Tag: Heart disease

  • ಮಂಡ್ಯದ ಮಿಮ್ಸ್‌ನಲ್ಲಿ ಹೃದ್ರೋಗಿಗಳ ವಿಭಾಗವೇ ಇಲ್ಲ

    ಮಂಡ್ಯದ ಮಿಮ್ಸ್‌ನಲ್ಲಿ ಹೃದ್ರೋಗಿಗಳ ವಿಭಾಗವೇ ಇಲ್ಲ

    ಮಂಡ್ಯ: ರಾಜ್ಯದಲ್ಲಿ ಹೃದಯಾಘಾತ (Heart Attack) ಸುದ್ದಿ ಜನರಲ್ಲಿ ಆತಂಕ ಸೃಷ್ಟಿ ಮಾಡಿದೆ. ಇತ್ತ ಹೃದಯ ಸಂಬಂಧಿ ರೋಗಗಳಿಗೆ (Heart Disease) ಚಿಕಿತ್ಸೆ ನೀಡಬೇಡಬೇಕಾದ ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಹೃದಯ ವಿಭಾಗವೇ ಇಲ್ಲ. ಇಲ್ಲಿಗೆ ಬರುವ ಹೃದಯ ಸಂಬಂಧಿ ರೋಗಿಗಳು ಬೇರೆ ಜಿಲ್ಲೆಗೆ ಹೋಗಬೇಕಾದ ಸ್ಥಿತಿ ನಿರ್ಮಾಣವಾಗಿದೆ.

    ಸದ್ಯ ರಾಜ್ಯದಲ್ಲಿ ಹಾಸನ (Hassan) ಜಿಲ್ಲೆಯಲ್ಲಿ ಹೃದಯಾಘಾತದಿಂದ (Heart Attack) ಸರಣಿಯಾಗಿ ಸಾವನ್ನಪ್ಪುತ್ತಿದ್ದಾರೆ. ಹಾಸನ ಮಾತ್ರವಲ್ಲ ರಾಜ್ಯದ ಹಲವೆಡೆ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಈ ವಿಚಾರದಲ್ಲಿ ಸಕ್ಕರೆ ನಾಡು ಮಂಡ್ಯ ಜಿಲ್ಲೆ ಏನು ಹೊರತಾಗಿಲ್ಲ. ಸದ್ಯ ಮಂಡ್ಯ ಮಿಮ್ಸ್ ಆಸ್ಪತ್ರೆ (MIMS Hospital) ಒಂದರಲ್ಲಿಯೇ ಕಳೆದ 3 ತಿಂಗಳಲ್ಲಿ 10ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ ಹೃದಯಾಘಾತದಿಂದ ಮನೆಯಲ್ಲಿ ಹಾಗೂ ಬೇರೆ ಆಸ್ಪತ್ರೆಗಳಲ್ಲಿ ಸಾವನ್ನಪ್ಪಿರುವವರ ಸಂಖ್ಯೆ ಇನ್ನೂ ಹೆಚ್ಚಿದೆ. ಇದನ್ನೂ ಓದಿ: ಬೆಂಗಳೂರು ಸ್ಫೋಟದ ಸೂತ್ರಧಾರಿ ಅರೆಸ್ಟ್‌ – ಶಂಕಿತರ ಮನೆಯಲ್ಲಿ ಭಾರೀ ಪ್ರಮಾಣದ ದೇಶ ವಿನಾಶಕಾರಿ ವಸ್ತುಗಳು ಪತ್ತೆ

    ಸಾಂದರ್ಭಿಕ ಚಿತ್ರ

    ಮೊದಲೆಲ್ಲಾ ಮಿಮ್ಸ್ ಆಸ್ಪತ್ರೆಗೆ ಎದೆ ನೋವು ಎಂದು ಕಡಿಮೆ ಸಂಖ್ಯೆಯಲ್ಲಿ ಬರ್ತಾ ಇದ್ದರು. ಆದರೆ ಇದೀಗ ಗಣನೀಯ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಪ್ರಸ್ತುತ ದಿನಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಾಗುತ್ತಿವೆ, ಆದರೆ ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಹೃದಯದ ವಿಭಾಗವೇ ಇಲ್ಲ, ಹೀಗಾಗಿ ಹೃದಯ ಸಂಭವಿಸಿದ ವೈದ್ಯರು ಕೂಡ ಇಲ್ಲ. ಇದನ್ನೂ ಓದಿ: ಇತಿಹಾಸದಲ್ಲೇ ಮೊದಲ ಬಾರಿಗೆ ಬಿಜೆಪಿಗೆ ಮಹಿಳಾ ಸಾರಥ್ಯ?

