Tag: heat stroke

  • ತೀವ್ರವಾಗಿರುವ ಬಿಸಿಲಿನಿಂದ ನಿಮ್ಮನ್ನು ನೀವು ಹೀಗೆ ರಕ್ಷಿಸಿಕೊಳ್ಳಿ

    ತೀವ್ರವಾಗಿರುವ ಬಿಸಿಲಿನಿಂದ ನಿಮ್ಮನ್ನು ನೀವು ಹೀಗೆ ರಕ್ಷಿಸಿಕೊಳ್ಳಿ

    ಬೆಂಗಳೂರು ಸೇರಿದಂತೆ ರಾಜ್ಯದ ಕೆಲವೆಡೆಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದು, ಮಧ್ಯಾಹ್ನ ವೇಳೆ ಮನೆಯಿಂದ ಹೊರಬರಲು ಆತಂಕವಾಗುತ್ತದೆ. ಬಿಸಿಲ ತಾಪದಿಂದ ಜನರ ಆರೋಗ್ಯ ಹದಗೆಡುತ್ತಿದೆ. ಮೇ ಮತ್ತು ಜೂನ್ ತಿಂಗಳಿನಲ್ಲಿ ಬೇಸಿಗೆಯ ಬಿಸಿ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ. ಹೀಟ್ ಸ್ಟ್ರೋಕ್‌ಗೆ ತಕ್ಷಣವೇ ಚಿಕಿತ್ಸೆ ನೀಡದಿದ್ದರೆ ವ್ಯಕ್ತಿಯ ಸಾವಿಗೆ ಕಾರಣವಾಗಬಹುದು. ಹೀಗಾಗಿ ಮನೆಯಿಂದ ಹೊರಡುವ ಮುನ್ನ ಈ ಕೆಳಗಿನ ಮುನ್ನೆಚ್ಚರಿಕೆಗಳನ್ನು ವಹಿಸಿ.

    * ಉಡುಪು ಆರಾಮದಾಯಕವಾಗಿರಲಿ: ಬೇಸಿಗೆಯಲ್ಲಿ ಹೊರಗೆ ಹೋಗುವಾಗ ಆರಾಮದಾಯಕವಾದ ಹತ್ತಿ ಬಟ್ಟೆಗಳನ್ನು ಧರಿಸಿ. ಬಿಗಿಯಾದ ಬಟ್ಟೆಗಳನ್ನು ಧರಿಸುವುದರಿಂದ ಅತಿಯಾದ ಬೆವರುವಿಕೆ ಉಂಟಾಗುತ್ತದೆ. ಹೀಗಾಗಿ ಸಡಿಲವಾದ ಮತ್ತು ಹತ್ತಿ ಬಟ್ಟೆಗಳನ್ನು ಧರಿಸುವುದು ಉತ್ತಮ. ಹತ್ತಿ ಬಟ್ಟೆಗಳು ಹೆಚ್ಚು ಶಾಖವನ್ನು ಉಂಟುಮಾಡುವುದಿಲ್ಲ.

    * ದೇಹವನ್ನು ಮುಚ್ಚಿಕೊಂಡು ಹೋಗಿ: ಮಧ್ಯಾಹ್ನದ ವೇಳೆ ಮನೆಯಿಂದ ಹೊರಗೆ ಹೋಗಬೇಕಾದರೆ ನಿಮ್ಮ ದೇಹವನ್ನು ಪೂರ್ಣವಾಗಿ ಮುಚ್ಚಿಕೊಳ್ಳಿ. ಮನೆಯಿಂದ ಹೊರಡುವಾಗ ಸ್ಕಾರ್ಫ್, ಛತ್ರಿ, ಪೂರ್ಣ ತೋಳಿನ ಅಂಗಿ, ಕ್ಯಾಪ್ ಇತ್ಯಾದಿಗಳನ್ನು ಧರಿಸಿಕೊಳ್ಳಿ. ಹೊರಗೆ ಹೋಗುವಾಗ ಬಾಟ್ಲಿಯಲ್ಲಿ ನೀರು ತೆಗೆದುಕೊಂಡು ಹೋಗಿ. ಇನ್ನು ಎಸಿಯಲ್ಲಿ ಕುಳಿತು ಕೆಲಸ ಮಾಡುವವರಾದರೆ ತಕ್ಷಣವೇ ಬಿಸಿಲಿಗೆ ಹೋಗುವುದನ್ನು ತಪ್ಪಿಸಿ. ಇದು ಶಾಖದ ಹೊಡೆತಕ್ಕೂ ಕಾರಣವಾಗಬಹುದು. ಇದನ್ನೂ ಓದಿ: ಕರ್ನಾಟಕದಲ್ಲಿ ಮುಂದಿನ 3 ದಿನ ಒಣಹವೆ – ಏ.18 ರಿಂದ ವಿವಿಧೆಡೆ ಮಳೆ

