Tag: health

  • ನಿತೀಶ್ ಕುಮಾರ್‌ಗೆ ಅನಾರೋಗ್ಯ- ಇಂದಿನ ಎಲ್ಲಾ ಕಾರ್ಯಕ್ರಮಗಳ ಭೇಟಿ ಕ್ಯಾನ್ಸಲ್

    ನಿತೀಶ್ ಕುಮಾರ್‌ಗೆ ಅನಾರೋಗ್ಯ- ಇಂದಿನ ಎಲ್ಲಾ ಕಾರ್ಯಕ್ರಮಗಳ ಭೇಟಿ ಕ್ಯಾನ್ಸಲ್

    ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (Nithish Kumar) ಅವರಿಗೆ ಅನಾರೋಗ್ಯ ಕಾಡಿದ್ದು, ಈ ಹಿನ್ನೆಲೆಯಲ್ಲಿ ಇಂದಿನ ಎಲ್ಲಾ ಅವರ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ.

    74 ವರ್ಷದ ನಿತೀಶ್ ಕುಮಾರ್ ಅವರಿಗೆ ವೈರಲ್ ಜ್ವರ (Viral Fever) , ಶೀತ ಹಾಗೂ ಕೆಮ್ಮು ಇರುವುದರಿಂದ ಇಂದಿನ ಯಾವುದೇ ಕಾರ್ಯಕ್ರಮಗಳಲ್ಲಿ ಅವರು ಪಾಲ್ಗೊಳಲ್ಲ ಎಂದು ಮುಖ್ಯಮಂತ್ರಿಗಳ ನಿವಾಸದಿಂದ ಮೂಲಗಳು ತಿಳಿಸಿವೆ.

    ನಳಂದದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿರುವ ರಾಜ್ಗಿರಿ ಮಹೋತ್ಸವವನ್ನು ನಿತೀಶ್ ಅವರು ಉದ್ಘಾಟನೆ ಮಾಡಬೇಕಿತ್ತು. ಆದರೆ ಅನಾರೋಗ್ಯದಿಂದಾಗಿ ಅವರಿಗೆ ಕಾರ್ಯಕ್ರಮಕ್ಕೆ ಬರಲು ಸಾಧ್ಯವಾಗುತ್ತಿಲ್ಲ ಎಂದು ಸಿಎಂ ಅವರ ಆಡಳಿತ ಕಚೇರಿಯಿಂದ ಸಂದೇಶ ರವಾನಿಸಲಾಗಿದೆ.

    ಸದ್ಯ ಸಿಎಂ ಅವರು ತಮ್ಮ ನಿವಾಸದಲ್ಲಿಯೇ ರೆಸ್ಟ್ ಮಾಡುತ್ತಿದ್ದಾರೆ. ಮನೆಯಲ್ಲಿಯೇ ವೈದ್ಯರ ತಂಡವಿದ್ದು, ನಿತೀಶ್ ಕುಮಾರ್ ಅವರ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ. ಇದನ್ನೂ ಓದಿ: 108 ಅಂಬುಲೆನ್ಸ್‌ನವ್ರು ಖಾಸಗಿ ಆಸ್ಪತ್ರೆಗಳ ಜೊತೆ ಒಪ್ಪಂದ ಮಾಡಿಕೊಳ್ತಾರೆ: ಡಿಕೆಶಿ ಅಸಮಾಧಾನ

    ಸೋಮವಾರವಷ್ಟೇ ಮುಖ್ಯಮಂತ್ರಿಗಳು ದರ್ಭಾಂಗ್ ತೆರಳಿದ್ದು, ಅಲ್ಲಿ ದರ್ಭಾಂಗ್ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿದ್ದರು. ಅದೇ ದಿನ ಸಂಜೆ ಪಟ್ನಾದಲ್ಲಿ ಅನುಗ್ರಹ ನಾರಾಯಣ ಕಾಲೇಜಿನ ಹೊಸ ಕಟ್ಟಡವನ್ನು ಕೂಡ ಉದ್ಘಾಟನೆ ಮಾಡಿದ್ದರು. ಆ ಬಳಿಕದಿಂದ ಅವರು ಸಾರ್ವಜನಿಕ ಸಭೆಗಳಿಗೆ ಹಾಜರಾಗುತ್ತಿರಲಿಲ್ಲ. ಸದ್ಯ ಇಂದಿನ ರಾಜ್ಗಿರಿ ಮಹೋತ್ಸವವನ್ನು ಉಪಮುಖ್ಯಮಂತ್ರಿ ಹಾಗೂ ಪ್ರವಾಸೋದ್ಯಮ ಸಚಿವ ತೇಜಸ್ವಿ ಯಾದವ್ ಉದ್ಘಾಟನೆ ಮಾಡಲಿದ್ದಾರೆ.

  • ಚೀನಾ ನಿಗೂಢ ವೈರಸ್ ಭೀತಿ – ರಾಜ್ಯದಲ್ಲಿ ನ್ಯೂಮೋನಿಯಾ ನಿಯಂತ್ರಣಕ್ಕೆ ಕ್ರಮ

    ಚೀನಾ ನಿಗೂಢ ವೈರಸ್ ಭೀತಿ – ರಾಜ್ಯದಲ್ಲಿ ನ್ಯೂಮೋನಿಯಾ ನಿಯಂತ್ರಣಕ್ಕೆ ಕ್ರಮ

    ಬೆಂಗಳೂರು: ಚೀನಾದಲ್ಲಿ ನ್ಯೂಮೋನಿಯಾ (China pneumonia) ಪ್ರಕರಣ ಹೆಚ್ಚಿದ ಬೆನ್ನಲ್ಲೇ ಕೇಂದ್ರ ಸರ್ಕಾರ (Union Govt) ಎಲ್ಲಾ ರಾಜ್ಯಗಳಿಗೆ ಎಚ್ಚರಿಕೆಯ ಸಂದೇಶ ರವಾನಿಸಿತ್ತು. ಈ ಬೆನ್ನಲ್ಲೇ ಕರ್ನಾಟಕ (Karnataka) ಸೇರಿ ಆರು ರಾಜ್ಯಗಳು ಅಲರ್ಟ್ ಆಗಿವೆ. ಸೀಸನಲ್ ಫ್ಲೂ ಬಗ್ಗೆ ಜನ ಜಾಗೃತರಾಗಿ ಇರಬೇಕು ಎಂದು ರಾಜ್ಯ ಆರೋಗ್ಯ ಇಲಾಖೆ ಸೂಚಿಸಿದೆ.