    ಎದೆ ನೋವು ಎಂದು ಮಿಮ್ಸ್ ಆಸ್ಪತ್ರೆಗೆ ಹೋದರೆ ಕೇವಲ ಇಸಿಜಿ, ಎಕೋ, ಸಿಪಿಕೆಎಂಬಿ ಪರೀಕ್ಷೆಯಷ್ಟೇ ಮಾಡ್ತಾರೆ. ಹೆಚ್ಚಿನ ಚಿಕಿತ್ಸೆ ಬೇಕು ಅಂದ್ರೆ ಮೈಸೂರು ಅಥವಾ ಬೆಂಗಳೂರು ಆಸ್ಪತ್ರೆಗೆ ಇಲ್ಲಿನ ವೈದ್ಯರು ಚಿಕಿತ್ಸೆಗೆ ರೆಫರ್ ಮಾಡುತ್ತಾರೆ. ಇದನ್ನೂ ಓದಿ:  ಟ್ರಿನಿಡಾಡ್‌ನ ಸಾಂಪ್ರದಾಯಿಕ ಸೊಹರಿ ಎಲೆಯಲ್ಲಿ ಭೋಜನ ಸವಿದ ಪ್ರಧಾನಿ ಮೋದಿ

    ಹೃದಯಾಘಾತವಾದ ವ್ಯಕ್ತಿಗೆ ಒಂದೂವರೆ ಗಂಟೆಯ ಅವಧಿಯ ಒಳಗೆ ಚಿಕಿತ್ಸೆ ನೀಡಿದರೆ ಆ ವ್ಯಕ್ತಿಯನ್ನು ಬದುಕಿಸುವ ಅವಕಾಶ ಇರುತ್ತೆ.‌ ಆದ್ರೆ ಮಂಡ್ಯದ ಮಿಮ್ಸ್‌ನಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ವೈದ್ಯರೇ ಇಲ್ಲ ಎಂದರೆ ದುರದೃಷ್ಟಕರ ಸಂಗತಿ. ಈಗಲಾದರು ಮಂಡ್ಯ ಮಿಮ್ಸ್‌ನಲ್ಲಿ ಹೃದಯದ ವಿಭಾಗ ಓಪನ್ ಆಗುತ್ತಾ ಅನ್ನೋದನ್ನ ಕಾದುನೋಡಬೇಕಿದೆ.

  • 7 ಸೆಕೆಂಡುಗಳಲ್ಲಿ ಹೃದ್ರೋಗ ಪತ್ತೆಹಚ್ಚುವ AI ಆ್ಯಪ್ ಸಿದ್ಧಪಡಿಸಿದ 14ರ ಬಾಲಕ

    7 ಸೆಕೆಂಡುಗಳಲ್ಲಿ ಹೃದ್ರೋಗ ಪತ್ತೆಹಚ್ಚುವ AI ಆ್ಯಪ್ ಸಿದ್ಧಪಡಿಸಿದ 14ರ ಬಾಲಕ

    – ಭಾರತೀಯ ಮೂಲದ ವಿದ್ಯಾರ್ಥಿಗೆ ಭೇಷ್‌ ಎಂದ ಆಂಧ್ರ ಸಿಎಂ

    ಅಮರಾವತಿ: 14 ವರ್ಷದ ಭಾರತೀಯ ಅಮೆರಿಕನ್‌ ವಿದ್ಯಾರ್ಥಿ ಹೃದಯ ಸಂಬಂಧಿ ಕಾಯಿಲೆ (Heart Disease) ಪತ್ತೆಹಚ್ಚುವ ಕೃತಕ ಬುದ್ಧಿಮತ್ತೆ ಆಧಾರಿತ (AI) ಅಪ್ಲಿಕೇಷನ್‌ ಅನ್ನು ಅಭಿವೃದ್ಧಿಪಡಿಸಿದ್ದು, ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ.

