Tag: health

  • ಏಲಕ್ಕಿ ಸೇವನೆಯಿಂದ ಸಿಗಲಿದೆ ಹಲವು ಪ್ರಯೋಜನ

    ಏಲಕ್ಕಿ ಸೇವನೆಯಿಂದ ಸಿಗಲಿದೆ ಹಲವು ಪ್ರಯೋಜನ

    ಲಕ್ಕಿ ಅಡುಗೆ ಮನೆಯಲ್ಲಿ ತನ್ನದೇ ಆದ ಗುರುತನ್ನು ಹೊಂದಿದೆ. ಸುವಾಸೆಭರಿತವಾದ ಏಲಕ್ಕಿ ಅಡುಗೆಗೆ ಮಾತ್ರವಲ್ಲ, ಆರೋಗ್ಯಕ್ಕೂ ಒಳ್ಳೆಯದು. ಸಮಯ ಸಿಕ್ಕಾಗ ಏಲಕ್ಕಿ ಪುಡಿಯನ್ನು ಮಾಡಿಟ್ಟುಕೊಂಡು ನಿಯಮಿತವಾಗಿ ಸೇವಿಸುತ್ತಾ ಬಂದರೆ ಕೆಲವು ಉತ್ತಮ ಅಂಶಗಳನ್ನು ನಾವು ಪಡೆದುಕೊಳ್ಳ ಬಹುದು. ಕೆಲವು ಅನಾರೋಗ್ಯ ಸಮಸ್ಯೆಗಳಿಂದ ದೂರ ಇರಬಹುದಾಗಿದೆ.

    * ಏಲಕ್ಕಿ ಸೇವೆನೆಯಿಂದ ಚರ್ಮದ ಸೌಂದರ್ಯವನ್ನು ಕಾಪಾಡಿಕೊಳ್ಳಬಹುದು

    * ಕಲವರಿಗೆ ಬಾಯಲ್ಲಿ ಹುಣ್ಣು ಆಗುತ್ತದೆ ಅಂತವರು ಏಲಕ್ಕಿ ಪುಡಿಗೆ ಜೇನುತುಪ್ಪ ಸೇರಿಸಿ ಸೇವಿಸಬೇಕು.

    * ರಕ್ತಹೀನತೆ ಇದ್ದಲ್ಲಿ, ಒಂದು ಚಿಟಿಕೆ ಏಲಕ್ಕಿ ಒಪುಡಿ ಮತ್ತು ಒಂದು ಚಮಚ ಅರಿಶಿಣ ಪುಡಿಯನ್ನು ಒಂದು ಲೋಟ ಹಾಲಿನೊಂದಿಗೆ ಸೇರಿಸಿ ರಾತ್ರಿ ಮಲಗುವ ಮುನ್ನ ಸೇವಿಸಿದರೆ ರಕ್ತ ಹೀನತೆ ನಿವಾರಣೆಯಾಗುತ್ತದೆ.

    * ಆ್ಯಸಿಡಿಟಿ ಇದ್ದವರು ಒಂಡೆರದು ಏಲಕ್ಕಿಯನ್ನು ಪುಡಿ ಮಾಡಿ ಬಿಸಿನೀರಿಲ್ಲಿ ಹಾಕಿ ಕುದಿಸಿ ನಂತರ ಕುಡಿದರೆ ಆ್ಯಸಿಡಿಟಿ ಸಮಸ್ಯೆ ನಿವಾರಣೆಯಾಗುತ್ತದೆ.

    * ನಿಯಮಿತವಾಗಿ ಏಲಕ್ಕಿ ಸೇವಿಸದರೆ ರೋಗ ನೀರೋಧಕ ಶಕ್ತಿ ವೃದ್ಧಿಯಾಗುತ್ತದೆ.

    * ಪಿತ್ತ, ಕಫ, ದಂತ ರೋಗ ಮತ್ತಯ ಬಾಯಿ ವಾಸನೆ ನಿವಾರಣೆಗೆ ಏಲಕ್ಕಿ ಸೇವನೆ ಉತ್ತಮ ಪರಿಹಾರವಾಗಿದೆ.

    * ನಿತ್ಯವೂ ಏಲಕ್ಕಿ ನೀರನ್ನು ಕುಡಿಯುವ ಮೂಲಕ ಖಿನ್ನತೆಯ ವಿರುದ್ಧ ಹೋರಾಡುವ ಶಕ್ತಿ ಹೆಚ್ಚುತ್ತದೆ. ಖಿನ್ನತೆಯಿಂದ ಬಳಲುವ ರೋಗಿಗಳಿಗೆ ಬಹಳ ಹಿಂದಿನಿಂದಲೇ ಆಯುರ್ವೇದ ಏಲಕ್ಕಿ ನೀರನ್ನು ಕುಡಿಯುವ ಚಿಕಿತ್ಸೆಯನ್ನು ಒದಗಿಸಿದೆ.

  • ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ಕರೆದೊಯ್ದ ಪುತ್ರ ಯತೀಂದ್ರ

    ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ಕರೆದೊಯ್ದ ಪುತ್ರ ಯತೀಂದ್ರ

    ಬೆಂಗಳೂರು: ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಆರೋಗ್ಯ ತಪಾಸಣೆಗಾಗಿ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದು, ಪುತ್ರ ಯತೀಂದ್ರ ಅವರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

    ಸಿದ್ದರಾಮಯ್ಯನವರಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆ ವೈದ್ಯರ ಸಲಹೆ ಮೇರೆಗೆ ತಪಾಸಣೆಗೆ ಒಳಗಾಗುತ್ತಿದ್ದು, ಪುತ್ರ ಡಾ.ಯಂತೀಂದ್ರ ಸಿದ್ದರಾಮಯ್ಯ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ವೈದ್ಯಕೀಯ ತಪಾಸಣೆ ನಂತರ ಅಡ್ಮಿಟ್ ಆಗಲು ಹೇಳಿದರೆ 2 ದಿನಗಳ ಕಾಲ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಕೋವಿಡ್ ಕೇಂದ್ರದಲ್ಲಿ ಯೋಗ ಟೀಚರ್ ಆದ ರೇಣುಕಾಚಾರ್ಯ

