Tag: health department

  • ಪ್ರಾಣಿ ಕಡಿತಕ್ಕೆ ಒಳಗಾದವರಿಗೆ ಉಚಿತ ಚಿಕಿತ್ಸೆ ನೀಡಿ: ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಸೂಚನೆ

    ಪ್ರಾಣಿ ಕಡಿತಕ್ಕೆ ಒಳಗಾದವರಿಗೆ ಉಚಿತ ಚಿಕಿತ್ಸೆ ನೀಡಿ: ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಸೂಚನೆ

    ಬೆಂಗಳೂರು: ನಾಯಿ ಹಾಗೂ ಪ್ರಾಣಿಗಳ ಕಡಿತಕ್ಕೆ ಒಳಗಾದವರಿಗೆ ಚಿಕಿತ್ಸೆ ನಿರಾಕರಣೆ ಮಾಡದಂತೆ ವೈದ್ಯರಿಗೆ ಆರೋಗ್ಯ ಇಲಾಖೆ (Health Department) ಸೂಚಿಸಿದೆ. ಅಲ್ಲದೇ ಪ್ರಾಣಿಗಳ ಕಡಿತಕ್ಕೆ ಬಳಕೆಯಾಗುವ ಅಗತ್ಯ ಔಷಧಗಳನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಲಭ್ಯವಿರುವಂತೆ ನೋಡಿಕೊಳ್ಳಲು ಆದೇಶದಲ್ಲಿ ತಿಳಿಸಿದೆ. ಎಪಿಎಲ್ ಹಾಗೂ ಬಿಪಿಎಲ್ ಕಾರ್ಡ್ ಎಂದು ಪರಿಗಣಿಸದೆ ಎಲ್ಲರಿಗೂ ಉಚಿತ ಚಿಕಿತ್ಸೆ ನೀಡುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

    ರೇಬಿಸ್ (Rabies) ಒಂದು ಮಾರಣಾಂತಿಕ ಕಾಯಿಲೆಯಾಗಿದೆ. ಆದರೆ ಸೂಕ್ತ ಸಮಯದಲ್ಲಿ ಅಗತ್ಯ ಚಿಕಿತ್ಸೆ ನೀಡಿದರೆ ರೋಗಿಯ ಪ್ರಾಣವನ್ನು ಉಳಿಸಬಹುದು. 2030ರ ವೇಳೆಗೆ ನಾಯಿ ಕಡಿತದಿಂದ ಬರುವ ರೇಬೀಸ್‍ನ ನಿರ್ಮೂಲನೆ ಮಾಡುವುದು ರಾಷ್ಟ್ರೀಯ ರೇಬಿಸ್ ನಿಯಂತ್ರಣ ಕಾರ್ಯಕ್ರಮದ ಗುರಿಯಾಗಿದೆ. ಇದನ್ನೂ ಓದಿ: ಗರ್ಭಿಣಿ ಸಾವಿಗೆ ವೈದ್ಯರ ನಿರ್ಲಕ್ಷ್ಯ ಸಾಬೀತು – 11 ಲಕ್ಷ ದಂಡ

    ಕರ್ನಾಟಕದಲ್ಲಿ (Karnataka) ರೇಬಿಸ್ ಕಾಯಿಲೆ ಮುಕ್ತ ಎಂದು ಈಗಾಗಲೇ ಘೋಷಿಸಲಾಗಿದೆ. ಈ ನಿಟ್ಟಿನಲ್ಲಿ ರೇಬಿಸ್ ಕಾಯಿಲೆಯಿಂದ ಜೀವ ರಕ್ಷಿಸಬಲ್ಲ ಔಷಧಿಯಾದ ರೇಬಿಸ್ ನಿರೋಧಕ ಲಸಿಕೆ (ARV) ಮತ್ತು ರೇಬಿಸ್ ಇಮೂನೂಗ್ಲಾಬಿಲಿನ್‍ಗಳನ್ನು ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸಾಕಷ್ಟು ದಾಸ್ತಾನು ಲಭ್ಯವಿರುವಂತೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

    ಪ್ರಾಣಿಗಳ ಕಡಿತದಿಂದ ತೊಂದರೆಗೊಳಗಾದವರಿಗೆ ಚಿಕಿತ್ಸೆಯನ್ನು ನಿರಾಕರಿಸದೇ ಎಲ್ಲರಿಗೂ ಉಚಿತ ಲಸಿಕೆ ಒದಗಿಸಲು ತಿಳಿಸಲಾಗಿದೆ. ಈ ಔಷಧಿಗಳನ್ನು ವಿವೇಚನೆಯಿಂದ ಬಳಸಲು ರೇಬೀಸ್ ರೋಗನಿರೋಧಕ ಮಾರ್ಗಸೂಚಿಗಳನ್ನು ಇಲಾಖೆ ಹೊರಡಿಸಿದೆ. ಇದನ್ನೂ ಓದಿ: ಸಿಕ್ಕಿಂ ಹಠಾತ್ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ 53ಕ್ಕೆ ಏರಿಕೆ – 140 ಮಂದಿ ಕಣ್ಮರೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಿಫಾ ವೈರಸ್ ಭೀತಿ – ರಾಜ್ಯದ ಗಡಿಯಲ್ಲಿ ಹೈ ಅಲರ್ಟ್, ಕಟ್ಟುನಿಟ್ಟಿನ ತಪಾಸಣೆಗೆ ಸರ್ಕಾರ ಸೂಚನೆ

    ನಿಫಾ ವೈರಸ್ ಭೀತಿ – ರಾಜ್ಯದ ಗಡಿಯಲ್ಲಿ ಹೈ ಅಲರ್ಟ್, ಕಟ್ಟುನಿಟ್ಟಿನ ತಪಾಸಣೆಗೆ ಸರ್ಕಾರ ಸೂಚನೆ

    ಚಾಮರಾಜನಗರ: ಕೇರಳದಲ್ಲಿ ನಿಫಾ ವೈರಸ್‌ಗೆ (Nipah Virus In Kerala) ಇಬ್ಬರು ಮೃತಪಟ್ಟ ನಂತರ ರಾಜ್ಯ ಸರ್ಕಾರ ಫುಲ್‌ ಅಲರ್ಟ್‌ ಆಗಿದೆ. ರಾಜ್ಯದ ಕೇರಳ ಹಾಗೂ ಕರ್ನಾಟಕ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಿದ್ದು, ಕಟ್ಟುನಿಟ್ಟಿನ ತಪಾಸಣೆ ನಡೆಸಲು ಸೂಚಿಸಿದೆ.

    ಚಾಮರಾಜನಗರ (Chamarajanagar) ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಮೂಲೆಹೊಳೆ ಚೆಕ್ ಪೋಸ್ಟ್‌ನಲ್ಲಿ ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಪ್ರತಿಯೊಬ್ಬರಿಗೂ ಥರ್ಮಲ್‌ ಸ್ಕ್ಯಾನಿಂಗ್‌ ನಡೆಸಲಾಗುತ್ತಿದೆ. ಗೂಡ್ಸ್‌ ವಾಹನಗಳಿಗೆ ಸ್ಯಾನಿಟೈಸ್‌ ಮಾಡಲಾಗುತ್ತಿದೆ. ತಪಾಸಣೆ ಬಳಿಕವೇ ವಾಹನಗಳನ್ನ ರಾಜ್ಯ ಪ್ರವೇಶಕ್ಕೆ ಬಿಡಲಾಗುತ್ತಿದೆ. ಜೊತೆಗೆ ರೋಗ ಲಕ್ಷಣ ಉಳ್ಳವರ ಟ್ರಾವೆಲ್‌ ಹಿಸ್ಟರಿಯನ್ನೂ ಕಲೆಹಾಕಲಾಗುತ್ತಿದೆ.

