Tag: Heavy Vehicles

  • 2 ವರ್ಷಗಳ ಬಳಿಕ ಭಾರೀ ವಾಹನಗಳ ಸಂಚಾರಕ್ಕೆ ಪೀಣ್ಯ ಫ್ಲೈಓವರ್‌ ಮುಕ್ತ – ಈ ಷರತ್ತು ಅನ್ವಯ

    2 ವರ್ಷಗಳ ಬಳಿಕ ಭಾರೀ ವಾಹನಗಳ ಸಂಚಾರಕ್ಕೆ ಪೀಣ್ಯ ಫ್ಲೈಓವರ್‌ ಮುಕ್ತ – ಈ ಷರತ್ತು ಅನ್ವಯ

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಿಂದ (Bengaluru) 25 ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಬೆಂಗಳೂರು – ತುಮಕೂರು ರಸ್ತೆಯ ಪೀಣ್ಯ ಮೇಲ್ಸೇತುವೆ 2 ವರ್ಷಗಳ ಬಳಿಕ ಭಾರೀ ವಾಹನಗಳ (Heavy Vehicles) ಸಂಚಾರಕ್ಕೆ ಮುಕ್ತವಾಗ್ತಿದೆ.

    ಇದೇ ಜುಲೈ 29ರ ಸೋಮವಾರದಿಂದ ಪೀಣ್ಯ ಫ್ಲೈಓವರ್‌ ಮೇಲೆ ಬಸ್, ಲಾರಿ, ಟ್ರಕ್ ಸೇರಿದಂತೆ ಭಾರೀ ವಾಹನಗಳು ಮುಕ್ತವಾಗಿ ಸಂಚರಿಸಬಹುದಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಪ್ರೇಯಸಿ ಅವಾಯ್ಡ್ ಮಾಡಿದ್ದಕ್ಕೆ ಸ್ನೇಹಿತೆಯ ಕೊಲೆ – ಕೋರಮಂಗಲ ಪಿಜಿ ಯುವತಿ ಮರ್ಡರ್ ಕೇಸ್‌ಗೆ ಟ್ವಿಸ್ಟ್‌!

    ಈ ಹಿಂದೆ ಫ್ಲೈಓವರ್‌ನ (Peenya flyover) 2 ಪಿಲ್ಲರ್‌ಗಳಲ್ಲಿ ದೋಷ ಕಂಡು ಬಂದಿದ್ದರಿಂದ ಭಾರೀ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರಿ ಲಘು ವಾಹನಗಳಿಗೆ ಅವಕಾಶ ಕಲ್ಪಿಸಲಾಗಿತ್ತು. 2 ಪಿಲ್ಲರ್‌ಗಳಿಂದಾಗಿ 120 ಪಿಲ್ಲರ್‌ಗಳ 240 ಕೇಬಲ್ ಅಳವಡಿಕೆ ಪರಿಶೀಲಿಸಿ, ಲೋಡ್ ಟೆಸ್ಟಿಂಗ್ ಎಲ್ಲಾ ಆದ ಬಳಿಕ ಸಂಚಾರಕ್ಕೆ ಅವಕಾಶ ನೀಡಬಹುದು ಅಂತ ತಜ್ಞರು ಹೆದ್ದಾರಿ ಪ್ರಾಧಿಕಾರಕ್ಕೆ ಶಿಫಾರಸ್ಸು ಮಾಡಿದ್ದರು. ತಜ್ಞರ ಅಭಿಪ್ರಾಯವನ್ನು ಪ್ರಾಧಿಕಾರ ಪೊಲೀಸರಿಗೆ ಸಲ್ಲಿಕೆ ಮಾಡಿತ್ತು. ಇದನ್ನೂ ಓದಿ: ನೀಟ್ ವ್ಯವಸ್ಥೆ ಬದಲು ಸಿಇಟಿ ಪ್ರವೇಶಾತಿಗೆ ನಿರ್ಣಯ; ಉಭಯ ಸದನಗಳಲ್ಲಿ ತೀರ್ಮಾನ

    ಇದೀಗ ಪ್ರತಿ ಶುಕ್ರವಾರ ಹೊರತುಪಡಿಸಿ ಉಳಿದ 6 ದಿನಗಳ ಕಾಲ ಭಾರೀ ವಾಹನಗಳ ಸಂಚಾರಕ್ಕೆ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಪ್ರತಿ ಶುಕ್ರವಾರ ಫ್ಲೈಓವರ್‌ನ ನಿರ್ವಹಣೆ, ಪರಿಶೀಲನೆ ಆಗಲಿದ್ದು, ಆ ದಿನ ಮಾತ್ರ ಬೆಳಗ್ಗೆ 6 ಗಂಟೆಯಿಂದ ಶನಿವಾರ ಬೆಳಗ್ಗೆ 6 ಗಂಟೆವರೆಗೆ ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ ಇರಲಿದೆ. ಉಳಿದ 6 ದಿನವೂ ಸಂಚಾರಕ್ಕೆ ಅವಕಾಶ ಕೊಟ್ಟು ಸಂಚಾರ ಪೊಲೀಸರು ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ವಿಧಾನಸಭೆಯಲ್ಲಿ ಮುಂದುವರಿದ ಬಿಜೆಪಿ, ಜೆಡಿಎಸ್ ಧರಣಿ – ತುಳು ಸಂಭಾಷಣೆ ಸೊಗಡು, ವಿಧೇಯಕಗಳ ಅಂಗೀಕಾರ

  • ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ  ಅಕ್ಟೋಬರ್‌ನಿಂದ 4 ತಿಂಗಳು ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

    ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಕ್ಟೋಬರ್‌ನಿಂದ 4 ತಿಂಗಳು ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

    ಕಾರವಾರ: ಸಾಗರಮಾಲಾ ಯೋಜನೆಯಡಿ ಉತ್ತರ ಕನ್ನಡ (Uttara Kannada) ಜಿಲ್ಲೆಯ ಶಿರಸಿ- ಕುಮಟಾ ಭಾಗದ ರಾಷ್ಟ್ರೀಯ ಹೆದ್ದಾರಿ (National Highway) 766(ಇ) ಕಾಮಗಾರಿಯನ್ನು ಶೀಘ್ರ ಮುಗಿಸುವ ಹಿನ್ನೆಲೆಯಲ್ಲಿ ಅಕ್ಟೋಬರ್ 15ರಿಂದ 2025ರ ಫೆಬ್ರವರಿ 25ರವರೆಗೆ ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಲು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಆದೇಶಿಸಿದ್ದಾರೆ.

    ಬದಲಿ ವ್ಯವಸ್ಥೆ ಏನು?
    ಕುಮಟಾ-ಶಿರಸಿ ಮೂಲಕ ಸಿದ್ದಾಪುರಕ್ಕೆ ತೆರಳುವ ರಾಷ್ಟ್ರೀಯ ಹೆದ್ದಾರಿ-766ಇ ಮಾರ್ಗವಾಗಿ ಲಘು ವಾಹನಗಳು ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.

    ಅಂಕೋಲಾ-ಶಿರಸಿ ಮೂಲಕ ಯಲ್ಲಾಪುರ ರಾಷ್ಟ್ರೀಯ ಹೆದ್ದಾರಿ-63 ಮತ್ತು ಎಸ್.ಹೆಚ್-93 ಮಾರ್ಗವಾಗಿ ಎಲ್ಲಾ ವಿಧದ ವಾಹನಗಳು ಸಂಚರಿಸಲು ಅವಕಾಶ ನೀಡಿದೆ.

    ಮಂಗಳೂರು-ಹೊನ್ನಾವರ ಶಿರಸಿ ಮೂಲಕ ಸಿದ್ದಾಪುರ ಮಾವಿನಗುಂಡಿ ಮಾರ್ಗವಾಗಿ ಎಲ್ಲಾ ವಿಧದ ವಾಹನಗಳಿಗೆ ಅವಕಾಶ ಮಾಡಿಕೊಡಲಾಗಿದೆ.

  • ಪೀಣ್ಯ ಫ್ಲೈಓವರ್‌ ಮೇಲೆ ಭಾರೀ ವಾಹನಗಳ ಓಡಾಟಕ್ಕೆ ನಿರ್ಬಂಧ – ಮುಂದಿನ 125 ದಿನ ನೋ ಎಂಟ್ರಿ

    ಪೀಣ್ಯ ಫ್ಲೈಓವರ್‌ ಮೇಲೆ ಭಾರೀ ವಾಹನಗಳ ಓಡಾಟಕ್ಕೆ ನಿರ್ಬಂಧ – ಮುಂದಿನ 125 ದಿನ ನೋ ಎಂಟ್ರಿ

    ಬೆಂಗಳೂರು: ತುಮಕೂರು ರಾಷ್ಟ್ರೀಯ ಹೆದ್ದಾರಿಯ ವಾಹನ ಸವಾರರಿಗೆ ಇದು ಕಹಿ ಸುದ್ದಿ. ಪೀಣ್ಯ ಫ್ಲೈಓವರ್ (Peenya Flyover) ಮೇಲೆ ಮತ್ತೆ ಘನ ವಾಹನಗಳ (Heavy Vehicles) ಓಡಾಟಕ್ಕೆ ನಿರ್ಬಂಧ ಹೇರಲಾಗಿದೆ.

