Tag: helipad

  • ಲ್ಯಾಂಡಿಂಗ್ ಟೆಸ್ಟ್ ವೇಳೆ ಪಾಕ್‌ನ ಸರ್ಕಾರಿ ಹೆಲಿಕಾಪ್ಟರ್ ಪತನ – ಐವರು ಸಾವು

    ಲ್ಯಾಂಡಿಂಗ್ ಟೆಸ್ಟ್ ವೇಳೆ ಪಾಕ್‌ನ ಸರ್ಕಾರಿ ಹೆಲಿಕಾಪ್ಟರ್ ಪತನ – ಐವರು ಸಾವು

    ಇಸ್ಲಾಮಾಬಾದ್: ಹೊಸದಾಗಿ ನಿರ್ಮಾಣವಾಗಿದ್ದ ಹೆಲಿಪ್ಯಾಡ್ ಮೇಲೆ ಲ್ಯಾಂಡಿಂಗ್ ಟೆಸ್ಟ್ ನಡೆಸುತ್ತಿದ್ದಾಗ ಪಾಕಿಸ್ತಾನದ ಸರ್ಕಾರಿ ಹೆಲಿಕಾಪ್ಟರ್ ಪತನಗೊಂಡು ಐವರು ಸಾವನ್ನಪ್ಪಿರುವ ಘಟನೆ ಗಿಲ್ಗಿಟ್-ಬಾಲ್ಟಿಸ್ತಾನ್‌ನಲ್ಲಿ (Gilgit-Baltistan) ನಡೆದಿದೆ.

    ಸೋಮವಾರ (ಸೆ.01) ಗಿಲ್ಗಿಟ್-ಬಾಲ್ಟಿಸ್ತಾನ್‌ನ ಡೈಮರ್ ಜಿಲ್ಲೆಯ ಚಿಲಾಸ್‌ನ ಥೋರ್ ಪ್ರದೇಶದ ಬಳಿ ಈ ಅವಘಡ ಸಂಭವಿಸಿದೆ. ಪರಿಣಾಮ ಇಬ್ಬರು ಪೈಲಟ್ ಸೇರಿ ಮೂವರು ತಂತ್ರಜ್ಞರು ಸಾವನ್ನಪ್ಪಿದ್ದಾರೆ.ಇದನ್ನೂ ಓದಿ: ಅಲೆಗಳ ಹೊಡೆತಕ್ಕೆ ಅರಬ್ಬಿ ಸಮುದ್ರದಲ್ಲಿ ಮುಳುಗಿದ ಪರ್ಷಿಯನ್ ಬೋಟ್ – 25 ಮೀನುಗಾರರ ರಕ್ಷಣೆ

    ಈ ಕುರಿತು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾತನಾಡಿ, ಹೊಸದಾಗಿ ನಿರ್ಮಾಣವಾಗಿದ್ದ ಹೆಲಿಪ್ಯಾಡ್‌ನಲ್ಲಿ ಲ್ಯಾಂಡಿಂಗ್ ಪರೀಕ್ಷೆ ನಡೆಸುತ್ತಿದ್ದಾಗ Mi-17 ಹೆಲಿಕಾಪ್ಟರ್ ಪತನಗೊಂಡಿದೆ. ಹೆಲಿಕಾಪ್ಟರ್‌ನಲ್ಲಿದ್ದ ಐದು ಜನರೂ ಕೂಡ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.

    ಇತ್ತೀಚಿಗೆ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ (Khyber Pakhtunkhwa) ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ MI-17 ಸರ್ಕಾರಿ ಹೆಲಿಕಾಪ್ಟರ್ ಪತನಗೊಂಡಿತ್ತು. ಅದಾದ ಕೆಲವು ದಿನಗಳ ನಂತರ ಇದೀಗ ಮತ್ತೊಂದು ಹೆಲಿಕಾಪ್ಟರ್ ಪತನಗೊಂಡಿದೆ.ಇದನ್ನೂ ಓದಿ: ಭೋವಿ ನಿಗಮದಲ್ಲಿ 60% ಕಮಿಷನ್‌, ಅಧ್ಯಕ್ಷರಿಂದಲೇ ಬೇಡಿಕೆ – ವಿಡಿಯೋ ರಿಲೀಸ್‌