    * ದೇಹವನ್ನು ಹೈಡ್ರೇಟ್ ಆಗಿಟ್ಟುಕೊಳ್ಳಿ: ವಿಪರೀತ ಬಿಸಿಲು ಇರುವುದರಿಂದ ನಿಮ್ಮ ದೇಹವನ್ನು ನೀವು ಹೈಡ್ರೇಟ್‌ ಆಗಿಟ್ಟುಕೊಳ್ಳಿ. ಇದಕ್ಕಾಗಿ ಆಗಾಗ ನೀರು ಕುಡಿಯಿರಿ. ದಿನಕ್ಕೆ ಒಂದು ಬಾರಿಯಾದರೂ ಜ್ಯೂಸ್‌ ಕುಡಿಯಿರಿ. ದೇಹದಲ್ಲಿ ನೀರಿನ ಕೊರತೆಯಾದರೆ ನಿರ್ಜಲೀಕರಣ ಉಂಟಾಗುತ್ತದೆ. ಈ ಸಮಸ್ಯೆ ಉಂಟಾದರೆ ತಲೆತಿರುಗುವಿಕೆ ಮತ್ತು ಆಯಾಸದಂತಹ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ.

    * ಸನ್‌ಸ್ಕ್ರೀನ್‌ ಬಳಸಿ: ಬೇಸಿಗೆಯಲ್ಲಿ ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳುವುದರಿಂದ ಚರ್ಮದ ಸನ್ಬರ್ನ್ ಮತ್ತು ಟ್ಯಾನ್ ಸಮಸ್ಯೆ ಹೆಚ್ಚಾಗುತ್ತದೆ. ಆದ್ದರಿಂದ ಮನೆಯಿಂದ ಹೊರಡುವಾಗ ಉತ್ತಮ ಗುಣಮಟ್ಟದ ಸನ್‌ಸ್ಕ್ರೀನ್ ಲೋಷನ್ ಹಚ್ಚಿಕೊಳ್ಳಿ. ಇದನ್ನು ಹಚ್ಚಿಕೊಂಡು 15 ನಿಮಿಷಗಳ ನಂತರ ಮಾತ್ರ ಮನೆಯಿಂದ ಹೊರಹೋಗಿ. ಇದು ಸೂರ್ಯನ ಕಿರಣಗಳಿಂದ ಚರ್ಮಕ್ಕೆ ಹಾನಿಯಾಗದಂತೆ ತಡೆಯುತ್ತದೆ.

    * ಹೊರಗಡೆ ಹೋಗೋದನ್ನು ತಪ್ಪಿಸಿ: ಸುಖಾಸುಮ್ಮನೆ ಬಿಸಿಲಿಗೆ ಹೊರಗಡೆ ಹೋಗುವುದನ್ನು ತಪ್ಪಿಸಿ. ಯಾಕೆಂದರೆ ಬಿಸಿಲಿನ ತಾಪದಲ್ಲಿ ಹೊರಗೆ ಹೋಗುವುದರಿಂದ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಹೀಗಾಗಿ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಾದಷ್ಟು ಮನೆಯಲ್ಲಿಯೇ ಇರಲು ಪ್ರಯತ್ನಿಸಿ. ಇದನ್ನೂ ಓದಿ: ಮಗು ಆರೋಗ್ಯವಾಗಿ, ಫಿಟ್ ಆಗಿರಲು ಗರ್ಭಿಣಿಯರು ಈ ಆಹಾರಗಳನ್ನು ಸೇವಿಸಿ

