ಹಾವೇರಿ: ರಾಜ್ಯಾದ್ಯಂತ ಡೆಂಗ್ಯೂ ಜ್ವರ ಬಿಟ್ಟು ಬಿಡದೇ ಜನರನ್ನು ಕಾಡುತ್ತಿದೆ. ಇದರ ನಡುವೆ ಹಾವೇರಿಯಲ್ಲಿ ಇಲಿ ಜ್ವರ (Rat Bite Fever) ಪತ್ತೆಯಾಗಿದೆ.
ಹಾವೇರಿ (Haveri) ತಾಲ್ಲೂಕಿನ 12 ವರ್ಷದ ಬಾಲಕನಿಗೆ ಇಲಿ ಜ್ವರ ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಬಾಲಕನಿಗೆ ಕಳೆದ ಒಂದು ವಾರದಿಂದ ನಿರಂತರವಾಗಿ ಜ್ವರ ಕಾಣಿಸಿಕೊಂಡ ಹಿನ್ನಲೆ ಹಾವೇರಿ ಜಿಲ್ಲಾಸ್ಪತ್ರಗೆ ದಾಖಲಿಸಲಾಗಿತ್ತು. ಈ ವೇಳೆ ಬಾಲಕನಿಗೆ ಜಾಂಡೀಸ್ ಕಾಣಿಸಿಕೊಂಡಿತ್ತು. ಬಳಿಕ ರೋಗ ಗುಣಮುಖಗೊಂಡ ಹಿನ್ನೆಲೆ ಚಿಕಿತ್ಸೆ ಪಡೆದು ಊರಿಗೆ ತೆರಳಿದ್ದ. ಮತ್ತೆ ಬಾಲಕನಿಗೆ ಜ್ವರ ಕಾಣಿಸಿಕೊಂಡ ಹಿನ್ನಲೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಬಾಲಕನಿಗೆ ಇಲಿ ಜ್ವರ ಇರುವುದು ಪತ್ತೆಯಾಗಿದೆ. ಇದನ್ನೂ ಓದಿ: ಗದಗದಲ್ಲಿ ಡೆಂಗ್ಯೂಗೆ 5 ವರ್ಷದ ಬಾಲಕ ಬಲಿ
ನವದೆಹಲಿ: ಬಿಜೆಪಿ ಹಿರಿಯ ನಾಯಕ, ಮಾಜಿ ಉಪಪ್ರಧಾನಿ ಎಲ್.ಕೆ ಅಡ್ವಾಣಿ (LK Advani) ಸಾವನ್ನಪ್ಪಿದ್ದಾರೆ ಎಂದು ವದಂತಿ ಹಬ್ಬಿದ್ದು, ಇದು ಸತ್ಯಕ್ಕೆ ದೂರವಾಗಿದೆ. ಅವರ ಆರೋಗ್ಯ (Health) ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಪ್ತ ಮೂಲಗಳು ಹೇಳಿವೆ. ಶುಕ್ರವಾರ ಅವರು ಅಪೊಲೋ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಸದ್ಯ ತಮ್ಮ ನಿವಾಸದಲ್ಲಿ ವಿಶ್ರಾಂತಿಯಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
96 ವರ್ಷ ವಯಸ್ಸಿನ ಅಡ್ವಾಣಿ ಅವರು ವಯೋಸಹಜ ಸಮಸ್ಯೆಯಿಂದ ಎರಡು ದಿನಗಳ ಹಿಂದೆ ದೆಹಲಿಯಲ್ಲಿರುವ ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ದರು. ಐಸಿಯುನಲ್ಲಿಟ್ಟು ಅವರ ಆರೋಗ್ಯವನ್ನು ಮೇಲ್ವಿಚಾರಣೆ ಮಾಡಲಾಗಿತ್ತು. ಆರೋಗ್ಯ ಸುಧಾರಿಸಿದ ಬಳಿಕ ಅವರನ್ನು ಶುಕ್ರವಾರ ಸಂಜೆ ಡಿಸ್ಚಾರ್ಜ್ ಮಾಡಲಾಗಿತ್ತು. ಇದಕ್ಕೂ ಮುನ್ನ ಅವರು ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದನ್ನೂ ಓದಿ: ಎಸ್ಸಿ, ಎಸ್ಟಿಗೆ ಮೀಸಲಿಟ್ಟಿದ 14,000 ಕೋಟಿ ಹಣ ರಾಜ್ಯ ಸರ್ಕಾರದಿಂದ ದುರ್ಬಳಕೆ – ಬೊಮ್ಮಾಯಿ ಆರೋಪ
After being discharged from hospital, veteran BJP leader LK Advani is stable, healthy and resting at home.