    ಮಣಿಪಾಲ್ ಆಸ್ಪತ್ರೆಯಲ್ಲಿ ವೈದ್ಯರು ಸಿಟಿ ಸ್ಕ್ಯಾನ್ ಮಾಡಲಿದ್ದು, ತಪಾಸಣೆ ನಂತರ ಆಸ್ಪತ್ರೆಗೆ ಅಡ್ಮಿಟ್ ಆಗಬೇಕೋ ಬೇಡವೋ ಎಂಬುದನ್ನು ತೀರ್ಮಾನಿಸಲಿದ್ದಾರೆ. ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಆರೋಗ್ಯ ತಪಾಸಣೆಗಾಗಿ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದಾರೆ. ಈ ಹಿಂದೆ ಸಿದ್ದರಾಮಯ್ಯನವರಿಗೆ ಕೊರೊನಾ ಸೋಂಕು ತಗುಲಿತ್ತು, ಬಳಿಕ ಗುಣಮುಖರಾಗಿದ್ದರು.

  • ದಿನಕ್ಕೊಂದು ಮೊಟ್ಟೆ ಸೇವಿಸುವುದರ ಪ್ರಯೋಜನ ಏನು ಗೊತ್ತಾ?

    ದಿನಕ್ಕೊಂದು ಮೊಟ್ಟೆ ಸೇವಿಸುವುದರ ಪ್ರಯೋಜನ ಏನು ಗೊತ್ತಾ?

    ಮೊಟ್ಟೆ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳಲಾಗುತ್ತದೆ. ಮೊಟ್ಟೆ ತಿನ್ನುವವರಿಗೆ ದಿನಕ್ಕೆ ಎಷ್ಟು ಮೊಟ್ಟೆ ತಿಂದರೆ ಒಳ್ಳೆಯದು ಎಂದು ಗೊತ್ತಿರಬೇಕು. ಹಾಗೂ ಮೊಟ್ಟೆತಿನ್ನುವುದರಿಂದ ಏನು ಪ್ರಯೋಜನ ಸಿಗಲಿದೆ ಗೊತ್ತಾ..?

    ಮೊಟ್ಟೆಯಲ್ಲಿರುವ ಪೋಟೀನ್ ದೇಹಕ್ಕೆ ಉತ್ತಮ ಪೋಷಕಾಂಶವನ್ನು ಒದಗಿಸುತ್ತದೆ.ಮೊಟ್ಟೆಯಿಂದ ಸೀಗುವಂತಹ ಕೊಲೆಸ್ಟ್ರಾಲ್ ದೇಹಕ್ಕೆ ತುಂಬಾ ಒಳ್ಳೆಯದು. ಮೊಟ್ಟೆಯಿಂದ ದೇಹಕ್ಕೆ ಹಲವು ರೀತಿಯ ಪೋಷಕಾಂಶಗಳು ದೊರೆಯುತ್ತದೆ ಹೀಗಾಗಿ ವೈದ್ಯರು ಮೊಟ್ಟೆ ತಿನ್ನುವಂತೆ ಸಲಹೆಯನ್ನು ನೀಡುತ್ತಾರೆ.

    * ದಿನಕ್ಕೆ ಒಂದು ಮೊಟ್ಟೆ ಸೇವನೆ ದೇಹಕ್ಕೆ ತುಂಬಾ ಒಳ್ಳೆಯದು. ಮೊಟ್ಟೆಯನ್ನು ನಿಮ್ಮ ಆಹಾರ ಕ್ರಮದಲ್ಲಿ ಸೇರಿಸಿಕೊಳ್ಳಿ. ಮೊಟ್ಟೆಯ ಸೇವನೆಯಿಂದ ಉತ್ತಮ ಪ್ರಮಾಣದ ಪೋಷಕಾಂಶಗಳು , ಪೋಟೀನ್‍ಗಳು, ಸತು ಮತ್ತು ಕೊಲೈನ್ ದೊರೆಯುತ್ತದೆ.  ಇದನ್ನೂ ಓದಿ: ಬಾದಾಮಿ ಸೇವನೆಯಿಂದ ದೊರೆಯಲಿದೆ ಉತ್ತಮ ಆರೋಗ್ಯ

    * ಮೊಟ್ಟೆ ಸೇವನೆಯಿಂದ ಜೀರ್ಣಕ್ರಿಯೆ ಹೆಚ್ಚುತ್ತದೆ. ಬೊಜ್ಜು ಕರಗಿಸಲು ಸಹಕಾರಿಯಾಗಲಿದೆ. ನಮ್ಮ ದೇಹವನ್ನು ಸದೃಢವಾಗಿ ಇಟ್ಟುಕೊಳ್ಳಲು ನೆರವಾಗುತ್ತದೆ.


    * ಮೊಟ್ಟೆಯಲ್ಲಿ ವಿಟಮಿನ್ ಎ, ಇ, ಬಿ 6 ಹಾಗೂ ಥೈಮೆನ್ , ರಿಬೊಫ್ಲಾವಿನ್ ಪೋಲೆಟ್, ಕಬ್ಬಿಣ ಹಾಗೂ ಮೆಗ್ನೇಶಿಯಂ ಹಲವು ರೀತಿಯ ಪೋಷಕಾಂಶಗಳನ್ನು ದೇಹಕ್ಕೆ ನೀಡುವ ಮೂಲಕವಾಗಿ ಆರೋಗ್ಯವನ್ನು ಉತ್ತಮವಾಗಿಸುತ್ತದೆ.