  • ಹೆಲಿಪ್ಯಾಡ್ ಬಳಿ ಬೆಂಕಿ – ಸಿಎಂ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ತಪ್ಪಿದ ಅನಾಹುತ

    ಹೆಲಿಪ್ಯಾಡ್ ಬಳಿ ಬೆಂಕಿ – ಸಿಎಂ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ತಪ್ಪಿದ ಅನಾಹುತ

    ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai)  ಇಳಿದ ಹೆಲಿಪ್ಯಾಡ್‍ನಲ್ಲಿ (Helipad) ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.

    ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ (BJP) ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಬಸವರಾಜ ಬೊಮ್ಮಾಯಿ ಅವರು ಅರೆಶಿರೂರು ಹೆಲಿಪ್ಯಾಡ್ ಮೂಲಕ ಕೊಲ್ಲೂರಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಹೆಲಿಕಾಪ್ಟರ್ ಇಳಿಯುವ ಸಂದರ್ಭ ಹೆಲಿಪ್ಯಾಡ್ ಬಳಿ ಬೆಂಕಿ ಕಾಣಿಸಿಕೊಂಡಿದೆ. ಸಿಎಂ ಎಸ್ಕಾರ್ಟ್ ಹೋದ ಬಳಿಕ ಬೆಂಕಿ ಕಾಣಿಸಿಕೊಂಡಿದೆ. ಸ್ಥಳದಲ್ಲಿದ್ದ ಅಗ್ನಿಶಾಮಕ ದಳದವರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು. ಸದ್ಯ ಯಾವುದೇ ರೀತಿಯ ಅನಾಹುತ ಸಂಭವಿಸಿಲ್ಲ.

    ಬೆಂಕಿ ಹೊತ್ತಿಕೊಂಡಿದ್ದು ಯಾಕೆ?:  ಹೆಲಿಕಾಪ್ಟರ್‌ನಲ್ಲಿ ಮೇಲಿನಿಂದ ನೋಡಿದಾಗ ಎಲ್ಲವೂ ಬಯಲಿನಂತೆ ಕಾಣುತ್ತದೆ. ಈ ಕಾರಣಕ್ಕೆ ಲ್ಯಾಂಡಿಂಗ್ ಜಾಗದಲ್ಲೇ ಹೆಲಿಕಾಪ್ಟರ್ ಲ್ಯಾಂಡ್ ಆಗಲು ಹೊಗೆ ಬಿಡಲಾಗುತ್ತದೆ. ದಟ್ಟವಾದ ಹೊಗೆ ಬಂದ ಜಾಗದಲ್ಲಿ ಹೆಲಿಪ್ಯಾಡ್ ಇದೆ ಎಂದು ತಿಳಿದು ಪೈಲಟ್ ಹೆಲಿಕಾಪ್ಟರ್ ಅನ್ನು ಲ್ಯಾಂಡ್ ಮಾಡುತ್ತಾರೆ.

    ಸಿಎಂ ವಾಹನದಲ್ಲಿ ಕೊಲ್ಲೂರಿಗೆ ಬರಲಿದ್ದಾರೆ ಎಂಬ ಮಾಹಿತಿ ಜಿಲ್ಲಾಡಳಿತಕ್ಕೆ ಸಿಕ್ಕಿತ್ತು. ಆದರೆ ಕೊನೆ ಕ್ಷಣದಲ್ಲಿ ಸಿಎಂ ಹೆಲಿಕಾಪ್ಟರ್‌ನಲ್ಲಿ ಬಂದಿದ್ದಾರೆ. ಲ್ಯಾಂಡಿಂಗ್ ಜಾಗದ ಬಳಿ ಹುಲ್ಲುಗಳು ಬೆಳೆದಿತ್ತು. ಕೊನೆ ಕ್ಷಣದಲ್ಲಿ ನಿಗದಿಯಾದ ಕಾರಣ ಈ ಹುಲ್ಲುಗಳನ್ನು ತೆಗೆದಿರಲಿಲ್ಲ. ಪರಿಣಾಮ ಹೆಲಿಕಾಪ್ಟರ್ ರೆಕ್ಕೆಯಿಂದಾಗಿ ಗಾಳಿ ವೇಗವಾಗಿ ಬೀಸಿದ್ದರಿಂದ ಹೊಗೆಯೊಂದಿಗೆ ಹುಲ್ಲಿನ ಜಾಗಕ್ಕೆ ಹರಡಿದ್ದರಿಂದ ಬೆಂಕಿ ಹೊತ್ತಿಕೊಂಡಿದೆ. ಇದನ್ನೂ ಓದಿ: ವರುಣಾ ಕ್ಷೇತ್ರದಲ್ಲಿ ಜನ ಅಬ್ಬೆಪಾರಿಗಳಾಗಿದ್ದಾರೆ : ಪ್ರತಾಪ್ ಸಿಂಹ

    ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ತಮ್ಮ ಪತ್ನಿ ಚೆನ್ನಮ್ಮ ಜೊತೆ ಭೇಟಿ ನೀಡಿದ್ದರು. ದಂಪತಿ ಸಮೇತ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದರು. ದೇವಸ್ಥಾನದ ಪ್ರಾಂಗಣದ ಗರುಡಗಂಬಕ್ಕೆ ಪೂಜೆ ಸಲ್ಲಿಸಿದರು. ಈ ವೇಳೆ ಬಿಜೆಪಿಯ ಜಿಲ್ಲಾ ಮುಖಂಡರು ಸಿಎಂ ದಂಪತಿಗೆ ಸಾಥ್ ನೀಡಿದರು. ಇದನ್ನೂ ಓದಿ: ಚುನಾವಣೆ ವೇಳೆ ಶಾಂತಿ ಕದಡಲು VHP ಅಧ್ಯಕ್ಷನ ಮೇಲೆ ಫೈರಿಂಗ್: ಬೋಪಯ್ಯ

  • ಅಂಜನಾದ್ರಿ ಪ್ರದೇಶದ ಅಭಿವೃದ್ಧಿಗೆ ಹೆಲಿಪ್ಯಾಡ್ ನಿರ್ಮಿಸಲು ಚಿಂತನೆ: ಭೂಸ್ವಾಧೀನಕ್ಕೆ ಸಿಎಂ ಅಸ್ತು

    ಅಂಜನಾದ್ರಿ ಪ್ರದೇಶದ ಅಭಿವೃದ್ಧಿಗೆ ಹೆಲಿಪ್ಯಾಡ್ ನಿರ್ಮಿಸಲು ಚಿಂತನೆ: ಭೂಸ್ವಾಧೀನಕ್ಕೆ ಸಿಎಂ ಅಸ್ತು

    ಕೊಪ್ಪಳ: ರಾಮಾಯಣ ಕಾಲದ ಐತಿಹಾಸಿಕ ಹಿನ್ನೆಲೆ ಹೊಂದಿರುವ ಅಂಜನಾದ್ರಿ ಪರ್ವತದ ಅಭಿವೃದ್ಧಿ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಒಪ್ಪಿಗೆ ನೀಡುವ ಮೂಲಕ ಅಭಿವೃದ್ಧಿ ಕಾಮಗಾರಿಗಳಿಗೆ ಹಸಿರು ನಿಶಾನೆಯನ್ನು ತೋರಿಸಿದರು.

    ಶ್ರೀರಾಮಚಂದ್ರನ ಜನ್ಮಭೂಮಿಯಾಗಿರುವ ಅಯೋಧ್ಯೆಯಷ್ಟೇ ಪ್ರಾಮುಖ್ಯತೆಯನ್ನು ಪಡೆದುಕೊಂಡಿರುವ ಅಂಜನಾದ್ರಿ ಪರ್ವತದ ಅಭಿವೃದ್ಧಿಯ ಕುರಿತು ರಾಜ್ಯ ಸರ್ಕಾರ ಬಜೆಟ್‍ನಲ್ಲಿ ಒಟ್ಟು 120 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿತ್ತು.