    * ಮಸಾಲೆಯುಕ್ತ ಆಹಾರ ಕಡಿಮೆ ಮಾಡಿ: ಈ ಋತುವಿನಲ್ಲಿ ಹೆಚ್ಚು ಮಸಾಲೆಯುಕ್ತ ಆಹಾರವನ್ನು ಸೇವಿಸುವುದರಿಂದ ನಿಮ್ಮ ಹೊಟ್ಟೆಯಲ್ಲಿ ಕೆಲವೊಂದು ಸಮಸ್ಯೆಯನ್ನು ಎದುರಿಸಬಹುದು. ಹೀಗಾಗಿ ಆದಷ್ಟು ಮನೆಯಲ್ಲಿ ತಯಾರಿಸಿದ ಆಹಾರವನ್ನು ಸೇವಿಸಿ. ಅಲ್ಲದೇ ನಿಮ್ಮ ಆಹಾರದಲ್ಲಿ ತರಕಾರಿಗಳು ಮತ್ತು ಹಣ್ಣುಗಳನ್ನು ಹೆಚ್ಚಾಗಿರಲಿ.

  • ರಾಜ್ಯದಲ್ಲೇ ಮೊದಲ ಕೇಸ್‌ – ಮೈಸೂರಿನ 85 ವರ್ಷದ ವ್ಯಕ್ತಿಗೆ ಹೀಟ್‌ ಸ್ಟ್ರೋಕ್

    ರಾಜ್ಯದಲ್ಲೇ ಮೊದಲ ಕೇಸ್‌ – ಮೈಸೂರಿನ 85 ವರ್ಷದ ವ್ಯಕ್ತಿಗೆ ಹೀಟ್‌ ಸ್ಟ್ರೋಕ್

    ಬೆಂಗಳೂರು: ರಾಜ್ಯದಲ್ಲಿ ಬಿರು ಬೇಸಿಗೆ ಬಿಸಿ ಜನರನ್ನು ಹೈರಾಣಾಗಿಸಿದೆ. ಇದರ ಪರಿಣಾಮ ರಾಜ್ಯದಲ್ಲಿ ಮೊದಲ ಹೀಟ್‌ ಸ್ಟ್ರೋಕ್‌ ಪ್ರಕರಣ ದಾಖಲಾಗಿದೆ.

    ಮೈಸೂರು ಮೂಲದ 85 ವರ್ಷದ ವ್ಯಕ್ತಿಗೆ ಹೀಟ್ ಸ್ಟ್ರೋಕ್‌ಗೆ ತುತ್ತಾಗಿದ್ದಾರೆ. ಏಪ್ರಿಲ್ 4 ರಂದು ಆಸ್ಫತ್ರೆಗೆ ದಾಖಲು ಚಿಕಿತ್ಸೆ ಪಡೆದು ಏ.5 ರಂದು ಡಿಸ್ಚಾರ್ಜ್‌ ಆಗಿದ್ದಾರೆ.

  • ಬಿಸಿಲಿನ ಎಫೆಕ್ಟ್‌ನಿಂದ ಹಳಿಯ ರಬ್ಬರ್‌ಗೆ ಬೆಂಕಿ – 20 ನಿಮಿಷ ಮೆಟ್ರೋ ಸಂಚಾರ ಬಂದ್

    ಬಿಸಿಲಿನ ಎಫೆಕ್ಟ್‌ನಿಂದ ಹಳಿಯ ರಬ್ಬರ್‌ಗೆ ಬೆಂಕಿ – 20 ನಿಮಿಷ ಮೆಟ್ರೋ ಸಂಚಾರ ಬಂದ್

    ಬೆಂಗಳೂರು: ಈ ಬಾರಿ ಕಳೆದ ವರ್ಷಕ್ಕಿಂತಲೂ ಅಧಿಕ ಬಿಸಿಲಿನ ತಾಪಮಾನವಿದೆ. ಅದರಲ್ಲೂ ಸಿಲಿಕಾನ್ ಸಿಟಿಯಲ್ಲಿ ಬಿಸಿಲಿನ ಎಫೆಕ್ಟ್ (Heat Stroke) ಜೋರಾಗಿದ್ದು, ಸೋಮವಾರ ಹಳಿಯಲ್ಲಿರುವ ರಬ್ಬರ್‌ಗೆ ಬೆಂಕಿ ತಗುಲಿ 20 ನಿಮಿಷಗಳ ಕಾಲ ಮೆಟ್ರೋ (Metro) ರೈಲು ಸಂಚಾರವನ್ನು ಬಂದ್ ಮಾಡಿದ ಘಟನೆ ನಡೆದಿದೆ.

