Tag: health minister sudhakar

  • ಕಾಂಗ್ರೆಸ್ ಬೇಜವಾಬ್ದಾರಿ ನಡೆಯನ್ನು ಜನ ಮರೆಯಲ್ಲ, ಕ್ಷಮಿಸುವುದೂ ಇಲ್ಲ: ಸಚಿವ ಸುಧಾಕರ್‌

    ಕಾಂಗ್ರೆಸ್ ಬೇಜವಾಬ್ದಾರಿ ನಡೆಯನ್ನು ಜನ ಮರೆಯಲ್ಲ, ಕ್ಷಮಿಸುವುದೂ ಇಲ್ಲ: ಸಚಿವ ಸುಧಾಕರ್‌

    ಬೆಂಗಳೂರು: ಕಾಂಗ್ರೆಸ್‌ ಬೇಜವಾಬ್ದಾರಿ ನಡೆಯನ್ನು ಜನ ಮರೆಯುವುದಿಲ್ಲ, ಕ್ಷಮಿಸುವುದೂ ಇಲ್ಲ ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್‌ ಹೇಳಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಪಾದಯಾತ್ರೆಗೆ ಸಂಬಂಧಿಸಿದಂತೆ ನ್ಯಾಯಾಲಯ ನೀಡಿದ ನಿರ್ದೇಶನವನ್ನು ಸ್ವಾಗತಿಸುತ್ತೇನೆ. ಇದು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕೋವಿಡ್ ನಿಯಂತ್ರಣ ಮಾರ್ಗಸೂಚಿಗೆ ಪೂರಕವಾಗಿದೆ. ಕೋವಿಡ್ ಪ್ರಕರಣ ಹೆಚ್ಚಿರುವ ಈ ಸಮಯದಲ್ಲಿ ಇದು ಸೂಕ್ತವಾಗಿದೆ. ಕಾಂಗ್ರೆಸ್‌ನ ಬೇಜವಾಬ್ದಾರಿ ನಡೆಯನ್ನು ಜನ ಮರೆಯುವುದೂ ಇಲ್ಲ, ಕ್ಷಮಿಸುವುದೂ ಇಲ್ಲ ಎಂದು ಟೀಕಿಸಿದರು. ಇದನ್ನೂ ಓದಿ: ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ- ವೇತನ 11 ಸಾವಿರದಿಂದ 28 ಸಾವಿರಕ್ಕೆ ಹೆಚ್ಚಳ

    ರಾಜ್ಯದಲ್ಲಿ ಸೋಂಕು ದಿನೇ ದಿನೇ ಹೆಚ್ಚಳವಾಗುತ್ತಿದೆ. ಆದರೂ ಶೇ. 5ರಿಂದ 6 ರಷ್ಟು ರೋಗಿಗಳು ಮಾತ್ರ ಆಸ್ಪತ್ರೆ ಸೇರುತ್ತಿದ್ದಾರೆ. ನರ್ಸ್‌ಗಳು ಕೂಡ ಸೋಂಕಿಗೆ ಒಳಗಾಗುತ್ತಿರುವುದು ಆತಂಕದ ವಿಚಾರ. ಹೀಗಾಗಿ ಮತ್ತಷ್ಟು ಎಚ್ಚರಿಕೆಯ ಅವಶ್ಯಕತೆ ಇದೆ. ರಾಜ್ಯದಲ್ಲಿ ಕೊರೊನಾ ಇನ್ನೂ ಪೀಕ್‌ಗೆ ಹೋಗಿಲ್ಲ ಎಂದು ತಜ್ಞರು ಕೂಡಾ ಹೇಳಿದ್ದಾರೆ. ಫೆಬ್ರವರಿ ಮೊದಲ ವಾರ ಪೀಕ್‌ಗೆ ಹೋಗುವ ಸಾಧ್ಯತೆ ಇದೆ. 3- 4ನೇ ವಾರದಿಂದ ಕಡಿಮೆ ಆಗಲಿದೆಯೆಂದು ತಜ್ಞರು ಅಂದಾಜಿಸಿದ್ದಾರೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಆರೋಪಿಗಳ ರಕ್ಷಣೆಗೆ ಲಂಚ – ರವಿ ಡಿ.ಚನ್ನಣ್ಣನವರ್ ಅಮಾನತಿಗೆ AAP ಆಗ್ರಹ

