Tag: Health Workers

  • 500 ರೂಪಾಯಿಗೆ ಕೈ ಮಿಲಾಯಿಸಿದ ಆಶಾ ಕಾರ್ಯಕರ್ತೆಯರು

    500 ರೂಪಾಯಿಗೆ ಕೈ ಮಿಲಾಯಿಸಿದ ಆಶಾ ಕಾರ್ಯಕರ್ತೆಯರು

    ಪಾಟ್ನಾ: 500 ರೂಪಾಯಿ ವಿಚಾರವಾಗಿ ಇಬ್ಬರು ಆಶಾ ಕಾರ್ಯಕರ್ತೆಯರು ಪರಸ್ಪರ ಹೊಡೆದುಕೊಂಡಿರುವ ಘಟನೆ ಬಿಹಾರದ ಜಮುಯಿ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

    ಲಕ್ಷ್ಮಿಪುರ ಬ್ಲಾಕ್‍ನಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಮಗುವೊಂದು ಜನಸಿದೆ. ಈ ವೇಳೆ ಆಶಾ ಕಾರ್ಯಕರ್ತೆ ರಿಂತು ಕುಮಾರಿ ಮಗುವಿಗೆ ಚುಚ್ಚು ಮದ್ದು ನೀಡಲು ಮತ್ತೋರ್ವ ಆಶಾ ಕಾರ್ಯಕರ್ತೆ ರಂಜನಾ ಕುಮಾರಿ ಅವರನ್ನ ಸಂಪರ್ಕಿಸಿದ್ದಾಳೆ. ಈ ವೇಳೆ ಲಸಿಕೆ ನೀಡಲು ನರ್ಸ್ 500 ರೂಪಾಯಿ ಬೇಡಿಕೆ ಇಟ್ಟಿದ್ದಾರೆಂದು ಆಶಾ ಕಾರ್ಯಕರ್ತೆ ರಂಜನಾ ತಿಳಿಸಿದ್ದಾಳೆ. ಈ ವಿಚಾರವಾಗಿ ವಾಗ್ವಾದ ನಡೆದಿದ್ದು, ಇಬ್ಬರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಬಣ ರಾಜಕೀಯ ಬಲು ಜೋರು – ಕತ್ತಿ ಸಭೆಗೆ ಪ್ರತಿಯಾಗಿ ಜಾರಕಿಹೊಳಿ ಮೀಟಿಂಗ್

    ಇಬ್ಬರು ಆಶಾ ಕಾರ್ಯಕರ್ತೆಯರು ಪರಸ್ಪರ ಹೊಡೆದಾಡಿಕೊಳ್ಳಲು ಶುರು ಮಾಡುತ್ತಿದ್ದಂತೆ ಆಸ್ಪತ್ರೆಯಲ್ಲಿರುವ ಒಬ್ಬರು ಅದರ ವೀಡಿಯೋ ಸೆರೆ ಹಿಡಿದಿದ್ದಾರೆ. ಘಟನೆಯ ವೀಡಿಯೋ ವೈದ್ಯಾಧಿಕಾರಿಗಳ ಗಮನಕ್ಕೆ ಬರುತ್ತಿದ್ದಂತೆ ತನಿಖೆ ನಡೆಸಲು ಸೂಚನೆ ನೀಡಿದ್ದಾರೆ. ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ: ಬಿಜೆಪಿಯಲ್ಲಿ ಸಂಪುಟ ಸರ್ಜರಿಗೆ ಡೆಡ್‍ಲೈನ್ – ಮಾರ್ಚಲ್ಲ ಈಗ್ಲೇ ವಿಸ್ತರಿಸಿ ಅಂತ ಬಿಗಿಪಟ್ಟು

