Tag: health

  • ಎಲ್ಲಾ ಪ್ರಜೆಗಳಿಗೆ ಸಿಗಲಿದೆ ಹೆಲ್ತ್ ಐಡಿ ಕಾರ್ಡ್ – ವಿಶೇಷತೆ ಏನು? ಲಾಭ ಏನು?

    ಎಲ್ಲಾ ಪ್ರಜೆಗಳಿಗೆ ಸಿಗಲಿದೆ ಹೆಲ್ತ್ ಐಡಿ ಕಾರ್ಡ್ – ವಿಶೇಷತೆ ಏನು? ಲಾಭ ಏನು?

    ನವದೆಹಲಿ: ಇನ್ನು ಮುಂದೆ ದೇಶದ ಎಲ್ಲ ಪ್ರಜೆಗಳು ಒಂದೇ ಕ್ಲಿಕ್ ನಲ್ಲಿ ತಮ್ಮ ಆರೋಗ್ಯ ಮಾಹಿತಿಯನ್ನು ಪಡೆದುಕೊಳ್ಳಬಹುದು.

    ದೇಶದ ಜನತೆಗೆ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಸಮರ್ಪಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಯೊಬ್ಬ ಭಾರತೀಯರು ಈಗ ಡಿಜಿಟಲ್ ಹೆಲ್ತ್ ಐಡಿಯನ್ನು ಪಡೆಯಬಹುದು. ಡಿಜಿಟಲ್ ಆರೋಗ್ಯ ಪರಿಸರ ವ್ಯವಸ್ಥೆಯಲ್ಲಿ ಇದು ಪ್ರಮುಖ ಪಾತ್ರ ವಹಿಸಲಿದೆ. ಹೇಗೆ ಯುಪಿಐ ಕಾರ್ಯನಿರ್ವಹಿಸುತ್ತದೋ ಅದೇ ರೀತಿಯಾಗಿ ಇದು ಕಾರ್ಯ ನಿರ್ವಹಿಸಲಿದೆ ಎಂದು ತಿಳಿಸಿದರು.

    https://twitter.com/PIB_India/status/1442376458509316098

    ಪ್ರತಿಯೊಬ್ಬ ನಾಗರಿಕರ ಆರೋಗ್ಯ ದಾಖಲೆಗಳು ಈಗ ಡಿಜಿಟಲ್ ನಲ್ಲಿ ಸುರಕ್ಷಿತವಾಗಿರುತ್ತದೆ. ಬಡ ಮತ್ತು ಮಧ್ಯಮ ವರ್ಗದ ವೈದ್ಯಕೀಯ ಚಿಕಿತ್ಸೆಯಲ್ಲಿನ ಸಮಸ್ಯೆಗಳನ್ನು ನಿವಾರಿಸುವಲ್ಲಿ ಇದು ದೊಡ್ಡ ಪಾತ್ರವನ್ನು ವಹಿಸುತ್ತದೆ. ಮೂರು ವರ್ಷಗಳ ಹಿಂದೆ, ಪಂಡಿತ್ ದೀನದಯಾಳ್ ಉಪಾಧ್ಯಾಯರ ಜನ್ಮ ದಿನಾಚರಣೆಯಂದು ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೆ ತರಲಾಯಿತು. ಇಂದಿನಿಂದ ದೇಶಾದ್ಯಂತ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಆರಂಭವಾಗುತ್ತಿರುವುದಕ್ಕೆ ನನಗೆ ಸಂತೋಷವಾಗಿದೆ ಎಂದು ಮೋದಿ ಹೇಳಿದರು.

    130 ಕೋಟಿ ಆಧಾರ್ ಐಡಿಗಳು, 118 ಕೋಟಿ ಮೊಬೈಲ್ ಚಂದಾದಾರರು, ಸುಮಾರು 80 ಕೋಟಿ ಇಂಟರ್ನೆಟ್ ಬಳಕೆದಾರರು ಮತ್ತು 43 ಕೋಟಿ ಜನ್ ಧನ್ ಬ್ಯಾಂಕ್ ಖಾತೆಗಳು – ಇಂತಹ ಬೃಹತ್, ಸಂಪರ್ಕಿತ ಮೂಲಸೌಕರ್ಯವನ್ನು ಪ್ರಪಂಚದಲ್ಲಿ ಬೇರೆಲ್ಲಿಯೂ ಕಾಣಲು ಸಾಧ್ಯವಿಲ್ಲ ಎಂದು ಮೋದಿ ಮೆಚ್ಚುಗೆ ವ್ಯಕ್ತಪಡಿಸಿದರು.

    ಆರೋಗ್ಯ ಕಾರ್ಡ್ ನಲ್ಲಿ 14 ಅಂಕಿಗಳ ವಿಶಿಷ್ಟ ಗುರುತಿನ ಸಂಖ್ಯೆ ಇರಲಿದೆ. ಪ್ರತಿ ಪ್ರಜೆಯ ಆರೋಗ್ಯ ಖಾತೆಯಾಗಿ ಇದು ಕೆಲಸ ಮಾಡುತ್ತದೆ. ಈ ಕಾರ್ಡ್ ನಲ್ಲಿ ವ್ಯಕ್ತಿಯ ಆರೋಗ್ಯಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿಗಳ ಸಂಗ್ರಹ ಇರಲಿದೆ. ವೈಯಕ್ತಿಕ ಆರೋಗ್ಯ ದಾಖಲೆಗಳನ್ನು ಮೊಬೈಲ್ ಅಪ್ಲಿಕೇಷನ್ ಸಹಾಯದಿಂದ ಲಿಂಕ್ ಮಾಡಬಹುದು.

    ಕಳೆದ ವರ್ಷ ಘೋಷಣೆ:
    ಕಳೆದ ವರ್ಷದ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಪ್ರಾಯೋಗಿಕ ಯೋಜನೆಯನ್ನು ಪ್ರಧಾನಿ ಘೋಷಿಸಿದ್ದರು. 6 ಕೇಂದ್ರಾಡಳಿತ ಪ್ರದೇಶದಲ್ಲಿ ಇದನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಲಾಗುತ್ತದೆ.

    ಲಾಭ ಹೇಗೆ?
    ಈ ಸೇವೆ ದೇಶವ್ಯಾಪಿ ಇರಲಿದೆ. ವ್ಯಕ್ತಿ ಯಾವುದೇ ಮೂಲೆಗೆ ಹೋದಾಗ ಸಮಸ್ಯೆಯಾಗಿ ಆಸ್ಪತ್ರೆ ಸೇರಿದಾಗ ಆತನ ಆರೋಗ್ಯದ ಮಾಹಿತಿ ಕೂಡಲೇ ಸಿಗುವುದಿಲ್ಲ. ಆದರೆ ಈ ಆಪ್‍ನಲ್ಲಿ ವಿವರ ನೀಡಿದ್ದರೆ ಕೂಡಲೇ ವೈದ್ಯರಿಗೆ ಈ ಹಿಂದೆ ರೋಗಿಗೆ ಏನಾಗಿತ್ತು? ಯಾವ ಕಾರಣಕ್ಕೆ ಶಸ್ತ್ರ ಚಿಕಿತ್ಸೆ ನೀಡಲಾಗಿತ್ತು? ಈ ಹಿಂದೆ ಎಲ್ಲಿ ಚಿಕಿತ್ಸೆ ನೀಡಲಾಗಿತ್ತು ಈ ಎಲ್ಲ ವಿವರಗಳು ಕೂಡಲೇ ಸಿಗಲಿದೆ. ಇದರಿಂದಾಗಿ ಕಡಿಮೆ ಅವಧಿಯಲ್ಲಿ ರೋಗಿಗೆ ಸರಿಯಾದ ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ.  ಇದನ್ನೂ ಓದಿ: ಪ್ರತಿಭಟನೆ ವೇಳೆ ಡಿಸಿಪಿ ಮೇಲೆ ಕಾರು ಹತ್ತಿಸಲು ಯತ್ನ

    ಈ ಐಡಿ ಕಾರ್ಡ್ ಎಲ್ಲರಿಗೂ ಕಡ್ಡಾಯವಲ್ಲ. ಜನರು ಸ್ವಇಚ್ಛೆಯಿಂದ ಕಾರ್ಡ್ ಮಾಡಿಸಬಹುದು. ಆರಂಭದಲ್ಲಿ ಹೆಲ್ತ್ ಐಡಿ, ವೈಯಕ್ತಿಕ ಆರೋಗ್ಯ ಮಾಹಿತಿ, ಡಿಜಿ ಡಾಕ್ಟರ್ ಮತ್ತು ಹೆಲ್ತ್ ರಿಜಿಸ್ಟ್ರಿ ಇರಲಿದೆ. ನಂತರದ ದಿನಗಳಲ್ಲಿ ಇ ಫಾರ್ಮಾಸಿ ಮತ್ತು ಟೆಲಿಮೆಡಿಸಿನ್ ಸೇವೆಗಳನ್ನು ಸೇರಿಸಲಾಗುತ್ತದೆ ಎಂದು ವರದಿಯಾಗಿದೆ. ಈಗಾಗಲೇ ಹಲವು ದೇಶಗಳಲ್ಲಿ ಸರ್ಕಾರವೇ ಈ ರೀತಿಯ ಆರೋಗ್ಯ ಕಾರ್ಡ್‍ಗಳನ್ನು ನೀಡಿವೆ.