    * ಬೇಯಿಸಿದ ಮೊಟ್ಟೆ ತಿನ್ನುವುದರಿಂದ ಕಣ್ಣಿನ ಆರೋಗ್ಯಕ್ಕೆ ಒಳ್ಳೆಯದು. ಇದರಲ್ಲಿ ಹೆಚ್ಚಾಗಿ ವಿಟಮಿನ್ ಎ, ಹೆಚ್ಚಾಗಿದ್ದು, ಇದು ಕಣ್ಣಿನ ಆರೋಗ್ಯವನ್ನು ಕಾಪಾಡುತ್ತದೆ.

    * ದೇಹದಲ್ಲಿ ರಕ್ತದ ಕೊರತೆ ಇದ್ದರೆ, ಅನೇಕ ಗಂಭೀರ ಕಾಯಿಲೆಗಳು ಎದುರಾಗಬಹುದು. ರಕ್ತಹೀನತೆ ಸಮಸ್ಯೆಯಾದಾಗ ಬೇಯಿಸಿದ ಮೊಟ್ಟೆಗಳನ್ನು ಸೇವಿಸಬೇಕು.

    * ಮೊಟ್ಟೆ ಸೇವೆನೆಯಿಂದ ಚರ್ಮವು ಸುಂದರವಾಗುತ್ತದೆ. ಕೂದಲು ಉದ್ದ ಹಾಗೂ ದಪ್ಪವಾಗುವಲ್ಲಿ ಸಹಾಯ ಮಾಡುತ್ತದೆ.

    * ಮೊಟ್ಟೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಆಂಟಿ ಆಕ್ಸಿಡೆಂಟ್ ಗಳು. ಖನಿಜಗಳು ಮತ್ತು ಜೀವಸತ್ವಗಳು ಹೆಚ್ಚಾಗಿದ್ದು, ಇದು ಉಗುರಗಳ ಹಾಗೂ ಕೂದಲು ಆರೋಗ್ಯವನ್ನು ಹೆಚ್ಚಿಸುತ್ತದೆ.

  • ರಜೆ ನೀಡದ್ದಕ್ಕೆ ಆಕ್ಸಿಜನ್ ಸಿಲಿಂಡರ್ ಸಹಿತ ಬ್ಯಾಂಕಿಗೆ ಬಂದ ನೌಕರ

    ರಜೆ ನೀಡದ್ದಕ್ಕೆ ಆಕ್ಸಿಜನ್ ಸಿಲಿಂಡರ್ ಸಹಿತ ಬ್ಯಾಂಕಿಗೆ ಬಂದ ನೌಕರ

    ರಾಂಚಿ: ಅನಾರೋಗ್ಯದಿಂದ ಬಳಲುತಿದ್ರೂ ರಜೆ ನೀಡಿಲ್ಲ ಎಂದು ಆರೋಪಿಸಿ ಬ್ಯಾಂಕ್ ನೌಕರರೊಬ್ಬರು ಆಕ್ಸಿಜನ್ ಸಿಲಿಂಡರ್ ಸಹಿತ ಕೆಲಸಕ್ಕೆ ಹಾಜರಾಗಿದ್ದಾರೆ. ಜಾರ್ಖಂಡ್ ನ ಬೊಕೊರಾದ ಸೆಕ್ಟರ್ 4ರಲ್ಲಿರುವ ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿ ಈ ಘಟನೆ ನಡೆದಿದೆ.

    ಅರವಿಂದ್ ಕುಮಾರ್ ಆಕ್ಸಿಜನ್ ಸಿಲಿಂಡರ್ ಜೊತೆಯಲ್ಲಿ ಬ್ಯಾಂಕಿಗೆ ಬಂದ ನೌಕರ. ಕೆಲ ದಿನಗಳ ಹಿಂದೆ ಅರವಿಂದ್ ಅವರಿಗೆ ಕೊರೊನಾ ಸೋಂಕು ತಗುಲಿತ್ತು. ಬಳಿಕ ವರದಿ ನೆಗಟಿವ್ ಬಂದಿದ್ರೂ ಉಸಿರಾಟದ ತೊಂದರೆಯಿಂದ ಮನೆಯಲ್ಲಿ ಆಕ್ಸಿಜನ್ ಸಪೋರ್ಟ್ ಮೇಲಿದ್ದರು. ಉಸಿರಾಟದ ಸಮಸ್ಯೆ ಜೊತೆಗೆ ಶ್ವಾಸಕೋಶದಲ್ಲಿ ಸೋಂಕು ತಗುಲಿದ್ದರಿಂದ ಮನೆಯಲ್ಲಿ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ರು.

    ಅನಾರೋಗ್ಯದ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದು ರಜೆ ನೀಡುವಂತೆ ಮನವಿ ಮಾಡಿಕೊಂಡಿದ್ದೇನೆ. ಆದ್ರೂ ಕೆಲಸಕ್ಕೆ ಹಾಜರಾಗುವಂತೆ ಒತ್ತಡ ಹಾಕಲಾಗ್ತಿದೆ. ಆದ್ದರಿಂದ ಆಕ್ಸಿಜನ್ ಸಿಲಿಂಡರ್ ಜೊತೆಯಲ್ಲಿಯೇ ಕೆಲಸಕ್ಕೆ ಬರುವಂತಾಗಿದೆ ಎಂದು ಅರವಿಂದ್ ಕುಮಾರ್ ಹೇಳಿದ್ದಾರೆ.

    ಅರವಿಂದ್ ಕುಮಾರ್ ರಾಜೀನಾಮೆ ನೀಡಿದ್ರೂ ಅಧಿಕಾರಿಗಳು ಸ್ವೀಕರಿಸುತ್ತಿಲ್ಲ ಎನ್ನಲಾಗುತ್ತಿದೆ. ಇಂದು ಅರವಿಂದ್ ಜೊತೆ ಅವರ ಕುಟುಂಬಸ್ಥರು ಸಹ ಬ್ಯಾಂಕಿಗೆ ಆಗಮಿಸಿದ್ದರು. ಇತ್ತ ಬ್ಯಾಂಕ್ ಹಿರಿಯ ಅಧಿಕಾರಿಗಳು ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕಿದ್ದಾರೆ.