    ಹಂದಿ ಸೇರಿದಂತೆ ಮಾಂಸಾಹಾರ ಪದಾರ್ಥ ಸಾಗಿಸುವ ವಾಹನಗಳ ಮೇಲೆ ನಿಗಾ ಇಡಲಾಗಿದ್ದು, ಗುರುವಾರದಿಂದ ಗುಂಡ್ಲುಪೇಟೆ ಕಾಡಂಚಿನ ಗ್ರಾಮಗಳಲ್ಲಿ ಮನೆ-ಮನೆ ಸರ್ವೇ ನಡೆಸಿ ರೋಗ ಲಕ್ಷಣಗಳು ಕಂಡು ಬಂದವರ ಮೇಲೆ ನಿಗಾ ಇಡಲು ಆರೋಗ್ಯ ಇಲಾಖೆ ಮುಂದಾಗಿದೆ. ಇದನ್ನೂ ಓದಿ: ಗಗನ್, ಧನಂಜಯ್, ಚೈತ್ರಾ ಕುಂದಾಪುರ ಪರಿಚಯವಾಗಿದ್ದು ಹೇಗೆ?: ಡೀಲ್ ಕೇಸ್‍ನ ಸಂಪೂರ್ಣ ಕಥೆ ಬಿಚ್ಚಿಟ್ಟ ಚನ್ನನಾಯ್ಕ್

    ಮುಂಜಾಗ್ರತಾ ಕ್ರಮವಾಗಿ ಗುಂಡ್ಲುಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ 5 ಹಾಸಿಗೆಗಳ ವಿಶೇಷ ಐಸೊಲೇಷನ್‌ ವಾರ್ಡ್‌ ಅನ್ನು ಸಿದ್ಧಪಡಿಸಲಾಗಿದೆ. ಇದನ್ನೂ ಓದಿ: MLA ಟಿಕೆಟ್‌ಗಾಗಿ ಬರೋಬ್ಬರಿ 5 ಕೋಟಿ ಡೀಲ್ – ಪ್ರಕರಣದ 5ನೇ ಆರೋಪಿ ಅರೆಸ್ಟ್‌ 

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗ್ರಾಮೀಣ ಪ್ರದೇಶದ ಜನರಿಗೂ ಶಿಬಿರಗಳ ಮೂಲಕ ಉಚಿತ ಆರೋಗ್ಯ ಸೇವೆ ಒದಗಿಸಲು ಕಾರ್ಯಕ್ರಮ: ದಿನೇಶ್ ಗುಂಡೂರಾವ್

    ಗ್ರಾಮೀಣ ಪ್ರದೇಶದ ಜನರಿಗೂ ಶಿಬಿರಗಳ ಮೂಲಕ ಉಚಿತ ಆರೋಗ್ಯ ಸೇವೆ ಒದಗಿಸಲು ಕಾರ್ಯಕ್ರಮ: ದಿನೇಶ್ ಗುಂಡೂರಾವ್

    ಬೆಂಗಳೂರು: ಗ್ರಾಮೀಣ ಪ್ರದೇಶದ ಜನರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆಯಿಂದಲೇ ಉಚಿತ ಆರೋಗ್ಯ ಶಿಬಿರಗಳನ್ನ ರಾಜ್ಯದಾದ್ಯಂತ ನಡೆಸಲು ಕಾರ್ಯಕ್ರಮ ಹಮ್ಮಿಕೊಳ್ಳುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಹೇಳಿದರು. ಬೆಂಗಳೂರಿನಲ್ಲಿ ಇಂದು ಗಾಂಧಿನಗರ ಬೃಹತ್ ಉಚಿತ ಆರೋಗ್ಯ ಶಿಬಿರದಲ್ಲಿ ಪಾಲ್ಗೊಂಡು ಸಚಿವರು ಮಾತನಾಡಿದ್ದಾರೆ.

    ಗಾಂಧಿನಗರದಲ್ಲಿ ಆರೋಗ್ಯ ಇಲಾಖೆ (Health Department) ಹಮ್ಮಿಕೊಂಡಿದ್ದ ಉಚಿತ ಅರೋಗ್ಯ ಶಿಬಿರಲ್ಲಿ ಏರ್ಪಡಿಸಿದ್ದ ಆರೋಗ್ಯ ಸೇವೆಗಳನ್ನ ವೀಕ್ಷಿಸಿದ ಸಚಿವರು, ಇಲಾಖೆ ಹಾಗೂ ವೈದ್ಯರು, ಸಿಬ್ಬಂದಿಯವರ ಕಾರ್ಯಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ರೀತಿಯ ಶಿಬಿರಗಳು, ಆರೋಗ್ಯ ಸೇವೆಗಳು ರಾಜ್ಯದ ಹಳ್ಳಿಗಾಡಿನ ಜನರಿಗೂ ತಲುಪಬೇಕು. ಈ ನಿಟ್ಟಿನಲ್ಲಿ ರಾಜ್ಯದ ಜಿಲ್ಲೆಗಳು ಹಾಗೂ ತಾಲೂಕು ಮಟ್ಟಕ್ಕೂ ಉಚಿತ ಆರೋಗ್ಯ ಶಿಬಿರಗಳನ್ನ ಕೊಂಡೊಯ್ಯುವಂತೆ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚಿಸಿದರು.‌ ಇದನ್ನೂ ಓದಿ: ಕಾವೇರಿ, ಮಹದಾಯಿ ವಿಚಾರವಾಗಿ ಆಗಸ್ಟ್ 23ರಂದು ಸರ್ವಪಕ್ಷ ಸಭೆ: ಡಿಕೆಶಿ

    ಮುಂಜಾಗೃತವಾಗಿ ಕಾಯಿಲೆಗಳನ್ನ ತಡೆಗಟ್ಟುವುದು ಬಹುಮುಖ್ಯ. ಜನರ ಜೀವನ ಶೈಲಿ ಬದಲಾದಂತೆ, ಇವತ್ತಿನ ದಿನಮಾನಗಳಲ್ಲಿ ಬಿ.ಪಿ, ಶೂಗರ್, ಕ್ಯಾನ್ಸರ್, ಕಿಡ್ನಿ ಸಮಸ್ಯೆಯ ಕಾಯಿಲೆಗಳು ಜ‌ನರನ್ನ ಕಾಡುತ್ತಿವೆ. ಈ ಕಾಯಿಲೆಗಳನ್ನ ಮೊದಲೇ ಪತ್ತೆ ಹಚ್ಚಿದರೇ, ಚಿಕಿತ್ಸೆ ಮೂಲಕ ಆರಂಭದಲ್ಲೇ ಗುಣಪಡಿಸಬಹುದು. ಹೀಗಾಗಿ ಉಚಿತ ಆರೋಗ್ಯ ಶಿಬಿರಗಳು ಹೆಚ್ವು ಅವಶ್ಯಕವಾಗಿದ್ದು, ಜನಸಾಮಾನ್ಯರಿಗೆ ಹೆಚ್ವು ಸದುಪಯೋಗವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟರು.

    ಹೃದಯಘಾತ ತಡೆಯಲು ಪುನೀತ್ ಹೆಸರಲ್ಲಿ ಅಪ್ಪು ಯೋಜನೆ

    ಹಠಾತ್ ಹೃದಯಘಾತ ತಡೆಯುವ ನಿಟ್ಟಿನಲ್ಲಿ ಪುನೀತ್ ರಾಜಕುಮಾರ್ (Puneeth Rajkumar) ಹೆಸರಲ್ಲಿ ಹೊಸ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇದೇ ವೇಳೆ ತಿಳಿಸಿದರು. ಹೃದಯಘಾತಕ್ಕೆ ಬ್ರೇಕ್ ಹಾಕಲು ಆರೋಗ್ಯ ಇಲಾಖೆ ಯೋಜನೆಗೆ ಮುಂದಾಗಿದೆ. ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ ಅಪ್ಪು ಯೋಜನೆ ಜಾರಿಗೆ ತರುತ್ತಿದ್ದೇವೆ ಎಂದಿದ್ದಾರೆ.

    ಮೊದಲ ಹಂತದಲ್ಲಿ ಜಯದೇವ ಆಸ್ಪತ್ರೆಯನ್ನ ಈ ಯೋಜನೆಗೆ ಹಬ್ ಮಾಡಲಾಗಿದೆ. ಕೇವಲ ಆಸ್ಪತ್ರೆ ಮಾತ್ರವಲ್ಲ ಸಾರ್ವಜನಿಕ ಸ್ಥಳಗಳಲ್ಲಿಯೂ Automated External Defibrillators (AED )ಅಳವಡಿಕೆ ಮಾಡಲಾಗುತ್ತೆ.‌ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಮಾಲ್, ಏರಪೋರ್ಟ್ ಹಾಗೂ ಸಾರ್ವಜನಿಕ ಪ್ರದೇಶದಲ್ಲಿ AED ಅಳವಡಿಕೆ ಮಾಡುತ್ತೇವೆ.

    ಸಾರ್ವಜನಿಕ ಸ್ಥಳಗಳಲ್ಲಿ ಹೃದಯ ಸಂಬಂಧಿ ಸಮಸ್ಯೆ ಕಂಡು ಬಂದರೆ, ಸ್ಥಳದಲ್ಲಿಯೇ ತುರ್ತು ಚಿಕಿತ್ಸೆ ನೀಡಲಾಗುತ್ತೆ. ಗೋಲ್ಡನ್ ಟೈಮ್ ನಲ್ಲಿ ಟ್ರೀಟ್ ಮೆಂಟ್ ಬಳಿಕ ಆಸ್ಪತ್ರೆಗೆ ಶೀಫ್ಟ್ ಮಾಡಬಹುದು. ರೋಗಿಯನ್ನ ಉಳಿಸಲು ನೀಡಬೇಕಾದ ಪ್ರಾಥಮಿಕ ಚಿಕಿತ್ಸೆ ನೀಡುವ ಯೋಜನೆ ಇದಾಗಿದೆ.

