Tag: health

  • ಬ್ರಿಟನ್ ರಾಣಿ ಎಲಿಜಬೆತ್ ಆರೋಗ್ಯದಲ್ಲಿ ಏರುಪೇರು

    ಬ್ರಿಟನ್ ರಾಣಿ ಎಲಿಜಬೆತ್ ಆರೋಗ್ಯದಲ್ಲಿ ಏರುಪೇರು

    ಲಂಡನ್: ಬ್ರಿಟನ್ ರಾಣಿ ಎಲಿಜಬೆತ್ (Queen Elizabeth) ಆರೋಗ್ಯದಲ್ಲಿ ಏರುಪೇರಾಗಿದ್ದು, ವೈದ್ಯಕೀಯ ಮೇಲ್ವಿಚಾರಣೆಯಲ್ಲಿದ್ದಾರೆ.

    96 ವರ್ಷದ ರಾಣಿ ಕಳೆದ ವರ್ಷ ಅಕ್ಟೋಬರ್‍ನಿಂದ ಆರೋಗ್ಯ (Health) ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಸದ್ಯ ಅವರಿಗೆ ನಡೆಯಲು ಮತ್ತು ನಿಲ್ಲಲು ಕಷ್ಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವೈದ್ಯರು ಅವರನ್ನು ಆಸ್ಪತ್ರೆಗೆ ದಾಖಲಿಸುವಂತೆ ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಉಮೇಶ್ ಕತ್ತಿ ರಾಜಕೀಯ ಜೀವನ ಪುಸ್ತಕವಾಗಬೇಕು: ಅರುಣ್ ಸಿಂಗ್

    ಸದ್ಯ ರಾಣಿ ಆರೋಗ್ಯ ಸ್ಥಿರವಾಗಿದೆ, ಅವರು ಆರಾಮವಾಗಿದ್ದಾರೆ. ಹೀಗಾಗಿ ಯಾವುದೇ ಆತಂಕ ಪಡುವ ಅವಶ್ಯಕತೆ ಇಲ್ಲ. ಸ್ಕಾಟ್ಲೆಂಡ್‍ನ ಬಾಲ್ಮೋರಲ್ ಕ್ಯಾಸಲ್‍ನಲ್ಲಿ ಉಳಿದಿದ್ದಾರೆ ಎಂದು ಅರಮನೆಯ ಮೂಲಗಳು ತಿಳಿಸಿದೆ. ಇತ್ತ ರಾಣಿ ಎಲಿಜಬೆತ್ ಆರೋಗ್ಯ ವಿಚಾರಿಸಲು ಸಂಬಂಧಿಕರು ದೌಡಾಯಿಸುತ್ತಿದ್ದಾರೆ.

    ವೈದ್ಯರ ಸಲಹೆಯಂತೆ ರಾಣಿ ಎಲಿಜಬೆತ್ ಆರೋಗ್ಯದ ಬಗ್ಗೆ ನಿಗಾ ಇಡಲಾಗಿದೆ. ವೈದ್ಯಕೀಯ ಮೇಲ್ವಿಚಾರಣೆಯಲ್ಲಿ ಅವರನ್ನು ಉಳಿಯಲು ಶಿಫಾರಸು ಮಾಡಿದ್ದಾರೆ ಎಂದು ಬಕಿಂಗ್ಹ್ಯಾಮ್ ಅರಮನೆ ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಎಕ್ಕದ ಗಿಡದಿಂದ ಆರೋಗ್ಯಕ್ಕೆ ಸಿಗುತ್ತೆ ಹಲವಾರು ಪ್ರಯೋಜನ

    ಎಕ್ಕದ ಗಿಡದಿಂದ ಆರೋಗ್ಯಕ್ಕೆ ಸಿಗುತ್ತೆ ಹಲವಾರು ಪ್ರಯೋಜನ

    ಸಾಮಾನ್ಯವಾಗಿ ಎಕ್ಕದ ಗಿಡ ಎಲ್ಲರಿಗೂ ಪರಿಚಯವಿರುತ್ತೆ. ಇದರಲ್ಲಿ ಎರಡು ರೀತಿಯ ಹೂವುಗಳಿದ್ದು, ಬಿಳಿ ಎಕ್ಕದ ಗಿಡ ಹಾಗೂ ನೀಲಿ ಎಕ್ಕದ ಗಿಡವೆಂದು ಕರೆಯುತ್ತಾರೆ. ಇದನ್ನು ದೇವರ ಪೂಜೆಗಳಲ್ಲಿ ಹೆಚ್ಚಾಗಿ ಬಳಸುತ್ತಾರೆ. ಕೇವಲ ಧಾರ್ಮಿಕವಾಗಿಯೊಂದೇ ಅಲ್ಲದೇ, ಮನೆಮದ್ದಾಗಿಯೂ ಬಳಸುತ್ತಾರೆ. ಅದರಲ್ಲೂ ಬಿಳಿ ಎಕ್ಕದ ಗಿಡದಲ್ಲಿರುವ ಎಲೆಗಳು, ಹಣ್ಣುಗಳು, ಹಾಲು, ಹೂವುಗಳನ್ನು ಅನೇಕ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಲು ಬಳಸಬಹುದು.

    ಜೀರ್ಣಕ್ರಿಯೆಗೆ ಸಹಾಯಕ: ಎಕ್ಕದ ಗಿಡದ ಎಲೆಗಳು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಅಜೀರ್ಣ ಅಥವಾ ಹೊಟ್ಟೆಗೆ ಸಂಬಂಧಿಸಿದ ಯಾವುದೇ ಸಮಸ್ಯೆಯಿಂದ ಬಳಲುತ್ತಿದ್ದರೆ ಎಕ್ಕದ ಗಿಡದ ಎಲೆಗಳು ಹೆಚ್ಚು ಪ್ರಯೋಜನಕಾರಿಯಾಗಿದೆ. ಯಾವುದೇ ರೀತಿಯ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯನ್ನು ನಿವಾರಿಸಲು ಇದು ನಿಮಗೆ ಸಹಾಯ ಮಾಡುತ್ತದೆ.

