Tag: hearattack

  • ಕರ್ತವ್ಯ ನಿರತ ASI ಹೃದಯಾಘಾತಕ್ಕೆ ಬಲಿ

    ಕರ್ತವ್ಯ ನಿರತ ASI ಹೃದಯಾಘಾತಕ್ಕೆ ಬಲಿ

    ಬಳ್ಳಾರಿ: ರಾಜಸ್ಥಾನದ (Rajastan) ಜೋಧ್‌ಪುರಕ್ಕೆ ಕರ್ತವ್ಯ ನಿಮಿತ್ತ ತೆರಳಿದ್ದ ವಿಜಯನಗರ ಜಿಲ್ಲೆಯ ಹೊಸಪೇಟೆಯ ಗ್ರಾಮೀಣ ಠಾಣೆ ಎಎಸ್‌ಐ (ASI) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

    ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯ ಎಎಸ್‌ಐ ಹಾಲಪ್ಪ (56) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಆ.17ರಂದು ಕರ್ತವ್ಯದ ಮೇಲೆ ಹೊಸಪೇಟೆಯಿಂದ ರಾಜಸ್ಥಾನದ ಜೋಧ್‌ಪುರಕ್ಕೆ ತೆರಳಿದ್ದರು. ಇದನ್ನೂ ಓದಿ: ದೆಹಲಿ ಸಿಎಂಗೆ ಕಪಾಳಮೋಕ್ಷ – ತಿಹಾರ್‌ ಜೈಲಿನಲ್ಲಿದ್ದ ತನ್ನ ಸಂಬಂಧಿ ಬಿಡಿಸೋದಕ್ಕಾಗಿ ರೇಖಾ ಗುಪ್ತಾ ಭೇಟಿಗೆ ಬಂದಿದ್ದ ವ್ಯಕ್ತಿ

    ಹೊಸಪೇಟೆಯ ಗ್ರಾಮೀಣ ಠಾಣೆಯ ಎಎಸ್‌ಐ ಹಾಲಪ್ಪ ಅವರು ಸೇರಿದಂತೆ ಪೊಲೀಸ್ ಕಾನ್ಸ್ಟೇಬಲ್‌ ಹಾಗೂ ಹೆಡ್ ಕಾನ್ಸ್ಟೇಬಲ್‌ ತೆರಳಿದ್ದರು. ಕರ್ತವ್ಯದಲ್ಲಿದ್ದ ವೇಳೆಯೇ ಹಾಲಪ್ಪ ಅವರಿಗೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: Exclusive ಸುಜಾತ ಭಟ್‌ ತೋರಿಸಿದ ಫೋಟೋ ನನ್ನ ತಂಗಿಯದ್ದು: ಸಹೋದರ ವಿಜಯ್‌

    ಮೃತ ಎಎಸ್‌ಐ ಹಾಲಪ್ಪ ಅವರು ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಹಿರೇಹಡಗಲಿ ಗ್ರಾಮದವರಾಗಿದ್ದರು. ನಾಳೆ ಸ್ವಗ್ರಾಮ ಹಿರೇಹಡಗಲಿಯಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ.

  • ಹುಟ್ಟೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ BSF ಯೋಧನ ಅಂತ್ಯಕ್ರಿಯೆ

    ಹುಟ್ಟೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ BSF ಯೋಧನ ಅಂತ್ಯಕ್ರಿಯೆ

    ನೆಲಮಂಗಲ: ಭಾರತ ಮಾತೆಯ ಹೆಮ್ಮೆಯ ಪುತ್ರ ಬಿಎಸ್‍ಎಫ್ ಪಿಎಸ್‍ಐ ತೀವ್ರ ಹೃದಯಾಘಾತದಿಂದ ವೀರ ಮರಣವನ್ನ ಹೊಂದಿದ್ದಾರೆ.

    ಶ್ರೀನಿವಾಸಮೂರ್ತಿ (55) ಕೆಲಸದ ಸಮಯದಲ್ಲಿ ಎರಡು ದಿನದ ಹಿಂದೆ ತೀವ್ರ ಹೃದಯಾಘಾತದಿಂದ ವೀರ ಮರಣವನ್ನಪ್ಪಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ಗೋಪಾಲಪುರದ ನಿವಾಸಿಯಾಗಿರುವ ಇವರು ಪಶ್ಚಿಮ ಬಂಗಾಳದಲ್ಲಿ ಗಡಿಭಾಗದ ಭದ್ರತೆಯ ಪಿಎಸ್‍ಐ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಈ ಸಂದರ್ಭದಲ್ಲಿ ಹೃದಯಾಘಾತವಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ.

