Tag: health minister

  • ಟೆಂಡರ್‌ನಲ್ಲಿ 1 ಪರ್ಸೆಂಟ್‌ ಕಮಿಷನ್‌ ತೆಗೆದುಕೊಂಡಿದ್ದಕ್ಕೆ ಸಚಿವನನ್ನು ವಜಾಗೊಳಿಸಿದ ಭಗವಂತ್‌ ಮಾನ್‌

    ಟೆಂಡರ್‌ನಲ್ಲಿ 1 ಪರ್ಸೆಂಟ್‌ ಕಮಿಷನ್‌ ತೆಗೆದುಕೊಂಡಿದ್ದಕ್ಕೆ ಸಚಿವನನ್ನು ವಜಾಗೊಳಿಸಿದ ಭಗವಂತ್‌ ಮಾನ್‌

    ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಇಂದು ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ಅವರನ್ನು ಭ್ರಷ್ಟಾಚಾರದ ಆರೋಪದ ಮೇಲೆ ಸಂಪುಟದಿಂದ ವಜಾಗೊಳಿಸಿದ್ದಾರೆ ಎಂದು ವರದಿಯಾಗಿದೆ.

    ಸಿಂಗ್ಲಾ ಅವರು ಟೆಂಡರ್‌ಗಳಲ್ಲಿ ಶೇಕಡಾ ಒಂದರಷ್ಟು ಕಮಿಷನ್‌ಗೆ ಬೇಡಿಕೆ ಇಡುತ್ತಿದ್ದರು ಎನ್ನಲಾಗಿದೆ. ಅವರನ್ನು ಪದಚ್ಯುತಿಗೊಳಿಸಿದ ಕೂಡಲೇ ಪಂಜಾಬ್ ಭ್ರಷ್ಟಾಚಾರ ನಿಗ್ರಹ ದಳದಿಂದ ಬಂಧಿಸಲಾಯಿತು. ಇದನ್ನೂ ಓದಿ: ವಂದೇ ಮಾತರಂಗೂ ರಾಷ್ಟ್ರಗೀತೆಯಷ್ಟೇ ಗೌರವ ಕೋಡಿ – ದೆಹಲಿ ಹೈಕೋರ್ಟ್‌ಗೆ ಪಿಐಎಲ್

    Bhagwant Mann

    ಸಚಿವರ ವಿರುದ್ಧ ದೂರು ಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಭಗವಂತ್ ಮಾನ್ ಈ ಕ್ರಮ ಕೈಗೊಂಡಿದ್ದಾರೆ. ಮುಖ್ಯಮಂತ್ರಿಯೊಬ್ಬರು ತಮ್ಮದೇ ಸಂಪುಟ ಸಚಿವರ ವಿರುದ್ಧ ಈ ರೀತಿಯ ಕಠಿಣ ಕ್ರಮ ಕೈಗೊಂಡಿರುವುದು ದೇಶದ ಇತಿಹಾಸದಲ್ಲಿ ಇದು ಎರಡನೇ ಬಾರಿ. ಇದಕ್ಕೂ ಮೊದಲು, ಆಮ್ ಆದ್ಮಿ ಪಕ್ಷದ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು 2015 ರಲ್ಲಿ ಭ್ರಷ್ಟಾಚಾರ ಆರೋಪದ ಮೇಲೆ ತಮ್ಮ ಸಂಪುಟದ ಸಚಿವರೊಬ್ಬರನ್ನು ವಜಾಗೊಳಿಸಿದ್ದರು.

    ಭ್ರಷ್ಟಾಚಾರವನ್ನು ಸಹಿಸಲಾಗುವುದಿಲ್ಲ ಎಂದು ಸಿಎಂ ಭಗವಂತ್‌ ಮಾನ್ ವೀಡಿಯೋದಲ್ಲಿ ಸಂದೇಶ ರವಾನಿಸಿದ್ದಾರೆ. ʼಸಿಂಗ್ಲಾ ಅವರು ಭ್ರಷ್ಟಾಚಾರ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಜನರು ಸಾಕಷ್ಟು ಭರವಸೆಯೊಂದಿಗೆ ಎಎಪಿಗೆ ಮತ ಹಾಕಿದ್ದಾರೆ. ನಾವು ಅದನ್ನು ಉಳಿಸಿಕೊಳ್ಳಬೇಕು. ಭಾರತ ಮಾತೆಗೆ ಅರವಿಂದ್ ಕೇಜ್ರಿವಾಲ್ ಅವರಂತಹ ಮಗ ಮತ್ತು ಭಗವಂತ್ ಮಾನ್ ಅವರಂತಹ ಸೈನಿಕ ಇರುವವರೆಗೂ ಭ್ರಷ್ಟಾಚಾರದ ವಿರುದ್ಧದ ಮಹಾಯುದ್ಧ ಮುಂದುವರಿಯುತ್ತದೆʼ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕುತುಬ್ ಮಿನಾರ್ ಬಳಿ ಪೂಜೆ ಮಾಡುವ ಹಕ್ಕು ಯಾರಿಗೂ ಇಲ್ಲ – ASI ಖಡಕ್ ಉತ್ತರ

    ಅರವಿಂದ್ ಕೇಜ್ರಿವಾಲ್ ಅವರ ಭ್ರಷ್ಟಾಚಾರ ವಿರೋಧಿ ಮಾದರಿಗೆ ಅನುಗುಣವಾಗಿ ದೊಡ್ಡ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಪಕ್ಷ ಹೇಳಿದೆ. ಸಿಂಗ್ಲಾ ವಿರುದ್ಧ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ.

    ಭಗವಂತ್‌ ಮಾನ್‌ ಅವರ ನಿರ್ಧಾರವನ್ನು ಪ್ರಶಂಶಿಸಿ ಟ್ವೀಟ್‌ ಮಾಡಿರುವ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌, ನಿಮ್ಮ ಬಗ್ಗೆ ಹೆಮ್ಮೆ ಇದೆ ಭಗವಂತ್‌ ಮಾನ್. ನಿಮ್ಮ ಕಾರ್ಯ ನನ್ನ ಕಣ್ಣಲ್ಲಿ ನೀರು ತರಿಸಿದೆ. ಇಡೀ ರಾಷ್ಟ್ರ ಇಂದು ಎಎಪಿ ಬಗ್ಗೆ ಹೆಮ್ಮೆ ಪಡುತ್ತಿದೆ‌ ಎಂದು ಹೇಳಿದ್ದಾರೆ.