    ಸೀಸನಲ್ ಫ್ಲೂ ಲಕ್ಷಣಗಳನ್ನು ವಿವರಿಸುತ್ತಾ ಮಾರ್ಗಸೂಚಿಯೊಂದನ್ನು ಪ್ರಕಟಿಸಿದೆ. ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸಬೇಕು. ಪದೇ ಪದೇ ಕೈ ತೊಳೆಯಬೇಕು ಎಂದು ಕೋವಿಡ್ (Covid) ಮಾದರಿಯಲ್ಲೇ ಸಲಹೆ ಸೂಚನೆಗಳನ್ನು ನೀಡಿದೆ. ಕೇಂದ್ರದ ಅಲರ್ಟ್ ಬೆನ್ನಲ್ಲೇ ಇಂದು ಆರೋಗ್ಯ ಮಂತ್ರಿ ದಿನೇಶ್‌ ಗುಂಡೂರಾವ್‌ (Dinesh Gundu Rao) ಸಭೆ ನಡೆಸಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಡಿಹೆಚ್‌ಓಗಳ ಜೊತೆ ಚರ್ಚೆ ನಡೆಸಿದರು.  ಇದನ್ನೂ ಓದಿ: ತಂಬಾಕು ಚೀಲಗಳಲ್ಲಿ ತುಂಬಿ ದಾಖಲೆ ಇಲ್ಲದೆ ಸಾಗಿಸ್ತಿದ್ದ 8 ಕೋಟಿ ಹಣ ಜಪ್ತಿ

    ಕರ್ನಾಟಕ ಮಾದರಿಯಲ್ಲಿಯೇ ರಾಜಸ್ಥಾನ, ಉತ್ತರಾಖಂಡ್, ಹರಿಯಾಣ, ತಮಿಳುನಾಡು, ಗುಜರಾತ್ ಸರ್ಕಾರಗಳು ಕೂಡ ಮಾರ್ಗಸೂಚಿ ಪ್ರಕಟಿಸಿವೆ.

  • ನಟ ವಿಜಯಕಾಂತ್ ಆರೋಗ್ಯದಲ್ಲಿ ಅಲ್ಪ ಚೇತರಿಕೆ: ಐಸಿಯುವಿನಲ್ಲೇ ಚಿಕಿತ್ಸೆ

    ನಟ ವಿಜಯಕಾಂತ್ ಆರೋಗ್ಯದಲ್ಲಿ ಅಲ್ಪ ಚೇತರಿಕೆ: ಐಸಿಯುವಿನಲ್ಲೇ ಚಿಕಿತ್ಸೆ

    ರಡು ದಿನಗಳ ಹಿಂದೆಯಷ್ಟೇ ಅನಾರೋಗ್ಯದ ಕಾರಣದಿಂದಾಗಿ ಖಾಸಗಿ ಆಸ್ಪತ್ರೆಗೆ (Hospital)  ದಾಖಲಾಗಿದ್ದ ನಟ, ರಾಜಕಾರಣಿ ವಿಜಯಕಾಂತ್ ಅವರ ಆರೋಗ್ಯದಲ್ಲಿ ಅಲ್ಪ ಚೇತರಿಕೆ ಕಂಡಿದೆ ಎಂದು ಮಾಧ್ಯಮಗಳ ವರದಿ ಮಾಡುವೆ. ಜೊತೆಗೆ ಅವರಿಗೆ ಚಿಕಿತ್ಸೆಯನ್ನು ವೈದ್ಯರು ಐಸಿಯುವಿನಲ್ಲೇ ಮುಂದುವರೆಸಿದ್ದಾರೆ.

    ತಮಿಳು ನಾಡಿನ ಡಿಎಂಡಿಕೆ (DMDK) ಮುಖ್ಯಸ್ಥರೂ ಆಗಿರುವ ಕ್ಯಾಪ್ಟನ್ ವಿಜಯಕಾಂತ್ ಕಳೆದೆರಡು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದಾರೆ ಎಂದು ಅಲ್ಲಿನ ಮಾಧ್ಯಮಗಳು ಎರಡು ದಿನಗಳ ಹಿಂದೆ ವರದಿ ಮಾಡಿವೆ.

    ಕ್ಯಾಪ್ಟನ್ ವಿಜಯಕಾಂತ್ (Vijayakanth) ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿದೆ ಎಂದು ಮಾಧ್ಯಮಗಳು ವರದಿ ಮಾಡಿದರೆ, ದೇಸಿಯ ಮುರ್ಪೊಕ್ಕು ದ್ರಾವಿಡ ಕಳಗಂ ಪಕ್ಷ ಅದನ್ನು ನಿರಾಕರಿಸಿತ್ತು. ಮಾಧ್ಯಮಗಳು ಪ್ರಸಾರ ಮಾಡುವಂತೆ ಕ್ಯಾಪ್ಟನ್ ಅವರ ಆರೋಗ್ಯ ತೀರಾ ಹದಗೆಟ್ಟಿಲ್ಲ. ಜ್ವರ ಮತ್ತು ಶೀತದಿಂದ ಅವರು ಬಳಲುತ್ತಿದ್ದಾರೆ. ಇನ್ನೆರಡು ದಿನಗಳಲ್ಲಿ ಅವರು ಮನೆಗೆ ಬರಲಿದ್ದಾರೆ ಎಂದು ಹೇಳಿದ್ದರು.

     

    ಹಲವಾರು ವರ್ಷಗಳ ಕಾಲ ನಟರಾಗಿ ಚಿತ್ರೋದ್ಯಮಕ್ಕೆ ಸೇವೆ ಸಲ್ಲಿಸಿರುವ ಕ್ಯಾಪ್ಟನ್ ವಿಜಯಕಾಂತ್ ಅವರಿಗೆ 71 ವರ್ಷ ವಯಸ್ಸಾಗಿದೆ. ವಯೋ ಸಹಜ ಕಾಯಿಲೆಗಳು ಅವರನ್ನೂ ಕಾಡುತ್ತಿವೆ. ಎರಡು ದಿನಗಳ ಹಿಂದೆ ಅವರು ರೆಗ್ಯುಲರ್ ತಪಾಸಣೆಗೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲೆಯಾಗಿದ್ದಾರೆ ಎಂದು ಗೊಂದಲದ ಹೇಳಿಕೆಗಳನ್ನೂ ಪಕ್ಷ ಕೊಟ್ಟಿತ್ತು.

