Tag: health

  • ತಬಲಾ ಮಾಂತ್ರಿಕ ಜಾಕಿರ್ ಹುಸೇನ್‌ಗೆ ತೀವ್ರ ಅನಾರೋಗ್ಯ – ಐಸಿಯುನಲ್ಲಿ ಚಿಕಿತ್ಸೆ

    ತಬಲಾ ಮಾಂತ್ರಿಕ ಜಾಕಿರ್ ಹುಸೇನ್‌ಗೆ ತೀವ್ರ ಅನಾರೋಗ್ಯ – ಐಸಿಯುನಲ್ಲಿ ಚಿಕಿತ್ಸೆ

    ವಾಷಿಂಗ್ಟನ್‌: ತಬಲಾ ಮಾಂತ್ರಿಕ ಜಾಕೀರ್ ಹುಸೇನ್ (73) (Tabla maestro Zakir Hussain) ಅವರು ತೀವ್ರ ಹೃದಯ (Heart) ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದು, ಸ್ಯಾನ್ ಫ್ರಾನ್ಸಿಸ್ಕೋದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಐಸಿಯುವಿನಲ್ಲಿ (ICU) ಚಿಕಿತ್ಸೆ ನೀಡಲಾಗುತ್ತಿದೆ.

    ಖ್ಯಾತ ತಬಲ ವಾದಕ ಜಾಕೀರ್‌ ಹುಸೇನ್‌ ಅವರಿಗೆ ರಕ್ತದೊತ್ತಡ ಸಮಸ್ಯೆ ಇತ್ತು. ಕಳೆದ ವಾರದಿಂದ ಹೃದಯ ಸಂಬಂಧಿ ಸಮಸ್ಯೆಯಿಂದ ಅವರನ್ನು ಸ್ಯಾನ್ ಫ್ರಾನ್ಸಿಸ್ಕೋದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರ ಸ್ನೇಹಿತ ರಾಕೇಶ್ ಚೌರಾಸಿಯಾ ತಿಳಿಸಿದ್ದಾರೆ.

    ಅವರು ಅಸ್ವಸ್ಥರಾಗಿದ್ದಾರೆ ಮತ್ತು ಇದೀಗ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ. ನಾವೆಲ್ಲರೂ ಪರಿಸ್ಥಿತಿಯ ಬಗ್ಗೆ ಚಿಂತಿತರಾಗಿದ್ದೇವೆ ಎಂದು ಚೌರಾಸಿಯಾ ಮಾಧ್ಯಮಗಳ ಮುಂದೆ ಭಾವುಕರಾಗಿದ್ದಾರೆ.

  • ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಆಸ್ಪತ್ರೆಗೆ ದಾಖಲು

    ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಆಸ್ಪತ್ರೆಗೆ ದಾಖಲು

    ನವದೆಹಲಿ: ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ (LK Advani) ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.

    97 ವರ್ಷದ ಎಲ್‌ಕೆ ಅಡ್ವಾಣಿ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ದಿಢೀರ್ ಆರೋಗ್ಯದಲ್ಲಿ ಏರುಪೇರು ಉಂಟಾದ ಪರಿಣಾಮ ದೆಹಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಹೆಂಡತಿ, ಮಾವನ ಕಿರುಕುಳಕ್ಕೆ ಹೆಡ್‌ಕಾನ್‌ಸ್ಟೇಬಲ್ ಬಲಿ – ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

    ಸದ್ಯ ಎಲ್‌ಕೆ ಅಡ್ವಾಣಿ ಅವರನ್ನು ತಜ್ಞ ವೈದ್ಯರ ನಿಗಾದಲ್ಲಿ ಇರಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: Ramanagara | ಸ್ನೇಹಿತನನ್ನು ಕೊಲೆಗೈದ ಪ್ರಕರಣ – ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ, 50,000 ರೂ. ದಂಡ

  • ಅಪಘಾತದಲ್ಲಿ ಪುತ್ರನ ಮೆದುಳು ನಿಷ್ಕ್ರಿಯ – ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು

    ಅಪಘಾತದಲ್ಲಿ ಪುತ್ರನ ಮೆದುಳು ನಿಷ್ಕ್ರಿಯ – ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು

    ಹಾಸನ: ಅಪಘಾತದಲ್ಲಿ (Accident) ಮೆದುಳು ನಿಷ್ಕ್ರಿಯಗೊಂಡು ಪ್ರಜ್ಞಾಹೀನ ಸ್ಥಿತಿ ತಲುಪಿದ್ದ ಪುತ್ರನ ಅಂಗಾಂಗ ದಾನ  (Organ Donation) ಮಾಡುವ ಮೂಲಕ ಮಗನ ಸಾವಿನಲ್ಲೂ ಪೋಷಕರು ಸಾರ್ಥಕತೆ ಮೆರೆದಿರುವುದು ಚನ್ನರಾಯಪಟ್ಟಣ ತಾಲ್ಲೂಕಿನ ಮಾಚಭೂವನಹಳ್ಳಿಯಲ್ಲಿ ನಡೆದಿದೆ.

