Tag: helicopter

  • ಮಣಿಪುರ | ಭಾರೀ ಮಳೆ – ಹೆಲಿಕಾಪ್ಟರ್‌ ಬಿಟ್ಟು ರಸ್ತೆ ಮಾರ್ಗದಲ್ಲೇ ಚುರಾಚಾಂದ್‍ಪುರಕ್ಕೆ ಮೋದಿ ಪ್ರಯಾಣ

    ಮಣಿಪುರ | ಭಾರೀ ಮಳೆ – ಹೆಲಿಕಾಪ್ಟರ್‌ ಬಿಟ್ಟು ರಸ್ತೆ ಮಾರ್ಗದಲ್ಲೇ ಚುರಾಚಾಂದ್‍ಪುರಕ್ಕೆ ಮೋದಿ ಪ್ರಯಾಣ

    • ರಸ್ತೆ ಮಾರ್ಗದಲ್ಲಿ ಬಂದಿದ್ದು ಒಳ್ಳೆಯದೇ ಆಯ್ತು – ಪ್ರಯಾಣದ ಅನುಭವ ಹಂಚಿಕೊಂಡ ಪಿಎಂ

    ಇಂಫಾಲ: ಮಣಿಪುರದ (Manipur) ರಾಜಧಾನಿ ಇಂಫಾಲದಲ್ಲಿ ಭಾರೀ ಮಳೆಯಾಗುತ್ತಿದ್ದ (Rain) ಕಾರಣ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ರಸ್ತೆ ಮಾರ್ಗದಲ್ಲೇ ಚುರಾಚಾಂದ್‍ಪುರಕ್ಕೆ (Churachandpur) ಪ್ರಯಾಣ ಬೆಳೆಸಿದ್ದಾರೆ.

    ಮಳೆಯಿಂದಾಗಿ ಹೆಲಿಕಾಪ್ಟರ್ (Helicopter) ಹಾರಾಟಕ್ಕೆ ಹವಾಮಾನ ಅನುಕೂಲಕರವಾಗಿಲ್ಲ ಎಂದು ಅಧಿಕಾರಿಗಳು ಪ್ರಧಾನಿಗೆ ಮಾಹಿತಿ ನೀಡಿದರು. ಇದರಿಂದ ಹೆಲಿಕಾಪ್ಟರ್‌ ಬಳಕೆಯನ್ನು ಮೊಟಕುಗೊಳಿಸಲಾಯಿತು. ಬಳಿಕ ಮೋದಿಯವರು ಸುಮಾರು 61 ಕಿ.ಮೀ ಪ್ರಯಾಣ ಮಾಡಿ, ಚುರಾಚಾಂದ್‍ಪುರ ತಲುಪಿದ್ದಾರೆ. ಇದಕ್ಕೂ ಮುನ್ನ ಜನರೊಂದಿಗೆ ಸಂವಹನ ನಡೆಸಲು ಎಷ್ಟೇ ಸಮಯ ಆದರೂ ಪ್ರಯಾಣ ಮಾಡಲು ಸಿದ್ಧ ಎಂದು ಮೋದಿಯವರು ಹೇಳಿದರು ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮಣಿಪುರ ಮಾತುಕತೆ ಸಫಲ; ರಾಷ್ಟ್ರೀಯ ಹೆದ್ದಾರಿ ತೆರೆಯಲು ಕುಕಿ ಗ್ರೂಪ್ ಒಪ್ಪಿಗೆ

    ಚುರಾಚಾಂದ್‍ಪುರದಲ್ಲಿ ತಮ್ಮ ರಸ್ತೆ ಪ್ರಯಾಣದ ಅನುಭವವನ್ನು ಜನರೊಂದಿಗೆ ಹಂಚಿಕೊಂಡಿರುವ ಅವರು, ಮಣಿಪುರದ ಜನರ ಉತ್ಸಾಹಕ್ಕೆ ನಾನು ನಮಸ್ಕರಿಸುತ್ತೇನೆ. ಭಾರೀ ಮಳೆಯಲ್ಲೂ ಇಲ್ಲಿಗೆ ಇಷ್ಟೊಂದು ಸಂಖ್ಯೆಯಲ್ಲಿ ಬಂದಿದ್ದೀರಿ. ನಿಮ್ಮ ಪ್ರೀತಿಗೆ ನಾನು ಕೃತಜ್ಞ. ಭಾರೀ ಮಳೆಯಿಂದಾಗಿ ನನ್ನ ಹೆಲಿಕಾಪ್ಟರ್‌ನಲ್ಲಿ ಬರಲು ಸಾಧ್ಯವಾಗಲಿಲ್ಲ. ಆದ್ದರಿಂದ ರಸ್ತೆ ಮಾರ್ಗದಲ್ಲಿ ಬಂದೆ. ನಾನು ರಸ್ತೆಯ ಮೂಲಕ ಬಂದಿದ್ದು ಒಳ್ಳೆಯದೇ ಆಯ್ತು ಎಂದು ನನ್ನ ಹೃದಯ ಹೇಳುತ್ತದೆ. ದಾರಿಯುದ್ದಕ್ಕೂ ತ್ರಿವರ್ಣ ಧ್ವಜವನ್ನು ಕೈಯಲ್ಲಿ ಹಿಡಿದುಕೊಂಡು ಎಲ್ಲರೂ ನನ್ನನ್ನು ಪ್ರೀತಿಯಿಂದ ಸ್ವಾಗತ ಮಾಡಿದ್ದಾರೆ. ನನ್ನ ಜೀವನದಲ್ಲಿ ಈ ಕ್ಷಣವನ್ನು ನಾನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