  • ಡಿಸಿಎಂ ಭರವಸೆಯಂತೆ ಹಾಸನ ಜಿಲ್ಲೆಗೆ 10 ಕೋಟಿ ರೂ. ಬಿಡುಗಡೆ

    ಡಿಸಿಎಂ ಭರವಸೆಯಂತೆ ಹಾಸನ ಜಿಲ್ಲೆಗೆ 10 ಕೋಟಿ ರೂ. ಬಿಡುಗಡೆ

    – ಒಂದೇ ದಿನದಲ್ಲಿ 30 ವೆಂಟಿಲೇಟರ್‌ಗಳ ರವಾನೆ

    ಬೆಂಗಳೂರು: ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ನೀಡಿದ್ದ ಭರವಸೆಯಂತೆ ಕೋವಿಡ್ ನಿರ್ವಹಣೆಗಾಗಿ ರಾಜ್ಯ ಸರಕಾರ ಹೆಚ್ಚುವರಿಯಾಗಿ 10 ಕೋಟಿ ರೂ.ಗಳನ್ನು ಹಾಸನ ಜಿಲ್ಲೆಗೆ ಬಿಡುಗಡೆ ಮಾಡಿದೆ.

    ಈ ಬಗ್ಗೆ ಹೇಳಿಕೆ ನೀಡಿರುವ ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು, ಶನಿವಾರ ಹಾಸನ ಜಿಲ್ಲೆಗೆ ಭೇಟಿ ನೀಡಿ ಕೋವಿಡ್ ಸ್ಥಿತಿ ಪರಿಶೀಲನೆ ನಡೆಸಿದ ವೇಳೆ ಜಿಲ್ಲಾಧಿಕಾರಿಗಳು ಹೆಚ್ಚುವರಿ ಬೆಡ್, ಔಷಧಿ ಖರೀದಿ ಹಾಗೂ ಖಾಸಗಿ ಲ್ಯಾಬ್‍ಗಳಲ್ಲಿ ಕೋವಿಡ್ ಸ್ಯಾಂಪಲ್ ಪರೀಕ್ಷೆಗೆ ಹಣಕಾಸು ಕೊರತೆ ಇದೆ ಎಂದು ತಿಳಿಸಿದರು. ಸೋಮವಾರ ಈ ಮೊತ್ತವನ್ನು ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದ್ದೆ. ಅದರಂತೆ ಸೋಮವಾರ ಮಧ್ಯಾಹ್ನದ ಒಳಗಾಗಿಯೇ 10 ಕೋಟಿ ರೂ.ಗಳನ್ನು ಹಾಸನ ಜಿಲ್ಲೆಗೆ ಮಂಜೂರು ಮಾಡಲಾಗಿದೆ ಎಂದರು.

    ಎರಡನೇ ಅಲೆಯನ್ನು ಎದುರಿಸಲು ಮೊದಲ ಹಂತದಲ್ಲೇ ಹಾಸನಕ್ಕೆ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ 10 ಕೋಟಿ ರೂ. ನೀಡಲಾಗಿತ್ತು. ಈಗ ಹೆಚ್ಚುವರಿಯಾಗಿ 10 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಡಿಸಿಎಂ ಹೇಳಿದರು.

    30 ವೆಂಟಿಲೇಟರ್:
    ಶನಿವಾರ ಹಾಸನ ಜಿಲ್ಲಾ ಸಭೆಯಲ್ಲಿ 30 ವೆಂಟಿಲೇಟರ್‌ಗಳಿಗೆ ಜಿಲ್ಲಾಡಳಿತ ಮತ್ತು ಚುನಾಯಿತ ಪ್ರತಿನಿಧಿಗಳು ಬೇಡಿಕೆ ಸಲ್ಲಿಸಿದ್ದರು. ಅವುಗಳನ್ನು ಸೋಮವಾರ ಮಧ್ಯಾಹ್ನದ ಹೊತ್ತಿಗೆ ಹಾಸನಕ್ಕೆ ಕಳಿಸಿಕೊಡಲಾಯಿತು. ಕೋವಿಡ್ ಕೆಲಸದಲ್ಲಿ ರಾಜ್ಯ ಸರಕಾರ ಕ್ಷಿಪ್ರವಾಗಿ ಕೆಲಸ ಮಾಡುತ್ತಿದೆ ಎನ್ನುವುದಕ್ಕೆ ಇದೊಂದು ಉದಾಹರಣೆಯಷ್ಟೇ. ಸೋಂಕು ನಿವಾರಣೆ ವಿಷಯದಲ್ಲಿ ಸರಕಾರ ಯಾವುದೇ ಮೀನಾಮೇಷ ಎಣಿಸುವುದಿಲ್ಲ. ಖರ್ಚು ಮಾಡಲು ಹಿಂಜರಿಯುತ್ತಿಲ್ಲ. ಯಾವುದೇ ಸೌಲಭ್ಯ ಬೇಕಿದ್ದರೂ ತಕ್ಷಣವೇ ಒದಗಿಸಲಾಗುತ್ತಿದೆ ಎಂದು ಡಿಸಿಎಂ ಡಾ.ಅಶ್ವತ್ಥನಾರಾಯಣ ತಿಳಿಸಿದರು.