  • ಕಡಲೆಕಾಯಿ ಬೀಜದ ಚಮತ್ಕಾರಗಳು ನಿಮಗೂ ತಿಳಿದಿರಲಿ

    ಕಡಲೆಕಾಯಿ ಬೀಜದ ಚಮತ್ಕಾರಗಳು ನಿಮಗೂ ತಿಳಿದಿರಲಿ

    ವಾಲ್‍ನಟ್ಸ್ ಮತ್ತು ಬಾದಾಮಿಯಂತಹ ವಿವಿಧ ಒಣ ಬೀಜಗಳು ಹೃದಯಕ್ಕೆ ಆರೋಗ್ಯಕರ ಆಹಾರಗಳಾಗಿವೆ. ಇದರೊಟ್ಟಿಗೆ ಕಡಲೆಕಾಯಿಯೂ ಅಷ್ಟೇ ಪರಿಣಾಮಕಾರಿಯಾಗಿದೆ. ನಾವು ಪ್ರತಿನಿತ್ಯ ಸಿಹಿ ಅಥವಾ ಖಾರದ ತಿನಿಸಿನೊಡನೆ ಕಡಲೇಕಾಯಿ ಬೀಜವನ್ನು ಸೇವನೆ ಮಾಡುತ್ತೇವೆ. ಇದರಲ್ಲಿ ಆರೋಗ್ಯಕ್ಕೆ ಅಗತ್ಯವಾದ ಪ್ರೋಟೀನ್, ಆರೋಗ್ಯಕರ ಕೊಬ್ಬು, ಪೋಷಕಾಂಶಗಳು ಹೇರಳವಾಗಿದೆ. ಹೀಗಾಗಿ ನಿಮ್ಮ ಆಹಾರ ಪದ್ದತಿಯಲ್ಲಿ ಕಡಲೆಕಾಯಿಯನ್ನು ಸೆರ್ಪಡೆ ಮಾಡಿಕೊಳ್ಳುವುದರ ಮೂಲಕವಾಗಿ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳ ಬಹುದಾಗಿದೆ.

    * ಕಡಲೆಕಾಯಿ ಕೊಲೆಸ್ಟ್ರಾಲ್ ನಿಯಂತ್ರಿಸಿ ಹೃದಯಕ್ಕೆ ರಕ್ಷಾ ಕವಚವಾಗುತ್ತದೆ. ರಕ್ತ ಹೆಪ್ಪುಗಟ್ಟುವಿಕೆ ಕಡಿಮೆ ಮಾಡುವ ಮೂಲಕ ಪಾಶ್ರ್ವವಾಯು ಬಾರದಂತೆ ಆರೋಗ್ಯ ಕಾಪಾಡುತ್ತದೆ. ಇದನ್ನೂ ಓದಿ: USನಿಂದ 157 ಪುರಾತನ ಕಲಾಕೃತಿಗಳನ್ನು ವಾಪಸ್ ಭಾರತಕ್ಕೆ ತಂದ ಪ್ರಧಾನಿ ಮೋದಿ

    * ಸರಿಯಾದ ಪ್ರಮಾಣದಲ್ಲಿ ಕಡಲೇಕಾಯಿ ಸೇವಿಸುವುದರಿಂದ ಪುರುಷ ಮತ್ತು ಮಹಿಳೆಯರ ಪಿತ್ತಕೋಶದಲ್ಲಿ ಕಲ್ಲುಗಳು ಕಂಡು ಬರುವುದಿಲ್ಲ.

    * ಕಡಲೆಕಾಯಿಯಲ್ಲಿ ಹೆಚ್ಚಿನ ಅಂಶದ ಕ್ಯಾಲೋರಿ ಮತ್ತು ಕೊಬ್ಬು ಕಂಡು ಬಂದರೂ ಅವು ತೂಕ ಹೆಚ್ಚಿಸುವುದಿಲ್ಲ ,ಆರೋಗ್ಯಕರ ಕೊಬ್ಬು ಮತ್ತು ತೂಕ ಕಾಯ್ದುಕೊಳ್ಳುವ ಮೂಲಕ ಬೊಜ್ಜಿನ ದೇಹದ ಅಪಾಯ ತಡೆಯುತ್ತವೆ. ಇದನ್ನೂ ಓದಿ: ಹೂವಿನ ಬೆಲೆ ಕುಸಿತ, ಗುಲಾಬಿ ತೋಟಕ್ಕೆ ಬೆಂಕಿ ಇಟ್ಟ ರೈತ

    * ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚಿಸುವುದಿಲ್ಲ. ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ಟೈಪ್ 2 ಡಯಾಬಿಟೀಸ್ ಅಪಾಯವನ್ನು ಕಡಿಮೆ ಮಾಡುತ್ತದೆ ಎನ್ನುತ್ತವೆ ಸಂಶೋಧನೆಗೆಳು.

    * ವಯಸ್ಸಾದವರಲ್ಲಿ ಗ್ಯಾಸ್ಟ್ರಿಕ್ ಅಲ್ಲದ ಅಡೆನೊಕಾರ್ಸಿನೋಮ ಎನ್ನುವ ಕ್ಯಾನ್ಸರ್ ಅಪಾಯ ಕಡಿಮೆ ಮಾಡುತ್ತದೆ.

    * ಅತ್ಯಧಿಕ ನಾರಿನಾಂಶವನ್ನು ಒಳಗೊಂಡ ಕಾರಣ ಜೀರ್ಣಕ್ರಿಯೆಗೆ ಸಹಕಾರಿ ಮತ್ತು ಊರಿಯೂತವನ್ನು ನಿಯಂತ್ರಣದಲ್ಲಿಡುತ್ತದೆ.

  • ಈ ಲಕ್ಷಣಗಳು ಕಂಡು ಬಂದರೆ ನಿಮಗೆ ಮರೆವಿನ ಕಾಯಿಲೆ ಇದೆ ಎಂದರ್ಥ

    ಈ ಲಕ್ಷಣಗಳು ಕಂಡು ಬಂದರೆ ನಿಮಗೆ ಮರೆವಿನ ಕಾಯಿಲೆ ಇದೆ ಎಂದರ್ಥ

    ವಯಸ್ಸಾದ ಬಳಿಕ ಸಾಕಷ್ಟು ಆರೋಗ್ಯ ಸಮಸ್ಯೆಗಳು ಕಾಡುವುದು ಸಾಮಾನ್ಯ. ಅದರಲ್ಲಿ ಪ್ರಮುಖವಾದ ಸಮಸ್ಯೆ ಎಂದರೆ ಮರೆವಿನ ಕಾಯಿಲೆ. ಹೌದು, ಇಂದು ವಿಶ್ವ ಅಲ್ಝೈಮರ್ ಡೇ (ಮರೆವಿನ ಕಾಯಿಲೆ) ವಯಸ್ಸಾದ ಬಳಿಕ ಒಂದೊಂದೇ ವಿಷಯದ ಬಗ್ಗೆ ಜ್ಞಾಪಕ ಶಕ್ತಿ ಕುಂದುತ್ತಾ ಬರುವುದೇ ಅಲ್ಝೈಮರ್ ಎನ್ನುತ್ತೇವೆ.

    ಈ ಕಾಯಿಲೆ ಪ್ರಾರಂಭದಲ್ಲಿ ಅಷ್ಟಾಗಿ ಸಮಸ್ಯೆ ಎನಿಸದೇ ಹೋದರೂ ಆ ನಂತರದಲ್ಲಿ ಇದೇ ದೊಡ್ಡ ಕಾಯಿಲೆಯಾಗಬಹುದು. ಇದನ್ನು ಮೊದಲ ಹಂತದಲ್ಲೇ ಆರೈಕೆ ಮಾಡಿದರೆ, ನಿಂಯತ್ರಣದಲ್ಲಿ ಇಡಬಹುದು. ಸಾಮಾನ್ಯವಾಗಿ 60 ರಿಂದ 80 ವರ್ಷ ವಯಸ್ಸಿನವರಲ್ಲಿ ಈ ಕಾಯಿಲೆ ಕಾಣಿಸಿಕೊಳ್ಳುತ್ತದೆ, ಇದು ಅನುವಂಶಿಯವಾಗಿಯೂ ಬರಬಹುದು. ಮರೆವಿನ ಕಾಯಿಲೆಗೆ ಇಂಥದ್ದೇ ಚಿಕಿತ್ಸೆ ಇರುವುದಿಲ್ಲ. ಆದರೆ, ಆರೋಗ್ಯ ಸಮಸ್ಯೆ ಎದುರಾದರೆ ಮಾತ್ರ ಚಿಕಿತ್ಸೆ ನೀಡಬಹುದು. ಮರೆವಿನ ಕಾಯಿಲೆಯ ಕೆಲವು ಹಂತಗಳು ಹೀಗಿವೆ.

