Tag: health

  • ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಿವಾಸಕ್ಕೆ ವಿಶೇಷ ಭದ್ರತೆ

    ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಿವಾಸಕ್ಕೆ ವಿಶೇಷ ಭದ್ರತೆ

    – ಸಂಜೆ ಮತ್ತೊಂದು ಹೆಲ್ತ್ ಬುಲೆಟಿನ್

    ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯ ಮತ್ತಷ್ಟು ಗಂಭೀರವಾಗಿರುವ ಹಿನ್ನೆಲೆಯಲ್ಲಿ ಅವರ ನಿವಾಸಕ್ಕೆ ವಿಶೇಷ ಭದ್ರತಾ ತಂಡ ನಿಯೋಜನೆ ಮಾಡಲಾಗಿದೆ.

    ವಾಜಪೇಯಿ ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆಯಾಗಿಲ್ಲ. ಬುಧವಾರ ಅವರ ಸ್ಥಿತಿ ಹೇಗಿತ್ತೋ ಹಾಗಿಯೇ ಇಂದು ಕೂಡ ಮುಂದುವರಿದಿದೆ ಅಂತ ಏಮ್ಸ್ ಆಸ್ಪತ್ರೆ ಈಗಾಗಲೇ ತಿಳಿಸಿದ್ದು, ಇಂದು ಸಂಜೆ ಮತ್ತೊಂದು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗುತ್ತಿದೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

    ಮಧ್ಯಪ್ರದೇಶದಲ್ಲಿ ನಡೆಯುವ ಬಿಜೆಪಿಯ ಎಲ್ಲಾ ಚುನಾವಣಾ ಯಾತ್ರೆಗಳನ್ನು ರದ್ದು ಮಾಡಲಾಗಿದೆ. ಅಲ್ಲದೇ ಇಂದಿನ ಎಲ್ಲಾ ಬಿಜೆಪಿ ಕಾರ್ಯಕ್ರಮಗಳನ್ನು ರದ್ದು ಮಾಡುವಂತೆ ಪ್ರಧಾನಿ ಕಾರ್ಯಾಲಯ ಈಗಾಗಲೇ ಪ್ರಕರಟಣೆ ಹೊರಡಿಸಿದೆ.

    ಗ್ವಾಲಿಯರ್ ಮತ್ತು ಆಗ್ರಾದಲ್ಲಿರುವ ವಾಜಪೇಯಿ ಸಂಬಂಧಿಕರು ಶೀಘ್ರವೇ ಆಸ್ಪತ್ರೆಗೆ ಬರುವಂತೆ ಏಮ್ಸ್ ಸೂಚನೆ ನೀಡಿದೆ. ಈಗಾಗಲೇ ಆಸ್ಪತ್ರೆಗೆ ಆರೋಗ್ಯ ಸಚಿವ ಜೆ.ಪಿ ನಡ್ವಾ, ಎಲ್ ಕೆ ಅಡ್ವಾಣಿ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಅಮಿತ್ ಶಾ, ರಾಹುಲ್ ಗಾಂಧಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಆಸ್ಪತ್ರೆಯಲ್ಲಿ ವಾಜಪೇಯಿ ಕುಟುಂಬಸ್ಥರು ಈಗಾಗಲೇ ಜಮಾಯಿಸಿದ್ದು, ಕಣ್ಣೀರು ಹಾಕುತ್ತಿದ್ದಾರೆ.

    ಆಸ್ಪತ್ರೆ ಬಳಿ ಹೆಚ್ಚುವರಿ ಭದ್ರತಾ ಸಿಬ್ಬಂದಿ ನೇಮಕ ಮಾಡಲಾಗಿದ್ದು, ಬಿಜೆಪಿ ನಾಯಕರ ದಂಡೇ ಆಸ್ಪತ್ರೆಗೆ ಹರಿದುಬರುತ್ತಿದೆ. ಮಧುಮೇಹ, ಮೂತ್ರದ ಸೋಂಕು ಸೇರಿ ವಿವಿಧ ರೀತಿಯ ಅನಾರೋಗ್ಯದ ಕಾರಣ ಕಳೆದ ಜೂನ್ 11ರಂದು ವಾಜಪೇಯಿ ಏಮ್ಸ್ ಗೆ ದಾಖಲಾಗಿದ್ದರು. ವಾಜಪೇಯಿ ಆರೋಗ್ಯ ಇನ್ನಷ್ಟು ಕ್ಷೀಣಿಸಿದ್ದು, ಆಮ್ಲಜನಕದ ಬೆಂಬಲ ನೀಡಲಾಗುತ್ತಿದೆ ಎಂದು ಬುಧವಾರ ಏಮ್ಸ್ ಆಸ್ಪತ್ರೆ ತಿಳಿಸಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

     

  • ವಾಜಪೇಯಿ ಆರೋಗ್ಯ ಸುಧಾರಿಸಿಲ್ಲ- ಏಮ್ಸ್ ವರದಿ

    ವಾಜಪೇಯಿ ಆರೋಗ್ಯ ಸುಧಾರಿಸಿಲ್ಲ- ಏಮ್ಸ್ ವರದಿ

    ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ಮತ್ತಷ್ಟು ಗಂಭೀರವಾಗಿದ್ದು, ಅವರ ಆರೋಗ್ಯದಲ್ಲಿ ಯಾವ ರೀತಿಯೂ ಸುಧಾರಣೆಯಾಗಿಲ್ಲ ಎಂದು ಏಮ್ಸ್ ವೈದ್ಯರಿಂದ ಮಾಹಿತಿ ಲಭ್ಯವಾಗಿದೆ.