    ಹೃದಯಘಾತದ ಸಮಯದಲ್ಲಿ ಆಸ್ಪತ್ರೆಗೆ ಶಿಫ್ಟ್ ವೇಳೆಯಲ್ಲಿಯೇ ಡೆತ್ ಆಗ್ತೀವೆ. ಅಲ್ಲದೇ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮಟ್ಟದಲ್ಲಿಯೇ ಹೃದಯಾಘಾತ ತಪ್ಪಿಸಲು ಮೆಡಿಸಿನ್ ಗಳನ್ನ ಪೂರೈಸಲಾಗುವುದು. ಯಾರಿಗೆ ಹೃದಘಾತದ ಸೂಚನೆ ಬಂದರೆ ತಕ್ಷಣ ಸಂಬಂಧಿಸಿದ ಔಷಧಿ ನೀಡಿ, ಪ್ರಾಥಮಿಕ ಚಿಕಿತ್ಸೆಯ ನಂತರ ಹೆಚ್ಚಿನ ಚಿಕಿತ್ಸೆಗೆ ಮೇಲ್ಮಟ್ಟದ ಆಸ್ಪತ್ರೆಗೆ ರವಾನಿಸಲಾಗುವುದು. ಎರಡು ವಾರಗಳಲ್ಲಿ ಈ ಬಗ್ಗೆ ಟೆಂಡರ್ ಕರೆದು ಯೋಜನೆ ಜಾರಿಗೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.‌

    ಬಳಿಕ ಮಾತನಾಡಿದ ಆರೋಗ್ಯ ಇಲಾಖೆ ಆಯುಕ್ತ ರಂದೀಪ್, ಗಾಂಧಿನಗರ ಆರೋಗ್ಯ ಶಿಬಿರ ಮುಂದಿನ ದಿನಗಳಲ್ಲಿ ಆರೋಗ್ಯ ಇಲಾಖೆ ಹಮ್ಮಿಕೊಳ್ಳುವ ಉಚಿತ ಆರೋಗ್ಯ ಶಿಬಿರಗಳಿಗೆ ಒಂದು ಮುನ್ನಿಡಿಯಾಗಿದೆ. ಬೃಹತ್ ಗಾಂಧಿನಗರ ಆರೋಗ್ಯ ಶಿಬಿರಲ್ಲಿ ಎಲ್ಲ ರೀತಿಯ ಆರೋಗ್ಯ ಸೇವೆಗಳನ್ನ ಸುವ್ಯವಸ್ಥಿತವಾಗಿ ಆಯೋಜಿಸಲಾಗಿದೆ. ಬಿ.ಪಿ, ಶೂಗರ್, ಕಣ್ಣಿನ ತಪಾಸಣೆ, ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳಿದ್ದರೂ ಇ.ಸಿ.ಜಿ ವ್ಯವಸ್ಥೆ ಕಲ್ಪಿಸಲಾಗಿದೆ. ಒಂದೇ ಸೂರಿನಡಿ ಆರೋಗ್ಯ ಇಲಾಖೆಯ ಎಲ್ಲ ಚಿಕಿತ್ಸೆಗಳು ಶಿಬಿರದ ಮುಖಾಂತರ ಜನರ ಬಳಿಗೆ ಕೊಂಡುಯ್ಯುವ ನಿಟ್ಟಿನಲ್ಲಿ ಗಾಂಧಿನಗರ ಆರೋಗ್ಯ ಶಿಬಿರ ಮುನ್ನುಡಿ ಬರೆದಿದೆ ಎಂದು ಆಯುಕ್ತ ರಂದೀಪ್ ಅಭಿಪ್ರಾಯ ವ್ಯಕ್ತಪಡಿಸಿದರು.

    ಆರೋಗ್ಯ ಶಿಬಿರಕ್ಕೆ ಗಾಂಧಿ ನಗರ ಜನರ ದಂಡು 
    ಸಾವಿರಾರು ಸಂಖ್ಯೆಯಲ್ಲಿ ಜನರು ಆರೋಗ್ಯ ಶಿಬಿರಕ್ಕೆ ಭೇಟಿ ನೀಡಿ ತಪಾಸಣೆ, ಉಚಿತ ಚಿಕಿತ್ಸೆಯ ಲಾಭ ಪಡೆದರು. ಶಿಬಿರದಲ್ಲಿ ಪ್ರಾಥಮಿಕ ಆರೋಗ್ಯ ತಪಾಸಣೆಯಿಂದ ಹಿಡಿದು, ಸ್ತ್ರೀ ರೋಗ ಸಮಸ್ಯೆ, ಮಕ್ಕಳ ಆರೋಗ್ಯ, ಕಿಲು ಮತ್ತು ಮೂಳೆ ಚಿಕಿತ್ಸೆ, ನರ ಸಮಸ್ಯೆ, ಹೃದಯ ಚಿಕಿತ್ಸೆ, ಚರ್ಮದ ಸಮಸ್ಯೆ, ಬಾಯಿ, ಸ್ತನ, ಗರ್ಭಕಂಠದ ಕ್ಯಾನ್ಸರ್, ಕಣ್ಣು, ಹಲ್ಲು, ಕಿಡ್ನಿ ಚಿಕಿತ್ಸೆಗಳನ್ನ ಉಚಿತವಾಗಿ ನೀಡಲಾಯಿತು.‌ ಅಲ್ಲದೇ ಆಯುಷ್ ಇಲಾಖೆಯ ಆರೋಗ್ಯ‌ ಸೇವೆಗಳು ಸೇರಿದಂತೆ ಮನೋ ವೈದ್ಯಕೀಯ ಚಿಕಿತ್ಸೆಯನ್ನ ಕೂಡ ಜನರ ಬಳಿಗೆ ತರಲಾಗಿತ್ತು. ಅತ್ಯಾದುನಿಕ ಆರೋಗ್ಯ ಸೇವೆಗಳ ಕುರಿತಂತೆ ಮಾಹಿತಿ, ಮೊಬೈಲ್ ಹೆಲ್ತ್ ಕೇರ್, ಬಸ್ ಗಳಲ್ಲಿ ಆರೋಗ್ಯ ಸೇವೆಗಳು ಲಭ್ಯವಿದ್ದವು. 16 ಕೌಂಟರ್, 10 ಫಾರ್ಮಸಿ ಸೆಂಟರ್ ಗಳಲ್ಲಿ 100 ಕ್ಕೂ ಹೆಚ್ವು ತಜ್ಞ ವೈದ್ಯರು ಸಾರ್ವಜನಿಕರ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ನೀಡಿದರು.‌ 3 ಕೋಟಿ ಮೌಲ್ಯದ ಔಷಧಿಗಳನ್ನ ಜನರಿಗಾಗಿ ಉಚಿತ ಆರೋಗ್ಯ ಶಿಬಿರದಲ್ಲಿ ಕಲ್ಪಿಸಲಾಗಿತ್ತು. ವೈದ್ಯರು ಸೇರಿದಂತೆ ಸರಿಸುಮಾರು 700 ಆರೋಗ್ಯ ಸಿಬ್ಬಂದಿಗಳು ಶಿಬಿರದಲ್ಲಿ ಕಾರ್ಯನಿರ್ವಹಿಸಿದರು. ಇದನ್ನೂ ಓದಿ: ತಮಿಳುನಾಡಿಗೆ ನೀರು ಬಿಡುಗಡೆ – ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 106 ಅಡಿಗೆ ಕುಸಿತ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಜ್ಯದಲ್ಲಿ ಹೆಚ್ಚಿದ ʻಮದ್ರಾಸ್ ಐʼ ಪ್ರಕರಣ – ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

    ರಾಜ್ಯದಲ್ಲಿ ಹೆಚ್ಚಿದ ʻಮದ್ರಾಸ್ ಐʼ ಪ್ರಕರಣ – ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

    ಬೆಂಗಳೂರು: ರಾಜ್ಯದಲ್ಲಿ ಆತಂಕ ಸೃಷ್ಟಿಸಿರುವ ʻಮದ್ರಾಸ್‌ ಐʼ (Madras Eye) ವೈರಾಣುವಿನಿಂದ ಮುನ್ನೆಚ್ಚರಿಕೆ ವಹಿಸಲು ಆರೋಗ್ಯ ಇಲಾಖೆ (Health Department) ಮಾರ್ಗಸೂಚಿ ಹೊರಡಿಸಿದೆ.