    ಮೊದಲ ಹಂತ: ಈ ಹಂತದಲ್ಲಿ ಅಲ್ಝೈಮರ್ ಇರುವ ವ್ಯಕ್ತಿಯಲ್ಲಿ ಯಾವುದೇ ರೀತಿಯ ದೌರ್ಬಲ್ಯ ಕಂಡು ಬರುವುದಿಲ್ಲ. ಸಣ್ಣ ಪುಟ್ಟ ಮರೆವುಗಳು ಮಾತ್ರ ಕಾಣಿಸುತ್ತವೆ. ಇಟ್ಟ ವಸ್ತುಗಳನ್ನು ಮರೆಯುತ್ತಿರುವುದು ಇತ್ಯಾದಿ. ಇದು ಅತಿ ಸಾಮಾನ್ಯವೆನಿಸುತ್ತದೆ. ಇದನ್ನೂ ಓದಿ:  ಶಾರುಖ್ ಅಭಿಮಾನಿಗೆ ಕೊನೆಗೂ ಸುಪ್ರೀಂನಲ್ಲಿ ಸಿಕ್ತು ಜಯ

    ಎರಡನೇ ಹಂತ: ಈ ಹಂತದಲ್ಲಿ ಮರೆವು ಕೊಂಚ ಏರಿಕೆಯಾಗಿರುತ್ತದೆ. ಇಟ್ಟ ವಸ್ತು ಆ ಕ್ಷಣದಲ್ಲೇ ಮರೆಯುವುದು, ಈಗಷ್ಟೇ ತಿಂದ ತಿಂಡಿಯನ್ನೇ ಮರೆಯುವುದು, ಮಾತುಗಳನ್ನು ಮರೆಯುವುದು ಇತ್ಯಾದಿ. ಆದರೆ, ಈ ಹಂತದಲ್ಲಿ, ತಾವು ಮರೆತ ವಿಷಯಗಳನ್ನು ಕೆಲವು ಕ್ಷಣದಲ್ಲಿ ನೆನಪು ಮಾಡಿಕೊಂಡರೆ ಮರುಕಳುಹಿಸುತ್ತಿರುತ್ತದೆ. ಈ ಹಂತದಲ್ಲಿಯೂ ಕೆಲವರು ಹೆಚ್ಚಾಗಿ ಗಮನ ಹರಿಸುವುದಿಲ್ಲ.

    ಮೂರನೇ ಹಂತ: ಈ ವೇಳೆ ಮರೆವು ಸ್ವಲ್ಪ ಹೆಚ್ಚಾಗಿಯೇ ಕಾಡುತ್ತದೆ. ದೈನಂದಿನ ಚಟುವಟಿಕೆಗಳನ್ನೇ ಮರೆಯುವುದು, ಹಣವನ್ನು ಎಣಿಸಲು ಸಾಧ್ಯವಾಗದೇ ಇರುವುದು, ಸರಳ ಸಮಸ್ಯೆಗಳನ್ನು ಪರಿಹರಿಸಲು ಆಗದೇ ಇರುವುದು, ಬಣ್ಣಗಳ ಗುರುತಿಸುವಿಕೆಯಲ್ಲಿ ಕಷ್ಟ, ಮಾತುಗಳನ್ನೇ ಮರೆಯುವುದು ಇತ್ಯಾದಿ ಸಮಸ್ಯೆಗಳು ಉಲ್ಭಣಗೊಳ್ಳುತ್ತಾ ಹೋಗುತ್ತವೆ. ಇದನ್ನೂ ಓದಿ:  ಸರ್ಕಾರದ ಅವೈಜ್ಞಾನಿಕ ನೀತಿಗಳಿಂದ ಗಣಿಗಾರಿಕೆ ಪ್ರದೇಶದಲ್ಲಿ ಸ್ಪೋಟಕ್ಕೆ ಜೀವಗಳು ಬಲಿ

    ಮಧ್ಯಮ ಹಂತ: ಈ ಹಂತದಲ್ಲಿ ಈ ಸಮಸ್ಯೆ ಇನ್ನಷ್ಟು ಹೆಚ್ಚಾಗಿ ಕಾಡ ತೊಡಗುತ್ತದೆ. ಸಂಬಂಧಗಳನ್ನೇ ಮರೆಯುವುದು, ವ್ಯಕ್ತಿಗಳನ್ನು ಗುರುತಿಸಲು ಆಗದೇ ಇರುವುದು, ತೀವ್ರ ಕೋಪ, ಆತಂಕ, ಒತ್ತಡ, ಚಡಪಡಿಕೆ ಇತ್ಯಾದಿ ಸಮಸ್ಯೆಗಳು ಉಲ್ಭಣವಾಗುತ್ತದೆ. ಈ ಹಂತದಲ್ಲಿಯೇ ವೈದ್ಯರನ್ನು ಕಾಣುವುದು ಹೆಚ್ಚು ಉತ್ತಮ.

    ಕೊನೆಯ ಹಂತ: ಮರೆವು ಕೊನೆಯ ಹಂತಕ್ಕೆ ತಲುಪಿದಾಗ ಸಾಕಷ್ಟು ಆರೋಗ್ಯ ಸಮಸ್ಯೆಗಳು ಕಾಡ ಬಹುದು. ದೈಹಿಕ ಚಟುವಟಿಕೆಗಳ ಮೇಲೆ ನಿಯಂತ್ರಣವಿಲ್ಲದೇ ಇರುವುದು, ಮಾತನಾಡುವುದನ್ನೇ ಮರೆಯುವುದು, ಖಿನ್ನತೆ, ಕರುಳು ಸಂಬಂಧ ಕಾಯಿಲೆ, ತೂಕ ಇಳಿಯುವುದು, ಆಹಾರ ಸೇವನೆಯಲ್ಲಿ ಕಷ್ಟ, ನರಳುವಿಕೆ ಇತ್ಯಾದಿ ಸಮಸ್ಯೆಗಳನ್ನು ಎದುರಿಸುತ್ತಾರೆ.  ಇದನ್ನೂ ಓದಿ:  ಭದ್ರಾವತಿ ಕ್ಷೇತ್ರದ ಅಭ್ಯರ್ಥಿ ಘೋಷಣೆ ಮಾಡಿದ ಹೆಚ್‍ಡಿಕೆ

    ಇದು ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಯಾದ್ದರಿಂದ ವೈದ್ಯರನ್ನು ಕಾಣುವುದರಿಂದ ಚಿಕಿತ್ಸೆ ಮೂಲಕ ಆರೋಗ್ಯ ಸಮಸ್ಯೆ ಬಗೆಹರಿಸಿಕೊಳ್ಳಬಹುದು, ಆದರೆ ಮರೆವನ್ನು ಸಂಪೂರ್ಣವಾಗಿ ಗುಣಪಡಿಸಲು ಆಗದು. ಇದನ್ನು ಆಪ್ತಸಮಾಲೋಚಕರನ್ನು ಭೇಟಿ ಮಾಡಿ, ಈ ಸಮಸ್ಯೆಯಿಂದಾಗುತ್ತಿರುವ ಮಾನಸಿಕ ಒತ್ತಡವನ್ನು ನಿಯಂತ್ರಿಸಿಕೊಳ್ಳುವ ಬಗ್ಗೆ ಸಲಹೆ ಪಡೆಯಬಹುದು.

  • ಬಾಳೆಹಣ್ಣು ಸೇವನೆಯಿಂದ ಆರೋಗ್ಯಕ್ಕೆ ಸಿಗುವ ಲಾಭಗಳೆನು ಗೊತ್ತಾ?

    ಬಾಳೆಹಣ್ಣು ಸೇವನೆಯಿಂದ ಆರೋಗ್ಯಕ್ಕೆ ಸಿಗುವ ಲಾಭಗಳೆನು ಗೊತ್ತಾ?

    ಬಾಳೆಹಣ್ಣನ್ನು ಅತ್ಯಂತ ಆರೋಗ್ಯಕರ ಹಣ್ಣೆಂದು ಪರಿಗಣಿಸಲಾಗುತ್ತದೆ. ಈ ಹಣ್ಣನ್ನು ಪ್ರತಿನಿತ್ಯ ತಿನ್ನುವುದರಿಂದ ಅನೇಕ ಪ್ರಯೋಜನಗಳನ್ನು ಪಡೆಯಬಹುದು. ಇದರಲ್ಲಿರುವ ಪೋಷಕಾಂಶಗಳಿಂದ ಉತ್ತಮ ಆರೋಗ್ಯವನ್ನು ಪಡೆಯಬಹುದು. ಹಾಗಿದ್ದರೆ ಬಾಳೆಹಣ್ಣಿನಿಂದ ನಿಮ್ಮ ಆರೋಗ್ಯಕ್ಕೆ ಸಿಗುವ ಲಾಭಗಳೇನು ಎಂದು ತಿಳಿದುಕೊಳ್ಳಲು ಇಲ್ಲಿದೆ ಕೆಲವು ಮಾಹಿತಿ.

    * ಮುಖ್ಯವಾಗಿ ಬಾಳೆ ಹಣ್ಣಿನಲ್ಲಿರುವ ಅಂಟಿ-ಅಕ್ಸಿಡೆಂಟ್‍ಗಳು ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ

    * ಬಾಳೆಹಣ್ಣಿನಲ್ಲಿ ಪೋಷಕಾಂಶಗಳು ಹೇರಳವಾಗಿವೆ. ಇದರಲ್ಲಿ ವಿಟಮಿನ್ ಎ, ಬಿ, ಬಿ 6, ಸಿ, ಕಬ್ಬಿಣ, ಕ್ಯಾಲ್ಸಿಯಂ, ಮೆಗ್ನೀಸಿಯಮ್, ರಿಬೋಫ್ಲಾವಿನ್, ನಿಯಾಸಿನ್, ಫೋಲಿಕ್ ಆಸಿಡ್ ಮತ್ತು ಪೊಟ್ಯಾಸಿಯಮ್ ಸಮೃದ್ಧವಾಗಿದೆ. ಮಹಿಳೆಯರು ವಿಶೇಷವಾಗಿ ಬಾಳೆಹಣ್ಣನ್ನು ಪ್ರತಿದಿನ ತಿನ್ನಬೇಕು. ಆಗ ಮಾತ್ರ ಅವರು ದೇಹದಲ್ಲಿರುವ ಕಬ್ಬಿಣ ಮತ್ತು ಕ್ಯಾಲ್ಸಿಯಂ ಕೊರತೆಯನ್ನು ಹೋಗಲಾಡಿಸಬಹುದು.