    ಹಿಂಸಾಚಾರ ಪೀಡಿತ ರಾಜ್ಯದ ಜನರ ಜೀವನವನ್ನು ಮತ್ತೆ ಸರಿದಾರಿಗೆ ತರಲು ಕೇಂದ್ರ ಸರ್ಕಾರ ಪ್ರಯತ್ನ ಮಾಡುತ್ತಿದೆ. ನಾನು ನಿಮ್ಮೊಂದಿಗಿದ್ದೇನೆ ಎಂಬ ಭರವಸೆಯನ್ನು ನೀಡುತ್ತೇನೆ. ಭಾರತ ಸರ್ಕಾರ ಮಣಿಪುರದ ಜನರೊಂದಿಗಿದೆ. ಎಲ್ಲಾ ಗುಂಪುಗಳು ತಮ್ಮ ಕನಸುಗಳನ್ನು ನನಸಾಗಿಸಲು ಶಾಂತಿಯ ಮಾರ್ಗ ಅನುಸರಿಸಬೇಕು ಎಂದು ಮನವಿ ಮಾಡಿದ್ದಾರೆ.

    2023 ರಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ನಂತರ ಅವರು ರಾಜ್ಯಕ್ಕೆ ನೀಡಿದ ಮೊದಲ ಭೇಟಿ ಇದಾಗಿದೆ. ಮಣಿಪುರದಲ್ಲಿ ಮೇ 2023 ರಲ್ಲಿ ಪ್ರಾಬಲ್ಯ ಹೊಂದಿರುವ ಮೈತೇಯಿ ಸಮುದಾಯ ಮತ್ತು ಕುಕಿ ಬುಡಕಟ್ಟು ಜನಾಂಗದ ನಡುವೆ ಜನಾಂಗೀಯ ಘರ್ಷಣೆಗಳು ಭುಗಿಲೆದ್ದಿತ್ತು. ಈ ಹಿಂಸಾಚಾರದಲ್ಲಿ 250ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಹಿಂಸಾಚಾರದಿಂದಾಗಿ 60,000 ಜನರನ್ನು ಸರ್ಕಾರ ನಿರ್ಮಿಸಿದ್ದ ತಾತ್ಕಾಲಿಕ ಶಿಬಿರಗಳಿಗೆ ಸ್ಥಳಾಂತರಿಸಲಾಗಿತ್ತು. ಇದನ್ನೂ ಓದಿ: ನಿರ್ಲಕ್ಷಕ್ಕೊಳಗಾಗಿದ್ದ ಈಶಾನ್ಯ ಭಾರತ ಈಗ ಅಭಿವೃದ್ಧಿಯ ಎಂಜಿನ್‌: ಮೋದಿ

  • ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಹೆದ್ದಾರಿಯಲ್ಲಿ ತುರ್ತು ಭೂಸ್ಪರ್ಶ

    ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಹೆದ್ದಾರಿಯಲ್ಲಿ ತುರ್ತು ಭೂಸ್ಪರ್ಶ

    – ಪೈಲೆಟ್‌ಗೆ ಗಾಯ, ಪ್ರಯಾಣಿಕರು ಸೇಫ್

    ಡೆಹ್ರಾಡೂನ್: ಟೇಕ್ ಆಫ್ ವೇಳೆ ತಾಂತ್ರಿಕ ದೋಷ ಉಂಟಾದ ಪರಿಣಾಮ ಕೇದಾರನಾಥಕ್ಕೆ (Kedarnath) ತೆರಳುತ್ತಿದ್ದ ಹೆಲಿಕಾಪ್ಟರ್ (Helicopter) ಹೆದ್ದಾರಿಯಲ್ಲೇ ತುರ್ತು ಭೂಸ್ಪರ್ಶ ಮಾಡಿದ ಘಟನೆ ಉತ್ತರಾಖಂಡದ (Uttarakhand) ರುದ್ರಪ್ರಯಾಗದಲ್ಲಿ ನಡೆದಿದೆ.

    ಘಟನೆಯಲ್ಲಿ ಪೈಲೆಟ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಲಿಕಾಪ್ಟರ್‌ನಲ್ಲಿ ಪೈಲೆಟ್ ಹಾಗೂ ಐದು ಮಂದಿ ಪ್ರಯಾಣಿಕರಿದ್ದರು. ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ಹಾನಿಯಾಗಿಲ್ಲ. ಈ ಹೆಲಿಕಾಪ್ಟರ್ ಕ್ರೆಸ್ಟೆಲ್ ವಿಮಾನಯಾನ ಸಂಸ್ಥೆಗೆ ಸೇರಿದೆ. ಇದನ್ನೂ ಓದಿ: ಮಂಗಳೂರು| ಸೆಮಿನಾರ್ ತಪ್ಪಿಸಲು ವಿದ್ಯಾರ್ಥಿನಿಯಿಂದಲೇ ಮೆಡಿಕಲ್ ಕಾಲೇಜಿಗೆ ಬಾಂಬ್ ಬೆದರಿಕೆ