  • ಸಚಿವ ಸುಧಾಕರ್ ಬಗ್ಗೆ ಟೀಕಿಸಿದ್ದ ಕಾಂಗ್ರೆಸ್ ಮುಖಂಡ ಅರೆಸ್ಟ್

    ಸಚಿವ ಸುಧಾಕರ್ ಬಗ್ಗೆ ಟೀಕಿಸಿದ್ದ ಕಾಂಗ್ರೆಸ್ ಮುಖಂಡ ಅರೆಸ್ಟ್

    ಚಿಕ್ಕಬಳ್ಳಾಪುರ: ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಫೌಂಡೇಶನ್ ವತಿಯಿಂದ ಚಿಕ್ಕಬಳ್ಳಾಪುರ ನಗರದ ಎಸ್‍ಜೆಸಿಐಟಿ ಕಾಲೇಜು ಆವರಣದಲ್ಲಿ ಇದೇ ತಿಂಗಳ 14 ಹಾಗೂ 15 ರಂದು ಬೃಹತ್ ಆರೋಗ್ಯ ಮೇಳ ಆಯೋಜನೆ ಮಾಡಲಾಗಿದೆ. ಹೀಗಾಗಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ವಾರ್ಡುವಾರು ಗ್ರಾಮವಾರು ಆರೋಗ್ಯ ಇಲಾಖೆ ವತಿಯಿಂದ ಉಚಿತ ರಕ್ತ ತಪಾಸಣೆಗೆ ರಕ್ತ ಸಂಗ್ರಹಣೆ ಕಾರ್ಯ ಮಾಡಲಾಗುತ್ತಿದೆ.

    ಈ ವಿಚಾರವಾಗಿ ಚಿಕ್ಕಬಳ್ಳಾಪುರ ನಗರದ ಕಾಂಗ್ರೆಸ್ ಮುಖಂಡ ಸಂತೋಷ್ ಆರೋಗ್ಯ ಮೇಳ ಹಾಗೂ ರಕ್ತ ಸಂಗ್ರಹಣೆ ಮಾಡ್ತಿರೋದು ಇತ್ತೀಚೆಗೆ ಚಿಕ್ಕಬಳ್ಳಾಪುರ ನಗರಕ್ಕೆ ಬಂದ ಕಲುಷಿತ ನೀರಿನಿಂದ ಪ್ಲೋರೈಡ್ ಬಂದಿದ್ಯಾ..? ಕ್ಯಾನ್ಸರ್ ಬಂದಿದ್ಯಾ ಪರೀಕ್ಷೆ ಮಾಡೋಕೆ ಅಂತ ಮಾತನಾಡಿದ್ದಾರೆ. ಇದನ್ನ ಪ್ರಚೋದನೆ ಮಾಡಿ ವೀಡಿಯೋ ಮಾಡಿಕೊಂಡಿರುವ ಸಚಿವ ಸುಧಾಕರ್ ಬೆಂಬಲಿಗ ಅನಿಲ್ ಕುಮಾರ್ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಸಂತೋಷ್ ವಿರುದ್ಧ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಪಂಜಾಬ್‌ನಲ್ಲಿ ಪೊಲೀಸ್ ಗುಪ್ತಚರ ಪ್ರಧಾನ ಕಚೇರಿ ಮೇಲೆಯೇ ಗ್ರೆನೇಡ್ ದಾಳಿ

    ದೂರಿನನ್ವಯ ತಡರಾತ್ರಿ ಐಪಿಸಿ ಸೆಕ್ಷನ್ 153 ಹಾಗೂ 505(1)ರ ಅಡಿ ಪ್ರಕರಣ ದಾಖಲಿಸಿಕೊಂಡಿರೋ ಪೊಲೀಸರು ಆರೋಪಿ ಸಂತೋಷ್ ರನ್ನ ಬಂಧಿಸಿ ತಡರಾತ್ರಿಯೇ ಜೈಲಿಗೆ ಕಳುಹಿಸಿದ್ದಾರೆ. ಇದೇ ವಿಚಾರವಾಗಿ ತಡರಾತ್ರಿ ಸಹ ಕಾಂಗ್ರೆಸ್ ಕಾರ್ಯಕರ್ತ ಮುಖಂಡರು ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ರು. ಇಂದು ಬೆಳಗ್ಗೆ ಸಹ ಮತ್ತೆ ಪೊಲೀಸ್ ಠಾಣೆ ಬಳಿ ಜಮಾಯಿಸಿರುವ ಕಾಂಗ್ರೆಸ್ ಕಾರ್ಯಕರ್ತ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ.

    ದೂರುದಾರ ಅನಿಲ್ ವಿರುದ್ಧ ಸಹ ದಲಿತ ಸಮುದಾಯದ ವೆಂಕಟ್ ಎಂಬವರಿಗೆ ಜಾತಿನಿಂದನೆ ಮಾಡಿದ್ದಾರೆ ಅಂತ ದೂರು ನೀಡಿದ್ದು ಅನಿಲ್ ಕುಮಾರ್ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸುವಂತೆ ಪಟ್ಟು ಹಿಡಿದಿದ್ದಾರೆ. ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ಮುಂದುವರಿದಿದ್ದು ಬಿಗುವಿನ ವಾತವಾರಣ ನಿರ್ಮಾಣ ಆಗಿದೆ. ಇದನ್ನೂ ಓದಿ: ದೆಹಲಿಗೆ ತೆರಳಿದ ಸಿಎಂ ಬಸವರಾಜ ಬೊಮ್ಮಾಯಿ

  • ಸೈಕಲ್ ರೈಡ್‌ನಲ್ಲಿ ಸಂಸತ್ತಿಗೆ ಬಂದ ಕೇಂದ್ರ ಆರೋಗ್ಯ ಸಚಿವ

    ಸೈಕಲ್ ರೈಡ್‌ನಲ್ಲಿ ಸಂಸತ್ತಿಗೆ ಬಂದ ಕೇಂದ್ರ ಆರೋಗ್ಯ ಸಚಿವ

    ನವದೆಹಲಿ: ಸೈಕಲ್ ಮೂಲಕವಾಗಿ ಕೇಂದ್ರ ಆರೋಗ್ಯ ಸಚಿವ ಮನ್‍ಸುಖ್ ಮಾಂಡವಿಯಾ ಅವರು ಸಂಸತ್ತಿಗೆ ಬಂದಿದ್ದಾರೆ. ಈ ವೀಡೀಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