    ಹೌದು.. ಎನ್‌ಆರ್‌ಐ ವಿದ್ಯಾರ್ಥಿ ಸಿದ್ಧಾರ್ಥ್ ನಂದ್ಯಾಲ (Siddharth Nandyala) ಕೇವಲ 7 ಸೆಕೆಂಡುಗಳಲ್ಲಿ ಹೃದಯ ಸಂಬಂಧಿ ಕಾಯಿಲೆ ಪತ್ತೆಹಚ್ಚುವ ʻಸಿರ್ಕಾಡಿಯಾ-ವಿʼ (CircadiaV) ಎಐ ಆಧಾರಿತ ಆ್ಯಪ್‌ವೊಂದನ್ನ ಸಿದ್ಧಪಡಿಸಿದ್ದಾರೆ. ಅನಂತರಪುರದ ಮೂಲದ ಸಿದ್ಧಾರ್ಥ್‌ ಸದ್ಯ ಅಮೆರಿಕದ ಡಲ್ಲಾಸ್‌ ನಗರದಲ್ಲಿ ನೆಲೆಸಿದ್ದಾರೆ. ಇದನ್ನೂ ಓದಿ: ಮಹಾ ಕುಂಭಮೇಳದಿಂದ ದೇಶದ ಸಾಮೂಹಿಕ ಪ್ರಜ್ಞೆ ಬಲಗೊಂಡಿದೆ – ಲೋಕಸಭೆಯಲ್ಲಿ ಮೋದಿ ಶ್ಲಾಘನೆ

    14ರ ವಿದ್ಯಾರ್ಥಿ ಕಂಡುಹಿಡಿದ ಈ ಆ್ಯಪ್ ಸ್ಮಾರ್ಟ್‌ ಫೋನ್‌ ಸಹಾಯದಿಂದ ಹೃದಯ ರಕ್ತನಾಳಗಳ ಕಾಯಿಲೆಯನ್ನು ಬಹುಬೇಗನೆ ಪತ್ತೆಹಚ್ಚುತ್ತದೆ. ಹೃದಯದ ಮಿಡಿತವನ್ನು ಗ್ರಹಿಸುತ್ತದೆ. ಶೇ.96ಕ್ಕಿಂತ ಹೆಚ್ಚು ನಿಖರತೆಯನ್ನು ಸೂಚಿಸುತ್ತದೆ. ಈಗಾಗಲೇ ಗುಂಟೂರು ಸರ್ಕಾರಿ ಜನರಲ್ ಆಸ್ಪತ್ರೆ ಸೇರಿದಂತೆ ಅಮೆರಿಕದಲ್ಲಿ 15,000ಕ್ಕೂ ಹೆಚ್ಚು ರೋಗಿಗಳು ಹಾಗೂ ಭಾರತದಲ್ಲಿ 700 ರೋಗಿಗಳಿಗೆ ಇದನ್ನು ಪರೀಕ್ಷಿಸಲಾಗಿದೆ. ಖುದ್ದು ಸಿದ್ಧಾರ್ಥ್‌ ಅವರೇ ಸ್ಮಾರ್ಟ್‌ ಫೋನ್‌ ಬಳಸಿ ರೋಗಿಗಳನ್ನು ಪರೀಕ್ಷಿಸಿ ಯಶಸ್ವಿಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ:  ಮೋದಿ ಬಳಿ ಉದ್ಧವ್‌ ಠಾಕ್ರೆ ಕ್ಷಮೆಯಾಚಿಸಿ, ಬಿಜೆಪಿ ಜೊತೆ ಮತ್ತೆ ಮೈತ್ರಿಗೆ ಸಿದ್ಧ ಎಂದಿದ್ರು: ಏಕನಾಥ್‌ ಶಿಂಧೆ

    ಸಿದ್ಧಾರ್ಥ್‌ ಅವರ ಈ ಸಾಧನೆ ತಿಳಿದ ನಂತರ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು (Chandrababu Naidu), ಡಿಸಿಎಂ ಪವನ್‌ ಕಲ್ಯಾಣ್‌ (Pawan Kalyan) ಅವರು ಸಿದ್ಧಾರ್ಥ್‌ ನಂದ್ಯಾಲ ಅವರನ್ನ ಭೇಟಿಯಾಗಿ ಅಭಿನಂದಿಸಿದ್ದಾರೆ. ಇದನ್ನೂ ಓದಿ: ಕೊಂಕಣ ರೈಲ್ವೆ ವಿಲೀನ, ಮಂಗಳೂರು ರೈಲು ವ್ಯಾಪ್ತಿ ಪುನರ್ ರಚನೆ – ಲೋಕಸಭೆಯಲ್ಲಿ ಧ್ವನಿಯೆತ್ತಿದ ಕ್ಯಾ.ಬ್ರಿಜೇಶ್ ಚೌಟ