    ಕಳೆದ ವರ್ಷ ಪೀಣ್ಯ ಫ್ಲೈಓವರ್‌ನ ಎರಡು ಪಿಲ್ಲರ್‌ನ ಕೇಬಲ್‍ಗಳಲ್ಲಿ ತಾಂತ್ರಿಕ ಸಮಸ್ಯೆ ಕಂಡು ಬಂದ ಕಾರಣ ಎರಡ್ಮೂರು ತಿಂಗಳುಗಳ ಕಾಲ ಹೆವಿ ವೆಹಿಕಲ್ ಓಡಾಟಕ್ಕೆ ನಿರ್ಬಂಧ ಹೇರಲಾಗಿತ್ತು. ಪಿಲ್ಲರ್‌ಗಳಿಗೆ ಕೇಬಲ್ ಅಳವಡಿಸಿದ ಬಳಿಕ ಭಾರತೀಯ ವಿಜ್ಞಾನ ಸಂಸ್ಥೆ (IISC) ಭಾರಿ ವಾಹನಗಳ ಓಡಾಡಿಸಿ ತಪಾಸಣೆ ಮಾಡಿ ಸಂಚಾರಕ್ಕೆ ಗ್ರಿನ್ ಸಿಗ್ನಲ್ ನೀಡಿತ್ತು. ಆದರೆ ಈಗ ಮತ್ತೆ ಹೆವಿ ವೆಹಿಕಲ್ ಓಡಾಟಕ್ಕೆ ನಿರ್ಬಂಧಿಸಲಾಗಿದೆ. ಕಾರಣ ಫ್ಲೈಓವರ್‌ನ ಎಲ್ಲಾ ಪಿಲ್ಲರ್‌ಗಳಲ್ಲಿ ಕೇಬಲ್ ಕಿತ್ತು ಬರುವ ಆತಂಕ ಇದೆಯಂತೆ. ಹಾಗಾಗಿ ಕೇಬಲ್ ಕಿತ್ತು ಬರುವುದಕ್ಕೂ ಮುಂಚೆಯೇ ಹೊಸ ಕೇಬಲ್‍ಗಳನ್ನು ಅಳವಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಧಾರಿಸಿದೆ. ಇದನ್ನೂ ಓದಿ: ಕೋರಮಂಗಲ ಕಿಡ್ನಾಪ್ ಸ್ಟೋರಿಗೆ ಟ್ವಿಸ್ಟ್- ಹಣಕ್ಕಾಗಿ ಅಪಹರಿಸಿ ಹುಡುಗಿಗಾಗಿ ಡಿಮ್ಯಾಂಡ್

    ಇದಕ್ಕಾಗಿ ಟೆಂಡರ್ ಕೂಡ ನೀಡಿದ್ದು ಫೆಬ್ರವರಿ ತಿಂಗಳಲ್ಲಿ ಕೆಲಸ ಶುರುವಾಗುವ ಸಾಧ್ಯತೆ ಇದೆ. ಹಾಗಾಗಿ ಹೆವಿ ವೆಹಿಕಲ್ ಓಡಾಟ ನಡೆಸಿದರೆ ಪಿಲ್ಲರ್ ಮತ್ತು ಫ್ಲೈಓವರ್ ಕೇಬಲ್‍ಗಳು ಕಿತ್ತು ಬರುವ ಸಾಧ್ಯತೆ ಇರೋದ್ರಿಂದ ಮುಂದಿನ ನಾಲ್ಕು ತಿಂಗಳವರೆಗೂ ಹೆವಿ ವೆಹಿಕಲ್‍ಗಳಿಗೆ ನಿರ್ಬಂಧಿಸಲಾಗಿದೆ. ಫ್ಲೈಓವರ್‌ನ ಪ್ರವೇಶ ದ್ವಾರದಲ್ಲೇ ಟ್ರಾಫಿಕ್ ಪೊಲೀಸ್ರು ಮತ್ತು ಹೋಂಗಾರ್ಡ್‍ಗಳು ಬ್ಯಾರಿಕೇಡ್ ಹಾಕಿ ಹೆವಿ ವೆಹಿಕಲ್ ಓಡಾಟಕ್ಕೆ ಬ್ರೇಕ್ ಹಾಕುತ್ತಿದ್ದಾರೆ. ಇದನ್ನೂ ಓದಿ: ಪಿಲ್ಲರ್ ದುರಂತ ಬಳಿಕ ಮತ್ತೊಂದು ಎಡವಟ್ಟು – ಬ್ರಿಗೇಡ್ ರಸ್ತೆಯಲ್ಲಿ 30 ಅಡಿ ಆಳಕ್ಕೆ ಕುಸಿದ ರಸ್ತೆ

    ಪೀಣ್ಯ ಫ್ಲೈಓವರ್ 120 ಪಿಲ್ಲರ್‌ಗಳನ್ನು ಒಳಗೊಂಡಿದೆ. 240 ಕೇಬಲ್‍ಗಳನ್ನು ಅಳವಡಿಸಬೇಕಾಗಿದೆಯಂತೆ. ಪ್ರತಿ ಪಿಲ್ಲರ್‌ಗೂ ಎರಡೆರಡು ಕೇಬಲ್‍ಗಳನ್ನು ಅಳವಡಿಸಬೇಕಿದ್ದು ಮೂರು ತಿಂಗಳ ಸಮಯ ತೆಗೆದುಕೊಳ್ಳಲಿದೆ. ಕೇಬಲ್ ಅಳವಡಿಸಿದ ಬಳಿಕ ಐಐಎಸ್‍ಸಿ ಅವರು ಫ್ಲೈಓವರ್ ಮೇಲೆ ಪ್ರಾಯೋಗಿಕವಾಗಿ ಹೆವಿ ವೆಹಿಕಲ್‍ಗಳನ್ನು ಓಡಾಡಿಸಿ ತಪಾಸಣೆ ಮಾಡಲಿದ್ದಾರೆ. ಆ ತಪಾಸಣೆಯಲ್ಲಿ ಪಾಸ್ ಆದರೆ ಹೆವಿ ವೆಹಿಕಲ್‍ಗೆ ಅವಕಾಶ ಕೊಡಬಹುದು.