    ಈ ಹೆಲಿಕಾಪ್ಟರ್ ರುದ್ರಪ್ರಯಾಗ (Rudraprayag) ಜಿಲ್ಲೆಯ ಬಡಾಸು ಪ್ರದೇಶದ ಹೆಲಿಪ್ಯಾಡ್‌ನಿಂದ ಮಧ್ಯಾಹ್ನ 12:52ಕ್ಕೆ ಹೊರಟಿತ್ತು. ಆದರೆ ಟೇಕ್ ಆಫ್ ನಂತರ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಪೈಲಟ್ ಹೆದ್ದಾರಿಯಲ್ಲಿಯೇ ತುರ್ತು ಲ್ಯಾಂಡಿಂಗ್ ಮಾಡಿದ್ದಾರೆ. ತುರ್ತು ಭೂಸ್ಪರ್ಶದ ವೇಳೆ ಹೆಲಿಕಾಪ್ಟರ್‌ನ ಹಿಂಭಾಗ ಕಾರಿಗೆ ತಾಗಿದ್ದು, ಕಾರು ಜಖಂಗೊಂಡಿದೆ. ಇದನ್ನೂ ಓದಿ: ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ ಕಾರ್ಯದಲ್ಲಿ 17 ವರ್ಷ ಕಳೆದ IISC ಪ್ರೊಫೆಸರ್ ಮಾಧವಿ ಲತಾ

  • 2023-24ನೇ ಸಾಲಿನಲ್ಲಿ ಸಿಎಂ ಹೆಲಿಕಾಪ್ಟರ್ ಪ್ರಯಾಣಕ್ಕೆ 11 ಕೋಟಿ ಹಣ ಖರ್ಚು

    2023-24ನೇ ಸಾಲಿನಲ್ಲಿ ಸಿಎಂ ಹೆಲಿಕಾಪ್ಟರ್ ಪ್ರಯಾಣಕ್ಕೆ 11 ಕೋಟಿ ಹಣ ಖರ್ಚು

    ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ಅವರು ಕಾಂಗ್ರೆಸ್ (Congress) ಸರ್ಕಾರ ಬಂದಾಗಿನಿಂದ ವಿಮಾನ ಹಾಗೂ ಹೆಲಿಕಾಪ್ಟರ್ ಪ್ರಯಾಣಕ್ಕೆ ಬರೋಬ್ಬರಿ 11 ಕೋಟಿ ರೂ. ಖರ್ಚು ಮಾಡಿದ್ದಾರೆ. ಈ ಖರ್ಚು ವೆಚ್ಚದ ವರದಿಯನ್ನು ಸರ್ಕಾರ ವಿಧಾನ ಪರಿಷತ್‌ನಲ್ಲಿ ತಿಳಿಸಿದೆ.

    ಈ ವಿಚಾರವಾಗಿ ವಿಧಾನಪರಿಷತ್‌ನಲ್ಲಿ ಜೆಡಿಎಸ್ ಶಾಸಕ ಜವರಾಯಿಗೌಡ ಪ್ರಶ್ನಿಸಿದರು. ಈ ವೇಳೆ ಸಿಎಂ ಲಿಖಿತ ರೂಪದ ಮೂಲಕ ಉತ್ತರವನ್ನು ನೀಡಿದ್ದಾರೆ. ಇದನ್ನೂ ಓದಿ: ಹೊಕ್ಕಳಿಗೆ 2.7 ಕೋಟಿ ಮೌಲ್ಯದ ಡೈಮಂಡ್ ರಿಂಗ್ ಧರಿಸಿದ ಪ್ರಿಯಾಂಕಾ ಚೋಪ್ರಾ- ಬೆಲೆ ಕೇಳಿ ಫ್ಯಾನ್ಸ್‌ ಶಾಕ್

    ವಿವಿಧ ಜಿಲ್ಲೆ ಪ್ರವಾಸ, ವಿಶೇಷ ಪ್ರವಾಸಗಳಿಗಾಗಿ ಸಿಎಂ ವಿಮಾನ ಬಳಕೆ ಮಾಡಿದ್ದರು. ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಇಲ್ಲಿಯವರೆಗೆ ಸಿಎಂ ಹಾಗೂ ರಾಜ್ಯಪಾಲರು ಸುಮಾರು 34 ಕೋಟಿ ರೂ. ವಿಮಾನಯಾನಕ್ಕೆ ಖರ್ಚು ಮಾಡಿದ್ದಾರೆ. ಇದನ್ನೂ ಓದಿ: ಹಮಾಸ್‌ ಉಗ್ರರಿಗೆ ಬೆಂಬಲ – ಭಾರತದ ಸಂಶೋಧಕ ಅಮೆರಿಕದಲ್ಲಿ ಅರೆಸ್ಟ್‌, ಶೀಘ್ರವೇ ಗಡೀಪಾರು

    ಈ ವರದಿಯಲ್ಲಿ ಸಿಎಂ, ರಾಜ್ಯಪಾಲರು ಹಾಗೂ ಹೈಕೋರ್ಟ್ ನ್ಯಾಯಾಧೀಶರ ಸಂಪೂರ್ಣ ವಿಮಾನ ಹಾಗೂ ಹೆಲಿಕಾಷ್ಟರ್ ಪ್ರಯಾಣದ ಖರ್ಚು ವೆಚ್ಚದ ಮಾಹಿತಿಯಿದೆ. 2024-25ನೇ ಸಾಲಿನಲ್ಲಿ ಸರ್ಕಾರವು ಸುಮಾರು 21 ಕೋಟಿ ರೂ. ವಿಮಾನ ಪ್ರಯಾಣಕ್ಕೆ ಖರ್ಚು ಮಾಡಿದೆ.