1927ರ ನವೆಂಬರ್ 8ರಂದು ಅವಿಭಜಿತ ಭಾರತದ ಕರಾಚಿಯಲ್ಲಿ ಅಡ್ವಾಣಿ ಜನಿಸಿದರು. ಭಾರತೀಯ ರಾಜಕೀಯದಲ್ಲಿ ಅಪ್ರತಿಮ ವ್ಯಕ್ತಿಯಾಗಿದ್ದ ಅಡ್ವಾಣಿ, 1942ರಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದೊಂದಿಗೆ ತಮ್ಮ ರಾಜಕೀಯ ಪ್ರಯಾಣವನ್ನು ಪ್ರಾರಂಭಿಸಿದರು. ಪ್ರಚಾರಕರಾಗಿ ಕೆಲಸ ಆರಂಭಿಸಿದ ಅವರು 1951ರಲ್ಲಿ ಆರ್‌ಎಸ್‌ಎಸ್‌ನ ರಾಜಕೀಯ ವಿಭಾಗವಾದ ಭಾರತೀಯ ಜನಸಂಘ ಸೇರಿದರು. ಇದನ್ನೂ ಓದಿ: ಚನ್ನಪಟ್ಟಣ ಉಪಚುನಾವಣೆ- ಪತ್ನಿ ಸ್ಪರ್ಧೆ ವದಂತಿಗೆ ಡಾ. ಮಂಜುನಾಥ್ ಸ್ಪಷ್ಟನೆ
1980ರಲ್ಲಿ ಜನತಾ ಪಕ್ಷದ ವಿಸರ್ಜನೆಯ ನಂತರ ಭಾರತೀಯ ಜನತಾ ಪಕ್ಷವನ್ನು ರಚಿಸಲಾಯಿತು. ಅಡ್ವಾಣಿ ಅದರ ಪ್ರಮುಖ ಸಂಸ್ಥಾಪಕರಲ್ಲಿ ಒಬ್ಬರಾಗಿದ್ದರು. ಅಟಲ್ ಬಿಹಾರಿ ವಾಜಪೇಯಿ ಜೊತೆಗೆ ಬಿಜೆಪಿಯ ಸಿದ್ಧಾಂತವನ್ನು ರೂಪಿಸುವಲ್ಲಿ ಮತ್ತು ಭಾರತದಾದ್ಯಂತ ಅದರ ನೆಲೆಯನ್ನು ವಿಸ್ತರಿಸುವಲ್ಲಿ ಅಡ್ವಾಣಿ ನಿರ್ಣಾಯಕ ಪಾತ್ರ ವಹಿಸಿದರು. 1990ರಲ್ಲಿ ರಾಮ ಮಂದಿರಕ್ಕಾಗಿ ರಾಷ್ಟ್ರವ್ಯಾಪಿ ರಥಯಾತ್ರೆ ಮಾಡಿದರು. 2002ರಿಂದ 2004ರವರೆಗೆ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಉಪನಾಯಕರಾಗಿ ಸೇವೆ ಸಲ್ಲಿಸಿದರು. ಇದನ್ನೂ ಓದಿ: ಕಾಶ್ಮೀರದಲ್ಲಿ ಭಯೋತ್ಪಾದಕರು-ಭದ್ರತಾಪಡೆಗಳ ನಡುವೆ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ
ಬೆಂಗಳೂರು: ನಗರದ (Bengaluru) ಅಂಜನಾಪುರದಲ್ಲಿ ಡೆಂಗ್ಯೂವಿನಿಂದ (Dengue) 11 ವರ್ಷದ ಬಾಲಕನೊಬ್ಬ ಮೃತಪಟ್ಟಿದ್ದಾನೆ.
ಮೃತ ಬಾಲಕನನ್ನು ಗಗನ್ (11) ಎಂದು ಗುರುತಿಸಲಾಗಿದೆ. ಬಾಲಕನಿಗೆ ಕಳೆದ ಕೆಲವು ದಿನಗಳಿಂದ ಜ್ವರ ಕಾಣಿಸಿಕೊಂಡಿತ್ತು. ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ, ತಪಾಸಣೆ ನಡೆಸಿದ್ದ ವೇಳೆ ಡೆಂಗ್ಯೂ ಇರುವುದು ಪತ್ತೆಯಾಗಿತ್ತು. ಬಳಿಕ ಆತನಿಗೆ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಶುಕ್ರವಾರ ತಡರಾತ್ರಿ ಬಾಲಕ ಮೃತಪಟ್ಟಿದ್ದಾನೆ. ಇದನ್ನೂ ಓದಿ: ಭಾರೀ ಮಳೆಯಿಂದಾಗಿ ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ
ಬಾಲಕ ಜಂಬೂಸವಾರಿ ದಿಣ್ಣೆಯ ಖಾಸಗಿ ಶಾಲೆಯೊಂದರಲ್ಲಿ ಓದುತ್ತಿದ್ದ ಎಂದು ತಿಳಿದು ಬಂದಿದೆ. ಮೃತ ಬಾಲಕನ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಇದೀಗ ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ನಗರದ ಜನರಿಗೆ ಡೆಂಗ್ಯೂ ಬಗ್ಗೆ ಮಾಹಿತಿ ನೀಡುತ್ತಿದ್ದು, ಸ್ವಚ್ಚತೆ ಹಾಗೂ ಅಗತ್ಯ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳುವಂತೆ ಸಾರ್ವಜನಿಕರಿಗೆ ತಿಳಿಸಿದೆ. ಇದನ್ನೂ ಓದಿ: ಸಿಎಂ ಎದುರೇ ಆಪ್ತ ಮಹದೇವಪ್ಪಗೆ ಕೈ ಶಾಸಕ ಕ್ಲಾಸ್!
ಶಿವಮೊಗ್ಗ: ಝಿಕಾ ವೈರಸ್ (Zika Virus) ಸೋಂಕಿನಿಂದ 74 ವರ್ಷದ ವೃದ್ಧರೊಬ್ಬರು ಮೃತಪಟ್ಟ ಘಟನೆ ಶಿವಮೊಗ್ಗದ (Shivamogga) ಗಾಂಧಿನಗರದಲ್ಲಿ ನಡೆದಿದೆ.