  • ವಿಷ ಕೊಟ್ಬಿಡ್ರಿ ಆದ್ರೆ ಲಸಿಕೆ ಮಾತ್ರ ಬೇಡ: ಆರೋಗ್ಯ ಸಿಬ್ಬಂದಿಗೆ ಮಹಿಳೆ ಖಡಕ್‌ ಮಾತು

    ವಿಷ ಕೊಟ್ಬಿಡ್ರಿ ಆದ್ರೆ ಲಸಿಕೆ ಮಾತ್ರ ಬೇಡ: ಆರೋಗ್ಯ ಸಿಬ್ಬಂದಿಗೆ ಮಹಿಳೆ ಖಡಕ್‌ ಮಾತು

    ಬೆಂಗಳೂರು: ಕೋವಿಡ್‌-19 ಲಸಿಕೆ ಅಭಿಯಾನದಲ್ಲಿ ದೇಶದಲ್ಲೇ ಕರ್ನಾಟಕ ಒಳ್ಳೆಯ ಹೆಸರು ಮಾಡಿದೆ. ಲಸಿಕಾ ಅಭಿಯಾನದಲ್ಲಿ ರಾಜ್ಯ ಉತ್ತಮ ಪ್ರಗತಿ ಸಾಧಿಸಿದೆ ಎಂದು ಸರ್ಕಾರ ಹೇಳಿಕೊಂಡಿದೆ. ಆದರೂ ಹಲವೆಡೆ ಜನರು ಕೋವಿಡ್‌ ಲಸಿಕೆ ಪಡೆದುಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಲಸಿಕೆ ಪಡೆದುಕೊಳ್ಳಿ ಎನ್ನುತ್ತಾ ಮನೆ ಮುಂದೆ ಹೋಗುವ ಅಧಿಕಾರಿಗಳಿಗೆ ಜನರಿಂದ ಕಹಿ ಅನುಭವಗಳಾಗಿವೆ.

    ನೆಲಮಂಗಲ ತಾಲ್ಲೂಕಿನ ಗೋವಿಂದಪುರದಲ್ಲಿ ಲಸಿಕೆ ಹಾಕಿಸಿಕೊಳ್ಳಿ ಎಂದು ಜಾಗೃತಿ ಮೂಡಿಸಿದ ಆರೋಗ್ಯ ಸಿಬ್ಬಂದಿ ಜೊತೆಗೆ ಮಹಿಳೆ ಕಿರಿಕ್‌ ಮಾಡಿಕೊಂಡಿರುವ ಘಟನೆ ನಡೆದಿದೆ. ಲಸಿಕೆ ಹಾಕಿಸಿಕೊಳ್ಳಿ ಎಂದ ಆರೋಗ್ಯ ಸಿಬ್ಬಂದಿಗೆ, ಒಂದು ತೊಟ್ಟು ವಿಷ ಕೊಟ್ಬಿಡಿ ಆದ್ರೆ ವ್ಯಾಕ್ಸಿನ್‌ ಮಾತ್ರ ಬೇಡ ಎಂದು ಮಹಿಳೆ ನಿರಾಕರಿಸಿರುವ ಪ್ರಸಂಗ ನಡೆದಿದೆ. ಇದನ್ನೂ ಓದಿ: ಭಾರತದಲ್ಲಿ ಮುಂಬರುವ ವಾರಗಳಲ್ಲಿ ಓಮಿಕ್ರಾನ್ ಅಲೆ ತೀವ್ರಗೊಳ್ಳಬಹುದು ಎಂದ ತಜ್ಞರು!

    ಅಮ್ಮ ನೀವು ಲಸಿಕೆ ಹಾಕಿಸಿಕೊಳ್ಳಿ ಎಂದು ಆರೋಗ್ಯ ಸಿಬ್ಬಂದಿ ಹೇಳಿದ್ದಾರೆ. ನಾನು ಲಸಿಕೆ ಹಾಕಿಸಿಕೊಳ್ಳುವುದಿಲ್ಲ, ನಾಲ್ಕು ದಿನ ಚೆನ್ನಾಗಿರಲಿ ಅಂತ ನಮ್ಮ ಪಾಡಿಗೆ ನಮ್ಮನ್ನು ಬಿಟ್ಟು ಬಿಡಿ ಎಂದು ಮಹಿಳೆ ತಿಳಿಸಿದ್ದಾರೆ. ಅದಕ್ಕೆ ಆರೋಗ್ಯ ಸಿಬ್ಬಂದಿ ಪ್ರತಿಕ್ರಿಯಿಸಿ, ನಾವು ಆರೋಗ್ಯವಾಗಿರಬೇಕು ಎಂದೇ ಲಸಿಕೆ ನೀಡುತ್ತಿರುವುದು ಎಂದು ಮನವೊಲಿಸಲು ಪ್ರಯತ್ನಿಸಿದ್ದಾರೆ. ಅದಕ್ಕೆ ಮಹಿಳೆ, ಅನ್ನದಲ್ಲಿ ವಿಷ ಹಾಕಿ ಕೊಟ್ಬಿಡಿ, ಆದರೆ ಕೊರೊನಾ ಲಸಿಕೆ ಪಡೆದುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