    ಅನುದಾನ ಬಿಡುಗಡೆಯಾಗಿ ಒಂದು ವರ್ಷ ಕಳೆದರೂ ಸಹ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಮುಂದಾಗಿರಲಿಲ್ಲ. ಆದರೆ ಈ ಕುರಿತು ಖುದ್ದು ಬೊಮ್ಮಾಯಿ ಅವರೇ ಸಭೆಯನ್ನು ನಡೆಸಿ, ಅಭಿವೃದ್ಧಿಯ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು. ಈ ಹಿನ್ನೆಲೆ ಬೆಂಗಳೂರಿನಲ್ಲಿ ಸಿಎಂ ತಮ್ಮ ಕಚೇರಿಯಲ್ಲಿ ಜೂನ್ 25 ರಂದು ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಇದನ್ನೂ ಓದಿ: ಅಮರನಾಥ ಯಾತ್ರೆಗೆ ಕೆಲವೇ ದಿನ – ಗಡಿಯಲ್ಲಿ ಶೋಧ ಕಾರ್ಯ ಚುರುಕು 

    ಸಭೆಯಲ್ಲಿ ಬೊಮ್ಮಾಯಿ ಅವರು ಜಿಲ್ಲಾಡಳಿತ, ಧಾರ್ಮಿಕ ದತ್ತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ಹಂಪಿ ಅಭಿವೃದ್ಧಿ ಪ್ರಾಧಿಕಾರ ಇಲಾಖೆ ಅಧಿಕಾರಿಗಳು ಜಂಟಿ ಸಭೆ ನಡೆಸಿ, ಸಿದ್ಧಪಡಿಸಿದ ನೀಲನಕ್ಷೆಯನ್ನು ಪರಿಶೀಲನೆ ಮಾಡಿದರು. ಅಷ್ಟೇ ಅಲ್ಲದೆ ರಾಜ್ಯ ಸರ್ಕಾರ 120 ಕೋಟಿ ರೂ. ಅನುದಾನ ನೀಡುವ ಜೊತೆಗೆ ಕೇಂದ್ರದ ಸ್ವದೇಶಿ ದರ್ಶನ ಯೋಜನೆ ಅಡಿಯಲ್ಲಿ 100 ಕೋಟಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲು ಒಪ್ಪಿಗೆಯನ್ನು ನೀಡಿದ್ದಾರೆ.

    ಏನೇನು ಇರಲಿದೆ?
    ದೇಶ ಸೇರಿದಂತೆ ವಿದೇಶಗಳಿಂದ ಪ್ರವಾಸಿಗರನ್ನು ಸೆಳೆಯುತ್ತಿರುವ ಅಂಜನಾದ್ರಿ ಪರ್ವತ ಅಭಿವೃದ್ಧಿಗೆ ಸಂಬಂಧಪಟ್ಟ ಸಭೆಯಲ್ಲಿ 600 ಕೊಠಡಿಗಳ ಪ್ರವಾಸಿ ಮಂದಿರಕ್ಕೆ 10 ಎಕರೆ ಭೂಮಿ ಬಳಕೆ, 5 ಎಕರೆಯಲ್ಲಿ ಅಡುಗೆ ಕೋಣೆ ನಿರ್ಮಾಣ, 3 ಎಕರೆಯಲ್ಲಿ ಸಮುದಾಯ ಭವನ, 8 ಎಕರೆಯಲ್ಲಿ ಪಾರ್ಕಿಂಗ್ ಸ್ಥಳ, 4 ಎಕರೆ 16 ಗುಂಟೆಯಲ್ಲಿ ಶಾಪಿಂಗ್ ಕಾಂಪ್ಲೆಕ್ಸ್, 2 ಎಕರೆಯಲ್ಲಿ ಪ್ರದರ್ಶನ ಪಥ, 1 ಎಕರೆಯಲ್ಲಿ ಸ್ನಾನಘಟ್ಟ ನಿರ್ಮಾಣ, 3 ಎಕರೆಯಲ್ಲಿ ರೋಪ ವೇ ಸೇರಿದಂತೆ ಕಚೇರಿ ಕೊಠಡಿ, ಪೊಲೀಸ್ ಹೊರಠಾಣೆ, ಆಡಿಯೋ ಸೌಂಡ್ ಶೋ, ರಾಮಾಯಣ ಕುರಿತ ಪೇಂಟಿಂಗ್, ಧ್ವನಿ ಮತ್ತು ಬೆಳಕು ಕಾರ್ಯಕ್ರಮಕ್ಕೆ ಜಾಗ ಸೇರಿದಂತೆ ಇತರ ಒಟ್ಟು 24 ಕಾಮಗಾರಿಗಳ ದಾಖಲೆಗಳನ್ನು ಬೊಮ್ಮಾಯಿ ಅವರು ಪರಿಶೀಲನೆ ನಡೆಸಿ, ಎಲ್ಲ ಅಭಿವೃದ್ಧಿ ಕಾರ್ಯಗಳಿಗೆ ಒಪ್ಪಿಗೆ ಸೂಚಿಸಿದ್ದಾರೆ.

