Tag: Heavy rains

  • ದೆಹಲಿಯಲ್ಲಿ ಭಾರೀ ಮಳೆ – ರಸ್ತೆಗಳಿಗೆ ನುಗ್ಗಿದ ನೀರು, ವಿಮಾನ ಕಾರ್ಯಾಚರಣೆಗೂ ಅಡ್ಡಿ

    ದೆಹಲಿಯಲ್ಲಿ ಭಾರೀ ಮಳೆ – ರಸ್ತೆಗಳಿಗೆ ನುಗ್ಗಿದ ನೀರು, ವಿಮಾನ ಕಾರ್ಯಾಚರಣೆಗೂ ಅಡ್ಡಿ

    ನವದೆಹಲಿ: ದೆಹಲಿ ಮತ್ತು ಸುತ್ತಮುತ್ತಲಿನ (Delhi NCR) ಪ್ರದೇಶದಲ್ಲಿ ಸುರಿದ ಭಾರೀ ಮಳೆಯ ಪರಿಣಾಮ ಹಲವಾರು ಪ್ರದೇಶಗಳಲ್ಲಿ ವ್ಯಾಪಕ ನೀರು ನಿಂತಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. ಅಲ್ಲದೇ ದೆಹಲಿ ವಿಮಾನ ನಿಲ್ದಾಣದಲ್ಲಿಯೂ (Delhi Airport) ವಿಮಾನಗಳ ಕಾರ್ಯಾಚರಣೆಯಲ್ಲಿ ಸಮಸ್ಯೆಯಾಗಿ 209 ನಿರ್ಗಮನ ಮತ್ತು 43 ಆಗಮನದಲ್ಲಿ ವಿಳಂಬವಾಗಿದೆ.

    ನಿರಂತರ ಮಳೆಯಿಂದಾಗಿ ನೋಯ್ಡಾ ಮತ್ತು ಗಾಜಿಯಾಬಾದ್‌ಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಮಳೆಯಿಂದಾಗಿ ಪ್ರಗತಿ ಮೈದಾನ, ಡಿಫೆನ್ಸ್ ಕಾಲೋನಿ ಮತ್ತು ಪ್ರೀತ್ ವಿಹಾರ್ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ವ್ಯಾಪಕ ಜಲಾವೃತ ಮತ್ತು ಸಂಚಾರ ದಟ್ಟಣೆ ಉಂಟಾಗಿದೆ. ಇದನ್ನೂ ಓದಿ: ರಾಷ್ಟ್ರಪತಿಗಳಿಗೆ ಬಂದ ರಹಸ್ಯ ಪತ್ರದಿಂದ ಭಾರತ, ಚೀನಾ ಸಂಬಂಧ ಸುಧಾರಣೆ!

    ರಾಜಧಾನಿಯ ಹಲವಾರು ಪ್ರಮುಖ ಮಾರ್ಗಗಳಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಗಿತ್ತು. ಡಿಎನ್‌ಡಿ ಫ್ಲೈವೇ, ಮಥುರಾ ರಸ್ತೆ, ವಿಕಾಸ್ ಮಾರ್ಗ, ಐಎಸ್‌ಬಿಟಿ, ಗೀತಾ ಕಾಲೋನಿ ಮತ್ತು ರಾಜಾರಾಮ್ ಕೊಹ್ಲಿ ಮಾರ್ಗ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ ಸಂಚಾರ ನಿಧಾನಗತಿಯಲ್ಲಿ ಸಾಗಿತು. ಇದನ್ನೂ ಓದಿ: ಉತ್ತರಾಖಂಡದ ರುದ್ರಪ್ರಯಾಗ, ಚಮೋಲಿಯಲ್ಲಿ ಮೇಘಸ್ಫೋಟ – ಹಲವರು ನಾಪತ್ತೆ ಶಂಕೆ

    ಬದರ್ಪುರದಿಂದ ಆಶ್ರಮದವರೆಗೆ ವಾಹನಗಳ ಉದ್ದನೆಯ ಸಾಲುಗಳು ಸಾಲುಗಟ್ಟಿ ನಿಂತಿದ್ದರಿಂದ ಕಚೇರಿ ಪ್ರಯಾಣಿಕರು ಮತ್ತು ಶಾಲಾ ಬಸ್‌ಗಳು ಸಾಕಷ್ಟು ವಿಳಂಬವಾದವು. ಇದನ್ನೂ ಓದಿ: ಇಂದೇ ಲೋಕಸಭೆ ಚುನಾವಣೆ ನಡೆದರೆ ಎನ್‌ಡಿಎ‌ 324 ಸ್ಥಾನ ಗೆಲ್ಲುವ ಸಾಧ್ಯತೆ

  • ಉತ್ತರ ಸಿಕ್ಕಿಂನಲ್ಲಿ ಭಾರೀ ಭೂಕುಸಿತ – ದುರ್ಘಟನೆಯಲ್ಲಿ ಮೂವರು ಸೈನಿಕರು ಬಲಿ, 6 ಸೈನಿಕರು ಮಿಸ್ಸಿಂಗ್

    ಉತ್ತರ ಸಿಕ್ಕಿಂನಲ್ಲಿ ಭಾರೀ ಭೂಕುಸಿತ – ದುರ್ಘಟನೆಯಲ್ಲಿ ಮೂವರು ಸೈನಿಕರು ಬಲಿ, 6 ಸೈನಿಕರು ಮಿಸ್ಸಿಂಗ್

    ಗ್ಯಾಂಗ್‌ಟಕ್‌: ಈಶಾನ್ಯ ರಾಜ್ಯಗಳಲ್ಲಿ ಮಳೆಯ ಆರ್ಭಟ ಜೋರಾಗಿದೆ. ಈ ನಡುವೆ ಉತ್ತರ ಸಿಕ್ಕಿಂನಲ್ಲಿ (North Sikkim) ನಿರಂತರ ಮಳೆಯಿಂದಾಗಿ ಮಿಲಿಟರಿ ಶಿಬಿರಗಳಿರುವ‌ ಛಾತೆನ್‌ನಲ್ಲಿ (Landslide at Chaten) ಭೂಕುಸಿತ ಸಂಭವಿಸಿದ್ದು, ಮೂವರು ಸೈನಿಕರು ದುರ್ಮರಣಕ್ಕೀಡಾಗಿದ್ದಾರೆ.

    ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ದುರ್ಘಟನೆ ಸಂಭವಿಸಿದ್ದು, ನಾಲ್ವರನ್ನು ರಕ್ಷಣೆ ಮಾಡಲಾಗಿದೆ. ಇನ್ನೂ 6 ಮಂದಿ ಸೈನಿಕರು (Soldiers) ನಾಪತ್ತೆಯಾಗಿದ್ದಾರೆ. ನಾಪತ್ತೆಯಾದ ಸೈನಿಕರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಇದನ್ನೂ ಓದಿ: ಉತ್ತರ ಸಿಕ್ಕಿಂನಲ್ಲಿ ಭಾರೀ ಭೂಕುಸಿತ – ದುರ್ಘಟನೆಯಲ್ಲಿ ಮೂವರು ಸೈನಿಕರು ಬಲಿ, 6 ಸೈನಿಕರು ಮಿಸ್ಸಿಂಗ್

    ಇದುವರೆಗಿನ ಕಾರ್ಯಾಚರಣೆಯಲ್ಲಿ ಮೃತಪಟ್ಟ ಸೈನಿಕರಾದ ಹವ್ ಲಖ್ವಿಂದರ್ ಸಿಂಗ್, ಲ್ಯಾನ್ಸ್ ನಾಯಕ್ ಮುನೀಶ್ ಠಾಕೂರ್ ಮತ್ತು ಪೋರ್ಟರ್ ಅಭಿಷೇಕ್ ಲಖಾಡ ಅವರ ಮೃತದೇಹಗಳು ಪತ್ತೆಯಾಗಿವೆ. ರಕ್ಷಿಸಲಾದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಪ್ರಕೃತಿಯಿಂದಲೇ ಕೈಬೀಸಿ ಕರೆಯೋ ನೈನಿತಾಲ್‌ಗೆ ಬರೋ ಪ್ರವಾಸಿಗರ ಸಂಖ್ಯೆ ಕುಸಿತ – ಯಾಕೆ?