    23 ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಈ ಫ್ಲೈಓವರ್ ಬೆಂಗಳೂರು ಮತ್ತು ರಾಜ್ಯದ ಜಿಲ್ಲೆಗಳಿಗೆ ಒಂದು ರೀತಿ ಆರ್ಥಿಕ ಚೇತರಿಕೆಯ ಕೊಂಡಿ ಆಗಿದ್ದು, ಇದರ ದುರಸ್ಥಿ ಕಾರ್ಯ ಆದಷ್ಟು ಬೇಗ ಆಗಬೇಕೆಂದು ವಾಹನ ಸವಾರರು ಆಗ್ರಹಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬೆಂಗಳೂರು ರಸ್ತೆಗೆ ಹೆವಿ ವೆಹಿಕಲ್‍ಗಳೇ ಕಂಟಕ- ಭಾರೀ ಗಾತ್ರದ ವಾಹನಗಳಿಂದ ರೂಲ್ಸ್ ಬ್ರೇಕ್

    ಬೆಂಗಳೂರು ರಸ್ತೆಗೆ ಹೆವಿ ವೆಹಿಕಲ್‍ಗಳೇ ಕಂಟಕ- ಭಾರೀ ಗಾತ್ರದ ವಾಹನಗಳಿಂದ ರೂಲ್ಸ್ ಬ್ರೇಕ್

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದಿನಾ ಒಂದಿಲ್ಲೊಂದು ರಸ್ತೆ ಅಪಘಾತ ಆಗುತ್ತಿರುತ್ತದೆ. ಕುಟುಂಬಸ್ಥರು ತಮ್ಮವರನ್ನು ಕಳೆದುಕೊಂಡು ಹೇಳಲಾಗದ ನೋವು ಅನುಭವಿಸುತ್ತಿರುತ್ತಾರೆ. ಇದಕ್ಕೆಲ್ಲ ಕಾರಣ ಗುಂಡಿ ಬಿದ್ದ ರಸ್ತೆಗಳು, ಸವಾರರ ನಿರ್ಲಕ್ಷ್ಯ ಒಂದ್ಕಡೆಯಾದರೆ ಮತ್ತೊಂದು ಕಾರಣ ಬೆಂಗಳೂರಿಗೆ ಬರುವ ಭಾರೀ ಗಾತ್ರದ ವಾಹನಗಳು.

    ಹೌದು. ಹೆವಿ ವೆಹಿಕಲ್‍ಗಳು ಸಂಚಾರಿ ನಿಯಮ ಪಾಲಿಸದೇ ತಾವು ನಡೆದಿದ್ದೇ ಹಾದಿ ಎಂಬಂತೆ ನುಗ್ಗುತ್ತಾರೆ. ಇದರಿಂದ ಹಲವು ಅಮಾಯಕರು ಜೀವ ಕಳೆದುಕೊಂಡಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ಮಿರ್ಚಿ ಬಜ್ಜಿ ಇಷ್ಟವಾಯ್ತು, ನನ್ನ ಹೆಂಡತಿಗೂ ಪಾರ್ಸೆಲ್ ತೆಗೆದುಕೊಂಡು ಹೋಗ್ತೀನಿ: ಕಪಿಲ್ ದೇವ್

    ಅಂದು ಆ ಸಮಯಕ್ಕೆ ಹೆವಿ ವೆಹಿಕಲ್ ಬರಬಾರ್ದಿತ್ತು. ಮಗು ಆತಂಕದಲ್ಲಿ ಪ್ರಾಣ ಬಿಡ್ತು. ಇನ್ನು ವೆಹಿಕಲ್ ಹರಿದು ಸತ್ತವರ ಕಥೆ ಹೇಗಿರಬೇಕು. ಹೀಗಂತ ಸಾನ್ವಿ ತಾಯಿ ಅಮೃತ ತಮ್ಮ ಮದ್ದು ಮಗಳಿಗೆ ಆದ ಪರಿಸ್ಥಿತಿ ಯಾರಿಗೂ ಬೇಡ ಅಂತಾರೆ. ಇಷ್ಟೆಲ್ಲ ಆದರೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬ್ಯುಸಿನೆಸ್, ವ್ಯವಹಾರನೇ ಮುಖ್ಯ. ಶಾಲೆ – ಕಚೇರಿಗೆ ಹೋಗುವ ಸಂದರ್ಭದಲ್ಲಿ ಸರಕು ಸಾಗಣೆಯ ಭಾರೀ ವಾಹನಗಳ ಓಡಾಟ ಅಪಾಯಕಾರಿ. ಹೀಗಾಗಿ ನಿಗದಿತ ಸಮಯದಲ್ಲಿ ಮಾತ್ರ ವಾಹನಗಳ ಓಡಾಡಬೇಕು ಎಂಬ ಆದೇಶ ಇದೆ. ಆದರೆ ಇದನ್ನ ಮೀರಿ ರಸ್ತೆಗೆ ಬರುವ ವಾಹನಗಳು ಅಪಾಯ ತಂದೊಡ್ಡುತ್ತಿದೆ.