    * ರಕ್ತಹೀನತೆಯು ದೇಹದಲ್ಲಿ ಕಬ್ಬಿಣದ ಕೊರತೆಯಿಂದ ಉಂಟಾಗುತ್ತದೆ. ಬಾಳೆಹಣ್ಣಿನಲ್ಲಿ ಕಬ್ಬಿಣಾಂಶ ಅಧಿಕವಾಗಿದೆ. ಪ್ರತಿದಿನ ಬಾಳೆಹಣ್ಣನ್ನು ತಿನ್ನುವುದರಿಂದ ದೇಹದಲ್ಲಿ ರಕ್ತದ ಕೊರತೆ ಕಡಿಮೆಯಾಗುತ್ತದೆ. ಇದು ರಕ್ತಹೀನತೆಗೆ ಕಾರಣವಾಗಬಹುದಾದ ಅಂಶಗಳನ್ನು ದೂರ ಮಾಡುತ್ತದೆ.

    * ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಹೃದಯಾಘಾತ, ಪಾಶ್ರ್ವವಾಯು, ಹೃದ್ರೋಗದಿಂದ ಬಾಳೆಹಣ್ಣು ಮುಕ್ತಿ ನೀಡುತ್ತದೆ.

    * ಬಾಳೆಹಣ್ಣಿನಲ್ಲಿ ವಿಟಮಿನ್-ಬಿ 6 ಸಮೃದ್ಧವಾಗಿದೆ. ಇದು ಮೆದುಳಿನ ಕಾರ್ಯವನ್ನು ಸುಧಾರಿಸಲು ಕೆಲಸ ಮಾಡುತ್ತದೆ. ಅಲ್ಲದೆ ಇದರಲ್ಲಿರುವ ಪ್ರೋಟೀನ್ ಮೆದುಳನ್ನು ಸಡಿಲಗೊಳಿಸುತ್ತದೆ. ಬಾಳೆಹಣ್ಣಿನಲ್ಲಿರುವ ಮೆಗ್ನೀಸಿಯಮ್ ನರಮಂಡಲದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ.

    * ಈ ಹಣ್ಣಿನಲ್ಲಿ ಹೆಚ್ಚಿನ ಫೈಬರ್ ಅಂಶವಿರುವುದರಿಂದ ಬೌಲ್ ಮೂವ್‍ಮೆಂಟ್ ಮತ್ತು ಮಲಬದ್ದತೆ ಸಮಸ್ಯೆಗೆ ಸಹಾಯ ಮಾಡುತ್ತದೆ.

    * ಬಾಳೆಹಣ್ಣನ್ನು ಪ್ರತಿನಿತ್ಯ ತಿನ್ನುವುದರಿಂದ ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಬಹುದು. ಹಾಗೆಯೇ ಬಿಪಿ ನಿಯಂತ್ರಣದಲ್ಲಿರುತ್ತದೆ.

  • ಆರೋಗ್ಯ ಕವಚ ಸೇವೆಯಡಿ 120 ಅಂಬುಲೆನ್ಸ್ ಸೇರ್ಪಡೆ – ಸಿಎಂ ಲೋಕಾರ್ಪಣೆ

    ಆರೋಗ್ಯ ಕವಚ ಸೇವೆಯಡಿ 120 ಅಂಬುಲೆನ್ಸ್ ಸೇರ್ಪಡೆ – ಸಿಎಂ ಲೋಕಾರ್ಪಣೆ

    – ಆಸ್ಪತ್ರೆ ಮ್ಯಾಪಿಂಗ್, ಜಿಪಿಎಸ್ ತಂತ್ರಜ್ಞಾನದ ಮೂಲಕ ಅಂಬುಲೆನ್ಸ್ ಸೇವೆ

    ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರೋಗ್ಯ ಕವಚ ಯೋಜನೆಯಡಿ ನೂತನವಾಗಿ ಸೇರ್ಪಡೆಗೊಳಿಸಿರುವ 120 ಅಂಬುಲೆನ್ಸ್‌‌ಗಳನ್ನು ವಿಧಾನಸೌಧದ ಮುಂಭಾಗ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲೋಕಾರ್ಪಣೆ ಮಾಡಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಆರೋಗ್ಯ ಕವಚ ಯೋಜನೆಯಡಿ 710 ಅಂಬುಲೆನ್ಸ್ ಕಾರ್ಯನಿರ್ವಹಿಸುತ್ತಿದ್ದು, ಅದರಲ್ಲಿ 155 ಅಡ್ವಾನ್ಸ್ಡ್ ಲೈಫ್ ಸಪೋರ್ಟ್ (ALS) ಅಂಬುಲೆನ್ಸ್ ಆಗಿವೆ. ಇಂದು ಲೋಕಾರ್ಪಣೆಗೊಂಡಿರುವ 120 ಅಂಬುಲೆನ್ಸ್‌‌  ಅಡ್ವಾನ್ಸ್ಡ್ ಲೈಫ್ ಸಪೋರ್ಟ್ (ALS) ಅಂಬುಲೆನ್ಸ್ ಆಗಿವೆ ಎಂದು ತಿಳಿಸಿದರು.

    ಅಂಬುಲೆನ್ಸ್‌‌ ಸೇವೆ ಆರೋಗ್ಯ ಸೇವೆಯ ಪ್ರಮುಖ ಅಂಗವಾಗಿದ್ದು ತುರ್ತುಪರಿಸ್ಥಿತಿಗಲ್ಲಿ ಜೀವ ಉಳಿಸಲು ನಿರ್ಣಾಯಕ ಪಾತ್ರ ವಹಿಸುತ್ತವೆ. ಹೃದ್ರೋಗ, ಸ್ಟ್ರೋಕ್ ಮುಂತಾದ ಸಂದರ್ಭಗಳಲ್ಲಿ ಗೋಲ್ಡನ್ ಅವರ್ ಎಂದು ಕರೆಯಲ್ಪಡುವ ಸಮಯ ನಿರ್ಣಾಯಕವಾಗಿದ್ದು ಅಂಬುಲೆನ್ಸ್‌‌ ಸೇವೆಯ ಜಾಲ ವಿಸ್ತರಿಸಿ ಗುಣಮಟ್ಟ ಹೆಚ್ಚಿಸಿ ಉತ್ತಮ ಚಿಕಿತ್ಸೆನೀಡಲಾಗಿವುದು ಎಂದರು. ಇದನ್ನೂ ಓದಿ:  ಸರ್ಕಾರಿ ಆಸ್ಪತ್ರೆಯಲ್ಲಿ ಬೀದಿ ಶ್ವಾನಗಳ ಹಾವಳಿ – ರೋಗಿಗಳಲ್ಲಿ ಆತಂಕ

    2008ರಲ್ಲಿ ಅಂದಿನ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ ಹಾಗೂ ಅಂದಿನ ಆರೋಗ್ಯ ಸಚಿವ ಶ್ರೀರಾಮುಲು ಅವರ ಅವಧಿಯಲ್ಲಿ ಆರಂಭವಾದ ಆರೋಗ್ಯ ಕವಚ ಸೇವೆಗೆ ಆಧುನಿಕ ಸ್ಪರ್ಶ ನೀಡಲಾಗುವುದು. ಆಸ್ಪತ್ರೆಗಳ ಮ್ಯಾಪಿಂಗ್, ಜಿಪಿಎಸ್ ತಂತ್ರಜ್ಞಾನ ಅಳವಡಿಸಿಕೊಂಡರೆ ವ್ಯಕ್ತಿ ಕರೆ ಮಾಡಿದ 10-15 ನಿಮಿಷದಲ್ಲಿ ಅಂಬುಲೆನ್ಸ್‌‌ ತಲುಪಿ, ಸಮೀಪದ ಆಸ್ಪತ್ರೆಯನ್ನೂ ಗುರುತಿಸಬಹುದು. ಈಗ ನಗರ ಪ್ರದೇಶದಲ್ಲಿ 30-45 ನಿಮಿಷ ಹಾಗೂ ಗ್ರಾಮೀಣ ಭಾಗದಲ್ಲಿ 45 ನಿಮಿಷಕ್ಕಿಂತ ಹೆಚ್ಚು ಸಮಯ ಬೇಕಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ವೇಗವಾಗಿ ಸೇವೆ ದೊರಕುವಂತೆ ಸುಧಾರಣೆ ತರಲಾಗುವುದು. ಈ ನಿಟ್ಟಿನಲ್ಲಿ ಈಗಾಗಲೇ ನೂತನ ಟೆಂಡರ್ ಕರೆದಿದ್ದು, ಆದಷ್ಟು ಶೀಘ್ರದಲ್ಲಿ ಆರೋಗ್ಯ ಕವಚ ಸೇವೆಯನ್ನು ಇನ್ನಷ್ಟು ಸುಗಮಗೊಳಿಸಲಾಗುವುದು. ಪ್ರಸ್ತುತ 1 ಲಕ್ಷ ಜನಸಂಖ್ಯೆಗೆ ಒಂದು ಆಂಬ್ಯುಲೆನ್ಸ್ ಲಭ್ಯವಿದ್ದು, ಮುಂದಿನ ದಿನಗಳಲ್ಲಿ 40-50 ಸಾವಿರ ಜನಸಂಖ್ಯೆಗೆ ಒಂದು ಅಂಬುಲೆನ್ಸ್‌‌ ಲಭ್ಯತೆ ಕಲ್ಪಿಸಲಾಗುವುದು, ಅಂಬುಲೆನ್ಸ್ ಚಾಲಕರು ಹಾಗೂ ಅರೆ ವೈದ್ಯಕೀಯ ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸಿ, ಉತ್ಕೃಷ್ಟ ಸೇವೆ ನೆಧ್ವ ನಿಟ್ಟಿನಲ್ಲಿ ಅವರಿಗೆ ಹೆಚ್ಚಿನ ತರಬೇತಿ ನೀಡಲಾಗುವುದು ಎಂದರು. ಇದನ್ನೂ ಓದಿ: ರಾಜಕೀಯದಲ್ಲಿ ಅಧಿಕಾರ ಶಾಶ್ವತವಲ್ಲ: ಲಕ್ಷ್ಮಣ್ ಸವದಿ