    ಗ್ರಾಮದ ಸುರೇಶ್ ಹಾಗೂ ಶಾಂತಲಾ ದಂಪತಿ ಪುತ್ರ ಸುಹಾಸ್‌ಗೌಡ‌ ಬೆಂಗಳೂರಿನಲ್ಲಿ ಬ್ಯಾಟರಿ ವರ್ಕ್ ಶಾಪ್‌ನಲ್ಲಿ ಕೆಲಸ ಮಾಡಿಕೊಂಡಿದ್ದ. ಡಿ.9ರ ಸಂಜೆ ಬೈಕ್‌ನಲ್ಲಿ ಸುಹಾಸ್‌ಗೌಡ ಹಾಗೂ ಸ್ನೇಹಿತ ಹರ್ಷ ಬೆಂಗಳೂರಿನಿಂದ ಮಹದೇಶ್ವರ ಬೆಟ್ಟಕ್ಕೆ ತೆರಳುತಿದ್ದ ವೇಳೆ ಟಿ.ನರಸೀಪುರ ಬಳಿಯ ತಿರುವಿನಲ್ಲಿ ಬೈಕ್‌ಗೆ ಕಾರು ಡಿಕ್ಕಿಯಾಗಿ ಸುಹಾಸ್‌ಗೌಡ ತೀವ್ರವಾಗಿ ಗಾಯಗೊಂಡಿದ್ದ.

    ಮೂರು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಹಾಸ್‌ಗೌಡ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ. ವಯಸ್ಸಿಗೆ ಬಂದ ಮಗನನ್ನು ಕಳೆದುಕೊಂಡ ನೋವಿನಲ್ಲೂ ಮಗನ ಅಂಗಾಂಗ ದಾನ ಮಾಡಿ ಪೋಷಕರು ಸಾರ್ಥಕತೆ ಮೆರೆದಿದ್ದಾರೆ.

  • ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣ – ಜಿಲ್ಲಾ ಔಷಧ ಉಗ್ರಾಣದ ಮೇಲೆ `ಲೋಕಾ’ ದಾಳಿ

    ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣ – ಜಿಲ್ಲಾ ಔಷಧ ಉಗ್ರಾಣದ ಮೇಲೆ `ಲೋಕಾ’ ದಾಳಿ

    ಬೆಳಗಾವಿ: ಬಳ್ಳಾರಿಯಲ್ಲಿ (Ballari) ಬಾಣಂತಿಯರ ಸಾವಿಗೆ ಆರ್‌ಎಲ್‍ಎಸ್ ಐವಿ ಗ್ಲುಕೋಸ್ ಕಾರಣ ಎನ್ನಲಾದ ವಿಚಾರಕ್ಕೆ ಸಂಬಂಧಿಸಿದಂತೆ ಬಿಮ್ಸ್ ಆಸ್ಪತ್ರೆಯ (BIMS Hospital)  ಆವರಣದಲ್ಲಿರುವ ಜಿಲ್ಲಾ ಔಷಧ ಉಗ್ರಾಣದ ಮೇಲೆ ಲೋಕಾಯುಕ್ತ (Lokayukta) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

    ಲೋಕಾಯುಕ್ತ ದಾಳಿ ವೇಳೆ ಹತ್ತಾರು ಬಾಕ್ಸ್‌ಗಳಲ್ಲಿ ಆರ್‌ಎಲ್‍ಎಸ್ ಐವಿ ಗ್ಲುಕೋಸ್ ಪತ್ತೆಯಾಗಿದೆ. ಪಿಬಿಪಿ ಸಂಸ್ಥೆ ಸರಬರಾಜು ಮಾಡಿರುವ ಐವಿ ಗ್ಲುಕೋಸ್ ಬಾಕ್ಸ್‌ಗಳು ಇದಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ಶೇಖರಿಸಿ ಇಟ್ಟಿದ್ದ ಬಾಕ್ಸ್‌ಗಳನ್ನು ಕಂಡು ಅಧಿಕಾರಿಗಳು ಶಾಕ್ ಆಗಿದ್ದಾರೆ.

    ಏಪ್ರಿಲ್ ತಿಂಗಳಿಂದ ಬೆಳಗಾವಿ ಜಿಲ್ಲೆಯಾದ್ಯಂತ ಆರ್‍ಎಲ್‍ಎಸ್ ಐವಿ ಗ್ಲುಕೋಸ್ ಸರಬರಾಜಾಗಿದೆ. ಒಂದು ಗಂಟೆಗೂ ಹೆಚ್ಚಿನ ಸಮಯದಿಂದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಉಗ್ರಾಣದ ಅಧಿಕಾರಿಗಳಿಂದ ಎಲ್ಲೆಲ್ಲಿ ಐವಿ ಗ್ಲುಕೋಸ್ ಪೂರೈಕೆಯಾಗಿದೆ ಎಂಬ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ.

    ಈ ವೇಳೆ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಪೂರೈಕೆ ಮಾಡಿರುವ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ.

    ಬೆಳಗಾವಿ ಲೋಕಾಯುಕ್ತ ಎಸ್ಪಿ ಹನುಮಂತರಾಯ ನೇತೃತ್ವದಲ್ಲಿ ದಾಳಿ ನಡೆದಿದ್ದು, 8 ಜನ ಅಧಿಕಾರಿಗಳಿಂದ ಪರಿಶೀಲನೆ ಮುಂದುವರೆದಿದೆ.