    ಕಂಜಕ್ಟಿವೈಟಿಸ್ (Conjunctivitis) ಎಂದು ಕರೆಯಲಾಗುವ ಮದ್ರಾಸ್ ಐ ಅಥವಾ `ಕಣ್ಣು’ ವೈರಾಣುಗಳಿಂದ ಹರಡುವ ಕಣ್ಣಿನ ಸಮಸ್ಯೆ. ವಾತಾವರಣದಲ್ಲಿ ತೇವಾಂಶ ಹೆಚ್ಚಾದಾಗ ಅಥವಾ ಚಳಿ ವಾತಾವರಣದಲ್ಲಿ ಹುಟ್ಟಿಕೊಳ್ಳುವ ವೈರಾಣುಗಳು ನೇರವಾಗಿ ಕಣ್ಣಿನ ಮೇಲೆ ಪರಿಣಾಮ ಉಂಟುಮಾಡುತ್ತದೆ. ಈ ಬಾರಿ ರಾಜ್ಯದಲ್ಲಿ ಮಳೆಗಾಲಕ್ಕೂ ಮುನ್ನವೇ ʻಮದ್ರಾಸ್‌ ಐʼ ಪ್ರಕರಣ ಕಾಲಿಟ್ಟಿತ್ತು. ಈ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವಂತೆ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ.

    ಮದ್ರಾಸ್‌ ಐ ರೋಗ ಲಕ್ಷಣಗಳು:

    * ಕಣ್ಣು ಕೆಂಪಾಗುವುದು, ನೀರು ಸೋರುವಿಕೆ
    * ಅತಿಯಾದ ಕಣ್ಣೀರು
    * ಕಣ್ಣಿನಲ್ಲಿ ತುರಿಕೆ
    * ಸತತ ಕಣ್ಣು ನೋವು ಮತ್ತು ಚುಚ್ಚುವಿಕೆ
    * ಬೆಳಕನ್ನು ನೋಡಲು ಸಾಧ್ಯವಾಗದೇ ಇರುವುದು
    * ದೃಷ್ಟಿ ಮಂಜಾಗುವುದು
    * ಕಣ್ಣಿನ ಎರಡು ರೆಪ್ಪೆಗಳು ಕೀವು ಮಿಶ್ರಿತದಿಂದ ಕೂಡಿರುವುದು

    ಮದ್ರಾಸ್‌ ಐ ಬಗ್ಗೆ ಮುಂಜಾಗ್ರತಾ ಕ್ರಮ ಏನು ?

    * ವೈಯಕ್ತಿಕವಾಗಿ ಸ್ವಚ್ಛತೆಗೆ ಆದ್ಯತೆ ಕೊಡಿ
    * ಆರೋಗ್ಯವಂತ ವ್ಯಕ್ತಿಯು ಸೊಂಕು ಇರುವ ವ್ಯಕ್ತಿಯ ಕಣ್ಣಿನ ನೇರ ಸಂಪರ್ಕದಿಂದ ದೂರ ಇರುವುದು
    * ಸೋಂಕಿತ ವ್ಯಕ್ತಿ ಬಳಸಿದ ಕರವಸ್ತ್ರ ಮತ್ತು ಇತರ ವಸ್ತುಗಳನ್ನ‌ ಬಳಸಬಾರದು
    * ಆಗಾಗ್ಗೆ ಸೋಪು ನೀರಿನಿಂದ ಕೈಗಳನ್ನ ತೊಳೆಯಬೇಕು
    * ಸೋಂಕಿತ ವ್ಯಕ್ತಿಗಳಿಗೆ ಶೀತ, ಜ್ವರ, ಕೆಮ್ಮು ಇದ್ದಲ್ಲಿ ಕೂಡಲೇ ಚಿಕಿತ್ಸೆ ಪಡೆಯಬೇಕು
    * ತೀವ್ರ ಸೋಂಕು ಉಂಟಾದರೆ ತಕ್ಷಣವೇ ನೇತ್ರ ತಜ್ಞರನ್ನ ಭೇಟಿ ಮಾಡಬೇಕು

    ಏನು ಮಾಡಬೇಕು ?

    * ಸ್ಪಚ್ಫವಾದ ನೀರಿನಿಂದ ಕಣ್ಣುಗಳನ್ನ ಶುಚಿಗೊಳಿಸಿ
    * ಸೋಂಕು ಕಂಡು ಬಂದ ತಕ್ಷಣವೇ ವೈದ್ಯರಿಂದ ಚಿಕಿತ್ಸೆ ಪಡೆಯಿರಿ
    * ಸೋಂಕಿತ ವ್ಯಕ್ತಿಗಳಿಗೆ ಪೌಷ್ಟಿಕ ಆಹಾರ ಕೊಡಬೇಕು
    * ಸೋಂಕಿತ ವ್ಯಕ್ತಿಗಳು ಬಳಸಿದ ಕರವಸ್ತ್ರ, ಇತರ ವಸ್ತುಗಳನ್ನ ಸಂಸ್ಕರಿಸಿ ಬಳಸಿರಿ

    ಏನು ಮಾಡಬಾರದು ?

    * ಕೈಗಳಿಂದ ಪದೇ ಪದೇ ಕಣ್ಣುಗಳನ್ನ ಮುಟ್ಟಬೇಡಿ
    * ಸ್ವಯಂ ಚಿಕಿತ್ಸಾ ವಿಧಾನಗಳನ್ನ ಮಾಡಬಾರದು
    * ಸೋಂಕಿತ ವ್ಯಕ್ತಿಯ ಸನಿಹದಿಂದ ದೂರವಿರಿ
    * ಸೋಂಕಿತ ವ್ಯಕ್ತಿಗಳು ಬಳಸಿದ ವಸ್ತುಗಳನ್ನ ಮುಟ್ಟಬೇಡಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಗಿಡ, ಮರ ಬೆಳೆಸೋದು ಕಡ್ಡಾಯ – ಆರೋಗ್ಯ ಇಲಾಖೆ ಆದೇಶ

    ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಗಿಡ, ಮರ ಬೆಳೆಸೋದು ಕಡ್ಡಾಯ – ಆರೋಗ್ಯ ಇಲಾಖೆ ಆದೇಶ

    ಬೆಂಗಳೂರು: ಇನ್ಮುಂದೆ ಪ್ರತಿ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಗಿಡ, ಮರಗಳನ್ನ ಬೆಳೆಸಿ ನಿರ್ವಹಣೆ ಮಾಡುವುದನ್ನ ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ (Health Department) ಆದೇಶ ಹೊರಡಿಸಿದೆ.

    ಜಿಲ್ಲಾಸ್ಪತ್ರೆ, ತಾಲ್ಲೂಕು ಆಸ್ಪತ್ರೆ, ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಆರೋಗ್ಯ ಸಂಸ್ಥೆಗಳ ಆವರಣದಲ್ಲಿ ಉತ್ತಮ ಗಾಳಿ ನೀಡುವಂತಹ ಹಾಗೂ ಔಷಧೀಯ ಗಿಡ/ಮರಗಳನ್ನ (Plant Or Tree) ಬೆಳೆಸಿ ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡುವಂತೆ ಆರೋಗ್ಯ ಇಲಾಖೆ ಸುತ್ತೋಲೆಯಲ್ಲಿ ತಿಳಿಸಿದೆ. ಇದನ್ನೂ ಓದಿ: T20 WorldCup-2024 ಟೂರ್ನಿಯ ದಿನಾಂಕ ಬಹಿರಂಗ – USA, ವಿಂಡೀಸ್‌ ಆತಿಥ್ಯ

    ಹವಾಮಾನ ಬದಲಾವಣೆಯಿಂದ ಮಾನವನ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮ ತಪ್ಪಿಸಲು ಆರೋಗ್ಯ ಇಲಾಖೆ ಹೊಸ ಕ್ರಮ ತೆಗೆದುಕೊಂಡಿದೆ. ʻಹವಾಮಾನ ಬದಲಾವಣೆ ಮತ್ತು ಮಾನವ ಆರೋಗ್ಯʼ ಎಂಬ ರಾಷ್ಟ್ರೀಯ ಕಾರ್ಯಕ್ರಮದ ಅಡಿಯಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಗಿಡ/ಮರಗಳನ್ನ ಕಡ್ಡಾಯವಾಗಿ ಬೆಳೆಸುವಂತೆ ಹೇಳಿದೆ.