    ಬುಧವಾರ ಅಟಲ್ ಬಿಹಾರಿ ವಾಜಪೇಯಿ ಮಧುಮೇಹ, ಮೂತ್ರದ ಸೋಂಕು ಸೇರಿ ವಿವಿಧ ರೀತಿಯ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅವರು ಬುಧವಾರ ಯಾವ ಪರಿಸ್ಥಿತಿಯಲ್ಲಿದ್ದರೋ ಅದೇ ಪರಿಸ್ಥಿತಿಯಲ್ಲಿ ಇಂದು ಕೂಡ ಇದ್ದಾರೆ ಎಂದು ದೆಹಲಿಯ ಏಮ್ಸ್ ವೈದ್ಯರಿಂದ ಹೆಲ್ತ್ ಬುಲೆಟಿನ್ ಬಿಡುಗಡೆಯಾಗಿದೆ.

    ವಾಜಪೇಯಿ ಆರೋಗ್ಯ ಚೇತರಿಗೆ ದೇಶದಾದ್ಯಂತ ಪೂಜೆ ನಡೆಯುತ್ತಿವೆ. ಈಗಾಗಲೇ ಬಿಜೆಪಿ ಶಾಸಕರು ಆಸ್ಪತ್ರೆಯತ್ತ ದೌಡಾಯಿಸಿದ್ದಾರೆ. ಆಸ್ಪತ್ರೆಗೆ ಎಲ್ ಕೆ ಅಡ್ವಾಣಿ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಅಮಿತ್ ಶಾ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಆಸ್ಪತ್ರೆಯಲ್ಲಿ ವಾಜಪೇಯಿ ಕುಟುಂಬಸ್ಥರು ಈಗಾಗಲೇ ಜಮಾಯಿಸಿದ್ದು, ಕಣ್ಣೀರು ಹಾಕುತ್ತಿದ್ದಾರೆ.

    ಆಸ್ಪತ್ರೆ ಬಳಿ ಹೆಚ್ಚುವರಿ ಭದ್ರತಾ ಸಿಬ್ಬಂದಿ ನೇಮಕ ಮಾಡಲಾಗಿದೆ. ಆರೋಗ್ಯ ಸಚಿವ ಜೆ.ಪಿ ನಡ್ವಾ ಭೇಟಿ ನಿಡಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಹುಲ್ ಗಾಂಧಿ ಕೂಡ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ರಾಜ್ಯ ಪ್ರವಾಸದಲ್ಲಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಪ್ರವಾಸವನ್ನು ಕೂಡ ರದ್ದು ಮಾಡಿದ್ದಾರೆ.

    ಮಧುಮೇಹ, ಮೂತ್ರದ ಸೋಂಕು ಸೇರಿ ವಿವಿಧ ರೀತಿಯ ಅನಾರೋಗ್ಯದ ಕಾರಣ ಕಳೆದ ಜೂನ್ 11ರಂದು ವಾಜಪೇಯಿ ಏಮ್ಸ್ ಗೆ ದಾಖಲಾಗಿದ್ದರು. ವಾಜಪೇಯಿ ಆರೋಗ್ಯ ಇನ್ನಷ್ಟು ಕ್ಷೀಣಿಸಿದ್ದು, ಆಮ್ಲಜನಕದ ಬೆಂಬಲ ನೀಡಲಾಗುತ್ತಿದೆ ಎಂದು ಬುಧವಾರ ಏಮ್ಸ್ ಆಸ್ಪತ್ರೆ ತಿಳಿಸಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮಾಜಿ ಪ್ರಧಾನಿ ಆರೋಗ್ಯ ಮತ್ತಷ್ಟು ಗಂಭೀರ- ಆಸ್ಪತ್ರೆಗೆ ಬರುವಂತೆ ಸಂಬಂಧಿಕರಿಗೆ ಬುಲಾವ್

    ಮಾಜಿ ಪ್ರಧಾನಿ ಆರೋಗ್ಯ ಮತ್ತಷ್ಟು ಗಂಭೀರ- ಆಸ್ಪತ್ರೆಗೆ ಬರುವಂತೆ ಸಂಬಂಧಿಕರಿಗೆ ಬುಲಾವ್

    ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯ ಇಂದು ಮತ್ತಷ್ಟು ಗಂಭೀರವಾಗಿದ್ದು, ಸಂಬಂಧಿಕರು ಬುರುವಂತೆ ಆಸ್ಪತ್ರೆಯಿಂದ ಬುಲಾವ್ ನೀಡಲಾಗಿದೆ.