  • ನವಜಾತ ಶಿಶುಗಳ ಮರಣ ಪ್ರಮಾಣ ಏರಿಕೆ – ಕ್ರಮಕ್ಕೆ ಜಿಲ್ಲಾಧಿಕಾರಿಗಳಿಗೆ ಆರೋಗ್ಯ ಸಚಿವರ ಖಡಕ್ ಸೂಚನೆ

    ನವಜಾತ ಶಿಶುಗಳ ಮರಣ ಪ್ರಮಾಣ ಏರಿಕೆ – ಕ್ರಮಕ್ಕೆ ಜಿಲ್ಲಾಧಿಕಾರಿಗಳಿಗೆ ಆರೋಗ್ಯ ಸಚಿವರ ಖಡಕ್ ಸೂಚನೆ

    ದಾವಣಗೆರೆ: ಮಧ್ಯಕರ್ನಾಟಕದ ಜಿಲ್ಲಾಸ್ಪತ್ರೆಗಳಲ್ಲಿ ನವಜಾತ ಶಿಶುಗಳ ಮರಣ ಪ್ರಮಾಣ ಏರಿಕೆ ಕಂಡಿದ್ದು, ಜಿಲ್ಲಾಧಿಕಾರಿಗಳಿಗೆ ಹಾಗೂ ಡಿಹೆಚ್‍ಓಗಳಿಗೆ ಆಸ್ಪತ್ರೆಗಳ ಮೇಲೆ ನಿಗಾವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಖಡಕ್ ಸೂಚನೆ ನೀಡಿದ್ದಾರೆ.

    ದಾವಣಗೆರೆ (Davanagere) ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳ ಜೊತೆ ಅವರು ಸಭೆ ನಡೆಸಿದ್ದಾರೆ. ಈ ವೇಳೆ ನವಜಾತ ಶಿಶುಗಳ ಮರಣ ಹಾಗೂ ಬಾಣಂತಿಯರ ಸಾವಿನ ಬಗ್ಗೆ ತೀವ್ರ ನಿಗವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ಕಳೆದ ಏಳು ತಿಂಗಳಲ್ಲಿ 135 ನವಜಾತು ಶಿಶುಗಳು ಹಾಗೂ 28 ತಾಯಂದಿರ ಸಾವಾಗಿದೆ. ಖಾಸಗಿ ಆಸ್ಪತ್ರೆಗಳಿಗಿಂತ, ಸರ್ಕಾರಿ ಜಿಲ್ಲಾಸ್ಪತ್ರೆಗಳಲ್ಲೇ ಮರಣ ಪ್ರಮಾಣ ಏರಿಕೆಯಾಗಿದೆ. ಪ್ರತಿ ತಿಂಗಳು 600 ರಿಂದ 700 ಹೆರಿಗೆ ಆಗುತ್ತಿರುವ ಜಿಲ್ಲಾಸ್ಪತ್ರೆಯಲ್ಲಿ ನವಜಾತ ಶಿಶುಗಳ ಸಾವಾಗುತ್ತಿದೆ. ಇನ್ನೂ ಕಡೇ ಕ್ಷಣದಲ್ಲಿ ತೀವ್ರ ತುರ್ತು ಸಂದರ್ಭಗಳಲ್ಲಿ ಬರುವುದರಿಂದ ಸಾವಿನ ಸಂಖ್ಯೆ ಹೆಚ್ಚಳವಾಗುತ್ತಿದೆ.

    ಬಹುತೇಕ ಬಡವರೇ ಆಗಮಿಸುವ ಜಿಲ್ಲಾಸ್ಪತ್ರೆಗಳಲ್ಲಿ ನವಜಾತು ಶಿಶುಗಳ ಸಾವಿನ ಸಂಖ್ಯೆ ಏರಿಕೆಯಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಸಿಜೇರಿಯನ್ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದೆ. ಇನ್ನೂ ದಾವಣಗೆರೆ ನಗರದ ಖಾಸಗಿ ಆಸ್ಪತ್ರೆಗಳಲ್ಲಿ 72%ನಷ್ಟು ಸಿಜೇರಿಯನ್ ನಡೆಯುತ್ತಿದೆ.

    ಈ ಎಲ್ಲಾ ವಿಚಾರವಾಗಿ, ಮಧ್ಯ ಕರ್ನಾಟಕದ ಹಾವೇರಿ, ಚಿತ್ರದುರ್ಗ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಚರ್ಚೆ ನಡೆಸಿದ್ದಾರೆ. ಅಲ್ಲದೇ ಪ್ರಾಥಮಿಕ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ತೀವ್ರ ನಿಗಾವಹಿಸುವಂತೆ ಡಿಹೆಚ್‍ಓಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

  • ಗುಜರಾತ್‌ | ನಕಲಿ ವೈದ್ಯರಿಂದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ – ಆಹ್ವಾನ ಪತ್ರಿಕೆಯಲ್ಲಿ ಪೊಲೀಸ್ ಕಮಿಷನರ್‌ ಹೆಸರು!

    ಗುಜರಾತ್‌ | ನಕಲಿ ವೈದ್ಯರಿಂದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ – ಆಹ್ವಾನ ಪತ್ರಿಕೆಯಲ್ಲಿ ಪೊಲೀಸ್ ಕಮಿಷನರ್‌ ಹೆಸರು!

    ಸೂರತ್: ಗುಜರಾತಿನ (Gujarat) ಸೂರತ್‌ನಲ್ಲಿ ನಕಲಿ ವೈದ್ಯರು (Fake Doctor) ಕ್ಲಿನಿಕ್‌ಗಳನ್ನು ನಡೆಸುವುದಕ್ಕಿಂತ ಒಂದು ಹೆಜ್ಜೆ ಮುಂದೆ ಹೋಗಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಿ ಉದ್ಘಾಟಿಸಿರುವುದು ವರದಿಯಾಗಿದೆ.