    ಅಂಜನಾನಗರ ಹದಗೆಟ್ಟ ರಸ್ತೆಯಿಂದ ಕೆಳಗೆ ಬಿದ್ದ ಶಿಕ್ಷಕಿ ಮೇಲೆ ಹಿಂದಿನಿಂದ ಬಂದ ವಾಹನ ಹರಿದು ಹೋಗಿತ್ತು. ಕನಕಪುರ ರಸ್ತೆಯಲ್ಲಿ ಕಿರುತೆರೆ ರಿಯಾಲಿಟಿ ಶೋ ಭಾಗವಹಿಸಿದ್ದ ಪುಟಾಣಿ ಸಹ ಜೀವ ಬಿಡ್ತು. ನಿಗದಿತ ಸಮಯಕ್ಕೆ ಸರಕು ಸಾಗಣೆ ವಾಹನ ಸಂಚಾರ ಮಾಡಿದ್ರೇ ಈ ಅನಾಹುತ ಆಗುತ್ತಲೇ ಇರಲಿಲ್ಲ.

    ಭಾರೀ ವಾಹನ ಸಂಚಾರ ರೂಲ್ಸ್
    * ಬೆ.7ರಿಂದ 11 ಗಂಟೆವರೆಗೆ ಸಂಚಾರಕ್ಕೆ ಅವಕಾಶವಿಲ್ಲ
    * ಬೆ.11ರಿಂದ ಸಂಜೆ 4 ಗಂಟೆವರೆಗೆ ಓಡಾಟಕ್ಕೆ ಅವಕಾಶ
    * ಸಂಜೆ 4 ರಿಂದ ರಾತ್ರಿ 8ರವರೆಗೆ ಸಂಚಾರಕ್ಕೆ ಬ್ರೇಕ್
    * ರಾತ್ರಿ 8 ರಿಂದ ಬೆ.7ಗಂಟೆವರೆಗೆ ಓಡಾಟಕ್ಕೆ ಅವಕಾಶ

    ಆದರೆ ಈ ರೂಲ್ಸ್ ಗಳೆಲ್ಲಾ ಬರೀ ಹೇಳೋಕಷ್ಟೇ ಸೀಮಿತವಾಗಿದೆ. ಯಾಕೆಂದರೆ ಈ ರೂಲ್ಸ್ ಫಾಲೋ ಮಾಡುವವರೇ ಇಲ್ಲ. ಬೆಳಗ್ಗೆನೂ ಓಡಾಡುತ್ತವೆ, ಸಂಜೆನೂ ಓಡಾಡುತ್ತವೆ.

  • ಕೊಡಗು ಜಿಲ್ಲೆಯಲ್ಲಿ ಭಾರೀ ವಾಹನಗಳ ನಿರ್ಬಂಧ ಸಡಿಲಿಕೆ

    ಕೊಡಗು ಜಿಲ್ಲೆಯಲ್ಲಿ ಭಾರೀ ವಾಹನಗಳ ನಿರ್ಬಂಧ ಸಡಿಲಿಕೆ

    ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮರಳುಗಾರಿಕೆ, ಮರದ ದಿಮ್ಮಿಗಳ ಸಾಗಾಣಿಕೆ ಹಾಗೂ ಭಾರೀ ವಾಹನ ಸಂಚಾರದ ನಿರ್ಬಂಧ ವಿಧಿಸಿ ಹೊರಡಿಸಲಾದ ಆದೇಶವನ್ನು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಮಾರ್ಪಾಡು ಮಾಡಿದ್ದಾರೆ.

    ವಾಹನದ ನೋಂದಣಿ ತೂಕ 16,200 ಕೆ.ಜಿ.ಗಿಂತ ಹೆಚ್ಚಿನ ತೂಕದ ಸರಕು ಸಾಗಾಣಿಕೆ ಮಾಡುವ ವಾಹನಗಳನ್ನು ಮಾತ್ರ ನಿರ್ಭಂದಿಸಲಾಗಿದೆ. ಉಳಿದ ವಾಹನಗಳು ಸಂಚರಿಸಬಹುದಾಗಿದೆ. ಈ ಆದೇಶ ತಕ್ಷಣದಿಂದ ಜಾರಿಗೆ ಬರಲಿದೆ ಹಾಗೂ ಆಗಸ್ಟ್ 16ರವರೆಗೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.