    ಈಗಾಗಲೇ ಆಸ್ಪತ್ರೆಗೆ ಎಲ್ ಕೆ ಅಡ್ವಾಣಿ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಅಮಿತ್ ಶಾ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಆಸ್ಪತ್ರೆಯಲ್ಲಿ ವಾಜಪೇಯಿ ಕುಟುಂಬಸ್ಥರು ಈಗಾಗಲೇ ಜಮಾಯಿಸಿದ್ದು, ಕಣ್ಣೀರು ಹಾಕುತ್ತಿದ್ದಾರೆ. ಆಸ್ಪತ್ರೆ ಬಳಿ ಹೆಚ್ಚುವರಿ ಭದ್ರತಾ ಸಿಬ್ಬಂದಿ ನೇಮಕ ಮಾಡಲಾಗಿದೆ. ಆರೋಗ್ಯ ಸಚಿವ ಜೆ.ಪಿ ನಡ್ವಾ ಭೇಟಿ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಹುಲ್ ಗಾಂಧಿ ಕೂಡ ಭೇಟಿ ನೀಡಿ ಆರೋಗ್ಯ ವಿಚಾರಿಸಲಿದ್ದಾರೆ.

    ಇಂದು ದೇಶಾದ್ಯಂತ ಬಿಜೆಪಿಯ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸುವಂತೆ ಪ್ರಧಾನಿ ಕಾರ್ಯಾಲಯ ಪ್ರಕಟಣೆ ಹೊರಡಿಸಿದೆ.

    ಮಧುಮೇಹ, ಮೂತ್ರದ ಸೋಂಕು ಸೇರಿ ವಿವಿಧ ರೀತಿಯ ಅನಾರೋಗ್ಯದ ಕಾರಣ ಕಳೆದ ಜೂನ್ 11ರಂದು ವಾಜಪೇಯಿ ಏಮ್ಸ್ ಗೆ ದಾಖಲಾಗಿದ್ದರು. ವಾಜಪೇಯಿ ಆರೋಗ್ಯ ಇನ್ನಷ್ಟು ಕ್ಷೀಣಿಸಿದ್ದು, ಆಮ್ಲಜನಕದ ಬೆಂಬಲ ನೀಡಲಾಗುತ್ತಿದೆ ಎಂದು ಬುಧವಾರ ಏಮ್ಸ್ ಆಸ್ಪತ್ರೆ ತಿಳಿಸಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ವಾಜಪೇಯಿ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ – ಏಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

    ವಾಜಪೇಯಿ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ – ಏಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

    ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ. ಕಳೆದ 24 ಗಂಟೆಗಳಲ್ಲಿ ವಾಜಪೇಯಿ ಆರೋಗ್ಯ ಇನ್ನಷ್ಟು ಕ್ಷೀಣಿಸಿದೆ ಎಂದು ಏಮ್ಸ್ ಆಸ್ಪತ್ರೆ ತಿಳಿಸಿದೆ.

    ವಾಜಪೇಯಿ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದು ಇದೀಗ ನಿರ್ಣಾಯಕ ಅಹಂತ ತಲುಪಿದೆ. ಸದ್ಯ ಅವರಿಗೆ ಆಮ್ಲಜನಕದ ಬೆಂಬಲ ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಮಧುಮೇಹ, ಮೂತ್ರದ ಸೋಂಕು ಸೇರಿ ವಿವಿಧ ರೀತಿಯ ಅನಾರೋಗ್ಯದ ಕಾರಣ ಕಳೆದ ಜೂನ್ 11ರಂದು ವಾಜಪೇಯಿ ಏಮ್ಸ್ ಗೆ ದಾಖಲಾಗಿದ್ದರು. ವಾಜಪೇಯಿ ಆರೋಗ್ಯ ಏರುಪೇರು ಹಿನ್ನೆಲೆ ಕೇಂದ್ರ ಸಚಿವ ಪಿಯೂಷ್ ಗೋಯಲ್ ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ರು. ಇದಕ್ಕೂ ಮೊದಲು ಪ್ರಧಾನಿ ಮೋದಿ ಸೇರಿ ಹಲವು ನಾಯಕರು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಇದನ್ನೂ ಓದಿ: ಮಾಜಿ ಪ್ರಧಾನಿ ವಾಜಪೇಯಿ ಏಮ್ಸ್ ಆಸ್ಪತ್ರೆಗೆ ದಾಖಲು

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮಗುವಿನ ಗಂಟಲಲ್ಲಿ ಸಿಕ್ಕಿಕೊಂಡ ನಾಣ್ಯ: ಚಿಕಿತ್ಸೆ ನೀಡದೇ ಅಲೆದಾಡಿಸಿದ 4 ಆಸ್ಪತ್ರೆಗಳು!