    2021ರ ನವೆಂಬರ್‌ನಲ್ಲಿ ಭಾರತ ಅಂತರಾಷ್ಟ್ರೀಯ ವ್ಯಾಪಾರ ಮೇಳದಲ್ಲಿ ಹೆಲ್ತ್ ಪೆವಿಲಿಯನ್ ಅನ್ನು ಉದ್ಘಾಟಿಸಲು ಮತ್ತು ಹೆಚ್ಚುತ್ತಿರುವ ಮಾಲಿನ್ಯ, ಆರೋಗ್ಯ ಜಾಗೃತಿ ಮತ್ತು ಫಿಟ್‍ನೆಸ್‍ಗೆ ಜನರನ್ನು ಪ್ರೇರೇಪಿಸಲು  ಸೈಕಲ್ ಸವಾರಿ ಮಾಡಿದ್ದರು. ಕೇಂದ್ರ ಸಚಿವರು ಮನೆಯಿಂದ ಸಂಸತ್ತಿಗೆ ಸೈಕಲ್ ಮೂಲಕ ಬರುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಹಲವಾರು ಸಂದರ್ಭಗಳಲ್ಲಿ, ಅವರು ಆರೋಗ್ಯ ಜಾಗೃತಿಗಾಗಿ ಸಂದೇಶವನ್ನು ಕಳುಹಿಸಲು ಸೈಕಲ್ ಸವಾರಿ ಮಾಡಿದ್ದಾರೆ. ಇದನ್ನೂ ಓದಿ:  ಬಿಜೆಪಿಗೆ ಸೇರಿದರೆ ನನ್ನನ್ನು ಹೇಮಾ ಮಾಲಿನಿಯಾಗಿ ಮಾಡುತ್ತಿದ್ದರು: ಜಯಂತ್ ಚೌಧರಿ

    2022-23ರ ಕೇಂದ್ರ ಬಜೆಟ್‍ನಲ್ಲಿ ರಾಷ್ಟ್ರೀಯ ಡಿಜಿಟಲ್ ಆರೋಗ್ಯ ಪರಿಸರ ವ್ಯವಸ್ಥೆಯ ಘೋಷಣೆಯನ್ನು ಸಚಿವ ಮಾಂಡವಿಯಾ ಮಂಗಳವಾರ ಶ್ಲಾಘಿಸಿದರು. ಇದು ನಾಗರಿಕರ ಜೀವನ ಸೌಕರ್ಯವನ್ನು ಗಮನಾರ್ಹವಾಗಿ ಹೆಚ್ಚಿಸುತ್ತದೆ. ಸ್ವಾವಲಂಬಿ ಭಾರತವನ್ನಾಗಿಸಲು ಮತ್ತು ಉದ್ದೇಶಿತ ಅಂತ್ಯೋದಯ ಯೋಜನೆಗಳನ್ನು ಬಲಪಡಿಸಲು ಬಜೆಟ್ ಪರಿಣಾಮಕಾರಿ ಎಂದು ಸಾಬೀತುಪಡಿಸಿದೆ ಎಂದು ಮಾಂಡವೀಯ ಹೇಳಿದರು. ಇದನ್ನೂ ಓದಿ:  ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್ ರಾವ್ ಇನ್ನಿಲ್ಲ

  • ಕಾಂಗ್ರೆಸ್‌ ನಾಯಕರು ಸತ್ಯಕ್ಕೆ ದೂರವಾದ ಆರೋಪಗಳ 3ನೇ ಅಲೆ ಮುಂದುವರಿಸಿದ್ದಾರೆ: ಸುಧಾಕರ್‌

    ಕಾಂಗ್ರೆಸ್‌ ನಾಯಕರು ಸತ್ಯಕ್ಕೆ ದೂರವಾದ ಆರೋಪಗಳ 3ನೇ ಅಲೆ ಮುಂದುವರಿಸಿದ್ದಾರೆ: ಸುಧಾಕರ್‌

    ಬೆಂಗಳೂರು: ಕೊರೊನಾ ಪ್ರಕರಣ ನಿರ್ವಹಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡುತ್ತಿರುವ ಕಾಂಗ್ರೆಸ್‌ ನಾಯಕರ ವಿರುದ್ಧ ಆರೋಗ್ಯ ಸಚಿವ ಡಾ. ಕೆ.ಸುಧಾಕರ್‌ ಟೀಕಾಪ್ರಹಾರ ನಡೆಸಿದ್ದಾರೆ.

    ಟ್ವೀಟ್‌ ಮೂಲಕ ಕಾಂಗ್ರೆಸ್‌ ವಿರುದ್ಧ ಕಿಡಿಕಾರಿರುವ ಸುಧಾಕರ್‌ ಅವರು, ಕಾಂಗ್ರೆಸ್‌ ನಾಯಕರ ಆರೋಪಗಳನ್ನು ಸತ್ಯಕ್ಕೆ ದೂರವಾದವು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‍ನಿಂದ ಹೊರಬಂದಿದ್ದೇನೆ ಮತ್ತೆ ವಾಪಸ್ ಹೋಗುವ ಪ್ರಶ್ನೆಯೇ ಇಲ್ಲ ಎಂದು ಶಾಪ ಹಾಕಿದ: ಇಬ್ರಾಹಿಂ

    ಟ್ವೀಟ್‌ನಲ್ಲೇನಿದೆ?
    ಸಾಂಕ್ರಾಮಿಕದ ಸಂದರ್ಭದಲ್ಲಿ ಸರ್ಕಾರಕ್ಕೆ ಸಹಕಾರ ನೀಡುವುದು ಬಿಟ್ಟು ರಾಜಕೀಯ ಲಾಭ ಪಡೆಯಲು ವಿನಾಕಾರಣ ಟೀಕೆ ಮಾಡುವುದು ಎಷ್ಟು ಸರಿ? ಕೊರೊನಾ ಎಂಬುದೇ ಇಲ್ಲ, ಅದು ಬಿಜೆಪಿ ಸೃಷ್ಟಿ ಎನ್ನುವ ಅಧ್ಯಕ್ಷರು ಒಂದು ಕಡೆ. ಕೊರೊನಾ ನಿಯಂತ್ರಣದ ಬಗ್ಗೆ ಮಾತನಾಡುವ ಪ್ರತಿಪಕ್ಷ ನಾಯಕರು ಇನ್ನೊಂದು ಕಡೆ. ಇದರಲ್ಲಿ ಕಾಂಗ್ರೆಸ್ ಪಕ್ಷದ ನಿಲುವೇನು?