    ಗಿಡಗಳನ್ನ ನೆಡುವುದರಿಂದ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ಆವರಣದಲ್ಲಿ ಹಸಿರು ವಾತಾವರಣ ನಿರ್ಮಾಣ ಆಗುತ್ತದೆ. ಜೊತೆಗೆ ಮಳೆಯ ನೀರನ್ನು ಭೂಮಿ ಹೀರಿಕೊಳ್ಳುವುದರಿಂದ ಅಂತರ್ಜಲ ಮಟ್ಟವೂ ಹೆಚ್ಚಾಗುತ್ತದೆ. ಹಾಗಾಗಿ ನೆಟ್ಟ ಗಿಡಗಳನ್ನ ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡುವಂತೆಯೂ ಎಚ್ಚರಿಸಿದೆ. ಇದನ್ನೂ ಓದಿ: ಇಬ್ಬರೂ ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಪರ್ಧಿಸೋಣ.. ಯಾರಿಗೆ ಎಷ್ಟು ವೋಟು ಬರುತ್ತೆ ನೋಡೋಣ – ಪ್ರದೀಪ್ ಈಶ್ವರ್‌ಗೆ ಸುಧಾಕರ್ ಸವಾಲು

    ಜುಲೈ ತಿಂಗಳ ಒಳಗಡೆ ಕಡ್ಡಾಯವಾಗಿ ಆಸ್ಫತ್ರೆ ಆವರಣದಲ್ಲಿ ಗಡಿ ನೆಡುವ ಚಟುವಟಿಕೆ ಮುಗಿಸುವಂತೆ ತಾಕೀತು ಮಾಡಿದೆ. ಆಸ್ಪತ್ರೆಗೆ ಬರುವ ರೋಗಿಗಳಿಗೆ ಶುದ್ಧ ಗಾಳಿ ಸಿಗುವ ಹಾಗೆ ಗಿಡ-ಮರಗಳಿರುವಂತೆ ನೋಡಿಕೊಳ್ಳಬೇಕು ಅಂತಾ ತಾಕೀತು ಮಾಡಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಜ್ಯದಲ್ಲಿ ಆರೋಗ್ಯ ಕವಚ 108 ಅನುಷ್ಠಾನಕ್ಕೆ ತಾಂತ್ರಿಕ ಸಮಿತಿ ರಚನೆ – ಅಂಬುಲೆನ್ಸ್‌ ಬಿಕ್ಕಟ್ಟಿಗೆ ಬೀಳುತ್ತೆ ಬ್ರೇಕ್‌

    ರಾಜ್ಯದಲ್ಲಿ ಆರೋಗ್ಯ ಕವಚ 108 ಅನುಷ್ಠಾನಕ್ಕೆ ತಾಂತ್ರಿಕ ಸಮಿತಿ ರಚನೆ – ಅಂಬುಲೆನ್ಸ್‌ ಬಿಕ್ಕಟ್ಟಿಗೆ ಬೀಳುತ್ತೆ ಬ್ರೇಕ್‌

    – GVK ಅಂಬುಲೆನ್ಸ್‌ ಸೇವೆಗೆ ಬಿಗ್ ಶಾಕ್

    ಬೆಂಗಳೂರು: ರಾಜ್ಯದಲ್ಲಿ ಉತ್ತಮ ಆರೋಗ್ಯ ಸೇವೆ ಒದಗಿಸಲು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ (Dinesh Gundu Rao) ಮುಂದಾಗಿದ್ದಾರೆ. ಅಂಬುಲೆನ್ಸ್‌ (Ambulance) ಬಿಕ್ಕಟ್ಟಿಗೆ ಬ್ರೇಕ್‌ ಹಾಕಲು ಮುಂದಾಗಿರುವ ಆರೋಗ್ಯ ಇಲಾಖೆಯು (Heath Department) ಆರೋಗ್ಯ ಕವಚ 108 ಅನುಷ್ಠಾನಕ್ಕೆ ತಾಂತ್ರಿಕ ಸಮಿತಿ ರಚಿಸಿದೆ.

    108 ಆರೋಗ್ಯ ಕವಚ, 104 ಆರೋಗ್ಯ ಸಹಾಯವಾಣಿ ಯೋಜನೆಗಳ ಉನ್ನತ್ತೀಕರಣ ಹಾಗೂ ಮಾರ್ಗದರ್ಶನಕ್ಕೆ ಸಮಿತಿ ರಚಿಸಲಾಗಿದೆ. ನಿಮ್ಹಾನ್ಸ್ ಪ್ರಭಾರ ನಿರ್ದೇಶಕರು ಹಾಗೂ ಐಐಐಟಿ ನಿರ್ದೇಶಕ ಡಾ.ಜಿ. ಗುರುರಾಜ್ ಅವರ ಅಧ್ಯಕ್ಷತೆಯಲ್ಲಿ ತಾಂತ್ರಿಕ ಸಮಿತಿ ರಚನೆ ಮಾಡಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್ ವಿರುದ್ಧ ಬಿಜೆಪಿ ಜಿಲ್ಲಾವಾರು ಪ್ರತಿಭಟನೆ – ಸರ್ಕಾರದ ಧೋರಣೆಗೆ ತೀವ್ರ ಖಂಡನೆ

    ಅಲ್ಲದೇ, ಆರೋಗ್ಯ ಸೇವೆಗಳ ಟೆಂಡರ್ ನ್ಯೂನತೆ ಲೋಪಗಳ ಅಧ್ಯಯನಕ್ಕೆ ಸರ್ಕಾರ ಮುಂದಾಗಿದೆ. ಟೆಂಡರ್ ನ್ಯೂನತೆ ಲೋಪಗಳ ಅಧ್ಯಯನ ನಡೆಸಲು ಹಾಗೂ ಸಲಹೆ ನೀಡಲು ತಜ್ಞರ ಸಲಹಾ ಸಮಿತಿ ರಚನೆ ಮಾಡಲಾಗಿದೆ. ಆ ಮೂಲಕ GVK ಅಂಬುಲೆನ್ಸ್ ಸೇವೆಗೆ ಬಿಗ್ ಶಾಕ್ ನೀಡಿದೆ.

    ಆರೋಗ್ಯ ಇಲಾಖೆಯ ಮೇಜರ್ ಸರ್ಜರಿಗೆ ಮುಂದಾಗಿರುವ ಸರ್ಕಾರ, ಹಳೆಯ ಸರ್ಕಾರದ GVK ಟೆಂಡರ್‌ಗೆ ಕೊಕ್ ಕೊಟ್ಟಿದೆ. ಆ ಮೂಲಕ ‘108’ ಅಂಬುಲೆನ್ಸ್ ಸೇವೆಯಲ್ಲಿ ಮಹತ್ವದ ಬದಲಾವಣೆಗೆ ಮುಂದಾಗಿದೆ. GVK ಸಂಸ್ಥೆಯ ವಿರುದ್ಧ ಸಾಲು ಸಾಲು ಆರೋಪ ಹಾಗೂ ದೂರು ಕೇಳಿಬಂದ ಹಿನ್ನೆಲೆ ಸರ್ಕಾರ ಜಿವಿಕೆ ಟೆಂಡರ್‌ಗೆ ಕೊಕ್ ಕೊಟ್ಟಿದೆ. ಇದನ್ನೂ ಓದಿ: ಪಿಎಸ್‍ಐ ಹಗರಣ ನ್ಯಾಯಾಂಗ ತನಿಖೆ ಕಾಂಗ್ರೆಸ್‍ನ ದ್ವೇಷದ ರಾಜಕಾರಣ: ಬೊಮ್ಮಾಯಿ

    ಕಳೆದ ಮೂರು ತಿಂಗಳ ಹಿಂದೆ ಆರೋಗ್ಯ ಕವಚ ಅಡಿಯಲ್ಲಿನ ‘108’ ಅಂಬುಲೆನ್ಸ್ ಸೇವೆಗೆ ಟೆಂಡರ್ ಕರೆಯಲಾಗಿತ್ತು. ಈ ಟೆಂಡರ್‌ನಲ್ಲಿಯೂ ಜಿವಿಕೆ ತೆರೆ ಹಿಂದಿನಿಂದ ಭಾಗವಹಿಸಿತ್ತು. ಆದರೆ ಈಗ ಟೆಂಡರ್ ಪ್ರಕ್ರಿಯೆಯನ್ನು ಸರ್ಕಾರ ಕೈಬಿಟ್ಟಿದೆ. ಟೆಂಡರ್ ಪ್ರಕ್ರಿಯೆ ಖರೀದಿಯಲ್ಲಿನ ವಿಧಾನ, ಟೆಂಡರ್ ಪ್ಲೋಟಿಂಗ್‌ನಲ್ಲಿನ ನ್ಯೂನತೆ, ಆಕ್ಷೇಪಣೆಗಳು, ತಾಂತ್ರಿಕ ದೋಷ ಪರಿಶೀಲಿಸಿ ಉತ್ತಮ ಸೇವೆ ನೀಡಲು ಈ ಸಮಿತಿ ರಚಿಸಿದೆ.