    ಸಿಎಂ ಚಂದ್ರಬಾಬು ನಾಯ್ಡು ಅವರು ತಮ್ಮೊಂದಿಗೆ ಚರ್ಚಿಸಲು ಕೇಂದ್ರ ಸಚಿವಾಲಯಕ್ಕೆ ಆಹ್ವಾನಿಸಿದ್ದರು. ಸುಮಾರು ಅರ್ಧಗಂಟೆಗಳ ಕಾಲ ಸಿದ್ಧಾರ್ಥ್‌ ಜೊತೆಗೆ ಚರ್ಚೆ ನಡೆಸಿದರು. ಇಂತಹ ಪ್ರಯತ್ನಗಳೊಂದಿಗೆ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಕ್ಕೆ ಇನ್ನಷ್ಟು ಕೊಡುಗೆ ನೀಡುವಂತೆ ಪ್ರೋತ್ಸಾಹಿಸಿದರು. ಜೊತೆಗೆ ಈ ರೀತಿ ಕೊಡುಗೆಗಳನ್ನು ನೀಡುವ ನಮ್ಮ ರಾಜ್ಯದ ವಿದ್ಯಾರ್ಥಿಗಳಿಗೆ ಸರ್ಕಾರದ ಸಂಪೂರ್ಣ ಬೆಂಬಲ ಇರಲಿದೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ನಿಮ್ಮನ್ನು ಭಾರತದಲ್ಲಿ ನೋಡಲು ಕಾತರದಿಂದ ಕಾಯುತ್ತಿದ್ದೇವೆ: ಸುನಿತಾ ವಿಲಿಯಮ್ಸ್‌ಗೆ ಮೋದಿ ಪತ್ರ

  • ನಿತ್ಯ 5 ಗಂಟೆಗಿಂತ ಕಡಿಮೆ ನಿದ್ರೆ ಮಾಡಿದ್ರೆ ಈ ಕಾಯಿಲೆಗಳು ಬರುತ್ತೆ!

    ನಿತ್ಯ 5 ಗಂಟೆಗಿಂತ ಕಡಿಮೆ ನಿದ್ರೆ ಮಾಡಿದ್ರೆ ಈ ಕಾಯಿಲೆಗಳು ಬರುತ್ತೆ!

    ನಿದ್ರೆ (Sleep) ಅಂದ್ರೆ ಎಲ್ಲರಿಗೂ ಇಷ್ಟ. ಆದರೆ ಬದಲಾದ ಜೀವನಶೈಲಿ, ಒತ್ತಡದ ಬದುಕಿನಿಂದಾಗಿ ಬಹುಪಾಲು ಮಂದಿ ನಿದ್ರೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಎಷ್ಟೋ ಮಂದಿ ನಿದ್ರೆಗಿಂತ ತಮ್ಮ ಕೆಲಸಗಳಿಗೇ ಹೆಚ್ಚು ಆದ್ಯತೆ ನೀಡುತ್ತಾರೆ. ಇನ್ನೂ ಕೆಲವರಿಗೆ ಮೊಬೈಲ್‌, ಲ್ಯಾಪ್‌ಟಾಪ್‌ ಕೈಯಲಿದ್ರೆ ಸಾಕು, ನಿದ್ರೆಯನ್ನೇ ಮರೆತುಬಿಡ್ತಾರೆ. ಇಂಥವರಿಗೆ ಅಧ್ಯಯನವೊಂದು ಶಾಕಿಂಗ್‌ ನ್ಯೂಸ್‌ ಕೊಟ್ಟಿದೆ. ಅದರಲ್ಲೂ ಮುಖ್ಯವಾಗಿ 50 ಮತ್ತು ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ನಿದ್ರೆಗೂ ಹೆಚ್ಚಿನ ಒತ್ತು ನೀಡಬೇಕು.

    50 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಜನರು ದಿನಕ್ಕೆ ಐದು ಗಂಟೆ ಅಥವಾ ಅದಕ್ಕಿಂತ ಕಡಿಮೆ ಸಮಯ ನಿದ್ರೆ ಮಾಡಿದರೆ ಹೃದ್ರೋಗ (Heart Disease), ಮಧುಮೇಹ (Diabetes) ಮತ್ತು ಕ್ಯಾನ್ಸರ್‌ನಂತಹ (Cancer) ಬಹು ದೀರ್ಘಕಾಲದ ಕಾಯಿಲೆಗಳು ಎದುರಾಗುವ ಸಮಸ್ಯೆ ಇರುತ್ತದೆ ಎಂದು ಅಧ್ಯಯನವೊಂದು ತಿಳಿಸಿದೆ. ಇದನ್ನೂ ಓದಿ: ಸದಾ ಹ್ಯಾಪಿಯಾಗಿರುವವರ ಸೀಕ್ರೆಟ್‌ ಗುಣಗಳೇನು ಗೊತ್ತಾ?