     

    ತಮಿಳುನಾಡು ಆರೋಗ್ಯ ಸಚಿವರು ನೀಡಿದ ಮತ್ತೊಂದು ಹೇಳಿಕೆ ಅಭಿಮಾನಿಗಳನ್ನು ಆತಂಕಕ್ಕೆ ದೂಡಿದೆ. ಖಾಸಗಿ ಆಸ್ಪತ್ರೆಯ ಆಡಳಿತ ಮಂಡಳಿಯೊಂದಿಗೆ ಮಾತನಾಡಿದ್ದೇನೆ. ಐಸಿಯುನಲ್ಲಿ (ICU) ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಸಿಬ್ಬಂದಿ ತಿಳಿಸಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಹಾಗಾಗಿ ಸಹಜವಾಗಿಯೇ ವಿಜಯಕಾಂತ್ ಆರೋಗ್ಯದ ಬಗ್ಗೆ ಗೊಂದಲ ಮೂಡಿತ್ತು.

  • ಮಕ್ಕಳ ಸೋಂಕು ನಿವಾರಣೆಗೆ ಬಳಸುವ ಔಷಧಿಗಳು ಭಾರತದಲ್ಲಿ ಸಮರ್ಥವಾಗಿ ಕೆಲಸ ಮಾಡಲ್ಲ: ಅಧ್ಯಯನ ವರದಿ

    ಮಕ್ಕಳ ಸೋಂಕು ನಿವಾರಣೆಗೆ ಬಳಸುವ ಔಷಧಿಗಳು ಭಾರತದಲ್ಲಿ ಸಮರ್ಥವಾಗಿ ಕೆಲಸ ಮಾಡಲ್ಲ: ಅಧ್ಯಯನ ವರದಿ

    ಸಿಡ್ನಿ: ಚಿಕ್ಕಮಕ್ಕಳಿಗೆ ಸಾಮಾನ್ಯವಾಗಿ ಬರುವ ಸೋಂಕುಗಳ (Antibiotic Resistant Bacteria) ನಿವಾರಣೆಗೆ ಬಳಸುವ ಔಷಧಿಗಳು ಆಸ್ಟ್ರೇಲಿಯಾ, ಭಾರತ (India) ಸೇರಿ ಅನೇಕ ಏಷ್ಯಾ ಪೆಸಿಫಿಕ್‌ ದೇಶಗಳಲ್ಲಿ ಸಮರ್ಥವಾಗಿ ಕೆಲಸ ಮಾಡುತ್ತಿಲ್ಲ ಎಂಬ ಆತಂಕಕಾರಿ ವಿಚಾರ ಅಧ್ಯಯನವೊಂದರಲ್ಲಿ ಬಯಲಾಗಿದೆ. ಇದಕ್ಕೆ ದೊಡ್ಡ ಮಟ್ಟದಲ್ಲಿ ಉತ್ಪಾದನೆ ಆಗ್ತಿರುವ ಆಂಟಿಬಯೋಟಿಕ್ ನಿರೋಧಕತೆ(AMR) ಕಾರಣ ಎಂದು ಸಿಡ್ನಿ ವಿವಿ ತಜ್ಞರು ತಿಳಿಸಿದ್ದಾರೆ.

    ಜಗತ್ತಿನಾದ್ಯಂತ ಪ್ರತಿ ವರ್ಷ 30 ಲಕ್ಷ ಮಕ್ಕಳು ಸೆಪ್ಸಿಸ್‌ನಿಂದ ಬಳಲುತ್ತಿದ್ದಾರೆ. ಇವರಲ್ಲಿ 5.7 ಲಕ್ಷ ಮಕ್ಕಳು ಸಾವನ್ನಪ್ಪುತ್ತಿವೆ. ಮೊಂಡಾಟಕ್ಕೆ ಬಿದ್ದಿರುವ ಬ್ಯಾಕ್ಟಿರಿಯಾಗಳಿಗೆ ಚಿಕಿತ್ಸೆ ನೀಡಲು ಸಮರ್ಥ ಆಂಟಿ ಬಯೋಟಿಕ್ಸ್ ಲಭಿಸದಿರುವುದೇ ಈ ಸಮಸ್ಯೆಗೆ ಪ್ರಮುಖ ಕಾರಣ ಎಂದು ತಿಳಿಸಿದೆ.
    ಇದನ್ನೂ ಓದಿ: ಸಾಮಾನ್ಯಕ್ಕಿಂತ ಮೂರು ಪಟ್ಟು ಹೆಚ್ಚು ಹೃದಯಾಘಾತ – ಅಕ್ಕಿರಾಜ ಖ್ಯಾತಿಯ ಗಂಡಾನೆ ಸಾವು

     

    ಚಿಕ್ಕವಯಸ್ಸಲ್ಲಿ ಬರುವ ನ್ಯೂಮೋನಿಯಾ, ಸೆಪ್ಸಿಸ್‌ನಂತಹ ಸೋಂಕುಗಳ ಮೇಲೆ ಈಗಿರುವ ಆಂಟಿಬಯೋಟಿಕ್ಸ್ 50%ಕ್ಕಿಂತ ಕಡಿಮೆ ಸಾಮರ್ಥ್ಯದಲ್ಲಿ ಕೆಲಸ ಮಾಡುತ್ತಿವೆ ಎಂದು ಲ್ಯಾನ್ಸೆಟ್ ಜರ್ನಲ್‌ನಲ್ಲಿ ಪ್ರಕಟವಾದ ಲೇಖನದಲ್ಲಿ ಉಲ್ಲೇಖವಾಗಿದೆ. ಮನುಕುಲಕ್ಕೆ ಕಂಟಕವಾಗಿ ಪರಿಣಮಿಸಿರುವ ಹತ್ತು ಅಂಶಗಳಲ್ಲಿ ಎಎಂಆರ್ ಕೂಡ ಒಂದು ಈಗಾಗಲೇ ವಿಶ್ವ ಆರೋಗ್ಯ ಸಂಸ್ಥೆ (WHO) ಹೇಳಿದೆ.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಲಘು ಶಸ್ತ್ರಚಿಕಿತ್ಸೆ ಬಳಿಕ ವಿಶ್ರಾಂತಿ – ಆಸ್ಪತ್ರೆಗೆ ಬರಬೇಡಿ ಎಂದ ಬೊಮ್ಮಾಯಿ

    ಲಘು ಶಸ್ತ್ರಚಿಕಿತ್ಸೆ ಬಳಿಕ ವಿಶ್ರಾಂತಿ – ಆಸ್ಪತ್ರೆಗೆ ಬರಬೇಡಿ ಎಂದ ಬೊಮ್ಮಾಯಿ

    ಬೆಂಗಳೂರು: ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಹೃದಯ ಶಸ್ತ್ರಚಿಕಿತ್ಸೆಗೆ (Heart Surgery) ಒಳಗಾಗಿದ್ದಾರೆ. ಪ್ರಸ್ತುತ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ನನ್ನನ್ನು ವಿಚಾರಿಸಲು ಯಾರು ಕೂಡಾ ಆಸ್ಪತ್ರೆಗೆ ಬರಬೇಡಿ ಎಂದು ಬೊಮ್ಮಾಯಿ ಮನವಿ ಮಾಡಿಕೊಂಡಿದ್ದಾರೆ.