    ಮೂಲವ್ಯಾದಿ ಕಡಿಮೆ: ಯಾರಾದರೂ ಮೂಲವ್ಯಾದಿ(ಪೈಲ್ಸ್)ಯಿಂದ ಬಳಲುತ್ತಿದ್ದರೆ, ಎಕ್ಕದ ಗಿಡವು ಮೂಲಿಕೆಯಾಗಿದೆ. ಎಕ್ಕದ ಎಲೆಗಳನ್ನು ಬಳಸುವುದು ಪೈಲ್ಸ್ ರೋಗಿಗಳಿಗೆ ಪ್ರಯೋಜನಕಾರಿಯಾಗಿದೆ. ಇದಕ್ಕಾಗಿ ಅವರು ಎಕ್ಕದ ಎಲೆಗಳನ್ನು ಸುಟ್ಟು ಅದರ ಹೊಗೆಯನ್ನು ನಿಯಮಿತವಾಗಿ ತೆಗೆದುಕೊಳ್ಳಬೇಕು. ಹೀಗೆ ಮಾಡುವುದರಿಂದ ಮೂಲವ್ಯಾದಿಯ ತುರಿಕೆ ಮತ್ತು ನೋವು ಬೇಗನೆ ಶಮನವಾಗುತ್ತದೆ. ಉರಿಯೂತವನ್ನು ಕಡಿಮೆ ಮಾಡಲು ಪ್ರಯೋಜನಕಾರಿಯಾಗಿದೆ. ಇದನ್ನೂ ಓದಿ: ಗೋಡಂಬಿ ತಿನ್ನಲು ಎಷ್ಟು ರುಚಿಕರವೋ ಅಷ್ಟೇ ಆರೋಗ್ಯಕ್ಕೂ ಒಳ್ಳೆಯದು

    ಉಬ್ಬಸಕ್ಕೆ ಪರಿಹಾರ: ಉಬ್ಬಸಕ್ಕೂ ಕೂಡ ಎಕ್ಕದ ಗಿಡದಲ್ಲಿ ಮದ್ದಿದೆ. ಎಕ್ಕದ ಗಿಡದಿಂದ ಕೆಲವು ಒಣಗಿದ ಹೂವುಗಳನ್ನು ತೆಗೆದುಕೊಂಡು ಪುಡಿ ಮಾಡಿ, ನಂತರ ಅದಕ್ಕೆ ಸ್ವಲ್ಪ ಕಲ್ಲುಪ್ಪನ್ನು ಸೇರಿಸಿ. ಅದಾದ ಬಳಿಕ ಈ ಮಿಶ್ರಣವನ್ನು ಪುಡಿಯ ರೂಪದಲ್ಲಿ ಅಥವಾ ಬೆಚ್ಚಗಿನ ನೀರಿನಿಂದ ಸೇವಿಸಬೇಕು. ಇದರಿಂದ ಹೊಟ್ಟೆ ಉಬ್ಬಸ ಕಡಿಮೆ ಆಗುವುದರ ಜೊತೆ ಆಸ್ತಮಾ, ಕೆಮ್ಮು, ಶೀತ ಮತ್ತು ಇತರ ಅನೇಕ ಸಮಸ್ಯೆಗಳಿಂದ ತ್ವರಿತ ಪರಿಹಾರವನ್ನು ನೀಡುತ್ತದೆ.

    ಕಾಲರಾ ಶಮನ: ಕಾಲರಾವನ್ನು ಗುಣಪಡಿಸಲು ಪ್ರಾಚೀನ ಕಾಲದಿಂದಲೂ ಎಕ್ಕದ ಸಸ್ಯಗಳನ್ನು ಬಳಸಲಾಗುತ್ತದೆ. ಸರಳವಾಗಿ ಎಕ್ಕದ ಶುದ್ಧ ಬೇರಿನ ತೊಗಟೆಯನ್ನು ತೆಗೆದುಕೊಂಡು ಅದನ್ನು ಒಣಗಿಸಿ. ಈಗ ಅದನ್ನು ಪುಡಿ ಮಾಡಿ. ಅದಕ್ಕೆ ಶುಂಠಿ ರಸ ಮತ್ತು ಕರಿಮೆಣಸು ಸೇರಿಸಿ ಮಿಶ್ರಣ ಮಾಡಬೇಕು. ಸಿದ್ಧವಾದ ನಂತರ, ಅದನ್ನು ಬಟಾಣಿ ಗಾತ್ರದ ಸಣ್ಣ ಉಂಡೆಗಳಾಗಿ ಸುತ್ತಿಕೊಳ್ಳಿ. ಈಗ ಪ್ರತಿ 2 ಗಂಟೆಗಳ ನಂತರ ಒಂದು ಚಮಚ ಪುದೀನಾ ರಸದೊಂದಿಗೆ ಒಂದು ಚಿಕ್ಕ ಉಂಡೆಯನ್ನು ತೆಗೆದುಕೊಳ್ಳಿ, ಇದು ಕಾಲರಾವನ್ನು ಗುಣಪಡಿಸಬಹುದು. ಇದನ್ನೂ ಓದಿ: ಅನೇಕ ರೋಗಗಳಿಗೆ ಒಣ ಶುಂಠಿ ರಾಮಬಾಣ

    ಮಧುಮೇಹ ಗುಣವಾಗುತ್ತೆ: ಎಕ್ಕದ ಗಿಡದಿಂದ ಮಧುಮೇಹ ಗುಣವಾಗುತ್ತದೆ. ಇತ್ತೀಚಿನ ದಿನಗಳಲ್ಲಿ, ಮಧುಮೇಹ ರೋಗವು ತುಂಬಾ ಸಾಮಾನ್ಯವಾಗಿದೆ. ಎಕ್ಕದ ಗಿಡದ ಎಲೆಗಳು ಮಧುಮೇಹಕ್ಕೆ ತುಂಬಾ ಪ್ರಯೋಜನಕಾರಿ. ಇದಕ್ಕಾಗಿ ಪ್ರತಿದಿನ ಬೆಳಗ್ಗೆ ಎಕ್ಕದ ಎಲೆಗಳನ್ನು ಪಾದದ ಕೆಳಗೆ ಇರಿಸಿ ಮತ್ತು ಅವುಗಳ ಮೇಲೆ ಸಾಕ್ಸ್ ಧರಿಸುವುದು. ಮಲಗುವ ಮುನ್ನ ಈ ಎಲೆಗಳನ್ನು ತೆಗೆಯಲು ಮರೆಯಬೇಡಿ. ಇದು ಡಯಾಬಿಟಿಸ್ ನಿಯಂತ್ರಿಸಲು ನಿಮಗೆ ಸಹಾಯ ಮಾಡುತ್ತದೆ.

    ಚರ್ಮದ ತ್ವಚೆ ಹೆಚ್ಚಳ: ಎಕ್ಕದ ಹಾಲು ತ್ವಚೆಗೆ ತುಂಬಾ ಪ್ರಯೋಜನಕಾರಿಯಾಗಿದ್ದು, ಅನೇಕ ರೀತಿಯ ಚರ್ಮದ ಸಮಸ್ಯೆಗಳನ್ನು ಹೋಗಲಾಡಿಸುತ್ತದೆ. ಅದರ ಹಾಲನ್ನು ಚರ್ಮದ ಸೋಂಕು, ಉರಿತ ಅಥವಾ ಗಾಯಗಳನ್ನು ಕಡಿಮೆ ಮಾಡುತ್ತದೆ.