    ಮಗುವಿನ ಗಂಟಲಲ್ಲಿ ಸಿಕ್ಕಿಕೊಂಡ ನಾಣ್ಯ: ಚಿಕಿತ್ಸೆ ನೀಡದೇ ಅಲೆದಾಡಿಸಿದ 4 ಆಸ್ಪತ್ರೆಗಳು!

    ಕೋಲ್ಕತ್ತಾ:ಸರಿಯಾದ ಸಮಯದಲ್ಲಿ ಸೂಕ್ತ ಚಿಕಿತ್ಸೆ ದೊರೆಯದೆ ನಾಣ್ಯ ನುಂಗಿದ್ದ 4 ವರ್ಷದ ಮಗುವೊಂದು ಪರದಾಡಿದ ಘಟನೆ ಪಶ್ಚಿಮ ಬಂಗಾಳದ ಕೋಲ್ಕತ್ತಾದ ಗಂಗಾಪುರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ಶನಿವಾರ ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಮನೆಯೊಳಗೆ ಆಟವಾಡುತ್ತಿದ್ದಾಗ 4 ವರ್ಷದ ಆಗ್ರ್ಯ ಬಿಸ್ವಾಸ್ ಏಕಾಏಕಿ 1 ರೂಪಾಯಿ ನಾಣ್ಯವನ್ನು ನುಂಗಿದ್ದಾನೆ. ನಾಣ್ಯ ಗಂಟಲಲ್ಲಿ ಸಿಕ್ಕಿಕೊಂಡು ಅಗ್ರ್ಯ ಜೋರಾಗಿ ಅಳುತ್ತಿದ್ದ. ಕೂಡಲೇ ಅವನನ್ನು ಪರೀಕ್ಷಿಸಿದಾಗ ನಾಣ್ಯ ನುಂಗಿರುವುದು ತಿಳಿಯಿತು ಎಂದು ಮಗುವಿನ ಅಜ್ಜ ದಿನೇಶ್ ಬಿಸ್ವಾಸ್ ತಿಳಿಸಿದ್ದಾರೆ.

    ಮಗುವನ್ನು 2 ಗಂಟೆಹೊತ್ತಿಗೆ ಹತ್ತಿರದ ಕಲ್ಯಾಣಿ ಮೆಡಿಕಲ್ ಕಾಲೇಜು ಆಸ್ಪತ್ರೆ ಹಾಗೂ ಜೆಎನ್‍ಎಂ ಆಸ್ಪತ್ರೆಯ ವೈದ್ಯರುಗಳಿಗೆ ತೋರಿಸಲಾಯಿತು. ಆದರೆ ಮಗುವನ್ನು ಪರೀಕ್ಷಿಸಿದ ಅವರು ನಮ್ಮ ಬಳಿ ಸರಿಯಾದ ಉಪಕರಣಗಳಿಲ್ಲ, ಮಗುವನ್ನು ಎನ್‍ಆರ್‍ಎಸ್ ಆಸ್ಪತ್ರೆ ಅಥವಾ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ತೋರಿಸಿ ಎಂದು ಸಲಹೆ ನೀಡಿದರು. ನಾವು ಎನ್‍ಆರ್‍ಎಸ್ ಆಸ್ಪತ್ರೆ ತಲುಪಿದಾಗ ರಾತ್ರಿ 10 ಗಂಟೆಯಾಗಿತ್ತು, ಆದರೆ ಅಲ್ಲಿಯೂ ಸಹ ನಮಗೆ ಯಾವುದೇ ಪ್ರಯೋಜನವಾಗಲಿಲ್ಲ. ಅಲ್ಲಿಂದ ನೇರವಾಗಿ ನಾವು ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಹೋದರೂ ವೈದ್ಯರು ಮಗುವನ್ನು ದಾಖಲಿಸಿಕೊಳ್ಳಲು ನಿರಾಕರಿಸಿದ್ದರು ಎಂದು ಹೇಳಿದರು.

    ಕೊನೆಗೆ ತಡರಾತ್ರಿ 2 ರ ಸುಮಾರಿಗೆ ಎಸ್‍ಎಸ್‍ಕೆಎಂ ಆಸ್ಪತ್ರೆಗೆ ಹೋದೆವು, ಕೂಡಲೇ ಅಲ್ಲಿನ ವೈದ್ಯರುಗಳು ಮಗುವನ್ನು ದಾಖಲಿಸಿಕೊಂಡು ಎಂಡೋಸ್ಕೋಪಿ ಮುಖಾಂತರ ನಾಣ್ಯವನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಆಗ್ರ್ಯ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾನೆ. ನಾನು ಹಾಗೂ ನಮ್ಮ ಕುಟುಂಬವು ಎಸ್‍ಎಸ್‍ಕೆಎಂ ಆಸ್ಪತ್ರೆಯ ವೈದ್ಯರಾದ ಡಾ. ಅರುಣಭ ಸೇನಗುಪ್ತರಿಗೆ ಕೃತಜ್ಞತೆಗಳನ್ನು ಅರ್ಪಿಸುತ್ತೇವೆ. ನಮ್ಮ ಮೊಮ್ಮಗ ತಾಯಿ ಇಲ್ಲದ ತಬ್ಬಲಿ, ನಾನು, ನನ್ನ ಹೆಂಡತಿ ಹಾಗೂ ತಂದೆಯ ಆಶ್ರಯದಲ್ಲಿ ಅವನು ಬೆಳೆಯುತ್ತಿದ್ದಾನೆ ಎಂದು ತಿಳಿಸಿದರು.