    76 ಎಕರೆ ಭೂಸ್ವಾಧೀನಕ್ಕೆ ಒಪ್ಪಿಗೆ
    ದೇವಸ್ಥಾನ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಜಾಗದ ಅವಶ್ಯಕತೆ ಇದ್ದು, ಅದಕ್ಕೆ ಭೂಸ್ವಾಧೀನ ಮಾಡಿಕೊಳ್ಳಲು ಬೊಮ್ಮಾಯಿ ಅವರು ಒಪ್ಪಿಗೆಯನ್ನು ನೀಡಿದ್ದಾರೆ. ಬೆಟ್ಟ ಸಮೀಪದ ಚಿಕ್ಕರಾಂಪೂರ, ಹನುಮನಹಳ್ಳಿ ಗ್ರಾಮ ಸಮೀಪದ 76 ಎಕರೆ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲು ತಿಳಿಸಿದ್ದಾರೆ.

    ಮೊದಲ ಹಂತದಲ್ಲಿ 60 ಎಕರೆಯನ್ನು, ಎರಡನೇ ಹಂತದಲ್ಲಿ 16 ಎಕರೆಯನ್ನು ಸ್ವಾಧೀನ ಮಾಡಿಕೊಳ್ಳಲು ಸೂಚಿಸಲಾಗಿದೆ. ಭೂಮಿ ನೀಡಲು ರೈತರು ವಿರೋಧ ಇರುವ ಹಿನ್ನೆಲೆಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ರೈತರೊಂದಿಗೆ ಚರ್ಚೆ ನಡೆಸಿ, ಸಮಸ್ಯೆ ಬಗೆಹರಿಸಲು ಸೂಚಿಸಿದ್ದಾರೆ.

    ಹೆಲಿಪ್ಯಾಡ್ ನಿರ್ಮಾಣದ ಚರ್ಚೆ
    ಅಯೋಧ್ಯೆಯಷ್ಟೇ ಪ್ರಾಮುಖ್ಯತೆ ಇರುವ ಅಂಜನಾದ್ರಿ ಪರ್ವತಕ್ಕೆ ದೇಶ ಸೇರಿದಂತೆ ವಿದೇಶಗಳಿಂದ ಗಣ್ಯ ವ್ಯಕ್ತಿಗಳು ಆಗಮಿಸುತ್ತಾರೆ. ಅವರಿಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಅಂಜನಾದ್ರಿ ಪರ್ವತದ ಸಮೀಪದಲ್ಲಿ ಅಥವಾ ಬೆಟ್ಟದ ಮೇಲುಗಡೆ ಹೆಲಿಪ್ಯಾಡ್ ನಿರ್ಮಾಣ ಮಾಡುವ ಕುರಿತು ಕೂಡ ಬೊಮ್ಮಾಯಿ ಅವರು ಅಧಿಕಾರಿಗಳೊಂದಿಗೆ ಚರ್ಚೆಯನ್ನು ನಡೆಸಿದರು. ಇದನ್ನೂ ಓದಿ: ಅಗ್ನಿಪಥ್ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ರೂಪಿಸಿದೆ: ಅಚ್ಚರಿ ಹೇಳಿಕೆ ಕೊಟ್ಟ ಸವದಿ 