  • ಲಸಿಕೆ ಹಾಕಿಸಿಕೊಳ್ಳಿ ಅಂದಿದ್ದಕ್ಕೆ ಆರೋಗ್ಯ ಸಿಬ್ಬಂದಿಗೆ ಗ್ರಾಮಸ್ಥರಿಂದ ಹಲ್ಲೆ

    ಲಸಿಕೆ ಹಾಕಿಸಿಕೊಳ್ಳಿ ಅಂದಿದ್ದಕ್ಕೆ ಆರೋಗ್ಯ ಸಿಬ್ಬಂದಿಗೆ ಗ್ರಾಮಸ್ಥರಿಂದ ಹಲ್ಲೆ

    ಭೋಪಾಲ್: ಕೊರೊನಾ ರೋಗಕ್ಕೆ ಲಸಿಕೆ ಹಾಕಿಸಿಕೊಳ್ಳಿ ಎಂದು ಹೇಳಿದ್ದಕ್ಕೆ ಆರೋಗ್ಯ ಸಿಬ್ಬಂದಿಗೆ   ಗ್ರಾಮಸ್ಥರು ಥಳಿಸಿರುವ ಘಟನೆ ಮಧ್ಯಪ್ರದೇಶದ ಒಂದು ಹಳ್ಳಿಯೊಂದರಲ್ಲಿ ನಡೆದಿದೆ.

    ಲಸಿಕೆ ಬಗ್ಗೆ ಜಾಗೃತಿ ಮೂಡಿಸಲು ಆರೋಗ್ಯ ಸಿಬ್ಬಂದಿಗಳ ತಂಡವು ಮಹಿಳಾ ತಹಶೀಲ್ದಾರ್ ನೇತೃತ್ವದಲ್ಲಿ ಮಧ್ಯಪ್ರದೇಶದ ಉಜ್ಜೈನ್ ಜಿಲ್ಲೆಯ ಮಲಿಖೇಡಿ ಗ್ರಾಮಕ್ಕೆ ಭೇಟಿ ನೀಡಿತ್ತು. ಈ ವೇಳೆ ಪರ್ಡಿ ಸಮುದಾಯಕ್ಕೆ ಸೇರಿದ ಗ್ರಾಮಸ್ಥರು ತಮ್ಮ ಹಳ್ಳಿಗೆ ಬಂದ ಸರ್ಕಾರಿ ಅಧಿಕಾರಿಗಳ ಮೇಲೆ ದಾಳಿ ನಡೆಸಿದ್ದಾರೆ.

    ಈ ಮೊದಲು ಕೂಡ ಆರೋಗ್ಯ ಸಿಬ್ಬಂದಿ ಈ ಗ್ರಾಮಕ್ಕೆ ಭೇಟಿ ನೀಡಿ ಲಸಿಕೆ ಹಾಕಿಸಿಕೊಳ್ಳುವಂತೆ ಜನರಿಗೆ ಮನವರಿಕೆ ಮಾಡಲು ಯತ್ನಿಸಿದ್ದರು. ಆದರೆ ಆಗಲೂ ಸಹ ಜನರು ವ್ಯಾಕ್ಸಿನ್ ಹಾಕಿಸಿಕೊಳ್ಳಲು ಮುಂದಾಗಿರಲಿಲ್ಲ. ಮತ್ತೆ ತಂಡವು ಮಲಿಖೇಡಿ ಗ್ರಾಮಕ್ಕೆ ಭೇಟಿ ನೀಡಿ ಲಸಿಕೆ ಬಗ್ಗೆ ಅರಿವು ಮೂಡಿಸಿ, ಜನರು ವ್ಯಾಕ್ಸಿನ್ ಹಾಕಿಸಿಕೊಳ್ಳಬೇಕು ಎಂದು ಹೇಳಲು ಮುಂದಾಗಿದ್ದರು. ಈ ವೇಳೆ, ಕೆಲವು ಗ್ರಾಮಸ್ಥರು ಆರೋಗ್ಯ ಸಿಬ್ಬಂದಿ ತಂಡದ ಓರ್ವ ವ್ಯಕ್ತಿ ಮೇಲೆ ದಾಳಿ ನಡೆಸಿದ್ದಾರೆ. ದಾಳಿಗೆ ಒಳಗಾದ ಮೊಹಮ್ಮದ್ ಖುರೇಷಿ ಅದೇ ಗ್ರಾಮ ಪಂಚಾಯತಿಯ ಮಹಿಳಾ ಪದಾಧಿಕಾರಿಯ ಪತಿ ಎಂದು ತಿಳಿದು ಬಂದಿದ್ದು, ಆತ ಕೂಡ ಆರೋಗ್ಯ ಕಾರ್ಯಕರ್ತನಾಗಿ ಸೇವೆ ಸಲ್ಲಿಸುತ್ತಿದ್ದ ಎಂದು ತಿಳಿದು ಬಂದಿದೆ.

    ಮಹಿಳಾ ತಹಶೀಲ್ದಾರ್, ಎನ್‍ಎಂ, ಆಶಾ ಕಾರ್ಯಕರ್ತೆಯರು ಹಾಗೂ ಸ್ಥಳೀಯ ಪಟ್ವಾಡಿಗಳು ಮಲಿಖೇಡಿ ಗ್ರಾಮಕ್ಕೆ ಭೇಟಿ ನೀಡಿ ಲಸಿಕೆ ಬಗ್ಗೆ ಇರುವ ತಪ್ಪು ಕಲ್ಪನೆಗಳು ಹಾಗೂ ಗೊಂದಲಗಳನ್ನು ನಿವಾರಿಸಿ, ವ್ಯಾಕ್ಸಿನ್ ಹಾಕಿಸಿಕೊಳ್ಳಿ ಎಂದು ಪ್ರೇರೇಪಿಸಲು ಮುಂದಾಗಿದ್ದರು. ಈ ಕುರಿತಾಗಿ ತಹಶೀಲ್ದಾರ್ ಹಾಗೂ ಆರೋಗ್ಯ ಸಿಬ್ಬಂದಿ ಗ್ರಾಮಸ್ಥರ ಜೊತೆ ಮಾತನಾಡುತ್ತಿರುವಾಗ, 50 ಮಂದಿಯನ್ನೊಳಗೊಂಡ ಒಂದು ಗುಂಪು   ನಮ್ಮ ಮೇಲೆ ಮೇಲೆ ದಾಳಿ ಮಾಡಿದರು ಎಂದು ತಂಡದ ಸದಸ್ಯರೊಬ್ಬರು ಹೇಳಿದ್ದಾರೆ.