    ನಾಣ್ಯನುಂಗಿದ್ದ ಮಗುವನ್ನು ಸತತ ನಾಲ್ಕು ಆಸ್ಪತ್ರೆಗಳನ್ನು ತಿರುಗಿ, ಕೊನೆಗೂ ಮಗುವನ್ನು ಉಳಿಸಿಕೊಳ್ಳುವಲ್ಲಿ ಪೋಷಕರು ಯಶಸ್ವಿಯಾಗಿದ್ದಾರೆ. ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡದ ಆಸ್ಪತ್ರೆಗಳು, ಕೇವಲ ಉಪಕರಣಗಳ ಕೊರತೆಯಿಂದ ಸಾಗಾಕಿರುವುದು ಶೋಚನೀಯ ಸಂಗತಿಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಆರೋಗ್ಯ ಸ್ಥಿತಿ ಗಂಭೀರ

    ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಆರೋಗ್ಯ ಸ್ಥಿತಿ ಗಂಭೀರ

    ಚೆನ್ನೈ: ತಮಿಳುನಾಡಿನ ಡಿಎಂಕೆ ಪಕ್ಷದ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಂ ಕರುಣಾನಿಧಿ ಅವರ ಆರೋಗ್ಯ ಗಂಭೀರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

    ಜ್ವರ ಹಾಗೂ ಮೂತ್ರನಾಳ ಸೋಂಕಿನಿಂದ ಬಳಲುತ್ತಿದ್ದ ಕರುಣಾನಿಧಿಯವರನ್ನು ಜುಲೈ 28ರಂದು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಇಂದು ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಕಾವೇರಿ ಆಸ್ಪತ್ರೆ ಆಡಳಿತ ಮಂಡಳಿ ಪುತ್ರಿ ಕನಿಮೋಳಿಯೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ.

    ಕಳೆದ ವಾರದಿಂದ ಚಿಕಿತ್ಸೆಗೆ ಸ್ಪಂದಿಸಿದ್ದ ಅವರು ಸ್ವಲ್ಪ ಚೇತರಿಕೆ ಕಂಡಿದ್ದರು. ಆದರೆ ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿರುವುದರಿಂದ ಅವರ ಆರೋಗ್ಯ ಮತ್ತಷ್ಟು ಗಂಭೀರವಾಗಿದೆ. ಕರುಣಾನಿಧಿಯವರಿಗೆ ಉನ್ನತ ವೈದ್ಯರುಗಳು ಚಿಕಿತ್ಸೆ ಮುಂದುವರಿಸಿದ್ದು, ಆರೋಗ್ಯ ಸುಧಾರಣೆ ಕಾಣುವವರೆಗೂ ಆಸ್ಪತ್ರೆಯಲ್ಲೇ ದಾಖಲಾಗಿರುತ್ತಾರೆ ಎಂದು ಆಸ್ಪತ್ರೆ ಆಡಳಿತ ಮಂಡಳಿ ಹೇಳಿದೆ.

    ಕರುಣಾನಿಧಿಯವರು ಆಸ್ಪತ್ರೆಗೆ ದಾಖಲಿಸಿದ ದಿನದಿಂದಲೂ ಆಸ್ಪತ್ರೆ ಬಳಿಯೇ ಜಮಾಯಿಸುವ ಅಭಿಮಾನಿಗಳಿಗೆ ವೈದ್ಯರ ಹೇಳಿಕೆಯಿಂದಾಗಿ ಮತ್ತಷ್ಟು ಆತಂಕಕ್ಕೊಳಗಾಗಿದ್ದಾರೆ. ಅಲ್ಲದೇ ಅಭಿಮಾನಿಗಳು ಕರುಣಾನಿಧಿಯವರು ಆದಷ್ಟು ಬೇಗ ಗುಣಮುಖರಾಗಿಬರಲೆಂದು ಹಾರೈಸುತ್ತಿದ್ದಾರೆ.