    ಉಳಿದಂತೆ ಅಡುಗೆ ಅನಿಲ, ಇಂಧನ, ಹಾಲು ಪೂರೈಕೆ, ಸರ್ಕಾರಿ ಕೆಲಸದ ನಿಮಿತ್ತ ಉಪಯೋಗಿಸುವ ವಾಹನಗಳು, ಶಾಲಾ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣಿಕರ ವಾಹನಗಳ(ಮಲ್ಟಿ ಆಕ್ಸಿಲ್ ಬಸ್‍ಗಳು ಸೇರಿದಂತೆ) ಸಂಚಾರಕ್ಕೆ ಯಾವುದೇ ನಿರ್ಬಂಧ ಇಲ್ಲ. ಸಂಬಂಧಪಟ್ಟ ಇಲಾಖೆಗಳು ಹೊರಡಿಸಿರುವ ಅಥವಾ ಇಲಾಖೆ ವತಿಯಿಂದ ಚಾಲ್ತಿಯಲ್ಲಿರುವ ಆದೇಶ, ನಿಯಮ, ನಿರ್ಬಂದ, ಮಾರ್ಗಸೂಚಿಗಳು ಜಾರಿಯಲ್ಲಿರುತ್ತವೆ. ಉಲ್ಲಂಘನೆಯು ಸಂಬಂಧಪಟ್ಟ ಕಾಯ್ದೆಯಡಿ ದಂಡನೀಯವಾಗಿದೆ ಎಂದು ಹೇಳಿದ್ದಾರೆ.

  • ಕೊಡಗಿನಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ

    ಕೊಡಗಿನಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ

    ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚು ಸುರಿಯುತ್ತಿದ್ದು, ಮಳೆಗಾಲದ ಹಿನ್ನೆಲೆ ಮುಂದಿನ ದಿನಗಳಲ್ಲಿ ವರುಣನ ಅಬ್ಬರ ಹೆಚ್ಚಾದರೆ ನದಿ ಪಾತ್ರಗಳಲ್ಲಿ ನೀರಿನ ಹರಿವು ಹೆಚ್ಚಾಗಲಿದ್ದು, ಸಾರ್ವಜನಿಕರ ಸುರಕ್ಷತೆ ಮತ್ತು ಸಾರ್ವಜನಿಕ ಆಸ್ತಿಪಾಸ್ತಿ ರಕ್ಷಣೆ ಹಿತದೃಷ್ಟಿಯಿಂದ ಮರಳುಗಾರಿಕೆ, ಮರದ ದಿಮ್ಮಿಗಳ ಸಾಗಾಣೆ ಮತ್ತು ಇತರೆ ಸರಕು ಸಾಗಾಣಿಕೆಯನ್ನು ಕೊಡಗು ಜಿಲ್ಲೆಯಾದ್ಯಂತ ನಿಷೇಧಿಸಲಾಗಿದೆ. ಮಳೆಗಾಲ ಮುಕ್ತಾಯವಾಗುವವರೆಗೆ ಈ ಆದೇಶ ಜಾರಿಯಲ್ಲಿರುತ್ತದೆ.

    ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಹೆಚ್ಚಾಗುವ ದಿನಗಳಲ್ಲಿ ರಸ್ತೆಯ ಪರಿಸ್ಥಿತಿ ಹದಗೆಡುತ್ತದೆ. ಹಾಗೆಯೇ ಅಧಿಕ ಭಾರ ತುಂಬಿದ ಸರಕು ಸಾಗಾಣೆಯ ಭಾರೀ ವಾಹನಗಳು ದಿನನಿತ್ಯ ಸಂಚರಿಸುವುದರಿಂದ ರಸ್ತೆಯ ಬದಿಗಳ ಮಣ್ಣು ಕುಸಿತದಿಂದಾಗಿ ಹಾಗೂ ರಸ್ತೆಯ ಮೇಲೆ ಮಣ್ಣು ಬಿದ್ದು, ರಸ್ತೆ ಸಂಚಾರಕ್ಕೆ ತೊಂದರೆಯಾಗಿ ಸಾಕಷ್ಟು ಅಪಘಾತಗಳಿಗೆ ಕಾರಣವಾಗುತ್ತದೆ. ಹೀಗಾಗಿ ಜೂನ್ 23 ರಿಂದ ಆಗಸ್ಟ್ 16ರ ವರೆಗೆ ಭಾರೀ ವಾಹನಗಳಿಗೆ ನಿಷೇಧ ಹೇರಲಾಗಿದೆ.

    ಸಾರ್ವಜನಿಕರ ಜೀವ ಮತ್ತು ಆಸ್ತಿಗಳ ಹಿತದೃಷ್ಟಿಯಿಂದ ವಾಹನದ ನೋಂದಣಿ ತೂಕ 16,200 ಕೆ.ಜಿ.ಗಿಂತ ಹೆಚ್ಚಿನ ತೂಕದ ಸರಕು ಸಾಗಾಣಿಕೆ ವಾಹನ, ಮಲ್ಟಿ ಆಕ್ಸಿಲ್ ಟ್ರಕ್‍ಗಳ ಸಂಚಾರ ಮತ್ತು ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸಿಸ್ (ಮಲ್ಟಿ ಆಕ್ಸಿಲ್) ಮತ್ತು ಮರಳು ಸಾಗಾಣಿಕೆ, ಮರದ ದಿಮ್ಮಿಗಳನ್ನು ಸಾಗಿಸುವ ಎಲ್ಲ ರೀತಿಯ ವಾಹನಗಳ ಸಂಚಾರವನ್ನು ಕೊಡಗು ಜಿಲ್ಲೆಯಲ್ಲಿ ಮಳೆಗಾಲ ಮುಗಿಯುವವರೆಗೆ ನಿರ್ಬಂಧಿಸಲು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಆದೇಶಿಸಿದ್ದಾರೆ.