    Live Tv
    [brid partner=56869869 player=32851 video=960834 autoplay=true]

  • ಮುರುಘಾ ಶ್ರೀಗಳ ಆರೋಗ್ಯದಲ್ಲಿ ಏರುಪೇರು- ಐಸಿಯುಗೆ ಶಿಫ್ಟ್

    ಮುರುಘಾ ಶ್ರೀಗಳ ಆರೋಗ್ಯದಲ್ಲಿ ಏರುಪೇರು- ಐಸಿಯುಗೆ ಶಿಫ್ಟ್

    ಚಿತ್ರದುರ್ಗ: ಪೋಕ್ಸೊ ಪ್ರಕರಣದಡಿ ಬಂಧಿತರಾಗಿರುವ ಮುರುಘಾ ಮಠದ ಶರಣರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದ್ದು, ಇದೀಗ ಅವರನ್ನು ಐಸಿಯುಗೆ ಶಿಫ್ಟ್ ಮಾಡಲಾಗಿದೆ.

    ಎದೆನೋವು ಕಾಣಿಸಿಕೊಂಡ ಹಿನ್ನೆಲೆಯ್ಲಲಿ ಸತತ 2 ಗಂಟೆಗಳ ಕಾಲ ಶ್ರೀಗಳ ತಪಾಸಣೆ ನಡೆಸಲಾಗಿದೆ. ಚೆಸ್ಟ್ ಸ್ಕ್ಯಾನ್, ಇಸಿಜಿ, ಎಕೊ, ಎಂ ಆರ್ ಐ ಸ್ಕ್ಯಾನ್ ಹೀಗೆ ಪರೀಕ್ಷೆ ನಡೆಸಲಾಗಿದೆ.

    ಎದೆನೋವು ಹಾಗೂ ರಕ್ತದೊತ್ತಡದಿಂದ ಶ್ರೀಗಳು ಬಳಲುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಇದೀಗ ಮತ್ತೆ ಏರುಪೇರು ಉಂಟಾದ ಹಿನ್ನೆಲೆಯಲ್ಲಿ ಅವರನ್ನು ಜಿಲ್ಲಾಸ್ಪತ್ರೆಯ ಐಸಿಯುಗೆ ರವಾನಿಸಲಾಗಿದೆ. ಇದನ್ನೂ ಓದಿ: ಮುರುಘಾ ಶ್ರೀಗಳಿಗೆ ಎದೆ ನೋವು – ಆಸ್ಪತ್ರೆಗೆ ದಾಖಲು

    ಇತ್ತ ಜಿಲ್ಲಾಸ್ಪತ್ರೆಯ ಆವರಣದಲ್ಲಿ ನೀರವ ಮೌನ ಆವರಿಸಿದೆ. ಎಸ್ ಜೆಎಂ ವಿದ್ಯಾಪೀಠದ ಉದ್ಯೋಗಿಗಳು ಆಸ್ಪತ್ರೆಗೆ ಬಂದಿದ್ದಾರೆ. ವೀರಶೈವ ಸಮಾಜದ ಮುಖಂಡರು ಹಾಗೂ ರಾಜ್ಯದ ನಾನಾಕಡೆಯ ಭಕ್ತರು ಆಗಮಿಸಿದ್ದು, ಮುರುಘಾ ಶ್ರೀ ದರ್ಶನಕ್ಕಾಗಿ ಕಾದು ನಿಂತಿದ್ದಾರೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆ ಆವರಣದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಕ್ಷಣಕ್ಷಣಕ್ಕೂ ಆಸ್ಪತ್ರೆ ಆವರಣದಲ್ಲಿ ಜನಸಂದಣಿ ಹೆಚ್ಚಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ವರ್ಕ್ ಫ್ರಮ್ ಹೋಮ್‌ನಿಂದ ಸೆಕ್ಸ್ ವೀಡಿಯೋ ನೋಡುವವರ ಸಂಖ್ಯೆ ಹೆಚ್ಚಳ!

    ವರ್ಕ್ ಫ್ರಮ್ ಹೋಮ್‌ನಿಂದ ಸೆಕ್ಸ್ ವೀಡಿಯೋ ನೋಡುವವರ ಸಂಖ್ಯೆ ಹೆಚ್ಚಳ!

    ಲಂಡನ್: ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಕಂಪನಿಗಳು ವರ್ಕ್ ಫ್ರಮ್ ಹೋಮ್ ನೀಡಿದ್ದು, ಇದರಿಂದ ಯುಕೆ ನಲ್ಲಿ ಅಶ್ಲೀಲ ವೀಡಿಯೋ ಹಾಗೂ ಫೋಟೋಗಳನ್ನು ನೋಡುವವರ ಸಂಖ್ಯೆ ಹೆಚ್ಚಾಗಿದೆ. ಅಲ್ಲದೆ ಹೆಚ್ಚಿನ ಜನ ವ್ಯಸನಿಗಳಾಗುತ್ತಿದ್ದಾರೆ ಎಂಬವುದು ಸರ್ವೇಯೊಂದರಲ್ಲಿ ಬಯಲಾಗಿದೆ.

    ವರ್ಕ್ ಫ್ರಂ ಹೋಮ್ ಜನಪ್ರಿಯವಾದಾಗಿನಿಂದ ಪೋರ್ನೋಗ್ರಫಿ ನೋಡುವ ಯುಕೆ ನಾಗರಿಕರ ಸಂಖ್ಯೆ ವಾಸ್ತವವಾಗಿ ದ್ವಿಗುಣಗೊಂಡಿದೆ ಎಂದು ವರದಿಯಾಗಿದೆ. ತಜ್ಞರ ಪ್ರಕಾರ, ವರ್ಕ್ ಫ್ರಮ್ ಹೋಮ್ ಸಾಂದರ್ಭಿಕ ಅಶ್ಲೀಲ ವೀಕ್ಷಕರನ್ನೂ ವ್ಯಸನಿಗಳನ್ನಾಗಿ ಮಾಡಲು ಕಾರಣವಾಗಿದೆ. ಈ ಮೂಲಕ ಸಮಸ್ಯೆಗೆ ಸಿಲುಕಿ ವೈದ್ಯಕೀಯ ಆರೈಕೆ ಪಡೆಯುತ್ತಿರುವವರನ್ನು ಇನ್ನಷ್ಟು ಸಂಕಷ್ಟಕ್ಕೆ ದೂಡುತ್ತಿದೆ. ಆದ್ದರಿಂದ ಅಶ್ಲೀಲ ವ್ಯಸನಿಗಳ ಸಂಖ್ಯೆ ಸಹಜವಾಗಿಯೇ ಹೆಚ್ಚಾಗುತ್ತಿದೆ. ಇದನ್ನೂ ಓದಿ: ‘ರಾಕೆಟ್ರಿ’ ಸಿನಿಮಾದಲ್ಲಿ ಇಸ್ರೊಗೆ ಕಳಂಕ ತರುವಂತಹ ಸುಳ್ಳುಗಳನ್ನು ಹೇಳಲಾಗಿದೆ: ಮಾಜಿ ವಿಜ್ಞಾನಿಗಳ ಆರೋಪ