    5 ಕೋಟಿ ಲಸಿಕೆಯತ್ತ ರಾಜ್ಯ ದಾಪುಗಾಲು:

    ರಾಜ್ಯದಲ್ಲಿ ದಿನಕ್ಕೆ ಸರಾಸರಿ 3.8 ಲಕ್ಷ ಡೋಸ್ ಲಸಿಕೆ ನೀಡಲಾಗುತ್ತಿದ್ದು, ಇದು ಇಡೀ ರಷ್ಯಾ ದೇಶದಲ್ಲಿ ನೀಡುತ್ತಿರುವ ಲಸಿಕೆಗಿಂತ ಹೆಚ್ಚಾಗಿದೆ. ಕರ್ನಾಟಕ 5 ಕೋಟಿ ಡೋಸ್ ಲಸಿಕೆ ವಿತರಣೆ ಪೂರೈಸುವತ್ತ ದಾಪುಗಾಲು ಇಡುತ್ತಿದ್ದು ಶೀಘ್ರವೇ ಈ ಮೈಲಿಗಲ್ಲು ತಲುಪಲಿದೆ ಎಂದರು.

  • ಸೌಂದರ್ಯಕ್ಕಿಂತ ಆರೋಗ್ಯವೇ ಮುಖ್ಯ: ರಮ್ಯಾ

    ಸೌಂದರ್ಯಕ್ಕಿಂತ ಆರೋಗ್ಯವೇ ಮುಖ್ಯ: ರಮ್ಯಾ

    ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ರಮ್ಯ ಅವರು ಆರೋಗ್ಯವೇ ಸಂಪತ್ತು, ಸೌಂದರ್ಯಕ್ಕಿಂತ ಆರೋಗ್ಯ ಮುಖ್ಯ ಎನ್ನುವ ಸಂದೇಶದೊಂದಿಗೆ ತನ್ನ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಕೆಲವು ಟಿಪ್ಸ್‌ಗಳನ್ನು ಶೇರ್ ಮಾಡಿಕೊಂಡಿದ್ದಾರೆ.

    ಆರೋಗ್ಯವೇ ಸಂಪತ್ತಾಗಿದೆ. ನಿಮ್ಮ ನೈಜ ಸೌಂದರ್ಯದಲ್ಲಿ ಆರಾಮವಾಗಿರಿ. ಜೀವನವನ್ನು ಆನಂದಿಸಲು ನಿಮಗೆ ಆರೋಗ್ಯ ಇಲ್ಲದಿದ್ದರೆ ಜೀವನದ ಪ್ರಯೋಜನವೇನು? ನಿಮ್ಮನ್ನು ಇತರರೊಂದಿಗೆ ಹೋಲಿಸುವುದನ್ನು ನಿಲ್ಲಿಸಿ. ಮಹಿಳೆಯರಿಗೆ ಕಬ್ಬಿಣಾಂಶಗಳು ದೇಹಕ್ಕೆ ಅಗತ್ಯವಾಗಿರುತ್ತದೆ. ಯಾವುದೇ ಆರೋಗ್ಯ ಸಲಹೆಗಳು ಇದ್ದರೆ ದಯವಿಟ್ಟು ಕಾಮೆಂಟ್‍ಗಳಲ್ಲಿ ಹಂಚಿಕೊಳ್ಳಿ. ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಎಂದು ಇನ್‍ಸ್ಟಾಗ್ರಾಮ್‍ನಲ್ಲಿ ಬರೆದುಕೊಂಡು ಒಂದು ವೀಡಿಯೋವನ್ನು ಹಂಚಿಕೊಂಡಿದ್ದಾರೆ.

    ವೀಡಿಯೋದಲ್ಲಿ ಏನಿದೆ?

    ಆರೋಗ್ಯದ ಕುರಿತಾಗಿ ನಾವು ಎಚ್ಚರಿಕೆಯಿಂದ ಇರಬೇಕು. ಆರೋಗ್ಯವೇ ಭಾಗ್ಯವಾಗಿದೆ. ಕೆಲಸವನ್ನು ಮಾಡಿ ಹಣ ಮಾಡುತ್ತೇವೆ. ಆದರೆ ನಮ್ಮ ಜೀವನವನ್ನು ಎಂಜಾಯ್ ಮಾಡಲು ನಾವು ಆರೋಗ್ಯವನ್ನು ಕಾಪಾಡಿಕೊಳ್ಳುವುದಿಲ್ಲ ಎಂದರೆ ಏನು ಪ್ರಯೋಜನ. ನಾನು ಈ ಹಿಂದೆ ಸಿನಿಮಾ ಎಂದು ಬ್ಯುಸಿಯಾಗಿರುತ್ತದ್ದೆನು. ಸರಿಯಾದ ಸಮಯಕ್ಕೆ ಊಟ ಮಾಡಲು ಆಗುತ್ತಿರಲಿಲ್ಲ ಹೀಗಾಗಿ ಆರೋಗ್ಯ ಹಾಳಾಗುತ್ತಿತ್ತು. ನನ್ನ ಪೋಷಕರು ಇಷ್ಟು ಕೆಸಲ ಮಾಡುತ್ತೀಯ, ಫೇಮಸ್ ಆಗುತ್ತೀಯ ಆದರೆ ಆರೋಗ್ಯವನ್ನು ಸರಿಯಾಗಿ ನೋಡಿಕೊಳ್ಳದೆ ಎಂಜಾಯ್ ಮಾಡೋದು ಯಾವಾಗ ಎಂದು ಕೇಳುತ್ತಿದ್ದರು. ಆರೋಗ್ಯವನ್ನು ಹಾಳು ಮಾಡಿಕೊಳ್ಳುತ್ತೀಯ ಎಂದು ಹೇಳುತ್ತೀದ್ದರು. ಹೀಗಾಗಿ ನಾನು ಆರೋಗ್ಯ ಕುರಿತಾಗಿ ಕಾಳಜಿಯನ್ನು ತೆಗೆದುಕೊಂಡೆ ಎಂದಿದ್ದಾರೆ. ಇದನ್ನೂ ಓದಿ:  ಬಿಜೆಪಿ ಓಕೆ, ಕಾಂಗ್ರೆಸ್ ಯಾಕೆ?:ಆರ್. ಅಶೋಕ್

     

    View this post on Instagram

     

    A post shared by Ramya/Divya Spandana (@divyaspandana)

    ಸರಿಯಾದ ಸಮಯಕ್ಕೆ ಊಟ ಮಾಡುತ್ತೇನೆ. ವ್ಯಾಯಾಮ ಮಾಡುತ್ತೇನೆ, ಹೆಚ್ಚಾಗಿ ನೀರು ಕುಡಿಯುತ್ತೇನೆ. ತರಕಾರಿ, ಹಣ್ಣುಗಳನ್ನು ಹೆಚ್ಚಾಗಿ ಸೇವಿಸುತ್ತೇನೆ. ಮಹಿಳೆಯರು ಹೆಚ್ಚಾಗಿ ಪ್ರೋಟಿನ್ ಅಂಶ ಇರುವ ಆಹಾರವನ್ನು ಸೇವಿಸುವುದು ಮುಖ್ಯವಾಗುತ್ತದೆ. ನಾವು ಮಹಿಳೆಯರು ಬೆಳ್ಳಗೆ ಇರಬೇಕು ಎಂದು ನಾವು ಎಲ್ಲರೂ ಅಂದುಕೊಳ್ಳುತ್ತೇವೆ. ಕಪ್ಪು ಇರುವವರೆ ಹೆಚ್ಚು ಚೆನ್ನಾಗಿ ಕಾಣಿಸಿಕೊಳ್ಳುತ್ತಾರೆ. ನಾನು ಅವರಂತೆ ಇರಬೇಕು ಚೆನ್ನಾಗಿ ಕಾಣಿಸಿಕೊಳ್ಳಬೇಕು ಎಂದು ಕೆಲವು ರಾಸಾಯನಿಕ ಕ್ರೀಮ್‍ಗಳನ್ನು ನಾವು ಬಳಸುತ್ತೇವೆ. ನಾನು ಹಾಗೆ ಇರಬೇಕು, ಹೀಗೆ ಇರಬೇಕು ಎನ್ನುವುದನ್ನು ತಲೆಯಿಂದ ಮೊದಲು ತೆಗೆದುಹಾಕಬೇಕು. ಇರುವ ನಮ್ಮ ಸೌಂದರ್ಯವನ್ನು ನಾವು ಹೇಗೆ ಕಾಪಾಡಿಕೊಳ್ಳುತ್ತೇವೆ ಎನ್ನುವುದು ಮುಖ್ಯವಾಗುತ್ತದೆ. ನಮ್ಮ ಹತ್ತಿರ ಇಲ್ಲದಿರುವುದರ ಕುರಿತಾಗಿ ಯೋಚನೆ ಮಾಡುವ ಬದಲು ಇರುವುದರಲ್ಲಿಯೆ ಹೆಮ್ಮೆ ಪಡಬೇಕು. ನನಗೆ ಸೌಂದರ್ಯಕ್ಕಿಂತ ಆರೋಗ್ಯನೆ ಮುಖ್ಯ ಎಂದು ಹೆಂಗಳೆಯರಿಗೆ ಸೌಂದರ್ಯದ ಕುರಿತಾಗಿ ಕಿವಿ ಮಾತು ಹೇಳಿದ್ದಾರೆ.

