Tag: heavy rain

  • ಜಮ್ಮು ಕಾಶ್ಮೀರದಲ್ಲಿ ಮೇಘಸ್ಫೋಟ – 2 ದಿನಗಳಲ್ಲಿ 41 ಮಂದಿ ಸಾವು

    ಜಮ್ಮು ಕಾಶ್ಮೀರದಲ್ಲಿ ಮೇಘಸ್ಫೋಟ – 2 ದಿನಗಳಲ್ಲಿ 41 ಮಂದಿ ಸಾವು

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu Kashmir) ಕಳೆದ ಎರಡು ದಿನಗಳಿಂದ ನಿರಂತರ ಮಳೆಯಿಂದಾಗಿ ಹಲವೆಡೆ ಭಾರೀ ಹಾನಿ ಸಂಭವಿಸಿದೆ. ಕಳೆದ ಎರಡು ದಿನಗಳಲ್ಲಿ 41 ಮಂದಿ ಸಾವನ್ನಪ್ಪಿದ್ದಾರೆ.

    ವೈಷ್ಣೋದೇವಿ ಯಾತ್ರಾ (Vaishno Devi Yatra) ಮಾರ್ಗದಲ್ಲಿ ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ 36ಕ್ಕೆ ಏರಿದೆ. 20 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮತ್ತಷ್ಟು ಜನ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆಯಿದ್ದು, ರಕ್ಷಣಾ ಕಾರ್ಯ ಮುಂದುವರಿದೆ. ವೈಷ್ಣೋದೇವಿ ದೇಗುಲಕ್ಕೆ ಹೋಗುವ ಮಾರ್ಗದ ಅರ್ಧಕುವರಿಯಲ್ಲಿರುವ ಇಂದರ್ಪ್ರಸ್ಥ ಭೋಜನಾಲಯದ ಬಳಿ ಭೂ ಕುಸಿತ ಸಂಭವಿಸಿತ್ತು. ದೋಡಾ ಜಿಲ್ಲೆಯಲ್ಲಿ ಮೇಘಸ್ಫೋಟ ಸಂಭವಿಸಿ ನಾಲ್ವರು ಮೃತರಾಗಿದ್ದಾರೆ.

    Vaishno Devi Landslide

    ನೂರಾರು ಮನೆಗಳು, ಸೇತುವೆಗಳು, ನೀರಿನಲ್ಲಿ ಕೊಚ್ಚಿ ಹೋಗಿವೆ. ಎಲ್ಲಾ ಜಲಾಶಯಗಳು ತುಂಬಿ ತುಳುಕುತ್ತಿದ್ದು ನದಿಗಳಿಗೆ ನೀರು ಬಿಡಲಾಗಿದೆ. ನದಿಪಾತ್ರಗಳು ಮುಳುಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಮೊಬೈಲ್ ಟವರ್‌ಗಳು ಮತ್ತು ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದರಿಂದ ಮೂಲಸೌಕರ್ಯ ತೀವ್ರವಾಗಿ ಹಾನಿಗೊಳಗಾಗಿದೆ. ಇದನ್ನೂ ಓದಿ: ವೈಷ್ಣೋದೇವಿ ಯಾತ್ರಾ ಮಾರ್ಗದಲ್ಲಿ ಮತ್ತೆ ಭೂಕುಸಿತ – ಸಾವಿನ ಸಂಖ್ಯೆ 30ಕ್ಕೆ ಏರಿಕೆ

    ಪಂಜಾಬ್‌ನ ಪ್ರವಾಹ ಪೀಡಿತ ಗ್ರಾಮದಿಂದ 22 ಸಿಆರ್‌ಪಿಎಫ್ ಸಿಬ್ಬಂದಿ ಮತ್ತು ಮೂವರು ನಾಗರಿಕರನ್ನು ಸೇನಾ ಹೆಲಿಕಾಪ್ಟರ್‌ನಲ್ಲಿ ರಕ್ಷಣೆ ಮಾಡಲಾಗಿದೆ. ಸೇನಾ ಹೆಲಿಕಾಪ್ಟರ್ ತೆರಳುತ್ತಲೇ ಇತ್ತ ಯೋಧರು ಆಶ್ರಯ ಪಡೆದಿದ್ದ ಕಟ್ಟಡ ಕೆಲವೇ ಕ್ಷಣಗಳಲ್ಲಿ ಕುಸಿದಿದೆ. ಗುರುದಾಸ್‌ಪುರದ ಕರ್ತಾರಪುರ ಕಾರಿಡಾರ್ ಮುಳುಗಡೆಯಾಗಿದೆ. ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ಬಿಯಾಸ್ ನದಿಯ ಪ್ರವಾಹದ ಆತಂಕ ತರಿಸಿದೆ. ಉತ್ತರಾಖಂಡ್‌ನಲ್ಲಿ ಜೀವಗಂಗೆ, ಯಮುನೆಯ ರುದ್ರತಾಂಡವ ಹೇಳತೀರದಾಗಿದೆ.

    landslides on Vaishno Devi Yatra route 5 killed

    ಜಮ್ಮು ಮತ್ತು ಕಾಶ್ಮೀರದ ಸಿಎಂ ಒಮರ್ ಅಬ್ದುಲ್ಲಾ ಶ್ರೀನಗರದಿಂದ ಜಮ್ಮುವಿಗೆ ಧಾವಿಸಿ ಈ ಪ್ರದೇಶದ ಪರಿಸ್ಥಿತಿಯನ್ನು ವೈಯಕ್ತಿಕವಾಗಿ ಪರಿಶೀಲಿಸಿದ್ದಾರೆ. ಜಮ್ಮು ಪ್ರದೇಶದಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಉಂಟಾದ ಪರಿಸ್ಥಿತಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ವೈಷ್ಣೋದೇವಿ ದೇಗುಲಕ್ಕೆ ಹೋಗುವ ಮಾರ್ಗದಲ್ಲಿ ಭೂಕುಸಿತ; ಐವರು ಸಾವು – ಯಾತ್ರೆ ಸ್ಥಗಿತ

