Tag: health

  • Photos Gallery: ಯೋಗ ದಿನಾಚರಣೆ ವೇಳೆ ಕಾಶ್ಮೀರಿ ಮಹಿಳೆಯರೊಂದಿಗೆ ಮೋದಿ ಸೆಲ್ಫಿ!

    Photos Gallery: ಯೋಗ ದಿನಾಚರಣೆ ವೇಳೆ ಕಾಶ್ಮೀರಿ ಮಹಿಳೆಯರೊಂದಿಗೆ ಮೋದಿ ಸೆಲ್ಫಿ!

    10ನೇ ಅಂತಾರಾಷ್ಟ್ರೀಯ ಯೋಗ ದಿನದ (International Yoga Day 2024) ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದು ‌ಜಮ್ಮು ಮತ್ತು ಕಾಶ್ಮೀರದ ದಾಲ್‌ ಸರೋವರ ತೀರದಲ್ಲಿ ಸಾವಿರಾರು ಜನರೊಂದಿಗೆ ಪಾಲ್ಗೊಂಡು ಯೋಗ ಪ್ರದರ್ಶಿಸಿದರು. ಬಳಿಕ ಅಲ್ಲಿನ ಅಲ್ಲಿನ ಜನರೊಂದಿಗೆ ಸರಳ ಸಂವಾದ ನಡೆಸಿ, ವಿಶೇಷತೆಗಳ ಬಗ್ಗೆ ತಿಳಿದುಕೊಂಡಿದ್ದಾರೆ. ಜನರೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡು ಖುಷಿಪಟ್ಟಿದ್ದಾರೆ. ಈ ಫೋಟೋಗಳನ್ನು ಮೋದಿ ತಮ್ಮ ಸೋಷಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಹಾಗಾದ್ರೆ ದಾಲ್‌ ಸರೋವರ ತೀರದಲ್ಲಿ ಕಂಡ ಅದ್ಭುತ ಕ್ಷಣಗಳು ಹೇಗಿತ್ತು ಎಂಬುದನ್ನು ಫೋಟೋ ನೋಡಿ ಕಣ್ತುಂಬಿಕೊಳ್ಳಿ….

  • `ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ – ದಾಲ್‌ ಸರೋವರ ತೀರದಲ್ಲಿ ನಮೋ ಯೋಗ!

    `ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ – ದಾಲ್‌ ಸರೋವರ ತೀರದಲ್ಲಿ ನಮೋ ಯೋಗ!

    ಶ್ರೀನಗರ: 10ನೇ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದು ‌ಜಮ್ಮು ಮತ್ತು ಕಾಶ್ಮೀರದ ದಾಲ್‌ ಸರೋವರ ತೀರದಲ್ಲಿ ಸಾವಿರಾರು ಜನರೊಂದಿಗೆ ಪಾಲ್ಗೊಂಡು ಯೋಗ ಪ್ರದರ್ಶಿಸಿದರು.

    ಈ ಬಾರಿ 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ʻಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ (Yoga for Self and Society) ವಸ್ತು ವಿಷಯದ ಅಡಿಯಲ್ಲಿ ಆಚರಿಸಲಾಗುತ್ತಿದೆ. ವೈಯಕ್ತಿಕ ಮತ್ತು ಸಾಮಾಜಿಕ ಯೋಗಕ್ಷೇಮವನ್ನು ಬೆಳೆಸುವಲ್ಲಿ ಯೋಗದ ಪಾತ್ರವನ್ನು ಎತ್ತಿ ತೋರಿಸುವುದು ಇದರ ಉದ್ದೇಶವಾಗಿದೆ. ಇದನ್ನೂ ಓದಿ: International Yoga Day: ‘ಯೋಗ’ವೆಂಬ ಗಿನ್ನಿಸ್‌ ರೆಕಾರ್ಡ್‌ – ಯಾವ ವರ್ಷ, ಎಲ್ಲಿ ದಾಖಲೆಯಾಗಿತ್ತು?

    3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಜಮ್ಮು‌ ಮತ್ತು‌ ಕಾಶ್ಮೀರಕ್ಕೆ ಭೇಟಿ ನೀಡಿದ್ದ ಮೋದಿ ಅವರು, ಶ್ರೀನಗರದ ದಾಲ್‌ ಸರೋವರದ (Darl Lake) ತೀರದಲ್ಲಿನ ಶೇರ್-ಐ-ಕಾಶ್ಮೀರ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಯೋಗ ಪ್ರದರ್ಶನ ನೀಡಿದರು. ಇದರೊಂದಿಗೆ ಸರಿಸುಮಾರು 7 ಸಾವಿರ ಮಂದಿ ಪಾಲ್ಗೊಂಡು ವಿಶ್ವಕ್ಕೆ ಆರೋಗ್ಯ ಜಾಗೃತಿಯ ಸಂದೇಶ ಸಾರಿದರು. ಇದನ್ನೂ ಓದಿ: ವಿಧಾನಸೌಧದ ಎದುರು ಡಿಕೆಶಿ ಯೋಗ – ನಟಿ ಅನು ಪ್ರಭಾಕರ್‌, ಕ್ರಿಕೆಟಿಗ ಮನಿಷ್‌ ಪಾಂಡೆ ಸಾಥ್‌

    ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವ್ಯಾಪಕ ಸುರಕ್ಷತಾ ಕ್ರಮ ಕೈಗೊಳ್ಳಲಾಗಿತ್ತು. ಭದ್ರತಾ ಕ್ರಮದ ಭಾಗವಾಗಿ ಶ್ರೀನಗರದಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದ್ದು, ಡ್ರೋನ್ (Drone) ಮತ್ತು ಕ್ವಾಡ್‌ಕ್ಯಾಪ್ಚರ್‌ ಕಾರ್ಯಾಚರಣೆಗಳನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿತ್ತು.

    ಈ ವೇಳೆ ಜಮ್ಮು ಮತ್ತು ಕಾಶ್ಮೀರದ ಎಲ್ಲ 20 ಜಿಲ್ಲೆಗಳಲ್ಲೂ ವರ್ಚುವಲ್ ವೇದಿಕೆಯನ್ನು ಕಲ್ಪಿಸಲಾಗಿತ್ತು. ವರ್ಚುವಲ್‌ನಲ್ಲೂ‌ ಪ್ರತಿ ಜಿಲ್ಲೆಯಿಂದು ಸುಮಾರು ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಂಡು ಯೋಗ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಇದನ್ನೂ ಓದಿ: 

  • ನಮೋ ಜಮ್ಮು-ಕಾಶ್ಮೀರ ಪ್ರವಾಸ ಇಂದಿನಿಂದ ಆರಂಭ – ಬಿಗಿ ಭದ್ರತೆ ನಿಯೋಜನೆ

    ನಮೋ ಜಮ್ಮು-ಕಾಶ್ಮೀರ ಪ್ರವಾಸ ಇಂದಿನಿಂದ ಆರಂಭ – ಬಿಗಿ ಭದ್ರತೆ ನಿಯೋಜನೆ

    – ಶುಕ್ರವಾರ ದಾಲ್‌ ಸರೋವರ ತೀರದಲ್ಲಿ ಮೋದಿ ಯೋಗ ಪ್ರದರ್ಶನ

    ಶ್ರೀನಗರ: ಪ್ರಧಾನಿ ಮೋದಿ (Narendra Modi) ಅವರ 2 ದಿನಗಳ ಜಮ್ಮು ಮತ್ತು ಕಾಶ್ಮೀರ ಪ್ರವಾಸ ಇಂದು (ಗುರುವಾರ) ಆರಂಭವಾಗಲಿದೆ. 3ನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಜಮ್ಮು ಮತ್ತು ಕಾಶ್ಮೀರಕ್ಕೆ (Jammu and Kashmir) ಮೋದಿ ಅವರ ಮೊದಲ ಭೇಟಿಯೂ ಇದಾಗಿದೆ.

    ಶ್ರೀನಗರದಲ್ಲಿ (Srinagar) ಜೂನ್‌ 21ರಂದು (ಶುಕ್ರವಾರ) ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವ್ಯಾಪಕ ಸುರಕ್ಷತಾ ಕ್ರಮ ಕೈಗೊಳ್ಳಲಾಗಿದೆ. ವಿವಿಧ ಹಂತಗಳಲ್ಲಿ ಭದ್ರತೆ ನಿಯೋಜಿಸಲಾಗಿದೆ. ಇದನ್ನೂ ಓದಿ: ವಿಶ್ವ ಆರೋಗ್ಯಕ್ಕಾಗಿ ಯೋಗ – ʻಸ್ವಯಂ ಮತ್ತು ಸಮಾಜಕ್ಕಾಗಿ ಯೋಗʼ

    ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ದಾಖಲೆ ಪ್ರಮಾಣದ ಮತದಾನವಾಗಿದ್ದು, ಪ್ರಧಾನಿ ಅವರ ಈ ಭೇಟಿಯು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ. ಈ ಹಿನ್ನೆಲೆಯಲ್ಲಿ ಶಿಷ್ಟಾಚಾರದ ಪ್ರಕಾರ, ಹಲವು ಹಂತಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕೂಗೊಳ್ಳಲಾಗಿದೆ ಎಂದು ಕಾಶ್ಮೀರ ವಲಯದ ಐಜಿಪಿ ವಿಧಿ ಕುಮಾರ್ ಬರ್ಡಿ ತಿಳಿಸಿದ್ದಾರೆ.

    ಭದ್ರತಾ ಕ್ರಮದ ಭಾಗವಾಗಿ ಶ್ರೀನಗರದಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದ್ದು, ಡ್ರೋನ್ (Drone) ಮತ್ತು ಕ್ವಾಡ್‌ಕಾಪ್ಟರ್‌ ಕಾರ್ಯಾಚರಣೆಗಳನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಡ್ರೋನ್ ನಿಯಮಗಳು 2021ರ ನಿಬಂಧನೆಗಳ ಪ್ರಕಾರ ನಿಯಮ ಉಲ್ಲಂಘಿಸಿದವರಿಗೆ ದಂಡ ಹಾಗೂ ಶಿಕ್ಷೆ ವಿಧಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಭತ್ತ, ರಾಗಿ, ಹತ್ತಿ ಸೇರಿ 22 ಬೆಳೆಗಳಿಗೆ ಎಂಎಸ್‌ಪಿ ಹೆಚ್ಚಿಸಿದ ಕೇಂದ್ರ – ಇಲ್ಲಿದೆ ನೋಡಿ ದರ ಪಟ್ಟಿ..