    ಇದಕ್ಕೆ ಮುಖ್ಯ ಕಾರಣ ಲಸಿಕಾಕರಣ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಸಹಕಾರದಿಂದ ರಾಜ್ಯದಲ್ಲಿ 18 ಮೇಲ್ಪಟ್ಟ ವಯೋಮಾನದವರಿಗೆ 100% ಮೊದಲ ಡೋಸ್ ಪೂರೈಸಿದ್ದು, 87.6% ಜನರಿಗೆ ಎರಡೂ ಡೋಸ್ ನೀಡಲಾಗಿದೆ. ಆರೋಗ್ಯ ಹಾಗೂ ಮುಂಚೂಣಿ ಕಾರ್ಯಕತರು, ಹಿರಿಯ ನಾಗರೀಕರಲ್ಲಿ 51% ಫಲಾನುಭವಿಗಳಿಗೆ ಮುನ್ನೆಚ್ಚರಿಕೆ ಡೋಸ್ ನೀಡಲಾಗಿದೆ. ಇದನ್ನೂ ಓದಿ: ಗಂಡಂದಿರನ್ನು ಕಟ್ಟಿ ಹಾಕಿ ಹೆಂಡತಿಯರನ್ನು ರೇಪ್ ಮಾಡಿದ್ರು: ಸಿದ್ದರಾಮಯ್ಯ

    ಜವಾಬ್ದಾರಿಯುತ ಸ್ಥಾನದಲ್ಲಿರುವ ಕಾಂಗ್ರೆಸ್ ನಾಯಕರು ತಮ್ಮ ನಿರಾಧಾರ, ಸತ್ಯಕ್ಕೆ ದೂರವಾದ ಆರೋಪಗಳ ಮೂರನೇ ಅಲೆಯನ್ನು ಮುಂದುವರೆಸಿರುವುದು ವಿಷಾದಕರ. ಕರ್ನಾಟಕದಲ್ಲಿ ಕೋವಿಡ್ ಮರಣ ಪ್ರಮಾಣ ಕೇವಲ 1% ಇದ್ದು, ಮೂರನೇ ಅಲೆಯಲ್ಲಿ 1.9% ಜನ ಸೋಂಕಿತರು ಮಾತ್ರ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ ಎಂದು ಟ್ಟಿಟ್ಟರ್‌ನಲ್ಲಿ ಕಾಂಗ್ರೆಸ್‌ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ.

  • ದೇಶದಲ್ಲಿ ಕೊರೊನಾ ಹೆಚ್ಚಾಗಲು ಮೋದಿ ರ‍್ಯಾಲಿ ಕಾರಣ : ಡಿ.ಕೆ.ಸುರೇಶ್

    ದೇಶದಲ್ಲಿ ಕೊರೊನಾ ಹೆಚ್ಚಾಗಲು ಮೋದಿ ರ‍್ಯಾಲಿ ಕಾರಣ : ಡಿ.ಕೆ.ಸುರೇಶ್

    ರಾಮನಗರ: ಮೇಕೆದಾಟು ವಿಚಾರವಾಗಿ ಪಾದಯಾತ್ರೆ ಮಾಡಲು ಸೂಕ್ತ ಸಮಯವಲ್ಲ ಎಂದು ಹೇಳಿಕೆ ನೀಡಿದ ಆರೋಗ್ಯ ಸಚಿವರಿಗೆ ಡಿ.ಕೆ ಸುರೇಶ್, ದೇಶದಲ್ಲಿ ಕೊರೊನಾ ಹೆಚ್ಚಾಗಲು ಮೋದಿ ರ‍್ಯಾಲಿ ಕಾರಣ ಎಂದು ಟಾಂಗ್ ನೀಡಿದ್ದಾರೆ.

    ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆಯ ವಿಚಾರವಾಗಿ ಡಾ.ಕೆ ಸುಧಾಕರ್, ಈ ಪಾದಯಾತ್ರೆ ಮಾಡಲು ಇದು ಸೂಕ್ತ ಸಮಯವಲ್ಲ. ಕೊರೊನಾ ವೇಗವಾಗಿ ಹರಡುತ್ತಿದೆ. ಕೊರೊನಾ ಕೇಸ್ ಹೆಚ್ಚಾದ್ರೆ ಕಾಂಗ್ರೆಸ್ ಜವಾಬ್ದಾರಿಯನ್ನು ಹೊರಬೇಕಾಗುತ್ತದೆ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ರಾಮನಗರ ಜಿಲ್ಲೆಯನ್ನು ಯಾರಿಗೂ ಜಿಪಿಎ ಬರೆದುಕೊಟ್ಟಿಲ್ಲ: ಪ್ರೀತಂಗೌಡ

    ಈ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಕೆ ಸುರೇಶ್, ಸುಧಾಕರ್ ಅವರು ಮೋದಿಯವರಿಗೆ ಹೇಳಿ ಭಾರತೀಯ ಜನತಾ ಪಕ್ಷದವರು ನಡೆಸುತ್ತಿರುವಂತಹ ಎಲ್ಲಾ ರ‍್ಯಾಲಿಯನ್ನು ನಿಲ್ಲಿಸಬೇಕು. ಏಕೆಂದರೆ ಓಮಿಕ್ರಾನ್ ಬಿಜೆಪಿಯವರ ರ‍್ಯಾಲಿಯಿಂದಲೇ ಜಾಸ್ತಿಯಾಗುತ್ತಿದೆ ಎಂದು ತಿರುಗೇಟು ನೀಡಿದರು.