    ಬೆಟ್ಟದ ಮೇಲೆ ನಿರ್ಮಿಸಿದರೆ ಅದರಿಂದ ಎದುರಾಗುವ ಅನಾನುಕೂಲಗಳು ಹಾಗೂ ಅನುಕೂಲಗಳ ಬಗ್ಗೆ ಚರ್ಚೆಯನ್ನು ನಡೆಸಲಾಗಿದೆ. ಅದೇ ರೀತಿಯಾಗಿ ವಾಹನಗಳ ಮೂಲಕ ಆಗಮಿಸುವ ಭಕ್ತರಿಗೆ ಅನುಕೂಲವಾಗಲು ಗಂಗಾವತಿಯಿಂದ ಹುಲಿಗಿ ಸಮೀಪದ ಹೆದ್ದಾರಿಯವರೆಗೆ ಒಟ್ಟು 35 ಕಿ.ಮೀ ರಸ್ತೆಯನ್ನು ಚತುಷ್ಪಥ ರಸ್ತೆ ನಿರ್ಮಾಣ ಮಾಡುವ ಕುರಿತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಜೊತೆಗೆ ಚರ್ಚಿಸಿ, ರಸ್ತೆ ನಿರ್ಮಾಣಕ್ಕೂ ಒಪ್ಪಿಗೆ ನೀಡಲಾಗಿದೆ.

    Live Tv

  • ಅ.7ಕ್ಕೆ ರಾಷ್ಟ್ರಪತಿ ಆಗಮನ – ಎಸ್.ಟಿ.ಸೋಮಶೇಖರ್ ಸ್ಥಳ ಪರಿಶೀಲನೆ

    ಅ.7ಕ್ಕೆ ರಾಷ್ಟ್ರಪತಿ ಆಗಮನ – ಎಸ್.ಟಿ.ಸೋಮಶೇಖರ್ ಸ್ಥಳ ಪರಿಶೀಲನೆ

    – ಹೆಲಿಪ್ಯಾಡ್ ನಿರ್ಮಾಣ ಸ್ಥಳ, ಬಿಳಿಗಿರಿರಂಗನ ಬೆಟ್ಟಕ್ಕೆ ಭೇಟಿ

    ಚಾಮರಾಜನಗರ: ಅ.7ರಂದು ಜಿಲ್ಲೆಗೆ ರಾಷ್ಟ್ರಪತಿ ರಮಾನಾಥ ಕೋವಿಂದ್ ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಹಕಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಗುರುವಾರ ಬಿಳಿಗಿರಿರಂಗನಬೆಟ್ಟ ಹಾಗೂ ಬೆಟ್ಟದ ಹೊರವಲಯದಲ್ಲಿ ಹೆಲಿಪ್ಯಾಡ್ ನಿರ್ಮಾಣವಾಗುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ರಸ್ತೆ, ಹೆಲಿಪ್ಯಾಡ್ ನಿರ್ಮಾಣ, ದೇವಾಲಯಕ್ಕೆ ತೆರಳುವ ಮಾರ್ಗದಲ್ಲಿ ಕೈಗೊಳ್ಳುತ್ತಿರುವ ಸಿದ್ಧತೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಯಾವುದೇ ರೀತಿಯಲ್ಲೂ ಲೋಪವಾಗದಂತೆ ವ್ಯವಸ್ಥೆ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಇದನ್ನೂ ಓದಿ: ಸಿಎಂ ಸ್ಥಾನ ಕಳೆದುಕೊಂಡ ಬಳಿಕ ಸಿದ್ದರಾಮಯ್ಯಗೆ ಪೂರ್ಣ ಹುಚ್ಚು ಹಿಡಿದಿದೆ: ಈಶ್ವರಪ್ಪ

    ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಷ್ಟ್ರಪತಿಗಳ ಆಗಮನದ ಹಿನ್ನೆಲೆಯಲ್ಲಿ ಸಿದ್ಧತೆ ಕಾರ್ಯಗಳನ್ನು ಪರಿಶೀಲನೆ ನಡೆಸಿ, ಸ್ಥಳೀಯ ಜನಪ್ರತಿನಿಧಿಗಳ ಜೊತೆ ಸಭೆ ನಡೆಸುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದರು. ಈ ಹಿನ್ನೆಲೆಯಲ್ಲಿ ಭೇಟಿ ನೀಡಲಾಗಿದೆ ಎಂದರು. ಇದನ್ನೂ ಓದಿ: ಪಿತೃಪಕ್ಷದಲ್ಲಿ ಥಿಯೇಟರ್ ಓಪನ್ ಮಾಡಲ್ಲ – ಉಡುಪಿ ಚಿತ್ರಮಂದಿರ ಮಾಲೀಕರ ತೀರ್ಮಾನ

    ರಾಷ್ಟ್ರಪತಿಗಳ ಭೇಟಿ ವೇಳೆ ಎಲ್ಲೂ ಲೋಪವಾಗದ ರೀತಿಯಲ್ಲಿ ಕ್ರಮವಹಿಸಲಾಗುವುದು. ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಚಾಮರಾಜನಗರಕ್ಕೆ ಆಗಮಿಸಲಿದ್ದಾರೆ ಎಂದು ಹೇಳಿದರು. ಇದೇ ವೇಳೆ ದಸರಾಗೆ 6ಕೋಟಿ ರೂ. ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದರು.

    ಈ ಸಂದರ್ಭದಲ್ಲಿ ಶಾಸಕ ಎನ್.ಮಹೇಶ್, ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ, ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಲವಾರು ಅಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ಸಾರಿ ಮಮ್ಮಿ, ಪಪ್ಪಾ – ಅಮ್ಮನನ್ನು ಚೆನ್ನಾಗಿ ನೋಡಿಕೊಳ್ಳಿ: ಸೌಜನ್ಯ ಡೆತ್‍ನೋಟ್

  • ಮೋದಿ ಸ್ವಾಗತಕ್ಕೆ ಸಜ್ಜಾದ ಶ್ರೀ ಕ್ಷೇತ್ರ – ಎಲ್ಲೆಲ್ಲೂ ಸ್ಪೆಷಲ್ ಕಮಾಂಡೋಗಳ ಭರಾಟೆ

    ಮೋದಿ ಸ್ವಾಗತಕ್ಕೆ ಸಜ್ಜಾದ ಶ್ರೀ ಕ್ಷೇತ್ರ – ಎಲ್ಲೆಲ್ಲೂ ಸ್ಪೆಷಲ್ ಕಮಾಂಡೋಗಳ ಭರಾಟೆ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪವಿತ್ರ ಯಾತ್ರಾ ಸ್ಥಳ ಧರ್ಮಸ್ಥಳಕ್ಕೆ ಪ್ರಧಾನಿ ಆಗಮನ ಹಿನ್ನೆಲೆಯಲ್ಲಿ ಧರ್ಮಸ್ಥಳದಲ್ಲಿ ಅಭೂತಪೂರ್ವ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

    ಎಲ್ಲೆಲ್ಲೂ ಪೊಲಿಸ್ ಸರ್ಪಗಾವಲಿದೆ. ಎನ್‍ಎಸ್‍ಜಿ, ಎಸ್‍ಪಿಜಿ.. ಹೀಗೆ ಸ್ಪೆಷಲ್ ಕಮಾಂಡೋಗಳ ಭರಾಟೆ ಇದೆ. ಜೊತೆಗೆ ನಕ್ಸಲ್ ನಿಗ್ರಹ ದಳವೂ ಬೀಡುಬಿಟ್ಟಿದೆ. ಇನ್ನು ಇಂದು ಮಧ್ಯಾಹ್ನ 2 ಗಂಟೆವರೆಗೆ ಸಾಮಾನ್ಯ ಭಕ್ತರಿಗೆ ಮಂಜುನಾಥನ ದರ್ಶನ ಭಾಗ್ಯ ನಿರ್ಬಂಧಿಸಲಾಗಿದೆ.