    ದಾಲ್‌ ಸರೋವರದ ತೀರದಲ್ಲಿ ಯೋಗ:
    10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಈ ಬಾರಿ ಪ್ರಧಾನಿ ಮೋದಿ ಅವರು ಯೋಗ ದಿನವನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಆಚರಿಸಲಿದ್ದಾರೆ. ಶ್ರೀನಗರದ ದಾಲ್‌ ಸರೋವರದ (Darl Lake) ತೀರದಲ್ಲಿನ ಶೇರ್-ಐ-ಕಾಶ್ಮೀರ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ 9,000 ಮಂದಿ ಯೋಗ ಪ್ರದರ್ಶನ ನೀಡಲಿದ್ದಾರೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ತಿಳಿಸಿದ್ದಾರೆ.

    ಈ ವೇಳೆ ಜಮ್ಮು ಮತ್ತು ಕಾಶ್ಮೀರದ ಎಲ್ಲ 20 ಜಿಲ್ಲೆಗಳನ್ನು ವರ್ಚುವಲ್ ಆಗಿ ಸಂಪರ್ಕಿಸುವ ಯೋಜನೆ ಇದೆ ಪ್ರತಿ ಜಿಲ್ಲೆಯಿಂದ 2,000 ಜನರು ಸಂಪರ್ಕ ಸಾಧಿಸಿದರೂ, ಕಾರ್ಯಕ್ರಮದಲ್ಲಿ ಸುಮಾರು 50,000 ಭಾಗವಹಿಸಿದಂತಾಗುತ್ತದೆ ಎಂದು ಸಚಿವರು ವಿವರಿಸಿದ್ದಾರೆ. ಇದನ್ನೂ ಓದಿ: ರಾಮಾಯಣ ನಾಟಕ ಪ್ರದರ್ಶಿಸಿದ್ದಕ್ಕೆ ವಿದ್ಯಾರ್ಥಿಗಳಿಗೆ 1.02 ಲಕ್ಷ ದಂಡ ವಿಧಿಸಿದ ಬಾಂಬೆ ಐಐಟಿ

    ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ:
    ಈ ಬಾರಿಯ 10ನೇ ಅಂತಾರಾಷ್ಟ್ರೀಯ ಯೋಗ ದಿನದ ಥೀಮ್‌ (ವಸ್ತು ವಿಷಯ) ʻಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ (Yoga for Self and Society) ಎಂದಾಗಿದೆ. ಜೂನ್‌ 21 ರಂದು ಪ್ರಧಾನಿ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಈ ವಿಶೇಷ ದಿನವನ್ನು ಆಚರಣೆ ಮಾಡಲಿದ್ದಾರೆ. ವೈಯಕ್ತಿಕ ಮತ್ತು ಸಾಮಾಜಿಕ ಯೋಗಕ್ಷೇಮವನ್ನು ಬೆಳೆಸುವಲ್ಲಿ ಯೋಗದ ಪಾತ್ರವನ್ನು ಎತ್ತಿ ತೋರಿಸುವುದು ಇದರ ಉದ್ದೇಶವಾಗಿದೆ.

  • ವಿಶ್ವ ಆರೋಗ್ಯಕ್ಕಾಗಿ ಯೋಗ – ʻಸ್ವಯಂ ಮತ್ತು ಸಮಾಜಕ್ಕಾಗಿ ಯೋಗʼ

    ವಿಶ್ವ ಆರೋಗ್ಯಕ್ಕಾಗಿ ಯೋಗ – ʻಸ್ವಯಂ ಮತ್ತು ಸಮಾಜಕ್ಕಾಗಿ ಯೋಗʼ

    ದೇಹ ಮತ್ತು ಮನಸ್ಸಿನ ಸಂಯೋಗವೇ ಯೋಗ. ಭಾರತೀಯ ಯೋಗ (Yoga) ಪರಂಪರೆಯಿಂದು ವಿಶ್ವವ್ಯಾಪಿಯಾಗಿದೆ. ಭಾರತ ಮತ್ತು ಇತರ ದೇಶಗಳ ಸಂಬಂಧವನ್ನು ಆರೋಗ್ಯಪೂರ್ಣವಾಗಿಸುವ ಮಹತ್ವದ ಕಾರ್ಯವಾಗಿ ರೂಪುಗೊಂಡಿದೆ. ಯೋಗವು ಯಾವುದೇ ಜಾತಿ, ಧರ್ಮ, ಮತಕ್ಕೆ ಸೀಮಿತವಾಗದೇ ಎಲ್ಲವನ್ನೂ ಎಲ್ಲರನ್ನೂ ಮೀರಿಸುವ ವಿಶ್ವಕುಟುಂಬಿಯಾಗಿ ಹಾಗೂ ವಿಶ್ವ ಆರೋಗ್ಯಕ್ಕಾಗಿ (World Health) ಎನ್ನುವ ನಿಟ್ಟಿನಲ್ಲಿ ಸಾಕಾರಾರಗೊಂಡಿದೆ.

    ವಿಶ್ವ ಎಂದರೇನು? ಆರೋಗ್ಯ ಎಂದರೇನು? ಎಂಬುನ್ನು ವಿಶ್ಲೇಷಿಸಿದಾಗ ಕಾಮ, ಕ್ರೋಧ, ಲೋಭ, ಮೋಹ, ಮದ ಮತ್ಸರಗಳೆಂಬ ಅರಿಷಡ್ವರ್ಗಗಳು ಹೆಚ್ಚಾಗದೆಯೇ ಯೋಗ್ಯ ಸ್ಥಿತಿಯಲ್ಲಿ ಇರುವುದೇ ಆರೋಗ್ಯ. ಆದ್ರೆ ಇದೆಲ್ಲವನ್ನೂ ಮೀರಿ ನಾವು ಸಾಧಿಸಬೇಕು ಎಂದರೆ ತಾಳ್ಮೆ ಅತ್ಯಗತ್ಯ. ಅದಕ್ಕಾಗಿ ಅತ್ಯುತ್ತಮ ಮಾರ್ಗವನ್ನು ಯೋಗ ತೋರುತ್ತದೆ. ಯೋಗವು ದೈಹಿಕ, ಮಾನಸಿಕ ಮತ್ತು ಬೌದ್ಧಿಕವಾಗಿ ಮನುಷ್ಯನನ್ನು ಗಟ್ಟಿಗೊಳಿಸುತ್ತದೆ ಎಂಬುದನ್ನು ಯೋಗಗುರುಗಳು ಹೇಳಿದ್ದಾರೆ ಮತ್ತು ನಂಬಿದ್ದಾರೆ. ಭಾರತದಲ್ಲಿ ಪ್ರಸಿದ್ಧಿ ಪಡೆದ ಈ ಯೋಗವನ್ನು ಇಂದು 190ಕ್ಕೂ ಹೆಚ್ಚು ರಾಷ್ಟ್ರಗಳು ಅಳವಡಿಸಿಕೊಂಡು ಆಚರಣೆ ಮಾಡುತ್ತಿವೆ. ವಿಶ್ವದಾದ್ಯಂತ ಜನರು ತಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯ ವೃದ್ಧಿಗೆ ಯೋಗಾಭ್ಯಾಸ ಮಾಡುವುದು ಸಾಮಾನ್ಯವಾಗಿದೆ. ಯೋಗದಿಂದ ನಮ್ಮ ವೈಯಕ್ತಿಕ ಹಾಗೂ ಸಾಮಾಜಿಕ ಬದುಕು ವೃದ್ಧಿಯಾಗುತ್ತದೆ. ಮಾನವನ ಯೋಗಕ್ಷೇಮ ಕಾಪಾಡುವಲ್ಲಿ ತನ್ನದೇ ಆದ ಪ್ರಾಮುಖ್ಯತೆಯನ್ನು ಹೊಂದಿರುವ ಯೋಗದ ಮಹತ್ವವನ್ನು ತಿಳಿಸುವ ಉದ್ದೇಶದಿಂದ ಪ್ರತಿವರ್ಷ ಜೂನ್‌ 21ರ ದಿನವನ್ನು ಅಂತಾರಾಷ್ಟ್ರೀಯ ಯೋಗ ದಿನವನ್ನಾಗಿ (International Yoga day) ಆಚರಿಸಲಾಗುತ್ತದೆ.

    ಈ ಬಾರಿಯ 10ನೇ ಅಂತಾರಾಷ್ಟ್ರೀಯ ಯೋಗ ದಿನದ ಥೀಮ್‌ (ವಸ್ತು ವಿಷಯ) ʻಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ (Yoga for Self and Society) ಎಂದಾಗಿದೆ. ಜೂನ್‌ 21 ರಂದು ಪ್ರಧಾನಿ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಈ ವಿಶೇಷ ದಿನವನ್ನು ಆಚರಣೆ ಮಾಡಲಿದ್ದಾರೆ. ವೈಯಕ್ತಿಕ ಮತ್ತು ಸಾಮಾಜಿಕ ಯೋಗಕ್ಷೇಮವನ್ನು ಬೆಳೆಸುವಲ್ಲಿ ಯೋಗದ ಪಾತ್ರವನ್ನು ಎತ್ತಿ ತೋರಿಸುವುದು ಇದರ ಉದ್ದೇಶ.

    ಕಾಶ್ಮೀರದಲ್ಲಿ ಮೋದಿ ʻಯೋಗʼ

    ಈ ಬಾರಿ ಪ್ರಧಾನಿ ಮೋದಿ (Narendra Modi) ಅವರು ಯೋಗ ದಿನವನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಆಚರಿಸಲಿದ್ದಾರೆ. ದೇಶದ ವಿವಿಧ ಭಾಗಗಳಿಂದ ಜಮ್ಮು ಮತ್ತು ಕಾಶ್ಮೀರಕ್ಕೆ ಸುಮಾರು 7 ಸಾವಿರಕ್ಕೂ ಹೆಚ್ಚು ಜನ ಆಗಮಿಸಲಿದ್ದಾರೆ. ದಾಲ್‌ ಸರೋವರದ ದಡದಲ್ಲಿ ಯೋಗ ದಿನ ಆಚರಿಸಲು ನಿರ್ಧರಿಸಲಾಗಿದೆ. ಮುಖ್ಯ ಕಾರ್ಯಕ್ರಮವು ಶ್ರೀನಗರದ ಶೇರ್–ಇ–ಕಾಶ್ಮೀರ್ ಅಂತಾರಾಷ್ಟ್ರೀಯ ಸಮ್ಮೇಳನ ಕೇಂದ್ರದಲ್ಲಿ ನಡೆಯಲಿದೆ.

    ಯೋಗ ಅಸ್ವಿತ್ತಕ್ಕೆ ಬಂದಿದ್ದು ಯಾವಾಗ?