    ಅಶ್ಲೀಲ ವ್ಯಸನವು ಲೈಂಗಿಕ ವ್ಯಸನದ ಒಂದು ಭಾಗವಾಗಿದೆ. ಇದರಿಂದ ಮುಕ್ತರಾಗಲು ಲಂಡನ್ನಿನ ಲಾರೆಲ್ ಸೆಂಟರ್ ಲೈಂಗಿಕ ಚಿಕಿತ್ಸಾಲಯದಲ್ಲಿ, ದಿನಕ್ಕೆ 14 ಗಂಟೆ ಕೆಲಸ ಮಾಡುತ್ತಾ ಅಶ್ಲೀಲತೆ ವೀಕ್ಷಿಸುವವರಿಗೆ ರಿಮೋಟ್ ಚಿಕಿತ್ಸೆ ನೀಡುತ್ತಿದೆ ಎಂದು ಹೇಳಿದೆ. ಇದನ್ನೂ ಓದಿ: ಗುತ್ತಿಗೆದಾರರ ಸಂಘ, ಕೆಂಪಣ್ಣ ವಿರುದ್ಧ 50 ಕೋಟಿ ಮಾನನಷ್ಟ ಮೊಕದ್ದಮೆ: ಮುನಿರತ್ನ

    ಕೇಂದ್ರದ ಕ್ಲಿನಿಕಲ್ ನಿರ್ದೇಶಕಿ ಪೌಲಾ ಹಾಲ್ ಈ ಕುರಿತು ಮಾತನಾಡಿದ್ದು, ಡಬ್ಲ್ಯುಎಫ್‌ಎಚ್ ಎಂದರೆ ಜನರು ಈಗ ತಮ್ಮ ಕಂಪ್ಯೂಟರ್ಗಳ ಮುಂದೆ ಹಿಂದೆಂದಿಗಿಂತಲೂ ಹೆಚ್ಚು ಸಮಯವನ್ನು ಏಕಾಂಗಿಯಾಗಿ ಕಳೆಯುತ್ತಿದ್ದಾರೆ ಎಂಬುದನ್ನು ಅಂದಾಜಿಸುವುದು ಆಗಿದೆ. ಲಾರೆಲ್ ಚಿಕಿತ್ಸಾಲಯವು 2019ರಲ್ಲಿ 950 ಮಂದಿಗೆ ಲೈಂಗಿಕ ವ್ಯಸನದಿಂದ ಮುಕ್ತರಾಗಲು ಚಿಕಿತ್ಸೆ ನೀಡಿತ್ತು. ಆದರೆ ಪ್ರಸಕ್ತ 2022ರ ವರ್ಷದಲ್ಲಿ ಈಗಾಗಲೇ 750 ಮಂದಿಗೆ ಚಿಕಿತ್ಸೆ ನೀಡುತ್ತಿದೆ. ಹೀಗಾಗಿ ಲೈಂಗಿಕ ವ್ಯಸನಿಗಳ ಸಂಖ್ಯೆ ಹೆಚ್ಚಾಗ್ತಿದೆ ಎಂದು ವರದಿ ಹೇಳಿದೆ.

    Live Tv
    [brid partner=56869869 player=32851 video=960834 autoplay=true]

  • ಗೋಡಂಬಿ ತಿನ್ನಲು ಎಷ್ಟು ರುಚಿಕರವೋ ಅಷ್ಟೇ ಆರೋಗ್ಯಕ್ಕೂ ಒಳ್ಳೆಯದು

    ಗೋಡಂಬಿ ತಿನ್ನಲು ಎಷ್ಟು ರುಚಿಕರವೋ ಅಷ್ಟೇ ಆರೋಗ್ಯಕ್ಕೂ ಒಳ್ಳೆಯದು

    ಗೋಡಂಬಿಯು ನೋಡಲು ಚಿಕ್ಕದಾಗಿದ್ದರೂ, ಅದನ್ನು ತಿನ್ನಲು ಅಷ್ಟೇ ರುಚಿಕರವಾಗಿರುವಾಗಿರುತ್ತೆ. ಗೋಂಡಬಿಯನ್ನು ಚಿಕ್ಕ ಮಕ್ಕಳಿಂದ ವಯಸ್ಸಾದವರವರೆಗೂ ಇಷ್ಟಪಡುತ್ತಾರೆ ಎಂದರೆ ತಪ್ಪಾಗಲಾರದು. 3-4 ಗೋಡಂಬಿಯನ್ನು ಸೇವಿಸುವುದರಿಂದ ಅನೇಕ ಲಾಭಗಳಿವೆ.

    ತೂಕ ಇಳಿಕೆ: ಪ್ರತಿನಿತ್ಯ ಗೋಡಂಬಿಯನ್ನು ತಿನ್ನುವುದರಿಂದ ತೂಕವನ್ನು ಇಳಿಸಲು ಸಹಾಯವಾಗುತ್ತದೆ. ನಿಯಮಿತವಾಗಿ ಗೋಡಂಬಿಯನ್ನು ಸೇವಿಸಬೇಕು. ಇದರಿಂದಾಗಿ ಚಯಾಪಚಯಯವನ್ನು ವೇಗಗೊಳಿಸಲು ಹಾಗೂ ಕೊಬ್ಬನ್ನು ಸುಡಲು ಸಹಾಯ ಮಾಡುತ್ತದೆ. ತೂಕವನ್ನು ಇಳಿಸಿಕೊಳ್ಳಲು ಪ್ರಯತ್ನಿಸುವವರಿಗೆ ಇದು ಉತ್ತಮ ತಿಂಡಿಯಾಗಿದೆ.

    ಕಾಂತಿಯುಕ್ತ ಚರ್ಮ: ಗೋಡಂಬಿಯನ್ನು ತಿನ್ನುವುದರಿಂದ ನಿಮ್ಮ ಚರ್ಮದ ಕಾಂತಿ ಹೆಚ್ಚಾಗುತ್ತದೆ. ಇದರಲ್ಲಿ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದೆ. ಗೊಂಡಬಿಯನ್ನು ತಿನ್ನುವುದಷ್ಟೇ ಅಲ್ಲದೇ ಗೋಡಂಬಿ ಎಣ್ಣೆಯನ್ನು ಹಚ್ಚುವುದರಿಂದ ನಿಮ್ಮ ಚರ್ಮವು ಕಾಂತಿಯುಕ್ತವಾದ ಹೊಳಪನ್ನು ನೀಡುತ್ತದೆ. ಈ ಎಣ್ಣೆಯಲ್ಲಿ ಮೆಗ್ನೀಷಿಯಮ್, ಕಬ್ಬಿಣ ಹಾಗೂ ರಂಜಕಗಳು ಹೇರಳವಾಗಿದೆ. ಇದನ್ನೂ ಓದಿ: ಅನೇಕ ರೋಗಗಳಿಗೆ ಒಣ ಶುಂಠಿ ರಾಮಬಾಣ

    ಕಣ್ಣಿಗೆ ಒಳ್ಳೆಯದು: ಗೋಡಂಬಿಯಲ್ಲಿ ಕಂಡು ಬರುವ ಲುಟೀನ್ ಹಾಗೂ ಇತರೆ ಉತ್ಕರ್ಷಣ ನಿರೋಧಕಗಳ ಹೆಚ್ಚಿನ ಸಾಂದ್ರಯತೆಯಿಂದಾಗಿ ಕಣ್ಣುಗಳು ಹಾನಿಯಾಗುವುದನ್ನು ತಪ್ಪಿಸುತ್ತದೆ. ಗೋಡಂಬಿಯನ್ನು ನಿಯಮಿತವಾಗಿ ತಿನ್ನುವುದರಿಂದ ಅದು ಸೂರ್ಯನ ಕಿರಣಗಳ ಪ್ರಭಾವದಿಂದ ನಿಮ್ಮ ಕಣ್ಣನ್ನು ರಕ್ಷಿಸುತ್ತದೆ.