    ಭಾನುವಾರ ರಾಷ್ಟ್ರಪತಿ ರಾಮನಾಥ ಕೋವಿಂದರವರು ಕಾವೇರಿ ಆಸ್ಪತ್ರೆಗೆ 5 ಬಾರಿ ಭೇಟಿ ನೀಡಿ ಕರುಣಾನಿಧಿಯವರ ಆರೋಗ್ಯವನ್ನು ಖುದ್ದು ವಿಚಾರಿಸಿದ್ದಾರೆ. ಅವರ ಆರೋಗ್ಯದ ಬಗ್ಗೆ ಪುತ್ರ ಸ್ಟಾಲಿನ್ ಹಾಗೂ ವೈದ್ಯರ ಬಳಿ ದೀರ್ಘ ಮಾತುಕತೆಯನ್ನು ನಡೆಸಿದ್ದರು. ಭೇಟಿಯ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿತಿಸಿದ ಅವರು, ಕರುಣಾನಿಧಿಯವರು ಶೀಘ್ರವೇ ಗುಣಮುಖರಾಗಿ ಸಹಜ ಸ್ಥಿತಿಗೆ ಮರಳುತ್ತಾರೆಂದು ತಿಳಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಕರುಣಾನಿಧಿ ಆರೋಗ್ಯ ಸ್ಥಿರ: ಚೆನ್ನೈ ಆಸ್ಪತ್ರೆಗೆ ಉಪರಾಷ್ಟ್ರಪತಿ ಭೇಟಿ

    ಕರುಣಾನಿಧಿ ಆರೋಗ್ಯ ಸ್ಥಿರ: ಚೆನ್ನೈ ಆಸ್ಪತ್ರೆಗೆ ಉಪರಾಷ್ಟ್ರಪತಿ ಭೇಟಿ

    ಚೆನ್ನೈ: ಡಿಎಂಕೆ ವರಿಷ್ಠ ಹಾಗೂ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ತಿಳಿಸಿದ್ದಾರೆ.

    94 ವರ್ಷದ ಕರುಣಾನಿಧಿಯವರು ಶುಕ್ರವಾರ ಮೂತ್ರನಾಳದ ಸೋಂಕು ತಗುಲಿ ಜ್ವರದಿಂದ ಬಳಲಿದ್ದು, ನಂತರ ರಕ್ತದೊತ್ತಡ ಕಡಿಮೆಯಾದ ಪರಿಣಾಮ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಇಂದು ಕಾವೇರಿ ಆಸ್ಪತ್ರೆಗೆ ಖುದ್ದು ಭೇಟಿ ನೀಡಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ರವರು ಕರುಣಾನಿಧಿಯವರ ಆರೋಗ್ಯ ವಿಚಾರಿಸಿದ್ದಾರೆ. ವೆಂಕಯ್ಯನಾಯ್ಡುರವರ ಭೇಟಿಯ ಫೋಟೊವನ್ನು ಡಿಎಂಕೆ ಬಿಡುಗಡೆಮಾಡಿದೆ.

    ವೈದ್ಯರ ತಂಡ ನಿರಂತರ ಮೇಲ್ವಿಚಾರಣೆ ನಡೆಸಿ ಕರುಣಾನಿಧಿಯವರಿಗೆ ಚಿಕಿತ್ಸೆ ನೀಡುತ್ತಿದೆ. ಇಂದು ಕರುಣಾನಿಧಿಯವರು ಹಾಗೂ ಅವರ ಕುಟುಂಬಸ್ಥರು ಮತ್ತು ವೈದ್ಯರ ಬಳಿ ಅವರ ಆರೋಗ್ಯ ವಿಚಾರಿಸಿದ್ದೇನೆ. ವೈದ್ಯರು ಅವರ ಆರೋಗ್ಯ ಸ್ಥಿರವಾಗಿದೆ. ಅವರು ಬೇಗ ಗುಣಮುಖರಾಗಲಿದ್ದಾರೆ ಎಂದು ವಿಪಿಎಸ್ ಸೆಕ್ರೆಟರಿಯೆಟ್ ಟ್ವೀಟ್ ಮಾಡಿ ತಿಳಿಸಿದೆ.

  • ರಾತ್ರೋರಾತ್ರಿ ಕುರಣಾನಿಧಿ ರಕ್ತದೊತ್ತಡ ಕುಸಿತ – ಮನೆಯಿಂದ ಆಸ್ಪತ್ರೆಗೆ ಶಿಫ್ಟ್!

    ರಾತ್ರೋರಾತ್ರಿ ಕುರಣಾನಿಧಿ ರಕ್ತದೊತ್ತಡ ಕುಸಿತ – ಮನೆಯಿಂದ ಆಸ್ಪತ್ರೆಗೆ ಶಿಫ್ಟ್!