    ಆಂಧ್ರ ಪ್ರದೇಶದಲ್ಲೂ ವರ್ಷಧಾರೆ; ಭಾರೀ ಅವಾಂತ
    ಆಂಧ್ರ ಪ್ರದೇಶದಲ್ಲೂ ವರ್ಷಧಾರೆ ಭಾರಿ ಅವಾಂತರ ಸೃಷ್ಟಿಸಿದೆ. ಕಾಮಾರೆಡ್ಡಿ ರೆಡ್ಡಿ ಜಿಲ್ಲೆಯ ನಿಜಾಮ್ ಸಾಗರದ ಬಳಿ ಬ್ರಿಡ್ಜ್ ಕಾಮಗಾರಿಯ ವಾಟರ್ ಟ್ಯಾಂಕರ್‌ಹೊಳೆಯಲ್ಲಿ ಕೊಚ್ಚಿ ಹೋಗಿದೆ. ಟ್ಯಾಂಕ್ ಏರಿ ಕಾರ್ಮಿಕರು ರಕ್ಷಣೆಗೆ ಅಂಗಲಾಚಿದ್ದಾರೆ.

  • ಬಸವಸಾಗರ ಡ್ಯಾಂಗೆ ಹೆಚ್ಚಿದ ಒಳಹರಿವು – ಉಕ್ಕಿ ಹರಿದ ಕೃಷ್ಣೆ, ಶೀಲಹಳ್ಳಿ ಬ್ರಿಡ್ಜ್ ಮುಳುಗಡೆ

    ಬಸವಸಾಗರ ಡ್ಯಾಂಗೆ ಹೆಚ್ಚಿದ ಒಳಹರಿವು – ಉಕ್ಕಿ ಹರಿದ ಕೃಷ್ಣೆ, ಶೀಲಹಳ್ಳಿ ಬ್ರಿಡ್ಜ್ ಮುಳುಗಡೆ

    ರಾಯಚೂರು: ಮಳೆ ಪ್ರಮಾಣ ಜಾಸ್ತಿಯಾದ ಹಿನ್ನೆಲೆ ಬಸವಸಾಗರ ಜಲಾಶಯಕ್ಕೆ (Basavasagar Dam) ಒಳಹರಿವು ಹೆಚ್ಚಾಗಿದ್ದು, ಕೃಷ್ಣಾ ನದಿ ಉಕ್ಕಿ ಹರಿಯುತ್ತಿದೆ. ಪರಿಣಾಮ ರಾಯಚೂರಿನ (Raichuru) ಲಿಂಗಸುಗೂರು (Lingasuguru) ತಾಲೂಕಿನ ಶೀಲಹಳ್ಳಿ ಸೇತುವೆ ಪುನಃ ಮುಳುಗಡೆಯಾಗಿದೆ.ಇದನ್ನೂ ಓದಿ: ಗಣೇಶ ಚತುರ್ಥಿ – ಕುರುಡುಮಲೆ ವಿನಾಯಕನಿಗೆ ವಿಶೇಷ ಪೂಜೆ, ಅಲಂಕಾರ

    ಎರಡು ದಿನಗಳ ಹಿಂದೆಯಷ್ಟೇ ನದಿಯ ನೀರಿನ ಪ್ರಮಾಣ ಕಡಿಮೆಯಾಗಿ ಸೇತುವೆ ಸಂಚಾರಕ್ಕೆ ಮುಕ್ತವಾಗಿತ್ತು. ಇದೀಗ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಡ್ಯಾಂನಿಂದ 1.55 ಲಕ್ಷ ಕ್ಯೂಸೆಕ್ ನೀರನ್ನು ನದಿಗೆ ರಿಲೀಸ್ ಮಾಡಲಾಗಿದೆ. ಹೀಗಾಗಿ ಶೀಲಹಳ್ಳಿ ಸೇತುವೆ ಮತ್ತೆ ಮುಳುಗಡೆಯಾಗಿದೆ. ಇದರಿಂದ ಲಿಂಗಸುಗೂರು ತಾಲೂಕಿನ ಐದಾರು ಗ್ರಾಮಗಳ ರಸ್ತೆ ಸಂಪರ್ಕ ಕಡಿತವಾಗಿದ್ದು, ಶೀಲಹಳ್ಳಿ, ಹಂಚಿನಾಳ, ಯರಗೋಡಿ ಸಂಪರ್ಕ ಮಾರ್ಗ ಸಂಪೂರ್ಣ ಬಂದ್ ಆಗಿದೆ. ಹೀಗಾಗಿ ಗ್ರಾಮಸ್ಥರು ಲಿಂಗಸುಗೂರಿಗೆ ತೆರಳಲು ಸುಮಾರು 45 ಕಿ.ಮೀ ಸುತ್ತುವರೆದು ಪ್ರಯಾಣಿಸಬೇಕಿದೆ.

    ಹೆಚ್ಚು ಪ್ರಮಾಣದ ನೀರು ನದಿಗೆ ಹರಿದು ಬಂದಿದ್ದರಿಂದ ರೈತರ ಪಂಪ್ ಸೆಟ್‌ಗಳು ನೀರಲ್ಲಿ ಮುಳುಗಡೆಯಾಗಿವೆ. ಜಲಾಶಯಕ್ಕೆ ಸದ್ಯ 1.55 ಲಕ್ಷ ಕ್ಯೂಸೆಕ್ ಒಳಹರಿವು ಇದ್ದು, ಇನ್ನೂ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಭಾರೀ ಪ್ರಮಾಣದ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ನೀರಿನ ಪ್ರಮಾಣ ಹೆಚ್ಚಾಗುತ್ತಿರುವುದರಿಂದ ನದಿ ಪಾತ್ರಕ್ಕೆ ತೆರಳದಂತೆ ಗ್ರಾಮಸ್ಥರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.ಇದನ್ನೂ ಓದಿ: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಉಗ್ರನಿಗೆ ಜೈಲಲ್ಲಿ ಇಡಿ ಡ್ರಿಲ್

  • ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ – ಆ.30ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

    ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ – ಆ.30ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

    ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಆ.30ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ  (IMD) ಮುನ್ಸೂಚನೆ ನೀಡಿದೆ.

    ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 30ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಒಳನಾಡು ಜಿಲ್ಲೆಗಳಲ್ಲಿ ಆ.28ರವರೆಗೆ ಗುಡುಗು, ಗಾಳಿ ಸಹಿತ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.ಇದನ್ನೂ ಓದಿ: ಪ್ರವಾಹದಲ್ಲಿ ಸಿಲುಕಿದ್ದ 22 ಸಿಆರ್‌ಪಿಎಫ್‌ ಸಿಬ್ಬಂದಿ ರಕ್ಷಿಸಿದ ಸೇನಾ ಹೆಲಿಕಾಪ್ಟರ್‌

    ಬೀದರ್ ಜಿಲ್ಲೆಗೆ ಮುಂದಿನ 3 ದಿನ ಯೆಲ್ಲೋ ಅಲರ್ಟ್:
    ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಇಂದು ಕೂಡು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

    ಬೀದರ್, ಔರಾದ್, ಭಾಲ್ಕಿ, ಹುಮ್ನಾಬಾದ್, ಬಸವಕಲ್ಯಾಣ ಸೇರಿದಂತೆ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಅಬ್ಬರದ ಮಳೆಗೆ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಸತತ ಮಳೆಯಿಂದಾಗಿ ಜಮೀನುಗಳು ಜಲಾವೃತಗೊಂಡು, ರಾಶಿಗೆ ಬಂದಿದ್ದ ಬೆಳೆ ಹಾಳಾಗುವ ಭೀತಿಯಲ್ಲಿ ಅನ್ನದಾತರು ಪರದಾಡುವಂತಾಗಿದೆ.ಇದನ್ನೂ ಓದಿ: ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್ – ನನಗೂ ಬೈರತಿ ಬಸವರಾಜ್‌ಗೂ ಸಂಬಂಧವಿಲ್ಲ ಎಂದ ಎ1 ಜಗ್ಗ

  • ಗಡಿಜಿಲ್ಲೆ ಬೀದರ್‌ನಲ್ಲಿ ನಿರಂತರ ಮಳೆ – ನೂರಾರು ಎಕರೆ ಬೆಳೆ ನೀರುಪಾಲು

    ಗಡಿಜಿಲ್ಲೆ ಬೀದರ್‌ನಲ್ಲಿ ನಿರಂತರ ಮಳೆ – ನೂರಾರು ಎಕರೆ ಬೆಳೆ ನೀರುಪಾಲು

    ಬೀದರ್: ಕಳೆದ ಕೆಲ ದಿನಗಳಿಂದ ಗಡಿಜಿಲ್ಲೆ ಬೀದರ್‌ನಲ್ಲಿ (Bidar) ಧಾರಾಕಾರ ಮಳೆಯಾಗುತ್ತಿದ್ದು, ನೂರಾರು ಎಕರೆ ಬೆಳೆ ನೀರುಪಾಲಾಗಿದೆ.

    ಬೀದರ್ ತಾಲೂಕಿನ ಕೊಳ್ಳಾರ ಮತ್ತು ಅಣದೂರು ಗ್ರಾಮದ ಸುತ್ತಮುತ್ತ ನೂರಾರು ಎಕರೆಯಲ್ಲಿ ಬೆಳೆದಿದ್ದ ಸೋಯಾ, ಉದ್ದು, ತೊಗರಿ, ಕಬ್ಬು ಸೇರಿದಂತೆ ವಿವಿಧ ಬೆಳೆಗಳು ಸಂಪೂರ್ಣವಾಗಿ ಜಲಾವೃತಗೊಂಡಿವೆ.ಇದನ್ನೂ ಓದಿ:ಬಿಹಾರ ಚುನಾವಣೆಗೂ ಮುನ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ

    ಜಮೀನಿನಲ್ಲಿ 3 ರಿಂದ 4 ಅಡಿ ನೀರು ನಿಂತಿದ್ದು, ಇಡೀ ಜಮೀನು ಅಕ್ಷರಶಃ ಕೆರೆಯಂತಾಗಿವೆ. ಪರಿಣಾಮ ನೀರಿನಲ್ಲಿ ಮುಳುಗಡೆಯಾದ ಬೆಳೆಗಳು ಕೊಳೆತು ಹೋಗಿವೆ. ಒಂದು ವಾರದ ಹಿಂದೆಯೇ ಜಿಲ್ಲೆಯಲ್ಲಿ ದಾಖಲೆಯ ಮಳೆಯಾಗಿತ್ತು. ಈವರೆಗೂ ಮಳೆ ಕಡಿಮೆಯಾಗದೇ ಜಿಲ್ಲೆಯ ಜನರು ಪರದಾಡುವಂತಾಗಿದೆ.