ಜೂ. 19 ರಂದು ತೀವ್ರ ಜ್ವರದಿಂದ ಬಳಲುತ್ತಿದ್ದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೂ.21 ರಂದು ನಡೆಸಿದ್ದ ರಕ್ತ ಪರೀಕ್ಷೆಯಲ್ಲಿ ಝಿಕಾ ವೈರಸ್ ಪತ್ತೆ ಆಗಿತ್ತು. ಬಳಿಕ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಕುಟುಂಬಸ್ಥರು ಗುರುವಾರ ಅವರನ್ನು ಆಸ್ಪತ್ರೆಯಿಂದ ಮನೆಗೆ ಕರೆದುಕೊಂಡು ಹೋಗಿದ್ದರು. ತೀವ್ರ ಆರೋಗ್ಯ ಸಮಸ್ಯೆಯಿಂದ ಅವರು ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ.
ಜ್ವರ ಮಾತ್ರವಲ್ಲದೇ ಬೇರೆ ಕಾಯಿಲೆಯಿಂದ ಅವರು ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.
ಹಾಸನ: ಜಿಲ್ಲೆಯಲ್ಲಿ (Hassan) ಶಂಕಿತ ಡೆಂಗ್ಯೂಗೆ (Dengue) ಮತ್ತೋರ್ವ ಬಾಲಕಿ ಮೃತಪಟ್ಟಿದ್ದಾಳೆ. ಈ ಮೂಲಕ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂವಿನಿಂದ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿದೆ.
ಮೃತ ಬಾಲಕಿಯನ್ನು ಹೊಳೆನರಸೀಪುರ (Holenarasipur) ತಾಲ್ಲೂಕಿನ, ದೊಡ್ಡಳ್ಳಿ ಗ್ರಾಮದ ಸಮೃದ್ಧಿ (8) ಎಂದು ಗುರುತಿಸಲಾಗಿದೆ. ಬಾಲಕಿ ಗ್ರಾಮದ ರಮೇಶ್-ಅಶ್ವಿನಿ ದಂಪತಿಯ ಪುತ್ರಿಯಾಗಿದ್ದು, ಕಳೆದ 4 ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದಳು. ಮೂರು ದಿನದ ಹಿಂದೆ ಬಾಲಕಿಯನ್ನು ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಆರೋಗ್ಯದಲ್ಲಿ ಚೇತರಿಕೆ ಕಾಣದ ಹಿನ್ನೆಲೆ ಮೈಸೂರಿನ ಅಪೋಲೊ ಆಸ್ಪತ್ರೆಗೆ ಬಾಲಕಿಯನ್ನು ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಇದೀಗ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: ರೈತರಿಗೆ ಕೋಚಿಮುಲ್ ಬಿಗ್ ಶಾಕ್ – ಹಾಲು ಉತ್ಪಾದಕರಿಗೆ 2 ರೂ. ಕಡಿತ
ಕಳೆದ ಒಂದು ವಾರದಲ್ಲಿ ಹಾಸನ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂಗೆ ನಾಲ್ವರು ಬಾಲಕಿಯರು ಬಲಿಯಾಗಿದ್ದಾರೆ. ಹೊಳೆನರಸೀಪುರ ತಾಲ್ಲೂಕಿನಲ್ಲೇ ಮೂವರು ಬಾಲಕಿಯರು ಬಲಿಯಾಗಿದ್ದಾರೆ. ಒಟ್ಟಾರೆ ಡೆಂಗ್ಯೂ ಮಹಾಮಾರಿಯಿಂದ ಹಾಸನ ಜಿಲ್ಲೆಯ ಜನತೆ ನಲಗುತ್ತಿದ್ದು, ಸರ್ಕಾರ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಜನ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ – ಎಲ್ಲೆಲ್ಲಿ ಏನಾಗಿದೆ?
ಕಾರವಾರ: ಡೆಂಗ್ಯೂವಿನಿಂದ (Dengue) ಬಳಲುತ್ತಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಉತ್ತರ ಕನ್ನಡದ (Uttara Kannada) ಅಂಕೋಲದಲ್ಲಿ ನಡೆದಿದೆ.