    ಯೋಗಕ್ಕೆ ಸರಿಸುಮಾರು 2,500 ವರ್ಷಗಳ ಪುರಾತನ ಇತಿಹಾಸವಿದೆ. ನಾಗರಿಕತೆಯ ಆರಂಭದಿಂದಲೂ ಯೋಗವನ್ನು ಅಭ್ಯಾಸ ಮಾಡಲಾಗುತ್ತಿತ್ತು ಎಂದು ಹೇಳಲಾಗುತ್ತದೆ. ಯಾವುದೇ ಧರ್ಮ, ನಂಬಿಕೆಗಳು ಅಸ್ತಿತ್ವಕ್ಕೆ ಬರುವ ಮೊದಲೇ ಯೋಗ ಅಸ್ತಿತ್ವಕ್ಕೆ ಬಂದಿತು ಎಂಬುದು ನಂಬಿಕೆ. ಭಗವಾನ್ ಶಿವನನ್ನು ಯೋಗ ಪುರಾಣಗಳಲ್ಲಿ ಮೊದಲ ಯೋಗಿ ಅಥವಾ ಆದಿಯೋಗಿ ಎಂದು ಪರಿಗಣಿಸಲಾಗಿದೆ. ಪರಮೇಶ್ವರನನ್ನು ಯೋಗದ ಮೊದಲ ಗುರು ಎಂದು ಕೂಡ ಕರೆಯಲಾಗುತ್ತದೆ. ಆದಿಯೋಗಿ ಅಂದರೆ ಶಿವನು ಸಾವಿರಾರು ವರ್ಷಗಳ ಹಿಂದೆ ಹಿಮಾಲಯದ ಕಾಂತಿ ಸರೋವರದ ತೀರದಲ್ಲಿ ಸಪ್ತಋಷಿಗಳಿಗೆ ತನ್ನ ವ್ಯಾಪಕವಾದ ಬುದ್ಧಿವಂತಿಕೆ ಧಾರೆ ಎರೆಯುತ್ತಾರೆ. ಆ ಋಷಿಗಳು ಏಷ್ಯಾ, ಮಧ್ಯಪ್ರಾಚ್ಯ, ಉತ್ತರ ಆಫ್ರಿಕಾ ಮತ್ತು ದಕ್ಷಿಣ ಅಮೆರಿಕ ಸೇರಿದಂತೆ ವಿವಿಧ ರಾಷ್ಟ್ರಗಳಲ್ಲಿ ಜಗತ್ತಿನಲ್ಲಿ ಅತ್ಯಂತ ಶಕ್ತಿಯುತವಾದ ಯೋಗ ವಿಜ್ಞಾನ ಅಂಶವನ್ನು ಹರಡುತ್ತಾರೆ. ಆಯುಷ್ ಸಚಿವಾಲಯದ ಪ್ರಕಾರ, ಸಮಕಾಲೀನ ಸಂಶೋಧಕರು ಪ್ರಪಂಚದಾದ್ಯಂತದ ಪ್ರಾಚೀನ ಸಂಸ್ಕೃತಿಗಳ ನಡುವಿನ ಗಮನಾರ್ಹ ಸಾಮ್ಯತೆಗಳನ್ನು ಗಮನಿಸಿದ್ದಾರೆ.

    ಭಾರತದಲ್ಲಿ ಯೋಗ ಪ್ರಸಿದ್ಧಿ ಪಡೆದಿದ್ದು ಹೇಗೆ?

    ವಿವಿಧ ದೇಶಗಳಲ್ಲಿ ಬಹಳ ಹಿಂದಿನಿಂದಲೂ ಯೋಗದ ಬಗ್ಗೆ ಅರಿವಿದ್ದರೂ ಅದರಲ್ಲಿನ ʻಆಸನʼಗಳ ಪರಿಕಲ್ಪನೆ ಇರಲಿಲ್ಲ. ನಮ್ಮ ದೇಶದ ಆಯುರ್ವೇದ ಪದ್ಧತಿಯಲ್ಲಿ ಹಲವು ಬಗೆಯ ಅನಾರೋಗ್ಯಕ್ಕೆ ಇಂತಿಂಥ ಆಸನ ಮಾಡಬೇಕು ಎಂದು ಉಲ್ಲೇಖಿಸಲಾಗಿದೆ. ಯೋಗಾಭ್ಯಾಸದಲ್ಲಿ ಇರುವ ಕೆಲವು ಆಸನಗಳನ್ನು ಮಾಡಿಯೇ ಅದೆಷ್ಟೊ ತೊಂದರೆಗಳನ್ನು ಕಡಿಮೆ ಮಾಡಿಕೊಂಡವರ ಉದಾಹರಣೆಗಳೂ ಇವೆ. 2015ರಲ್ಲಿ ಭಾರತ ಯೋಗವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಚುರ ಪಡಿಸುವ ಜೊತೆಗೆ ಯೋಗದ ವಿವಿಧ ಆಸನಗಳ ಮಹತ್ವವನ್ನೂ ಸಾರಿದೆ. ಆಸನಗಳಿಂದ ಅನಾರೋಗ್ಯ ಪರಿಹಾರ ಮಾಡಿಕೊಳ್ಳಬಹುದು ಎಂಬುದನ್ನೂ ಲೋಕಕ್ಕೆ ತಿಳಿಸಿತು. ಅಷ್ಟೇ ಅಲ್ಲ, ಧ್ಯಾನ, ಪ್ರಾಣಾಯಾಮಗಳು ದೇಹಕ್ಕೆ ಕೊಡುವ ಚೈತನ್ಯವನ್ನು ತೋರಿಸಿಕೊಟ್ಟಿತು. ಪಾಶ್ಚಾತ್ಯ ರಾಷ್ಟ್ರಗಳು ಯೋಗದ ಬಗ್ಗೆ ಆಕರ್ಷಿತರಾಗಲು ಇದೇ ಕಾರಣವೂ ಆಯಿತು. ಚರ್ಮಕ್ಕೆ ಸಂಬಂಧಪಟ್ಟ, ಆಹಾರ ಸಂಬಂಧಿ, ಮತ್ತಿತರ ಕಾಯಿಲೆಗಳಿಂದ ಪಾರಾಗಲು, ಒತ್ತಡದ ಬದುಕಿಂದ ಮುಕ್ತಿ ಪಡೆಯಲು ವಿದೇಶಿಯರು ಯೋಗದ ಬಗ್ಗೆ ಹೆಚ್ಚೆಚ್ಚು ಆಸಕ್ತಿ ತೋರಿಸಲು ಪ್ರಾರಂಭಿಸಿದರು. ಪ್ರಧಾನಿ ಮೋದಿಯವರು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ‘ಅಂತಾರಾಷ್ಟ್ರೀಯ ಯೋಗ ದಿನಾಚರಣೆ’ ಪ್ರಸ್ತಾಪವನ್ನು ಮುಂದಿಟ್ಟಿದ್ದರು. ಯಾಕಾಗಿ ಇದನ್ನ ಅಂತಾರಾಷ್ಟ್ರೀಯ ದಿನವನ್ನಾಗಿ ಆಚರಿಸಬೇಕು ಎಂಬುದಕ್ಕೆ ಸಮರ್ಥ ವಿವರಣೆಯನ್ನೂ ಭಾರತ ಕೊಟ್ಟಿದೆ. ಅದನ್ನು ವಿಶ್ವ ಸಂಸ್ಥೆ ಒಪ್ಪಿಕೊಂಡು, ಸದಸ್ಯ ರಾಷ್ಟ್ರಗಳು ಅನುಮೋದಿಸಿವೆ. ಆಗಿನಿಂದಲ ಇಲ್ಲಿಯವರೆಗೆ ಭಾರತ, ಯೋಗಕ್ಕೆ ಸಂಬಂಧಪಟ್ಟ ಹಲವು ಕಾರ್ಯಕ್ರಗಳನ್ನು ಆಯೋಜಿಸುತ್ತಿದೆ. ವಿದೇಶಗಳಲ್ಲೂ ಯೋಗದ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ಅದರ ಮಹತ್ವವನ್ನು ಸಾರುತ್ತಿದೆ.

  • ಬಾಹ್ಯಾಕಾಶದಲ್ಲಿ ಕ್ರಿಮಿ ಕಾಟ – ಅಪಾಯದಲ್ಲಿ ಸುನಿತಾ ವಿಲಿಯಮ್ಸ್!

    ಬಾಹ್ಯಾಕಾಶದಲ್ಲಿ ಕ್ರಿಮಿ ಕಾಟ – ಅಪಾಯದಲ್ಲಿ ಸುನಿತಾ ವಿಲಿಯಮ್ಸ್!

    ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ (ISS) ಭಾರತ ಮೂಲದ ಗಗನಯಾನಿ ಸುನೀತಾ ವಿಲಿಯಮ್ಸ್ ಸೇರಿದಂತೆ 9 ಮಂದಿಯ ತಂಡಕ್ಕೆ ಅಪಾಯ ಎದುರಾಗಿದೆ ಎಂದು ವರದಿಗಳು ತಿಳಿಸಿವೆ . ನಾಸಾದ ಗಗನಯಾತ್ರಿಕರಾದ ಸುನೀತಾ ವಿಲಿಯಮ್ಸ್ (Sunita Williams) ಹಾಗೂ ಬುಚ್ ವಿಲ್ಮೋರ್ ಅವರು ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯಲ್ಲಿ ಇತ್ತೀಚೆಗೆ ಬಾಹ್ಯಾಕಾಶ ನಿಲ್ದಾಣವನ್ನು ತಲುಪಿದ್ದರು. ಆದರೆ ಅಲ್ಲಿ ‘ಸ್ಪೇಸ್ ಬಗ್’ (ಬಾಹ್ಯಾಕಾಶ ಕ್ರಿಮಿ) ಕಾಟ ಶುರುವಾಗಿದೆ. ಇದು ಬಾಹ್ಯಾಕಾಶದಲ್ಲಿ ವಾಸ್ತವ್ಯ ಹೂಡಿರುವ ಸಿಬ್ಬಂದಿಯಲ್ಲಿ ಸೋಂಕು ತಗುಲಿ ಆರೋಗ್ಯ ಸಮಸ್ಯೆ ಉಂಟು ಮಾಡಬಹುದು ಎಂಬ ಆತಂಕ ಹುಟ್ಟಿಸಿದೆ.

    ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ-ಮದ್ರಾಸ್ (ಐಐಟಿ-ಮದ್ರಾಸ್) ಮತ್ತು ನಾಸಾದ ಜೆಟ್ ಪ್ರೊಪಲ್ಷನ್ ಲ್ಯಾಬೊರೇಟರಿ (ಜೆಪಿಎಲ್) ಸಂಶೋಧಕರು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ಐಎಸ್‌ಎಸ್) ಪತ್ತೆಯಾದ ಮಲ್ಟಿಡ್ರಗ್-ನಿರೋಧಕ ರೋಗಕಾರಕವಾದ ‘ಸೂಪರ್‌ಬಗ್’ ಕುರಿತು ಪ್ರಮುಖ ಅಧ್ಯಯನವನ್ನು ನಡೆಸುತ್ತಿದ್ದಾರೆ.