    ಚೆನ್ನೈ: ತಮಿಳುನಾಡು ಮಾಜಿ ಸಿಎಂ, ಡಿಎಂಕೆ ಮುಖ್ಯಸ್ಥ ಕರುಣಾನಿಧಿ ಅವರ ಆರೋಗ್ಯ ಮತ್ತೆ ಗಂಭೀರವಾಗಿದೆ. ಇಷ್ಟು ದಿನ ಚೆನ್ನೈನ ಗೋಪಾಲಪುರಂನ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಶುಕ್ರವಾರ ರಾತ್ರೋರಾತ್ರಿ ವಿಶೇಷ ಅಂಬ್ಯುಲೆನ್ಸ್ ಮೂಲಕ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಕರುಣಾನಿಧಿಯವರ ಆರೋಗ್ಯ ಗಂಭೀರವಾಗಿದ್ದು, ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗ್ತಿದೆ ಅಂತ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ. ಆದರೆ ಮಾಜಿ ಸಚಿವ ಎ. ರಾಜ ಪ್ರತಿಕ್ರಿಯಿಸಿ, ಕರುಣಾನಿಧಿ ಆರೋಗ್ಯ ಸ್ಥಿರವಾಗಿದೆ. ರಕ್ತದೊತ್ತಡ ಕಡಿಮೆಯಾಗಿದ್ದಕ್ಕೆ ಆಸ್ಪತ್ರೆಗೆ ದಾಖಲಿಸಿದ್ದೇವೆ ಅಂತ ಹೇಳಿದ್ದಾರೆ. ಇಂದು ಗುಲಾಂ ನಬಿ ಆಜಾದ್ ಸೇರಿದಂತೆ ಹಲವರು ಕರುಣಾನಿಧಿ ಆರೋಗ್ಯ ವಿಚಾರಿಸಲಿದ್ದಾರೆ.

    ಹಿರಿಯ ಪುತ್ರ ಅಳಗಿರಿ, ಪುತ್ರಿ ಕನ್ನಿಮೋಳಿ, ಕಿರಿಯ ಪುತ್ರ ಸ್ಟಾಲಿನ್ ಸೇರಿದಂತೆ ಕುಟುಂಬಸ್ಥರು ಮತ್ತು ಡಿಎಂಕೆ ನಾಯಕರು ಆಸ್ಪತ್ರೆಯತ್ತ ದೌಡಾಯಿಸಿದ್ರು. ಕಾವೇರಿ ಆಸ್ಪತ್ರೆ ಬಳಿ ಬೆಂಬಲಿಗರು ಜಮಾಯಿಸಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

    ಡಿಎಂಕೆ ಮುಖಸ್ಥ ಎಂ. ಕರುಣಾನಿಧಿ ಆರೋಗ್ಯ ಬಿಗಡಾಯಿಸಿದ್ದು, ಶುಕ್ರವಾರ ಚೆನ್ನೈನ ಅವರ ಮನೆಯನ್ನೇ ಆಸ್ಪತ್ರೆ ಮಾಡಿಕೊಂಡು ಕಾವೇರಿ ಆಸ್ಪತ್ರೆ ವೈದ್ಯರು ಚಿಕಿತ್ಸೆ ನೀಡ್ತಿದ್ದರು. 94 ವರ್ಷದ ವಯೋವೃದ್ಧ ರಾಜಕಾರಣಿ ಕರುಣಾನಿಧಿ ಅವರಿಗೆ ವಯೋಸಹಜ ಕಾರಣಗಳಿಂದಾಗಿ ಆರೋಗ್ಯ ಕ್ಷೀಣಿಸಿದ್ದು, ಮೂತ್ರನಾಳ ಸೋಕಿನ ಕಾರಣ ಜ್ವರ ಬಂದಿದೆ. ವಿಷಯ ತಿಳಿದ ಡಿಎಂಕೆ ಕಾರ್ಯಕರ್ತರು, ನಾಯಕರು ಭಾರೀ ಸಂಖ್ಯೆಯಲ್ಲಿ ಗೋಪಾಲಪುರದಲ್ಲಿರುವ ಕರುಣಾನಿಧಿ ನಿವಾಸದ ಮುಂದೆ ಸೇರಿದ್ದರು. ಕಮಲ್‍ಹಸನ್, ಎಐಎಡಿಎಂಕೆ ನಾಯಕರು ಎಂಕೆ ಸ್ಟಾಲಿನ್ ಭೇಟಿ ಮಾಡಿ ಮಾತುಕತೆ ನಡೆಸಿದ್ದರು.

  • ಕರುಣಾನಿಧಿಯವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ: ಪ್ರಧಾನಿ ನರೇಂದ್ರ ಮೋದಿ

    ಕರುಣಾನಿಧಿಯವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ: ಪ್ರಧಾನಿ ನರೇಂದ್ರ ಮೋದಿ

    ನವದೆಹಲಿ: ವಯೋಸಹಜ ಖಾಯಿಲೆಯಿಂದ ಬಳಲುತ್ತಿರುವ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಮುಖ್ಯಸ್ಥರಾದ ಎಂ. ಕರುಣಾನಿಧಿಯರು ಶೀಘ್ರ ಗುಣಮುಖರಾಗಲೆಂದು ಪ್ರಧಾನಿ ನರೇಂದ್ರ ಮೋದಿಯವರು ಪ್ರಾರ್ಥಿಸಿದ್ದಾರೆ.