ಮೃತರನ್ನು ಬಾವಿಕೇರಿಯ ನಿವಾಸಿ ಹರೇ ರಾಮ್ ಗೋಪಾಲ್ ಭಟ್ (32) ಎಂದು ಗುರುತಿಸಲಾಗಿದೆ. ಅವರು ಕಳೆದ ಒಂದು ವಾರದಿಂದ ಡೆಂಗ್ಯೂವಿನಿಂದ ಬಳಲುತ್ತಿದ್ದರು. ಅವರನ್ನು ಬೆಳಗಾವಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ. ಇದನ್ನೂ ಓದಿ: ಮೈಸೂರಿನಲ್ಲಿ ಡೆಂಗ್ಯೂಗೆ ಆರೋಗ್ಯಾಧಿಕಾರಿ ನಿಧನ
ಉತ್ತರ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂವಿಗೆ ಈ ಬಾರಿ ಇದು ಮೊದಲ ಬಲಿಯಾಗಿದೆ. ಜಿಲ್ಲೆಯಲ್ಲಿ ಈವರೆಗೆ 119 ಜನರಿಗೆ ಡೆಂಗ್ಯೂ ಇರುವುದು ಪತ್ತೆಯಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ 6,676 ಮಂದಿಗೆ ಡೆಂಗ್ಯೂ ಇರುವುದು ಪತ್ತೆಯಾಗಿದೆ. ಇಂದು ರಾಜ್ಯದಲ್ಲಿ 286 ಮಂದಿಗೆ ಡೆಂಗ್ಯೂ ಇರುವುದು ವರದಿಯಾಗಿದೆ. ಇದನ್ನೂ ಓದಿ: ಆಸ್ಪತ್ರೆಯಲ್ಲಿ ಒಂದು ವರ್ಷದ ಮಗುವನ್ನು ಬಿಟ್ಟು ಹೋದ ಮಹಿಳೆ
ಬೆಂಗಳೂರು: ಗೋಬಿ, ಕಬಾಬ್ ಬಳಿಕ ಪಾನಿಪುರಿಯಲ್ಲಿ (Panipuri) ಕ್ಯಾನ್ಸರ್‌ಕಾರಕ (Cancer) ಅಂಶಗಳು ಪತ್ತೆಯಾಗಿದೆ. ಬೆಂಗಳೂರಿನ 49 ಪ್ರದೇಶಗಳಿಂದ ಸಂಗ್ರಹಿಸಿದ ಪಾನಿಪುರಿ ತಯಾರಿಕೆ ಪದಾರ್ಥಗಳಲ್ಲಿ ಕ್ಯಾನ್ಸರ್‌ಕಾರಕ ಇರೋದು ಪತ್ತೆಯಾಗಿದೆ.
ವಿದ್ಯಾರ್ಥಿಗಳು, ಯುವತಿಯರು ಪಾನಿಪುರಿ ಅಂದರೆ ಬಾಯಿ ಬಾಯಿ ಬಿಡುತ್ತಾರೆ. ಪಾನಿಪುರಿ ತಿನ್ನೋಕೆ ಸಾಲು ಗಟ್ಟಿ ನಿಲ್ಲುತ್ತಾರೆ. ಅಂತಹ ಪಾನಿಪುರಿ ಪ್ರಿಯರಿಗೆ ಇದು ಶಾಕಿಂಗ್ ನ್ಯೂಸ್. ಪಾನಿಪುರಿಗೆ ಬಳಸುವ ಸಾಸ್ ಮತ್ತು ಮೀಟಾ ಖಾರದ ಪುಡಿಯಲ್ಲಿ ಕ್ಯಾನ್ಸರ್‌ಕಾರಕ ಇರೋದು ಪತ್ತೆಯಾಗಿದೆ. ಜೊತೆಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ (Department of Food Safety and Quality) ಬೆಂಗಳೂರು ಸೇರಿದಂತೆ ರಾಜ್ಯದ 79 ಕಡೆ ಪಾನಿಪುರಿ ಮಾದರಿಗಳನ್ನು ಸಂಗ್ರಹ ಮಾಡಿ ಪರೀಕ್ಷೆಗೆ ಒಳಪಡಿಸಿದಾಗ ಅದರಲ್ಲಿ ಹಾನಿಕಾರಕ ಅಂಶ ಇರೋದು ಪತ್ತೆಯಾಗಿದೆ. ಇನ್ನು ಬೆಂಗಳೂರಿನ 19 ಕಡೆಗಳಲ್ಲಿ ಕ್ಯಾನ್ಸರ್‌ಕಾರಕವಿರುವ ಸಾಸ್, ಮೀಟಾ ಖಾರದ ಪುಡಿ ಬಳಸುತ್ತಿರೋದು ವರದಿಯಾಗಿದೆ. ಇದನ್ನೂ ಓದಿ: ಆಗುಂಬೆ ಘಾಟಿಯಲ್ಲಿ ನಾಳೆಯಿಂದ ಭಾರಿ ವಾಹನಗಳ ಸಂಚಾರ ನಿಷೇಧ