    ಈ ಬಗ್ಗೆ ಎಕ್ಸ್‌ನಲ್ಲಿ ಬರೆದಿರುವ ಅವರು, ನನಗೆ ಲಘು ಶಸ್ತ್ರ ಚಿಕಿತ್ಸೆಯಾಗಿದ್ದು, ವೈದ್ಯರ ಸಲಹೆ ಮೇರೆಗೆ ಈಗ ಸಂಪೂರ್ಣ ವಿಶ್ರಾಂತಿ ಪಡೆಯುತ್ತಿದ್ದೇನೆ. ಆದಷ್ಟು ಬೇಗ ಸಂಪೂರ್ಣ ಗುಣಮುಖನಾಗಿ ನಿಮ್ಮ ಮುಂದೆ ಬರಲು ಕಾತುರದಿಂದ ಕಾಯುತ್ತಿದ್ದೇನೆ. ಸದ್ಯ ಆಸ್ಪತ್ರೆಯಲ್ಲಿರುವ ಕಾರಣ, ನೀವೆಲ್ಲರೂ ಆಸ್ಪತ್ರೆಗೆ ನನ್ನನ್ನು ನೋಡಲು ಬಂದರೆ ಆಸ್ಪತ್ರೆಯಲ್ಲಿರುವ ಇತರ ರೋಗಿಗಳಿಗೆ ತೊಂದರೆಯಾಗುತ್ತದೆ. ಹೀಗಾಗಿ ನೀವ್ಯಾರು ಆಸ್ಪತ್ರೆಗೆ ಬರಬಾರದೆಂದು ಕಳಕಳಿಯಾಗಿ ಮನವಿ ಮಾಡುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಬೊಮ್ಮಾಯಿ ಆಸ್ಪತ್ರೆಗೆ ದಾಖಲು – ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾದ ಮಾಜಿ ಸಿಎಂ

    ನಿಮ್ಮ ಶುಭ ಹಾರೈಕೆಗಳು ನನ್ನನ್ನು ಮಾನಸಿಕವಾಗಿ ಮತ್ತಷ್ಟು ಗಟ್ಟಿ ಮಾಡಿದ್ದು, ಶೀಘ್ರದಲ್ಲಿಯೇ ಜನಸೇವೆಗೆ ಮರಳುತ್ತೇನೆ. ಶುಭ ಹಾರೈಸಿದ ಪ್ರತಿಯೊಬ್ಬರಿಗೂ ನನ್ನ ಹೃದಯಾಂತರಾಳದಿಂದ ಅನಂತ ಅನಂತ ಧನ್ಯವಾದಗಳು ಎಂದು ಮಾಜಿ ಸಿಎಂ ಬರೆದಿದ್ದಾರೆ.

    ಮೊಣಕಾಲು ನೋವಿನಿಂದ ಬಳಲುತ್ತಿದ್ದ ಬಸವರಾಜ ಬೊಮ್ಮಾಯಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಇರುವುದು ಪತ್ತೆಯಾಗಿದೆ. ಹೀಗಾಗಿ ಅವರನ್ನು ಹೃದಯ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿತ್ತು. ಇದನ್ನೂ ಓದಿ: ತುಂಬಾ ಸಂತೋಷದಿಂದ ನಾನು ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿದ್ದೇನೆ: ಹೆಚ್‍ಡಿಡಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಯಚೂರಿನಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ – ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ಹಿಂದೇಟು

    ರಾಯಚೂರಿನಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ – ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ಹಿಂದೇಟು

    ರಾಯಚೂರು: ಜಿಲ್ಲೆಯಲ್ಲಿ ಡೆಂಗ್ಯೂ (Dengue) ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಕರಣಗಳ ಸಂಖ್ಯೆ ಲೆಕ್ಕಕ್ಕೆ ಸಿಕ್ಕರೂ, ಖಾಸಗಿ ಆಸ್ಪತ್ರೆಗಳಲ್ಲೇ ಹೆಚ್ಚು ರೋಗಿಗಳು ದಾಖಲಾಗುತ್ತಿರುವುದರಿಂದ ಸಾರ್ವಜನಿಕರು ಆತಂಕಕ್ಕೊಳಗಾಗಿದ್ದಾರೆ. ಸೊಳ್ಳೆಗಳ (Mosquito) ನಿಯಂತ್ರಣಕ್ಕೆ ಅಧಿಕಾರಿಗಳು ಮುಂದಾಗುತ್ತಿಲ್ಲ ಎಂದು ಜನ ಬೇಸರ ವ್ಯಕ್ತಪಡಿಸುತ್ತಿದ್ದಾರೆ.