  • ವಿಮಾನ – ಹೆಲಿಕಾಪ್ಟರ್ ದುರಂತ; ಎಲ್ಲಾ 64 ಮಂದಿ ದುರ್ಮರಣ, 28 ಮೃತದೇಹ ಪತ್ತೆ

    ವಿಮಾನ – ಹೆಲಿಕಾಪ್ಟರ್ ದುರಂತ; ಎಲ್ಲಾ 64 ಮಂದಿ ದುರ್ಮರಣ, 28 ಮೃತದೇಹ ಪತ್ತೆ

    ವಾಷಿಂಗ್ಟನ್: ಸೇನಾ ಹೆಲಿಕಾಪ್ಟರ್‌ – ಅಮೆರಿಕರ ವಿಮಾನದ ನಡುವಿನ ದುರಂತದಲ್ಲಿ (Plane Helicopter Collision) ಎಲ್ಲಾ 64 ಮಂದಿ ದುರ್ಮರಣಕ್ಕೀಡಾಗಿದ್ದು, ಈವರೆಗೆ 28 ಮೃತದೇಹಗಳನ್ನು ಪೊಟೊಮ್ಯಾಕ್ ನದಿಯಿಂದ (Potomac River) ಹೊರತೆಗೆಯಲಾಗಿದೆ ಎಂದು ವರದಿಗಳು ತಿಳಿಸಿವೆ.

    ಅಮೆರಿಕದ (America) ವಾಷಿಂಗ್ಟನ್ ಡಿಸಿಯ ರೊನಾಲ್ಡ್ ರೇಗನ್ ವಿಮಾನ ನಿಲ್ದಾಣದ (Reagan National Airport) ಬಳಿ ದುರಂತ ನಡೆದಿದೆ. ಈ ವೇಳೆ ಅಮೆರಿಕನ್ ಏರ್‌ಲೈನ್ಸ್ ಫ್ಲೈಟ್-5342ರಲ್ಲಿ ಪ್ರಯಾಣಿಸುತ್ತಿದ್ದ ಎಲ್ಲಾ 64 ಮಂದಿ ಸಾವನ್ನಪ್ಪಿದ್ದು, ಈವರೆಗೆ 28 ಮೃತದೇಹಳನ್ನು ಹೊರತೆಗೆಯಲಾಗಿದೆ. ಭೀಕರ ದುರಂತದಲ್ಲಿ ಬದುಕುಳಿದಿರುವ ಸಾಧ್ಯತೆಗಳು ಕಡಿಮೆ ಎಂದು ವಾಷಿಂಗ್ಟನ್ ಅಗ್ನಿಶಾಮಕ ಮುಖ್ಯಸ್ಥ ಜಾನ್ ಡೊನ್ನೆಲ್ಲಿಯನ್ನು ತಿಳಿಸಿದ್ದಾರೆ. ಇದನ್ನೂ ಓದಿ: AI ರಂಗದಲ್ಲಿ ಡೀಪ್‌ಸೀಕ್ ಸಂಚಲನ – ಅಮೆರಿಕ ಷೇರುಪೇಟೆ ಶೇಕ್!

    ಸದ್ಯ ನದಿಯಲ್ಲಿ ಉಳಿದ ಮೃತದೇಹಳಿಗಾಗಿ ಕಾರ್ಯಾಚರಣೆ ಮುಂದುವರಿದಿದೆ. ಆದ್ರೆ ಮಿಲಿಟರಿ ಬ್ಲಾಕ್‌ ಹಾಕ್ ಹೆಲಿಕಾಪ್ಟರ್‌ನಲ್ಲಿ ಮೂವರು ಸೈನಿಕರಿದ್ದು, ಅವರ ಬಗ್ಗೆ ಯಾವುದೇ ಮಾಹಿತಿ ಇನ್ನೂ ಲಭ್ಯವಾಗಿಲ್ಲ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಕಾಂಗೋದಲ್ಲಿ M23 ಬಂಡುಕೋರರ ಲೂಟಿ – 100ಕ್ಕೂ ಹೆಚ್ಚು ಬಲಿ, ಸಾವಿರಾರು ಜನರಿಗೆ ಗಾಯ

    ಅಪಘಾತ ಸಂಭವಿಸಿದ್ದು ಹೇಗೆ?
    ದುರಂತಕ್ಕೀಡಾದ ಅಮೆರಿಕನ್‌ ಏರ್‌ಲೈನ್ಸ್‌ (American Airlines) ವಿಮಾನವು ಕಾನ್ಸಾಸ್‌ನಿಂದ ಡಿ.ಸಿ.ಯ ರೇಗನ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಬುಧವಾರ ತಡರಾತ್ರಿ ಪೊಟೊಮ್ಯಾಕ್ ನದಿಯಲ್ಲಿ ವಿಮಾನ ಪತನಗೊಂಡಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಆರಂಭಿಸಿದೆ. ವಿಮಾನ ನಿಲ್ದಾಣದಲ್ಲಿ ಎಲ್ಲಾ ಹಾರಾಟಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಅಮೆರಿಕದಲ್ಲಿನ ವಲಸಿಗರ ಕೈಗೆ ಕೋಳ – ಟ್ರಂಪ್ ಆದೇಶದ ವಿರುದ್ಧ ಸಿಡಿದೆದ್ದ ಸಿಖ್ಖರು

  • ಸೇನಾ ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದು ನದಿಗೆ ಬಿದ್ದ ವಿಮಾನ -18 ಮಂದಿ ಸಾವು