    ಸಿಕ್ಕಿಂನಲ್ಲಿ ನಿರಂತರ ಮಳೆಯಿಂದ ಮತ್ತಷ್ಟು ಭೂಕುಸಿತವಾಗುತ್ತಿದ್ದು, ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ ಎಂದು ಸೇನೆ ಕಳವಳ ವ್ಯಕ್ತಪಡಿಸಿದೆ. ಈ ಬೆನ್ನಲ್ಲೇ ಸಂಭಾವ್ಯ ಭೂಕುಸಿತ ಪ್ರದೇಶಗಳಲ್ಲಿರುವ ಸ್ಥಳೀಯರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಿದೆ. ಇದನ್ನೂ ಓದಿ: ಅಸ್ಸಾಂ | ಹಠಾತ್‌ ಆಗಿ ಹೆಚ್ಚಿದ ಪ್ರವಾಹ – ಸಂಕಷ್ಟದಲ್ಲಿ  ಸಿಲುಕಿದ್ದ 14 ಮಂದಿಯನ್ನು ರಕ್ಷಿಸಿದ ವಾಯುಪಡೆ

  • ವಾಯುಭಾರ ಕುಸಿತದ ಎಫೆಕ್ಟ್; ತಮಿಳುನಾಡಿನಾದ್ಯಂತ ಭಾರೀ ಮಳೆ, ಪ್ರವಾಹ ಮುನ್ಸೂಚನೆ!

    ವಾಯುಭಾರ ಕುಸಿತದ ಎಫೆಕ್ಟ್; ತಮಿಳುನಾಡಿನಾದ್ಯಂತ ಭಾರೀ ಮಳೆ, ಪ್ರವಾಹ ಮುನ್ಸೂಚನೆ!

    ಚೆನ್ನೈ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕಳೆದ 2-3 ದಿನಗಳಿಂದ ತಮಿಳುನಾಡಿನ (TamilNadu) ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಕೆಲ ಜಿಲ್ಲೆಗಳಿಗೆ ಇಂದು ರೆಡ್‌ ಮತ್ತು ಯೆಲ್ಲೋ ಅಲರ್ಟ್‌ (Red And Yellow Alert) ಘೋಷಣೆ ಮಾಡಲಾಗಿದೆ. ಈ ನಡುವೆ ಕೆಲ ಜಿಲ್ಲೆಗಳಿಗೆ ಪ್ರವಾಹ ಮುನ್ಸೂಚನೆಯನ್ನೂ ನೀಡಲಾಗಿದ್ದು, ರಕ್ಷಣಾ ಸಿಬ್ಬಂದಿ ನಿಗಾ ವಹಿಸಿದ್ದಾರೆ.

    ತಂಜಾವೂರು, ತಿರುವರೂರು, ನಾಗಪಟ್ಟಣಂ ಮತ್ತು ಮೈಲಾಡುತುರೈ ಜಿಲ್ಲೆಗಳಲ್ಲಿ ರಸ್ತೆಗಳು ಜಲಾವೃತವಾಗಿದ್ದು ವಾಹನ ಸಂಚಾರಕ್ಕೆ ಅಡ್ಡಿಯುಂಟುಮಾಡಿದೆ. ಇದನ್ನೂ ಓದಿ: ಬೆಂಗಳೂರು| ಗಂಡನನ್ನು ಬಿಟ್ಟು ತನ್ನ ಜೊತೆ ಇರುವಂತೆ ಒತ್ತಾಯ – ಒಪ್ಪದಿದ್ದಕ್ಕೆ ವಿವಾಹಿತ ಮಹಿಳೆ ಕೊಂದು ಪ್ರಿಯಕರ ಆತ್ಮಹತ್ಯೆ

    ಮಳೆಯ ಅಬ್ಬರದಿಂದಾಗಿ (Heavy Rains) ತೂತುಕುಡಿಯಲ್ಲಿ ಥಾಮಿರಬರಣಿ ನದಿಯಲ್ಲಿ ಉಬ್ಬರವಿಳಿತ ಹೆಚ್ಚಾಗುತ್ತಿದ್ದು, ಶ್ರೀವೈಕುಂಟಂ ಮತ್ತು ಎರಲ್‌ಗೆ ಪ್ರವಾಹ ಮುನ್ಸೂಚನೆ ನೀಡಲಾಗಿದೆ. ಮತ್ತೊಂದೆಡೆ ಚೆನ್ನೈನಲ್ಲಿ ಪೂಂಡಿ ಅಣೆಕಟ್ಟಿನಿಂದ ಇದ್ದಕ್ಕಿದ್ದಂತೆ 12,000 ಕ್ಯುಸೆಕ್‌ ಹೆಚ್ಚುವರಿ ನೀರು ಹರಿಸಲಾಗುತ್ತಿದ್ದು, ಇದರಿಂದ ಜಲಾಶಯಗಳ ಸಮೀಪವಿರುವ ರೆಡ್‌ಹಿಲ್ಸ್ ಮತ್ತು ಚೆಂಬರಂಬಾಕ್ಕಂ ಪ್ರದೇಶಗಳಿಗೆ ಪ್ರವಾಹದ ಎಚ್ಚರಿಕೆ ನೀಡಲಾಗಿದೆ. ಅಲ್ಲದೇ ತಿರುನಲ್ವೇಲಿ ಮತ್ತು ತೆಂಕಶಿಯಲ್ಲಿ ಮಳೆ ಹಾನಿ ಮುಂದುವರಿದಿದೆ.

    ಕಳೆದ 24 ಗಂಟೆಯಲ್ಲಿ ರಾಮನಾಥಪುರಂ ಜಿಲ್ಲೆಯ ತೊಂಡಿ ಮತ್ತು ತಿರುವಡನೈ ಜಿಲ್ಲೆಗಳಲ್ಲಿ ಕ್ರಮವಾಗಿ 5 ಮತ್ತು 4 ಸೆಂ.ಮೀ. ಮಳೆಯಾಗಿದೆ. ಮಧುರೈ, ದಿಂಡಿಗಲ್ ಮತ್ತು ಥೇಣಿ ಭಾಗಗಳಲ್ಲಿ 1 ರಿಂದ 2 ಸೆಂ.ಮೀ. ಮಳೆಯಾಗಿದೆ. ತಂಜಾವೂರಿನ ಮಂಜಲಾರಿನಲ್ಲಿ 6.1 ಸೆಂ.ಮೀ ನಷ್ಟು ಮಳೆಯ ಪ್ರಮಾಣ ದಾಖಲಾಗಿದೆ. ಇನ್ನೂ ಕಂಡಿಯೂರು ಮತ್ತು ಸಾತನೂರು ಸೇರಿದಂತೆ ಇತರ ಪ್ರದೇಶಗಳಲ್ಲಿ ಮನೆ ಗೋಡೆಗಳು ಕುಸಿದಿದ್ದು, ಅಪಾರ ಪ್ರಮಾಣದ ಆಸ್ತಿ ಪಾಸ್ತಿ ಹಾನಿಯಾಗಿದೆ. ಇದನ್ನೂ ಓದಿ: `ಒಂದು ದೇಶ ಒಂದು ಚುನಾವಣೆ’, ಪ್ರಧಾನಿ ಮೋದಿಯವರ ದಿಟ್ಟ ನಿರ್ಧಾರ: ಬೊಮ್ಮಾಯಿ