    ನಕಲಿ ವೈದ್ಯರ ಗುಂಪು ಆಸ್ಪತ್ರೆಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರದಲ್ಲಿ ಉನ್ನತ ಆಡಳಿತ ಮತ್ತು ಪೊಲೀಸ್ ಅಧಿಕಾರಿಗಳೊಂದಿಗೆ ಮಾತಾಡದೆ ಅವರ ಹೆಸರನ್ನು ಮುದ್ರಿಸಿದೆ. ಆಮಂತ್ರಣ ಪತ್ರದಲ್ಲಿ ಆಯುರ್ವೇದ ವೈದ್ಯಕೀಯ ಪದವಿ ಹೊಂದಿರುವ ವೈದ್ಯ ಎಂದು ಪರಿಚಯಿಸಲಾದ ಬಿ.ಆರ್ ಶುಕ್ಲಾ ವಿರುದ್ಧ ಗುಜರಾತ್ ವೈದ್ಯಕೀಯ ಕಾಯ್ದೆಯಡಿ ಪ್ರಕರಣವಿದೆ. ಎಲೆಕ್ಟ್ರೋ-ಹೋಮಿಯೋಪತಿಯಲ್ಲಿ ಪದವಿ ಪಡೆದಿರುವುದಾಗಿ ಹೇಳಿಕೊಂಡಿರುವ ಮತ್ತೊಬ್ಬ ಸಹ-ಸಂಸ್ಥಾಪಕ ಆರ್‌.ಕೆ ದುಬೆ ವಿರುದ್ಧ ಸಹ ಗುಜರಾತ್ ವೈದ್ಯಕೀಯ ಕಾಯ್ದೆಯಡಿ ಪ್ರಕರಣ ಎದುರಿಸುತ್ತಿದ್ದಾನೆ. ಇವರಿಬ್ಬರು ನಕಲಿ ಪದವಿಗಳನ್ನು ಹೊಂದಿದ್ದಾರೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

    ಮತ್ತೊಬ್ಬ ಸಹ-ಸಂಸ್ಥಾಪಕ ಜಿ.ಪಿ ಮಿಶ್ರಾ ವಿರುದ್ಧ ಮೂರು ಪ್ರಕರಣಗಳಿವೆ. ಅವರ ಪದವಿಯನ್ನು ಇನ್ನೂ ಪರಿಶೀಲಿಸಬೇಕಾಗಿದೆ. ಇತರ ಇಬ್ಬರು ಸಹ-ಸಂಸ್ಥಾಪಕರ ಪದವಿಗಳ ಬಗ್ಗೆಯೂ ಸಂಶಯವಿದೆ. ಈ ಬಗ್ಗೆ ಪೊಲೀಸರು ಪರಿಶೀಲಿಸುತ್ತಿದ್ದಾರೆ. ಆಸ್ಪತ್ರೆಯ ಉದ್ಘಾಟನೆಯ ಒಂದು ದಿನದ ನಂತರ ಅದನ್ನು ಮುಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಸೂರತ್ ಮುನ್ಸಿಪಲ್ ಕಮಿಷನರ್ ಶಾಲಿನಿ ಅಗರ್ವಾಲ್, ಪೊಲೀಸ್ ಕಮಿಷನರ್ ಅನುಪಮ್ ಸಿಂಗ್ ಗಹ್ಲೌತ್ ಮತ್ತು ಜಂಟಿ ಪೊಲೀಸ್ ಕಮಿಷನರ್ ರಾಘವೇಂದ್ರ ವತ್ಸಾ ಸೇರಿದಂತೆ ಉನ್ನತ ಅಧಿಕಾರಿಗಳ ಹೆಸರುಗಳು ಉದ್ಘಾಟನೆಯ ಆಹ್ವಾನ ಪತ್ರಿಕೆಯಲ್ಲಿತ್ತು. ಅಂತಹ ಯಾವುದೇ ಆಹ್ವಾನದ ಬಗ್ಗೆ ತಮಗೆ ತಿಳಿದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರ್ಯಾರೂ ಕಾರ್ಯಕ್ರಮಕ್ಕೆ ಬಂದಿರಲಿಲ್ಲ.

    ಆಸ್ಪತ್ರೆ ಆವರಣವನ್ನು ಸೀಲ್ ಮಾಡಲಾಗಿದೆ. ತನಿಖೆ ಬಳಿಕ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

  • ಆರೋಗ್ಯವಾಗಿದ್ದೇನೆ, ಕಠಿಣ ವ್ಯಾಯಾಮದಲ್ಲಿ ತೊಡಗಿರೋದ್ರಿಂದ ದೈಹಿಕ ಬದಲಾವಣೆ: ಸುನಿತಾ ವಿಲಿಯಮ್ಸ್ ಸ್ಪಷ್ಟನೆ

    ಆರೋಗ್ಯವಾಗಿದ್ದೇನೆ, ಕಠಿಣ ವ್ಯಾಯಾಮದಲ್ಲಿ ತೊಡಗಿರೋದ್ರಿಂದ ದೈಹಿಕ ಬದಲಾವಣೆ: ಸುನಿತಾ ವಿಲಿಯಮ್ಸ್ ಸ್ಪಷ್ಟನೆ

    ನವದೆಹಲಿ: ಬಾಹ್ಯಾಕಾಶಕ್ಕೆ ತೆರಳಿರುವ ನಾಸಾ ಗಗನಯಾತ್ರಿ ಸುನಿತಾ ವಿಲಿಯಮ್ಸ್ (Sunita Williams) ಅವರ ಆರೋಗ್ಯ (Health) ಹದಗೆಟ್ಟಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣ, ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಬೆನ್ನಲ್ಲೇ ಸ್ವತಃ ಸುನಿತಾ ವಿಲಿಯಮ್ಸ್ ಈ ವದಂತಿಗಳಿಗೆ ತೆರೆ ಎಳೆದಿದ್ದಾರೆ.