    ಸೇನಾ ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದು ನದಿಗೆ ಬಿದ್ದ ವಿಮಾನ -18 ಮಂದಿ ಸಾವು

    ವಾಷಿಂಗ್ಟನ್: ಸೇನಾ ಹೆಲಿಕಾಪ್ಟರ್‌ಗೆ (Military Helicopter) ಪ್ರಯಾಣಿಕರಿದ್ದ ವಿಮಾನವೊಂದು (Flight) ಡಿಕ್ಕಿ ಹೊಡೆದು ನದಿಗೆ ಬಿದ್ದ ಪರಿಣಾಮ 18 ಮಂದಿ ಸಾವನ್ನಪ್ಪಿದ ಘಟನೆ ಅಮೆರಿಕದ (America) ವಾಷಿಂಗ್ಟನ್ ಡಿಸಿಯ ರೊನಾಲ್ಡ್ ರೇಗನ್ ವಿಮಾನ ನಿಲ್ದಾಣದ (Reagan National Airport )ಬಳಿ ನಡೆದಿದೆ.

    ಅಮೆರಿಕ ಸೇನಾ ಹೆಲಿಕಾಪ್ಟರ್‌ಗೆ ವಿಮಾನ ಡಿಕ್ಕಿ ಹೊಡೆದ ಪರಿಣಾಮ ಪೋಟೋಮ್ಯಾಕ್ ನದಿಗೆ ವಿಮಾನ ಬಿದ್ದಿದೆ. ಸದ್ಯ ನದಿಯಿಂದ ವಿಮಾನದಲ್ಲಿದ್ದ ನಾಲ್ವರನ್ನು ರಕ್ಷಣೆ ಮಾಡಿದ್ದು, 18 ಮಂದಿಯ ಮೃತದೇಹಗಳನ್ನು ಮೇಲೆತ್ತಲಾಗಿದೆ. ಇದನ್ನೂ ಓದಿ: ಹಾಸನದಲ್ಲಿ ಪುಡಿ ರೌಡಿಯ ಕಾಟ | ಬೆಂಗಳೂರು – ಮಂಗಳೂರು ಬಸ್ಸು ತಡೆದು ಮಾರಕಾಸ್ತ್ರದಿಂದ ಹಲ್ಲೆ

    ಅಪಘಾತಕ್ಕೀಡಾದ ವಿಮಾನವು 60 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿತ್ತು. ಕಾನ್ಸಾಸ್‌ನಿಂದ ಡಿ.ಸಿ.ಯ ರೇಗನ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಬುಧವಾರ ತಡರಾತ್ರಿ ಪೊಟೊಮ್ಯಾಕ್ ನದಿಯಲ್ಲಿ ವಿಮಾನ ಪತನಗೊಂಡಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಆರಂಭಿಸಿದೆ. ವಿಮಾನ ನಿಲ್ದಾಣದಲ್ಲಿ ಎಲ್ಲಾ ಹಾರಾಟಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ಹೇಮಾವತಿ ನದಿಗೆ ಬಿದ್ದ ವಿದ್ಯಾರ್ಥಿ – ಪ್ರಾಣಾಪಾಯದಿಂದ ಪಾರು

  • ಗುಜರಾತ್‌ನ ಪೋರಬಂದರ್‌ನಲ್ಲಿ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ, 3 ಸಾವು

    ಗುಜರಾತ್‌ನ ಪೋರಬಂದರ್‌ನಲ್ಲಿ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ, 3 ಸಾವು

    ಗಾಂಧಿನಗರ: ಭಾರತೀಯ ಕೋಸ್ಟ್ ಗಾರ್ಡ್‌ನ ಎಎಲ್‌ಹೆಚ್ ಧ್ರುವ್ ಹೆಲಿಕಾಪ್ಟರ್ (Coast Guard ALH Dhruv Helicopter) ಗುಜರಾತ್‌ನ (Gujarat) ಪೋರಬಂದರ್‌ನಲ್ಲಿ ತರಬೇತಿಯ ವೇಳೆ ಪತನಗೊಂಡು, ಮೂವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ.

    ಹೆಲಿಕಾಪ್ಟರ್ ತಾಂತ್ರಿಕ ದೋಷದಿಂದ ಪತನಗೊಂಡಿದೆ. ಅದರಲ್ಲಿ ಇಬ್ಬರು ಪೈಲಟ್‌ಗಳು ಸೇರಿ ಮೂವರು ಇದ್ದರು. ಭಾರತೀಯ ಕೋಸ್ಟ್ ಗಾರ್ಡ್ ಅಧಿಕಾರಿಗಳು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

  • ಪುಣೆಯಲ್ಲಿ ಹೆಲಿಕಾಪ್ಟರ್ ಪತನ – ಮೂವರು ದುರ್ಮರಣ

    ಪುಣೆಯಲ್ಲಿ ಹೆಲಿಕಾಪ್ಟರ್ ಪತನ – ಮೂವರು ದುರ್ಮರಣ

    ಮುಂಬೈ: ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ಹೆಲಿಕಾಪ್ಟರ್ ಪತನಗೊಂಡು (Helicopter Crashes) ಮೂವರು ಸಾವನ್ನಪ್ಪಿದ ಘಟನೆ ಪುಣೆ (Pune) ಸಮೀಪದ ಬವ್‌ಧಾನ್‌ನಲ್ಲಿ ನಡೆದಿದೆ.