  • ಕಹಿಯಾದ ಹಾಗಲಕಾಯಿಯಲ್ಲಿದೆ ಹಲವು ಆರೋಗ್ಯಕರ ಅಂಶ

    ಕಹಿಯಾದ ಹಾಗಲಕಾಯಿಯಲ್ಲಿದೆ ಹಲವು ಆರೋಗ್ಯಕರ ಅಂಶ

    ಹಾಗಲಕಾಯಿ ಎಂದರೆ ಹಲವರು ಮೂಗು ಮುರಿಯುತ್ತಾರೆ. ಈ ಕಹಿಯಾದ ಹಾಗಲಕಾಯಿಂದ ಹಲವಾರು ಆರೋಗ್ಯಕರ ಅಂಶಗಳು ಸಿಗಲಿದೆ. ಕೆಲವರು ಹಾಗಲಕಾಯಿ ಅಂದ್ರೆ ಸಾಕು ಕಹಿ ಇರುವ ಕಾರಣ ಇಷ್ಟಪಡುವುದಿಲ್ಲ. ದೇಹಕ್ಕೆ ಖಾರ, ಉಪ್ಪು, ಹುಳಿಯ ಅಂಶ ಹೇಗೆ ಹಿತಮಿತವಾಗಿ ಬೇಕೋ ಅದೇ ರೀತಿ ಕಹಿ ಅಂಶ ಕೂಡಾ ಮುಖ್ಯ.

    ಹಾಗಲಕಾಯಿಯ ಹಲವು ರೀತಿಯಲ್ಲಿ ನಮ್ಮ ದೇಹಕ್ಕೆ ಉತ್ತಮವಾಗಿದೆ. ಪ್ರಮುಖವಾಗಿ ಇದರ ನಿಯಮಿತ ಸೇವನೆಯಿಂದ ಯಕೃತ್‍ನಲ್ಲಿ ಸಂಗ್ರಹವಾಗಿದ್ದ ವಿಷಕಾರಿ ವಸ್ತುಗಳನ್ನು ಹೊರಹಾಕಲು ಸಾಧ್ಯವಾಗುತ್ತದೆ. ಇದರ ನಿಯಮಿತ ಸೇವನೆಯಿಂದ ಮುಖದ ಮೊಡವೆಗಳೂ ಕಲೆ ಮಾಗಲು ಸಹಾಯ ಮಾಡುತ್ತದೆ. ಹಾಗಲಕಾಯಿಯ ಪ್ರಮುಖ ಆರು ಆರೋಗ್ಯಕಾರಿ ಗುಣಗಳೇನು ಎಂಬ ವಿವರ ಇಲ್ಲಿದೆ ನೋಡಿ.

    * ಇದು ನಿಮ್ಮ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಜತೆಗೆ ವೈರಸ್ ವಿರುದ್ಧ ಹೋರಾಡಲು ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

    * ಕೊಂಚ ಕಹಿ ಎನಿಸಿದರೂ ನಿಮ್ಮ ದೇಹದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್ ನಿವಾರಿಸುವ ಮೂಲಕ ಆರೋಗ್ಯವನ್ನು ವೃದ್ಧಿಸುತ್ತದೆ.

    * ಹಾಗಲಕಾಯಿಯಲ್ಲಿರುವ ವಿವಿಧ ಆಂಟಿ ಆಕ್ಸಿಡೆಂಟುಗಳು ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತವೆ.

    * ಇದರಲ್ಲಿರುವ ಫೈಟೋನ್ಯೂಟ್ರಿಯೆಂಟುಗಳು ಮತ್ತು ವಿವಿಧ ಪೋಷಕಾಂಶಗಳು ದೇಹದ ಕೊಬ್ಬನ್ನು ಬಹಳವಾಗಿ ಬಳಸುವುದರಿಂದ ತೂಕ ಕಡಿಮೆಯಾಗಿಸಿಕೊಳ್ಳುವ ನಿಟ್ಟಿನಲ್ಲಿ ಕಾರ್ಯನಿರತರಾಗಿರುವವರಿಗೆ ಸೂಕ್ತವಾದ ಆಹಾರವಾಗಿದೆ.

     

    * ವಿಟಮಿನ್ ಎ ಅಂಶದ ಉತ್ತಮ ಮೂಲವಾಗಿದೆ. ನಿಮ್ಮ ಕಣ್ಣಿನ ಆರೋಗ್ಯ ಮತ್ತು ಚರ್ಮಕ್ಕೆ ಹೆಚ್ಚು ಪ್ರಯೋಜನಕಾರಿಯಾಗಿದೆ.

    * ಮದ್ಯದ ಅಥವಾ ಇತರ ಔಷಧಿಗಳ ಅಡ್ಡಪರಿಣಾಮದಿಂದಾಗಿ ಬಹುಕಾಲ ಅಮಲು ಇಳಿಯದೇ ಇದ್ದರೆ ಒಂದು ಲೋಟ ಹಾಗಲಕಾಯಿಯ ಜ್ಯೂಸ್ ಕುಡಿಯುವುದರಿಂದ ಅಮಲು ಕೂಡಲೇ ಇಳಿದು ಸ್ವಸ್ಥತೆಯನ್ನು ಅನುಭವಿಸಬಹುದು.

  • ಫಿಟ್ ಆಗಿದ್ದ ಸಿದ್ಧಾರ್ಥ್ ಹೃದಯಾಘಾತಕ್ಕೆ ಕಾರಣವೇನು?

    ಫಿಟ್ ಆಗಿದ್ದ ಸಿದ್ಧಾರ್ಥ್ ಹೃದಯಾಘಾತಕ್ಕೆ ಕಾರಣವೇನು?

    ಮುಂಬೈ: ಬಾಲಿವುಡ್, ಕಿರುತೆರೆ ನಟ ಸಿದ್ಧಾರ್ಥ್ ಶುಕ್ಲಾ ಸಾವಿನ ಸುದ್ದಿ ಕೇಳಿ ಅಭಿಮಾನಿಗಳು ಶಾಕ್ ಆಗಿದ್ದಾರೆ. ಇಷ್ಟು ಫಿಟ್, ವರ್ಕೌಟ್ ಮಾಡಿಕೊಂಡಿದ್ದ ಸಿದ್ಧಾರ್ಥ್ ಶುಕ್ಲಾಗೆ ಹೃದಯಾಘಾತ ಆಗಿದ್ದೇಕೆ ಎಂದು ಅಭಿಮಾನಿಗಳು ಪ್ರಶ್ನೆ ಮಾಡುತ್ತಿದ್ದಾರೆ. ಇನ್ನು ಕೆಲವರು ಸಿದ್ಧಾರ್ಥ್ ಸಾವಿನ ಬಗ್ಗೆಯೂ ಅನುಮಾನ ವ್ಯಕ್ತಪಡಿಸಿದ್ದಾರೆ. ಸದ್ಯದ ವರದಿಗಳ ಪ್ರಕಾರ ಸಿದ್ಧಾರ್ಥ್ ಶುಕ್ಲಾ ಅಂತ್ಯಕ್ರಿಯೆ ಶುಕ್ರವಾರ ನಡೆಯಲಿದೆ ಎಂದು ಹೇಳಲಾಗುತ್ತಿದೆ.

    ಹೃದಯಾಘಾತಕ್ಕೆ ಕಾರಣವೇನು?:
    ಸೆಲೆಬ್ರಿಟಿಗಳು ಫಿಟ್ ಆಗಿ ಕಾಣಲು ಜಿಮ್ ನಲ್ಲಿ ಹೆಚ್ಚು ಸಮಯ ಕಳೆಯುತ್ತಾರೆ. ಹೆಚ್ಚು ವರ್ಕೌಟ್ ಮಾಡೋದರಿಂದ ವ್ಯಕ್ತಿಯ ಎನರ್ಜಿ ನಿರಂತರವಾಗಿ ನಷ್ಟವಾಗಿರುತ್ತದೆ. ಯಾವುದೇ ವರ್ಕೌಟ್ ಗಳು ನಿಯಮಿತವಾಗಿರಬೇಕು ಅನ್ನೋದನ್ನು ಮರೆಯುತ್ತಾರೆ. ಇನ್ನು ಶುಕ್ಲಾ ಆಪ್ತರ ಪ್ರಕಾರ, ನಟ ಕಡಿಮೆ ನಿದ್ದೆ ಮಾಡುತ್ತಿದ್ದರು ಎಂದು ಹೇಳುತ್ತಾರೆ. ಇದು ತುಂಬಾನೇ ಅಪಾಯಕಾರಿ ಎಂಬುವುದು ಕೆಲ ವೈದ್ಯರ ಅಭಿಪ್ರಾಯ.