    ಮೈಗ್ರಿನ್ ಕಡಿಮೆ ಆಗುತ್ತೆ: ಮೆಗ್ನೀಷಿಯಮ್ ಕೊರತೆಯಿಂದಾಗಿ ಆರೋಗ್ಯದಲ್ಲಿ ವಿವಿಧ ಸಮಸ್ಯೆಗಳು ಉಂಟಾಗುತ್ತದೆ. ಅದರಲ್ಲೂ ಯುವಜನರು ಹೆಚ್ಚಾಗಿ ರಕ್ತದೊತ್ತಡ ಹಾಗೂ ಮೈಗ್ರಿನ್‍ನಿಂದ ಬಳಲುತ್ತಿದ್ದಾರೆ. ಈ ಸಮಸ್ಯೆಯನ್ನು ನಿವಾರಿಸಲು ಗೋಡಂಬಿಯನ್ನು ಸೇವಿಸಿ. ಇದರ ಜೊತೆಗೆ ಗೋಡಂಬಿಯು ವಿಟಮಿನ್‍ಗಳ ಮೂಲವಾಗಿದೆ. ಇದನ್ನೂ ಓದಿ: ಬೇಸಿಗೆಯಲ್ಲಿ ಕಾಮಕಸ್ತೂರಿ ಬೀಜ ಬಲು ಆರೋಗ್ಯಕಾರಿ

    ಕ್ಯಾನ್ಸರ್‌ಗೆ ತಡೆ: ಗೋಡಂಬಿಯನ್ನು ನಿಯಮಿತವಾಗಿ ಸೇವಿಸುವುದರಿಂದ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಲು ಸಹಾಯವಾಗಿದೆ. ಗೋಡಂಬಿಯಲ್ಲಿರುವ ಪ್ರೋಆಂಥೋಸಯಾನಿಡಿನ್‍ಗಳು ದೇಹದಲ್ಲಿನ ಕ್ಯಾನ್ಸರ್ ಕೋಶಗಳ ಪುನರಾವರ್ತನೆಯನ್ನು ತಡೆಯಲು ಸಹಾಯ ಮಾಡುತ್ತದೆ.

    ಆರೋಗ್ಯಕರ ಹೃದಯ: ಗೋಡಂಬಿಯಲ್ಲಿರುವ ಮೊನೊಸಾಚುರೇಟೆಡ್ ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತದೆ. ಜೊತೆಗೆ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಿ ರಕ್ತನಾಳಗಳನ್ನು ಆರೋಗ್ಯಕರವಾಗಿ ನಿರ್ವಹಿಸಲು ಸಹಾಯ ಮಾಡುತ್ತದೆ.

    Live Tv
    [brid partner=56869869 player=32851 video=960834 autoplay=true]

  • ರಕ್ತದೊತ್ತಡ, ಮಧುಮೇಹದ ರಾಜಧಾನಿಯಾಗುತ್ತಿದೆ ಭಾರತ – ಸುಧಾಕರ್ ಆತಂಕ

    ರಕ್ತದೊತ್ತಡ, ಮಧುಮೇಹದ ರಾಜಧಾನಿಯಾಗುತ್ತಿದೆ ಭಾರತ – ಸುಧಾಕರ್ ಆತಂಕ

    ಚಿಕ್ಕಬಳ್ಳಾಪುರ: ರಕ್ತದೊತ್ತಡ, ಮಧುಮೇಹದಂತಹ ಕಾಯಿಲೆಗಳಿಗೆ ಇಡೀ ವಿಶ್ವಕ್ಕೆ ಭಾರತ ರಾಜಧಾನಿಯಾಗುತ್ತಿದೆ. ಇದಕ್ಕೆ ಕಾರಣಗಳನ್ನು ಹುಡುಕುವ ಸಂಶೋಧನೆಗಳು ಹೆಚ್ಚಾಗುವ ಜೊತೆಗೆ ಪರಿಹಾರಗಳನ್ನು ಕಂಡುಹಿಡಿಯುವ ಕೆಲಸ ಸಂಸ್ಥೆಗಳಿಂದ ಆಗಬೇಕಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದರು.

    ತಾಲೂಕಿನ ಮೋಟ್ಲೂರು ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ ಒನ್ ಹೆಲ್ತ್ ಟ್ರಸ್ಟ್ ನೂತನ ಕ್ಯಾಂಪಸ್‌ಗೆ ಭೂಮಿಪೂಜೆ ನೆರವೇರಿಸಿದ ನಂತರ ಮಾತನಾಡಿದ ಅವರು, ಟಿಬಿ, ಮಲೇರಿಯಾ ಮುಂತಾದ ಹಲವಾರು ಜಾಗತಿಕ ಆರೋಗ್ಯ ಸವಾಲುಗಳನ್ನು ಎದುರಿಸಲು ಒನ್ ಹೆಲ್ತ್ ಟ್ರಸ್ಟ್ ನಡೆಸುತ್ತಿರುವ ಸಂಶೋಧನೆ ಶ್ಲಾಘನೀಯ ಎಂದರು.