    ರಾಯಚೂರು (Raichur) ಜಿಲ್ಲೆಯಲ್ಲಿ ಕಳೆದ ಒಂದೂವರೆ ತಿಂಗಳಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ಇದುವರೆಗೆ 18 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಇನ್ನೂ 300ಕ್ಕೂ ಹೆಚ್ಚು ಮಾದರಿಗಳ ವರದಿ ಬರುವುದು ಬಾಕಿಯಿದೆ. ಇದು ಸರ್ಕಾರಿ ಆಸ್ಪತ್ರೆಗಳ ವರದಿಯಾದರೆ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗಿರುವ ರೋಗಿಗಳ ಸಂಖ್ಯೆ ಇನ್ನೂ ಹೆಚ್ಚಿದೆ. ಹೀಗಾಗಿ ಸಾರ್ವಜನಿಕರು ಆತಂಕಗೊಂಡಿದ್ದಾರೆ. ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ. ಇದನ್ನೂ ಓದಿ: ಮೈತ್ರಿಯಿಂದ ಭಿನ್ನಮತ ಸ್ಫೋಟ – ಮುಖಂಡರ ಮನವೊಲಿಸಲು ನಿಖಿಲ್ ಕಸರತ್ತು

    ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸರಿಯಾದ ಸೌಲಭ್ಯಗಳಿಲ್ಲ. ಗ್ರಾಮೀಣ ಭಾಗದಲ್ಲಿ ಸಣ್ಣ ಜ್ವರ ಬಂದರೂ ಜನ ನಗರ ಪ್ರದೇಶಗಳಿಗೆ ಬರಬೇಕಾದ ಸ್ಥಿತಿಯಿದೆ. ಹೀಗಾಗಿ ಡೆಂಗ್ಯೂ ತಡೆಯಲು ಮುನ್ನೆಚ್ಚರಿಕೆಯಾಗಿ ಸೊಳ್ಳೆ ಪರದೆ ವಿತರಿಸಬೇಕು. ನಗರದ ಗ್ರಾಮೀಣ ಭಾಗದಲ್ಲಿ ಫಾಗಿಂಗ್ ಮೂಲಕ ಸೊಳ್ಳೆ ನಿಯಂತ್ರಿಸಬೇಕು. ಸೊಳ್ಳೆ ಉತ್ಪತ್ತಿ ಪ್ರದೇಶಗಳಲ್ಲಿ ಔಷಧಿ ಸಿಂಪಡಿಸಬೇಕು. ಆರೋಗ್ಯ ಶಿಬಿರಗಳನ್ನು ಮಾಡಿ ತಪಾಸಣೆಯ ಜೊತೆಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ನಗರಸಭೆ, ಆರೋಗ್ಯ ಇಲಾಖೆ, ಜಿಲ್ಲಾಡಳಿತ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಸಂಸದ ಮುನಿಸ್ವಾಮಿ, ಶಾಸಕ ಎಸ್‌ಎನ್ ನಾರಾಯಣಸ್ವಾಮಿ ಜಟಾಪಟಿ ಪ್ರಕರಣ – ಎಫ್‌ಐಆರ್ ದಾಖಲು

    ಆಗಸ್ಟ್ ತಿಂಗಳಲ್ಲಿ 495 ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿದ್ದು, 7 ಮಾದರಿಗಳು ಎಲಿಸಾ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿವೆ. ಸೆಪ್ಟೆಂಬರ್ ತಿಂಗಳಲ್ಲಿ 185 ಮಾದರಿಗಳಲ್ಲಿ 11 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಖಾಸಗಿ ಪ್ರಯೋಗಾಲಯಗಳಲ್ಲಿ ಆರ್‌ಡಿಕೆ ಕಿಟ್‌ಗಳಲ್ಲಿ ಪಾಸಿಟಿವ್ ಬಂದ ಮಾದರಿಗಳನ್ನು ಪುನಃ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಈಗ ಬರುತ್ತಿರುವ ಡೆಂಗ್ಯೂ ಜ್ವರ ಮಂದಗತಿಯ ವಿಧದಲ್ಲಿರುವುದರಿಂದ ಸಾರ್ವಜನಿಕರು ಆತಂಕಪಡಬಾರದು. ಮನೆ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿ ಇಟ್ಟುಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುರೇಂದ್ರಬಾಬು ತಿಳಿಸಿದ್ದಾರೆ. ಇದನ್ನೂ ಓದಿ: ಲೋಕ ಸಮರಕ್ಕೆ ತಯಾರಿ – ಸಿಎಂ ಪುತ್ರ ಯತೀಂದ್ರಗೆ ಸಿಗುತ್ತಾ ಟಿಕೆಟ್?

    ಡೆಂಗ್ಯೂ ಜ್ವರ ಮಂದವಾಗಿರುವುದರಿಂದ ಆಸ್ಪತ್ರೆಗೆ ದಾಖಲಾಗಿರುವವರ ಸಂಖ್ಯೆ ಕಡಿಮೆಯಿದ್ದು, ಆಸ್ಪತ್ರೆಗೆ ಬಂದು ಹೋಗುವವರ ಸಂಖ್ಯೆ ಹೆಚ್ಚಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಆದರೆ ಸೊಳ್ಳೆಗಳ ಉತ್ಪತ್ತಿ ತಡೆಯಲು ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕಾಗಿದೆ. ಸಾರ್ವಜನಿಕರು ಸಹ ಮುನ್ನೆಚ್ಚರಿಕೆ ವಹಿಸಬೇಕಾಗಿದೆ. ಇದನ್ನೂ ಓದಿ: ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ – ದಾವಣಗೆರೆ ಮೂಲದ ಹಿಂದೂ ಸಂಘಟನೆಯ ಸಂಚಾಲಕ ಅರೆಸ್ಟ್‌

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹುಕ್ಕಾ ಬಾರ್, ತಂಬಾಕು ಉತ್ಪನ್ನಗಳ ನಿಷೇಧಕ್ಕೆ ಕೋಟ್ಪಾ ಕಾಯ್ದೆಗೆ ಮಹತ್ವದ ತಿದ್ದುಪಡಿ : ದಿನೇಶ್ ಗುಂಡೂರಾವ್

    ಹುಕ್ಕಾ ಬಾರ್, ತಂಬಾಕು ಉತ್ಪನ್ನಗಳ ನಿಷೇಧಕ್ಕೆ ಕೋಟ್ಪಾ ಕಾಯ್ದೆಗೆ ಮಹತ್ವದ ತಿದ್ದುಪಡಿ : ದಿನೇಶ್ ಗುಂಡೂರಾವ್

    ಬೆಂಗಳೂರು: ಹುಕ್ಕಾ ಬಾರ್ ಸೇರಿದಂತೆ ರಾಜ್ಯದಲ್ಲಿ ತಂಬಾಕು ಉತ್ಪನ್ನಗಳನ್ನ ನಿಷೇಧಿಸಲು ತಂಬಾಕು ಉತ್ಪನ್ನಗಳ ಸಾರ್ವಜನಿಕ ಬಳಕೆ ನಿಯಂತ್ರಣ ಕಾಯ್ದೆಗೆ (COTPA) ತಿದ್ದುಪಡಿ ತರುವುದರ ಮೂಲಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ತಿಳಿಸಿದ್ದಾರೆ.