    ನೀವು ನಾವು ಹೇಳಿದ ಮಾತನ್ನು ಕೇಳಿದರೆ ನಾವು ನೀವು ಹೇಳಿದಂತಹ ಮಾತನ್ನು ಕೇಳುತ್ತೇವೆ. ಹಾಗೆಯೇ ದೇಶದಲ್ಲಿ ಕೊರೊನಾ ಹೆಚ್ಚಲು ಮೋದಿ ರ‍್ಯಾಲಿಯೆ ಮುಖ್ಯ ಕಾರಣವಾಗಿದೆ. ಇದರೊಂದಿಗೆ ಬಿಜೆಪಿ ಸರ್ಕಾರ ನಡೆಸುತ್ತಿರುವಂತಹ ಕರ‍್ಯಕ್ರಮ, ಮೆರವಣಿಗೆಗಳು ಕೂಡ ಕಾರಣವಾಗಿದೆ ಎಂದು ಡಿ.ಕೆ ಸುರೇಶ್ ಆರೋಗ್ಯ ಸಚಿವರ ಹೇಳಿಕೆಗೆ ವಾಗ್ದಾಳಿ ನೀಡಿದ್ದಾರೆ. ಇದನ್ನೂ ಓದಿ: ನಾವು ಜನರ ಧ್ವನಿಯಾಗಿ ಕೆಲಸ ಮಾಡ್ತೀವಿ, ಪಾದಯಾತ್ರೆ ಯಾವುದೇ ಕಾರಣಕ್ಕೂ ನಿಲ್ಲೋದಿಲ್ಲ: ಡಿಕೆಶಿ

  • ರಾಜ್ಯಕ್ಕೆ ಮೂರನೇ ಅಲೆ ಬಂದಿದೆ: ಡಾ.ಕೆ.ಸುಧಾಕರ್

    ರಾಜ್ಯಕ್ಕೆ ಮೂರನೇ ಅಲೆ ಬಂದಿದೆ: ಡಾ.ಕೆ.ಸುಧಾಕರ್

    ರಾಮನಗರ: ದಿನೇ ದಿನೇ ಕೊರೊನಾ ಪ್ರಕರಣ ಭಾರತದಲ್ಲಿ ಹೆಚ್ಚಾಗುತ್ತಿದೆ. ಬೆಂಗಳೂರು ಸೇರಿದಂತೆ ದೆಹಲಿ, ಮಹಾರಾಷ್ಟ್ರದಲ್ಲೂ  ಕೇಸ್‌ಗಳು ಜಾಸ್ತಿ ಆಗುತ್ತಿದೆ. ಆದರೆ ಬೆಂಗಳೂರಿಗೆ ವಿಶೇಷ ಕ್ರಮ ತೆಗೆದುಕೊಳ್ಳುವುದು ಅತ್ಯಂತ ಅವಶ್ಯಕ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ.

    ಇತ್ತೀಚೆಗಿನ ಕೊರೊನಾ ಪ್ರಕರಣಗಳನ್ನು ಗಮನಿಸುವುದಾದರೆ ಒಂದೇ ದಿನ ಬೆಂಗಳೂರಿನಲ್ಲಿ ಶೇ.1.90 ರಷ್ಟು ಏರಿಕೆಯಾಗಿದ್ದು, 1,290 ಕೇಸ್ ಪತ್ತೆ ಆಗಿದೆ. ಈಗಾಗಲೇ ಶೇ.90 ಕೊರೊನಾ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರು ಏರ್‌ಪೋರ್ಟ್ ಸೇರಿದಂತೆ ಅನೇಕ ಕಡೆ ನಿಗಾ ವಹಿಸುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ನಾಯಕ ಮನೋಜ್ ತಿವಾರಿಗೆ ಕೊರೊನಾ ಪಾಸಿಟಿವ್

    ಓಮಿಕ್ರಾನ್ ವೇಗವಾಗಿ ಹರಡುತ್ತಿದೆ. ಭಾರತದಲ್ಲೂ ಓಮಿಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿದೆ. ದೆಹಲಿ, ಮಹಾರಾಷ್ಟ್ರದಲ್ಲಿ ಕೇಸ್ ಹೆಚ್ಚಾಗುತ್ತಿದೆ. ನಮ್ಮ ಸರ್ಕಾರ ಈ ವಿಚಾರವಾಗಿ ವಿಶೇಷ ಕಾಳಜಿ ವಹಿಸುತ್ತಿದೆ. ರಾಜ್ಯಕ್ಕೆ ಮೂರನೇ ಅಲೆ ಈಗಾಗಲೇ ಬಂದಿದೆ. ಇದು ಮೂರನೇ ಅಲೆಯ ಪ್ರಾರಂಭದ ಹಂತ ಎಂದು ಸಚಿವರು ಹೇಳಿದ್ದಾರೆ.

    15-18 ವರ್ಷದ ಮಕ್ಕಳ ಲಸಿಕೆ ಅಭಿಯಾನದಲ್ಲಿ ನಿನ್ನೆ ರಾಜ್ಯದಲ್ಲಿ 4,22,152 ಮಕ್ಕಳಿಗೆ ಲಸಿಕೆ ನೀಡಲಾಗಿದೆ. ಶೇ.66 ಲಸಿಕೆ ಅಭಿಯಾನ ಪೂರ್ಣಗೊಂಡಿದ್ದು, ಇನ್ನೂ 10-15 ದಿನಗಳ ಒಳಗೆ ಎಲ್ಲಾ ಮಕ್ಕಳಿಗೆ ಲಸಿಕೆ ಕೊಡುತ್ತೇವೆ. ಕೊರೊನಾ ಹೆಚ್ಚುತ್ತಿರುವ ಹಿನ್ನೆಲೆಯಿಂದ ಅನೇಕ ರಾಜ್ಯಗಳ ಶಾಲೆ-ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಮೈಕ್ರೋ ಝೋನ್ ಹೆಚ್ಚಳ ಮಾಡುವ ಬಗ್ಗೆ ಜನರಿಗೆ ಸಮಸ್ಯೆ ಆಗದಂತೆ ಟಫ್ ರೂಲ್ಸ್ ಜಾರಿ ಮಾಡುವುದರ ಬಗ್ಗೆ ಇಗ್ಗೆ ಇಂದು ಚರ್ಚೆ ನಡೆಯಲಿದೆ ಎಂದರು.