    ಸೂಪರ್‌ಬಗ್ ಎಂದರೇನು?
    ಬಾಹ್ಯಾಕಾಶ ದೋಷವು ಬಾಹ್ಯಾಕಾಶ ಜೀವಿ ಅಲ್ಲ. ಆದರೆ ಗಗನಯಾತ್ರಿಗಳು ISS ಅನ್ನು ತಲುಪಿದಾಗ ಭೂಮಿಯಿಂದ ಬಾಹ್ಯಾಕಾಶಕ್ಕೆ ಪ್ರಯಾಣಿಸಿ ನಂತರ ಅಲ್ಲಿ ರೂಪಾಂತರಗೊಂಡ ಸಾಮಾನ್ಯ ದೋಷವಾಗಿದೆ.

    ಸೂಪರ್‌ಬಗ್‌ಗಳು ಯಾವುವು?
    ಸೂಪರ್‌ಬಗ್‌ಗಳು ಬ್ಯಾಕ್ಟೀರಿಯಾದ ತಳಿಗಳಾಗಿವೆ. ಅದು ಬಹು ಪ್ರತಿಜೀವಕಗಳಿಗೆ ನಿರೋಧಕವಾಗಿದೆ. ಇದು ಯಾವುದೇ ಆಂಟಿ ಬಯೋಟಿಕ್‌ ಔಷಧಗಳಿಗೆ ಬಗ್ಗುವುದಿಲ್ಲ. ಅಲ್ಲದೇ ಗಂಭೀರವಾದ ಆರೋಗ್ಯ ಅಪಾಯಗಳನ್ನು ಉಂಟುಮಾಡುತ್ತದೆ. ವೈದ್ಯಕೀಯ ಸಂಪನ್ಮೂಲಗಳು ಸೀಮಿತವಾಗಿರುವ ಬಾಹ್ಯಾಕಾಶದಲ್ಲಿ, ಸೂಪರ್‌ಬಗ್‌ಗಳ ಉಪಸ್ಥಿತಿ ಅತ್ಯಂತ ಅಪಾಯಕಾರಿಯಾಗಿದೆ.

    ಎಂಟರೊಬ್ಯಾಕ್ಟರ್ ಬುಗಾಂಡೆನ್ಸಿಸ್, ಅನೇಕ ಔಷಧಿಗಳಿಗೆ ಅದರ ಪ್ರತಿರೋಧಕ್ಕೆ ಹೆಸರುವಾಸಿಯಾದ ಸಾಮಾನ್ಯ ನೊಸೊಕೊಮಿಯಲ್ ಬ್ಯಾಕ್ಟೀರಿಯ ಆಗಿದೆ. ಈ ಸೂಪರ್‌ಬಗ್ ISSನ ವಿವಿಧ ಮೇಲ್ಮೈಗಳಲ್ಲಿ ಕಂಡುಬಂದಿದೆ. ಇದು ಗಗನಯಾತ್ರಿಗಳ ಆರೋಗ್ಯ ಮತ್ತು ಸುರಕ್ಷತೆಗೆ ಒಂದು ಅನನ್ಯ ಸವಾಲನ್ನು ಒಡ್ಡುತ್ತದೆ.

    ಸೂಪರ್‌ಬಗ್‌ಗಳು ಹೇಗೆ ಪರಿಣಾಮ ಬೀರುತ್ತವೆ?
    ಭಾರತೀಯ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಮತ್ತು ಅವರ ಸಹೋದ್ಯೋಗಿಗಳು ಸೇರಿದಂತೆ ISS ನಲ್ಲಿರುವ ಗಗನಯಾತ್ರಿಗಳು ಈ ಸೂಪರ್‌ಬಗ್‌ನ ಉಪಸ್ಥಿತಿಯಿಂದಾಗಿ ಹೆಚ್ಚಿನ ಆರೋಗ್ಯ ಅಪಾಯಗಳನ್ನು ಎದುರಿಸುತ್ತಾರೆ. ಉಸಿರಾಟದ ವ್ಯವಸ್ಥೆಗೆ ಸೋಂಕು ತಗುಲಿಸುವ ಬ್ಯಾಕ್ಟೀರಿಯಾಗಳು ISSನ ಮುಚ್ಚಿದ ಪರಿಸರಕ್ಕೆ ಹೊಂದಿಕೊಂಡಿವೆ.  ಸೂಕ್ಷ್ಮ ಗುರುತ್ವಾಕರ್ಷಣೆ, ವಿಕಿರಣ ಮತ್ತು ಇಂಗಾಲದ ಡೈಆಕ್ಸೈಡ್ ಮಟ್ಟಗಳಂತಹ ಬಾಹ್ಯಾಕಾಶದ ವಿಶಿಷ್ಟ ಪರಿಸ್ಥಿತಿಗಳುಈ ರೋಗಗಳು ಅಪಾಯಕಾರಿಯಾಗಿ ಬೆಳೆಯುವಲ್ಲಿ ಸಹಕರಿಸುತ್ತವೆ.

    ಇದು ಸಾಮಾನ್ಯವಾಗಿ ಕರುಳಿನಲ್ಲಿ ಮತ್ತು ಇತರ ಸ್ಥಳಗಳಲ್ಲಿ ಕಂಡುಬರುತ್ತದೆ. ಇದು ಆರೋಗ್ಯವಂತ ವ್ಯಕ್ತಿಗೆ ಯಾವುದೇ ಅಪಾಯವನ್ನು ಉಂಟುಮಾಡುವುದಿಲ್ಲ. ಇದು ದುರ್ಬಲ ಪ್ರತಿರಕ್ಷಣಾ ವ್ಯವಸ್ಥೆಯನ್ನು ಹೊಂದಿರುವವರಿಗೆ ಮಾತ್ರ ಅಪಾಯವನ್ನುಂಟುಮಾಡುತ್ತದೆ. ಏಕೆಂದರೆ ಅದು ಇತರ ಜೀನೋಮ್‌ಗಳಿಗೆ ಅಂಟಿಕೊಂಡು ಪ್ರತಿರಕ್ಷಣಾ ವ್ಯವಸ್ಥೆಯನ್ನು ಇನ್ನಷ್ಟು ದುರ್ಬಲಗೊಳಿಸುತ್ತದೆ ಮತ್ತು ಸೋಂಕುಗಳಿಗೆ ಕಾರಣವಾಗುತ್ತದೆ. ಬಾಹ್ಯಾಕಾಶದಲ್ಲಿ ಬ್ಯಾಕ್ಟೀರಿಯಾದ ಪುನರಾವರ್ತನೆ ಮತ್ತು ಸೋಂಕಿಗೆ ಒಳಗಾಗುವ ಸಾಮರ್ಥ್ಯವು ಹೆಚ್ಚು ಎಂದು ಬಾಹ್ಯಾಕಾಶ ವಿಜ್ಞಾನಿಗಳು ಕಂಡುಹಿಡಿದಿದ್ದಾರೆ. ಏಕೆಂದರೆ ಇದು ಸಾಮಾನ್ಯ ಔಷಧಗಳಿಗೆ ನಿರೋಧಕವಾಗಿದೆ.

    ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್ ಮತ್ತು ನಾಸಾ ಜೆಟ್ ಪ್ರೊಪಲ್ಷನ್ ಲ್ಯಾಬೊರೇಟರಿಯ ಸಂಶೋಧಕರು ಬ್ಯಾಕ್ಟೀರಿಯಾದ ಬಗ್ಗೆ ಅಧ್ಯಯನ ನಡೆಸಿದರು. ವಿವಿಧ ಸ್ಥಳಗಳಲ್ಲಿ ನಿಲ್ದಾಣದಲ್ಲಿ ಸೂಪರ್‌ಬಗ್‌ನ 13 ತಳಿಗಳು ಕಂಡುಬಂದಿವೆ. ದೋಷವು ಉಸಿರಾಟದ ವ್ಯವಸ್ಥೆಯನ್ನು ಸೋಂಕು ಮಾಡುತ್ತದೆ. ISS ನಿಯಂತ್ರಿತ ವಾತಾವರಣವನ್ನು ಹೊಂದಿರುವುದರಿಂದ ಮತ್ತು ಔಷಧಿ ಸೌಲಭ್ಯಗಳಿಗೆ ಸೀಮಿತ ಪ್ರವೇಶವಿರುವುದರಿಂದ ISS ನಲ್ಲಿ ಅದು ಹೆಚ್ಚು ಅಪಾಯಕಾರಿಯಾಗಿ ಕಾರ್ಯನಿರ್ವಹಿಸುತ್ತದೆ.. ನಾಸಾ ಪ್ರಕಾರ, ಬ್ಯಾಕ್ಟೀರಿಯಾದ ತಳಿಗಳು ಕಾಲಾನಂತರದಲ್ಲಿ ವಿಕಸನಗೊಂಡವು ಮತ್ತು ಇತರ ಸೂಕ್ಷ್ಮಜೀವಿಗಳೊಂದಿಗೆ ಸಹ-ಅಸ್ತಿತ್ವದಲ್ಲಿವೆ.

    ಮುಚ್ಚಿದ ಪರಿಸರದಲ್ಲಿ ಹುಟ್ಟುವ ಹಾಗೂ ಹೆಚ್ಚು ಶಕ್ತಿಶಾಲಿಯಾಗುವ ಸಾಮರ್ಥ್ಯ ಇದಕ್ಕಿದೆ. ‘ಸೂಪರ್‌ಬಗ್’ ಎಂದು ಸಾಮಾನ್ಯವಾಗಿ ಕರೆಯುವ ಬ್ಯಾಕ್ಟೀರಿಯಾ, ಮನುಷ್ಯನ ಉಸಿರಾಟ ವ್ಯವಸ್ಥೆ ಮೇಲೆ ದಾಳಿ ನಡೆಸುತ್ತದೆ. ಈ ಬ್ಯಾಕ್ಟೀರಿಯಾಗಳು ಆಂಟಿಬಯೊಟಿಕ್‌ಗಳಿಗೆ ಬಗ್ಗುವುದಿಲ್ಲ.