    ವಿಕಾಸ ಸೌಧದಲ್ಲಿ ಇಂದು ಕ್ರೀಡಾ ಸಚಿವ ನಾಗೇಂದ್ರ ಅವರ ಜೊತೆಗೂಡಿ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ದಿನೇಶ್ ಗುಂಡೂರಾವ್, ಸಾರ್ವಜನಿಕ ಸ್ಥಳಗಳಲ್ಲಿ ಇತರ ತಂಬಾಕು ಉತ್ಪನ್ನಗಳ ನಿಷೇಧಿಸುವ ಬಗ್ಗೆ ಚರ್ಚಿಸಿದರು.

    ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಂಬಾಕು ಉತ್ಪನ್ನಗಳ ಮಾರಾಟ ಮತ್ತು ಸೇವನೆಯನ್ನು ಶಾಲೆಗಳ ಜೊತೆಗೆ, ದೇವಸ್ಥಾನಗಳು, ಆಸ್ಪತ್ರೆಗಳ ಸುತ್ತ ಮುತ್ತಲು ನಿಷೇಧಿಸುವುದಾಗಿ ತಿಳಿಸಿದರು. ಈ ನಿಟ್ಟಿನಲ್ಲಿ ಕೋಟ್ಪಾ ಕಾಯ್ದೆಗೆ ತಿದ್ದುಪಡಿಗೆ ಸೂಚಿಸಿರುವುದಾಗಿ ತಿಳಿಸಿದರು.‌ ಈ ಹಿಂದಿನ ಕೋಟ್ಪಾ ಕಾಯ್ದೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇವನೆಯನ್ನ ನಿಷೇಧಿಸಲಾಗಿತ್ತು. ಸಿಗರೇಟ್ ಜೊತೆಗೆ ಇತರ ತಂಬಾಕು ಉತ್ಪನ್ನಗಳ ಸೇವನೆ ಮತ್ತು ಮಾರಾಟವನ್ನು ನಿಷೇಧಿಸುವ ನಿಟ್ಟಿನಲ್ಲಿ ಕೋಟ್ಪಾ ಕಾಯ್ದೆಗೆ ತಿದ್ದುಪಡಿ ತರಲು ನಿರ್ಧರಿಸಲಾಗಿದೆ ಎಂದರು. ಇದನ್ನೂ ಓದಿ: ಬರ್ಮುಡಾ, ಟೀ ಶರ್ಟ್‍ನಲ್ಲಿ ಸಿಕ್ಕಿಬಿದ್ದ ಹಾಲಶ್ರೀ!

     

    ಹುಕ್ಕಾ ಬಾರ್‌ಗಳಿಗೆ ಯುವಕರು ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಇದರಿಂದ ಯುವಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ.‌ ಈ ಹಿನ್ನೆಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪೊಲೀಸ್ ಇಲಾಖೆ ಸಹಯೋಗದೊಂದಿಗೆ ಹುಕ್ಕಾ ಬಾರ್ ಗಳಲ್ಲಿ ಮಾದಕ ವಸ್ತುಗಳ ಸೇವನೆಯನ್ನು ನಿಷೇಧಿಸಲು ಕ್ರಮ ಕೈಗೊಳ್ಳುವುದಾಗಿ ಗುಂಡೂರಾವ್ ತಿಳಿಸಿದರು. ಹುಕ್ಕಾ ಬಾರ್ ಗಳಿಗೆ ನಿಯಂತ್ರಣ ಹೇರುವಲ್ಲಿ ಕ್ರೀಡಾ ಸಚಿವ ನಾಗೇಂದ್ರ ಅವರು ಕೆಲವು ಸಲಹೆ ನೀಡಿದ್ದು, ಕೋಟ್ಪಾ ಕಾಯ್ದೆ ತಿದ್ದುಪಡಿಯಲ್ಲಿ ಹುಕ್ಕಾ ಬಾರ್ ಗಳಲ್ಲಿ ನಡೆಯುವ ಮಾದಕ ವಸ್ತುಗಳ ಸೇವನೆಗೆ ನಿಷೇಧ ಹೇರಲು ಕ್ರಮ ಕೈಗೊಳ್ಳುವುದಾಗಿ ಗುಂಡೂರಾವ್ ಹೇಳಿದರು.

    ತಂಬಾಕು ಖರೀದಿಗೆ 18 ವರ್ಷದ ಮೇಲ್ಪಟ್ಟವರಿಗೆ, ಕಾನೂನನಲ್ಲಿ ಇದ್ದ ಅವಕಾಶವನ್ನ ಪರಿಷ್ಕರಿಸಲು ಗುಂಡೂರಾವ್ ಮುಂದಾಗಿದ್ದಾರೆ.‌ 18 ವರ್ಷದ ಬದಲು 21 ವರ್ಷದ ಮೇಲ್ಪಟ್ಟವರು ಎಂದು ಕೋಟ್ಪಾ ಕಾಯ್ದೆಗೆ ತಿದ್ದುಪಡಿ ತರುವುದಾಗಿ ಇದೇ ವೇಳೆ ತಿಳಿಸಿದರು. ಈ ಮೂಲಕ 21 ವರ್ಷದ ಒಳಗಿನವರಿಗೆ ತಂಬಾಕು ಉತ್ಪನ್ನಗಳ ಖರೀದಿಗೆ ನಿಷೇಧ ಹೇರಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

    ಯಾವುದೇ ಶಾಲೆ,‌ ಕಾಲೇಜು, ಆಸ್ಪತ್ರೆ, ಶಿಶುಪಾಲನಾ ಕೇಂದ್ರಗಳು, ಹೆಲ್ತ್ ಕೇರ್ ಸೆಂಟರ್, ದೇವಸ್ಥಾನಗಳು, ಮಂದಿರಗಳು, ಮಸೀದಿಗಳು, ಉದ್ಯಾನವನ ಸೇರಿದಂತೆ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಮಾದಕ ವಸ್ತುಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗುತ್ತಿದೆ.‌