    ಈಚೆಗೆ ಪೀರ್-ರಿವ್ಯೂಡ್ ಜರ್ನಲ್ PLOS ಮೆಡಿಸಿನ್‌ನಲ್ಲಿ ತಮ್ಮ ಸಂಶೋಧನೆಗಳನ್ನು ಸಂಶೋಧಕರ ತಂಡವು ಪ್ರಕಟಿಸಿದೆ. 50, 60 ಮತ್ತು 70 ವರ್ಷ ವಯಸ್ಸಿನ 7,864 ಬ್ರಿಟಿಷ್ ನಾಗರಿಕ ಸೇವಕರ ಡೇಟಾವನ್ನು ಸಂಶೋಧಕರ ತಂಡವು ವಿಶ್ಲೇಷಿಸಿದೆ.

    ಸಂಶೋಧನೆಗಳ ಪ್ರಕಾರ, 50ನೇ ವಯಸ್ಸಿನಲ್ಲಿ ಐದು ಗಂಟೆಗಳ ಅಥವಾ ಅದಕ್ಕಿಂತ ಕಡಿಮೆ ಅವಧಿ ನಿದ್ರೆ ಮಾಡುವವರಲ್ಲಿ ದೀರ್ಘಕಾಲದ ಕಾಯಿಲೆಗಳು ಶೇ.20 ವೃದ್ಧಿಯಾಗುತ್ತದೆ.

    50, 60 ಮತ್ತು 70ನೇ ವಯಸ್ಸಿನಲ್ಲಿ ಐದು ಗಂಟೆ ಅಥವಾ ಅದಕ್ಕಿಂತ ಕಡಿಮೆ ಕಾಲ ನಿದ್ರಿಸುವುದು ಮಲ್ಟಿಮಾರ್ಬಿಡಿಟಿಯ ಸಮಸ್ಯೆಯನ್ನು ಶೇ.30 ರಿಂದ 40 ರಷ್ಟು ಹೆಚ್ಚಿಸುತ್ತದೆ ಎಂದು ಸಂಶೋಧಕರು ತಿಳಿಸಿದ್ದಾರೆ. ಇದನ್ನೂ ಓದಿ: ಬುದ್ಧಿವಂತರು ಯಾವಾಗಲು ಏಕಾಂಗಿಯಾಗಿಯೇ ಕೆಲಸ ಮಾಡ್ತಾರೆ.. ಯಾಕೆ ಗೊತ್ತಾ?

    ಜನರು ವಯಸ್ಸಾದಂತೆ ಅವರ ನಿದ್ರೆಯ ಅಭ್ಯಾಸಗಳು ಮತ್ತು ನಿದ್ರೆಯ ರಚನೆಯು ಬದಲಾಗುತ್ತದೆ. ಆದಾಗ್ಯೂ ರಾತ್ರಿಯಲ್ಲಿ 7 ರಿಂದ 8 ಗಂಟೆಗಳ ಕಾಲ ನಿದ್ರೆ ಮಾಡುವುದು ಒಳಿತು. ಅದಕ್ಕಿಂತ ಕಡಿಮೆ ಅವಧಿಯ ನಿದ್ರೆಯಿಂದ ದೀರ್ಘಕಾಲದ ಕಾಯಿಲೆಗಳನ್ನು ಎದುರಿಸಬೇಕಾಗುತ್ತದೆ ಎಂದು ಅಧ್ಯಯನದ ಪ್ರಮುಖ ಲೇಖಕ ಡಾ. ಸೆವೆರಿನ್ ಸಬಿಯಾ ತಿಳಿಸಿದ್ದಾರೆ.

    ನೀವು ಮಲಗುವ ಕೋಣೆ ಶಾಂತ, ಕತ್ತಲೆ, ಆರಾಮದಾಯಕ ತಾಪಮಾನದಲ್ಲಿರಬೇಕು. ರಾತ್ರಿ ಹೊತ್ತು ಅತಿಯಾಗಿ ಊಟ ಸೇವಿಸುವುದು ಸರಿಯಲ್ಲ. ಹಗಲಿನಲ್ಲಿ ವ್ಯಾಯಾಮ, ದೈಹಿಕ ಶ್ರಮ ಹಾಕಿದರೆ ರಾತ್ರಿ ವೇಳೆ ಚೆನ್ನಾಗಿ ನಿದ್ರೆ ಮಾಡಬಹುದು ಎನ್ನುತ್ತಾರೆ ಡಾ. ಸಬಿಯಾ. ಇದನ್ನೂ ಓದಿ: ಮಕ್ಕಳೊಂದಿಗೆ ಜಗಳವಾಡುವ ಮುನ್ನ ಪೋಷಕರು ಈ ಅಂಶಗಳನ್ನು ನೆನಪಿಡಿ..