    ಇವು ಭೂಮಿಯಿಂದ ಆಚೆಗಿರುವ ಬ್ಯಾಕ್ಟೀರಿಯಾಗಳಲ್ಲ. ಆದರೆ ಭೂಮಿಯಿಂದಲೇ ಗಗನಯಾತ್ರಿಕರ ಜೊತೆ ಬಾಹ್ಯಾಕಾಶಕ್ಕೆ ತೆರಳಿ, ಮುಚ್ಚಿದ ಪರಿಸರದಲ್ಲಿ ಮತ್ತಷ್ಟು ಅಪಾಯಕಾರಿಯಾಗಿವೆ. ಸೂಕ್ಷ್ಮ ಗುರುತ್ವದ ಹಾಗೂ ಐಎಸ್‌ಎಸ್‌ನ ಮುಚ್ಚಿದ ವ್ಯವಸ್ಥೆಯು ಬ್ಯಾಕ್ಟೀರಿಯಾ ವಿಕಸನ ಹೊಂದಲು ಹಾಗೂ ಹೆಚ್ಚು ಪ್ರಬಲಗೊಳ್ಳಲು ನೆರವಾಗಿದೆ ಎಂದು ನಾಸಾ ಹೇಳಿದೆ.

    ಸುನೀತಾ ವಿಲಿಯಮ್ಸ್ ಅವರು ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯಲ್ಲಿ ಜೂನ್ 5ರಂದು ಭೂಮಿಯಿಂದ ತಮ್ಮ ಪ್ರಯಾಣ ಆರಂಭಿಸಿದರು. ಸತತ 25 ಗಂಟೆಗಳ ಪ್ರಯಾಣದ ಬಳಿಕ ಜೂನ್‌ 6ರಂದು ಐಎಸ್‌ಎಸ್‌ ತಲುಪಿದ್ದರು. ಇದು ಬಾಹ್ಯಾಕಾಶಕ್ಕೆ ಅವರ ಮೂರನೇ ಪ್ರಯಾಣವಾಗಿದೆ. ಹೊಸ ಬೋಯಿಂಗ್ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯನ್ನು ಪರೀಕ್ಷಿಸಿದ ಮೊದಲ ಮಹಿಳೆ ಎಂಬ ಹಿರಿಮೆಗೆ ಅವರು ಪಾತ್ರರಾಗಿದ್ದಾರೆ.

    ಸುನಿತಾ ವಿಲಿಯಂ 59 ವರ್ಷ ವಯಸ್ಸಿನ ಭಾರತೀಯ ಮೂಲದ ಗಗನಯಾತ್ರಿಯಾಗಿದ್ದು, ಅವರು ಜೂನ್ 18 ರಂದು ಬಾಹ್ಯಾಕಾಶದಿಂದ ಹಿಂತಿರುಗುತ್ತಾರೆ ಎಂದು ನಿರೀಕ್ಷಿಸಲಾಗಿತ್ತ., ಆದರೆ ಅವರು ಭೂಮಿಗೆ ಮರಳುವುದನ್ನು ಜೂನ್ 22ಕ್ಕೆ ಮುಂದೂಡಲಾಗುತ್ತಿದೆ. ಇದು ಬೋಯಿಂಗ್ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆ ಘೋಷಿಸಿದ ಎರಡನೇ ವಿಳಂಬವಾಗಿದೆ. ಬಾಹ್ಯಾಕಾಶ ನೌಕೆಯು ತಾಂತ್ರಿಕ ಸವಾಲುಗಳನ್ನು ಎದುರಿಸುತ್ತಿರುವ ಕಾರಣ ಬಾಹ್ಯಾಕಾಶ ನೌಕೆಯ ವಾಪಸಾತಿ ವಿಳಂಬವಾಗುತ್ತಿದೆ ಎಂದು ನಾಸಾ ತಿಳಿಸಿದೆ.

  • ನಾನು ಆರೋಗ್ಯವಾಗಿದ್ದೇನೆ: ಶಾಮನೂರು ಶಿವಶಂಕರಪ್ಪ

    ನಾನು ಆರೋಗ್ಯವಾಗಿದ್ದೇನೆ: ಶಾಮನೂರು ಶಿವಶಂಕರಪ್ಪ

    ದಾವಣಗೆರೆ: ನಾನು ಆರೋಗ್ಯವಾಗಿದ್ದೇನೆ ಎಂದು ದಾವಣಗೆರೆ (Davanagere) ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ (Shamanur Shivashankarappa) ಸಂದೇಶ ರವಾನಿಸಿದ್ದಾರೆ.

    94 ವರ್ಷದ ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ಶುಕ್ರವಾರ ಆರೋಗ್ಯದಲ್ಲಿ (Health) ಏರುಪೇರು ಉಂಟಾಗಿತ್ತು. ಕಫದ ಸಮಸ್ಯೆ ಉಂಟಾದ ಹಿನ್ನೆಲೆ ಶಾಮನೂರು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಸಂತ್ರಸ್ತೆ ಅಪಹರಣ ಪ್ರಕರಣ; ಭವಾನಿ ರೇವಣ್ಣಗೆ ಬಂಧನ ಭೀತಿ

    ಇದೀಗ ಕುಟುಂಬಸ್ಥರ ಜೊತೆ ನಗುನಗುತ್ತಾ ನಾನು ಆರೋಗ್ಯವಾಗಿದ್ದೇನೆ ಎಂದು ದಾವಣಗೆರೆ ಜನರಿಗೆ ಶಾಮನೂರು ಶಿವಶಂಕರಪ್ಪ ತಿಳಿಸಿದ್ದಾರೆ. ಇದನ್ನೂ ಓದಿ: ರೈತರಿಗೆ ರಸಗೊಬ್ಬರ, ಬಿತ್ತನೆ ಬೀಜವನ್ನ ಹೆಚ್ಚಿನ ದರದಲ್ಲಿ ಮಾರಾಟ ಮಾಡಿದ್ರೆ ಪರವಾನಗಿ ರದ್ದು: ಡಿಸಿ ಗುರುದತ್ತ ಹೆಗೆಡೆ

  • ಶಾಮನೂರು ಶಿವಶಂಕರಪ್ಪ ಆಸ್ಪತ್ರೆಗೆ ದಾಖಲು

    ಶಾಮನೂರು ಶಿವಶಂಕರಪ್ಪ ಆಸ್ಪತ್ರೆಗೆ ದಾಖಲು

    ದಾವಣಗೆರೆ: ಹಿರಿಯ ರಾಜಕಾರಣಿ ಶಾಮನೂರು ಶಿವಶಂಕರಪ್ಪ (Shamanur Shivashankarappa) ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಹಾಲಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ 94 ವರ್ಷದ ಶಾಮನೂರು ಶಿವಶಂಕರಪ್ಪ ಅವರು ಕಫದ ಸಮಸ್ಯೆಯಿಂದಾಗಿ ಅಸ್ವಸ್ಥರಾಗಿದ್ದರು. ಹೀಗಾಗಿ ಅವರನ್ನು ಇಂದು ದಾವಣಗೆರೆ ಹೈಟೆಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಚಿಕಿತ್ಸೆ ಬಳಿಕ ಶಿವಶಂಕರಪ್ಪ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಯಾವುದೇ ಆತಂಕಪಡುವ ಅಗತ್ಯವಿಲ್ಲವೆಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಕೇರಳದಲ್ಲಿ ಶತ್ರು ಸಂಹಾರ ಯಾಗ ನಡೆದಿಲ್ಲ – ದೇವಸ್ಥಾನದ ಹೇಳಿಕೆ ಬೆನ್ನಲ್ಲೇ ಸ್ಪಷ್ಟನೆ ನೀಡಿದ ಡಿಕೆಶಿ

  • ನಟ ಪ್ರಜ್ವಲ್ ದೇವರಾಜ್ ಕ್ಷೇಮವಾಗಿದ್ದಾರೆ: ಸುಳ್ಳು ಸುದ್ದಿ ಹಬ್ಬಿಸಬೇಡಿ

    ನಟ ಪ್ರಜ್ವಲ್ ದೇವರಾಜ್ ಕ್ಷೇಮವಾಗಿದ್ದಾರೆ: ಸುಳ್ಳು ಸುದ್ದಿ ಹಬ್ಬಿಸಬೇಡಿ

    ಟ ಪ್ರಜ್ವಲ್ ದೇವರಾಜ್ (Prajwal Devaraj) ಅನಾರೋಗ್ಯದ ಕುರಿತಂತೆ ಸುಳ್ಳು ಸುದ್ದಿ ಹಬ್ಬಿಸುತ್ತಿರುವವರ ವಿರುದ್ಧ ಅವರ ಕುಟುಂಬ ಗರಂ ಆಗಿದೆ. ಸೋಷಿಯಲ್ ಮೀಡಿಯಾದಲ್ಲಿ ‘ಪ್ರಜ್ವಲ್ ದೇವರಾಜ್ ಇನ್ನಿಲ್ಲ’ ಎನ್ನುವ ಪೋಸ್ಟರ್ ವೈರಲ್ ಆಗಿದೆ. ಹಾಗಾಗಿ ಸಹಜವಾಗಿಯೇ ಅಭಿಮಾನಿಗಳು ಆತಂಕದಲ್ಲಿದ್ದರು.

    ಪ್ರಜ್ವಲ್ ದೇವರಾಜ್ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ವಿಚಾರವಾಗಿ ಅವರ ಕುಟುಂಬಸ್ಥರು ಬೇಸರ ವ್ಯಕ್ತ ಪಡಿಸಿದ್ದಾರೆ. ಪ್ರಜ್ವಲ್ ಕ್ಷೇಮವಾಗಿದ್ದಾರೆ. ಅವರ ಆರೋಗ್ಯದಲ್ಲಿ (Health) ಯಾವುದೇ ಬದಲಾವಣೆ ಆಗಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು (Fake news) ವದಂತಿಗಳನ್ನ ಹಬ್ಬಿಸಲಾಗಿದೆ. ಪ್ರಜ್ವಲ್ ದೇವರಾಜ್ ಅವರ ಪೋಟೋಗಳನ್ನ ದುರ್ಬಳಕೆ ಮಾಡಲಾಗಿದೆ.

     

    ಆರೋಗ್ಯವಂತ ನಟನ ಬಗ್ಗೆ ಈ ರೀತಿಯ ವದಂತಿಗಳು ಸಲ್ಲದು. ಇದರಿಂದ ಕುಟುಂಬಸ್ಥರು ಹಾಗೂ ಅಭಿಮಾನಿಗಳನ್ನ ಆತಂಕ ಉಂಟಾಗುತ್ತದೆ. ಕಿಡಿಗೇಡಿಗಳು ಪ್ರಜ್ವಲ್ ದೇವರಾಜ್ ಆರೋಗ್ಯದ ಬಗ್ಗೆ ಅನಗತ್ಯ ಸುಳ್ಳು ವದಂತಿ ಹಬ್ಬಿಸಿದ್ದಾರೆ. ಈ ಬಗ್ಗೆ ಕಾನೂನು ಸಲಹೆ ಪಡೆದು ದೂರು ನೀಡಲು ನಿರ್ಧಾರ. ಪ್ರಜ್ವಲ್ ದೇವರಾಜ್ ಆರೋಗ್ಯವಾಗಿದ್ದಾರೆ. ಅಭಿಮಾನಿಗಳು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಪ್ರಜ್ವಲ್ ದೇವರಾಜ್ ಆಪ್ತ ಮೂಲಗಳು ಮಾಹಿತಿ ನೀಡಿವೆ.