    ಕೊರೊನಾ ವೇಗವಾಗಿ ಹರಡುತ್ತಿದೆ. ಕಾಂಗ್ರೆಸ್‌ನವರು ಪಾದಯಾತ್ರೆ ಮಾಡಲಿ. ಆದರೆ ಈಗ ಅದಕ್ಕೆ ಸೂಕ್ತ ಸಮಯವಲ್ಲ. ಈ ಪಾದಯಾತ್ರೆಗೆ ಎಲ್ಲಾ ಜಿಲ್ಲೆಯಿಂದ ಜನ ಬರುತ್ತಾರೆ. ಆಗ ಮತ್ತೆ ಕೊರೊನಾ ಕೇಸ್ ಹೆಚ್ಚಾದ್ರೆ ಕಾಂಗ್ರೆಸ್ ಜವಾಬ್ದಾರಿ ಹೊರಬೇಕಾಗುತ್ತದೆ. ಸರ್ಕಾರದ ನಿಯಮವನ್ನು ಎಲ್ಲರೂ ಪಾಲನೆ ಮಾಡಬೇಕು. ಜನರ ಹಿತ ದೃಷ್ಟಿಯಿಂದ ಸರ್ಕಾರ ನಿಯಮ ಮಾಡುತ್ತದೆ. ಅದನ್ನು ಕಾಂಗ್ರೆಸ್ ಅರ್ಥ ಮಾಡಿಕೊಳ್ಳಬೇಕು ಎಂದು ಕಾಂಗ್ರೆಸ್ ಪಾದಯಾತ್ರೆ ವಿಚಾರವಾಗಿ ಸಚಿವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು.

    ನಿನ್ನೆ ರಾಮನಗರದಲ್ಲಿ ನಡೆದ ಘಟನೆಯ ವಿಚಾರವಾಗಿ ನಿನ್ನೆಯೆ ಪ್ರತಿಕ್ರಿಯೆ ಕೊಟ್ಟಿದ್ದೇನೆ. ಮತ್ತೆ ಆ ವಿಚಾರವನ್ನು ಬೆಳೆಸಲು ಇಷ್ಟಪಡುವುದಿಲ್ಲ ಎಂದು ಸುಧಾಕರ್ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಪಾಸಿಟಿವ್ ಕಂಡುಬಂದ 66 ಮಂದಿಯನ್ನು ಪ್ರತ್ಯೇಕವಾಗಿ ಇರಿಸಿಲ್ಲವೆಂದು ಹಡಗಿನಲ್ಲೇ ಪ್ರತಿಭಟನೆ

  • ಉತ್ತರಾಖಂಡದ ಆರೋಗ್ಯ ಸಚಿವರ ಕಾರು ಅಪಘಾತ!

    ಉತ್ತರಾಖಂಡದ ಆರೋಗ್ಯ ಸಚಿವರ ಕಾರು ಅಪಘಾತ!

    ಡೆಹ್ರಾಡೂನ್: ಉತ್ತರಾಖಂಡದ ಆರೋಗ್ಯ ಸಚಿವರ ಕಾರು ಅಪಘಾತಕ್ಕೀಡಾದ ಘಟನೆ ಮಂಗಳವಾರ ನಡೆದಿದೆ.

    ಸಚಿವ ಧಾನ್ ಸಿಂಗ್ ರಾವತ್ ಅವರು ತಮ್ಮ ಸಿಬ್ಬಂದಿಯೊಂದಿಗೆ ತಲಿಸ್ಮಾನ್ ಪಟ್ಟಣದಿಂದ ಡೆಹ್ರಾಡೂನ್ ಗೆ ಮರಳುವಾಗ ಈ ದುರ್ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಅಪಘಾತಕ್ಕೀಡಾದ ಕಾರುಗಳ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಫೋಟೋದಲ್ಲಿ ಸಚಿವರಿದ್ದ ಕಾರು ಪಲ್ಟಿಯಾಗಿದೆ. ನಿಂತಿದ್ದ ಇನ್ನೊಂದು ಕಾರಿಗೆ ಒರಗಿದಂತಿರುವುದನ್ನು ಕಾಣಬಹುದಾಗಿದೆ. ಇದನ್ನೂ ಓದಿ: ಪೂಂಚ್‍ನಲ್ಲಿ ಎನ್‍ಕೌಂಟರ್ – ಮೋಸ್ಟ್ ವಾಂಟೆಡ್ ಪಾಕ್ ಉಗ್ರ ಹತ್ಯೆ

    ಘಟನೆಯಿಂದ ಸಚಿವರು ಭಾರೀ ಅವಘಡದಿಂದ ಪಾರಾಗಿದ್ದಾರೆ. ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಚಿವರ ಸಿಬ್ಬಂದಿಗೆ ಸ್ವಲ್ಪ ಮಟ್ಟಿನ ಗಾಯಗಳಾಗಿದ್ದು, ಅವರು ಕೂಡ ಚಿಕಿತ್ಸೆ ಪಡೆದುಕೊಂಡಿದ್ದಾರೆ.

  • ರೇಣುಕಾಚಾರ್ಯ ಆರೋಗ್ಯ ಸಚಿವರಾಗುವಂತೆ ಸೋಂಕಿತನ ಪಟ್ಟು

    ರೇಣುಕಾಚಾರ್ಯ ಆರೋಗ್ಯ ಸಚಿವರಾಗುವಂತೆ ಸೋಂಕಿತನ ಪಟ್ಟು

    ದಾವಣಗೆರೆ: ಕೋವಿಡ್ ಕೇರ್ ಸೆಂಟರ್ ನಲ್ಲಿ ವಾಸ್ತವ್ಯ ಹೂಡಿ ಸೋಂಕಿತರ ಜೊತೆ ಕಾಲ ಕಳೆದಿದ್ದ ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ಆರೋಗ್ಯ ಸಚಿವರಾಗಬೇಕೆಂದು ಕೊರೊನಾ ಸೋಂಕಿತನೊಬ್ಬ ಪಟ್ಟು ಹಿಡಿದ ಘಟನೆ ದಾವಣಗೆರೆಯ ಹೊನ್ನಾಳಿ ಪಟ್ಟಣದ ಅರಬಗಟ್ಟೆ ಕೊವೀಡ್ ಕೇರ್ ಸೆಂಟರ್ ನಲ್ಲಿ ನಡೆದಿದೆ.