    ತಿರುವಳ್ಳೂರು, ಚೆನ್ನೈ, ಕಾಂಚೀಪುರಂ, ಚೆಂಗಲ್ಪಟ್ಟು, ವಿಲ್ಲುಪುರಂ, ಕಡಲೂರು, ಮೈಲಾಡುತುರೈ, ನಾಗಪಟ್ಟಿಣಂ, ತಿರುವರೂರು, ತಂಜಾವೂರು, ಪುದುಕೊಟ್ಟೈ, ಶಿವಗಂಗಾ, ರಾಮನಾಥಪುರಂ, ಮಧುರೈ, ಥೇಣಿ, ವಿರುಧುನಗರ ಸೇರಿದಂತೆ ಹಲವು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಮಳೆಯ ಆರ್ಭಟ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ಇದನ್ನೂ ಓದಿ: `ಒಂದು ದೇಶ ಒಂದು ಚುನಾವಣೆ’ – ಪ್ರಾದೇಶಿಕ ಪಕ್ಷಗಳನ್ನು ಮುಗಿಸಲು ಬಿಜೆಪಿ ಪ್ಲ್ಯಾನ್‌ – ಡಿಕೆಶಿ

  • ಭಾರೀ ಮಳೆಯಿಂದ ಆಲಮಟ್ಟಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು – ಜನರಲ್ಲಿ ಹರ್ಷವೋ ಹರ್ಷ

    ಭಾರೀ ಮಳೆಯಿಂದ ಆಲಮಟ್ಟಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು – ಜನರಲ್ಲಿ ಹರ್ಷವೋ ಹರ್ಷ

    ವಿಜಯಪುರ: ನೆರೆ ರಾಜ್ಯ ಮಹಾರಾಷ್ಟ್ರದಲ್ಲಿ (Maharashtra) ಭಾರೀ ಮಳೆಯಾಗುತ್ತಿದೆ. ಅದರಂತೆ ಕೃಷ್ಣಾನದಿ ಉಗಮಸ್ಥಾನ ಮಹಾಬಲೇಶ್ವರದಲ್ಲೂ ಭಾರೀ ಮಳೆಯಾಗಿದ್ದು, ಆಲಮಟ್ಟಿ ಜಲಾಶಯಕ್ಕೆ (Almatti Dam) ಒಳಹರಿವು ಹೆಚ್ಚಾಗಿದೆ.

    ಶುಕ್ರವಾರದಿಂದ (ಜೂ.8) ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಆರಂಭವಾಗಿದೆ. ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯದಲ್ಲಿ 2,578 ಕ್ಯೂಸೇಕ್ ಒಳಹರಿವು ದಾಖಲಾಗಿದೆ. ಇದರಿಂದ ಕೃಷ್ಣಾ ನದಿ (Krishna River) ಪಾತ್ರದ ಜನರಲ್ಲಿ ಸಂತಸ ಮನೆ ಮಾಡಿದೆ. ಕಳೆದ ವರ್ಷ ಜೂನ್ ಕಳೆದರೂ ಒಳಹರಿವು ಇರಲಿಲ್ಲ. ಈ ವರ್ಷ ಜೂನ್ ಮೊದಲ ವಾರದಲ್ಲೇ ಒಳಹರಿವು ಆರಂಭವಾದ ಕಾರಣ ಕೃಷ್ಣಾ ನದಿ ಪಾತ್ರದ ಜನರಲ್ಲಿ ಸಂತಸ ಮೂಡಿದೆ. ಇದನ್ನೂ ಓದಿ: Exclusive: ಮುಂದಿನ ತಿಂಗಳಿಂದ ತೃತೀಯ ಲಿಂಗಿಗಳಿಗೆ ಗೃಹಲಕ್ಷ್ಮಿ ಹಣ – ಅರ್ಜಿ ಸಲ್ಲಿಕೆ ಯಾವಾಗಾ, ಹೇಗೆ?

    ಜಿಲ್ಲೆಯಾದ್ಯಂತ ತಡರಾತ್ರಿ ಧಾರಾಕಾರ ಮಳೆ:
    ವಿಜಯಪುರ ಜಿಲ್ಲೆಯ ಹಲವೆಡೆ ಶುಕ್ರವಾರ ತಡರಾತ್ರಿ ಧಾರಾಕಾರ ಮಳೆ ಸುರಿದಿದೆ. ಇದರಿಂದ ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿದೆ. 15ಕ್ಕೂ ಅಧಿಕ ಮನೆಗಳಿಗೆ ಮಳೆ ನೀರು ನುಗ್ಗಿದ್ದು, ಮಳೆಯ ಆರ್ಭಟಕ್ಕೆ ಜನರು ಕಂಗಾಲಾಗಿದ್ದಾರೆ. ಮನೆಯಿಂದ ನೀರು ಹೊರಹಾಕಲು ಜನರ ಹರಸಾಹಸ ಪಡುವಂತಾಗಿದೆ. ನಿನ್ನೆ ತಡರಾತ್ರಿ 1 ಗಂಟೆಗಳ ಕಾಲ ಸತತವಾಗಿ ಸುರಿದ ಮಳೆಯಿಂದ ಈ ಆವಾಂತರ ಸೃಷ್ಟಿಯಾಗಿದೆ.

    ಕರಾವಳಿಯಲ್ಲಿ ಮುಂದಿನ 15 ದಿನ ಮಳೆ:
    ಇನ್ನೂ ರಾಜ್ಯದಲ್ಲಿ ದಾವಣಗೆರೆ, ಬೆಳಗಾವಿ, ಚಿತ್ರದುರ್ಗ, ಧಾರವಾಡ, ದಕ್ಷಿಣ ಕನ್ನಡ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಮಳೆಯ ಅರ್ಭಟ ಮುಂದುವರಿದಿದೆ. ಉಡುಪಿ , ಉತ್ತರಕನ್ನಡ ಜಿಲ್ಲೆಗಳಿಗೆ ಭಾರೀ ಮಳೆ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. 30-40 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಮುಂದಿನ 15 ದಿನ ಕರಾವಳಿ ಭಾಗದಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಇದನ್ನೂ ಓದಿ: NCP ನಾಯಕ ಪ್ರಫುಲ್‌ ಪಟೇಲ್‌ಗೆ ಬಿಗ್‌ ರಿಲೀಫ್‌ – 180 ಕೋಟಿ ರೂ. ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಇಡಿ ಆದೇಶ ರದ್ದು!

  • ಬ್ರೆಜಿಲ್‌ನಲ್ಲಿ ಹೆಚ್ಚಿದ ಪ್ರವಾಹ ತೀವ್ರತೆ – ಸಾವಿನ ಸಂಖ್ಯೆ 78ಕ್ಕೆ ಏರಿಕೆ, 105 ಮಂದಿ ನಾಪತ್ತೆ!

