಗಿಂದ ಹೊರಬಂದು ಓಡಾಡುತ್ತವೆ. ಈ ವೇಳೆ ಅವುಗಳು ಭೂಮಿ ಮೇಲೆ ಮಾಡಿದ ಮೂತ್ರ ವಿಸರ್ಜನೆಯನ್ನು ತುಳಿದಲ್ಲಿ ಅದರಲ್ಲಿರುವ ಬ್ಯಾಕ್ಟೀರಿಯಾಗಳಿಂದ ಈ ಇಲಿ ಜ್ವರ ಬರುತ್ತದೆ. ಇಲಿ ಮೂತ್ರ ನೀರಿನಲ್ಲಿ ಬೆರೆತು ಅಂತಹ ನೀರಿನ ಸೇವನೆ ಆದಾಗಲೂ ಜ್ವರ ಬರಬಹುದು. ಇದಕ್ಕೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದಿದ್ದಲ್ಲಿ ದೇಹದಲ್ಲಿ ಬಹು ಅಂಗಾಗ ವೈಫಲ್ಯಗೊಂಡು ಮಾನವ ಸಾವನ್ನಪ್ಪುತ್ತಾನೆ. ಹೀಗಾಗಿ ಜನರು ಬರಿಗಾಲಿನಲ್ಲಿ ನಡೆದಾಡಬಾರದು. ಕುದಿಸಿ ಆರಿಸಿದ ನೀರನ್ನು ಕುಡಿಯಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಕೃಷಿ ಕ್ಷೇತ್ರಕ್ಕೂ ಕಾಲಿಟ್ಟ ಡ್ರೋನ್ – ಕ್ರಿಮಿನಾಶಕ್ಕೆ ಡ್ರೋನ್ ಬಳಕೆ

    ಕೊಡಗು ಆರೋಗ್ಯ ಇಲಾಖೆ ಅಧಿಕಾರಿಗಳು ಪ್ರಕರಣಗಳು ಪತ್ತೆಯಾಗಿರುವ ಏರಿಯಾಗಳಿಗೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ ಜನರಿಗೆ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಏನೇ ಆಗಲಿ ಕೋವಿಡ್ ಕಡಿಮೆ ಆಗಿದೆ ಅನ್ನೋ ಹೊತ್ತಿನಲ್ಲಿ ಇಲಿಜ್ವರ ಪ್ರಕರಣಗಳು ಕೊಡಗಿನಲ್ಲಿ ಜಾಸ್ತಿ ಆಗುತ್ತಿರುವುದು ಜನರನ್ನು ಆತಂಕಕ್ಕೆ ದೂಡಿದೆ. ಈ ಹಿನ್ನೆಲೆ ಜಿಲ್ಲೆಯ ಜನರು ಜಾಗೃತಿಯಿಂದ ಇರಬೇಕು.