    ಲಸಿಕೆ ಬಗ್ಗೆ ಜನರಲ್ಲಿ ಅರಿವು ಮೂಡಿಸುತ್ತಿದ್ದರೆ, ಗ್ರಾಮಸ್ಥರು ನಮ್ಮ ಮೇಲೆ ಆಕ್ರಮಣ ಮಾಡಲು ಪ್ರಾರಂಭಿಸಿದರು. ತಹಶೀಲ್ದಾರ್ ಹಾಗೂ ತಂಡದ ಸದಸ್ಯರು ಪ್ರಾಣಾಪಾಯದಿಂದ ಪಾರಾದರು. ಆದರೆ ಈ ದಾಳಿಯಲ್ಲಿ ನನ್ನ ತಲೆಗೆ ಪೆಟ್ಟಾಗಿದೆ ಎಂದು ಗಾಯಗೊಂಡ ವ್ಯಕ್ತಿ ಶಕೀಲ್ ಮೊಹಮ್ಮದ್ ಖುರೇಷಿ ಹೇಳಿದ್ದಾರೆ. ಈ ದಾಳಿಗೆ ಸಂಬಂಧಿಸಿದಂತೆ ನಾಲ್ವರ ವಿರುದ್ದ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಹೆಚ್ಚುವರಿ ಎಸ್‍ಪಿ ಆಕಾಶ್ ಭೂರಿಯಾ ಹೇಳಿದರು.

  • ಕಾಲಿಗೆ ಬೀಳಲು ಮುಂದಾದ ಜನ- ಕೈ ಮುಗಿದು ಹಿಂದೆ ಸರಿದ ಸೋನು ಸೂದ್

    ಕಾಲಿಗೆ ಬೀಳಲು ಮುಂದಾದ ಜನ- ಕೈ ಮುಗಿದು ಹಿಂದೆ ಸರಿದ ಸೋನು ಸೂದ್

    ಮುಂಬೈ: ಕೊರೊನಾ ಸಂಕಷ್ಟದ ಸಮಯದಿಂದಲೂ ಚಿಕಿತ್ಸೆಗೆ ಹಣ ಇಲ್ಲದವರಿಗೆ ಆರ್ಥಿಕ ನೆರವು ನೀಡುತ್ತಾ ಬಡವರ ಪಾಲಿನ ದೇವರಾಗಿರುವ ಸೋನು ಸೂದ್ ಅವರ ಕಾಲಿಗೆ ಜನ ಬೀಳಲು ಮುಂದಾಗಿರುವ ದೃಶ್ಯಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.

    ಸೋನು ಸೂದ್ ಬಳಿ ಕಷ್ಟ ಹೇಳಿಕೊಂಡರೆ ಅದಕ್ಕೆ ಖಂಡಿತ ಪರಿಹಾರ ಸಿಗುತ್ತದೆ ಎಂಬ ಭರವಸೆ ಜನರಲ್ಲಿ ಮೂಡಿದೆ. ಒಂದಲ್ಲ ಒಂದು ರೀತಿಯಲ್ಲಿ ಸಹಾಯ ಮಾಡುತ್ತಿರುವ ಅವರನ್ನು ಜನರು ದೇವರ ರೀತಿ ನೋಡುತ್ತಾರೆ. ತಮಗೆ ಜನಿಸಿದ ಮಕ್ಕಳಿಗೆ ಸೋನು ಸೂದ್ ಎಂದು ಹೆಸರಿಟ್ಟು, ಸೋನು ಅವರಿಗೆ ದೇವಸ್ಥಾನ, ಹಾಲಿನ ಅಭಿಷೇಕ ಹೀಗೆ ಹಲವು ರೀತಿಯಲ್ಲಿ ಕೃತಜ್ಞತೆ ಸಲ್ಲಿಸಿದವರೂ ಇದ್ದಾರೆ.

     

    View this post on Instagram

     

    A post shared by Viral Bhayani (@viralbhayani)

    ಮುಂಬೈನಲ್ಲಿರುವ ಸೋನು ಸೂದ್ ಮನೆಯ ಎದುರು ಇತ್ತೀಚೆಗೆ ಕೆಲವರು ಬಂದು ಸಹಾಯ ಕೇಳಿದ್ದಾರೆ. ತಮ್ಮ ಕಷ್ಟಕ್ಕೆ ಸ್ಪಂದಿಸಿದ ನಟನ ಕಾಲಿಗೆ ಬೀಳಲು ಅವರೆಲ್ಲ ಮುಂದಾಗಿದ್ದಾರೆ. ವಯಸ್ಸಿನಲ್ಲಿ ಹಿರಿಯರಾದವರು ಕೂಡ ಭಾವುಕರಾಗಿ ಸೋನು ಪಾದ ಮುಟ್ಟಿ ನಮಸ್ಕರಿಸಲು ಬಂದಿದ್ದಾರೆ. ಆದರೆ ಅದಕ್ಕೆ ಸೋನು ಅವಕಾಶ ನೀಡಿಲ್ಲ. ವಿನಯವಂತಿಕೆಯಿಂದ ಹಿಂದೆ ಸರಿದು, ಎಲ್ಲರಿಗೂ ಕೈ ಮುಗಿದಿದ್ದಾರೆ.