ಆಹಾರ ಮತ್ತು ಸುರಕ್ಷತಾ ಇಲಾಖೆ ಟೆಸ್ಟ್‌ನಲ್ಲಿ ಸನ್‌ಸೆಟ್ ಯಲ್ಲೋ 1, ಸನ್‌ಸೆಟ್ ಯಲ್ಲೋ 2 ಜೊತೆಗೆ ಬ್ರಿಲಿಯಂಟ್ ಬ್ರೂ ಮತ್ತು ಕಾರ್ಮೋಸಿಯಸ್ ರಾಸಾಯನಿಕ ಅಂಶ ಬೆರಕೆ ಆಗಿರೋದು ಪತ್ತೆಯಾಗಿದೆ. ಈ ಹಾನಿಕಾರಕ ಅಂಶಗಳು ಮನುಷ್ಯನ ದೇಹ ಸೇರಿದರೆ ಆರೋಗ್ಯ ಕ್ಷೀಣಿಸುತ್ತಾ ಹೋಗಲಿದೆ. ಹಾಗಾಗಿ ಕ್ಯಾನ್ಸರ್‌ಕಾರಕ ಆಗಿರೋ ಕಲಬೆರಕೆ ಬೆರೆಸಬಾರದು ಎನ್ನುತ್ತಿದ್ದಾರೆ. ಈ ವಾರದಲ್ಲಿ ಪಾನಿಪುರಿಗೆ ಹಾಕೋ ಸಾಸ್ ಮತ್ತು ಮಿಟಾ ಬ್ಯಾನ್ ಮಾಡೋಕೆ ನಿರ್ಧರಿಸಿದ್ದು, ಅಧಿಕೃತ ಘೋಷಣೆ ಮಾಡಲಿದ್ದಾರೆ. ಇದನ್ನೂ ಓದಿ: ಜುಲೈ 3 ರಿಂದ ಜಿಯೋದಿಂದ ಹೊಸ ಅನ್‌ಲಿಮಿಟೆಡ್ ಪ್ಲಾನ್
ಒಟ್ಟಾರೆ ಕಾಟನ್ ಕ್ಯಾಂಡಿ, ಗೋಬಿ, ಕಬಾಬ್ ಬಳಿಕ ಪಾನಿಪುರಿ ತಯಾರಿಕೆಯಲ್ಲಿ ಬಳಸುವ ಸಾಸ್‌ನಲ್ಲೂ ಹಾನಿಕಾರಕ ಇರೋದು ಪತ್ತೆಯಾಗಿದೆ. ಈ ವಾರದಲ್ಲಿ ಹಾನಿಕಾರಕ ರಾಸಾಯನಿಕ ಅಂಶಗಳನ್ನು ಬ್ಯಾನ್ ಮಾಡುವ ಸಾಧ್ಯತೆ ಇದೆ. ಇದನ್ನೂ ಓದಿ: ಕೊಡಗಿನಲ್ಲಿ ಭಾರೀ ಮಳೆ- ದುಬಾರೆ ಆನೆ ಶಿಬಿರಕ್ಕೆ ಪ್ರವಾಸಿಗರಿಗೆ ನಿಷೇಧ
ವಿಜ್ಞಾನ ಕ್ಷೇತ್ರದಲ್ಲಿ ನಡೆಯುತ್ತಿರುವ ಹೊಸ ಹೊಸ ಸಂಶೋಧನೆಗಳು ಅಚ್ಚರಿ ಮೂಡಿಸುತ್ತಿದ್ದರೆ, ಹೊಸ ಮಾದರಿಯ ವೈರಸ್‌ಗಳು ವಿಶ್ವದಾದ್ಯಂತ ಜನರ ನಿದ್ದೆಗೆಡಿಸಿವೆ. ಈಚೆಗೆ ಚೀನಾದಲ್ಲಿ ನ್ಯುಮೋನಿಯಾ ಮಾದರಿಯ ವೈರಸ್ ಪತ್ತೆಯಾಗಿತ್ತು. ಇದೀಗ ಜಪಾನ್‌ನಲ್ಲಿ (Japan) ಅತ್ಯಂತ ಭಯಾನಕವಾದ ಮಾಂಸ ತಿನ್ನುವ ವೈರಸ್‌ವೊಂದು (Flesh Eating Bacteria) ಕಾಣಿಸಿಕೊಂಡಿದೆ. ಈ ವೈರಸ್‌ನಿಂದ ಭಾರತಕ್ಕೆ ಯಾವುದೇ ಆತಂಕ ಸದ್ಯಕ್ಕೆ ಇಲ್ಲ. ಆದ್ರೆ ನಿರ್ಲಕ್ಷ್ಯ ವಹಿಸಿದ್ರೆ ಸಂಕಷ್ಟ ಕಟ್ಟಿಟ್ಟಬುತ್ತಿ ಎಂದು ಸಾಂಕ್ರಾಮಿಕ ರೋಗತಜ್ಞರು ಹೇಳುತ್ತಾರೆ.
2020-2021ರ ವೇಳೆಗೆ ಚೀನಾದ (China) ವುಹಾನ್ ಲ್ಯಾಬ್‌ವೊಂದರಲ್ಲಾದ ಯಡವಟ್ಟಿನಿಂದ ಇಡೀ ವಿಶ್ವವನ್ನೇ ಕೊರೊನಾ ವೈರಸ್ ಕಾಡಿತ್ತು. ಆದ್ರೆ ಇದಕ್ಕೂ ಮುನ್ನವೇ ಎಬೋಲಾ, ಮಾರ್ಬರ್ಗ್, ರೇಬಿಸ್ ಹಾಗೂ ಸಿಡುಬು, ಹಂಟಾ ದಂತಹ ವೈರಸ್‌ಗಳು ವಿಶ್ವವವನ್ನು ಕಾಡಿದ್ದವು. ಈ ಎಲ್ಲ ವೈರಸ್‌ಗಳಿಂದ ಚೇತರಿಸಿಕೊಳ್ಳುತ್ತಿರುವ ಹೊತ್ತಿನಲ್ಲೇ ಜಪಾನ್‌ನಲ್ಲಿ ಹುಟ್ಟಿಕೊಂಡ ವೈರಸ್‌ವೊಂದು ಜನರ ನಿದ್ದೆಗೆಡಿಸಿದೆ. ಮನುಷ್ಯನ ದೇಹದ ಮಾಂಸ ತಿನ್ನುವ ವೈರಸ್ ಇದಾಗಿದ್ದು, ಬೇರೆ ದೇಶಗಳಿಗೂ ಹರಡುವ ಆತಂಕ ಹುಟ್ಟಿಸಿದೆ. 2022ರಲ್ಲಿ ಕನಿಷ್ಠ 5 ಯುರೋಪಿಯನ್ ದೇಶಗಳಲ್ಲಿ ಈ ವೈರಸ್ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಆರೋಗ್ಯ ತಜ್ಞರು ವೈರಸ್‌ಗೆ ಹೊಸ ಔಷಧಿಯನ್ನು ಕಂಡುಹಿಡಿಯುವತ್ತ ಚಿತ್ತ ಹರಿಸಿದ್ದಾರೆ.