    ಹೆಚ್ಚಿನ ಮಳೆಯಾಗುವ ಕುರಿತು ರಾಜ್ಯ ಹವಾಮಾನ ಇಲಾಖೆ 2-3 ದಿನ ಮುಂಚಿತವಾಗಿ ಆಗಿಂದಾಗ್ಗೆ ವರದಿಯನ್ನು ನೀಡುತ್ತಿದೆ. ಇದನ್ನು ಅವಲೋಕಿಸಿ ಮತ್ತು ಕಳೆದ 3 ವರ್ಷಗಳಲ್ಲಿ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ ಮತ್ತು ನೆರೆ ಹಾವಳಿಯಿಂದಾಗಿ ಹಲವಾರು ರಸ್ತೆಗಳು ಹಾಳಾಗಿದೆ. ಈ ರಸ್ತೆಗಳನ್ನು ಈಗಾಗಲೇ ಮಳೆಹಾನಿ ದುರಸ್ತಿಯಡಿ ಸರಿಪಡಿಸಲಾಗುತ್ತಿದ್ದು, ಪ್ರಸ್ತುತ ವರ್ಷದ ಮಳೆಗಾಲ ಸಹ ಪ್ರಾರಂಭವಾಗಿದೆ. ಇದರಿಂದ ಮುಂದೆ ಸಂಭವಿಸಬಹುದಾದ ಅಪಾಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ರಕ್ಷಣೆ, ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಭಾರೀ ಸರಕು ವಾಹನಗಳ ಸಂಚಾರವನ್ನು ನಿಷೇಧಿಸುವುದು ಸೂಕ್ತವಾಗಿದೆ. ಈ ರಸ್ತೆಗಳಲ್ಲಿ ಲಘು ವಾಹನಗಳು, ಬಸ್‍ಗಳು ಹಾಗೂ 10 ಟನ್ ತೂಕದೊಳಗಿನ ಸರಕು ವಾಹನಗಳನ್ನು ಹೊರತುಪಡಿಸಿ ಉಳಿದ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸುವುದು ಸೂಕ್ತವಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

    ಈ ಎಲ್ಲ ಉಲ್ಲೇಖಗಳಲ್ಲಿನ ವರದಿ, ನಡವಳಿ ಹಾಗೂ ಪ್ರಕೃತಿ ವಿಕೋಪ ನಿರ್ವಹಣಾ ಪ್ರಾಧಿಕಾರದ ಸಭೆಯ ತೀರ್ಮಾನವನ್ನು ಪರಿಶೀಲಿಸಿ, ಕೊಡಗು ಜಿಲೆಯಲ್ಲಿ 2018-19, 2019-20 ಮತ್ತು 2020-21 ನೇ ಸಾಲಿನಲ್ಲಿ ಆದ ಭಾರೀ ಮಳೆಯಿಂದ ಹಲವು ಭಾಗಗಳಲ್ಲಿ ಭೂಕುಸಿತವಾಗಿದ್ದು, ಜೀವಹಾನಿಯೊಂದಿಗೆ ಭಾರೀ ಪ್ರಮಾಣದಲ್ಲಿ ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿಯಾಗಿದೆ. ಕೊಡಗು ಜಿಲ್ಲೆಯ ರಸ್ತೆಗಳು ಭಾರೀ ತಿರುವು ಹಾಗೂ ಏರಿಳಿತದಿಂದ ಕೂಡಿವೆ. ಪ್ರಸ್ತುತ ಮುಂಗಾರು ಪ್ರಾರಂಭವಾಗಿದ್ದು, ಮಳೆಯ ಪ್ರಮಾಣ ಹೆಚ್ಚಿದಂತೆ ನೆಲದಲ್ಲಿ ತೇವಾಂಶ ಹೆಚ್ಚಾಗಿ, ಅಧಿಕ ಭಾರದ ವಾಹನಗಳು ಸಂಚರಿಸಿದಲ್ಲಿ ಭೂ ಕುಸಿತ ಉಂಟಾಗಿ ಅನಾಹುತಗಳಾಗುವ ಸಾಧ್ಯತೆ ಹೆಚ್ಚಿದೆ ಎಂದು ಡಿಸಿ ತಿಳಿಸಿದ್ದಾರೆ.