    CORONA-VIRUS.

    ಮಹಿಳೆಗೆ ಲಸಿಕೆ ನೀಡಲು ಸಾಧ್ಯವಾಗದೇ ಆರೋಗ್ಯ ಸಿಬ್ಬಂದಿ ತಂಡ ಬೇರೆ ದಾರಿ ಇಲ್ಲದೇ ವಾಪಸ್‌ ಆಗಿದೆ. ಇದನ್ನೂ ಓದಿ: ಕೋವಿಡ್ ಮೊದಲ ಡೋಸ್‍ನಲ್ಲಿ 100% ಪ್ರಗತಿ: ಸಚಿವ ಸುಧಾಕರ್

  • ನೂರು ಸೋಂಕಿತರಿಗೆ ಒಬ್ಬರೇ ನರ್ಸ್ – ಕಣ್ಣೀರಿಟ್ಟ ಕೊರೊನಾ ವಾರಿಯರ್ಸ್

    ನೂರು ಸೋಂಕಿತರಿಗೆ ಒಬ್ಬರೇ ನರ್ಸ್ – ಕಣ್ಣೀರಿಟ್ಟ ಕೊರೊನಾ ವಾರಿಯರ್ಸ್

    ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ದಿನೇ ದಿನೇ ಹೆಚ್ಚಾಗುತ್ತಿದೆ. ಕೊರೊನಾ ಕ್ರೂರಿತನವನ್ನು ಹತ್ತಿರದಿಂದ ನೋಡಿದ ಹೆಲ್ತ್ ವಾರಿಯರ್ಸ್ ತಮ್ಮ ಆಸ್ಪತ್ರೆಯಲ್ಲಿ ಆಗುತ್ತಿರುವ ಸಮಸ್ಯೆಗಳನ್ನು ಹೇಳಿಕೊಳ್ಳುವ ಮೂಲಕ ಆತಂಕ ವ್ಯಕ್ತಪಡಿಸಿದ್ದಾರೆ.

    ಈ ಕುರಿತಂತೆ ಮಾತನಾಡಿದ ಶ್ರೀ ಲಕ್ಷ್ಮಿ ಹಾಸ್ಪಿಟಲ್  ವೈದ್ಯರು, ಆಸ್ಪತ್ರೆ ಒಳಗಡೇ ಮುಖ್ಯವಾಗಿ ಆಕ್ಸಿಜನ್ ಸಿಗುತ್ತಿಲ್ಲ. ಮ್ಯಾನ್ ಪವರ್ ಮೊದಲಿಗಿಂತ ಶೇ.30 ರಿಂದ 60 ಕಡಿಮೆಯಾಗಿದೆ. ಒಬ್ಬ ನರ್ಸ್ ಇಟ್ಟುಕೊಂಡು ನಾವು ನೂರು ಜನರನ್ನು ನಿಭಾಯಿಸಬೇಕಾಗಿದೆ. ಒಬ್ಬ ಶಿಫ್ಟ್ ಮ್ಯಾನ್‍ನನ್ನು ಇಟ್ಟುಕೊಂಡು 10 ಜನರನ್ನು ಶಿಫ್ಟ್ ಮಾಡಬೇಕಾದ ಪರಿಸ್ಥಿತಿ ಬಂದಿದೆ. ಸರ್ಕಾರ ನೀವು ಬಿಯು ನಂಬರ್ ಇರುವ ಸೋಂಕಿತರನ್ನು ದಾಖಲಿಸಿ ಚಿಕಿತ್ಸೆ ನೀಡಿ ಅಂತ ಹೇಳುತ್ತಿದೆ. ಆದರೆ ಮೊದಲಿಗೆ ªಚಿಕಿತ್ಸೆಗೆ ಬೇಕಾದ ಸಿಬ್ಬಂದಿ ಸಹಾಯವಿಲ್ಲದೇ ನಾವು ಹೇಗೆ ತೆಗೆದುಕೊಳ್ಳುವುದು ಎಂದು ಪ್ರಶ್ನಿಸಿದರು.