    ಬ್ಯುಸಿ ಲೈಫ್ ನಲ್ಲಿ ಕೆಲವರು ಮಾದಕ ವಸ್ತುಗಳಿಗೆ ದಾಸರಾಗುತ್ತಾರೆ. ಕೆಲ ಕ್ಷಣದ ನೆಮ್ಮದಿ ಅಥವಾ ನಿದ್ದೆಗಾಗಿ ಡ್ರಗ್ಸ್ ನಂತಹ ಉತ್ಪನ್ನಗಳ ಸೇವನೆ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತೆ. ವರ್ಕೌಟ್ ಮಾಡುತ್ತಿದ್ರೂ ಇಂತಹ ಅಭ್ಯಾಸಗಳು ವ್ಯಕ್ತಿಯ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುವುದು ಹಲವು ಪ್ರಕರಣಗಳಲ್ಲಿ ಕಂಡು ಬಂದಿದೆ. 30 ವರ್ಷದ ಆಸುಪಾಸಿನ ಯುವ ಜನತೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಅತ್ಯಗತ್ಯ. ಕೆಲವೊಮ್ಮೆ ಅನುವಂಶಿಕ ರೋಗ ಲಕ್ಷಣಗಳು ಕಂಡು ಬಂದ್ರೆ ಶೀಘ್ರವೇ ಚಿಕಿತ್ಸೆ ಪಡೆದುಕೊಳ್ಳಲು ಸಹಾಯವಾಗುತ್ತದೆ. ಆದ್ರೆ ಶುಕ್ಲಾ ನಿಧನ ನಿಖರವಾಗಿ ಇದೇ ಕಾರಣಕ್ಕೆ ಆಗಿದೆ ಎಂದು ಹೇಳಲು ಸಾಧ್ಯವಿಲ್ಲ. ಮರಣೋತ್ತರ ಶವ ಪರೀಕ್ಷೆ ವರದಿ ಪ್ರಕಾರ ಸಾವಿನ ಕಾರಣಗಳನ್ನು ಅಂದಾಜಿಸಬಹುದು ಎಂದು ಏಮ್ಸ್ ಹಿರಿಯ ವೈದ್ಯ ನರೇಶ್ ರೋಹನ್ ಹೇಳುತ್ತಾರೆ. ಇದನ್ನೂ ಓದಿ: ಬೇಗ ಪಯಣ ಮುಗಿಸಿದೆ – ಸಿದ್ಧಾರ್ಥ್ ನಿಧನಕ್ಕೆ ಸಲ್ಮಾನ್ ಕಂಬನಿ

  • ಹೀಗೆ ಮಾಡಿ ಕಾಬೂಲ್ ಕಡಲೆ ಬಿರಿಯಾನಿ

    ಹೀಗೆ ಮಾಡಿ ಕಾಬೂಲ್ ಕಡಲೆ ಬಿರಿಯಾನಿ

    ಹೋಟೆಲ್ ಅಥವಾ ರೆಸ್ಟೋರೆಂಟ್‍ಗಳಲ್ಲಿ ಸಿಗುವ ರುಚಿ ಮನೆಯಲ್ಲಿ ಮಾಡಿದಾಗ ಸಿಗಲ್ಲ ಅಂತಾರೆ. ಈ ಬಗ್ಗೆ ಚಿಂತೆ ಬೇಡ. ನಾವು ತಿಳಿಸಿದ ಸಾಮಾಗ್ರಿಗಳನ್ನು ಬಳಸಿ ಬಿರಿಯಾನಿ ಮಾಡಿದರೆ ಸಿಗುವ ರುಚಿ ಯಾವ ರೆಸ್ಟೋರೆಂಟ್‍ಗಳಿಗೂ ಕಡಿಮೆ ಇರಲ್ಲ. ನಿಮ್ಮ ನಾಲಿಗೆ ರುಚಿಯಾದ ಮತ್ತು ಆರೋಗ್ಯವಾಗಿರುವ ಹಾರವನ್ನು ಬಯಸುತ್ತದೆ. ನಿಮಗೆ ಪ್ರತಿನಿತ್ಯ ಒಂದೇ ತರಹದ ರೈಸ್ ಬಾತ್ ತಿಂದು ಬೇಸರವಾಗಿರುತ್ತದೆ. ಇಂದು ಕೊಂಚ ಭಿನ್ನವಾಗಿ ಈ ಕಾಬೂಲ್ ಕಡಲೆ ಬಿರಿಯಾನಿ ಮಾಡಿ ನೋಡಿ. ನಿಮ್ಮ ಮನೆಮಂದಿಗೆ ತುಂಬಾ ಇಷ್ಟವಾಗುತ್ತದೆ.

    Kabul Kadale Biryani,

    ಬೇಕಾಗುವ ಸಾಮಗ್ರಿಗಳು:
    * ಕಾಬೂಲ್ ಕಡಲೆ – 2 ಕಪ್‍ಗಳು
    * ಅಕ್ಕಿ – 2 ಕಪ್‍ಗಳು
    * ತೆಂಗಿನ ಹಾಲು – 2 ಕಪ್‍ಗಳು
    * ನೀರು- 1 1/2 ಕಪ್
    * ಈರುಳ್ಳಿ – 2
    * ಟೊಮೆಟೊ – 2
    * ಮೆಣಸಿನ ಪುಡಿ – 1ಟೀ ಸ್ಪೂನ್
    * ಗರಂ ಮಸಾಲ – 1ಟೀ ಸ್ಪೂನ್
    * ರುಚಿಗೆ ತಕ್ಕಷ್ಟು ಉಪ್ಪು
    * ಶುಂಠಿ ಬೆಳ್ಳುಳ್ಳಿ ಪೇಸ್ಟ್ – 1ಟೀ ಸ್ಪೂನ್
    * ತುಪ್ಪ – 2 1ಟೀ ಸ್ಪೂನ್
    * ಎಣ್ಣೆ – 1ಕಪ್
    * ಪಲಾವ್ ಎಲೆ, ಚಕ್ಕೆ, ಲವಂಗ, ಏಲಕ್ಕಿ,
    * ಕೊತ್ತಂಬರಿ
    * ಪುದೀನಾ
    * ಬೆಳ್ಳುಳ್ಳಿ-2
    * ಹಸಿಮೆಣಸಿನ ಕಾಯಿ-2

    kabul kadale

    ಮಾಡುವ ವಿಧಾನ:

    * ಕಾಬೂಲ್ ಕಡಲೆ ಹಾಗೂ ರುಚಿ ತಕ್ಕಷ್ಟು ಉಪ್ಪನ್ನು ಕುಕ್ಕರಿನಲ್ಲಿ ಹಾಕಿ 4 ವಿಶಲ್ ಹಾಕಿಸಿಕೊಳ್ಳಬೇಕು.
    * ನಂತರ ಒಂದು ಪ್ರೆಶ್ಶರ್ ಕುಕ್ಕರಿನಲ್ಲಿ ತುಪ್ಪ ಮತ್ತು ಎಣ್ಣೆಯನ್ನು ಹಾಕಿಕೊಂಡು ಕಾಯಿಸಿ.
    * ಇದು ಬಿಸಿಯಾದ ಮೇಲೆ ಇದಕ್ಕೆ ಪಲಾವ್ ಎಲೆ, ಚಕ್ಕೆ, ಲವಂಗ, ಏಲಕ್ಕಿ, ಈರುಳ್ಳಿಯನ್ನು ಹಾಕಿ ಹುರಿದುಕೊಳ್ಳಿ.

    * ನಂತರ ಕೊತ್ತಂಬಂರಿ, ಪುದಿನಾ, ಈರುಳ್ಳಿ, ತುರಿದ ತೆಂಗಿನಕಾಯಿ, ಹಸಿ ಮೆಣಸಿನ ಕಾಯಿಯನ್ನು ರುಬ್ಬಿಕೊಂಡು ಪೇಸ್ಟ್ ಮಾಡಿಕೊಳ್ಳಿ.
    * ಈರುಳ್ಳಿಯು ಹೊಂಬಣ್ಣಕ್ಕೆ ಬಂದ ಮೇಲೆ ಅದಕ್ಕೆ ಶುಂಠಿ ಬೆಳ್ಳುಳ್ಳಿ ಪೇಸ್ಟ್ ಬೆರೆಸಿ. ಆಮೇಲೆ ಅದಕ್ಕೆ ಟೊಮೇಟೊ, ರುಬ್ಬಿಕೊಂಡಿರುವ ಮಿಶ್ರಣವನ್ನು ಹಾಕಿ ನಂತರ ಈ ಪದಾರ್ಥಗಳನ್ನು ಹುರಿದುಕೊಳ್ಳಿ. ಇದನ್ನೂ ಓದಿ:ದುಬಾರಿ ಕಾರು ಖರೀದಿಸಿದ ನಿರ್ದೇಶಕ ಸಂತೋಷ್ ಆನಂದ್ ರಾಮ್