    ಬ್ರೆಜಿಲ್‌ನಲ್ಲಿ ಹೆಚ್ಚಿದ ಪ್ರವಾಹ ತೀವ್ರತೆ – ಸಾವಿನ ಸಂಖ್ಯೆ 78ಕ್ಕೆ ಏರಿಕೆ, 105 ಮಂದಿ ನಾಪತ್ತೆ!

    – 1,15,000ಕ್ಕೂ ಹೆಚ್ಚು ಜನರ ಸ್ಥಳಾಂತರ, ಕೆಲವೆಡೆ ಹಸಿವಿನಿಂದ ಬಳಲುತ್ತಿರುವ ಮಕ್ಕಳು

    ರಿಯೊ ಗ್ರಾಂಡೆ ಡೊ ಸುಲ್: ದಕ್ಷಿಣ ಬ್ರೇಜಿಲ್ ನಲ್ಲಿ ಭಾರೀ ಮಳೆಗೆ ಪ್ರವಾಹವೇ (Brazil Floods) ಉಂಟಾಗಿದೆ. ಪ್ರವಾಹದ ತೀವ್ರತೆಗೆ ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಬ್ರೆಜಿಲ್‌ನ ದಕ್ಷಿಣ ರಾಜ್ಯವಾದ ರಿಯೊ ಗ್ರಾಂಡೆ ಡೊ ಸುಲ್‌ನಲ್ಲಿ ಉಂಟಾದ ಪ್ರವಾಹಕ್ಕೆ ಸಿಕ್ಕಿ ಸುಮಾರು 105 ಮಂದಿ ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    1,15,000ಕ್ಕೂ ಹೆಚ್ಚು ಜನ ಸ್ಥಳಾಂತರಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕುಸಿದ ಮನೆಗಳು, ಸೇತುವೆಗಳು ಮತ್ತು ರಸ್ತೆಗಳ ಅವಶೇಷಗಳ ಕೆಳಗೆ ಸಿಲುಕಿರುವವರನ್ನು ಪತ್ತೆಹಚ್ಚಲು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. 3,000ಕ್ಕೂ ಹೆಚ್ಚು ಸೈನಿಕರು (Rescue Official), ಅಗ್ನಿಶಾಮಕ ಸಿಬ್ಬಂದಿ ಮತ್ತು ಇತರ ರಕ್ಷಕರಿಂದ ರಕ್ಷಣಾ ಕಾರ್ಯಚರಣೆ ನಡೆಯುತ್ತಿದೆ. ನೀರು, ವಿದ್ಯುತ್ ಇಲ್ಲದೆ ಮನೆಗಳಲ್ಲಿ ಸಿಲುಕಿರುವ ಜನರ ರಕ್ಷಣೆ ಮಾಡಲಾಗುತ್ತಿದೆ. ಇದರೊಂದಿಗೆ ಸೇನಾ ಆಸ್ಪತ್ರೆ ಸ್ಥಾಪಿಸಿ ಜನರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

    ಪ್ರವಾಹದಿಂದಾಗಿ ಹಲವೆಡೆ ಭೂಕುಸಿತ ಉಂಟಾಗಿ ರಸ್ತೆಗಳು ಬಂದ್‌ ಆಗಿವೆ. ರಿಯೊ ಗ್ರಾಂಡೆ ಡೊ ಸುಲ್ ಹೆಚ್ಚು ಪರಿಣಾಮ ಬೀರಿದೆ. ಈ ನಡುವೆ ಡಾಟ್‌ಕಾಂ ಎಂಬ ಕಂಪನಿಯ ಕಟ್ಟಡದಲ್ಲಿ ಕೆಲವರು ಸಿಲುಕಿಕೊಂಡು ಸಮಸ್ಯೆಗೀಡಾಗಿದ್ದಾರೆ. ಕಟ್ಟಡದಲ್ಲಿರುವ ಕೆಲವರು, ಮಕ್ಕಳು ಹಸಿವಿನಿಂದ ಬಳಲುತ್ತಿದ್ದಾರೆ. ದುರಂತದ ಹವಾಮಾನ ಘಟನೆಯ ನಂತರ ಈ ಪ್ರದೇಶದಲ್ಲಿ ಗವರ್ನರ್ ಎಡ್ವರ್ಡೊ ಲೀಟ್ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ ಎಂದು ತಿಳಿದುಬಂದಿದೆ.

    ನಾವು ಇತಿಹಾಸದಲ್ಲಿ ಅತ್ಯಂತ ಕೆಟ್ಟ ದುರಂತವನ್ನು ಎದುರಿಸುತ್ತಿದ್ದೇವೆ. ಅಲ್ ಜಜೀರಾ ವರದಿ ಮಾಡಿದಂತೆ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಗವರ್ನರ್ ಲೀಟ್ ತಿಳಿಸಿದ್ದಾರೆ.‌

  • ತಾಂಜಾನಿಯಾದಲ್ಲಿ ಭಾರೀ ಮಳೆ, ಪ್ರವಾಹ – 155 ಮಂದಿ ಸಾವು

    ತಾಂಜಾನಿಯಾದಲ್ಲಿ ಭಾರೀ ಮಳೆ, ಪ್ರವಾಹ – 155 ಮಂದಿ ಸಾವು

    ಡೋಡೋಮಾ: ತಾಂಜಾನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ ಮಳೆಯಾಗುತ್ತಿದ್ದು, ಪ್ರವಾಹ ಮತ್ತು ಭೂಕುಸಿತದಿಂದ ಜನತೆ ಕಂಗೆಟ್ಟಿದ್ದಾರೆ. ದೇಶದಲ್ಲಿ ಇದುವರೆಗೂ 155 ಜನರು ಸಾವಿಗೀಡಾಗಿದ್ದು, 236 ಮಂದಿ ಗಾಯಗೊಂಡಿದ್ದಾರೆ.

    ಪೂರ್ವ ಆಫ್ರಿಕಾದಾದ್ಯಂತ (East Africa) ತೀವ್ರವಾದ ಮಳೆ ಮುಂದುವರಿದಿದೆ. ಎಲ್ ನಿನೋ ಹವಾಮಾನದ ಮಾದರಿಯು ಭಾರೀ ಮಳೆಗೆ ಕಾರಣವಾಗಿದೆ. ಇದರಿಂದಾಗಿ ಪ್ರವಾಹ ಹೆಚ್ಚಾಗಿದೆ. ರಸ್ತೆಗಳು, ಸೇತುವೆಗಳು ಮತ್ತು ರೈಲು ಮಾರ್ಗಗಳು ನಾಶವಾಗಿವೆ ಎಂದು ಪ್ರಧಾನಿ ಕಾಸಿಮ್ ಮಜಲಿವಾ ತಿಳಿಸಿದ್ದಾರೆ. ಇದನ್ನೂ ಓದಿ: ಇಸ್ರೇಲ್‌ ವಿರುದ್ಧ ಪ್ರತಿಭಟನೆ – ಅಮೆರಿಕದಲ್ಲಿ ಭಾರತ ಮೂಲದ ವಿದ್ಯಾರ್ಥಿನಿ ಬಂಧನ

    ಪ್ರವಾಹದಿಂದ 51,000 ಮನೆಗಳಿಗೆ ಹಾನಿಯಾಗಿದೆ. 2 ಲಕ್ಷಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಶಾಲೆಗಳನ್ನು ಮುಚ್ಚಲಾಗಿದೆ. ಜನರ ರಕ್ಷಣೆಗೆ ತುರ್ತು ಸೇವೆ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