    ಹೊನ್ನಾಳಿ ತಾಲೂಕಿನಲ್ಲಿ ಅರಬಗಟ್ಟೆ ಕೋವಿಡ್ ಕೇರ್ ಸೆಂಟರ್ ನಲ್ಲಿ ರೇಣುಕಾಚಾರ್ಯರವರೇ ಆರೋಗ್ಯ ಸಚಿವರಾಗಬೇಕೆಂದು ಸೋಂಕಿತನೋರ್ವ ಪಟ್ಟು ಹಿಡಿದಿದ್ದಾನೆ. ಕೊರೊನಾ ಬಂದ ಸಂದರ್ಭದಲ್ಲಿ ಕೋವಿಡ್ ಕೇರ್ ಸೆಂಟರ್ ನಲ್ಲಿ ಇದ್ದು ಸೋಂಕಿತರಿಗೆ ಧೈರ್ಯ ತುಂಬಿದ್ದೀರಿ, ನಿಮ್ಮನ್ನು ಆರೋಗ್ಯ ಸಚಿವರನ್ನಾಗಿ ಮಾಡಿದರೆ ಇಡೀ ರಾಜ್ಯಕ್ಕೆ ಒಳ್ಳೆಯ ಸೇವೆ ಸಿಗುತ್ತದೆ ಎಂದು ಸೋಂಕಿತ ಅಭಿಪ್ರಯಾಪಟ್ಟಿದ್ದಾರೆ. ಇದನ್ನೂ ಓದಿ: ಕೆಲವರು ಸೂಟು ಹೊಲಿಸಿ ಸಿಎಂ ಆಗುವ ತಿರುಕನ ಕನಸು ಕಾಣ್ತಿದ್ದಾರೆ: ರೇಣುಕಾಚಾರ್ಯ

    ಕೋವಿಡ್ ಕೇರ್ ಸೆಂಟರ್‍ ನಲ್ಲಿ ಚಿಕಿತ್ಸೆ ಪಡೆದು ಸೋಂಕಿನಿಂದ ಗುಣಮುಖರಾದವರನ್ನು ಬೀಳ್ಕೋಡುಗೆ ನೀಡಿದ ರೇಣುಕಾಚಾರ್ಯರವರಿಗೆ ಮನೆಗೆ ತೆರಳುವ ಮುನ್ನ ಮಹಿಳೆಯರು ಒಂದು ದಿನ ನೀವು ಕೋವಿಡ್ ಕೇರ್ ಸೆಂಟರ್ ನಲ್ಲಿ ಇಲ್ಲ ಎಂದರೆ ಮನೆಯಲ್ಲಿ ಯಜಮಾನನಿಲ್ಲದಂತೆ ಆಗುತ್ತದೆ ಎಂದು ರೇಣುಕಾಚಾರ್ಯ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು. ಗುಣಮುಖರಾದವರನ್ನು ತಮ್ಮ ಅಂಬ್ಯುಲೆನ್ಸ್ ನಲ್ಲೇ ಕಳುಹಿಸಿಕೊಟ್ಟ ರೇಣುಕಾಚಾರ್ಯರವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಕೋವಿಡ್ ಕೇರ್ ಸೆಂಟರ್ ಬಿಟ್ಟು ಹೋಗುತ್ತಿರುವಾಗ ಗುಣಮುಖರಾದವರು ಕಣ್ಣೀರು ಹಾಕುತ್ತಾ ಮನೆಯತ್ತ ತೆರಳಿದ ಪ್ರಸಂಗವೂ ನಡೆದಿದೆ.

  • ಕೋವ್ಯಾಕ್ಸಿನ್ ಲಸಿಕೆ ಹಾಕಿಸಿಕೊಂಡಿದ್ದ ಆರೋಗ್ಯ ಸಚಿವರಿಗೆ ಕೊರೊನಾ ಪಾಸಿಟಿವ್

    ಕೋವ್ಯಾಕ್ಸಿನ್ ಲಸಿಕೆ ಹಾಕಿಸಿಕೊಂಡಿದ್ದ ಆರೋಗ್ಯ ಸಚಿವರಿಗೆ ಕೊರೊನಾ ಪಾಸಿಟಿವ್

    ಚಂಡೀಗಢ: ಪ್ರಯೋಗಾತ್ಮಕ ಕೊರೊನಾ ಲಸಿಕೆಯನ್ನು ಹಾಕಿಸಿಕೊಂಡಿದ್ದ ಹರಿಯಾಣದ ಆರೋಗ್ಯ ಸಚಿವ ಅನಿಲ್ ವಿಜ್‍ಗೆ ಕೊರೊನಾ ಪಾಸಿಟಿವ್ ಬಂದಿದೆ.

    ಕಳೆದ ನವೆಂಬರ್ 20ರಂದು ಅನಿಲ್ ವಿಜ್ ಅವರು ಕೋವ್ಯಾಕ್ಸಿನ್ ಕೊರೊನಾ ಲಸಿಕೆಯ ಪರೀಕ್ಷೆಯಲ್ಲಿ ಸ್ವಯಃ ಸೇವಕರಾಗಿ ತೊಡಗಿಸಿಕೊಂಡಿದ್ದರು. ಅನಿಲ್ ವಿಜ್ ಅವರಿಗೆ ಹರಿಯಾಣದ ಅಂಬಾಲದಲ್ಲಿ ನಡೆದ 3ನೇ ಹಂತದ ಪ್ರಯೋಗಾರ್ಥ ಕೋವ್ಯಾಕ್ಸಿನ್ ಲಸಿಕೆ ಪ್ರಯೋಗದಲ್ಲಿ ಹಾಕಲಾಗಿತ್ತು. ಆದರೆ ಇಂದು ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

    ಈ ವಿಚಾರವಾಗಿ ಟ್ವೀಟ್ ಮಾಡಿರುವ ಅನಿಲ್ ವಿಜ್, ನನಗೆ ಕೊರೊನಾ ಸೋಂಕು ಪಾಸಿಟಿವ್ ಬಂದಿದೆ. ನಾನು ಅಂಬಾಲದಲ್ಲಿರುವ ಸರ್ಕಾರಿ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಇತ್ತೀಚಿನ ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡುತ್ತೇನೆ ಎಂದು ಬರೆದುಕೊಂಡಿದ್ದಾರೆ. ಕೋವ್ಯಾಕ್ಸಿನ್ ಲಸಿಕೆಯನ್ನು ಮೂರನೇ ಹಂತದಲ್ಲಿ ಸುಮಾರು 26 ಸಾವಿರ ಜನಕ್ಕೆ ನೀಡಲಾಗುವುದು ಎನ್ನಲಾಗಿದೆ.