    ಸೇವಿಸುವ ಆಹಾರದಿಂದ ಆರೋಗ್ಯದ ಮೇಲಾಗುವ ಪರಿಣಾಮಗಳ ಬಗ್ಗೆ ಮತ್ತು ಆಹಾರದಿಂದ ಎದುರಾಗುವ ಸಮಸ್ಯೆಗಳ ಬಗ್ಗೆ ಸಂಶೋಧನೆಗಳು ನಡೆಯಬೇಕಿದೆ. ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್ ನಂತಹ ಕಾಯಿಲೆಗಳು ಅಧಿಕವಾಗುತ್ತಿರುವುದರ ಹಿಂದೆ ಇರುವ ಸಮಸ್ಯೆಗಳನ್ನು ಕಂಡುಹಿಡಿದು, ಅದಕ್ಕೆ ಪರಿಹಾರ ಸೂಚಿಸುವ ಮೂಲಕ ಜನರ ಆರೋಗ್ಯಕರ ಜೀವನಕ್ಕೆ ಸಂಸ್ಥೆ ಪೂರಕವಾಗಿ ಕಾರ್ಯನಿರ್ವಹಿಸಬೇಕೆಂದು ಸಲಹೆ ನೀಡಿದರು. ಇದನ್ನೂ ಓದಿ: ಮೊಟ್ಟೆ ಹೊಡೆದ ಸಂಪತ್ ಕಾಂಗ್ರೆಸ್ ಕಾರ್ಯಕರ್ತ ಅಲ್ಲ – ಪಕ್ಕಾ RSS ಕಾರ್ಯಕರ್ತ: ಸಿದ್ದರಾಮಯ್ಯ

    ಜನರ ಆರೋಗ್ಯವನ್ನು ನೈಸರ್ಗಿಕವಾಗಿ ಕಾಪಾಡುವತ್ತ ಗಮನ ಹರಿಸಬೇಕು. ಅಭಿವೃದ್ಧಿಯ ಹೆಸರಿನಲ್ಲಿ ಕೀಟನಾಶಕ, ರಾಸಾಯನಿಕ ಗೊಬ್ಬರಗಳ ಬಳಕೆ ಕಡಿಮೆ ಮಾಡಬೇಕು. ರೈತರು ವೈಜ್ಞಾನಿಕ ಬೆಳೆ ಬೆಳೆಯುವುದರಲ್ಲಿ ಪರಿಣಿತರಾಗಿದ್ದಾರೆ, ಆದರೆ ಹೆಚ್ಚಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ಬಳಕೆಯಾಗುತ್ತಿರುವುದು ಹಲವು ಅನಾರೋಗ್ಯ ಸಮಸ್ಯೆಗಳಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ನೈಸರ್ಗಿಕ ಕೃಷಿಯತ್ತ ಗಮನಹರಿಸಬೇಕೆಂದು ಹೇಳಿದರು.

    ಮಣ್ಣಿನ ಸಂರಕ್ಷಣೆ ಕುರಿತು ಸಂಶೋಧನೆಯಾಗಬೇಕು. ಮುಂದಿನ 18 ತಿಂಗಳಲ್ಲಿ ಕ್ಯಾಂಪಸ್ ಪೂರ್ಣ ಪ್ರಮಾಣದಲ್ಲಿ ಸಿದ್ಧಪಡಿಸಲಾಗುವುದು. ಇದಕ್ಕೆ ಅಗತ್ಯವಿರುವ ಎಲ್ಲಾ ಸಹಕಾರ ನೀಡಲು ಸರ್ಕಾರ ಸಿದ್ಧವಾಗಿದ್ದು, ಸ್ಥಳೀಯ ಮುಖಂಡರು ಮತ್ತು ಸಾರ್ವಜನಿಕರು ಸಹಕಾರ ನೀಡುವಂತೆ ಕೋರಿದರು. ಇದನ್ನೂ ಓದಿ: ಸಿದ್ದರಾಮಯ್ಯಗೆ ಜೀವ ಬೆದರಿಕೆ- ತನಿಖೆ ಮಾಡಿಸ್ತೀವಿ ಎಂದ ಸಿಎಂ

    Live Tv
    [brid partner=56869869 player=32851 video=960834 autoplay=true]

  • 11 ರಾಜ್ಯಗಳಲ್ಲಿ ಮಹಿಳೆಯರೇ ಹೆಚ್ಚು ಸೆಕ್ಸ್ ಪಾಲುದಾರರನ್ನು ಹೊಂದಿದ್ದಾರೆ: ವರದಿ

    11 ರಾಜ್ಯಗಳಲ್ಲಿ ಮಹಿಳೆಯರೇ ಹೆಚ್ಚು ಸೆಕ್ಸ್ ಪಾಲುದಾರರನ್ನು ಹೊಂದಿದ್ದಾರೆ: ವರದಿ

    ನವದೆಹಲಿ: ದೇಶದ 11 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಪುರುಷರಿಗಿಂತ ಮಹಿಳೆಯರೇ ಹೆಚ್ಚು ಸರಾಸರಿ ಲೈಂಗಿಕ ಪಾಲುದಾರರನ್ನು ಹೊಂದಿದ್ದಾರೆ ಎಂದು ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ (NFHS) ಸಮೀಕ್ಷಾ ವರದಿ ಹೇಳಿದೆ.

    ತಮ್ಮ ಸಂಗಾತಿ ಅಲ್ಲದ ಹಾಗೂ ತಮ್ಮೊಂದಿಗೆ ವಾಸಿಸದ ಪುರುಷರೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ಮಹಿಳೆಯರ ಪ್ರಮಾಣ ಶೇ.4 ರಷ್ಟಿದೆ. ಇದೇ ರೀತಿಯ ಪುರುಷರ ಪ್ರಮಾಣ ಕೇವಲ ಶೇ 0.5 ಮಾತ್ರ ಇದೆ ಎಂದು ಸಮೀಕ್ಷೆಯಲ್ಲಿ ಕಂಡುಬಂದಿದೆ.

    1.1 ಲಕ್ಷ ಮಹಿಳೆಯರು ಹಾಗೂ 1 ಲಕ್ಷ ಪುರುಷರನ್ನೊಳಗೊಂಡು ನಡೆಸಲಾದ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯ ಪ್ರಕಾರ, ರಾಜಸ್ಥಾನ, ಹರಿಯಾಣ, ಚಂಡೀಗಢ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಮಧ್ಯ ಪ್ರದೇಶ, ಅಸ್ಸಾಂ, ಕೇರಳ, ಲಕ್ಷದ್ವೀಪ, ಪುದುಚೇರಿ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಮಹಿಳೆಯರ ಲೈಂಗಿಕ ಪಾಲುದಾರರ ಸಂಖ್ಯೆ ಪುರುಷರಿಗಿಂತ ಹೆಚ್ಚಾಗಿದೆ. ಇದನ್ನೂ ಓದಿ: ನ್ಯೂಯಾರ್ಕ್‍ನಲ್ಲಿ ಗಾಂಧಿ ಪ್ರತಿಮೆ ಧ್ವಂಸ – ಎರಡು ವಾರಗಳಲ್ಲಿ 2ನೇ ಬಾರಿಗೆ ಕೃತ್ಯ