    ಬೆಳಗ್ಗೆ 9ರಿಂದ ಧರ್ಮಸ್ಥಳ-ಉಜಿರೆ-ಕೊಕ್ಕಡ ನಡುವೆ ವಾಹನ ಸಂಚಾರ ಬಂದ್ ಮಾಡಲಾಗಿದೆ. ಆದ್ರೆ ಚಾರ್ಮಾಡಿ, ಮಂಗಳೂರು ರಸ್ತೆ ಸಾರ್ವಜನಿಕರ ಸಂಚಾರಕ್ಕೆ ಮುಕ್ತ ಮಾಡಲಾಗಿದೆ. ಇನ್ನು ಉಜಿರೆಯಲ್ಲಿ ನಡೆಯಲಿರುವ ಸಮಾವೇಶಕ್ಕೆ ಬೆಳಗ್ಗೆ 9.30ರೊಳಗೆ ಆಗಮಿಸುವಂತೆ ಸಾರ್ವಜನಿಕರಿಗೆ ದೇವಳದ ಆಡಳಿತ ಮಂಡಳಿ ತಿಳಿಸಿದೆ.

    ಶನಿವಾರ ಎಸ್‍ಪಿಜಿ ಕಮ್ಯಾಂಡೋಗಳು ಕಾನ್‍ವೇ ಪರಿಶೀಲಿಸಿದರು. ಹೆಲಿಪ್ಯಾಡ್‍ನಿಂದ ದೇವಳದವರೆಗೆ ರಿಹಾರ್ಸಲ್ ನಡೆಸಿದರು. ಮೋದಿ ಬಳಸಲಿರುವ ಲ್ಯಾಂಡ್ ಕ್ರ್ಯೂಸರ್, ಪೈಲಟ್ ಜೀಪ್ ಸೇರಿದಂತೆ 16 ವಾಹನಗಳಲ್ಲಿ ರಿಹರ್ಸಲ್ ನಡೀತು. ಬಳಿಕ ಧಮಸ್ಥಳ- ಉಜಿರೆ ಹಾದಿಯಲ್ಲೂ ಎಸ್‍ಪಿಜಿ ಪರಿಶೀಲನೆ ನಡೀತು. ಪ್ರಧಾನಿಯ ವಾಹನ ಧರ್ಮಸ್ಥಳದಿಂದ ತೆರಳಿ ಅರ್ಧ ಗಂಟೆಯ ನಂತರ ಸಾರ್ವಜನಿಕರ ವಾಹನಗಳ ಓಡಾಟಕ್ಕೆ ಪೆÇಲೀಸರು ಅವಕಾಶ ಮಾಡಿಕೊಡಲಿದ್ದಾರೆ.

    ಹಾಗಿದ್ರೆ ಮೋದಿಯವರ ಇಂದಿನ ದಿನಚರಿ ಧರ್ಮಸ್ಥಳದಲ್ಲಿ ಹೇಗಿರುತ್ತೆ ಅಂತ ನೋಡೋದಾದ್ರೆ..

    * ಬೆಳಗ್ಗೆ 10.45 ಗಂಟೆಗೆ ಧರ್ಮಸ್ಥಳ ಕ್ಷೇತ್ರಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ
    * ಬೆಳಗ್ಗೆ 11.00 ಗಂಟೆಗೆ ಧರ್ಮಸ್ಥಳ ದೇವಸ್ಥಾನಕ್ಕೆ ಭೇಟಿ
    * ಮಂಜುನಾಥನ ಸನ್ನಿಧಿಯಲ್ಲಿ ಮೋದಿ ಪೂಜೆ
    * ಸುಮಾರು 10 ನಿಮಿಷ ಮೋದಿ ಧ್ಯಾನ ಸಾಧ್ಯತೆ
    * ಅಣ್ಣಪ್ಪ ಸ್ವಾಮಿ ದರ್ಶನ, ಅನ್ನಪೂರ್ಣ ಹಾಲ್‍ಗೆ ಭೇಟಿ ನೀಡಲಿರುವ ಮೋದಿ
    * 12.15ಕ್ಕೆ ಉಜಿರೆಯ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಮೋದಿ ಭಾಷಣ

    https://www.youtube.com/watch?v=F-C0cUhjm6c