    ಖಾಸಗಿ ಹೆಲಿಕಾಪ್ಟರ್‌ನಲ್ಲಿ ಇಬ್ಬರು ಪೈಲಟ್‌ಗಳು ಮತ್ತು ಎಂಜಿನಿಯರ್ ಇದ್ದರು ಎಂದು ತಿಳಿದು ಬಂದಿದೆ. ಮೂವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಬೆಳಗ್ಗೆ 6:45ರ ಸುಮಾರಿಗೆ ಗುಡ್ಡಗಾಡು ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ ಎಂದು ಪುಣೆಯ ಪಿಂಪ್ರಿ ಚಿಂಚ್‌ವಾಡ್ ಪೊಲೀಸರು ತಿಳಿಸಿದ್ದಾರೆ.

    ಹೆಲಿಕಾಪ್ಟರ್ ಆಕ್ಸ್‌ಫರ್ಡ್ ಗಾಲ್ಫ್ ಕ್ಲಬ್‌ನ ಹೆಲಿಪ್ಯಾಡ್‌ನಿಂದ ಟೇಕಾಫ್ ಆಗಿದ್ದು, ಆ ಪ್ರದೇಶದಲ್ಲಿ ದಟ್ಟವಾದ ಮಂಜಿನಿಂದಾಗಿ ಅಪಘಾತ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

  • ತಾಂತ್ರಿಕ ದೋಷ – ವಾಯುಪಡೆಯ ಹೆಲಿಕಾಪ್ಟರ್ ಗದ್ದೆಯಲ್ಲಿ ತುರ್ತು ಭೂಸ್ಪರ್ಶ

    ತಾಂತ್ರಿಕ ದೋಷ – ವಾಯುಪಡೆಯ ಹೆಲಿಕಾಪ್ಟರ್ ಗದ್ದೆಯಲ್ಲಿ ತುರ್ತು ಭೂಸ್ಪರ್ಶ

    ಚೆನ್ನೈ: ತಾಂತ್ರಿಕ ದೋಷದಿಂದಾಗಿ ಐಎಎಫ್‍ನ (Indian Air Force) ತರಬೇತಿ ಹೆಲಿಕಾಪ್ಟರ್ (Helicopter) ಚೆನ್ನೈ ಬಳಿಯ ಪೊಪರ್ಂದಲ್‍ನ ಗದ್ದೆಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಇಬ್ಬರು ಸಿಬ್ಬಂದಿ ಹಾರಾಟ ನಡೆಸುತ್ತಿದ್ದ ಹೆಲಿಕಾಪ್ಟರ್ ಸಲವಕ್ಕಂ ಪೊಲೀಸ್ ಠಾಣಾ ವ್ಯಾಪ್ತಿಯ ಪೊಪರ್ಂದಲ್ ಪ್ರದೇಶಕ್ಕೆ ಸಮೀಪಿಸಿದಾಗ ಹಠಾತ್ತನೆ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಪರಿಣಾಮವಾಗಿ ಪೈಲಟ್ ಗದ್ದೆಯಲ್ಲಿ ತುರ್ತು ಭೂಸ್ಪರ್ಶ ಮಾಡಬೇಕಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ.

    ಸ್ವಲ್ಪ ಸಮಯದ ನಂತರ ಮತ್ತೊಂದು ಸೇನಾ ಹೆಲಿಕಾಪ್ಟರ್ ಮೂಲಕ ಸಿಬ್ಬಂದಿ ಬಂದು ತಾಂತ್ರಿಕ ದೋಷ ಸರಿಪಡಿಸಿ ಸೇನಾ ನೆಲೆಗೆ ಕೊಂಡೊಯ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅದೃಷ್ಟವಶಾತ್ ತುರ್ತು ಭೂಸ್ಪರ್ಶದ ವೇಳೆ ಯಾವುದೇ ಅನಾಹುತ ಆಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಇತ್ತೀಚೆಗೆ ಗುಜರಾತ್‍ನಲ್ಲಿ ಭಾರತೀಯ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಸಮುದ್ರದಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದರ ಪರಿಣಾಮ ಅದರಲ್ಲಿದ್ದ ಇಬ್ಬರು ಪೈಲಟ್‍ಗಳು ಸೇರಿ ಮೂವರು ನಾಪತ್ತೆಯಾಗಿದ್ದರು.

  • ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಗೌರವಾರ್ಥ ಮಂಗಳವಾರ ಭಾರತದಲ್ಲಿ ಶೋಕಾಚರಣೆ

    ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಗೌರವಾರ್ಥ ಮಂಗಳವಾರ ಭಾರತದಲ್ಲಿ ಶೋಕಾಚರಣೆ

    ನವದೆಹಲಿ/ಟೆಹರಾನ್‌: ಹೆಲಿಕಾಪ್ಟರ್ ದುರಂತದಲ್ಲಿ (Helicopter Tragedy) ಮೃತಪಟ್ಟ ಇರಾನ್ (Iran) ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi) ಗೌರವಾರ್ಥ ದೇಶಾದ್ಯಂತ ಮಂಗಳವಾರ ಒಂದು ದಿನದ ಶೋಕಾಚರಣೆಯನ್ನು ಆಚರಿಸಲಾಗುವುದು ಎಂದು ಗೃಹ ಸಚಿವಾಲಯ ತಿಳಿಸಿದೆ.