    ಸಾಲ ಮಾಡಿ, ಸಾವಿರಾರು ರೂಪಾಯಿ ಹಣ ಖರ್ಚು ಮಾಡಿ ಬಿತ್ತನೆ ಮಾಡಿದ್ದ ಬೆಳೆ, ಮಳೆಯಿಂದಾಗಿ ಸಂಪೂರ್ಣ ನಾಶವಾಗಿದೆ. ಇದರಿಂದ ರೈತರು ಕಣ್ಣೀರು ಹಾಕುತ್ತಿದ್ದು, ಯಾವ ಶಾಸಕರು, ಅಧಿಕಾರಿಗಳು ನಮಗೆ ಸ್ಪಂದಿಸುವ ಕೆಲಸ ಮಾಡುತ್ತಿಲ್ಲ. ಇನ್ಶೂರೆನ್ಸ್ ಕಟ್ಟಿದ್ರು ಯಾವುದೇ ಪ್ರಯೋಜನವಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.ಇದನ್ನೂ ಓದಿ: ಶಾಲಾ ಕಟ್ಟಡ ಕುಸಿದು ಮೂವರು ವಿದ್ಯಾರ್ಥಿಗಳಿಗೆ ಗಾಯ – ಆಸ್ಪತ್ರೆಗೆ ಮಧು ಬಂಗಾರಪ್ಪ ಭೇಟಿ

  • ಗದಗ | ಬೆಳೆ ಹಾನಿ ಪ್ರದೇಶಗಳಿಗೆ ಹೆಚ್.ಕೆ ಪಾಟೀಲ್ ಭೇಟಿ – ರೈತರಿಗೆ ಪರಿಹಾರದ ಭರವಸೆ

    ಗದಗ | ಬೆಳೆ ಹಾನಿ ಪ್ರದೇಶಗಳಿಗೆ ಹೆಚ್.ಕೆ ಪಾಟೀಲ್ ಭೇಟಿ – ರೈತರಿಗೆ ಪರಿಹಾರದ ಭರವಸೆ

    ಗದಗ: ನಿರಂತರ ಮಳೆಯಿಂದ ಬೆಳೆ ಹಾನಿಯಾದ ಪ್ರದೇಶಗಳಿಗೆ ಗದಗ (Gadag) ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಕೆ ಪಾಟೀಲ್ (H K Patil) ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ಗದಗ ತಾಲೂಕಿನ ಬಿಂಕದಕಟ್ಟಿ ಭಾಗದಲ್ಲಿ ಹೆಸರು ಹಾಗೂ ಮೆಕ್ಕೆಜೋಳ ಬೆಳೆ ಹಾನಿಯಾಗಿತ್ತು. ಬಿಂಕದಕಟ್ಟಿ ರೈತ ಶ್ರೀನಿವಾಸ್ ಇಟಗಿ ಅವರ 10 ಎಕ್ರೆ ಜಮೀನಿನಲ್ಲಿ ಬೆಳೆದ ಹೆಸರು ಬೆಳೆ ಸಂಪೂರ್ಣ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಸಚಿವರು ಬೆಳೆಹಾನಿ ವೀಕ್ಷಣೆ ನಡೆಸಿ ಪರಿಹಾರದ ಭರವಸೆ ನೀಡಿದರು. ಇದನ್ನೂ ಓದಿ: ಡಿಕೆಶಿ ಆರ್‌ಎಸ್‌ಎಸ್ ಗೀತೆ ಹಾಡಿದ್ದನ್ನು ಸ್ವಾಗತಿಸುತ್ತೇವೆ: ಅಶ್ವಥ್ ನಾರಾಯಣ್

    ಈ ಸಂದರ್ಭದಲ್ಲಿ ಅಧಿಕಾರಿಗಳಿಗೆ ನಿಖರ ಸಮೀಕ್ಷೆ ನಡೆಸಿ, ಹಾನಿಗೊಳಗಾದ ಪ್ರತಿ ಎಕರೆಯ ಲೆಕ್ಕವನ್ನು ದಾಖಲಿಸುವಂತೆ ಸೂಚನೆ ನೀಡಿದರು. ರೈತರ ಕಷ್ಟವನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ಅವರಿಗೆ ಸರ್ಕಾರದಿಂದ ಎಲ್ಲಾ ರೀತಿಯ ಸಹಾಯ ದೊರೆಯಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆಗೆ ಶಾಸಕ ಯತ್ನಾಳ್ ಆಕ್ಷೇಪ

    ಗದಗ ಜಿಲ್ಲೆಯಲ್ಲಿ ಆ.1 ರಿಂದ ಆ.18 ವರೆಗೆ ವಾಡಿಕೆ ಮಳೆ 46.9 ಮೀ.ಮೀ ಆಗಬೇಕಿತ್ತು. ಆದ್ರೆ 140.2 ರಷ್ಟು ಮಳೆ ಆಗುವ ಮೂಲಕ 198.9% ರಷ್ಟು ಅಧಿಕ ಮಳೆಯಾಗಿದೆ. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ 94,884 ಹೆಕ್ಟೇರ್ ಬೆಳೆ ಹಾನಿಗೀಡಾಗಿದೆ. ಇದರಲ್ಲಿ ಹೆಸರು ಬೆಳೆ 67,533 ಹೆಕ್ಟೇರ್ ನಷ್ಟು ಹಾನಿಯಾಗಿದೆ ಎಂದು ಪ್ರಾಥಮಿಕ ಸಮೀಕ್ಷೆ ಮೂಲಕ ಅಂದಾಜಿಸಲಾಗಿದೆ. ಇನ್ನು ಸಮೀಕ್ಷಾಕಾರ್ಯ ನಡೆದಿದೆ ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು. ಇದನ್ನೂ ಓದಿ: ಪ್ರೀತ್ಸೆ ಪ್ರೀತ್ಸೆ ಎಂದು ವಿದ್ಯಾರ್ಥಿನಿಯ ಹಿಂದೆ ಬಿದ್ದು, ಕೊಲೆ ಬೆದರಿಕೆ – ಪಾಗಲ್ ಪ್ರೇಮಿ ಅರೆಸ್ಟ್

    ಈ ವೇಳೆ ಎಡಿಸಿ ದುರಗೇಶ್ ಕೆ.ಆರ್, ಎಸಿ ಗಂಗಪ್ಪ, ತಹಶೀಲ್ದಾರ್ ಶ್ರೀನಿವಾಸ್ ಕುಲಕರ್ಣಿ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಯ್ಯ ಕೆ, ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕ ಶೈಲೇಂದ್ರ ಬಿರಾದಾರ ಸೇರಿದಂತೆ ಅನೇಕ ಅಧಿಕಾರಿಗಳು, ರೈತರು ಉಪಸ್ಥಿತರಿದ್ದರು.