    ವಯೋ ಸಹಜ ಕಾಯಿಲೆಯಿಂದ ಬಳಲುತ್ತಿರುವ ಎಂ. ಕರುಣಾನಿಧಿಯವರು ಇಂದು ಬೆಳಗ್ಗೆ ಅಸ್ವಸ್ಥಗೊಂಡಿದ್ದು, ಚೆನ್ನೈನ ಕಾವೇರಿ ಆಸ್ಪತ್ರೆಯ ವೈದ್ಯರು ಗೋಪಾಲಪುರಂನಲ್ಲಿರುವ ಅವರ ನಿವಾಸದಲ್ಲೇ ಚಿಕಿತ್ಸೆ ಮುಂದುವರಿಸಿದ್ದಾರೆ. ಅಲ್ಲದೇ ಕರುಣಾನಿಧಿಯವರ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದೆ ಎಂದು ವೈದ್ಯರು ಪತ್ರಿಕಾ ಪ್ರಕಟಣೆಯನ್ನು ಸಹ ಮಾಡಿದ್ದಾರೆ.

    ಕರುಣಾನಿಧಿಯವರ ಅನ್ಯಾರೋಗ್ಯ ಹಿನ್ನೆಲೆಯಲ್ಲಿ ಖುದ್ದು ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಟ್ವಿಟ್ಟರ್ ಮೂಲಕ, ಕರುಣಾನಿಧಿಯವರ ಪುತ್ರ ಸ್ಟಾಲಿನ್ ಹಾಗೂ ಮಗಳು ಕನಿಮೋಲಿಯವರೇ, ಕರುಣಾನಿಧಿಯವರ ಆರೋಗ್ಯದಲ್ಲಿ ಏರುಪೇರಾಗಿರುವುದು ನನ್ನ ಗಮನಕ್ಕೆ ಬಂದಿದ್ದು, ಯಾವುದೇ ನೆರವು ಬೇಕಾಗಿದ್ದಲ್ಲಿ ತಕ್ಷಣ ತಿಳಿಸಿ ಎಂದಿದ್ದಾರೆ. ಅವರು ಬೇಗ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

    ಕರುಣಾನಿಧಿಯವರ ಆರೋಗ್ಯ ಏರುಪೇರಾದ ಹಿನ್ನೆಲೆಯಲ್ಲಿ ಅವರ ನಿವಾಸಕ್ಕೆ ಗಣ್ಯರ ದಂಡೇ ಹರಿದುಬರುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ವ್ಯಾಪಕ ಭದ್ರತೆಯನ್ನು ಕೈಗೊಂಡಿದ್ದಾರೆ.

  • ಡಿಎಂಕೆ ಮುಖ್ಯಸ್ಥ ಕರುಣಾನಿಧಿ ಸ್ಥಿತಿ ಗಂಭೀರ!

    ಡಿಎಂಕೆ ಮುಖ್ಯಸ್ಥ ಕರುಣಾನಿಧಿ ಸ್ಥಿತಿ ಗಂಭೀರ!

    ಚೆನ್ನೈ: ಡಿಎಂಕೆ ಮುಖಸ್ಥ ಎಂ ಕರುಣಾನಿಧಿ ಆರೋಗ್ಯ ಬಿಗಡಾಯಿಸಿದ್ದು, ಚೆನ್ನೈನ ಅವರ ಮನೆಯನ್ನೇ ಆಸ್ಪತ್ರೆ ಮಾಡಿಕೊಂಡು ಕಾವೇರಿ ಆಸ್ಪತ್ರೆ ವೈದ್ಯರು ಚಿಕಿತ್ಸೆ ನೀಡ್ತಿದ್ದಾರೆ.

    94 ವರ್ಷದ ವಯೋವೃದ್ಧ ರಾಜಕಾರಣಿ ಕರುಣಾನಿಧಿ ಅವರಿಗೆ ವಯೋಸಹಜ ಕಾರಣಗಳಿಂದಾಗಿ ಆರೋಗ್ಯ ಕ್ಷೀಣಿಸಿದ್ದು, ಮೂತ್ರನಾಳ ಸೋಕಿನ ಕಾರಣ ಜ್ವರ ಬಂದಿದೆ. ಅವರಿಗೆ ಅಗತ್ಯವಿರುವ ಚಿಕಿತ್ಸೆಯನ್ನು ತಜ್ಞ ವೈದ್ಯರು ನೀಡ್ತಿದ್ದಾರೆ.

    ವಿಷಯ ತಿಳಿದ ಡಿಎಂಕೆ ಕಾರ್ಯಕರ್ತರು, ನಾಯಕರು ಭಾರೀ ಸಂಖ್ಯೆಯಲ್ಲಿ ಗೋಪಾಲಪುರದಲ್ಲಿರುವ ಕರುಣಾನಿಧಿ ನಿವಾಸದ ಮುಂದೆ ಸೇರಿದ್ದಾರೆ. ಕಮಲ್‍ಹಸನ್, ಎಐಎಡಿಎಂಕೆ ನಾಯಕರು ಎಂಕೆ ಸ್ಟಾಲಿನ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಆದ್ರೆ ಕರುಣಾನಿಧಿ ಭೇಟಿಗೆ ಯಾರಿಗೂ ಅವಕಾಶ ನೀಡಿಲ್ಲ.