    ತಗ್ಗು ಪ್ರದೇಶಗಳಲ್ಲಿ ವಾಸಿಸುವವರಿಗೆ ಎತ್ತರದ ಪ್ರದೇಶಗಳಿಗೆ ತೆರಳುವಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಮನೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿರುವವರಿಗೆ ಸೂಕ್ತ ನೆರವು ಒದಗಿಸುವಂತೆ ಸ್ಥಳೀಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್‌ ಮೇಲೆ ದಾಳಿ ಕೇಸ್‌ – ಖಲಿಸ್ತಾನಿ ಪರ ಆರೋಪಿ ಬಂಧನ

    ಪ್ರಸ್ತುತ ಮಳೆಗಾಲದಲ್ಲಿ ಪೂರ್ವ ಆಫ್ರಿಕಾದ ಪ್ರದೇಶವು ವಾಡಿಕೆಗಿಂತ ಹೆಚ್ಚಿನ ಮಳೆಯಿಂದ ಜರ್ಜರಿತವಾಗಿದೆ. ನೆರೆಯ ಬುರುಂಡಿ ಮತ್ತು ಕೀನ್ಯಾದಲ್ಲಿ ಸಹ ಪ್ರವಾಹ ವರದಿಯಾಗಿದೆ.

  • ರಾಜ್ಯದಲ್ಲಿ ಮಳೆಯ ಆರ್ಭಟ – ವಿವಿಧೆಡೆ ಶಾಲಾ, ಕಾಲೇಜುಗಳಿಗೆ ರಜೆ

    ರಾಜ್ಯದಲ್ಲಿ ಮಳೆಯ ಆರ್ಭಟ – ವಿವಿಧೆಡೆ ಶಾಲಾ, ಕಾಲೇಜುಗಳಿಗೆ ರಜೆ

    ಹಾವೇರಿ: ರಾಜ್ಯದಲ್ಲಿ ಬಿಟ್ಟೂ ಬಿಡದೆ ಮಳೆ (Heavy Rains) ಸುರಿಯುತ್ತಿರುವ ಹಿನ್ನೆಲೆಯಲ್ಲಿ ವಿವಿಧ ಜಿಲ್ಲೆಗಳ ಸರ್ಕಾರಿ, ಖಾಸಗಿ ಅಂಗನವಾಡಿ ಕೇಂದ್ರಗಳು, ಪೂರ್ವ ಪ್ರಾಥಮಿಕ, ಪ್ರಾಥಮಿಕ ಶಾಲೆ, ಪ್ರೌಢಶಾಲೆ (Schools) ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

    ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಗುರುವಾರ (ಇಂದು) ಹಾವೇರಿ ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳು, ಪೂರ್ವ ಪ್ರಾಥಮಿಕ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ (PU College) ರಜೆ ಘೋಷಿಸಿ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಆದೇಶ ಹೊರಡಿಸಿದ್ದಾರೆ. ಉಳಿದಂತೆ ಪದವಿ, ಡಿಪ್ಲೋಮಾ ಮತ್ತು ಐಟಿಐ ಕಾಲೇಜುಗಳು ಎಂದಿನಂತೆ ನಡೆಯಲಿವೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

    ಅಲ್ಲದೇ ಧಾರವಾಡ (Dharwad), ಬೆಳಗಾವಿ (Belagavi), ಉಡುಪಿ (Udupi), ಕೊಪ್ಪಳ (Koppal) ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಅಂಗನವಾಡಿ ಕೇಂದ್ರಗಳೂ ಸೇರಿದಂತೆ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

    ಬೆಳಗಾವಿ:
    ಜಿಲ್ಲೆಯಲ್ಲಿ ಮಳೆ ಮುಂದುವರೆದಿದೆ. ಖಾನಾಪುರ ತಾಲೂಕಿನಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿದ್ದು ಜನರು ಮುಂಜಾಗ್ರತಾ ವಹಿಸುವಂತೆ ಸೂಚನೆ ನೀಡಲಾಗಿದೆ. ಮಲಪ್ರಭಾ ನದಿ ತುಂಬಿ ಹರಿಯುತ್ತಿದ್ದು ಪಶ್ಚಿಮ ಭಾಗದಲ್ಲಿ ಸರಿ ಸುಮಾರು 14, ಉಪನದಿಗಳು ಹಳ್ಳಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಇಂತಹ ಸಂದಿಗ್ಧ ಸ್ಥಿತಿಯಲ್ಲಿಯೂ ಕೆಲ ಗ್ರಾಮದ ಜನರು ತಮ್ಮ ಜೀವವನ್ನ ಪಣಕ್ಕಿಟ್ಟು ತಾತ್ಕಾಲಿಕ ಸೇತುವೆಗಳನ್ನ ನಿರ್ಮಾಣ ಮಾಡಿಕೊಳ್ಳುತ್ತಿದ್ದಾರೆ. ಖಾನಾಪುರ ತಾಲೂಕಿನ ಗವಾಳಿ, ಕೊಂಗಳಾ, ಪಾಸ್ತೋಲಿ ಗ್ರಾಮಗಳಲ್ಲಿ ಜನ ಸೇತುವೆ ನಿರ್ಮಾಣ ಮಾಡಿಕೊಂಡಿದ್ದು, ದಿನದೂಡುತ್ತಿದ್ದಾರೆ. ಸದ್ಯ ಅಂಗನವಾಡಿ ಕೇಂದ್ರಗಳು ಹಾಗೂ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇದನ್ನೂ ಓದಿ: ಮುಂದುವರೆದ ಮಳೆಯಾರ್ಭಟ – ಭೀಮಾ, ಕೃಷ್ಣಾ ನದಿ ಪಾತ್ರದಲ್ಲಿ ಪ್ರವಾಹದ ಭೀತಿ

    ಮಂಗಳೂರು:
    ಕಳೆದ ಕೆಲ ದಿನಗಳಿಂದ ಪಶ್ಚಿಮ ಘಟ್ಟ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯಿಂದಾಗಿ ಕಡಲ ಅಬ್ಬರವೂ ಹೆಚ್ಚಾಗಿದ್ದು ಮಂಗಳೂರಿನ ಉಳ್ಳಾಲ ಕಡಲ ತೀರದಲ್ಲಿ ಅರಬ್ಬೀ ಸಮುದ್ರ ಭೋರ್ಗರೆಯುತ್ತಿದೆ. ಜಿಲ್ಲೆಯ ಎಲ್ಲಾ ಜೀವ ನದಿಗಳು ತುಂಬಿ ಹರಿದು ಸಮುದ್ರ ಸೇರುತ್ತಿದ್ದು, ಮಳೆ ಹಾಗೂ ನೆರೆಯಿಂದ ನದಿಯಲ್ಲಿ ಬರೋ ಮಣ್ಣು ಮಿಶ್ರಿತ ನೀರು ಸಮುದ್ರಕ್ಕೆ ಸೇರಿ ಕಡಲ ತೀರದ ನೀರು ಕೆಂಪು ಬಣ್ಣಕ್ಕೆ ತಿರುಗಿದೆ. ಕಡಲ ತೀರದಲ್ಲಿ ಜೀವರಕ್ಷಕ ದಳ, ಗೃಹರಕ್ಷಕ ದಳ ಹಾಗೂ ಪೊಲೀಸರು ಪಹರೆ ಕಾಯುತ್ತಿದ್ದಾರೆ. ಸದ್ಯ ಮುಂಜಾಗ್ರತ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಮುಂದುವರಿದಿದೆ. ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್‌ – ಒಂದು ವಾರದಲ್ಲಿ 70 ಲಕ್ಷಕ್ಕೂ ಹೆಚ್ಚು ಮಂದಿ ನೋಂದಣಿ