  • ಮುಂಬೈನಲ್ಲಿ ನಿಲ್ಲದ ವರುಣಾರ್ಭಟ – ಬಾಲಿವುಡ್ ನಟ, ನಟಿಯರ ಮನೆಗಳು ಜಲಾವೃತ

    ಮುಂಬೈನಲ್ಲಿ ನಿಲ್ಲದ ವರುಣಾರ್ಭಟ – ಬಾಲಿವುಡ್ ನಟ, ನಟಿಯರ ಮನೆಗಳು ಜಲಾವೃತ

    – ನಟ ಅಮಿತಾಬ್ ಬಚ್ಚನ್, ಕಾಜೋಲ್, ರಾಣಿ ಮುಖರ್ಜಿ ಮನೆಗೆ ಜಲದಿಗ್ಬಂಧನ

    ಮುಂಬೈ: ಮಹಾನಗರಿ ಮುಂಬೈನಲ್ಲಿ ಕಳೆದು ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಖ್ಯಾತ ಬಾಲಿವುಡ್ ನಟ, ನಟಿಯರ ಮನೆ ಜಲಾವೃತಗೊಂಡಿವೆ. ಬುಧವಾರ ಕೂಡ ಮುಂಬೈನಲ್ಲಿ ಭಾರೀ ಮಳೆಯಾಗಿದ್ದು, ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಅಪಾರ ಪ್ರಮಾಣದ ಹಾನಿಯುಂಟಾಗಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ.

    ಧಾರಾಕಾರ ಮಳೆಯಿಂದಾಗಿ ಬಾಲಿವುಡ್ ಸೆಲೆಬ್ರೆಟಿಗಳ ಮನೆಗೂ ನೀರು ನುಗ್ಗಿದೆ. ಅಮಿತಾಬ್ ಬಚ್ಚನ್, ಅಜಯ್ ದೇವಗನ್, ಸನ್ನಿ ಡಿಯೋಲ್, ಪ್ರಿಯಾಂಕಾ ಚೋಪ್ರಾ ಸೇರಿದಂತೆ ಹಲವರ ಮನೆಗಳಿಗೆ ನೀರು ನುಗ್ಗಿ ಅವಾಂತರ ಉಂಟಾಗಿದೆ.ಇದನ್ನೂ ಓದಿ: Video: ‘ಪಬ್ಲಿಕ್‌ ಟಿವಿ’ ಜೊತೆ ಅನನ್ಯಾ ಭಟ್‌ ಬಗ್ಗೆ ಸುಜಾತಾ ಭಟ್‌ ರಿಯಾಕ್ಷನ್‌

    ಈ ಕುರಿತು ವ್ಲಾಗರ್ ಓರ್ವ ವಿಡಿಯೋ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಜುಹುವಿನಲ್ಲಿರುವ ಅಮಿತಾಬ್ ಬಚ್ಚನ್ ಅವರ ಎರಡನೇ ಮನೆಯಾದ `ಪ್ರತೀಕ್ಷಾ’ದ ಹೊರಗೆ ಕೆಸರು ತುಂಬಿಕೊಂಡಿದೆ. ಸ್ವತಃ ಅಮಿತಾಬ್ ಬಚ್ಚನ್ ಅವರೇ ವೈಪರ್‌ನಿಂದ ನೆಲ ಒರೆಸುತ್ತಿದ್ದರು ಎಂದು ಹೇಳಲಾಗುತ್ತಿದ್ದು, ಎಷ್ಟೇ ಶ್ರೀಮಂತರಾಗಿದ್ದರೂ, ಮುಂಬೈ ಮಳೆಯಿಂದ ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹಲವರು ಕಾಮೆಂಟ್ ಮಾಡಿದ್ದಾರೆ.

    ಇನ್ನೂ ರಾಜ್ಯದಲ್ಲಿಯೂ ಮಳೆ ಅಬ್ಬರ ಜೋರಾಗಿದ್ದು, ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿ ಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಇದರಿಂದ ಜಮಖಂಡಿ-ಮೀರಜ್ ರಾಜ್ಯ ಹೆದ್ದಾರಿ ಬಂದ್ ಆಗಿದೆ. ಗೋಕಾಕ್ ನಗರದ ನದಿ ತೀರದ ಪ್ರದೇಶದಲ್ಲಿ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಲೋಳಸೂರ ಸೇತುವೆ ಜಲಾವೃತಗೊಂಡಿದ್ದು, ಮಹಾರಾಷ್ಟ್ರದ ಜತ್ತ ಜಾಂಬೋಟಿ ರಾಜ್ಯ ಹೆದ್ದಾರಿ ಸಂಪರ್ಕ ಕಡಿತಗೊಳಿಸಲಾಗಿದೆ.

    ಹಾವೇರಿ ಜಿಲ್ಲೆ ಮತ್ತು ಮಲೆನಾಡು ಭಾಗದಲ್ಲಿ ನಿರಂತರ ಮಳೆ ಹಿನ್ನೆಲೆ ವರದಾ ನದಿ ಮೈದುಂಬಿ ಹರಿಯುತ್ತಿದೆ. ನದಿಯ ದಂಡೆಯಲ್ಲಿರೋ ಈಶ್ವರನ ದೇವಸ್ಥಾನ ಜಲದಿಗ್ಬಂಧನವಾಗಿದೆ. ಗಡಿಜಿಲ್ಲೆ ಬೀದರ್‌ನಲ್ಲಿ ನಿರಂತರವಾಗಿ ಮಹಾಮಳೆ ಹಾಗೂ ಕಾರಂಜ ಜಲಾಶಯದಿಂದ ಅಪಾರ ಪ್ರಮಾಣದ ನೀರು ಮಾಂಜ್ರಾನದಿಗೆ ಬಿಡುಗಡೆ ಮಾಡಲಾಗಿದೆ. ಐತಿಹಾಸಿಕ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ನೀರಿನಲ್ಲಿ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಧಾರವಾಡ ಜಿಲ್ಲೆಯಲ್ಲಿ ಮಳೆ ಆಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಈ ಮಧ್ಯೆ, ಯೂರಿಯಾ ಗೊಬ್ಬರಕ್ಕಾಗಿ ಕೊಪ್ಪಳದಲ್ಲಿ ರೈತರನ್ನು ನಿಯಂತ್ರಿಸಲು ಪೊಲೀಸರು ಸುಸ್ತಾಗಿದ್ದಾರೆ.ಇದನ್ನೂ ಓದಿ: ಧರ್ಮಸ್ಥಳ ಕೇಸಲ್ಲಿ ಯೂಟ್ಯೂಬರ್‌ಗಳಿಗೆ ಫಾರಿನ್ ಫಂಡ್ – ಪರಿಶೀಲನೆಗೆ ಮುಂದಾದ ಇ.ಡಿ