    ರಾಜ್ಯದ ಜನರಿಗೆ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳನ್ನು ಕೋರುತ್ತೇನೆ. ಈ ಉತ್ತರಾಯಣದ ಪುಣ್ಯ ಕಾಲದಲ್ಲಿ ಎಲ್ಲರಿಗೂ ಸಂತಸ, ಆರೋಗ್ಯ, ಸಮೃದ್ಧಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಇಂದು ಕೋವಿಡ್ ಲಸಿಕೆಯ ಬೂಸ್ಟರ್‌ ಡೋಸ್ ಪಡೆದಿದ್ದಾರೆ. 9 ತಿಂಗಳ ಹಿಂದೆ ಅವರು ಎರಡು ಡೋಸ್ ಪಡೆದಿದ್ದರು. ಬಿಎಂಸಿಆರ್‌ಐನಲ್ಲಿ ಈವರೆಗೆ 83,937 ಡೋಸ್‌ಗಳನ್ನು ನೀಡಲಾಗಿದೆ. ಈ ಪೈಕಿ 420 ಬಾಣಂತಿ, 1,179 ಗರ್ಭಿಣಿಯರಿಗೆ ಲಸಿಕೆ ನೀಡಲಾಗಿದೆ. ಆರೋಗ್ಯ ಸಿಬ್ಬಂದಿ ಸೇರಿದಂತೆ ಅರ್ಹರು ಮುನ್ನೆಚ್ಚರಿಕೆಗೆ ಲಸಿಕೆಯನ್ನು ಪಡೆಯಬೇಕು. ಲಸಿಕಾಕರಣ ಒಂದರಿಂದಲೇ ರಕ್ಷಣೆ ಸಾಧ್ಯ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದು, ಪ್ರಧಾನಿಗಳು ಕೂಡ ಅದನ್ನೇ ಹೇಳಿದ್ದಾರೆ. ಎಲ್ಲರೂ ಕಡ್ಡಾಯವಾಗಿ ಲಸಿಕೆ ಪಡೆಯೋಣ ಎಂದು ಕರೆ ನೀಡಿದರು.

  • ಎರಡು ಡೋಸ್ ಲಸಿಕೆ ಪಡೆದವರಿಗೆ ಗ್ರೀನ್ ಪಾಸ್, ಯೂನಿವರ್ಸಲ್ ಪಾಸ್ ಕೊಡುವ ಚಿಂತನೆ: ಸುಧಾಕರ್‌

    ಎರಡು ಡೋಸ್ ಲಸಿಕೆ ಪಡೆದವರಿಗೆ ಗ್ರೀನ್ ಪಾಸ್, ಯೂನಿವರ್ಸಲ್ ಪಾಸ್ ಕೊಡುವ ಚಿಂತನೆ: ಸುಧಾಕರ್‌

    ಬೆಂಗಳೂರು: ಕೋವಿಡ್‌ ಲಸಿಕೆಯ ಎರಡೂ ಡೋಸ್‌ ಪಡೆದವರಿಗೆ ಗ್ರೀನ್‌ ಪಾಸ್‌ ಅಥವಾ ಯೂನಿವರ್ಸಲ್‌ ಪಾಸ್‌ ಕೊಡುವ ಚಿಂತನೆ ನಡೆದಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ.

    ವಿಧಾನಸೌಧದಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡು ಡೋಸ್‌ ಲಸಿಕೆ ಪಡೆದವರಿಗೆ ಗ್ರೀನ್‌ ಪಾಸ್‌, ಯೂನಿವರ್ಸಲ್‌ ಪಾಸ್‌ ಕೊಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಬಸ್‌ಗಳಲ್ಲಿ ಪ್ರಯಾಣ ಅಥವಾ ಹೋಟೆಲ್‌, ರೆಸ್ಟೋರೆಂಟ್‌ ಪ್ರವೇಶ ಹಾಗೂ ಇತರೆ ಅನುಮತಿಗಳಿಗಾಗಿ ಈ ಪಾಸ್‌ಗಳು ಮುಖ್ಯವಾಗಲಿವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ವಿದೇಶಗಳಿಂದ ವಾಪಸ್ಸಾಗುವ ಪ್ರಯಾಣಿಕರಿಗೆ 7 ದಿನ ಹೋಂ ಕ್ವಾರಂಟೈನ್‌ ಕಡ್ಡಾಯ

    ಕೊರೊನಾ ಸಂಭವನೀಯ ಮೂರನೇ ಅಲೆಯನ್ನು ಯಶಸ್ವಿಯಾಗಿ ಮತ್ತು ಪರಿಣಾಮಕಾರಿಯಾಗಿ ಎದುರಿಸಲು ಸರ್ಕಾರ ಎಲ್ಲಾ ತಯಾರಿ ಮಾಡಿಕೊಂಡಿದೆ. ಕೋವಿಡ್ ನಿಯಂತ್ರಣ ಮಾಡಲು ಅಧಿಕಾರಿಗಳಿಗೆ ಹಲವು ಜವಾಬ್ದಾರಿ ಕೊಟ್ಟಿದ್ದೇವೆ. ಎಲ್ಲಾ ಅಧಿಕಾರಿಗಳ ಸಮನ್ವಯ ಕುರಿತು ಸಭೆ ಮಾಡಲಾಗಿದೆ. ಕಳೆದ ಎರಡು ಅಲೆಗಳ ವೇಳೆ ಅನುಭವ ಪಡೆದ ಅಧಿಕಾರಿಗಳು ಈ ಬಾರಿ ಯಾವುದೇ ಲೋಪ ಆಗದಂತೆ ಕೆಲಸ ಮಾಡಲಿದ್ದಾರೆ ಎಂದಿದ್ದಾರೆ.