    ಇತ್ತೀಚಿನ ಫೋಟೋಗಳ ಆಧಾರದ ಮೇಲೆ ಸುನೀತಾ ವಿಲಿಯಮ್ಸ್ ಅವರ ಆರೋಗ್ಯ ಕ್ಷೀಣಿಸುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಅದೇ ರೀತಿಯಲ್ಲಿ ಅವರ ಫೋಟೋ ಕೂಡ ಬಿತ್ತರವಾಗಿದ್ದವು. ಈ ಬಗ್ಗೆ ವೀಡಿಯೋ ಸಂದರ್ಶನವೊಂದಕ್ಕೆ ಪ್ರತಿಕ್ರಿಯಿಸಿ ಬಾಹ್ಯಾಕಾಶ ನಿಲ್ದಾಣದಿಂದಲೇ (ISS) ಮಾತನಾಡಿರುವ ಅವರು, ತಮ್ಮ ಆರೋಗ್ಯ ಉತ್ತಮ ಸ್ಥಿತಿಯಲ್ಲಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಪರಿಹಾರದ ಹಣ ನೀಡಲಿಲ್ಲ ಅಂತ ಎಸಿ ಕೂತಿದ್ದ ಚೇರನ್ನೇ ಹೊತ್ತೊಯ್ದ ಸಂತ್ರಸ್ತರು!

    ನಾನು ಬಾಹ್ಯಾಕಾಶ ನಿಲ್ದಾಣಕ್ಕೆ ಬರುವಾಗ ಇದ್ದ ತೂಕವನ್ನೇ ಈಗಲೂ ಹೊಂದಿದ್ದೇನೆ. ಸ್ನಾಯು ಮತ್ತು ಮೂಳೆ ಸಾಂದ್ರತೆಯ ಮೇಲೆ ಮೈಕ್ರೊಗ್ರಾವಿಟಿಯ ಪರಿಣಾಮಗಳನ್ನು ಎದುರಿಸಲು ಗಗನಯಾತ್ರಿಗಳು ಅನುಸರಿಸುವ ಕಠಿಣ ವ್ಯಾಯಾಮದ ಕಟ್ಟುಪಾಡುಗಳಿಂದಾಗಿ ದೈಹಿಕ ರೂಪ ಬದಲಾಗಿದೆ. ಈ ಬಗ್ಗೆ ಚಿಂತೆ ಪಡುವ ಅಗತ್ಯವಿಲ್ಲ ಎಂದು ಸುನಿತಾ ಹೇಳಿದ್ದಾರೆ. ಇದನ್ನೂ ಓದಿ: ಅಮೆರಿಕದಲ್ಲಿ 10 ಶತಕೋಟಿ ಡಾಲರ್‌ ಹೂಡಿಕೆಗೆ ಬದ್ಧ, 15,000 ಉದ್ಯೋಗ ಸೃಷ್ಟಿ ಗುರಿ: ಅದಾನಿ

    ಇದೇ ವೇಳೆ ತಮ್ಮ ದಿನನಿತ್ಯದ ವ್ಯಾಯಾಮದ ದಿನಚರಿಯನ್ನು ಕೂಡ ಅವರು ವಿವರಿಸಿದರು. ಬಾಹ್ಯಾಕಾಶ ನಿಲ್ದಾಣದಲ್ಲಿ ಬೈಕ್ ಸವಾರಿ, ಟ್ರೆಡ್‌ಮಿಲ್‌ನಲ್ಲಿ ಓಡುವುದು ಹಾಗೂ ವೇಟ್‌ಲಿಫ್ಟಿಂಗ್ ಮಾಡುತ್ತೇನೆ. ಈ ಚಟುವಟಿಕೆಗಳಿಂದ ನನ್ನ ದೇಹದಲ್ಲಿ ಗಮನಾರ್ಹ ಬದಲಾವಣೆಯಾಗಿದೆ. ನನ್ನ ತೊಡೆಗಳು ಸ್ವಲ್ಪ ದೊಡ್ಡದಾಗಿದೆ, ನನ್ನ ಪೃಷ್ಠವು ಸ್ವಲ್ಪ ದೊಡ್ಡದಾಗಿದೆ. ನಿರಂತರವಾಗಿ ವೇಟ್‌ಲಿಫ್ಟಿಂಗ್ ಮಾಡುತ್ತಿದ್ದ ಕಾರಣಕ್ಕೆ ಈ ಬದಲಾವಣೆ ಆಗಿದೆ ಎಂದಿದ್ದಾರೆ. ಇದನ್ನೂ ಓದಿ: ಉದ್ಧವ್ ಠಾಕ್ರೆ ಬ್ಯಾಗ್ ಗದ್ದಲದ ನಡುವೆ ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ಹೆಲಿಕಾಪ್ಟರ್ ತಪಾಸಣೆ

  • ಗಗನಯಾತ್ರಿ ಸುನಿತಾ ವಿಲಿಯಮ್ಸ್​ ಆರೋಗ್ಯ ಕ್ಷೀಣ

    ಗಗನಯಾತ್ರಿ ಸುನಿತಾ ವಿಲಿಯಮ್ಸ್​ ಆರೋಗ್ಯ ಕ್ಷೀಣ

    ವಾಷಿಂಗ್ಟನ್‌: ಭಾರತ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್ (Astronaut Sunita Williams) ಆರೋಗ್ಯದ ಬಗ್ಗೆ ನಾನಾ ಅನುಮಾನಗಳು ಮೂಡುತ್ತಿವೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳುವ ಮೊದಲು ದಷ್ಟಪುಷ್ಟರಾಗಿದ್ದ ಸುನಿತಾ ವಿಲಿಯಮ್ಸ್ ಇದೀಗ ವಿಪರೀತ ಸಣ್ಣ ಆಗಿದ್ದಾರೆ.