    ಈ ಕೋವ್ಯಾಕ್ಸಿನ್ ಲಸಿಕೆಯನ್ನು ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಕಂಪನಿ ತಯಾರು ಮಾಡುತ್ತಿದೆ. ಈ ವಿಚಾರವಾಗಿ ಹೇಳಿಕೆ ಬಿಡುಗಡೆ ಮಾಡಿರುವ ಸಂಸ್ಥೆ, 28 ದಿನಗಳಲ್ಲಿ ಎರಡು ಹಂತದಲ್ಲಿ ಕೋವ್ಯಾಕ್ಸಿನ್ ಲಸಿಕೆಯ ಪ್ರಯೋಗ ಮಾಡಲಾಗುತ್ತದೆ. ಲಸಿಕೆಯ ಪರಿಣಾಮ 14 ದಿನಗಳ ನಂತರ ಎರಡನೇ ಡೋಸ್ ನೀಡಿದಾಗ ಗೊತ್ತಾಗಲಿದೆ ಎಂದು ತಿಳಿಸಿದೆ. ಜೊತೆಗೆ ಲಸಿಕೆ ಅಭಿವೃದ್ಧಿಯ ವೇಳೆ ಸುರಕ್ಷತೆ ನಮ್ಮ ಪ್ರಾಥಮಿಕ ಮಾನದಂಡವಾಗಿದೆ ಎಂದು ಹೇಳಿದೆ.

    ಕಳೆದ ವಾರ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೂಡ ಈ ಸಂಸ್ಥೆಗೆ ಭೇಟಿ ನೀಡಿದ್ದು, ಕೋವ್ಯಾಕ್ಸಿನ್ ಲಸಿಕೆಯ ಅಭಿವೃದ್ಧಿಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಜೊತೆಗೆ ಶುಕ್ರವಾರ ನಡೆದ ಸಭೆಯಲ್ಲಿ ಮುಂದಿನ ಎರಡು ವಾರದಲ್ಲಿ ಭಾರತದಲ್ಲಿ ಕೊರೊನಾ ಲಸಿಕೆ ಲಭ್ಯವಾಗಲಿದೆ ಎಂದು ಹೇಳಿದ್ದಾರೆ. ಭಾರತದಲ್ಲಿ 96 ಲಕ್ಷ ಜನರಿಗೆ ಕೊರೊನಾ ಕಾಣಿಸಿಕೊಂಡಿದ್ದು, ಅಮೆರಿಕಾ ನಂತರ ಅತೀ ಹೆಚ್ಚು ಕೊರೊನಾ ಸೋಂಕು ಕಾಣಿಸಿಕೊಂಡ ದೇಶವಾಗಿದೆ.

  • ಪಂಚಾಯತಿ ಚುನಾವಣೆ ಘೋಷಣೆ – ಸುಧಾಕರ್ ಅಸಮಾಧಾನ

    ಪಂಚಾಯತಿ ಚುನಾವಣೆ ಘೋಷಣೆ – ಸುಧಾಕರ್ ಅಸಮಾಧಾನ

    ಬೆಂಗಳೂರು: ಗ್ರಾಮ ಪಂಚಾಯತಿ ಚುನಾವಣೆ ಘೋಷಣೆ ಮಾಡಿದ ಚುನಾವಣೆ ಆಯೋಗ ನಿರ್ಧಾರಕ್ಕೆ ಆರೋಗ್ಯ ಸಚಿವ ಡಾ. ಸುಧಾಕರ್ ವಿರೋಧ ವ್ಯಕ್ತಪಡಿಸಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಡಾ. ಸುಧಾಕರ್ ಅವರು ಗ್ರಾಮ ಪಂಚಾಯತಿ ಚುನಾವಣೆ ಮುಂದೂಡಿ ಅಂತ ಚುನಾವಣೆ ಆಯೋಗಕ್ಕೆ ಪತ್ರ ಬರೆದಿದ್ದೆ. ಆದರೆ ಚುನಾವಣಾ ಆಯೋಗ ಇದನ್ನು ಪರಿಗಣಿಸಲಿಲ್ಲ. ಕೋರ್ಟ್‍ಗೂ ಮನವಿ ಮಾಡಿದರೂ ಈ ಬಗ್ಗೆ ಅರ್ಥ ಮಾಡಿಕೊಳ್ಳಲಿಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

    ಕೋರ್ಟ್ ಗಳಲ್ಲಿ ಏನೇನ್ ಆಗುತ್ತಿದೆ ಎನ್ನುವ ಮಾಹಿತಿ ಇದೆ. ಪಂಚಾಯತಿ ಚುನಾವಣೆ ನಡೆಸಿದರೆ ಮನೆ ಮನೆಗೆ ವೈರಸ್ ಹರಡಿಸಿದಂತೆ ಆಗುತ್ತದೆ ಎಂದು ತಜ್ಞರು ಹೇಳಿದ್ದರು. ಹೀಗಾಗಿ ಚುನಾವಣೆ ನಡೆಸಬಾರದು ಎಂಬ ನಮ್ಮ ಸಲಹೆಯನ್ನು ಆಯೋಗ, ಕೋರ್ಟ್ ಪರಿಗಣಿಸಲಿಲ್ಲ. ಮಾರ್ಚ್ ವರೆಗೆ ಚುನಾವಣೆ ಮುಂದೂಡಬಹುದಿತ್ತು. ಆದರೆ ಈಗ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಈಗ ಅನಿವಾರ್ಯವಾಗಿ ಚುನಾವಣೆ ಮಾಡಬೇಕಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.