    ಕೊಡಗು:
    ಕೊಡಗು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಅನೇಕ ಅವಾಂತರಗಳಿಗೆ ಕಾರಣವಾಗಿದೆ. ಎಲ್ಲಿ ನೋಡಿದ್ರು ಹೆಚ್ಚಾಗಿ ಕಾವೇರಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಈ ನಡುವೆ ಹಾರಂಗಿ ಜಲಾಶಯ ಕ್ಕೂ ಒಳಹರಿವು ಹೆಚ್ಚಾಗಿದು ಕುಶಾಲನಗರದ ಅನೇಕ ಬಡಾವಣೆಗಳಿಗೆ ಕೃತಕ ಪ್ರವಾಹ ಉಂಟಾಗುವ ಅಂತಕ ಎದುರಾಗಿದೆ. ಹೀಗಾಗಿ ಹಾರಂಗಿ ಡ್ಯಾಂನಲ್ಲೇ ಕಾವೇರಿ ನದಿಗೆ ಹೊರ ಹರಿವು ಬಿಡುಗಡೆ ಮಾಡುವ ಸಂದರ್ಭದಲ್ಲಿ ಬಡಾವಣೆಗಳಿಗೆ ಯಾವುದೇ ರೀತಿಯ ತೊಂದರೆ ಅಗದಂತೆ ಅಧಿಕಾರಿಗಳು ನೀರನ್ನು ಕಾವೇರಿ ನದಿಗೆ ಬಿಡುಗಡೆ ಮಾಡುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Rain Alert: ಭಾರೀ ಮಳೆಗೆ ದೆಹಲಿ ತತ್ತರ – ನರ್ಸರಿಯಿಂದ 5ನೇ ತರಗತಿವರೆಗಿನ ಶಾಲೆಗಳಿಗೆ ರಜೆ

    Rain Alert: ಭಾರೀ ಮಳೆಗೆ ದೆಹಲಿ ತತ್ತರ – ನರ್ಸರಿಯಿಂದ 5ನೇ ತರಗತಿವರೆಗಿನ ಶಾಲೆಗಳಿಗೆ ರಜೆ

    ನವದೆಹಲಿ: ಉತ್ತರ ಭಾರತದ (North India) ಹಲವು ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು (Heavy Rains), ಜಲಪ್ರಳಯವೇ ಸೃಷ್ಟಿಯಾದಂತಾಗಿದೆ. ಭಾರೀ ಮಳೆಯ ಪರಿಣಾಮವನ್ನು ಗಮನದಲ್ಲಿಟ್ಟುಕೊಂಡು ದೆಹಲಿಯಲ್ಲಿ ನರ್ಸರಿಯಿಂದ 5ನೇ ವರೆಗಿನ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ಜುಲೈ 11 ರಂದು ರಜೆ ಘೋಷಿಸಲಾಗಿದೆ.

    ದೆಹಲಿ (New Delhi), ಪಂಜಾಬ್, ಉತ್ತರಾಖಂಡ್‌ನಲ್ಲಿ ಎಡಬಿಡದೇ ಮಳೆ ಸುರಿಯುತ್ತಿದೆ. ದೆಹಲಿಯಲ್ಲಿ ತಡೆಗೋಡೆ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ. ವಿವಿಧೆಡೆ 15ಕ್ಕೂ ಹೆಚ್ಚು ಮನೆಗಳು ಧರೆಗುರುಳಿವೆ. ಯಮುನಾ ನದಿ (Yamuna River) ಸೇರಿದಂತೆ ಹೆಚ್ಚಿನ ನದಿಗಳು ಉಕ್ಕಿ ಹರಿಯುತ್ತಿವೆ. ಕಳೆದ ಎರಡು ದಿನಗಳಿಂದ ಮಹಳೆ ಬಿಡದೇ ಸುರಿಯುತ್ತಿದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಆದ್ದರಿಂದ ಸರ್ಕಾರಿ ಶಾಲೆಗಳಿಗೆ (Primary Schools) ರಜೆ ಘೋಷಣೆ ಮಾಡಿದೆ. ಖಾಸಗಿ ಶಾಲೆಗಳೂ ಮುಂದಿನ ಆದೇಶದ ವರೆಗೆ ಅದೇ ಕ್ರಮವನ್ನು ಅನುಸರಿಸುವಂತೆ ಶಿಕ್ಷಣ ಇಲಾಖೆ ಸೂಚಿಸಿದೆ. ನರ್ಸರಿಯಿಂದ 5ನೇ ತರಗತಿವರೆಗೆ ರಜೆ ನೀಡಿದ್ದು, 6ರಿಂದ ಮೇಲ್ಪಟ್ಟ ತರಗತಿಗಳು ಎಂದಿನಂತೆ ನಡೆಯುತ್ತವೆ.

    ಹಿಮಾಚಲ ಪ್ರದೇಶದಲ್ಲಿ (Himachal Pradesh) ಭಾರೀ ಮಳೆಯಿಂದಾಗಿ ಕುಲು-ಮನಾಲಿಯಲ್ಲಿ ಚಿಕ್ಕಬಳ್ಳಾಪುರ-ಚಿಂತಾಮಣಿಯ 105 ಕನ್ನಡಿಗರು ಪರದಾಡ್ತಿದ್ದಾರೆ. ಬಿಯಾಸ್ ನದಿ ರೌದ್ರಾವತಾರದಿಂದ ಹಲವೆಡೆ ರಸ್ತೆಗಳು ಕೊಚ್ಚಿ ಹೋಗಿವೆ. ದಕ್ಷಿಣ ಕನ್ನಡದ ಬಂಟ್ವಾಳದಿಂದ ಕಾಶ್ಮೀರ ಮಾರ್ಗವಾಗಿ ದರ್ಶನಕ್ಕೆ ತೆರಳಿದ್ದ 20 ಜನರ ತಂಡ ಭೂಕುಸಿತದಿಂದ ಸಿಲುಕಿಕೊಂಡಿದೆ. ಇದನ್ನೂ ಓದಿ: Rafale Deal: 90,000 ಕೋಟಿ ವೆಚ್ಚ, 26 ರಫೇಲ್‌ ಖರೀದಿಸಲು ಭಾರತ ಸರ್ಕಾರ ಮೆಗಾ ಪ್ಲ್ಯಾನ್‌!

