Tag: hebbe falls

  • ಹೆಬ್ಬೆ ಜಲಪಾತದ ಬಳಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವಾಗ ಬಂಡೆ ಮೇಲಿಂದ ಜಾರಿ ಬಿದ್ದು ಯುವಕ ಸಾವು!

    ಹೆಬ್ಬೆ ಜಲಪಾತದ ಬಳಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವಾಗ ಬಂಡೆ ಮೇಲಿಂದ ಜಾರಿ ಬಿದ್ದು ಯುವಕ ಸಾವು!

    ಚಿಕ್ಕಮಗಳೂರು: ತರೀಕೆರೆಯ (Tarikere) ಹೆಬ್ಬೆ ಜಲಪಾತದ (Hebbe Falls) ಬಳಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವಾಗ ಕಾಲು ಜಾರಿ ಬಿದ್ದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ.

    ಮೃತನನ್ನು ಹೈದರಾಬಾದ್ (Hyderabad) ಮೂಲದ ಶ್ರವಣ್ (25) ಎಂದು ಗುರುತಿಸಲಾಗಿದೆ. ಮೃತ ಶ್ರವಣ್ ತನ್ನ ಸ್ನೇಹಿತನ ಜೊತೆ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ, ದತ್ತಪೀಠ, ಗಾಳಿಕೆರೆ, ಕಲ್ಲತ್ತಿಗಿರಿ, ಕೆಮ್ಮಣ್ಣುಗುಂಡಿಗೆ ಪ್ರವಾಸಕ್ಕೆ ಬಂದಿದ್ದ. ಇಬ್ಬರೂ ಸೋಮವಾರ ಹೆಬ್ಬೆ ಜಲಪಾತಕ್ಕೆ ಭೇಟಿ ನೀಡಿದ್ದರು. ಈ ವೇಳೆ ಬಂಡೆ ಮೇಲೆ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಳ್ಳುವ ಕಾಲು ಜಾರಿ ನೀರಿನೊಳಕ್ಕೆ ಬಿದ್ದಿದ್ದಾನೆ. ಕೂಡಲೇ ಆತನ ಸ್ನೇಹಿತ ಹಾಗೂ ಇತರೆ ಪ್ರವಾಸಿಗರು ಆತನನ್ನ ಮೇಲಕ್ಕೆತ್ತಿದ್ದಾರೆ. ನಂತರ ಚಿಕಿತ್ಸೆಗಾಗಿ ತರಿಕೆರೆ ಆಸ್ಪತ್ರೆಗೆ ಕರೆತರಲಾಗಿತ್ತು. ಆದ್ರೆ ತಲೆಗೆ ಗಂಭೀರವಾಗಿ ಪೆಟ್ಟಾಗಿದ್ದರಿಂದ ಆಸ್ಪತ್ರೆ ಆವರಣದಲ್ಲೇ ಯುವಕ ಸಾವನ್ನಪಿದ್ದಾನೆ. ಇದನ್ನೂ ಓದಿ: ಐವರು ಕೇಂದ್ರ ಸಚಿವರು ರಾಜ್ಯದ ಸಮಸ್ಯೆಗಳನ್ನು ಬಗೆಹರಿಸುವ ವಿಶ್ವಾಸವಿದೆ: ಪರಮೇಶ್ವರ್

    ಹೆಬ್ಬೆ ಜಲಪಾತ ಕಾಡಿನೊಳಗಿದ್ದು, ಕೆಮ್ಮಣ್ಣುಗುಂಡಿಯಿಂದ ಸುಮಾರು 7 ಕಿ.ಮೀ ಕಾಫಿ ತೋಟದ ಒಳಗೆ ಜೀಪ್‍ನಲ್ಲೇ ಹೋಗಬೇಕು. ಹೆಬ್ಬೆ ಜಲಪಾತ ತರೀಕೆರೆಯಿಂದ ಸುಮಾರು 35-40 ಕಿಮೀ ಮೀಟರ್ ದೂರದಲ್ಲಿದೆ. ಅಲ್ಲಿಂದ ಶ್ರವಣ್‍ನನ್ನು ಆಸ್ಪತ್ರೆಗೆ ಕರೆತರುವುದು ಬಹಳ ತಡವಾಗಿದೆ ಎಂದು ತಿಳಿದುಬಂದಿದೆ.

    ಈ ಸಂಬಂಧ ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಕಸ್ಟಡಿ ಅವಧಿ ಅಂತ್ಯ – ಪರಪ್ಪನ ಅಗ್ರಹಾರ ಜೈಲಿಗೆ ಪ್ರಜ್ವಲ್ ಶಿಫ್ಟ್!