    ಡಾ. ಸೆಯ್ಯದ್ ಇಬ್ರಾಹಿಂ ರೈಸಿ ಮತ್ತು ವಿದೇಶಾಂಗ ಸಚಿವ ಹುಸೇನ್ ಅಮೀರ್-ಅಬ್ದುಲ್ಲಾಹಿಯಾನ್ ಅವರು ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನರಾಗಿದ್ದಾರೆ. ಮೃತರ ಆತ್ಮಗಳಿಗೆ ಗೌರವ ಸೂಚಕವಾಗಿ ಮಂಗಳವಾರ ಪ್ರತಿನಿತ್ಯ ಹಾರಿಸುವ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು (National Flag) ಅರ್ಧ ಎತ್ತರದಲ್ಲಿ ಹಾರಿಸಲಾಗುತ್ತದೆ ಮತ್ತು ಯಾವುದೇ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳು ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

    ಮೃತಪಟ್ಟಿದ್ದು ಹೇಗೆ?
    ಭಾನುವಾರ ರೈಸಿ ಪಯಣಿಸ್ತಿದ್ದ ಹೆಲಿಕಾಪ್ಟರ್ ಪ್ರಕೃತಿ ವೈಪರಿತ್ಯದ ಪರಿಣಾಮ ಜೋಲ್ಫಾ ನಗರ ಬಳಿಯ ದಟ್ಟ ಕಾನನದಲ್ಲಿ ಪತನವಾಗಿದೆ. ದುರಂತದಲ್ಲಿ ಅಧ್ಯಕ್ಷ ರೈಸಿ, ವಿದೇಶಾಂಗ ಮಂತ್ರಿ ಹುಸೈನ್ ಅಮಿರ್ ಅಬ್ದುಲ್ಲಲಹಿಯನ್, ಅಜರ್‌ಬೈಜಾನ್ ಪ್ರಾಂತ್ಯದ ಗವರ್ನರ್‌ ಮಲಿಕ್ ಸೇರಿ ಹಲವರು ಮೃತಪಟ್ಟಿದ್ದಾರೆ.

    ನಿನ್ನೆಯಿಂದಲೂ ಹೆಲಿಕಾಪ್ಟರ್ ಪತನವಾದ ಸ್ಥಳದ ಹುಡುಕಾಟ ನಡೆದಿತ್ತು. ಇಂದು ಬೆಳಗ್ಗೆ ದುರಂತ ಸ್ಥಳ ಪತ್ತೆಯಾಗಿದೆ. ಪ್ರಧಾನಿ ಮೋದಿ (PM Narendra Modi) ಸೇರಿ ಜಗತ್ತಿನ ಗಣ್ಯರು ಘಟನೆಗೆ ಆಘಾತ ವ್ಯಕ್ತಪಡಿಸಿದ್ದಾರೆ.

    2021ರಲ್ಲಿ ಇರಾನ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ರೈಸಿ ಅವರನ್ನು, ಇರಾನ್‌ನ ಸುಪ್ರೀಂ ನೇತಾರ ಅಯತೊಲ್ಲಾ ಖೊಮೆನಿ ಉತ್ತರಾಧಿಕಾರಿ ಎಂದು ಪರಿಗಣಿಸಲಾಗಿತ್ತು. ಕಟ್ಟರ್ ಇಸ್ಲಾಮಿಕ್‌ವಾದಿಯಾಗಿದ್ದ ರೈಸಿ, ಬುರ್ಖಾ ಕಡ್ಡಾಯ ಮಾಡಿದ್ದರು. ಇಂಟರ್ನೆಟ್ ಬಳಕೆಗೆ ಸೆನ್ಸಾರ್ ಜಾರಿ ಮಾಡಿದ್ದರು.  ಇದನ್ನೂ ಓದಿ: 2014 ರಿಂದ 2022ರವರೆಗೂ ಆಪ್‌ಗೆ ವಿದೇಶದಿಂದ ಫಂಡಿಂಗ್‌ – ಇಡಿ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ

    ಕೆಲವು ದಿನಗಳ ಇಸ್ರೇಲ್‌ (Israel) ಮೇಲೆ ಕ್ಷಿಪಣಿ ದಾಳಿ ನಡೆಸಿದ್ದರು. ಅಷ್ಟೇ ಅಲ್ಲದೇ ಪಾಕಿಸ್ತಾನದ (Pakistan) ಮೇಲೆ ಏರ್‌ ಸ್ಟ್ರೈಕ್‌ ಮಾಡಿಸಿದ್ದರು. ಭಾರತದ (India) ಪರ ಒಲವು ಹೊಂದಿದ್ದ ಇವರು ಮೋದಿ ಬಳಿ ತಮ್ಮ ಸಾಮರ್ಥ್ಯವನ್ನು ಬಳಸಿ ಇಸ್ರೇಲ್ ಗಾಜಾದ ಮೇಲೆ ನಡೆಸುತ್ತಿರುವ ಯುದ್ಧವನ್ನು ಕೊನೆಗೊಳಿಸುವಂತೆ ಒತ್ತಾಯಿಸಿದ್ದರು.