    Live Tv
    [brid partner=56869869 player=32851 video=960834 autoplay=true]

  • ಮಡಿಲಲ್ಲಿ ಮಗುವಿಗೆ ಹಾಲುಣಿಸುತ್ತಿರುವಾಗಲೇ ಕೊನೆಯುಸಿರೆಳೆದ ತಾಯಿ

    ಮಡಿಲಲ್ಲಿ ಮಗುವಿಗೆ ಹಾಲುಣಿಸುತ್ತಿರುವಾಗಲೇ ಕೊನೆಯುಸಿರೆಳೆದ ತಾಯಿ

    ಹೈದರಾಬಾದ್: ಮಡಿಲಲ್ಲಿ ಮಗುವನ್ನಿಟ್ಟುಕೊಂಡು ಹಾಲುಣಿಸುತ್ತಿರುವಾಗಲೇ ತಾಯಿಯೊಬ್ಬಳು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ತೆಲಂಗಾಣದ ನಾಗರಕರ್ನೂಲ್ ಜಿಲ್ಲೆಯ ತಿಮ್ಮಾಜಿಪೇಟ್ ಮಂಡಲದ ನೆರೆಲ್ಲಪಲ್ಲಿಯಲ್ಲಿ ನಡೆದಿದೆ.

    25 ವರ್ಷದ ಜಯಶ್ರೀ ತನ್ನ ಮೊದಲ ಹೆರಿಗೆಗೆ ತವರು ಮನೆಗೆ ಬಂದಿದ್ದರು. 2 ತಿಂಗಳ ಕೆಳಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಆಕೆಯ ಪತಿ ಪ್ರಶಾಂತ್ ತಿರ್ಮಲಾಪುರದಿಂದ ಬಂದು ಆಕೆಯ ಮೈಬಣ್ಣ ಬದಲಾಗಿ ಕಪ್ಪಾಗಿದ್ದರಿಂದ ಮಹಬೂಬನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪರೀಕ್ಷೆ ನಡೆಸಿದ ವೈದ್ಯರು ಆಕೆಯ ಹೃದಯ ಕವಾಟದಲ್ಲಿ ಸಣ್ಣಪುಟ್ಟ ಸಮಸ್ಯೆ ಇದ್ದು, ಔಷಧ ಬಳಸಿದರೆ ಗುಣವಾಗುತ್ತದೆ ಎಂದು ಹೇಳಿದ್ದಾರೆ. ಹೀಗಾಗಿ ವೈದ್ಯರು ಬರೆದುಕೊಟ್ಟ ಔಷಧಗಳನ್ನು ಸೇವಿಸಿ ಮತ್ತೆ ನೇರಳಪಲ್ಲಿಗೆ ಮರಳಿದ್ದರು. ಇದನ್ನೂ ಓದಿ: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ ಮಾಡುತ್ತೇವೆ: ಕಾಗೇರಿ ಹಾರಿಕೆ ಉತ್ತರ

    ನಿನ್ನೆ ಬೆಳಗ್ಗಿನ ಜಾವ 5.30ಕ್ಕೆ ಮಗುವಿಗೆ ಹಾಲುಣಿಸುವ ವೇಳೆ ಜಯಶ್ರೀ ಕೊನೆಯುಸಿರೆಳೆದಿದ್ದಾರೆ. ಸ್ವಲ್ಪ ಸಮಯದ ನಂತರ ಅಜ್ಜ ಮತ್ತು ಅಜ್ಜಿ ಚಹಾಕ್ಕೆ ಕರೆದರು. ಆದರೆ ಅವರ ಕೋಣೆಯಿಂದ ಉತ್ತರ ಬರಲಿಲ್ಲ. ಏನಾಯಿತು ಎಂದು ನೋಡಲು ಹೋದಾಗ ಮೃತಪಟ್ಟಿರುವುದು ಗೊತ್ತಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

    Live Tv
    [brid partner=56869869 player=32851 video=960834 autoplay=true]