    ಸೋಮವಾರ ಬೆಳಗ್ಗೆ 11 ಘಂಟೆಗೆ ನೇರಳೆ ಮಾರ್ಗದ ವಿವೇಕಾನಂದ ಮೆಟ್ರೋ ನಿಲ್ದಾಣದ ಬಳಿ ಬರುತ್ತಲೇ ಈ ಘಟನೆ ನಡೆದಿದೆ. ಸೂರ್ಯನ ಶಾಖದಿಂದಾಗಿ ಮೆಟ್ರೋ ಹಳಿಯ ರಬ್ಬರ್‌ಗೆ ಬೆಂಕಿ ತಗುಲಿದ್ದನ್ನು ಗಮನಿಸಿದ ಚಾಲಕ, ತಕ್ಷಣ ಮುನ್ನೆಚ್ಚರಿಕೆಯ ಕ್ರಮವಾಗಿ ರೈಲು ನಿಲ್ಲಿಸಿದ್ದಾರೆ.

    ಅದಾದ ಬಳಿಕ ಚಾಲಕ ಸ್ಟೇಷನ್ ಮಾಸ್ಟರ್‌ಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ವಿವೇಕಾನಂದ ಮೆಟ್ರೋ ನಿಲ್ದಾಣದ ಬಳಿಯಿದ್ದ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿ ಬೆಂಕಿ ಆರಿಸಿದರು. ರಬ್ಬರ್ ತಣ್ಣಗಾದ ಬಳಿಕ ಸಹಜವಾಗಿಯೇ ಮೆಟ್ರೋ ಪ್ರಯಾಣವನ್ನು ಮರು ಪ್ರಾರಂಭಿಸಲಾಯಿತು.

    ಘಟನೆಯಿಂದಾಗಿ ಸುಮಾರು 20 ನಿಮಿಷಗಳ ಕಾಲ ಮೆಟ್ರೋ ಸಂಚಾರ ವ್ಯತ್ಯಯವಾಗಿತ್ತು. ಇದರಿಂದಾಗಿ ಆ ಮಾರ್ಗದ ಮೆಟ್ರೋದಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರು (Passengers) ಪರದಾಡುವಂತಾಯಿತು. ಇದನ್ನೂ ಓದಿ: ಅಪ್ಪ JDS, ಮಗ BJPಗೆ ಬೆಂಬಲ – ಮತದಾರ, ಕಾರ್ಯಕರ್ತರಲ್ಲಿ ಗೊಂದಲ

    ಈ ಬಗ್ಗೆ ಪ್ರತಿಕ್ರಿಯಿಸಿದ ಮೆಟ್ರೋ ಅಧಿಕಾರಿಗಳು, ಬಿಸಿಲಿನ ಶಾಖದಿಂದಾಗಿ ಮೆಟ್ರೋ ಹಳಿಯ ರಬ್ಬರ್‌ಗೆ ಬೆಂಕಿ ಕಿಡಿ ಹೊತ್ತುಕೊಂಡಿತ್ತು. ಚಾಲಕನ ಗಮನಕ್ಕೆ ಬಂದ ತಕ್ಷಣ ರೈಲನ್ನು ನಿಲ್ಲಿಸಿದ್ದಾರೆ. ಬಿಸಿಲಿನ ಝಳದಿಂದ ರಬ್ಬರ್‌ಗೆ ಕಿಡಿ ತಾಕಿರಬಹುದು. ವಿದ್ಯುತ್ ಅಥವಾ ರಬ್ಬರ್‌ನಲ್ಲಿನ ಸಮಸ್ಯೆಯಿಂದಲೂ ಆಗಿರಬಹುದು. ಉಳಿದಂತೆ ಇಡೀ ದಿನ ಯಾವುದೇ ಸಮಸ್ಯೆಯಿಲ್ಲದೆ ಈ ಮಾರ್ಗದಲ್ಲಿ ರೈಲು ಸಂಚರಿಸಿದೆ ಎಂದು ತಿಳಿಸಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಹೆಚ್ಚಾಗುತ್ತಿದೆ ಕೊರೊನಾ