ಹೌದು. ಮಾಂಸ ತಿನ್ನುವ ಬ್ಯಾಕ್ಟೀರಿಯಾ ಹೊಸ ಆತಂಕ ಸೃಷ್ಟಿಸಿದೆ. ಜಪಾನ್‌ನಲ್ಲಿ ಹರಡುತ್ತಿರುವ ಈ ಅಪರೂಪದ ಬ್ಯಾಕ್ಟೀರಿಯಾ, ಗಂಭೀರ ಕಾಯಿಲೆ ಉಂಟುಮಾಡುತ್ತಿದ್ದು, 48 ಗಂಟೆಗಳಲ್ಲಿ ಸಾವಿಗೆ ಕಾರಣವಾಗುವಷ್ಟು ಅಪಾಯಕಾರಿಯಾಗಿದೆ. ಇದು ವೈದ್ಯಕೀಯ ಲೋಕಕ್ಕೆ ಹೊಸ ಸವಾಲೊಡ್ಡಿದೆ. ಕೋವಿಡ್ ಸಮಯದ ನಿರ್ಬಂಧಗಳನ್ನು ಸಡಿಲಿಸಿದ ಬಳಿಕ ಜಪಾನ್‌ನಲ್ಲಿ ಇದು ಕಾಣಿಸಿಕೊಂಡಿದೆ ಎಂದು ಇತ್ತೀಚಿನ ವರದಿಯೊಂದು ಹೇಳಿದೆ. ಜಪಾನ್‌ನಲ್ಲಿ ಸ್ಟ್ರೆಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್ (ಎಸ್‌ಟಿಎಸ್‌ಎಸ್ – Streptococcal Toxic Shock Syndrome) ಎಂಬ ಹೊಸ ವೈರಸ್ ಹುಟ್ಟಿಕೊಂಡಿದ್ದು, ಇದು ಇತ್ತೀಚಿನ ದಿನಗಳಲ್ಲಿ ಏರಿಕೆ ಕಂಡಿದೆ.
ಕಳೆದ ವರ್ಷ 941 ಪ್ರಕರಣಗಳು ದಾಖಲಾಗಿತ್ತು. ಆದ್ರೆ ಪ್ರಸಕ್ತ ವರ್ಷದಲ್ಲಿ ಈಗಾಗಲೇ ಪ್ರಕರಣಗಳ ಸಂಖ್ಯೆ 1,000ಕ್ಕೂ ಹೆಚ್ಚಿದೆ. ಈ ವರ್ಷಾಂತ್ಯಕ್ಕೆ ಇದರ ಸಂಖ್ಯೆ ಇನ್ನಷ್ಟು ದುಪ್ಪಟ್ಟಾಗಲಿದೆ ಎಂದು ತಜ್ಞ ವೈದ್ಯರು (Doctors) ಅಂದಾಜಿಸಿರುವುದಾಗಿ ಸಾಂಕ್ರಾಮಿಕ ಕಾಯಿಲೆಗಳ ರಾಷ್ಟ್ರೀಯ ಸಂಸ್ಥೆ ವರದಿ ಮಾಡಿದೆ.
ಅಷ್ಟಕ್ಕೂ ಈ ವೈರಸ್ ಹುಟ್ಟಿಕೊಂಡಿದ್ದು ಹೇಗೆ? ಇದರ ಅಪಾಯದ ತೀವ್ರತೆ ಎಷ್ಟು? ಇದು ಕೊರೊನಾದಂತೆ ವಿಶ್ವಕ್ಕೆ ವ್ಯಾಪಿಸುವ ಸಾಧ್ಯತೆ ಇದೆಯೇ? ಎಂಬುದನ್ನು ತಿಳಿಯುವ ಕುತೂಹಲ ನಿಮಗಿದ್ದರೆ ಮುಂದೆ ಓದಿ…
ಟಾಕ್ಸಿಕ್ ಶಾಕ್ ಸಿಂಡ್ರೋಮ್ ಲಕ್ಷಣಗಳೇನು?
ಈ ಕಾಯಿಲೆಯಲ್ಲಿ ಮರಣ ದರ ಶೇ.30ರಷ್ಟು ಇದ್ದು, ಅಪಾಯದ ಕರೆಗಂಟೆ ಬಾರಿಸಿದೆ. ಗ್ರೂಪ್ ಎ ಸ್ಟ್ರೆಪ್ಟೋಕೊಕ್ಕಸ್ (GAS), ಮಕ್ಕಳಲ್ಲಿ ಸ್ಟ್ರೆಪ್ ಥ್ರೋಟ್ ಎಂದು ಕರೆಯಲಾಗುವ ಲಘು ಕಾಯಿಲೆಯನ್ನು ಉಂಟುಮಾಡುತ್ತದೆ. ಇದರಲ್ಲಿ ಗಂಟಲು ನೋವು ಮತ್ತು ಊದುವಿಕೆ ಕಾಣಿಸಿಕೊಳ್ಳುತ್ತದೆ. ಅಲ್ಲದೇ ಅಂಗಾಂಗ ನೋವು, ಊತ, ಜ್ವರ ಹಾಗೂ 24 ರಿಂದ 48 ಗಂಟೆಯೊಳಗೆ ಕಡಿಮೆ ರಕ್ತದೊತ್ತಡದಂತಹ ಲಕ್ಷಣಗಳನ್ನು ತ್ವರಿತವಾಗಿ ಉಂಟುಮಾಡಬಹುದು. ಇದು ಜೀವಕೋಶಗಳ ಸಾವು, ಉಸಿರಾಟದ ತೊಂದರೆ, ಅಂಗಾಂಗ ವೈಫಲ್ಯ ಹಾಗೂ ಸಾವಿಗೆ ಕೂಡ ಕಾರಣವಾಗಬಹುದು. ವಯಸ್ಕರು, ಮುಖ್ಯವಾಗಿ 50 ವರ್ಷ ದಾಟಿದವರಿಗೆ ಈ ಕಾಯಿಲೆ ಹೆಚ್ಚು ಅಪಾಯಕಾರಿಯಾಗಿದೆ. ಅಲ್ಲದೇ ಈ ವೈರಸ್ ಕಾಣಿಸಿಕೊಂಡ 48 ಗಂಟೆಗಳಲ್ಲಿ ಮನುಷ್ಯ ಸಾಯುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ ಎಂದು ಟೋಕಿಯೋ ಮಹಿಳಾ ವೈದ್ಯಕೀಯ ಕಾಲೇಜಿನ ಸಾಂಕ್ರಾಮಿಕ ಕಾಯಿಲೆ ವಿಭಾಗದ ಪ್ರೊಫೆಸರ್ ಕೆನ್ ಕಿಕುಚಿ ತಿಳಿಸಿದ್ದಾರೆ.