    ಸಾಕಷ್ಟು ಸನ್ನದ್ಧತೆ ಇಲ್ಲದೇ, ಸುದೀರ್ಘ ಕಾಲ ಭಾರ ರಹಿತ ಸ್ಥಿತಿಯಲ್ಲಿರುವ ಕಾರಣ ಅವರ ಆರೋಗ್ಯ (Health) ಸ್ಥಿತಿ ಹದಗೆಟ್ಟಿದೆ ಎಂಬು ಸುದ್ದಿ ಹರಿದಾಡಿದೆ. ಈ ಸುದ್ದಿಯನ್ನು ನಾಸಾ (NASA) ಅಲ್ಲಗಳೆದಿದೆ. ಸುನಿತಾ ವಿಲಿಯಮ್ಸ್ ಆರೋಗ್ಯವಾಗಿಯೇ ಇದ್ದಾರೆ ಎಂದು ಸ್ಪಷ್ಟಪಡಿಸಿದೆ.  ಇದನ್ನೂ ಓದಿ: ದಿನಕ್ಕೆ ಒಂದಲ್ಲ.. 16 ಬಾರಿ ಆಗುತ್ತೆ ಸೂರ್ಯೋದಯ, ಸೂರ್ಯಾಸ್ತ – ಬಾಹ್ಯಾಕಾಶದಲ್ಲಿ ಸುನಿತಾ ವಿಲಿಯಮ್ಸ್‌ಗೆ ಆಗ್ತಿರೋ ಅನುಭವಗಳೇನು?

    ಜೂನ್ ತಿಂಗಳಲ್ಲಿ 8 ದಿನಗಳ ಬಾಹ್ಯಾಕಾಶ ಯಾತ್ರೆ ತೆರಳಿದ್ದ ಇಬ್ಬರು ಗಗನಯಾತ್ರಿಗಳು ಬೋಯಿಂಗ್ ಸ್ಟಾರ್‌ಲೈನರ್‌ ಬಹ್ಯಾಕಾಶ ನೌಕೆಯಲ್ಲಿನ ತಾಂತ್ರಿಕ ದೋಷದಿಂದಾಗಿ ಬಾಹ್ಯಾಕಾಶದಲ್ಲೇ ಉಳಿದಿದ್ದಾರೆ.

    ಸುನೀತಾ ವಿಲಿಯಮ್ಸ್ (Sunita Williams) ಮತ್ತು ಬುಚ್ ವಿಲ್ಮೋರ್ ಅವರನ್ನು ಮರಳಿ ಕರೆ ತರುವ ನಿಟ್ಟಿನಲ್ಲಿ ಹಾರಿಸಲಾಗಿದ್ದ ಸ್ಪೇಸ್‌ ಎಕ್ಸ್‌ ಕ್ರ್ಯೂ9 ಮಿಷನ್ (Crew9) ಯಶಸ್ವಿಯಾಗಿ ಸೆಪ್ಟೆಂಬರ್‌ 30 ರಂದು ಅಂತರಿಕ್ಷ ನಿಲ್ದಾಣದಲ್ಲಿ ಲ್ಯಾಂಡ್‌ ಆಗಿದೆ. ಕ್ರ್ಯೂ 9 ಮಿಷನ್‌ ಮೂಲಕ ಸುಮಾರು 200 ವೈಜ್ಞಾನಿಕ ಪ್ರಯೋಗಗಳನ್ನು ಗಗನಯಾನಿಗಳು ನಡೆಸಲಿದ್ದಾರೆ.

    ಸ್ಟಾರ್‌ಲೈನರ್ ಸಂಸ್ಥೆ ಕಳಿಸಿದ್ದ ಅಂತರಿಕ್ಷ ನೌಕೆಯಲ್ಲಿ ತಾಂತ್ರಿಕ ಲೋಪ ಕಂಡು ಬಂದ ಕಾರಣ ಸುನಿತಾ ವಿಲಿಯಮ್ಸ್ ಭೂಮಿಗೆ ವಾಪಸ್ ಆಗಲು ಸಾಧ್ಯವಾಗದೇ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿಯೇ ಉಳಿದಿದ್ದು ಫೆಬ್ರವರಿಯಲ್ಲಿ ಭೂಮಿಗೆ ಮರಳಲಿದ್ದಾರೆ.

     

  • ಬೆಂಗ್ಳೂರಿನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಶವಗಳಿಗೂ ರಕ್ಷಣೆ ಇಲ್ಲ – ಕಣ್ಣು, ಮೂಗು ಇಲಿ ಪಾಲು!

    ಬೆಂಗ್ಳೂರಿನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಶವಗಳಿಗೂ ರಕ್ಷಣೆ ಇಲ್ಲ – ಕಣ್ಣು, ಮೂಗು ಇಲಿ ಪಾಲು!