  • ನಿರಂತರ ಮಳೆಯಿಂದ ಜೋಗ ಜಲಪಾತಕ್ಕೆ ಜೀವಕಳೆ – ಫಾಲ್ಸ್ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ

    ನಿರಂತರ ಮಳೆಯಿಂದ ಜೋಗ ಜಲಪಾತಕ್ಕೆ ಜೀವಕಳೆ – ಫಾಲ್ಸ್ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ

    ಶಿವಮೊಗ್ಗ: ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ (Jog Falls) ಜೀವಕಳೆ ಬಂದಿದ್ದು, ಫಾಲ್ಸ್ ಸೌಂದರ್ಯ ಕಂಡು ಪ್ರವಾಸಿಗರು ಮನಸೋತಿದ್ದಾರೆ.ಇದನ್ನೂ ಓದಿ: ಬೆಂಗಳೂರಿನಲ್ಲಿ ಹೊಸ ಆ್ಯಪಲ್ ಕಚೇರಿ – ತಿಂಗಳಿಗೆ 6.3 ಕೋಟಿ ರೂ. ಬಾಡಿಗೆ

    ನಿರಂತರ ಮಳೆಯಿಂದಾಗಿ ಲಿಂಗನಮಕ್ಕಿ (Linganamakki) ಜಲಾಶಯದ ಮೂಲಕ ಶರಾವತಿ ನದಿಗೆ (Sharavathi River) ನೀರು ಹರಿದುಬಂದಿದ್ದು, ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿರುವ ಜೋಗ ಜಲಪಾತದ ಸೌಂದರ್ಯ ಇಮ್ಮಡಿಯಾಗಿದೆ. ಜಲಪಾತ ಧುಮ್ಮಿಕ್ಕಿ ಹರಿಯುತ್ತಿದ್ದು, ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ.‌

    ಜಲಪಾತದ ರಾಜ, ರಾಣಿ, ರೋರರ್ ಹಾಗೂ ರಾಕೆಟ್ ಜಲಧಾರೆಗಳು ಭೋರ್ಗರೆಯುತ್ತಿದ್ದು, ಫಾಲ್ಸ್ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ ಆಗಿದ್ದಾರೆ.ಇದನ್ನೂ ಓದಿ: ಯಲ್ಲಾಪುರದ ಬೀಗಾರ ಗ್ರಾಮದಲ್ಲಿ ಭೂಕುಸಿತ

  • ವರುಣಾರ್ಭಟಕ್ಕೆ ತತ್ತರಿಸಿದ ಮುಂಬೈ – ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ, ರೆಡ್ ಅಲರ್ಟ್ ಘೋಷಣೆ

    ವರುಣಾರ್ಭಟಕ್ಕೆ ತತ್ತರಿಸಿದ ಮುಂಬೈ – ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ, ರೆಡ್ ಅಲರ್ಟ್ ಘೋಷಣೆ

    -ಈವರೆಗೆ ಮಳೆ ಅವಾಂತರದಿಂದ 6 ಮಂದಿ ಸಾವು, 100ಕ್ಕೂ ಹೆಚ್ಚು ಜನ ಸ್ಥಳಾಂತರ

    ಮುಂಬೈ: ಕಳೆದ 3 ದಿನಗಳಿಂದ ವಾಣಿಜ್ಯ ನಗರಿ ಮುಂಬೈನಲ್ಲಿ (Mumbai) ವರುಣಾರ್ಭಟ (Heavy Rain) ಜೋರಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಜೊತೆಗೆ ವಿಮಾನ, ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಇಂದು ಕೂಡ (ಆ.19) ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

    ಮುಂಬೈನಲ್ಲಿ ಧಾರಾಕಾರ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ನದಿಯಂತೆ ಹರಿಯುತ್ತಿದೆ. ಶಾಲಾ-ಕಾಲೇಜು, ಆಫೀಸ್‌ಗಳಿಗೆ ರಜೆ ಘೋಷಿಸಲಾಗಿದೆ. ಜನರು ಮನೆಯಿಂದ ಹೊರಗೆ ಬರೋದಕ್ಕೂ ಯೋಚಿಸುವಂತೆ ಮಳೆ ಸುರಿಯುತ್ತಿದ್ದು, ಬಹುತೇಕ ಪ್ರದೇಶಗಳಲ್ಲಿ ಅವಾಂತರ ಸೃಷ್ಟಿಯಾಗಿದೆ.ಇದನ್ನೂ ಓದಿ: Asia Cup 2025: ಟೀಂ ಇಂಡಿಯಾ ಪ್ರಕಟ- ಸೂರ್ಯಕುಮಾರ್‌ ನಾಯಕ, ಕನ್ನಡಿಗ ವರುಣ್‌ಗೆ ಸ್ಥಾನ