    ಉತ್ತಮ ಆರೋಗ್ಯ ಸೇವೆಗೆ ಯಾವ ರೀತಿಯ ಸೌಲಭ್ಯ? ಏನೆಲ್ಲ ತಂತ್ರಜ್ಞಾನ ಇರಬೇಕು? ಯಾವೆಲ್ಲ ಮಾರ್ಗಸೂಚಿ ಸೌಲಭ್ಯ ಅಳವಡಿಸಿಕೊಂಡಿರಬೇಕು? ಈ ಎಲ್ಲ ಮಾನದಂಡಗಳ ಆಧಾರದ ಮೇಲೆ ಸಲಹೆ ಹಾಗೂ ವರದಿ ನೀಡುವ ಕಾರ್ಯವನ್ನು ತಜ್ಞರ ಸಲಹಾ ಸಮಿತಿ ಮಾಡಲಿದೆ. ಐಐಐಟಿ ನಿರ್ದೇಶಕರು, ನಿಮ್ಹಾನ್ಸ್ ನಿರ್ದೇಶಕರು, ವಿಟಿಯು ಮಾಜಿ ಕುಲಪತಿಗಳು, ಕಾರ್ಮಿಕ ಇಲಾಖೆಯ ಆಯುಕ್ತರು, ಇಂಡಿಯನ್ ಇನ್‌ಸ್ಟಿಟ್ಯೂಟ್‌ ಆಫ್ ಸೈನ್ಸ್ (IISC ) ತಜ್ಞರನ್ನ ಸಮಿತಿ ಒಳಗೊಂಡಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೋವಿಡ್ ಹಗರಣಗಳ ಬಗ್ಗೆ ಸರ್ಕಾರಕ್ಕೆ ಆರೋಗ್ಯ ಇಲಾಖೆ ವರದಿ ಸಲ್ಲಿಕೆ

    ಕೋವಿಡ್ ಹಗರಣಗಳ ಬಗ್ಗೆ ಸರ್ಕಾರಕ್ಕೆ ಆರೋಗ್ಯ ಇಲಾಖೆ ವರದಿ ಸಲ್ಲಿಕೆ

    ಬೆಂಗಳೂರು: ಕೋವಿಡ್ ಹಗರಣಗಳ ಬಗ್ಗೆ ತನಿಖೆ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಹಣಕಾಸು ವಿಭಾಗವು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದೆ.

    ಬಿಜೆಪಿ ಅವಧಿಯಲ್ಲಿ ಕೋವಿಡ್ (COVID 19) ವೇಳೆ ಎಷ್ಟು ವೈದ್ಯಕೀಯ ಸಲಕರಣೆ ಖರೀದಿ ಆಗಿತ್ತು, ಯಾವೆಲ್ಲ ಔಷಧಿ ಖರೀದಿ ಮಾಡಿದ್ರು ಅಂತಾ ವರದಿಯಲ್ಲಿ ತಿಳಿಸಲಾಗಿದೆ. ವಿಭಾಗವಾರು ಯಾವುದಕ್ಕೆ ಎಲ್ಲಾ ಹಣ ಖರ್ಚಾಗಿದೆ?. ಏನೆಲ್ಲಾ ಖರೀದಿ ಆಗಿದೆ ಎಂಬುದರ ಬಗ್ಗೆಯೂ ವಿವರಿಸಲಾಗಿದೆ. ಎನ್ ಹೆಚ್ ಎಂ, ಅಡ್ಮಿನ್ ವಿಭಾಗ, ಇಂಜಿನಿಯರಿಂಗ್ ವಿಭಾಗ, ಐಸಿಯು, ವೆಂಟಿಲೇಟರ್ ಖರೀದಿ ಸೇರಿದಂತೆ ವಿಭಾಗವಾರು ಪ್ರತ್ಯೇಕ ಪ್ರತ್ಯೇಕ ಬಿಲ್ ಗಳನ್ನ ಒಳಗೊಂಡ ವರದಿ ವರದಿ ಸಲ್ಲಿಕೆ ಮಾಡಲಾಗಿದೆ.

    ಕಳೆದ ಬಾರಿ ಆರೋಗ್ಯ ಇಲಾಖೆಯಲ್ಲಿ (Helth Department) ನಡೆದ ಸಭೆಯಲ್ಲಿ ಆಯುಕ್ತರು ಮೌಖಿಕವಾಗಿ ಮಾಹಿತಿ ನೀಡಿದ್ದರು. ಈ ವೇಳೆ ಮೌಖಿಕವಾಗಿ ಬೇಡ ವರದಿ ಸಲ್ಲಿಸುವಂತೆ ಸೂಚಿಸಲಾಗಿತ್ತು. ಹೀಗಾಗಿ ಹಣಕಾಸು ವಿಭಾಗದಿಂದ ಆಡಿಟ್ ಮಾಡಿ ಕೋವಿಡ್ ಅವಧಿಯಲ್ಲಿ ಆಗಿರೋ ಖರ್ಚು ವೆಚ್ಚಗಳನ್ನ ಒಳಗೊಂಡ ಮಾಹಿತಿಯ ವರದಿ ಸಲ್ಲಿಕೆ ಮಾಡಲಾಗಿದೆ. ಇದನ್ನೂ ಓದಿ: ವರ್ಗಾವಣೆ ಆರೋಪದ ಬೆನ್ನಲ್ಲೇ ಆಪ್ತರಿಗೆ ಸಿಎಂ ಸೂಚನೆ

    ಈಗಾಗಲೇ ರಾಜ್ಯ ಸರ್ಕಾರದಿಂದ ಕೊವಿಡ್ ಅವಧಿಯ ಹಗರಣಗಳ ಬಗ್ಗೆ ತನಿಖೆ ಚುರುಕುಗೊಳಿಸಲಾಗಿದ್ದು, ಇದು ಎಲ್ಲಿಗೆ ತಲುಪಲಿದೆ ಎಂಬುದನ್ನು ಕಾದು ನೋಡಬೇಕಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಡಿಕೇರಿಯಲ್ಲಿ ಇಲಿ ಜ್ವರಕ್ಕೆ ಯುವಕ ಬಲಿ – ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

    ಮಡಿಕೇರಿಯಲ್ಲಿ ಇಲಿ ಜ್ವರಕ್ಕೆ ಯುವಕ ಬಲಿ – ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

    ಮಡಿಕೇರಿ: ಇಲಿ ಜ್ಚರಕ್ಕೆ (Rat Bite Fever) ಯುವಕನೋರ್ವ ಬಲಿಯಾದ ಘಟನೆ ಮಡಿಕೇರಿ (Madikeri) ತಾಲೂಕಿನ ಕರಿಕೆ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಸಮೀಪದ ಚೆಂಬೇರಿ ಆನೆಪಾರೆಯ ಯುವಕನೋರ್ವ ಲಿಬೀನ್ ಇಲಿ ಜ್ವರಕ್ಕೆ ಬಲಿಯಾಗಿದ್ದಾನೆ. ಆನೆಪಾರೆ ನಿವಾಸಿ ಕೂಲಿ ಕಾರ್ಮಿಕರಾದ ಬಾಲನ್ ಅವರ ಪುತ್ರ ಲಿಬೀನ್ ಜ್ವರ ಪೀಡಿತನಾಗಿ ಕೇರಳದ ಪೆರಿಯಾರಂ ಸರ್ಕಾರಿ ಆಸ್ಪತ್ರೆಯಲ್ಲಿ (Government Hospital) ಚಿಕಿತ್ಸೆಗೆ ದಾಖಲಾಗಿದ್ದು, ಜಾಂಡೀಸ್ ಕಾಯಿಲೆ ಇದೆ ಎಂದು ವೈದ್ಯರು ತಿಳಿಸಿದ್ದರು.

    ನಂತರ ಇದರೊಂದಿಗೆ ಇಲಿ ಜ್ವರ ಕೂಡ ಬಾಧಿಸಿದ್ದು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಇಲಿ ಜ್ವರದಿಂದ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಸದ್ಯ ಘಟನೆಯಿಂದ ಗ್ರಾಮಸ್ಥರಲ್ಲಿ‌ ಆತಂಕ ಸೃಷ್ಟಿಯಾಗಿದೆ. ಇದನ್ನೂ ಓದಿ: ಪತಿ, ಆತನ ಗರ್ಲ್‍ಫ್ರೆಂಡ್ ವಿರುದ್ಧ ಡೆತ್‍ನೋಟ್ ಬರೆದಿಟ್ಟು ಪತ್ನಿ ಆತ್ಮಹತ್ಯೆ

    ಇಲಿ ಜ್ವರ ಹೇಗೆ ಹರಡುತ್ತೆ? 
    ತಜ್ಞ ವೈದ್ಯರು (Doctors) ಹೇಳುವಂತೆ ಇದೊಂದು ರೀತಿಯ ಬ್ಯಾಕ್ಟೀರಿಯಾ ಸೋಂಕು. ಇಲಿ ಕಚ್ಚಿ ಮಾತ್ರ ನಿಮಗೆ ಜ್ವರ ಬರಬೇಕು ಎಂದೇನಿಲ್ಲ. ಅದರ ಎಂಜಲು, ಅದರ ಮೂತ್ರ, ಮಲ ಅಥವಾ ಇಲಿಯ ದೇಹದ ಯಾವುದೇ ದ್ರವ ನಿಮ್ಮ ಚರ್ಮಕ್ಕೆ ತಾಗಿದರೆ ನಿಮಗೆ ಸೋಂಕು ಉಂಟಾಗಬಹುದು. ಇದನ್ನೂ ಓದಿ: ಸಿಕ್ಕಿಬೀಳೋ ಭಯದಲ್ಲಿ ಕದ್ದಿದ್ದ 30 ಲಕ್ಷದ ವಜ್ರದ ಉಂಗುರವನ್ನು ಟಾಯ್ಲೆಟ್‌ನಲ್ಲಿ ಫ್ಲಶ್ ಮಾಡಿದ್ಳು!