    ಮಾದಕ ವಸ್ತುಗಳ ವ್ಯಸನಕ್ಕೆ ದಾಸರಾಗಿ ಇಂದಿನ ಯುವಜನತೆ ತಮ್ಮ ಅಮೂಲ್ಯ ಭವಿಷ್ಯವನ್ನು ಕಳೆದುಕೊಳ್ಳುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಕಾನೂನು ಬಾಹಿರ ಚಟುವಟಿಕೆಗಳನ್ನು ಬುಡಸಮೇತ ಕಿತ್ತೆಸೆಯುವ ಗಟ್ಟಿ ನಿರ್ಧಾರವನ್ನು ಮಾಡಿದ್ದೇವೆ. ತಂಬಾಕು ಸೇವನೆಯ ಬಳಿಕ ಯುವಕರು ಡ್ರಗ್ಸ್, ಮಾದಕ ವಸ್ತುಗಳ ವ್ಯಸನಗಳತ್ತ ಆಕರ್ಷಿತರಾಗುತ್ತಿದ್ದರು. ಇದಕ್ಕೆಲ್ಲಾ ತಂಬಾಕು ಸೇವನೆಯೇ ಒಂದು ರೀತಿಯಲ್ಲಿ ಅಡಿಪಾಯ ಹಾಕಿ ಕೊಡುತ್ತಿತ್ತು. ಹೀಗಾಗಿ ಮೂಲದಲ್ಲೇ ಸರಿಪಡಿಸುವ ಕಾರ್ಯಕ್ಕೆ ಮುಂದಾಗಿದ್ದೇವೆ ಎಂದರು.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹೆಚ್‍ಡಿಕೆ ಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆ- ಶೀಘ್ರವೇ ಡಿಸ್ಚಾರ್ಜ್

    ಹೆಚ್‍ಡಿಕೆ ಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆ- ಶೀಘ್ರವೇ ಡಿಸ್ಚಾರ್ಜ್

    ಬೆಂಗಳೂರು: ಕಳೆದ ಮೂರು ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆ ಸೇರಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ (HD Kumarawamy) ಆರೋಗ್ಯ (Health) ಮತ್ತಷ್ಟು ಚೇತರಿಕೆ ಕಂಡಿದೆ. ಇಂದು ಅಥವಾ ನಾಳೆ ಹೆಚ್‍ಡಿಕೆ ಆಸ್ಪತ್ರೆಯಿಂದ ಮನೆಗೆ ತೆರಳುವ ಸಾಧ್ಯತೆ ಇದ್ದು, ಶುಕ್ರವಾರ ಬೇರೆ ಬೇರೆ ಪಕ್ಷದ ಅನೇಕ ರಾಜಕೀಯ ಮುಖಂಡರು ಆಸ್ಪತೆಗೆ ಭೇಟಿ ನೀಡಿ ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ್ದಾರೆ.

    ಕಳೆದ ಬುಧವಾರ ಬೆಳಗ್ಗಿನ ಜಾವ ಸುಸ್ತು ಮತ್ತು ತೀವ್ರ ಜ್ವರದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆ ಕಂಡು ಬಂದಿದೆ. ಕಳೆದರೆಡು ದಿನದಿಂದ ತೀವ್ರ ನಿಗಾಘಟಕದಲ್ಲಿದ್ದ ಹೆಚ್‍ಡಿಕೆಯನ್ನ ಗುರುವಾರ ವಾರ್ಡ್‍ಗೆ ಶಿಫ್ಟ್ ಮಾಡಲಾಗಿತ್ತು. ವಾರ್ಡ್‍ನಲ್ಲಿನ ಚಿಕಿತ್ಸೆ ಮುಂದುವರಿದಿದ್ದು, ಆರೋಗ್ಯದಲ್ಲಿ ಇನ್ನಷ್ಟು ಸುಧಾರಣೆ ಕಂಡಿದೆ. ಇದನ್ನೂ ಓದಿ: ಸಂಸದ ಸ್ಥಾನದಿಂದ ಅನರ್ಹ – ಪ್ರಜ್ವಲ್ ರೇವಣ್ಣ ಮೇಲಿನ ಆರೋಪಗಳೇನು?

    ಹಲವು ರಾಜಕೀಯ ಮುಖಂಡರು ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಸಿಎಂ ಹೆಚ್‍ಡಿಕೆ ಅವರ ಆರೋಗ್ಯ ವಿಚಾರಿಸಿದ್ರು. ಸದ್ಯ ವಾರ್ಡ್‍ನಲ್ಲಿ ಆರೋಗ್ಯವಾಗಿ ಹೆಚ್‍ಡಿಕೆ ಲವಲವಿಕೆಯಿಂದಿದ್ದು, ಎಂದಿನಂತೆ ದೈನಂದಿನ ಕಾರ್ಯಗಳನ್ನ ಮಾಡ್ತಾ ಇದ್ದಾರೆ. ಇಂದು ಸಂಜೆ ಅಥವಾ ನಾಳೆ ಮಧ್ಯಾಹ್ನಾದ ಒಳಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ.

    ಸದ್ಯ ಹೆಚ್‍ಡಿಕೆ ಆರೋಗ್ಯ ಇನ್ನಷ್ಟು ಸುಧಾರಣೆ ಕಂಡಿದೆ. ಯಾವುದೇ ಸಮಸ್ಯೆ ಇಲ್ಲ. ಆತಂಕ ಬೇಡ ಅಂತ ವೈದ್ಯ ಮೂಲಗಳು ತಿಳಿಸಿವೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹೆಚ್‍ಡಿಕೆ ಶೀಘ್ರ ಗುಣಮುಖರಾಗಲೆಂದು ಅಭಿಮಾನಿಯಿಂದ ಉರುಳು ಸೇವೆ

    ಹೆಚ್‍ಡಿಕೆ ಶೀಘ್ರ ಗುಣಮುಖರಾಗಲೆಂದು ಅಭಿಮಾನಿಯಿಂದ ಉರುಳು ಸೇವೆ

    ಬೀದರ್: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಅವರು ಅನಾರೋಗ್ಯದಿಂದ (Health) ಆಸ್ಪತ್ರೆಗೆ ದಾಖಲಾಗಿದ್ದು, ಈ ಹಿನ್ನೆಲೆಯಲ್ಲಿ ಹೆಚ್‍ಡಿಕೆಯವರು ಶೀಘ್ರ ಗುಣಮುಖರಾಗಲೆಂದು ಅಭಿಮಾನಿಯೊಬ್ಬರು ಉರುಳು ಸೇವೆ ಮಾಡಿದ್ದಾರೆ.