    ಕರ್ನಾಟಕ ಪೊಲೀಸ್ ಕಾಯ್ದೆ 1963ರ ವಿಧಿ 31, ಪ್ರಕೃತಿ ವಿಕೋಪ ನಿರ್ವಹಣಾ ಕಾಯ್ದೆ 2005ರ ಕಲಂ 33, ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನ ನಿಯಮಗಳ ನಿಯಮ 1989ರ (ತಿದ್ದುಪಡಿ ನಿಯಮಾವಳಿ 1990) ನಿಯಮ 221ಎ (5), ದಂಡಪ್ರಕ್ರಿಯಾ ಸಂಹಿತೆ 1973ರ ಕಲಂ 144ರ ಅಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ, ಸಾರ್ವಜನಿಕ ಆಸ್ತಿಪಾಸ್ತಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಕೊಡಗು ಜಿಲ್ಲೆಯಾದ್ಯಂತ ಇದೇ ಜೂನ್ 23 ರಿಂದ ಆಗಸ್ಟ್ 16 ವರೆಗೆ ಎಲ್ಲಾ ರೀತಿಯ ಮರದ ದಿಮ್ಮಿ ಮತ್ತು ಮರಳು ಸಾಗಾಣಿಕೆ ವಾಹನಗಳು, ವಾಹನದ ನೋಂದಣಿ ತೂಕ 16,200 ಕೆ.ಜಿ.ಗಿಂತ ಹೆಚ್ಚಿನ ಸರಕು ಸಾಗಾಣೆ ಮಾಡುವ ಸರಕು ಸಾಗಾಣಿಕೆ ವಾಹನಗಳು, ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸಿಸ್ (ಮಲ್ಟಿ ಆಕ್ಸಿಲ್) ವಾಹನಗಳನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಚಾರುಲತಾ ಸೋಮಲ್ ಅವರು ಆದೇಶ ಹೊರಡಿಸಿದ್ದಾರೆ.

  • ಮಳೆಗಾಲ ಆರಂಭ- ಕೊಡಗಿನಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ

    ಮಳೆಗಾಲ ಆರಂಭ- ಕೊಡಗಿನಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ

    ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಎದುರಾಗಿದ್ದ ಭೂಕುಸಿತದಿಂದ ಜನ ಸಾಕಷ್ಟು ಸಂಕಷ್ಟ ಎದುರಿಸಿದ್ದಾರೆ. ಹೀಗಾಗಿ ಈ ಬಾರಿ ಮಳೆಗಾಲ ಆರಂಭವಾಗುತ್ತಿದ್ದಂತೆ ಭಾರೀ ವಾಹನಗಳ ಸಂಚಾರಕ್ಕೆ ಕೊಡಗು ಜಿಲ್ಲಾಡಳಿತ ನಿಷೇಧ ಹೇರಿ ಆದೇಶಿಸಿದೆ.

    ಕೊಡಗಿನಲ್ಲಿ ಈಗಾಗಲೇ ಮಳೆ ಆರಂಭವಾಗಿದ್ದು, ಭೂಮಿಯಲ್ಲಿ ತೇವಾಂಶ ಹೆಚ್ಚಾದಂತೆ ಭೂ ಕುಸಿತ ಆಗುವ ಸಾಧ್ಯತೆ ಹೆಚ್ಚಿದೆ ಎಂದು ಜಿಲ್ಲಾಡಳಿತ ಈ ಕ್ರಮಕ್ಕೆ ಮುಂದಾಗಿದೆ. ಹೀಗಾಗಿ ಬುಲೆಟ್ ಟ್ಯಾಂಕರ್ಸ್, ಶಿಫ್ ಕಾರ್ಗೋ, ಕಂಟೈನರ್, ಲಾಂಗ್ ಚಾಸಿಸ್ ವಾಹನಗಳು ಸೇರಿದಂತೆ ಎಲ್ಲ ಬಗೆಯ ಭಾರಿ ವಾಹನಗಳ ಓಡಾಟಕ್ಕೆ ನಿಷೇಧ ಹೇರಿ ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಆದೇಶ ಹೊರಡಿಸಿದ್ದಾರೆ.

    ಅಡುಗೆ ಅನಿಲ, ಇಂಧನ ಪೂರೈಕೆ, ಹಾಲು ಹಾಗೂ ಸರ್ಕಾರಿ ಕೆಲಸದ ನಿಮಿತ್ತ ಸಂಚರಿಸುವ ವಾಹನಗಳು, ಶಾಲಾ-ಕಾಲೇಜು ಹಾಗೂ ಸಾರ್ವಜನಿಕರು ಪ್ರಯಾಣಿಸುವ ವಾಹನಗಳನ್ನು ಹೊರತುಪಡಿಸಿ, ಮರದ ದಿಮ್ಮಿಗಳ ಸಾಗಾಟ ಮತ್ತು ಮರಳು ಸಾಗಾಟಕ್ಕೂ ನಿಷೇಧ ಹೇರಲಾಗಿದೆ. ಜೂನ್ 11 ರಿಂದ ಆಗಸ್ಟ್ 10ರ ವರೆಗೆ ಎರಡು ತಿಂಗಳುಗಳ ಕಾಲ ಎಲ್ಲ ಬಗೆಯ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿ ಆದೇಶಿಸಿದ್ದಾರೆ.