Tag: Health inspector

  • ಮೇಲಾಧಿಕಾರಿ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಆರೋಗ್ಯ ನಿರೀಕ್ಷಕ

    ಮೇಲಾಧಿಕಾರಿ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಆರೋಗ್ಯ ನಿರೀಕ್ಷಕ

    ಹುಬ್ಬಳ್ಳಿ: ಮೇಲಾಧಿಕಾರಿ ಕಿರುಕುಳಕ್ಕೆ ಬೇಸತ್ತು ಆರೋಗ್ಯ ನಿರೀಕ್ಷಕ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿ ತಾಲೂಕಿನ ನೂಲ್ವಿ ಗ್ರಾಮದಲ್ಲಿ ನಡೆದಿದೆ.

    ಮೆಹಬೂಬ್ ಸಾಬ್ ಸೂಡಿ ಆತ್ಮಹತ್ಯೆ ಯತ್ನಿಸಿದ ವ್ಯಕ್ತಿ. ಮೆಹಬೂಬ್ ಸಾಬ್ ಅವರು ನೂಲ್ವಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಿರಿಯ ಆರೋಗ್ಯ ನಿರೀಕ್ಷಕರಾಗಿದ್ದರು. ಆದರೆ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಯ ಕಿರುಕುಳಕ್ಕೆ ಬೇಸತ್ತ ಮೆಹಬೂಬ್ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಯಾವುದೇ ಪ್ರಾಣಪಾಯವಿಲ್ಲವೆಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ನಗರಸಭೆಗೆ ಚುನಾವಣೆ ನಡೆದು ನಾಲ್ಕು ತಿಂಗಳಾದರೂ ಅಧಿಕಾರವಿಲ್ಲ..!

    ಒಂದೇ ವಾರದಲ್ಲಿ ಈ ರೀತಿ ಎರಡು ಆತ್ಮಹತ್ಯೆ ಯತ್ನ ಪ್ರಕರಣಗಳು ಬೆಳಕಿಗೆ ಬಂದಿದೆ. ಧಾರವಾಡ ಡಿಹೆಚ್‍ಓ ಗೆ ದೂರು ನೀಡಿದ್ದರೂ ಕ್ರಮ ಕೈಗೊಂಡಿಲ್ಲವೆಂದು ಹೆಲ್ತ್ ಇನ್ಸ್ಪೆಕ್ಟರ್ ಆತ್ಮಹತ್ಯೆಗೆ ಯತ್ನಿಸಿದ್ದರು. ಇದನ್ನೂ ಓದಿ:  ಸಿದ್ದರಾಮಯ್ಯ ಅವರನ್ನು ನಾನೇ ಬಿಜೆಪಿಗೆ ಕರೆ ತರುತ್ತೇನೆ: ರಾಜೂ ಗೌಡ

  • ಕೊರೊನಾ ಕರ್ತವ್ಯದಲ್ಲಿದ್ದ ಆರೋಗ್ಯ ನಿರೀಕ್ಷಕ ಸಾವು

    ಕೊರೊನಾ ಕರ್ತವ್ಯದಲ್ಲಿದ್ದ ಆರೋಗ್ಯ ನಿರೀಕ್ಷಕ ಸಾವು

    ಕೊಲಾರ: ಕೊರೊನಾ ಕರ್ತವ್ಯದಲ್ಲಿದ್ದ ಆರೋಗ್ಯ ನಿರೀಕ್ಷಕ ಎದೆ ನೋವಿನಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮುಳಬಾಗಿಲು ತಾಲೂಕಿನ ಹೆಬ್ಬಣಿ ಚೆಕ್ ಪೋಸ್ಟ್ ನಲ್ಲಿ ನಡೆದಿದೆ.

    ಸರವಣಂ (45) ಮೃತ ಪಟ್ಟ ಕಿರಿಯ ಆರೋಗ್ಯ ನಿರೀಕ್ಷಕ. ಮುಳಬಾಗಿಲು ತಾಲೂಕಿನ ಊರುಕುಂಟೆ ಮಿಟ್ಟೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸರವಣಂ ಕೆಲಸ ಮಾಡುತ್ತಿದ್ದರು.

    ರಾಜ್ಯದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ದಿನದಿಂದ ಮಿಟ್ಟೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೊರೊನಾ ಕರ್ತವ್ಯದಲ್ಲಿದ್ದರು. ಅದೇ ರೀತಿ ಸರವಣಂ ಭಾನುವಾರ ರಾತ್ರಿ ಕೂಡ ಕೊರೊನಾ ಸಂಬಂಧ ಕರ್ತವ್ಯದಲ್ಲಿದ್ದರು. ಆದರೆ ಈ ವೇಳೆ ಎದೆನೋವಿನಿಂದ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಲಾಗಿದೆ. ಆದರೆ ಅಷ್ಟರಲ್ಲಿಯೇ ಸರವಣಂ ಅವರು ಮೃತಪಟ್ಟಿದ್ದಾರೆ.