    ನಮಗೆ ಆಕ್ಸಿಜನ್, ರೆಮ್‍ಡಿಸಿವರ್ ಇಂಜೆಕ್ಷನ್ ನೀಡಲು ತೊಂದರೆ ಆಗುತ್ತಿದೆ. ದಿನಕ್ಕೆ 2 ಬಾರಿ ಲಿಕ್ವಿಡ್ ಆಕ್ಸಿಜನ್ ಬೇಕು. ಆದರೆ 2 ದಿನಕ್ಕೊಮ್ಮೆ ಅದು ಸಿಗುತ್ತಿದೆ. ಆಕ್ಸಿಜನ್ ಅವಶ್ಯಕತೆ ಇರುವವರಿಗೆ ನೀಡಲಾಗದೇ ಕಷ್ಟವಾಗುತ್ತಿದೆ. ಇನ್ನೂ ಕಳಪೆ ಮಾದರಿ ಆಕ್ಸಿಜನ್ ನೀಡಿ ಎಷ್ಟೋ ಮಂದಿ ಸಾವನ್ನಪ್ಪುತ್ತಿದ್ದಾರೆ ಎಂದು ವೈದ್ಯರು ಕಳವಳ ವ್ಯಕ್ತಪಡಿಸಿದ್ದಾರೆ.

    ಆರೋಗ್ಯ ಸಿಬ್ಬಂದಿಯೊಬ್ಬರು, ಆಸ್ಪತ್ರೆಯಲ್ಲಿ ಆಕ್ಸಿಜನ್ ಕಡಿಮೆಯಾಗುತ್ತಿದೆ. ಎಲ್ಲ ಪೇಷೆಂಟ್‍ಗಳಿಗೂ ಬೆಡ್ ಹಾಗೂ ಬೆಡ್ ಶೀಟ್ ನೀಡುವುದಕ್ಕೆ ಆಗುತ್ತಿಲ್ಲ. ಏಮರ್ಜೆನ್ಸಿ ವಾರ್ಡ್‍ನಲ್ಲಿ 4 ಬೆಡ್ ಮಾತ್ರ ಇರುತ್ತದೆ. ಆಸ್ಪತ್ರೆಗೆ ಬಂದ ಏಮರ್ಜೆನ್ಸಿ ಪೇಷಂಟ್‍ಗಳನ್ನು ಕೂರಿಸಿ ಬಿಡುವುದಕ್ಕೂ ಆಗುವುದಿಲ್ಲ. ಏಮರ್ಜೆನ್ಸಿ ಇದ್ದಾಗ ಆಕ್ಸಿಜನ್, ಇಂಜೆಕ್ಷನ್ ಹಾಕಲೇ ಬೇಕಾಗುತ್ತದೆ. ಅಲ್ಲದೇ ಆಕ್ಸಿಜನ್ ಸಿಗದೇ 18 ವರ್ಷ, 20, 22 ವರ್ಷದವರು ನರಳಿ ನರಳಿ ಪ್ರಾಣ ಬಿಡುತ್ತಿದ್ದಾರೆ. ಸೋಕಿಂತರ ಸಾವು ನಮ್ಮ ಕರಳನ್ನು ಹಿಡುವಂತಾಗುತ್ತಿದೆ ನೋವು ತೋಡಿಕೊಂಡಿದ್ದಾರೆ.