  • ಮೋದಿಗೆ ನನ್ನ ಮೇಲೆ ಕಾಳಜಿಯಿದ್ದರೆ ಕರೆ ಮಾಡಿ ಆರೋಗ್ಯ ವಿಚಾರಿಸಬಹುದಿತ್ತು: ನವೀನ್ ಪಟ್ನಾಯಕ್

    ಮೋದಿಗೆ ನನ್ನ ಮೇಲೆ ಕಾಳಜಿಯಿದ್ದರೆ ಕರೆ ಮಾಡಿ ಆರೋಗ್ಯ ವಿಚಾರಿಸಬಹುದಿತ್ತು: ನವೀನ್ ಪಟ್ನಾಯಕ್

    -ಆರೋಗ್ಯ ಕುರಿತಾದ ವದಂತಿ ತಳ್ಳಿ ಹಾಕಿದ ಒಡಿಶಾ ಸಿಎಂ

    ಭುವನೇಶ್ವರ: ಒಡಿಶಾ ಸಿಎಂ ನವೀನ್ ಪಟ್ನಾಯಕ್ (Naveen Patnaik) ಆರೋಗ್ಯದ ಕುರಿತು ಮೋದಿ (Narendra Modi) ಹೇಳಿಕೆಗೆ ಸ್ವತಃ ಪಟ್ನಾಯಕ್ ಪ್ರತಿಕ್ರಿಯೆ ನೀಡಿದ್ದು, ಮೋದಿಗೆ ನನ್ನ ಮೇಲೆ ಕಾಳಜಿಯಿದ್ದರೆ ಕರೆ ಮಾಡಿ ಆರೋಗ್ಯ ವಿಚಾರಿಸಬಹುದಿತ್ತು ಎಂದು ತಿರುಗೇಟು ನೀಡಿದ್ದಾರೆ.

    ಪ್ರಧಾನಿ ಮೋದಿ ಒಡಿಶಾದಲ್ಲಿ (Odisha) ಸಾರ್ವಜನಿಕ ಸಭೆಯಲ್ಲಿ ಮಾತನಾಡುವಾಗ ನವೀನ್ ಪಟ್ನಾಯಕ್ ಅವರಿಗೆ ಅನಾರೋಗ್ಯ ಇದ್ದು, ಇದರ ಹಿಂದೆ ಪಿತೂರಿ ನಡೆಯುತ್ತಿದೆ. ಬಿಜೆಪಿ ಸರ್ಕಾರ ಒಡಿಶಾದಲ್ಲಿ ಅಸ್ತಿತ್ವಕ್ಕೆ ಬಂದಲ್ಲಿ ಈ ಪಿತೂರಿ ಬಗ್ಗೆ ತನಿಖೆ ನಡೆಸಲು ಸಮಿತಿ ರಚಿಸುವುದಾಗಿ ಹೇಳಿದ್ದರು. ಪ್ರಧಾನಿಯ ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ನವೀನ್ ಪಟ್ನಾಯಕ್, ಪ್ರಧಾನಿ ನರೇಂದ್ರ ಮೋದಿ ತಮ್ಮನ್ನು ಅವರ ಉತ್ತಮ ಸ್ನೇಹಿತ ಎಂದು ಸಾರ್ವಜನಿಕವಾಗಿ ಹೇಳಿದ್ದಾರೆ. ಈ ರೀತಿ ಇದ್ದಾಗ ತಮಗೆ ಅವರು ಕರೆ ಮಾಡಿ ಆರೋಗ್ಯದ ಬಗ್ಗೆ ವಿಚಾರಿಸಬಹುದಿತ್ತು. ಆದರೆ ಒಡಿಶಾದಲ್ಲಿರುವ ಹಲವು ಬಿಜೆಪಿಗರು ಹಾಗೂ ದೆಹಲಿಯಲ್ಲಿರುವವರು ನನ್ನ ಆರೋಗ್ಯದ ಬಗ್ಗೆ ವದಂತಿ ಹಬ್ಬಿಸುತ್ತಿದ್ದಾರೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಕನ್ಯಾಕುಮಾರಿಯಲ್ಲಿನ ಮೋದಿ ಧ್ಯಾನಕ್ಕೆ ದೀದಿ ಕಟು ಟೀಕೆ

     

    ನಾನು ಪರಿಪೂರ್ಣ ಆರೋಗ್ಯ ಹೊಂದಿದ್ದೇನೆ ಮತ್ತು ಕಳೆದ ಒಂದು ತಿಂಗಳಿನಿಂದ ನಾನು ರಾಜ್ಯದಲ್ಲಿ ಪ್ರಚಾರ ಮಾಡುತ್ತಿದ್ದೇನೆ ಎಂದು ಪ್ರಧಾನಿಗೆ ಭರವಸೆ ನೀಡುತ್ತೇನೆ ಎಂದು ಪಟ್ನಾಯಕ್ ತಿಳಿಸಿದರು. ಇದನ್ನೂ ಓದಿ: ಪೆನ್‌ಡ್ರೈವ್ ಹಂಚಿಕೆ ಪ್ರಕರಣ- ನವೀನ್ ಗೌಡ, ಚೇತನ್ ಗೌಡ 3 ದಿನ SIT ವಶಕ್ಕೆ

    ಚುನಾವಣಾ ರ‍್ಯಾಲಿಯೊಂದರಲ್ಲಿ ನವೀನ್ ಪಟ್ನಾಯಕ್ ಅವರ ಕೈ ನಡುಗುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ಪಾಟ್ನಾಯಕ್ ಅವರ ಆರೋಗ್ಯ ಹದಗೆಟ್ಟಿದೆ ಎಂಬ ಊಹಾಪೋಹಗಳು ಎಲ್ಲೆಡೆ ಹಬ್ಬಿತ್ತು. ಇದೀಗ ಈ ಎಲ್ಲಾ ಊಹಾಪೋಹಗಳಿಗೆ ನವೀನ್ ಪಟ್ನಾಯಕ್ ತೆರೆ ಎಳೆದಿದ್ದಾರೆ. ಇದನ್ನೂ ಓದಿ: ಕಾಲೇಜಿನಲ್ಲಿ ಜೈ ಶ್ರೀರಾಮ್‌ ಹಾಡು ಹಾಕಿದ್ದಕ್ಕೆ ಮಾರಾಮಾರಿ- 17ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ FIR

    ಮೋದಿ ಹೇಳಿದ್ದೇನು?
    ಒಡಿಶಾದ ಮಯೂರ್‌ಭಂಜ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಇತ್ತೀಚಿನ ದಿನಗಳಲ್ಲಿ ನವೀನ್ ಬಾಬು ಅವರ ಎಲ್ಲಾ ಹಿತೈಷಿಗಳು ತುಂಬಾ ಚಿಂತಿತರಾಗಿದ್ದಾರೆ. ಕಳೆದ ವರ್ಷ ನವೀನ್ ಬಾಬು ಅವರ ಆರೋಗ್ಯವು ಹೇಗೆ ಹದಗೆಟ್ಟಿದೆ ಎಂಬುದನ್ನು ನೋಡಿ ಅವರು ತುಂಬಾ ಚಿಂತಿತರಾಗಿದ್ದಾರೆ. ನವೀನ್ ಬಾಬು ಅವರ ಆಪ್ತರು ನನ್ನನ್ನು ಭೇಟಿಯಾದಾಗಲೆಲ್ಲಾ ನವೀನ್ ಬಾಬು ಅವರ ಆರೋಗ್ಯದ ಬಗ್ಗೆ ಚರ್ಚಿಸುತ್ತಾರೆ. ನವೀನ್ ಬಾಬು ಅವರು ಸ್ವಂತವಾಗಿ ಏನನ್ನೂ ಮಾಡಲು ಸಾಧ್ಯವಿಲ್ಲ. ಅವರು ಎಲ್ಲದಕ್ಕೂ ಬೇರೆಯವರ ಮೇಲೆ ಅವಲಂಬಿತರಾಗಬೇಕಾಗಿದೆ. ನವೀನ್ ಬಾಬು ಅವರ ಅನಾರೋಗ್ಯದ ಹಿಂದೆ ಕೆಲವರ ಷಡ್ಯಂತ್ರವಿದೆ ಎಂಬ ಅನುಮಾನ ನಮಗಿದೆ. ಇದನ್ನೂ ಓದಿ: ಹಗ್ಗಜಗ್ಗಾಟದಲ್ಲಿ ಚೀನಿಯರನ್ನು ಸೋಲಿಸಿದ ಭಾರತೀಯ ಸೈನಿಕರು

    ಈ ನಿಗೂಢವನ್ನು ಬಯಲಿಗೆಳೆಯುವುದು ಮುಖ್ಯವಾದ್ದರಿಂದ ಜೂನ್ 10ರಂದು ಒಡಿಶಾದಲ್ಲಿ ಬಿಜೆಪಿ ಸರ್ಕಾರ ರಚನೆಯಾದ ಬಳಿಕ ನವೀನ್ ಬಾಬು ಅವರ ಆರೋಗ್ಯ ಏಕಾಏಕಿ ಹದಗೆಡಲು ಕಾರಣವೇನು ಎಂದು ತನಿಖೆ ನಡೆಸಲಿದೆ ಎಂದು ಹೇಳಿದ್ದರು. ಇದನ್ನೂ ಓದಿ: ಸಹೋದರನನ್ನು ಮದುವೆಯಾಗಿದ್ದಕ್ಕೆ ಮಹಿಳೆಯ ಕುಟುಂಬವನ್ನೇ ನಾಶಗೈದ!

  • ಪಾರ್ಕಿನ್ಸನ್ ರೋಗಕ್ಕೂ ನಿದ್ದೆಗೂ ಇದೆ ನಂಟು; ಏನಿದು ಕಾಯಿಲೆ? 

    ಪಾರ್ಕಿನ್ಸನ್ ರೋಗಕ್ಕೂ ನಿದ್ದೆಗೂ ಇದೆ ನಂಟು; ಏನಿದು ಕಾಯಿಲೆ? 

