Tag: heavy rain

  • ಮುಂಬೈ ಸೇರಿ ಹಲವೆಡೆ ಭಾರೀ ಮಳೆ – ಆರೆಂಜ್ ಅಲರ್ಟ್ ಘೋಷಣೆ

    ಮುಂಬೈ ಸೇರಿ ಹಲವೆಡೆ ಭಾರೀ ಮಳೆ – ಆರೆಂಜ್ ಅಲರ್ಟ್ ಘೋಷಣೆ

    – ನವರಾತ್ರಿಯ ದಾಂಡಿಯಾ ಸಂಭ್ರಮಕ್ಕೆ ಅಡ್ಡಿ ಸಾಧ್ಯತೆ

    ಮುಂಬೈ: ಮುಂಬೈ (Mumbai) ಸೇರಿದಂತೆ ಮಹಾರಾಷ್ಟ್ರದ (Maharashtra) ಕೆಲವು ಭಾಗಗಳಲ್ಲಿ ಶನಿವಾರ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ (IMD) ಆರೆಂಜ್ ಅಲರ್ಟ್ ಘೋಷಿಸಿದೆ.

    ಮುಂಬೈನಲ್ಲಿ ಗುಡುಗು, ಮಿಂಚು ಸಹಿತ ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಪಾಲ್ಘರ್, ಪುಣೆ, ಥಾಣೆ ಮತ್ತು ರಾಯಗಡ್ ಸೇರಿದಂತೆ ಹಲವೆಡೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ ಜಲ್ನಾ, ಬೀಡ್ ಮತ್ತು ಸೋಲಾಪುರದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.ಇದನ್ನೂ  ಓದಿ: ಕೊಡಗಿನಲ್ಲಿ ನಡೆಯುತ್ತಿದೆ ಅಕ್ರಮ ಗಣಿಗಾರಿಕೆ – ಸುತ್ತಮುತ್ತಲಿನ ಪ್ರದೇಶದ ಜನಕ್ಕೆ ಕಾಡ್ತಿದೆ ಶ್ವಾಸಕೋಶದ ಸಮಸ್ಯೆ!

    ಶನಿವಾರ (ಸೆ.27) ಬೆಳಗ್ಗೆಯಿಂದಲೂ ಮುಂಬೈ ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಪಾಲ್ಘರ್, ಥಾಣೆ ಮತ್ತು ರಾಯಗಡ್‌ನಲ್ಲಿ ಸೋಮವಾರದವರೆಗೂ (ಸೆ.29) ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ. ಅಲ್ಲದೇ ಅಕ್ಟೋಬರ್ ಎರಡನೇ ವಾರದವರೆಗೂ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

    ಇನ್ನೂ ನವರಾತ್ರಿ ಹಿನ್ನೆಲೆ ಆಯೋಜಿಸಲಾಗಿದ್ದ ದಾಂಡಿಯಾ ನೈಟ್ ಫೆಸ್ಟಿವಲ್‌ಗೂ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ. ಜೊತೆಗೆ ಸೆ.28ರಂದು ನಡೆಯಬೇಕಿದ್ದ ಮಹಾರಾಷ್ಟ್ರ ಲೋಕ ಸೇವಾ ಆಯೋಗದ ಕೆಲ ಪರೀಕ್ಷೆಗಳನ್ನು ಮುಂದೂಡಿ, ನ.9ರಂದು ನಡೆಸುವುದಾಗಿ ತಿಳಿಸಿದೆ.

    ಇನ್ನೂ ಮಹಾರಾಷ್ಟ್ರದಾದ್ಯಂತ ಭಾರೀ ಮಳೆಯ ಹಿನ್ನೆಲೆ ಮೀನುಗಾರರು ಸಮುದ್ರ, ನದಿ, ಕೆರೆಗಳಿಗೆ ಇಳಿಯದಂತೆ ಸೂಚನೆ ನೀಡಿದೆ.ಇದನ್ನೂ  ಓದಿ: ಗಡಿ ಜಿಲ್ಲೆ ಬೀದರ್‌ನಲ್ಲಿ ಧಾರಾಕಾರ ಮಳೆಗೆ ಭಾರೀ ಅವಾಂತರ – ರಸ್ತೆ ಸಂಚಾರ ಬಂದ್‌

     

  • ಕೋಲ್ಕತ್ತಾದಲ್ಲಿ 40 ವರ್ಷಗಳಲ್ಲೇ ದಾಖಲೆಯ ಮಳೆ – ರಾಜ್ಯದಲ್ಲಿಯೂ ನಿಲ್ಲದ ವರುಣಾರ್ಭಟ

    ಕೋಲ್ಕತ್ತಾದಲ್ಲಿ 40 ವರ್ಷಗಳಲ್ಲೇ ದಾಖಲೆಯ ಮಳೆ – ರಾಜ್ಯದಲ್ಲಿಯೂ ನಿಲ್ಲದ ವರುಣಾರ್ಭಟ

    ನವದೆಹಲಿ: ಕೋಲ್ಕತ್ತಾದಲ್ಲಿ (Kolkatta) ವರುಣನ ಅಬ್ಬರ ಜೋರಾಗಿದ್ದು, 40 ವರ್ಷಗಳಲ್ಲೇ ಅತ್ಯಂತ ದಾಖಲೆ ಮಟ್ಟದ ಮಳೆಯಾಗಿದೆ.

    ಮನೆ, ರಸ್ತೆಗಳು ಜಲಾವೃತಗೊಂಡು ಜನರ ಜೀವನ ಅಸ್ತವ್ಯಸ್ತವಾಗಿದೆ. ಮಳೆಯಿಂದಾಗಿ ಹಲವು ಅವಾಂತರ ಸೃಷ್ಟಿಯಾಗಿದೆ. ಕೋಲ್ಕತ್ತಾದ ದಕ್ಷಿಣ ಮತ್ತು ಪೂರ್ವ ಭಾಗಗಳು ಹೆಚ್ಚು ಹಾನಿಯಾಗಿದ್ದು, ಪಶ್ಚಿಮ ಬಂಗಾಳದಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕೋಲ್ಕತ್ತಾದ ಹಲವು ಪ್ರದೇಶಗಳು ಸಂಪೂರ್ಣ ಜಲಾವೃತವಾಗಿವೆ. ಸೊಂಟದ ಆಳದವರೆಗೂ ಹಲವು ಪ್ರದೇಶಗಳು ಮುಳಗಿವೆ. ರಸ್ತೆಗಳು ಕಾಣದಂತೆ ಮಾಯವಾಗಿವೆ ವಾಹನಗಳ ಸವಾರರು ಹೈರಾಣಾಗ್ತಿದ್ದಾರೆ. ಮಳೆಯಿಂದಾಗಿ ವಿಮಾನಗಳ ಪ್ರಯಾಣದ ಮೇಲೂ ಎಫೆಕ್ಟ್ ಉಂಟಾಗಿದೆ.ಇದನ್ನೂ ಓದಿ: ಬಿಗ್ ಬಾಸ್ ಸೀಸನ್ 12 ಭಾರೀ ಸ್ಪೆಷಲ್: ಬಿಗ್ ಅಪ್ ಡೇಟ್

    ಇನ್ನೂ ರಾಜ್ಯದಲ್ಲಿ ಉತ್ತರ ಕರ್ನಾಟಕಕ್ಕೆ ಮಳೆ ಮತ್ತು ಮಹಾರಾಷ್ಟ್ರ ಪ್ರವಾಹ ಸಂಕಷ್ಟ ತಂದೊಡ್ಡಿದೆ. ವಿಜಯಪುರ ಜಿಲ್ಲೆಯ ಭೀಮಾನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ. ಮಹಾರಾಷ್ಟ್ರದ ಉಜನಿ, ವೀರ್ ಜಲಾಶಯಗಳಿಂದ 2 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದ ಭೀಮಾನದಿ ತಟದಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಚಡಚಣ, ಇಂಡಿ, ಆಲಮೇಲ ತಾಲೂಕಿನ ಭಾಗಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಸದ್ಯ ಭೀಮಾನದಿಗೆ ಅಡ್ಡಲಾಗಿ ನಿರ್ಮಾಣ ಮಾಡಿರೋ ಬ್ರಿಡ್ಜ್ ಕಂ ಬ್ಯಾರೇಜ್‌ಗಳು ಜಲಾವೃತವಾಗಿವೆ.

    ಕಲಬುರಗಿಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಗಾಣಗಾಪುರ ಸೇತುವೆ ಮುಳಗಡೆಯಾಗಿ ಜೇವರ್ಗಿ-ಅಫಜಲಪುರ ರಸ್ತೆ ಸಂರ್ಪಕ ಬಂದ್ ಆಗಿದೆ. ಕ್ಷಣದಿಂದ ಕ್ಷಣಕ್ಕೆ ಹೆಚ್ಚುತ್ತಿರೋ ಭೀಮಾನದಿ ಒಳಹರಿವು ಹಿನ್ನೆಲೆ ನದಿ ತೀರಕ್ಕೆ ಯಾರು ತೆರಳದಂತೆ ಎಚ್ಚರಿಸಲಾಗಿದೆ. ಇನ್ನು, ಥೈಲ್ಯಾಂಡ್‌ನ ಬ್ಯಾಂಕಾಕ್‌ನಲ್ಲಿ ಭೀಕರ ಭೂಕುಸಿತವಾಗಿದೆ. ಪೈಪ್‌ಲೈನ್ ಕಾಮಗಾರಿ ವೇಳೆ ನಡುರಸ್ತೇಲಿ ಭೂಮಿ ಕುಸಿದಿದೆ. 30 ಮೀಟರ್ ಅಗಲ, 50 ಮೀಟರ್ ಆಳದ ಗುಂಡಿ ಸೃಷ್ಟಿಯಾಗಿದೆ. ಆಳದ ಗುಂಡಿಯೊಳಗೆ ಹಲವು ವಾಹನಗಳು ಬಿದ್ದಿವೆ. ಭೂಕುಸಿತದ ಬೆಚ್ಚಿ ಬೀಳಿಸುವ ಭಯಾನಕ ದೃಶ್ಯ ಸೆರೆಯಾಗಿದೆ.ಇದನ್ನೂ ಓದಿ: ಎಸ್.ಎಲ್.ಭೈರಪ್ಪಗೆ ಸಿನಿಮಾ ನಂಟು – ಕಾದಂಬರಿ ಆಧರಿತ ಸಿನಿಮಾಗಳಲ್ಲಿ ವಿಷ್ಣು ಸೇರಿ ಖ್ಯಾತ ನಟರ ಅಭಿನಯ

  • ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ – ರಾಜ್ಯದಲ್ಲಿ ಸೆ.29ರವರೆಗೆ ವರುಣಾರ್ಭಟ

    ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ – ರಾಜ್ಯದಲ್ಲಿ ಸೆ.29ರವರೆಗೆ ವರುಣಾರ್ಭಟ

    ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯದಲ್ಲಿ ಸೆ.29ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

    ಬಂಗಾಳ ಉಪಸಾಗರದ ಉತ್ತರ ಒಡಿಶಾ, ಆಂಧ್ರದ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕದಲ್ಲಿ (Karnataka) ಭಾರೀ ಮಳೆಯಾಗಲಿದೆ. ಹೀಗಾಗಿ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆ – 7 ಮಂದಿ ಬಲಿ

    ಸೆ.23ರಿಂದ ಸೆ.29ರವರೆಗೆ ಹಲವಡೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡು, ಕರಾವಳಿ ಭಾಗ ಹಾಗೂ ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ.

  • ಉತ್ತರಾಖಂಡದ ಚಮೋಲಿಯಲ್ಲಿ ಮೇಘಸ್ಫೋಟ – 5ಕ್ಕೂ ಹೆಚ್ಚು ಜನ ನಾಪತ್ತೆ, ಕಟ್ಟಡಗಳು ನೆಲಸಮ

    ಉತ್ತರಾಖಂಡದ ಚಮೋಲಿಯಲ್ಲಿ ಮೇಘಸ್ಫೋಟ – 5ಕ್ಕೂ ಹೆಚ್ಚು ಜನ ನಾಪತ್ತೆ, ಕಟ್ಟಡಗಳು ನೆಲಸಮ

    ಡೆಹ್ರಾಡೂನ್: ಉತ್ತರಾಖಂಡದ (Uttarakhand) ಚಮೋಲಿಯಲ್ಲಿ (Chamoli) ಮತ್ತೆ ಮೇಘಸ್ಫೋಟ (Cloudburst) ಸಂಭವಿಸಿದ್ದು, 5ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ.

    ಚಮೋಲಿ ಜಿಲ್ಲೆಯ ನಂದಾ ನಗರದಲ್ಲಿ ಬುಧವಾರ (ಸೆ.17) ತಡರಾತ್ರಿ ಸುರಿದ ಧಾರಾಕಾರ ಮಳೆಗೆ ಮೇಘಸ್ಫೋಟ ಸಂಭವಿಸಿದೆ. ಭಾರೀ ಪ್ರಮಾಣದ ನೀರು ಹರಿದು ಬಂದಿದ್ದು, 6 ಕಟ್ಟಡಗಳು ನೆಲಸಮಗೊಂಡಿವೆ.ಇದನ್ನೂ ಓದಿ: ಬೆಂಗಳೂರಲ್ಲಿ ಧಾರಾಕಾರ ಮಳೆ; ಹಲವೆಡೆ ಅವಾಂತರ – ರಸ್ತೆಗೆ ಉರುಳಿದ ಮರ, ವಿದ್ಯುತ್‌ ಕಂಬ

    ಇನ್ನೂ 5ಕ್ಕೂ ಅಧಿಕ ಜನರು ನಾಪತ್ತೆಯಾಗಿದ್ದು, ಅಪಾರ ಪ್ರಮಾಣದ ಹಾನಿಯುಂಟಾಗಿದೆ. ಸದ್ಯ ಸ್ಥಳದಲ್ಲಿ ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ಮತ್ತು ಲೋಕೋಪಯೋಗಿ ಇಲಾಖೆಯ ತಂಡಗಳು ಶೋಧ ಕಾರ್ಯಾಚರಣೆ ನಡೆಸುತ್ತಿವೆ. ಜೊತೆಗೆ ಜೆಸಿಬಿ ಮತ್ತು ಇತರ ಉಪಕರಣಗಳನ್ನು ಬಳಸಿಕೊಂಡು ಅವಶೇಷಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿಕೊಂಡಿವೆ.

    ಅಧಿಕಾರಿಗಳ ಮಾಹಿತಿ ಪ್ರಕಾರ, ಅವಶೇಷಗಳಡಿಯಲ್ಲಿ ಸಿಲುಕಿದ್ದ ಇಬ್ಬರನ್ನು ಜೀವಂತವಾಗಿ ಹೊರತೆಗೆಯಲಾಗಿದೆ. ಸ್ಥಳದಲ್ಲೇ ಆಂಬ್ಯುಲೆನ್ಸ್ ಹಾಗೂ ವೈದ್ಯಕೀಯ ತಂಡ ಬೀಡುಬಿಟ್ಟಿವೆ ಎಂದು ತಿಳಿಸಿದ್ದಾರೆ.

    ಇನ್ನೂ ಕೆಲವು ದಿನ ಚಮೋಲಿಯಲ್ಲಿ ಅಧಿಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದಕ್ಕೂ ಮುನ್ನ ಡೆಹ್ರಾಡೂನ್‌ನ ಸಹಸ್ರಧಾರದಲ್ಲಿ ಸಂಭವಿಸಿದ ಮೇಘಸ್ಫೋಟದಲ್ಲಿ ಕನಿಷ್ಠ 13 ಜನರು ಸಾವನ್ನಪ್ಪಿದ್ದರು.ಇದನ್ನೂ ಓದಿ: ಅಕ್ರಮ ಆಸ್ತಿ ಗಳಿಕೆ ಆರೋಪ; ಕಾಂಗ್ರೆಸ್‌ ಶಾಸಕ ರಾಜೇಗೌಡ ವಿರುದ್ಧ ತನಿಖೆಗೆ ಕೋರ್ಟ್‌ ಆದೇಶ

  • ಡೆಹ್ರಾಡೂನ್‌ನಲ್ಲಿ ಮೇಘಸ್ಫೋಟ; ಮನೆಗಳು, ಐಟಿ ಪಾರ್ಕ್‌ ಜಲಾವೃತ – ಇಬ್ಬರು ಕಣ್ಮರೆ

    ಡೆಹ್ರಾಡೂನ್‌ನಲ್ಲಿ ಮೇಘಸ್ಫೋಟ; ಮನೆಗಳು, ಐಟಿ ಪಾರ್ಕ್‌ ಜಲಾವೃತ – ಇಬ್ಬರು ಕಣ್ಮರೆ

    ಡೆಹ್ರಾಡೂನ್: ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ (Dehradun) ಮೇಘಸ್ಫೋಟ ಸಂಭವಿಸಿದ್ದು, ಮನೆಗಳು ಮತ್ತು ಐಟಿ ಪಾರ್ಕ್‌ ಪ್ರದೇಶ ಜಲಾವೃತಗೊಂಡಿದೆ. ತಪೋವನ್‌ನಲ್ಲಿ ಹಲವಾರು ಮನೆಗಳು ಮುಳುಗಿದ್ದು, ಇಬ್ಬರು ಕಣ್ಮರೆಯಾಗಿದ್ದಾರೆ.

    ಕಾರ್ಲಿಗಾಡ್ ನದಿಯಲ್ಲಿ ಉಂಟಾದ ಭಾರೀ ಪ್ರವಾಹದಿಂದಾಗಿ ಸುತ್ತಮುತ್ತಲಿನ ಪ್ರದೇಶದಲ್ಲಿ ತೀವ್ರ ಹಾನಿ ಸಂಭವಿಸಿದೆ. ಆ ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಇದನ್ನೂ ಓದಿ: ಪಂಜಾಬ್‌ನ ಪ್ರವಾಹ ಪೀಡಿತ ಪ್ರದೇಶಗಳಿಗೆ ರಾಹುಲ್ ಗಾಂಧಿ ಭೇಟಿ

    ಭಾರೀ ಮತ್ತು ನಿರಂತರ ಮಳೆಯಿಂದಾಗಿ ನದಿ ಅಪಾಯಕಾರಿ ಮಟ್ಟ ತಲುಪಿದ್ದು, ಸೋಮವಾರ ರಾತ್ರಿ ಪ್ರಮುಖ ಸೇತುವೆ ಕುಸಿದು ಬಿದ್ದಿದೆ. ನದಿಪಾತ್ರದಲ್ಲಿರುವ ಆಸ್ತಿಪಾಸ್ತಿಗಳಿಗೆ ಅಪಾರ ಹಾನಿಯಾಗಿದೆ.

    ಡೆಹ್ರಾಡೂನ್‌ನ ಸಹಸ್ರಧಾರದಲ್ಲಿ ಭಾರೀ ಮಳೆಯಿಂದಾಗಿ ಕೆಲವು ಅಂಗಡಿಗಳು ಹಾನಿಗೊಳಗಾಗಿವೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಅವರು ಧಾಮಿ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಕೇಂದ್ರದಿಂದ ಸಂಪೂರ್ಣ ಸಹಕಾರದ ಭರವಸೆ ನೀಡಿದ ಪ್ರಧಾನಿ, ಈ ವಿಪತ್ತಿನ ಸಮಯದಲ್ಲಿ ಕೇಂದ್ರ ಸರ್ಕಾರ ಉತ್ತರಾಖಂಡದೊಂದಿಗೆ ದೃಢವಾಗಿ ನಿಲ್ಲುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮುಂಬೈನಲ್ಲಿ ಭಾರೀ ಮಳೆ ಸಾಧ್ಯತೆ – ರೆಡ್ ಅಲರ್ಟ್ ಘೋಷಣೆ

    ಭಾರೀ ಮಳೆಯಿಂದ ಉಂಟಾದ ಹಾನಿಯ ಕುರಿತು ಗೃಹ ಸಚಿವ ಅಮಿತ್ ಶಾ ಅವರು ಮುಖ್ಯಮಂತ್ರಿಯೊಂದಿಗೆ ದೂರವಾಣಿ ಮೂಲಕ ಚರ್ಚೆ ನಡೆಸಿದ್ದಾರೆ. ಗೃಹ ಸಚಿವಾಲಯದಿಂದ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ. ಪರಿಹಾರ ಮತ್ತು ರಕ್ಷಣಾ ಪ್ರಯತ್ನಗಳಿಗೆ ಕೇಂದ್ರದಿಂದ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ತಿಳಿಸಿದ್ದಾರೆ.

  • ಪಂಜಾಬ್‌ನ ಪ್ರವಾಹ ಪೀಡಿತ ಪ್ರದೇಶಗಳಿಗೆ ರಾಹುಲ್ ಗಾಂಧಿ ಭೇಟಿ

    ಪಂಜಾಬ್‌ನ ಪ್ರವಾಹ ಪೀಡಿತ ಪ್ರದೇಶಗಳಿಗೆ ರಾಹುಲ್ ಗಾಂಧಿ ಭೇಟಿ

    ಚಂಡೀಗಢ: ಪಂಜಾಬ್‌ನ (Punjab) ಪ್ರವಾಹ ಪೀಡಿತ ಪ್ರದೇಶಗಳಿಗೆ ಇಂದು (ಸೆ.15) ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಭೇಟಿ ನೀಡಿದರು.

    ಕಳೆದ ಒಂದೂವರೆ ತಿಂಗಳ ಅವಧಿಯಲ್ಲಿ ನಿರಂತರ ಮಳೆಯಿಂದಾಗಿ ಪಂಜಾಬ್‌ನ ಹಲವು ಪ್ರದೇಶಗಳು ತೀವ್ರ ಹಾನಿಗೊಳಗಾಗಿವೆ. ಅಮೃತಸರಕ್ಕೆ ಆಗಮಿಸಿದ ಅವರು, ಮೊದಲು ಘೋನೆವಾಲ್ ಗ್ರಾಮಕ್ಕೆ ತೆರಳಿ, ಪ್ರವಾಹ ಪೀಡಿತ ಪ್ರದೇಶಗಳ ಪರಿಶೀಲನೆ ನಡೆಸಿದರು. ಇದೇ ವೇಳೆ ಅಲ್ಲಿನ ಸ್ಥಳೀಯರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದರು.ಇದನ್ನೂ ಓದಿ: ಪ್ರವಾಹ ಪೀಡಿತ ಹಿಮಾಚಲ ಪ್ರದೇಶಕ್ಕೆ ಮೋದಿ ಭೇಟಿ – ವೈಮಾನಿಕ ಸಮೀಕ್ಷೆ, ಪರಿಸ್ಥಿತಿ ಅವಲೋಕನ

    ಇನ್ನೂ ರಾಹುಲ್ ಗಾಂಧಿ ಅವರು ಅಮೃತಸರದ ರಾಮದಾಸ್‌ನಲ್ಲಿರುವ ಐತಿಹಾಸಿಕ ಗುರುದ್ವಾರ ಬಾಬಾ ಬುದ್ಧ ಸಾಹಿಬ್‌ನಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಗುರುದಾಸ್ಪುರ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.

    ಇದೇ ವೇಳೆ ಅಮೃತಸರದ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಅಮರಿಂದರ್ ಸಿಂಗ್ ರಾಜಾ ವಾರಿಂಗ್, ಪಂಜಾಬ್ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಪ್ರತಾಪ್ ಸಿಂಗ್ ಬಜ್ವಾ, ಅಮೃತಸರ ಸಂಸದ ಗುರ್ಜೀತ್ ಸಿಂಗ್ ಔಜ್ಲಾ ಮತ್ತು ಪಕ್ಷದ ಇತರ ನಾಯಕರಿದ್ದರು.

    ಇತ್ತೀಚಿಗೆ ಸೆ.9ರಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರವಾಹ ಪೀಡಿತ ಪಂಜಾಬ್‌ಗೆ ಭೇಟಿ ನೀಡಿದ್ದರು. ಈ ವೇಳೆ 1,600 ಕೋಟಿ ರೂ. ಆರ್ಥಿಕ ಸಹಾಯವನ್ನು ಘೋಷಿಸಿದ್ದರು.

    ಧಾರಾಕಾರ ಮಳೆಯಿಂದಾಗಿ ಪಂಜಾಬ್ ಭೀಕರ ಪ್ರವಾಹವನ್ನು ಎದುರಿಸಿದ್ದು, ಪಂಜಾಬ್‌ನ 14 ಜಿಲ್ಲೆಗಳಲ್ಲಿ ತೀವ್ರಹಾನಿಯನ್ನುಂಟು ಮಾಡಿದೆ. ಈವರೆಗೂ 45ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದು, ಸುಮಾರು 2,000 ಗ್ರಾಮಗಳು ಮುಳುಗಡೆಯಾಗಿವೆ. ಇನ್ನೂ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯದಲ್ಲಿ ನಿರಂತರ ಮಳೆಯಿಂದ ಉಂಟಾದ ಹಠಾತ್ ಪ್ರವಾಹ ಹಾಗೂ ಭೂಕುಸಿತದಿಂದಾಗಿ ಅಪಾರ ಪ್ರಮಾಣದ ಹಾನಿಯುಂಟಾಗಿದೆ.ಇದನ್ನೂ ಓದಿ: ಜಿಎಸ್‍ಟಿ ಬಗ್ಗೆ ಅರಿವು ಮೂಡಿಸಲು ಸಮ್ಮೇಳನ ಆಯೋಜಿಸಿ – ಎನ್‍ಡಿಎ ಸಂಸದರಿಗೆ ಮೋದಿ ಸೂಚನೆ

  • ರಾಯಚೂರು | ಧಾರಾಕಾರ ಮಳೆಗೆ ಉಕ್ಕಿಹರಿದ ಹಳ್ಳಗಳು – ಆನೆಹೊಸೂರು ಸೇತುವೆ ಮುಳುಗಡೆ

    ರಾಯಚೂರು | ಧಾರಾಕಾರ ಮಳೆಗೆ ಉಕ್ಕಿಹರಿದ ಹಳ್ಳಗಳು – ಆನೆಹೊಸೂರು ಸೇತುವೆ ಮುಳುಗಡೆ

    ರಾಯಚೂರು: ಜಿಲ್ಲೆಯ ಹಲವೆಡೆ ರಾತ್ರಿ ಸುರಿದ ಜೋರು ಮಳೆಗೆ ಹಳ್ಳ,ಕೊಳ್ಳಗಳು ತುಂಬಿ ಹರಿಯುತ್ತಿವೆ. ಜೊತೆಗೆ ಲಿಂಗಸುಗೂರು (Lingasuguru) ತಾಲೂಕಿನ ಆನೆಹೊಸೂರು (Anehosur) ಸೇತುವೆ ಮುಳುಗಡೆಯಾಗಿದೆ.

    ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಆನೆಹೊಸೂರು ಹಾಗೂ ಜಾಗೀರನಂದಿಹಾಳ ಗ್ರಾಮಗಳ ಮಧ್ಯದ ಸೇತುವೆ ಮುಳುಗಡೆಯಾಗಿದೆ. ಪರಿಣಾಮ ಗ್ರಾಮಸ್ಥರು ಪರದಾಡುವಂತಾಗಿದೆ. ಶಾಲೆಗೆ ಹೋಗುವ ಮಕ್ಕಳನ್ನು ಪೋಷಕರು ಹೆಗಲ ಮೇಲೆ ಹೊತ್ತು ಹಳ್ಳ ದಾಟಿಸುತ್ತಿದ್ದಾರೆ. ಇನ್ನೂ ಮಧ್ಯಂತರ ಪರೀಕ್ಷೆಗಳು ನಡೆಯುತ್ತಿದ್ದು, ಶಾಲಾ-ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ.ಇದನ್ನೂ ಓದಿ: ಬಾಗಲಕೋಟೆ ನಗರದಲ್ಲಿ ಹೆಚ್ಚಾಯ್ತು ಬೀದಿ ನಾಯಿಗಳ ಹಾವಳಿ – ಒಂದೇ ದಿನ 15 ಮಂದಿ ಮೇಲೆ ದಾಳಿ

    ಇಲ್ಲಿನ ನೀರಲಕೆರೆ, ಆನೆಹೊಸೂರು, ಜಾಗೀರನಂದಿಹಾಳ ಗ್ರಾಮಗಳ ಸಂಪರ್ಕ ಕಡಿತವಾಗಿದೆ. ಅಲ್ಲದೇ ಲಿಂಗಸುಗೂರು, ಮುದ್ದೇಬಿಹಾಳಗೆ ತೆರಳುವ ಮಾರ್ಗಗಳು ಬಂದ್ ಆಗಿವೆ. ಜೋರು ಮಳೆ ಬಂದಾಗಲೆಲ್ಲಾ ಹಳ್ಳದ ಸೇತುವೆ ಮುಳುಗಡೆಯಾಗುತ್ತಿದ್ದು, ಸೇತುವೆಯ ಎತ್ತರವನ್ನು ಹೆಚ್ಚಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

  • ರಾಯಚೂರು | ಜಿಲ್ಲೆಯಾದ್ಯಂತ ವರುಣಾರ್ಭಟ – ಧಾರಾಕಾರ ಮಳೆಗೆ ಕೆರೆಯಂತಾದ ರಸ್ತೆಗಳು

    ರಾಯಚೂರು | ಜಿಲ್ಲೆಯಾದ್ಯಂತ ವರುಣಾರ್ಭಟ – ಧಾರಾಕಾರ ಮಳೆಗೆ ಕೆರೆಯಂತಾದ ರಸ್ತೆಗಳು

    ರಾಯಚೂರು: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಗೆ ರಸ್ತೆಗಳು ಕೆರೆಯಂತಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

    ಜಿಲ್ಲೆಯ ದೇವದುರ್ಗ (Devadurga) ಪಟ್ಟಣದ ಪ್ರಮುಖ ರಸ್ತೆಗಳು ಸಂಪೂರ್ಣವಾಗಿ ಜಲಾವೃತಗೊಂಡಿದೆ. ಪರಿಣಾಮ ವಾಹನ ಸವಾರರ ಜೊತೆಗೆ ನಡೆದುಕೊಂಡು ಹೋಗುವವರಿಗೂ ಸಮಸ್ಯೆಯುಂಟಾಗಿದೆ.ಇದನ್ನೂ ಓದಿ: ರಷ್ಯಾದ ಕರಾವಳಿಯಲ್ಲಿ ಮತ್ತೆ ಪ್ರಬಲ ಭೂಕಂಪ – ಸುನಾಮಿ ಆತಂಕ

    ರಸ್ತೆಯಲ್ಲಿ ನಿರ್ಮಾಣವಾಗಿರುವ ದೊಡ್ಡ ಗುಂಡಿಗಳಿಂದಾಗಿ ಮಳೆ ಬಂದರೆ ಸಾಕು ಬೈಕ್ ಸಾವಾರರು ಸಂಕಷ್ಟ ಎದುರಿಸುತ್ತಿದ್ದಾರೆ. ಅದಲ್ಲದೇ ಮಿನಿ ವಿಧಾನಸೌಧ ಕಚೇರಿ ಮುಂಭಾಗದಲ್ಲಿ ನೀರು ನಿಂತ ಪರಿಣಾಮ ಜನರು ಪರದಾಡುತ್ತಿದ್ದಾರೆ. ಇನ್ನೂ ಪಟ್ಟಣದ ಉಪ್ಪಾರ ಓಣಿ, ಆನಂದ ಟಾಕೀಸ್ ರಸ್ತೆ, ಹಳೆ ಬಸ್ ನಿಲ್ದಾಣ ರಸ್ತೆಯಲ್ಲೆಲ್ಲಾ ಚರಂಡಿ ನೀರು ಹರಿದಿದೆ. ಜಿಲ್ಲೆಯ ಲಿಂಗಸುಗೂರು, ಸಿಂಧನೂರು ತಾಲೂಕು ಸೇರಿದಂತೆ ಹಲವೆಡೆ ಭರ್ಜರಿ ಮಳೆಯಾಗಿದೆ.