  • ಮೈದುಂಬಿ ಧುಮ್ಮಿಕ್ಕುತ್ತಿದೆ ಹೆಬ್ಬೆ ಜಲಪಾತ

    ಮೈದುಂಬಿ ಧುಮ್ಮಿಕ್ಕುತ್ತಿದೆ ಹೆಬ್ಬೆ ಜಲಪಾತ

    – ಹರಿದುಬರುತ್ತಿದೆ ಪವಾಸಿಗರ ದಂಡು

    ಚಿಕ್ಕಮಗಳೂರು: ಮುಳ್ಳಯ್ಯನಗಿರಿ, ದತ್ತಪೀಠ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೆಬ್ಬೆ ಜಲಪಾತ ಮೈದುಂಬಿ ಧುಮ್ಮಿಕ್ಕುತ್ತಿದೆ.

    ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಈ ಜಲಪಾತವಿದ್ದು, ಇದೀಗ ಫಾಲ್ಸ್ ಸೊಬಗಿಗೆ ಪ್ರವಾಸಿಗರು ಮನಸೋತಿದ್ದಾರೆ. ಅಲ್ಲದೆ ಈ ರಮಣೀಯ ದೃಶ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡೇ ಹರಿದುಬರುತ್ತಿದೆ.

    ಕಳೆದೊಂದು ವಾರದಿಂದಲೂ ಸುಮಾರು 80 ಅಡಿ ಎತ್ತರದ ಈ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದ್ದು, ನೀರು ಹಾಲ್ನೋರೆಯಂತೆ ಬೀಳುತ್ತಿದೆ. ಪ್ರವಾಸಿಗರು ತಂಡೋಪತಂಡವಾಗಿ ಇಲ್ಲಿಗೆ ಭೇಟಿ ಮಾಡುತ್ತಿದ್ದು, ಈ ಸುಂದರ ದೃಶ್ಯವನ್ನು ತಮ್ಮ ಕ್ಯಾಮೆರಾಗಳಲ್ಲಿ ಸೆರೆ ಹಿಡಿಯುತ್ತಿದ್ದಾರೆ. ಅಲ್ಲದೆ ಪ್ರವಾಸಿಗರು ಜಲಪಾತದ ನೀರಿನಲ್ಲಿ ಎಂಜಾಯ್ ಮಾಡುತ್ತಿದ್ದಾರೆ.

    ಸದ್ಯ ಕಾಫಿನಾಡ ಮಲೆನಾಡು ಭಾಗದಲ್ಲಿ ಮಳೆ ತಗ್ಗಿದ್ದು, ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ನಿಡುವಾಳೆ, ಬಾಳೂರು ಸುತ್ತಮುತ್ತ ಭಾರೀ ಗಾಳಿ ಬೀಸುತ್ತಿದೆ. ಮುಳುಗಡೆ ಎಂದೇ ಖ್ಯಾತಿಯಾದ ಹೆಬ್ಬಾಳ ಹಾಗೂ ಕಳಸ ಹಾಗೂ ಹೊರನಾಡು ಸಂಪರ್ಕ ಮುಕ್ತ ಸೇತುವೆ ಸಂಚಾರ ಮುಕ್ತವಾಗಿದೆ. ನಿನ್ನೆ ಸೇತುವೆ ಮೇಲೆ ಎರಡ್ಮೂರು ಅಡಿಯಷ್ಟು ನೀರು ಹರಿಯುತ್ತಿತ್ತು.

    ಭದ್ರೆಯ ಹರಿವಿನಲ್ಲಿ ಕೊಂಚ ಇಳಿಕೆ ಕಂಡುಬಂದಿದ್ದು, ಸೇತುವೆಯ ಮೇಲಿನಿಂದ ಎರಡು ಅಡಿ ನೀರು ಇಳಿಕೆಯಾಗಿದೆ. ಶೃಂಗೇರಿ, ಕೊಪ್ಪ, ಎನ್.ಆರ್.ಪುರ ತಾಲೂಕಿನಲ್ಲಿ ಮಳೆಯಬ್ಬರ ಕಡಿಮೆಯಾಗಿದೆ. ಶೃಂಗೇರಿಯಲ್ಲಿ ತುಂಗಾ ನದಿಯ ಹರಿವಿನಲ್ಲಿ ಇಳಿಕೆಯಾಗಿದ್ದು, ಮಲೆನಾಡಿನಲ್ಲಿ ಮಳೆ ಬಿಟ್ಟು-ಬಿಟ್ಟು ಸುರಿಯುತ್ತಿದೆ.