  • ಬೆಟ್ಟದ ಮೇಲಿಂದ ಜಿಗಿದು ಹೆಲ್ತ್ ಇನ್ಸ್‌ಪೆಕ್ಟರ್ ಆತ್ಮಹತ್ಯೆ

    ಬೆಟ್ಟದ ಮೇಲಿಂದ ಜಿಗಿದು ಹೆಲ್ತ್ ಇನ್ಸ್‌ಪೆಕ್ಟರ್ ಆತ್ಮಹತ್ಯೆ

    ರಾಮನಗರ: ಬೆಟ್ಟದ ಮೇಲಿಂದ ಜಿಗಿದು ಹೆಲ್ತ್ ಇನ್ಸ್‌ಪೆಕ್ಟರ್ ಸಾವನ್ನಪ್ಪಿರುವ ಘಟನೆ ರಾಮನಗರ ತಾಲೂಕಿನ ಅವ್ವೇರಹಳ್ಳಿ ಗ್ರಾಮದ ರೇವಣಸಿದ್ದೇಶ್ವರ ಬೆಟ್ಟದಲ್ಲಿ ನಡೆದಿದೆ.

    ಬೆಂಗಳೂರಿನ ಯಲಹಂಕದಲ್ಲಿ ಆರೋಗ್ಯ ನಿರೀಕ್ಷಕನಾಗಿ ಕೆಲಸ ಮಾಡುತ್ತಿದ್ದ ಪ್ರಶಾಂತ್, ಬೆಟ್ಟದ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ರುಕ್ಮಿಣಿ ನಗರದ ನಿವಾಸಿಯಾಗಿದ್ದ ಪ್ರಶಾಂತ್, ಕಳೆದ ಮೂರು ದಿನಗಳ ಹಿಂದೆ ಮನೆಯಿಂದ ಹೊರ ಬಂದಿದ್ದರು. ಈ ಸಂಬಂಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪೋಷಕರು ಕಾಣೆಯಾಗಿರುವುದಾಗಿ ದೂರು ನೀಡಿದ್ದರು.

    ದೂರು ಪಡೆದಿದ್ದ ಪೀಣ್ಯ ಪೊಲೀಸರು ಮೊಬೈಲ್ ಟ್ರ್ಯಾಕ್ ಮಾಡಿದ್ದು ಎಸ್.ಆರ್.ಎಸ್ ಬೆಟ್ಟದಲ್ಲಿ ಕಡೆಯ ಲೊಕೇಶನ್ ತೋರಿಸಿತ್ತು. ಅಲ್ಲದೆ ಬೆಟ್ಟದ ಬಳಿ ದ್ವಿಚಕ್ರ ವಾಹನ ಪತ್ತೆಯಾಗಿತ್ತು. ನಂತರ ಬೆಟ್ಟದ ಸುತ್ತ-ಮುತ್ತ ಹುಡುಕಿದಾಗ ಪ್ರಶಾಂತ್ ಹೆಣವಾಗಿ ಪತ್ತೆಯಾಗಿದ್ದಾರೆ.

    ಆರೋಗ್ಯ ನಿರೀಕ್ಷಕ ಪ್ರಶಾಂತ್ ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಘಟನೆ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ಕುಡಿದ ಅಮಲಿನಲ್ಲಿ ಈಜಲು ತೆರಳಿದ್ದ ಹೆಲ್ತ್  ಇನ್ಸ್‌ಪೆಕ್ಟರ್‌ ಸಾವು

    ಕುಡಿದ ಅಮಲಿನಲ್ಲಿ ಈಜಲು ತೆರಳಿದ್ದ ಹೆಲ್ತ್ ಇನ್ಸ್‌ಪೆಕ್ಟರ್‌ ಸಾವು

    ರಾಮನಗರ: ಕುಡಿದ ಅಮಲಿನಲ್ಲಿ ಕೆರೆಯಲ್ಲಿ ಈಜಲು ಹೋಗಿದ್ದ ಹೆಲ್ತ್ ಇನ್ಸ್‌ಪೆಕ್ಟರ್‌ ಸಾವನ್ನಪ್ಪಿದ್ದಾರೆ.

    ಜಿಲ್ಲೆಯ ಮಾಗಡಿಯ ತಾಲೂಕಿನ ಬೈಚಾಪುರ ಗ್ರಾಮದ ನಿವಾಸಿ ಶಂಕರ್ (32) ಮೃತಪಟ್ಟ ಹೆಲ್ತ್ ಇನ್ಸ್‌ಪೆಕ್ಟರ್‌. ಇವರು ಬಿಡದಿಯ ಅರೋಗ್ಯ ಕೇಂದ್ರದಲ್ಲಿ ಆರೋಗ್ಯ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು.

    ನಾಲ್ಕು ಜನ ಸ್ನೇಹಿತರೊಂದೊಂದಿಗೆ ಮದ್ಯ ಸೇವಿಸಿದ ಶಂಕರ್, ಬುಧವಾರ ಸಾಯಂಕಾಲ ರಾಮನಗರದ ಸಿಂಗ್ರಬೋವಿ ದೊಡ್ಡಿಯಲ್ಲಿನ ಕೆರೆಯಲ್ಲಿ ಈಜಲು ತೆರಳಿದ್ದರು. ಈ ವೇಳೆ ಈಜುತ್ತಿದ್ದ ಶಂಕರ್ ಅವರ ಕಾಲಿಗೆ ಬಳ್ಳಿ ಸುತ್ತಿಕೊಂಡು ಈಜಲಾಗದೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

    ಈ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶಂಕರ್ ಜೊತೆ ಇದ್ದ ಮೂವರು ಸ್ನೇಹಿತರನ್ನು ವಶಕ್ಕೆ ಪಡೆಯಲಾಗಿದೆ.