  • ಮಕ್ಕಳ ಹೃದಯ ಚಿಕಿತ್ಸೆಗೆ ನೆರವಾದ ಟಾಲಿವುಡ್ ಹೃದಯವಂತ ಪ್ರಿನ್ಸ್

    ಮಕ್ಕಳ ಹೃದಯ ಚಿಕಿತ್ಸೆಗೆ ನೆರವಾದ ಟಾಲಿವುಡ್ ಹೃದಯವಂತ ಪ್ರಿನ್ಸ್

    ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ತಮಗೆ ಬರುವ ಆದಾಯದಲ್ಲಿ ಶೇ.15 ರಷ್ಟು ಹಣವನ್ನು ಸಮಾಜಸೇವೆಗೆ ಮೀಸಲಿಡುತ್ತಾರೆ. ಇದನ್ನು ಸ್ವತಃ ಅವರೇ ತಿಳಿಸಿದ್ದಾರೆ. ಈಗ ಅವರು ಪುಟ್ಟ ಮಕ್ಕಳ ಹೃದಯ ಚಿಕಿತ್ಸೆಗಾಗಿ ಫೌಂಡೇಶನ್ ಮೂಲಕ ಸಹಾಯ ಮಾಡಲು ಮುಂದಾಗಿದ್ದಾರೆ.

    ಒಳ್ಳೆಯ ಕೆಲಸ ಮಾಡಿದಾಗ, ಸಹಾಯಹಸ್ತ ಚಾಚಿದಾಗ ಯಾವತ್ತೂ ಅವರು ಪ್ರಚಾರಕ್ಕಾಗಿ ಬಳಸಿಕೊಂಡಿಲ್ಲ. ಸದ್ದಿಲ್ಲದೇ ಸಹಾಯ ಮಾಡಿರುತ್ತಾರೆ. ಆದರೆ ಈಗ ತಾವು ಮಾಡಿದ ಕೆಲಸದ ಬಗ್ಗೆ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದು, ಹೃದಯ ಖಾಯಿಲೆ ಇರುವ ಬಡ ಮಕ್ಕಳು ಉಪಯೋಗವಾಗಲಿ ಎಂದು ಕೇಳಿಕೊಂಡಿದ್ದಾರೆ. ಇದನ್ನೂ ಓದಿ:  ಟ್ರೋಲ್‌ಗೆ ಆಹಾರವಾದ ಬಾಲಿವುಡ್ ನಟಿ ಕರೀನಾ ಆ ಎರಡು ಪೀಸ್ ಬಟ್ಟೆ

    ಈ ಹಿಂದೆ ಮಹೇಶ್ 1000ಕ್ಕೂ ಹೆಚ್ಚು ಮಕ್ಕಳಿಗೆ ಹಾರ್ಟ್ ಸರ್ಜರಿ ಮಾಡಿಸಲು ಸಹಾಯ ಮಾಡಿದ್ದರು. ಈಗ ಇದೇ ಕಾರ್ಯವನ್ನು ಇನ್ನು ಹೆಚ್ಚು ಪರಿಣಾಮಕಾರಿಯಾಗಿ ಮಾಡಬೇಕು ಎಂಬ ಉದ್ದೇಶದಿಂದ ಮತ್ತೆ ಅವರು ಆ ಕೆಲಸವನ್ನು ಮುಂದುವರೆಸಿದ್ದಾರೆ. ತಮ್ಮದೇ ಫೌಂಡೇಶನ್ ಮೂಲಕ ಕೆಲಸ ಮಾಡುತ್ತಿದ್ದಾರೆ.

    ಇತ್ತೀಚೆಗೆ ಹೃದಯಸಂಬಂಧಿ ಸಮಸ್ಯೆ ಚಿಕ್ಕವರಲ್ಲಿಯೂ ಹೆಚ್ಚು ಕಾಣಿಸಿಕೊಳ್ಳುತ್ತಿದ್ದು, ಪೋಷಕರಿಗೆ ಚಿಕಿತ್ಸೆ ಕೊಡಿಸಲು ಶಕ್ತಿಯಿಲ್ಲದೆ ಎಷ್ಟೋ ಮಕ್ಕಳು ಸಾವನ್ನಪ್ಪಿದ್ದಾರೆ. ಆದರೆ ಇದನ್ನು ಸ್ವಲ್ಪಮಟ್ಟಿಗಾದರೂ ತಡೆಯಲೂ ಮಹೇಶ್ ಮುಂದಾಗಿದ್ದಾರೆ.

    ಕೆಲ ದಿನಗಳ ಹಿಂದೆಯಷ್ಟೇ ‘ಪ್ಯೂರ್ ಲಿಟಲ್ ಹಾರ್ಟ್ ಫೌಂಡೇಶನ್ ಲಾಂಚ್’ ಆಗಿದ್ದು, ಮಹೇಶ್ ಬಾಬು ಸಹ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ಫೌಂಡೇಶನ್ಗೆ ತಮ್ಮ ಫೌಂಡೇಶನ್ ಮೂಲಕ ಮಕ್ಕಳಿಗೆ ನೆರವಾಗಲಿದ್ದಾರಂತೆ. ಇದನ್ನೂ ಓದಿ: ಹೊಟ್ಟೆ ಡುಮ್ಮ ಅಂದಿದ್ದಕ್ಕೆ ಸೂಪರ್ ಸ್ಟಾರ್ ಅಜಿತ್ ಮಾಡಿದ್ದೇನು?