ಚಿಕಿತ್ಸೆ ಏನು?
ಟಾಕ್ಸಿಕ್ ಶಾಕ್ ಸಿಂಡ್ರೋಮ್ ವೈರಸ್‌ಗೆ ನಿಖರ ಚಿಕಿತ್ಸೆ ಇಲ್ಲವಾದರೂ ತಾತ್ಕಾಲಿಕ ಚಿತ್ಸೆಗಾಗಿ ʻIV ʼ ಆಂಟಿಬಯೊಟಿಕ್ ಕಂಡುಹಿಡಿಯಲಾಗಿದೆ. ಇದು ರಕ್ತದೊತ್ತಡ ಕಡಿಮೆ ಮಾಡುವ ಜೊತೆಗೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿ ವೈರಸ್ ವಿರುದ್ಧ ಹೋರಾಟುವ ಶಕ್ತಿ ಒದಗಿಸುತ್ತದೆ. ಅಲ್ಲದೇ ಅಂಗಾಗ ವೈಫಲ್ಯತೆ ಮತ್ತು ಪ್ರಾಣಹಾನಿಯಂತಹ ತೀವ್ರ ಸಮಸ್ಯೆಗೆ ಸಿಲುಕದಂತೆ ನೋಡಿಕೊಳ್ಳುತ್ತದೆ.
ರೋಗ ನಿರ್ಣಯಿಸುವುದು ಹೇಗೆ?
ಅಪಾಯಕಾರಿ ಟಾಕ್ಸಿಕ್ ಶಾಕ್ ಸಿಂಡ್ರೋಮ್ ನಿರ್ಣಯಿಸಲು ಕೆಲವು ಪರೀಕ್ಷಾ ವಿಧಾನಗಳಿವೆ. ಮೊದಲನೆಯದ್ದಾಗಿ ರಕ್ತ ಪರೀಕ್ಷೆ ನಡೆಸಲಾಗುತ್ತದೆ. ಇದರೊಂದಿಗೆ ಕಿಡ್ನಿ, ಕಡಿಮೆ ರಕ್ತದೊತ್ತಡ, ಪಿತ್ತಜನಕಾಂಗ ಸಮಸ್ಯೆಗಳಿರುವ ಬಗ್ಗೆ ಗುರುತಿಸಲಾಗುತ್ತದೆ. ಜೊತೆಗೆ ಅಂಗಾಗ ವೈಫಲ್ಯಗಳು ಕಂಡುಬಂದಿದ್ದರೆ ಆಗ ಕಾಯಿಲೆಗೆ ತುತ್ತಾಗಿರುವ ಬಗ್ಗೆ ದೃಢೀಕರಿಸಲಾಗುತ್ತದೆ.
ಮುಂಜಾಗ್ರತಾ ಕ್ರಮ ಏನು?
* ಸುತ್ತಮುತ್ತಲಿನ ವಾತಾವರಣವನ್ನು ಶುಚಿಯಾಗಿಟ್ಟುಕೊಳ್ಳಬೇಕು
* ಯಾವುದೇ ವಸ್ತುಗಳನ್ನು ಮುಟ್ಟುವ ಮುನ್ನ ಕೈಗಳನ್ನು ಶುಚಿಯಾಗಿಟ್ಟುಕೊಳ್ಳಬೇಕು.
* ಕೆಮ್ಮುವಾಗ ಸೀನುವಾಗ ಬಾಯಿ, ಮೂಗನ್ನು ಕೈನಿಂದ ಮುಚ್ಚಿಕೊಳ್ಳಬೇಕು ಅಥವಾ ಬಟ್ಟೆಯನ್ನು ಅಡ್ಡಲಾಗಿಟ್ಟುಕೊಳ್ಳಬೇಕು.
* ದೇಹದಲ್ಲಿ ಗಾಯಗೊಂಡ ಭಾಗಗಳನ್ನು ಸೂಕ್ಷವಾಗಿ- ನೋಡಿಕೊಳ್ಳಬೇಕು, ಸೆಪ್ಟಿಕ್‌ಗೆ ಅವಕಾಶ ನೀಡಬಾರದು.