    ಗಡಿ ಜಿಲ್ಲೆ ಬೀದರ್ (Bidar) ನ ಅಭಿಮಾನಿ, ಬಸವಕಲ್ಯಾಣ ತಾಲೂಕಿನ ಜೆಡಿಎಸ್ (JDS) ಪಕ್ಷದ ಉಪಾಧ್ಯಕ್ಷ ಶರಣಪ್ಪ ಪರೇಪ್ಪ ಈ ಸೇವೆಯನ್ನು ಕೈಗೊಂಡಿದ್ದಾರೆ. ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ಸಾನಿಧ್ಯದಲ್ಲಿ ಕುಮಾರಸ್ವಾಮಿಯ ಫೋಟೋ ಜೊತೆ ಉರುಳು ಸೇವೆ ಮಾಡಿದ್ದಾರೆ.

    ಹೆಚ್‍ಡಿಕೆ ಆರೋಗ್ಯದಲ್ಲಿ ಬೇಗ ಚೇತರಿಕೆ ಕಂಡು ಮತ್ತೆ ಎಂದಿನಂತೆ ಜನ ಸೇವೆ ಮಾಡಲಿ ಎಂದು ಉರುಳು ಸೇವೆ ಬಳಿಕ ಶ್ರೀ ಮಂಜುನಾಥನ ಸನ್ನಿಧಿಯಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಶಕ್ತಿ ಯೋಜನೆಯನ್ನು ಪ್ರಶ್ನಿಸಿದವರಿಗೆ ಹೈಕೋರ್ಟ್ ತರಾಟೆ

    ಸದ್ಯ ಅಪೊಲೋ ಆಸ್ಪತ್ರೆಯಲ್ಲಿ ಮಾಜಿ ಸಿಎಂಗೆ ಚಿಕಿತ್ಸೆ ಮುಂದುವರಿದಿದ್ದು, ಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆ ಕಂಡಿದೆ. ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಸಾಧ್ಯತೆ ಕಡಿಮೆ ಇದ್ದು, ಇಂದು ಅಥವಾ ನಾಳೆ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿಸೋ ಸಾಧ್ಯತೆ ಇದೆ. ಇವತ್ತು ಬಿಜೆಪಿ ನಾಯಕರು, ಕೆಲ ಸಚಿವರು ಸೇರಿದಂತೆ ಗಣ್ಯರ ಆಗಮಿಸಿ ಮಾಜಿ ಸಿಎಂ ಆರೋಗ್ಯ ವಿಚಾರಿಸಲಿದ್ದಾರೆ. ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಸಚಿವ ಚೆಲುವರಾಯಸ್ವಾಮಿ (Chaluvarayaswamy) ಆರೋಗ್ಯ ವಿಚಾರಿಸಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸುಧಾರಿಸಿದ ಹೆಚ್‌ಡಿಕೆ ಆರೋಗ್ಯ – ಐಸಿಯುನಿಂದ ವಾರ್ಡ್‌ಗೆ ಶಿಫ್ಟ್

    ಸುಧಾರಿಸಿದ ಹೆಚ್‌ಡಿಕೆ ಆರೋಗ್ಯ – ಐಸಿಯುನಿಂದ ವಾರ್ಡ್‌ಗೆ ಶಿಫ್ಟ್

    ಬೆಂಗಳೂರು: ಅನಾರೋಗ್ಯ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ(HD Kumaraswamy) ಅವರನ್ನು ಮಂಗಳವಾರ ತಡರಾತ್ರಿ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆ ಅವರನ್ನು ಐಸಿಯುನಿಂದ (ICU) ವಾರ್ಡ್‌ಗೆ (Ward) ಶಿಫ್ಟ್ ಮಾಡಲಾಗಿದೆ.

    ಕುಮಾರಸ್ವಾಮಿ ಅವರಿಗೆ ಎಡಭಾಗದಲ್ಲಿ ರಕ್ತನಾಳ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಗುರುವಾರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ವೈದ್ಯರು ಅವರನ್ನು ಐಸಿಯುನಿಂದ ವಾರ್ಡ್‌ಗೆ ಶಿಫ್ಟ್ ಮಾಡಿ ನಿಗಾವಹಿಸಿದ್ದಾರೆ. ಇದನ್ನೂ ಓದಿ: ಸೆ.3 ರಂದು ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಮತ್ತೆ ಚಾಲನೆ: ಜಯಮೃತ್ಯುಂಜಯ ಸ್ವಾಮೀಜಿ

    ವಾರ್ಡ್‌ಗೆ ಶಿಫ್ಟ್ ಮಾಡುವ ಮೊದಲು ಹೆಚ್‌ಡಿಕೆ ಆರೋಗ್ಯ ಪರಿಸ್ಥಿತಿ ತಿಳಿಯುವ ಸಲುವಾಗಿ ಸಿಟಿ ಸ್ಕ್ಯಾನ್ ಮಾಡಿದ್ದು, ರಿಪೋರ್ಟ್‌ನಲ್ಲಿ ಆರೋಗ್ಯ ಸುಧಾರಿಸಿರುವುದು ಕಂಡುಬಂದಿದೆ. ಬಳಿಕ ಅವರನ್ನು ವಾರ್ಡ್‌ಗೆ ಶಿಫ್ಟ್ ಮಾಡಲಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ರೈಲಿಗೆ ಬೆಂಕಿ ಆಕಸ್ಮಿಕ ಅಲ್ಲ, ಮಾನವ ಕೃತ್ಯದ ಶಂಕೆ

    ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವ ಕುಮಾರಸ್ವಾಮಿ ಅವರನ್ನು ನಿರ್ಮಲಾನಂದ ಶ್ರೀಗಳು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಆರೋಗ್ಯ ಸ್ಥಿರವಾಗಿದೆ. ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದಾರೆ. ಯಾವಾಗ ಡಿಸ್ಚಾರ್ಜ್ ಮಾಡಬೇಕೆಂಬುದನ್ನು ವೈದ್ಯರು ನಿರ್ಧರಿಸುತ್ತಾರೆ. ಕುಮಾರಸ್ವಾಮಿಯವರು ಚೆನ್ನಾಗಿ ಮಾತನಾಡಿದರು. ಅವರು ಬೇಗ ಗುಣಮುಖರಾಗಿ ಬರುತ್ತಾರೆ ಎಂದರು. ಇದನ್ನೂ ಓದಿ: ಪ್ರವಾಸಿಗರೇ ಎಚ್ಚರ, ಕಾಫಿನಾಡ ನಾನ್ ವೆಜ್ ಹೋಟೆಲ್‍ನಲ್ಲಿ ಕುರಿ ಬದಲು ದನದ ಮಾಂಸದ ಬಿರಿಯಾನಿ!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]