    ಅಮರನಾಥ ದರ್ಶನಕ್ಕೆ ತೆರಳಿ ಪಂಚತಾರಣಿ ಕ್ಯಾಂಪ್‌ನಲ್ಲಿದ್ದ 129 ಕನ್ನಡಿಗರನ್ನ ಎನ್‌ಡಿಆರ್‌ಎಫ್ ರಕ್ಷಿಸಿ ನೀಲಗ್ರಂಥ್ ಶಿಬಿರಕ್ಕೆ ಸ್ಥಳಾಂತರ ಮಾಡಿದೆ. ಅಲ್ಲಿಂದ ರಸ್ತೆ ಮಾರ್ಗವಾಗಿ ಶ್ರೀನಗರಕ್ಕೆ ಬರಲಿದ್ದಾರೆ. ಅಮರನಾಥ ಯಾತ್ರೆಗೆ ಹೋಗಿ ಸಿಲುಕಿಕೊಂಡವರ ಪರಿಸ್ಥಿತಿಯ ಬಗ್ಗೆ ಶಾಸಕ ಬಾಲಕೃಷ್ಣ ವಿಧಾನಸಭೆಯಲ್ಲಿ ಪ್ರಸ್ತಾಪಿಸಿದರು. ಇದಕ್ಕೆ ಸಚಿವ ಕೃಷ್ಣ ಬೈರೇಗೌಡ ಉತ್ತರಿಸಿ, ಕನ್ನಡಿಗರು ಸೇರಿದಂತೆ 18 ಸಾವಿರ ಯಾತ್ರಾರ್ಥಿಗಳು ಸಿಲುಕೊಂಡಿದ್ದಾರೆ. ಸೇನೆ, ಎನ್‌ಡಿಆರ್‌ಎಫ್‌ನವರು ರಕ್ಷಣೆ ಮಾಡಿ ಅಲ್ಲಲ್ಲಿ ಕ್ಯಾಂಪ್‌ಗಳಲ್ಲಿ ಸುರಕ್ಷಿತವಾಗಿರಿಸಿದ್ದಾರೆ. ರಾಜ್ಯ ಸರ್ಕಾರ ನಮ್ಮವರ ರಕ್ಷಣೆಗೆ ಸಕಲ ಪ್ರಯತ್ನ ಮಾಡ್ತಿದೆ ಅಂತ ತಿಳಿಸಿದರು. ಇದನ್ನೂ ಓದಿ: ಗೋಡೌನ್ ಜಲಾವೃತ- ಕೇಜ್ರಿವಾಲ್ ಎಮರ್ಜೆನ್ಸಿ ಕಿಟ್ ನೀರುಪಾಲು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಂಗಳೂರಿನಲ್ಲಿ ಭಾರೀ ಮಳೆ – ಮನೆಗಳಿಗೆ ನುಗ್ಗಿತು ನೀರು, ನೀರಿನಲ್ಲಿ ತೇಲಾಡಿತು ಕಾರು

    ಮಂಗಳೂರಿನಲ್ಲಿ ಭಾರೀ ಮಳೆ – ಮನೆಗಳಿಗೆ ನುಗ್ಗಿತು ನೀರು, ನೀರಿನಲ್ಲಿ ತೇಲಾಡಿತು ಕಾರು

    ಮಂಗಳೂರು: ನಗರದಲ್ಲಿ ಇಂದು ಬೆಳಗ್ಗೆ ಸತತವಾಗಿ ಸುರಿದ ಧಾರಾಕಾರ ಮಳೆಯಿಂದ ಮನೆಗಳಿಗೆ ನೀರು ನುಗ್ಗಿದ್ದು, ಮನೆಯಲ್ಲಿದ್ದ ವಸ್ತುಗಳು, ಆಹಾರ ಪದಾರ್ಥಗಳು ನೀರು ಪಾಲಾಗಿದ್ದು, ರಸ್ತೆಗಳೆಲ್ಲ ನೀರು ತುಂಬಿಕೊಂಡು ಕೆರೆಯಂತಾಗಿದೆ.

    ಇಂದು ಮುಂಜಾನೆಯಿಂದ ಮೂರ್ನಾಲ್ಕು ಗಂಟೆ ನಿರಂತರವಾಗಿ ಸುರಿದ ಮಳೆಗೆ ಶಿವನಗರದಲ್ಲಿ ಐವತ್ತಕ್ಕೂ ಹೆಚ್ಚು ಮನೆಗಳಿಗೆ ಅಪಾರ ಪ್ರಮಾಣದಲ್ಲಿ ನೀರು ನುಗ್ಗಿದ್ದರಿಂದ ಮನೆಯಲ್ಲಿದ್ದ ವಸ್ತಗಳೆಲ್ಲಾ ನೀರಿನಲ್ಲಿ ತೇಲಿದವು. ಎಲೆಕ್ಟ್ರಾನಿಕ್ ಉಪಕರಣಗಳು, ಹಾಸಿಗೆ, ಪಾತ್ರೆಗಳು, ಆಹಾರ ಪದಾರ್ಥಗಳೆಲ್ಲಾ ನೀರು ಪಾಲಾದವು. ಮನೆಯಿಂದ ನೀರು ಹೊರಹಾಕಲು ಇಲ್ಲಿನ ನಿವಾಸಿಗಳು ಹರಸಾಹಸಪಟ್ಟರು. ಮನೆಗಳಿಗೆ ನೀರು ನುಗ್ಗಿದ್ದರಿಂದ ಮನೆಯಲ್ಲಿ ಇರಲಾಗದೆ ಮನೆಯಿಂದ ಹೊರ ಬಂದು ಕಾಲ ಕಳೆಯಬೇಕಾಯಿತು. ಸ್ಥಳಕ್ಕೆ ಮಹಾನಗರ ಪಾಲಿಕೆ ಸಿಬ್ಬಂದಿ ಆಗಮಿಸಿ ಕಸ ಕಟ್ಟಿಕೊಂಡಿದ್ದ ಡ್ರೈನೇಜ್, ಚರಂಡಿಗಳನ್ನು ಸ್ವಚ್ಛ ಮಾಡಿದರು. ಶಿವನಗರದ ರಸ್ತೆಗಳೆಲ್ಲೆಲ್ಲಾ ನೀರು ತುಂಬಿಕೊಂಡು ಕೆರೆಯಂತಾಗಿದ್ದರೆ, ವಾಹನಗಳು ನೀರಿನಲ್ಲಿ ತೇಲಿದವು. ಇದನ್ನೂ ಓದಿ: ದ.ಕ ಜಿಲ್ಲೆಯಲ್ಲಿ 3 ದಿನಗಳ ಕಾಲ ಕಟ್ಟೆಚ್ಚರ – ಗುಪ್ತಚರ ಇಲಾಖೆಯಿಂದ ಸ್ಫೋಟಕ ಮಾಹಿತಿ

    ಶಿವನಗರದಲ್ಲಿ ರಾಜಕಾಲುವೆ ಪಕ್ಕದಲ್ಲಿ ಮನೆಗಳಿದ್ದು ಮಳೆಗಾಲದಲ್ಲಿ ಕಾಲುವೆ ತುಂಬಿ ಹರಿದು ಮನೆಗಳಿಗೆ ನೀರು ನುಗ್ಗುತ್ತಿದೆ. ಈ ಬಗ್ಗೆ ಹತ್ತಾರು ಬಾರಿ ಜನಪ್ರತಿನಿಧಿಗಳು, ಮಹಾನಗರಪಾಲಿಕೆ ಗಮನಕ್ಕೆ ತಂದರೂ ಯಾರೂ ಕೂಡ ಇದಕ್ಕೆ ಶಾಶ್ವತ ಪರಿಹಾರ ಕಂಡುಹಿಡಿದಿಲ್ಲ. ಮನೆಗಳಿಗೆ ನೀರು ನುಗ್ಗಿದ ವೇಳೆ ಬಂದು ನೋಡಿ ಭರವಸೆ ನೀಡಿ ಹೋಗುತ್ತಿದ್ದು ಇನ್ನಾದರೂ ಈ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ನಮ್ಮೂರಿನಲ್ಲಿ ಡಿ.ವಿ ಸದಾನಂದ ಗೌಡ ಅಂತ ಒಬ್ರು ಇದ್ರು ಈಗ ಅವರು ಭೂಮಿ ಮೇಲೆ ಇದ್ದಾರಾ ಗೊತ್ತಿಲ್ಲ: ಪೋಸ್ಟರ್ ವೈರಲ್