    ಪ್ರತಿಯೊಬ್ಬ ಮನುಷ್ಯನಿಗೂ ಒಂದಲ್ಲ ಒಂದು ಕಾಯಿಲೆ ಇರುತ್ತದೆ. ಅದೇ ರೀತಿ ಪ್ರಪಂಚದಲ್ಲಿ ದಿನಕಳೆದಂತೆ ಹೊಸಹೊಸ ಕಾಯಿಲೆಗಳೂ ಹುಟ್ಟಿಕೊಳ್ಳುತ್ತವೆ. ಕೆಲವರಿಗೆ ಸಣ್ಣವಯಸ್ಸಿನಲ್ಲೇ ಕಾಯಿಲೆಗಳು ಬಾಧಿಸಿದರೇ ಇನ್ನೂ ಕೆಲವರಲ್ಲಿ ವಯಸ್ಸಾದ ಮೇಲೆ ಕಾಣಿಸಿಕೊಳ್ಳುತ್ತದೆ. ಇಂತಹ ಕಾಯಿಲೆಗಳಲ್ಲಿ ಪಾರ್ಕಿನ್ಸನ್‌ ಕಾಯಿಲೆ ಕೂಡಾ ಒಂದು. ಪಾರ್ಕಿನ್ಸನ್ (Parkinson’s Disease) ಒಂದು ಅಪಾಯಕಾರಿ ಕಾಯಿಲೆಯಾಗಿದ್ದು, ಇದರ ಗುಣಲಕ್ಷಣಗಳ ಬಳಿಕ ಈ ರೋಗ ತೀವ್ರ ಸ್ವರೂಪವನ್ನು ಪಡೆದುಕೊಳ್ಳುತ್ತದೆ. ಇದರಿಂದ ಬಳಲುತ್ತಿರುವ ವ್ಯಕ್ತಿ ತನ್ನ ದೇಹದ ಚಲನೆಯ ಮೇಲೆ ನಿಯಂತ್ರಣ ಹೊಂದಿರುವುದಿಲ್ಲ. ಈ ಕಾಯಿಲೆ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳ ಕುರಿತು ಇಲ್ಲಿ ಮಾಹಿತಿ ನೀಡಲಾಗಿದೆ.

    ಪಾರ್ಕಿನ್ಸನ್ ಕಾಯಿಲೆ ಎಂದರೇನು?
    ಪಾರ್ಕಿನ್ಸನ್ ರೋಗವು ಒಂದು ಅಸ್ವಸ್ಥತೆಯಾಗಿದ್ದು, ತುಂಬಾ ಅಪಾಯಕಾರಿ ರೋಗ ಇದಾಗಿದೆ. ಈ ರೋಗದಲ್ಲಿ, ಮೆದುಳಿನ (Brain) ನರಗಳು ಒಡೆಯಲು ಪ್ರಾರಂಭಿಸುತ್ತವೆ ಮತ್ತು ನಾಶವಾಗುತ್ತವೆ. ಆದ್ದರಿಂದ, ಈ ರೋಗದ ಪರಿಣಾಮವು ನರವ್ಯೂಹ ಅಥವಾ ನರಗಳಿಂದ ನಿಯಂತ್ರಿಸಲ್ಪಡುವ ದೇಹದ ಎಲ್ಲಾ ಭಾಗಗಳ ಮೇಲೆ ಪರಿಣಾಮ ಬೀರುತ್ತದೆ.

    ಪಾರ್ಕಿನ್ಸನ್ ರೋಗಲಕ್ಷಣಗಳು ಆರಂಭಿಕ ಹಂತದಲ್ಲಿ ಹೆಚ್ಚು ತೀವ್ರವಾಗಿರುವುದಿಲ್ಲ. ಈ ಕಾರಣದಿಂದಾಗಿ ಈ ರೋಗವನ್ನು ಪತ್ತೆಹಚ್ಚಲು ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಇದು ಗುಣಪಡಿಸಲಾಗದ ರೋಗವಾಗಿದೆ. ಆದರೆ ಅದರ ರೋಗಲಕ್ಷಣಗಳನ್ನು ಔಷಧಿಗಳ ಮೂಲಕ ಕಡಿಮೆ ಮಾಡಬಹುದು.

    ಪಾರ್ಕಿನ್ಸನ್ ಕಾಯಿಲೆಯು ಒಂದು ರೀತಿಯ ನರವೈಜ್ಞಾನಿಕ ಸಮಸ್ಯೆಯಾಗಿದ್ದು, ಅದು ಚಲನೆಯ ಮೇಲೆ ಪರಿಣಾಮ ಬೀರುತ್ತದೆ. ಮೆದುಳಿನಲ್ಲಿನ ಕೆಲವು ನರ ಕೋಶಗಳು, ವಿಶೇಷವಾಗಿ ಡೋಪಮೈನ್ ಎಂಬ ರಾಸಾಯನಿಕವನ್ನು ಉತ್ಪಾದಿಸಲು ಕಾರಣವಾದ ನರ ಕೋಶಗಳು ಹಾನಿಗೊಳಗಾದಾಗ ಅಥವಾ ಸಾಯುವಾಗ ಇದು ಸಂಭವಿಸುತ್ತದೆ. ಚಲನೆಯನ್ನು ಸಂಘಟಿಸಲು ಡೋಪಮೈನ್ ಅತ್ಯಗತ್ಯ. ಆದ್ದರಿಂದ ಡೋಪಮೈನ್ ಮಟ್ಟದಲ್ಲಿನ ಇಳಿಕೆಯು ನಡುಕ, ಬಿಗಿತ, ಚಲನೆಯ ನಿಧಾನತೆ ಮತ್ತು ಸಮತೋಲನ ಮತ್ತು ಸಮನ್ವಯದ ತೊಂದರೆಗಳಂತಹ ರೋಗಲಕ್ಷಣಗಳಿಗೆ ಕಾರಣವಾಗುತ್ತದೆ. 

    ಹೆಸರು ಹೇಗೆ ಬಂತು?
    ಪಾರ್ಕಿನ್ಸನ್​ ಕಾಯಿಲೆಯ ಬಗ್ಗೆ ಜಾಗೃತಿ ಮೂಡಿಸಲು, ಡಾ. ಜೇಮ್ಸ್ ಪಾರ್ಕಿನ್ಸನ್​ ಅವರ ಜನ್ಮದಿನದ ನೆನಪಿಗಾಗಿ ಪ್ರತಿ ವರ್ಷದ ಏಪ್ರಿಲ್ 11 ಅನ್ನು ʼವಿಶ್ವಪಾರ್ಕಿನ್ಸನ್ ರೋಗ ಜಾಗೃತಿ ದಿನʼ ಎಂದು ಗುರುತಿಸಲಾಗಿದೆ. ಜೇಮ್ಸ್ ಪಾರ್ಕಿನ್ಸನ್ 1817 ರಲ್ಲಿ ಈ ಅಸ್ವಸ್ಥತೆಯ ಬಗ್ಗೆ ವಿವರವಾಗಿ ವಿವರಿಸಿದರು. ಆದ್ದರಿಂದ ಈ ರೋಗ ಅವರ ಹೆಸರಿನಿಂದ ಗುರುತಿಸಲ್ಪಟ್ಟಿತು.

    ಈ ರೋಗ ಯಾವಾಗ ಬರುತ್ತದೆ?
    ಇದು ವಯಸ್ಸಿಗೆ ಸಂಬಂಧಿಸಿದ ಕಾಯಿಲೆ ಆಗಿದ್ದು 40ರ ವಯಸ್ಸಿನಲ್ಲಿರುವವರಿಗೆ ಬಂದರೆ ಅದು ಅನುವಂಶಿಕ ಎಂದು ಹೇಳಬಹುದು.ಆದರೆ 20 ವರ್ಷ ವಯಸ್ಸಿನಂತಹ ವ್ಯಕ್ತಿಯು ಸಹ ಈ ಸಮಸ್ಯೆಯನ್ನು ಹೊಂದುವ ಸಾಧ್ಯತೆ ಇದೆ. ಅಲ್ಲದೆ ಈ ರೋಗವು ಮಹಿಳೆಯರಿಗಿಂತ ಪುರುಷರಲ್ಲಿ ಹೆಚ್ಚು ಕಾಣಿಸುತ್ತದೆ. ಮೆದುಳಿನಲ್ಲಿ ಒಂದು ನರ ಮತ್ತೊಂದು ನರದ ನಡುವೆ ಮಾಹಿತಿ ಸಂವಹನ ರವಾನೆ ಆಗಲು ಪ್ರೋಟೀನ್ ಗಳು ಇರುತ್ತವೆ. ಈ ಪ್ರೋಟೀನ್ ಗಳಲ್ಲಿ ಆಲ್ಫಾ – ಸಿ ನ್ಯೂಕ್ಲಿನ್ ಎಂಬ ಪ್ರೋಟಿನ್ ಇದೆ. ಆಲ್ಫಾ ಸಿ ನ್ಯೂಕ್ಲಿನ್ ಒಂದು ನರ ಕೋಶದ ಪ್ರೋಟಿನ್ ಆಗಿದೆ. ಈ ನರಕೋಶಕ್ಕೆ ತೊಂದರೆಯಾದಾಗ ಮಾನವನ ಮೆದುಳಿಗೆ ತೊಂದರೆ ಕೊಡುತ್ತದೆ. ಆಗ ಪಾರ್ಕಿನ್ಸನ್ ಕಾಯಿಲೆ ಉಂಟಾಗುತ್ತದೆ.

    ಕಾಯಿಲೆ ಪತ್ತೆ ಹಚ್ಚುವುದು ಹೇಗೆ?
    ಈ ಕಾಯಿಲೆಯನ್ನು ಪತ್ತೆ ಹಚ್ಚಲು ಅನೇಕ ಮಾರ್ಗಗಳಿವೆ. ರಕ್ತ ಪರೀಕ್ಷೆ, CT ಸ್ಕ್ಯಾನ್, ಡಿಎನ್ಎ ಪರೀಕ್ಷೆ , MRI, PET ಸ್ಕ್ಯಾನಿಂಗ್‌ ಮುಖಾಂತರ ಈ ರೋಗವನ್ನು ಪತ್ತೆ ಹಚ್ಚಬಹುದಾಗಿದೆ.