    ಬೆಂಗಳೂರು: ನಗರದ (Bengaluru) ಪ್ರತಿಷ್ಠಿತ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಿದ್ದ ಮೃತದೇಹದ ಭಾಗಗಳನ್ನು ಇಲಿಗಳು ಕಚ್ಚಿ ತಿಂದಿರುವ ಘಟನೆ ನಡೆದಿದೆ.

    ಕುಟುಂಬದ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂಬ ನೋವಿನ ಜೊತೆಗೆ ಈಗ ಮುಖವನ್ನು ಇಲಿಗಳು ತಿಂದು ವಿರೂಪವಾಗಿ ನೋಡುವ ನೋವು ಕುಟುಂಬದ ಸದಸ್ಯರಿಗೆ ಎದುರಾಗಿದೆ. ಸೋಮವಾರ ಸಂಜೆ ಸಾವನ್ನಪ್ಪಿದ್ದ ವ್ಯಕ್ಯಿಯ ಮೃತದೇಹವನ್ನ ನಗರದ ಕೆಜಿ ಹಳ್ಳಿಯ ಅಂಬೇಡ್ಕರ್ ಮೆಡಿಕಲ್ ಕಾಲೇಜಿನ (Ambedkar Hospital) ಶವಾಗಾರದಲ್ಲಿ ಇಡಲಾಗಿತ್ತು. ಕೋಲ್ಡ್ ಸ್ಟೋರೆಜ್‍ನಲ್ಲಿ ಇಟ್ಟಿದ್ರೂ ಮೂಗು, ಕಣ್ಣಿನ ರೆಪ್ಪೆಯನ್ನು ಇಲಿಗಳು ತಿಂದಿವೆ.

    ನಗರದ ರಂಗಸ್ವಾಮಿ (37) ಹರ್ನಿಯಾ ಸಮಸ್ಯೆಯಿಂದ ಶೇಷಾದ್ರಿಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಗಾಗಿತ್ತು. ಆಪರೇಷನ್ ಸಂದರ್ಭದಲ್ಲಿ ಸಮಸ್ಯೆ ಆದ ಕಾರಣ ಕೆಜಿ ಹಳ್ಳಿಯ ಅಂಬೇಡ್ಕರ್ ಮೆಡಿಕಲ್ ಕಾಲೇಜಿಗೆ ಕಳುಹಿಸಲಾಗಿತ್ತು. ಅಲ್ಲಿಗೆ ಬರುವ ಹೊತ್ತಿಗೆ ಅವರ ಪ್ರಾಣ ಹೋದಂತೆ ಆಗಿತ್ತು. ಖಾಸಗಿ ಆಸ್ಪತ್ರೆಯಲ್ಲೇ ಏನೋ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಮೃತ ರಂಗಸ್ವಾಮಿಯ ಅಣ್ಣ ಆರೋಪಿಸಿದ್ದಾರೆ.

    ಬಳಿಕ ಅಂಬೆಡ್ಕರ್ ಮೆಡಿಕಲ್ ಕಾಲೇಜಿಗೆ ಅವರನ್ನು ದಾಖಲಿಸಲಾಗಿತ್ತು. ಕೆಲ ಹೊತ್ತಲೇ ಅವರು ಸಾವನ್ನಪ್ಪಿದ್ದಾರೆ. ಸಣ್ಣ ಶಸ್ತ್ರಚಿಕಿತ್ಸೆಯಲ್ಲೂ ನಿರ್ಲಕ್ಷ್ಯ ಮಾಡಿದ ವೈದ್ಯರ ವಿರುದ್ಧ ದೂರು ಕೊಡಲು ಶವಾಗಾರದಲ್ಲೇ ದೇಹ ಇರಿಸಲು ಕುಟುಂಬ ತೀರ್ಮಾನಿಸಿತ್ತು. ದೂರು ಕೊಟ್ಟು ಬರುವ ಹೊತ್ತಿಗೆ ಮುಖ ವಿಕಾರವಾಗಿತ್ತು. ಇಲಿಗಳು ಕಣ್ಣಿನ ರೆಪ್ಪೆ ಹಾಗೂ ಮೂಗನ್ನು ತಿಂದು ಹಾಕಿದ್ದವು. ಇದನ್ನು ಆಸ್ಪತ್ರೆಯವರು ಒಪ್ಪಿಕೊಂಡಿದ್ದಾರೆ. ಇವರ ವಿರುದ್ಧ ಕ್ರಮ ಆಗಬೇಕು, ನಮಗೆ ನ್ಯಾಯ ಬೇಕು ಎಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ.

  • ದೆಹಲಿಯಲ್ಲಿ ಕಲುಷಿತ ಗಾಳಿ – ಕುಟುಂಬದಲ್ಲೊಬ್ಬರಿಗೆ ಮಾಲಿನ್ಯ ಸಂಬಂಧಿತ ಕಾಯಿಲೆ

    ದೆಹಲಿಯಲ್ಲಿ ಕಲುಷಿತ ಗಾಳಿ – ಕುಟುಂಬದಲ್ಲೊಬ್ಬರಿಗೆ ಮಾಲಿನ್ಯ ಸಂಬಂಧಿತ ಕಾಯಿಲೆ

    ನವದೆಹಲಿ: ದೀಪಾವಳಿ (Deepavali) ಅವಧಿಯಲ್ಲಿ ದೆಹಲಿಯ (New Delhi) ಗಾಳಿಯ ಗುಣಮಟ್ಟ (Air Quality) ಹದಗೆಡುತ್ತಿದ್ದು, ಈ ನಡುವೆ ರಾಜಧಾನಿಯ 69% ಕುಟುಂಬಗಳ ಒಂದು ಅಥವಾ ಒಂದಕ್ಕಿಂತ ಹೆಚ್ಚಿನ ಸದಸ್ಯರು ಗಂಟಲು ನೋವು, ಕೆಮ್ಮು ಸೇರಿದಂತೆ ಮಾಲಿನ್ಯ ಸಂಬಂಧಿತ ಕಾಯಿಲೆಗಳಿಂದ ಬಳಲುತ್ತಿದ್ದಾರೆ ಎಂದು ಇತ್ತೀಚಿನ ಸಮೀಕ್ಷೆಯೊಂದು ಬಹಿರಂಗಪಡಿಸಿದೆ.