    ರಾಜಸ್ಥಾನದಲ್ಲಿ ಮಹಿಳೆಯರು ಹೊಂದಿರುವ ಲೈಂಗಿಕ ಪಾಲುದಾರರ ಪ್ರಮಾಣ ಶೇ.3.1 ರಷ್ಟಿದೆ. ಇದು ಪುರುಷರಲ್ಲಿ ಶೇ.1.8 ಆಗಿದೆ. ಆದರೆ ಕಳೆದ 1 ವರ್ಷದ ಅವಧಿಯಲ್ಲಿ ತಮ್ಮ ಸಂಗಾತಿಗಳಲ್ಲದವರು ಅಥವಾ ಲಿವ್ ಇನ್ ರಿಲೇಶನ್‌ನಲ್ಲಿ ಮಹಿಳೆಯರೊಂದಿಗೆ ಲೈಂಗಿಕ ಸಂಬಂಧ ಹೊಂದಿರುವ ಪುರುಷರ ಪ್ರಮಾಣ ಶೇ.4 ರಷ್ಟಿದ್ದರೆ. ಇದು ಮಹಿಳೆಯರಲ್ಲಿ ಶೇ0.5ರಷ್ಟಿದೆ. ಇದನ್ನೂ ಓದಿ: ರೋಹಿಣಿ ಸಿಂಧೂರಿ ವಿರುದ್ಧ ಕರ್ತವ್ಯ ಲೋಪ ಆರೋಪ – 1,500 ಪುಟಗಳ ದಾಖಲೆ ಸಲ್ಲಿಸಿದ ಸಾ.ರಾ.ಮಹೇಶ್

    2019-21ರ ಅವಧಿಯಲ್ಲಿ ನಡೆಸಿದ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ-5ರಲ್ಲಿ 28 ರಾಜ್ಯಗಳು ಮತ್ತು 8 ಕೇಂದ್ರಾಡಳಿತ ಪ್ರದೇಶಗಳಿಂದ ದೇಶದ 707 ಜಿಲ್ಲೆಗಳನ್ನು ಸಮೀಕ್ಷೆಗೆ ಒಳಪಡಿಸಿದೆ. ರಾಷ್ಟ್ರೀಯ ವರದಿಯು ಸಾಮಾಜಿಕ-ಆರ್ಥಿಕ ಮತ್ತು ಇತರ ಹಿನ್ನೆಲೆಗೆ ಸಂಬಂಧಿಸಿದ ಡೇಟಾವನ್ನು ಸಹ ಒದಗಿಸುತ್ತದೆ. ಇದು ನೀತಿ ನಿರೂಪಣೆ ಮತ್ತು ಪರಿಣಾಮಕಾರಿ ಕಾರ್ಯಕ್ರಮ ಅನುಷ್ಠಾನಕ್ಕೆ ಉಪಯುಕ್ತವಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಖ್ಯಾತ ಹಾಸ್ಯ ನಟ ರಾಜು ಶ್ರೀವಾತ್ಸವ್ ಸ್ಥಿತಿ ಗಂಭೀರ; ಮೆದುಳು ಕೆಲಸ ಮಾಡುತ್ತಿಲ್ಲ ಎನ್ನುತ್ತಿವೆ ಮೂಲಗಳು

    ಖ್ಯಾತ ಹಾಸ್ಯ ನಟ ರಾಜು ಶ್ರೀವಾತ್ಸವ್ ಸ್ಥಿತಿ ಗಂಭೀರ; ಮೆದುಳು ಕೆಲಸ ಮಾಡುತ್ತಿಲ್ಲ ಎನ್ನುತ್ತಿವೆ ಮೂಲಗಳು

    ಬಾಲಿವುಡ್ ಖ್ಯಾತ ಕಾಮಿಡಿಯನ್, ಸ್ಟ್ಯಾಂಡಪ್ ಕಾಮಿಡಿ ಮೂಲಕ  ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿರುವ ರಾಜು ಶ್ರೀವಾತ್ಸವ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿದೆ ಎನ್ನಲಾಗುತ್ತಿದೆ. ದಿನದಿಂದ ದಿನಕ್ಕೆ ಅವರು ಆರೋಗ್ಯ ಸ್ಥಿತಿ ಇಳಿಮುಖದತ್ತ ಹೆಜ್ಜೆ ಹಾಕುತ್ತಿದ್ದು, ಇದೀಗ ಗಂಭೀರ ಸ್ಥಿತಿಯಲ್ಲಿ ಅವರು ಇದ್ದಾರೆ ಎನ್ನಲಾಗುತ್ತಿದೆ. ಅವರು ಬದುಕುಳಿಯಲು ಪವಾಡವೇ ನಡೆಯಬೇಕು ಎನ್ನುವ ಮಾತು ಕೇಳಿ ಬರುತ್ತಿದೆ.

    ಆಗಸ್ಟ್ 10 ರಂದು ರಾಜು ಅವರು ಜಿಮ್ ನಲ್ಲಿ ವರ್ಕೌಟ್ ಮಾಡುವಾಗ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ದೆಹಲಿ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಒಂದು ವಾರದಿಂದ ದೆಹಲಿ ಏಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಜು ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಇಲ್ಲ ಎಂದು ಹೇಳಲಾಗುತ್ತಿದೆ. ಈಗಾಗಲೇ ಮೆದುಳು ತನ್ನ ಕೆಲಸವನ್ನು ನಿಲ್ಲಿಸಿದೆ ಎನ್ನುತ್ತವೆ ಮೂಲಗಳು. ಆದರೂ, ವೈದ್ಯರು ತಮ್ಮ ಕೆಲಸವನ್ನು ಮುಂದುವರೆಸಿದ್ದಾರಂತೆ. ಇದನ್ನೂ ಓದಿ:ಬಿಗ್ ಬಾಸ್ ಮನೆಯಲ್ಲಿ ಬಿಕ್ಕಿ ಬಿಕ್ಕಿ ಅತ್ತ ಆರ್ಯವರ್ಧನ್ ಗುರೂಜಿ

    ಬಾಜಿಗರ್, ಬಾಂಬೆ ಟು ಗೋವಾ, ಮೈನೆ ಪ್ಯಾರ್ ಕಿಯಾ ಸೇರಿದಂತೆ ಸಾಕಷ್ಟು ಹಿಂದಿ ಚಿತ್ರಗಳಲ್ಲಿ ಹಾಸ್ಯ ಕಲಾವಿದರಾಗಿ ನಟಿಸಿರುವ ರಾಜು, ತಮ್ಮದೇ ಆದ ಮ್ಯಾನರಿಸಂ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ಕೇವಲ ಸಿನಿಮಾಗಳಲ್ಲಿ ಮಾತ್ರವಲ್ಲ, ಸ್ಟ್ಯಾಂಡ್ ಅಪ್ ಕಾಮಿಡಿಯನ್ ಆಗಿ ನಗಿಸಿದ್ದಾರೆ. ಅಲ್ಲದೇ, ಹಿಂದಿ ಬಿಗ್ ಬಾಸ್ ಶೋ ಗೂ ಇವರು ಸ್ಪರ್ಧಿಯಾಗಿ ಹೋಗಿದ್ದರು. ನೂರಾರು ಸಿನಿಮಾಗಳಲ್ಲಿ ನಟಿಸಿರುವ ರಾಜು, ಬೇಗ ಗುಣಮುಖರಾಗಿ ಬರಲಿ ಎನ್ನುವುದು ಅವರ ಅಭಿಮಾನಿಗಳ ಆಸೆ.