    ಗುಣಲಕ್ಷಣಗಳೇನು?
    *ಮಾತು ಸರಿಯಾಗಿ ಆಡದೇ ಇರುವುದು
    *ಕೈಕಾಲುಗಳು ನಡುಗುವುದು
    *ಕೈ ಕಾಲು ಸರಾಗವಾಗಿ ಬಳಕೆ ಮಾಡಲು ಸಾಧ್ಯವಾಗದೆ ಇರುವಂತದ್ದು
    *ಸ್ನಾಯುಗಳ ಬಿಗಿತ
    *ನಡೆಯಬೇಕಾದರೆ ಸುಲಭವಾಗಿ ನಡೆಯಲು ಸಾಧ್ಯವಾಗದಿರುವುದು

    ಪಾರ್ಕಿನ್ಸನ್ ರೋಗಿಯಲ್ಲಿ ಈ ಚಿಹ್ನೆಗಳೂ ಕಂಡುಬರುತ್ತವೆ:
    ಮಲಬದ್ಧತೆ, ನಿದ್ರಾಹೀನತೆ, ಖಿನ್ನತೆ, ಆಲೋಚಿಸಲು ಕಷ್ಟವಾಗುವುದು, ಸ್ಪಷ್ಟವಾಗಿ ಮಾತನಾಡಲು ಸಾಧ್ಯವಾಗೋದಿಲ್ಲ, ಲಾಲಾರಸ, ದೇಹದಲ್ಲಿ ಬಿಗಿತ, ನಡೆಯಲು ಕಷ್ಟವಾಗುವುದು, ಸ್ನಾಯು ದೌರ್ಬಲ್ಯ, ಅಗಿಯಲು ಮತ್ತು ನುಂಗಲು ಕಷ್ಟವಾಗುವುದು, ಅನಿಯಂತ್ರಿತ ಮೂತ್ರಕೋಶ, ಲೈಂಗಿಕ ಅಪಸಾಮಾನ್ಯ ಕ್ರಿಯೆ ಈ ರೋಗದ ಲಕ್ಷಣಗಳಾಗಿವೆ. 

    ಚಿಕಿತ್ಸೆ ಹೇಗೆ?
    ಈ ಕಾಯಿಲೆಗೆ ತನ್ನದೇ ಆದ ಚಿಕಿತ್ಸಾ ವಿಧಾನಗಳು ಇವೆ. ಈ ಕಾಯಿಲೆಗೆ ಮೊದಲು ಯಾವುದೇ ರೀತಿಯ ಚಿಕಿತ್ಸೆ ಇಲ್ಲದೆ ಸಾಯಬೇಕಾದ ಪರಿಸ್ಥಿತಿ ಇತ್ತು. ಆದರೆ ಈಗ ಈ ಕಾಯಿಲೆಯ ರೋಗಲಕ್ಷಣಗಳನ್ನು ಹಲವಾರು ರೀತಿಯ ಚಿಕಿತ್ಸೆಗಳನ್ನು ನೀಡುವ ಮೂಲಕ ಗುಣಪಡಿಸಬಹುದಾಗಿದೆ. ನ್ಯೂರಾನ್ ಮತ್ತು ಪ್ರೋಟೀನ್ ಗಳ ಸಂಖ್ಯೆ ಕಡಿಮೆ ಆದಾಗ ಅವುಗಳನ್ನು ಚಿಕಿತ್ಸಾ ಮೂಲಕ ಪೂರೈಸಬಹುದು ಅದಕ್ಕೆ ಲೇವಡೋಪ ಎಂದು ಕರೆಯುತ್ತೇವೆ. ಇದರಲ್ಲಿ ಐದರಿಂದ ಆರು ರೀತಿಯ ವರ್ಗಗಳಲ್ಲಿ ಔಷಧಿಗಳು ಬರುತ್ತವೆ.

    ಕಳೆದ 60 ಕ್ಕೂ ಹೆಚ್ಚು ವರ್ಷಗಳಲ್ಲಿ, ಪಾರ್ಕಿನ್ಸನ್‌  ಕಾಯಿಲೆಯ ಚಿಕಿತ್ಸೆಯು ಬದಲಾಗುತ್ತಾ ಇದೆ. ಇದು ಪ್ರಪಂಚದಾದ್ಯಂತ ಲಕ್ಷಾಂತರ ಜನರ ಜೀವನದ ಗುಣಮಟ್ಟದಲ್ಲಿ ಉತ್ತಮ ಸುಧಾರಣೆಗೆ ಕಾರಣವಾಗಿದೆ. ಪಾರ್ಕಿನ್ಸನ್‌ ಕಾಯಿಲೆಯು ಉತ್ತಮ ಚಿಕಿತ್ಸಾ ಆಯ್ಕೆಗಳನ್ನು ಹೊಂದಿದೆ. ವ್ಯಾಯಾಮಗಳು ಮತ್ತು ಸಂತೋಷದ ಜೀವನಶೈಲಿಯು ಪಾರ್ಕಿನ್ಸನ್​ನ ನಿರ್ವಹಣೆಯಲ್ಲಿ ಪ್ರಮುಖ ಅಂಶವಾಗಿದೆ. ಆರಂಭಿಕ ಹಂತಗಳಲ್ಲಿ, ಉತ್ತಮ ವ್ಯಾಯಾಮಗಳು ಮತ್ತು ಲೆವೊಡೋಪಾ, ಡೋಪಮೈನ್ ಅಗೊನಿಸ್ಟ್‍ಗಳಂತಹ ಮೌಖಿಕ ಔಷಧಿಗಳು ಉತ್ತಮವಾಗಿ ಕೆಲಸ ಮಾಡುತ್ತದೆ. ಈ ಕಾಯಿಲೆ ತೀವ್ರ ಸ್ವರೂಪ ಪಡೆದ ಬಳಿಕ ಕೆಲವೊಂದು ಸರ್ಜರಿ, ಟ್ರೀಟ್‌ಮೆಂಟ್‌ಗಳನ್ನು ತೆಗೆದುಕೊಳ್ಳಬೇಕಾಗುತ್ತದೆ.

    ಸಮಯ ಕಳೆದಂತೆ, ಹೆಚ್ಚು ಸ್ಥಿರವಾದ ಹಂತದ ಚಿಕಿತ್ಸೆಗಳನ್ನು ಹೊಂದುವ ಅವಶ್ಯಕತೆಯಿದೆ. ಮತ್ತು ಈ ಹಂತದಲ್ಲಿ, ನಿರಂತರ ಡೋಪಮಿನರ್ಜಿಕ್ ಪ್ರಚೋದನೆ ಚಿಕಿತ್ಸೆಗಳು ಪ್ರಮುಖ ಪಾತ್ರವಹಿಸುತ್ತದೆ. ಇವುಗಳಲ್ಲಿ ಡೀಪ್ ಬ್ರೇನ್ ಸ್ಟಿಮ್ಯುಲೇಶನ್ (ಡಿಬಿಎಸ್) ಚಿಕಿತ್ಸೆ, ಅಪೊಮಾರ್ಫಿನ್ ಪಂಪ್ ಥೆರಪಿ, ಲೆವೊಡೋಪಾ ಕಾರ್ಬಿಡೋಪಾ ಇಂಟೆಸ್ಟೈನಲ್ ಜೆಲ್ ಇನ್ಫ್ಯೂಷನ್ ಥೆರಪಿ ಸೇರಿವೆ. ಈ ಹೆಚ್ಚಿನ ಚಿಕಿತ್ಸೆಗಳು ಭಾರತದಲ್ಲಿ ಲಭ್ಯವಿದೆ.

    ಚಿಕಿತ್ಸೆಗೆ ಎಷ್ಟು ಹಣ ಖರ್ಚಾಗುತ್ತದೆ?
    ಭಾರತದಲ್ಲಿ ಪಾರ್ಕಿನ್ಸನ್ ಕಾಯಿಲೆಯ ಚಿಕಿತ್ಸೆಗಳ ವೆಚ್ಚವು ಸ್ಥಿತಿಯ ಪ್ರಕಾರ ಮತ್ತು ತೀವ್ರತೆಯನ್ನು ಅವಲಂಬಿಸಿರುತ್ತದೆ.  ಅಲ್ಲದೇ ಆಯ್ಕೆ ಮಾಡಿದ ಚಿಕಿತ್ಸೆಯ ಪ್ರಕಾರವನ್ನು ಅವಲಂಬಿಸಿರುತ್ತದೆ. ಪಾರ್ಕಿನ್ಸನ್ ಕಾಯಿಲೆಯ ಶಸ್ತ್ರಚಿಕಿತ್ಸೆಗೆ ಸುಮಾರು 1 ಲಕ್ಷದಿಂದ 3 ಲಕ್ಷದವರೆಗೆ ಖರ್ಚಾಗಬಹುದು. ಇದು ನೀವು ಆಯ್ದುಕೊಂಡ ಚಿಕಿತ್ಸಾ ವಿಧಾನದ ಮೇಲೆ ಅನುಗುಣವಾಗಿರುತ್ತದೆ.

    ಕಾಯಿಲೆ ಬಾರದಂತೆ ತಡೆಯುವುದು ಹೇಗೆ?
    ನಿಯಮಿತ ವ್ಯಾಯಾಮ: ನಿಯಮಿತ ದೈಹಿಕ ಚಟುವಟಿಕೆಯು ಚಲನಶೀಲತೆ, ನಮ್ಯತೆ ಮತ್ತು ಸಮತೋಲನವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

    ಆರೋಗ್ಯಕರ ಆಹಾರದ ಸೇವನೆ: ಆಂಟಿಆಕ್ಸಿಡೆಂಟ್‌ಗಳು, ಒಮೆಗಾ -3 ಕೊಬ್ಬಿನಾಮ್ಲಗಳು ಮತ್ತು ವಿಟಮಿನ್‌ಗಳಲ್ಲಿ ಸಮೃದ್ಧವಾಗಿರುವ ಸಮತೋಲಿತ ಆಹಾರವನ್ನು ಸೇವಿಸುವುದರಿಂದ ಪಾರ್ಕಿನ್ಸನ್ ಕಾಯಿಲೆಯ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

    ಸಿಗರೇಟ್ ಸೇವನೆ, ಕೀಟನಾಶಕಗಳು ಮತ್ತು ಸಸ್ಯನಾಶಕಗಳಿಗೆ ಒಡ್ಡಿಕೊಳ್ಳುವುದು ಮತ್ತು ಇತರ ಪರಿಸರ ವಿಷಗಳು ಪಾರ್ಕಿನ್ಸನ್ ಕಾಯಿಲೆಯ ಅಪಾಯವನ್ನು ಹೆಚ್ಚಿಸಬಹುದು.

    ಉತ್ತಮ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಿ: ಯೋಗ, ಧ್ಯಾನ, ಮತ್ತು ಅರಿವಿನ ವರ್ತನೆಯ ಚಿಕಿತ್ಸೆಯಂತಹ ಒತ್ತಡ ನಿರ್ವಹಣೆ ತಂತ್ರಗಳು PD ಅನ್ನು ಅಭಿವೃದ್ಧಿಪಡಿಸುವ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

    ಸಾಕಷ್ಟು ನಿದ್ರೆ: ಒಟ್ಟಾರೆ ಆರೋಗ್ಯಕ್ಕೆ ಸಾಕಷ್ಟು ನಿದ್ರೆ ಮಾಡುವುದು ಅತ್ಯಗತ್ಯ ಮತ್ತು PD ಅನ್ನು ಅಭಿವೃದ್ಧಿಪಡಿಸುವ ಅಪಾಯವನ್ನು ಕಡಿಮೆ ಮಾಡಬಹುದು.