    ವಿಶ್ವ ಆರೋಗ್ಯ ಸಂಸ್ಥೆ, ಓಮಿಕ್ರಾನ್ ವಿಶ್ವದಲ್ಲಿ ಅತೀ ವೇಗವಾಗಿ ಹರಡುವ ಪ್ರಭೇದ ಎಂದು ತಿಳಿಸಿದೆ. ಡೆಲ್ಟಾ ಪ್ರಭೇದದ ರೋಗ ತೀವ್ರತೆ ಹೆಚ್ಚು, ಒಮಿಕ್ರಾನ್ ತೀವ್ರತೆ ಕಡಿಮೆ. ಎರಡು ಡೋಸ್ ಲಸಿಕೆ ಪಡೆದರೆ ಒಮಿಕ್ರಾನ್‌ನಿಂದ ತೀವ್ರತರಹ ವ್ಯಾಧಿ ಉಲ್ಬಣವಾಗುವುದಿಲ್ಲ. ಹೀಗಾಗಿ ಎಲ್ಲರೂ ಕಡ್ಡಾಯವಾಗಿ ಎರಡೂ ಡೋಸ್ ಲಸಿಕೆ ಪಡೆಯಬೇಕು ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಸೆಲ್ಫ್ ಕೋವಿಡ್ ಟೆಸ್ಟಿಂಗ್ ಮಾಡಿಕೊಳ್ಳುವವರಿಗೆ ಮಾರ್ಗಸೂಚಿ ನೀಡಬೇಕು: ಡಾ.ವಿಶಾಲ್ ರಾವ್

    ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ರೋಗ ಲಕ್ಷಣ ಇರುವವರನ್ನು ಮಾತ್ರ ಪರೀಕ್ಷೆ ಮಾಡಿದರೆ ಸಾಕು. ಆದರೆ ಕರ್ನಾಟಕ ಸರ್ಕಾರ ಕೊರೊನಾ ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿರುವವರ ಪರೀಕ್ಷೆ ಕೂಡ ನಡೆಸಲಿದೆ. 2 ಡೋಸ್ ಲಸಿಕೆ ತೆಗೆದುಕೊಂಡವರಿಗೆ ಗ್ರೀನ್ ಪಾಸ್ ಅಥವಾ ಯೂನಿವರ್ಸಲ್ ಪಾಸ್ ಕೊಡುವ ಬಗ್ಗೆ ಚಿಂತನೆ ನಡೆಯುತ್ತಿದೆ. ಪ್ರತಿದಿನ ಸಂಜೆ 5 ಗಂಟೆಗೆ ಆರೋಗ್ಯ ಇಲಾಖೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆಯಾಗಲಿದೆ. ಮನೆಯಲ್ಲಿ ಮೂರು ಪ್ರಕರಣ ಕಂಡು ಬಂದರೆ, ಮೈಕ್ರೋ ಕಂಟೈನ್ಮೆಂಟ್ ವಲಯ ಎಂದು ಘೋಷಣೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

    ಪಾದಯಾತ್ರೆ ಕೈಬಿಡಿ
    ಮೇಕೆದಾಟು ಪಾದಯಾತ್ರೆಗೆ ನಾವು ವಿರೋಧ ಮಾಡುತ್ತಿಲ್ಲ. ಆದರೆ ಹಿಂದೆ ಆಡಳಿತ ನಡೆಸಿದವರು, ಮುಖ್ಯಮಂತ್ರಿಯಾಗಿದ್ದವರು ಹಾಗೂ ಅಪಾರ ಅನುಭವ ಇರುವವರು ಈ ಬಗ್ಗೆ ಆಲೋಚಿಸಲಿ. ಪ್ರತಿಭಟನೆಗಳು ಪ್ರಜಾಪ್ರಭುತ್ವದ ಭಾಗವಾಗಿದೆ. ಪಾದಯಾತ್ರೆಯನ್ನು ಸ್ವಲ್ಪ ದಿನ ಮುಂದಕ್ಕೆ ಹಾಕಿ. ಬಿಬಿಎಂಪಿ ಚುನಾವಣೆ ಗಮನದಲ್ಲಿಟ್ಟುಕೊಂಡು ಮಾಡುವುದು ಕೇವಲ ರಾಜಕೀಯ ಪ್ರೇರಿತ ಎಂದು ಕಾಂಗ್ರೆಸ್‌ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.