    Live Tv
    [brid partner=56869869 player=32851 video=960834 autoplay=true]

  • ಶೂಟಿಂಗ್ ವೇಳೆ ಅವಘಡ: ಆಸ್ಪತ್ರೆ ಸೇರಿದ ಬಾಹುಬಲಿ ಬಿಜ್ಜಳದೇವ ಪಾತ್ರಧಾರಿ ನಾಸರ್

    ಶೂಟಿಂಗ್ ವೇಳೆ ಅವಘಡ: ಆಸ್ಪತ್ರೆ ಸೇರಿದ ಬಾಹುಬಲಿ ಬಿಜ್ಜಳದೇವ ಪಾತ್ರಧಾರಿ ನಾಸರ್

    ನ್ನಡವೂ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿರುವ ಹಿರಿಯ ಕಲಾವಿದ ನಾಸರ್ ಕಣ್ಣಿಗೆ ಪೆಟ್ಟು ಮಾಡಿಕೊಂಡು ಆಸ್ಪತ್ರೆ ಸೇರಿದ್ದಾರೆ. ತೆಲಂಗಾಣ ಪೊಲೀಸ್ ಅಕಾಡಮಿಯಲ್ಲಿ ನಡೆದ ಶೂಟಿಂಗ್ ವೇಳೆ ಮೆಟ್ಟಿಲಿನಿಂದ ಬಿದ್ದ ನಾಸರ್ ಅವರಿಗೆ ಕಣ್ಣಿಗೆ ಬಲವಾದ ಪೆಟ್ಟು ಬಿದ್ದಿದೆ. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೆಟ್ಟು ತೀವ್ರವಾಗಿ ಬಿದ್ದಿದ್ದರಿಂದ ಶಸ್ತ್ರ ಚಿಕಿತ್ಸೆ ಕೂಡ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

    ಈ ಶೂಟಿಂಗ್ ವೇಳೆ ಸುಹಾಸಿನಿ ಮಣಿರತ್ನ, ಸಯ್ಯಾಜಿ ಶಿಂಧೆ ಸೇರಿದಂತೆ ಹಲವು ಕಲಾವಿದರು ಭಾಗಿಯಾಗಿದ್ದರು. ಮೆಟ್ಟಿಲಿನಿಂದ ಇಳಿದು ಬರುವ ದೃಶ್ಯವನ್ನು ನಿರ್ದೇಶಕರು ಸೆರೆ ಹಿಡಿಯುತ್ತಿದ್ದರು ಎನ್ನಲಾಗುತ್ತಿದೆ. ನಾಸರ್ ಈ ಸಮಯದಲ್ಲಿ ಆಯಾ ತಪ್ಪಿ ಬಿದ್ದಿದ್ದಾರೆ. ರಭಸವಾಗಿಯೇ ನಾಸರ್ ಬಿದ್ದಿದ್ದರಿಂದ ಏಟಾಗಿದೆ ಎಂದು ಹೇಳಲಾಗುತ್ತಿದೆ.

    ನಾಸರ್ ಕನ್ನಡದಲ್ಲೂ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. ತಮಿಳು, ತೆಲುಗು, ಮಲೆಯಾಳಂ, ಹಿಂದಿ ಹೀಗೆ ಹಲವು ಭಾಷೆಯ ಚಿತ್ರಗಳಲ್ಲೂ ಇವರು ಕಾಣಿಸಿಕೊಂಡಿದ್ದಾರೆ. ಅದರಲ್ಲೂ ರಾಜಮೌಳಿ ನಿರ್ದೇಶನದ ಬಾಹುಬಲಿ ಸಿನಿಮಾದ ಬಿಜ್ಜಳದೇವ ಪಾತ್ರದ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಅವರು ಅಭಿಮಾನಿಗಳನ್ನು ಗಳಿಸಿದ್ದರು. ಸದ್ಯ ಆರೋಗ್ಯ ಸ್ಥಿರವಾಗಿದ್ದು, ಅಭಿಮಾನಿಗಳು ಆತಂಕ ಪಡಬೇಕಾಗಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬೀದಿ ಬದಿ ಪಾನಿಪುರಿ ತಿಂದು 100ಕ್ಕೂ ಹೆಚ್ಚು ಜನ ಅಸ್ವಸ್ಥ

    ಬೀದಿ ಬದಿ ಪಾನಿಪುರಿ ತಿಂದು 100ಕ್ಕೂ ಹೆಚ್ಚು ಜನ ಅಸ್ವಸ್ಥ

    ಕೋಲ್ಕತ್ತಾ: ಬೀದಿ ಬದಿ ಮಾರುವ ಪಾನಿಪುರಿ ತಿಂದು 100ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಸುಗಂಧ ಗ್ರಾಮ ಪಂಚಾಯತ್‌ನ ಡೋಗಾಚಿಯಾ ಪ್ರದೇಶದಲ್ಲಿ ನಡೆದಿದೆ. ಅತಿಸಾರದಿಂದ ಅಸ್ವಸ್ಥಗೊಂಡಿರುವುದಾಗಿ ಶಂಕಿಸಲಾಗಿದೆ.

    ಅತಿಸಾರ ಲಕ್ಷಣಗಳು ಕಂಡುಬಂದಿದ್ದು, ವಾಂತಿ ಹಾಗೂ ಹೊಟ್ಟೆ ನೋವು ಕಾಣಿಸಿಕೊಂಡಿರುವುದಾಗಿ ಸ್ಥಳೀಯರು ದೂರು ನೀಡಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಸರ್ಕಾರ ರಚಿಸಿದ್ದ ಎಸಿಬಿ ರದ್ದು – ಲೋಕಾಯುಕ್ತ ಪೊಲೀಸರಿಗೆ ಹೈಕೋರ್ಟ್ ಮರುಜೀವ

    ಮಾಹಿತಿ ಪಡೆದ ಆರೋಗ್ಯ ಇಲಾಖೆಯ ವಿಶೇಷ ತಂಡ ಸ್ಥಳಕ್ಕೆ ಆಗಮಿಸಿ ರೋಗಿಗಳಿಗೆ ಔಷಧ ವಿತರಣೆ ಮಾಡಿದ್ದಾರೆ. ಗಂಭೀರ ಅನಾರೋಗ್ಯ ಪರಿಣಾಮ ಕಂಡುಬಂದಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸುವಂತೆ ತಂಡವು ಸೂಚಿಸಿದೆ.

    ಅನಾರೋಗ್ಯಕ್ಕೆ ಒಳಗಾದವರಲ್ಲಿ ಡೊಗಾಚಿಯಾ, ಬಹಿರ್ ರಣಗಾಚಾ ಹಾಗೂ ಮಕಲ್ತಲಾ ನಿವಾಸಿಗಳು ಸೇರಿದ್ದಾರೆ ಎಂದು ವರದಿಯಾಗಿದೆ.

    Live Tv
    [brid partner=56869869 player=32851 video=960834 autoplay=true]