     

  • ಸೇನಾ ಪೈಲಟ್‌ಗಳಿಗೆ ಭಾರತ ಕೊಟ್ಟ ವಿಮಾನಗಳನ್ನು ಹಾರಿಸಲು ಬರಲ್ಲ: ಮಾಲ್ಡೀವ್ಸ್ ರಕ್ಷಣಾ ಸಚಿವ

    ಸೇನಾ ಪೈಲಟ್‌ಗಳಿಗೆ ಭಾರತ ಕೊಟ್ಟ ವಿಮಾನಗಳನ್ನು ಹಾರಿಸಲು ಬರಲ್ಲ: ಮಾಲ್ಡೀವ್ಸ್ ರಕ್ಷಣಾ ಸಚಿವ

    ಮಾಲೆ: ಅಧ್ಯಕ್ಷ ಮೊಹಮ್ಮದ್ ಮುಯಿಝು ( Mohamed Muizzu) ಅವರ ಒತ್ತಾಯದ ಮೇರೆಗೆ 76 ಭಾರತೀಯ ರಕ್ಷಣಾ ಸಿಬ್ಬಂದಿ ಮಾಲ್ಡೀವ್ಸ್ ತೊರೆದ ಕೆಲವೇ ದಿನಗಳಲ್ಲಿಯೇ ಭಾರತ ಕೊಡುಗೆಯಾಗಿ ನೀಡಿದ ಮೂರು ವಿಮಾನಗಳನ್ನು ನಿರ್ವಹಿಸುವ ಸಾಮರ್ಥ್ಯವಿರುವ ಪೈಲಟ್‌ಗಳು ದೇಶದ ಮಿಲಿಟರಿಯಲ್ಲಿ ಇನ್ನೂ ಇಲ್ಲ ಎಂದು ಮಾಲ್ಡೀವ್ಸ್ ರಕ್ಷಣಾ ಸಚಿವ ಘಾಸನ್ ಮೌಮೂನ್ (Ghassan Maumoon) ಟೀಕಿಸಿದ್ದಾರೆ.

    ಭಾನುವಾರ ಮಾಲೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಿಂದಿನ ಆಡಳಿತದಲ್ಲಿ ವಿಮಾನವನ್ನು ಹಾರಿಸಲು ತರಬೇತಿಯನ್ನು ಪ್ರಾರಂಭಿಸಿದ ಮಾಲ್ಡೀವಿಯನ್ ಸೈನಿಕರು ಕಾರಣಾಂತರಗಳಿಂದ ಅದನ್ನು ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ. ಆದ್ದರಿಂದ ಎರಡು ಹೆಲಿಕಾಪ್ಟರ್‌ಗಳು ಮತ್ತು ಡೋರ್ನಿಯರ್ ಅನ್ನು ಹಾರಿಸಲು ಪರವಾನಗಿ ಪಡೆದ ಅಥವಾ ಸಂಪೂರ್ಣವಾಗಿ ಕಾರ್ಯನಿರ್ವಹಿಸುವ ಪೈಲಟ್‌ ನಮ್ಮ ಪಡೆಯಲ್ಲಿ ಇಲ್ಲ ಎಂದಿದ್ದಾರೆ. ಇದನ್ನೂ ಓದಿ: ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ನಿಜ್ಜರ್ ಹತ್ಯೆ ಕೇಸ್‌ – ಕೆನಡಾದಲ್ಲಿ 4ನೇ ಭಾರತೀಯ ಪ್ರಜೆ ಬಂಧನ

    ಚೀನಾ ಪರ ಧೋರಣೆಯುಳ್ಳ ನಾಯಕರಾಗಿ ಗುರುತಿಸಿಕೊಂಡಿರುವ ಮುಯಿಝು, ಮೇ 10ರ ಒಳಗೆ ಭಾರತವು ತನ್ನ ಸಂಪೂರ್ಣ ಮಿಲಿಟರಿ ಸಿಬ್ಬಂದಿಯನ್ನು ಹಿಂದಕ್ಕೆ ಕರೆದುಕೊಳ್ಳಬೇಕು ಎಂದು ಗಡುವು ನೀಡಿದ್ದರು. ಫೆಬ್ರವರಿಯಲ್ಲಿ ನವದೆಹಲಿಯಲ್ಲಿ ಉಭಯ ದೇಶಗಳ ನಡುವಿನ ಒಪ್ಪಂದದ ನಂತರ ಮೇ 10 ರ ಗಡುವಿನ ಪ್ರಕಾರ, ಹೆಲಿಕಾಪ್ಟರ್‌ಗಳು ಮತ್ತು ಡಾರ್ನಿಯರ್ ವಿಮಾನಗಳಿಗಾಗಿ ಎರಡು ಪ್ಲಾಟ್‌ಫಾರ್ಮ್‌ಗಳನ್ನು ನಿರ್ವಹಿಸಲು ಮಾಲ್ಡೀವ್ಸ್‌ನಲ್ಲಿ ನೆಲೆಸಿದ್ದ ಭಾರತೀಯ ಮಿಲಿಟರಿ ಸಿಬ್ಬಂದಿ ಮಾಲೆ ತೊರೆದು ಶುಕ್ರವಾರ ಭಾರತಕ್ಕೆ ಮರಳಿದ್ದರು.

    ಭಾರತ ಸರ್ಕಾರ ಈ ಹಿಂದೆ ಉಡುಗೊರೆಯಾಗಿ ನೀಡಿದ್ದ 2 ಹೆಲಿಕಾಪ್ಟರ್‌ಗಳ ಮತ್ತು ಡಾರ್ನಿಯರ್‌ ಯುದ್ಧ ವಿಮಾನಗಳ ನಿರ್ವಹಣೆ ಸಲುವಾಗಿ ಭಾರತೀಯ ಸೇನಾ ಸಿಬ್ಬಂದಿ ಮಾಲ್ಡೀವ್ಸ್‌ ನಲ್ಲಿ ಉಳಿದುಕೊಂಡಿದ್ದರು.