    ಒಂದೆಡೆ ಸೋನು ಸೂದ್ ಅವರ ಜನಪ್ರಿಯತೆ ಹೆಚ್ಚುತ್ತಿದೆ. ಇನ್ನೊಂದೆಡೆ ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವವರ ಸಂಖ್ಯೆ ಕೂಡ ಏರಿಕೆ ಆಗುತ್ತಿದೆ. ಸೋನು ಸೂದ್ ಹೆಸರಿನಲ್ಲಿ ಹಣ ಮಾಡಲು ಕೂಡ ಕೆಲವು ಕಿಡಿಗೇಡಿಗಳು ಮುಂದಾಗಿದ್ದಾರೆ. ಸೋನು ಸೂದ್ ಫೌಂಡೇಶನ್‍ಗೆ ಹಣ ದೇಣಿಗೆ ನೀಡಿ ಎಂದು ನಕಲಿ ಗೂಗಲ್ ಪೇ ನಂಬರ್ ಇರುವ ಪೋಸ್ಟರ್​ಗಳು ಸೋಶಿಯಲ್ ಮೀಡಿಯಾದಲ್ಲಿ ಇತ್ತೀಚೆಗೆ ಹರಿದಾಡಿದ್ದವು. ಅವುಗಳ ಸ್ಕ್ರೀನ್ ಶಾಟ್ ಹಂಚಿಕೊಂಡ ಸೋನು ಸೂದ್, ಇದೆಲ್ಲವೂ ಫೇಕ್ ಎಂಬುದನ್ನು ಸ್ಪಷ್ಟಪಡಿಸಿದ್ದರು.

  • ಲಸಿಕೆ ಪಡೆಯಲು ಭಯಪಟ್ಟು ನದಿಗೆ ಹಾರಿದ ಗ್ರಾಮಸ್ಥರು

    ಲಸಿಕೆ ಪಡೆಯಲು ಭಯಪಟ್ಟು ನದಿಗೆ ಹಾರಿದ ಗ್ರಾಮಸ್ಥರು

    ಲಕ್ನೋ: ಕೊರೊನಾ ಲಸಿಕೆ ಕುರಿತಾಗಿ ತಪ್ಪು ಕಲ್ಪನೆ, ಭಯ ಹೊಂದಿರುವ ಗ್ರಾಮಸ್ಥರು ಲಸಿಕೆ ಹಾಕಿಸಿಕೊಳ್ಳುವುದನ್ನು ತಪ್ಪಿಸಿಕೊಳ್ಳಲು, ಆರೋಗ್ಯ ಸಿಬ್ಬಂದಿಯ ಕೈಗೆ ಸಿಗದಂತೆ ತಮ್ಮ ಮನೆಗಳಿಂದ ಓಡಿಹೋಗಿ ನದಿಗೆ ಹಾರಿರುವುದು ಉತ್ತರಪ್ರದೇಶದ ಬಾರಬಂಕಿ ಜಿಲ್ಲೆಯ ಸಿಸೌಡಾ ಗ್ರಾಮದಲ್ಲಿ ನಡೆದಿದೆ.

     

    ಸಾರ್ವಜನಿಕರಿಗೆ ಲಸಿಕೆ ನೀಡಲು ಆರೋಗ್ಯ ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿತ್ತು. ಈ ವೇಳೆ ಅಧಿಕಾರಿಗಳನ್ನು ಕಂಡ ಕೆಲವುಗ್ರಾಮಸ್ಥರು ಲಸಿಕೆ ತೆಗೆದುಕೊಳ್ಳಲು ನಿರಾಕರಿಸಿ ತಮ್ಮ ಮನೆಗಳಿಂದ ನದಿಯ ಕಡೆಗೆ ಓಡಿಹೋಗಿದ್ದಾರೆ. ಬಳಿಕ ಇವರನ್ನು ಆರೋಗ್ಯ ಅಧಿಕಾರಿಗಳು ಹಿಂಬಾಲಿಸಿದ್ದಾರೆ. 200ಕ್ಕೂ ಹೆಚ್ಚು ಜನರು ಆರೋಗ್ಯ ಸಿಬ್ಬಂದಿ ಕೈಯಿಂದ ತಪ್ಪಿಸಿಕೊಳ್ಳಲು ನದಿ ಕಡೆಗೆ ಓಡಿದ್ದಾರೆ. ಸಿಬ್ಬಂದಿ ಹಿಂಬಾಲಿಸಿ ಬಂದಿದ್ರಿಂದ ಅವರಲ್ಲಿ ಕೆಲವು ನೀರಿಗೆ ಹಾರಿದ್ದಾರೆ.

    ಆರೋಗ್ಯಾಧಿಕಾರಿಗಳು ಎಷ್ಟೇ ಮನವಿ ಮಾಡಿಕೊಂಡರು ಸಹ ಗ್ರಾಮಸ್ಥರು ಲಸಿಕೆಯನ್ನು ತೆಗೆದುಕೊಳ್ಳಲು ನಿರಾಕರಿಸಿದ್ದಾರೆ. ನದಿಯಿಂದ ಹೊರಬನ್ನಿ ಎಂದು ಮನವಿ ಮಾಡಿದ್ದಾರೆ. ಇನ್ನು ಬಲವಂತ ಮಾಡಿ ಮುಂದೆ ಹೋದರೆ ಜನರು ನೀರಿನಲ್ಲಿ ಮುಳಗಬಹುದು ಎಂದು ಭಯದಿಂದ ಅಧಿಕಾರಿಗಳು ವಾಪಾಸ್ಸಾಗಿದ್ದಾರೆ. ಒಟ್ಟು 1500 ನಿವಾಸಿಗಳಿರುವ ಈ ಗ್ರಾಮದಲ್ಲಿ ಈವರೆಗೆ ಅಧಿಕಾರಿಗಳು ಕೇವಲ 14 ಮಂದಿಗೆ ಲಸಿಕೆ ಹಾಕಲು ಸಾಧ್ಯವಾಗಿಲ್ಲ.