    ಸೋಮವಾರ ರಾತ್ರಿಯಿಡೀ ನಿರಂತರವಾಗಿ ಮಳೆಯಾಗಿದ್ದು, ಮುಂಬೈ ತತ್ತರಿಸಿದೆ. ಕಳೆದ 24 ಗಂಟೆಗಳಲ್ಲಿ ಮುಂಬೈನ ಹಲವಾರು ಭಾಗಗಳಲ್ಲಿ 200 ಮಿ.ಮೀಗಿಂತ ಹೆಚ್ಚು ಮಳೆಯಾಗಿದ್ದು, ಪೂರ್ವ ಉಪನಗರ ವಿಖ್ರೋಲಿಯಲ್ಲಿ 255.5 ಮಿ.ಮೀಗಿಂತ ಹೆಚ್ಚು ಮಳೆಯಾಗಿದೆ. ಮಳೆ, ಮಂಜಿನಿಂದಾಗಿ ರೈಲು ಸಂಚಾರಕ್ಕೆ ತೊಡಕು ಉಂಟಾಗಿದೆ. ಅಂಧೇರಿಯಲ್ಲಿ ರೈಲ್ವೆ ಅಂಡರ್‌ಪಾಸ್ ಮುಳುಗಡೆಯಾಗಿದೆ. ಪನ್ವೆಲ್‌ನ ಅಟಲ್ ಸೇತು ಹೆದ್ದಾರಿಯಲ್ಲಿ ಮೊಣಕಾಲುದ್ದ ನೀರು ನಿಂತಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. 250 ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, 100ಕ್ಕೂ ಹೆಚ್ಚು ಬಸ್ ಮಾರ್ಗಗಳನ್ನು ಬದಲಿಸಲಾಗಿದೆ.

    ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಳೆ, ಪ್ರವಾಹ ಪರಿಸ್ಥಿತಿ ಪರಿಶೀಲಿಸಿದ್ದಾರೆ. ಹವಾಮಾನ ಇಲಾಖೆ, ಶೈಕ್ಷಣಿಕ ಸಂಸ್ಥೆಗಳು ಹಾಗೂ ವಿಪತ್ತು ನಿರ್ವಹಣಾ ತಂಡದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿರುವಂತೆ ಸಚಿವರಿಗೆ, ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈಗಾಗಲೇ ಅಗತ್ಯ ಪ್ರದೇಶಗಳಲ್ಲಿ ನಾಗರಿಕರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ. ಅದಲ್ಲದೇ ಆ.21ರ ನಡುವೆ ರಾಜ್ಯದ ಹಲವಾರು ಭಾಗಗಳಲ್ಲಿ ಅತೀ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ. ಹೀಗಾಗಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಿ, ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಹೆಚ್ಚಿನ ಆದ್ಯತೆ ವಹಿಸಬೇಕು ಎಂಬ ಸೂಚನೆ ನೀಡಲಾಗಿದೆ.

    ಇನ್ನೂ ಮುಂಬೈನಲ್ಲಿ ಭಾರೀ ಮಳೆ ಹಿನ್ನೆಲೆ ಪುಣೆ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದ್ದು, ಮುಂಬೈ, ಥಾಣೆ, ಪಾಲ್ಘರ್, ರಾಯಗಢ ಮತ್ತು ಪುಣೆಯ ಘಾಟ್ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ 60 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಹವಾಮಾನ ಇಲಾಖೆ ಎಚ್ಚರಿಸಿದೆ. ಈಗಾಗಲೇ ಕೊಂಕಣ ಪ್ರದೇಶದ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ಮಳೆಗೆ 4 ಲಕ್ಷ ಹೆಕ್ಟೇರ್ ಭೂಮಿಯಲ್ಲಿ ಬೆಳೆ ನಾಶವಾಗಿದೆ. ಸುಮಾರು 800 ಹಳ್ಳಿಗಳ ಮೇಲೆ ಮಳೆ ವ್ಯತಿರಿಕ್ತ ಪರಿಣಾಮ ಬೀರಿದೆ.ಇದನ್ನೂ ಓದಿ: ಎಸ್‌ಸಿ ಒಳಮೀಸಲಾತಿ ಜಾರಿಗೆ ವಿಶೇಷ ಸಭೆ; 101 ಜಾತಿಗಳಿಗೂ ನ್ಯಾಯ ಕೊಡಿ: ವಿಜಯೇಂದ್ರ ಆಗ್ರಹ

  • ತುಂಗಭದ್ರಾ ಜಲಾಶಯದಿಂದ 1.15 ಲಕ್ಷ ಕ್ಯೂಸೆಕ್ ನೀರು ರಿಲೀಸ್ – ಕಂಪ್ಲಿ ಸೇತುವೆ ಮುಳುಗಡೆ

    ತುಂಗಭದ್ರಾ ಜಲಾಶಯದಿಂದ 1.15 ಲಕ್ಷ ಕ್ಯೂಸೆಕ್ ನೀರು ರಿಲೀಸ್ – ಕಂಪ್ಲಿ ಸೇತುವೆ ಮುಳುಗಡೆ

    – ಬಳ್ಳಾರಿ – ಗಂಗಾವತಿ ಸಂಪರ್ಕ ಕಡಿತ

    ಬಳ್ಳಾರಿ: ತುಂಗಭದ್ರಾ ಜಲಾಶಯಕ್ಕೆ (Tungabhadra Dam) ಒಳ ಹರಿವು ಹೆಚ್ಚಳವಾಗಿದ್ದರಿಂದ ಜಲಾಶಯದಿಂದ ನದಿಗೆ 1,17,057 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.

    ತುಂಗಭದ್ರಾ ನದಿ ಪಾತ್ರದಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಸದ್ಯ ತುಂಗಭದ್ರಾ ಜಲಾಶಯಕ್ಕೆ 1,15,722 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಅಪಾರ ಪ್ರಮಾಣದ ನೀರು ಹರಿದು ಬರ್ತಿರೋದ್ರಿಂದ ಜಲಾಶಯದಿಂದ ನದಿಗೆ 1,17,057 ಕ್ಯೂಸೆಕ್ ನೀರು ರಿಲೀಸ್ ಮಾಡಲಾಗಿದೆ.

    ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ರಿಲೀಸ್ ಮಾಡಿರುವುದರಿಂದ ಬಳ್ಳಾರಿ-ಗಂಗಾವತಿ ಸಂಪರ್ಕ ಕಲ್ಪಿಸುವ ಕಂಪ್ಲಿ ಸೇತುವೆ ಮುಳುಗಡೆಯಾಗಿದ್ದು, ಬಳ್ಳಾರಿ-ಗಂಗಾವತಿ ಸಂಪರ್ಕ ಕಡಿತಗೊಂಡಿದೆ. ಮತ್ತೊಂದೆಡೆ ಕಂಪ್ಲಿ ಪಟ್ಟಣದ ನದಿ ತೀರದ ಮೀನುಗಾರರ ಮನೆಗಳಿಗೆ ನೀರು ನುಗ್ಗುವ ಭೀತಿ ಎದುರಾಗಿದೆ. ಮುಂಜಾಗ್ರತಾ ಕ್ರಮವಾಗಿ ಎರಡೂ ಬದಿಯಲ್ಲಿ ಬ್ಯಾರಿಕೇಡ್ ಹಾಕಿ ಪೊಲೀಸರ ನಿಯೋಜನೆ ಮಾಡಲಾಗಿದ್ದು, ನದಿ ಪಾತ್ರದ ಜನ, ಜಾನುವಾರು ನದಿ ತೀರಕ್ಕೆ ತೆರಳದಂತೆ ಟಿಬಿ ಬೋರ್ಡ್ ಎಚ್ಚರಿಕೆ ನೀಡಿದೆ.

  • ಹಿಮಾಚಲ ಪ್ರದೇಶದಲ್ಲಿ ಮಳೆ ಅವಾಂತರ – ಈವರೆಗೂ 260ಕ್ಕೂ ಅಧಿಕ ಮಂದಿ ಸಾವು

    ಹಿಮಾಚಲ ಪ್ರದೇಶದಲ್ಲಿ ಮಳೆ ಅವಾಂತರ – ಈವರೆಗೂ 260ಕ್ಕೂ ಅಧಿಕ ಮಂದಿ ಸಾವು

    ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಮೇಘಸ್ಫೋಟ, ಭೂಕುಸಿತ, ಪ್ರವಾಹದಿಂದಾಗಿ ಈವರೆಗೂ 260ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. 31 ಸಾವಿರಕ್ಕೂ ಹೆಚ್ಚು ಮನೆಗಳು, ಅಂಡಿಗಳು, ಗುಡಿಸಲುಗಳು ಹಾನಿಗೊಳಗಾಗಿವೆ.

    2 ಸಾವಿರಕ್ಕೂ ಅಧಿಕ ರಸ್ತೆಗಳು ಕೊಚ್ಚಿಹೋಗಿದ್ದು, ಸಂಪರ್ಕ ಕಡಿತ ಗೊಂಡಿದೆ. 2,500ಕ್ಕೂ ಹೆಚ್ಚು ಕುಡಿಯುವ ನೀರಿನ ಸರಬರಾಜು ಯೋಜನೆಗಳಿಗೆ ಹಾನಿ ಆಗಿದೆ. 1,145 ವಿದ್ಯುತ್ ಸರಬರಾಜು ಘಟಕಗಳಿಗೂ ಹಾನಿಯಾಗಿದೆ. ಹಲವು ಪ್ರದೇಶಗಳಲ್ಲಿ ಕತ್ತಲೆ ಆವರಿಸಿದ್ದು, ಜಮ್ಮು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಎರಡು ಭಾರಿ ಮೇಘಸ್ಫೋಟ ಸಂಭವಿಸಿದೆ.ಇದನ್ನೂ ಓದಿ: ಒಂದೇ ತಿಂಗಳಲ್ಲಿ ಬರೋಬ್ಬರಿ 18 ಕೆಜಿ ತೂಕ ಇಳಿಸಿಕೊಂಡ ಹನಿ ಸಿಂಗ್

    ಹಠಾತ್ ಪ್ರವಾಹದಿಂದ ಮನೆಗಳು, ಕಟ್ಟಡಗಳು, ಮೂಲಸೌಕರ್ಯಗಳು ಕೊಚ್ಚಿಕೊಂಡು ಹೋಗಿವೆ. ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಭಾರತೀಯ ಸೇನೆ ಮತ್ತು ಸ್ಥಳೀಯ ಪೊಲೀಸರಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

    ಮುಂಬೈನಲ್ಲಿ ಕಳೆದ 3 ದಿನಗಳಿಂದ ಭಾರೀ ಮಳೆಯಾಗ್ತಿದೆ. ರಸ್ತೆಗಳಲ್ಲಿ ನೀರು ನದಿಯಂತೆ ಹರಿಯುತ್ತಿದ್ದು, ವಾಹನ ಸಂಚಾರಕ್ಕೆ ತೊಡಕುಂಟಾಗಿದೆ. ಹಲವೆಡೆ ಟ್ರಾಫಿಕ್ ಜಾಮ್‌ನಿಂದ ಜನರು ಹೈರಾಣಾಗಿದ್ದು, ಮುಂಬೈನ ಉಪನಗರಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಮಳೆಯಿಂದ ನಾನಾ ಅವಾಂತರಗಳೂ ಸೃಷ್ಟಿಯಾಗಿದ್ದು, ಶಾಲಾ ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ.ಇದನ್ನೂ ಓದಿ: ಉಪರಾಷ್ಟ್ರಪತಿ ಚುನಾವಣೆ- ಸಿ.ಪಿ.ರಾಧಾಕೃಷ್ಣನ್‌ಗೆ ಜೆಡಿಯು ಬೆಂಬಲ