    ಇದರ ಜೊತೆಗೆ ಇಲ್ಲಿಯ ಬಾಯಿಂದ, ಕಣ್ಣಿನಿಂದ ಅಥವಾ ಮೂಗಿನಿಂದ ಬರುವಂತಹ ದ್ರವಗಳು ಕೂಡ ನಿಮಗೆ ಹಾನಿಕಾರಕವಾಗಬಹುದು. ಕೆಲವರಿಗೆ ಇಲಿಗಳು ತಮ್ಮ ಉಗುರುನಿಂದ ಪರಚಿ ಹೋದರೆ ಅಥವಾ ಹಾಲಿನಿಂದ ಸಣ್ಣದಾಗಿ ಕಚ್ಚಿದರೆ ಕೂಡ ಜ್ವರ ಬರಬಹುದು. ಇಲಿ, ಹಸು, ನಾಯಿ, ಹಂದಿ ಮೂಲಕವೂ ಇಲಿ ಜ್ವರ ಹಬ್ಬುತ್ತದೆ. ಪರಿಸರ ನೈರ್ಮಲ್ಯದ ಕೊರತೆ, ನೆರೆಹಾವಳಿ ಇಲಿ ಜ್ವರ ಹರಡಲು ಮುಖ್ಯ ಕಾರಣವಾಗಿದೆ. ರೋಗಾಣು ಪ್ರವೇಶಿಸಿದ 2 ರಿಂದ 25 ದಿನಗಳಲ್ಲಿ ತೀವ್ರತರದ ಜ್ವರ ಕಾಡುತ್ತದೆ. ಮೈ-ಕೈ ನೋವು, ತಲೆನೋವು , ಕೆಲವೊಮ್ಮೆ ವಾಂತಿ ಹೊಟ್ಟೆ ನೋವು ಬರುವುದು, ಇಲಿ ಜ್ವರದ ಲಕ್ಷಣವಾಗಿದೆ ಎಂದು ವೈದ್ಯರು ಹೇಳಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಾಲೂಕು, ಜಿಲ್ಲಾ ಆಸ್ಪತ್ರೆಗಳ ಅವ್ಯವಸ್ಥೆ – ಎಂಆರ್‌ಐ, ಡಯಾಲಿಸಿಸ್ ಯಂತ್ರ ಅಳವಡಿಸದ್ದಕ್ಕೆ ಸಿಎಂ ಗರಂ

    ತಾಲೂಕು, ಜಿಲ್ಲಾ ಆಸ್ಪತ್ರೆಗಳ ಅವ್ಯವಸ್ಥೆ – ಎಂಆರ್‌ಐ, ಡಯಾಲಿಸಿಸ್ ಯಂತ್ರ ಅಳವಡಿಸದ್ದಕ್ಕೆ ಸಿಎಂ ಗರಂ

    ಬೆಂಗಳೂರು: ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಎಂಆರ್‌ಐ ಸ್ಕ್ಯಾನ್ (MRI Scan) ಹಾಗೂ ಡಯಾಲಿಸಿಸ್ (Dialysis) ಯಂತ್ರಗಳನ್ನು ಸಮರ್ಪಕವಾಗಿ ಅಳವಡಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಆರೋಗ್ಯ ಇಲಾಖೆ ಅಧಿಕಾರಿಗಳನ್ನು (Health Department) ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

    ಗೃಹ ಕಚೇರಿ ಕೃಷ್ಣಾದಲ್ಲಿ ಅವರು ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಮಂಗಳವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ವೇಳೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ಉದ್ದೇಶ ಸಮರ್ಪಕವಾಗಿ ಜಾರಿಯಾಗಿಲ್ಲ. ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ ಎದ್ದು ಕಾಣುತ್ತಿದೆ. ಇದನ್ನೂ ಮುಂದಿನ ಸಭೆಯೊಳಗೆ ಸರಿಪಡಿಸಬೇಕು ಎಂದು ಆದೇಶಿಸಿದ್ದಾರೆ. ಇದನ್ನೂ ಓದಿ: Breakingː ಜಮ್ಮು-ಕಾಶ್ಮೀರದಲ್ಲಿ 5.4 ತೀವ್ರತೆಯ ಭೂಕಂಪ

    ಅಲ್ಲದೇ ರಾಷ್ಟ್ರೀಯ ಆರೋಗ್ಯ ಅಭಿಯಾನ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, ಆರೋಗ್ಯ ಸೇವೆಯ ಲಭ್ಯತೆ ಕುರಿತಂತೆ ಪ್ರತ್ಯೇಕವಾಗಿ ಪ್ರಗತಿ ಪರಿಶೀಲನೆ ನಡೆಸಿದ್ದಾರೆ. ರಾಷ್ಟ್ರೀಯ ಆರೋಗ್ಯ ಮಿಷನ್‍ನ ಅನುದಾನ ಸಕಾಲದಲ್ಲಿ ವೆಚ್ಚವಾಗದಿರುವ ಬಗ್ಗೆ, ಆರೋಗ್ಯ ವ್ಯವಸ್ಥೆ ಬಲಪಡಿಸಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಬೇಕು. ಈ ಯೋಜನೆಯಡಿ 52% ರಷ್ಟು ತಜ್ಞ ವೈದ್ಯರ ಕೊರತೆ ಇದೆ. 31% ರಷ್ಟು ವೈದ್ಯರ ಕೊರತೆ ಹಾಗೂ 18% ರಷ್ಟು ನರ್ಸ್ ಸಿಬ್ಬಂದಿ ಕೊರತೆ ಇರುವುದರ ಬಗ್ಗೆ ಚರ್ಚೆ ನಡೆಸಿದ್ದಾರೆ. ಬಳಿಕ ವೇತನ ಹೆಚ್ಚಳ ಮಾಡುವ ಬಗ್ಗೆ ಪರಿಶೀಲಿಸಿ, ಖಾಲಿ ಇರುವ ಈ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

    ನಿರಂತರವಾಗಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಪ್ರಗತಿ ಪರಿಶೀಲನೆ ಮಾಡಬೇಕು. ನಿಗದಿತ ಗುರಿ ಸಾಧನೆಯನ್ನು ಖಾತರಿ ಪಡಿಸಬೇಕು ಹಾಗೂ ಅನುದಾನ ಸಕಾಲದಲ್ಲಿ ಬಳಕೆ ಮಾಡಬೇಕು. ಕಳೆದ ಒಂದು ವರ್ಷದಲ್ಲಿ ನಿಗಮಕ್ಕೆ 5 ಎಂಡಿ ನೇಮಕ ಮಾಡಿರುವುದರಿಂದ ಸಮಸ್ಯೆ ಆಗಿರುವುದನ್ನು ಅಧಿಕಾರಿಗಳಿಂದ ಮಾಹಿತಿ ಪಡೆದರು. ನಮ್ಮ ಸರ್ಕಾರದ ಅವಧಿಯಲ್ಲಿ ಈ ರೀತಿ ಆಗುವುದಿಲ್ಲ. ನಿಗಮದ ವ್ಯವಸ್ಥಾಪಕ ನಿರ್ದೇಶಕರು ಕನಿಷ್ಠ 2 ವರ್ಷ ಸೇವೆ ಸಲ್ಲಿಸಬೇಕು ಎಂದು ಇಲಾಖೆಯ ಆಯುಕ್ತರಿಗೆ ಸೂಚಿಸಿದರು.

    ಸರ್ಕಾರಿ ಆಸ್ಪತ್ರೆಗಳಲ್ಲಿ ಬಡಜನರಿಗೆ ಈ ವಿಶೇಷ ಸೇವೆಗಳನ್ನು ಒದಗಿಸದಿದ್ದರೆ ಅವರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ಹೇಗೆ ಸಾಧ್ಯ? ಗ್ರಾಮೀಣ ಪ್ರದೇಶದಲ್ಲಿ ವೈದ್ಯರಿಗೆ ಕಟ್ಟಿಸಿರುವ ವಸತಿಗೃಹದಲ್ಲಿ ಯಾವ ವೈದ್ಯರೂ ಉಳಿದುಕೊಳ್ಳುತ್ತಿಲ್ಲ ಈ ಎಲ್ಲಾ ಸಮಸ್ಯೆಗಳು ಮೂರು ತಿಂಗಳಲ್ಲಿ ಸರಿಪಡಿಸಬೇಕು. ಇದು ಮುಂದುವರೆದರೆ ಅಧಿಕಾರಿಗಳನ್ನು ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: 70,000 ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ

  • ಚೀನಾದಲ್ಲಿ H3N8 ಡೆಡ್ಲಿ ವೈರಸ್‌ ಪತ್ತೆ – ಪ್ರಾಣಿಗಳಿಂದ ಮನುಷ್ಯರಿಗೆ ಹರಡುತ್ತಂತೆ ಈ ವೈರಸ್‌!