  • ಕೊರೊನಾ ವಾರಿಯರ್ಸ್ ಮೇಲೆ ದಾಳಿ ನಡೆಸಿದ್ರೆ ಹುಷಾರ್- ರಾಜ್ಯದಲ್ಲಿ 3 ವರ್ಷ ಜೈಲು, ಆಸ್ತಿ ಜಪ್ತಿ

    ಕೊರೊನಾ ವಾರಿಯರ್ಸ್ ಮೇಲೆ ದಾಳಿ ನಡೆಸಿದ್ರೆ ಹುಷಾರ್- ರಾಜ್ಯದಲ್ಲಿ 3 ವರ್ಷ ಜೈಲು, ಆಸ್ತಿ ಜಪ್ತಿ

    – ಕೇಂದ್ರದಿಂದಲೂ 7 ವರ್ಷ ಶಿಕ್ಷೆಗೆ ಸುಗ್ರೀವಾಜ್ಞೆ

    ಬೆಂಗಳೂರು: ನಗರದ ಪಾದರಾಯನಪುರ ಗಲಭೆ ಬೆನ್ನಲ್ಲೇ ಕೊರೊನಾ ವಾರಿಯರ್ಸ್ ಮೇಲಿನ ದಾಳಿ ತಡೆ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ.

    ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆಗೆ ರಾಜ್ಯಪಾಲರು ಅಂಕಿತ ಹಾಕಿದ್ದು, ತಕ್ಷಣದಿಂದಲೇ ಜಾರಿಗೆ ಬಂದಿದೆ. ಇನ್ಮೇಲೆ, ಸರ್ಕಾರಿ ಅಧಿಕಾರಿಗಳು, ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ನಡೆಸಿದರೆ ಅಂಥವರಿಗೆ ಮುಟ್ಟಿ ನೋಡಿಕೊಳ್ಳುವ ರೀತಿಯಲ್ಲಿ ಶಿಕ್ಷೆ ನೀಡಲಾಗುತ್ತದೆ. ಕೇಂದ್ರ ಸರ್ಕಾರ ಕೂಡ 1897ರ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆಗೆ ತಿದ್ದುಪಡಿ ಮಾಡಿ ಸುಗ್ರೀವಾಜ್ಞೆ ಹೊರಡಿಸಲು ಮುಂದಾಗಿದೆ.

    ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ನಡೆದ ಸಂಪುಟ ಸಭೆಯಲ್ಲಿ ಈ ತೀರ್ಮಾನಕ್ಕೆ ಬಂದಿದ್ದು, ಕೊರೋನಾ ವಾರಿಯರ್ಸ್ ಮೇಲೆ ನಡೆಯುತ್ತಿರುವ ಕೃತ್ಯಗಳು `ಸಹಿಸುವಂತ ಪ್ರಕರಣ’ಗಳೇ ಅಲ್ಲ ಅಂತ ಸ್ಪಷ್ಟಪಡಿಸಿದೆ. ಏಪ್ರಿಲ್ 27ರಂದು ಪ್ರಧಾನಿ ಮೋದಿ ಅವರು, ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. ಈ ನಡುವೆಯೂ ಇಂದು ಪಾದರಾಯನಪುರದ ಗಲಭೆಯಂತಹ ಘಟನೆ ಪಶ್ಚಿಮ ಬಂಗಾಳದ ಬದುರಿಯಾದಲ್ಲಿ ನಡೆದಿದೆ. ಲಾಕ್‍ಡೌನ್ ಕಾವಲಿಗೆ ಇದ್ದ ಪೊಲೀಸರ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ್ದಾರೆ.