    Kabul Kadale Biryani,

    * ಈಗ ಇದಕ್ಕೆ ಖಾರದ ಪುಡಿ, ಗರಂ ಮಸಾಲ ಪುಡಿ, ಉಪ್ಪು ಮತ್ತು ಬೇಯಿಸಿದ ಕಾಬೂಲ್ ಕಡಲೆ, ಅಕ್ಕಿಯನ್ನು ಹಾಕಿ ಕುಕ್ಕರಿನಲ್ಲಿ ನೀರನ್ನು ಬೆಯಿಸಿದರೆ ರುಚಿಯಾದ ಕಾಬೂಲ್ ಕಡಲೆ ಬಿರಿಯಾನಿ ಸವಿಯಲು ಸಿದ್ಧವಾಗುತ್ತದೆ. ಇದನ್ನೂ ಓದಿ:ಕರಾವಳಿಯಲ್ಲಿ ಪತ್ತೆಯಾದ ಹಾಕ್ಸ್ ಬಿಲ್ ಆಮೆ ಕಳೆಬರ

  • ರೋಗ ನಿರೋಧಕ ಶಕ್ತಿ ಕಡಿಮೆ ಇರುವ ಮಕ್ಕಳ ಆರೋಗ್ಯ ವೃದ್ಧಿಗೆ ಕ್ರಮ: ಡಾ.ಕೆ.ಸುಧಾಕರ್

    ರೋಗ ನಿರೋಧಕ ಶಕ್ತಿ ಕಡಿಮೆ ಇರುವ ಮಕ್ಕಳ ಆರೋಗ್ಯ ವೃದ್ಧಿಗೆ ಕ್ರಮ: ಡಾ.ಕೆ.ಸುಧಾಕರ್

    ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವ ಮಕ್ಕಳನ್ನು ಗುರುತಿಸಿದ್ದು, ಅವರ ಆರೋಗ್ಯ ವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

    ಜಿಲ್ಲೆಯಲ್ಲಿ ಕೋವಿಡ್ ಸ್ಥಿತಿಗತಿ ಪರಿಶೀಲನೆ ಸಂಬಂಧ ಸಭೆ ನಡೆಸಿದ ಬಳಿಕ ಮಾತನಾಡಿದ ಸಚಿವರು, ತಾಂತ್ರಿಕ ಸಲಹಾ ಸಮಿತಿ ಸಲಹೆಯಂತೆ ಸಂಭವನೀಯ ಕೋವಿಡ್ ಮೂರನೇ ಅಲೆ ನಿಯಂತ್ರಣಕ್ಕೆ ಸಿದ್ಧತೆ ನಡೆದಿದೆ. ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಕಡಿಮೆ ಇದ್ದು, ಈವರೆಗೆ 148 ಪ್ರಕರಣ ಕಂಡುಬಂದಿದೆ. ಹೆಚ್ಚಿನವರನ್ನು ಕೋವಿಡ್ ಕೇರ್ ಕೇಂದ್ರಕ್ಕೆ ಸೇರಿಸಬೇಕು, ಪರೀಕ್ಷೆ ಕಡಿಮೆ ಮಾಡುವುದು ಬೇಡ ಎಂದು ಸೂಚಿಸಲಾಗಿದೆ. ಹಲವು ಮಕ್ಕಳಿಗೆ ಆರೋಗ್ಯ ತಪಾಸಣೆ ಮಾಡಿದ್ದು, ಅವರಲ್ಲಿ ಶ್ವಾಸಕೋಶದ ತೊಂದರೆ, ರಕ್ತಹೀನತೆ, ಮೂತ್ರಪಿಂಡದ ಸಮಸ್ಯೆ, ಅಪೌಷ್ಠಿಕತೆ ಕಂಡುಬಂದಿದೆ. ಹೀಗೆ ಗುರುತಿಸಿದ ಮಕ್ಕಳಿಗೆ ಅಗತ್ಯ ಚಿಕಿತ್ಸೆ ನೀಡಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

    ಇನ್ನು ಒಂದೇ ವಾರದಲ್ಲಿ ‘ಆರೋಗ್ಯ ನಂದನ’ ಕಾರ್ಯಕ್ರಮವನ್ನು ಮುಖ್ಯಮಂತ್ರಿಯವರು ಉದ್ಘಾಟಿಸಲಿದ್ದು, ರಾಜ್ಯದ ಒಂದೂವರೆ ಕೋಟಿ ಮಕ್ಕಳಿಗೆ ಆರೋಗ್ಯ ತಪಾಸಣೆ ಮಾಡಲಾಗುವುದು. ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಿಗೆ ವಿಶೇಷ ಆರೈಕೆ, ಚಿಕಿತ್ಸೆ ನೀಡಿ ಅವರನ್ನು ರಕ್ಷಿಸುವ ಕೆಲಸ ಮಾಡುತ್ತೇವೆ. ಜಿಲ್ಲೆಯಲ್ಲಿ 48% ರಷ್ಟು ಜನರಿಗೆ ಮೊದಲ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ. ಹೆಚ್ಚು ಲಸಿಕೆಯನ್ನು ಇಲ್ಲಿಗೆ ಪೂರೈಕೆ ಮಾಡಿ ವೇಗ ನೀಡಲಾಗುವುದು. ಡಿಸೆಂಬರ್ ಅಂತ್ಯದೊಳಗೆ ಎಲ್ಲರಿಗೂ ಲಸಿಕೆ ನೀಡಲಾಗುವುದು ಎಂದರು. ಇದನ್ನೂ ಓದಿ: ದಶಪಥದ ರಸ್ತೆ ಇರೋದು ಮೈಸೂರಿಗಾಗಿ, ಇದಕ್ಕಾಗಿ ಹೆಚ್ಚು ಆಸಕ್ತಿವಹಿಸಿದ್ದೇನೆ: ಪ್ರತಾಪ್ ಸಿಂಹ

    ಈ ಜಿಲ್ಲೆಯಲ್ಲಿ ಹೊಸ ಜಿಲ್ಲಾಕೇಂದ್ರ ಇನ್ನೂ ಅಂತಿಮ ಆಗಿಲ್ಲ. ಮುಖ್ಯಮಂತ್ರಿಗಳೊಂದಿಗೆ ಈ ಬಗ್ಗೆ ಚರ್ಚಿಸಿ ಆದಷ್ಟು ಬೇಗ ನಿಗದಿಪಡಿಸಲಾಗುವುದು. ಹಾಗೆಯೇ ಜಿಲ್ಲಾಸ್ಪತ್ರೆಯನ್ನೂ ನಿರ್ಮಿಸಲಾಗುವುದು. ಒಂದು ಅಥವಾ ಎರಡು ತಾಯಿ ಮತ್ತು ಶಿಶು ಆಸ್ಪತ್ರೆಯನ್ನು ಇದೇ ವರ್ಷ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು. 142 ಉಪಕೇಂದ್ರಗಳನ್ನು ಆರೋಗ್ಯ ಮತ್ತು ಕ್ಷೇಮ ಕೇಂದ್ರವಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕನಿಷ್ಠ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಲಾಗುವುದು. ಈಗಾಗಲೇ 29 ವೈದ್ಯರನ್ನು ಜಿಲ್ಲೆಗೆ ನೀಡಲಾಗಿದೆ. ಆದ್ದರಿಂದ ಯಾವುದೇ ವೈದ್ಯರ ಕೊರತೆ ಇಲ್ಲ. ಇನ್ನಷ್ಟು ಆರೋಗ್ಯ ಮೂಲಸೌಕರ್ಯಕ್ಕೆ ಭೂಮಿ ಮೀಸಲಿಟ್ಟಿದ್ದು, ಇಲ್ಲಿ ಅಭಿವೃದ್ಧಿ ಕಾರ್ಯದ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದರು. ಇದನ್ನೂ ಓದಿ: ಲಸಿಕಾ ಆಂದೋಲನದಲ್ಲಿ ಕೈ ಜೋಡಿಸುವಂತೆ ಉದ್ದಿಮೆಗಳಿಗೆ ಸಚಿವ ಸುಧಾಕರ್ ಮನವಿ

    ಹಬ್ಬ, ಜಾತ್ರೆ, ಸಭೆ ಸಮಾರಂಭಗಳಲ್ಲಿ ಹೆಚ್ಚು ಜನ ಸೇರಬಾರದು. ಕೋವಿಡ್ ನ ಎರಡೂ ಲಸಿಕೆ ಪಡೆಯುವವರೆಗೆ ಎಚ್ಚರವಾಗಿರಬೇಕು. ಶಾಲೆ ಆರಂಭ ಸಂಬಂಧ ಮಾರ್ಗಸೂಚಿ ನೀಡಲಾಗಿದೆ. ಶಿಕ್ಷಣ ಇಲಾಖೆ ಇದನ್ನು ಆಯಾ ಜಿಲ್ಲಾಡಳಿತಕ್ಕೆ ನೀಡಿದೆ. ಮಕ್ಕಳ ಆರೋಗ್ಯ ಕಾಪಾಡುವುದರ ಜೊತೆಗೆ ಭವಿಷ್ಯ ರೂಪಿಸುವುದು ಕೂಡ ಮುಖ್ಯ. ಅದನ್ನು ಸಮರ್ಥವಾಗಿ ನಿಭಾಯಿಸಬೇಕಿದೆ. ಶಾಲಾ ಸಿಬ್ಬಂದಿಗೆ ಲಸಿಕೆಯನ್ನೂ ನೀಡಲಾಗಿದೆ. ಎಲ್ಲರ ಅಭಿಪ್ರಾಯ ಪಡೆದು ಈ ಕ್ರಮವನ್ನು ಸರ್ಕಾರ ಕೈಗೊಂಡಿದೆ ಎಂದರು. ಇದನ್ನೂ ಓದಿ: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ BMTCಯಿಂದ ಉಚಿತ ಸೇವೆ