* ಸೋಂಕಿನ ಬಗ್ಗೆ ಯಾವುದೇ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ವೈದ್ಯಕೀಯ ಚಿಕಿತ್ಸೆ ಪಡೆದುಕೊಳ್ಳಬೇಕು ಎಂಬುದು ತಜ್ಞರ ಸಲಹೆ.
ನವದೆಹಲಿ: ಸಮರ್ಪಕ ನೀರಿನ ಪೂರೈಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿಗೆ ಉಪವಾಸ ಸತ್ಯಾಗ್ರಹ (Fasting) ಆರಂಭಿಸಿರುವ ಸಚಿವೆ ಅತಿಶಿ (Atishi Marlena) ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದೆ ಎಂದು ಲೋಕನಾಯಕ್ ಜೈ ಪ್ರಕಾಶ್ ನಾರಾಯಣ್ ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ. ಅವರನ್ನು ಪರೀಕ್ಷಿಸಿದ್ದು, ಅನಿರ್ದಿಷ್ಟ ಉಪವಾಸ ಸತ್ಯಾಗ್ರಹದಿಂದ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದ್ದು ಆಸ್ಪತ್ರೆಗೆ ದಾಖಲಾಗುವಂತೆ ಸಲಹೆ ನೀಡಿದ್ದಾರೆ.
ವೈದ್ಯರ ಸಲಹೆ ತಿರಸ್ಕರಿಸಿರುವ ಸಚಿವೆ ಅತಿಶಿ ಆರೋಗ್ಯ (Health) ಹದಗೆಟ್ಟಿದ್ದರೂ, ಹರಿಯಾಣವು (Haryana) ದೆಹಲಿಯ ನ್ಯಾಯಯುತವಾದ ನೀರನ್ನು (Delhi Water Crisis) ಬಿಡುಗಡೆ ಮಾಡುವವರೆಗೆ ಅನಿರ್ದಿಷ್ಟ ಉಪವಾಸವನ್ನು ಮುಂದುವರೆಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಇದನ್ನೂ ಓದಿ: ಡಿಸಿಎಂ ಮಾಡೋದು ಹೈಕಮಾಂಡ್‌ಗೆ ಬಿಟ್ಟ ವಿಚಾರ, ನಮ್ಮ ಅಭಿಪ್ರಾಯ ಹೇಳಿದ್ದೇವೆ: ಜಮೀರ್
ನನ್ನ ರಕ್ತದೊತ್ತಡ ಮತ್ತು ಸಕ್ಕರೆಯ ಮಟ್ಟವು ಕುಸಿಯುತ್ತಿದೆ ಮತ್ತು ನನ್ನ ತೂಕವು ಕಡಿಮೆಯಾಗಿದೆ. ಇದು ದೀರ್ಘಾವಧಿಯಲ್ಲಿ ನನ್ನ ದೇಹದ ಮೇಲೆ ಹಾನಿಕಾರಕ ಪರಿಣಾಮಗಳನ್ನು ಉಂಟುಮಾಡಬಹುದು. ಈ ಎಚ್ಚರಿಕೆಗಳ ಹೊರತಾಗಿಯೂ ನಾನು ಆಸ್ಪತ್ರೆಗೆ ದಾಖಲಾಗುವುದಿಲ್ಲ. ನನ್ನ ದೇಹವು ಎಷ್ಟೇ ನರಳಿದರೂ ಹರಿಯಾಣ ನೀರು ಬಿಡುವವರೆಗೆ ನಾನು ಉಪವಾಸವನ್ನು ಮುಂದುವರಿಸುತ್ತೇನೆ ಎಂದು ಅತಿಶಿ ಸ್ಪಷ್ಟಪಡಿಸಿದರು. ಇದನ್ನೂ ಓದಿ: ನಾನು ಸ್ಪರ್ಧೆ ಮಾಡ್ಬೇಕು ಅಂದ್ರೂ ಸಮಿತಿ ತೀರ್ಮಾನ ಮಾಡುತ್ತೆ: ಡಿಕೆಶಿ
ನಾವು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ, ಎಲ್ಲಾ ಅಧಿಕಾರಿಗಳನ್ನು ವಜೀರಾಬಾದ್, ಬವಾನಾಕ್ಕೆ ಫ್ಲೋ ಮೀಟರ್‌ಗಳ ರೀಡಿಂಗ್‌ಗಳನ್ನು ನೋಡಲು ಮತ್ತು ಅಲ್ಲಿ ನದಿಯ ನೀರಿನ ಮಟ್ಟವನ್ನು ನೋಡಲು ಆಹ್ವಾನಿಸುತ್ತೇವೆ. ಹರಿಯಾಣ ಬಿಡುಗಡೆ ಮಾಡಿದ ನೀರಿಗೆ ಡೇಟಾ ಲಭ್ಯವಿದೆ ನೀರಿನ ಲಭ್ಯತೆ ಹೇಗೆ ಕಡಿಮೆಯಾಗಿದೆ ಎಂದು ನೋಡಬಹುದು ಎಂದು ಪರಿಸರ ಸಚಿವ ಗೋಪಾಲ್ ರೈ ಹೇಳಿದರು. ಇದನ್ನೂ ಓದಿ: ದರ್ಶನ್ ಪ್ರಕರಣ: ಕಾನೂನಿಗಿಂತ ಯಾರು ದೊಡ್ಡವರಿಲ್ಲ, ನ್ಯಾಯ ಸಿಗಬೇಕು- ವಿನೋದ್ ಪ್ರಭಾಕರ್