    ಚೀನಾದಲ್ಲಿ H3N8 ಡೆಡ್ಲಿ ವೈರಸ್‌ ಪತ್ತೆ – ಪ್ರಾಣಿಗಳಿಂದ ಮನುಷ್ಯರಿಗೆ ಹರಡುತ್ತಂತೆ ಈ ವೈರಸ್‌!

    ಬೀಜಿಂಗ್‌: ವೈರಸ್‌ಗಳ ಆಗರ ಎಂದೇ ಕರೆಸಿಕೊಳ್ಳುವ ಚೀನಾದಲ್ಲಿ (China) ಮತ್ತೊಂದು ಡೆಡ್ಲಿ ವೈರಸ್‌ ಪತ್ತೆಯಾಗಿದೆ.

    ಕಳೆದ ಮಾರ್ಚ್‌ 27 ರಂದು ಏವಿಯನ್‌ ಇನ್ಫ್ಲುಯೆನ್ಸಾ-ಎ (H3N8 Virus – ಹಕ್ಕಿಜ್ವರದ ರೀತಿಯ ವೈರಸ್‌) ವೈರಸ್‌ನಿಂದ ಬಳಲುತ್ತಿದ್ದ ಮಹಿಳೆ ಸಾವನ್ನಪ್ಪಿರುವುದು ಕಂಡುಬಂದಿದೆ. ಈ ಬಗ್ಗೆ ಪರಿಶೀಲಿಸಾಗ ಈವರೆಗೆ ಮೂರು ಪ್ರಕರಣಗಳು ಚೀನಾದಿಂದಲೇ ವರದಿಯಾಗಿರುವುದಾಗಿ ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

    ಪ್ರಾಥಮಿಕ ಮಾಹಿತಿಗಳ ಪ್ರಕಾರ ಈ ವೈರಸ್‌ ವ್ಯಕ್ತಿಯಿಂದ ವ್ಯಕ್ತಿಗೆ ಸುಲಭವಾಗಿ ಹರಡುವ ಸಾಮರ್ಥ್ಯ ಹೊಂದಿಲ್ಲ. ಜೊತೆಗೆ ವೈರಸ್‌ ನಿಂದ ಹರಡುವಿಕೆಯಲ್ಲಿ ಅಪಾಯದ ಪ್ರಮಾಣವೂ ಕಡಿಮೆ ಎಂದು ಪರಿಗಣಿಸಲಾಗಿದೆ.

    ನ್ಯೂಮೋನಿಯಾ ಕಾಯಿಲೆಯಿಂದ ಬಳಲುತ್ತಿದ್ದ 56ರ ಮಹಿಳೆ ಇಲ್ಲಿನ ಆಸ್ಪತ್ರೆಗೆ ದಾಖಲಾಗಿದ್ದರು. ತೀವ್ರ ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದ ಮಹಿಳೆ ಆಸ್ಪತ್ರೆಗೆ ದಾಖಲಾದ ಒಂದು ತಿಂಗಳ ನಂತರ ಅವರು ನಿಧನರಾದರು. ಈ ಕುರಿತು ಮಾಹಿತಿ ಪಡೆದ ನಂತರ ವಿಶ್ವ ಆರೋಗ್ಯ ಸಂಸ್ಥೆ (WHO) ಕೋಳಿಗೆ ತಗುಲುವ ರೋಗಲಕ್ಷಣಗಳು (ಹಕ್ಕಿಜ್ವರದ ಲಕ್ಷಣಗಳು) ಮಹಿಳೆಯಲ್ಲಿ ಕಂಡುಬಂದಿದೆ ಎಂದು ಹೇಳಿದೆ. ಇದನ್ನೂ ಓದಿ: ದೃಷ್ಟಿ ಮಂಜಾಗ್ತಿದೆ, ಕೈ-ಕಾಲು ಸ್ವಾಧೀನ ಕಳೆದುಕೊಳ್ತಿದೆ – ಪುಟಿನ್‌ ಆರೋಗ್ಯದಲ್ಲಿ ಬಿಗ್‌ ಅಪ್ಡೇಟ್ಸ್‌

    ಏನಿದು H3N8 ವೈರಸ್?
    ಉತ್ತರ ಅಮೆರಿಕದ ಜಲಪಕ್ಷಿಗಳಲ್ಲಿ ಕಂಡುಬಂದಿದ್ದ ಈ H3N8 ವೈರಸ್‌ 2002ರಿಂದ ಇತರ ದೇಶಗಳಿಗೆ ವ್ಯಾಪಿಸಿತು. ಈ ವೈರಸ್‌ ಕುದುರೆ, ನಾಯಿ ಹಾಗೂ ಸೀಲ್‌ನಂತಹ ಜಲಚರ ಪ್ರಾಣಿಗಳಲ್ಲಿ ಕಂಡುಬರುತ್ತದೆ. ಕೋಳಿಯಂತಹ ಸಾಮಾನ್ಯ ಪಕ್ಷಿಗಳಲ್ಲೂ ಕಂಡುಬರುತ್ತದೆ. ಜೊತೆಗೆ ಪ್ರಾಣಿಗಳಿಂದ ಮನುಷ್ಯರಿಗೂ ಹರಡುತ್ತದೆ. ಆದರೆ ವೇಗವಾಗಿ ಹರಡುವುದಿಲ್ಲ. ನಿರ್ದಿಷ್ಟ ಸನ್ನಿವೇಶಗಳಲ್ಲಿ ಹರಡುತ್ತದೆ ಎಂದು ಹೇಳಲಾಗಿದೆ.

    ಈ ವೈರಸ್‌ ಝೂನೋಟಿಕ್ ಇನ್ಫ್ಲುಯೆನ್ಸಾ ಸೋಂಕು ಆಗಿರುವುದರಿಂದ ಲಕ್ಷಣ ರಹಿತವಾಗಿ ರೋಗವನ್ನು ಉಂಟುಮಾಡಬಹುದು. ಸೌಮ್ಯ ಜ್ವರ, ತೀವ್ರತರಹದ ಉಸಿರಾಟ, ಜಠರ ಅಥವಾ ನರಗಳಲ್ಲಿ ಸಮಸ್ಯೆ ಉಂಟುಮಾಡುವ ರೋಗಲಕ್ಷಣಗಳ ಮೂಲಕ ವೈರಸ್‌ ನ್ಯೂನತೆಯನ್ನು ಉಂಟುಮಾಡುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ಹಂಚಿಕೊಂಡಿದೆ.

    H3N8 ವೈರಸ್‌ಗೆ ಲಸಿಕೆ ಇದೆಯೇ?
    H3N8 ಇನ್ಫ್ಲುಯೆನ್ಸಾ-ಎ ವೈರಸ್‌ಗೆ ಈವರೆಗೂ ಲಸಿಕೆ ಕಂಡುಹಿಡಿದಿಲ್ಲ. ಹಾಗಾಗಿ ಇದರಿಂದ ಸಾರ್ವಜನಿಕರ ಆರೋಗ್ಯಕ್ಕೆ ಆಗುವ ಅಪಾಯದ ಪ್ರಮಾಣವನ್ನು ತಿಳಿಯಲು ತನಿಖೆ ನಡೆಸುವ ಅಗತ್ಯವಿದೆ ಎಂದು ಹೇಳಿದೆ.

    ಮುನ್ನೆಚ್ಚರಿಕೆ ಕ್ರಮಗಳೇನು?
    * ಯಾವುದೇ ವಸ್ತುವನ್ನು ಮುಟ್ಟುವ ಮುನ್ನ ಕೈಗಳನ್ನು ಶುಚಿಯಾಗಿ ತೊಳೆದುಕೊಳ್ಳಬೇಕು.
    * ಆಲ್ಕೋಹಾಲ್‌ ಆಧಾರಿತ ಹ್ಯಾಂಡ್‌ ಸ್ಯಾನಿಟೈಸರ್‌ ಅನ್ನು ಬಳಸಬೇಕು.
    * ಮಾರುಕಟ್ಟೆ, ಫಾರ್ಮ್‌, ಪೌಲ್ಟ್ರಿ‌ಗಳನ್ನು ಶುಚಿಯಾಗಿಟ್ಟುಕೊಳ್ಳಬೇಕು.