  • ಚಿಕಿತ್ಸೆಗೆ ಹಣವಿಲ್ಲದೆ ಪರದಾಡುತ್ತಿರುವ ಜ್ಯೂನಿಯರ್ ವಿಷ್ಣುವರ್ಧನ್

    ಚಿಕಿತ್ಸೆಗೆ ಹಣವಿಲ್ಲದೆ ಪರದಾಡುತ್ತಿರುವ ಜ್ಯೂನಿಯರ್ ವಿಷ್ಣುವರ್ಧನ್

    ಹುಬ್ಬಳ್ಳಿ: ಜ್ಯೂನಿಯರ್ ವಿಷ್ಣುವರ್ಧನ್ ಎಂ.ಡಿ ಅಲಿ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆಗೆ ಹಣವಿಲ್ಲದೆ ಪರದಾಡುತ್ತಿದ್ದಾರೆ.

    ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಂ.ಡಿ ಅಲಿ, ಸುಮಾರು 35 ವರ್ಷಗಳಿಂದ ಖ್ಯಾತ ನಟರಾದ ಅಂಬರೀಶ್, ಶಿವರಾಜ್ ಕುಮಾರ್, ಉಪೇಂದ್ರ, ರಜನಿಕಾಂತ್ ಸೇರಿದಂತೆ ಹಲವು ನಾಯಕ ನಟರೊಂದಿಗೆ ನಟಿಸಿದ್ದೇನೆ. ನಾನು 10ಕ್ಕೂ ಹೆಚ್ಚು ಧಾರಾವಾಹಿಯಲ್ಲಿ ನಟಿಸಿದ್ದೇನೆ. ಕನ್ನಡ ಮಾತ್ರವಲ್ಲದೆ ತೆಲಗು, ತಮಿಳು ಇತರೇ ಭಾಷೆಯ ಚಿತ್ರಗಳಲ್ಲಿಯೂ ನಟಿಸಿದ್ದೇನೆ ಎಂದು ತಿಳಿಸಿದರು.

    ನಾನು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದೇನೆ. ಚಿಕಿತ್ಸೆಗೆ ಬೇಕಾಗುವಷ್ಟು ಹಣವಿಲ್ಲದೆ ಪರದಾಡುವಂತಾಗಿದೆ. ಆದರಿಂದ ಹುಬ್ಬಳ್ಳಿಯಲ್ಲಿ ಫೆಬ್ರವರಿ 26 ರಂದು ನಾನು ಕೆಲ ಜ್ಯೂನಿಯರ್ ನಟರೊಂದಿಗೆ ಕಾರ್ಯಕ್ರಮ ನಡೆಸಲು ಮುಂದಾಗಿದ್ದೆನೆ. ಆ ಕಾರ್ಯಕ್ರಮದಿಂದ ಬಂದ ಹಣದಿಂದ ಹೃದಯ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳುತ್ತೇನೆ ಎಂದು ತಮ್ಮ ಪರಿಸ್ಥತಿಯನ್ನು ಹೇಳಿಕೊಂಡಿದ್ದಾರೆ.

    ಎಂ.ಡಿ ಅಲಿ ಅವರೊಂದಿಗೆ ವೇದಿಕೆ ಮೇಲಿದ್ದವರು ಅವರಿಗೆ ಸಹಾಯಹಸ್ತ ನೀಡಿದ್ದಾರೆ. ಬಳಿಕ ನಮ್ಮ ಕೈಲಾದ ಮಟ್ಟಿಗೆ ಅವರಿಗೆ ಸಹಾಯ ಮಾಡಲು ನಾವು ಸಿದ್ಧ. ಯಾಕೆಂದರೆ ನಾವು ಕಲಾವಿದರನ್ನು ಗೌರವಿಸುತ್ತೇವೆ. ಅವರ ಕಲೆಗೆ ಬೆಲೆ ನೀಡುತ್ತೇವೆ. ಅಂದುಕೊಂಡ ಮಟ್ಟಿಗೆ ಅಲಿ ಅವರಿಗೆ ಸಹಾಯ ಮಾಡಲು ಆಗಲಿಲ್ಲ ಆದರೂ ನಮ್ಮ ಕೈಲಾದ ಸಹಾಯ ಮಾಡುತ್ತೇವೆ ಎಂದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv