Tag: heavy rain

  • ರಾಜ್ಯದಲ್ಲಿ ಭಾರೀ ಮಳೆ – ಹಾರಿತು ಶೀಟ್, ನೆಲಕ್ಕೆ ಉರುಳಿತು ವಿದ್ಯುತ್ ಕಂಬಗಳು

    ರಾಜ್ಯದಲ್ಲಿ ಭಾರೀ ಮಳೆ – ಹಾರಿತು ಶೀಟ್, ನೆಲಕ್ಕೆ ಉರುಳಿತು ವಿದ್ಯುತ್ ಕಂಬಗಳು

    – ಇನ್ನೂ ಎರಡು ದಿನ ಮಳೆ ಸಾಧ್ಯತೆ
    – ಕೋಟ್ಯಂತರ ಮೌಲ್ಯದ ಬೆಳೆ ನಾಶ

    ಬೆಂಗಳೂರು: ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಬೆಂಗಳೂರು, ಮೈಸೂರು, ಚಿತ್ರದುರ್ಗ, ರಾಮನಗರ ಸೇರಿದಂತೆ ಇಂದು ಕೂಡ ಮಳೆಯಾಗಿದೆ. ಯಾದಗಿರಿಯಲ್ಲಿ ಕೇವಲ ಬಿರುಗಾಳಿಗೆ ಮನೆಯ ಶೀಟ್‍ಗಳು ಹಾರಿ ಹೋಗಿದ್ದು, ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿವೆ.

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಹುಟ್ಟಿಕೊಂಡಿರುವ ಫನಿ ಚಂಡಮಾರುತ ಒಡಿಶಾ ಸಮುದ್ರತೀರವನ್ನು ಪ್ರವೇಶಿಸಿದೆ. ಬಂಗಾಳಕೊಲ್ಲಿಯ ಈಶಾನ್ಯದಿಂದ 950 ಕಿಲೋಮೀಟರ್ ದೂರದಿಂದ ಚಂಡಮಾರುತ ಸಾಗಿ ಬರಲಿದೆ. ಹೀಗಾಗಿ ಆಂಧ್ರಪ್ರದೇಶ, ತಮಿಳುನಾಡು, ಒಡಿಶಾ, ಕೇರಳದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಇದರ ಎಫೆಕ್ಟ್‍ಗೆ ರಾಜ್ಯದಲ್ಲೂ ಹಲವೆಡೆ ಭಾರೀ ಮಳೆಯಾಗುತ್ತಿದೆ.

    ಚಾಮರಾಜನಗರ ಜಿಲ್ಲೆಯ ಹಲವೆಡೆ ಮಳೆಗೆ ಬಾಳೆ, ಕಬ್ಬು, ತೆಂಗು, ಅರಿಶಿಣ ಮತ್ತಿತ್ತರ ಬೆಳೆಗಳು ನಾಶಗೊಂಡು ಕೋಟ್ಯಂತರ ರೂಪಾಯಿ ನಷ್ಟವಾಗಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರದ ಗುಳ್ಳದಪುರ ಗ್ರಾಮದಲ್ಲಿ ಗಾಳಿಗೆ ಕೋಳಿ ಫಾರಂ ಹಾಗೂ ಕುರಿ ಫಾರಂ ಧ್ವಂಸವಾಗಿದೆ. ದಾವಣಗೆರೆ ಜಿಲ್ಲೆಯ ಎಲೆ ಬೇತೂರು, ಪುಟುಗ್ನಾಳ್ ಗ್ರಾಮದಲ್ಲಿ ತೆಂಗು, ಅಡಕೆ ಮರಗಳು ನೆಲಸಮವಾಗಿದ್ದು, ಹತ್ತಾರು ಮನೆಗಳ ಮೇಲ್ಫಾವಣಿಗಳು ಹಾರಿಹೋಗಿವೆ. ಕೊಡಗಿನ ಕುಶಾಲನಗರದ ಕೆಇಬಿ ಮಂಟಿಯ ಮನೆಯೊಂದರ 30 ಶೀಟುಗಳು ಗಾಳಿಗೆ ಹಾರಿ ಪುಡಿಪುಡಿಯಾಗಿವೆ. ಕೊಪ್ಪಳ ಜಿಲ್ಲೆಯಲ್ಲಿ 50ಕ್ಕೂ ಹೆಚ್ಚು ಮನೆಯ ಮೇಲ್ಛಾವಣಿ ಹಾರಿ ಹೋಗಿದ್ದು, ಮೂವರು ಗಾಯಗೊಂಡಿದ್ದಾರೆ.

    ಮೈಸೂರಿನಲ್ಲಿ ಸಂಜೆ ಅರ್ಧ ಗಂಟೆಗೂ ಹೆಚ್ಚು ಸಮಯ ಎಡಬಿಡದೆ ಮಳೆ ಸುರಿದಿದೆ. ದಿಢೀರ್ ಮಳೆಗೆ ಜನಜೀವನ ಅಸ್ತವ್ಯಸ್ಥಗೊಂಡು, ವಾಹನ ಸವಾರರು ಪರದಾಡುವಂತಾಯಿತು. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಕಾಟನಾಯಕನಹಳ್ಳಿ ಗ್ರಾಮದ ಶ್ರೀಪಾರ್ಥಲಿಗೇಶ್ವರ ದೇವಸ್ಥಾನದ ಬಳಿಯ ತೆಂಗಿಮರಕ್ಕೆ ಬೆಂಕಿ ಸಿಡಿಲು ಬಡಿದಿದೆ. ಪರಿಣಾಮ ತೆಂಗಿನ ಮರ ಹೊತ್ತಿ ಉರಿದಿದೆ. ಅಷ್ಟೇ ಅಲ್ಲದೆ ದೇವಸ್ಥಾನದ ಗೋಪುರದಲ್ಲಿರುವ ಬಸವಣ್ಣನ ಮೂರ್ತಿಯ ತಲೆ ಭಾಗ ಪುಡಿ ಪುಡಿಯಾಗಿದೆ.

    ರೇಷ್ಮೆನಗರಿ ರಾಮನಗರ ಜಿಲ್ಲೆಯಾದ್ಯಂತ ಮಳೆರಾಯ ಇಂದು ತಂಪನ್ನೆರೆದಿದ್ದಾನೆ. ರಾಮನಗರ, ಮಾಗಡಿ, ಚನ್ನಪಟ್ಟಣ ಸೇರಿದಂತೆ ವಿವಿಧೆಡೆ ಸುಮಾರು 20 ನಿಮಿಷಕ್ಕೂ ಹೆಚ್ಚು ಕಾಲ ಗುಡುಗು, ಸಿಡಿಲು, ಗಾಳಿ ಸಹಿತ ಜೋರು ಮಳೆಯಾಗಿದೆ. ಬಿಸಿಲಿನಿಂದ ಬಸವಳಿದಿದ್ದ ಜಿಲ್ಲೆಯ ಜನರು ಇಂದು ಸುರಿದ ಮಳೆಯಿಂದ ಖುಷಿಯಾಗಿದ್ದಾರೆ. ಮಳೆಯಿಂದಾಗಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು. ಅಷ್ಟೇ ಅಲ್ಲದೇ ವಾಹನ ಸವಾರರು ರಸ್ತೆಯಲ್ಲಿ ನಿಂತ ಮಳೆ ನೀರಿನಿಂದ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.

    ಬೆಂಗಳೂರಿನ ಮೆಜೆಸ್ಟಿಕ್, ಕೆ.ಆರ್ ಸರ್ಕಲ್, ಟೌನ್ ಹಾಲ್, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಗುಡುಗು ಸಹಿತ ಮಳೆಯಾಗಿದ್ದು, ವಾಹನ ಸವಾರರು ಪರದಾಡಿದ್ದಾರೆ.

    ರಾಮನಗರ, ಮಂಡ್ಯ, ಮೈಸೂರು, ಕೋಲಾರ, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೂ ಎರಡು ದಿನಗಳ ಕಾಲ ಬೆಂಬಿಡದೇ ವರುಣ ಕಾಡಲಿದ್ದಾನೆ ಎಂದು ಪಬ್ಲಿಕ್ ಟಿವಿಗೆ ರಾಜ್ಯ ನೈಸರ್ಗಿಕ ಮತ್ತು ಪ್ರಾಕೃತಿ ವಿಕೋಪ ಇಲಾಖೆಯ ನಿರ್ದೇಶಕ ಶ್ರೀನಿವಾಸ್ ಮಾಹಿತಿ ನೀಡಿದ್ದಾರೆ.

  • 87 ವರ್ಷದ ದಾಖಲೆ ಮುರಿದ ಕೊಡಗು ಮಳೆ: ಮೂರೇ ದಿನದಲ್ಲಿ ಬಿದ್ದಿದ್ದು ಎಷ್ಟು ಗೊತ್ತೆ?

    87 ವರ್ಷದ ದಾಖಲೆ ಮುರಿದ ಕೊಡಗು ಮಳೆ: ಮೂರೇ ದಿನದಲ್ಲಿ ಬಿದ್ದಿದ್ದು ಎಷ್ಟು ಗೊತ್ತೆ?

    ಬೆಂಗಳೂರು: ಕೊಡಗು ಜಿಲ್ಲೆಯಲ್ಲಿ ಆಗಸ್ಟ್ ತಿಂಗಳಿನಲ್ಲಿ ಸುರಿದ ಮಹಾಮಳೆ 87 ವರ್ಷದ ಹಿಂದಿನ ದಾಖಲೆಯನ್ನು ಅಳಿಸಿಹಾಕಿದೆ.

    1931ರಲ್ಲಿ ಆಗಸ್ಟ್ ತಿಂಗಳಿನಲ್ಲಿ ಒಟ್ಟು 1,559 ಮಿ.ಮೀ ಮಳೆಯಾಗಿತ್ತು. ಆದರೆ ಈ ಆಗಸ್ಟ್ ನಲ್ಲಿ 1,675 ಮಿ.ಮೀ(ಆಗಸ್ಟ್ 21ರ ಅಂತ್ಯಕ್ಕೆ) ಮಳೆಯಾಗಿದೆ ಎಂದು ಬೆಂಗಳೂರಿನ ಭಾರತೀಯ ಹವಾಮಾನ ಇಲಾಖೆ(ಐಎಂಡಿ) ತಿಳಿಸಿದೆ. ಇದನ್ನೂ ಓದಿ: ಅನ್ನಾಹಾರವಿಲ್ಲದೇ ಕುಸಿದ ಮನೆಯನ್ನೇ ಕಾವಲು ಕಾಯುತ್ತಿದೆ ಶ್ವಾನ!

    ಇದರಲ್ಲಿ 768 ಮಿ.ಮೀ(45%) ರಷ್ಟು ಮಳೆ ಆಗಸ್ಟ್ 15, 16, 17ರ ಮೂರೇ ದಿನದಲ್ಲಿ ಸುರಿದಿದೆ. ಕೊಡಗಿನಲ್ಲಿ ಭಾರೀ ಪ್ರಮಾಣದಲ್ಲಿ ಭೂ ಕುಸಿತವಾಗಲು ಮಹಾಮಳೆಯೇ ಕಾರಣವಾಗಿದೆ. ಒಂದು ದಿನದಲ್ಲೇ 200 ಮಿ.ಮೀಗಿಂತಲೂ ಜಾಸ್ತಿ ಮಳೆಯಾಗಿದೆ. ಅಷ್ಟೇ ಅಲ್ಲದೇ ನಿರಂತರ ಮೂರು ದಿನ ಮಳೆಯಾದ ಕಾರಣ ಕೊಡಗಿನಲ್ಲಿ ಭಾರೀ ಪ್ರಮಾಣದ ಹಾನಿಯಾಗಿದೆ ಎಂದು ಐಎಂಡಿ ನಿರ್ದೇಶಕಿ ಗೀತಾ ಅಗ್ನಿಹೋತ್ರಿ ತಿಳಿಸಿದ್ದಾರೆ.

    ಆಗಸ್ಟ್ 17 ಶುಕ್ರವಾರ ಒಂದೇ ದಿನ 300 ಮಿ.ಮೀ ಮಳೆಯಾಗಿತ್ತು. ಈ ದಿನವೇ ಸಂಪಾಜೆ ಘಾಟಿ ಪ್ರದೇಶಗಳಾದ ಮದೆನಾಡು, ಜೋಡುಪಾಲದಲ್ಲಿ ಭಾರೀ ಕುಸಿತವಾಗಿ ನದಿಯಂತೆ ನೀರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹರಿದಿತ್ತು. ಇದನ್ನೂ ಓದಿ: ಭಾರೀ ಶಬ್ಧದಿಂದ ಹೆದರಿ ಬಾಣಂತಿ, 2 ತಿಂಗ್ಳ ಮಗುವನ್ನು ಎತ್ತಿಕೊಂಡು ಓಡಿದ್ವಿ- ಜೋಡುಪಾಲದ ಮಹಿಳೆ ಕಣ್ಣೀರು

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರಕ್ಷಣೆಗಾಗಿ ಗೋಗರೆಯುತ್ತಿರುವ 200ಕ್ಕೂ ಅಧಿಕ ಮಂದಿ ಸಂತ್ರಸ್ತರು

    ರಕ್ಷಣೆಗಾಗಿ ಗೋಗರೆಯುತ್ತಿರುವ 200ಕ್ಕೂ ಅಧಿಕ ಮಂದಿ ಸಂತ್ರಸ್ತರು

    ಕೊಡಗು: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮಡಿಕೇರಿ ತಾಲೂಕಿನ ಬದಿಗೆರೆ ಗ್ರಾಮಸ್ಥರು ಅಪಾಯದಲ್ಲಿ ಸಿಲುಕಿದ್ದಾರೆ.

    ಬದಿಗೆರೆ ಗ್ರಾಮಕ್ಕೆ ನದಿ ನೀರು ನುಗ್ಗಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪ್ರಾಣ ಉಳಿಸಿಕೊಳ್ಳಲು ಗುಡ್ಡವನ್ನೇರಿ ಕುಳಿತಿದ್ದಾರೆ. ಆದರೆ ಮಳೆ ಹೆಚ್ಚುತ್ತಿರುವುದರಿಂದ ಗುಡ್ಡವೂ ಸಹ ಕುಸಿಯುವ ಭೀತಿ ಎದುರಾಗಿದೆ. ಗುಡ್ಡದಲ್ಲಿರುವ ಸುಮಾರು 200ಕ್ಕೂ ಹೆಚ್ಚು ಮಂದಿ ರಕ್ಷಣೆಗಾಗಿ ಗೋಗರೆಯುತ್ತಿದ್ದು, ನೆರವಿನ ನಿರೀಕ್ಷೆಯಲ್ಲಿದ್ದಾರೆ.

    ವಿಷಯ ತಿಳಿಯುತ್ತಿದ್ದಂತೆಯೇ ಜಿಲ್ಲಾಡಳಿತವು ಸಂತ್ರಸ್ಥರನ್ನು ಹೆಲಿಕಾಪ್ಟರ್ ಮೂಲಕ ರಕ್ಷಿಸಲು ಮುಂದಾಗಿದೆ. ಜಿಲ್ಲಾಡಳಿತ ಮನವಿ ಮೇರೆಗೆ ಸೇನಾ ಹೆಲಿಕಾಪ್ಟರ್ ಗಳು ರಕ್ಷಣೆಗೆ ಆಗಮಿಸಲಿವೆ. ಜಿಲ್ಲಾಡಳಿತ ಈಗಾಗಲೇ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಿದೆ. ಅಪಾಯದಮಟ್ಟ ಮೀರಿ ಹರಿಯುತ್ತಿರುವ ಕಾವೇರಿ ಹಾಗೂ ಹಾರಂಗಿ ನದಿಯಿಂದಾಗಿ ಹಾರಂಗಿ ಜಲಾಶಯವು ಸಂಪೂರ್ಣ ತುಂಬಿದೆ.

    ಈಗಾಗಲೇ ಜಲಾಶಯದಿಂದ ಹೆಚ್ಚುವರಿಯಾದ 77 ಸಾವಿರ ಕ್ಯೂಸೆಕ್ ನೀರನ್ನು ಹೋರಕ್ಕೆ ಬೀಡಲಾಗಿದೆ. ಜಿಲ್ಲಾಡಳಿತ ನದಿಪಾತ್ರದ ಜನರಿಗೆ ಎಚ್ಚರಿಕೆಯನ್ನು ನೀಡಿದ್ದು, ಹಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ಕಾರ್ಯಪ್ರವೃತ್ತವಾಗಿದೆ. ಇದನ್ನೂ ಓದಿ: ಭೂ ಕುಸಿತದಿಂದ ಕಾಡಿನಲ್ಲಿ ಸಿಲುಕಿದ್ದ 50 ಪ್ರಯಾಣಿಕರ ರಕ್ಷಣೆ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕೊಡಗಿನಲ್ಲಿ ಮತ್ತೆ ಮುಂದುವರಿದ ಮಳೆ: ಭಾಗಮಂಡಲ ಸಂಪೂರ್ಣ ಜಲಾವೃತ

    ಕೊಡಗಿನಲ್ಲಿ ಮತ್ತೆ ಮುಂದುವರಿದ ಮಳೆ: ಭಾಗಮಂಡಲ ಸಂಪೂರ್ಣ ಜಲಾವೃತ

    ಕೊಡಗು: ಕಳೆದೊಂದು ವಾರದಿಂದ ಜಿಲ್ಲೆಯಲ್ಲಿ ಶಾಂತನಾಗಿದ್ದ ವರುಣ ಮಂಗಳವಾರದಿಂದ ಮತ್ತೆ ತನ್ನ ಆರ್ಭಟ ಶುರು ಮಾಡಿದ್ದಾನೆ.

    ಜಿಲ್ಲೆಯಾದ್ಯಂತ ಮಂಗಳವಾರದ ಬೆಳಗ್ಗಿನಿಂದಲೇ ಸಾಧಾರಣವಾಗಿಯೇ ಸುರಿಯುತ್ತಿದ್ದ ಮಳೆ ಸಂಜೆಯಾಗುತ್ತಲೇ ಬಿರುಸುಗೊಂಡಿದ್ದು, ಭಾರೀ ಗಾಳಿಯೊಂದಿಗೆ ಧಾರಾಕಾರವಾಗಿ ಸುರಿಯುತ್ತಿದೆ. ಮಡಿಕೇರಿಯಲ್ಲಿ ರಾತ್ರಿಯಿಡೀ ಎಡೆಬಿಡದೆ ಸುರಿದ ಮಳೆ ಈಗಲೂ ತನ್ನ ಅಬ್ಬರ ಮುಂದುವರಿಸಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.

    ಬ್ರಹ್ಮಗಿರಿ ತಪ್ಪಲಿನಲ್ಲಿ ರಾತ್ರಿಯಿಡೀ ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ಕಾವೇರಿ, ಕನ್ನಿಕೆ ಹಾಗೂ ಸುಜೋತಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ನದಿ ನೀರಿನ ಪ್ರಮಾಣ ಹೆಚ್ಚಾದ್ದರಿಂದ ಭಾಗಮಂಡಲ ತ್ರಿವೇಣಿ ಸಂಗಮ ಮತ್ತೊಮ್ಮೆ ಜಲಾವೃತವಾಗಿದ್ದು, ಭಾಗಮಂಡಲ- ನಾಪೋಕ್ಲು ರಸ್ತೆ ಸಂಪರ್ಕ ಕಡಿತಗೊಂಡಿದೆ.

    ಇದೇ ರೀತಿ ಮಳೆ ಮುಂದುವರಿದರೆ ಮಡಿಕೇರಿ ತಲಕಾವೇರಿ ರಸ್ತೆ ಸಂಪರ್ಕ ಕಡಿತ ಸಾಧ್ಯತೆ ಇದ್ದು, ಜಿಲ್ಲಾಡಳಿತ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿದು ಬಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಬೀದರ್ ನಲ್ಲಿ ಭಾರೀ ಮಳೆ: ಸಂಪರ್ಕ ಕಳೆದುಕೊಂಡು ಒದ್ದಾಡುತ್ತಿದ್ದಾರೆ ಗ್ರಾಮಸ್ಥರು

    ಬೀದರ್ ನಲ್ಲಿ ಭಾರೀ ಮಳೆ: ಸಂಪರ್ಕ ಕಳೆದುಕೊಂಡು ಒದ್ದಾಡುತ್ತಿದ್ದಾರೆ ಗ್ರಾಮಸ್ಥರು

    ಬೀದರ್: ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು ಔರಾದ್ ತಾಲೂಕಿನ ಗ್ರಾಮದಲ್ಲಿ ನಿರ್ಮಾಣ ಹಂತದ ಸೇತುವೆಯ ಪಕ್ಕ ಹಾಕಲಾಗಿದ್ದ ತಾತ್ಕಾಲಿಕ ಸೇತುವೆಯೊಂದು ಕೊಚ್ಚಿ ಹೋಗಿದೆ.

    ನಿಡೋದಾ ಗ್ರಾಮದಲ್ಲಿ ತಾತ್ಕಾಲಿಕವಾಗಿ ನಿರ್ಮಾಣಗೊಂಡಿದ್ದ ಸೇತುವೆ ಕೊಚ್ಚಿ ಹೋದ ಪರಿಣಾಮ 2 ಸಾವಿರಕ್ಕೂ ಹೆಚ್ಚು ಜನ ವಸತಿ ಇರುವ ಗ್ರಾಮ ಈಗ ಸಂಪರ್ಕ ಕಳೆದುಕೊಂಡಿದೆ.

    ನಿಡೋದಾ ಗ್ರಾಮದ ಬಳಿ ಮಂಜ್ರಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸೇತುವೆಯೊಂದನ್ನು ನಿರ್ಮಿಸಲಾಗಿತ್ತು. ಆದರೆ ಜಿಲ್ಲೆಯಾದ್ಯಂತ ಮಳೆ ಹೆಚ್ಚಾಗಿದ್ದರಿಂದ ಮಂಜ್ರಾ ನದಿ ನೀರಿನ ಪ್ರಮಾಣ ಹೆಚ್ಚಾಗಿ ತಡರಾತ್ರಿ ತಾತ್ಕಾಲಿಕ ಸೇತುವೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ.

    ಸುಮಾರು 2000 ಜನವಸತಿ ಹೊಂದಿರುವ ನಿಡೋದಾ ಗ್ರಾಮವು ತಡರಾತ್ರಿಯಿಂದ ಸಂಪರ್ಕ ಕಳೆದುಕೊಂಡಿದೆ. ಈ ಗ್ರಾಮಕ್ಕೆ ಈ ದಾರಿ ಹೊರತು ಪಡಿಸಿ ಯಾವುದೇ ಅನ್ಯ ದಾರಿಗಳಿಲ್ಲದ್ದರಿಂದ ಸಂಚಾರ ಇಲ್ಲದೆ ಗ್ರಾಮಸ್ಥರು ಪರದಾಡುವ ಸ್ಥಿತಿ ಎದುರಾಗಿದೆ.

    ಗ್ರಾಮಸ್ಥರು ಊರಿಂದ ಹೊರಗೆ ಮತ್ತು ಒಳಗೆ ಬಾರದಂತಹ ಅಸಹಾಯಕ ಸ್ಥಿತಿ ಎದುರಾಗಿದೆ. ಗ್ರಾಮಸ್ಥರು ಮಳೆ ಅವಾಂತರದಿಂದ ಒದ್ದಾಡುತ್ತಿದ್ದರೂ, ಇಲ್ಲಿಯವರೆಗೂ ಯಾವುದೇ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿಲ್ಲ. ಇವರೆಲ್ಲರೂ  ಪರಿಷತ್ ಚುನಾವಣೆಯಲ್ಲಿ ಬ್ಯುಸಿ ಆಗಿರುವುದುದರಿಂದ ಸ್ಥಳಕ್ಕೆ ಭೇಟಿ ನೀಡಿಲ್ಲವೆಂದು ತಿಳಿದು ಬಂದಿದೆ.

  • ಚಿತ್ರದುರ್ಗದಲ್ಲಿ ಭಾರೀ ಮಳೆಗೆ ಕೊಚ್ಚಿ ಹೋಯ್ತು ಸೇತುವೆ

    ಚಿತ್ರದುರ್ಗದಲ್ಲಿ ಭಾರೀ ಮಳೆಗೆ ಕೊಚ್ಚಿ ಹೋಯ್ತು ಸೇತುವೆ

    ಚಿತ್ರದುರ್ಗ: ಕೋಟೆನಾಡಿನಲ್ಲಿ ಕಳೆದ 15 ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ 3 ತಿಂಗಳ ಹಿಂದಷ್ಟೇ ನಿರ್ಮಾಣವಾಗಿದ್ದ ಸೇತುವೆಯೊಂದು ಕೊಚ್ಚಿ ಹೋಗಿದೆ.

    ಚಳ್ಳಕೆರೆ ತಾಲೂಕಿನ ಯಲಗಟ್ಟೆ, ಗೊಲ್ಲರಹಟ್ಟಿ ರಸ್ತೆ ಸಂಪರ್ಕ ಕಲ್ಪಿಸುವ ಈ ಸೇತುವೆಯನ್ನು 3 ತಿಂಗಳ ಹಿಂದೆಯಷ್ಟೇ ನಿರ್ಮಾಣ ಮಾಡಲಾಗಿತ್ತು. ಇಂದು ಸೇತುವೆ ಕೊಚ್ಚಿಹೋಗಿದ್ದರಿಂದ ಚೆಕ್ಕೇನಹಳ್ಳಿ-ಬೆಳಗೆರೆ ಹಾದು ಹೋಗುವ ರಸ್ತೆ ಮಾರ್ಗ ಕಡಿತಗೊಂಡಿದೆ.

    ಮಳೆ ನೀರಿನ ರಭಸಕ್ಕೆ ಸೇತುವೆ ಕೊಚ್ಚಿ ಹೋಗಿದ್ದು, ಕಳಪೆ ಕಾಮಗಾರಿ ಮಾಡಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಗುತ್ತಿಗೆದಾರರು ಹಾಗೂ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಹಿಡಿಶಾಪ ಹಾಕುತ್ತಿದ್ದಾರೆ. ಸ್ಥಳಕ್ಕೆ ಆಗಮಿಸಿದ ಶಾಸಕ ರಘುಮೂರ್ತಿ ಸಮಸ್ಯೆಯನ್ನು ಬಗೆಹರಿಸಬೇಕೆಂದು ಆಗ್ರಹಿಸಿದರು.

    10 ವರ್ಷಗಳ ನಂತರ ತುಂಬಿತು ಕೆರೆ: ಕಳೆದ ರಾತ್ರಿ ಸತತ ಮೂರು ಗಂಟೆಗಳ ಕಾಲ ಧಾರಾಕಾರ ಮಳೆ ಸುರಿದ ಪರಿಣಾಮ ರಾಯಭಾಗ ತಾಲೂಕಿನ ಸೌದತ್ತಿ ಗ್ರಾಮದ ಕೆರೆ ಸಂಪೂರ್ಣ ಭರ್ತಿಯಾಗಿದೆ. ಈ ಕೆರೆಯು ಸುಮಾರು 10 ವರ್ಷಗಳಿಂದ ತುಂಬಿರಲಿಲ್ಲ. ಆದರೆ ಈ ವರ್ಷ ಕೇವಲ ಮೂರೇ ಗಂಟೆಯ ಮಳೆಗೆ ಕೆರೆ ತುಂಬಿದ್ದರಿಂದ ಜನ ಸಂತಸಗೊಂಡಿದ್ದಾರೆ.

    20ಕ್ಕೂ ಹೆಚ್ಚು ಮನೆಗಳಿಗೆ ಕೆರೆಯ ನೀರು ನುಗ್ಗಿ ಭಾರೀ ಅವಾಂತರ ಸೃಷ್ಟಿಯಾಗಿದ್ದು, ಇಲ್ಲಿನ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಳೆಯ ನೀರು ಹೊರಹಾಕಲು ಗ್ರಾಮಸ್ಥರು ಪಡಬಾರದ ಪಾಡು ಪಡುತ್ತಿದ್ದಾರೆ.

     

  • ಕಲಬುರಗಿಯಲ್ಲಿ ಧಾರಕಾರ ಮಳೆ: ಭೀಮಾ ನದಿ ಸಂಪೂರ್ಣ ಭರ್ತಿ

    ಕಲಬುರಗಿಯಲ್ಲಿ ಧಾರಕಾರ ಮಳೆ: ಭೀಮಾ ನದಿ ಸಂಪೂರ್ಣ ಭರ್ತಿ

    ಯಾದಗಿರಿ: ಕಲಬುರಗಿಯಲ್ಲಿ ಭಾರೀ ಮಳೆಯಾದ ಹಿನ್ನಲೆಯಲ್ಲಿ ಈಗ ಭೀಮಾ ನದಿಯು ಉಕ್ಕಿ ಹರಿಯುತ್ತಿದೆ. ಯಾದಗಿರಿ ಜಿಲ್ಲೆಯ ಜೀವನಾಡಿಯಾದ ಭೀಮಾ ನದಿ ಈಗ ಸಂಪೂರ್ಣವಾಗಿ ಭರ್ತಿಯಾಗುತ್ತಿದೆ. ಕಳೆದ ವರ್ಷ ಸಂಪೂರ್ಣವಾಗಿ ಬರಗಾಲ ಆವರಿಸಿದ್ದರಿಂದ ಬತ್ತಿದ್ದ ಕೆರೆ, ಹಳ್ಳ-ಕೊಳ್ಳಗಳು ಇದೀಗ ತುಂಬಿ ಹರಿಯುತ್ತಿದ್ದು ನದಿಯ ತಗ್ಗು ಪ್ರದೇಶಗಳೆಲ್ಲ ಜಲಾವೃತಗೊಂಡಿವೆ.

    ಯಾದಗಿರಿ ಭೀಮಾ ನದಿಯಲ್ಲಿರುವ ಶಿವನ ದೇವಾಲಯವು ಜಲಾವೃತಗೊಂಡಿದೆ. ಭೀಮಾ ನದಿಯಲ್ಲಿ ದಿನೇ ದಿನೇ ನೀರಿನ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದ್ದು ವರುಣ ಇನ್ನಷ್ಟು ತನ್ನ ಅಬ್ಬರ ತೋರಿದರೆ ನದಿಯ ಒಡಲು ಸಂಪೂರ್ಣ ಭರ್ತಿಯಾಗಲಿದೆ. ಕಲಬುರಗಿ ಜಿಲ್ಲೆಯ ಸನ್ನತಿ ಬ್ಯಾರೇಜ್‍ನಲ್ಲಿ ಹಿನ್ನೀರು ಹೆಚ್ಚಿನ ಪ್ರಮಾಣದಲ್ಲಿ ಶೇಖರಣೆಯಾಗಿದ್ದರಿಂದ ಹೆಚ್ಚಿನ ಪ್ರಮಾಣದ ನೀರು ಭೀಮಾ ನದಿಯ ಹೊರಗಡೆ ಹರಿಸಲಾಗುತ್ತಿದೆ.

    ಹೀಗಾಗಿ ಯಾದಗಿರಿಯ ಅಡ್ಡಲಾಗಿ ನಿರ್ಮಿಸಲಾಗಿರುವ ಗುರುಸಣಗಿ ಬ್ಯಾರೇಜ್‍ನಲ್ಲಿ ಹದಿನೈದು ಮೀಟರ್ (0.56 ಟಿ.ಎಂ.ಸಿ) ನೀರು ಸಂಗ್ರಹವಾಗಿದ್ದು, ಹೆಚ್ಚಿನ ನೀರನ್ನು 142 ಗೇಟ್ ಮೂಲಕ 60-70 ಸಾವಿರ ಕ್ಯೂಸೆಕ್ ನೀರು ನದಿಗೆ ಹರಿಸಲಾಗುತ್ತಿದೆ. ಇದೇ ರೀತಿ ವರುಣ ಅಬ್ಬರಿಸಿ ನದಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಸಂಗ್ರಹವಾದರೆ ಪ್ರವಾಹ ಎದುರಾಗುವ ಸಾಧ್ಯತೆ ಇದೆ. ಇನ್ನು ನದಿ ಸಂಪೂರ್ಣವಾಗಿ ಮೈದುಂಬಿ ಹರಿಯುತಿರುವುದರಿಂದ ಮುನ್ನಚ್ಚರಿಕೆಯಾಗಿ ನದಿ ಪಕ್ಕಯಿರುವ ಗ್ರಾಮಸ್ಥರಿಗೆ ನದಿಯ ಕಡೆ ತೆರಳದಂತೆ ಕೃಷ್ಣಾ ಭಾಗ್ಯ ಜಲ ನಿಗಮ ಅಧಿಕಾರಿಗಳು ಸೂಚಿಸಿದ್ದಾರೆ.

  • ವಿಧಾನಸೌಧದ ಮುಂಭಾಗ, ಮೆಟ್ರೋ ಅಂಡರ್‍ಪಾಸ್ ಮೇಲಿರುವ ರಸ್ತೆಯಲ್ಲಿ ಭಾರೀ ಬಿರುಕು

    ವಿಧಾನಸೌಧದ ಮುಂಭಾಗ, ಮೆಟ್ರೋ ಅಂಡರ್‍ಪಾಸ್ ಮೇಲಿರುವ ರಸ್ತೆಯಲ್ಲಿ ಭಾರೀ ಬಿರುಕು

    ಬೆಂಗಳೂರು: ನಗರದಲ್ಲಿ ಸುರಿಯುತ್ತಿರುವ ಮಹಾ ಮಳೆಗೆ ವಿಧಾನಸೌಧದ ಮುಂಭಾಗದಲ್ಲಿರುವ ಕಾಂಕ್ರೀಟ್ ರಸ್ತೆ ಬಿರುಕು ಬಿಟ್ಟಿದೆ.

    ವಿಧಾನ ಸೌಧದ ಮುಂಭಾಗ ಮತ್ತು ಅಂಬೇಡ್ಕರ್ ಮೆಟ್ರೋ ನಿಲ್ದಾಣದ ಪಕ್ಕದಲ್ಲಿರುವ ಸಿಮೆಂಟ್ ರಸ್ತೆ ಬಿರುಕು ಬಿಟ್ಟಿದ್ದು ವಾಹನಗಳು ಚಲಿಸಿದಾಗ ಗಢ ಗಢ ಎನ್ನುತ್ತಿದೆ. ಘನವಾಹನಗಳಾದ ಬಸ್, ಲಾರಿ ಬಂದರೆ ರಸ್ತೆ ಸಂಪೂರ್ಣ ಕುಸಿದುಬಿದ್ದಂತೆ ಆಗುತ್ತಿದೆ.

    ರಸ್ತೆ ಕೆಳಭಾಗದಲ್ಲಿ ಮೆಟ್ರೋ ರೈಲಿನ ಅಂಡರಪಾಸ್ ಸಹ ಇದೆ. ಕೂಡಲೇ ಅಧಿಕಾರಿಗಳು ಈಗಲೇ ಎಚ್ಚೆತ್ತುಕೊಳ್ಳದೇ ಇದ್ದರೆ ಮುಂದೆ ದೊಡ್ಡ ಅನಾಹುತವಾಗುವ ಸಾಧ್ಯತೆಯಿದೆ.

     

    https://youtu.be/7geiwdyVck0