  • ವಿಜಯಪುರ | ಧಾರಾಕಾರ ಮಳೆಗೆ ನೆಲಕ್ಕುರುಳಿದ ಬೃಹತ್ ಮರ

    ವಿಜಯಪುರ | ಧಾರಾಕಾರ ಮಳೆಗೆ ನೆಲಕ್ಕುರುಳಿದ ಬೃಹತ್ ಮರ

    ವಿಜಯಪುರ: ತಡರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಬೃಹತ್ ಮರವೊಂದು ನೆಲಕ್ಕುರುಳಿದ ಘಟನೆ ನಗರದ ಕೇಂದ್ರ ಬಸ್ ನಿಲ್ದಾಣದಿಂದ ಗಾಂಧಿಚೌಕ್‌ಗೆ  (Gandhi Chowk) ಹೋಗುವ ಮಾರ್ಗದಲ್ಲಿ ನಡೆದಿದೆ.

    ಕಳೆದೆರಡು ದಿನಗಳಿಂದ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಗುರುವಾರ (ಸೆ.11) ತಡರಾತ್ರಿ ಬೃಹತ್ ಮರವೊಂದು ನೆಲಕ್ಕುರುಳಿದೆ. ರಾತ್ರಿ ಧರೆಗುರುಳಿದ ಪರಿಣಾಮ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.ಇದನ್ನೂ ಓದಿ: 4 ಶಂಕಾಸ್ಪದ ಸಾವುಗಳ ತನಿಖೆಗೆ ತಿಮರೋಡಿ ದೂರು, ವಿಠಲಗೌಡ ಆರೋಪವನ್ನು ಎಸ್‌ಐಟಿ ಪರಿಶೀಲಿಸಿ ಕ್ರಮ: ಪರಮೇಶ್ವರ್

    ಮರ ಬಿದ್ದ ರಭಸಕ್ಕೆ ಎರಡು, ಮೂರು ಅಂಗಡಿಗಳು ಜಖಂ ಆಗಿವೆ. ಜೊತೆಗೆ ವಿದ್ಯುತ್ ಕಂಬಗಳಿಗೂ ಹಾನಿಯಾಗಿದ್ದು, ವೈರ್ ಕಡಿತಗೊಂಡಿದೆ.

  • ಬೀದರ್‌ನಲ್ಲಿ ಧಾರಾಕಾರ ಮಳೆ – ಜನಜೀವನ ಸಂಪೂರ್ಣ ಅಸ್ತವ್ಯಸ್ತ

    ಬೀದರ್‌ನಲ್ಲಿ ಧಾರಾಕಾರ ಮಳೆ – ಜನಜೀವನ ಸಂಪೂರ್ಣ ಅಸ್ತವ್ಯಸ್ತ

    ಬೀದರ್: ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ.

    ಬೀದರ್, ಔರಾದ್, ಭಾಲ್ಕಿ, ಹುಮ್ನಾಬಾದ್, ಬಸವಕಲ್ಯಾಣ ಸೇರಿದಂತೆ ಜಿಲ್ಲೆಯಾದ್ಯಂತ ಗುಡುಗು, ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದೆ.ಇದನ್ನೂ ಓದಿ: ಬೆಂಗ್ಳೂರು ಸೇರಿ ಹಲವೆಡೆ ಭಾರೀ ಮಳೆ – ಧರೆಗುರುಳಿದ ಬೃಹತ್ ಮರ

    ರಾತ್ರಿಯಿಡಿ ಸುರಿದ ಮಳೆಯಿಂದಾಗಿ ಗುರುವಾರ (ಸೆ.11) ಬೆಳಿಗ್ಗೆ ಶಾಲಾ – ಕಾಲೇಜುಗಳಿಗೆ ಹೋಗಲು ವಿದ್ಯಾರ್ಥಿಗಳು ಪರದಾಡುವಂತಾಗಿತ್ತು. ಇನ್ನೂ ಕಚೇರಿಗೆ ಹೋಗಲು ಕೂಡ ಜನರು ಹೈರಾಣಾಗಿದ್ದರು. ಹವಾಮಾನ ಇಲಾಖೆಯ ಪ್ರಕಾರ ಜಿಲ್ಲೆಯಲ್ಲಿ ಗುರುವಾರ ಕೂಡ ಭಾರೀ ಮಳೆಯಾಗುವ ಸಾಧ್ಯೆತೆಯಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.