    ಡಿಜಿಟಲ್ ಪ್ಲಾಟ್‌ಫಾರ್ಮ್ ಆಗಿರುವ ಲೋಕಲ್ ಸರ್ಕಲ್ಸ್ ನಡೆಸಿದ ಸಮೀಕ್ಷೆಯು ರಾಜಧಾನಿ ದೆಹಲಿಯಾದ್ಯಂತ 21,000ಕ್ಕೂ ಹೆಚ್ಚು ನಿವಾಸಿಗಳಿಂದ ಪ್ರತಿಕ್ರಿಯೆಗಳನ್ನು ಸಂಗ್ರಹಿಸಿದೆ. ಇದರ ಆಧಾರದಲ್ಲಿ ದೆಹಲಿಯ ಜನಸಂಖ್ಯೆಯ ಮೇಲೆ ವಾಯು ಮಾಲಿನ್ಯದ ವ್ಯಾಪಕ ಪರಿಣಾಮಗಳನ್ನು ವರದಿಯು ಬಹಿರಂಗಪಡಿಸಿದೆ. ಹೆಚ್ಚುತ್ತಿರುವ ವಾಯುಮಾಲಿನ್ಯದಿಂದಾಗಿ 62% ಕುಟುಂಬಗಳ ಒಬ್ಬ ಅಥವಾ ಅದಕ್ಕಿಂತ ಹೆಚ್ಚಿನ ಸದಸ್ಯರು ಕಣ್ಣು ಉರಿಯನ್ನು ಅನುಭವಿಸುತ್ತಿದ್ದಾರೆ ಎಂದು ಅಧ್ಯಯನವು ಹೇಳಿದೆ. ಜೊತೆಗೆ 46% ಜನರು ಮೂಗು ಸೋರುವಿಕೆ ಸಮಸ್ಯೆ ಅನುಭವಿಸುತ್ತಿದ್ದಾರೆ ಎಂದು ಅದು ಬಹಿರಂಗಪಡಿಸಿದೆ. ಇದನ್ನೂ ಓದಿ: ಸಿದ್ದರಾಮಯ್ಯ ನಿಮ್ಮ ನಾಲಗೆ ಹದ್ದುಬಸ್ತಿನಲ್ಲಿಡಿ: ಜೋಶಿ ಕಿಡಿ

    ಸಮೀಕ್ಷೆಗೆ ಪ್ರತಿಕ್ರಿಯಿಸಿದವರಲ್ಲಿ 31%ನಷ್ಟು ಜನರು ಉಸಿರಾಟದ ತೊಂದರೆ ಅಥವಾ ಅಸ್ತಮಾ ಕಾಯಿಲೆಯಿಂದ ಬಳಲುತ್ತಿರುವ ಬಗ್ಗೆ ವರದಿ ಮಾಡಿದ್ದಾರೆ. ಜೊತೆಗೆ 31% ದಷ್ಟು ಜನರು ತಲೆನೋವು ಅನುಭವಿಸುತ್ತಿದ್ದಾರೆಂದು ತಿಳಿಸಿದ್ದಾರೆ. ಸುಮಾರು 23% ಜನರು ಆತಂಕ ಅಥವಾ ಏಕಾಗ್ರತೆಯ ತೊಂದರೆಯನ್ನು ವ್ಯಕ್ತಪಡಿಸಿದ್ದು, 15% ದಷ್ಟು ಜನರು ನಿದ್ರಾಹೀನತೆ ಬಗ್ಗೆ ಉಲ್ಲೇಖಿಸಿದ್ದಾರೆ. 31%ರಷ್ಟು ಜನರು ತಾವು ಅಥವಾ ಅವರ ಕುಟುಂಬ ಸದಸ್ಯರು ಮಾಲಿನ್ಯಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳನ್ನು ಎದುರಿಸುತ್ತಿಲ್ಲ ಎಂದು ಸೂಚಿಸಿದ್ದಾರೆ. ಹಲವರಿಗೆ ಈಗಾಗಲೇ ಕೆಮ್ಮು ಮತ್ತು ಶೀತವಿದೆ. ಕೆಲವರು ಈಗಾಗಲೇ ಆಸ್ತಮಾ, ಬ್ರಾಂಕೈಟಿಸ್, ಮತ್ತು ದೀರ್ಘಕಾಲದ ಪ್ರತಿರೋಧಕ ಶ್ವಾಸಕೋಶದ ಕಾಯಿಲೆಯಂತಹ ಉಸಿರಾಟದ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಇದನ್ನೂ ಓದಿ: ಗಾಂಜಾ ದಾಸ್ತಾನು ಇಟ್ಟುಕೊಂಡಿದ್ದ ಮನೆ ಮೇಲೆ ಪೊಲೀಸರ ದಾಳಿ – ಮೂವರ ಬಂಧನ