    ರಾಜ್ಯದ ಸುಗ್ರೀವಾಜ್ಞೆಯಲ್ಲಿ ಏನಿದೆ?
    ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ನಡೆಸಿದ್ರೆ 3 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಆಸ್ತಿ ನಷ್ಟ ಉಂಟುಮಾಡಿದರೆ ಆಸ್ತಿ ಮಟ್ಟುಗೋಲು ಹಾಕಲಾಗುತ್ತದೆ. ಆಸ್ತಿ ಇಲ್ಲದಿದ್ದರೆ ಆರೋಪಿಗಳು ಬಂಧನ, ಜೈಲು ಶಿಕ್ಷೆಗೆ ಗುರಿಯಾಗುತ್ತಾರೆ. ಜಿಲ್ಲಾ ದಂಡಾಧಿಕಾರಿಗಳಿಗೆ ಅಧಿಕಾರ ಚಲಾಯಿಸಲು ಅವಕಾಶ ನೀಡಲಾಗಿದೆ. ಈ ಮೂಲಕ ಅವರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಬಂಧನ ಮಾಡಬಹುದು. ಹಲ್ಲೆಗೊಳಗಾದ ಕೊರೊನಾ ವಾರಿಯರ್ಸ್ ದೂರು ದಾಖಲಿಸಬೇಕಿಲ್ಲ.

    ಕೇಂದ್ರದ ಸುಗ್ರೀವಾಜ್ಞೆಯಲ್ಲಿ ಏನಿರುತ್ತೆ?
    ಹೆಲ್ತ್ ವಾರಿಯರ್ಸ್ ಮೇಲಿನ ಹಲ್ಲೆಗೆ 6 ತಿಂಗಳಿಂದ 7 ವರ್ಷದವರೆಗೂ ಜೈಲು ಶಿಕ್ಷೆ ವಿಧಿಸಲಾಗುತ್ತದೆ. 50 ಸಾವಿರ ರೂ.ದಿಂದ 5 ಲಕ್ಷ ರೂಪಾಯಿವರೆಗೂ ದಂಡ ವಿಧಿಸಲಾಗುವುದು. ವಾಹನಗಳು, ಆಸ್ಪತ್ರೆಗಳ ಮೇಲೆ ದಾಳಿ ನಡೆದು ಆಸ್ತಿ ನಷ್ಟ ಸಂಭವಿಸಿದರೆ ಅವುಗಳ ಮಾರುಕಟ್ಟೆ ಮೌಲ್ಯದ ದುಪ್ಪಟ್ಟು ದಂಡವನ್ನು ವಸೂಲಿ ಮಾಡಲಾಗುತ್ತದೆ. ಇಂತಹ ಪ್ರಕರಣವನ್ನು ಒಂದು ವರ್ಷದೊಳಗೆ ವಿಚಾರಣೆ ಮುಗಿಸಿ ಆರೋಪಿಗಳಿಗೆ ಶಿಕ್ಷೆ ವಿಧಿಸಲಾಗುತ್ತದೆ. ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗೆ ಸಂಪೂರ್ಣ ಭದ್ರತೆ ನೀಡಲಾಗುತ್ತದೆ.

  • ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ರೆ 7 ವರ್ಷ ಜೈಲು

    ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ರೆ 7 ವರ್ಷ ಜೈಲು

    ನವದೆಹಲಿ: ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ನಡೆಸಿದ ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ ಆಗಲಿದೆ.

    ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿ ಇಲ್ಲಿಯವರೆಗಿದ್ದ 6 ತಿಂಗಳ ಶಿಕ್ಷೆಯ ಪ್ರಮಾಣವನ್ನು 7 ವರ್ಷಕ್ಕೆ ಏರಿಸಿದೆ. ದೇಶದ ಹಲವೆಡೆ ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆಯುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.

    ಈ ವಾರದಲ್ಲಿ ಬೆಂಗಳೂರಿನ ಪಾದರಾಯನಪುರ, ಮೈಸೂರಿನಲ್ಲಿ ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿತ್ತು. ಕಳೆದ ವಾರ ಉತ್ತರ ಪ್ರದೇಶದಲ್ಲೂ ಹಲ್ಲೆ ನಡೆದಿತ್ತು. ಈಗ ಈ ಕೃತ್ಯಗಳಿಗೆ ಕಡಿವಾಣ ಹಾಕಲು ಶಿಕ್ಷೆಯ ಪ್ರಮಾಣವನ್ನು ಹೆಚ್ಚಿಸಿದೆ.