    ಮಳೆಯಿಂದ ಮನೆ, ಮನುಷ್ಯರು ಮಾತ್ರ ಸಂಕಷ್ಟಕ್ಕೆ ಸಿಲುಕಿಲ್ಲ. ಮೂಕ ಪ್ರಾಣಿಗಳು ಮಳೆಯಿಂದ ನರಳಾಡಿದವು. ಶಿವನಗರದ ಮನೆಯೊಂದರಲ್ಲಿ ಬೆಕ್ಕು ಮರಿಗಳನ್ನು ಹಾಕಿದ್ದು, ಮನೆಗೆ ನೀರು ನುಗ್ಗಿದ್ದರಿಂದ ಮರಿಗಳು ನೀರಿನಲ್ಲಿ ಮುಳುಗುತ್ತಿದ್ದು ತನ್ನ ಮರಿಗಳನ್ನು ರಕ್ಷಿಸಿಕೊಳ್ಳಲು ಪರದಾಡಿತು. ಬಾಯಲ್ಲಿ ಮರಿಗಳನ್ನು ಕಚ್ಚಿಕೊಂಡು ಮನೆಯಲ್ಲಿದ್ದ ಮಂಚದ ಮೇಲೆ ತಂದು ಬಿಟ್ಟು ಮರಿಗಳನ್ನು ರಕ್ಷಿಸಿತು. ಮಳೆಯಿಂದ ಹಾನಿಗೊಳಗಾದ ಸ್ಥಳಕ್ಕೆ ಶಾಸಕ ವೇದವ್ಯಾಸ ಕಾಮತ್, ಮಾಜಿ ಶಾಸಕ ಜೆ.ಆರ್.ಲೋಬೋ, ಮಾಜಿ ಮೇಯರ್ ದಿವಾಕರ ಪಾಂಡೇಶ್ವರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹವಾಮಾನ ವೈಪರೀತ್ಯ – ದೆಹಲಿಯಲ್ಲಿ ಆಲಿಕಲ್ಲು ಮಳೆ

    ಹವಾಮಾನ ವೈಪರೀತ್ಯ – ದೆಹಲಿಯಲ್ಲಿ ಆಲಿಕಲ್ಲು ಮಳೆ

    ನವದೆಹಲಿ: ಹವಾಮಾನ ವೈಪರೀತ್ಯ ಹಿನ್ನೆಲೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಕಾಲಿಕ ಮಳೆಯಾಗಿದೆ. ಇಂದು ಬೆಳಗ್ಗೆಯಿಂದ ದೆಹಲಿ-ಎನ್‍ಸಿಆರ್ ಭಾಗದ ಅಲ್ಲಲ್ಲಿ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗುತ್ತಿದ್ದು, ಮತ್ತಷ್ಟು ಮಳೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಹೇಳಿದೆ.

    ದೆಹಲಿಯ ಹೊರ ಭಾಗದ ನೊಯ್ಡಾ, ಗ್ರೇಟರ್ ನೊಯ್ಡಾ ಗಾಜೀಯಬಾದ್ ಸೇರಿ ಹಲವೆಡೆ ಇಂದು ಬೆಳಗ್ಗೆಯಿಂದಲೇ ವರ್ಷಾಧಾರೆಯಾಗಿತ್ತು. ಮಧ್ಯಾಹ್ನ ಬಳಿಕ ದೆಹಲಿಯ ಗ್ರೀನ್ ಗ್ರೀನ್ ಪಾರ್ಕ್, ಸಬ್ದರ್ ಜಂಗ್, ಚಾಣಕ್ಯಪುರಿ, ಸಂಸತ್ ಮಾರ್ಗ್ ಸೇರಿ ಬಹುತೇಕ ಪ್ರದೇಶದಲ್ಲಿ ಮಳೆಯಾಗಿದೆ.

    https://twitter.com/gautamkapoor54/status/1238769330357063680

    ಚಂಡಮಾರುತ ವ್ಯವಸ್ಥೆಯು ಉತ್ತರ ಪಾಕಿಸ್ತಾನ ಮತ್ತು ಜಮ್ಮು ಮತ್ತು ಕಾಶ್ಮೀರ ಪ್ರದೇಶದ ಮೇಲಿದೆ, ಜಮ್ಮು, ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡನಲ್ಲಿ ಭಾರೀ ಮಳೆ ಮತ್ತು ಹಿಮಪಾತವಾಗುತ್ತಿದ್ದು ಹವಾಮಾನ ವೈಪರೀತ್ಯಗಳಿಂದ ದೆಹಲಿಯಲ್ಲಿ ಅಕಾಲಿಕ ಮಳೆಯಾಗುತ್ತಿದೆ.

    ದೆಹಲಿಯಲ್ಲಿ ಸುರಿದ ಏಕಾಏಕಿ ಮಳೆಯಿಂದ ರಸ್ತೆಯ ಮೇಲೆ ಮತ್ತು ಪ್ಲೈಓವರ್ ಕೆಳಗೆ ನೀರು ನಿಂತುಕೊಂಡು ವಾಹನ ಸಂಚಾರಕ್ಕೆ ಅಡ್ಡಿ ಉಂಟಾಯಿತು.

    ಆಲಿಕಲ್ಲು ಮಳೆ:
    ಮಳೆಯಿಂದಾಗಿ ಅನೇಕ ಸ್ಥಳಗಳಲ್ಲಿ ರಸ್ತೆಯ ಮೇಲೆ ನೀರು ನುಗ್ಗಿ ಸಂಚಾರ ಅಸ್ವಸ್ಥಗೊಂಡಿತು. ದಕ್ಷಿಣ ದೆಹಲಿ ಪ್ರದೇಶದಲ್ಲಿ ಆಲಿಕಲ್ಲು ಮಳೆಯಾಗಿದ್ದರಿಂದ ಜನರು ಸಂಕಷ್ಟ ಎದುರಿಸಿದರು. ಇದಕ್ಕೂ ಮುನ್ನ ಶುಕ್ರವಾರ ಸಂಜೆ ಹಾಗೂ ರಾತ್ರಿಯಲ್ಲಿ ಮಳೆಯಿಂದಾಗಿ ರಸ್ತೆಗಳ ಮೇಲೆ ನೀರುತ್ತಿತ್ತು. ಈ ಬೆನ್ನಲ್ಲೇ ಇಂದು ಮಧ್ಯಾಹ್ನ ಸುರಿದ ಭಾರೀ ಮಳೆಯಿಂದಾಗಿ ಚಾಲಕರು ಹಾಗೂ ಸವಾರರು ಪರದಾಡುವಂತಾಯಿತು.

    ಭಾರೀ ಮಳೆಯ ಹಿನ್ನೆಲೆ ದೆಹಲಿ ಟ್ರಾಫಿಕ್ ಪೊಲೀಸರು ಟ್ವೀಟ್ ಮೂಲಕ ಸಂಚಾರ ಅಸ್ಥವ್ಯಸ್ಥವಿರುವ ಪ್ರದೇಶಗಳ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ಹವಾಮಾನ ವೈಪರಿತ್ಯದಿಂದಾಗಿ ದೆಹಲಿಯಲ್ಲಿ ಅಕಾಲಿಕ ಮಳೆಯಾಗುತ್ತಿದೆ. ಹಿಂದಿನ ದಿನಗಳಿಗೆ ಹೋಲಿಸಿದರೆ ಸದ್ಯದ ದೆಹಲಿಯಲ್ಲಿ ಗರಿಷ್ಠ ತಾಪಮಾನ ದಾಖಲಾಗಿದೆ. ಶುಕ್ರವಾರ ಗರಿಷ್ಠ ತಾಪಮಾನ 28.3 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 13.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.