     

    ಜನರಲ್ಲಿ ಲಸಿಕೆ ಬಗ್ಗೆ ಅರಿವಿನ ಕೊರತೆ ಇದೆ. ಈ ಕುರಿತಾಗಿ ಜಾಗೃತಿ ಅಭಿಯಾನ ನಡೆಸಲಿದ್ದೇವೆ ಎಂದು ಬಾರಾಬಂಕಿ ಜಿಲ್ಲೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

  • ಬಾದಾಮಿ ಸೇವನೆಯಿಂದ ದೊರೆಯಲಿದೆ ಉತ್ತಮ ಆರೋಗ್ಯ

    ಬಾದಾಮಿ ಸೇವನೆಯಿಂದ ದೊರೆಯಲಿದೆ ಉತ್ತಮ ಆರೋಗ್ಯ

    ರೋಗ್ಯಕರ ಆಹಾರಗಳಲ್ಲಿ ಬಾದಾಮಿ ಪ್ರಮುಖ ಸ್ಥಾನ ಪಡೆಯುತ್ತದೆ. ಅದ್ಭುತ ಆರೋಗ್ಯಕರ ಅಂಶವನ್ನು ಬಾದಾಮಿ ಹೊಂದಿದೆ. ಒಣ ಬಾದಾಮಿಯ ಸೇವನೆಗಿಂತಲೂ ರಾತ್ರಿ ನೆನೆಸಿಟ್ಟು ಬೆಳಿಗ್ಗೆ ತಿನ್ನುವುದು ಅತ್ಯುತ್ತಮ. ನೆನೆಸಿಟ್ಟ ಬಾದಾಮಿ ಸೇವನೆ ಭಾರತೀಯರಿಗೆ ಹೊಸದೇನೂ ಅಲ್ಲ. ನೆನಸಿಟ್ಟು ಬಾದಾಮಿಯಿಂದ ಸಿಗಲಿದೆ ಹಲವು ಪ್ರಯೋಜನ.

    * ರಾತ್ರಿ ವೇಳೆ ಬಾದಾಮಿಯನ್ನು ನೆನೆಸಿಟ್ಟು ಬೆಳಿಗ್ಗೆ ವೇಳೆ ಉಪಹಾರಕ್ಕೂ ಮೊದಲು ಸೇವಿಸಿ ಇದರಿಂದ ಜ್ನಾಪಕ ಶಕ್ತಿ ಹೆಚ್ಚಾಗುತ್ತದೆ.

    * ನೆನೆಸಿಟ್ಟಿರುವ ಬಾದಾಮಿ ಸೇವನೆ ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ.

    * ಬಾದಾಮಿಗಳಲ್ಲಿ ವಿಟಮಿನ್ ಇ ಸಮೃದ್ದ ಪ್ರಮಾಣದಲ್ಲಿದೆ. ಈ ವಿಟಮಿನ್ ಇ ನಮ್ಮ ಚರ್ಮ ಮತ್ತು ಕೂದಲಿನ ಪೋಷಣೆಗೆ ಅಗತ್ಯವಾಗಿ ಬೇಕಾಗಿರುವ ಪೋಷಕಾಂಶಗಳನ್ನು ಒದಗಿಸುತ್ತದೆ.

    * ಬಾದಾಮಿಯಲ್ಲಿರುವ ಪೋಷಕಾಂಶಗಳು ಈ ಸಮತೋಲನವನ್ನು ಸಾಧಿಸಲು ಹೆಚ್ಚಿನ ನೆರವು ನೀಡುತ್ತವೆ. ಅಂದರೆ ಒಳ್ಳೆಯ ಕೊಲೆಸ್ಟ್ರಾಲ್ ಹೆಚ್ಚಲು ಮತ್ತು ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗಲು ನೆರವಾಗುತ್ತವೆ.

    * ಅಧಿಕ ರಕ್ತದೊತ್ತಡ ಸಮಸ್ಯೆ ಇರುವವರು ನೆನೆಸಿಟ್ಟ ಬಾದಾಮಿಯುನ್ನು ತಿನ್ನುವುದರಿಂದ ಉನ್ನತ ಮಟ್ಟದ ಪೋಟಾಶಿಯಂ ಮತ್ತು ಕಡಿಮೆ ಸೋಡಿಯಂ ಇದ್ದು, ಇದು ರಕ್ತದೊತ್ತಡ ಹೆಚ್ಚದಂತೆ ತಡೆಯುತ್ತದೆ.

    * ಬಾದಾಮಿಯಲ್ಲಿ ಫೈಬರ್, ಪ್ರೋಟೀನ್, ಮಿಟಮಿನ್ ಇ ಮತ್ತು ಮೆಗ್ನೀಸಿಯಮ್ ಅಂಶಗಳಿರುತ್ತದೆ. ಪ್ರತಿದಿನ ಸೇವಿಸಿದರೆ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ.

  • ಹುಬ್ಬಳ್ಳಿಯಲ್ಲಿ ಬ್ಲ್ಯಾಕ್ ಫಂಗಸ್‍ಗೆ ಮೊದಲ ಬಲಿ

    ಹುಬ್ಬಳ್ಳಿಯಲ್ಲಿ ಬ್ಲ್ಯಾಕ್ ಫಂಗಸ್‍ಗೆ ಮೊದಲ ಬಲಿ

    ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬ್ಲ್ಯಾಕ್ ಫಂಗಸ್ ಸೊಂಕಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಮೂಲಕ ಹುಬ್ಬಳ್ಳಿ ಕಿಮ್ಸ್ ನಲ್ಲಿ  ಬ್ಲ್ಯಾಕ್ ಫಂಗಸ್‍ಗೆ ಮೊದಲ ಬಲಿಯಾದ ಪ್ರಕರಣ ಇದಾಗಿದೆ.

    ಹುಬ್ಬಳ್ಳಿ ಮೂಲದ ವ್ಯಕ್ತಿಯೊಬ್ಬರಿಗೆ ಕಳೆದ ಕೆಲವು ದಿನಗಳ ಹಿಂದೆ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿತ್ತು. ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

    ಬ್ಲ್ಯಾಕ್ ಫಂಗಸ್ ಸೋಂಕಿಗೆ ಕಿಮ್ಸ್ ನಲ್ಲಿ ಜಿಲ್ಲೆಯ ಒಟ್ಟು 78 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದು, ಅವರಲ್ಲಿ ಓರ್ವ ಮೃತಪಟ್ಟಿದ್ದಾನೆ ಎಂದು ಕಿಮ್ಸ್ ವೈದ್ಯರು ತಿಳಿಸಿದ್ದಾರೆ.