    ಮೃತರ ಪಾರ್ಥೀವ ಶರೀರ ನಿನ್ನೆ ರಾತ್ರಿ ಸ್ವ-ಗ್ರಾಮ ಗೋಪಾಲಪುರಕ್ಕೆ ಆಗಮಿಸಿದ್ದು, ಕುಟುಂಬಸ್ಥರು ಹಾಗೂ ಗ್ರಾಮದ ಜನರಿಗಾಗಿ ಕೆಲಕಾಲ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ನಂತರ ಅವರ ಜಮೀನಿನಲ್ಲಿ ಸೇನಾಪಡೆಯ ವತಿಯಿಂದ ಸಕಲ ಸರ್ಕಾರಿ ಗೌರವಗಳೊಂದಿಗೆ ರಾಷ್ಟ್ರ ಧ್ವಜವನ್ನ ಇಡಲಾಯಿತು. ಬಳಿಕ ಕುಟುಂಬಸ್ಥರಿಗೆ ಧ್ವಜವನ್ನು ಹಸ್ತಾಂತರಿಸಿ ಗೌರವದೊಂದಿಗೆ ವೀರ ಸೇನಾನಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಇದನ್ನೂ ಓದಿ: ಚಿಟ್ ಫಂಡ್ ಹೆಸರಿನಲ್ಲಿ 6 ಕೋಟಿಗೂ ಹೆಚ್ಚು ಹಣ ದೋಖಾ – ಆರೋಪಿ ಅರೆಸ್ಟ್

    ಈ ವೇಳೆ ಕುಟುಂಬಸ್ಥರು, ಸೇನಾ ಅಧಿಕಾರಿಗಳು ಹಾಗೂ ಮಾದನಾಯಕನಹಳ್ಳಿ ಪೊಲೀಸರು ಉಪಸ್ಥಿತರಿದ್ದರು.

  • ಮಗಳ ಕೊರಳಿಗೆ ತಾಳಿ ಬಿದ್ದ ಕೆಲವೇ ಕ್ಷಣಗಳಲ್ಲಿ ತಾಯಿಗೆ ಹೃದಯಾಘಾತ!

    ಮಗಳ ಕೊರಳಿಗೆ ತಾಳಿ ಬಿದ್ದ ಕೆಲವೇ ಕ್ಷಣಗಳಲ್ಲಿ ತಾಯಿಗೆ ಹೃದಯಾಘಾತ!

    ಮಂಗಳೂರು: ಮಗಳ ಕೊರಳಿಗೆ ತಾಳಿ ಬಿದ್ದ ಕೆಲವೇ ಕ್ಷಣಗಳಲ್ಲಿ ತಾಯಿ ಮೃತಪಟ್ಟ ಹೃದಯವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ನಡೆದಿದೆ.

    50 ವರ್ಷದ ವಾರಿಜಾ ಮೃತ ದುರ್ದೈವಿ. ಇವರು ಬೆಳ್ತಂಗಡಿಯ ಪಿಲಿಗೂಡು ನಿವಾಸಿ ತನಿಯಪ್ಪರ ಪತ್ನಿ.

    ಇಂದು ವಾರಿಜಾ ಅವರ ಮಗಳ ಮದುವೆ ಉಪ್ಪಿನಂಗಡಿಯ ಶ್ರೀ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಅದ್ಧೂರಿಯಾಗಿ ನಡೆಯುತ್ತಿತ್ತು. ಮಗಳ ಕೊರಳಿಗೆ ತಾಳಿ ಬೀಳುತ್ತಿದ್ದಂತೆಯೇ ವಾರಿಜಾ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಷ್ಟರಲ್ಲೇ ವಾರಿಜ ಮೃತಪಟ್ಟಿದ್ದಾರೆ.

    ವಾರಿಜಾ- ತನಿಯಪ್ಪ ದಂಪತಿಗೆ ಒಬ್ಬಳೇ ಮಗಳು ನವ್ಯ. ಈಕೆಗೆ ಮೊಗ್ರು ಗ್ರಾಮದ ಕಂಚಿನಡ್ಕ ನಿವಾಸಿ ಆನಂದ ಎಂಬವರ ಜೊತೆ  ಮದುವೆ ನಿಶ್ಚಯವಾಗಿತ್ತು. ಹೀಗಾಗಿ ಇಂದು ನವ್ಯಳ ವಿವಾಹದಲ್ಲಿ ತಾಯಿ ವಾರಿಜಾ ಸಂತೋಷದಿಂದಲೇ ಓಡಾಡುತ್ತಿದ್ದರು. ಅತಿಯಾದ ಸಂತೋಷ ಹಾಗೂ ಭಾವದ್ವೇಗದಿಂದಲೇ ವಾರಿಜಾ ಅವರಿಗೆ ಹೃದಯಾಘಾತವಾಗಿದೆ ಎಂದು ಹೇಳಲಾಗುತ್ತಿದೆ.

    ವಧುವಿನ ತಾಯಿಯ ಮರಣದಿಂದಾಗಿ ಇದೀಗ ಮದುವೆ ಮನೆಯಲ್ಲಿ ಸೂತಕದ ಛಾಯೆ ನಿರ್ಮಾಣವಾಗಿದೆ.